ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇ ಗೌಡಗೆ (Advocate Devaraje Gowda) ಜಾಮೀನು ಮಂಜೂರು ಆಗಿದೆ.
ದೇವರಾಜೇ ಗೌಡ ಅವರು ಜಾಮೀನು ಕೋರಿ ಹೈಕೋರ್ಟ್ಗೆ (Highcourt) ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ.ಜಿ ಉಮಾ ಅವರಿದ್ದ ಏಕಸದಸ್ಯ ಪೀಠ ಜಾಮೀನು ನೀಡಿ ಇಂದು ಆದೇಶ ನೀಡಿದೆ.
ಏನಿದು ಪ್ರಕರಣ?: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಬಿಡುಗಡೆ ಮಾಡಿರುವ ಆರೋಪ ಎದುರಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಮುಖಂಡ, ವಕೀಲ ದೇವರಾಜೇ ಗೌಡ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿತ್ತು. ಮಹಿಳೆಯೊಬ್ಬರ ಮೇಲೆ ದೇವರಾಜೇ ಗೌಡ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣದಲ್ಲಿ ಪ್ರೀತಂ ಗೌಡರನ್ನು (Preetham Gowda) ಬಂಧಿಸದಂತೆ ಕೋರ್ಟ್ ಆದೇಶ ನೀಡಿ ವಿಶೇಷ ತನಿಖಾ ತಂಡದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಈ ಪ್ರಕರಣದಲ್ಲಿ ಸಂತ್ರಸ್ತೆಯ ವಿಡಿಯೋ ಹಂಚಿಕೆ ಆರೋಪದಲ್ಲಿ ಶಾಸಕ ಪ್ರೀತಂ ಗೌಡ, ಸೇರಿದಂತೆ ಇತರ ಮೂವರ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಪ್ರೀತಂ ಗೌಡ ವಿರುದ್ಧ ಪೆನ್‌ಡ್ರೈವ್ (Pen Drive) ಹಂಚಿಕೆ ಆರೋಪ ಕೇಳಿ ಬಂದಿತ್ತು. ಇದಕ್ಕೆ ಪೂರಕ ಎಂಬಂತೆ ಅವರ ಇಬ್ಬರ ಆಪ್ತರನ್ನು ಎಸ್‌ಐಟಿ ಬಂಧಿಸಿತ್ತು. ಎಸ್‌ಐಟಿ ತನ್ನನ್ನು ಬಂಧಿಸದಂತೆ ಪ್ರೀತಂ ಗೌಡ ಹೈಕೋರ್ಟ್ ಮೊರೆ ಹೋಗಿದ್ದರು.
ಬೆಂಗಳೂರು/ಉಡುಪಿ: ಉಡುಪಿಯಲ್ಲಿ (Udupi) ಒಂದೇ ಕುಟುಂಬದ ನಾಲ್ವರ ಹತ್ಯೆ (Murder Case) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರುಣ್ ಚೌಗಲೆ (Arun Chaugale) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು (Bail Application) ಹೈಕೋರ್ಟ್ (High Court) ವಜಾ ಮಾಡಿದೆ.
ಹೈಕೋರ್ಟ್‌ನ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಆರೋಪಿ ಅರುಣ್ ಚೌಗಲೆ 2023ರ ನವೆಂಬರ್ 12ರಂದು ಉಡುಪಿಯ ತೃಪ್ತಿ ಲೇಔಟ್‌ನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾ ಆಗಿತ್ತು. ಇದನ್ನೂ ಓದಿ: ಲಂಕಾ ನೌಕಪಡೆಯ ನಾವಿಕ ಸಾವು – ಭಾರತೀಯ ಮೀನುಗಾರರ ಮೇಲೆ ಹತ್ಯೆ ಆರೋಪ
ಪ್ರಕರಣ ಏನು?
