Tag: Hi-Command

  • ರೆಡ್ಡಿ ಡೀಲ್-ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್‍ನಿಂದ ಖಡಕ್ ಸಂದೇಶ ರವಾನೆ

    ರೆಡ್ಡಿ ಡೀಲ್-ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್‍ನಿಂದ ಖಡಕ್ ಸಂದೇಶ ರವಾನೆ

    ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಬಾರದು ಎಂದು ಹೈಕಮಾಂಡ್ ರಾಜ್ಯ ಬಿಜೆಪಿ ನಾಯರಕರಿಗೆ ಖಡಕ್ ಸಂದೇಶವನ್ನು ರವಾನಿಸಿದೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಜನಾರ್ದನ ರೆಡ್ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಮಾಹಿತಿಯನ್ನು ಹೈಕಮಾಂಡ್ ಪಡೆದುಕೊಂಡಿದ್ದು, ಗಣಿ ಧಣಿ ಪರ ಅಥವಾ ವಿರೋಧ ಹೇಳಿಕೆ ನೀಡದಂತೆ ಸೂಚಿಸಿದೆ. ಜನಾರ್ದನ ರೆಡ್ಡಿ ಜೊತೆಗಿನ ನಿಮ್ಮ ಸ್ನೇಹ ವೈಯಕ್ತಿಕ. ನಿಮ್ಮ ಹೇಳಿಕೆ ಪಕ್ಷದ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಇದು ಮುಂದಿನ ಲೋಕಸಭಾ ಚುನಾವಣೆಯ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರಂತೆ.

    ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿಯೇ ರೆಡ್ಡಿಗೂ ಮತ್ತು ಬಿಜೆಪಿಗೆ ಯಾವುದೇ ಸಂಬಂಧವಿಲ್ಲ ಅಂತಾ ಹೇಳಲಾಗಿದೆ. ಇದೇ ನಿಲುವುವನ್ನು ರಾಜ್ಯ ಬಿಜೆಪಿ ನಾಯಕರು ಪ್ರದರ್ಶಿಸಬೇಕು ಎಂದು ಹೈಕಮಾಂಡ್ ಖಡಕ್ ಎಚ್ಚರಿಕೆಯನ್ನು ನೀಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಮಸ್ಕಾರ ಬಿಟ್ಟುಬಿಡ್ರಪ್ಪ, ನನಗೆ ಸಾಕಾಗಿದೆ ಏನಿದ್ರೂ ಅಧ್ಯಕ್ಷರನ್ನೇ ಕೇಳಿ- ಡಿ.ಕೆ ಶಿವಕುಮಾರ್

    ನಮಸ್ಕಾರ ಬಿಟ್ಟುಬಿಡ್ರಪ್ಪ, ನನಗೆ ಸಾಕಾಗಿದೆ ಏನಿದ್ರೂ ಅಧ್ಯಕ್ಷರನ್ನೇ ಕೇಳಿ- ಡಿ.ಕೆ ಶಿವಕುಮಾರ್

    ಬೆಂಗಳೂರು: ಡಿಸ್ಚಾರ್ಜ್ ಆಗುತ್ತಿದ್ದಂತೆ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಮನೆಗೆ ತೆರಳದೆ ಸೀದಾ ಸಿದ್ದರಾಮಯ್ಯ ಅವರನ್ನು ನೋಡಲು ತೆರಳಿದರು. ಈ ವೇಳೆ ಮಾಧ್ಯಮಗಳಿಗೆ ನಮಸ್ಕಾರ ಬಿಟ್ಟುಬಿಡ್ರಪ್ಪ, ನನಗೆ ಸಾಕಾಗಿದೆ, ಏನಿದ್ರೂ ಅಧ್ಯಕ್ಷರನ್ನೇ ಕೇಳಿ ಎಂದು ಹೇಳಿದ್ದಾರೆ.

    ಫುಡ್ ಪಾಯ್ಸನ್‍ನಿಂದ ಕಳೆದ ಮೂರು ದಿನಗಳ ಹಿಂದೆ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಡಿಕೆಶಿ ಗುರುವಾರ ಡಿಸ್ಚಾರ್ಜ್ ಆಗಿದ್ದಾರೆ. ಡಿಸ್ಚಾರ್ಜ್ ಆಗುತ್ತಿದ್ದಂತೆ ಡಿ.ಕೆ ಶಿವಕುಮಾರ್ ಮನೆಗೆ ತೆರಳದೆ ಸೀದಾ ಸಿದ್ದರಾಮಯ್ಯ ಅವರನ್ನು ಕಾಣಲು ಕಾವೇರಿ ನಿವಾಸಕ್ಕೆ ತೆರಳಿದರು. ಡಿಕೆಶಿ ಜೊತೆ ಸಂಸದ ಡಿಕೆ ಸುರೇಶ್ ಮತ್ತು ಕುಣಿಗಲ್ ಶಾಸಕ ಡಾ. ರಂಗನಾಥ್ ಸಹ ತೆರಳಿದರು.

    ರಾಜ್ಯ ರಾಜಕಾರಣದಲ್ಲಿ ನಡೆಯತ್ತಿರುವ ಪೊಲಿಟಿಕಲ್ ಗೇಮ್ ಬಗ್ಗೆ ಸಿದ್ದರಾಮಯ್ಯ ಹೈಕಮಾಂಡ್ ಬಳಿ ಚರ್ಚಿಸಿ ಗುರುವಾರ ಸಂಜೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ನಡೆದ ಚರ್ಚೆಗಳ ಬಗ್ಗೆ ಚರ್ಚಿಸಿರುವ ಸಾಧ್ಯತೆಗಳಿವೆ.

    ಸಿದ್ದರಾಮಯ್ಯ ಜೊತೆ ಚರ್ಚಿಸಿ ಹೊರಬಂದ ಮೇಲೆ ಡಿ.ಕೆ ಶಿವಕುಮಾರ್, ನಮಸ್ಕಾರ ಮಾಡ್ತಿನಿ ಬಿಡ್ರಪ್ಪಾ. ನನಗೆ ಸಾಕಾಗಿದೆ. ಕೆಪಿಸಿಸಿ ಅಧ್ಯಕ್ಷರಿದ್ದಾರೆ. ಅವರೇ ಎಲ್ಲಾ ಹೇಳ್ತಾರೆ ಎಂದು ಹೇಳಿದ್ದರು. ಅಲ್ಲದೇ ಎಂಎಲ್‍ಸಿ ನಾಮಪತ್ರ ಸಲ್ಲಿಕೆ ಮಾಡಬೇಕಿತ್ತು. ಆ ಡೇಟ್ ಯಾವಾಗ ಅಂತಾ ಮಾತುಕತೆ ಆಯ್ತು ಎಂದು ಡಿಕೆಶಿ ಹೇಳಿದ್ದಾರೆ.

    ದೆಹಲಿಯಿಂದ ಬಂದ ನಂತರ ಸಭೆ ಮಾಡಿದ್ದೀವಿ. ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ಆಯಿತ್ತು. ನಾವೆಲ್ಲ ಒಗ್ಗಟ್ಟಿನಿಂದ ಇದ್ದೇವೆ. ಯಾವುದೇ ಭಯ ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

    ಒಟ್ಟಿನಲ್ಲಿ ಸಿದ್ದು-ಡಿಕೆಶಿ ಭೇಟಿ ಕುತೂಹಲ ಮೂಡಿಸಿದ್ದು ಮೈತ್ರಿ ಸರ್ಕಾರ ಉಳಿಸಲು ಒಳಗೊಳಗೆ ಏನೋ ಪ್ಲಾನ್ ಮಾಡುತ್ತಿರುವ ಹಾಗೇ ಕಾಣುತ್ತಿದೆ. ಡಿಕೆಶಿ ಇಂದು ದೇವರ ಮೊರೆ ಹೋಗೋ ಸಾಧ್ಯತೆಗಳಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv