Tag: hescom

  • ಕರೆಂಟ್‌ ತಗುಲಿ ಕಾಮಗಾರಿ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಬಲಿ – ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ

    ಕರೆಂಟ್‌ ತಗುಲಿ ಕಾಮಗಾರಿ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಬಲಿ – ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ

    ಚಿಕ್ಕೋಡಿ: ಕಾಮಗಾರಿ ಮಾಡುತ್ತಿದ್ದ ವೇಳೆ ಕರೆಂಟ್‌ ತಗುಲಿ ಇಬ್ಬರು ಕಾರ್ಮಿಕರು (Labor) ಮೃತಪಟ್ಟಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದ್ದು, ಈ ದುರಂತಕ್ಕೆ ಹೆಸ್ಕಾಂ (Hescom) ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಹನಮಂತ ಮಗದುಮ್(34) ಹಾಗೂ ಅಶೋಕ್ ಮಾಳಿ(36) ಮೃತ ದುರ್ದೈವಿಗಳು. ಹನಮಂತ ಹಾಗೂ ಅಶೋಕ್ ಇಬ್ಬರು ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ನೇಮಕವಾಗಿದ್ದರು. ಮೃತ ಹನಮಂತ ಹಾಗೂ ಅಶೋಕ್ ರಾಯಭಾಗ ತಾಲೂಕಿನ ಹಿಡಕಲ್ ಗ್ರಾಮದ ನಿವಾಸಿಗಳಾಗಿದ್ದರು.

    crime

    ಬಳ್ಳಿಗೇರಿ ಗ್ರಾಮದಿಂದ ದೇವನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಕಾಮಗಾರಿ ಮಾಡುತ್ತಿದ್ದರು. ಅಷ್ಟೇ ಅಲ್ಲದೇ ಈ ಇಬ್ಬರು ಕಾರ್ಮಿಕರು ವಿದ್ಯುತ್ ಕಂಬ ಏರಿ ದುರಸ್ತಿ ಮಾಡುತ್ತಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಗಂಡಸರ ಸುದ್ದಿ ನನಗೆ ಬೇಡಪ್ಪ – ಅಶ್ವಥ್ ನಾರಾಯಣಗೆ ಡಿಕೆಶಿ ತಿರುಗೇಟು

    ಘಟನೆಗೆ ಸಂಬಂಧಿಸಿ ಅಲ್ಲಿನ ಸ್ಥಳೀಯರು ಸ್ಟೇಷನ್ ಆಪರೇಟರ್ ನಿರ್ಲಕ್ಷ್ಯಕ್ಕೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಪರೀಕ್ಷಾ ನಿಯಮ ಪಾಲಿಸದ 2 ಪರೀಕ್ಷಾ ಕೇಂದ್ರ ರದ್ದು

    Live Tv
    [brid partner=56869869 player=32851 video=960834 autoplay=true]

  • ಕೋಟಿ ಕೋಟಿ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡ ಗ್ರಾಮ ಪಂಚಾಯ್ತಿಗಳು!

    ಕೋಟಿ ಕೋಟಿ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡ ಗ್ರಾಮ ಪಂಚಾಯ್ತಿಗಳು!

    – ಕತ್ತಲಲ್ಲಿ ಮುಳುಗಿದ ಬಾಗಲಕೋಟೆಯ 100ಕ್ಕೂ ಹೆಚ್ಚು ಗ್ರಾಮಗಳು

    ಬಾಗಲಕೋಟೆ: ಗ್ರಾಮ ಪಂಚಾಯ್ತಿಗಳು ಗ್ರಾಮದಲ್ಲಿ ಮೂಲಭೂತ ಸೌಲಭ್ಯಕ್ಕಾಗಿ, ಅಭಿವೃದ್ದಿಗಾಗಿ ಹುಟ್ಟು ಹಾಕಿದ ಸ್ಥಳೀಯ ಸಂಸ್ಥೆಗಳು. ಗ್ರಾಮದಲ್ಲಿ ರಸ್ತೆ, ವಿದ್ಯುತ್, ನೀರು ಎಲ್ಲವನ್ನೂ ಕಲ್ಪಿಸಬೇಕಾಗಿರೋದು ಗ್ರಾಪಂ ಜವಾಬ್ದಾರಿ ಹಾಗೂ ಕರ್ತವ್ಯ. ಆದರೆ ಆ ಜಿಲ್ಲೆಯಲ್ಲಿ ಗ್ರಾ.ಪಂಗಳೇ ಗ್ರಾಮಗಳನ್ನು ಅಂಧಕಾರದಲ್ಲಿ ಮುಳುಗಿಸಿವೆ. ಗ್ರಾ.ಪಂ ಬೇಜವಾಬ್ದಾರಿತನದಿಂದ 35ಕ್ಕೂ ಹೆಚ್ಚು ಹಳ್ಳಿಗಳು ಕತ್ತಲಮಯವಾಗಿವೆ. ರಾತ್ರಿ ಬೀದಿಯಲ್ಲಿ ಜನರು ಭಯದಲ್ಲಿ ಸಂಚರಿಸಬೇಕಾಗಿದೆ.

