Tag: high court

  • ಹುಲಿ ಉಗುರು ಪ್ರಕರಣ: ಸಂಕಟ ಬಿಚ್ಚಿಟ್ಟ ನಟ ಜಗ್ಗೇಶ್

    ಹುಲಿ ಉಗುರು ಪ್ರಕರಣ: ಸಂಕಟ ಬಿಚ್ಚಿಟ್ಟ ನಟ ಜಗ್ಗೇಶ್

    ರಾಜ್ಯಾದ್ಯಂತ ಹುಲಿ ಉಗುರು ಪ್ರಕರಣ ಸದ್ದು ಮಾಡುತ್ತಿದೆ. ಅದರಲ್ಲೂ ಸೆಲೆಬ್ರಿಟಿಗಳ ಕೊರಳಲ್ಲಿ ಹುಲಿ ಉಗುರು (Tiger Claw) ಕಂಡ ನೆಟ್ಟಿಗರು, ಒಂದೊಂದೇ ಫೋಟೋ ಶೇರ್ ಮಾಡುತ್ತಾ ವೈರಲ್ ಮಾಡುತ್ತಿದ್ದಾರೆ. ಅವರ ಮೇಲೆ ಕ್ರಮಕ್ಕೆ ಒತ್ತಾಯಿಸುತ್ತಿದ್ದಾರೆ. ಈ ಕುರಿತಂತೆ ಜಗ್ಗೇಶ್ (Jaggesh) ಎಕ್ಸ್ (ಟ್ವಿಟರ್) ಮೂಲಕ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. ಭಾವನಾತ್ಮಕವಾಗಿಯೂ ಎಕ್ಸ್ ಮಾಡಿದ್ದಾರೆ.

    ನನಗೆ 61. ಮುಂದೆ 100 ಆದರು ನನ್ನ ಅಮ್ಮನೇ ನನ್ನ ದೇವರು. ನಾನು ಏನೇ ಕಳೆದುಕೊಂಡರೂ ಸಂಕಟ ಪಡಲ್ಲ. ಆದರೆ, ನನ್ನ ಅಮ್ಮನ ಕಡೇ ಪ್ರೀತಿ ಕಳೆದುಕೊಂಡಿದ್ದು ಶೂನ್ಯದಂತೆ ಆಯಿತು. ತಂದೆ ತಾಯಿ ಹೃದಯದಲ್ಲಿ ಇರಿಸಿಕೊಂಡ ನನಗೆ ತಂದೆ ತಾಯಿ ಅನಾಥಾಶ್ರಮಕ್ಕೆ ಅಟ್ಟುವ ಈ ಕಾಲದ ಕಾಲಜ್ಞಾನಿಗಳಿಗೆ ಪ್ರೀತಿ ಅರಿವಾಗದು. ದೇವರಿದ್ದಾನೆ ಉತ್ತರಿಸಲು. ಕಾಲ ಬರುತ್ತದೆ ನಿಮಗೂ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಮತ್ತೊಂದು ಎಕ್ಸ್ (ಟ್ವೀಟ್) ಮಾಡಿ, ‘ಹೋರಾಡುವ ಸಹೋದರ ಸಹೋದರಿಯರೆ, ಖಂಡಿತ ನಿಮ್ಮ ಅವಶ್ಯಕತೆ ಸಮಾಜಕ್ಕೆ ಇದೆ. ಸಮಾಜದಲ್ಲಿ ಅನೇಕ ಕಾಡುಪ್ರಾಣಿ ರೂಪದ ಜನ ಹೆಚ್ಚಿದ್ದಾರೆ. ಅಂಥ ಕೊಳಕರ ಬೆತ್ತಲುಮಾಡಿ. ಭಾಷೆ, ಭ್ರಷ್ಟಾಚಾರ ಪಾಪಕೃತ್ಯ ನೋಡಿದರು ಮೌನಮುನಿಗಳು. ಅದೇ ಕಲಾವಿದರ ವಿಷಯ ಬಂದರೆ ಆರ್ಭಟವೇಕೆ? ಇದು ನಿಮ್ಮನ್ನು ರಂಜಿಸಿದಕ್ಕೆ ನೀಡುವ ಉಡುಗೊರೆಯೇ? ಆದರು ನಿಮಗೆ ಶುಭಕೋರುವೆ ಎಂದು ಬರೆದುಕೊಂಡಿದ್ದಾರೆ ಜಗ್ಗೇಶ್.

    JAGGESH

    ಹೈಕೋರ್ಟ್ ಮೆಟ್ಟಿಲೇರಿದ ಜಗ್ಗೇಶ್

    ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಹುಲಿ ಉಗುರು ಧರಿಸಿದವರ ವಿರುದ್ಧ, ಅರಣ್ಯಾಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ. ನಿನ್ನೆಯಷ್ಟೇ ದರ್ಶನ್, ನಿಖಿಲ್ ಕುಮಾರ್, ಜಗ್ಗೇಶ್ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದ್ದರು. ಜೊತೆಗೆ ಅವರ ನಿವಾಸಕ್ಕೂ ಅಧಿಕಾರಿಗಳು ತೆರಳಿ ದಾಳಿ ಮಾಡಿದ್ದರು. ಇದನ್ನು ಪ್ರಶ್ನಿಸಿ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಹೈಕೋರ್ಟ್ (High Court) ಮೆಟ್ಟಿಲು ಏರಿದ್ದಾರೆ.

    ನಿನ್ನೆ ಅರಣ್ಯಾಧಿಕಾರಿಗಳ ದಾಳಿ ಕಾನೂನು ಬಾಹಿರ. ಅರಣ್ಯಾಧಿಕಾರಿಗಳ ಕ್ರಮ ಸರಿ ಇಲ್ಲ ಎಂದು ಹೈಕೋರ್ಟಿಗೆ ಜಗ್ಗೇಶ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರಣ್ಯಾಧಿಕಾರಿಗಳ ನಡೆ ಕಾನೂನು ಬಾಹಿರ ಎಂದು ಘೋಷಿಸಲು ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಅರಣ್ಯಾಧಿಕಾರಿಗಳು ಕೊಟ್ಟಿರುವ ನೋಟೀಸ್ ಅನ್ನು ರದ್ದು ಪಡಿಸಲು‌ ನಟ ಜಗ್ಗೇಶ್ ಮನವಿ ಸಲ್ಲಿಸಿದ್ದಾರೆ.

    ನೋಟೀಸ್ (Notice) ಗೆ ಉತ್ತರ ನೀಡುವ ಮುನ್ನವೇ ದಾಳಿ ಮಾಡಿದ್ದಾರೆ. ಪರಶೀಲನೆ ನೆಪದಲ್ಲಿ ಮನೆಯ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸಂದರ್ಶನದಲ್ಲಿ ಹೇಳಿದ ಮಾತನ್ನ ಆಧರಿಸಿ ತೇಜೋವಧೆ ಮಾಡಲಾಗುತ್ತಿದ್ದೆ ಎಂದು ನಟ ಜಗ್ಗೇಶ್ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹುಲಿ ಉಗುರು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ಜಗ್ಗೇಶ್

    ಹುಲಿ ಉಗುರು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ಜಗ್ಗೇಶ್

    ನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಹುಲಿ ಉಗುರು (Tiger Claw) ಧರಿಸಿದವರ ವಿರುದ್ಧ, ಅರಣ್ಯಾಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ. ನಿನ್ನೆಯಷ್ಟೇ ದರ್ಶನ್, ನಿಖಿಲ್ ಕುಮಾರ್, ಜಗ್ಗೇಶ್ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದ್ದರು. ಜೊತೆಗೆ ಅವರ ನಿವಾಸಕ್ಕೂ ಅಧಿಕಾರಿಗಳು ತೆರಳಿ ದಾಳಿ ಮಾಡಿದ್ದರು. ಇದನ್ನು ಪ್ರಶ್ನಿಸಿ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ.

    ನಿನ್ನೆ ಅರಣ್ಯಾಧಿಕಾರಿಗಳ ದಾಳಿ ಕಾನೂನು ಬಾಹಿರ. ಅರಣ್ಯಾಧಿಕಾರಿಗಳ ಕ್ರಮ ಸರಿ ಇಲ್ಲ ಎಂದು ಹೈಕೋರ್ಟಿ (High Court)ಗೆ ಜಗ್ಗೇಶ್ (Jaggesh) ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರಣ್ಯಾಧಿಕಾರಿಗಳ ನಡೆ ಕಾನೂನು ಬಾಹಿರ ಎಂದು ಘೋಷಿಸಲು ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಅರಣ್ಯಾಧಿಕಾರಿಗಳು ಕೊಟ್ಟಿರುವ ನೋಟೀಸ್ ಅನ್ನು ರದ್ದು ಪಡಿಸಲು‌ ನಟ ಜಗ್ಗೇಶ್ ಮನವಿ ಸಲ್ಲಿಸಿದ್ದಾರೆ.

    ನೋಟೀಸ್ ಗೆ ಉತ್ತರ ನೀಡುವ ಮುನ್ನವೇ ದಾಳಿ ಮಾಡಿದ್ದಾರೆ. ಪರಶೀಲನೆ ನೆಪದಲ್ಲಿ ಮನೆಯ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸಂದರ್ಶನದಲ್ಲಿ ಹೇಳಿದ ಮಾತನ್ನ ಆಧರಿಸಿ ತೇಜೋವಧೆ ಮಾಡಲಾಗುತ್ತಿದ್ದೆ ಎಂದು ನಟ ಜಗ್ಗೇಶ್ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ.

    ತಪ್ಪಿದ್ದರೆ ಕ್ರಮ ತೆಗೆದುಕೊಳ್ಳಲಿ

    ಕಾನೂನಿನ ಮುಂದೆ ಎಲ್ಲರೂ ಒಂದೇ. ಅವರು ಯಾವುದೇ ಪಕ್ಷದಲ್ಲಿ ಇರಲಿ, ಎಂತಹ ಗಣ್ಯ ವ್ಯಕ್ತಿಗಳೇ ಆಗಿರಲಿ. ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರೆ ಕ್ರಮ ತಗೆದುಕೊಳ್ಳಲಿ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಇಂತಹ ಪ್ರಕರಣವನ್ನು ಅರಣ್ಯ ಸಚಿವರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

    ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಈ ಪ್ರಕರಣದಲ್ಲಿ ಬಂಧನವಾಗುತ್ತಿದ್ದಂತೆಯೇ ನಟರಾದ ಜಗ್ಗೇಶ್, ದರ್ಶನ್, ನಿಖಿಲ್ ಕುಮಾರ ಸ್ವಾಮಿ, ವಿನಯ್ ಗುರೂಜಿ ಸೇರಿದಂತೆ ಹಲವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದವು. ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಂಡು ನೋಟಿಸ್ ನೀಡಲು ಮುಂದಾದರು. ಇದೀಗ ಬಹುತೇಕ ಎಲ್ಲರಿಗೂ ನೋಟಿಸ್ ಜಾರಿ ಮಾಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಜಯಪ್ರದಾ ಶಿಕ್ಷೆ ರದ್ದು ಮಾಡಲು ಹೈಕೋರ್ಟ್ ನಕಾರ

