Tag: high court

  • ದ್ವೇಷದ ಪೋಸ್ಟ್‌ – ವಿಜಯೇಂದ್ರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

    ದ್ವೇಷದ ಪೋಸ್ಟ್‌ – ವಿಜಯೇಂದ್ರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಎಫ್‌ಐಆರ್‌ಗೆ (FIR) ಹೈಕೋರ್ಟ್‌ (High Court) ತಡೆ ನೀಡಿದೆ.

    ಪ್ರಕರಣ ರದ್ದು ಮಾಡುವಂತೆ ಬಿ.ವೈ.ವಿಜಯೇಂದ್ರ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಎಫ್‌ಐಆರ್‌ಗೆ ತಡೆ ನೀಡಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿತು.

    ಏನಿದು ಪ್ರಕರಣ?
    ಮೀಸಲಾತಿಗೆ ಸಂಬಂಧಿಸಿದಂತೆ ವಿಡಿಯೊ ತುಣುಕನ್ನು ಬಿಜೆಪಿ ರಾಜ್ಯ ಘಟಕದ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ದ್ವೇಷ ಸೃಷ್ಟಿಸಲು ಯತ್ನಿಸಿದ್ದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda) ಮತ್ತು ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್‌ ಬಾಬು ದೂರು ನೀಡಿದ್ದರು.

    ಜನ ಪ್ರತಿನಿಧಿಗಳ ಕಾಯ್ದೆ ಹಾಗೂ ಸೆಕ್ಷನ್ 505 (2) (ವರ್ಗಗಳ ನಡುವೆ ದ್ವೇಷ, ದ್ವೇಷ ಅಥವಾ ದುಶ್ಚಟವನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) ಅಡಿಯಲ್ಲಿ ಮೂವರು ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ‘ಕರಿಯಾ’ ಚಿತ್ರ ರೀ-ರಿಲೀಸ್ ವೇಳೆ ದರ್ಶನ್ ಪುಂಡಾಭಿಮಾನಿಗಳಿಗೆ ಖಾಕಿ ವಾರ್ನಿಂಗ್

    ವಿಡಿಯೋದಲ್ಲಿ ಏನಿತ್ತು?
    ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳನ್ನು ಮೊಟ್ಟೆಗಳೆಂದು ಬಿಂಬಿಸಿ, ಆ ಮೊಟ್ಟೆಗಳಿರುವ ಬುಟ್ಟಿಗೆ ಮುಸ್ಲಿಂ ಮೊಟ್ಟೆಯನ್ನು ರಾಹುಲ್‌ ಗಾಂಧಿ (Rahul Gandhi) ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಂದಿಡುವಂತೆ ತೋರಿಸಲಾಗಿತ್ತು. ಮರಿಯಾದ ಬಳಿಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಮರಿಗಳಿಗೆ ಸೇರಬೇಕಾದ ಅನುದಾನವನ್ನು ಮುಸ್ಲಿಂ ಮರಿಗಳಿಗೆ ಮಾತ್ರ ನೀಡಲಾಗುತ್ತದೆ ಎಂದು ಬಿಂಬಿಸುವ ವಿಡಿಯೋ ತುಣಕು ಇರುವ ಪೋಸ್ಟ್‌ ಅನ್ನು ಬಿಜೆಪಿ ಅಪ್ಲೋಡ್‌ ಮಾಡಿತ್ತು.

     

  • ಬಿಜೆಪಿಯವರ ಷಡ್ಯಂತ್ರದ ವಿರುದ್ಧ ನನಗೆ ಜಯ ಸಿಕ್ಕಿದೆ: ಡಿಕೆಶಿ

    ಬಿಜೆಪಿಯವರ ಷಡ್ಯಂತ್ರದ ವಿರುದ್ಧ ನನಗೆ ಜಯ ಸಿಕ್ಕಿದೆ: ಡಿಕೆಶಿ

    -ಯತ್ನಾಳ್‍ಗೂ ಈ ಪ್ರಕರಣಕ್ಕೂ ಏನು ಸಂಬಂಧ? 

    ಬೆಂಗಳೂರು: ಬಿಜೆಪಿಯವರು (BJP) ಮಾಡಿದ್ದ ಷಡ್ಯಂತ್ರದ ವಿರುದ್ಧ ನನಗೆ ಜಯ ಸಿಕ್ಕಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಆಸ್ತಿ ಗಳಿಕೆ ಪ್ರಕರಣದ (Disproportionate assets case) ಸಂಬಂಧ ಸಿಬಿಐ (CBI) ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಈ ವೇಳೆ, ನಾವೆಲ್ಲಾ ಕಷ್ಟ ಪಟ್ಟು ಶ್ರಮ ಪಟ್ಟು ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ನಮ್ಮ ಮೇಲೆ ಬಿಜೆಪಿ ಸರ್ಕಾರ ಸಾಕಷ್ಟು ಷಡ್ಯಂತ್ರ ಮಾಡಿದೆ. ಸಾವಿರಾರು ಕೇಸ್ ದಾಖಲಿಸಿದೆ ಎಂದು ಆರೋಪಿಸಿದ್ದಾರೆ.

    ನಾನು ಏನೂ ತಪ್ಪು ಮಾಡಿಲ್ಲ ಎಂದು ಅಂದೇ ಹೇಳಿದ್ದೆ. ಈಗ ನನಗೆ ಜಯ ಸಿಕ್ಕಿದೆ. ನನ್ನ ಪರವಾಗಿ ನಿಂತ ಸರ್ಕಾರಕ್ಕೆ, ನನ್ನ ಪರ ವಾದ ಮಾಡಿದ ವಕೀಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.