    ಹೌದು. ಬಾಗಲಕೋಟೆ ಜಿಲ್ಲೆಯಲ್ಲಿ ಗ್ರಾಪಂ ನ ಬೇಜವಾಬ್ದಾರಿತನದಿಂದ ಹಳ್ಳಿ ಜನರು ರಾತ್ರಿಯಾದರೆ ಕತ್ತಲಲ್ಲಿ ಕನವರಿಸಬೇಕಾಗಿದೆ. ಯಾಕೆಂದರೆ ಬಾಗಲಕೋಟೆ ಜಿಲ್ಲೆಯಲ್ಲಿ 198 ಗ್ರಾಪಂಗಳಿಂದ ಬರೊಬ್ಬರಿ 47 ಕೋಟಿ ಕರೆಂಟ್ ಬಿಲ್ ಬಾಕಿ ಇದೆ. ಇದರಿಂದ ಹೆಸ್ಕಾಮ್ ಬಾಕಿ ಉಳಿಸಿಕೊಂಡ ಗ್ರಾಪಂಗಳ ವಿದ್ಯುತ್ ಸಂಪರ್ಕ ಕಡಿತ ಮಾಡುವ ಕಾರ್ಯಕ್ಕೆ ಮುಂದಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 35 ಕ್ಕೂ ಅಧಿಕ ಗ್ರಾಪಂ ಕಚೇರಿ ಹಾಗೂ ಆ ಗ್ರಾಪಂ ವ್ಯಾಪ್ತಿಯಲ್ಲಿನ ನೂರಕ್ಕೂ ಹೆಚ್ಚು ಹಳ್ಳಿಗಳ ಬೀದಿದೀಪಗಳ ವಿದ್ಯುತ್ ಕಡಿತ ಮಾಡಲಾಗಿದೆ. ಇದರಿಂದ ಗ್ರಾಮಸ್ಥರು ರಾತ್ರಿ ಕತ್ತಲಲ್ಲಿ ಕನವರಿಸಬೇಕಾಗಿದೆ. ಬೀದಿಯಲ್ಲಿ ಭಯದಲ್ಲಿ ಸಂಚರಿಸಬೇಕಾಗಿದೆ. ರಸ್ತೆಯಲ್ಲಿ ಹುಳು ಹುಪ್ಪಡಿಗಳು ಓಡಾಡುತ್ತವೆ. ಕತ್ತಲಲ್ಲಿ ಯಾರಿಗಾದರೂ ಏನಾದರೂ ತೊಂದರೆ ಆದರೆ ಯಾರು ಜವಾಬ್ದಾರಿ, ಕೂಡಲೇ ವಿದ್ಯುತ್ ಬಿಲ್ ಬಾಕಿ ಪಾವತಿಸಿ ಕತ್ತಲಿಂದ ಮುಕ್ತಿ ನೀಡಿ ಎಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

    ಸದ್ಯ ಬಾಗಲ ತಾಲೂಕಿನ ಮುನಾಳ, ಗದ್ದನಕೇರಿ, ಸೀಗಿಕೇರಿ, ನೀರಲಕೇರಿ ಗ್ರಾಪಂಗಳು, ಹುನಗುಂದ ತಾಲೂಕು, ಇಳಕಲ್ ತಾಲೂಕಿನ ಗ್ರಾಪಂ ಸೇರಿ ಒಟ್ಟು 35 ಕ್ಕೂ ಅಧಿಕ ಗ್ರಾಪಂ ವ್ಯಾಪ್ತಿಯ ಬೀದಿದೀಪಗಳ ವಿದ್ಯುತ್ ಕಡಿತ ಮಾಡಲಾಗಿದೆ. ಆದರೆ ಕುಡಿಯುವ ನೀರು ಸರಬರಾಜು ಮಾಡೋದಕ್ಕೆ ಬೇಕಾದ ವಿದ್ಯುತ್ ಕಡಿತ ಮಾಡಿಲ್ಲ ಎನ್ನೋದು ಸ್ವಲ್ಪ ಸಮಾಧಾನಕರ ಸಂಗತಿ. ಬಾಗಲಕೋಟೆ ಜಿಲ್ಲೆಯಲ್ಲಿ 198 ಗ್ರಾಪಂ ನಿಂದ ಪ್ರತಿ ತಿಂಗಳು ಮೂರು ಕೋಟಿ ಬಿಲ್ ಬರಬೇಕು. ಆದರೆ ಸರಿಯಾಗಿ ತುಂಬದ ಕಾರಣ 2016-17 ನೇ ಸಾಲಿನಿಂದ ಇದುವರೆಗೂ ಹೆಸ್ಕಾಮ್ ಬಾಗಲಕೋಟೆ ವೃತ್ತದಲ್ಲಿ 24,79,81 ಸಾವಿರ, ಜಮಖಂಡಿ ವೃತ್ತದಿಂದ 5,562 ಸಾವಿರ, ಮುಧೋಳ ವೃತ್ತದಿಂದ 17,19,67 ಸಾವಿರ. ಒಟ್ಟು 47,5,12 ಸಾವಿರ ಬಾಕಿ ಉಳಿದಿದೆ. ಇದನ್ನೂ ಓದಿ: ಅತ್ತೆ ಮನೆಗೆ ಮತ ಕೇಳಲು ಹೋದ ಸಿಎಂ ಬಸವರಾಜ ಬೊಮ್ಮಾಯಿ

