Tag: High Court of Karnataka

  • ಬಿಟ್ ಕಾಯಿನ್ ಪ್ರಕರಣ – ಡಿವೈಎಸ್‍ಪಿ ವಿರುದ್ಧದ ಘೋಷಿತ ಆರೋಪಿ ಆದೇಶ ಕೈಬಿಟ್ಟ ಹೈಕೋರ್ಟ್

    ಬಿಟ್ ಕಾಯಿನ್ ಪ್ರಕರಣ – ಡಿವೈಎಸ್‍ಪಿ ವಿರುದ್ಧದ ಘೋಷಿತ ಆರೋಪಿ ಆದೇಶ ಕೈಬಿಟ್ಟ ಹೈಕೋರ್ಟ್

    ಬೆಂಗಳೂರು: ಬಿಟ್ ಕಾಯಿನ್ (Bitcoin Case) ಪ್ರಕರಣದಲ್ಲಿ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಲ್ಲಿ ಡಿವೈಎಸ್‍ಪಿ ಶ್ರೀಧರ್ ಕೆ.ಪೂಜಾರ್ (Sridhar K. Pujar) ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ಪೂಜಾರ್ ವಿರುದ್ಧದ ಘೋಷಿತ ಆರೋಪಿ ಆದೇಶವನ್ನು ಹೈಕೋರ್ಟ್ (High Court of Karnataka) ರದ್ದುಪಡಿಸಿದೆ.

    ಪ್ರಕರಣದ ವಿಚಾರಣೆಗೆ ಸಹಕರಿಸದೇ ತಲೆಮರೆಸಿಕೊಂಡ ಹಿನ್ನೆಲೆ ವಿಚಾರಣಾ ನ್ಯಾಯಾಲಯ ಘೋಷಿತ ಆರೋಪಿ ಎಂದು ವಾರೆಂಟ್ ಹೊರಡಿಸಿತ್ತು. ವಾರೆಂಟ್ ಪ್ರಶ್ನಿಸಿ ಅವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಪೂಜಾರ್ ವಿರುದ್ಧದ ಘೋಷಿತ ಆರೋಪಿ ಆದೇಶವನ್ನು ರದ್ದು ಪಡಿಸಿದೆ. ಪೂಜಾರ್ ಅವರು ತನಿಖೆಗೆ ಸಹಕರಿಸುವುದಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ನ್ಯಾಯಾಲಯಕ್ಕೆ ವಿಚಾರಣೆ ವೇಳೆ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ

    ಬಳಿಕ ನ್ಯಾಯಾಲಯ, ಪೊಲೀಸರ ತನಿಖೆಗೆ ಆರೋಪಿ ಶ್ರೀಧರ್ ಕೆ. ಪೂಜಾರ್ ಸಹಕರಿಸಬೇಕು. ಮೇ 8ರ ಬೆಳಗ್ಗೆ 9ಕ್ಕೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಆ ದಿನ ಸಂಜೆ 6ರ ವರೆಗೆ ಕಸ್ಟಡಿಗೆ ಪಡೆದು ತನಿಖೆ ನಡೆಸಬೇಕು. ಜಾಮೀನು ಅರ್ಜಿ ಸಲ್ಲಿಸಿದರೆ ಪೊಲೀಸರು ಆಕ್ಷೇಪಿಸಬಾರದು ಎಂದು ಆದೇಶಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ಇಲ್ಲಿ ಸಾಯ್ತಿದ್ರೆ ಪಾಕ್ ಅಲ್ಲಿ ಅಳುತ್ತಿದೆ: ಮೋದಿ

  • 5,8,9ನೇ ತರಗತಿ ಪಬ್ಲಿಕ್ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ತಡೆ

    5,8,9ನೇ ತರಗತಿ ಪಬ್ಲಿಕ್ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ತಡೆ

    – ರಾಜ್ಯ ಸರ್ಕಾರಕ್ಕೆ ನೋಟಿಸ್

    ನವದೆಹಲಿ: ರಾಜ್ಯದ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶ (Board Exam Results) ಪ್ರಕಟಿಸದಂತೆ ಸುಪ್ರೀಂಕೋರ್ಟ್ (Supreme Court of India) ತಡೆ ನೀಡಿದೆ.

    5,8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆಗೆ ಅನುಮತಿ ನೀಡಿದ್ದ ಹೈಕೋರ್ಟ್ (High Court of Karnataka) ಆದೇಶವನ್ನು ಪ್ರಶ್ನಿಸಿ, ರುಪ್ಸಾ, ಅವರ್ ಸ್ಕೂಲ್, ಆರ್‌ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘಟನೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದವು. ಇದೀಗ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪರೀಕ್ಷಾ ಫಲಿತಾಂಶ ಪ್ರಕಟಿಸಿದಂತೆ ತಡೆ ನೀಡಿದೆ. ಅಲ್ಲದೇ ರಾಜ್ಯ ಸರ್ಕಾರಕ್ಕೆ ನೋಟಿಸ್ ಕೂಡ ಜಾರಿಗೊಳಿಸಿದೆ. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೆ.ಕವಿತಾ ಬಂಧನ – ಜಾಮೀನು ನೀಡಲು ದೆಹಲಿ ಕೋರ್ಟ್ ನಿರಾಕರಣೆ