2023ರ ನವೆಂಬರ್ 12ರಂದು ಸಂತೆಕಟ್ಟೆ ನೇಜಾರು ಸಮೀಪದ ತೃಪ್ತಿ ಲೇಔಟ್‌ನಲ್ಲಿ ಕೊಲೆ ನಡೆದಿತ್ತು. ವಿದೇಶದಲ್ಲಿದ್ದ ನೂರ್ ಮಹಮ್ಮದ್ ಕುಟುಂಬದ ನಾಲ್ವರ ಕೊಲೆಯಾಗಿತ್ತು. ಏರ್ ಇಂಡಿಯಾ ಉದ್ಯೋಗಿಯಾಗಿದ್ದ ಪ್ರವೀಣ್ ಅರುಣ್ ಚೌಗುಲೆ ಬರ್ಬರವಾಗಿ ನಾಲ್ವರ ಹತ್ಯೆ ಮಾಡಿದ್ದ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್ – ವಿಕಿಪೀಡಿಯದಲ್ಲಿ ಪೇಜ್ ಓಪನ್
ಮಗಳ ಮೇಲೆ ಮುಗಿಬಿದ್ದಾಗ ತಡೆಯಲು ಬಂದ ತಾಯಿ ಹಸೀನಾ, ಅಕ್ಕ ಅಫ್ನಾನ್ ಮತ್ತು ತಮ್ಮ ಆಸಿಂನನ್ನು ಇರಿದು ಕೊಂದಿದ್ದ. ತಲೆಮರೆಸಿಕೊಂಡು ಓಡಾಡಿದ್ದ ಆರೋಪಿಯನ್ನು ಬೆಳಗಾವಿ ಜಿಲ್ಲೆಯಲ್ಲಿ ಅರೆಸ್ಟ್ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಲ್ಲಾ ಸಾಕ್ಷಾಧಾರಗಳನ್ನು ಪೊಲೀಸರು ಸಂಗ್ರಹ ಮಾಡಿದ್ದರು. ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿ ಕೃತ್ಯಕ್ಕೆ ಬಳಸಿದ್ದ ಅಸ್ತ್ರಗಳನ್ನು ವಶಪಡಿಸಿಕೊಂಡಿದ್ದರು. ಇದನ್ನೂ ಓದಿ: ಜುಲೈ 8 ರಂದು ರಷ್ಯಾಗೆ ಮೋದಿ – ಪುಟಿನ್ ಜೊತೆ ದ್ವಿಪಕ್ಷೀಯ ಮಾತುಕತೆ
ನವದೆಹಲಿ: ದೆಹಲಿ ಮದ್ಯ ಹಗರಣದಲ್ಲಿ (Delhi Liquor Scam) ಬಂಧನಕ್ಕೆ ಒಳಗಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ದೆಹಲಿ ಹೈಕೋರ್ಟ್‌ನಲ್ಲಿ (Delhi High Court) ರಿಲೀಫ್ ಸಿಕ್ಕಿಲ್ಲ. ಟ್ರಯಲ್ ಕೋರ್ಟ್ ಮಂಜೂರು ಮಾಡಿದ್ದ ಜಾಮೀನಿಗೆ (Bail) ಹೈಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.
ಜಾಮೀನು ಅರ್ಜಿ ಮೇಲೆ ನಿರ್ಣಯ ತೆಗೆದುಕೊಳ್ಳುವಾಗ ಸಮಗ್ರವಾಗಿ ಆಲೋಚನೆ ಮಾಡಿಲ್ಲ. ಜಾಮೀನು ಅರ್ಜಿ ವಿಚಾರಣೆ ವೇಳೆ ಇಡಿ ಪರ ವಕೀಲರಿಗೆ ಅಗತ್ಯ ಅವಕಾಶವನ್ನು ನೀಡಬೇಕಿತ್ತು ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಟ್ರಯಲ್ ಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪೀಠವು ಜೂನ್ 21 ರಂದು ಆದೇಶ ಕಾಯ್ದಿರಿಸಿ ಇಂದು ತನ್ನ ತೀರ್ಪು ಪ್ರಕಟಿಸಿದೆ.
ಕೋರ್ಟ್ ತಡೆ ನೀಡಿದ್ದರಿಂದ ಕೇಜ್ರಿವಾಲ್ ತಿಹಾರ್ ಜೈಲಿನಲ್ಲೇ (Tihar Jail) ಮುಂದುವರಿಯಬೇಕಾಗುತ್ತದೆ. ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಕೇಜ್ರಿವಾಲ್ ವಕೀಲರ ತಂಡ ಮುಂದಾಗಿದೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ ಬಂಧಿಸಿತ್ತು. ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2 ರಂದು ಅವರು ಮತ್ತೆ ಶರಣಾಗಿದ್ದರು.
ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ (B.S.Yediyurappa) ರಿಲೀಫ್ ಸಿಕ್ಕಿದೆ. ಮುಂದಿನ ವಿಚಾರಣೆ ತನಕ ಯಡಿಯೂರಪ್ಪ ವಿರುದ್ಧ ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಸೂಚಿಸಿದೆ.
ಪೋಕ್ಸೊ (POCSO) ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಯಡಿಯೂರಪ್ಪ ಅವರು ನಿರೀಕ್ಷಣಾ ಜಾಮೀನು ಹಾಗೂ ಪ್ರಕರಣ ರದ್ದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು, ಮುಂದಿನ ವಿಚಾರಣೆ ತನಕ ಬಲವಂತದ ಕ್ರಮಕೈಗೊಳ್ಳುವಂತಿಲ್ಲ ಎಂದು ಸೂಚಿಸಿದೆ.
