Tag: high court

  • ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಎಂ ಸಿದ್ದರಾಮಯ್ಯ

    ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಎಂ ಸಿದ್ದರಾಮಯ್ಯ

    ನವದೆಹಲಿ: ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದಕ್ಕೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ (Supreme Court) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅರ್ಜಿ ಸಲ್ಲಿಸಿದ್ದಾರೆ. ಫೆ.19 ರಂದು ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.

    ಫೆಬ್ರವರಿ 2022 ರಲ್ಲಿ ಗುತ್ತಿಗೆದಾರ ಸಂತೋಷ್ ಅವರ ಆತ್ಮಹತ್ಯೆಯ ಹಿನ್ನಲೆಯಲ್ಲಿ ಅಂದಿನ ಸಚಿವ ಕೆಎಸ್ ಈಶ್ವರಪ್ಪ ಅವರ ರಾಜೀನಾಮೆ ಮತ್ತು ಬಂಧನಕ್ಕೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆ ವೇಳೆ ಮುಂಜಾಗ್ರತಾ ಕ್ರಮವಾಗಿ ಅವರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣವನ್ನು ದಾಖಲಾಗಿಸಲಾಗಿತ್ತು. ಇದನ್ನೂ ಓದಿ: ಚುನಾವಣಾ ಬಾಂಡ್‌ಗಳ ಯೋಜನೆ ಅಸಂವಿಧಾನಿಕ: ಸುಪ್ರೀಂ ಕೋರ್ಟ್‌

    ಕಳೆದ ವಾರ ಈ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court) ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ವಿಚಾರಣಾ ನ್ಯಾಯಾಲಯದ ವಿಚಾರಣೆಯನ್ನು ರದ್ದುಗೊಳಿಸಲು ನಿರಾಕರಿಸಿತು ಮತ್ತು ಫೆಬ್ರವರಿ 26 ರಂದು ವಿಚಾರಣಾ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆಯೂ ಸೂಚಿಸಿತ್ತು.  ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ

    ಈ ಆದೇಶದ ವಿರುದ್ಧ ಮೇಲ್ಮನವಿ ಅರ್ಜಿ ಸಲ್ಲಿಸಿರುವ ಸಿಎಂ ಸಿದ್ದರಾಮಯ್ಯ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 141 (ಕಾನೂನುಬಾಹಿರ ಸಭೆ) ಯಾವುದೇ ಅಂಶಗಳನ್ನು ಪ್ರಕರಣದಲ್ಲಿ ಪೂರೈಸಲಾಗಿಲ್ಲ, ಮುಖ್ಯವಾಗಿ ಸಭೆ ಹಿಂಸಾಚಾರಕ್ಕೆ ಕಾರಣವಾಯಿತು ಎಂಬ ಯಾವುದೇ ಆರೋಪವಿಲ್ಲ, ದೂರುದಾರರು ರಾಜಕೀಯ ವರಿಷ್ಠರ ಆದೇಶದ ಮೇರೆಗೆ ದೂರು ದಾಖಲಿಸಿರಬಹುದು ಎಂದು ಸಿದ್ದರಾಮಯ್ಯ ಅರ್ಜಿಯಲ್ಲಿ ಆರೋಪಿಸಿದ್ದಾರೆ.

    ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 103 ರ ಅಡಿಯಲ್ಲಿ ನಾವು ಯಾವುದೇ ಅಪರಾಧವನ್ನು ಮಾಡಿಲ್ಲ, ಸಾರ್ವಜನಿಕ ಸ್ಥಳಗಳಲ್ಲಿ ಟ್ರಾಫಿಕ್ ನಿಯಂತ್ರಿಸಲು ಅಥವಾ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ವಿಚಾರದಲ್ಲಿ ಆಯುಕ್ತರು ಅಥವಾ ಜಿಲ್ಲಾಧಿಕಾರಿಗಳು ಮಾಡಿದ ಆದೇಶಗಳನ್ನು ಉಲ್ಲಂಘಿಸಿದರೆ ದಂಡ ವಿಧಿಸಬಹುದು. ಹೀಗಾಗಿ ವಿಚಾರಣಾ ನ್ಯಾಯಾಲಯದಲ್ಲಿ ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸುವಂತೆ ಸಿದ್ದರಾಮಯ್ಯ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

     

  • ‘ರಾಜಧಾನಿ ಎಕ್ಸ್ ಪ್ರೆಸ್’ ಚಿತ್ರದಲ್ಲಿ ಸಿಎಂ ಜಗನ್ ವಿಲನ್?: ಕೋರ್ಟ್ ಮೆಟ್ಟಿಲೇರಿದ ವಿವಾದ

    ‘ರಾಜಧಾನಿ ಎಕ್ಸ್ ಪ್ರೆಸ್’ ಚಿತ್ರದಲ್ಲಿ ಸಿಎಂ ಜಗನ್ ವಿಲನ್?: ಕೋರ್ಟ್ ಮೆಟ್ಟಿಲೇರಿದ ವಿವಾದ

    ರಾಜ್ಯ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಆಂಧ್ರ ಪ್ರದೇಶದಲ್ಲಿ ಸಿನಿಮಾ ರಾಜಕಾರಣ ಕೂಡ ಅಷ್ಟೇ ವೇಗವನ್ನು ಪಡೆದುಕೊಳ್ಳುತ್ತಿದೆ. ಅಲ್ಲಿನ ರಾಜಕೀಯ ಮುಖಂಡರನ್ನು ಹೀರೋ, ವಿಲನ್ ರೀತಿಯಲ್ಲಿ ತೋರಿಸುವ ಮೂಲಕ ಸಿನಿ ರಾಜಕಾರಣಕ್ಕೆ ಮುಂದಾಗುತ್ತಿದ್ದಾರೆ ನಿರ್ದೇಶಕರು. ಈ ನಡೆಯನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೆಟ್ಟಿಲು ಕೂಡ ಹತ್ತಿದ್ದಾರೆ.