    ಈಗಾಗಲೇ 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶವನ್ನು ಬೆಳಗ್ಗೆ 10 ಗಂಟೆಗೆ ಶಾಲೆಗಳು ಪ್ರಕಟ ಮಾಡಿವೆ. ಎಲ್ಲಾ ಶಾಲೆಗಳಲ್ಲಿ ಆಡಳಿತ ಮಂಡಳಿಗಳು ಫಲಿತಾಂಶ ಪ್ರಕಟ ಮಾಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಫಲಿತಾಂಶ ರವಾನೆ ಮಾಡಲಾಗಿದೆ. ಆಡಳಿತ ಮಂಡಳಿಗಳು ಶಿಕ್ಷಣ ಇಲಾಖೆಗೆ ಮಾಹಿತಿ ಅಪ್‍ಲೋಡ್ ಮಾಡಬೇಕಿದೆ. ಇದನ್ನೂ ಓದಿ: ಬರ ಪರಿಹಾರ; ಕರ್ನಾಟಕ ಸರ್ಕಾರದಿಂದ ಸಲ್ಲಿಸಿದ್ದ ಅರ್ಜಿ ಇಂದು ಸುಪ್ರೀಂನಲ್ಲಿ ವಿಚಾರಣೆ

  • ಬಂಧನಕ್ಕೆ ವಾರಂಟ್ ಹೊರಡಿಸಬೇಕಾಗುತ್ತೆ – ಶ್ರೀರಾಮುಲುಗೆ ಹೈಕೋರ್ಟ್ ಎಚ್ಚರಿಕೆ

    ಬಂಧನಕ್ಕೆ ವಾರಂಟ್ ಹೊರಡಿಸಬೇಕಾಗುತ್ತೆ – ಶ್ರೀರಾಮುಲುಗೆ ಹೈಕೋರ್ಟ್ ಎಚ್ಚರಿಕೆ

    ಬೆಂಗಳೂರು: ಚುನಾವಣಾ ನೀತಿ ಸಂಹಿಂತೆ (Election Code of Conduct) ಉಲ್ಲಂಘನೆ ಪ್ರಕರಣದಲ್ಲಿ ಮಾಜಿ ಸಚಿವ ಶ್ರೀರಾಮುಲು (B.Sriramulu) ಅವರನ್ನು ಹೈಕೋರ್ಟ್ (High Court of Karnataka) ತರಾಟೆ ತೆಗೆದುಕೊಂಡಿದೆ.

    ತಮ್ಮ ವಿರುದ್ಧ ದಾಖಲಾಗಿರುವ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ರದ್ದು ಪಡಿಸಬೇಕು ಎಂದು ಶ್ರೀರಾಮುಲು ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದನ್ನೂ ಓದಿ: ಕೋವಿಡ್ ವೇಳೆ ಮೋದಿ ಸಹಕಾರ ಸ್ಮರಿಸಿದ ಸಿಜೆಐ ಚಂದ್ರಚೂಡ್

    ಈ ವೇಳೆ ನ್ಯಾಯಮೂರ್ತಿಗಳು ಅರ್ಜಿದಾರರು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಎಷ್ಟು ಬಾರಿ ಹಾಜರಾಗಿದ್ದಾರೆ? ಎಷ್ಟು ಬಾರಿ ಸಮನ್ಸ್ ಜಾರಿ ಮಾಡಲಾಗಿದೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಸರ್ಕಾರದ ಪರ ವಕೀಲರು, ನಾಲ್ಕು ಬಾರಿ ಸಮನ್ಸ್ ಜಾರಿಯಾಗಿದ್ದು, ಒಂದು ಬಾರಿಯೂ ಅರ್ಜಿದಾರರು ಹಾಜರಾಗಿಲ್ಲ ಎಂದು ಉತ್ತರಿಸಿದ್ದಾರೆ.

    ಈ ವೇಳೆ ನ್ಯಾಯಮೂರ್ತಿಗಳು, ಸಚಿವರಾಗಲಿ, ಮಾಜಿ ಸಚಿವರಾಗಲಿ, ಕೇಸ್ ದಾಖಲಾದ ನಂತರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕು. ಮುಂದಿನ ವಿಚಾರಣೆ ವೇಳೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕು. ಒಂದು ವೇಳೆ ಹಾಜರಾಗದಿದ್ದಲ್ಲಿ ಬಂಧನಕ್ಕೆ ವಾರಂಟ್ (Warrant) ಹೊರಡಿಸಬೇಕಾಗುತ್ತದೆ ಎಂದು ಚಾಟಿ ಬೀಸಿದರು.

    ಅನುಮತಿ ಪಡೆಯದೇ ಅಭ್ಯರ್ಥಿ ಪರ ಚುನಾವಣಾ ರ‍್ಯಾಲಿ ನಡೆಸಿದ ಆರೋಪವನ್ನು ಶ್ರೀರಾಮುಲು ಅವರು ಎದುರಿಸುತ್ತಿದ್ದಾರೆ. ಈ ಸಂಬಂಧ 2023ರ ಏ.28 ರಂದು ಚುನಾವಣಾ ಆಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಇದನ್ನೂ ಓದಿ: ಅಕ್ಬರ್‌, ಸೀತಾ ಸಿಂಹಗಳಿಗೆ ಮರುನಾಮಕರಣ ಮಾಡಿ- ಕೋಲ್ಕತ್ತಾ ಹೈಕೋರ್ಟ್‌ ಸೂಚನೆ