    ಸಿಬಿಐನವರೆ ಈ ಪ್ರಕರಣಕ್ಕೆ ಅಷ್ಟು ತಲೆಕೆಡಿಸಿಕೊಂಡಿಲ್ಲ. ಯತ್ನಾಳ್‍ಗೂ ಈ ಪ್ರಕರಣಕ್ಕೂ ಏನು ಸಂಬಂಧ? ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಹೋಗಲಿ. ಅವರಿಗೂ ನ್ಯಾಯಾಲಯ, ನಮಗೂ ನ್ಯಾಯಾಲಯ ಇದೆ. ನಾನು ಸಾಯೋವರೆಗೂ ಈ ರೀತಿ ಕೇಸ್‍ಗಳನ್ನ ಎದುರಿಸಲೇಬೇಕು. ಅದು ಗೊತ್ತಿದೆ ಅವರು ನನ್ನ ಬಿಡಲ್ಲ ಎಲ್ಲವನ್ನೂ ಎದುರಿಸುತ್ತೇನೆ ಎಂದು ಅವರು ಹೇಳಿದ್ದಾರೆ.

    ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಲೋಕಾಯುಕ್ತದಲ್ಲಿ ತನಿಖೆ ಮುಂದುವರೆಸಬಹುದು ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ. ರಾಜ್ಯ ಸರ್ಕಾರ- ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್‍ನಲ್ಲಿ ಬಗೆಹರಿಯುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

  • ಡಿವೈಎಸ್‍ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ – ಕೆ.ಜೆ ಜಾರ್ಜ್ ಸೇರಿ ಇಬ್ಬರು ಐಎಎಸ್ ಅಧಿಕಾರಿಗಳಿಗೆ ಬಿಗ್ ರಿಲೀಫ್

    ಡಿವೈಎಸ್‍ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ – ಕೆ.ಜೆ ಜಾರ್ಜ್ ಸೇರಿ ಇಬ್ಬರು ಐಎಎಸ್ ಅಧಿಕಾರಿಗಳಿಗೆ ಬಿಗ್ ರಿಲೀಫ್

    ನವದೆಹಲಿ: ಡಿವೈಎಸ್‍ಪಿ ಎಂ.ಕೆ. ಗಣಪತಿ (M.K Ganapathi) ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ ಜಾರ್ಜ್ (K.J George) ಸೇರಿದಂತೆ ಐಪಿಎಸ್ ಅಧಿಕಾರಿಗಳಾದ ಎ.ಎಂ ಪ್ರಸಾದ್ ಮತ್ತು ಪ್ರಣಬ್ ಮೊಹಂತಿಗೆ ಸುಪ್ರೀಂಕೋರ್ಟ್‍ನಿಂದ (Supreme Court) ಬಿಗ್ ರಿಲೀಫ್ ಸಿಕ್ಕಿದೆ.

    ಪ್ರಕರಣದಲ್ಲಿ ಹೈಕೋರ್ಟ್ (High Court) ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಪ್ರಕರಣದಲ್ಲಿ ಕೆ.ಜೆ ಜಾರ್ಜ್ ಪಾತ್ರವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು.

    ಸಿಬಿಐ ಹಾಗೂ ಸಿಐಡಿ ತನಿಖಾ ತಂಡಗಳು ಬಿ ರಿಪೋರ್ಟ್‍ನಲ್ಲಿ ಕೆ.ಜೆ ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಯಲ್ಲಿ ತಿಳಿಸಿದ್ದವು. ಈ ಸಂಬಂಧ ಕೆ.ಜೆ. ಜಾರ್ಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರತಿವಾದಿಗಳ ದೂರನ್ನು ತಳ್ಳಿಹಾಕಿತ್ತು.

    ಹೈಕೋರ್ಟ್ ಆದೇಶದ ವಿರುದ್ಧ ಗಣಪತಿಯವರ ಸಹೋದರಿ ಸಬೀತಾ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾ.ಬೇಲಾ ಎಂ.ತ್ರಿವೇದಿ ನೇತೃತ್ವದ ದ್ವಿ ಸದಸ್ಯ ಪೀಠ ಅರ್ಜಿಯನ್ನು ವಜಾ ಮಾಡಿ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.

    ಏನಿದು ಪ್ರಕರಣ?
    ಮಂಗಳೂರು ಐಜಿಪಿ ಕಚೇರಿಯಲ್ಲಿ ಡಿವೈಎಸ್‍ಪಿ ಆಗಿದ್ದ ಗಣಪತಿಯವರು ಮೂಲತಃ ಕೊಡಗಿನವರು. ಅವರು 2016 ಜುಲೈ 7 ರಂದು ಮಡಿಕೇರಿಯ ವಿನಾಯಕ ಲಾಡ್ಜ್‍ನ ಕೊಠಡಿ ಸಂಖ್ಯೆ 315ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಶರಣಾಗುವ ಮುನ್ನ ಕೊಡಗಿನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದ ಗಣಪತಿ ಅವರು, ಅಂದಿನ ಗೃಹ ಸಚಿವ ಕೆ.ಜೆ. ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ನನ್ನ ಸಾವಿಗೆ ಈ ಮೂವರೇ ಕಾರಣ ಎಂದು ಹೇಳಿದ್ದರು.

  • ನೂರಾರು ಕೋಟಿ ಆಸ್ತಿಗೆ ಕಡಿಮೆ ಮೌಲ್ಯ ತೋರಿಸಿದ್ದಾರೆ, ಶ್ರೇಯಸ್ ಪಟೇಲ್ ಅನರ್ಹಗೊಳ್ಳಬೇಕು: ದೇವರಾಜೇಗೌಡ

    ನೂರಾರು ಕೋಟಿ ಆಸ್ತಿಗೆ ಕಡಿಮೆ ಮೌಲ್ಯ ತೋರಿಸಿದ್ದಾರೆ, ಶ್ರೇಯಸ್ ಪಟೇಲ್ ಅನರ್ಹಗೊಳ್ಳಬೇಕು: ದೇವರಾಜೇಗೌಡ

    ಹಾಸನ: ನೂರಾರು ಕೋಟಿ ಮೌಲ್ಯದ ಆಸ್ತಿಗೆ ಕಡಿಮೆ ಮೌಲ್ಯವನ್ನು ಅಫಿಡವಿಟ್‌ನಲ್ಲಿ ಉಲ್ಲೇಖ ಮಾಡಿರುವ ಸಂಸದ ಶ್ರೇಯಸ್ ಪಟೇಲ್ ಅವರನ್ನು ಸಂಸತ್ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ದೇವರಾಜೇಗೌಡ (Devaraje Gowda)  ಆಗ್ರಹಿಸಿದ್ದಾರೆ.

    ನೂತನ ಸಂಸದ ಶ್ರೇಯಸ್ ಪಟೇಲ್ (Shreyas Patel) ವಿರುದ್ಧ ಕೇಸ್ ಬಗ್ಗೆ ಸದಸ್ಯತ್ವ ಅನರ್ಹಗೊಳಿಸಬೇಕೆಂದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಮಾತನಾಡಿದ ಅವರು, ಮಾಜಿ ಸಂಸದ ಪ್ರಜ್ವಲ್ ರೇವಣ್ಣರ (Prajwal Revanna) ಅಶ್ಲೀಲ ಬಿಡುಗಡೆ ಮಾಡಿ ಅದರ ಲಾಭವನ್ನು ಶ್ರೇಯಸ್ ಪಟೇಲ್ ಪಡೆದುಕೊಂಡಿದ್ದಾರೆ. ಅವರ ತಪ್ಪು ಮಾಹಿತಿ ಬಗ್ಗೆ ಕೋರ್ಟ್ ಜೊತೆಗೆ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿದೆ. ಈ ಪ್ರಕರಣದಲ್ಲಿ ನನ್ನ ಮಗನಿಂದಲೇ ದೂರು ಕೊಡಿಸಿದ್ದೇನೆ. ಯಾವುದೇ ಆಮಿಷಕ್ಕೆ ಬಲಿಯಾಗಬಾರದು ಎಂದು ಹೀಗೆ ಮಾಡಿದ್ದೇನೆ. ಇನ್ನು ಮೂರ್ನಾಲ್ಕು ತಿಂಗಳಲ್ಲಿ ಶ್ರೇಯಸ್ ಸದಸ್ಯತ್ವ ಅನರ್ಹತೆ ಆಗಲಿದೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಗಿರೀಶ್‌ನಿಂದ ದೂರವಾಗಿದ್ದಕ್ಕೆ ಹುಬ್ಬಳ್ಳಿ ಅಂಜಲಿ ಕೊಲೆ – ಚಾರ್ಜ್‌ಶೀಟ್‌ ಸಲ್ಲಿಸಿದ ಸಿಐಡಿ

    ಪ್ರಜ್ಚಲ್ ರೇವಣ್ಣ ಕೇಸ್‌ನಲ್ಲಿ ನಮಗೆ ಅನುಭವ ಇರಲಿಲ್ಲ. ಈಗ ನಾವು ಸೂಕ್ತ ರೀತಿಯಲ್ಲಿ ದಾಖಲೆ ನೀಡಿದ್ದೇವೆ. ಶ್ರೇಯಸ್ ಶೀಘ್ರವಾಗಿ ಅನರ್ಹತೆ ಆಗಲಿದ್ದಾರೆ. ಸೆಪ್ಟೆಂಬರ್‌ನಲ್ಲಿ ಖುದ್ದು ಹಾಜರಿಗೆ ಕೋರ್ಟ್ ಸೂಚನೆ ನೀಡಿದೆ. ಶ್ರೇಯಸ್ ಜನರ ಸಿಂಪತಿ ಗಳಿಸಲು ಬೆಲೆ ಬಾಳುವ ಆಸ್ತಿಗೆ ಕಡಿಮೆ ಮೌಲ್ಯ ಇರುವ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಹೆಚ್ಚುವರಿಯಾಗಿ 21 ಲಕ್ಷ ರೂ. ಖರ್ಚು ಮಾಡಿರುವ ಬಗ್ಗೆ ದೂರು ನೀಡಲಾಗಿದೆ. ಅಂದಿನ ಚುನಾವಣಾ ಅಧಿಕಾರಿ ಜೊತೆ ಶಾಮೀಲಾಗಿ ಖರ್ಚು ವೆಚ್ಚವನ್ನು ಮುಚ್ಚಿಡಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸೇರ್ಪಡೆಯಾಗ್ತಾರಾ ಕುಸ್ತಿಪಟು ವಿನೇಶ್ ಫೋಗಟ್?

    ಆದಾಯ ತೆರಿಗೆ ಇಲಾಖೆಗೂ ಕೂಡ ತಪ್ಪು ಮಾಹಿತಿ ನೀಡಲಾಗಿದೆ. ತಪ್ಪು ಮಾಹಿತಿ ನೀಡುವುದು ಕೂಡ ಚುನಾವಣಾ ಅಕ್ರಮ ಆಗಲಿದೆ ಎಂದರು. ಇದನ್ನೂ ಓದಿ:KSRTC ಬಸ್ ದರ ಏರಿಕೆ – ಮತ್ತೆ ಸುಳಿವು ನೀಡಿದ ರಾಮಲಿಂಗಾ ರೆಡ್ಡಿ

    ಹಾಸನದ ಮಾಜಿ ಸಂಸದ ಪ್ರಜ್ಚಲ್ ರೇವಣ್ಣ ಸದಸ್ಯತ್ವ ಅನರ್ಹತೆಗೂ ಹೋರಾಟ ನಡೆಸಿ, ಹೈಕೋರ್ಟ್ನಲ್ಲಿ ರೇವಣ್ಣ ಸದಸ್ಯತ್ವ ಅನರ್ಹತೆಗೊಳಿಸುವಲ್ಲಿ ದೇವರಾಜೇಗೌಡ ಯಶಸ್ವಿಯಾಗಿದ್ದರು. ಇದನ್ನೂ ಓದಿ: ನಾವು ತಟಸ್ಥವಾಗಿಲ್ಲ, ಶಾಂತಿ ಕಡೆ ಇದ್ದೇವೆ: ಉಕ್ರೇನ್‌ ಭೇಟಿ ಬಗ್ಗೆ ಮೋದಿ ಮಾತು