ಯಡಿಯೂರಪ್ಪ ಪರ ವಾದ ಮಂಡಿಸಿದ ವಕೀಲ ನಾಗೇಶ್, ಲೈಂಗಿಕ ದೌರ್ಜನ್ಯ ಪ್ರಕರಣ ಜಾಮೀನು ಸಹಿತ ಪ್ರಕರಣ. ಜಾಮೀನು ನೀಡಬಹುದಾದ ಪ್ರಕರಣ. ಪ್ರಕರಣದಲ್ಲಿ ಆರೋಪಿಗೆ ಪೊಲೀಸ್ ಠಾಣೆಯಲ್ಲಿಯೇ ಜಾಮೀನು ನೀಡಬಹುದು. 7 ವರ್ಷದ ಕೆಳಗೆ ಶಿಕ್ಷೆ ಇರುವ ಪ್ರಕರಣ ಇದು. ಇದರಲ್ಲಿ ಬಂಧನದ ಅನಿವಾರ್ಯತೆ ಇಲ್ಲ. ಬಂಧನ ಮಾಡುವ ಪ್ರಕರಣ ಅಲ್ಲ. ಇಷ್ಟೆಲ್ಲಾ ರಕ್ಷಣೆ ಇದ್ದರೂ ಕೂಡ ಸಿಐಡಿ ಬಂಧನ ಮಾಡಲು ಆತುರದಲ್ಲಿ ಇದೆ. 41(0) ಅಡಿಯಲ್ಲಿ ನೋಟಿಸ್ ನೀಡಿದೆ. 7 ವರ್ಷದ ಶಿಕ್ಷೆ ಇರುವ ಪ್ರಕರಣಕ್ಕೆ ಬಂಧನ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಏನಿದು ಬಿಎಸ್‌ವೈ ವಿರುದ್ಧದ ಪೋಕ್ಸೊ ಕೇಸ್? – ಇಲ್ಲಿದೆ ನೋಡಿ ಟೈಮ್‌ಲೈನ್..
ಅಡ್ವೊಕೇಟ್ ಜನರಲ್ ಶಶಿಕಿರಣ್, ನೋಟಿಸ್ ನೀಡಿದ ಬಳಿಕ ಯಡಿಯೂರಪ್ಪ ಅವರು ದೆಹಲಿಗೆ ಟಿಕೆಟ್ ಬುಕ್ ಮಾಡಿದ್ರು. ಅವರ ಉದ್ದೇಶ ಬೆಂಗಳೂರು ಬಿಟ್ಟು ಹೋಗುವುದು ಆಗಿತ್ತು. ಮೊದಲು ದೆಹಲಿಗೆ ಹೋಗುವ ಉದ್ದೇಶ ಇರಲಿಲ್ಲ. ನೋಟಿಸ್ ಕೊಟ್ಟ ಕೂಡಲೇ ಟಿಕೆಟ್ ಬುಕ್ ಮಾಡಿದ್ರು. ರಾತ್ರಿ 9:30 ಕ್ಕೆ ಹೋದರು ಎಂದು ವಾದ ಮಂಡಿಸಿದರು.
ಅವರು ಎರಡು ಬಾರಿ ಮುಖ್ಯಮಂತ್ರಿ ಆಗಿದ್ರು. ರಾಜಕೀಯ ಕೆಲಸಗಳು ಇರಬಹುದು ಅಲ್ಲವಾ ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಸರ್ಕಾರಿ ವಕೀಲ ಜಗದೀಶ್, ಪ್ರಕರಣದ ಸಾಕ್ಷ್ಯವನ್ನು ನಾಶ ಮಾಡಿದ್ದಾರೆ. ಆರೋಪಿಗಳು ಸಂತ್ರಸ್ತೆಯ ಮೇಲೆ ಒತ್ತಡ ಬೀರಿದ್ದಾರೆ ಎಂದು ವಾದ ಮಂಡಿಸಿದರು.
ಇದಕ್ಕೆ ನ್ಯಾಯಾಧೀಶರು, ಅವರು ಮಾಜಿ ಮುಖ್ಯಮಂತ್ರಿ. ಕರ್ನಾಟಕಕ್ಕೆ ವಾಪಸ್ ಬರಲೇಬೇಕು ಅಲ್ಲವಾ? ಬಿಎಸ್‌ವೈ ಜೂನ್ 17ರಂದು ಬರುತ್ತೇನೆ ಎಂದಿದ್ದಾರೆ. ಅದಾಗ್ಯೂ, ಅವರನ್ನು ಬಂಧಿಸಬೇಕೆ? ಯಾರನ್ನು ಸಂತುಷ್ಟಗೊಳಿಸಲು ಎಂದು ಪ್ರಶ್ನಿಸಿದರು. ಅದಕ್ಕೆ ಅಡ್ವೊಕೇಟ್ ಜನರಲ್ ಮಾತನಾಡಿ, ಅವರ ವಿರುದ್ಧ ಬಲವಾದ ಸಾಕ್ಷ್ಯಗಳು ಇದ್ದಾವೆ. ಅದಕ್ಕಾಗಿಯೇ ವಾರೆಂಟ್ ಪಡೆದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಬಿಎಸ್‌ವೈ ಪರ ವಕೀಲ ನಾಗೇಶ್ ಮಾತನಾಡಿ, ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚನೆ ನೀಡಿ. ಈಗಾಗಲೇ ಆರೋಪಿ ವಿರುದ್ಧ ಅರೆಸ್ಟ್ ವಾರೆಂಟ್ ಮಾಡಿಸಿಕೊಂಡಿದ್ದಾರೆ. ಪ್ರಕರಣದ ವಿಚಾರಣೆಯನ್ನೇ ಮಾಡಬಾರದು ಎಂದು ವಾದ ಮಂಡಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಕೃಷ್ಣ ದೀಕ್ಷಿತ್ ಪೀಠವು, ಮುಂದಿನ ವಿಚಾರಣೆ ತನಕ ಒತ್ತಾಯದ ಕ್ರಮ ಮಾಡುವಂತಿಲ್ಲ. ಜೂನ್ 17ರಂದು ಯಡಿಯೂರಪ್ಪ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದೆ. ಇದನ್ನೂ ಓದಿ: ಅಗತ್ಯ ಬಿದ್ದರೆ ಬಿಎಸ್‍ವೈ ಅರೆಸ್ಟ್: ಪರಮೇಶ್ವರ್
ಗಾಂಧಿನಗರ: ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಮೇ 25ರಂದು ಗೇಮಿಂಗ್ ಝೋನ್‌ನಲ್ಲಿ ನಡೆದ ಅಗ್ನಿ ಅವಘಡ (Gaming Zone Fire Accident) ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಸರ್ಕಾರ (Gujarat Govt) ಸೋಮವಾರ 7 ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
ಅಗತ್ಯ ಅನುಮೋದನೆಗಳಿಲ್ಲದೇ ಗೇಮಿಂಗ್ ಝೋನ್ ಕಾರ್ಯನಿರ್ವಹಿಸಲು ಅನುಮತಿ ನೀಡಿದ್ದು ಅಧಿಕಾರಿಗಳ ನಿರ್ಲಕ್ಷ್ಯವನ್ನು ತೋರಿಸಿದೆ. ಹಾಗಾಗಿ ವಿಶೇಷ ತನಿಖಾ ತಂಡ (SIT) ಸಲ್ಲಿಸಿದ ವರದಿ ಆಧರಿಸಿ 7 ಅಧಿಕಾರಿಗಳನ್ನ ಅಮಾನತುಗೊಳಿಸಲಾಗಿದೆ. ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಕೆಲವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಅವರನ್ನ ಪತ್ತೆ ಮಾಡಿ ಬಂಧಿಸಲು 17 ತಂಡಗಳನ್ನ ರಚಿಸಲಾಗಿದೆ ಎಂದು ಗೃಹ ಸಚಿವ ಹರ್ಷ ಸಾಂಘ್ವಿ (Harsh Sanghavi) ತಿಳಿಸಿದ್ದಾರೆ. ಇದನ್ನೂ ಓದಿ: ಅದಾನಿ ಗ್ರೂಪ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಮೋದಿ, ರಾಹುಲ್‌ಗೆ ನಿರ್ದೇಶಿಸಿ: ಕೋರ್ಟ್‌ಗೆ ಅರ್ಜಿ ಸಲ್ಲಿಕೆ
ಹೈಕೋರ್ಟ್ ತರಾಟೆ ಬಳಿಕ ಎಚ್ಚೆತ್ತ ಸರ್ಕಾರ:
