Tag: Hemant Karkare

  • Mumbai Attack | ಆರ್‌ಎಸ್‌ಎಸ್‌ಗೆ ಹತ್ತಿರ ಇರೋ ಪೊಲೀಸರಿಂದ ಹೇಮಂತ್‌ ಕರ್ಕರೆ ಹತ್ಯೆ: ಮಹಾರಾಷ್ಟ್ರ ಕಾಂಗ್ರೆಸ್‌ ನಾಯಕ

    Mumbai Attack | ಆರ್‌ಎಸ್‌ಎಸ್‌ಗೆ ಹತ್ತಿರ ಇರೋ ಪೊಲೀಸರಿಂದ ಹೇಮಂತ್‌ ಕರ್ಕರೆ ಹತ್ಯೆ: ಮಹಾರಾಷ್ಟ್ರ ಕಾಂಗ್ರೆಸ್‌ ನಾಯಕ

    ಮುಂಬೈ: 2008ರ ಮುಂಬೈ ದಾಳಿಯ (Mumbai Attack) ಸಂದರ್ಭದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ (Hemant Karkare) ಅವರನ್ನು ಪಾಕಿಸ್ತಾನಿ ಭಯೋತ್ಪಾದಕರು ಹತ್ಯೆ ಮಾಡಿಲ್ಲ ಎಂದು ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ್ಷದ ನಾಯಕ ವಿಜಯ್ ವಾಡೆತ್ತಿವಾರ್ (Vijay Wadettiwar) ಹೊಸ ಬಾಂಬ್ ಸಿಡಿಸಿದ್ದಾರೆ.

    ಆರ್‌ಎಸ್‌ಎಸ್‌ಗೆ ಹತ್ತಿರ ಇರುವ ಪೊಲೀಸ್ ಅಧಿಕಾರಿಯೊಬ್ಬರು ಹಾರಿಸಿದ ಗುಂಡಿಗೆ ಕರ್ಕರೆ ಬಲಿಯಾಗಿದ್ದಾರೆ. ಪ್ರಸ್ತುತ ಮುಂಬೈ ಉತ್ತರ ಕೇಂದ್ರ ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿರುವ ವಕೀಲ ಉಜ್ವಲ್ ನಿಕಮ್ ಅವರು ಆರೋಪಿಗಳನ್ನು ರಕ್ಷಿಸಲು ಸಾಕ್ಷ್ಯವನ್ನು ಮುಚ್ಚಿಟ್ಟಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

    ನಿಕಮ್ ಒರ್ವ ವಕೀಲನಲ್ಲ ಆತ ದೇಶದ್ರೋಹಿ. ಕರ್ಕರೆಯವರು ಅಜ್ಮಲ್ ಕಸಬ್‌ನಂತಹ  ಉಗ್ರರ  ಗುಂಡುಗಳಿಂದ ಮೃತಪಟ್ಟಿಲ್ಲ. ಆದರೆ ಸಂಘಕ್ಕೆ ಹತ್ತಿರವಿರುವ ಪೊಲೀಸರ ಬುಲೆಟ್‌ನಿಂದ ಸಾವನ್ನಪ್ಪಿದ್ದಾರೆ ಎಂದರು. ಇದನ್ನೂ ಓದಿ: ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಉಜ್ವಲ್‌ ನಿಕಮ್‌ಗೆ ಬಿಜೆಪಿ ಟಿಕೆಟ್‌

    26/11 ದಾಳಿಯಲ್ಲಿ ಮಡಿದ ಐಪಿಎಸ್‌ ಅಧಿಕಾರಿ ಹೇಮಂತ್ ಕರ್ಕರೆ ಅವರಿಗೆ ಮರಣೋತ್ತರವಾಗಿ 2009 ರಲ್ಲಿ ಭಾರತದ ಅತ್ಯುನ್ನತ ಶೌರ್ಯ ಪ್ರಶಸ್ತಿಯಾದ ಅಶೋಕ ಚಕ್ರವನ್ನು ನೀಡಲಾಯಿತು.

    ಬಿಜೆಪಿ ಟೀಕೆ:
    ಇದು ಆಘಾತಕಾರಿ. ಕೇವಲ ಒಂದು ಸಮುದಾಯವನ್ನು ಓಲೈಸಲು, ಮತಕ್ಕಾಗಿ ಭಾರತದ ಮೇಲೆ ಅತ್ಯಂತ ಭೀಕರವಾದ ಭಯೋತ್ಪಾದಕ ದಾಳಿ ಮಾಡಿದವರ ವಿರುದ್ಧ ಹೋರಾಡಿ ತಮ್ಮ ಪ್ರಾಣವನ್ನು ಅರ್ಪಿಸಿದವರಿಗೆ ಮಾಡುವ ಅವಮಾನ. ಈ ವಾದವನ್ನೇ ಪಾಕಿಸ್ತಾನ ಮುಂದಿಡಲಿದೆ ಎಂದು ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ಆಕ್ರೋಶ ಹೊರಹಾಕಿದ್ದಾರೆ.

