Tag: high court

  • ಬೇಲೆಕೇರಿ ಅದಿರು ನಾಪತ್ತೆ ಕೇಸ್‌- ಸೈಲ್‌ಗೆ ರಿಲೀಫ್‌, ಶಿಕ್ಷೆಯನ್ನು ಅಮಾನತಿನಲ್ಲಿಟ್ಟ ಹೈಕೋರ್ಟ್‌

    ಬೇಲೆಕೇರಿ ಅದಿರು ನಾಪತ್ತೆ ಕೇಸ್‌- ಸೈಲ್‌ಗೆ ರಿಲೀಫ್‌, ಶಿಕ್ಷೆಯನ್ನು ಅಮಾನತಿನಲ್ಲಿಟ್ಟ ಹೈಕೋರ್ಟ್‌

    – ಗುರುವಾರ ಜೈಲಿನಿಂದ ಬಿಡುಗಡೆ ಸಾಧ್ಯತೆ

    ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ (Belekeri Port Case) ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್ (Congress MLA Satish Sail) ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ಸತೀಶ್‌ ಸೈಲ್‌ ಹಾಗೂ ಇತರೆ ಆರೋಪಿಗಳಿಗೆ ವಿಧಿಸಿರುವ ಶಿಕ್ಷೆಯನ್ನು ಹೈಕೋರ್ಟ್‌ (High Court) ಅಮಾನತ್ತಿನಲ್ಲಿಟ್ಟು ಆದೇಶ ಪ್ರಕಟಿಸಿದೆ.

    ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ದಂಡದ ಮೊತ್ತದಲ್ಲಿ 25% ರಷ್ಟು ಕೋರ್ಟ್ ನಲ್ಲಿ ಠೇವಣಿ ಇಡುವಂತೆ ಷರತ್ತು ವಿಧಿಸಿದೆ. ದಂಡದ ಮೊತ್ತವನ್ನು 6 ವಾರದಲ್ಲಿ ಠೇವಣಿ ಇಡುವಂತೆ ಅಪರಾಧಿಗಳಿಗೆ ಸೂಚಿಸಿದೆ. ಇದನ್ನೂ ಓದಿ: ಅಧಿಕಾರಿಗಳು ಜಡ್ಜ್‌ ಆಗಲು ಸಾಧ್ಯವಿಲ್ಲ – ಬುಲ್ಡೋಜರ್‌ ನ್ಯಾಯಕ್ಕೆ ಸುಪ್ರೀಂ ಎಚ್ಚರಿಕೆ

    ಜನಪ್ರತಿನಿಧಿಗಳ ಕೋರ್ಟ್‌ ನೀಡಿದ ಆದೇಶವನ್ನು ರದ್ದು ಪಡಿಸುವಂತೆ ಸತೀಶ್‌ ಸೈಲ್‌, ಉದ್ಯಮಿಗಳಾದ ಸ್ವಸ್ತಿಕ್‌ ನಾಗರಾಜ್‌, ಕೆವಿಎನ್‌ ಗೋವಿಂದರಾಜ್‌ ಮತ್ತು ಚೇತನ್‌ ಶಾ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಶಿಕ್ಷೆಯನ್ನು ಅಮಾನತಿನಲ್ಲಿಟ್ಟ ಹಿನ್ನೆಲೆಯಲ್ಲಿ ಗುರುವಾರ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

    6 ಪ್ರಕರಣದಲ್ಲಿ ದೋಷಿಯಾಗಿದ್ದ ಸತೀಶ್‌ ಸೈಲ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಮತ್ತು 44 ಕೋಟಿ ರೂ. ದಂಡ ವಿಧಿಸಿತ್ತು.

     

    ಏನಿದು ಪ್ರಕರಣ?
    ಅಂಕೋಲಾ ತಾಲೂಕಿನ ಬೇಲೆಕೇರಿ ವ್ಯಾಪ್ತಿಯಲ್ಲಿ 2009- 2010ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ 200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸುಮಾರು 11,312 ಮೆಟ್ರಿಕ್‌ ಟನ್‌ ಕಬ್ಬಿಣದ ಅದಿರನ್ನು ಜಪ್ತಿ ಮಾಡಿದ್ದರು.

    ಈ ಅದಿರನ್ನು ಬೇಲೆಕೇರಿ ಬಂದರಿನ ಅಧಿಕಾರಿ ಮಹೇಶ್‌ ಬಿಳಿಯ ಅವರ ಸುಪರ್ದಿಗೆ ನೀಡಿದ್ದರು. ಆದರೆ ಮಹೇಶ್‌ ಬಿಳಿಯ ಅವರು ಶಾಸಕ ಸತೀಶ್‌ ಸೈಲ್‌ ಹಾಗೂ ಇತರ ಆರೋಪಿಗಳು ಈ ಅದಿರು ಕಳವು ಮಾಡಲು ಒಳ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿತ್ತು. ಆರೋಪಿಗಳ ಪೈಕಿ ಕೆಲವರು ಸತೀಶ್‌ ಸೈಲ್‌ಗೆ ಕಡಿಮೆ ಮೊತ್ತಕ್ಕೆ ಜಪ್ತಿ ಮಾಡಿದ ಅದಿರನ್ನುಮಾರಾಟ ಮಾಡಿದ್ದರು. ಬೇಲೆಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದ ಆರು ಪ್ರಕರಣಗಳ ತನಿಖೆ ನಡೆಸಿದ್ದ ಸಿಬಿಐ 2013ರಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

    ಎಂಟು ತಿಂಗಳ ಅವಧಿಯಲ್ಲಿ ಸೈಲ್ ಮಾಲೀಕತ್ವದ ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಸುಮಾರು 7.23 ಲಕ್ಷ ಟನ್ ಮೆಟ್ರಿಕ್ ಅದಿರನ್ನು ಬೇಲೆಕೇರಿ ಮೂಲಕ ವಿದೇಶಕ್ಕೆ ರಫ್ತು ಮಾಡಿದ್ದನ್ನು ಸಿಬಿಐ ತನಿಖೆಯಲ್ಲಿ ಪತ್ತೆ ಹಚ್ಚಿತ್ತು. 2012ರಲ್ಲಿ ಸೈಲ್ ನಿವಾಸದ ಮೇಲೆ ದಾಳಿ ನಡೆಸಿದ್ದ ಸಿಬಿಐ 2013ರಲ್ಲಿ ಬಂಧಿಸಿತ್ತು. ಆಗ ಸತೀಶ್ ಸೈಲ್ ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲಲ್ಲಿ ಇದ್ದರು. ವಿಶೇಷ ಏನೆಂದರೆ ಆಗಲೂ ಕೂಡ ಸತೀಶ್ ಸೈಲ್ ಶಾಸಕರಾಗಿದ್ದರು.