    ಇತ್ತೀಚೆಗಷ್ಟೇ ಆಂಧ್ರದ ಸಿಎಂ ಜಗನ್ ಮೋಹನ್ ರೆಡ್ಡಿ (Jagan Mohan Reddy) ಅವರನ್ನು ಹೀರೋ ಆಗಿ ತೋರಿಸಿದ್ದ ಯಾತ್ರ 2 ಚಿತ್ರ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಜಗನ್ ವಿರೋಧಿಗಳನ್ನು ವಿಲನ್ ರೀತಿಯಲ್ಲಿ ಬಿಂಬಿಸಲಾಗಿದೆ. ಚಂದ್ರ ಬಾಬು ನಾಯ್ಡು ವಿರುದ್ಧ ವ್ಯೂಹಂ ಚಿತ್ರ ರೆಡಿಯಾಗಿದೆ. ಅದು ಇನ್ನಷ್ಟೇ ಬಿಡುಗಡೆ ಆಗಬೇಕು. ಈ ನಡುವೆ ರಾಜಧಾನಿ ಫೈಲ್ಸ್ (Rajdhani Files) ಎನ್ನುವ ಚಿತ್ರ ಸದ್ದು ಮಾಡುತ್ತಿದೆ.

    ರಾಜಧಾನಿ ಫೈಲ್ಸ್ ಸಿನಿಮಾದಲ್ಲಿ ನೇರವಾಗಿ ಜಗನ್ ಬಗ್ಗೆಯೇ ಮಾತನಾಡದೇ, ಜಗನ್ ಪಾತ್ರದ ಹೆಸರನ್ನು ಕೊಡಲಿ ನಾನಿ ಪಾತ್ರವಾಗಿಸಿದ್ದಾರೆ. ಸಚಿವೆ ರೋಜಾ ಪಾತ್ರವನ್ನೂ ಈ ಸಿನಿಮಾದಲ್ಲಿ ತರಲಾಗಿದೆ. ನಾನಿ ಮತ್ತು ಸಚಿವೆ ಕ್ಲಬ್ ಡಾನ್ಸ್ ಮಾಡುವಂತಹ ದೃಶ್ಯಗಳು ಇದರಲ್ಲಿ ಇವೆ ಎನ್ನುವುದು ಜಗನ್ ಪಕ್ಷದ ಆರೋಪ. ಹಾಗಾಗಿ ಈ ಸಿನಿಮಾವನ್ನು ರಿಲೀಸ್ ಮಾಡದಂತೆ ಜಗನ್ ಪಕ್ಷ ಕೋರ್ಟ್ ಮೆಟ್ಟಿಲು ಏರಿದೆ.

     

    ಜಗನ್, ಚಂದ್ರಬಾಬು ನಾಯ್ಡು ಸೇರಿದಂತೆ ಹಲವಾರು ರಾಜಕೀಯ ನಾಯಕರನ್ನು ಗುರಿಯಾಗಿರಿಸಿಕೊಂಡು ಸಿನಿಮಾ ಮಾಡಲಾಗುತ್ತಿದೆ. ಇದರ ಉದ್ದೇಶ ರಾಜಕಾರಣ ಎನ್ನುವುದು ಸ್ಪಷ್ಟವಾಗಿದ್ದರೂ, ಸಿನಿಮಾ ಮೂಲಕ ರಾಜಕೀಯ ಕೆಸರೆರಿಚಾಟಕ್ಕೆ ತೊಡಗಿದ್ದು ದುರಂತ ಎನ್ನುತ್ತಾರೆ ಸಿನಿಮಾ ಮೇಕರ್ಸ್.

  • ಮದ್ಯಪ್ರಿಯರಿಗೆ ಗುಡ್ ನ್ಯೂಸ್ – ಬೆಂಗಳೂರಲ್ಲಿ 3 ದಿನ ಅಲ್ಲ, 2 ದಿನ ಮಾತ್ರ ಮದ್ಯ ಮಾರಾಟ ಬಂದ್

    ಮದ್ಯಪ್ರಿಯರಿಗೆ ಗುಡ್ ನ್ಯೂಸ್ – ಬೆಂಗಳೂರಲ್ಲಿ 3 ದಿನ ಅಲ್ಲ, 2 ದಿನ ಮಾತ್ರ ಮದ್ಯ ಮಾರಾಟ ಬಂದ್

    ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ (Vidhan Parishad by-election) ಹಿನ್ನೆಲೆ ಮದ್ಯ ಮಾರಾಟಕ್ಕೆ (Alcohol Sale Ban) ವಿಧಿಸಿದ್ದ ನಿರ್ಬಂಧ‌ದಲ್ಲಿ ಮಾರ್ಪಾಡು ಮಾಡಲಾಗಿದೆ. ಮತದಾನದ ದಿನ ಮತ್ತು ಎಣಿಕೆ‌‌ ದಿನದಂದು ಮಾತ್ರ ಮದ್ಯ ಮಾರಾಟಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿ ಆದೇಶ ಪ್ರಕಟಿಸಿದೆ.