    ಹೆಸ್ಕಾಮ್ ಎಮ್ ಡಿ ಆದೇಶದ ಪ್ರಕಾರ ಬಾಕಿ ಉಳಿಸಿಕೊಂಡ ಹಿನ್ನೆಲೆ ಸಂಪರ್ಕ ಕಡಿತ ಮಾಡುತ್ತಿದ್ದೇವೆ. ಇದು ಅನಿವಾರ್ಯ ಯಾವ ಪಂಚಾಯ್ತಿಯಿಂದ ಬಾಕಿ ಪಾವತಿಸಲಾಗುತ್ತದೆ ಪುನಃ ಸಂಪರ್ಕ ಕಲ್ಪಿಸುತ್ತೇವೆ. ಬಾಕಿ ನೀಡದವರೆಗೂ ವಿದ್ಯುತ್ ಸಂಪರ್ಕ ಕಡಿತ ಕಾರ್ಯ ಮುಂದುವರಿಯುತ್ತದೆ ಅಂತ ಹೆಸ್ಕಾಮ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಗ್ರಾಪಂ ಪಿಡಿಒ ಗಳು ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಹೆಸ್ಕಾಮ್ ಅಧಿಕಾರಿಗಳ ಜೊತೆಯೂ ಮಾತಾಡಲಾಗಿದೆ. ಇನ್ನೆರಡು ದಿನದಲ್ಲಿ ಸಮಸ್ಯೆ ಸರಿಯಾಗುವ ವಿಶ್ವಾಸ ಇದೆ. ಗ್ರಾಪಂ ಅನುದಾನದಲ್ಲಿ ವಿದ್ಯುತ್ ಬಿಲ್ ಪಾವತಿಸುತ್ತೇವೆ ಅಂತಿದ್ದಾರೆ. ಒಟ್ಟಿನಲ್ಲಿ ಗ್ರಾಮದ ಶ್ರೇಯೋಭೀವೃದ್ದಿಗೆ ಇರಬೇಕಿದ್ದ ಗ್ರಾಪಂಗಳಿಂದಲೇ ಗ್ರಾಮಕ್ಕೆ ಕತ್ತಲು ಆವರಿಸುತ್ತಿದೆ. ಆದಷ್ಟು ಬೇಗ ಜಿಪಂ ಅಧಿಕಾರಿಗಳು ಹೆಸ್ಕಾಮ್ ಅಧಿಕಾರಿಗಳು ಚರ್ಚೆ ಮಾಡಿ ಈ ಸಮಸ್ಯೆ ಬಗೆಹರಿಸಬೇಕಾಗಿದೆ.

  • ವಿದ್ಯುತ್ ಕಂಬದಿಂದ ಜಿಗಿದು ಜೀವ ಉಳಿಸಿಕೊಂಡ ಸಿಬ್ಬಂದಿ

    ವಿದ್ಯುತ್ ಕಂಬದಿಂದ ಜಿಗಿದು ಜೀವ ಉಳಿಸಿಕೊಂಡ ಸಿಬ್ಬಂದಿ

    ಧಾರವಾಡ: ವಿದ್ಯುತ್ ಕಂಬ ಬದಲಿಸುವ ವೇಳೆ ಭಾರೀ ಅನಾಹುತವೊಂದು ತಪ್ಪಿದೆ.

    ಧಾರವಾಡ ನಗರದ ಕಮಲಾಪುರದಲ್ಲಿ ಈ ಘಟನೆ ನಡೆದಿದೆ. ಹೆಸ್ಕಾಂ ಲೈನ್ ಮ್ಯಾನ್ ಕಂಬ ಬದಲಿಸುವ ವೇಳೆ ಏಕಾಏಕಿ ಕಂಬ ಸಿಬ್ಬಂದಿ ಮೈಮೇಲೆ ಬೀಳುತ್ತಿತ್ತು. ಈ ವೇಳೆ ಲೈನ್ ಮ್ಯಾನ್ ಕಂಬದಿಂದ ಹಾರಿ ಪಾರಾಗಿದ್ದಾರೆ.

    ಕಂಬ ಬದಲಿಸುವ ಕೆಲಸದ ವೇಳೆ ಕಂಬದ ಮೇಲೆ ಹತ್ತಿ ವೈಯರ್ ತಪ್ಪಿಸುವ ಕೆಲಸವನ್ನು ಸಿಬ್ಬಂದಿ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಮುರಿದಿದ್ದ ಕಂಬ ವಾಲತೊಡಗಿದೆ. ಇದನ್ನರಿತ ಲೈನ್ ಮ್ಯಾನ್ ತಕ್ಷಣ ಕಂಬದಿಂದ ಜಿಗಿದು ಪಾರಾಗಿದ್ದಾರೆ.