  • ಫ್ರೆಂಚ್‌ ಫ್ರೈಸ್‌ ತಿನ್ನಲು ಅನುಮತಿ ನೀಡದ್ದಕ್ಕೆ ದೂರು – ಪತಿ ವಿರುದ್ಧ ಕ್ರೌರ್ಯದ ಕೇಸ್‌ ತನಿಖೆಗೆ ಹೈಕೋರ್ಟ್‌ ತಡೆ

    ಫ್ರೆಂಚ್‌ ಫ್ರೈಸ್‌ ತಿನ್ನಲು ಅನುಮತಿ ನೀಡದ್ದಕ್ಕೆ ದೂರು – ಪತಿ ವಿರುದ್ಧ ಕ್ರೌರ್ಯದ ಕೇಸ್‌ ತನಿಖೆಗೆ ಹೈಕೋರ್ಟ್‌ ತಡೆ

    ಬೆಂಗಳೂರು: ಫ್ರೆಂಚ್‌ ಫ್ರೈಸ್‌ (French Fries) ತಿನ್ನಲು ಅನುಮತಿ ನೀಡದ್ದಕ್ಕೆ ಪತ್ನಿಯಿಂದ (Wife) ಕ್ರೌರ್ಯದ ಪ್ರಕರಣ ಎದುರಿಸುತ್ತಿದ್ದ ಪತಿಗೆ (Husband) ಕರ್ನಾಟಕ ಹೈಕೋರ್ಟ್‌ (Karnataka High Court) ತಾತ್ಕಾಲಿಕ ರಿಲೀಫ್‌ ನೀಡಿದೆ.

    ದೂರಿನಲ್ಲಿರುವ ಕಾರಣಗಳು ಕ್ಷುಲ್ಲಕವಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾ. ನಾಗಪ್ರಸನ್ನ ಅವರಿದ್ಧ ಏಕಸದಸ್ಯ ಪೀಠ ತನಿಖೆಗೆ ತಡೆ ನೀಡಿ ಉದ್ಯೋಗ ಸಂಬಂಧ ಪತಿಗೆ ಅಮೆರಿಕಕ್ಕೆ ತೆರಳಲು ಅನುಮತಿ ನೀಡಿತು.

    ವಕೀಲ ಶಾಂತಿ ಭೂಷಣ್ ಹೆಚ್ ಅವರ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ ಪತಿ ತನ್ನ ವಿರುದ್ಧದ ದೂರು ಕ್ಷುಲ್ಲಕವಾಗಿದೆ ಎಂದು ಆರೋಪಿಸಿ ತನಿಖೆಗೆ ತಡೆ ನೀಡುವಂತೆ ಕೋರಿದ್ದರು.  ಇದನ್ನೂ ಓದಿ: ಮೋದಿ ಉತ್ತರಾಧಿಕಾರಿ ಯಾರು? ಅಮಿತ್‌ ಶಾ, ಗಡ್ಕರಿ, ಯೋಗಿ.. ಯಾರಿಗೆ ಹೆಚ್ಚು ಜನರ ಒಲವು?

    ಕಕ್ಷಿದಾರ ಮತ್ತು ಅವರ ಪೋಷಕರ ವಿರುದ್ಧ ಐಪಿಸಿಯ ಸೆಕ್ಷನ್ 498 ಎ (ಕ್ರೌರ್ಯ) ಅಡಿಯಲ್ಲಿ ಪತ್ನಿ ದೂರು ದಾಖಲಿಸಿದ್ದಾರೆ. ಕಕ್ಷಿದಾರರಿಗೆ ಅಮೆರಿಕದಲ್ಲಿ (USA) ಉದ್ಯೋಗವಿದೆ. ಆದರೆ ಆದರೆ ನ್ಯಾಯವ್ಯಾಪ್ತಿಯ ನ್ಯಾಯಾಲಯವು ಪತ್ನಿಯ ದೂರಿನ ನಂತರ ಲುಕ್ ಔಟ್ ಸುತ್ತೋಲೆ (LOC) ಹೊರಡಿಸಿದ್ದರಿಂದ ಅಮೆರಿಕಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಈ ಹಿಂದೆ ಪೋಷಕರ ವಿರುದ್ಧದ ತನಿಖೆಗೆ ಕೋರ್ಟ್‌ ತಡೆ ನೀಡಿತ್ತು ಎಂದು ವಕೀಲರು ವಾದಿಸಿದರು.

    ಎರಡನೇ ಮಗುವಿಗೆ ಜನ್ಮ ನೀಡಿದ ಕೂಡಲೇ ಫ್ರೆಂಚ್ ಫ್ರೈಸ್, ಅಕ್ಕಿ ಮತ್ತು ಮಾಂಸವನ್ನು ತಿನ್ನಲು ಪತಿ ನಿರಾಕರಿಸಿದ್ದಾರೆ ಎಂದು ಆರೋಪಿಸಿ ಪತ್ನಿ ಕ್ರೌರ್ಯದ ಅಡಿ ಪತಿ ವಿರುದ್ಧ ದೂರು ನೀಡಿದ್ದರು.