    ಫೆ.16 ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಮತ್ತು ಫೆ.20 ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಮಾತ್ರ ಮದ್ಯ ಮಾರಾಟ ನಿರ್ಬಂಧ ಹೇರಿ ‌‌ನ್ಯಾ. ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ಪ್ರಕಟಿಸಿದೆ.  ಇದನ್ನೂ ಓದಿ: ರಾಜ್ಯದಲ್ಲಿ ಬೇಬಿ ಅಂಬುಲೆನ್ಸ್ ಆರಂಭ – ವಿಶೇಷತೆ ಏನು?

    ಆಹಾರ ಪೂರೈಸಲು ರೆಸ್ಟೋರೆಂಟ್‌ಗಳಿಗೆ ನಿರ್ಬಂಧವಿಲ್ಲ. ಮದ್ಯಪಾನ ನಿರ್ಬಂಧಿಸದಿದ್ದರೆ ಶಿಕ್ಷಕರು ಮದ್ಯ ಸೇವಿಸುತ್ತಾರೆಂದು ಭಾವಿಸಬೇಕಿಲ್ಲ. ಮುಕ್ತ, ನ್ಯಾಯಸಮ್ಮತ ಮತದಾನಕ್ಕೆ ಇಷ್ಟು ದಿನದ ನಿರ್ಬಂಧ ಅಗತ್ಯವಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಈ ಆದೇಶ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರಕ್ಕೂ ಅನ್ವಯವಾಗುತ್ತದೆ. ಇದನ್ನೂ ಓದಿ: ದೇವಾಲಯಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ: ರಾಮಲಿಂಗಾ ರೆಡ್ಡಿ

    10 ಸಾವಿರ ಮಹಿಳೆಯರು ಹಾಗೂ 6,000 ಪುರುಷರು ಇರುವ ಒಂದೇ ಒಂದು ಶಿಕ್ಷಣ ಕ್ಷೇತ್ರಕ್ಕೆ16ನೇ ತಾರೀಖು ನಡೆಯುವ ಚುನಾವಣೆಗೆ 3600 ಕ್ಕೂ ಹೆಚ್ಚಿಗೆ ಸನ್ನದುಗಳನ್ನು ಮುಚ್ಚಲು ಆದೇಶ ಕೊಟ್ಟಿರುವುದು ಅನಗತ್ಯ ಹಾಗೂ ಅವೈಜ್ಞಾನಿಕ. ಇದನ್ನು ಮರು ಪರಿಶೀಲಿಸಲೆಂದು ಖುದ್ದು ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೆವು. ಆದರೆ ನಮ್ಮ ಪರವಾಗಿ ಸೂಕ್ತ ಆದೇಶ ಬಂದಿರುವುದಿಲ್ಲ. ಈ ಕಾರಣದಿಂದ ನಾವು ಹೈಕೋರ್ಟ್‌ ಮೊರೆ ಹೋಗಿದ್ದೆವು. ನ್ಯಾಯಾಧೀಶರು ನಮ್ಮ ಪರ ವಾದವನ್ನು ಆಲಿಸಿದ ನಂತರ 16 ಮತ್ತು 20 ನೇ ತಾರೀಕು ಎರಡು ದಿನಗಳು ಮಾತ್ರ ಬಂದ್ ಮಾಡಬೇಕೆಂಬ ಆದೇಶವನ್ನುಹೊರಡಿಸಿರುತ್ತಾರೆ. ಈ ಸಮಂಜಸವಾದ ನ್ಯಾಯ ಸಿಕ್ಕಿರುವುದು ಸಂತಸದ ವಿಷಯ. ವಕೀಲರಾದ ಅರುಣ್ ಶ್ಯಾಮರವರ ಜೊತೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಪಿಸಿ ರಾವ್ ಹೇಳಿದ್ದಾರೆ.

     

    ಉಪ ಚುನಾವಣೆ ಹಿನ್ನೆಲೆ ಫೆಬ್ರವರಿ 14ರ ಸಂಜೆಯಿಂದ 16ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶ ಪ್ರಕಟಿಸಿತ್ತು.

    ಬೆಂಗಳೂರು ನಗರ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಶಿಕ್ಷಕರು (ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ ಮತ್ತು ಆನೇಕಲ್) ಶಿಕ್ಷಕರು ಮತದಾನ ಮಾಡಲಿದ್ದಾರೆ. ಮಾದರಿ ನೀತಿ ಸಂಹಿತೆ ಫೆ.23ರವರೆಗೆ ಜಾರಿಯಾಲ್ಲಿರಲಿದೆ.

  • ಡಿಕೆಶಿ ಮೇಲೆ ಲೋಕಾಯುಕ್ತದಿಂದ ಎಫ್‌ಐಆರ್‌ ದಾಖಲು

    ಡಿಕೆಶಿ ಮೇಲೆ ಲೋಕಾಯುಕ್ತದಿಂದ ಎಫ್‌ಐಆರ್‌ ದಾಖಲು

    ಬೆಂಗಳೂರು: ಸಿಬಿಐ ತನಿಖೆಯ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಮೇಲೆ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ (FIR) ದಾಖಲಿಸಿದ್ದಾರೆ.

