Tag: high court

  • ನಟಿ ಜಿಯಾ ಖಾನ್ ಆಗಿದ್ದು ಕೊಲೆ: ಹೈಕೋರ್ಟ್ ಮೆಟ್ಟಿಲು ಏರುವೆ ಎಂದ ಜಿಯಾ ತಾಯಿ

    ನಟಿ ಜಿಯಾ ಖಾನ್ ಆಗಿದ್ದು ಕೊಲೆ: ಹೈಕೋರ್ಟ್ ಮೆಟ್ಟಿಲು ಏರುವೆ ಎಂದ ಜಿಯಾ ತಾಯಿ

    ಬಾಲಿವುಡ್ ನಟಿ ಜಿಯಾ ಖಾನ್ (Zia Khan) ಆತ್ಮಹತ್ಯೆಯ ಕುರಿತಂತೆ ಹತ್ತು ವರ್ಷಗಳ ನಂತರ ಇಂದು ಸಿಬಿಐ ವಿಶೇಷ ಕೋರ್ಟ್ ತೀರ್ಪು (Judgment) ಪ್ರಕಟಿಸಿದೆ. ಪ್ರಮುಖ ಆರೋಪಿ ಹಾಗೂ ಜಿಯಾ ಗೆಳೆಯ ಸೂರಜ್ ಪಂಚೋಲಿ (Suraj Pancholi) ಯನ್ನು ನಿರ್ದೋಷಿ ಎಂದು ತೀರ್ಪು ನೀಡಿದೆ. ಈ ತೀರ್ಪಿನ ವಿರುದ್ಧ ಹೈಕೋರ್ಟ್ (High Court) ಮೆಟ್ಟಿಲು ಏರುವುದಾಗಿ ಜಿಯಾ ತಾಯಿ ರಬಿಯಾ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮಗು ಹೇಗೆ ಸತ್ತಿತು ಎನ್ನುವುದರ ಸತ್ಯ ನನಗೆ ಗೊತ್ತಾಗಬೇಕು. ಇದೊಂದು ಕೊಲೆ ಎಂದು ಮತ್ತೆ ರಬಿಯಾ (Rabia)  ನುಡಿದಿದ್ದಾರೆ.

    ಏನಿದು ಜಿಯಾ ಖಾನ್ ಸಾವಿನ ಪ್ರಕರಣ?

    ಬಾಲಿವುಡ್ ನಟಿ ಜಿಯಾ ಖಾನ್ ಸಾವಿನ ಪ್ರಕರಣ ಬಾಲಿವುಡ್ ಸಿನಿಮಾ ರಂಗದಲ್ಲಿ ಭಾರೀ ಆಘಾತ ಮೂಡಿಸಿತ್ತು. ಚಿತ್ರರಂಗದಲ್ಲಿ ಆಗ ತಾನೆ ಮಿಂಚುತ್ತಿದ್ದ ಜಿಯಾ ಏಕಾಏಕಿ 2013ರ ಜೂನ್ 3ರಂದು ಮುಂಬೈನ ಜುಹೂ ಅಪಾರ್ಟ್‍ ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿತ್ತು. ಈ ಸಾವಿಗೆ ಅವರ ಬಾಯ್ ಫ್ರೆಂಡ್ ಸೂರಜ್ ಪಾಂಚೋಲಿ ಕಾರಣ ಎಂದು ಹೇಳಲಾಗಿತ್ತು.

    ಜಿಯಾ ಖಾನ್ ಬರೆದ ಡೆತ್ ನೋಟ್ ಆಧರಿಸಿ ಪ್ರಿಯಕರ ಸೂರಜ್ ಪಾಂಚೋಲಿ ಮೇಲೆ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲಾಗಿತ್ತು. ಆನಂತರ ಜುಲೈನಲ್ಲಿ ಸೂರಜ್ ಜಾಮೀನು ಪಡೆದರು. ಜಿಯಾ ಖಾನ್ ಅವರ ತಾಯಿ ರಬಿಯಾ ನಂತರ ವಿಶೇಷ ಮನವಿ ಸಲ್ಲಿಸಿದ ಮೇರೆಗೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು.