    ನಟಿ ಜಯಪ್ರದಾ ಶಿಕ್ಷೆ ರದ್ದು ಮಾಡಲು ಹೈಕೋರ್ಟ್ ನಕಾರ

    ಥಿಯೇಟರ್ ಕಾಂಪ್ಲೆಕ್ಸ್ ನ ನೌಕರರ ರಾಜ್ಯ ವಿಮೆ (ಇಎಸ್.ಐ) ನಿಧಿಯ ಪಾಲನ್ನು ಪಾವತಿಸದೇ ಇರುವುದಕ್ಕಾಗಿ  ನ್ಯಾಯಾಲಯವು ನಟಿ ಜಯಪ್ರಯಾ ಅವರಿಗೆ ಆರು ತಿಂಗಳು ಜೈಲು ಶಿಕ್ಷೆ  (Punishment)ವಿಧಿಸಿತ್ತು. ಈ ಶಿಕ್ಷೆಯನ್ನು ರದ್ದುಗೊಳಿಸುವಂತೆ ನಟಿ ಜಯಪ್ರದಾ ಅವರು ಮದ್ರಾದ್ ಹೈಕೋರ್ಟ್ (High Court) ಗೆ ಮೊರೆ ಹೋಗಿದ್ದರು. ಮಾನ್ಯ ನ್ಯಾಯಾಲಯವು ಶಿಕ್ಷೆಯನ್ನು ರದ್ದುಗೊಳಿಸಲು ನಿರಾಕರಿಸಿದೆ. ಸಹಜವಾಗಿಯೇ ನಟಿಗೆ ಶಾಕ್ ಆಗಿದೆ.

    ಕನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ನಟಿಸಿರುವ ಬಾಲಿವುಡ್ ನಟಿ ಜಯಪ್ರದಾ (Jayaprada) ಅವರಿಗೆ ಚೆನ್ನೈನ (Chennai) ಎಗ್ಮೋರ್ ನ್ಯಾಯಾಲಯವು ಆರು ತಿಂಗಳ ಕಾಲ ಜೈಲು ಶಿಕ್ಷೆ  ಪ್ರಕಟಿಸಿತ್ತು. ನಟಿಯ ವಿರುದ್ಧ ಸರಕಾರದ ಲೇಬರ್ ಇನ್ಶುರೆನ್ಸ್ ಕಾರ್ಪೋರೇಷನ್ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು. ಈ ಪ್ರಕರಣದಲ್ಲಿ ಜಯಪ್ರದಾಗೆ ಸೋಲಾಗಿತ್ತು.

     

    ಭಾರತೀಯ ಸಿನಿಮಾ ರಂಗದಲ್ಲಿ ಖ್ಯಾತ ನಟಿಯಾಗಿ ಗುರುತಿಸಿಕೊಂಡಿರುವ ಜಯಪ್ರದಾ, ಸಿನಿಮಾ ಪ್ರದರ್ಶಕಿಯೂ ಹೌದು. ಚೆನ್ನೈನಲ್ಲೇ ಇವರ ಹೆಸರಿನಲ್ಲಿ ಎರಡು ಚಿತ್ರಮಂದಿರಗಳಿವೆ. ಈ ಎರಡು ಚಿತ್ರ ಮಂದಿರಗಳಲ್ಲಿ ಅನೇಕ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಕಾರ್ಮಿಕರ ಇ.ಎಸ್.ಐ ಹಣವನ್ನು ಕಡಿತ ಮಾಡಿಕೊಂಡು ಕಾರ್ಮಿಕ ಇಲಾಖೆಗೆ ಅದನ್ನು ಪಾವತಿಸಿಲ್ಲ ಎನ್ನುವ ಕಾರಣಕ್ಕಾಗಿ ದೂರು ನೀಡಲಾಗಿತ್ತು.

     

    ಈಗಾಗಲೇ ಅವರು ಮಾಲೀಕರಾಗಿರುವ ಆ ಎರಡೂ ಚಿತ್ರಮಂದಿರಗಳ ಮೇಲೆ ಕೇಸ್ ದಾಖಲಾಗಿದೆ. ಆಸ್ತಿ ತೆರಿಗೆಯನ್ನು ಕಟ್ಟದೇ ಇರುವ ಕಾರಣಕ್ಕಾಗಿ ಜಪ್ತಿ ಕೂಡ ಮಾಡಲಾಗಿದೆ. ಆದರೂ ಇ.ಎಸ್.ಐ ಕಟ್ ಮಾಡಿಯೂ ಕಾರ್ಮಿಕ ಇಲಾಖೆಗೆ ಅವರು ಪಾವತಿ ಮಾಡಿರಲಿಲ್ಲ ಎನ್ನುವುದು ಅಧಿಕಾರಿಗಳ ಆರೋಪವಾಗಿತ್ತು. ಹಾಗಾಗಿ ಶಿಕ್ಷೆ ನೀಡಲಾಗಿತ್ತು. ಕೆಳ ಹಂತದ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿಕೆಶಿ ಅರ್ಜಿ ವಜಾಗೊಂಡಿದ್ದು ಯಾಕೆ? ಹೈಕೋರ್ಟ್‌ ನೀಡಿದ ಕಾರಣ ಏನು?

    ಡಿಕೆಶಿ ಅರ್ಜಿ ವಜಾಗೊಂಡಿದ್ದು ಯಾಕೆ? ಹೈಕೋರ್ಟ್‌ ನೀಡಿದ ಕಾರಣ ಏನು?

    ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಪ್ರಕರಣದ (Disproportionate Asset Case) ತನಿಖೆಯನ್ನು ಪೂರ್ಣಗೊಳಿಸಿ ಚಾರ್ಜ್‌ಶೀಟ್‌ (Chargesheet) ಅನ್ನು 3 ತಿಂಗಳ ಒಳಗಡೆ ಸಲ್ಲಿಸಬೇಕೆಂದು ಹೈಕೋರ್ಟ್‌ ಸಿಬಿಐಗೆ ಸೂಚಿಸಿದೆ.

    ಸಿಬಿಐ ತನಿಖೆ ರದ್ದು ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂದು ನ್ಯಾಯಮೂರ್ತಿ ಕೆ.ನಟರಾಜನ್ ನೇತೃತ್ವದ ಪೀಠ ಈ ಕುರಿತು ತೀರ್ಪು ನೀಡಿದ್ದು, ತನಿಖೆಗೆ ನೀಡಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಿ ಇಂದಿನಿಂದಲೇ ಸಿಬಿಐ (CBI) ಡಿಕೆಶಿ ಅವರನ್ನು ವಿಚಾರಣೆ ನಡೆಸಬಹುದು ಎಂದು ತೀರ್ಪು ನೀಡಿದೆ.   ಇದನ್ನೂ ಓದಿ: ಡಿಕೆಶಿ ಮೆರವಣಿಗೆ ನೋಡಿ ಕೇಸ್ ಖುಲಾಸೆ ಅಂದ್ಕೊಂಡಿದ್ದೆ: ಕೆ.ಎಸ್ ಈಶ್ವರಪ್ಪ

     

    ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್‌ನ (High Court) ಕೆ ನಟರಾಜನ್ ಅವರ ಪೀಠ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಅರ್ಜಿ ವಜಾ ಮಾಡುವಾಗ ಕೆಲವೊಂದು ಪ್ರಮುಖ ಅಂಶಗಳನ್ನು ಉಲ್ಲೇಖಿಸಿದೆ.

    ಕೋರ್ಟ್‌ ಹೇಳಿದ್ದೇನು?
    ಅರ್ಜಿದಾರ ಡಿಕೆ ಶಿವಕುಮಾರ್‌ ಅರ್ಜಿಯನ್ನು ತುಂಬಾ ವಿಳಂಬವಾಗಿ ಸಲ್ಲಿಸಿದ್ದಾರೆ. ಈಗಾಗಲೇ ತನಿಖೆ ಕೊನೆಯ ಹಂತದಲ್ಲಿ ಇದ್ದು, ಕೆಲವೇ ದಿನದಲ್ಲಿ ಪ್ರಕರಣದ ತನಿಖೆ ಸಂಪೂರ್ಣ ಮಾಡುತ್ತೇವೆ ಎಂದು ಹೇಳಿದೆ. ಈ ಹಂತದಲ್ಲಿ ಪ್ರಕರಣಕ್ಕೆ ತಡೆ ನೀಡುವುದು ಸರಿಯಲ್ಲ.

    ಇನ್ನು ತನಿಖೆ ವಿಳಂಬ ಆಗಿದ್ದರೆ ತನಿಖೆ ಚುರುಕುಗೊಳಿಸಿ ಎಂದು ನಿರ್ದೇಶನ ನೀಡಬಹುದು. ಸಿಬಿಐ ದೋಷಾರೋಪ ಪಟ್ಟಿ ಹಾಕಿದ ಬಳಿಕವೂ ನೂನ್ಯತೆಗಳು ಇದ್ದರೆ ಅರ್ಜಿ ಸಲ್ಲಿಸಬಹುದು.

    ಏನಿದು ಪ್ರಕರಣ?
    2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು.  ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್‌ 3 ರಂದು ಡಿಕೆ ಶಿವಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.  ಈ ತನಿಖೆಗೆ ತಡೆ ಕೋರಿ ಡಿಕೆಶಿ  ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಲವಂತವಾಗಿ ನಟ ನವದೀಪ್ ಅವರನ್ನು ಬಂಧಿಸುವಂತಿಲ್ಲ : ಹೈಕೋರ್ಟ್

    ಬಲವಂತವಾಗಿ ನಟ ನವದೀಪ್ ಅವರನ್ನು ಬಂಧಿಸುವಂತಿಲ್ಲ : ಹೈಕೋರ್ಟ್

    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ಖ್ಯಾತ ನಟ ನವದೀಪ್ ಅವರನ್ನು ಬಂಧಿಸಲು ತೆಲಂಗಾಣ ಪೊಲೀಸರು ಸಿದ್ಧತೆ ನಡೆಸಿದ್ದರು. ಮಾದಾಪುರ (Madapur) ಡ್ರಗ್ಸ್ ಕೇಸ್ ನ 37ನೇ ಆರೋಪಿ ಆಗಿದ್ದ ಇವರ ಬಂಧನಕ್ಕೆ (Arrest) ಅಧಿಕಾರಿಗಳು ಬಲೆ ಬೀಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆಯೇ ಈಗಾಗಲೇ ವಿಚಾರಣೆಗೂ ಒಳಗಾಗಿರುವ ನವದೀಪ್‍ ತಲೆಮರೆಸಿಕೊಂಡಿದ್ದರು. ಜೊತೆಗೆ ತೆಲಂಗಾಣ ಹೈಕೋರ್ಟಿಗೆ (High Court) ನಿರೀಕ್ಷಣಾ ಜಾಮೀನಿಗೆ ಅರ್ಜಿ ಕೂಡ ಸಲ್ಲಿದ್ದರು.

    ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡಿದ್ದ ಮಾನ್ಯ ತೆಲಂಗಾಣ ಉಚ್ಛ ನ್ಯಾಯಾಲಯವು ಬಲವಂತವಾಗಿ ನವದೀಪ್ ಅವರನ್ನು ಬಂಧಿಸುವಂತಿಲ್ಲ ಎಂದು ಆದೇಶ ನೀಡಿದೆ. ಜೊತೆಗೆ ಅವರನ್ನು ವಿಚಾರಣೆಗೆ ಕರೆಯಬಹುದು ಮತ್ತು ಪರೀಕ್ಷೆಗೂ ಒಳಪಡಿಸಬಹುದು. ಆದರೆ, ಈ ನೆಪದಲ್ಲಿ ಅವರನ್ನು ಬಂಧಿಸುವಂತಿಲ್ಲ ಎಂದು ಹೇಳಿದೆ. ಇದನ್ನೂ ಓದಿ:ಆ ನೋವು ಎಂದಿಗೂ ಕಮ್ಮಿಯಾಗಲ್ಲ- ವೈಯಕ್ತಿಕ ವಿಚಾರದ ಬಗ್ಗೆ ಭಾವನಾ ಭಾವುಕ

    ಮೊನ್ನೆಯಷ್ಟೇ ನವದೀಪ್ (Navdeep) ಮನೆಯ ಮೇಲೆ ಡ್ರಗ್ಸ್ (Drugs) ನಿಗ್ರಹ ದಳದ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಹಿಂದೆ ಹೋಟೆಲ್ ವೊಂದರ ಮೇಲೆ ದಾಳಿ ಮಾಡಿದ್ದ ಅಧಿಕಾರಿಗಳು ನಿರ್ಮಾಪಕನೂ ಸೇರಿದಂತೆ ಹಲವರನ್ನು ಬಂಧಿಸಿದ್ದರು. ಈ ವೇಳೆ ನವದೀಪ್ ಕೂಡ ಇದ್ದಾರೆ ಎಂದು ಹೇಳಲಾಗಿತ್ತು.

     

    ಕೇವಲ ತೆಲುಗು ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಮಲಯಾಳಂ ಚಿತ್ರರಂಗದಲ್ಲೂ ಈ ವಿಷಗಾಳಿ ಬೀಸಿದೆ. ಸ್ವತಃ ಕೇರಳದ ಕಮಿಷ್ನರ್ ಪತ್ರಿಕಾಗೋಷ್ಠಿ ನಡೆಸಿ, ಶೂಟಿಂಗ್ ನಡೆಯುವ ಸ್ಥಳದಲ್ಲೇ ಪರಿಶೀಲನೆ ಮಾಡಲಾಗುವುದು ಎಂದು ಎಚ್ಚರಿಸಿದ್ದರು. ಕೆಲ ನಟರು ಶೂಟಿಂಗ್ ಸ್ಥಳದಲ್ಲೇ ಡ್ರಗ್ಸ್ ಸೇವಿಸಿದ್ದರ ಬಗ್ಗೆ ದೊಡ್ಡ ಮಟ್ಟದಲ್ಲೂ ಚರ್ಚೆ ನಡೆದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರಬಾಬು ನಾಯ್ಡು ಜಾಮೀನು ಅರ್ಜಿ ವಿಚಾರಣೆ ಸೆ.21ಕ್ಕೆ ಮುಂದೂಡಿಕೆ

    ಚಂದ್ರಬಾಬು ನಾಯ್ಡು ಜಾಮೀನು ಅರ್ಜಿ ವಿಚಾರಣೆ ಸೆ.21ಕ್ಕೆ ಮುಂದೂಡಿಕೆ

    ಅಮರಾವತಿ: ಆಂಧ್ರಪ್ರದೇಶ (Andhra Pradesh) ಮಾಜಿ ಮುಖ್ಯಮಂತ್ರಿ, ಟಿಡಿಪಿ (TDP) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು (N.Chandrababu Naidu) ಅವರ ಜಾಮೀನು (Bail) ಅರ್ಜಿ ವಿಚಾರಣೆಯನ್ನು ಆಂಧ್ರಪ್ರದೇಶ ಹೈಕೋರ್ಟ್ ಮಂಗಳವಾರ ಸೆಪ್ಟೆಂಬರ್ 21ಕ್ಕೆ ಮುಂದೂಡಿದೆ.

    ಟಿಡಿಪಿ ಕಾನೂನು ತಂಡವು ಹೈಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದೆ. ಟಿಡಿಪಿ ಕಾನೂನು ಸಲಹೆಗಾರ ಸುಪ್ರೀಮ್ ಸಿದ್ದಾರ್ಥ್ ಲೂತ್ರಾ ಅವರು ತಮ್ಮ ವಾದವನ್ನು ವಾಸ್ತವಿಕವಾಗಿ ಮಂಡಿಸಿದರು. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣಗೆ ರಿಲೀಫ್‌ – ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ

    ಕೌಶಲ್ಯಾಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ವಿಜಯವಾಡದ ಭ್ರಷ್ಟಾಚಾರ ನಿಗ್ರಹ ದಳ (ACB) ನ್ಯಾಯಾಲಯವು ಸೆಪ್ಟೆಂಬರ್ 23ರವರೆಗೆ ಚಂದ್ರಬಾಬು ನಾಯ್ಡುವನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಇದನ್ನೂ ಓದಿ: ವಾಕ್ ಸ್ವಾತಂತ್ರ್ಯ ಧರ್ಮದ ವಿರುದ್ಧ ದ್ವೇಷ ಭಾಷಣ ಆಗಬಾರದು: ಮದ್ರಾಸ್ ಹೈಕೋರ್ಟ್

    ನಾಯ್ಡು ಅವರನ್ನು ಬಂಧಿಸಿರುವ ಪ್ರಕರಣವು ಆಂಧ್ರಪ್ರದೇಶದಲ್ಲಿರುವ ಸೆಂಟರ್ಸ್ ಆಫ್ ಎಕ್ಸಲೆನ್ಸ್ (COE) ಕ್ಲಸ್ಟರ್‌ಗಳ ಸ್ಥಾಪನೆಗೆ ಸಂಬಂಧಿಸಿದ್ದು, ಒಟ್ಟು ಅಂದಾಜು ಯೋಜನಾ ಮೌಲ್ಯ 3,300 ಕೋಟಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅಕ್ರಮದಿಂದ ರಾಜ್ಯ ಸರ್ಕಾರಕ್ಕೆ 300 ಕೋಟಿಗೂ ಅಧಿಕ ನಷ್ಟ ಉಂಟಾಗಿದೆ ಎಂದು ಸಂಸ್ಥೆ ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಸಚಿವ ಡಿ.ಸುಧಾಕರ್‌ಗೆ ರಿಲೀಫ್ – ಜಾತಿ ನಿಂದನೆ ಆರೋಪ ಪ್ರಕರಣಕ್ಕೆ ಧಾರವಾಡ ಹೈಕೋರ್ಟ್ ತಡೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೈಕೋರ್ಟ್ ವರ ಕೊಟ್ರೂ ಆಯುಕ್ತರು ಬಿಡ್ತಿಲ್ಲ- ಹುಬ್ಬಳ್ಳಿ ಈದ್ಗಾದಲ್ಲಿ ಗಣೇಶ ಹಬ್ಬಕ್ಕೆ ಸಿಗದ ಅನುಮತಿ

    ಹೈಕೋರ್ಟ್ ವರ ಕೊಟ್ರೂ ಆಯುಕ್ತರು ಬಿಡ್ತಿಲ್ಲ- ಹುಬ್ಬಳ್ಳಿ ಈದ್ಗಾದಲ್ಲಿ ಗಣೇಶ ಹಬ್ಬಕ್ಕೆ ಸಿಗದ ಅನುಮತಿ

    – ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

    ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ (Hubballi Idgah Maidan )ಗಣೇಶ ಪ್ರತಿಷ್ಠಾಪನೆಗೆ ಹೈಕೋರ್ಟ್ (High Court) ಗ್ರೀನ್ ಸಿಗ್ನಲ್ ನೀಡದರೂ ಪಾಲಿಕೆ ಆಯುಕ್ತರು ಬಿಡುತ್ತಿಲ್ಲ.

    ಈದ್ಗಾದಲ್ಲಿ ಗಣೇಶೋತ್ಸವ ಸಂಬಂಧ ಪಾಲಿಕೆ ಹೊರಡಿಸಿದ್ದ ಠರಾವು ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾ ಮಾಡಿದೆ. ಈ ಮೂಲಕ ಪಾಲಿಕೆ ಹೊರಡಿಸಿದ್ದ ಠರಾವು ಪ್ರಕಾರ ಮೂರು ದಿನ ಈದ್ಗಾ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲು ಇದ್ದ ಅಡೆತಡೆ ನಿವಾರಣೆಯಾಯ್ತು ಎಂದು ಎಲ್ಲರೂ ಭಾವಿಸಿದ್ರು. ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಂಭ್ರಮಾಚರಣೆ ಕೂಡ ಮಾಡಿದ್ರು.

    ದಲಿತ ಸಂಘಟನೆಗಳು ಮಾತ್ರ ಈದ್ಗಾದಲ್ಲಿ ಗಣೇಶನನ್ನು ಕೂರಿಸಲು ಅವಕಾಶ ನೀಡಬಾರದು ಎಂದು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದವು. ಆದರೆ ಇದಕ್ಕೆ ಮಣೆ ಹಾಕಲ್ಲ ಅಂತಾ ಮೇಯರ್ ಹೇಳಿದ್ರು. ಇಷ್ಟೆಲ್ಲಾ ಆದ್ಮೇಲೂ ಪಾಲಿಕೆ ಆಯುಕ್ತರ ತಕರಾರು ಮುಂದುವರಿದಿದೆ. ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡಲು ಆಯುಕ್ತರು ಇನ್ನೂ ಮೀನಾಮೇಷ ಎಣಿಸ್ತಿದ್ದಾರೆ. ನನಗೆ ಇನ್ನೂ ಕೋರ್ಟ್ ಪ್ರತಿ ಸಿಕ್ಕಿಲ್ಲ ಎಂಬ ಸಬೂಬು ಹೇಳ್ತಿದ್ದಾರೆ. ಇದರಿಂದ ಕೇಸರಿ ಪಡೆ ಮತ್ತೆ ಕೆರಳಿದೆ.

    ಹುಬ್ಬಳ್ಳಿ-ಗದಗ ಮುಖ್ಯರಸ್ತೆ ತಡೆದು, ಕಾಂಗ್ರೆಸ್ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ. ಗುರುವಾರದಿಂದ ಶಾಸಕ ಅರವಿಂದ್ ಬೆಲ್ಲದ್ ನೇತೃತ್ವದಲ್ಲಿ ಬಿಜೆಪಿ ಆಹೋರಾತ್ರಿ ಧರಣಿ ನಡೆಸಿತ್ತು. ಇದಕ್ಕೆ ಶ್ರೀರಾಮಸೇನೆ ಸೇರಿ ಹಲವು ಸಂಘಟನೆಗಳು ಸಾಥ್ ನೀಡಿದ್ದವು. ಗಣೇಶೋತ್ಸವ ಬೇಡ ಅನ್ನೋರು ಪಾಕಿಸ್ತಾನಕ್ಕೆ ಹೋಗಲಿ ಎಂದು ಪ್ರಮೋದ್ ಮುತಾಲಿಕ್ ಗುಡುಗಿದ್ರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿ, ಜೆಡಿಎಸ್ ನಾಯಕರು ರಾಜಕೀಯಕ್ಕಾಗಿ ಮಾತನಾಡಿದ್ದೆಂದು ನನ್ನ ಬಳಿ ಸತ್ಯ ಒಪ್ಪಿಕೊಂಡಿದ್ದಾರೆ: ಡಿ ಸುಧಾಕರ್

    ಬಿಜೆಪಿ, ಜೆಡಿಎಸ್ ನಾಯಕರು ರಾಜಕೀಯಕ್ಕಾಗಿ ಮಾತನಾಡಿದ್ದೆಂದು ನನ್ನ ಬಳಿ ಸತ್ಯ ಒಪ್ಪಿಕೊಂಡಿದ್ದಾರೆ: ಡಿ ಸುಧಾಕರ್

    ಚಿತ್ರದುರ್ಗ: ನನ್ನ ವಿರುದ್ಧದ ಭೂಕಬಳಿಕೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಚಿತ್ರದುರ್ಗದಲ್ಲಿ (Chitradurga) ಸಾಂಖಿಕ ಹಾಗೂ ಯೋಜನೆ ಸಚಿವ ಡಿ ಸುಧಾಕರ್ (D Sudhakar) ಹೇಳಿದರು.

    ಚಿತ್ರದುರ್ಗದ ಡಿಸಿಸಿ ಬ್ಯಾಂಕ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನನ್ನ ವಿರುದ್ಧದ ಪ್ರಕರಣ ರದ್ದತಿಗೆ ಅರ್ಜಿ ಸಲ್ಲಿಸಿದ್ದೆವು. ಇಂದು ಹೈಕೋರ್ಟ್ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಿ ಆದೇಶಿಸಿದೆ. ಈ ಬಗ್ಗೆ ಹೈಕೋರ್ಟ್ನಲ್ಲಿರುವ ನಮ್ಮ ವಕೀಲರಿಂದ ಈಗ ಮಾಹಿತಿ ಸಿಕ್ಕಿದೆ. ತಡೆಯಾಜ್ಞೆಯ ದಾಖಲೆ ನಮ್ಮ ವಕೀಲರ ಬಳಿ ಇದೆ ಎಂದು ತಿಳಿಸಿದರು.

    ಇದು ನನ್ನ ವಿರುದ್ಧದ ಭೂ ಕಬಳಿಕೆ ಪ್ರಕರಣ ರಾಜಕೀಯ ಪ್ರೇರಿತವಾಗಿದ್ದು. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ರಾಜಕೀಯಕ್ಕಾಗಿ ನಾವು ಮಾತನಾಡಿರುವುದಾಗಿ ನನ್ನ ಹತ್ತಿರ ಸತ್ಯವನ್ನು ಒಪ್ಪಿಕೊಂಡಿದ್ದಾರೆ. ಇನ್ನು ಆಕ್ರಮ ಭೂ ಕಬಳಿಕೆ ಪ್ರಕರಣ ಸಂಬಂಧ ಈ ವರೆಗೆ ನನಗೆ ಪೊಲೀಸ್ ಇಲಾಖೆಯಿಂದ ಯಾವುದೇ ನೋಟಿಸ್ ಬಂದಿಲ್ಲ. ನಾನು ಈ ನೆಲದ ಕಾನೂನನ್ನು ಗೌರವಿಸುತ್ತಿರುವುದರಿಂದ ಪೊಲೀಸರ ನೋಟಿಸ್ ಬಂದರೆ ಉತ್ತರ ನೀಡುತ್ತೇನೆ ಎಂದರು.

    ನನ್ನ ವಿರುದ್ಧದ ಪ್ರಕರಣ ರಾಜಕೀಯ ಪ್ರೇರಿತವಾಗಿದೆ. ಮೊಸರಲ್ಲಿ ಕಲ್ಲು ಹುಡುಕಿದರೆ ಯಶಸ್ವಿ ಆಗುತ್ತಾರಾ? ಸತ್ಯ ಯಾವತ್ತಿದ್ದರೂ ಗೆಲ್ಲಲೇಬೇಕು. ಸತ್ಯಾಂಶ ತಿಳಿಯದೆ, ದಾಖಲೆ ನೀಡದೆ ವಿನಾಕಾರಣ ಆರೋಪ ಮಾಡಲಾಗುತ್ತಿದೆ. ಅಲ್ಲದೆ ಬಿಜೆಪಿ ಹಾಗೂ ಜೆಡಿಎಸ್‌ನ ಕೆಲ ಸ್ನೇಹಿತರ ಜೊತೆ ನಾನು ವೈಯಕ್ತಿಕವಾಗಿ ಮಾತಾಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ನಾವು ಯಾರು ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿಲ್ಲ: ಶೋಭಾ ಕರಂದ್ಲಾಜೆ

    ನಮ್ಮ ದೇಶದ ಪ್ರಜಾಪ್ರಭುತ್ವ ಶಕ್ತಿಯುತವಾಗಿದೆ. ತಪ್ಪು ಮಾಡಿದರೆ ಒಂದು ಕ್ಷಣ ಇರಲಾಗುವುದಿಲ್ಲ. ಎಷ್ಟೋ ಜನ ಅಪರಾಧಿಗಳು ತಪ್ಪಿಸಿಕೊಳ್ಳಲಿ, ಆದರೆ ಓರ್ವ ನಿರಪರಾಧಿಗೆ ಶಿಕ್ಷೆ ಆಗಬಾರದು. 60 ವರ್ಷಗಳಿಂದ ನನ್ನ ಜೀವನವನ್ನು ಜನ ಗಮನಿಸಿದ್ದಾರೆ. ಒಳ್ಳೆಯ ವ್ಯಕ್ತಿ ಎಂಬ ಕಾರಣಕ್ಕೆ 4 ಬಾರಿ ಚುನಾವಣೆಯಲ್ಲಿ ಈ ಜಿಲ್ಲೆಯ ಜನ ನನ್ನನ್ನು ಗೆಲ್ಲಿಸಿದ್ದಾರೆ. ಅಲ್ಪ ಸಂಖ್ಯಾತನಾಗಿದ್ದರೂ ಪ್ರಾಮಾಣಿಕತೆ ಸೇವೆ ಗುರುತಿಸಿದ್ದಾರೆ ಎಂದು ಹೇಳಿದರು.

    2008ರಲ್ಲಿ ಬಿಜೆಪಿ ಸರ್ಕಾರದಲ್ಲಿ ನಾನು ಸಚಿವ ಆಗಿದ್ದೆ. ಆಗ ಸಿಬಿಐ ನನ್ನ ವಿರುದ್ಧ ಪ್ರಕರಣ ದಾಖಲು ಮಾಡಿತ್ತು. ಬಿಜೆಪಿ ನನ್ನನ್ನು ಸಚಿವ ಸ್ಥಾನದಿಂದ ತೆಗೆದು ಹಾಕಿತ್ತಾ? ಕೇವಲ ರಾಜಕಾರಣಕ್ಕಾಗಿ ನನ್ನ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ ಎಂದು ಕಿಡಿಕಾರಿದರು.

    ಈ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹ ಸಚಿವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ನಾನು ಪಾರದರ್ಶಕವಾಗಿದ್ದೇನೆ. ನನಗೆ ಭಯವೇಕೆ? ಇಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವರ ದರ್ಶನ ಮಾಡಿ, ಬರಗಾಲ ತೊಲಗಲಿ ಎಂದು ಪ್ರಾರ್ಥನೆ ಮಾಡಿರುವುದಾಗಿ ಸಚಿವರು ತಿಳಿಸಿದರು. ಇದನ್ನೂ ಓದಿ: 8 ಎಕರೆ ಜಮೀನು ಖರೀದಿ, ಪೆಟ್ರೋಲ್ ಬಂಕ್ ನಿರ್ಮಾಣ – ಅಭಿನವ ಹಾಲಾಶ್ರೀ ಈಗ ನಾಪತ್ತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಮಪತ್ರದಲ್ಲಿ ಸುಳ್ಳು ಮಾಹಿತಿ – ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ ಅನರ್ಹ

    ನಾಮಪತ್ರದಲ್ಲಿ ಸುಳ್ಳು ಮಾಹಿತಿ – ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ ಅನರ್ಹ

    ಬೆಂಗಳೂರು: ಚುನಾವಣಾ ನಾಮಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಅರೋಪದಡಿ ಹಾಸನ (Hassana) ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ (Prajwal Revanna) ಅವರನ್ನು ಹೈಕೋರ್ಟ್‌ (High Court) ಅನರ್ಹಗೊಳಿಸಿ ಆದೇಶ ಪ್ರಕಟಿಸಿದೆ.

    ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾ.ಕೆ.ನಟರಾಜನ್ ಅವರು ಆದೇಶ ಪ್ರಕಟಿಸಿದ್ದಾರೆ.  ಈ ಆದೇಶದಿಂದ ಇನ್ನು 6 ವರ್ಷಗಳ ಕಾಲ  ಪ್ರಜ್ವಲ್‌ ರೇವಣ್ಣ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಾಧ್ಯವಿಲ್ಲ. ಇದನ್ನೂ ಓದಿ: ಸೆ.11ಕ್ಕೆ ಬೆಂಗಳೂರು ಬಂದ್ – ಸರ್ಕಾರದ ವಿರುದ್ಧ ಸಿಡಿದ ಖಾಸಗಿ ಸಾರಿಗೆ ಒಕ್ಕೂಟ

     

    2019ರ ಲೋಕಾಸಭಾ ಚುನಾವಣಾ (Lok Sabha Election) ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ನೀಡಿದ್ದಾರೆ. ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಹಾಸನ ಬಿಜೆಪಿ ಅಭ್ಯರ್ಥಿ (BJP Candidate) ಎ. ಮಂಜು (A. Manju)  ಮತ್ತು ವಕೀಲ ದೇವರಾಜೇಗೌಡ ಹೈ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು.

    ಪ್ರಜ್ವಲ್ ಸರ್ಕಾರಿ ಜಮೀನು ಖರೀದಿಸಿದ್ದಾರೆ, ಆದಾಯ ತೆರಿಗೆ ವಂಚಿಸಿದ್ದಾರೆ. ಬೇನಾಮಿ ಆಸ್ತಿ ಗಳಿಸಿದ್ದಾರೆ. ಹೊಳೆನರಸೀಪುರದಲ್ಲಿರುವ ಚೆನ್ನಾಂಬಿಕ ಕನ್ವೆನ್ಶನ್‌ ಸೆಂಟರ್ ಕಟ್ಟಡ ಕನಿಷ್ಠ 5 ಕೋಟಿ ರೂ. ಬೆಲೆ ಬಾಳುತ್ತದೆ. ಆದರೆ ಅದರ ಮೌಲ್ಯವನ್ನು 14 ರೂ. ಲಕ್ಷ ಎಂದು ತೋರಿಸಲಾಗಿದೆ. ಬೆಂಗಳೂರಿನ ಮಿನರ್ವ ಸರ್ಕಲ್ ಶಾಖೆಯ ಕರ್ನಾಟಕ ಬ್ಯಾಂಕ್ ಖಾತೆಯಲ್ಲಿ 48 ಲಕ್ಷ ರೂ. ಹೊಂದಿದ್ದರೂ ಕೇವಲ 5 ಲಕ್ಷ ಇದೆ ಎಂದು ತೋರಿಸಿದ್ದಾರೆ ಎಂದು  ದೇವರಾಜೇಗೌಡ ಆರೋಪಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧರ್ಮಸ್ಥಳ, ಧರ್ಮಾಧಿಕಾರಿ ಕುಟುಂಬದ ವಿರುದ್ಧ ಹೇಳಿಕೆ ನೀಡದಂತೆ ಹೈಕೋರ್ಟ್ ಆದೇಶ

    ಧರ್ಮಸ್ಥಳ, ಧರ್ಮಾಧಿಕಾರಿ ಕುಟುಂಬದ ವಿರುದ್ಧ ಹೇಳಿಕೆ ನೀಡದಂತೆ ಹೈಕೋರ್ಟ್ ಆದೇಶ

    ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthala) ಹಾಗೂ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ (Dr. D Veerendra Heggade) ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಎಚ್ಚರಿಕೆಯ ಆದೇಶ ನೀಡಿದೆ.

     

    ಸೌಜನ್ಯ (Soujanya Case) ಅತ್ಯಾಚಾರ, ಹತ್ಯೆಯ ಮರು ತನಿಖೆಗೆ ಒತ್ತಾಯಿಸಿ ಸಭೆ, ಪ್ರತಿಭಟನೆಗಳು ನಡೆಯುತ್ತಿದೆ. ಈ ವೇಳೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಕಂಡಕ್ಟರ್ ದುರ್ಮರಣ

    ಶ್ರೀ ಕ್ಷೇತ್ರ ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದ ಬಗ್ಗೆ ಸಾಕಷ್ಟು ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಹಲವು ಪೊಲೀಸ್ ಠಾಣೆಗಳಲ್ಲೂ ಪ್ರಕರಣ ದಾಖಲಾಗಿದೆ. ಆದರೂ ಹೇಳಿಕೆಗಳನ್ನು ಮುಂದುವರಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ (Mahesh Shetty Thimarodi) ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ.

    ಇನ್ನು ಮುಂದೆ ಅವಹೇಳನಕಾರಿ ಹೇಳಿಕೆ ನೀಡದಂತೆ ಆದೇಶಿಸಿದ ಹೈಕೋರ್ಟ್ (HighCourt), ಸರ್ಕಾರ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೂ ಸೂಚಿಸಿದ್ದು, ಕೋರ್ಟ್ ಆದೇಶ ಉಲ್ಲಂಘಿಸದಂತೆ ಎಚ್ಚರ ವಹಿಸಲು ಸೂಚಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]