    ಹೆಸ್ಕಾಂ ಸಿಬ್ಬಂದಿ ಕಂಬದಿಂದ ಬೀಳುವಾಗ ಕೆಳಗಡೆನೇ ಟ್ರ್ಯಾಕ್ಟರ್ ಕೂಡ ನಿಂತಿತ್ತು. ಟ್ರ್ಯಾಕ್ಟರ್ ಹಾಗೂ ಕಂಬದ ನಡುವೆ ಹೆಸ್ಕಾಂ ಸಿಬ್ಬಂದಿ ಸಿಲುಕುತ್ತಿದ್ರೂ ಅವರ ಜೀವಕ್ಕೆ ಅಪಾಯವಿತ್ತು. ಆದರೆ ಅವರು ತಕ್ಷಣ ಎಚ್ಚೆತ್ತ ಕಾರಣ ಜೀವ ಉಳಿಸಿಕೊಂಡು ಪಾರಾಗಿದ್ದಾರೆ.

    ಕಂಬದ ಬಳಿಯೇ ನಿಂತಿದ್ದ ಟ್ರ್ಯಾಕ್ಟರ್ ಚಾಲಕ ಕೂಡ ಈ ಕಂಬ ಬೀಳುವುದನ್ನು ನೋಡಿ ಅಲ್ಲಿಂದ ಓಡಿ ಹೋಗಿದ್ದಾರೆ. ಸದ್ಯ ಈ ಎಲ್ಲ ದೃಶ್ಯವನ್ನು ಅಲ್ಲೇ ನಿಂತಿದ್ದ ಯುವಕನೋರ್ವ ತನ್ನ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾನೆ.

  • ವಿದ್ಯುತ್ ತಂತಿ ತುಂಡಾಗಿ ಬಿದ್ದರೂ ತಲೆಕೆಡಿಸಿಕೊಳ್ಳದ ಹೆಸ್ಕಾಂ- ಶಾಕ್ ಹೊಡೆದು ಇಬ್ಬರು ಸಾವು

    ವಿದ್ಯುತ್ ತಂತಿ ತುಂಡಾಗಿ ಬಿದ್ದರೂ ತಲೆಕೆಡಿಸಿಕೊಳ್ಳದ ಹೆಸ್ಕಾಂ- ಶಾಕ್ ಹೊಡೆದು ಇಬ್ಬರು ಸಾವು

    ಬಾಗಲಕೋಟೆ: ವಿದ್ಯುತ್ ಕಂಬದಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಗೋಟೆ ಗ್ರಾಮದ ಜಮೀನಿನಲ್ಲಿ ನಡೆದಿದೆ.

    ಗೋಟೆ ಗ್ರಾಮದ ಸಂತೋಷ್ ಪಾಟೀಲ್(30) ಹಾಗೂ ಬಾಳಾಸಾಹೇಬ್ ಕಟಾವೆ(20) ಮೃತ ದುರ್ದೈವಿಗಳು. ಜಮೀನಿನಲ್ಲಿ ತೊಗರಿ ಬೆಳೆಗೆ ಔಷಧಿ ಸಿಂಪರಣೆ ಮಾಡುವ ವೇಳೆ ಈ ಅವಘಡ ಸಂಭವಿಸಿದೆ. ಜಮೀನಿನಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಈ ಬಗ್ಗೆ ಹೆಸ್ಕಾಂಗೆ ಮಾಹಿತಿ ತಿಳಿಸಿ ಹಲವಾರು ಬಾರಿ ದುರಸ್ಥಿ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಆದರೆ ದುರಸ್ಥಿ ಕಾರ್ಯ ಮಾಡದೆ ಹೆಸ್ಕಾಂ ಸಿಬ್ಬಂದಿ ನಿರ್ಲಕ್ಷಿಸಿದ್ದರು.

    ಹೀಗಾಗಿ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಇಂದು ನಮ್ಮ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಮೃತರ ಪೋಷಕರು ಆರೋಪಿಸಿ ಕಣ್ಣೀರಿಡುತ್ತಿದ್ದಾರೆ. ಅಲ್ಲದೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

    ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ರಾತ್ರೋರಾತ್ರಿ ಎಲೆಕ್ಟ್ರಾನಿಕ್ಸ್ ಉಪಕರಣಗಳು ಭಸ್ಮ- ರೊಚ್ಚಿಗೆದ್ದ ಗ್ರಾಮಸ್ಥರು ಬಿಲ್ ಕಲೆಕ್ಟರ್ ನ ಕೂಡಿ ಹಾಕಿದ್ರು

    ರಾತ್ರೋರಾತ್ರಿ ಎಲೆಕ್ಟ್ರಾನಿಕ್ಸ್ ಉಪಕರಣಗಳು ಭಸ್ಮ- ರೊಚ್ಚಿಗೆದ್ದ ಗ್ರಾಮಸ್ಥರು ಬಿಲ್ ಕಲೆಕ್ಟರ್ ನ ಕೂಡಿ ಹಾಕಿದ್ರು

    ಧಾರವಾಡ: ಹೈವೋಲ್ಟೇಜ್ ವಿದ್ಯುತ್ ಹರಿದ ಪರಿಣಾಮ ಗ್ರಾಮದ ಹಲವು ಮನೆಗಳ ಎಲೆಕ್ಟ್ರಾನಿಕ್ಸ್ ಉಪಕರಣಗಳೆಲ್ಲ ಸುಟ್ಟು ಭಸ್ಮವಾಗಿರುವ ಘಟನೆ ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದಲ್ಲಿ ನಡೆದಿದೆ.

    ಕ್ಯಾರಕೊಪ್ಪ ಗ್ರಾಮದಲ್ಲಿ ಬುಧವಾರ ತಡರಾತ್ರಿ ಹೈವೋಲ್ಟೇಜ್ ವಿದ್ಯುತ್‍ನಿಂದ ಹಲವು ಮನೆಗಳ ಟಿವಿ, ಫ್ರಿಡ್ಜ್, ಚಾರ್ಜ್ ಹಾಕಿದ್ದ ಮೊಬೈಲ್ ಫೋನ್‍ಗಳು ಹಾಗೂ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳು ಸುಟ್ಟು ಹೋಗಿದೆ. ಸುಮಾರು 8 ಮನೆಗಳಲ್ಲಿದ್ದ ಎಲೆಕ್ಟ್ರಾನಿಕ್ಸ್ ಉಪಕರಣಗಳು ಸುಟ್ಟು ಹಾಳಾಗಿದೆ. ಇದರಿಂದ ಸಿಟ್ಟಿಗೆದ್ದ ಗ್ರಾಮಸ್ಥರು ಬೆಳ್ಳಂಬೆಳಗ್ಗೆ ಗ್ರಾಮದ ಬಿಲ್ ಕಲೆಕ್ಟರ್‍ಗೆ ಕರೆ ಮಾಡಿ ಅವಘಡದ ಬಗ್ಗೆ ತಿಳಿದ್ದಾರೆ. ಅಲ್ಲದೆ ಸ್ಥಳಕ್ಕೆ ಬರುವಂತೆ ಹೇಳಿದ್ದಾರೆ.

    ಗ್ರಾಮಸ್ಥರ ಒತ್ತಾಯದ ಮೇಲೆ ಸ್ಥಳಕ್ಕೆ ಬಂದ ಬಿಲ್ ಕಲೆಕ್ಟರ್ ನನ್ನು ತರಾಟೆಗೆ ತೆರೆದುಕೊಂಡು, ನಂತರ ಮೇಲಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ನಿನ್ನನ್ನು ಬಿಡಲ್ಲ ಎಂದು ಗ್ರಾಮ ಪಂಚಾಯ್ತಿಯಲ್ಲಿದ್ದ ಕೋಣೆಯಲ್ಲಿ ಗ್ರಾಮಸ್ಥರು ಕೂಡಿ ಹಾಕಿದ್ದಾರೆ. ಹಾಗೆಯೇ ಹೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿಯಿಂದಲೇ ಈ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅರಣ್ಯಾಧಿಕಾರಿ ಕಚೇರಿಗೆ ವಿದ್ಯುತ್ ಸಂಪರ್ಕ ಕಡಿತ – ಸಮುದಾಯ ಭವನಕ್ಕೆ ಸಿಬ್ಬಂದಿ ಶಿಫ್ಟ್

    ಅರಣ್ಯಾಧಿಕಾರಿ ಕಚೇರಿಗೆ ವಿದ್ಯುತ್ ಸಂಪರ್ಕ ಕಡಿತ – ಸಮುದಾಯ ಭವನಕ್ಕೆ ಸಿಬ್ಬಂದಿ ಶಿಫ್ಟ್

    ಧಾರವಾಡ: ಬಿಲ್ ಪಾವತಿಸದ್ದಕ್ಕೆ ಹೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಪರಿಣಾಮ ವಲಯ ಅರಣ್ಯಾಧಿಕಾರಿ ಕಚೇರಿ ಈಗ ಸಮುದಾಯ ಭವನದಲ್ಲಿ ಕಾರ್ಯನಿರ್ವಹಿಸುವಂತಾಗಿದೆ.

    ಇಲ್ಲಿನ ವಲಯ ಅರಣ್ಯಾಧಿಕಾರಿ ಕಚೇರಿಯ ಅಧಿಕಾರಿಗಳು ಕಳೆದ ಕೆಲವು ತಿಂಗಳಿನಿಂದ ವಿದ್ಯುತ್ ಬಿಲ್ ಪಾವತಿಸಿರಲಿಲ್ಲ. ಹೀಗಾಗಿ ಕಚೇರಿಯ 30 ಸಾವಿರ ರೂ. ಹಾಗೂ ಡಿಎಫ್‍ಒ ಸರ್ಕಾರಿ ನಿವಾಸದ ಬಾಕಿ ಸೇರಿದಂತೆ ಒಟ್ಟು 51 ಸಾವಿರ ರೂ. ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆಯೇ ಕಚೇರಿ ಮತ್ತು ನಿವಾಸದ ವಿದ್ಯುತ್ ಸಂಪರ್ಕವನ್ನು ಹೆಸ್ಕಾಂ ಸಿಬ್ಬಂದಿ ಕಡಿತಗೊಳಿಸಿದ್ದಾರೆ.

    ಕಚೇರಿಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ತಮ್ಮದೇ ಇಲಾಖೆಯ ಆವರಣದಲ್ಲಿರುವ ಸಮುದಾಯ ಭವನಕ್ಕೆ ಕಂಪ್ಯೂಟರ್ ಗಳನ್ನು ಸಾಗಿಸಲಾಗಿದೆ. ಕೆಲವು ಸಿಬ್ಬಂದಿ ಅಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದಾಗಿ ಕಳೆದ ಎರಡು ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಪರದಾಡುತ್ತಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಲು ಇಲಾಖೆಗೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಇಲಾಖೆಗೆ ಅನುದಾನ ಬಿಡುಗಡೆಯಾಗಿಲ್ಲ. ಇದರಿಂದಾಗಿ ವಿದ್ಯುತ್ ಬಿಲ್ ಪಾವತಿ ಸೇರಿದಂತೆ ವಿವಿಧ ಕಡತಗಳು ಬಾಕಿಯಿವೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮಸ್ಥರಿಗೆ ಆತಂಕ!

    ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮಸ್ಥರಿಗೆ ಆತಂಕ!

    ಚಿಕ್ಕೋಡಿ: ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಡೀ ಗ್ರಾಮಸ್ಥರೇ ಆತಂಕದಿಂದ ಕಾಲ ಕಳೆಯುತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ನಡೆಯುತ್ತಿದೆ.

    ಸ್ವಲ್ಪ ವಿದ್ಯುತ್ ತಾಗಿದರೆ ಪ್ರಾಣ ಹೋಗುತ್ತದೆ ಎಂದು ಹೆಸ್ಕಾಂ ಅಧಿಕಾರಿಗಳಿಗೆ ತಿಳಿದಿದ್ದರೂ ಗ್ರಾಮದ ಬಹುತೇಕ ಮನೆಗಳ ಮೇಲೆ ಹೈ ಟೆನ್ಶನ್ ವಿದ್ಯುತ್ ಕೇಬಲ್ ಗಳನ್ನು ಹರಿ ಬಿಟ್ಟಿದ್ದು ಜನರು ಆತಂಕದಲ್ಲಿ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಕಾಂಕ್ರೆಟ್ ಮನೆಗಳು ಆಗಿರುದರಿಂದ ಎಲ್ಲಿ ಸ್ವಲ್ಪ ಶಾರ್ಟ್ ಸರ್ಕ್ಯೂಟ್‍ ಆದರೂ ಮನೆಗೆಲ್ಲ ಕರೆಂಟ್ ತಾಗಿ ಬಿಡುತ್ತೆ ಎಂಬ ಭಯ ಜನರನ್ನು ಕಾಡುತ್ತಿದೆ. ಈ ಬಗ್ಗೆ ಹೆಸ್ಕಾಂ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಪ್ಲಾಸ್ಟಿಕ್ ಪೈಪ್ ಅಳವಡಿಸಿಕೊಳ್ಳಿ ಏನೂ ಆಗಲ್ಲ ಅನ್ನುತ್ತಿರುವ ಹೆಸ್ಕಾಂ ಸಿಬ್ಬಂದಿ ಮಾತು ಕೇಳಿ ಅದನ್ನೂ ಮಾಡಿದರೂ ಪ್ಲಾಸ್ಟಿಕ್ ಸುಟ್ಟು ಹೋಗುತ್ತಿದೆ. ಇದರಿಂದ ನಮಗೆ ತುಂಬ ಭಯ ಆಗುತ್ತಿದ್ದು ಚಿಕ್ಕ ಮಕ್ಕಳ ಬಗ್ಗೆ ಕಾಳಜಿ ಹೆಚ್ಚಾಗಿದೆ ಎಂದು ಹೆಸ್ಕಾಂ ಅಧಿಕಾರಿಗಳ ವಿರುದ್ಧ ಜನರು ಕಿಡಿಕಾರಿದ್ದಾರೆ.

    ಇಲ್ಲಿನ ವಿದ್ಯುತ್ ಕಂಬಗಳು ಬೀಳುವ ಹಂತದಲ್ಲಿದ್ದು ಯಾವುದೇ ಅವಘಡ ಸಂಭವಿಸುವ ಮುನ್ನ ಹೆಸ್ಕಾಂ ಅಧಿಕಾರಿಗಳು ನಿದ್ರೆಯಿಂದ ಎಚ್ಚೆತ್ತುಕೊಳ್ಳಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ವಿದ್ಯುತ್ ಕಂಬದಲ್ಲೇ ಮೃತಪಟ್ಟು ನೇತಾಡಿತು  ಹೆಸ್ಕಾಂ ಸಿಬ್ಬಂದಿಯ ಮೃತದೇಹ!

    ವಿದ್ಯುತ್ ಕಂಬದಲ್ಲೇ ಮೃತಪಟ್ಟು ನೇತಾಡಿತು ಹೆಸ್ಕಾಂ ಸಿಬ್ಬಂದಿಯ ಮೃತದೇಹ!

    ಗದಗ: ವಿದ್ಯುತ್ ಅವಘಡದಿಂದ ಹೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಸೊರಟೂರು ಬಳಿ ನಡೆದಿದೆ.

    ಚನ್ನಯ್ಯ ವೀರಯ್ಯ ಸೊಪ್ಪಿನ ಮಠ(22) ಮೃತ ಯುವಕ. ಚನ್ನಯ್ಯ ಶಿರಹಟ್ಟಿ ಹೆಸ್ಕಾಂ ಉಪವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ವಿದ್ಯುತ್ ಲೈನ್ ದುರಸ್ತಿ ವೇಳೆ ಈ ಘಟನೆ ಸಂಭವಿಸಿದೆ. ಲೈನ್ ದುರಸ್ತಿ ವೇಳೆ ಹೈ ಟೆನ್ಷನ್ ತಂತಿ ತಗುಲಿ ಚನ್ನಯ್ಯ ಮೃತಪಟ್ಟಿದ್ದಾರೆ. ಪರಿಣಾಮ ಚನ್ನಯ್ಯ ಮೃತ ದೇಹ ವಿದ್ಯುತ್ ಕಂಬದಲ್ಲಿ ನೇತಾಡುತ್ತಿದೆ.

    ಸಹೋದ್ಯೋಗಿಗಳೊಂದಿಗೆ ಕಳುಹಿಸದೇ ಒಬ್ಬನನ್ನೇ ಕೆಲಸಕ್ಕೆ ಕಳುಹಿಸಿದ್ದರಿಂದ ಈ ದುರಂತ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸಂಬಂಧ ಗದಗ ತಾಲೂಕಿನ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪವರ್ ಕಟ್ ಭಾಗ್ಯ: ಕತ್ತಲೆಯಲ್ಲಿ ಮುಳುಗಿದ ಗದಗ ಜಿಲ್ಲಾಸ್ಪತ್ರೆ

    ಪವರ್ ಕಟ್ ಭಾಗ್ಯ: ಕತ್ತಲೆಯಲ್ಲಿ ಮುಳುಗಿದ ಗದಗ ಜಿಲ್ಲಾಸ್ಪತ್ರೆ

    ಗದಗ: ಜಿಲ್ಲೆಯ ಪ್ರಮುಖ ಕೇಂದ್ರ ಸ್ಥಾನದಲ್ಲಿರುವ ಜಿಮ್ಸ್ ಆಸ್ಪತ್ರೆಯಲ್ಲಿ ಇಂದು ಮೂರು ಗಂಟೆಗಳ ಕಾಲ ಪವರ್ ಕಟ್ ಆಗಿದ್ದರಿಂದ ರೋಗಿಗಳು ನರಳಾಡಿದ್ದಾರೆ. ಕಳೆದೆರೆಡು ದಿನಗಳಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಪವರ್ ಕಟ್ ಸಮಸ್ಯೆ ಉಂಟಾಗುತ್ತಿದ್ದು, ಆಸ್ಪತ್ರೆಯ ಆಡಳಿತ ಮಂಡಳಿ ಯಾವುದೇ ಪರಿಹಾರ ಕ್ರಮವನ್ನು ಕೈಗೊಂಡಿಲ್ಲ.

    ಆಸ್ಪತ್ರೆಯ ಎಲ್ಲಾ ವಾರ್ಡ್‍ಗಳಲ್ಲಿರುವ ರೋಗಿಗಳು ಕತ್ತಲಲ್ಲೇ ಪರದಾಡುತ್ತಾ ಚಿಕಿತ್ಸೆಗಾಗಿ ಕಾದುಕುಳಿತ್ತಿದ್ದಾರೆ. ಸೋಮವಾರವೂ ಆಸ್ಪತ್ರೆಯಲ್ಲಿ ಬೆಳಿಗ್ಗೆ 9 ರಿಂದ 1 ಗಂಟೆ ವರೆಗೆ ಸತತವಾಗಿ ಮೂರು ಗಂಟೆಗಳ ಕಾಲ ಪವರ್ ಕಟ್ ಮಾಡಲಾಗಿದೆ.

    ಹುಬ್ಬಳ್ಳಿ ಯಿಂದ ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ರಸ್ತೆ ಕಾಮಗಾರಿ ಆರಂಭವಾಗಿದೆ. ಅದಕ್ಕೆ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಗಳನ್ನು ಸ್ಥಳಾಂತರ ಮಾಡಲಾಗುತ್ತಿದ್ದು, ಹೆಸ್ಕಾಂ ನಿಂದ ಪವರ್ ಕಟ್ ಮಾಡಲಾಗಿದೆ. ಎರಡು ದಿನಗಳಿಂದ ವಿದ್ಯುತ್ ಕೈಕೊಡುತ್ತಿದ್ದರೂ ಜಿಲ್ಲಾ ಆಸ್ಪತ್ರೆಯ ಆಡಳಿತ ಮಂಡಳಿ ಪರ್ಯಾಯವಾಗಿ ಯಾವ ವ್ಯವಸ್ಥೆಯನ್ನು ಮಾಡಿಕೊಂಡಿಲ್ಲ.

