Tag: Hemanth Rao

  • ಶಿವರಾಜ್‌ಕುಮಾರ್, ಹೇಮಂತ್ ರಾವ್ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್

    ಶಿವರಾಜ್‌ಕುಮಾರ್, ಹೇಮಂತ್ ರಾವ್ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್

    ಡಾ.ವೈಶಾಖ್ ಜೆ ಗೌಡ ಅವರ ವಿಜೆಎಫ್ ಪ್ರೊಡಕ್ಷನ್ ಹೌಸ್ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ‘ಭೈರವನ ಕೊನೆ ಪಾಠ’ (Bhairavana Kone Pata Film) ಚಿತ್ರಕ್ಕೆ ಹೇಮಂತ್ ರಾವ್ ನಿರ್ದೇಶನ ಮಾಡುತ್ತಿದ್ದು, ಡಾ.ಶಿವರಾಜ್‌ಕುಮಾರ್ (Shivarajkumar) ನಾಯಕ ನಟರಾಗಿ ಬಣ್ಣ ಹಚ್ಚಲಿದ್ದಾರೆ. ಇದನ್ನೂ ಓದಿ:ಫೋಟೋ ಡಿಲೀಟ್ ಮಾಡಿದ್ರೆ ಏನೇನೋ ಅರ್ಥ- ಡಿವೋರ್ಸ್ ಬಗ್ಗೆ ಮಯೂರಿ ಸ್ಪಷ್ಟನೆ

    ಹೇಮಂತ್ ಎಂ ರಾವ್ ಅವರ ಸಿನಿಮಾಗಳ ಶೀರ್ಷಿಕೆಗಳು ಯಾವಾಗಲೂ ವಿಶಿಷ್ಟವಾಗಿರುತ್ತವೆ. ಇದರ ಬಗ್ಗೆ ಪ್ರಶ್ನಿಸಿದಾಗ ಅವರು, ನಮ್ಮ ಆಡುಭಾಷೆಗೆ ಹತ್ತಿರವಾದ ಶೀರ್ಷಿಕೆಗಳು ನನಗೆ ಇಷ್ಟವಾಗುತ್ತವೆ. ಈ ಹಿಂದೆ ಕನ್ನಡ ಸಿನಿಮಾ ಶೀರ್ಷಿಕೆಗಳು ಕೇಳಲಿಕ್ಕೂ ಮಧುರವಾಗಿದ್ದು ಕುತೂಹಲ ಕೆರಳಿಸುವಂತೆ ಇರುತ್ತಿದ್ದವು. ನನ್ನ ನಿರ್ದೇಶನದ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕವಲುದಾರಿ’, ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಶೀರ್ಷಿಕೆಗಳು ಸಾಕಷ್ಟು ಜನ ಮೆಚ್ಚುಗೆಗೆ ಪಾತ್ರವಾದವು. ‘ಭೈರವನ ಕೊನೆ ಪಾಠ’ ಕೂಡ ಆ ಸಾಲಿಗೆ ಸೇರಲಿದೆ. ಕನ್ನಡ ಸಿನಿಮಾ ಜಗತ್ತಿನ ವಿಶಿಷ್ಟ ಶೀರ್ಷಿಕೆಗಳ ಪರಂಪರೆಯನ್ನು ಮುಂದಿನ ತಲೆಮಾರುಗಳಿಗೂ ತಲುಪಿಸುವ ಉದ್ದೇಶ ನಮ್ಮದು. ಅದರಲ್ಲೂ ನಾನು ಬಹಳವಾಗಿ ಇಷ್ಟಪಡುವ ಶಿವಣ್ಣ ಅವರ ಸಿನಿಮಾ ಶೀರ್ಷಿಕೆಗಳ ಸೌಂದರ್ಯವನ್ನು ಸದಾ ಕಾಲ ನೆನಪಿರುವಂತೆ ಮಾಡುವುದು ನನ್ನ ಬಯಕೆ. ಈ ಚಿತ್ರದಲ್ಲಿ ಭೈರವನೇ ಕೇಂದ್ರ ಪಾತ್ರವಾಗಿದ್ದು, ನಮ್ಮ ಶೀರ್ಷಿಕೆ ಅಚ್ಚುಕಟ್ಟಾಗಿ ಹೊಂದುತ್ತದೆ. ಅವನು ಮಾಡುವ ಪಾಠ ಯಾವುದು? ಅದನ್ನು ಕೊನೆ ಪಾಠ ಅಂದಿರೋದು ಯಾಕೆ ಅನ್ನುವುದೇ ಇದರ ಮುಖ್ಯ ತಿರುಳು. ನಮ್ಮ ಶೀರ್ಷಿಕೆ ವೀಕ್ಷಕರಲ್ಲಿ ಈ ಪ್ರಶ್ನೆಗಳನ್ನು ಯಶಸ್ವಿಯಾಗಿ ಹುಟ್ಟುಹಾಕುತ್ತದೆ ಅನ್ನುವುದು ನಮ್ಮ ನಂಬಿಕೆ ಎಂದು ಹೇಮಂತ್ (Hemanth Rao) ವಿವರಿಸಿದರು.