    ಇನ್ನೊಂದು ಕಡೆ ಮಗು ಹುಟ್ಟುಗ ಮೊದಲು ನಾವು ಅಮೆರಿಕದಲ್ಲಿ 6 ವರ್ಷ ನೆಲೆಸಿದ್ದೆವು. ಈ ಸಮಯದಲ್ಲಿ ಮನೆಯ ಎಲ್ಲಾ ಕೆಲಸವನ್ನು ನಾನೇ ಮಾಡುತ್ತಿದ್ದೆ. ಆಕೆ ಫೋನ್‌ನಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಳು. ಈ ವೇಳೆ ಪಾಕಿಸ್ತಾನಿ ನಾಟಕ ಹೆಚ್ಚು ವೀಕ್ಷಿಸುತ್ತಿದ್ದಳು. ಪತ್ನಿ ಟಿವಿ ನೋಡುತ್ತಾ ಬಾತ್‌ ರೂಂ ಸ್ವಚ್ಛ ಮಾಡುವಂತೆ ಮತ್ತು ಪಾತ್ರೆ ತೊಳೆಯುವಂತೆ ನನಗೆ ಸೂಚಿಸುತ್ತಿದ್ದಳು ಎಂದು ಪತಿ ನ್ಯಾಯಾಲಯಕ್ಕೆ ಉತ್ತರ ನೀಡಿದ್ದರು.

    ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ಇದು ಕಾನೂನಿನ ಪ್ರಕ್ರಿಯೆಯ ಸ್ಪಷ್ಟ ದುರುಪಯೋಗವಾಗಿದೆ ಮತ್ತು ಪ್ರಕರಣದಲ್ಲಿ ಎಲ್ಒಸಿಯನ್ನು ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟು ಪತಿ ವಿರುದ್ಧದ ತನಿಖೆಗೆ ಮಧ್ಯಂತರ ತಡೆ ನೀಡಿತು.

     

  • ಮನೆಯೂಟ ಕೋರಿ ದರ್ಶನ್‌ ಮನವಿ – ಸೆ.5ರವರೆಗೆ ಜೈಲೂಟವೇ ಗತಿ

    ಮನೆಯೂಟ ಕೋರಿ ದರ್ಶನ್‌ ಮನವಿ – ಸೆ.5ರವರೆಗೆ ಜೈಲೂಟವೇ ಗತಿ

    ಬೆಂಗಳೂರು: ಮನೆ ಊಟ (Home Food) ಕೋರಿ ದರ್ಶನ್‌ (Darshan) ಸಲ್ಲಿಸಲಾಗಿರುವ ಮನವಿಯ ಅರ್ಜಿಯನ್ನು ಹೈಕೋರ್ಟ್‌ (High Court) ಸೆ.5ಕ್ಕೆ ಮುಂದೂಡಿದೆ.

    ಇಂದು ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ನ್ಯಾಯಾಲಯಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರ ವಕೀಲ ಪ್ರಭುಲಿಂಗ ನಾವದಗಿ ಹಾಜರಾಗಿದ್ದರು. ಇದನ್ನೂ ಓದಿ: ದರ್ಶನ್‌ಗೆ ಸಂಕಷ್ಟ ತಂದೊಡ್ಡುತ್ತಾ ಹೈದರಾಬಾದ್‌ ಎಫ್‌ಎಸ್‌ಎಲ್‌ ವರದಿ?

     

    ಮನೆಯೂಟಕ್ಕೆ ಅವಕಾಶ ನೀಡುವಂತೆ ದರ್ಶನ್‌ ಮಾಡಿದ್ದ ಮನವಿಯನ್ನು ಕಾರಾಗೃಹ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ತಿರಸ್ಕರಿಸಿದ್ದಾರೆ. ಮನವಿ ವಜಾಗೊಂಡ ಹಿನ್ನೆಲೆಯಲ್ಲಿ ವಾದ ಮಂಡನೆಗೆ ಅವಕಾಶ ಕೋರಿ ಪ್ರಭುಲಿಂಗ ನಾವದಗಿ ಮನವಿ ಮಾಡಿದರು. ನಾವದಗಿ ಮನವಿ ಪುರಸ್ಕರಿಸಿದ ಕೋರ್ಟ್‌ ಸೆ.5ಕ್ಕೆ ವಿಚಾರಣೆಯನ್ನು ಮುಂದೂಡಿದೆ.

    ದರ್ಶನ್ ಆರೋಗ್ಯ ಸ್ಥಿರವಾಗಿದೆ. ದರ್ಶನ್‌ ಅವರಿಗೆ ಮನೆಯೂಟ, ಹಾಸಿಗೆ, ಬಟ್ಟೆ ನೀಡಲು ಸಾಧ್ಯವಿಲ್ಲ. ಆರೋಪಿ ದರ್ಶನ್‌ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮನೆಯೂಟ ಕೊಡುವ ಪರಿಸ್ಥಿತಿ ನಿರ್ಮಾಣ ಆಗಿಲ್ಲ ಎಂದು ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಮನೆಯೂಟ ನಿರಾಕರಿಸಿ ಆದೇಶ ಹೊರಡಿಸಿದ್ದರು.

     

  • ಮುಡಾ ಹಗರಣ| ಇಷ್ಟು ಆತುರ ಏನು – ಸಿಎಂ ಪರ ವಕೀಲರಿಗೆ ಜಡ್ಜ್ ಪ್ರಶ್ನೆ

    ಮುಡಾ ಹಗರಣ| ಇಷ್ಟು ಆತುರ ಏನು – ಸಿಎಂ ಪರ ವಕೀಲರಿಗೆ ಜಡ್ಜ್ ಪ್ರಶ್ನೆ

    ಬೆಂಗಳೂರು: ಮುಡಾ ಕೇಸ್‍ಗೆ (MUDA Scam) ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ (Siddaramaiah) ಹೈಕೋರ್ಟ್‍ಗೆ (High Court) ಅರ್ಜಿ ಸಲ್ಲಿಸಿದ್ದಾರೆ.