     

  • ಸಾಧ್ವಿ ಪ್ರಜ್ಞಾ ಸಿಂಗ್ ಪ್ರಚಾರಕ್ಕೆ ನಿರ್ಬಂಧ ಹೇರಿದ ಚುನಾವಣೆ ಆಯೋಗ

    ಸಾಧ್ವಿ ಪ್ರಜ್ಞಾ ಸಿಂಗ್ ಪ್ರಚಾರಕ್ಕೆ ನಿರ್ಬಂಧ ಹೇರಿದ ಚುನಾವಣೆ ಆಯೋಗ

    ಭೋಪಾಲ್: ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಪರಿಣಾಮ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಚುನಾವಣಾ ಆಯೋಗ 72 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ಹೇರಿದೆ.

    ಸಾಧ್ವಿ ಪ್ರಜ್ಞಾ ಸಿಂಗ್ ಅವರು ಮಾಜಿ ಐಪಿಎಸ್ ಅಧಿಕಾರಿ ಹೇಮಂತ್ ಕರ್ಕರೆ ವಿರುದ್ಧ ಮತ್ತು ಬಾಬ್ರಿ ಮಸೀದಿ ಧ್ವಂಸ ವಿಚಾರದ ಬಗ್ಗೆ ವಿವಾದತ್ಮಾಕ ಹೇಳಿಕೆ ನೀಡಿದರು. ಇದರಂತೆ ಪ್ರಜ್ಞಾರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಆಯೋಗ ಗುರುವಾರ ಬೆಳಗ್ಗೆ 6 ರಿಂದ ಮುಂದಿನ 72 ಗಂಟೆಗಳ ಕಾಲ ಪ್ರಚಾರ ಮಾಡದಂತೆ ನಿಷೇಧ ವಿಧಿಸಿದೆ.

    ಈ ನಿಷೇದ ಹೇರಿರುವ ಬಗ್ಗ ಪ್ರತಿಕ್ರಿಯೆ ನೀಡಿರುವ ಸಾಧ್ವಿ ಪ್ರಜ್ಞಾ ಸಿಂಗ್, ಇದರಿಂದ ಯಾವುದೇ ಸಮಸ್ಯೆ ಇಲ್ಲ ನಾನು ಚುನಾವಣಾ ಆಯೋಗಕ್ಕೆ ಗೌರವ ನೀಡುತ್ತೇನೆ ಎಂದು ಹೇಳಿದ್ದಾರೆ.

    2008 ರಲ್ಲಿ ನಡೆದ ಮಾಲೆಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಸಾಧ್ವಿ ಠಾಕೂರ್ ಅವರು, 2011 ರಲ್ಲಿ ಮುಂಬೈ ಭಯೋತ್ಪಾದಕರ ದಾಳಿಯಲ್ಲಿ ನಿಧನರಾದ ಮಾಜಿ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್)ದ ಮುಖ್ಯಸ್ಥರಾದ ಹೇಮಂತ್ ಕರ್ಕರೆ ಅವರು ಮಾಡಿದ ಕರ್ಮಕ್ಕೆ ಅವರಿಗೆ ಆ ರೀತಿಯ ಸಾವು ಬಂತು ಎಂದು ಹೇಳಿಕೆ ನೀಡಿದ್ದರು. 1992 ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಮಾಡಿದವರಲ್ಲಿ ನಾನು ಒಬ್ಬಳು ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಆಗುತ್ತದೆ ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್‍ರನ್ನ ಭಯೋತ್ಪಾದಕ ಎಂದು ಕರೆದಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಆಯೋಗ ಸಾಧ್ವಿ ಅವರಿಗೆ ಮೂರನೇ ನೋಟಿಸ್ ಜಾರಿ ಮಾಡಿದೆ.

    48 ವರ್ಷದ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಭೋಪಾಲ್‍ನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

  • ಹೇಮಂತ್ ಕರ್ಕರೆ ಸಾವಿನ ಬಗ್ಗೆ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆ ವೈಯಕ್ತಿಕ: ಬಿಜೆಪಿ

    ಹೇಮಂತ್ ಕರ್ಕರೆ ಸಾವಿನ ಬಗ್ಗೆ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆ ವೈಯಕ್ತಿಕ: ಬಿಜೆಪಿ

    – ದೈಹಿಕ, ಮಾನಸಿಕ ಹಿಂಸೆಗೆ ಹೇಳಿಕೆ ಕಾರಣವಾಗಿರಬಹುದು

    ನವದೆಹಲಿ: ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಹೇಮಂತ್ ಕರ್ಕರೆಯವರ ಸಾವಿನ ಕುರಿತಾಗಿ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಅವರ ಹೇಳಿಕೆ ವೈಯಕ್ತಿಕವಾಗಿದೆ ಎಂದು ಬಿಜೆಪಿ ಸ್ಪಷ್ಟನೆ ನೀಡಿದೆ.