ರಾಜ್‌ಕೋಟ್‌ನ ಟಿಆರ್‌ಪಿ ಗೇಮಿಂಗ್ ಝೋನ್‌ನಲ್ಲಿ ಸಂಭವಿಸಿದ ಅಗ್ನಿಅವಘಡಕ್ಕೆ ಸಂಬಂಧಿಸಿದಂತೆ ಮುನ್ಸಿಪಲ್ ಕಾರ್ಪೊರೇಷನ್ ಅನ್ನು ಗುಜುರಾತ್ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಅಧಿಕಾರಿಗಳ ನಿರ್ಲಕ್ಷ್ಯ ಆಡಳಿತ ಯಂತ್ರದ ಮೇಲಿನ ನಂಬಿಕೆಯನ್ನು ಪ್ರಶ್ನಿಸುವಂತಾಗಿದೆ ಎಂದು ಹೇಳಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾ. ಬಿರೇನ್ ವೈಷ್ಣವ್ ಮತ್ತು ನ್ಯಾ.ದೇವನ್ ದೇಸಾಯಿ ಅವರನ್ನೊಳಗೊಂಡ ವಿಶೇಷ ಪೀಠ, ಗೇಮಿಂಗ್ ವಲಯ ನಿರ್ವಾಹಕರು ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್‌ನಿಂದ (Muncipal Corporation) ಕಡ್ಡಾಯ ಅನುಮತಿಗಳು ಮತ್ತು ಪರವಾನಗಿಗಳನ್ನು ತೆಗೆದುಕೊಂಡಿಲ್ಲ ಎಂದು ವರದಿಯಾಗಿದೆ. ಅಧಿಕಾರಿಗಳು ಏನು ನಿದ್ದೆ ಮಾಡುತ್ತಿದ್ದಾರ ಎಂದು ಖಾರವಾಗಿ ಪ್ರಶ್ನಿಸಿತ್ತು. ಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೆಲವೇ ಗಂಟೆಗಳಲ್ಲಿ ಸರ್ಕಾರ 7 ಅಧಿಕಾರಿಗಳನ್ನ ಅಮಾನತುಗೊಳಿದೆ. ಇದನ್ನೂ ಓದಿ: ಮುಂಬೈ ತಾಜ್ ಹೋಟೆಲ್, ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ – ಉತ್ತರ ಪ್ರದೇಶದಲ್ಲಿ ಲೊಕೇಶನ್ ಪತ್ತೆ!
ಡಿಎನ್‌ಎ ಮೂಲಕ ಗುರುತು ಪತ್ತೆ ಕಾರ್ಯ:
ಅಗ್ನಿ ದುರಂತಕ್ಕೆ ಸಿಕ್ಕಿ ಸಜೀವ ಹೊಂದಿರುವವರ ಗುರುತನ್ನು ಡಿಎನ್‌ಎ ಮೂಲಕ ಪತ್ತೆ ಮಾಡುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಶನಿವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ 7 ಅಪ್ರಾಪ್ತರು ಸೇರಿ 28 ಮಂದಿ ಸಾವನ್ನಪ್ಪಿದ್ದರು. ಈ ಪೈಕಿ ಒಬ್ಬರ ಮೃತದೇಹ ಮಾತ್ರ ನಾಪತ್ತೆಯಾಗಿದ್ದು, ಉಳಿದ ಮೃತದೇಹಗಳನ್ನ ಹೊರತೆಗೆಯಲಾಗಿದೆ. ಸೋಮವಾರವಾದ ಇಂದು ಟಿಆರ್‌ಪಿ ಗೇಮಿಂಗ್ ಝೋನ್ ಫೈರ್ ಸೈಟ್‌ನಿಂದ ಪತ್ತೆಯಾದ ಕನಿಷ್ಠ 5 ಸುಟ್ಟ ದೇಹಗಳ ಗುರುತುಗಳನ್ನು ಡಿಎನ್‌ಎ ಮೂಲಕ ದೃಢಪಡಿಸಲಾಗಿದೆ. ಉಳಿದ ಮಾದರಿಗಳ ಪರೀಕ್ಷೆ ನಡೆಯುತ್ತಿದ್ದು, ಶೀಘ್ರವೇ ಎಲ್ಲ ಮೃತ ದೇಹಗಳ ಗುರುತು ಪತ್ತೆಯಾಗಲಿದೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಣಾಳಿಕೆ ಭರವಸೆಯಿಂದಾಗುವ ಆರ್ಥಿಕ ಲಾಭ ಅಭ್ಯರ್ಥಿಯ ಭ್ರಷ್ಟಾಚಾರವಲ್ಲ – ಜಮೀರ್‌ಗೆ ಸುಪ್ರೀಂ ರಿಲೀಫ್