  • ಕೊಲೆ ಆರೋಪಿ ಪವಿತ್ರಾಗೌಡಗೆ ಜೈಲೇ ಗತಿ – ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿಕೆ

    ಕೊಲೆ ಆರೋಪಿ ಪವಿತ್ರಾಗೌಡಗೆ ಜೈಲೇ ಗತಿ – ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿಕೆ

    – ಐವರು ಆರೋಪಿಗಳ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21 ಕ್ಕೆ ಹೈಕೋರ್ಟ್ ಮುಂದೂಡಿದೆ.

    ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಕೋರ್ಟ್ಗೆ ಆಗಮಿಸಿದ್ದ ಪವಿತ್ರಾಗೌಡ ತಾಯಿ, ಮಗಳಿಗೆ ಜಾಮೀನು ಸಿಗದ ಹಿನ್ನಲೆಯಲ್ಲಿ ಬೇಸರದಿಂದಲೇ ಹೊರನಡೆದರು.

    ಕೊಲೆ ಪ್ರಕರಣದಲ್ಲಿ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿಯೂ 21 ಕ್ಕೆ ವಿಚಾರಣೆಯಲ್ಲಿದೆ. ಸದ್ಯ ಮಧ್ಯಂತರ ಜಾಮೀನು ಪಡೆದು ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಎಸ್‌ಪಿಪಿ ಪ್ರಸನ್ನಕುಮಾರ್ ಮನವಿ ಮಾಡಿದರು. ಕೋರ್ಟ್ ನ.21 ರಂದು ಪವಿತ್ರಗೌಡ, ದರ್ಶನ್, ಅನುಕುಮಾರ್, ಲಕ್ಷ್ಮಣ್, ನಾಗರಾಜ್ ಜಾಮೀನು ಅರ್ಜಿ ವಿಚಾರಣೆಗೆ ನಿಗದಿಪಡಿಸಿದೆ.

  • ದರ್ಶನ್ ಪರ ವಕೀಲರಿಂದ ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ – ವರದಿಯಲ್ಲಿ ಏನಿದೆ?

    ದರ್ಶನ್ ಪರ ವಕೀಲರಿಂದ ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ – ವರದಿಯಲ್ಲಿ ಏನಿದೆ?

    ಬೆಂಗಳೂರು: ನಟ ದರ್ಶನ್‌ಗೆ (Actor Darshan) ಚಿಕಿತ್ಸೆ ಮುಂದುವರೆದಿದ್ದು, ಇಂದು (ನ.6) ದರ್ಶನ್ ಪರ ವಕೀಲರು ಒಂದು ವಾರದ ಮೆಡಿಕಲ್ ರಿಪೋರ್ಟ್‌ನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ.

    ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಹಿನ್ನೆಲೆ ಜೈಲಿನಲ್ಲಿದ್ದ ದರ್ಶನ್‌ಗೆ ವೈದ್ಯಕೀಯ ವಿಚಾರಕ್ಕೆ ಸಂಬಂಧಿಸಿದಂತೆ 6 ವಾರಗಳ ಕಾಲ ಹೈಕೋರ್ಟ್ ಮಧ್ಯಂತರ ಜಾಮೀನನ್ನು ನೀಡಿದೆ. ಇದೀಗ ಬೆನ್ನು ನೋವಿಗಾಗಿ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ (BGS Hospital) ನಟ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ಒಂದು ವಾರದಲ್ಲಿ ದರ್ಶನ್‌ಗೆ ನೀಡಲಾಗುವ ಚಿಕಿತ್ಸೆಯ ವರದಿಯನ್ನು ದರ್ಶನ್ ಪರ ವಕೀಲರು ಹೈಕೋರ್ಟ್‌ಗೆ (High Court) ಸಲ್ಲಿಸಿದ್ದಾರೆ.ಇದನ್ನೂ ಓದಿ: ಶಿರೂರು ಗ್ರಾಮದ ವಸತಿ ಶಾಲೆ, 1,200 ಆಶ್ರಯ ಮನೆಗಳೆಲ್ಲವೂ ವಕ್ಫ್‌ ಆಸ್ತಿ – ಇಸ್ಲಾಮಿಯಾ ತಂಜೀಮ್ ಸಮಿತಿ ಪಟ್ಟು

    ಇನ್ನೂ ಬಿಜಿಎಸ್ ವೈದ್ಯರು ಆಪರೇಷನ್‌ಗೆ ಸಲಹೆ ನೀಡಿದ್ದರೂ ಅದಕ್ಕೆ ದರ್ಶನ್ ನಿರಾಕರಿಸಿದ್ದಾರೆ. ಈ ಹಿಂದೆ ಫ್ಯಾಕ್ಚರ್ ಆಗಿರೋದು ಒಂದು ಸಮಸ್ಯೆ ಇದೆ. ಆಪರೇಷನ್ ಮಾಡಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಆದರೆ ದರ್ಶನ್ ಬೇಡ ಎಂದಿದ್ದು, ಕನ್ಸರ್ವೇಟಿವ್ ಟ್ರೀಟ್‌ಮೆಂಟ್ ಶುರು ಮಾಡಲಾಗಿದೆ.

    10 ರಿಂದ 15 ದಿನಗಳ ಕಾಲ ಕನ್ಸರ್ವೇಟಿವ್ ಚಿಕಿತ್ಸೆ ನೀಡಲಾಗುತ್ತದೆ. ಫಿಜಿಯೋಥೆರಪಿ, ವ್ಯಾಯಾಮ, ಔಷಧಿ, ಎಕ್ಸ್ಸೈಸ್ ಮೂಲಕ ಗುಣಮುಖ ಮಾಡುವ ಪ್ರಯತ್ನ ನಡೆಯುತ್ತದೆ. ಕನ್ಸರ್ವೇಟಿವ್ ಚಿಕಿತ್ಸೆಯಲ್ಲಿ ಗುಣಮುಖ ಆಗದಿದ್ದರೆ ಆಪರೇಷನ್ ಮಾಡಲು ನಿರ್ಧರಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಹೈಕೋರ್ಟ್‌ಗೆ ಸಲ್ಲಿಸಿರುವ ವರದಿಯಲ್ಲಿ ಏನಿದೆ?
    ದರ್ಶನ್‌ಗೆ ಚಿಕಿತ್ಸೆ ನೀಡುವ ಬಗ್ಗೆಗಿನ ವರದಿಯನ್ನು ದರ್ಶನ್ ಪರ ವಕೀಲರು ಹೈಕೋರ್ಟ್ ಸಲ್ಲಿಸಿದ್ದಾರೆ. ಜೈಲಿನಿಂದ ಬಿಡುಗಡೆಯಾಗಿ ಮೊದಲ ವಾರದ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿತ್ತು. ಅದರಂತೆ ಇಂದು ದರ್ಶನ್ ಪರ ವಕೀಲರು ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಸಿದ್ದಾರೆ.