    ಸಾಧ್ವಿ ಪ್ರಜ್ಞಾಸಿಂಗ್ ಅವರು ಜೈಲಿನಲ್ಲಿ ಅನುಭವಿಸಿದ ಮಾನಸಿಕ ಹಾಗೂ ದೈಹಿಕ ಹಿಂಸೆಗೆ ಈ ಹೇಳಿಕೆ ಕಾರಣವಾಗಿರಬಹುದು ಎಂದು ಬಿಜೆಪಿ ಅಭಿಪ್ರಾಯ ವ್ಯಕ್ತಪಡಿಸಿದೆ.

    ಸಾಧ್ವಿ ಪ್ರಜ್ಞಾಸಿಂಗ್ ಇತ್ತೀಚೆಗೆ ಬಿಜೆಪಿ ಸೇರಿದ್ದು, ಅವರಿಗೆ ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಹೇಮಂತ್ ಕರ್ಕರೆ ಸಾವಿನ ಕುರಿತು ಸಾಧ್ವಿ ಪ್ರಜ್ಞಾಸಿಂಗ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ವಿಪಕ್ಷ ನಾಯಕರು ಅಸಮಾಧಾನ ಹೊರಹಾಕಿದರು. ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದರು. ಇದರಿಂದಾಗಿ ಬಿಜೆಪಿಯು, ಈ ಹೇಳಿಕೆ ಅವರ ವೈಯಕ್ತಿಕ ವಿಚಾರವಾಗಿ ಎಂದು ಪ್ರತಿಕ್ರಿಯೆ ನೀಡಿದೆ.

    ಐಪಿಎಸ್ ಅಧಿಕಾರಿಗಳ ಸಂಘ ಕೂಡ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆಯನ್ನು ಖಂಡಿಸಿದೆ. ಅಶೋಕ್ ಚಕ್ರ ಪುರಸ್ಕೃತ ಹೇಮಂತ್ ಕರ್ಕರೆ ಅವರು ಉಗ್ರರೊಂದಿಗೆ ಹೋರಾಡಿ ಹುತಾತ್ಮರಾಗಿದ್ದಾರೆ. ಅವರ ಬಲಿದಾನವನ್ನು ಅವಮಾನಿಸಿದ ಅಭ್ಯರ್ಥಿಯ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

    ಸಾಧ್ವಿ ಪ್ರಜ್ಞಾಸಿಂಗ್ ಹೇಳಿದ್ದೇನು?:
    ಭೋಪಾಲ್‍ನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಾಧ್ವಿ ಪ್ರಜ್ಞಾಸಿಂಗ್ ಅವರು, 26/11 ಮುಂಬೈ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಹೇಮಂತ್ ಕರ್ಕರೆ ಸಾವನ್ನಪಿದ್ದು ನನ್ನ ಶಾಪದಿಂದಲೇ. ನೀನು ಸರ್ವನಾಶ ಆಗುತ್ತೀಯಾ ಎಂದು ಕರ್ಕರೆ ಅವರಿಗೆ ಶಾಪ ಹಾಕಿದ್ದೆ. ಆ ಶಾಪ ಅವರಿಗೆ ತಟ್ಟಿತು ಎಂದು ಹೇಳಿದ್ದರು.

    ಹೇಮಂತ್ ಕರ್ಕರೆ ಅವರು ಪದೇ ಪದೇ ನನ್ನನ್ನು ವಿಚಾರಣೆಗೆ ಒಳಪಡಿಸಿ, ಕಿರುಕುಳ ನೀಡುತ್ತಿದ್ದರು. ನಿರಪರಾಧಿಯಾಗಿದ್ದರಿಂದ ಅವರ ಪ್ರಶ್ನೆಗೆ ನನ್ನ ಬಳಿ ಉತ್ತರವೇ ಇರಲಿಲ್ಲ. ಹೀಗಾಗಿ ನಾನು ಅವರಿಗೆ ಶಪಿಸಿದ್ದೆ. ನನ್ನನ್ನು ಬಂಧಿಸಿದ 45 ದಿನಗಳ ನಂತರ ಕರ್ಕರೆ ಉಗ್ರರಿಂದ ಪ್ರಾಣ ಬಿಟ್ಟರು ಎಂದು ತಿಳಿಸಿದ್ದರು.