ಅಹಮದಾಬಾದ್: ರಾಜ್‌ಕೋಟ್‌ನ (Rajkot) ಟಿಆರ್‌ಪಿ ಗೇಮಿಂಗ್ ಝೋನ್‌ನಲ್ಲಿ (Gaming Zone) ಸಂಭವಿಸಿದ ಅಗ್ನಿಅವಘಡಕ್ಕೆ (Fire Accident) ಸಂಬಂಧಿಸಿದಂತೆ ಮುನ್ಸಿಪಲ್ ಕಾರ್ಪೊರೇಷನ್ (Muncipal Corporation) ಅನ್ನು ಗುಜುರಾತ್ ಹೈಕೋರ್ಟ್ (Gujarat Highcourt) ತೀವ್ರ ತರಾಟೆಗೆ ತೆಗೆದುಕೊಂಡಿದೆ. ಅಧಿಕಾರಿಗಳ ನಿರ್ಲಕ್ಷ್ಯ ಆಡಳಿತ ಯಂತ್ರದ ಮೇಲಿನ ನಂಬಿಕೆಯನ್ನು ಪ್ರಶ್ನಿಸುವಂತಾಗಿದೆ ಎಂದು ಹೇಳಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಬಿರೇನ್ ವೈಷ್ಣವ್ ಮತ್ತು ನ್ಯಾ.ದೇವನ್ ದೇಸಾಯಿ ಅವರನ್ನೊಳಗೊಂಡ ವಿಶೇಷ ಪೀಠ, ಗೇಮಿಂಗ್ ವಲಯ ನಿರ್ವಾಹಕರು ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್‌ನಿಂದ ಕಡ್ಡಾಯ ಅನುಮತಿಗಳು ಮತ್ತು ಪರವಾನಗಿಗಳನ್ನು ತೆಗೆದುಕೊಂಡಿಲ್ಲ ಎಂದು ವರದಿಯಾಗಿದೆ. ಅಧಿಕಾರಿಗಳು ಏನು ನಿದ್ದೆ ಮಾಡುತ್ತಿದ್ದಾರ ಎಂದು ಖಾರವಾಗಿ ಪ್ರಶ್ನಿಸಿದೆ. ಇದನ್ನೂ ಓದಿ: ನಕ್ಸಲರಿಂದ ನಿರಂತರ ಬೆದರಿಕೆ- ಪದ್ಮಶ್ರೀ ಹಿಂದಿರುಗಿಸಲು ಹೇಮಚಂದ್ ಮಾಂಝಿ ನಿರ್ಧಾರ
ನಮ್ಮ ಆದೇಶದ ನಾಲ್ಕು ವರ್ಷಗಳ ನಂತರವೂ ಅಗ್ನಿ ಸುರಕ್ಷತೆಯ ವಿಷಯದಲ್ಲಿ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಆರ್‌ಎಂಸಿ ಹೇಗೆ ಹೊಣೆಯಾಗುವುದಿಲ್ಲ? ಇದಕ್ಕೆ ಅಧಿಕಾರಿಗಳು ಹೊಣೆ. ಈ ಬಗ್ಗೆ ಪರಿಶೀಲನೆ ನಡೆಯದಿರುವುದು ಯಾರ ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿತು. ಇದನ್ನೂ ಓದಿ: ಇವಿಎಂ ಯಂತ್ರಗಳು ಏನು ಆಗದೇ ಹೋದರೆ ಸರಿ, ಜನ ನಮ್ಮ ಪರವಾಗಿದ್ದಾರೆ: ಡಿಕೆಶಿ
ಗೇಮಿಂಗ್ ಝೋನ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂಭತ್ತು ಮಕ್ಕಳು ಸೇರಿ 28 ಮಂದಿ ಸಾವನ್ನಪ್ಪಿದ್ದರು. ಘಟನೆ ಬಳಿಕ ಮಾಲೀಕ ಸೇರಿ ಮೂವರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಆರು ಅಧಿಕಾರಿಗಳನ್ನು ಅಮಾನತುಗೊಳಿಸಿ ಗುಜರಾತ್ ಸರ್ಕಾರ ಸೋಮವಾರ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಶಾರ್ಟ್‌ಸರ್ಕ್ಯೂಟ್‌ನಿಂದ ಎಲೆಕ್ಟ್ರಿಕ್ ಚಾರ್ಜಿಂಗ್ ಬ್ಯಾಟರಿ ಅಂಗಡಿ ಧಗಧಗ
ಬೆಂಗಳೂರು: ಇತ್ತೀಚೆಗಷ್ಟೇ ಅನುಮಾನಾಸ್ಪದ ಸಾವಿಗೀಡಾಗಿದ್ದ ಕೆಎಎಸ್ ಅಧಿಕಾರಿ ಪತ್ನಿಯೂ ಆಗಿರುವ ಹೈಕೋರ್ಟ್ ವಕೀಲರಾದ (High Court Lawyer) ಚೈತ್ರಾ ಗೌಡ ಅವರದ್ದು ಕೊಲೆಯಲ್ಲ, ಆತ್ಮಹತ್ಯೆ ಎಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಪುಷ್ಠಿಕೊಡುವಂತೆ ಡೆತ್ ನೋಟ್ ಸಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು (Sanjay Nagar Police ) ಮೂಲಗಳು ತಿಳಿಸಿವೆ.