    ಸದ್ಯ ದರ್ಶನ್‌ಗೆ ಫಿಜಿಯೋಥೆರಪಿ ಚಿಕಿತ್ಸೆ ನೀಡಲಾಗುತ್ತಿದೆ. ಫಿಸಿಯೋಥೆರಫಿಯೇ ಅಂತಿಮ ಅಲ್ಲ ಎನ್ನಿಸುತ್ತಿದೆ. ಫಿಸಿಯೋಥೆರಫಿಯಲ್ಲಿ ಗುಣಮುಖ ಆಗದಿದ್ದಲ್ಲಿ ಸರ್ಜರಿ ಮಾಡಲಾಗುವುದು. ರೋಗಿಗೆ ಶಸ್ತ್ರಚಿಕಿತ್ಸೆ ವಿಧಾನಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಇನ್ನೂ ಶಸ್ತ್ರಚಿಕಿತ್ಸೆಗೆ ದರ್ಶನ್ ಒಪ್ಪಿಗೆ ಸೂಚಿಸಿಲ್ಲ. ದರ್ಶನ್ ಒಪ್ಪಿಕೊಂಡಲ್ಲಿ ಶಸ್ತ್ರಚಿಕಿತ್ಸೆಗೆ ನಿರ್ಧರಿಸಲಾಗುವುದು ಎಂಬ ವಿಚಾರ ವರದಿಯಲ್ಲಿದೆ ಎನ್ನಲಾಗುತ್ತಿದೆ.

    ಬೆನ್ನು ನೋವಿನ ಕಾರಣ ನಟ ದರ್ಶನ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ದಾರೆ. ಈವರೆಗಿನ ಚಿಕಿತ್ಸೆ ಮತ್ತು ಮುಂದಿನ ಪ್ರಕ್ರಿಯೆಗಳ ಬಗ್ಗೆ ದರ್ಶನ್ ಪರ ವಕೀಲರು ಇಂದು ಹೈಕೋರ್ಟ್ಗೆ ವೈದ್ಯಕೀಯ ವರದಿ ಸಲ್ಲಿಸಿದ್ದಾರೆ. ಇದರ ಪ್ರಕಾರ, ದರ್ಶನ್‌ಗೆ ಸರ್ಜರಿ ಮಾಡುವ ಬಗ್ಗೆ ವೈದ್ಯರು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಸದ್ಯಕ್ಕೆ ಫಿಸಿಯೋಥೆರಪಿ ಮಾಡಲಾಗ್ತಿದೆ. ಇದರಿಂದ ಗುಣಮುಖ ಆಗದಿದ್ರೆ ಸರ್ಜರಿ ಬಗ್ಗೆ ನಿರ್ಧಾರ ಮಾಡ್ತೀವಿ. ಒಂದೊಮ್ಮೆ ದರ್ಶನ್ ಒಪ್ಪಿಕೊಂಡ್ರೆ ಸರ್ಜರಿ ಮಾಡ್ತೀವಿ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.ಇದನ್ನೂ ಓದಿ: ಚಲಾಯಿಸುತ್ತಿರುವಾಗಲೇ ಹೃದಯಾಘಾತ – ಬಿಎಂಟಿಸಿ ಚಾಲಕ ಸಾವು

  • ನ್ಯಾಯಾಲಯದ ಮೇಲೆ ನಂಬಿಕೆಯಿದೆ, ದರ್ಶನ್ ಆರೋಗ್ಯ ಚನ್ನಾಗಿ ಆಗಲಿ: ರೇಣುಕಾಸ್ವಾಮಿ ತಂದೆ ಭಾವುಕ

    ನ್ಯಾಯಾಲಯದ ಮೇಲೆ ನಂಬಿಕೆಯಿದೆ, ದರ್ಶನ್ ಆರೋಗ್ಯ ಚನ್ನಾಗಿ ಆಗಲಿ: ರೇಣುಕಾಸ್ವಾಮಿ ತಂದೆ ಭಾವುಕ

    ಚಿತ್ರದುರ್ಗ: ಅನಾರೋಗ್ಯ ಕಾರಣಕ್ಕೆ ದರ್ಶನ್‌ಗೆ (Darshan) ಮಧ್ಯಂತರ ಜಾಮೀನು ಮಂಜೂರಾಗಿದೆ. ನಟ ದರ್ಶನ್ ಅವರ ಆರೋಗ್ಯ ಚನ್ನಾಗಿ ಆಗಲಿ. ನ್ಯಾಯಾಲಯದ ಬಗ್ಗೆ ನಮಗೆ ಅಪಾರ ಗೌರವ ಇದೆ ಎಂದು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಹಾಗೂ ರೇಣಕಾಸ್ವಾಮಿ ಚಿಕ್ಕಪ್ಪ ಷಡಕ್ಷರಿ ಮಾತನಾಡಿದ್ದಾರೆ.

    ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧನಕ್ಕೆ ಒಳಗಾದ ನಟ ದರ್ಶನ್‌ಗೆ ಹೈಕೋರ್ಟ್‌ (High Court) 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಚಿತ್ರದುರ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: Darshan Case File | ಜೂನ್‌ 8 ರಿಂದ ಅ.30ರ ವರೆಗೆ ಏನೆಲ್ಲಾ ಆಯ್ತು?

    ನ್ಯಾಯಾಲಯದ ಬಗ್ಗೆ ನಮಗೆ ಅಪಾರ ಗೌರವ, ಭರವಸೆ ಇದೆ. ಅನಾರೋಗ್ಯ ಕಾರಣಕ್ಕೆ ಮಧ್ಯಂತರ ಜಾಮೀನು ಮಂಜೂರಾಗಿದೆ. ನಟ ದರ್ಶನ್ ಅವರ ಆರೋಗ್ಯ ಚನ್ನಾಗಿ ಆಗಲಿ, ಚೇತರಿಸಿಕೊಳ್ಳಲಿ. ಎಸ್‌ಪಿಪಿ ಪ್ರಸನ್ನ ಕುಮಾರ್ ಉತ್ತಮವಾಗಿ ವಾದ ಮಂಡಿಸಿದ್ದಾರೆ. ಪಾಸ್‌ಪೋರ್ಟ್ ವಶಕ್ಕೆ ಪಡೆದು ಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗುವ ನಂಬಿಕೆ ನಮಗಿದೆ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: ದರ್ಶನ್‌ಗೆ ಜಾಮೀನು – ಹೈಕೋರ್ಟ್‌ ವಿಧಿಸಿದ ಆ 8 ಷರತ್ತುಗಳೇನು?

    ನಮಗೆ ಮೊದಲಿನಿಂದಲೂ ಮನಸ್ಸಿಗೆ ನೋವಾಗಿದೆ. ಜಾಮೀನು ಮಂಜೂರು ಆಗಿರುವುದು ಕಾನೂನು ವ್ಯವಸ್ಥೆಯಲ್ಲಿ. ಕೋರ್ಟ್‌ ತೀರ್ಪಿನ ಬಗ್ಗೆ ಮಾತನಾಡೋದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: 5 ತಿಂಗಳ ಬಳಿಕ ದರ್ಶನ್ ರಿಲೀಸ್ – ಹೈಕೋರ್ಟ್‌ನಿಂದ 6 ವಾರಗಳ ಜಾಮೀನು ಮಂಜೂರು

  • ದರ್ಶನ್‌ಗೆ ಜಾಮೀನು – ಹೈಕೋರ್ಟ್‌ ವಿಧಿಸಿದ ಆ 8 ಷರತ್ತುಗಳೇನು?