    ಅಕ್ರಮ ಆಸ್ತಿಗಳಿಕೆ ಪ್ರಕರಣದ ತನಿಖೆಯ ಪೂರ್ವಾನುಮತಿಯನ್ನು ಹಿಂಪಡೆದ ಬಳಿಕ ಸರ್ಕಾರ ತನಿಖೆಯ ಜವಾಬ್ದಾರಿಯನ್ನು ಲೋಕಾಯುಕ್ತಕ್ಕೆ ನೀಡಿತ್ತು. ಈಗ ಲೋಕಾಯುಕ್ತ ಪೊಲೀಸರು ಫೆ.8 ರಂದು ಡಿಕೆಶಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.   ಇದನ್ನೂ ಓದಿ: ದೆಹಲಿಯ ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ಗೆ 1 ಸ್ಥಾನ- AAP ಪ್ರಸ್ತಾಪ

    ಲೋಕಾಯುಕ್ತ ನೀಡಿದ ನಿರ್ಧಾರ ಪ್ರಶ್ನಿಸಿ ಸಿಬಿಐ (CBI) ಈಗಾಗಲೇ ಹೈಕೋರ್ಟ್ (HighCourt) ಮೆಟ್ಟಿಲೇರಿದೆ. ಪ್ರಕರಣದ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ನೀಡಿದ್ದ ಆದೇಶವನ್ನು ಪ್ರಶ್ನಿಸಿದೆ. ಇದನ್ನೂ ಓದಿ: ಕೋಲಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲೇ ಬಡಿದಾಡಿಕೊಂಡ ಕಾರ್ಯಕರ್ತರು

    ಒಂದೇ ಪ್ರಕರಣಕ್ಕೆ ಮತ್ತೊಂದು ಎಫ್‍ಐಆರ್ ಮಾಡಲು ಸಾಧ್ಯವಿಲ್ಲ. ಹೀಗಿರುವಾಗ ಲೋಕಾಯುಕ್ತಕ್ಕೆ (Lokayukta) ಕೊಟ್ಟಿರುವ ಆದೇಶ ಸರಿಯಲ್ಲ ಎಂದು ಸಿಬಿಐ ವಾದ ಮಂಡಿಸಿದೆ.

     

  • ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು: ಸಿದ್ದರಾಮಯ್ಯಗೆ 10 ಸಾವಿರ ರೂ. ದಂಡ

    ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು: ಸಿದ್ದರಾಮಯ್ಯಗೆ 10 ಸಾವಿರ ರೂ. ದಂಡ

    ಬೆಂಗಳೂರು: ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆಯನ್ನು ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ. ಜನ ನಾಯಕರಾದವರು ಮೊದಲು ಕಾನೂನು (Law) ಪಾಲಿಸಬೇಕು ಎಂದು ಹೈಕೋರ್ಟ್‌ (High Court) ಸಿದ್ದರಾಮಯ್ಯ (Siddaramaiah) ಮತ್ತು ಇತರ ಕಾಂಗ್ರೆಸ್‌ ನಾಯಕರಿಗೆ ಚಾಟಿ ಬೀಸಿ 10,000 ರೂ. ದಂಡ ವಿಧಿಸಿದೆ.

    ಪ್ರತಿಭಟನೆ (Protest) ನಡೆಸಿ ರಸ್ತೆ ತಡೆ ನಡೆಸಿದ ಕಾಂಗ್ರೆಸ್‌ ನಾಯಕರ (Congress Leaders) ವಿರುದ್ಧ ಕೇಸ್‌ ದಾಖಲಾಗಿತ್ತು. ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ  ಕೋರಿ ಸಿದ್ದರಾಮಯ್ಯ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಿದ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಮಾರ್ಚ್‌ 6 ರಂದು ಖುದ್ದು ಸಿದ್ದರಾಮಯ್ಯ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶ ಪ್ರಕಟಿಸಿದೆ.

    ಎಲ್ಲಾ ಆರೋಪಿಗಳಿಗೆ 10 ಸಾವಿರ ರೂ. ದಂಡ ವಿಧಿಸಿದ ಕೋರ್ಟ್‌ ಮಾರ್ಚ್ 7 ರಂದು ರಾಮಲಿಂಗಾರೆಡ್ಡಿ, ಮಾರ್ಚ್ 11 ರಂದು ರಣದೀಪ್ ಸುರ್ಜೇವಾಲಾ, ಮಾರ್ಚ್ 15 ರಂದು ಎಂ.ಬಿ.ಪಾಟೀಲ್ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಿದೆ.  ಇದನ್ನೂ ಓದಿ: ತಿಂಡಿ ಮಾಡದ್ದಕ್ಕೆ ತಾಯಿಯನ್ನು ಹತ್ಯೆಗೈದ ಕೇಸ್‍ಗೆ ಟ್ವಿಸ್ಟ್ – ಕೊಲೆ ಮಾಡಿದ್ದು ಮಗನಲ್ಲ, ತಂದೆಯಿಂದಲೇ ಕೃತ್ಯ

    ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಪಿಎಸ್ ಐ ಕು.ಜಹಿದಾ ಹೈಗ್ರೌಂಡ್ಸ್‌ ಠಾಣೆಯಲ್ಲಿ ಪಿಎಸ್‌ಐ ಆಗಿದ್ದರು. ಪ್ರಕರಣದಲ್ಲಿ ಅವರನ್ನು ಅನಗತ್ಯವಾಗಿ ಎಳೆದು ತಂದು ಪ್ರತಿವಾದಿಯನ್ನಾಗಿ ಕಾಂಗ್ರೆಸ್‌ ಮಾಡಿದ್ದಕ್ಕೆ ನ್ಯಾಯಾಲಯ 10 ಸಾವಿರ ರೂ. ದಂಡ ವಿಧಿಸಿದೆ.