    ಜಿಯಾ ಖಾನ್ ತಾಯಿ ರಬಿಯಾ ತಮ್ಮ ವಿರುದ್ಧ ಮಾನಹಾನಿ ಮಾಡುವಂತಹ ಕೆಲಸಗಳಿಗೆ ಕೈ ಹಾಕಿದ್ದಾರೆ ಎಂದು ಸೂರಜ್ ಪಾಂಚೋಲಿ, ಜಿಯಾ ತಾಯಿಯ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ ಕೂಡ ದಾಖಲಿಸಿದ್ದರು. ರಬಿಯಾ ನೀಡಿದ ದೂರಿನ ಮೇಲೆ ಸಿಬಿಐ ಅಧಿಕಾರಿಗಳು ಸೂರಜ್ ಮನೆಯ ಮೇಲೆ ದಾಳಿ ಮಾಡಿದರು. ನಂತರ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಲ್ಲಿ ಮತ್ತೆ ಸಪ್ಲಿಮೆಂಟರಿ ಚಾರ್ಜ್ ಶೀಟ್ ದಾಖಲಿಸಿದ್ದರು.

    ತನ್ನ ಮಗಳಿಗೆ ನ್ಯಾಯ ಸಿಗಬೇಕು ಎಂದು ಹಲವಾರು ಪ್ರಯತ್ನಗಳನ್ನು ಮಾಡಿದ್ದರು ರುಬಿಯಾ. ವಿಶೇಷ ತನಿಖಾ ದಳ ರಚಿಸುವಂತೆ ಕೋರ್ಟಿಗೆ ಮೊರೆ ಹೋದರು. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದರು. ಕೇಸ್ ವಿಚಾರಣೆ ಬೇಗ ಮುಗಿಸುವಂತೆ ಮುಂಬೈ ಕೋರ್ಟಿಗೂ ಮನವಿ ಮಾಡಿಕೊಂಡಿದ್ದರು.

    ಸೂರಜ್ ಪಾಂಚೋಲಿ ಕೂಡ ಈ ಪ್ರಕರಣದಲ್ಲಿ ಅಷ್ಟೇ ಹೋರಾಟ ಮಾಡಿದ್ದರು. ಆ ಸಾವಿಗೂ ನನಗೂ ಸಂಬಂಧವಿಲ್ಲ ಎಂದು ವಾದಿಸುತ್ತಲೇ ಬಂದರು. ಸುದೀರ್ಘ ಹತ್ತು ವರ್ಷಗಳ ನಂತರ 2023 ಏಪ್ರಿಲ್ 20 ರಂದು ಅಂತಿವ ವಾದ- ಪ್ರತಿವಾದ ಆಲಿಸಿದ್ದ ವಿಶೇಷ ನ್ಯಾಯಮೂರ್ತಿಗಳಾದ ಎ.ಎಸ್. ಸಯ್ಯದ್ ಅವರು ತೀರ್ಪು ಕಾಯ್ದಿರಿಸಿದ್ದರು. ಇಂದು ತೀರ್ಪು ಪ್ರಕಟವಾಗಿದೆ. ಸೂರಜ್ ಪಾಂಚೋಲಿ ಪರವಾಗಿ ಮಾನ್ಯ ನ್ಯಾಯಾಲಯ ತೀರ್ಪು ನೀಡಿದೆ.

  • ರಿಲೀಸ್ ಗೂ ಮುನ್ನವೇ ಜವಾನ ದೃಶ್ಯ ಲೀಕ್ : ಹೈಕೋರ್ಟ್ ಮೆಟ್ಟಿಲೇರಿದ ಶಾರುಖ್ ಖಾನ್

    ರಿಲೀಸ್ ಗೂ ಮುನ್ನವೇ ಜವಾನ ದೃಶ್ಯ ಲೀಕ್ : ಹೈಕೋರ್ಟ್ ಮೆಟ್ಟಿಲೇರಿದ ಶಾರುಖ್ ಖಾನ್

    ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ (Shahrukh Khan) ನಟನೆಯ ‘ಜವಾನ’ (Jawan) ಸಿನಿಮಾ ಜೂನ್ ನಲ್ಲಿ ರಿಲೀಸ್ ಆಗಲಿದೆ. ಅದಕ್ಕೂ ಮುನ್ನ ಈ ಚಿತ್ರದ ಮಹತ್ವದ ದೃಶ್ಯಗಳು ಮತ್ತು ಫೋಟೋಗಳು ಲೀಕ್ (Leake) ಆಗಿವೆ. ಈ ಕುರಿತು ಸ್ವತಃ ಶಾರುಖ್ ಖಾನ್ ಗರಂ ಆಗಿದ್ದಾರೆ. ಸಿನಿಮಾದ ಪ್ರಚಾರಕ್ಕೆ ಬಳಸಿಕೊಳ್ಳಬೇಕಾದ ದೃಶ್ಯ ಮತ್ತು ಫೋಟೋಗಳು ಲೀಕ್ ಆಗುತ್ತಿರುವುದಕ್ಕೆ ಮತ್ತು ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತಿರುವವರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