    ಸಿಎಂ ಪರ ವಕೀಲರಾದ ಶತಬೀಷ್ ಶಿವಣ್ಣ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಬಳಿಕ ಕೋರ್ಟ್ ಕಲಾಪ ಆರಂಭವಾಗುತ್ತಿದ್ದಂತೆ ನ್ಯಾ.ಹೇಮಂತ್ ಚಂದನ್ ಗೌಡರ್ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಸಿಎಂ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಮನವಿ ಮಾಡಿದರು. ಈ ವೇಳೆ ವಕೀಲರ ಮನವಿಗೆ, ಅಷ್ಟು ಆತುರ ಏನಿದೆ ಎಂದು ಜಡ್ಜ್ ಪ್ರಶ್ನಿಸಿದರು.

    ಈ ವೇಳೆ ವಕೀಲರು, ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿದ್ದಾರೆ. ಹೀಗಾಗಿ ರಾಜ್ಯಪಾಲರ ಆದೇಶ ಪ್ರಶ್ನೆ ಮಾಡಲಾಗುತ್ತಿದೆ. ದೂರುದಾರರು ಕೇವಿಯೆಟ್ ಕೂಡ ಹಾಕಿದ್ದಾರೆ ಎಂದು ಮಾಹಿತಿ ನೀಡಿದರು. ಇದೀಗ ನ್ಯಾಯಮೂರ್ತಿಗಳು ಮಧ್ಯಾಹ್ನ 2:30ಕ್ಕೆ ವಿಚಾರಣೆ ನಿಗದಿ ಮಾಡಿದ್ದಾರೆ.

    ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠದ ಮುಂದೆ ಸಹ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಒಂದೇ ಅರ್ಜಿಯನ್ನು ಎರಡೂ ಪೀಠದಲ್ಲೂ ಮಾಡಲಾಗಿದೆ. ಮುಖ್ಯ ನ್ಯಾಯಾಮೂರ್ತಿಯವರಿಂದ ಮಧ್ಯಾಹ್ನ ಪೀಠ ನಿಗದಿ ಮಾಡಿ, ಯಾವುದಾದರೂ ಒಂದು ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲು ತೀರ್ಮಾನಿಸಲಾಗಿದೆ.

  • MUDA Scam | ಇಂದಿನಿಂದ ಕಾನೂನು ಸಮರ ಆರಂಭ – ಸಿಎಂ ಪರ ವಾದ ಏನು?

    MUDA Scam | ಇಂದಿನಿಂದ ಕಾನೂನು ಸಮರ ಆರಂಭ – ಸಿಎಂ ಪರ ವಾದ ಏನು?

    ಬೆಂಗಳೂರು: ಮುಡಾ ಹಗರಣ (MUDA Scam) ಸಂಬಂಧ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ತನಿಖೆಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಇಂದಿನಿಂದ ಕಾನೂನು ಸಮರ (Legal Battle) ಆರಂಭವಾಗಲಿದೆ.

    ರಾಜ್ಯಪಾಲರ ಆದೇಶದ ವಿರುದ್ಧ ಇಂದು ಹೈಕೋರ್ಟ್‌ನಲ್ಲಿ (High Court) ಸುಪ್ರೀಂಕೋರ್ಟ್‌ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಮತ್ತು ಕಪಿಲ್ ಸಿಬಲ್ ಟೀಂ ವಾದ ಮಾಡಲಿದೆ.

     

    ಸಿಎಂ ಪರ ವಾದ ಏನಿರಬಹುದು?
    ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ನಡೆ ರಾಜಕೀಯ ಪ್ರೇರಿತವಾಗಿದೆ. ಮುಡಾ ಸೈಟ್ ಹಂಚಿಕೆಯಲ್ಲಿ ಯಾವುದೇ ಕಾನೂನು ಉಲ್ಲಂಘನೆ ನಡೆದಿಲ್ಲ.

    ಅಧಿಕಾರ ದುರ್ಬಳಕೆ, ಭ್ರಷ್ಟಾಚಾರ ನಡೆದಿಲ್ಲ. ಮುಡಾ (MUDA) ನಿಯಮದ ಅನ್ವಯವೇ ನಿವೇಶನ ಹಂಚಿಕೆಯಾಗಿದೆ. ಇದರಲ್ಲಿ ನನ್ನ ಮತ್ತು ನನ್ನ ಕುಟುಂಬ ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ.  ಇದನ್ನೂ ಓದಿ: ಊಟದ ವೇಳೆ ಇಲಿ ಪಾಷಾಣ ಸ್ಪ್ರೇ – 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

    ಯಾವುದೇ ದಾಖಲಾತಿಗಳಿಲ್ಲದೆ ಏಕಪಕ್ಷೀಯವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿಯನ್ನು ರದ್ದು ಮಾಡಬೇಕು.

    ರಾಜ್ಯಾಪಾಲರ ಆದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನ ಕಾಯ್ದೆಯ ಸೆಕ್ಷನ್ 17ಎ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಸೆಕ್ಷನ್ ಅಡಿ ಡಿಜಿ-ಐಜಿಪಿ ಮಟ್ಟದ ಪೊಲೀಸ್ ಅಧಿಕಾರಿ ಪ್ರಾಸಿಕ್ಯೂಷನ್‌ಗೆ ಕೇಳಬೇಕು. ಕೇಂದ್ರ ಸರ್ಕಾರವೇ 2021ರ ಸೆಪ್ಟೆಂಬರ್‌ನಲ್ಲಿ ಈ ನಿಯಮಾವಳಿ ರೂಪಿಸಿದೆ. ಇದನ್ನೂ ಓದಿ: ಅಂದು ಯಡಿಯೂರಪ್ಪ, ಇಂದು ಸಿದ್ದರಾಮಯ್ಯ – ಸಿಎಂಗೆ ಕಂಟಕವಾದ `ಮೈತ್ರಿ’ ಪಾದಯಾತ್ರೆ

    ಪ್ರಾಸಿಕ್ಯೂಷನ್‌ಗೆ ಅನುಮತಿಸಲು ಯಾವುದಾದರೂ ತನಿಖಾ ವರದಿ ಇರಬೇಕು. ಸಿದ್ದರಾಮಯ್ಯ ವಿರುದ್ಧ ಯಾವುದೇ ತನಿಖಾ ವರದಿ ಇರಲಿಲ್ಲ. ಯಾವುದೇ ಸೂಕ್ತ ಆಧಾರವಿಲ್ಲದೇ ತನಿಖೆಗೆ ಒಪ್ಪಿಗೆ ನೀಡಲಾಗಿದೆ. ಖಾಸಗಿ ದೂರಿನ ಮೇಲೆ ತನಿಖೆಗೆ ನೀಡಿರುವುದು ಕಾನೂನು ಬಾಹಿರ. ಈ ಮೂಲಕ ರಾಜ್ಯಪಾಲರೇ ತನಿಖಾಧಿಕಾರಿಯಂತೆ ವರ್ತಿಸಿದ್ದಾರೆ.