    ದಿನನಿತ್ಯ ಸಾವಿರಾರು ರೋಗಿಗಳು ಭೇಟಿ ನೀಡುವ ಈ ಆಸ್ಪತ್ರೆಯಲ್ಲಿ ಇದ್ದ ಮೂರು ಜನರೇಟರ್ ಕೈಕೊಟ್ಟಿದ್ದು ಸಮಸ್ಯೆ ಹೆಚ್ಚಾಗಲು ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಯಲ್ಲಿರುವ 60, 70 ಮತ್ತು 120 ಕೆವಿ ಜನರೇಟರ್‍ಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. 120 ಕೆವಿ ಜನರೇಟರ್ ಇತ್ತೀಚೆಗೆ ಖರೀದಿಸಿದ್ದರೂ ಅದು ಏಕಾಏಕಿ ಕೈಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಬಾಣಂತಿಯರ ವಾರ್ಡ್, ನವಜಾತು ಶಿಶು ಕೇಂದ್ರ, ಐಸಿಯು ವಾರ್ಡ್‍ಗಲ್ಲಿನ ರೋಗಿಗಳಿಗೆ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಿದೆ. ಇದರಿಂದ ರೋಗಿಗಳಿಗೆ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ.

    ಜಿಲ್ಲೆಯ ಹಲವು ಪ್ರದೇಶಗಳಿಂದ ಪ್ರತಿನಿತ್ಯ ರೋಗಿಗಳು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಅಲ್ಲದೇ ರಕ್ತ ತಪಾಸಣೆಗಾಗಿ ಬೆಳಗ್ಗೆಯಿಂದಲೇ ನೂರಾರು ಜನರು ಸಾಲು ಗಟ್ಟಿ ನಿಂತಿರುವ ದೃಶ್ಯ ಸಾಮಾನ್ಯವಾಗಿ ಕಂಡು ಬಂರುತ್ತದೆ. ಬಡ ಜನರು ಆನಾರೋಗ್ಯ ಸಮಸ್ಯೆಯಿಂದ ಜೀವ ರಕ್ಷಣೆಗೆ ಆಸ್ಪತ್ರೆ ಬಂದರೆ ಆಸ್ಪತೆಯಲ್ಲಿ ಸೂಕ್ತ ವ್ಯವಸ್ಥೆಗಳಿಲ್ಲದೆ ಜೀವ ಕಳೆದು ಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಆಸ್ಪತ್ರೆಯ ಸಿಬ್ಬಂದಿಯು ಮಾನವೀಯತೆ ದೃಷ್ಟಿಯಿಂದಲೂ ರೋಗಿಗಳನ್ನು ಸಮಸ್ಯೆ ಬಗ್ಗೆ ಕೇಳುವುದಕ್ಕೆ ಹೋಗಿಲ್ಲ. ಜಿಲ್ಲಾ ಆಸ್ಪತ್ರೆಯ ಆಡಳಿತ ಅಧಿಕಾರಿಗಳ ನಿರ್ಲಕ್ಷಕ್ಕೆ ಆಕ್ರೋಶಗೊಂಡ ರೋಗಿಗಳು ಹಾಗೂ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದು, ಸರ್ಕಾರ ಕೂಡಲೇ ಸಮಸ್ಯೆಯನ್ನು ಪರಿಹರಿಸಬೇಕೆಂದು ಆಗ್ರಹಿಸಿದ್ದಾರೆ.

    https://www.youtube.com/watch?v=dOiemSbAkj0

  • ವಿದ್ಯುತ್ ಕಂಬಕ್ಕೆ ಶಾಲಾ ವಾಹನ ಡಿಕ್ಕಿ, ತಪ್ಪಿತು ಭಾರೀ ಅನಾಹುತ

    ವಿದ್ಯುತ್ ಕಂಬಕ್ಕೆ ಶಾಲಾ ವಾಹನ ಡಿಕ್ಕಿ, ತಪ್ಪಿತು ಭಾರೀ ಅನಾಹುತ

    ವಿಜಯಪುರ: ಖಾಸಗಿ ಶಾಲಾ ವಾಹನವೊಂದು ರಸ್ತೆಯ ಇಳಿಜಾರಿನಿಂದ ತನ್ನಿಂತಾನೆ ಮುಂದಕ್ಕೆ ಚಲಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಗರದಲ್ಲಿ ನಡೆದಿದೆ.

    ಆದರ್ಶನಗರ ಸೇವಾಲಾಲ್ ಹಾಗೂ ದುರ್ಗಾ ದೇವಸ್ಥಾನದ ಬಳಿ ಶಾಲಾ ಬಸ್ ನ್ನು ನಿಲ್ಲಿಸಲಾಗಿತ್ತು. ಈ ವೇಳೆ ಬಸ್ ತನ್ನಿಂದ ತಾನೇ ಮುಂದಕ್ಕೆ ಚಲಿಸಿ, ವಿದ್ಯುತ್ ಪ್ರವಹಿಸುತ್ತಿರುವ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿ ಯಾರು ಇಲ್ಲದೇ ಇದ್ದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿಯಾಗಿದ್ದರಿಂದ, ಕಂಬ ಅರ್ಧ ಕಟ್ ಆಗಿ ಬಸ್ ಮೇಲೆಯೇ ಬಿದ್ದಿದೆ. ಹೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವ ಅಧಿಕಾರಿಗಳು ಆಗಮಿಸದೇ ನಿರ್ಲಕ್ಷ್ಯವಹಿಸಿ ತಡವಾಗಿ ಬಂದಿದ್ದಾರೆ ಎಂದು ಜನ ಆರೋಪಿಸಿದ್ದಾರೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.