Tag: Hemant Kumar

  • ‘ರಿಚ್ಚಿ’ ಹಾಡಿಗೆ ಸೊಂಟ ಬಳುಕಿಸಲಿರುವ ಮಾನ್ವಿತಾ ಕಾಮತ್

    ‘ರಿಚ್ಚಿ’ ಹಾಡಿಗೆ ಸೊಂಟ ಬಳುಕಿಸಲಿರುವ ಮಾನ್ವಿತಾ ಕಾಮತ್

    ರಿಚ್ಚಿ (ಹೇಮಂತ್ ಕುಮಾರ್) ನಾಯಕನಾಗಿ ನಟಿಸಿ, ನಿರ್ದೇಶಿಸುತ್ತಿರುವ ರಿಚ್ಚಿ (Ritchie) ಚಿತ್ರದಲ್ಲಿ ಟಗರು ಖ್ಯಾತಿಯ ಮಾನ್ವಿತ ಕಾಮತ್ (Manvita Kamat) ನಟಿಸುತ್ತಿದ್ದಾರೆ.  ಖ್ಯಾತ ಗಾಯಕ ಸೋನು ನಿಗಮ್ ಹಾಡಿರುವ (Song), ಅಗಸ್ತ್ಯ ಸಂಗೀತ ಸಂಯೋಜಿಸಿರುವ ‘ಸನಿಹ ನೀ ಇರುವಾಗ’ ಎಂಬ ಹಾಡಿಗೆ ಮಾನ್ವಿತ ಹೆಜ್ಜೆ ಹಾಕಲಿದ್ದಾರೆ. ಜೊತೆಗೆ ಕೆಲವು ಮಾತಿನ ಭಾಗದ ಸನ್ನಿವೇಶಗಳಲ್ಲೂ ಅವರು ಅಭಿನಯಿಸಲಿದ್ದಾರೆ ಎಂದು ರಿಚ್ಚಿ ತಿಳಿಸಿದ್ದಾರೆ.

    ಈ ಸಿನಿಮಾದಲ್ಲಿ ಮಾನ್ವಿತಾ ಕಾಮತ್ ಕೇವಲ ಹಾಡಿಗೆ ಮಾತ್ರ ಹೆಜ್ಜೆ ಹಾಕುತ್ತಿಲ್ಲ, ಜೊತೆಗೆ ಕೆಲವು ದೃಶ್ಯಗಳಲ್ಲೂ ಅವರು ನಟಿಸಲಿದ್ದಾರೆ. ಹಾಗಾಗಿ ಈ ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದಾರಂತೆ. ವಿಶೇಷ ಸನ್ನಿವೇಶಗಳು ಅವು ಆಗಿರಲಿವೆ ಎನ್ನುವುದು ಚಿತ್ರತಂಡದ ಮಾತು.

    ಅಗಸ್ತ್ಯ ಕ್ರಿಯೇಷನ್ಸ್ ಲಾಂಛನದಲ್ಲಿ ವೆಂಕಟಾಚಲಯ್ಯ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ರಾಕೇಶ್ ರಾವ್ ಅವರ ಸಹ ನಿರ್ಮಾಣವಿದೆ.   ರಿಚ್ಚಿ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡು ಹಾಗೂ ಕೆಲವು ಮಾತಿನ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದೆ. ಅಜಿತ್ ಕುಮಾರ್ ಅವರ ಛಾಯಾಗ್ರಹಣ ರಿಚ್ಚಿ ಚಿತ್ರಕ್ಕಿದೆ.

  • ಅಭಿಮಾನಿಗಳಿಗೆ ನಿರಾಸೆ ಮಾಡಿದ ರಕ್ಷಿತ್ ಶೆಟ್ಟಿ: ಆದ್ರೂ ಕಾಯ್ತೀವಿ ಅಂತಿದ್ದಾರೆ ಫ್ಯಾನ್ಸ್

    ಅಭಿಮಾನಿಗಳಿಗೆ ನಿರಾಸೆ ಮಾಡಿದ ರಕ್ಷಿತ್ ಶೆಟ್ಟಿ: ಆದ್ರೂ ಕಾಯ್ತೀವಿ ಅಂತಿದ್ದಾರೆ ಫ್ಯಾನ್ಸ್

    ಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಈ ಬೆನ್ನಲ್ಲೇ ‘ಬಿ ಪಾರ್ಟ್’ ಅನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿತ್ತು. ಚಿತ್ರತಂಡ ಮೊದಲೇ ಘೋಷಿಸಿದಂತೆ ಅಕ್ಟೋಬರ್ 20ಕ್ಕೆ ಬಿಡುಗಡೆ ಆಗಬೇಕಿತ್ತು. ಬಿ ಪಾರ್ಟ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಆದರೆ, ನಿಗದಿತ ದಿನಾಂಕದಲ್ಲಿ ಸಿನಿಮಾ ರಿಲಿಸ್ ಆಗುತ್ತಿಲ್ಲ. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳಿಗೆ ನಿರಾಸೆ ಮೂಡಿದೆ.