    ಕಾನೂನಾತ್ಮಕವಾಗಿಯೇ ಬದಲಿ ನಿವೇಶನ ಹಂಚಿಕೆಯಾಗಿದೆ. ನಿರ್ದಿಷ್ಟ ಸ್ಥಳದಲ್ಲೇ ಬದಲಿ ನಿವೇಶನ ಕೊಡಿ ಎಂದು ಸಿಎಂ ಕುಟುಂಬ ಕೇಳಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ. ಡಿನೋಟಿಫೈ, ಜಮೀನು ನೋಂದಣಿ ಸಂಬಂಧ ಯಾರ ಮೇಲೂ ಪ್ರಭಾವ ಬೀರಿಲ್ಲ.

     

  • ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂ. ಠೇವಣಿ ಇಡುವಂತೆ ಹೈಕೋರ್ಟ್ ನಿರ್ದೇಶನ

    ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂ. ಠೇವಣಿ ಇಡುವಂತೆ ಹೈಕೋರ್ಟ್ ನಿರ್ದೇಶನ

    ನುಮತಿ ಪಡೆಯದೇ ತಮ್ಮ ನಿರ್ಮಾಣ ಸಂಸ್ಥೆಯಿಂದ  ತಯಾರಾದ ‘ಬ್ಯಾಚ್ಯುಲರ್ ಪಾರ್ಟಿ’ ಸಿನಿಮಾದಲ್ಲಿ ಎರಡು ಹಾಡುಗಳನ್ನು ಬಳಕೆ ಮಾಡಿದ್ದಕ್ಕಾಗಿ ಎಂಆರ್ ಟಿ (MRT) ಮ್ಯೂಸಿಕ್ ಸಂಸ್ಥೆಯು ದೆಹಲಿ ಹೈಕೋರ್ಟ್ (Delhi, High Court) ಮೆಟ್ಟಿಲು ಏರಿತ್ತು. ಕಾಪಿ ರೈಟ್ ಉಲ್ಲಂಘನೆ ಆಗಿರೋ ವಿಚಾರವನ್ನು ಉಲ್ಲೇಖಿಸಿತ್ತು. ಇದೀಗ ದೆಹಲಿ ಹೈಕೋರ್ಟ್ ರಕ್ಷಿತ್ ಶೆಟ್ಟಿ (Rakshit Shetty) ಮತ್ತು ಪರಂವಾ ಸ್ಟುಡಿಯೋಗೆ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ನಿರ್ದೇಶನ ನೀಡಿದೆ.

    ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಎಂ.ಆರ್.ಟಿ ಹಕ್ಕು ಹೊಂದಿರೋ ‘ನ್ಯಾಯ  ಎಲ್ಲಿದೆ’ ಮತ್ತು  ‘ಒಮ್ಮೆ ನಿನ್ನನ್ನು’ ಹಾಡು ಬಳಕೆ ಮಾಡಿದ್ದರು ರಕ್ಷಿತ್ ಶೆಟ್ಟಿ. ಅನುಪತಿ ಪಡೆಯದೇ ಬಳಸಿದ್ದನ್ನೂ ಒಪ್ಪಿಕೊಂಡಿದ್ದರು. ತುಣುಕು ಹಾಡುಗಳನ್ನು ಬಳಸಿಕೊಳ್ಳಲು ಅನುಮತಿ ಬೇಕಾ ಎಂದು ಪ್ರಶ್ನೆ ಮಾಡಿದ್ದರು. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.

    ರಕ್ಷಿತ್ ಶೆಟ್ಟಿ ಮತ್ತು ಪರಂವಾಗೆ ಹೈಕೋರ್ಟ್ ನೋಟಿಸ್ ನೀಡಿತ್ತು. ಈ ನೋಟಿಸ್ ಗೆ ರಕ್ಷಿತ್ ಶೆಟ್ಟಿ ಕೋರ್ಟಿಗೆ ಹಾಜರಾಗದ ಕಾರಣದಿಂದಾಗಿ ಸೋಷಿಯಲ್ ಮೀಡಿಯಾ ಸೇರಿದಂತೆ, ಹಾಡುಗಳು ಬಳಕೆಯಾದ ಕಡೆಯಲ್ಲಿ ತೆಗೆದುಹಾಕಬೇಕು ಮತ್ತು 20 ಲಕ್ಷ ರೂಪಾಯಿ ಠೇವಣಿ ಇಡಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.

  • ಸರ್ವರಿಗೂ ಸಮಾನ ನ್ಯಾಯ ದೊರಕಿಸುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಹೈಕೋರ್ಟ್ ಸಿಜೆ ಎನ್. ವಿ.ಅಂಜಾರಿಯಾ

    ಸರ್ವರಿಗೂ ಸಮಾನ ನ್ಯಾಯ ದೊರಕಿಸುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಹೈಕೋರ್ಟ್ ಸಿಜೆ ಎನ್. ವಿ.ಅಂಜಾರಿಯಾ

    ಬೆಂಗಳೂರು: ಸರ್ವರಿಗೂ ಸಮಾನ ನ್ಯಾಯ ದೊರಕಿಸುವಲ್ಲಿ ನ್ಯಾಯಾಂಗದ (Judiciary) ಪಾತ್ರ ದೊಡ್ಡದು ಎಂದು ಹೈಕೋರ್ಟ್ (High Cout) ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ (NV Anjaria) ತಿಳಿಸಿದರು.

    ಕರ್ನಾಟಕ ಹೈಕೋರ್ಟ್‌ನಲ್ಲಿ (Karnataka High Court) ಹಮ್ಮಿಕೊಳ್ಳಲಾದ 78ನೇ ಸ್ವಾತಂತ್ರೋತ್ಸವದ (Independence Day) ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಇದನ್ನೂ ಓದಿ: 8 ದಿನದ ಬಳಿಕ ಕಾಳಿ ನದಿಯಿಂದ ದಡ ಸೇರಿದ ಲಾರಿ – ಹೇಗಿತ್ತು ಕಾರ್ಯಾಚರಣೆ?

    ದೇಶಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ಇಂದು ನಾವು ಸ್ಮರಿಸಬೇಕು. ಹಾಗೆಯೇ ದೊರೆತ ಸ್ವಾತಂತ್ರ್ಯ ನಮ್ಮ ಮೇಲಿನ ಜವಾಬ್ದಾರಿ ಹೆಚ್ಚಿಸಿದೆ. ಜನರಿಗೆ ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ನ್ಯಾಯಾಂಗದ ಪಾತ್ರ ಮಹತ್ವದ್ದು‌. ಇಂದು ತ್ವರಿತವಾಗಿ ಜನರಿಗೆ ನ್ಯಾಯ ಕೊಡಿಸುವಲ್ಲಿ ಲೋಕ್ ಅದಾಲತ್, ಮಧ್ಯಸ್ಥಿಕೆ ಮುಂತಾದ ನ್ಯಾಯಾಂಗದ ಕಾರ್ಯಕ್ರಮಗಳು ಯಶಸ್ಸುಗಳಿಸಿದೆ. ತಂತ್ರಜ್ಞಾನದ ಕ್ರಾಂತಿಯಿಂದಾಗಿ ಇ- ಸೇವಾ ಕೇಂದ್ರ ಮತ್ತು ವರ್ಚುವಲ್ ಕೋರ್ಟ್ ಗಳನ್ನು ಸ್ಥಾಪಿಸಲಾಗಿದ್ದು, ಇವು ಹೆಚ್ಚು ಜನಸ್ನೇಹಿಯಾಗಿವೆ. ಮುಂದುವರೆದು ಕಾಗದ ಮುಕ್ತ ನ್ಯಾಯಾಲಯ ಮಾಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಸ್ವಾತಂತ್ರ್ಯೋತ್ಸವದಂದು ರಾಹುಲ್‍ಗೆ ಸರ್ಕಾರದಿಂದ ಅವಮಾನ – ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

    ರಾಜ್ಯದಲ್ಲಿ ನಡೆಸಲಾಗುತ್ತಿರುವ ಲೋಕ್ ಅದಾಲತ್‌ನಲ್ಲಿ ಅತಿ ಹೆಚ್ಚು ಪ್ರಕರಣಗಳು ಇತ್ಯರ್ಥಗೊಂಡಿದ್ದು, ನ್ಯಾಯಾಲಯದ ಸಮಯ ಉಳಿತಾಯದ ಜೊತೆಗೆ ತ್ವರಿತವಾಗಿ ಜನರಿಗೆ ನ್ಯಾಯ ದೊರಕಿಸಿದಂತಾಗಿದೆ. ನ್ಯಾಯಾಲಯದಲ್ಲಿ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಕಾಲಕಾಲಕ್ಕೆ ಮುಂಬಡ್ತಿ ನೀಡಲಾಗುತ್ತಿದೆ. ಕರ್ನಾಟಕ ನ್ಯಾಯಾಂಗ ಅಕಾಡೆಮಿ ಹಲವು ಕಾರ್ಯಕ್ರಮ ತರಬೇತಿಗಳನ್ನು ಆಯೋಜಿಸುತ್ತಿದೆ. ನಗರದ ಕಾವೇರಿ ಭವನದಲ್ಲಿ ಕರ್ನಾಟಕ ಉಚ್ಚನ್ಯಾಯಾಲಯಕ್ಕೆ ಹೆಚ್ಚುವರಿ ಕಾರ್ಯಚಟುವಟಿಕೆಗಳಿಗೆ ಅನುಕೂಲವಾಗುವಂತೆ ಸ್ಥಳಾವಕಾಶ ದೊರೆಯುತ್ತಿದೆ. ರಾಷ್ಟ್ರ ನಿರ್ಮಾಣದಲ್ಲಿ ನ್ಯಾಯಾಂಗದ ಪಾತ್ರ ಹಿರಿದಾಗಿದ್ದು, ಆ ನಿಟ್ಟಿನಲ್ಲಿ ಪರಸ್ಪರ ನಂಬಿಕೆ, ಹೊಸ ಆಲೋಚನೆ ಹಾಗೂ ದೂರದೃಷ್ಟಿಕೋನದಿಂದ ನ್ಯಾಯಾಂಗ ಮುಂದೆ ಸಾಗಬೇಕಿದೆ ಎಂದರು.

    ಸಮಾರಂಭದಲ್ಲಿ ಉಚ್ಚನ್ಯಾಯಾಲಯದ ಇತರ ನ್ಯಾಯಮೂರ್ತಿಗಳು, ಹೆಚ್ಚುವರಿ ಸಾಲಿಸಿಟರ್ ಜನರಲ್, ಅಡ್ವಕೋಟ್ ಜನರಲ್, ವಕೀಲರ ಸಂಘದ ಅಧ್ಯಕ್ಷರು, ಹಿರಿಯ ವಕೀಲರು ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.