    ಈ ಸಿನಿಮಾವನ್ನು ತಮ್ಮದೇ ರೆಡ್ ಚಿಲ್ಲೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿರುವ ಶಾರುಖ್ ಖಾನ್, ದೃಶ್ಯಗಳು ಸೋರಿಕೆಯಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟವುಂಟಾಗಲಿದೆ. ಹೀಗಾಗಿ ಲೀಕ್ ಮಾಡುವ ಕಿಡಿಗೇಡಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇದನ್ನೂ ಓದಿ:ಸಂಪತ್ ಪತ್ನಿ 5 ತಿಂಗಳ ಗರ್ಭಿಣಿ- ಸಹನಟನ ನೆನೆದು ಕಣ್ಣೀರಿಟ್ಟ ವೈಷ್ಣವಿ

    ಶಾರುಖ್ ಖಾನ್ ಮನವಿಯನ್ನು ಪುರಸ್ಕರಿಸಿರುವ ದೆಹಲಿ ಹೈಕೋರ್ಟ್ (High Court) , ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿರುವ ದೃಶ್ಯಗಳನ್ನು ಕೂಡಲೇ ಡಿಲಿಟ್ ಮಾಡಬೇಕು ಎಂದು ಆದೇಶ ನೀಡಿದೆ. ಯುಟ್ಯೂಬ್, ವೆಬ್ ಸೈಟ್ ಸೇರಿದಂತೆ ಜವಾನ ದೃಶ್ಯಗಳನ್ನು ಅಪ್ ಲೋಡ್ ಮಾಡಿದವರು ಕೂಡಲೇ ಡಿಲಿಟ್ ಮಾಡಬೇಕು ಎಂದು ಹೈಕೋರ್ಟ್ ಆದೇಶ ಮಾಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

    ಜವಾನ ಬಹುತಾರಾಗಣ ಹೊಂದಿರುವ ಸಿನಿಮಾ. ಶಾರುಖ್ ಜೊತೆ ದೀಪಿಕಾ ಪಡುಕೋಣೆ (Deepika Padukone) ಹಾಗೂ ನಯನತಾರಾ ನಟಿಸಿದ್ದಾರೆ. ಈ ಮೂವರ ಸಂಗಮದ ಮೊದಲ ಸಿನಿಮಾ ಇದಾಗಿದೆ. ಇವರ ಜೊತೆ ಖ್ಯಾತ ತಮಿಳು ನಟ ವಿಜಯ್ ಸೇತುಪತಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾನಾ ಕಾರಣಗಳಿಂದಾಗಿ ಈ ಸಿನಿಮಾ ಕುತೂಹಲ ಮೂಡಿಸಿದೆ.

  • ಗಡೀಪಾರು ಭೀತಿಯಲ್ಲಿದ್ದ ಚೇತನ್‍ಗೆ ಹೈಕೋರ್ಟ್ ರಿಲೀಫ್

    ಗಡೀಪಾರು ಭೀತಿಯಲ್ಲಿದ್ದ ಚೇತನ್‍ಗೆ ಹೈಕೋರ್ಟ್ ರಿಲೀಫ್

    ಬೆಂಗಳೂರು: ಒಸಿಐ ಮಾನ್ಯತೆ ರದ್ದು ಹಿನ್ನೆಲೆಯಲ್ಲಿ ಗಡೀಪಾರು ಭೀತಿಯಲ್ಲಿದ್ದ ನಟ ಚೇತನ್‍ಗೆ (Chetan) ಹೈಕೋರ್ಟ್‍ನಿಂದ (High Court) ಷರತ್ತುಬದ್ಧ ರಿಲೀಫ್ ದೊರೆತಿದೆ.

    ನ್ಯಾ. ಎಂ ನಾಗಪ್ರಸನ್ನರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ನಟ ಚೇತನ್‍ಗೆ 2018ರಲ್ಲಿ ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನೀಡಲಾಗಿತ್ತು. ಆದರೆ ಚೇತನ್ ಮೇಲೆ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ ಹಾಗೂ ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ (Central Government) ನೋಟಿಸ್ ನೀಡಿ ಉತ್ತರ ಪಡೆದಿತ್ತು. ಚೇತನ್ ನೀಡಿದ್ದ ಉತ್ತರ ಸಮಾಧಾನಕರವಾಗಿಲ್ಲದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಸಿಐ ಕಾರ್ಡ್ ರದ್ದುಪಡಿಸಿತ್ತು.