    ಈ ವೇಳೆ ಮೇಲ್ಮನವಿ ಸಲ್ಲಿಸುವವರೆಗೆ ಆದೇಶಕ್ಕೆ ತಡೆ ನೀಡಲು ಸಿದ್ದರಾಮಯ್ಯ ಪರ ವಕೀಲರು ಮನವಿ ಮಾಡಿದ್ದರು. ಆದರೆ ಈ ಮನವಿಯನ್ನು ತಿರಸ್ಕರಿಸಿದ ಕೋರ್ಟ್‌ ಜನಪ್ರತಿನಿಧಿಗಳಾದವರು ಕಾನೂನು ಪಾಲಿಸಿದರೆ ಜನರು ಪಾಲಿಸುತ್ತಾರೆ. ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ ಕಷ್ಟವಾಗುತ್ತದೆ. ಸಿಟಿ ಲೈಫ್ ಈಸ್ ಟಾರ್ಚರ್, ಪ್ರತಿಭಟನೆಗಳಿಂದ ಜನರಿಗೆ ಮತ್ತಷ್ಟು ತ್ರಾಸ. ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕಟು ಪದಗಳನ್ನು ಬಳಸಿ ಕಾಂಗ್ರೆಸ್‌ ನಾಯಕರನ್ನು ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತ ಖ್ಯಾತ ಹಾಕಿ ಆಟಗಾರನಿಂದ ಅಪ್ರಾಪ್ತೆಯ ಮೇಲೆ ರೇಪ್‌!

    ಏನಿದು ಪ್ರಕರಣ?
    ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ (KS Eshwarappa) ಅವರ ರಾಜೀನಾಮೆಗೆ ಆಗ್ರಹಿಸಿ 2022ರ ಏಪ್ರಿಲ್ 14ರಂದು ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತ್ತು . ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಅಡಿ ಹೈಗೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

    ಈ ಸಂಬಂಧ 42ನೇ ಎಸಿಎಂಎಂ ನ್ಯಾಯಾಲಯ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಜಾರಿ ಮಾಡಿದ್ದ ಜಾಮೀನು ರಹಿತ ಬಂಧನ ವಾರೆಂಟ್ (NBW) ಹಾಗೂ ವಿಶೇಷ ನ್ಯಾಯಾಲಯ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ, ಎಂ.ಬಿ.ಪಾಟೀಲ್ ಮತ್ತು ಎಎಐಸಿಸಿ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

     

  • ಯತ್ನಾಳ್ ಸಕ್ಕರೆ ಕಾರ್ಖಾನೆ ಬಂದ್ – ಅನುಮತಿ ಪಡೆಯುವರೆಗೂ ಕಾರ್ಖಾನೆ ನಡೆಸಲಾಗದು ಎಂದ ಕೋರ್ಟ್

    – ಫೆ.8ಕ್ಕೆ ವಿಚಾರಣೆ ಮುಂದೂಡಿಕೆ

    ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕುಟುಂಬದ ಒಡೆತನದಲ್ಲಿರುವ ಸಕ್ಕರೆ ಹಾಗೂ ಎಥೆನಾಲ್ ಘಟಕದ ಕಾರ್ಯಾಚರಣೆ ಸ್ಥಗಿತಗೊಳಿಸುವ ಕುರಿತು ಮಾಹಿತಿ ಪಡೆದು ತಿಳಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ (High Court) ಸೂಚನೆ ನೀಡಿದೆ.

    ಯತ್ನಾಳ್ ಪುತ್ರ ಹಾಗೂ ಸಂಸ್ಥೆಯ ನಿರ್ದೇಶಕ ರಮಣಗೌಡ ಬಿ.ಪಾಟೀಲ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ಇದನ್ನೂ ಓದಿ: ಕೋರ್ಟ್‌ ಅಂಗಳ ತಲುಪಿದ ಡಿಕೆಸು ಭಾರತ ವಿಭಜನೆ ಹೇಳಿಕೆ

    ವಿಚಾರಣೆ ವೇಳೆ ಅರ್ಜಿದಾರರ ವಕೀಲರು, ಘಟಕವನ್ನು ರಾಜಕೀಯ ಉದ್ದೇಶದಿಂದ ಸ್ಥಗಿತಗೊಳಿಸಲು ಒತ್ತಾಯಿಸಲಾಗುತ್ತಿದೆ ಎಂದು ವಾದಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಕಾರ್ಖಾನೆ ನಿಯಮದ ಪ್ರಕಾರ ನಡೆಯುತ್ತಿಲ್ಲ. ಇದರಿಂದಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ನ್ಯಾಯಾಲಯದ ಮುಂದೆ ವಿವರಿಸಿದ್ದಾರೆ.

    ಬಳಿಕ ನ್ಯಾಯಾಲಯ, ಕಾರ್ಖಾನೆ ಮುಚ್ಚುವ ಸಂಬಂಧ ಅರ್ಜಿದಾರರಿಂದ ಮಾಹಿತಿ ಪಡೆದು ತಿಳಿಸಬೇಕು ಎಂದು ಸೂಚಿಸಿದೆ. ಅಲ್ಲದೇ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿದೆ. ಅರ್ಜಿದಾರರು 2021ರಲ್ಲಿ ಕಾರ್ಖಾನೆ ಖರೀದಿಸಿದ್ದು, ನಾವೀಗ 2024ರಲ್ಲಿದ್ದೇವೆ. ಈ ಅವಧಿಯಲ್ಲಿ ಅಗತ್ಯ ಅನುಮತಿ ಪಡೆಯಬೇಕಿತ್ತು. ಕಾನೂನಿನ ಪ್ರಕಾರ ನೀವು ಅನುಮತಿ ಪಡೆಯುವವರೆಗೆ ಕಾರ್ಖಾನೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

    ಏನಿದು ಪ್ರಕರಣ? ಕಲಬುರಗಿ (Kalaburagi) ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿರುವ ಎಥೆನಾಲ್ ಮತ್ತು ಪವರ್ ಘಟಕ ಮುಚ್ಚುವಂತೆ ಕಲಬುರಗಿ ವಲಯದ ಹಿರಿಯ ಪರಿಸರ ಅಧಿಕಾರಿ ಜ.18ರಂದು ನೋಟಿಸ್ ಜಾರಿ ಮಾಡಿದ್ದರು. ಬಳಿಕ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣಾ ಮಂಡಳಿ ಜ.25ರಂದು ಆದೇಶ ಮಾಡಿತ್ತು. ಈ ಎರಡೂ ಆದೇಶವನ್ನು ರದ್ದುಮಾಡಬೇಕು ಎಂದು ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಪೇಟಿಎಂ ವ್ಯಾಲೆಟ್‌ ಸೇವೆ ಖರೀದಿ ಮತುಕತೆ ನಡೆದಿಲ್ಲ – ಜಿಯೋ ಫೈನಾನ್ಸ್‌ ಅಧಿಕೃತ ಹೇಳಿಕೆ

  • ಇಡಿ ಬಂಧನ ಪ್ರಶ್ನಿಸಿ ಹೇಮಂತ್ ಸೋರೆನ್ ಅರ್ಜಿ ವಿಚಾರಣೆಗೆ ಒಪ್ಪದ ಸುಪ್ರೀಂಕೋರ್ಟ್

    – ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸೂಚನೆ

    ನವದೆಹಲಿ : ಭೂ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮನ್ನು ಬಂಧಿಸಿದ ಜಾರಿ ನಿರ್ದೇಶನಾಲಯ (ED) ನಿರ್ಧಾರ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ (Hemanth Soren) ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ (Supreme Court) ನಿರಾಕರಿಸಿದೆ. ನ್ಯಾ. ಸಂಜೀವ್ ಖನ್ನಾ ನೇತೃತ್ವದ ತ್ರಿ ಸದಸ್ಯ ಪೀಠವು ಹೈಕೋರ್ಟ್ ಸಂಪರ್ಕಿಸುವಂತೆ ಸೂಚನೆ ನೀಡಿದೆ.

    ನಾವು ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ, ನೀವು ಏಕೆ ಮೊದಲು ಸುಪ್ರೀಂಕೋರ್ಟ್‌ ಸಂಪರ್ಕಿಸಿದ್ದೀರಿ? ನ್ಯಾಯಾಲಯಗಳು ಎಲ್ಲರಿಗೂ ತೆರೆದಿರುತ್ತವೆ, ನಾವು ಒಬ್ಬ ವ್ಯಕ್ತಿಗೆ ಅವಕಾಶ ನೀಡಿದರೆ ಎಲ್ಲರಿಗೂ ಅವಕಾಶ ನೀಡಬೇಕಾಗುತ್ತದೆ.‌ ನೀವು ಮೊದಲು ಜಾರ್ಖಂಡ್ ಹೈಕೋರ್ಟ್‌ಗೆ ತೆರಳಿ ಎಂದು ನ್ಯಾ. ಸಂಜೀನ್ ಖನ್ನಾ ಸೂಚನೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸೋರೆನ್ ಪರ ವಕೀಲ ಕಪಿಲ್ ಸಿಬಲ್, ನಾವು ಮುಖ್ಯಮಂತ್ರಿಯನ್ನು ಪ್ರತಿನಿಧಿಸುತ್ತಿದ್ದೇವೆ ಪ್ರಕರಣ ಗಂಭೀರವಾಗಿದೆ ಎಂದು ವಾದಿಸಿದರು.

    ಇದಕ್ಕೆ ಪ್ರತಿಯಾಗಿ ಉತ್ತರಿಸಿದ ನ್ಯಾ ಸಂಜೀನ್ ಖನ್ನಾ, ದಯವಿಟ್ಟು ಹೈಕೋರ್ಟ್‌ಗೆ ಹೋಗಿ, ನಾವು ಮಧ್ಯಪ್ರವೇಶಿಸುವುದಿಲ್ಲ. ನಾವು ಆರ್ಟಿಕಲ್ 32 ರ ಅಡಿಯಲ್ಲಿ ಪ್ರಸ್ತುತ ಅರ್ಜಿಯನ್ನು ಪರಿಗಣಿಸಲು ಒಲವು ಹೊಂದಿಲ್ಲ. ಆರ್ಟಿಕಲ್ 226 ರ ಅಡಿಯಲ್ಲಿ ನ್ಯಾಯವ್ಯಾಪ್ತಿಯ ಹೈಕೋರ್ಟ್ ಅನ್ನು ಸಂಪರ್ಕಿಸಲು ಮುಕ್ತವಾಗಿ ಬಿಡುತ್ತೇವೆ. ಹೈಕೋರ್ಟ್‌ನಲ್ಲಿ (High Court) ಅರ್ಜಿ ಸಲ್ಲಿಸಲಾಗಿದೆ ಮತ್ತು ಇನ್ನೂ ಬಾಕಿ ಇದೆ ಎಂದು ನಮಗೆ ತಿಳಿಸಲಾಗಿದೆ. ನಂತರ ಮತ್ತೊಂದು ಮನವಿ ಸಲ್ಲಿಸಲಾಗಿದೆ. ಆರ್ಟಿಕಲ್ 226 ರ ಅಡಿಯಲ್ಲಿ ಅದನ್ನು ನಂತರ ಹಿಂತೆಗೆದುಕೊಳ್ಳಲಾಯಿತು. ಅರ್ಜಿಯನ್ನು ತಿದ್ದುಪಡಿ ಮಾಡಲು ಅರ್ಜಿದಾರರಿಗೆ ಮುಕ್ತವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಹೇಮಂತ್‌ ಸೋರೆನ್‌ ತಂದೆಯೂ ಹಿಂದೆ ಜೈಲುಪಾಲು!

    ಸೋರೆನ್‌ ಅರೆಸ್ಟ್: ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ ಬಳಿಕ ಹೇಮಂತ್‌ ಸೋರೆನ್‌ ಅವರನ್ನು ಬುಧವಾರ ಸಂಜೆ ಬಂಧಿಸಲಾಗಿತ್ತು. ಬಳಿಕ ಗುರುವಾರ ಮಧ್ಯಾಹ್ನ ಅವರನ್ನು ರಾಂಚಿಯ PMLA ಕೋರ್ಟಿಗೆ ಹಾಜರುಪಡಿಸಲಾಯಿತು. ಈವೇಳೆ ಇಡಿ 10 ದಿನಗಳ ಕಾಲ ಕಸ್ಟಡಿಗೆ ಕೋರಿತ್ತು. ಆದರೆ ನ್ಯಾಯಾಲಯ ಸೋರೆನ್ ಅವರನ್ನು ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    ಬುಧವಾರ ಭಾರೀ ಭದ್ರತೆ ನಡುವೆ ರಾಂಚಿಯ ಸಿಎಂ ನಿವಾಸಕ್ಕೆ ಬಂದ ಇಡಿ ಅಧಿಕಾರಿಗಳು ಹೇಮಂತ್ ಸೋರೆನ್‌ಗೆ ಪ್ರಶ್ನೆಗಳನ್ನು ಕೇಳಿದ್ದರು. ಸತತ 8 ಗಂಟೆಯ ವಿಚಾರಣೆಯ ಬಳಿಕ ಇಡಿ ಬಂಧಿಸಿತ್ತು. ಮುಂಜಾಗ್ರತಾ ಕ್ರಮವಾಗಿ ರಾಂಚಿಯಲ್ಲಿ ಭದ್ರತೆಗೆ 7ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು. ಈ ನಡುವೆ ಹೇಮಂತ್‌ ಸೋರೆನ್‌ ಅವರು ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸಕ್ಕೆ ಸೋಮವಾರ ಅಧಿಕಾರಿಗಳು ದಾಳಿ ನಡೆಸಿದ್ದರ ಕುರಿತು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ರಾಂಚಿಯಲ್ಲಿ ಎಫ್‌ಐಆರ್ ದಾಖಲು ಮಾಡಿದ್ದಾರೆ. ‌

  • ಕರ್ನಾಟಕ ಹೈಕೋರ್ಟ್‌ ಸಿಜೆಯಾಗಿ ದಿನೇಶ್ ಕುಮಾರ್ ನೇಮಕ

    ಬೆಂಗಳೂರು: ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

    ನ್ಯಾಯಮೂರ್ತಿ ಕುಮಾರ್ ಅವರು ಈಗ ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದ ಪ್ರಸನ್ನ ಬಿ. ವರಾಳೆ ಅವರು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ ಹಿನ್ನೆಲೆಯಲ್ಲಿ ಹಂಗಾಮಿ ಸಿಜೆಯಾಗಿ ನೇಮಕಗೊಂಡಿದ್ದರು.  ಇದನ್ನೂ ಓದಿ: ಹಿಂದೂಗಳಿಗೆ ದೊಡ್ಡ ಗೆಲುವು – ಜ್ಞಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ

    ನ್ಯಾ.ಪಿ.ಎಸ್. ದಿನೇಶ್ ಕುಮಾರ್ ಫೆಬ್ರವರಿ 24ರಂದು ಕರ್ತವ್ಯದಿಂದ ನಿವೃತ್ತರಾಗಲಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅವರ ಅಧಿಕಾರ ಅವಧಿ ಒಂದು ತಿಂಗಳಿಗೂ ಮೊದಲೇ ಕೊನೆಯಾಗಲಿದೆ.

    ನ್ಯಾಯಮೂರ್ತಿ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಜನವರಿ 19ರಂದು ಶಿಫಾರಸು ಮಾಡಿತ್ತು.  ಇದನ್ನೂ ಓದಿ: ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವನೆ – ಇದು ಪಿಕ್ನಿಕ್‌ ಸ್ಪಾಟ್‌ ಅಲ್ಲ ಎಂದು ಕೋರ್ಟ್‌ ಗರಂ

     

  • ಲೋಕಾಯುಕ್ತಕ್ಕೆ ತನಿಖೆ ವರ್ಗಾಯಿಸಿದ್ರೂ ಸಿಬಿಐ ನೋಟಿಸ್‌ ನೀಡೋದು ಸರಿಯಲ್ಲ: ಸಿಂಘ್ವಿ ವಾದ

    ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ (Disproportionate Assets Case) ಸಂಬಂಧಿಸಿದಂತೆ ಇಂದು ಹೈಕೋರ್ಟ್‌ನಲ್ಲಿ (High Court) ಅರ್ಜಿ ವಿಚಾರಣೆ ನಡೆಯಿತು.

