Tag: high court

  • 4 ತಿಂಗಳ ಒಳಗಡೆ ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಪೂರ್ಣಗೊಳಿಸಿ: ಹೈಕೋರ್ಟ್‌

    4 ತಿಂಗಳ ಒಳಗಡೆ ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಪೂರ್ಣಗೊಳಿಸಿ: ಹೈಕೋರ್ಟ್‌

    ಬೆಂಗಳೂರು: ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಂ ಪಾರ್ಕ್ (Parashurama Theme Park) ಕಾಮಗಾರಿಯನ್ನು 4 ತಿಂಗಳ ಒಳಗಡೆ ಪೂರ್ಣಗೊಳಿಸುವಂತೆ ಉಡುಪಿ (Udupi) ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ (High Court) ಸೂಚನೆ ನೀಡಿದೆ.

    ಪರಶುರಾಮ ಪ್ರತಿಮೆ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ (High Court) ನ್ಯಾ.ಮೂ.ಎಂ.ನಾಗಪ್ರಸನ್ನ ಆದೇಶ ಪ್ರಕಟಿಸಿದ್ದಾರೆ.

    ಬಾಕಿ ಕೆಲಸ ಪೂರ್ಣಗೊಳಿಸುವುದಕ್ಕೆ ಸೂಕ್ತ ಭದ್ರತೆ ಹಾಗೂ ಅನುಕೂಲಕರ ವಾತಾವರಣ ನಿರ್ಮಿಸಿಕೊಡಿ‌ ಎಂದು ಕೃಷ್ಣ ನಾಯ್ಕ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶ ಪ್ರಕಟಗೊಂಡ ನಾಲ್ಕು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದೆ.  ಇದನ್ನೂ ಓದಿ: ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಗರ್ಭಿಣಿ – ದೂರು ನೀಡಿದ್ರೆ ಕೊಲೆ ಬೆದರಿಕೆ ಹಾಕಿದ್ದ ಯುವಕ

    ಷಡ್ಯಂತ್ರಕ್ಕೆ ಸೋಲು:
    ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು ತಕ್ಷಣ ಪ್ರಾರಂಭಿಸಿ ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಇದರೊಂದಿಗೆ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸ್ಥಗಿತಗೊಳಿಸಬೇಕೆಂದು ಸ್ಥಾಪಿತ ಹಿತಾಸಕ್ತಿಗಳು ನಡೆಸಿದ ಷಡ್ಯಂತ್ರಕ್ಕೆ ಸೋಲಾಗಿದ್ದು, ತಕ್ಷಣ ಕಾಮಗಾರಿ ಪ್ರಾರಂಭಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಸುನಿಲ್‌ ಕುಮಾರ್‌ ಎಕ್ಸ್‌ನಲ್ಲಿ ಬರೆದಿದ್ದಾರೆ.

    ಏನಿದು ಪ್ರಕರಣ?
    ಕಾರ್ಕಳ ಮಾಜಿ ಸಚಿವ, ಹಾಲಿ ಶಾಸಕ ಸುನೀಲ್‌ ಕುಮಾರ್‌ (Sunil Kumar) ಪರಶುರಾಮ ಥೀಮ್ ಪಾರ್ಕ್ ನಿರ್ಮಿಸಿದ್ದರು. ಕಾಮಗಾರಿ ಪೂರ್ಣಗೊಳ್ಳದೇ ಈ ಥೀಮ್‌ ಪಾರ್ಕ್‌ ಉದ್ಘಾಟನೆ ಮಾಡಲಾಗಿದೆ ಎಂದು ಕಾಂಗ್ರೆಸ್‌ (Congress) ಆರೋಪಿಸಿತ್ತು. ಈ ಸಂಬಂಧ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರೀಗ ಸಿಐಡಿ ತನಿಖೆಗೆ ಆದೇಶಿಸಿದ್ದರು. ಇದನ್ನೂ ಓದಿ: ಅಮಿತ್‌ ಶಾ ನಕಲಿ ವೀಡಿಯೋ ಪ್ರಕರಣ – ಕಾಂಗ್ರೆಸ್‌ ಕಾರ್ಯಕರ್ತ ಅರೆಸ್ಟ್‌

    ಉದ್ಘಾಟನೆಯಾದ ಬಳಿಕ ಸಿಡಿಲು ನಿರೋಧಕ ಅಳವಡಿಕೆ ಮತ್ತು ಇನ್ನಿತರ ಬಾಕಿ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಥೀಂ ಪಾರ್ಕ್ ಬಂದ್ ಮಾಡಿರುವ ವಿಚಾರವಾಗಿ, ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದರು. ಪರಶುರಾಮನ ಮೂರ್ತಿ ನಕಲಿ ಎನ್ನುವ ಮೂಲಕ ಹೊಸ ವಿವಾದ ಆರಂಭವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರಿಶೀಲನೆ ಮಾಡಿದ್ದರು. ಅಧಿಕಾರಿಗಳು ಸ್ಪಷ್ಟವಾದ ಮಾಹಿತಿ ನೀಡದ ಹಿನ್ನಲೆಯಲ್ಲಿ ತನಿಖೆಗೆ ಆದೇಶ ನೀಡಿದ್ದರು.