    ದರ್ಶನ್‌ಗೆ ಜಾಮೀನು – ಹೈಕೋರ್ಟ್‌ ವಿಧಿಸಿದ ಆ 8 ಷರತ್ತುಗಳೇನು?

    ಬೆಂಗಳೂರು: ಬರೋಬ್ಬರಿ 140 ದಿನಗಳ ಬಳಿಕ ಆರೋಪಿ ನಟ ದರ್ಶನ್‌ಗೆ (Darshan) ಹೈಕೋರ್ಟ್‌ 6 ವಾರಗಳ ಕಾಲ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.‌ ಎಲ್ಲವೂ ಅಂದುಕೊಂಡಂತೆ ನಡೆದರೆ, ದರ್ಶನ್‌ ಇಂದೇ (ಬುಧವಾರ) ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಈ ನಡುವೆ ದರ್ಶನ್‌ಗೆ ಕೋರ್ಟ್‌ (Karnataka Highcourt) ವಿಧಿಸಿರುವ‌ ಷರತ್ತುಗಳ ಮಾಹಿತಿ ʻಪಬ್ಲಿಕ್‌ ಟಿವಿʼಗೆ ಲಭ್ಯವಾಗಿದೆ.

    ಕೋರ್ಟ್‌ ವಿಧಿಸಿರುವ ಷರತ್ತುಗಳೇನು?
    1. ಪಾಸ್ ಪೋರ್ಟ್ ಸರಂಡರ್
    2. 2 ಲಕ್ಷ ರೂಪಾಯಿ ಬಾಂಡ್
    3. ಇಬ್ಬರ ಶ್ಯೂರಿಟಿ
    4. ಸಾಕ್ಷಿ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷ ಬೆದರಿಕೆ ಹಾಕಬಾರದು
    5. ಒಂದು ವಾರದಲ್ಲಿ ವೈದ್ಯಕೀಯ ಶಿಫಾರಸು ವರದಿ ಸಲ್ಲಿಸಬೇಕು
    6. ಸಾಕ್ಷಿ ನಾಶಕ್ಕೆ ಪ್ರಯತ್ನ ಪಡಬಾರದು
    7. ಸಾಕ್ಷಿಗಳ ಸಂಪರ್ಕ ಮಾಡಬಾರದು
    8. ಜಾಮೀನಿನ ದುರುಪಯೋಗ ಮಾಡಿಕೊಳ್ಳಬಾರದು

    ಪಾಸ್‌ಪೋರ್ಟ್‌ ಸರೆಂಡರ್‌ ಮಾಡುವಂತೆ ಹೇಳಿದ್ದು ಏಕೆ?
    ದರ್ಶನ್‌ಗೆ‌ 6 ವಾರಗಳ ಕಾಲ ಮೆಡಿಕಲ್‌ ಬೇಲ್‌ ಮಂಜೂರು ಮಾಡಿರುವ ಕೋರ್ಟ್‌ ಪಾಸ್‌ಪೋರ್ಟ್‌ (Passport) ಸರೆಂಡರ್‌ ಮಾಡುವಂತೆ ಸೂಚಿಸಿದೆ. ಚಿಕಿತ್ಸೆಯನ್ನು ಎಲ್ಲಿ ಪಡೆಯಬೇಕು ಎಂದು ಕೋರ್ಟ್‌ ನಿರ್ದಿಷ್ಟವಾಗಿ ಸೂಚಿಸಿಲ್ಲ. ಜಾಮೀನು ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ವಿದೇಶದಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆ ಇರುವ ಕಾರಣ ಒಂದು ವೇಳೆ ಜಾಮೀನು ಮಂಜೂರು ಮಾಡಿದರೂ ಪಾಸ್‌ಪೋರ್ಟ್‌ ನ್ಯಾಯಾಲಯಕ್ಕೆ ಒಪ್ಪಿಸಬೇಕೆಂದು ಎಸ್‌ಪಿಪಿ ಪ್ರಸನ್ನ ಕುಮಾರ್‌ ಮನವಿ ಮಾಡಿದ್ದರು. ಈ ಮನವಿಗೆ ಕೋರ್ಟ್‌ ಸ್ಪಂದಿಸಿ ಪಾಸ್‌ಪೋರ್ಟ್‌ ಅನ್ನು ತನಗೆ ಒಪ್ಪಿಸುವಂತೆ ಷರತ್ತು ವಿಧಿಸಿದೆ. ಅಷ್ಟೇ ಅಲ್ಲದೇ ಆಸ್ಪತೆಗೆ ದಾಖಲಾಗುತ್ತಿದ್ದಂತೆ 1 ವಾರದೊಳಗೆ ಪ್ರಾಥಮಿಕ ವೈದ್ಯಕೀಯ ವರದಿ ಸಲ್ಲಿಸಬೇಕು ಎಂದು ಸೂಚಿಸಿದೆ. ಇದನ್ನೂ ಓದಿ: ದರ್ಶನ್‌ಗೆ ಜಾಮೀನು ಸಿಗುತ್ತಿದ್ದಂತೆ ಕಾಮಾಕ್ಯ ದೇವಿಗೆ ಧನ್ಯವಾದ ತಿಳಿಸಿದ ವಿಜಯಲಕ್ಷ್ಮಿ

    ದರ್ಶನ್‌ ಪರ ವಕೀಲರು ಹೇಳಿದ್ದೇನು?
    ದರ್ಶನ್‌ ಜಾಮೀನು ವಿಚಾರ ಕುರಿತು ಮಾತನಾಡಿರುವ ದರ್ಶನ್ ಪರ ವಕೀಲ ಸುನೀಲ್, ದರ್ಶನ್‌ ಅವರಿಗೆ ಬೆನ್ನುಮೂಳೆ ಶಸ್ತ್ರಚಿಕಿತ್ಸೆ ಆಗಬೇಕು ಅನ್ನೋ ವಾದವನ್ನು ಸಿ.ವಿ ನಾಗೇಶ್‌ ಕೋರ್ಟ್‌ ಮುಂದಿಟ್ಟರು. ಏಕೆಂದರೆ L5 ಮತ್ತು S1 ನರದಲ್ಲಿ ದರ್ಶನ್‌ಗೆ ಸಮಸ್ಯೆ ಇದೆ. 2022-23ರಿಂದಲೂ ಈ ಸಮಸ್ಯೆ ಇತ್ತು. ಆದ್ದರಿಂದ ಅದೇ ವಾದದಲ್ಲಿ ನಾವು ಮುಂದುವರಿದ್ವಿ. ಅದಕ್ಕೆ ಕೋರ್ಟ್‌ ಬಳ್ಳಾರಿ ಜೈಲರ್‌ ಅವರಿಂದ ವೈದ್ಯಕೀಯ ವರದಿಗಳನ್ನ ಕೇಳಿತ್ತು. ಸೀಲ್ಡ್‌ ಕವರ್‌ನಲ್ಲಿ ವೈದ್ಯಕೀಯ ವರದಿ ಸ್ವೀಕರಿಸಿದ ನಂತರ ಇಂದು 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆಸ್ಪತ್ರೆಗೆ ದಾಖಲದ ಮೊದಲ ವಾರದ ಪ್ರಾಥಮಿಕ ವೈದ್ಯಕೀಯ ವರದಿಯನ್ನ ಸಲ್ಲಿಕೆ ಮಾಡುವಂತೆ ಸೂಚಿಸಿದೆ. ನಾವೂ ಒಪ್ಪಿದ್ದೇವೆ, ಜೊತೆಗೆ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಸೂಚಿಸಿದೆ. ಕೋರ್ಟ್‌ನ ಷರತ್ತುಗಳನ್ನ ಫುಲ್‌ಫಿಲ್‌ ಮಾಡುತ್ತೇವೆ ಎಂದಿದ್ದಾರೆ.