    karnataka highcourt

    ಆದರೆ ಚೇತನ್ ಪರ ವಕೀಲರು, ಚೇತನ್ ವಾದ ಆಲಿಸದೇ ಕ್ರಮ ಕೈಗೊಂಡಿರುವುದು ಸರಿಯಲ್ಲವೆಂದು ವಾದಿಸಿದ್ದರು. ಈ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಚೇತನ್ ನ್ಯಾಯಾಂಗದ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ತಡೆ ನೀಡದಂತೆ ಕೇಂದ್ರ, ರಾಜ್ಯ ಸರ್ಕಾರದ ವಕೀಲರಾದ ಎಎಜಿ ಅರುಣ್ ಶ್ಯಾಮ್, ಎಎಸ್ ಜಿ ಶಾಂತಿಭೂಷಣ್ ವಾದಿಸಿದ್ದರು. ಇದನ್ನೂ ಓದಿ: 2 ಲಾರಿಗಳ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಮೂವರಿಗೆ ಗಂಭೀರ ಗಾಯ

    ಎರಡು ಕಡೆಯ ವಕೀಲರ ವಾದವನ್ನು ಆಲಿಸಿದ ಹೈಕೋರ್ಟ್ ನಟ ಚೇತನ್‍ಗೆ ಷರತ್ತುಬದ್ಧ ರಿಲೀಫ್ ನೀಡಿದೆ. ನ್ಯಾಯಾಂಗದ ಬಗ್ಗೆ ನಟ ಚೇತನ್ ಟ್ವೀಟ್ ಮಾಡುವಂತಿಲ್ಲ. ವಿಚಾರಣೆಗೆ ಬಾಕಿಯಿರುವ ಕೇಸ್‍ಗಳ ಬಗ್ಗೆಯೂ ಟ್ವೀಟ್ ಮಾಡುವಂತಿಲ್ಲ ಎಂದ ಕೋರ್ಟ್ ಜೂ. 2ರವರೆಗೆ ನಟ ಚೇತನ್ ವಿರುದ್ಧ ಕ್ರಮ ಬೇಡ ಎಂದು ಆದೇಶ ನೀಡಿದೆ. ಇದನ್ನೂ ಓದಿ: ಇಂದು ಕೂಡಲಸಂಗಮಕ್ಕೆ ರಾಹುಲ್ ಗಾಂಧಿ – ಬಸವ ಜಯಂತಿಯಲ್ಲಿ ‘ಕೈ’ ನಾಯಕರು ಭಾಗಿ

  • ಸುಪ್ರೀಂ ಆದೇಶ ಗೊತ್ತಿದ್ದರೂ ಹೈಕಮಾಂಡ್ ನಿಮಗೆ ಅಲ್ಲಿ ಟಿಕೆಟ್ ನೀಡಿದ್ಯಾ – ವಿನಯ್ ಕುಲಕರ್ಣಿ ಪರ ವಕೀಲರಿಗೆ ಹೈಕೋರ್ಟ್ ಚಾಟಿ

    ಸುಪ್ರೀಂ ಆದೇಶ ಗೊತ್ತಿದ್ದರೂ ಹೈಕಮಾಂಡ್ ನಿಮಗೆ ಅಲ್ಲಿ ಟಿಕೆಟ್ ನೀಡಿದ್ಯಾ – ವಿನಯ್ ಕುಲಕರ್ಣಿ ಪರ ವಕೀಲರಿಗೆ ಹೈಕೋರ್ಟ್ ಚಾಟಿ

    ಬೆಂಗಳೂರು: ಧಾರವಾಡಕ್ಕೆ (Dharwad) ಪ್ರವೇಶ ನೀಡಬಾರದು ಎಂಬ ಸುಪ್ರೀಂ ಕೋರ್ಟ್ (Supreme Court) ಆದೇಶ ಗೊತ್ತಿದ್ದರೂ ಹೈಕಮಾಂಡ್ ಅಲ್ಲಿಂದ ಚುನಾವಣೆಗೆ (Election) ಸ್ಪರ್ಧಿಸುವಂತೆ ನಿಮ್ಮ ಕಕ್ಷಿದಾರರಿಗೆ ಟಿಕೆಟ್ ಕೊಟ್ಟಿದ್ಯಾ ಎಂದು ವಿನಯ್ ಕುಲಕರ್ಣಿ (Vinay Kulkarni) ಪರ ವಕೀಲರಿಗೆ ಹೈಕೋರ್ಟ್ (High Court) ಪ್ರಶ್ನಿಸಿ ಚಾಟಿ ಬೀಸಿದೆ.

    ಧಾರವಾಡ ಪ್ರವೇಶಕ್ಕೆ ನಿರಾಕರಿಸಿದ ಜನಪ್ರತಿನಿಧಿಗಳ ಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್ ಧಾರವಾಡ ಪ್ರವೇಶಿಸದಂತೆ ಸೂಚಿಸಿದೆ. ಇದನ್ನೂ ಓದಿ: ಕಾಂಗ್ರೆಸ್‌ನ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ: ಕರಂದ್ಲಾಜೆ ದೂರು

    ವಿನಯ್ ಕುಲಕರ್ಣಿ ಕಾಂಗ್ರೆಸ್ ಟಿಕೆಟ್ ಪಡೆದಿದ್ದು ಧಾರವಾಡದಿಂದ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ಆದರೆ ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಧಾರವಾಡ ಪ್ರವೇಶಿಸದಂತೆ ಈ ಹಿಂದೆ ಆದೇಶ ನೀಡಿತ್ತು. ಈಗ ಚುನಾವಣಾ ಪ್ರಚಾರಕ್ಕೆ ಅನುಕೂಲವಾಗುವಂತೆ ಧಾರವಾಡಕ್ಕೆ ಪ್ರವೇಶಿಸಲು ಅವಕಾಶ ನೀಡಬೇಕು ಎಂದು ಹೈಕೋರ್ಟ್‍ಗೆ ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸುವ ವೇಳೆ ಕೋರ್ಟ್ ಕುಲಕರ್ಣಿ ಪರ ವಕೀಲರನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದೆ.

    karnataka highcourt

    ಧಾರವಾಡದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಏ.15 ರಂದು ವಿನಯ್ ಕುಲಕರ್ಣಿ ಅವರ ಅರ್ಜಿಯ ವಿಚಾರಣೆಯನ್ನು ಪೂರ್ಣ ಮಾಡಿದ್ದ ಕೋರ್ಟ್ ಏಪ್ರಿಲ್ 18 ರಂದು ಧಾರವಾಡ ಪ್ರವೇಶಿಸದಂತೆ ಆದೇಶ ನೀಡಿತ್ತು.

    ಯೋಗೇಶ್ ಗೌಡ ಪ್ರಕರಣದ 120 ಸಾಕ್ಷಿಗಳ ಪೈಕಿ 90 ಮಂದಿ ಧಾರವಾಡದವರೇ ಆಗಿದ್ದಾರೆ. ವಿನಯ್ ಕುಲಕರ್ಣಿಗೆ ಕ್ಷೇತ್ರಕ್ಕೆ ಪ್ರವೇಶ ನೀಡಿದರೆ ಆದೇಶ ದುರುಪಯೋಗವಾಗಬಹುದು. ಮುಂದೆ ವಿಚಾರಣೆಗೆ ಸಮಸ್ಯೆಯಾಗಬಹುದು. ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಯಿದೆ. ಯಾವುದೇ ಕಾರಣಕ್ಕೂ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದು ಸಿಬಿಐ ಪರ ವಕೀಲರು ಬಲವಾದ ವಾದ ಮಂಡಿಸಿದ್ದರು.

    ಸುಪ್ರೀಂ ಷರತ್ತು
    ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು. ಜಾಮೀನು ಮಂಜೂರು ಮಾಡುವಾಗ ಧಾರವಾಡ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ಷರತ್ತು ವಿಧಿಸಿತ್ತು. ಆದರೆ ಅನಿವಾರ್ಯ ಇದ್ದಾಗ ಮಾತ್ರ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿತ್ತು. ಆದರೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದ ಕಾರಣ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿ ಪ್ರವೇಶಕ್ಕೆ ಮನವಿ ಮಾಡಿದ್ದರು. ಇದನ್ನೂ ಓದಿ: ಹಿರಿಯೂರಲ್ಲಿ ಡಿಕೆಶಿ ಆಪ್ತ ಸುಧಾಕರ್, ಬಿಎಸ್‌ವೈ ದತ್ತು ಪುತ್ರಿ ಪೂರ್ಣಿಮಾ ಮಧ್ಯೆ ಜಟಾಪಟಿ