ಇದೇ ತಿಂಗಳ ಮೇ 11ರಂದು ವಕೀಲೆ ಚೈತ್ರಾ ಗೌಡ ಸಂಜಯನಗರದ (SanjayNagar) ಅಣ್ಣಯ್ಯಪ್ಪ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದ್ರೆ ಚೈತ್ರಾ ಕುಟುಂಬಸ್ಥರು ಕೊಲೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಕೆಎಎಸ್ ಅಧಿಕಾರಿ (KAS, Officer) ಶಿವಕುಮಾರ್‌ನನ್ನು ಪೊಲೀಸರು ವಿಚಾರಣೆ ನಡೆಸಿದ್ದರು.
ಈ ನಡುವೆ ಕುಟುಂಬಸ್ಥರೊಂದಿಗೆ ಚೈತ್ರಾ ಮಾತನಾಡುವಾಗ ಮೂರು ತಿಂಗಳ ಹಿಂದೆಯೇ ಸಾಯೋ ಮಾತುಗಳನ್ನಾಡಿದ್ದರು, ಆಗ ಕುಟುಂಬಸ್ಥರೇ ಧೈರ್ಯತುಂಬಿದ್ದರು. ಆನಂತರವೇ ಚೈತ್ರಾ ಹಿಂದೆಯೇ ಡೆತ್ ನೋಟ್ ಬರೆದಿಟ್ಟಿದ್ದರು ಅನ್ನೋ ಮಾಹಿತಿಯೂ ತಿಳಿದುಬಂದಿದೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಸಂಜಯ್ ನಗರದ ಪೊಲೀಸರಿಗೆ, ಮನೆಯಲ್ಲಿ ಸಿಕ್ಕ ಡೆತ್ ನೋಟ್ ಚೈತ್ರಾ ಅವರೇ ಬರೆದಿದ್ದಾರೆ ಅನ್ನೋದು ಕನ್ಫರ್ಮ್ ಆಗಿದೆ. ಮರಣೋತ್ತರ ಪರೀಕ್ಷೆಯಲ್ಲೂ ಆಕೆ ಆತ್ಮಹತ್ಯೆ ಮಾಡಿಕೊಂಡಿರೋದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಂಜಯ್‌ನಗರ ಪೊಲೀಸರು ತನಿಖೆ ನಡೆಸಿ ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ. ಇದನ್ನೂ ಓದಿ: ಮತಗಟ್ಟೆವಾರು ದತ್ತಾಂಶ ನೀಡಿದ್ರೆ ದುರ್ಬಳಕೆ ಆಗಬಹುದು: ಚುನಾವಣಾ ಆಯೋಗ ಆತಂಕ
– ರೇವಣ್ಣ ಪರ ವಕೀಲ ಸಿವಿ ನಾಗೇಶ್ ವಾದ – ಮತ್ತಷ್ಟು ಸಮಯಾವಕಾಶ ಕೇಳಿದ ಎಸ್‌ಪಿಪಿ
ಬೆಂಗಳೂರು: ಸಂತ್ರಸ್ತೆಯನ್ನು ಕಿಡ್ನಾಪ್ (Kidnap) ಮಾಡಿಸಿದ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ (Judicial Custody) ಮಾಜಿ ಮಂತ್ರಿ ಹೆಚ್‌ಡಿ ರೇವಣ್ಣಗೆ (HD Revanna) ಇಂದು ಕೂಡ ಜಾಮೀನು (Bail) ಸಿಗಲಿಲ್ಲ. ಸುದೀರ್ಘ ವಿಚಾರಣೆ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೋಮವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಇಂದು ಬೆಳಗ್ಗೆ ಜಾಮೀನು (Bail) ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ (SIT) ಪರ ವಕೀಲರು ಮತ್ತಷ್ಟು ಸಮಯಾವಕಾಶ ಕೋರಿದರು. ಇದಕ್ಕೆ ಜಡ್ಜ್ ಆಕ್ಷೇಪ ವ್ಯಕ್ತಪಡಿಸಿದರು. ಪ್ರತಿ ದಿನ ಹೊಸ ವಿಶೇಷ ಸಾರ್ವಜನಿಕ ಅಭಿಯೋಜಕರು (SPP) ಬರುತ್ತಾರೆ. ಹಾಗೆಂದ ಮಾತ್ರಕ್ಕೆ ಸಮಯ ನೀಡಲು ಆಗುವುದಿಲ್ಲ. ನಾನು ವಾದ-ಪ್ರತಿವಾದ ಆಲಿಸಲು ರೆಡಿ ಇದ್ದೇನೆ. ನೀವು ಮಧ್ಯಾಹ್ನವೇ ವಾದ ಮಂಡಿಸಿ ಎಂದ ನ್ಯಾಯಾಧೀಶರು ಕೆಲ ಹೊತ್ತು ವಿಚಾರಣೆ ಮುಂದೂಡಿದರು. ಇದನ್ನೂ ಓದಿ: ಕರ್ನಾಟಕ ಬಿಜೆಪಿ ಐಟಿ ಸೆಲ್ ಸಂಚಾಲಕ ಪ್ರಶಾಂತ್ ಮಾಕನೂರು ಅರೆಸ್ಟ್
ಮಧ್ಯಾಹ್ನವೂ ಎಸ್‌ಐಟಿ ಪರ ವಕೀಲರು ಇದೇ ವಿಚಾರ ತಿಳಿಸಿದರೂ ನ್ಯಾಯಾಧೀಶರು ವಾದ-ಪ್ರತಿವಾದಕ್ಕೆ ಅವಕಾಶ ನೀಡಿದರು. ಈ ಸಂದರ್ಭದಲ್ಲಿ ರೇವಣ್ಣ ಪರ ವಕೀಲ ಸಿವಿ ನಾಗೇಶ್, ಕಿಡ್ನಾಪ್ ಪ್ರಕರಣದಲ್ಲಿ ರೇವಣ್ಣ ಪಾತ್ರ ಸಾಬೀತಾಗಿಲ್ಲ. ಪ್ರಕರಣವನ್ನು ಅಗತ್ಯಕ್ಕಿಂತ ಹೆಚ್ಚು ವೈಭವೀಕರಿಸಲಾಗಿದೆ. ಯಾರೋ ಬಂದು ಯಾರದ್ದೋ ಹೆಸರು ಹೇಳಿದ ಮಾತ್ರಕ್ಕೆ ಕಕ್ಷಿದಾರರು ಆರೋಪಿ ಆಗುವುದಿಲ್ಲ. ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದೆ. ಪ್ರಾದೇಶಿಕ ಪಕ್ಷದ ಮೇಲೆ ದಾಳಿ ನಡೆಸಲಾಗ್ತಿದೆ ಎಂದು ವಾದ ಮಂಡಿಸಿದರು. ಇದನ್ನೂ ಓದಿ: ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣಕ್ಕೆ ಟ್ವಿಸ್ಟ್- ಸಂತ್ರಸ್ತೆಗೆ ಮೂವರಿಂದ ಬೆದರಿಕೆ!
ಸಂತ್ರಸ್ತೆ ಸಿಕ್ಕಿದ್ದಾರೆ ಎನ್ನುತ್ತಿದ್ದಾರೆ. ಆದರೆ ಸಂತ್ರಸ್ತೆಯ ವಿವರ ನೀಡುತ್ತಿಲ್ಲ. ಸಂತ್ರಸ್ತೆ ಪತ್ತೆಯಾದ ಜಾಗದಲ್ಲಿ ಸ್ಥಳ ಮಹಜರು ನಡೆಸಿಲ್ಲ ಎಂದು ಎಸ್‌ಐಟಿ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು. ಇದೊಂದು ಸಾಮಾನ್ಯ ಪ್ರಕರಣ. ವಿಚಾರಣೆಗೂ ರೇವಣ್ಣ ಸಹಕರಿಸಿದ್ದಾರೆ. ಜಾಮೀನು ಮಂಜೂರು ಮಾಡಿ ಎಂದು ಮನವಿ ಮಾಡಿದರು.
ಇದಕ್ಕೆ ಎಸ್‌ಐಟಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಅಪಹರಣ ಪ್ರಕರಣ ಆರೋಪಿಯ ಮೇಲೆ ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಇದು ದೊಡ್ಡ ಅಪರಾಧ. ಅವರು ಹೊರಗೆ ಬಂದರೆ ಸಾಕ್ಷಿ ನಾಶ ಮಾಡುವ ಸಂಭವ ಇದೆ. ತಮಗೆ ವಾದ ಮುಂದುವರೆಸಲು ಸೋಮವಾರದವರೆಗೂ ಅವಕಾಶ ಬೇಕು ಎಂದು ಕೋರಿದರು. ಇದು ಕಾಲಹರಣ ಪ್ರಯತ್ನ ಎಂದು ರೇವಣ್ಣ ಪರ ವಕೀಲರು ದೂರಿದರು. ಕೊನೆಗೆ ವಿಚಾರಣೆಯನ್ನು ನ್ಯಾಯಾಧೀಶರು ಸೋಮವಾರಕ್ಕೆ ಮುಂದೂಡಿದರು.