    ಹೈಕೋರ್ಟ್‌ ದೃಢೀಕೃತ ಆದೇಶ ಕೊಟ್ಟ ನಂತರ ಸೆಷನ್ಸ್‌ ನ್ಯಾಯಾಲಯದಲ್ಲಿ ಅಡ್ವಾನ್ಸ್‌ಮೆಂಟ್‌ ಅಪ್ಲಿಕೇಷನ್‌ ಹಾಕಬೇಕು. ಸೆಷನ್‌ ಕೋರ್ಟ್‌ ಅರ್ಜಿಯನ್ನು ಸ್ವೀಕಾರ ಮಾಡಬೇಕು. ಆ ಬಳಿಕ ಶೂರಿಟಿ ದಾಖಲಾತಿ ನೀಡಿ, ಪಾಸ್‌ಪೋರ್ಟ್‌ ಸರೆಂಡರ್‌ ಮಾಡಿದ ನಂತರವೇ ದರ್ಶನ್‌ ರಿಲೀಸ್‌ ಆಗಲಿದ್ದಾರೆ. ಇದನ್ನೂ ಓದಿ:  ದರ್ಶನ್‌ಗೆ ಜಾಮೀನು – ಪಾಸ್‌ಪೋರ್ಟ್‌ ಒಪ್ಪಿಸುವಂತೆ ಕೋರ್ಟ್‌ ಸೂಚಿಸಿದ್ದೇಕೆ?

    ಮೈಸೂರು ಅಪೋಲೋ ಆಸ್ಪತ್ರೆಯಲ್ಲಿ ದರ್ಶನ್‌ ರೆಗ್ಯುಲರ್‌ ಟ್ರೀಟ್ಮೆಂಟ್‌ ಪಡೆಯುತ್ತಿದ್ದರು. ಅವರು ರಿಲೀಸ್‌ ಆದ ಬಳಿಕ ಕುಟುಂಬದೊಂದಿಗೆ ಚರ್ಚೆ ಮಾಡಿ ಅವರಿಷ್ಟದ ಆಸ್ಪತ್ರೆಗೆ ದಾಖಲು ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

  • ಇಂದೇ ಬಳ್ಳಾರಿ ಜೈಲಿನಿಂದ ದರ್ಶನ್‌ ಬಿಡುಗಡೆ ಸಾಧ್ಯತೆ

    ಇಂದೇ ಬಳ್ಳಾರಿ ಜೈಲಿನಿಂದ ದರ್ಶನ್‌ ಬಿಡುಗಡೆ ಸಾಧ್ಯತೆ

    ಬೆಂಗಳೂರು: ಹೈಕೋರ್ಟ್‌ 6 ವಾರಗಳ ಮಧ್ಯಂತರ ಜಾಮೀನು (Interim Bail) ಮಂಜೂರು ಮಾಡಿದ ಬೆನ್ನಲ್ಲೇ ಇಂದೇ ದರ್ಶನ್‌ (Darshan) ಬಳ್ಳಾರಿ ಜೈಲಿನಿಂದ (Ballari Jail) ಬಿಡುಗಡೆಯಾಗುವ ಸಾಧ್ಯತೆಯಿದೆ.

    ಜಾಮೀನು ಆದೇಶ ಸಿಕ್ಕಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ದರ್ಶನ್‌ ಪರ ವಕೀಲರು, ಕೋರ್ಟ್‌ ಆರೋಗ್ಯ ಕಾರಣದಿಂದ 6 ವಾರಗಳ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಎಲ್ಲಾ ಪ್ರಕ್ರಿಯೆಗಳನ್ನು ಮುಗಿದರೆ ಇಂದು ಸಂಜೆಯೇ ದರ್ಶನ್‌ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ದರ್ಶನ್‌ಗೆ ಜಾಮೀನು – ಪಾಸ್‌ಪೋರ್ಟ್‌ ಒಪ್ಪಿಸುವಂತೆ ಕೋರ್ಟ್‌ ಸೂಚಿಸಿದ್ದೇಕೆ?

    ಕೋರ್ಟ್‌ ನಿರ್ದಿಷ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದು ಹೇಳಿಲ್ಲ. ದರ್ಶನ್‌ ಅವರು ಈ ಹಿಂದೆ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಹೀಗಾಗಿ ಅಪೋಲೋ ಆಸ್ಪತ್ರೆಗೆ ತೆರಳುತ್ತಾರೋ ಅಥವಾ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೋ ಎನ್ನುವುದು ಅವರ ನಿರ್ಧಾರಕ್ಕೆ ಬಿಡಲಾಗಿದೆ ಎಂದು ತಿಳಿಸಿದರು.

    ದರ್ಶನ್‌ ಇಂದು ಬಿಡುಗಡೆಯಾಗದೇ ಇದ್ದರೆ ಸೋಮವಾರ ಬಿಡುಗಡೆಯಾಗಬೇಕಾಗುತ್ತದೆ. ನಾಳೆಯಿಂದ ದೀಪಾವಳಿ ರಜೆ ಇರುವ ಕಾರಣ ಎಲ್ಲಾ ಪ್ರಕ್ರಿಯೆಗಳನ್ನು ಇಂದೇ ಮುಗಿಸಲು ವಕೀಲರ ತಂಡ ಈಗ ಕೆಲಸ ಮಾಡುತ್ತಿದೆ.

     

    ಮೈಸೂರಿನಲ್ಲಿ ಶೂಟಿಂಗ್‌ ತೆರಳಿದ್ದ ದರ್ಶನ್‌ ಅವರನ್ನು ಪೊಲೀಸರು ಜೂನ್ 11 ರಂದು ಬೆಂಗಳೂರಿಗೆ ಕರೆ ತಂದು ಬಂಧಿಸಿದ್ದರು. 11 ದಿನಗಳ ಕಾಲ ಪೊಲೀಸರ ಕಸ್ಟಡಿಯಲ್ಲೇ ಇದ್ದ ದರ್ಶನ್ ಬಳಿಕ ವಿಚಾರಣಾ ಕೈದಿಯಾಗಿ ಜೈಲು ಸೇರಿದ್ದರು.

