Tag: high court

  • ಕೇಜ್ರಿವಾಲ್ ಬಂಧನದ ಅಡಿಪಾಯವೇ ದೋಷ ಪೂರಿತ, ಕೂಡಲೇ ಬಿಡುಗಡೆ ಮಾಡಿ – ಹೈಕೋರ್ಟ್ ಮುಂದೆ ಸಿಂಘ್ವಿ ವಾದ

    ಕೇಜ್ರಿವಾಲ್ ಬಂಧನದ ಅಡಿಪಾಯವೇ ದೋಷ ಪೂರಿತ, ಕೂಡಲೇ ಬಿಡುಗಡೆ ಮಾಡಿ – ಹೈಕೋರ್ಟ್ ಮುಂದೆ ಸಿಂಘ್ವಿ ವಾದ

    ನವದೆಹಲಿ: ಚುನಾವಣೆ ಹೊತ್ತಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಬಂಧಿಸಲಾಗಿದೆ. ಬಂಧನದ ಈ ಸಮಯ ನ್ಯಾಯ ಸಮ್ಮತ ಚುನಾವಣೆಯನ್ನು ಸೃಷ್ಟಿಸುವುದಿಲ್ಲ. ಈ ಬಂಧನದ ಅಡಿಪಾಯವೇ ದೋಷ ಪೂರಿತ ಎಂದು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ (Abhishek Singhvi) ವಾದಿಸಿದ್ದಾರೆ.

    ಇಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ವಾದ ಮಂಡಿಸಿದ ಸಿಂಘ್ವಿ, ನನ್ನ ಕಕ್ಷಿದಾರರ ಬಂಧನದ ಬುನಾದಿ ದೋಷಪೂರಿತವಾಗಿರುವ ಕಾರಣ ಅವರನ್ನು ಬಿಡುಗಡೆ ಮಾಡಬೇಕು. ಇದು ನನ್ನ ಪ್ರಾರ್ಥನೆ. ಇದು ಕ್ರಿಮಿನಲ್ ವಿಷಯವಾಗಿದ್ದರೂ ಕಾನೂನು ಮತ್ತು ಮೂಲಭೂತ ರಚನೆಯ ಮೇಲೆ ಪ್ರಭಾವ ಬೀರುತ್ತದೆ ಎಂದು ವಾದಿಸಿದರು. ಇದನ್ನೂ ಓದಿ: ಮುನಿಯಪ್ಪ ಅಳಿಯನಿಗೆ ಕೋಲಾರ ಟಿಕೆಟ್ ಕೊಟ್ಟರೆ ರಾಜೀನಾಮೆ – ‘ಕೈ’ ಎಂಎಲ್‌ಸಿ, ಶಾಸಕರಿಂದ ಬೆದರಿಕೆ

    ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಒಬ್ಬ ಹಾಲಿ ಮುಖ್ಯಮಂತ್ರಿಯನ್ನು ಬಂಧಿಸಲಾಗಿದೆ. ವಿಚಾರಣೆಯಲ್ಲಿ ಯಾವುದೇ ವಸ್ತು ವಿಷಯವಿಲ್ಲ. ಬಂಧನದ ಉದ್ದೇಶವು ನಾನ್-ಲೆವೆಲ್ ಪ್ಲೇಯಿಂಗ್ ಫೀಲ್ಡ್ ಅನ್ನು ರಚಿಸುವುದಾಗಿದೆ. ಈ ಮೂಲಕ ಸಂವಿಧಾನದ ಮೂಲಭೂತ ರಚನೆಯನ್ನು ಹೊಡೆಯುತ್ತಿದ್ದಾರೆ. ಸೆಕ್ಷನ್ 19ರ ಅಡಿಯಲ್ಲಿ ಬಂಧನದ ಮಿತಿಯನ್ನು ಇರಿಸಲಾಗಿದೆ. ಇದಕ್ಕೆ ಕಾರಣ ಸೆಕ್ಷನ್ 45ರ ಅಡಿಯಲ್ಲಿ ಜಾಮೀನು ಪಡೆಯುವುದು ತುಂಬಾ ಕಷ್ಟಕರವಾಗಿದೆ ಎಂದು ಸಿಂಘ್ವಿ ಹೇಳಿದರು. ಇದನ್ನೂ ಓದಿ: ಕೋರ್ಟ್ ಆವರಣದಲ್ಲಿ ಪ್ರತಿಭಟನೆ ಗಂಡಾಂತರ ಆಹ್ವಾನಿಸಿದಂತೆ: ಆಪ್‌ಗೆ ದೆಹಲಿ ಹೈಕೋರ್ಟ್ ಎಚ್ಚರಿಕೆ

    ಕೇಜ್ರಿವಾಲ್ ಪರ ವಾದ ಮಂಡಿಸಿದ ಮತ್ತೊರ್ವ ಹಿರಿಯ ವಕೀಲ ಅಮಿತ್ ದೇಸಾಯಿ, ಪ್ರಕರಣದಲ್ಲಿ ಸೆಕ್ಷನ್ 19 ಅನ್ನು ಸರಿಯಾಗಿ ಪಾಲಿಸಿಲ್ಲ. ಇದು ಪ್ರಾಥಮಿಕ ಅಂಶವಾಗಿದೆ. ಬಂಧನದ ಸಮಯದಲ್ಲಿ ಅರ್ಜಿದಾರರು ಸೆಕ್ಷನ್ 3ರ ಅಡಿಯಲ್ಲಿ ಸೂಚಿಸಲಾದ ಚಟುವಟಿಕೆಗಳನ್ನು ಮಾಡುವಲ್ಲಿ ತಪ್ಪಿತಸ್ಥರು ಎಂದು ಸ್ಥಾಪಿಸಲು ಡಿಒಇ (Department Of Expenditure) ವಿಫಲವಾಗಿದೆ. ಯಾವುದೇ ವಿಚಾರಣೆಯಿಲ್ಲದೆ ಅರ್ಜಿದಾರರನ್ನು ಬಂಧಿಸಲಾಗಿದೆ. ಇದು ರಾಜಕೀಯ ಸೇಡನ್ನು ಪ್ರತಿಬಿಂಬಿಸುತ್ತದೆ ಎಂದು ವಾದಿಸಿದರು. ಇದನ್ನೂ ಓದಿ: ಜೆಪಿ ನಡ್ಡಾ ಭೇಟಿ ಮಾಡಿ ಚರ್ಚಿಸಿದ ನಟಿ ಕಂಗನಾ

    ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಸಲ್ಲಿಸಲು ಕಾಲಾವಕಾಶ ನೀಡುವಂತೆ ಇ.ಡಿ ಹೈಕೋರ್ಟ್‌ಗೆ ಮನವಿ ಮಾಡಿತು. ಏಜೆನ್ಸಿ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು, ಅರ್ಜಿ ಮಂಗಳವಾರವಷ್ಟೇ ಲಭ್ಯವಾಗಿದೆ. ಇ.ಡಿ ನಿಲುವನ್ನು ದಾಖಲಿಸಲು ಮೂರು ವಾರಗಳ ಕಾಲಾವಕಾಶ ನೀಡಬೇಕು ಎಂದು ಹೇಳಿದರು. ಮಧ್ಯಂತರ ಪರಿಹಾರಕ್ಕೂ ಸ್ಪಂದಿಸಲು ಸೂಕ್ತ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ:  ಅಬಕಾರಿ ನೀತಿ ಹಗರಣದ ಹಣ ಎಲ್ಲಿದೆ? – ಕೇಜ್ರಿವಾಲ್ ಬಹಿರಂಗಪಡಿಸ್ತಾರೆ – ಸುನೀತಾ ಕೇಜ್ರಿವಾಲ್

  • ಮುಂಬೈ ಪೊಲೀಸರ ಸೋಗಿನಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ – ಎಫ್‍ಐಆರ್ ದಾಖಲು

    ಬೆಂಗಳೂರು: ನಿಮ್ಮ ಸಿಮ್ ಕಾರ್ಡ್‍ನಿಂದ ಕಾನೂನುಬಾಹಿರವಾಗಿ ಆಕ್ಷೇಪಾರ್ಹ ಸಂದೇಶಗಳನ್ನು ಪ್ರಕಟಿಸುತಿದ್ದೀರಿ ಎಂದು ಇಬ್ಬರು ಹೈಕೋರ್ಟ್ (High Court) ನ್ಯಾಯಮೂರ್ತಿಗಳಿಗೆ (Judge) ಮುಂಬೈ ಪೊಲೀಸರ (Police) ಸೋಗಿನಲ್ಲಿ ಬೆದರಿಕೆ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ (Vidhana Soudha Police Station) ಪ್ರಕರಣ ದಾಖಲಾಗಿದೆ.

    ಕರೆ ಮಾಡಿದ ಸೈಬರ್ ವಂಚಕರು (Cyber Crime) ನ್ಯಾಯಮೂರ್ತಿಗಳೊಂದಿಗೆ ಏರು ಧ್ವನಿಯಲ್ಲಿ ಮಾತನಾಡಿದ್ದಾರೆ. ನೀವು ಆಕ್ಷೇಪಾರ್ಹ ಸಂದೇಶಗಳನ್ನು ಪ್ರಕಟಿಸುತ್ತಿದ್ದೀರಿ. ನಿಮ್ಮ ವಿರುದ್ಧ ಮುಂಬೈ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕರೆಯನ್ನು ಪೊಲೀಸರಿಗೆ ವರ್ಗಾವಣೆ ಮಾಡುತ್ತೇನೆ. ಅವರ ಜೊತೆ ಮಾತನಾಡಿ ಇತ್ಯರ್ಥ ಪಡಿಸಿಕೊಳ್ಳಿ ಎಂದಿದ್ದರು. ಅಲ್ಲದೇ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನೂ ಓದಿ: ಇಂದು ಮಂಡ್ಯ‌ ಮೈತ್ರಿ ಅಭ್ಯರ್ಥಿ ಘೋಷಣೆ – ಸಕ್ಕರೆ ನಾಡಿನಿಂದ ಹೆಚ್‌ಡಿಕೆ ಸ್ಪರ್ಧೆ ಫಿಕ್ಸ್?

    ಈ ಸಂಬಂಧ ಹೈಕೋರ್ಟ್ ಭದ್ರತಾ ಇನ್ಸ್‍ಪೆಕ್ಟರ್‍ಗಳಿಗೆ ನ್ಯಾಯಮೂರ್ತಿಗಳು ದೂರು ನೀಡುವಂತೆ ಸೂಚಿಸಿದ್ದರು. ನ್ಯಾಯಮೂರ್ತಿಗಳ ನಿರ್ದೇಶನದ ಮೇರೆಗೆ ಹೈಕೋರ್ಟ್ ಭದ್ರತಾ ಪೊಲೀಸ್ ಅಧಿಕಾರಿಗಳು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದೀಗ ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ: ಪಾಕಿಸ್ತಾನದ 2ನೇ ಅತಿ ದೊಡ್ಡ ನೌಕಾ ವಿಮಾನ ನಿಲ್ದಾಣದ ಮೇಲೆ ದಾಳಿ

  • 5,8,9,11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್

    ಬೆಂಗಳೂರು: ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್‌ನ (High Court) ದ್ವಿಸದ್ಯ ಪೀಠ ರದ್ದುಗೊಳಿಸಿದ್ದು 5,8,9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿದೆ.

    ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ (Karnataka Government) ಮೇಲ್ಮನವಿ ಸಲ್ಲಿಸಿತ್ತು. ಸುದೀರ್ಘ ವಿಚಾರಣೆ ನಡೆಸಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಅಸ್ತು ಎಂದಿದೆ.

    ಉಳಿದ ವಿಷಯಗಳ ಪರೀಕ್ಷೆ ನಡೆಸಲು ತುರ್ತು ಹಾಗೂ ಸೂಕ್ತ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ನ್ಯಾ.ಸೋಮಶೇಖರ್ ಹಾಗೂ ನ್ಯಾ.ರಾಜೇಶ್ ರೈ ಅವರಿದ್ದ ಪೀಠ ಸೂಚನೆ  ನೀಡಿದೆ.