  • ಕೋರ್ಟ್ ಕಟಕಟೆಯಲ್ಲಿ ನಿಂತು ಕ್ಷಮೆ ಕೇಳಿದ ಕಾಶ್ಮೀರ್ ಫೈಲ್ಸ್ ನಿರ್ದೇಶಕ

    ಕೋರ್ಟ್ ಕಟಕಟೆಯಲ್ಲಿ ನಿಂತು ಕ್ಷಮೆ ಕೇಳಿದ ಕಾಶ್ಮೀರ್ ಫೈಲ್ಸ್ ನಿರ್ದೇಶಕ

    ದು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿ ಕಾಶ್ಮೀರ್ ಫೈಲ್ಸ್ (The Kashmir Files) ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಕ್ಷಮೆ ಕೇಳಿದ್ದಾರೆ. 2018ರಲ್ಲಿ ವಿವೇಕ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ (Contempt of Court) ದಾಖಲಾಗಿತ್ತು. ಖುದ್ದಾಗಿ ಕೋರ್ಟಿಗೆ ಬಂದು ಕ್ಷಮೆ ಕೇಳಬೇಕು ಎಂದು ದೆಹಲಿ (Delhi) ಹೈಕೋರ್ಟ್ (High Court) ವಿವೇಕ್ ಅವರಿಗೆ ನೋಟಿಸ್ ಜಾರಿ ಮಾಡಿತ್ತು.

    ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಸ್.ಮುರಳೀಧರ್ ಅವರ ಕುರಿತು ವಿವೇಕ್ ಅಗ್ನಿಹೋತ್ರಿ ಟ್ವೀಟ್ ಮಾಡಿದ್ದರು. ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತನಾಗಿದ್ದ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನದಿಂದ ಮುಕ್ತಗೊಳಿಸಿದ್ದ ನ್ಯಾಯಾಧೀಶರ ವಿರುದ್ಧ ಪಕ್ಷಪಾತದ ಆರೋಪ ಮಾಡಿದ್ದರು ವಿವೇಕ್. ಈ ಕುರಿತಂತೆ ವಿವೇಕ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು.

    kashmir

    ಈ ಪ್ರಕರಣಕ್ಕೆ ಇತಿಶ್ರೀ ಹಾಡಲೆಂದೇ ವಿವೇಕ್ 2022ರ ಡಿಸೆಂಬರ್ ನಲ್ಲಿ ಕ್ಷಮೆಯಾಚಿಸಿದ್ದರು. ಆದರೆ, ದೆಹಲಿ ಹೈಕೋರ್ಟ್ ಖುದ್ದಾಗಿ ಬಂದು ಕ್ಷಮೆಯಾಚಿಸಬೇಕು ಎಂದು ಸೂಚಿಸಿತ್ತು. ಅಲ್ಲದೇ ಮುಂದಿನ ದಿನಗಳಲ್ಲಿ ಇಂತಹ ಹೇಳಿಕೆ ನೀಡದಂತೆ ಎಚ್ಚರಿಕೆಯನ್ನೂ ನೀಡಿತ್ತು. ಹಾಗಾಗಿ ನಿನ್ನೆ ಖುದ್ದಾಗಿ ಕೋರ್ಟಿಗೆ ಹಾಜರಾಗಿ ಕ್ಷಮೆಯಾಚಿಸಿದ್ದಾರೆ. ಕ್ಷಮೆ ಕೇಳಿದ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೋರ್ಟ್ ವಜಾಗೊಳಿಸಿದೆ.

    ದಿ ಕಾಶ್ಮೀರ ಫೈಲ್ಸ್ ಸಿನಿಮಾ ಹಿಟ್ ಆದ ನಂತರ ಸೋಷಿಯಲ್ ಮೀಡಿಯಾದಲ್ಲಿ ಅನೇಕ ರೀತಿಯಲ್ಲಿ ವಿವೇಕ್ ಬರೆಯುತ್ತಿದ್ದಾರೆ. ಇವರ ಬರವಣಿಗೆ ಸಾಕಷ್ಟು ವಿವಾದಗಳನ್ನೂ ಹುಟ್ಟುಹಾಕಿವೆ. ಪ್ರಕಾಶ್ ರಾಜ್ ಸೇರಿದಂತೆ ಅನೇಕರು ವಿವೇಕ್ ಕುರಿತು ಟೀಕೆಗಳನ್ನು ಮಾಡಿದ್ದಾರೆ. ಮಾಡಿದ ಟೀಕೆಗಳಿಗೆ ಅವರೂ ಉತ್ತರವನ್ನು ನೀಡಿದ್ದಾರೆ.