    ಜೂನ್ 22 ಕ್ಕೆ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿತ್ತು. ಪರಪ್ಪನ ಅಗ್ರಹಾರ ಜೈಲಲ್ಲಿ ಪಾರ್ಟಿ ಮಾಡಿದ ಫೋಟೋ ವೈರಲ್‌ ಆದ ನಂತರ ಕೋರ್ಟ್‌ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿಸಿತ್ತು. 69 ದಿನ ಪರಪ್ಪನ ಅಗ್ರಹಾರದಲ್ಲಿ ಕಳೆದ ದರ್ಶನ್ ಆಗಸ್ಟ್ 29 ಕ್ಕೆ ಬಳ್ಳಾರಿ ಜೈಲಿಗೆ ಆಗಮಿಸಿದ್ದರು. 5 ತಿಂಗಳಿನಿಂದ ಕಂಬಿ ಹಿಂದೆ ಕಾಲ ಕಳೆದಿದ್ದ ದರ್ಶನ್‌ಗೆ ಈಗ ಬಿಡುಗಡೆಯಾಗುವ ಭಾಗ್ಯ ಸಿಕ್ಕಿದೆ.

     

  • 5 ತಿಂಗಳ ಬಳಿಕ ದರ್ಶನ್ ರಿಲೀಸ್ – ಹೈಕೋರ್ಟ್‌ನಿಂದ 6 ವಾರಗಳ ಜಾಮೀನು ಮಂಜೂರು

    5 ತಿಂಗಳ ಬಳಿಕ ದರ್ಶನ್ ರಿಲೀಸ್ – ಹೈಕೋರ್ಟ್‌ನಿಂದ 6 ವಾರಗಳ ಜಾಮೀನು ಮಂಜೂರು

    ಬೆಂಗಳೂರು: ದೀಪಾವಳಿ (Deepavli) ಹಬ್ಬಕ್ಕೆ ದರ್ಶನ್‌ಗೆ ಬಿಗ್‌ ಗಿಫ್ಟ್‌ ಸಿಕ್ಕಿದ್ದು 140 ದಿನಗಳ ಬಳಿಕ ದರ್ಶನ್‌ (Darshan) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧನಕ್ಕೆ ಒಳಗಾದ ನಟ ದರ್ಶನ್‌ಗೆ ಹೈಕೋರ್ಟ್‌ (High Court) 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

    ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್‌ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

    ಪ್ರತಿ ವಾರ ವೈದ್ಯಕೀಯ ವರದಿಯನ್ನು ಸಲ್ಲಿಕೆ ಮಾಡಬೇಕು. ಪಾಸ್‌ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕೆಂದು ಕೋರ್ಟ್ ಷರತ್ತು ವಿಧಿಸಿದೆ. ದರ್ಶನ್ ಪರ ವಕೀಲರು ಮೂರು ತಿಂಗಳ ಜಾಮೀನು ಕೋರಿದ್ದರು. ಆದರೆ ಕೋರ್ಟ್ 6 ವಾರಗಳ ಜಾಮೀನು ಮಾತ್ರ ಮಂಜೂರು ಮಾಡಿ ದರ್ಶನ್‌ ಅವರಿಗೆ ತಾತ್ಕಾಲಿಕ ರಿಲೀಫ್‌ ನೀಡಿದೆ.  ನ್ಯಾಯಾಲಯದ ಎಲ್ಲಾ ಪ್ರಕ್ರಿಯೆ ಇಂದೇ ಪೂರ್ಣಗೊಂಡರೆ ಇಂದು ಸಂಜೆ ಅಥವಾ ರಾತ್ರಿಯೇ ದರ್ಶನ್‌ ಅವರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

    ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲವಾದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. ಹೀಗಾಗಿ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದ್ದರು. ಈ ವಾದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್‌ ಪ್ರಸನ್ನ ಕುಮಾರ್ ತೀವ್ರ ಆಕ್ಷೇಪಿಸಿದ್ದರು.

    ಮೈಸೂರಿನಲ್ಲಿ ಶೂಟಿಂಗ್‌ ತೆರಳಿದ್ದ ದರ್ಶನ್‌ ಅವರನ್ನು ಪೊಲೀಸರು ಜೂನ್ 11 ರಂದು ಬೆಂಗಳೂರಿಗೆ ಕರೆ ತಂದು ಬಂಧಿಸಿದ್ದರು. 11 ದಿನಗಳ ಕಾಲ ಪೊಲೀಸರ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಿದ್ದ ದರ್ಶನ್ ಬಳಿಕ ವಿಚಾರಣಾ ಕೈದಿಯಾಗಿ ಜೈಲು ಸೇರಿದ್ದರು.

    ಜೂನ್ 22ಕ್ಕೆ ನ್ಯಾಯಾಂಗ ಬಂಧನ ಜಾರಿಯಾಗಿತ್ತು.  ಪರಪ್ಪನ ಅಗ್ರಹಾರ ಜೈಲಲ್ಲಿ ಪಾರ್ಟಿ ಮಾಡಿದ ಫೋಟೋ ವೈರಲ್‌ ಆದ ನಂತರ ಕೋರ್ಟ್‌ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿಸಿತ್ತು. 69 ದಿನ ಪರಪ್ಪನ ಅಗ್ರಹಾರದಲ್ಲಿ ಕಳೆದ ದರ್ಶನ್ ಆಗಸ್ಟ್ 29 ಕ್ಕೆ ಬಳ್ಳಾರಿ ಜೈಲಿಗೆ ಆಗಮಿಸಿದ್ದರು. 5 ತಿಂಗಳಿನಿಂದ ಕಂಬಿ ಹಿಂದೆ ಕಾಲ ಕಳೆದಿದ್ದ ದರ್ಶನ್‌ಗೆ ಈಗ ಬಿಡುಗಡೆಯಾಗುವ ಭಾಗ್ಯ ಸಿಕ್ಕಿದೆ.

    ವಾದ-ಪ್ರತಿವಾದ ಏನಿತ್ತು?
    ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ದರ್ಶನ್ ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದನ್ನು ಹೀಗೆ ಬಿಟ್ಟರೆ ಪರಿಸ್ಥಿತಿ ಗಂಭೀರವಾಗಲಿದೆ. ದರ್ಶನ್ ಸಮಸ್ಯೆ ಅವರಿಗೆ ಮಾತ್ರ ಗೊತ್ತು, ನಡಿಯೋಕೆ ಆಗಲ್ಲ.. ಕೂರೋದಿಕ್ಕೆ ಆಗಲ್ಲ. ಅವರಿಗೆ ಸಾಂಪ್ರದಾಯಿಕ/ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನ್ಯಾಯಾಧೀಶರಿಗೆ ಮನವರಿಕೆ ಮಾಡಿದ್ದರು.

    ಮೈಸೂರಿನ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಆಗಲು ಬಯಸಿದ್ದಾರೆ. ದರ್ಶನ್ ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡ. ಮೈಸೂರಲ್ಲಿ ಚಿಕಿತ್ಸೆ ಪಡೆಯುವುದರಿಂದ ಪ್ರಾಸಿಕ್ಯೂಷನ್ ಸಾಕ್ಷಿಗೂ ಸಮಸ್ಯೆ ಆಗಲ್ಲ. ಕೋರ್ಟ್ ಷರತ್ತು ವಿಧಿಸಿ, 3 ತಿಂಗಳು ಮಧ್ಯಂತರ ಜಾಮೀನು ಕೊಡಬೇಕು ಎಂದು ದರ್ಶನ್ ಪರ ವಕೀಲರು ಕೇಳಿಕೊಂಡಿದ್ದರು.

    ಎಸ್‌ಪಿಪಿ ಪ್ರಸನ್ನಕುಮಾರ್ ಪ್ರತಿವಾದ ಮಂಡಿಸಿ, ಮೆಡಿಕಲ್ ಬೋರ್ಡ್‌ನಲ್ಲಿ ಪರೀಕ್ಷೆ ಮಾಡಿಸೋಣ. ವಿಕ್ಟೋರಿಯಾ/ಬೌರಿಂಗ್‌ನಲ್ಲಿ ಪರೀಕ್ಷೆ ಮಾಡಿಸಬಹುದು. ಮಂಡಳಿ ವರದಿ ಆಧರಿಸಿ ನಿರ್ಣಯ ತೆಗೆದುಕೊಳ್ಳಬೇಕು. ಖಾಸಗಿ ಆಸ್ಪತ್ರೆ ಬದಲು ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಆಗಬೇಕು ಎಂದರು.

    ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಆರೋಗ್ಯದ ವಿಚಾರವಾಗಿ ನಿರ್ಲಕ್ಷ್ಯ ಸಲ್ಲ. ಆರೋಗ್ಯ ಎಲ್ಲರ ಹಕ್ಕು ಎಂದು ಅಭಿಪ್ರಾಯಪಟ್ಟು ಬುಧವಾರಕ್ಕೆ ಆದೇಶ ಕಾಯ್ದಿರಿಸಿದ್ದರು.

  • ಇಂದು ಬೆಳಗ್ಗೆ ದರ್ಶನ್‌ ಜಾಮೀನು ಭವಿಷ್ಯ ಪ್ರಕಟ

    ಇಂದು ಬೆಳಗ್ಗೆ ದರ್ಶನ್‌ ಜಾಮೀನು ಭವಿಷ್ಯ ಪ್ರಕಟ

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿ ದರ್ಶನ್ (Darshan) ಅವರ ಮಧ್ಯಂತರ ಜಾಮೀನು (Interim Bail Plea ) ಭವಿಷ್ಯ ಇಂದು ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ.

    ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದಾರೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ಸೆಷನ್ಸ್ ಕೋರ್ಟ್‌ ಮೊರೆ ಹೋಗಿದ್ದರು. ಆದರೆ ಅಲ್ಲಿ ಜಾಮೀನು ತಿರಸ್ಕೃತಗೊಂಡ ಪರಿಣಾಮ ಹೈಕೋರ್ಟ್ (High Court) ಮೆಟ್ಟಿಲೇರಿದ್ದರು.

    ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲವಾದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. ಹೀಗಾಗಿ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದರು. ಈ ವಾದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್‌ ಪ್ರಸನ್ನ ಕುಮಾರ್ ತೀವ್ರ ಆಕ್ಷೇಪಿಸಿದರು.  ಇದನ್ನೂ ಓದಿ: ಬಿಜೆಪಿಯಿಂದ 8 ಶಾಸಕರು ಕಾಂಗ್ರೆಸ್‌ ಸೇರ್ತಾರೆ: ಎಸ್‌.ಟಿ.ಸೋಮಶೇಖರ್‌ ಹೇಳಿಕೆಗೆ ಶಿವರಾಮ್‌ ಹೆಬ್ಬಾರ್‌ ಸಹಮತ

    ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ವಾದ-ಪ್ರತಿವಾದವನ್ನು ಆಲಿಸಿ ಇಂದು ಆದೇಶ ಪ್ರಕಟಿಸಲಿದ್ದಾರೆ.

     

    ವಾದ-ಪ್ರತಿವಾದ ಏನಿತ್ತು?
    ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ದರ್ಶನ್ ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದನ್ನು ಹೀಗೆ ಬಿಟ್ಟರೆ ಪರಿಸ್ಥಿತಿ ಗಂಭೀರವಾಗಲಿದೆ. ದರ್ಶನ್ ಸಮಸ್ಯೆ ಅವರಿಗೆ ಮಾತ್ರ ಗೊತ್ತು, ನಡಿಯೋಕೆ ಆಗಲ್ಲ.. ಕೂರೋದಿಕ್ಕೆ ಆಗಲ್ಲ. ಅವರಿಗೆ ಸಾಂಪ್ರದಾಯಿಕ/ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನ್ಯಾಯಾಧೀಶರಿಗೆ ಮನವರಿಕೆ ಮಾಡಿದ್ದರು.

    ಮೈಸೂರಿನ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಆಗಲು ಬಯಸಿದ್ದಾರೆ. ದರ್ಶನ್ ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡ. ಮೈಸೂರಲ್ಲಿ ಚಿಕಿತ್ಸೆ ಪಡೆಯುವುದರಿಂದ ಪ್ರಾಸಿಕ್ಯೂಷನ್ ಸಾಕ್ಷಿಗೂ ಸಮಸ್ಯೆ ಆಗಲ್ಲ. ಕೋರ್ಟ್ ಷರತ್ತು ವಿಧಿಸಿ, 3 ತಿಂಗಳು ಮಧ್ಯಂತರ ಜಾಮೀನು ಕೊಡಬೇಕು ಎಂದು ದರ್ಶನ್ ಪರ ವಕೀಲರು ಮನವಿ ಮಾಡಿದರು.

     

    ಎಸ್‌ಪಿಪಿ ಪ್ರಸನ್ನಕುಮಾರ್ ಪ್ರತಿವಾದ ಮಂಡಿಸಿ, ಮೆಡಿಕಲ್ ಬೋರ್ಡ್‌ನಲ್ಲಿ ಪರೀಕ್ಷೆ ಮಾಡಿಸೋಣ. ವಿಕ್ಟೋರಿಯಾ/ಬೌರಿಂಗ್‌ನಲ್ಲಿ ಪರೀಕ್ಷೆ ಮಾಡಿಸಬಹುದು. ಮಂಡಳಿ ವರದಿ ಆಧರಿಸಿ ನಿರ್ಣಯ ತೆಗೆದುಕೊಳ್ಳಬೇಕು. ಖಾಸಗಿ ಆಸ್ಪತ್ರೆ ಬದಲು ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಆಗಬೇಕು ಎಂದರು.

    ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಆರೋಗ್ಯದ ವಿಚಾರವಾಗಿ ನಿರ್ಲಕ್ಷ್ಯ ಸಲ್ಲ. ಆರೋಗ್ಯ ಎಲ್ಲರ ಹಕ್ಕು ಎಂದು ಅಭಿಪ್ರಾಯಪಟ್ಟು ಬುಧವಾರಕ್ಕೆ ಆದೇಶ ಕಾಯ್ದಿರಿಸಿದರು.

     

  • ಮುಡಾ ಕೇಸ್; ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸಿಎಂ ಮೊರೆ

    ಮುಡಾ ಕೇಸ್; ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸಿಎಂ ಮೊರೆ

    – ಅಧಿಕಾರಿಗಳಿಗೆ ಇಡಿ ನೋಟಿಸ್; ಲೋಕಾಯುಕ್ತದಿಂದಲೂ ತೀವ್ರ ವಿಚಾರಣೆ

    ಬೆಂಗಳೂರು/ಮೈಸೂರು: ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿಸಿ ರಾಜ್ಯಪಾಲರು ನೀಡಿರುವ ಆದೇಶ ಎತ್ತಿಹಿಡಿದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠದದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

    ಏಕಸದಸ್ಯ ಪೀಠ ಆದೇಶ ನೀಡಿದ ಬರೋಬ್ಬರಿ 1 ತಿಂಗಳ ನಂತರ, ಸಾಕಷ್ಟು ಅಳೆದುತೂಗಿ ಸಿದ್ದರಾಮಯ್ಯ ಕಾನೂನಾತ್ಮಕವಾಗಿ ಮುಂದಡಿ ಇಟ್ಟಿದ್ದಾರೆ. ಈ ಅರ್ಜಿ ವಿಚಾರಣೆ ದಿನಾಂಕ ಇನ್ನಷ್ಟೇ ನಿಗದಿ ಆಗಬೇಕಿದೆ.

    ಇದೇ ವೇಳೆ, ಮುಡಾ ಕೇಸ್ ತನಿಖೆ ಜೋರಾಗಿದೆ. ಇತ್ತೀಚೆಗಷ್ಟೇ ಮುಡಾ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದ ಇಡಿ ಈಗ ಅಧಿಕಾರಿಗಳಿಗೆ ನೋಟಿಸ್ ನೀಡಿದೆ. ತಹಸೀಲ್ದಾರ್ ರಾಜಶೇಖರ್ ಸೇರಿ ನಾಲ್ವರು ಅಧಿಕಾರಿಗಳಿಗೆ ನೋಟಿಸ್ ಕೊಟ್ಟಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

    ಇತ್ತ, ಲೋಕಾಯುಕ್ತ ತನಿಖೆಯೂ ಚುರುಕಾಗಿದೆ. 2004ರಲ್ಲಿ ಮೈಸೂರಿನ ಹೆಚ್ಚುವರಿ ಡಿಸಿ ಆಗಿದ್ದ ಪಾಲಯ್ಯರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. 2003ರಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದ ಬಿ.ಎನ್.ಬಚ್ಚೇಗೌಡ ಹಾಗೂ ಅಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿದ್ದ ಸುಬ್ರಹ್ಮಣ್ಯರಾವ್‌ರಿಂದಲೂ ಮಾಹಿತಿ ಸಂಗ್ರಹಿಸಿದ್ದಾರೆ.

    ಕಳೆದ ವಾರ ಲೋಕಾಯುಕ್ತ ವಿಚಾರಣೆ ಎದುರಿಸಿದ್ದ ರಾಯಚೂರು ಸಂಸದ ಕುಮಾರನಾಯಕ್ ಮಾತನಾಡಿ, ಈ ವಿಚಾರದಲ್ಲಿ ಯಾವುದೇ ತಪ್ಪುಗಳಾಗಿಲ್ಲ ಎಂದಿದ್ದಾರೆ.

  • ದರ್ಶನ್‌ಗೆ ಆಪರೇಷನ್‌ ಮಾಡಬೇಕಿದೆ, ಜಾಮೀನು ನೀಡಿ: ಹೈಕೋರ್ಟ್‌ನಲ್ಲಿ ವಕೀಲರ ಮನವಿ

    ದರ್ಶನ್‌ಗೆ ಆಪರೇಷನ್‌ ಮಾಡಬೇಕಿದೆ, ಜಾಮೀನು ನೀಡಿ: ಹೈಕೋರ್ಟ್‌ನಲ್ಲಿ ವಕೀಲರ ಮನವಿ

    ಬೆಂಗಳೂರು: ನಟ ದರ್ಶನ್‌ (Actor Darshan) ಜಾಮೀನು (Bail) ಅರ್ಜಿಯ ವಿಚಾರಣೆಯನ್ನು  ಹೈಕೋರ್ಟ್‌ (High Court)  ಅ.28ಕ್ಕೆ ಮುಂದೂಡಿದೆ.

    ಇಂದು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ರವರ ಏಕಸದಸ್ಯ ಪೀಠದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ದರ್ಶನ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ನಾಗೇಶ್‌, ತೀವ್ರವಾದ ಬೆನ್ನು ನೋಬಿನಿಂದ ಬಳಲುತ್ತಿರುವ ದರ್ಶನ್‌ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಬೇಕಿದೆ. ಹೀಗಾಗಿ ಜಾಮೀನು ಅರ್ಜಿ ಮಂಜೂರು ಮಾಡಬೇಕೆಂದು ಮನವಿ ಮಾಡಿದರು.

    ದರ್ಶನ್‌ ಅವರಿಗೆ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಅದಷ್ಟು ಬೇಗ ಸರ್ಜಿಕಲ್ ಅಪರೇಶನ್ (Surgical Operation) ಅವಶ್ಯಕತೆ ಇರುವದರಿಂದ ಜಾಮೀನನ್ನು ಶೀಘ್ರವಾಗಿ ನೀಡಬೇಕು ಎಂದು ಕೇಳಿಕೊಂಡರು. ಇದನ್ನೂ ಓದಿ: ಮಳೆಯಾರ್ಭಟಕ್ಕೆ ತತ್ತರಿಸಿ ಹೋದ ಟಾಟಾ ನಗರ – 300ಕ್ಕೂ ಹೆಚ್ಚು ಮನೆಗಳು ಜಲಾವೃತ

    ಈ ವೇಳೆ ನ್ಯಾಯಾಧೀಶರು, ಕೂಡಲೇ ವೈದ್ಯಕೀಯ ವರದಿಗಳ ಸಲ್ಲಿಕೆ ಮಾಡುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಅ.28ಕ್ಕೆ ಮುಂದೂಡಿದರು.