    ಸರ್ಕಾರ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್‌ ಪಡೆದ ಬಗ್ಗೆ ನ್ಯಾ. ಕೆ. ಸೋಮಶೇಖರ್, ನ್ಯಾ. ಉಮೇಶ್ ಎಂ. ಅಡಿಗ ಅವರಿದ್ದ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯಿತು. ಇದನ್ನೂ ಓದಿ: ಹಿಂದೂಗಳಿಗೆ ದೊಡ್ಡ ಗೆಲುವು – ಜ್ಞಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ

    ಈಗಾಗಲೇ ಈ ಪ್ರಕರಣದ ತನಿಖೆಯ ಹೊಣೆ ಲೋಕಾಯುಕ್ತ ಪೊಲೀಸರಿಗೆ ವರ್ಗಾಯಿಸಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರನ್ನು ಪ್ರತಿವಾದಿಯಾಗಿಸಲು ಮನವಿ ಮಾಡಲಾಯಿತು.  ಇದನ್ನೂ ಓದಿ: ಮೈಸೂರಿಗೂ ಕಾಲಿಟ್ಟ ಧ್ವಜ ದಂಗಲ್- ಪ್ರತಾಪ್ ಸಿಂಹ ವಿರೋಧದ ಬೆನ್ನಲ್ಲೇ ಟಿಪ್ಪು ಬಾವುಟ ತೆರವು

    ಈ ವೇಳೆ ಸಿಬಿಐ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ, ತನಿಖೆಯ ಹೊಣೆ ಲೋಕಾಯುಕ್ತ ಪೊಲೀಸರಿಗೆ ವರ್ಗಾಯಿಸಿದರೂ ಸಿಬಿಐ ನೋಟಿಸ್‌ ನೀಡುತ್ತಿದೆ. ನೋಟಿಸ್‌ ನೀಡುತ್ತಿರುವ ಸಿಬಿಐ ಕ್ರಮ ಸರಿಯಲ್ಲ ಎಂದು ಮನವಿ ಮಾಡಿದರು.

    ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸಿಬಿಐ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಫೆ.12ಕ್ಕೆ ಮುಂದೂಡಿತು.

  • ಕೆಆರ್‌ಎಸ್‌ ಸುತ್ತಮುತ್ತ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ

    ಬೆಂಗಳೂರು: ಕೃಷ್ಣರಾಜ ಸಾಗರ (KRS) ಸುತ್ತಮುತ್ತ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಹೈಕೋರ್ಟ್‌ (High Court) ಮಹತ್ವದ ಆದೇಶ ಪ್ರಕಟಿಸಿದೆ.

    ಕೆಆರ್‌ಎಸ್ ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ (Mining) ನಡೆಸಬಾರದು. ಕೆಆರ್‌ಎಸ್ ಜಲಾಶಯಕ್ಕೆ ಹಾನಿ ಮಾಡುವುದನ್ನು ತಡೆಗಟ್ಟಬೇಕಿದೆ. ಕೆಆರ್‌ಎಸ್ ಸುರಕ್ಷತೆ ನಮಗೆ ಮುಖ್ಯ ಎಂದು ಹೈಕೋರ್ಟ್‌ ಮುಖ್ಯ ನಾಯಮೂರ್ತಿ ಪಿ ಬಿ ವರಾಳೆ ಮತ್ತು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗಿಯ ಪೀಠ ಹೇಳಿದೆ.  ಇದನ್ನೂ ಓದಿ: ಏಳು ಸುತ್ತಿನ ಕೋಟೆಯಾದ ಅಯೋಧ್ಯೆ – 30,000 ಯೋಧರು, AI ಕಣ್ಗಾವಲು – ಭದ್ರತೆಗೆ ವಿಶೇಷ ತಂಡಗಳ‌ ನಿಯೋಜನೆ

     

    ಭೂಪರಿವರ್ತನೆಗೂ ಮುನ್ನ ಪರೀಕ್ಷಾರ್ಥ ಸ್ಫೋಟ ನಡೆಸಿ ಹಾನಿ ಸಾಧ್ಯತೆ ಪರಿಗಣಿಸಿ ಅನುಮತಿಯ ಷರತ್ತು ಹಾಕಿದ್ದ ಜಿಲ್ಲಾಧಿಕಾರಿ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಈ ಆದೇಶ ಪ್ರಕಟಿಸಿದೆ.

     
    ಸರ್ಕಾರದ ನಿರ್ದೇಶನದಂತೆ ವೈಜ್ಞಾನಿಕ ಸಮೀಕ್ಷೆಗೆ ಆದೇಶಿಸಲಾಗಿದ್ದು, ಅಲ್ಲಿಯವರೆಗೆ ಗಣಿಗಾರಿಕೆಗೆ ಅನುಮತಿಸುವುದಿಲ್ಲ. ಗಣಿಗಾರಿಕೆಗೆ ಆದೇಶ ನೀಡಿದರೆ ಕೆಆರ್‌ಎಸ್ ಜಲಾಶಯಕ್ಕೆ ಭಾರೀ ಹಾನಿಯಾಗಲಿದೆ. ಕೆಆರ್‌ಎಸ್ ಅನ್ನು ಅಲ್ಲಿನ ಜನರ ರಕ್ತ ಮತ್ತು ಬೆವರಿನಿಂದ ಕಟ್ಟಲಾಗಿದೆ. ಜಲಾಶಯಕ್ಕೆ (Dam) ಏನಾದರೂ ತೊಂದರೆಯಾದರೆ ಏನು ಮಾಡುವುದು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮಾಲೂರು ಶಾಸಕ ನಂಜೇಗೌಡ ಮನೆ ಮೇಲೆ ಇಡಿ ದಾಳಿ

    ಕೆಆರ್‌ಎಸ್ ಸುರಕ್ಷತೆಯೇ ನಮಗೆ ಮುಖ್ಯವಾಗಿದೆ. ಈ ಕಾರಣಕ್ಕೆ ಕೆಆರ್‌ಎಸ್ ಸುತ್ತಮುತ್ತಲಿನ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸಬಾರದು ಎಂದು ವಿಭಾಗೀಯ ಪೀಠ  ಆದೇಶ ಪ್ರಕಟಿಸಿದೆ.