     

  • ರೋಹಿತ್‌ ವೆಮುಲಾ ದಲಿತ ವಿದ್ಯಾರ್ಥಿಯಲ್ಲ – ತನಿಖೆ ಪೂರ್ಣ, ಹೈಕೋರ್ಟ್‌ಗೆ  ಅಂತಿಮ ವರದಿ ಸಲ್ಲಿಕೆ

    ರೋಹಿತ್‌ ವೆಮುಲಾ ದಲಿತ ವಿದ್ಯಾರ್ಥಿಯಲ್ಲ – ತನಿಖೆ ಪೂರ್ಣ, ಹೈಕೋರ್ಟ್‌ಗೆ ಅಂತಿಮ ವರದಿ ಸಲ್ಲಿಕೆ

    – ಎಲ್ಲಾ ಆರೋಪಿಗಳಿಗೆ ಕ್ಲೀನ್‌ ಚಿಟ್‌
    – ತೆಲಂಗಾಣ ಪೊಲೀಸರಿಂದ ನ್ಯಾಯಾಲಯಕ್ಕೆ ವರದಿ ಸಲ್ಲಿಕೆ

    ಹೈದರಾಬಾದ್‌: ರೋಹಿತ್‌ ವೆಮುಲಾ (Rohit Vemula) ದಲಿತ ವಿದ್ಯಾರ್ಥಿಯಲ್ಲ. ತನ್ನ ಜಾತಿಯ (Caste)  ಗುರುತು ಬಹಿರಂಗವಾಗಬಹುದು ಎಂಬ  ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತೆಲಂಗಾಣ ಪೊಲೀಸರು (Telangana Police)  ಹೈಕೋರ್ಟ್‌ಗೆ ತಿಳಿಸಿ ಪ್ರಕರಣದ ತನಿಖೆಯನ್ನು ಕೊನೆಗೊಳಿಸಿದ್ದಾರೆ.

    2016ರ ಜನವರಿಯಲ್ಲಿ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ರೋಹಿತ್ ವೆಮುಲಾ ಅವರ ಆತ್ಮಹತ್ಯೆ ಬಳಿಕ ವಿಶ್ವವಿದ್ಯಾನಿಲಯಗಳಲ್ಲಿ ದಲಿತರ ಮೇಲಿನ ತಾರತಮ್ಯದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಗಿತ್ತು.

    ವೆಮುಲಾ ಕುಟುಂಬ ದಲಿತರು (Dalit) ಎಂಬುದನ್ನು ಸಾಬೀತು ಪಡಿಸಲು ಯಾವುದೇ ಸಾಕ್ಷ್ಯಾಧಾರಗಳು ಸಿಗದ ಕಾರಣ ಪೊಲೀಸರು ಈಗ ಪ್ರಕರಣದ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ವೆಮುಲಾ ಕುಟುಂಬದ ಜಾತಿ ಪ್ರಮಾಣ ಪತ್ರ ನಕಲಿಯಾಗಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಅಂತಿಮ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಗಾಂಧಿ ಕುಟುಂಬಕ್ಕೆ ರಾಯ್‌ಬರೇಲಿ ನಂಟು – ಇಲ್ಲಿದೆ ಕುತೂಹಲಕಾರಿ ಘಟ್ಟಗಳು

    ಹೈಕೋರ್ಟ್‌ ಈಗ ಕೆಳ ನ್ಯಾಯಾಲಯದಲ್ಲಿ ಈ ವರದಿಗೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸುವಂತೆ  ವೆಮುಲಾ ಕುಟುಂಬಸ್ಥರಿಗೆ ಸೂಚಿಸಿದೆ.

    ಸಿಕಂದರಾಬಾದ್‌ನ ಮಾಜಿ ಸಂಸದ ಬಂಡಾರು ದತ್ತಾತ್ರೇಯ, ಎಂಎಲ್‌ಸಿ ಎನ್. ರಾಮಚಂದರ್ ರಾವ್, ಹೈದರಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿ ಅಪ್ಪಾ ರಾವ್, ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಎಬಿವಿಪಿ ಮುಖಂಡರು ಸೇರಿದಂತೆ ಹಲವಾರನ್ನು ಪ್ರಕರಣದ ಆರೋಪಿಗಳನ್ನಾಗಿ ಮಾಡಲಾಗಿತ್ತು.ಈಗ ಪೊಲೀಸರು ಎಲ್ಲರನ್ನು ಆರೋಪದಿಂದ ಕೈ ಬಿಟ್ಟಿದ್ದಾರೆ.

    ರೋಹಿತ್ ಅವರ ಸಹೋದರ ರಾಜಾ ವೇಮುಲಾ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿ, ಇದೊಂದು ಅಸಂಬದ್ಧ ವರದಿ. ನನ್ನ ಭಾವನೆಗಳನ್ನು ಹೇಗೆ ವ್ಯಕ್ತಪಡಿಸಬೇಕೆಂದು ನನಗೆ ತಿಳಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮೇ 4 ರಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಲು ಕುಟುಂಬ ಮುಂದಾಗಿದೆ. 2017 ರಲ್ಲಿ ಪೊಲೀಸರು ತನಿಖೆಯನ್ನು ನಿಲ್ಲಿಸಿದ್ದಾರೆ ಮತ್ತು ಜಾತಿ ದೃಢೀಕರಣದ ವಿಷಯದಲ್ಲಿ 15 ಸಾಕ್ಷಿಗಳ ಹೇಳಿಕೆಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಅವರು ಟೀಕಿಸಿದರು. ಇದನ್ನೂ ಓದಿ: ಚುನಾವಣೆ ಕಾರಣಕ್ಕೆ ಮೇ 7 ರಂದು ಕೇಜ್ರಿವಾಲ್‌ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ: ಸುಪ್ರೀಂ

    2015ರಲ್ಲಿ ನಡೆದ ಪ್ರಕರಣ ಏನು? ಆರೋಪ ಏನು?
    26 ವರ್ಷದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೆಮುಲಾ ಸೇರಿದಂತೆ ವಿವಿಯ ಐದು ವಿದ್ಯಾರ್ಥಿಗಳು ಪ್ರತಿಭಟನೆಯೊಂದರ ವೇಳೆ ಎಬಿವಿಪಿ ವಿದ್ಯಾರ್ಥಿ ನಾಯಕರ  ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿತ್ತು. ನಂತರ ಐವರನ್ನೂ ಕಾಲೇಜಿನಿಂದ ಅಮಾನತು ಮಾಡಲಾಗಿತ್ತು. ವಿವಿ ವಿಚಾರಣೆ ಬಳಿಕ ರೋಹಿತ್ ಸೇರಿ ಎಲ್ಲರನ್ನೂ ಆರೋಪ ಮುಕ್ತಗೊಳಿಸಲಾಗಿತ್ತು.

    ಸಿಕಂದರಬಾದ್ ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡಿ, ವಿವಿ ಜಾತಿವಾದಿಗಳ, ಉಗ್ರವಾದಿಗಳ, ದೇಶವಿರೋಧಿ ರಾಜಕೀಯದ ಬೀಡಾಗಿದ್ದು, ಎಬಿವಿಪಿ ಮುಖಂಡನ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳದೆ ವಿವಿ ಮೂಕಪ್ರೇಕ್ಷಕನಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿಗೆ ಪತ್ರ ಬರೆದು ದೂರು ನೀಡಿದ್ದರು.

    ಈ ಪತ್ರದ ಬಳಿಕ ಮಾನವ ಸಂಪನ್ಮೂಲ ಸಚಿವಾಲಯ ವಿವಿಗೆ ಪತ್ರ ಬರೆದು ವಿದ್ಯಾರ್ಥಿಗಳ ಮೇಲೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನೆ ಮಾಡಿತ್ತು. ಪತ್ರದ ಹಿನ್ನೆಲೆಯಲ್ಲಿ ವಿವಿ ಡಿ. 21ರಂದು ರೋಹಿತ್ ಮತ್ತು ಇತರ ನಾಲ್ವರನ್ನು ಅಮಾನತುಗೊಳಿಸಿ, ಹಾಸ್ಟೆಲ್ ಮತ್ತು ಕೆಫೆಟೇರಿಯಾದಿಂದಲೂ ಹೊರ ಹಾಕಿತ್ತು. ಅಮಾನತು ಮಾಡಿದ್ದಕ್ಕೆ 2016ರ ಜನವರಿ 17 ರಂದು ರೋಹಿತ್‌ ವೆಮುಲಾ ಮನನೊಂದು ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷಗಳು ದೇಶವ್ಯಾಪಿ ಪ್ರತಿಭಟನೆ ನಡೆಸಿದ್ದವು.

    ರೋಹಿತ್‌ ವೆಮುಲಾ ಪಿಎಚ್‌ಡಿ ಸಂಶೋಧನೆ ಮಾಡುತ್ತಿದ್ದಾಗ ಪ್ರತಿ ತಿಂಗಳು 25 ಸಾವಿರ ರೂ. ಫೆಲೋಶಿಪ್‌ ಪಡೆಯುತ್ತಿದ್ದರು. ನಿಗದಿತ ಸಮಯದಲ್ಲಿ ಕೆಲಸ ಪೂರ್ಣಗೊಳ್ಳದ ಕಾರಣ ವೆಮುಲಾಗೆ ಬರುತ್ತಿದ್ದ ಫೆಲೋಶಿಪ್‌ ನಿಲ್ಲಿಸಲಾಗಿತ್ತು.

  • ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಬೆದರಿಕೆ ಕೇಸ್‌ – ಡಿಕೆಶಿ ವಿರುದ್ಧದ ಎಫ್‌ಐಆರ್‌ಗೆ ತಡೆ

    ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಬೆದರಿಕೆ ಕೇಸ್‌ – ಡಿಕೆಶಿ ವಿರುದ್ಧದ ಎಫ್‌ಐಆರ್‌ಗೆ ತಡೆ

    ಬೆಂಗಳೂರು: ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ವಿರುದ್ಧ ದಾಖಲಾದ ಎಫ್‌ಐಆರ್‌ಗೆ (FIR) ಹೈಕೋರ್ಟ್‌ (High Court) ತಡೆ ನೀಡಿದೆ.

    ಚುನಾವಣಾ ಅಧಿಕಾರಿಗಳ ದೂರಿನ ಹಿನ್ನೆಲೆಯಲ್ಲಿ ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನ್ಯಾ. ಕೃಷ್ಣ ದೀಕ್ಷಿತ್‌ ಅವರಿದ್ದ ಏಕ ಸದಸ್ಯ ಪೀಠದಲ್ಲಿ ನಡೆಯಿತು. ವಿಚಾರಣೆ ನಡೆಸಿದ ಕೋರ್ಟ್‌ ಭಾಷಣದ ವೇಳೆ ಇದು ಪುನರಾವರ್ತನೆಯಾಗದಂತೆ ಕಕ್ಷಿದಾರರಿಗೆ ಎಚ್ಚರಿಸಿ ಎಂದು ಡಿಕೆಶಿ ಪರ ವಕೀಲ ಉದಯ್ ಹೊಳ್ಳಗೆ ಸೂಚಿಸಿ ಪ್ರಕರಣಕ್ಕೆ ತಡೆ ನೀಡಿತು.  ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋತು ಜೀವನದಲ್ಲಿ ಗೆದ್ದವರು!