  • ಅಕ್ರಮ ಹಣ ವರ್ಗಾವಣೆ ಪ್ರಕರಣ – ಸತ್ಯೇಂದರ್ ಜೈನ್ ಜಾಮೀನು ಅರ್ಜಿ ವಜಾ

    ಅಕ್ರಮ ಹಣ ವರ್ಗಾವಣೆ ಪ್ರಕರಣ – ಸತ್ಯೇಂದರ್ ಜೈನ್ ಜಾಮೀನು ಅರ್ಜಿ ವಜಾ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆಪ್ (AAP) ಮಾಜಿ ಸಚಿವ ಸತ್ಯೇಂದರ್ ಜೈನ್‌ಗೆ (Satyendar Jain) ದೆಹಲಿ (Delhi) ಹೈಕೋರ್ಟ್ ಗುರುವಾರ ಜಾಮೀನು ನಿರಾಕರಿಸಿದೆ.

    ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನ ಜಾಮೀನು (Bail) ಅರ್ಜಿಯನ್ನು ಹೈಕೋರ್ಟ್ (High Court) ನ್ಯಾಯಾಧೀಶ ದಿನೇಶ್ ಕುಮಾರ್ ಶರ್ಮ ವಜಾಗೊಳಿಸಿದ್ದಾರೆ. ಇವರೊಂದಿಗೆ ಆರೋಪಿಗಳಾದ ವೈಭವ್ ಜೈನ್ ಮತ್ತು ಅಂಕುಶ್ ಜೈನ್ ಅವರಿಗೂ ಜಾಮೀನು ನಿರಾಕರಿಸಿದೆ. ಈ ಮೂವರು ಆರೋಪಿಗಳು ನ್ಯಾಯಾಲಯ ವಿಧಿಸಿದ ಎರಡು ಷರತ್ತುಗಳನ್ನು ಪೂರೈಸುವಲ್ಲಿ ವಿಫಲರಾಗಿದ್ದಾರೆ. ಅವರು ಪ್ರಭಾವಿ ವ್ಯಕ್ತಿಯಾಗಿದ್ದು, ಜಾಮೀನು ನೀಡಿದರೆ ಸಾಕ್ಷ್ಯ ನಾಶಮಾಡಬಹುದು ಎಂದು ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: ಯುಪಿಎಯಿಂದ ನಿರೀಕ್ಷಿಸಿದ್ದೆ, ಬಿಜೆಪಿ ಮುಸ್ಲಿಮರಿಗೆ ಪದ್ಮ ಪ್ರಶಸ್ತಿ ನೀಡಲ್ಲ ಎಂದು ಭಾವಿಸಿದ್ದೆ: ಮೋದಿಗೆ ರಶೀದ್ ಅಹ್ಮದ್ ಖಾದ್ರಿ ಧನ್ಯವಾದ 

    ನಾಲ್ಕು ಕಂಪನಿಗಳ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದಡಿ 2022ರ ಮೇ 30ರಂದು ಸತ್ಯೇಂದರ್ ಜೈನ್ ಅವರನ್ನು ಬಂಧಿಸಲಾಯಿತು. ಅದೇ ವರ್ಷ ನವೆಂಬರ್ 17ರಲ್ಲಿ ವಿಚಾರಣಾ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬಳಿಕ ಸತ್ಯೇಂದರ್ ಜೈನ್ ಹೈಕೋರ್ಟ್ ಮೊರೆ ಹೋಗಿದ್ದರು. ಇದನ್ನೂ ಓದಿ: ಸುಧಾಮೂರ್ತಿ, ಎಸ್.ಎಲ್ ಭೈರಪ್ಪಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ 

    ಸಿಬಿಐ 2017ರ ಆಗಸ್ಟ್‌ನಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಒಂದು ವರ್ಷದ ಬಳಿಕ ಸತ್ಯೇಂದರ್ ಜೈನ್, ಅವರ ಪತ್ನಿ ಮತ್ತು ಅವರ ನಾಲ್ವರು ಸಹಚರರ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಿದೆ. ಈ ಪ್ರಕರಣದ ನಂತರ, ಅಕಿಂಚನ್ ಡೆವಲಪರ್ಸ್ ಪ್ರೈವೆಟ್ ಲಿಮಿಟೆಡ್, ಇಂಡೋ ಮೆಟಲ್ ಇಂಪೆಕ್ಸ್ ಪ್ರೈವೆಟ್ ಲಿಮಿಟೆಡ್, ಪರ್ಯಾಸ್ ಇನ್ಫೋ ಸೊಲ್ಯೂಷನ್ಸ್ ಪ್ರೈವೆಟ್ ಲಿಮಿಟೆಡ್, ಮಂಗಳಾಯತನ್ ಪ್ರಾಜೆಕ್ಟ್ ಪ್ರೈವೆಟ್ ಲಿಮಿಟೆಡ್ ಮತ್ತು ಜೆಜೆ ಐಡಿಯಲ್ ಎಸ್ಟೇಟ್ ಪ್ರೈವೆಟ್ ಲಿಮಿಟೆಡ್‌ಗೆ ಸೇರಿದ 4.81 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಇಡಿ ತಾತ್ಕಾಲಿಕವಾಗಿ ಜಪ್ತಿ ಮಾಡಿದೆ. ಇದನ್ನೂ ಓದಿ: ಸರ್ಕಾರವನ್ನು ಟೀಕಿಸಿದ ಮಾತ್ರಕ್ಕೆ ಮಾಧ್ಯಮ ನಿಯಂತ್ರಿಸಲು ಸಾಧ್ಯವಿಲ್ಲ: ಕೇಂದ್ರಕ್ಕೆ ಸುಪ್ರೀಂ ತರಾಟೆ

  • ಸಲ್ಮಾನ್ ಖಾನ್‌ಗೆ ಬಿಗ್ ರಿಲೀಫ್ – ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್

    ಸಲ್ಮಾನ್ ಖಾನ್‌ಗೆ ಬಿಗ್ ರಿಲೀಫ್ – ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್

    ಮುಂಬೈ: ಬಾಲಿವುಡ್ (Bollywood) ನಟ ಸಲ್ಮಾನ್ ಖಾನ್ (Salman Khan) ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು (Criminal Lawsuit) ಬಾಂಬೆ ಹೈಕೋರ್ಟ್ (High Court) ರದ್ದುಗೊಳಿಸಿದೆ. 2019ರಲ್ಲಿ ಪತ್ರಕರ್ತರೊಬ್ಬರು ಕ್ರಿಮಿನಲ್ ಬೆದರಿಕೆ ಆರೋಪದಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಭಾರತಿ ಡಾಂಗ್ರೆ (Bharati Dangre) ನೇತೃತ್ವದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ.

    ಮುಂಬೈನ (Mumbai) ಬೀದಿಗಳಲ್ಲಿ ಸಲ್ಮಾನ್ ಖಾನ್ ಸೈಕ್ಲಿಂಗ್ ಮಾಡುತ್ತಿದ್ದ ವೇಳೆ ಪತ್ರಕರ್ತರೊಂದಿಗೆ ಜಗಳವಾಡಿ ಅವರ ಫೋನ್ ಕಸಿದುಕೊಂಡಿದ್ದರು ಎಂದು ಆರೋಪಿಸಿ ಪತ್ರಕರ್ತರೊಬ್ಬರು ದೂರು ನೀಡಿದ್ದರು. ದೂರಿನ ಅನ್ವಯ ನೀಡಲಾದ ಸಮನ್ಸ್ ಆದೇಶವನ್ನು ಪ್ರಶ್ನಿಸಿ ಸಲ್ಮಾನ್ ಖಾನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಇದನ್ನೂ ಓದಿ: ಮಹಿಳಾ ಸಮಾನತೆ ಸಾರಿದ ನೆಲದಲ್ಲಿ ಪುರುಷರದ್ದೇ ದರ್ಬಾರ್

    ಈ ಮೊದಲು ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಅಪರಾಧಗಳನ್ನು ಮಾಡಲಾಗಿತ್ತು. ಈ ಹಿನ್ನೆಲೆ ಸಲ್ಮಾನ್ ಖಾನ್ ವೈಯಕ್ತಿಕವಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಇದನ್ನೂ ಓದಿ: ದೈವನರ್ತನದ ವೇಳೆಯೇ ನರ್ತಕ ಕುಸಿದು ಬಿದ್ದು ಸಾವು

    ಈ ಆದೇಶಕ್ಕೆ ತಡೆ ನೀಡುವಂತೆ ಮತ್ತು ಪ್ರಕರಣವನ್ನು ರದ್ದು ಮಾಡುವಂತೆ ಸಲ್ಮಾನ್ ಖಾನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಖಾನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಬದ್ ಪೊಂಡಾ (Abad Ponda), ಪತ್ರಕರ್ತರು ತಮ್ಮ ಫೋಟೊ/ವೀಡಿಯೋ ಚಿತ್ರೀಕರಣ ಮಾಡದಂತೆ ತಡೆಯುವಂತೆ ತಮ್ಮ ಅಂಗರಕ್ಷಕರು ಕೇಳಿಕೊಂಡಿದ್ದರು. ