ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಿದ್ದ ಆರೋಪದಡಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿತ್ತು. ಚುನಾವಣಾ ಅಕ್ರಮದ ಕಾರಣಕ್ಕೆ ಸೂರಜ್ ರೇವಣ್ಣ ಅವರನ್ನು ಎಂಎಲ್‌ಸಿ ಸ್ಥಾನದಿಂದ ವಜಾಗೊಳಿಸಲು ಕೋರ್ಟ್‍ಗೆ ಅರ್ಜಿ ಸಲ್ಲಿಕೆಯಾಗಿತ್ತು. ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠದಿಂದ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಇಲ್ಲಿಯವರೆಗೆ ಸಿಕ್ಕಿರಲಿಲ್ಲ, ಮೋದಿಗೆ ಖರ್ಗೆ ಮ್ಯಾಚ್ ಆಗಬಲ್ಲ ನಾಯಕ – ಸತೀಶ್ ಜಾರಕಿಹೊಳಿ
ಚಿತ್ರದುರ್ಗ: ಪೋಕ್ಸೋ (POCSO) ಕೇಸಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುರುಘಾಶ್ರೀ (Muruga Shree) ತಮ್ಮ ಮಠದ (Muth) ಅಧಿಕಾರವನ್ನು ಮರಳಿ ಪಡೆದಿದ್ದಾರೆ.
ಪೋಕ್ಸೋ ಕೇಸಲ್ಲಿ 2022, ಸೆಪ್ಟೆಂಬರ್ 1ರಂದು ಮುರುಘಾಶ್ರೀ ಬಂಧನವಾಗಿತ್ತು. ಸತತ 14 ತಿಂಗಳು ಸೆರೆಮನೆ ವಾಸ ಅನುಭವಿಸಿದ್ದರು. ಈ ವೇಳೆ ರಾಜ್ಯ ಸರ್ಕಾರ ಮುರುಘಾಮಠದ ಆಡಳಿತ ನಿರ್ವಹಿಸಲು ನಿವೃತ್ತ ಐಎಎಸ್ ಅಧಿಕಾರಿ ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಿತ್ತು. ಇದನ್ನೂ ಓದಿ: ಆರ್‌ಎಸ್‌ಎಸ್‌ನಲ್ಲಿ ಜಾತಿ ಕೇಳಿ ಒಳಬಿಡುವ ಪದ್ಧತಿಯಿಲ್ಲ: ರಾಜಕುಮಾರ್
ಈ ನೇಮಕವನ್ನು ಪ್ರಶ್ನಿಸಿ ಮಠದ ಪರ ವಕೀಲರು ಹೈಕೋರ್ಟ್ ಮೊರೆಹೋಗಿದ್ದ ಹಿನ್ನೆಲೆ ಆಡಳಿತಾಧಿಕಾರಿ ನೇಮಕವನ್ನು ಹೈಕೋರ್ಟ್ ರದ್ದುಪಡಿಸಿತ್ತು. ಆಗ ಮಠದ ಪೀಠಾಧಿಪತಿಯಾಗಿದ್ದ ಮುರುಘಾಶ್ರೀ ಜೈಲಲ್ಲಿದ್ದ ಕಾರಣ, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಿಗೆ ತಾತ್ಕಾಲಿಕವಾಗಿ ಮಠದ ಆಡಳಿತದ ಅಧಿಕಾರ ನೀಡಿತ್ತು. ಇದನ್ನೂ ಓದಿ: ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ತಿಂಗಳಲ್ಲಿ ಖಾತಾ: ಉದ್ಯಮಿಗಳ ನಿಯೋಗಕ್ಕೆ ಎಂ.ಬಿ.ಪಾಟೀಲ್ ಭರವಸೆ
ಹೀಗಾಗಿ ಈವರೆಗೆ ಚಿತ್ರದುರ್ಗ (Chitradurga) ಪಿಡಿಜೆ ಅವರು ಮಠದ ಆಡಳಿತಾಧಿಕಾರಿ ಆಗಿದ್ದರು. ಆದರೆ ನವೆಂಬರ್ 16ರಂದು ಮುರುಘಾಶ್ರೀ ಜಾಮೀನಿನ ಮೇಲೆ ಬಿಡುಗಡೆಯಾದ ಬೆನ್ನಲ್ಲೇ ಮಠದ ಅಧಿಕಾರಕ್ಕಾಗಿ ಹೈಕೋರ್ಟ್ ಮೊರೆ ಹೋಗಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಅಧಿಕಾರ ಹಸ್ತಾಂತರಿಸುವಂತೆ ಚಿತ್ರದುರ್ಗದ ಪ್ರಿನ್ಸಿಪಲ್ ಡಿಸ್ಟ್ರಿಕ್ಟ್ ಮತ್ತು ಸೆಷನ್ಸ್ ಜಡ್ಜ್‌ಗೆ ಸೂಚಿಸಿದೆ. ಇದನ್ನೂ ಓದಿ: ಅಂಬಾರಿ ಆನೆ ಅರ್ಜುನನ ಸಮಾಧಿಗೆ ರಾಜವಂಶಸ್ಥ ಯದುವೀರ್ ಪೂಜೆ
ಮುರುಘಾಶ್ರೀಗೆ ಮಠದ ಆಡಳಿತಾಧಿಕಾರವನ್ನು ನ್ಯಾಯಾಧೀಶರು ಮರಳಿ ಹಸ್ತಾಂತರಿಸಿದ್ದಾರೆ. ಈ ಕುರಿತ ಪತ್ರಿಕಾ ಹೇಳಿಕೆಯನ್ನು ಮುರುಘಾ ಮಠ ಇಂದು ಬಿಡುಗಡೆ ಮಾಡಿದೆ. ಅಲ್ಲದೇ ಮುರುಘಾಶ್ರೀಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಪ್ರವೇಶಿಸದೇ ಜಿಲ್ಲೆಯಿಂದ ಹೊರಗಿದ್ದುಕೊಂಡೇ ಮಠದ ಆಡಳಿತ ನಡೆಸಲಿದ್ದಾರೆ ಎಂದು ಮಠದ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಮುರುಡೇಶ್ವರದ ರಂಗು ಹೆಚ್ಚಿಸಿದ ರಾಜ್ಯದ ಅತೀ ದೊಡ್ಡ ಫ್ಲೋಟಿಂಗ್ ಬ್ರಿಡ್ಜ್
ನವದೆಹಲಿ: ಚಲನಚಿತ್ರಗಳು (Movies) ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ತಂಬಾಕು ವಿರೋಧಿ ಎಚ್ಚರಿಕೆ (Anti Tobacco Warning) ಸಂದೇಶಗಳನ್ನು ಪ್ರದರ್ಶಿಸುವುದರ ವಿರುದ್ಧ ಅರ್ಜಿ ಸಲ್ಲಿಸಿದ್ದ ವಕೀಲರನ್ನು ದೆಹಲಿ ಹೈಕೋರ್ಟ್ (Delhi High Court) ಮಂಗಳವಾರ ತರಾಟೆಗೆ ತೆಗೆದುಕೊಂಡಿದ್ದು, ಎರಡು ದಿನಗಳಲ್ಲಿ ವಿಷಾದ ವ್ಯಕ್ತಪಡಿಸಿ ಅಫಿಡವಿಟ್ ಸಲ್ಲಿಸುವಂತೆ ಖಡಕ್ ಸೂಚನೆ ನೀಡಿದೆ.
ಇದಕ್ಕೂ ಮುನ್ನ ದೆಹಲಿ ಹೈಕೋರ್ಟ್‌ನ ಏಕಸದಸ್ಯ ಪೀಠದ ಅರ್ಜಿಯನ್ನು ವಜಾ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರ ಪೀಠವು, ಈ ವಿಷಯದಲ್ಲಿ ಸಂಪೂರ್ಣ ವಿಷಾದದ ಅಗತ್ಯವಿದೆ. ಅದಕ್ಕಿಂತ ಕಡಿಮೆ ಏನು ಇಲ್ಲ. ಎರಡು ದಿನದಲ್ಲಿ ವಿಷಾದ ವ್ಯಕ್ತಪಡಿಸಿ ಅಫಿಡವಿಟ್ ಸಲ್ಲಿಸುವಂತೆ ಸೂಚನೆ ನೀಡಿದೆ. ಇದನ್ನೂ ಓದಿ: ಬುಧವಾರ ನಡೆಯಬೇಕಿದ್ದ INDIA ಒಕ್ಕೂಟದ ಸಭೆ ಮುಂದೂಡಿಕೆ
ವಕೀಲರು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳನ್ನು ದುರುಪಯೋಗಪಡಿಸಿಕೊಂಡಿರುವುದರಿಂದ ಇಂತಹ ಅರ್ಜಿಗಳು ಕೋರ್ಟ್‌ಗೆ ಬರುತ್ತಿವೆ. ದೇಶದಲ್ಲಿ ಕ್ಯಾನ್ಸರ್ ಹರಡುತ್ತಿದೆ. ಕ್ಯಾನ್ಸರ್ ಹೇಗೆ ಹರಡುತ್ತಿದೆ ಎಂಬುದರ ಕುರಿತು ಜನರಿಗೆ ಅರಿವು ಮೂಡಿಸದಿದ್ದರೆ ಯುವ ಪೀಳಿಗೆ ತಪ್ಪು ಹಾದಿ ಹಿಡಿಯಬಹುದು. ತಂಬಾಕು ಲಾಬಿಗೆ ಪೂರಕವಾಗಿ ಅರ್ಜಿ ಸಲ್ಲಿಸಿರುವುದು ಸಮಂಜಸವಲ್ಲ. ಈ ಹಿನ್ನೆಲೆ ಇಂತಹ ಅರ್ಜಿಯನ್ನು ಸಲ್ಲಿಸುವ ವಕೀಲರು ವಿಷಾದ ವ್ಯಕ್ತಪಡಿಸದೇ ಬೇರೆ ಆಯ್ಕೆ ಇಲ್ಲ. ಡಿಸೆಂಬರ್ 7ರೊಳಗೆ ವಿಷಾದ ವ್ಯಕ್ತಪಡಿಸಿ ಅಫಿಡವಿಟ್ ಸಲ್ಲಿಸಬೇಕು ಎಂದು ತಿಳಿಸಿದೆ. ಇದನ್ನೂ ಓದಿ: ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಡಿ.7ಕ್ಕೆ ಪ್ರಮಾಣ ವಚನ?
ಇದಕ್ಕೂ ಮೊದಲು ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸುಬ್ರಮಣ್ಯ ಪ್ರಸಾದ್, ಅರ್ಜಿಯು ದುರುದ್ದೇಶದಿಂದ ಕೂಡಿದೆ. ತಂಬಾಕು ವಿರುದ್ಧ ಜಾಗೃತಿ ಮೂಡಿಸುವ ಸರ್ಕಾರವನ್ನು ತಡೆಯಲು ತಂಬಾಕು ಉದ್ಯಮದ ಲಾಬಿಯ ಬೆಂಬಲ ಈ ಅರ್ಜಿಯ ಹಿಂದೆ ಇದೆ ಎಂದು ಹೇಳಿದರು. ಭವಿಷ್ಯದಲ್ಲಿ ಕ್ಷುಲ್ಲಕ ಅರ್ಜಿಗಳನ್ನು ಸಲ್ಲಿಸುವುದರ ವಿರುದ್ಧ ವಕೀಲರಿಗೆ ಎಚ್ಚರಿಕೆ ನೀಡಲು ಅನುಕರಣೀಯ ವೆಚ್ಚಗಳೊಂದಿಗೆ ವಜಾಗೊಳಿಸಲು ಅರ್ಹರು ಎಂದು ಅಭಿಪ್ರಾಯಪಟ್ಟಿದ್ದರು. ಇದನ್ನೂ ಓದಿ: ಶ್ರೀರಾಮ ಮಂದಿರ ಉದ್ಘಾಟನೆಗೆ 2,500 ಸಂತರಿಗೆ ಆಹ್ವಾನ – ದಂಡ, ಚನ್ವಾರ್, ಛತ್ರ, ಪಾದುಕೆ ತರದಂತೆ ಮನವಿ
ಬೆಂಗಳೂರು: ಕೋರ್ಟ್ ದೇಶದ ಬಗ್ಗೆ ನನ್ನ ಲಾಯರ್ ಗಳು ತಿಳಿಸಬೇಕು. ಅವರು ನನಗೆ ತಿಳಿಸಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shiva Kumar) ಹೇಳಿದ್ದಾರೆ.
ಕೋರ್ಟ್ ಆದೇಶದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಸಿದ ಅವರು, ಯಾರು ಯಾರು ಏನು ಮಾತನಾಡಿದ್ದಾರೆ ಎಲ್ಲ ನಮ್ರತೆಯಿಂದ ನೋಡ್ತಿದ್ದೇನೆ, ನೋಡಿದ್ದೇನೆ. ಸೂಕ್ತ ಸಮಯದಲ್ಲಿ ಅದಕ್ಕೆಲ್ಲ ಉತ್ತರ ಕೊಡ್ತೇನೆ. ನಾನೇನು ತಪ್ಪು ಮಾಡಿಲ್ಲ. ನಾನು ಮಾಡಿದ್ದೆಲ್ಲ ಪಾರ್ಟಿ ಸಲುವಾಗಿ ಮಾಡಿದ ಕೆಲಸ. ಪಕ್ಷಕ್ಕೋಸ್ಕರ ನಾನು ಕೆಲಸ ಮಾಡಿದ್ದು. ಸಾಕಷ್ಟು ಅನುಭವಿಸಿದ್ದೇನೆ. ಮುಂದೆಯೂ ಕೂಡ ತೊಂದರೆ ಕೊಡ್ತೀನಿ ಅಂದ್ರೆ ಅದನ್ನು ನೋಡಲು ಭಗವಂತ ಇದ್ದಾನೆ. ನನಗೆ ತೊಂದರೆ ಕೊಟ್ಟಿದ್ದಕ್ಕೆ ಏನಾಯ್ತು ಅಂತ ರಾಜ್ಯದ ಜನರೇ ನೋಡಿದ್ದಾರೆ. ನನ್ನ ಪರವಾಗಿ ನಿಂತ ಎಲ್ಲರಿಗೂ ಕೋಟಿ ವಂದನೆ ಅಂತ ತಿಳಿಸಿದರು. ಇದನ್ನೂ ಓದಿ: ಡಿ.ಕೆ.ಶಿವಕುಮಾರ್‌ಗೆ ರಿಲೀಫ್; ಮೇಲ್ಮನವಿ ಹಿಂಪಡೆದ ಮನವಿ ಪರಿಗಣಿಸಿದ ಹೈಕೋರ್ಟ್
ಅಕ್ರಮ ಆಸ್ತಿ ಗಳಿಕೆ (Disproportionate Assets Case) ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿಗೆ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ವಾದ- ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ರಾಜ್ಯ ಸರ್ಕಾರದ ಆದೇಶವನ್ನು ಇದುವರೆಗೂ ಯಾರೂ ಪ್ರಶ್ನೆ ಮಾಡಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದ ಪರಿಗಣಿಸಲು ಸಾಧ್ಯವಿಲ್ಲ. ಅರ್ಜಿದಾರರು ಮನವಿ ಹಿಂಪಡೆಯಲಾಗಿದೆ ಎಂದು ಸಿಬಿಐ ವಾದವನ್ನು ಹೈಕೋರ್ಟ್ (HighCourt) ವಿಭಾಗೀಯ ಪೀಠ ತಳ್ಳಿ ಹಾಕಿದೆ. ಈ ಮೂಲಕ ಡಿಕೆಶಿಗೆ ತಾತ್ಕಾಲಿಕವಾಗಿ ರಿಲೀಫ್ ಸಿಕ್ಕಿದೆ.
ಯಾದಗಿರಿ: ಒಂದೇ ಸರ್ಕಾರಿ ಹುದ್ದೆಗಾಗಿ ಇಬ್ಬರು ಅಧಿಕಾರಿಗಳು ಗುದ್ದಾಟ ನಡೆಸಿ, ಇಬ್ಬರೂ ಅಧಿಕಾರಿಗಳು ಪ್ರತ್ಯೇಕ ಕುರ್ಚಿ ಹಾಕಿಕೊಂಡು ಕುಳಿತ ಘಟನೆ ಯಾದಗಿರಿ (Yadgir) ತಾಲೂಕು ಸಮಾಜ ಕಲ್ಯಾಣ ಇಲಾಖೆ (Social Welfare Department) ಕಚೇರಿಯಲ್ಲಿ ನಡೆದಿದೆ.
ನಗರದ ಹೊಸಳ್ಳಿ ಕ್ರಾಸ್ ಬಳಿಯಿರುವ ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಂಗಪ್ಪ ಪೂಜಾರಿ ಹಾಗೂ ಡಿ.ರಾಜಕುಮಾರ್ ಎಂಬ ಇಬ್ಬರು ಅಧಿಕಾರಿಗಳ ಮಧ್ಯೆ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ. ಇದರಿಂದ ಇಲಾಖೆಯ ಕೆಲಸ ಕಾರ್ಯಗಳಿಗೆ ಕಚೇರಿಗೆ ಬಂದಿರುವ ಸಾರ್ವಜನಿಕರು ಒಂದೇ ಹುದ್ದೆಯಲ್ಲಿ ಇಬ್ಬರು ಅಧಿಕಾರಿಗಳನ್ನ ಕಂಡು ಗೊಂದಲಕ್ಕೆ ಸಿಲುಕಿದ್ದಾರೆ. ಇವರ ರಗಳೆ ನೋಡಲಾರದೇ ಪರಿಸ್ಥಿತಿ ತಿಳಿಯಾದ ಮೇಲೆ ಬರೋಣ ಎಂದು ಜನರು ಕಚೇರಿಗೆ ಬಂದು ವಾಪಸ್ ಹೋಗುತ್ತಿದ್ದಾರೆ. ಇದನ್ನೂ ಓದಿ: ಪಾಪಿಗಳು ಹಾಜರಾದ ಫೈನಲ್ ಹೊರತುಪಡಿಸಿ ಎಲ್ಲಾ ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದಿದೆ: ಮಮತಾ ಕಿಡಿ
ಸಂಗಪ್ಪ ಅವರು ಫೆ.1 ರಿಂದ ಅ.16ರ ವರೆಗೆ ಸಹಾಯಕ ನಿರ್ದೇಶಕರ ಹುದ್ದೆಯಲ್ಲಿ ಕೆಲಸ ಮಾಡಿದ್ದಾರೆ. ಇನ್ನೂ ರಾಜಕುಮಾರ್ ಅವರು ಇದೇ ಹುದ್ದೆಗೆ ಸರ್ಕಾರದಿಂದ ಆದೇಶ ತಂದು ಅಕ್ಟೋಬರ್ 16 ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಆದೇಶವನ್ನು ಪ್ರಶ್ನಿಸಿ ಸಂಗಪ್ಪ ಪೂಜಾರಿ ಅವರು ಅವಧಿಗೂ ಮುನ್ನವೆ ನನ್ನ ಜಾಗಕ್ಕೆ ಮತ್ತೊಬ್ಬರಿಗೆ ಆದೇಶ ಆಗಿದೆ ಎಂದು ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ (High Court) ವಿಭಾಗೀಯ ಪೀಠದ ಮೊರೆ ಹೋಗಿದ್ದರು.
ಕೋರ್ಟ್ ಸಂಗಪ್ಪ ಪರ ತೀರ್ಪು ನೀಡಿ, ಹುದ್ದೆಯಲ್ಲಿ ಮುಂದೆವರಿಯುವಂತೆ ಆದೇಶ ಹೊರಡಿಸಿದೆ. ಇದೇ ವೇಳೆ ರಾಜಕುಮಾರ್‍ಗೆ ಆಗಿರುವ ಆದೇಶವನ್ನ ಕೋರ್ಟ್ ರದ್ದು ಮಾಡಿದೆ ಎಂದು ಸಂಗಪ್ಪ ಅವರು ತಮ್ಮ ವಾದ ಮಂಡಿಸಿದ್ದಾರೆ. ನನಗೆ ಸರ್ಕಾರದಿಂದ ಆದೇಶ ಇದೆ ಎಂದು ರಾಜಕುಮಾರ್ ಅವರು ಕಚೇರಿಯಲ್ಲಿ ಕುಳಿತಿದ್ದಾರೆ. ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್‌ಕೌಂಟರ್‌ಗೆ ಉಗ್ರರಿಬ್ಬರು ಬಲಿ
ತಿರುವನಂತಪುರಂ: ಸುಪ್ರೀಂ ಕೋರ್ಟ್‍ನ (Supreme Court) ಮೊದಲ ಮಹಿಳಾ ನ್ಯಾಯಾಧೀಶೆ (Woman Judge) ಮತ್ತು ತಮಿಳುನಾಡಿನ ಮಾಜಿ ರಾಜ್ಯಪಾಲೆ ಫಾತಿಮಾ ಬೀವಿ (96) (Fathima Beevi) ಅವರು ಕೆರಳದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೇರಳದ ಪಂದಳಂನಲ್ಲಿ ಜನಿಸಿದ ಅವರು, ಸರ್ಕಾರಿ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದರು. ಬಳಿಕ 1950 ರಲ್ಲಿ ಕೇರಳದ ಕೆಳ ನ್ಯಾಯಾಂಗದಲ್ಲಿ ವಕೀಲರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ನಂತರ ಕೇರಳದ ಅಧೀನ ನ್ಯಾಯಾಂಗ ಸೇವೆಗಳಲ್ಲಿ ಮುನ್ಸಿಫ್ ಆಗಿ ಸೇವೆ ಸಲ್ಲಿಸಿದರು. ಬಳಿಕ ಅಧೀನ ನ್ಯಾಯಾಧೀಶರಾಗಿ, ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆಗಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣದ ಸದಸ್ಯರಾಗಿ ಕೂಡ ಅವರು ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆಗೆ ನಿರಾಕರಿಸಿದ ಸುಪ್ರೀಂ – ಆದೇಶ ಮರು ಪರಿಶೀಲನಾ ಅರ್ಜಿ ಸಲ್ಲಿಕೆ
ಬೀವಿ ಅವರು 1983 ರಲ್ಲಿ ಹೈಕೋರ್ಟ್ (High Court) ನ್ಯಾಯಾಧೀಶರಾದರು. ಬಳಿಕ 1989 ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದರು. ಇವರು ಉನ್ನತ ನ್ಯಾಯಾಲಯಕ್ಕೆ ನೇಮಕಗೊಂಡ ಮೊದಲ ಮುಸ್ಲಿಂ ನ್ಯಾಯಾಧೀಶೆ ಕೂಡ ಹೌದು.
ನಿವೃತ್ತಿಯ ನಂತರ ನ್ಯಾಯಮೂರ್ತಿ ಬೀವಿಯವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ನಂತರ ಅವರನ್ನು ತಮಿಳುನಾಡಿನ ರಾಜ್ಯಪಾಲರಾಗಿ ನೇಮಿಸಲಾಯಿತು. ಅವರು ರಾಜ್ಯದ ರಾಜ್ಯಪಾಲರಾಗಿದ್ದ ಅವಧಿಯಲ್ಲಿ ತಮಿಳುನಾಡು ವಿಶ್ವವಿದ್ಯಾಲಯದ ಕುಲಪತಿಯಾಗಿಯೂ ಸೇವೆ ಸಲ್ಲಿಸಿದ್ದರು.
ನವದೆಹಲಿ: ಸಂಸದರು (MP) ಮತ್ತು ಶಾಸಕರ (MLA) ವಿರುದ್ಧ ಬಾಕಿ ಉಳಿದಿರುವ ಪ್ರಕರಣಗಳ ಮೇಲೆ ನಿಗಾ ಇಡಲು ವಿಶೇಷ ಪೀಠ ರಚನೆ ಮಾಡುವಂತೆ ಹಾಗೂ ಪೀಠದ ನೇತೃತ್ವವನ್ನು ಹೈಕೋರ್ಟ್ (High Court) ಮುಖ್ಯ ನ್ಯಾಯಮೂರ್ತಿಗಳು ವಹಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ (Supreme Court) ಸೂಚನೆ ನೀಡಿದೆ.
ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ತ್ವರಿತ ವಿಲೇವಾರಿಗಾಗಿ ನಿರ್ದೇಶನ ನೀಡಬೇಕು. ಆರು ವರ್ಷಗಳ ನಿಷೇಧಕ್ಕೆ ವಿರುದ್ಧವಾಗಿ ಹಾಲಿ ಶಾಸಕರು ಸೇರಿದಂತೆ ಅಪರಾಧಿ ರಾಜಕಾರಣಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಜೀವಮಾನದ ನಿಷೇಧವನ್ನು ಹೇರುವಂತೆ ವಕೀಲ ಹಾಗೂ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಯನ್ನು ಸಿಜೆಐ ನೇತೃತ್ವದ ಪೀಠ ವಿಚಾರಣೆ ನಡೆಸಿತು. ಇದನ್ನೂ ಓದಿ: ಗ್ರಾಹಕರಿಗೆ ರಶೀದಿ ನೀಡದೆ 1.62 ಕೋಟಿ ರೂ. ವಂಚನೆ – ಬ್ಯಾಂಕ್ ಮ್ಯಾನೇಜರ್ ಅರೆಸ್ಟ್
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠವು ಮುಖ್ಯವಾಗಿ ಸಂಸದರು ಅಥವಾ ಶಾಸಕರ ವಿರುದ್ಧ ಮರಣದಂಡನೆ ವಿಧಿಸಬಹುದಾದ ಪ್ರಕರಣಗಳಿಗೆ ಇತರ ಪ್ರಕರಣಗಳಿಗಿಂತ ಹೆಚ್ಚಿನ ಆದ್ಯತೆ ನೀಡಬೇಕು. ಇಂತಹ ಪ್ರಕರಣಗಳ ತ್ವರಿತ ವಿಲೇವಾರಿ ಮಾಡುವಂತೆ ಕೋರ್ಟ್ ನಿರ್ದೇಶಿಸಿದೆ. ಸಂಬಂಧಪಟ್ಟ ಪ್ರಧಾನ ಸೆಷನ್ಸ್ ನ್ಯಾಯಾಧೀಶರು ಅಂತಹ ಪ್ರಕರಣಗಳ ವಿಚಾರಣೆಗೆ ಸಾಕಷ್ಟು ಮೂಲಸೌಕರ್ಯ ಸೌಲಭ್ಯಗಳು ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಇದೇ ವೇಳೆ ಹೇಳಿದೆ.
ಉಪಾಧ್ಯಾಯ ಅವರು ಕಳೆದ ಏಪ್ರಿಲ್‍ನಲ್ಲಿ ಗಂಭೀರ ಅಪರಾಧಗಳಿಗಾಗಿ ಚಾರ್ಜ್‍ಶೀಟ್ ಮಾಡಿದ ವ್ಯಕ್ತಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಮನವಿ ಮಾಡಿದ್ದರು. ಇದು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಟೀಕಿಸಿತ್ತು. ಇದನ್ನೂ ಓದಿ: 2023ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆರ್‌ಡಿ ಪಾಟೀಲ್ – ಪ್ರಚಾರಕ್ಕೆ ಬಂದಿದ್ರು ಅಖಿಲೇಶ್ ಯಾದವ್
ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಪೋಕ್ಸೋ (Pocso Case) ಕಾಯ್ದೆ ಅಡಿ ಬಂಧನಕ್ಕೊಳಗಾದ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ (MurughaShri) ಜಾಮೀನು (Bail) ಅರ್ಜಿ ವಿಚಾರಣೆಯ ಆದೇಶವನ್ನು ಹೈಕೋರ್ಟ್ (High Court) ಇಂದು ಪ್ರಕಟಿಸಲಿದೆ. ಈ ಮೂಲಕ ಸ್ವಾಮೀಜಿಯ ಜಾಮೀನಿನ ಭವಿಷ್ಯ ನಿರ್ಧಾರವಾಗಲಿದೆ.
ಕಳೆದ ವರ್ಷ ಸೆ.2 ರಂದು ಮುರುಘಾಶ್ರೀ ಶಿವಮೂರ್ತಿ ಸ್ವಾಮೀಜಿಯನ್ನು ಪೋಕ್ಸೊ ಪ್ರಕರಣದಡಿ ಬಂಧಿಸಲಾಗಿತ್ತು. ಕಳೆದ 13 ತಿಂಗಳಿಂದ ಜೈಲಿನಲ್ಲಿರುವ ಸ್ವಾಮೀಜಿ ಜಾಮೀನು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ಅ.31 ರಂದು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ ಆದೇಶವನ್ನು ಕಾಯ್ದಿರಿಸಿತ್ತು. ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರೀ ಮಳೆ
ಏನಿದು ಪ್ರಕರಣ?
ಚಿತ್ರದುರ್ಗದ ಮುರುಘಾಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಮೊರೆ ಹೋಗಿದ್ದರು. ಚಿತ್ರದುರ್ಗದ ಮಠದ ವಿದ್ಯಾರ್ಥಿ ನಿಲಯದಲ್ಲಿದ್ದ ನಮ್ಮ ಮೇಲೆ ಸ್ವಾಮೀಜಿ ದೌರ್ಜನ್ಯ ಎಸಗಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದರು. ಸ್ವಾಮೀಜಿಯವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಅಮಲು ಬರುವಂತೆ ಮಾಡಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು.