    ಇದಕ್ಕೂ ಮುನ್ನ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಅವರು ಮಾಲೇಗಾಂವ್ ಸ್ಫೋಟ ಪ್ರಕರಣ ನೆನೆದು ಕಣ್ಣೀರಿಟ್ಟಿದ್ದರು. ಮಾಲೇಗಾಂವ್ ಪ್ರಕರಣದಲ್ಲಿ ಮುಸ್ಲಿಮರನ್ನು ಹತ್ಯೆ ಮಾಡುವುದಕ್ಕಾಗಿಯೇ ಸ್ಫೋಟ ನಡೆಸಿದೆ ಅಂತ ತಪ್ಪೊಪ್ಪಿಕೊಳ್ಳಬೇಕು ಎಂದು ಜೈಲು ಅಧಿಕಾರಿಗಳು ಒತ್ತಾಯಿಸಿ ಕಿರುಕುಳ ನೀಡಿದ್ದರು. ವಿಚಾರಣೆ ಸಂಬಂಧ ಅಕ್ರಮವಾಗಿ ಬಂಧಿಸಿದ ಪೊಲೀಸರು, ನನಗೆ ಮುಳ್ಳಿನ ಬೆಲ್ಟ್‍ನಿಂದ ಹೊಡೆದರು. ಅಸಭ್ಯ ಭಾಷೆಯಲ್ಲಿ ಬೈದರು. ಅಷ್ಟೇ ಅಲ್ಲದೆ ಬಟ್ಟೆ ಕಳಚಿ ನಗ್ನಗೊಳಿಸುತ್ತೇವೆ ಎಂದು ಬೆದರಿಕೆ ಹಾಕಿದ್ದರು ಎಂದು ದೂರಿದ್ದರು.

    ನನ್ನನ್ನು 13 ದಿನಗಳ ಕಾಲ ಅಕ್ರಮವಾಗಿ ಬಂಧಿಸಿ ಇಡಲಾಗಿತ್ತು. ಬಂಧಿಸಿದ ಮೊದಲ ದಿನವೇ ನನ್ನ ಮೇಲೆ ಹಲ್ಲೆ ಮಾಡಲು ಆರಂಭಿಸಿದರು. ಬಳಿಕ ಹಗಲು ರಾತ್ರಿ ಎನ್ನದೇ ನನ್ನನ್ನು ಹೊಡೆಯುತ್ತಿದ್ದರು. ನನ್ನ ಕೈಯಲ್ಲಿ ರಕ್ತ ಬಂದರೂ ಎಂದು ಅವರು ಹೊಡೆಯುವುದನ್ನು ನಿಲ್ಲಿಸಿದರು. ಬಳಿಕ ಬಿಸಿ ನೀರು ತಂದು ಅದರಲ್ಲಿ ಉಪ್ಪು ಬೆರೆಸಿ ಕೈಗಳನ್ನು ಇರಿಸಿದರು. ಸ್ವಲ್ಪ ಗುಣಮುಖವಾಗುತ್ತಿದ್ದಂತೆ ಮತ್ತೆ ಹೊಡೆಯಲು ಆರಂಭಿಸಿದರು ಎಂದು ಜೈಲಿನಲ್ಲಿ ಕೊಟ್ಟ ಶಿಕ್ಷೆಯನ್ನು ನೆನೆದ್ದರು.

    ಏನಿದು ಪ್ರಕರಣ?:
    ಮಹಾರಾಷ್ಟ್ರದ ಮಾಲೇಗಾಂವ್‍ನಲ್ಲಿ 2008ರ ಸೆಪ್ಟೆಂಬರ್ ನಲ್ಲಿ ಸ್ಫೋಟ ನಡೆದಿತ್ತು. ಈ ವೇಳೆ 7 ಜನರು ಮೃತಪಟ್ಟಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಸಂಬಂಧ ಉಗ್ರ ನಿಗ್ರಹ ದಳವು ಕಣ್ಣೀರಿಟ್ಟ ಸಾಧ್ವಿ ಪ್ರಜ್ಞಾಸಿಂಗ್ ಅವರನ್ನು ಬಂಧಿಸಿತ್ತು. ಈ ಪ್ರಕರಣದ ಕುರಿತು 2011ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು ತನಿಖೆ ಆರಂಭಿಸಿತ್ತು. ಪ್ರಜ್ಞಾ ವಿರುದ್ಧ ಯಾವುದೇ ಸಾಕ್ಷಿಗಳು ಇಲ್ಲದೇ ಇರುವುದರಿಂದ ಅವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಕ್ಲೀನ್ ಚಿಟ್ ನೀಡಿತ್ತು.