    ಮಾರ್ಚ್ 11ರಿಂದ ಮಾರ್ಚ್ 18ರವರೆಗೆ ಪರೀಕ್ಷೆ ನಿಗದಿಯಾಗಿತ್ತು. ಮಾರ್ಚ್ 11 ಮತ್ತು 12 ಎರಡು ದಿನ ಎರಡು ವಿಷಯಗಳ ಪರೀಕ್ಷೆ ನಡೆದ ಬಳಿಕ ಪರೀಕ್ಷೆಗೆ ತಡೆ ನೀಡಲಾಗಿದೆ. 5ನೇ ತರಗತಿಗೆ ಎರಡು ವಿಷಯಗಳ ಪರೀಕ್ಷೆ ಮಾತ್ರ ಬಾಕಿ ಉಳಿದಿದೆ. 8 ಮತ್ತು 9ನೇ ತರಗತಿಗಳಿಗೆ ಇನ್ನೂ 4 ವಿಷಯಗಳ ಪರೀಕ್ಷೆ ಬಾಕಿ ಇದೆ.

  • ಅರ್ಚಕ ಕುಟುಂಬಗಳ ನಡುವೆ ಪ್ರತಿಷ್ಠೆಯ ಜಗಳ  – ಗೌರಿಗಂಗಾಧರೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ರದ್ದು

    ಅರ್ಚಕ ಕುಟುಂಬಗಳ ನಡುವೆ ಪ್ರತಿಷ್ಠೆಯ ಜಗಳ – ಗೌರಿಗಂಗಾಧರೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ರದ್ದು

    ಕೋಲಾರ: ಎರಡು ಅರ್ಚಕ ಕುಟುಂಬಗಳ ನಡುವೆ ಇರುವ ಪ್ರತಿಷ್ಠೆಯಿಂದ ಗೌರಿಗಂಗಾಧರೇಶ್ವರ ಸ್ವಾಮಿ (Gowri Gangadhareshwara Swami Temple) ಬ್ರಹ್ಮರಥೋತ್ಸವಕ್ಕೆ (Brahma Rathotsava) ತಡೆಯಾಜ್ಞೆ ತಂದಿರುವ ಘಟನೆ ಕೋಲಾರದಲ್ಲಿ ನಡೆದಿದೆ.

    ಕೋಲಾರ (Kolara) ತಾಲೂಕು ತೇರಹಳ್ಳಿ ಗ್ರಾಮದ ಪುರಾತನ ಗೌರಿಗಂಗಾಧರೇಶ್ವರ ಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ಮಾರ್ಚ್‌ 17 ರಂದು ನಡೆಯಬೇಕಿತ್ತು. ಆದರೆ ಅರ್ಚಕರ ಕುಟುಂಬಗಳ ನಡುವಿನ ವಿವಾದದ ನಡೆದ ಕಾರಣ ಹೈಕೋರ್ಟ್‌ (High Court) ತಡೆಯಾಜ್ಞೆ ನೀಡಿದ್ದು ಬ್ರಹ್ಮರಥೋತ್ಸವವನ್ನು ಮುಂದೂಡಲಾಗಿದೆ. ಇದನ್ನೂ ಓದಿ: ಆಪರೇಷನ್‌ಗೆ ಸಿದ್ದರಿದ್ವಿ ಒಳ್ಳೆಯ ಹುಲಿಗಳು ಇದ್ದವು, ನಮ್ಮವರೇ ಕೆಲವರು ಒಪ್ಪಲಿಲ್ಲ: ಡಿಕೆಶಿ

    ಅರ್ಚಕರಾದ ಮಂಜುನಾಥ್ ದೀಕ್ಷಿತ್ ಹಾಗೂ ಚಂದ್ರಶೇಖರ ದೀಕ್ಷಿತ್ ನಡುವೆ ರಥೋತ್ಸವ ಮಾಡುವ ವಿಚಾರದಲ್ಲಿ ಮೊದಲಿನಿಂದಲೂ ವಿವಾದ ಇತ್ತು. ಆದರೆ ಮುಜರಾಯಿ ತಹಶಿಲ್ದಾರ್ ಮಾರ್ಚ್ 17 ರಂದು ಬ್ರಹ್ಮರಥೋತ್ಸವಕ್ಕೆ ಅನುಮತಿ ನೀಡಿದ್ದರು.

    ಆಗಮ ಶಾಸ್ತ್ರದ ಪ್ರಕಾರ ಒಂದೇ ವರ್ಷದಲ್ಲಿ ಎರಡು ಬಾರಿ ಬ್ರಹ್ಮರಥೋತ್ಸವ ಮಾಡಬಾರದೆಂದು ಕೋರಿ ಮಂಜುನಾಥ್ ದೀಕ್ಷಿತ್‌ ಕೋರ್ಟ್‌ ಮೊರೆ ಹೋಗಿದ್ದರು. ಹೈಕೋರ್ಟ್ ತಡೆಯಾಜ್ಞೆ ಹಿನ್ನಲೆ ನಿಗದಿ ಮಾಡಿದ್ದ ಬ್ರಹ್ಮರಥೋತ್ಸವ ರದ್ದು ಮಾಡಿ ತಹಶೀಲ್ದಾರ್ ಆದೇಶ ಮಾಡಿದ್ದಾರೆ. ಇದನ್ನೂ ಓದಿ: WPL 2024: ಅಂಪೈರ್‌ ಎಡವಟ್ಟು – ಫಿಕ್ಸಿಂಗ್‌ ಹಣೆಪಟ್ಟಿ ಕಟ್ಟಿಕೊಂಡ ಮುಂಬೈ ಇಂಡಿಯನ್ಸ್‌

    ಸದ್ಯ ಗ್ರಾಮಸ್ಥರ ಮನವೊಲಿಸಿ ಮುಜರಾಯಿ ಅಧಿಕಾರಿಗಳು ಬ್ರಹ್ಮರಥೋತ್ಸವವ ದಿನಾಂಕವನ್ನು ಮುಂದೂಡಿದ್ದಾರೆ.