ಈ ಸಂಬಂಧ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಪ್ರಕರಣ ದಾಖಲಿಸಿದ್ದರು. ಅದಾದ ನಂತರ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿತ್ತು. ಬಳಿಕ ಪೋಕ್ಸೋ ಪ್ರಕರಣದಡಿಯಲ್ಲಿ ಮುರುಘಾ ಶರಣರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ರೈಲ್ವೆ ಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕಿ ಸಾವು
ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಪತ್ನಿ ಸುನೀತಾ ಕೇಜ್ರಿವಾಲ್ (Sunita Kejriwal) ವಿರುದ್ಧ ತೀಸ್ ಹಜಾರಿ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ಗೆ ದೆಹಲಿ ಹೈಕೋರ್ಟ್ (High Court) ತಡೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್ (Justice Amit Bansal) ಫೆಬ್ರವರಿ 1 ರವರೆಗೂ ಮಧ್ಯಂತರ ತಡೆ ನೀಡಿದ್ದಾರೆ.
ಎರಡು ವಿಭಿನ್ನ ಕ್ಷೇತ್ರಗಳಿಗೆ ಮತದಾರರ ಪಟ್ಟಿಗೆ ಏಕಕಾಲದಲ್ಲಿ ಸೇರ್ಪಡೆಗೊಳ್ಳುವ ಮೂಲಕ 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ಹರೀಶ್ ಖುರಾನಾ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ತೀಸ್ ಹಜಾರಿ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರ್ಜಿಂದರ್ ಕೌರ್ ಅವರು ಆಗಸ್ಟ್ 29ರಂದು ಸಮನ್ಸ್ ಜಾರಿ ಮಾಡಿದ್ದರು. ಇದನ್ನೂ ಓದಿ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಕಾಮಿಗೆ 20 ವರ್ಷ ಕಠಿಣ ಶಿಕ್ಷೆ, 1.25 ಲಕ್ಷ ರೂ. ದಂಡ
2019ರಲ್ಲಿ ಸುನೀತಾ ಕೇಜ್ರಿವಾಲ್ ವಿರುದ್ಧ ಖುರಾನಾ ದೂರು ದಾಖಲಿಸಿದ್ದರು, ಸುನೀತಾ ದೆಹಲಿಯ ಸಾಹಿಬಾಬಾದ್ (ಗಾಜಿಯಾಬಾದ್ ಕ್ಷೇತ್ರ) ಮತ್ತು ಚಾಂದಿನಿ ಚೌಕ್‌ನ ಮತದಾರರ ಪಟ್ಟಿಯಲ್ಲಿ ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ. ಇದು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 17ಅನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದರು. ಇದನ್ನೂ ಓದಿ: ‘ಮೈ ಲಾರ್ಡ್’ ಹೇಳೋದು ಬಿಟ್ರೆ ನನ್ನ ಸಂಬಳದಲ್ಲಿ ಅರ್ಧ ಕೊಡ್ತೀನಿ: ಸುಪ್ರೀಂ ಜಡ್ಜ್
ಸಮನ್ಸ್ ಜಾರಿ ಮಾಡಿರುವ ಆದೇಶವನ್ನು ಪ್ರಶ್ನಿಸಿ ಸುನೀತಾ ಕೇಜ್ರಿವಾಲ್ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ರೆಬೆಕಾ ಜಾನ್ ಪ್ರಜಾಪ್ರತಿನಿಧಿ ಕಾಯ್ದೆಯ ಪ್ರಕಾರ ವ್ಯಕ್ತಿಯೊಬ್ಬರು ಸುಳ್ಳು ಹೇಳಿಕೆ ನೀಡಿದರೆ ಮಾತ್ರ ಅಪರಾಧವಾಗುತ್ತದೆ ಎಂದು ಹೈಕೋರ್ಟ್ಗೆ ತಿಳಿಸಿದರು. ಸುಳ್ಳು ಘೋಷಣೆ ಮಾಡಲಾಗಿದೆ. ಸರಿಯಾದ ಮನಸ್ಸಿನ ಅನ್ವಯವಿಲ್ಲದೆ ಸಮನ್ಸ್ ನೀಡಲಾಗಿದೆ ಎಂದು ಜಾನ್ ವಾದಿಸಿದರು. ಇದನ್ನೂ ಓದಿ: ಚುನಾವಣಾ ಬಾಂಡ್‌ಗಳ ಕೊಡುಗೆ ಆಡಳಿತ ಪಕ್ಷಕ್ಕೆ ಹೆಚ್ಚು – ಸುಪ್ರೀಂಗೆ ಕೇಂದ್ರ ಹೇಳಿಕೆ
ಇದು ಖಾಸಗಿ ದೂರು. ಮ್ಯಾಜಿಸ್ಟ್ರೇಟ್ ಸಮನ್ಸ್ ನೀಡುವ ಮೊದಲು, ಚುನಾವಣಾ ಆಯೋಗದಿಂದ ಮಾಹಿತಿ ಪಡೆಯಬೇಕು ಜಾನ್ ಹೇಳಿದ್ದರು. ರಾಜ್ಯದ ಪರ ಹಾಜರಾದ ವಕೀಲರು ದೂರನ್ನು ಮಿತಿಯಿಂದ ನಿರ್ಬಂಧಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತು. ಇದನ್ನೂ ಓದಿ: ಚಂದ್ರಬಾಬು ನಾಯ್ಡುಗೆ 4 ವಾರಗಳ ಮಧ್ಯಂತರ ಜಾಮೀನು
ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾದ ‘ವರಾಹ ರೂಪಂ’ (Varaha Roopam) ಹಾಡಿನ ಹಕ್ಕು ಸ್ವಾಮ್ಯ ಉಲ್ಲಂಘನೆ ಪ್ರಕರಣ ಹಲವು ತಿಂಗಳುಗಳಿಂದ ಕೇರಳ (Kerala) ಹೈಕೋರ್ಟಿನಲ್ಲಿ ನಡೆಯುತ್ತಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಅಪ್ ಡೇಟ್ ಸಿಕ್ಕಿದ್ದು, ದೂರು ದಾರರು ಮತ್ತು ಪ್ರತಿವಾದಿಗಳು ಸಂಧಾನ ಮಾಡಿಕೊಂಡಿರುವ ಕಾರಣದಿಂದಾಗಿ ಕೇರಳ ಹೈಕೋರ್ಟ್ ಈ ಪ್ರಕರಣವನ್ನೇ ರದ್ದು ಮಾಡಿದೆ.
ಕಾಂತಾರ ಸಿನಿಮಾ ತಂಡದ ಪರವಾಗಿ ವಾದ ಮಂಡಿಸುತ್ತಿದ್ದ ವಿಜಯ್ ವಿ ಪೌಲ್, ಸಿನಿಮಾ ಟೀಂ ಮತ್ತು ಮಾತೃಭೂಮಿ ಪಬ್ಲಿಷರ್ಸ್ ನಡುವಿನ ಸಂಧಾನವನ್ನು ಕೋರ್ಟ್ ಗಮನಕ್ಕೆ ತಂದರು. ಹಾಗಾಗಿ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದು ಮಾಡುವಂತೆ ಮನವಿ ಮಾಡಿಕೊಂಡರು. ಈ ಮನವಿಯನ್ನು ಪರಿಗಣಿಸಿ ಕೇರಳ ಹೈಕೋರ್ಟ್ ಪ್ರಕರಣವನ್ನು ರದ್ದು ಮಾಡಿದೆ.
ವರಾಹ ರೂಪಂ ಪ್ರಕರಣವು ಮೊದಲ ಕೆಳ ಹಂತದ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಕೇರಳದ ಥೈಕ್ಕುಡಂ ಬ್ರಿಡ್ಜ್ ನವರು ತಮ್ಮ ನವಸರಂ ಹಾಡಿನ ನಕಲು ಎಂದು ದಾವೆ ಹೂಡಿದ್ದರು. ಕೆಳ ಹಂತದ ನ್ಯಾಯಾಲಯವು ವರಾಹ ರೂಪಂ ಹಾಡನ್ನು ಚಿತ್ರಮಂದಿರ ಮತ್ತು ಓಟಿಟಿಯಲ್ಲಿ ಪ್ರಸಾರ ಮಾಡಬಾರದು ಎಂದು ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಚಿತ್ರತಂಡ ಕೇರಳ ಹೈಕೋರ್ಟ್ ಮೆಟ್ಟಿಲು ಏರಿತ್ತು. ಚಿತ್ರತಂಡದ ವಿರುದ್ಧ ತಾತ್ಕಾಲಿಕ ಆದೇಶವೊಂದು ಹೊರ ಬಿದ್ದಿತ್ತು. ತಾತ್ಕಾಲಿಕವಾಗಿ ತಡೆ ಹಿಡಿದು ಆನಂತರ ಬಳಸಿಕೊಳ್ಳಲು ಅನುಮತಿ ನೀಡಿತ್ತು. ಇದೀಗ ಎಲ್ಲವೂ ಸುಖಾಂತ್ಯವಾಗಿದೆ.
ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿದ್ದ ಈ ಗೀತೆ ಸಿನಿಮಾ ಗೆಲುವಿಗೆ ಭಾರೀ ಸಾಥ್ ನೀಡಿತ್ತು. ಅಲ್ಲದೇ, ಕೇಳುಗರ ಮೆಚ್ಚುಗೆಗೆ ಪಾತ್ರವಾಗಿತ್ತು. ಅಪಾರ ಸಂಖ್ಯೆಯಲ್ಲಿ ಈ ಹಾಡನ್ನು ಡೌನ್ ಲೋಡ್ ಕೂಡ ಮಾಡಿಕೊಂಡಿದ್ದರು ಕೇಳುಗರು.