    ಚುನಾವಣೆ ಭಾಷಣವನ್ನು ಆಮಿಷವೆಂದು ಆರೋಪಿಸಲಾಗಿದೆ ಎಂದು ಡಿಕೆಶಿ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡಿಸಿದರು. ಈ ವಾದಕ್ಕೆ ಆಯೋಗದ ಪರ ವಕೀಲ ಶರತ್ ದೊಡ್ಡವಾಡ್ ಆಕ್ಷೇಪ ವ್ಯಕ್ತಪಡಿಸಿದರು. ಇದನ್ನೂ ಓದಿ: ಸುರೇಶ್‌ಗೆ ವೋಟ್ ಹಾಕಿಲ್ಲ ಅಂದ್ರೆ ಹಕ್ಕು ಪತ್ರ ನೀಡಲ್ಲ: ಡಿಕೆಶಿಯಿಂದ ಬೆದರಿಕೆ, ಬಿಜೆಪಿ ಕಿಡಿ

    ನಾನು ಇಲ್ಲಿ ಬಿಸಿನೆಸ್ ಡೀಲ್‌ಗೆ ಬಂದಿದ್ದೇನೆ. ನಿಮಗೆ ಹೆಚ್ಚು ಕಾವೇರಿ ನೀರು ಬೇಕೆಂದು ಕೇಳಿದ್ದೀರಿ. ನೀವು ಅಪಾರ್ಟ್ ಮೆಂಟ್ ಪಕ್ಕದ ಸಿಎ ಸೈಟ್ ಬೇಕೆಂದು ಕೇಳಿದ್ದೀರಿ. ನೀವು ನಮಗೆ ಮತ ಹಾಕಿದ 2-3 ತಿಂಗಳಲ್ಲಿ ನಿಮಗೆ ಹಸ್ತಾಂತರಿಸುತ್ತೇನೆ ಎಂದು ಮತದಾರರಿಗೆ ಡಿ. ಕೆ ಶಿವಕುಮಾರ್ ಆಮಿಷ ಒಡ್ಡಿದ್ದರು ಎಂದು ಶರತ್ ದೊಡ್ಡವಾಡ್ ವಾದಿಸಿದರು.

    ಎರಡು ಕಡೆಯ ವಾದ ಆಲಿಸಿ ಚುನಾವಣೆ ಪ್ರಚಾರದ ಗುಣಮಟ್ಟ ಕುಸಿತಕ್ಕೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿತು. ಭಾಷಣದ ವೇಳೆ ಇದು ಪುನರಾವರ್ತನೆಯಾಗದಂತೆ ಎಚ್ಚರಿಸಿ ಮುಂದಿನ ವಿಚಾರಣೆ ನಡೆಯುವರೆಗೂ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿತು.

  • ರಾಜಾ ಅಮರೇಶ್ವರ ನಾಯಕ ಜಾತಿ ಪ್ರಮಾಣ ಪತ್ರ ಗೊಂದಲ- ಏ.19ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

    ರಾಜಾ ಅಮರೇಶ್ವರ ನಾಯಕ ಜಾತಿ ಪ್ರಮಾಣ ಪತ್ರ ಗೊಂದಲ- ಏ.19ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

    ರಾಯಚೂರು: ಇಲ್ಲಿನ ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ (Raja Amareshwar Nayak) ಅವರ ಜಾತಿ ಪ್ರಮಾಣ ಪತ್ರದ ವಿರುದ್ಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನ ಕಲಬುರಗಿ ಹೈಕೋರ್ಟ್ (High Court) ಪೀಠ ಏ.19ಕ್ಕೆ ಮುಂದೂಡಿದೆ. ಇದರಿಂದ ನಾಮಪತ್ರ ಸಲ್ಲಿಸುವ ಕೊನೆಯ ದಿನವೇ ತೀರ್ಪು ಹೊರಬೀಳುವ ಸಾಧ್ಯತೆಯಿದೆ.

    ರಾಜಾ ಅಮರೇಶ್ವರ ನಾಯಕ ಕ್ಷತ್ರಿಯ ಸಮುದಾಯಕ್ಕೆ ಸೇರಿದ್ದು, ಎಸ್‍ಟಿ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ನಾಯಕ ಸಮುದಾಯದ ಮುಖಂಡ ನರಸಿಂಹ ನಾಯಕ್ ಎಂಬವರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಏ.19ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಅಲ್ಲದೇ ಏ.19 ರಂದು ಜಾತಿ ಬಗ್ಗೆ ಅಫಿಡೆವಿಟ್ ಸಲ್ಲಿಸುವಂತೆ ಕೋರ್ಟ್ ರಾಜಾ ಅಮರೇಶ್ವರ ನಾಯಕ ಅವರಿಗೆ ಸೂಚಿಸಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ – ಶಂಕಿತರು 10 ದಿನ ಎನ್‍ಐಎ ಕಸ್ಟಡಿಗೆ

    ಏ.18 ಕ್ಕೆ ಬೃಹತ್ ರ್ಯಾಲಿ ಮೂಲಕ ನಾಮಪತ್ರ ಸಲ್ಲಿಕೆಗೆ ಮುಂದಾಗಿರುವ ರಾಜಾ ಅಮರೇಶ್ವರ ನಾಯಕ ಅವರಿಗೆ ಇದೀಗ ನ್ಯಾಯಾಲಯದ ತೀರ್ಪಿನ ಆತಂಕ ಶುರುವಾಗಿದೆ. ವಿರುದ್ಧ ತೀರ್ಪು ಬಂದರೆ ಈ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯೇ ಇಲ್ಲದಂತೆ ಆಗಲಿದೆಯೇ ಎಂಬ ಪ್ರಶ್ನೆ ಕೂಡ ಎದುರಾಗಿದೆ. ಇದರ ನಡುವೆ ಟಿಕೆಟ್ ವಂಚಿತ ಆಕಾಂಕ್ಷಿ ಬಿ.ವಿ.ನಾಯಕ್ ಸಹ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಸುಪ್ರೀಂನಿಂದ ಸದ್ಯಕ್ಕಿಲ್ಲ ರಿಲೀಫ್ – ಏ.29 ರಂದು ಕೇಜ್ರಿವಾಲ್ ಅರ್ಜಿ ವಿಚಾರಣೆ

  • ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಕೇಜ್ರಿವಾಲ್ ಮೇಲ್ಮನವಿ ಸಲ್ಲಿಕೆ

    ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಕೇಜ್ರಿವಾಲ್ ಮೇಲ್ಮನವಿ ಸಲ್ಲಿಕೆ

    ನವದೆಹಲಿ : ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಸುಪ್ರೀಂಕೋರ್ಟ್‌‌ಗೆ (Supreme Court) ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಮಂಗಳವಾರ ಹೈಕೋರ್ಟ್ ನಲ್ಲಿ ತಮ್ಮ ಅರ್ಜಿ ವಜಾ ಆದ ಹಿನ್ನೆಲೆ ಸುಪ್ರೀಂಕೋರ್ಟ್ ನಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಲಾಗಿದೆ.

    ಅರ್ಜಿ ಸಲ್ಲಿಕೆ ಬೆನ್ನಲ್ಲೇ ದೆಹಲಿ ಹೈಕೋರ್ಟ್ (High Court) ತೀರ್ಪಿನ ವಿರುದ್ಧ ಕೇಜ್ರಿವಾಲ್ ಅವರ ಮನವಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಕೋರಿ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ಮನವಿ ಮಾಡಿದರು. ಬಂಧನವು ಅವಲಂಬಿತ ದಾಖಲೆಯನ್ನು ಆಧರಿಸಿದೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಮಾಹಿತಿಯನ್ನು ಇಮೇಲ್ ಕಳುಹಿಸಿ ಪರಿಶೀಲಿಸಲಾಗುವುದು ಎಂದು ಸೂಚಿಸಿದರು.

    ಹಗರಣದಲ್ಲಿ ಕೇಜ್ರಿವಾಲ್ ಶಾಮೀಲಾಗಿರುವುದನ್ನು ಸಾಬೀತುಪಡಿಸಲು ಪುರಾವೆಗಳಿವೆ ಎಂದು ಇಡಿ ಹೇಳಿದೆ. ಕಿಕ್‌ಬ್ಯಾಕ್ ಆಗಿ ಪಡೆದ ಹಣವನ್ನು 2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪ್ರಚಾರಕ್ಕಾಗಿ ಬಳಸಲಾಗಿದೆ ಎಂದು ಇದಕ್ಕೆ ಸಂಬಂಧಿಸಿದ ಲಿಂಕ್‌ಗಳು ಸಹ ಪತ್ತೆಯಾಗಿದೆ ಎಂದು ಇಡಿ ಹೇಳಿದೆ. ಹೀಗಾಗಿ ಬಂಧನ ಕಾನೂನು ಬಾಹಿರವಾಗಿಲ್ಲ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು.

    2 ಸಭೆಗಳಿಗೆ ಅನುಮತಿ: ಈ‌ ನಡುವೆ ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಕೇಜ್ರಿವಾಲ್ ವಾರಕ್ಕೆ ಐದು ಸಭೆಗಳಿಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರೋಸ್ ಅವೆನ್ಯೂ ಕೋರ್ಟ್ ವಜಾ ಮಾಡಿದೆ. ಸದ್ಯಕ್ಕೆ ವಾರಕ್ಕೆ ಎರಡು ಸಭೆಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಇದನ್ನು ಐದಕ್ಕೆ ಹೆಚ್ಚಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಇಡಿ, ಒಬ್ಬ ವ್ಯಕ್ತಿ ಒಮ್ಮೆ ಜೈಲಿನಲ್ಲಿದ್ದರೆ, ಹೊರಗೆ ಅವರ ನಿಲುವು ಅಪ್ರಸ್ತುತವಾಗುತ್ತದೆ. ಅವರನ್ನು ಇತರರಂತೆ ಸಮಾನವಾಗಿ ನೋಡಬೇಕಾಗುತ್ತದೆ ಎಂದು ವಾದಿಸಿತು. ಇದಕ್ಕೆ ಒಪ್ಪಿದ ಕೋರ್ಟ್ ಹೆಚ್ಚುವರಿ ಸಭೆಗಳು ನಡೆಸಲು ಅನುಮತಿ ನೀಡಲು ನಿರಾಕರಿಸಿತು.

  • ಕೇಜ್ರಿವಾಲ್‌ ಇತರರೊಂದಿಗೆ ಸೇರಿ ಪಿತೂರಿ ನಡೆಸಿದ್ದಾರೆ – ಜಾಮೀನು ಅರ್ಜಿ ವಜಾ

    ಕೇಜ್ರಿವಾಲ್‌ ಇತರರೊಂದಿಗೆ ಸೇರಿ ಪಿತೂರಿ ನಡೆಸಿದ್ದಾರೆ – ಜಾಮೀನು ಅರ್ಜಿ ವಜಾ

    ನವದೆಹಲಿ: ದೆಹಲಿ ಮದ್ಯ ಹಗರಣಕ್ಕೆ (Delhi Liquor Scam) ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಬಂಧಿಸಿದ್ದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ (Delhi CM) ಅರವಿಂದ್ ಕೇಜ್ರಿವಾಲ್ (Aravind Kejriwal) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ (High Court) ಮಂಗಳವಾರ ವಜಾಗೊಳಿಸಿದೆ.