  • ‘ರಜಾಕಾರ್’ ಚಿತ್ರ ತಡೆಗೆ ಹೈಕೋರ್ಟ್ ನಕಾರ: ನಿಟ್ಟುಸಿರಿಟ್ಟ ಟೀಮ್

    ‘ರಜಾಕಾರ್’ ಚಿತ್ರ ತಡೆಗೆ ಹೈಕೋರ್ಟ್ ನಕಾರ: ನಿಟ್ಟುಸಿರಿಟ್ಟ ಟೀಮ್

    ನಾಳೆ ಬೆಳಗ್ಗೆ ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ರಜಾಕಾರ್ ಬಿಡುಗಡೆ ಆಗುತ್ತಿದೆ. ಈ ಸಿನಿಮಾ ರಿಲೀಸ್ ಮಾಡದಂತೆ ತಡೆ ಕೋರಿ ಹೈದರಾಬಾದ್ ಹೈಕೋರ್ಟ್ ನಲ್ಲಿ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್  (ಎಪಿಸಿಆರ್) ಮನವಿ ಸಲ್ಲಿಸಿತ್ತು. ಭಾರತ ಸ್ವಾತಂತ್ರ್ಯ ನಂತರ ರಜಾಕಾರರು ನಡೆಸಿದ ದೌರ್ಜನ್ಯವನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ ಎಂದು ಉಲ್ಲೇಖಿಸಿದ್ದರು.

    ಸಿನಿಮಾ ತಯಾರಕರೇ ಕಥೆ ಬಗ್ಗೆ ಹೇಳಿದ್ದರಿಂದ ಚಿತ್ರವು ಮುಸ್ಲಿಂ ಮತ್ತು ಹಿಂದುಗಳ ಭಾವನೆಗೆ ಧಕ್ಕೆ ತರಬಹುದು. ಎರಡೂ ಸಮುದಾಯಗಳ ನಡುವೆ ವಿಷ ಬೀಜ ಬಿತ್ತಬಹುದು. ಹಾಗಾಗಿ ಚಿತ್ರ ಪ್ರದರ್ಶನವನ್ನು ತಡೆಯುವಂತೆ ಎಪಿಸಿಆರ್ ನ ತೆಲಂಗಾಣ ಚಾಪ್ಟರ್ ನ ಉಪಾಧ್ಯಕ್ಷ, ಅಡ್ವೋಕೇಟ್ ಅಫ್ಸರ್ ಜಹಾನ್ ಹೈಕೋರ್ಟ್ ನಲ್ಲಿ ಸಂಘಟನೆಯ ಹಿತಾಸಕ್ತಿಗಳನ್ನು ಪ್ರತಿನಿಧಿಸಿದ್ದರು.

     

    ಈ ವಾದಗಳನ್ನು ಆಲಿಸಿದ ಮಾನ್ಯ ನ್ಯಾಯಾಲಯವು ಚಿತ್ರಕ್ಕೆ ನೀಡಿರುವ ಸೆನ್ಸಾರ್ ಪತ್ರದ ಕುರಿತು ಮಾತನಾಡಿದೆ. ಜೊತೆಗೆ ಸಿಬಿಎಫ್ಸಿನಲ್ಲೇ ಇರುವ ಮೇಲ್ಮನವಿ ಪರಿಹಾರವನ್ನು ಸೂಚಿಸಿ, ತಡೆಯನ್ನು ನಿರಾಕರಿಸಿದೆ. ಈ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರ ಸಿಕ್ಕಿದ್ದು, ವಯಸ್ಕರಷ್ಟೇ ಚಿತ್ರವನ್ನು ನೋಡಬಹುದು. ಮತ್ತು ಸೆನ್ಸಾರ್ ಮಂಡಳಿಯಲ್ಲೇ ಮೇಲ್ಮನವಿಯ ಪರಿಹಾರ ಇದೇ ಎಂದು ಉಲ್ಲೇಖಿಸಿದೆ ಮಾನ್ಯ ನ್ಯಾಯಾಲಯ.

  • ಮಧ್ಯಪ್ರದೇಶದ ಭೋಜಶಾಲಾ ಕಮಲ್ ಮೌಲಾ ಮಸೀದಿಯಲ್ಲಿ ಎಎಸ್‌ಐ ಸಮೀಕ್ಷೆಗೆ ಹೈಕೋರ್ಟ್‌ ಆದೇಶ

    ಮಧ್ಯಪ್ರದೇಶದ ಭೋಜಶಾಲಾ ಕಮಲ್ ಮೌಲಾ ಮಸೀದಿಯಲ್ಲಿ ಎಎಸ್‌ಐ ಸಮೀಕ್ಷೆಗೆ ಹೈಕೋರ್ಟ್‌ ಆದೇಶ

    ಭೋಪಾಲ್‌: ಮಹತ್ವದ ಬೆಳವಣಿಗೆಯಲ್ಲಿ ಜ್ಞಾನವ್ಯಾಪಿ ಮಾದರಿಯಲ್ಲಿಯೇ ಮತ್ತೊಂದು ಐತಿಹಾಸಿಕ ಸ್ಥಳದ ಪುರಾತತ್ವ ಸಮೀಕ್ಷೆಗೆ ಮಧ್ಯಪ್ರದೇಶ ಹೈಕೋರ್ಟ್ (Madhya Pradesh High Court) ಆದೇಶ ನೀಡಿದೆ. ಧರ್‌ನಲ್ಲಿರುವ (Dhar) ವಿವಾದಾತ್ಮಕ ಭೋಜಶಾಲಾ (Bhojshala) ಕಮಲ್ ಮೌಲಾ ಮಸೀದಿಯಲ್ಲಿ (Kamal Maula Mosque) ಎಎಸ್‌ಐ ಸರ್ವೇಗೆ (ASI Survey) ಹೈಕೋರ್ಟ್‌ ಅನುಮತಿ ನೀಡಿದೆ.

    ವಾಗ್ದಾವಿ (Goddess Vagdevi) ಮಾತೆ ನೆಲೆಸಿರುವ ಭೋಜಶಾಲಾ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ. ಹೀಗಾಗಿ ಎಸ್‌ಐ ಸಮೀಕ್ಷೆ ನಡೆಸುವಂತೆ ಕೋರಿ ವಕೀಲ ವಿಷ್ಣುಶಂಕರ್ ಜೈನ್ ಹೈಕೋರ್ಟ್ ಮೆಟ್ಟಿಲೇರಿದ್ದರು.  ಇದನ್ನೂ ಓದಿ: ಮಿಷನ್‌ ದಿವ್ಯಾಸ್ತ್ರ ಪ್ರಯೋಗ ಯಶಸ್ವಿ – ಏನಿದು MIRV ತಂತ್ರಜ್ಞಾನ? ಯುದ್ಧದ ವೇಳೆ ಹೇಗೆ ಸಹಾಯವಾಗುತ್ತೆ? ಯಾರ ಬಳಿಯಿದೆ?

    ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸಮೀಕ್ಷೆಗೆ ಐವರು ತಜ್ಞರ ಸಮಿತಿ ರಚಿಸಿದೆ. ಮುಂದಿನ ಆರು ವಾರಗಳಲ್ಲಿ ಸಮೀಕ್ಷಾ ವರದಿ ಸಲ್ಲಿಸಲು ಸೂಚಿಸಿದೆ. ಇದನ್ನೂ ಓದಿ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ – ಕೇಂದ್ರದಿಂದ ಅಧಿಸೂಚನೆ ಪ್ರಕಟ

    ಇದು ಪುರಾತತ್ವ ಇಲಾಖೆ ಸಂರಕ್ಷಿತ ಸ್ಮಾರಕವಾಗಿರುವ ಕಾರಣ ಈ ಮಸೀದಿ, ಮಂದಿರಕ್ಕೆ 1991 ಪೂಜಾ ಸ್ಥಳಗಳ ಕಾಯ್ದೆ ಅನ್ವಯ ಆಗುವುದಿಲ್ಲ ಎಂದು ಹೇಳಲಾಗ್ತಿದೆ. ಮಂದಿರ-ಮಸೀದಿ ವಿವಾದ ಕಾರಣ ಈ ಹಿಂದೆ ಹಲವು ಬಾರಿ ಧರ್‌ನಲ್ಲಿ ಉದ್ವಿಗ್ನ ಪರಿಸ್ಥಿತಿಗಳು ನಿರ್ಮಾಣವಾಗಿದ್ದವು. ಬಸಂತ್ ಪಂಚಮಿ ದಿನವಾದ ಶುಕ್ರವಾರದಂದು ನಮಾಜ್‌ಗೆ ಮುಸ್ಲಿಮರು, ವಾಗ್ದೇವಿ ಪೂಜೆಗಾಗಿ ಹಿಂದೂಗಳು ಸಾಲುಗಟ್ಟಿದ್ದರು.

     

  • ಬೋರ್ಡ್ ಪರೀಕ್ಷೆ ಗೊಂದಲ; ಶಿಕ್ಷಣ ತಜ್ಞರ ಸಭೆ ಕರೆಯಲು ಎನ್.ರವಿಕುಮಾರ್ ಆಗ್ರಹ

    ಬೋರ್ಡ್ ಪರೀಕ್ಷೆ ಗೊಂದಲ; ಶಿಕ್ಷಣ ತಜ್ಞರ ಸಭೆ ಕರೆಯಲು ಎನ್.ರವಿಕುಮಾರ್ ಆಗ್ರಹ

    ಬೆಂಗಳೂರು: ಗರಿಷ್ಠ ಸಂಖ್ಯೆಯ ಪರೀಕ್ಷೆಗಳು, ಸ್ಪಷ್ಟ ನೀತಿ ಇಲ್ಲದೆ ಇರುವುದನ್ನು ಚರ್ಚೆ ಮಾಡಲು ಶಿಕ್ಷಣ ತಜ್ಞರ ಸಭೆ ಕರೆಯಬೇಕೆಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ (N. Ravikumar) ಆಗ್ರಹಿಸಿದ್ದಾರೆ.

    ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಗೆ ಉತ್ತರಪತ್ರಿಕೆ ಕೊಡಲಾಗದಷ್ಟು ರಾಜ್ಯ ಸರ್ಕಾರದ ಖಜಾನೆ ಖಾಲಿ ಆಗಿದೆಯೇ ಎಂದು ರಾಜ್ಯ ಶಿಕ್ಷಣ ಸಚಿವರಿಗೆ ಪ್ರಶ್ನಿಸಿದ್ದಾರೆ. 8ರಿಂದ 8.5 ಲಕ್ಷ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ನೀವು ಪ್ರಿಪರೇಟರಿ ಪರೀಕ್ಷೆ ನಡೆಸಲು 50 ರೂ. ಸಂಗ್ರಹಿಸಿ ಪ್ರಶ್ನೆಪತ್ರಿಕೆ ನೀಡುವುದಾದರೆ, ಉತ್ತರ ಪತ್ರಿಕೆ ನೀವೇ ತರಬೇಕು ಎನ್ನುವುದಾದರೆ ಸರ್ಕಾರ ಯಾವ ಅಧೋಗತಿಗೆ ತಲುಪಿದೆ? ಇದು ಬಹಳ ನೋವಿನ ವಿಚಾರ. ಶಿಕ್ಷಣದ ಕುರಿತ ಕಳಕಳಿಯಿಂದ ಇದನ್ನು ಬಿಜೆಪಿ ಪ್ರಶ್ನಿಸುತ್ತಿದೆ ಎಂದಿದ್ದಾರೆ.

    11 ಮತ್ತು 12ನೇ ತರಗತಿಗೆ ಎರಡೆರಡು ಸಪ್ಲಿಮೆಂಟರಿ ಪರೀಕ್ಷೆ ನಡೆಸಲು ಸರ್ಕಾರ ಅಸ್ತು ಎಂದಿದೆ. ಎಸ್‍ಎಸ್‍ಎಲ್‍ಸಿ (SSLC) ಪ್ರಿಪರೇಟರಿ ಪರೀಕ್ಷೆ ನಡೆಸಲು ಸರ್ಕಾರ ಹಣ ಕೊಡುತ್ತಿಲ್ಲ. ವಿದ್ಯಾರ್ಥಿಗಳ ಬಳಿ ಹಣ ಸಂಗ್ರಹಿಸಿ, ಕೇವಲ ಪ್ರಶ್ನೆಪತ್ರಿಕೆ ಕೊಡುವುದಾಗಿ ಹೇಳುತ್ತಾರೆ. ಉತ್ತರ ಪತ್ರಿಕೆ ನೀಡುವುದಿಲ್ಲ ಎಂದಿದ್ದಾರೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿ 2 ವರ್ಷದಲ್ಲಿ ಪೂರ್ಣ – ಜೋಶಿ ವಿಶ್ವಾಸ

    ಹಳ್ಳಿಯಿಂದ ಸಣ್ಣಪುಟ್ಟ ಪಟ್ಟಣಕ್ಕೆ ಬರಲು 90% ಶಿಕ್ಷಕವರ್ಗ ಬಸ್ಸನ್ನೇ ಆಶ್ರಯಿಸಿದೆ. ಉಚಿತ ಬಸ್‍ಗಳಿಂದಾಗಿ ಬಸ್‍ಗಳು ಲಭ್ಯವಿಲ್ಲ. ಬಸ್ಸುಗಳು ಕಡಿಮೆಯಾಗಿವೆ. ಇದರಿಂದ ಶಿಕ್ಷಕರು, ವಿದ್ಯಾರ್ಥಿಗಳೂ ತಡವಾಗಿ ಬರುವಂತಾಗಿದೆ. ಉಚಿತ ಪ್ರಯಾಣದ ನಂತರ ಅರ್ಧಕ್ಕರ್ಧ ಬಸ್ ಕಡಿಮೆಯಾಗಿದೆ. ಬೆಳಿಗ್ಗೆ 10ಕ್ಕೆ ಶಾಲೆ ತೆರೆದರೆ 11, 12 ಗಂಟೆಗೆ ವಿದ್ಯಾರ್ಥಿಗಳು ಬರುವಂತಾಗಿದೆ. ಶಿಕ್ಷಕರೂ ಶಾಲೆಗೆ ಸಕಾಲದಲ್ಲಿ ಬರಲಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

    ಶಾಲೆಗಳಲ್ಲಿ ಮೂಲಸೌಕರ್ಯವಿಲ್ಲ, ಕುಡಿಯುವ ನೀರಿನ ಸೌಲಭ್ಯ ಇಲ್ಲ. ಶೌಚಾಲಯ ಸೌಕರ್ಯ ಇಲ್ಲ. ಬಿಜೆಪಿ ಸರ್ಕಾರ ಇದ್ದಾಗ ಮಂಜೂರಾದ ವಿವೇಕ ಕೊಠಡಿಗಳನ್ನು ರದ್ದು ಮಾಡಿದ್ದಾರೆ. 13- 14 ಸಾವಿರ ಕೊಠಡಿ ನಿರ್ಮಾಣಕ್ಕೆ ಬೊಮ್ಮಾಯಿಯವರ ಕಾಲದಲ್ಲಿ ಬಿಜೆಪಿ ಸರ್ಕಾರ ನಿರ್ಣಯಿಸಿತ್ತು. ಅದನ್ನು ರದ್ದು ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

    ರಾಜಕಾರಣದ ಕಾಳಜಿ ವಹಿಸುವ ಮಧು ಬಂಗಾರಪ್ಪ (Madhu Bangarappa) ಅವರು, ಶಿಕ್ಷಣದ ಬಗ್ಗೆ ಕಾಳಜಿ ವಹಿಸದೆ ರಾಜಕಾರಣದಲ್ಲಿ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಆದ್ದರಿಂದ ಶಿಕ್ಷಣ ಸಚಿವರು, ಬೋರ್ಡ್ ಪರೀಕ್ಷೆ, ಗರಿಷ್ಠ ಸಂಖ್ಯೆ ಪರೀಕ್ಷೆ ಬೇಡವೆನ್ನುವ ಸರ್ಕಾರವೇ ಅತಿ ಹೆಚ್ಚು ಪರೀಕ್ಷೆ ನಡೆಸುತ್ತಿರುವುದು. ರಾಜ್ಯ ಪಠ್ಯಕ್ರಮ, ಕೇಂದ್ರೀಯ ಪಠ್ಯಕ್ರಮದ ಸಂಬಂಧ ಅನೇಕ ಶಿಕ್ಷಣ ಸಂಸ್ಥೆಗಳಿಂದ ಗೊಂದಲಮಯ ನಿರ್ಧಾರ ಕುರಿತಂತೆ ಪೋಷಕರು, ಶಿಕ್ಷಣ ತಜ್ಞರ ಸಭೆ ನಡೆಸಬೇಕು. ಸಂಘಟನೆಗಳು, ಶಿಕ್ಷಕರ ಕ್ಷೇತ್ರ, ಪದವೀಧರರ ಕ್ಷೇತ್ರದಿಂದ ಆಯ್ಕೆಯಾದ ಶಾಸಕರನ್ನೂ ಈ ಸಭೆಗೆ ಆಹ್ವಾನಿಸಿ ಎಂದು ಅವರು ಒತ್ತಾಯಿಸಿದ್ದಾರೆ.

    ರಾಜ್ಯದಲ್ಲಿ 5ನೇ ತರಗತಿಯಿಂದ 11ನೇ ತರಗತಿ ವರೆಗೆ ನಡೆಯುತ್ತಿರುವ ಪರೀಕ್ಷೆ ವಿಚಾರದಲ್ಲಿ ಬಹಳಷ್ಟು ಚರ್ಚೆ ನಡೆಯುತ್ತಿದೆ. ಈ ಗೊಂದಲಕ್ಕೆ ಹೈಕೋರ್ಟ್ (High Court) ತೆರೆ ಎಳೆದಿದೆ. ಏಕಸದಸ್ಯ ಪೀಠವು ಬೋರ್ಡ್ ಪರೀಕ್ಷೆ ಬೇಡ ಎಂದಿದ್ದರೆ, ದ್ವಿಸದಸ್ಯ ಪೀಠವು ಬೋರ್ಡ್ ಪರೀಕ್ಷೆ ನಡೆಸಿ ಎಂದು ತೀರ್ಪು ನೀಡಿದೆ. ಇಂಥ ಸಂದರ್ಭದಲ್ಲಿ ಪೋಷಕರು, ವಿದ್ಯಾರ್ಥಿಗಳಲ್ಲಿ ಸಾಕಷ್ಟು ಗೊಂದಲ ಉಂಟಾಗಿದೆ. ರಾಜ್ಯ ಸರ್ಕಾರ ನಡೆಸುವ ಬೋರ್ಡ್ ಪರೀಕ್ಷೆ ಕಾರಣಕ್ಕೆ ವಿದ್ಯಾರ್ಥಿಗಳಲ್ಲಿ ಫೇಲ್ ಆಗುವ ಭಯ ಇದೆ. ಈ ಗೊಂದಲ, ಭಯ ನಿವಾರಿಸುವ ದೃಷ್ಟಿಯಿಂದ ರಾಜ್ಯದ ಶಿಕ್ಷಣ ತಜ್ಞರ ಸಭೆಯನ್ನು ಕೂಡಲೇ ಕರೆಯಬೇಕೆಂದು ಅವರು ಬಿಜೆಪಿ ಪರವಾಗಿ ಆಗ್ರಹಿಸಿದ್ದಾರೆ.

    ಎಳೆಯ ಮಕ್ಕಳ ಮನಸ್ಸಿನಲ್ಲಿ ಅನುತ್ತೀರ್ಣರಾದರೆ, ನಪಾಸ್ ಆದರೆ, ನಾನು ಇನ್ನು ಶಾಲೆಗೆ ಹೋಗುವಂತಿಲ್ಲ. ನಾನು ಅಸಮರ್ಥ ಎಂಬ ಭಾವನೆ ಬರುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ 8ನೇ ತರಗತಿವರೆಗೆ ನಪಾಸ್ ಮಾಡಬಾರದೆಂದು ಸರ್ಕಾರ ನಿಯಮ ರೂಪಿಸಿದೆ. ಇದನ್ನು ಸ್ವಾಗತಿಸುತ್ತೇವೆ. ಈಗ 5, 8, 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಲ್ಲಿ ಗೊಂದಲ ಇದೆ. ಶಿಕ್ಷಣ ಎಂದರೆ ಕೇವಲ ಪರೀಕ್ಷೆ ಅಲ್ಲ ಎಂದು ಸರ್ಕಾರ ಒಂದೆಡೆ ಹೇಳುತ್ತದೆ. ಮಾಸಿಕ, ವಾರ್ಷಿಕ ಪರೀಕ್ಷೆಗೆ ಪೂರ್ವಭಾವಿ ಪ್ರಿಪರೇಟರಿ ಸೇರಿ ಹಲವು ಪರೀಕ್ಷೆ ನಡೆಸುವುದನ್ನು ಸರ್ಕಾರ ಬೇಡ ಎನ್ನುತ್ತದೆ. ಒಂದು ಕಡೆ ಬಹುಪರೀಕ್ಷೆಗಳನ್ನು ನಡೆಸಲು ಮುಂದಾಗಿದೆ ಎಂದು ಅವರು ಟೀಕಿಸಿದ್ದಾರೆ. ಇದನ್ನೂ ಓದಿ: Lok Sabha 2024: ಬೀದರ್‌ನಲ್ಲಿ ಬಿಜೆಪಿಗೆ ಮೈತ್ರಿ ಬಲ?- ಕಾಂಗ್ರೆಸ್‌ಗೆ ವರವಾಗುತ್ತಾ ‘ಕಮಲ’ ಟಿಕೆಟ್ ಒಳಜಗಳ?

  • ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಎನ್‌ವಿ ಅಂಜಾರಿಯಾ ಪ್ರಮಾಣ ವಚನ

    ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಎನ್‌ವಿ ಅಂಜಾರಿಯಾ ಪ್ರಮಾಣ ವಚನ

    ಬೆಂಗಳೂರು: ಕರ್ನಾಟಕ ಹೈಕೋರ್ಟ್ (Karnataka High Court) ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ (N V Anjaria) ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಿದರು.

    ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಿಜೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಪ್ರಮಾಣ ವಚನ ಬೋಧನೆ ಮಾಡಿದರು. ಇದನ್ನೂ ಓದಿ: ನೀಲಗಿರಿ ತೋಪಿನಲ್ಲಿ ಬಿ.ಟೆಕ್ ವಿದ್ಯಾರ್ಥಿಯ ಬರ್ಬರ ಹತ್ಯೆ – ಸುಟ್ಟು ಹಾಕಿರುವ ಸ್ಥಿತಿಯಲ್ಲಿ ಶವ ಪತ್ತೆ

    ಸಿಎಂ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರು ಫೆ. 24 ರಂದು ನಿವೃತ್ತಿಯಾಗಲಿರುವ ಹಿನ್ನೆಲೆಯಲ್ಲಿ ಈ ಹಿಂದೆ ಸುಪ್ರೀಂಕೋರ್ಟ್ ಕೊಲಿಜಿಯಂ, ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರ ಹೆಸರನ್ನು ಶಿಫಾರಸು ಮಾಡಿತ್ತು. ಈ ಶಿಫಾರಸಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕಳೆದ ವಾರ ಅಂಕಿತ ಹಾಕಿದ್ದರು.  ಇದನ್ನೂ ಓದಿ: ಸಿದ್ರಾಮುಲ್ಲಾ ಖಾನ್ ಎಂದ ಹೆಗಡೆ ವಿರುದ್ಧ ಸುಮೊಟೋ ಕೇಸ್ ದಾಖಲು

    ಅಂಜಾರಿಯಾ ಅವರು 2011ರಿಂದ ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಹೈಕೋರ್ಟ್ ನ್ಯಾಯಧೀಶರಾಗಿ ಬಡ್ತಿ ಪಡೆಯುವ ಮೊದಲು ಅವರು ಗುಜರಾತ್ ಹೈಕೋರ್ಟ್‌ನಲ್ಲಿ ಸಿವಿಲ್, ಸಾಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ವಕೀಲರಾಗಿದ್ದರು.

     

  • ಹ್ಯಾರಿಸ್‍ಗೆ ಸಂಕಷ್ಟ – ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಹೈಕೋರ್ಟ್ ಅಸ್ತು

    ಹ್ಯಾರಿಸ್‍ಗೆ ಸಂಕಷ್ಟ – ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಹೈಕೋರ್ಟ್ ಅಸ್ತು

    ಬೆಂಗಳೂರು: ತನ್ನ ವಿರುದ್ಧದ ಚುನಾವಣಾ ತಕರಾರು ಅರ್ಜಿಯನ್ನು ವಜಾ ಮಾಡುವಂತೆ ಶಾಸಕ ಎನ್.ಎ ಹ್ಯಾರಿಸ್ (N.A Harris) ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (High Court) ವಜಾಗೊಳಿಸಿದೆ.

    ಚುನಾವಣೆ ವೇಳೆ ತಪ್ಪು ಪ್ರಮಾಣ ಪತ್ರ ಸಲ್ಲಿಕೆ ಹಿನ್ನಲೆ ಪರಾಜಿತ ಬಿಜೆಪಿ (BJP) ಅಭ್ಯರ್ಥಿ ಶಿವಕುಮಾರ್ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಪತ್ನಿಯ ಹೆಸರಲ್ಲಿದ್ದ ಆಸ್ತಿಗಳನ್ನ ಹ್ಯಾರಿಸ್ ಘೋಷಿಸಿಲ್ಲ. ಅಲ್ಲದೇ ತಮ್ಮ ಹೆಸರಲ್ಲಿರುವ ಆಸ್ತಿಗಳ ಕಡಿಮೆ ಮೌಲ್ಯಮಾಪನ ಮಾಹಿತಿ ಸಲ್ಲಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‍ನ ಏಕಸದಸ್ಯ ಪೀಠ ನಡೆಸುತ್ತಿದೆ. ಇದನ್ನೂ ಓದಿ: ಕೊಲ್ಲೂರು ದೇಗುಲದ ಪಕ್ಕದಲ್ಲೇ ಹೈವೇ ಪ್ರಶ್ನಿಸಿ PIL- ಯಥಾಸ್ಥಿತಿಗೆ ಹೈಕೋರ್ಟ್ ಆದೇಶ

    ಅಸಮರ್ಪಕ ನಾಮಪತ್ರದಿಂದ ಪ್ರತಿಸ್ಪರ್ಧಿಗೆ ಹೇಗೆ ತೊಂದರೆ ಆಗಿದೆ ಎಂದು ವಿವರಿಸಿಲ್ಲ. ಪ್ರತಿಸ್ಪರ್ಧಿ ಸೋಲಿಗೆ ಹೇಗೆ ಕಾರಣವಾಯಿತು ಎಂಬ ನಿಖರ ಅಂಶವನ್ನು ಅರ್ಜಿದಾರರು ಅರ್ಜಿಯಲ್ಲಿ ಉಲ್ಲೇಖಿಸಿಲ್ಲ. ಹೀಗಾಗಿ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಜಾ ಮಾಡುವಂತೆ ಹ್ಯಾರಿಸ್ ಕೋರ್ಟ್‍ಗೆ ಮನವಿ ಮಾಡಿದ್ದರು. ಈಗ ಹ್ಯಾರೀಸ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾ.ಸೂರಜ್ ಗೋವಿಂದ್ ರಾಜ್ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ. ಅಲ್ಲದೇ ಪರಾಜಿತ ಅಭ್ಯರ್ಥಿ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣಾ ಯೋಗ್ಯವಾಗಿದೆ ಎಂದು ಅಭಿಪ್ರಾಯಪಟ್ಟ ಕೋರ್ಟ್ ವಿಚಾರಣೆಯನ್ನು ಫೆ.27ಕ್ಕೆ ಮುಂದೂಡಿದೆ.

    ಅರ್ಜಿಯಲ್ಲಿ ಏನಿದೆ?
    2023ರ ಚುನಾವಣೆಯಲ್ಲಿ ಎನ್.ಎ ಹ್ಯಾರಿಸ್ ತಮ್ಮ ಚರ ಮತ್ತು ಸ್ಥಿರಾಸ್ತಿಗಳ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸಿಲ್ಲ. ಸುಳ್ಳು ಘೋಷಣೆಯ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಚರ ಮತ್ತು ಸ್ಥಿರಾಸ್ತಿಗಳನ್ನು ವಾಸ್ತವಕ್ಕಿಂತಲೂ ಕಡಿಮೆ ಅಂದಾಜಿನಲ್ಲಿ ದಾಖಲಿಸಿದ್ದಾರೆ. ಅಸಮರ್ಪಕ ನಾಮಪತ್ರ ಸ್ವೀಕಾರದ ಕಾರಣದಿಂದಾಗಿ ಅದು ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಿ ನನ್ನ ಸೋಲಿಗೆ ಕಾರಣವಾಗಿದೆ. ಹೀಗಾಗಿ ಹ್ಯಾರಿಸ್ ಅವರನ್ನು ಅನರ್ಹಗೊಳಿಸಿ ನನ್ನನ್ನೇ ವಿಜೇತ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಅರ್ಜಿಯಲ್ಲಿ ಮನವಿ ಮಾಡಿದ್ದರು. ಇದನ್ನೂ ಓದಿ: ಚಂಡೀಗಢ ಮೇಯರ್ ಚುನಾವಣೆ: ಎಎಪಿ ಅಭ್ಯರ್ಥಿಗೆ ಗೆಲುವು ಘೋಷಿಸಿದ ಸುಪ್ರೀಂ ಕೋರ್ಟ್

  • ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ ಅಂಜಾರಿಯಾ ನೇಮಕ

    ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ ಅಂಜಾರಿಯಾ ನೇಮಕ

    ಬೆಂಗಳೂರು: ಕರ್ನಾಟಕ ಹೈಕೋರ್ಟ್ (Karnataka High Court) ಮುಖ್ಯ ನ್ಯಾಯಮೂರ್ತಿಯಾಗಿ (Chief Justice) ಎನ್.ವಿ ಅಂಜಾರಿಯಾ (NV Anjaria) ನೇಮಕಗೊಂಡಿದ್ದಾರೆ.

    ಹಾಲಿ ಮುಖ್ಯ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಅವರು ಫೆಬ್ರವರಿ 24ರಂದು ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಇದನ್ನೂ ಓದಿ: ಐದು ಗ್ಯಾರಂಟಿ ಯೋಜನೆ ಪೂರೈಸಲು ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ: ನಿಖಿಲ್

    ಫೆಬ್ರವರಿ 24ರ ಬಳಿಕ ಎನ್.ವಿ ಅಂಜಾರಿಯಾ ಅವರು ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಲಿದ್ದಾರೆ. ಎನ್.ವಿ ಅಂಜಾರಿಯಾ ಅವರು ಗುಜರಾತ್ ಹೈಕೋರ್ಟ್‌ನಲ್ಲಿ (Gujarat High Court) ಹಾಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ರಾಜ್ಯ ಬಜೆಟ್‌ನ್ನು ಹಾಡಿ ಹೊಗಳಿದ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್