    ಈ ವೇಳೆಯಲ್ಲಿ ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ಸ್ಟಾರ್ ನಟರ ಚಿತ್ರಗಳು ತೆರೆ ಕಾಣಲು ಸಿದ್ಧತೆ ಮಾಡಿಕೊಳ್ಳುತ್ತಿವೆ. ಅಲ್ಲದೇ, ಪರಭಾಷೆಯ ಚಿತ್ರಗಳ ಹಾವಳಿಯೂ ಹೆಚ್ಚಾಗಿದೆ. ಒಂದೊಳ್ಳೆ ಸಿನಿಮಾ ಕಳೆದು ಹೋಗಬಾರದು ಎನ್ನುವ ಕಾರಣಕ್ಕಾಗಿ ಒಂದು ವಾರ ಚಿತ್ರ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದಾರೆ. ಅಕ್ಟೋಬರ್ 27ಕ್ಕೆ ಗ್ರ್ಯಾಂಡ್ ಆಗಿ ಸಪ್ತ ಸಾಗರದಾಚೆ ಎಲ್ಲೋ ಬಿ ಪಾರ್ಟ್ ಬಿಡುಗಡೆ ಆಗಲಿದೆ.

    ರಕ್ಷಿತ್ ಶೆಟ್ಟಿ(Rakshit Shetty), ರುಕ್ಮಿಣಿ ವಸಂತ್ (Rukmini Vasanth) ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ (Tollywood) ಅತ್ಯುತ್ತಮ ಪ್ರತಿಕ್ರಿಯೆನ್ನು ಕಂಡಿದೆ. ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ.

     

    ‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೊಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್‌ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಸಪ್ತ ಸಾಗರದಾಚೆ..’ 20 ಕೇಜಿ ತೂಕ ಹೆಚ್ಚಿಸಿಕೊಂಡರಾ ರಕ್ಷಿತ್ ಶೆಟ್ಟಿ?

    ‘ಸಪ್ತ ಸಾಗರದಾಚೆ..’ 20 ಕೇಜಿ ತೂಕ ಹೆಚ್ಚಿಸಿಕೊಂಡರಾ ರಕ್ಷಿತ್ ಶೆಟ್ಟಿ?

    ಗೋಧಿ ಬಣ್ಣ ಸಾಧಾರಣ ಮೈಕಟ್ಟು ಸಿನಿಮಾದ ನಂತರ ನಿರ್ದೇಶಕ ಹೇಮಂತ್ ಕುಮಾರ್ ಮತ್ತು ರಕ್ಷಿತ್ ಶೆಟ್ಟಿ ಮತ್ತೆ ಒಂದಾಗಿದ್ದಾರೆ. ಈ ಜೋಡಿ ಒಂದಾಗಿ ವಿಭಿನ್ನ ರೀತಿಯ ಚಿತ್ರ ಮಾಡಿದ್ದು, ಅದಕ್ಕೆ ‘ಸಪ್ತ ಸಾಗರದಾಚೆ ಎಲ್ಲೋ’ ಎಂದು ಚಂದದ ಹೆಸರು ಕೂಡ ಇಟ್ಟಿದ್ದಾರೆ. ಈ ಸಿನಿಮಾ ಫಸ್ಟ್ ಲುಕ್ ಇಂದು ಬಿಡುಗಡೆ ಆಗಿದೆ. ಇದನ್ನೂ ಓದಿ : ‘ಧಾಕಡ್’ ಸೋಲಿಗೆ ಕಂಗೆಟ್ಟ ಕಂಗನಾ ರಣಾವತ್ : ವೀಕೆಂಡ್ ನಲ್ಲೂ ವೀಕ್ ಕಲೆಕ್ಷನ್

    ಇಂದು ರಿಲೀಸ್ ಆಗಿರುವ ಫಸ್ಟ್ ಲುಕ್ ಕಂಡು ರಕ್ಷಿತ್ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ಮಲ್ಲಿಗೆಯಂತೆ ತೂಗುತ್ತಿದ್ದ ರಕ್ಷಿತ್ ಗುಲಾಬಿ ರೀತಿಯಲ್ಲಿ ಉಬ್ಬಿಕೊಂಡಿರುವುದಕ್ಕೆ ಕಾರಣವನ್ನೂ ಅವರು ಕೇಳಿದ್ದಾರೆ. ಹೌದು, ಈ ಸಿನಿಮಾಗಾಗಿ ರಕ್ಷಿತ್ ಶೆಟ್ಟಿ ತೂಕ ಹೆಚ್ಚಿಸಿಕೊಂಡಿದ್ದು, ಅದು ಗಾಬರಿ ಬೀಳುವಷ್ಟು ತೂಕ ಹೆಚ್ಚಿದೆಯಂತೆ. ಇದನ್ನೂ ಓದಿ : ಶೀಘ್ರದಲ್ಲೇ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಸಿನಿಮಾ ಶುರು : ಯೋಗರಾಜ್ ಭಟ್ ನಿರ್ದೇಶಕ

    ಈ ಪಾತ್ರಕ್ಕಾಗಿ ಅಂಥದ್ದೊಂದು ತಾಲೀಮು ಅವಶ್ಯಕತೆ ಇತ್ತು. ಹಾಗಾಗಿ 15 ರಿಂದ 20 ಕೇಜಿ ತೂಕವನ್ನು ಈ ಚಿತ್ರಕ್ಕಾಗಿ ರಕ್ಷಿತ್ ಹೆಚ್ಚಿಸಿಕೊಂಡಿದ್ದಾರಂತೆ. ಅಲ್ಲದೇ, ಇಲ್ಲಿ ಅವರ ಪಾತ್ರಕ್ಕೆ ಹಲವು ಶೇಡ್ ಗಳು ಇರುವುದರಿಂದ ತೂಕ ಹೆಚ್ಚಿಸಿಕೊಂಡ ಪಾತ್ರದ ಫಸ್ಟ್ ಲುಕ್ ಅನ್ನು ಈ ಬಾರಿ ರಿಲೀಸ್ ಮಾಡಿದ್ದಾರೆ ನಿರ್ದೇಶಕರು. ಈಗ ಆ ಫಸ್ಟ್ ಲುಕ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಲ್ಲದೇ, ರಕ್ಷಿತ್ ನಡೆಯನ್ನು ಅಭಿನಂದಿಸಲಾಗುತ್ತಿದೆ. ಇದನ್ನೂ ಓದಿ: ವೀಲ್‍ಚೇರ್ ರೋಮಿಯೋಗೆ ಮಯೂರಿ ಜೂಲಿಯಟ್ – ‘ಆ’ ಸವಾಲಿನ ಪಾತ್ರ ಒಪ್ಪಿಕೊಂಡಿದ್ದರ ಹಿಂದಿದೆ ಒಂದು ಕಥಾನಕ!

    ರಕ್ಷಿತ್ ಶೆಟ್ಟಿ ಪಾತ್ರಕ್ಕೆ ಎರಡು ಶೇಡ್ ಇದ್ದು, ಸಿನಿಮಾದ ಮೊದಲ ಭಾಗದಲ್ಲಿ ಒಂದು ರೀತಿ ಕಾಣಿಸಿಕೊಂಡರೆ, ಎರಡನೇ ಭಾಗದಲ್ಲಿ ಮತ್ತೊಂದು ರೀತಿ ಕಾಣಿಸುತ್ತಾರಂತೆ. ಈಗ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಎರಡನೇ ಭಾಗದ ಚಿತ್ರೀಕರಣದ ಸ್ಟಿಲ್ ಎನ್ನಲಾಗುತ್ತಿದೆ. ಮೊದಲ ಹಂತದ ಶೂಟಿಂಗ್ ಜನವರಿಯಲ್ಲಿ ಮುಗಿದಿತ್ತು. ನಂತರ ಎರಡು ತಿಂಗಳು ಕಾಲಾವಕಾಶ ತಗೆದುಕೊಂಡು ತೂಕ ಹೆಚ್ಚಿಸಿಕೊಂಡು ಮತ್ತೊಂದು ಹಂತದ ಶೂಟಿಂಗ್ ನಲ್ಲಿ ಅವರು ಪಾಲ್ಗೊಂಡಿದ್ದರಂತೆ.