    ಅರವಿಂದ್ ಕೇಜ್ರಿವಾಲ್ ಅವರು “ಇತರರೊಂದಿಗೆ ಪಿತೂರಿ ನಡೆಸಿದ್ದಾರೆ” ಮತ್ತು”ಅಪರಾಧದ ಆದಾಯವನ್ನು ಬಳಸಿಕೊಳ್ಳುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ” ಎಂದು ಜಾರಿ ನಿರ್ದೇಶನಾಲಯ ಹಂಚಿಕೊಂಡ ವಿವರವನ್ನು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.

    ರದ್ದುಗೊಂಡಿರುವ ಮದ್ಯ ನೀತಿಯನ್ನು ರೂಪಿಸುವಲ್ಲಿ ಮತ್ತು ಕಿಕ್‌ಬ್ಯಾಕ್‌ಗೆ ಬೇಡಿಕೆಯಿಡುವಲ್ಲಿ ಕೇಜ್ರಿವಾಲ್ ಭಾಗಿಯಾಗಿದ್ದಾರೆ ಎಂದು ಹೈಕೋರ್ಟ್ ಹೇಳಿದೆ. ಪೂರಕ ಸಾಕ್ಷ್ಮಧಾರಗಳಿರುವ ಹಿನ್ನಲೆಯಲ್ಲಿ ಕೇಜ್ರಿವಾಲ್‌ ಬಂಧನ ಕಾನೂನು ಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟ ಕೋರ್ಟ್‌ ಕೇಜ್ರಿವಾಲ್‌ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

     

  • ಹೈಕೋರ್ಟ್‍ನಲ್ಲಿ ವಾದ ಮಂಡಿಸಿದ ಶ್ರವಣ ದೋಷದ ವಕೀಲೆ ಸಾರಾ ಸನ್ನಿ

    ಹೈಕೋರ್ಟ್‍ನಲ್ಲಿ ವಾದ ಮಂಡಿಸಿದ ಶ್ರವಣ ದೋಷದ ವಕೀಲೆ ಸಾರಾ ಸನ್ನಿ

    – ಸ್ಕಾಟ್ಲೆಂಡ್ ಪತಿ, ಬೆಂಗ್ಳೂರು ಪತ್ನಿಯ ಕೌಟುಂಬಿಕ ಕಲಹ ಪ್ರಕರಣ
    – ವಾದವನ್ನು ಭಾಷಾಂತರಕ್ಕೆ ಅವಕಾಶ

    ಬೆಂಗಳೂರು: ರಾಜ್ಯದ ಹೈಕೋರ್ಟ್‍ನಲ್ಲಿ (High Court) ದೇಶದ ಮೊದಲ ಶ್ರವಣ ದೋಷದ ವಕೀಲೆ ಸಾರಾ ಸನ್ನಿ (Sarah Sunny) ವಾದ ಮಂಡಿಸಿ ಇತಿಹಾಸ ನಿರ್ಮಿಸಿದ್ದಾರೆ. ಕೌಟುಂಬಿಕ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ಪ್ರಕರಣದ ಬಗ್ಗೆ ವಕೀಲೆ ಸಾರಾಸನ್ನಿ ವಾದ ಮಂಡಿಸಿದ್ದಾರೆ.

    ಸ್ಕಾಟ್ಲೆಂಡ್ ಪೌರತ್ವ ಹೊಂದಿರುವ ಪತಿ ಹಾಗೂ ಬೆಂಗಳೂರಿನಲ್ಲಿರುವ ಪತ್ನಿ ನಡುವಿನ ವ್ಯಾಜ್ಯದ ಪ್ರಕರಣ ಇದಾಗಿದೆ. ಪತಿ ವಿರುದ್ಧ ಬಸವನಗುಡಿ ಪೊಲೀಸ್ (Basavanagudi Police) ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಲುಕ್‍ಔಟ್ ನೋಟಿಸ್ ಕೂಡಾ ಜಾರಿಯಾಗಿತ್ತು. ಇದನ್ನ ರದ್ದು ಪಡಿಸಲು ಹೈಕೋರ್ಟ್‍ಗೆ ಮಹಿಳೆಯ ಪತಿ ಅರ್ಜಿ ಸಲ್ಲಿಸಿದ್ದ. ಇದನ್ನೂ ಓದಿ: ಕೇಂದ್ರ, ರಾಜ್ಯದ ನಡುವೆ ಸ್ಪರ್ಧೆ ಬೇಡ – ಬರ ಪರಿಹಾರ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಸಲಹೆ

    ಮುಂಬೈನ ಥಾಣೆ ಜಿಲ್ಲೆಯ ವ್ಯಕ್ತಿ 2004ರಲ್ಲಿ ಉನ್ನತ ಶಿಕ್ಷಣಕ್ಕಾಗಿ ಸ್ಕಾಟ್ಲೆಂಡ್‍ಗೆ ತೆರಳಿದ್ದ. ಸದ್ಯ ಅಲ್ಲಿಯೇ ಬ್ಯಾಂಕ್ ಅಧಿಕಾರಿಯಾಗಿದ್ದು ಬ್ರಿಟಿಷ್ ಪೌರತ್ವ ಪಡೆದಿದ್ದಾನೆ. ಆತನಿಗೆ ಈಗ 41 ವರ್ಷ ವಯಸ್ಸಾಗಿದ್ದು, ಮೊದಲ ಪತ್ನಿಯಿಂದ ವಿಚ್ಛೇದನ ಪಡೆದಿದ್ದು, ಆನ್‍ಲೈನ್ ತಾಣದ ಮೂಲಕ ಬೆಂಗಳೂರಿನ 36 ವರ್ಷದ ಮಹಿಳೆಯನ್ನು 2023ರ ಮೇ 21ರಂದು ವಿವಾಹವಾಗಿದ್ದ. ಆತನ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆಯ ವಿವಿಧ ಸೆಕ್ಷನ್‍ಗಳ ಅಡಿ ಪ್ರಕರಣ ದಾಖಲಾಗಿದ್ದು, ಬಸವನಗುಡಿ ಠಾಣೆ ಪೊಲೀಸರು ಪತಿಯ ವಿರುದ್ಧ ಲುಕ್‍ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ.

    ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿತು. ಪತ್ನಿ ಪರವಾಗಿ ವಕಾಲತ್ತು ವಹಿಸಿದ ಶ್ರವಣದೋಷ ಹೊಂದಿರುವ ವಕೀಲೆ ಸಾರಾ ಸನ್ನಿ ವಾದ ಮಂಡಿಸಿದರು. ಸಾರಾ ಸನ್ನಿಯವರ ವಾದವನ್ನ ಭಾಷಾಂತರಕ್ಕೆ ಅವಕಾಶ ನೀಡಲಾಯಿತು. ಈಗಾಗಲೇ ಸಾರಾಸನ್ನಿಯವರು ಸುಪ್ರೀಂ ಕೋರ್ಟ್‍ನಲ್ಲಿ ವಾದ ಮಂಡಿಸಿದ್ದರು. ನ್ಯಾಯಾಲಯ ಏ.19ಕ್ಕೆ ವಿಚಾರಣೆ ಮುಂದೂಡಿದೆ. ಇದನ್ನೂ ಓದಿ: 5,8,9ನೇ ತರಗತಿ ಪಬ್ಲಿಕ್ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ತಡೆ

  • ಸಿಎಂ ಸ್ಥಾನದಿಂದ ಕೇಜ್ರಿವಾಲ್ ಕೆಳಗಿಳಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ

    ಸಿಎಂ ಸ್ಥಾನದಿಂದ ಕೇಜ್ರಿವಾಲ್ ಕೆಳಗಿಳಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ

    ನವದೆಹಲಿ : ಆಮ್ ಆದ್ಮಿ ಪಕ್ಷದ (AAP) ನಾಯಕ ಅರವಿಂದ್ ಕೇಜ್ರಿವಾಲ್ (Aravind Kejriwal) ಅವರನ್ನು ದೆಹಲಿ ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಪರಿಗಣಿಸಲು ದೆಹಲಿ ಹೈಕೋರ್ಟ್ (Delhi High Court) ಗುರುವಾರ ನಿರಾಕರಿಸಿದೆ.

    ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ (Delhi Liquor Scam) ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸುವಂತೆ ಉಲ್ಲೇಖಿಸಿ ಹಿಂದೂ ಸೇನಾ ಎಂಬ ಸಂಘಟನೆಯ ಅಧ್ಯಕ್ಷರಾಗಿರುವ ವಿಷ್ಣು ಗುಪ್ತಾ ಅವರು ಸಲ್ಲಿಸಿದ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾ. ಮನಮೋಹನ್ ನೇತೃತ್ವದ ವಿಭಾಗೀಯ ಪೀಠವು ಸಿಎಂ ಆಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬುದು ಕೇಜ್ರಿವಾಲ್ ಅವರ ವೈಯಕ್ತಿಕ ಕರೆ ಎಂದು ಹೇಳಿದೆ. ಇದನ್ನೂ ಓದಿ: ಪುಲ್ವಾಮ ದಾಳಿ ಮಾಡಿಸಿದ್ದು ಬಿಜೆಪಿ, ಸರ್ಜಿಕಲ್ ಸ್ಟ್ರೈಕ್ ನಾಟಕ: ಎಸ್.ಆರ್ ಶ್ರೀನಿವಾಸ್

     

    court order law

    ಕೆಲವೊಮ್ಮೆ ವೈಯಕ್ತಿಕ ಹಿತಾಸಕ್ತಿಯು ರಾಷ್ಟ್ರೀಯ ಹಿತಾಸಕ್ತಿಗೆ ಅಧೀನವಾಗಿರಬೇಕು ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿ ಕೋರ್ಟ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಥವಾ ಮುಂದುವರಿಯುವುದು ಅದು ಅವರ ವೈಯಕ್ತಿಕ ನಿರ್ಧಾರ. ಈ ವಿಷಯವನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

    ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅಥವಾ ಭಾರತದ ರಾಷ್ಟ್ರಪತಿಗಳು ಈ ವಿಷಯದ ಬಗ್ಗೆ ಕರೆಯನ್ನು ತೆಗೆದುಕೊಳ್ಳುಬಹುದು. ಸರ್ಕಾರ ಕಾರ್ಯನಿರ್ವಹಿಸುತ್ತಿಲ್ಲ ಎಂದು ನಾವು ಹೇಗೆ ಘೋಷಿಸಲು ಸಾಧ್ಯ? ಅದನ್ನು ನಿರ್ಧರಿಸಲು ಎಲ್‌ಜಿ ಸಂಪೂರ್ಣ ಸಮರ್ಥರಾಗಿದ್ದಾರೆ. ಅವರಿಗೆ ನಮ್ಮ ಮಾರ್ಗದರ್ಶನ ಅಗತ್ಯವಿಲ್ಲ. ಅವರಿಗೆ ಸಲಹೆ ನೀಡಲು ನಾವು ಯಾರೂ ಅಲ್ಲ. ಅವರು ಕಾನೂನಿನ ಪ್ರಕಾರ ಏನು ಮಾಡಬೇಕೋ ಅದನ್ನು ಮಾಡುತ್ತಾರೆ ಎಂದು ನ್ಯಾಯಾಲಯ ವಿಚಾರಣೆ ಸಮಯದಲ್ಲಿ ಹೇಳಿದೆ. ಇದನ್ನೂ ಓದಿ: ನಾಮಪತ್ರ ಸಲ್ಲಿಸಿದ ಡಾ.ಮಂಜುನಾಥ್ – ಡಿಕೆಸು ನೋಡಿ ಮೋದಿ ಘೋಷಣೆ ಕೂಗಿದ ಕಾರ್ಯಕರ್ತರು

    ಸಮಸ್ಯೆಯನ್ನು ನಿರ್ಧರಿಸಲು ರಾಷ್ಟ್ರಪತಿ ಅಥವಾ ಎಲ್‌ಜಿ ಸಮರ್ಥರಿದ್ದಾರೆ, ಅವರನ್ನು ಸಂಪರ್ಕಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯವಿದೆ ಎಂದು ಕೋರ್ಟ್ ಹೇಳಿತು. ಕೋರ್ಟ್ ಸಲಹೆ ಮೇರೆಗೆ ಅರ್ಜಿದಾರರು ಅರ್ಜಿಯನ್ನು ಹಿಂಪಡೆದರು. ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಲು ಇದು ಎರಡನೇ ಪಿಐಎಲ್ ಆಗಿದ್ದು, ಇದನ್ನು ಹೈಕೋರ್ಟ್ ವಜಾಗೊಳಿಸಿದೆ.

  • ಹೈಕೋರ್ಟ್‌ನಲ್ಲಿ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನ – ವ್ಯಕ್ತಿಯ ರಕ್ಷಣೆ

    ಬೆಂಗಳೂರು: ಹೈಕೋರ್ಟ್‌ನಲ್ಲಿ (High Court) ವ್ಯಕ್ತಿಯೊಬ್ಬರು ಆತ್ಮಹತ್ಯೆ ಯತ್ನಿಸಿದ (Suicide Attempt) ಘಟನೆ ಇಂದು ನಡೆದಿದೆ.

    ಮೈಸೂರು ಮೂಲದ ಶ್ರೀನಿವಾಸ್(51) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮುಖ್ಯ ನ್ಯಾಯಾಧೀಶರ ಪೀಠ ಇರುವ ಕೋರ್ಟ್ ಹಾಲ್ 1ರ ಬಳಿ ಚಾಕುವಿನಿಂದ ಕತ್ತು ಕೊಯ್ದುಕೊಂಡು ಶ್ರೀನಿವಾಸ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ಇದನ್ನೂ ಓದಿ: ಬಿಜೆಪಿ-ಜೆಡಿಎಸ್‌ ಮೈತ್ರಿಗೆ ನನ್ನ ಬೆಂಬಲ: ಸುಮಲತಾ ಅಂಬರೀಶ್‌

     
    ತಕ್ಷಣವೇ ಪೊಲೀಸರು ಶ್ರೀನಿವಾಸ್‌ ಅವರನ್ನು ರಕ್ಷಿಸಿ ಬೌರಿಂಗ್‌ ಆಸ್ಪತ್ರೆಗೆ (Bowring Hospital) ದಾಖಲಿಸಿದ್ದಾರೆ. ಪೊಲೀಸರು ಈಗ ಶ್ರೀನಿವಾಸ್‌ಗೆ ಸಂಬಂಧಿಸಿದದಂತೆ ಪೂರ್ವಾಪರ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

  • ಕಾಂಗ್ರೆಸ್‌ ತೆರಿಗೆ ಮೌಲ್ಯಮಾಪನ ಕೇಸ್‌ – ಹೈಕೋರ್ಟ್‌ನಲ್ಲೂ ಹಿನ್ನಡೆ, 4 ಅರ್ಜಿ ವಜಾ

    ಕಾಂಗ್ರೆಸ್‌ ತೆರಿಗೆ ಮೌಲ್ಯಮಾಪನ ಕೇಸ್‌ – ಹೈಕೋರ್ಟ್‌ನಲ್ಲೂ ಹಿನ್ನಡೆ, 4 ಅರ್ಜಿ ವಜಾ

    ನವದೆಹಲಿ: ತೆರಿಗೆ ಮರುಮೌಲ್ಯಮಾಪನ ಪ್ರಶ್ನಿಸಿ ಕಾಂಗ್ರೆಸ್ (Congress) ಸಲ್ಲಿಸಿದ್ದ 4 ಹೊಸ ಅರ್ಜಿಗಳನ್ನು ದೆಹಲಿ ಹೈಕೋರ್ಟ್ (Delhi High Court) ತಿರಸ್ಕರಿಸಿದೆ.

    2014-15, 2015-16,2016-17ರ ಸಾಲಿನ ತೆರಿಗೆ ಮರುಮೌಲ್ಯ ಮಾಪನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಇದನ್ನು ಇಂದು ಪ್ರಸ್ತಾಪಿಸಿರುವ ದೆಹಲಿ ಹೈಕೋರ್ಟ್ ಇಂಥಾದ್ದೇ ಪ್ರಕರಣಕ್ಕೆ ಸಂಬಂಧಿಸಿ ತಾನು ಇತ್ತೀಚಿಗೆ ನೀಡಿದ್ದ ತೀರ್ಪಿನ ವ್ಯಾಪ್ತಿಗೆ ಈ ಅರ್ಜಿಗಳು ಒಳಪಡುತ್ತವೆ ಎಂದು ಅಭಿಪ್ರಾಯಪಟ್ಟು 4 ಅರ್ಜಿಗಳನ್ನು ವಜಾ ಮಾಡಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ – ದಾಳಿಯ ಸಂಚುಕೋರ ಅರೆಸ್ಟ್‌

    ಲೋಕಸಭೆ ಚುನಾವಣೆ (Lok Sabha Election) ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಅರ್ಜಿ ವಜಾಗೊಂಡು ಹಿನ್ನಡೆಯಾಗಿದ್ದು,ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರುವುದು ಮಾತ್ರ ಬಾಕಿ ಉಳಿದಿದೆ.