    ಇದು ನಿರ್ಮಾಪಕ ವೈಶಾಖ್ ಜೆ ಗೌಡ ನಿರ್ಮಾಣದ ಚೊಚ್ಚಲ ಚಿತ್ರವಾಗಿದ್ದು, ಶೀರ್ಷಿಕೆ ಬಗ್ಗೆ ಈಗಾಗಲೇ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿರುವ ಬಗ್ಗೆ ಸಂತೋಷದಿಂದ ಹೇಳಿಕೊಂಡರು. ಈ ಶೀರ್ಷಿಕೆಯನ್ನು ಮೊದಲ ಬಾರಿ ಕೇಳಿದಾಗ ನಾನೆಷ್ಟು ಉತ್ಸಾಹಗೊಂಡಿದ್ದೆನೋ ಅದೇ ಉತ್ಸಾಹ ಜನರಲ್ಲೂ ಕಂಡುಬರುತ್ತಿರುವುದು ನನಗೆ ಖುಷಿ ಕೊಟ್ಟಿದೆ. ಇದೊಂದು ವಿಭಿನ್ನ ಹಾಗೂ ವಿಶಿಷ್ಟ ಚಿತ್ರವಾಗಿ ಮೂಡಿ ಬರಲಿದ್ದು, ಮುಂದಿನ ತಲೆಮಾರುಗಳವರೆಗೆ ತನ್ನ ಜನಪ್ರಿಯತೆ ಉಳಿಸಿಕೊಳ್ಳಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.

    ಸಿನಿಮಾದಲ್ಲಿ ಬಳಸಲಾಗಿರುವ ಬಾಣದ ಗುರುತಿನ ಬಗ್ಗೆ ತೂರಿಬಂದ ಪ್ರಶ್ನೆಗಳಿಗೆ ಸದ್ಯದಲ್ಲೇ ಬಿಡುಗಡೆಯಾಗಲಿರುವ ಫಸ್ಟ್ ಲುಕ್ ಪೋಸ್ಟರ್‌ನಲ್ಲಿ ಅದಕ್ಕೆ ಉತ್ತರ ಸಿಗಲಿದೆ ಎಂಬ ಒಕ್ಕೊರಲಿನ ಪ್ರತಿಕ್ರಿಯೆ ಕೇಳಿ ಬಂತು. ಇದನ್ನೂ ಓದಿ:ಬೆದರಿಕೆ ಕರೆ ಮಾಡಿದ ಕಿಡಿಗೇಡಿಗಳಿಗೆ ಪ್ರಥಮ್ ಖಡಕ್ ವಾರ್ನಿಂಗ್

    ಈ ವರ್ಷ ಡಾ.ಶಿವರಾಜ್‌ಕುಮಾರ್ ಅವರ ಹುಟ್ಟುಹಬ್ಬಕ್ಕೆ ಮೊದಲು ‘ಭೈರವನ ಕೊನೆ ಪಾಠ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಗೊಳ್ಳುವ ನಿರೀಕ್ಷೆ ಇದೆ.

  • ಸುದೀಪ್‌ಗೂ ಮುನ್ನ ಶಿವಣ್ಣಗೆ ‘ಸಪ್ತಸಾಗರದಾಚೆ ಎಲ್ಲೋ’ ನಿರ್ದೇಶಕ ಆ್ಯಕ್ಷನ್ ಕಟ್

    ಸುದೀಪ್‌ಗೂ ಮುನ್ನ ಶಿವಣ್ಣಗೆ ‘ಸಪ್ತಸಾಗರದಾಚೆ ಎಲ್ಲೋ’ ನಿರ್ದೇಶಕ ಆ್ಯಕ್ಷನ್ ಕಟ್

    ಗೋಧಿ ಬಣ್ಣ ಸಾಧಾರಣ ಮೈಕಟ್ಟು, ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾಗಳಿಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿರುವ ಹೇಮಂತ್ ರಾವ್ ಈಗ ಶಿವರಾಜ್‌ಕುಮಾರ್ ಜೊತೆಗಿನ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಸುದೀಪ್‌ಗೂ (Sudeep) ಮುನ್ನ ಶಿವಣ್ಣಗೆ (Shivarajukumar) ನಿರ್ದೇಶನ ಮಾಡಲಿದ್ದಾರೆ. ಇದನ್ನೂ ಓದಿ:ಬ್ರೈನ್ ಹ್ಯಾಮ್ರೇಜ್‌ನಿಂದ ನಟಿ ರಿಷ್ತಾ ಲಬೋನಿ ಶಿಮಾನಾ ನಿಧನ

    ಸಿನಿಮಾದಿಂದ ಸಿನಿಮಾ ಹೊಸ ಬಗೆಯ ಕಥೆ ಹೇಳುವ ಹೇಮಂತ್ ರಾವ್ ಅವರು ಇದೀಗ ಆ್ಯಕ್ಷನ್ ಡ್ರಾಮಾ ಜಾನರ್ ಕಥೆ ಕೈಗೆತ್ತಿಕೊಂಡಿದ್ದಾರೆ. ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಮಾಡುವಾಗಲೇ ಈ ಕಥೆ ಹೊಳೆದಿದ್ದು, ಸ್ಕ್ರೀಪ್ಟ್‌ ಡೆವಲಪ್ ಮಾಡಿದ್ದರು. ಹೇಮಂತ್ (Hemanth Rao) ಬರೆದ ಕಥೆ ಕೇಳಿ ವಿಭಿನ್ನ ಎನಿಸಿ ಚಿತ್ರಕ್ಕೆ ಶಿವಣ್ಣ ಓಕೆ ಎಂದಿದ್ದಾರೆ. ಈಗ ಸಿನಿಮಾ ಕೆಲಸ ಕೂಡ ಶುರುವಾಗಿದೆ.

    ಸಿನಿಮಾಗೆ ತೆರೆ ಮರೆಯಲ್ಲಿ ಸಾಕಷ್ಟು ಸಿದ್ಧತೆ ನಡೆಯುತ್ತಿದೆ. ಸದ್ಯದಲ್ಲೇ ಚಿತ್ರದ ಟೈಟಲ್ ಕೂಡ ಘೋಷಣೆ ಆಗಲಿದ್ದು, ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಿಂದ ಹೇಮಂತ್ ರಾವ್ ಮತ್ತು ಶಿವಣ್ಣ (Shivarajkumar) ಕಾಂಬಿನೇಷನ್ ಸಿನಿಮಾ ಶೂಟಿಂಗ್ ಶುರುವಾಗಲಿದೆ.

    ಈ ಸಿನಿಮಾದ ನಂತರವೇ ಸುದೀಪ್ ಜೊತೆ ಹೇಮಂತ್ ರಾವ್ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ. ಸುದೀಪ್ ಕೂಡ ‘ಮ್ಯಾಕ್ಸ್’ ಬಳಿಕ ಬೇರೆ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಿದ್ದು, ನಂತರ ಇಬ್ಬರ ಕಾಂಬಿನೇಷನ್‌ನಲ್ಲಿ ಸಿನಿಮಾ ಮೂಡಿ ಬರಲಿದೆಯಂತೆ. ಅಧಿಕೃತ ಘೋಷಣೆಗೆ ಕಾಯಬೇಕಿದೆ.

  • ಸುದೀಪ್‌ಗೆ ‘ಸಪ್ತಸಾಗರದಾಚೆ ಎಲ್ಲೋ’ ನಿರ್ದೇಶಕ ಆ್ಯಕ್ಷನ್ ಕಟ್

    ಸುದೀಪ್‌ಗೆ ‘ಸಪ್ತಸಾಗರದಾಚೆ ಎಲ್ಲೋ’ ನಿರ್ದೇಶಕ ಆ್ಯಕ್ಷನ್ ಕಟ್

    ‘ಸಪ್ತಸಾಗರದಾಚೆ ಎಲ್ಲೋ’, ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಖ್ಯಾತಿಯ ಡೈರೆಕ್ಟರ್ ಹೇಮಂತ್ ರಾವ್ (Hemanth Rao) ಇದೀಗ ಸೂಪರ್ ಸ್ಟಾರ್‌ಗೆ ಆ್ಯಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಜೊತೆ ಕೆಲಸ ಮಾಡೋಕೆ ಮುಂದಾಗಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಸ್ವೀಟ್‌ ಸರ್ಪ್ರೈಸ್‌ ಸಿಕ್ಕಿದೆ. ಇದನ್ನೂ ಓದಿ:ಹೆಣ್ಣು ಮಗುವಿಗೆ ಜನ್ಮ ನೀಡಿದ ವರುಣ್ ಧವನ್ ಪತ್ನಿ ನತಾಶಾ

    ‘ಘೋಸ್ಟ್’ ಖ್ಯಾತಿಯ ನಿರ್ಮಾಪಕ ಸಂದೇಶ್ ನಾಗರಾಜ ಅವರು ಸುದೀಪ್ ಜೊತೆ ಸಿನಿಮಾ ಮಾಡೋದಾಗಿ ಇತ್ತೀಚೆಗೆ ಅಧಿಕೃತ ಘೋಷಣೆ ಮಾಡಿದ್ದರು. ಆದರೆ ನಿರ್ದೇಶನ ಯಾರದ್ದು, ಎಂಬುದನ್ನು ರಿವೀಲ್ ಆಗಿರಲಿಲ್ಲ. ಆದರೆ ಸಂದೇಶ್ ಮತ್ತು ಸುದೀಪ್ ಕಾಂಬಿನೇಷನ್ ಚಿತ್ರಕ್ಕೆ ಹೇಮಂತ್ ರಾವ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿದೆ. ತಂಡದ ಕಡೆಯಿಂದ ಅಧಿಕೃತ ಘೋಷಣೆ ಆಗಬೇಕಿದೆ.

    ಪ್ರತಿ ಸಿನಿಮಾದಲ್ಲೂ ಒಂದಕ್ಕಿಂತ ಒಂದು ವಿಭಿನ್ನ ಕಂಟೆಂಟ್ ಕೊಡುವ ಹೇಮಂತ್ ರಾವ್ ಅವರು ಸುದೀಪ್‌ಗೂ ಉತ್ತಮ ಕಥೆಯನ್ನೇ ಬರೆದಿರುತ್ತಾರೆ ಎಂದು ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಮೂವರ ಕಾಂಬಿನೇಷನ್ ಸಿನಿಮಾಗಾಗಿ ಫ್ಯಾನ್ಸ್ ಕಾಯ್ತಿದ್ದಾರೆ.

    ಅಂದಹಾಗೆ, ಕೆಲ ದಿನಗಳ ಹಿಂದೆ ಶಿವರಾಜ್‌ಕುಮಾರ್ ಜೊತೆ ಹೇಮಂತ್ ರಾವ್ ಸಿನಿಮಾ ಮಾಡುವ ಬಗ್ಗೆ ಅನೌನ್ಸ್ ಆಗಿತ್ತು. ‘ಸಪ್ತಸಾಗರದಾಚೆ ಎಲ್ಲೋ’ ಚಿತ್ರದ ಬಳಿಕ ಸ್ಟಾರ್ ನಟರಿಗೆ ಹೇಮಂತ್ ನಿರ್ದೇಶನ ಮಾಡುತ್ತಿದ್ದಾರೆ. ಅವರ ಸಿನಿಮಾಗಳು ಹೇಗಿರಲಿದೆ ಎಂಬುದು ಅಭಿಮಾನಿಗಳಲ್ಲಿ ಕೌತುಕ ಮೂಡಿಸಿದೆ.

  • ನಾಳೆ ಕಿರುತೆರೆಯಲ್ಲಿ ಪ್ರಥಮ ಬಾರಿಗೆ ಸಪ್ತ ಸಾಗರದಾಚೆ ಎಲ್ಲೋ

    ನಾಳೆ ಕಿರುತೆರೆಯಲ್ಲಿ ಪ್ರಥಮ ಬಾರಿಗೆ ಸಪ್ತ ಸಾಗರದಾಚೆ ಎಲ್ಲೋ

    ರಡು ಭಾಗವಾಗಿ ಮೂಡಿ ಬಂದಿರುವ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ನಾಳೆ ಜೀ ಕನ್ನಡ ವಾಹಿನಿಯಲ್ಲಿ (Television) ಪ್ರಸಾರವಾಗಲಿದೆ. ಸಂಜೆ 7.30ಕ್ಕೆ ಪಾರ್ಟ್ ಎ ಅನ್ನು ಪ್ರಸಾರ ಮಾಡುವುದಾಗಿ ವಾಹಿನಿಯು ಪ್ರೊಮೋ ರಿಲೀಸ್ ಮಾಡಿದೆ. ಕಿರುತೆರೆಯಲ್ಲಿ ನೋಡಲು ಕಾಯುತ್ತಿದ್ದವರಿಗೆ ಸಹಜವಾಗಿಯೇ ಖುಷಿ ಆಗಿದೆ.

    ರಕ್ಷಿತ್ ಶೆಟ್ಟಿ ನಟಿಸಿರುವ ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ ಒಟಿಟಿಯಲ್ಲಿ (OTT) ಲಭ್ಯವಿದೆ. ಜನವರಿ 25ರ ಮಧ್ಯರಾತ್ರಿಯಿಂದಲೇ ಅಮೆಜಾನ್ ಪ್ರೈಂ ವಿಡಿಯೋದಲ್ಲಿ ಚಿತ್ರವನ್ನು ಸ್ಟ್ರೀಮಿಂಗ್ ಮಾಡಲಾಗುತ್ತಿದೆ. ಈ ಸಿನಿಮಾದ ಎ ಮತ್ತು ಬಿ ಪಾರ್ಟ್ ಎರಡನ್ನೂ ಪ್ರೇಕ್ಷಕರು ಒಪ್ಪಿಕೊಂಡಿದ್ದರು. ಬಾಕ್ಸ್ ಆಫೀಸಿನಲ್ಲೂ ಗೆದ್ದಿದ್ದವು. ಹಾಗಾಗಿ ಕಿರುತೆರೆಯಲ್ಲಿ ಚಿತ್ರವನ್ನು ಪ್ರೇಕ್ಷಕರು ಹೇಗೆ ತಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

    ಕೇವಲ ಪ್ರೇಕ್ಷಕರು ಮಾತ್ರವಲ್ಲ, ಸೆಲೆಬ್ರಿಟಿಗಳು ಈ ಸಿನಿಮಾವನ್ನು ಒಪ್ಪಿಕೊಂಡಿದ್ದರು. ಹೆಸರಾಂತ ನಟ ಪ್ರಕಾಶ್ ರಾಜ್ (Prakash Raj), ತಾವು ಮೆಚ್ಚಿದ ಸಿನಿಮಾಗಳ ಬಗ್ಗೆ ಆಗಾಗ್ಗೆ ಬರೆಯುತ್ತಲೇ ಇರುತ್ತಾರೆ. ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ಸಂಭ್ರಮಿಸಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸಿನಿಮಾ ಬಗ್ಗೆ, ‘ಸಪ್ತ ಸಾಗರದಾಚೆ ಎಲ್ಲೋ.. ಆಹಾ.. ಒಂದು ಸುಂದರ ದೃಶ್ಯಕಾವ್ಯ ಅನುಭವ. ಡೋಂಟ್ ಮಿಸ್’ ಎಂದು ಬರೆದುಕೊಂಡಿದ್ದರು.

    ರಕ್ಷಿತ್ ಶೆಟ್ಟಿ, ನಿರ್ದೇಶಕ ಹೇಮಂತ್ ರಾವ್, ಚೈತ್ರಾ ಆಚಾರ್ಯ, ರುಕ್ಮಿಣಿ, ಚರಣ್ ರಾಜ್ ಹೀಗೆ ಸಿನಿಮಾದ ಕಲಾವಿದರು ಮತ್ತು ತಂತ್ರಜ್ಞರಿಗೆ ತಮ್ಮ ಬರಹವನ್ನು ಟ್ಯಾಗ್ ಮಾಡಿದ್ದರು. ಇಡೀ ತಂಡಕ್ಕೆ ಇಂಥದ್ದೊಂದು ಸಿನಿಮಾ ಕೊಟ್ಟಿದ್ದಕ್ಕೆ ಧನ್ಯವಾದಗಳನ್ನೂ ಪ್ರಕಾಶ್ ರಾಜ್ ಅರ್ಪಿಸಿದ್ದರು.

    ಕೇವಲ ಕನ್ನಡದಲ್ಲಿ ಮಾತ್ರವಲ್ಲ,  ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ತೆಲುಗು ನೆಲದಲ್ಲೂ ಸದ್ದು ಮಾಡಿತ್ತು. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ (Tollywood) ಅತ್ಯುತ್ತಮ ಪ್ರತಿಕ್ರಿಯೆಯನ್ನು ಕಂಡಿತ್ತು. ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದರು. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದರು.

     

    ‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್‌ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.

  • ‘ಸಾರಾಂಶ’ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ನಿರ್ದೇಶಕ ಹೇಮಂತ್ ರಾವ್

    ‘ಸಾರಾಂಶ’ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ನಿರ್ದೇಶಕ ಹೇಮಂತ್ ರಾವ್

    `ಸಾರಾಂಶ’ (Saramsha) ಹಾಡುಗಳ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಆ ಮೂಲಕ ಸಿನಿಮಾ ಮೇಲೆ ಮೂಡಿಕೊಂಡಿದ್ದ ಕುತೂಹಲ ತಣಿಸುವಂತೆ ಇದೀಗ ಟ್ರೈಲರ್ ಬಿಡುಗಡೆಗೊಂಡಿದೆ. ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ, ಸಪ್ತಸಾಗರದಾಚೆ ಎಲ್ಲೋ ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ (Hemanth Rao) ಸಾರಾಂಶ ಟ್ರೈಲರ್ (Trailer) ಅನ್ನು ಬಿಡುಗಡೆಗೊಳಿಸಿದ್ದಾರೆ. ಈ ಟ್ರೈಲರ್ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಳ್ಳುತ್ತಾ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಅಂದಹಾಗೆ, ಈ ಚಿತ್ರ ಇದೇ ಫೆಬ್ರವರಿ 15ರಂದು ತೆರೆಗಾಣಲಿದೆ.

    `ಸಾರಾಂಶ’ದ ಬಗೆಗಿನ ಒಂದಷ್ಟು ವಿಚಾರಗಳನ್ನು ಚಿತ್ರತಂಡ ಹಂತ ಹಂತವಾಗಿ ಜಾಹೀರು ಮಾಡಿತ್ತು. ಇದೀಗ ಒಂದಿಡೀ ಸಿನಿಮಾದ ಆಂತರ್ಯವನ್ನು ತೆರೆದಿಡುವಂಥಾ ಟ್ರೈಲರ್ ಲಾಂಚ್ ಆಗಿದೆ. ವರ್ಷಾಂತರಗಳ ಹಿಂದೆ ಬಿಡುಗಡೆಗೊಂಡು, ಇಂದಿಗೂ ಆ ಪ್ರಭೆ ಉಳಿಸಿಕೊಂಡಿರುವ ಲೂಸಿಯಾ ಚಿತ್ರತಂಡದ ಸದಸ್ಯರು ಈ ಪತ್ರಿಕಾಗೋಷ್ಠಿಯ ಪ್ರಮುಖ ಆಕರ್ಷಣೆಯಾಗಿದ್ದರು. ಶ್ರುತಿ ಹರಿಹರನ್, ಹೇಮಂತ್ ರಾವ್ ಮಾತ್ರವಲ್ಲದೇ ಈ ಚಿತ್ರದ ನಿರ್ದೇಶಕರಾದ ಸೂರ್ಯ ವಸಿಷ್ಠ (Surya Vasistha) ಕೂಡಾ ಲೂಸಿಯಾ ಭಾಗವಾಗಿದ್ದವರೆ. ಇವರೆಲ್ಲರ ಸಮ್ಮುಖದಲ್ಲಿ ಸಾರಾಂಶ ಟ್ರೈಲರ್ ಬಿಡುಗಡೆಗೊಂಡಿದೆ.

    ಈ ಪತ್ರಿಕಾ ಗೋಷ್ಠಿಯಲ್ಲಿ ಶ್ರುತಿ ಹರಿಹರನ್, ದೀಪಕ್ ಸುಬ್ಮಣ್ಯ, ಸೂರ್ಯ ವಸಿಷ್ಠ, ಸಂಗೀತ ನಿರ್ದೇಶಕ ಉದಿತ್ ಹರಿತಾಸ್, ರವಿ ಭಟ್, ಶ್ವೇತಾ ಗುಪ್ತ ಮುಂತಾದವರು ಹಾಜರಿದ್ದರು. ಅಂದಹಾಗೆ, ಇದು ಈ ದಿನಮಾನಕ್ಕೆ ಅತ್ಯಂತ ಅಪರೂಪವೆಂಬಂಥಾ ಗುಣ ಲಕ್ಷಣಗಳನ್ನು ಒಳಗೊಂಡಿರುವ ಚಿತ್ರ. ನಿರ್ದೇಶಕ ಸೂರ್ಯ ವಸಿಷ್ಠ ಅವರೇ ಪ್ರಧಾನ ಪಾತ್ರಗಳಲ್ಲೊಂದಕ್ಕೆ ಜೀವ ತುಂಬಿದ್ದಾರೆ. ದೀಪಕ್ ಸುಬ್ರಮಣ್ಯ ವಿಶಿಷ್ಟ ಪಾತ್ರದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗಲಿದ್ದಾರೆ. ಶ್ರುತಿ ಹರಿಹರನ್ ಮಾಯಾ ಎಂಬ ಪಾತ್ರವನ್ನು ಒಳಗಿಳಿಸಿಕೊಂಡಿದ್ದಾರೆ. ಈ ಎಲ್ಲ ಪಾತ್ರಗಳ ಝಲಕ್ಕುಗಳು ಸದರಿ ಟ್ರೈಲರ್ ನಲ್ಲಿ ಕಾಣಿಸಿಕೊಂಡಿವೆ.

    ಈ ಸಿನಿಮಾದ ಎಲ್ಲ ಪಾತ್ರಗಳೂ ವಿಶೇಷವಾಗಿವೆ ಎಂಬುದಕ್ಕೆ ಈ ಟ್ರೈಲರ್ ನಲ್ಲಿ ಪುರಾವೆಗಳು ಸಿಗುತ್ತವೆ. ಅದರಲ್ಲೊಂದು ಪಾತ್ರವನ್ನು ಶ್ವೇತಾ ಗುಪ್ತ ನಿರ್ವಹಿಸಿದ್ದಾರೆ. ಕನ್ನಡತನದ ಬಗ್ಗೆ ಅತೀವ ಪ್ರೀತಿ ಆಸಕ್ತಿ ಇಟ್ಟುಕೊಂಡಿರೋ ಕನ್ನಡೇತರ ಬುಕ್ ಪಬ್ಲಿಷರ್ ಪಾತ್ರವಿದೆ. ಆ ಪಾತ್ರದ ಬಗ್ಗೆ ನಿರ್ದೇಶಕರು ಈ ಪತ್ರಿಕಾ ಗೋಷ್ಠಿಯಲ್ಲಿ ಒಂದಷ್ಟು ವಿವರಗಳನ್ನು ಬಿಚ್ಚಿಟ್ಟಿದ್ದಾರೆ. ಸದರಿ ಟ್ರೈಲರ್‍ನಲ್ಲಿ ಪ್ರಧಾನವಾಗಿ ಎರಡು ಬೊಂಬೆ ಪಾತ್ರಗಳು ನೋಡುಗರನ್ನು ಸೆಳೆದುಕೊಂಡಿವೆ. ಅದನ್ನು ರಾಮ್ ಪ್ರಸಾದ್ ಬಾಣಾವರ ಮತ್ತು ಸತೀಶ್ ಕುಮಾರ್ ನಿರ್ವಹಿಸಿದ್ದಾರೆ. ಅದು ಟ್ರೈಲರ್ ನ ಪ್ರಮುಖ ಆಕರ್ಷಣೆಯಾಗಿಯೂ ಗಮನ ಸೆಳೆಯುವಂತಿದೆ.

     

    ರವಿ ಕಶ್ಯಪ್ ಮತ್ತು ಆರ್.ಕೆ ನಲ್ಲಮ್ ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಮತ್ತು ಕ್ಲಾಪ್ ಬೋರ್ಡ್ ಪ್ರೊಡಕ್ಷನ್ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಆಸಿಫ್ ಕ್ಷತ್ರಿಯಾ, ರವಿ ಭಟ್, ರಾಮ್ ಮಂಜುನಾಥ್, ಸತೀಶ್ ಕುಮಾರ್, ಪೃಥ್ವಿ ಬನವಾಸಿ ಮುಂತಾದವರ ತಾರಾಗಣ, ಉದಿತ್ ಹರಿತಾಸ್ ಸಂಗೀತ ನಿರ್ದೇಶನ, ಅಪರಾಜಿತ್ ಹಿನ್ನೆಲೆ ಸಂಗೀತ ಮತ್ತು ಪ್ರದೀಪ್ ನಾಯಕ್ ಸಂಕಲನ ಈ ಚಿತ್ರಕ್ಕಿದೆ. ಸಾರಾಂಶದ ಮೂಲಕ ಅನಂತ್ ಭಾರದ್ವಾಜ್ ಎಂಬ ಪ್ರತಿಭಾನ್ವಿತ ಛಾಯಾಗ್ರಾಹಕ ಪರಿಚಯವಾಗುತ್ತಿದ್ದಾರೆ. ಅವರ ಛಾಯಾಗ್ರಹಣ ಕೂಡಾ ಸಾರಾಂಶದ ಶಕ್ತಿಯಂತಿದೆ ಎಂಬುದು ಚಿತ್ರತಂಡದ ಭರವಸೆ.

  • ‘ಸಪ್ತ ಸಾಗರದಾಚೆ ಎಲ್ಲೋ’ ಟ್ರೈಲರ್ ರಿಲೀಸ್: ನಾನಾವತಾರದಲ್ಲಿ ಮನು

    ‘ಸಪ್ತ ಸಾಗರದಾಚೆ ಎಲ್ಲೋ’ ಟ್ರೈಲರ್ ರಿಲೀಸ್: ನಾನಾವತಾರದಲ್ಲಿ ಮನು

    ಕ್ಷಿತ್ ಶೆಟ್ಟಿ (Rakshit Shetty) ನಟಿಸಿ, ಹೇಮಂತ್ ರಾವ್ (Hemanth Rao) ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ (Sapta Sagaradacheyallo) ಸೈಡ್ ಬಿ ಚಿತ್ರದ ಟ್ರೈಲರ್ (Trailer) ಇಂದು ರಿಲೀಸ್ ಆಗಿದೆ. ಕಥಾ ನಾಯಕ ಮನುವಿನ ಸಾಕಷ್ಟು ತಮುಲಗಳನ್ನು ಈ ಟ್ರೈಲರ್ ನಲ್ಲಿ ತೋರಿಸಲು ಪ್ರಯತ್ನಿಸಿದ್ದಾರೆ ನಿರ್ದೇಶಕರು. ‘ಜೈಲಿಂದ ನೀ ಬರೋದನ್ನೆ ಕಾಯ್ತಿದ್ದೀನಿ.. ಮತ್ತೆ ಹಾಡೋಕೆ ಶುರು ಮಾಡ್ತೀನಿ’.. ‘ಮತ್ತೆ ಸಿಗೋದು ಬೇಡ ಆಯ್ತಾ’ ಎಂದು ನಾಯಕಿ ಹೇಳುವ ಮಾತುಗಳು ಸಿನಿಮಾದ ಕಥೆಯನ್ನು ಕುತೂಹಲದಿಂದ ನೋಡುವಂತೆ ಮಾಡುತ್ತವೆ.

    ಇಡೀ ಟ್ರೈಲರ್ ನಲ್ಲಿ ರಕ್ಷಿತ್ ಶೆಟ್ಟಿ ಆವರಿಸಿಕೊಂಡಿದ್ದಾರೆ. ರುಕ್ಮಿಣಿ, ಚೈತ್ರಾ ಆಚಾರ್ಯ, ಗೋಪಾಲ ಕೃಷ್ಣ ದೇಶಪಾಂಡೆ, ಅಚ್ಯುತ್ ಕುಮಾರ್ ಆಗಾಗ್ಗೆ ಝಲಕ್ ನಲ್ಲಿ ಬಂದು ಹೊಸ ರೀತಿಯ ಕೌತುಕಕ್ಕೆ ಕಾರಣವಾಗುತ್ತಾರೆ. ಟ್ರೈಲರ್ ಕಾನ್ಸೆಪ್ಟ್ ಸಖತ್ತಾಗಿದೆ. ಮನು ಏನಾಗುತ್ತಾನೆ ಎನ್ನುವ ಕ್ಯೂರಿಯಾಸಿಟಿ ಮೂಡಿಸುತ್ತದೆ. ರಕ್ಷಿತ್ ಅಭಿಮಾನಿಗಳಿಗಂತೂ ಟ್ರೈಲರ್ ಸಖತ್ ಹಿಡಿಸಲಿದೆ.

    ನವೆಂಬರ್ 17ಕ್ಕೆ ರಿಲೀಸ್

    ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಈ ಬೆನ್ನಲ್ಲೇ ‘ಬಿ ಪಾರ್ಟ್’ ಅನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನವೆಂಬರ್ 17ಕ್ಕೆ ಗ್ರ್ಯಾಂಡ್ ಆಗಿ ಥಿಯೇಟರ್ ಗೆ ಎಂಟ್ರಿ ಕೊಡಲಿದ್ದಾರೆ ಮನು. ಈಗಾಗಲೇ ರಿಲೀಸ್ ಆಗಿರುವ ಟ್ರೈಲರ್ ನೋಡುಗರನ್ನು ಅಚ್ಚರಿ ಮೂಡಿಸಿದ್ದರಿಂದ,  ಒಳ್ಳೆಯ ಓಪನಿಂಗ್ ಪಡೆಯಲಿದೆ ಎಂದೇ ಹೇಳಬಹುದು.

    ಮೊದಲ ಭಾಗದಲ್ಲಿ ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದರು. ಪಾರ್ಟ್ ಬಿ ಎನ್ನು ಹೇಗೆ ಸ್ವೀಕರಿಸುತ್ತಾರೆ ಎಂದು ಕಾದು ನೋಡಬೇಕು. ಅಂದಾಹಾಗೆ ‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್‌ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.

  • ಏಪ್ರಿಲ್ 7ಕ್ಕೆ ರಂಗಾಯಣ ರಘು ನಟನೆಯ ‘ಅಜ್ಞಾತವಾಸಿ’ ಟೀಸರ್ ರಿಲೀಸ್

    ಏಪ್ರಿಲ್ 7ಕ್ಕೆ ರಂಗಾಯಣ ರಘು ನಟನೆಯ ‘ಅಜ್ಞಾತವಾಸಿ’ ಟೀಸರ್ ರಿಲೀಸ್

    ಗುಲ್ಟು ಖ್ಯಾತಿಯ ನಿರ್ದೇಶಕ ಜನಾರ್ದನ್ ಚಿಕ್ಕಣ್ಣ (Janardhan Chikkanna) ಹಾಗೂ ಗೋಧಿ ಬಣ್ಣ ಸಾಧಾರಣ ಮೈಕಟ್ಟು ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ (Hemanth Rao) ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ‘ಅಜ್ಞಾತವಾಸಿ’ (Ajnathavasi) ಸಿನಿಮಾದ ಟೀಸರ್ (Teaser) ಇದೇ ಏಪ್ರಿಲ್ 7ರಂದು ರಿಲೀಸ್ ಆಗಲಿದೆ. ಜನಾರ್ದನ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ಹೇಮಂತ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ಈ ಕಾರಣದಿಂದಾಗಿಯೇ ಸಿನಿಮಾ ಕುತೂಹಲ ಮೂಡಿಸಿದೆ.

    ಈ ಸಿನಿಮಾದಲ್ಲಿ ರಂಗಾಯಣ ರಘು (Rangayana Raghu) ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದು, ರಂಗಾಯಣ ರಘು ಅವರೊಂದಿಗೆ ನಟಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ ತಾರಾಗಣದಲ್ಲಿ ಇದ್ದಾರೆ. ರಂಗಾಯಣ ರಘು   ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದರೆ,  ಸಿದ್ದು ಮೂಲಿಮನಿ ಹಾಗೂ ಪಾವನ ಗೌಡ ಅವರ ಪಾತ್ರವೂ ವಿಶೇಷವಾಗಿದೆಯಂತೆ. ಇದನ್ನೂ ಓದಿ:‘ವೀರಂ’ ಮೂಲಕ ವಿಷ್ಣುವರ್ಧನ್ ಅಭಿಮಾನಿಯಾದ ಪ್ರಜ್ವಲ್ ದೇವರಾಜ್

    ಈ ಕುರಿತು ಮಾತನಾಡಿದ ಜನಾರ್ದನ್ ಚಿಕ್ಕಣ್ಣ, ‘ನನ್ನ ಗುರುಗಳಾದ ಕೃಷ್ಣರಾಜ್ ಅವರು ಕಥೆ ಬರೆದಿದ್ದಾರೆ. 1997 ರಲ್ಲಿ ಮಲೆನಾಡಿನಲ್ಲಿ ನಡೆದ ಕೊಲೆಯೊಂದರ ಸುತ್ತ ಈ ಕಥೆ ಹೆಣೆಯಲಾಗಿದೆ. ಅವರು ಕಥೆ ಹೇಳಿದ ರೀತಿ ತುಂಬಾ ಹಿಡಿಸಿತು.  ನನಗೆ ತಿಳಿದ ಹಾಗೆ ಇದೊಂದು ಕನ್ನಡದಲ್ಲಿ ಈವರೆಗೂ ಬಂದಿರದ ಮರ್ಡರ್ ಮಿಸ್ಟರಿ ಅನ್ನಬಹುದು. ಆನಂತರ ಹೇಮಂತ್ ರಾವ್ ಅವರನ್ನು ಭೇಟಿಯಾಗಿ ಕಥೆ ಹೇಳಿದಾಗ ಕೇವಲ ಅರ್ಧಗಂಟೆಯಲ್ಲಿ ನಿರ್ಮಾಣಕ್ಕೆ ಒಪ್ಪಿಕೊಂಡರು.  ಅದ್ವೈತ ಛಾಯಾಗ್ರಹಕರಾಗಿ ಹಾಗೂ ಚರಣ್ ರಾಜ್ ಸಂಗೀತ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ’ ಎನ್ನುತ್ತಾರೆ.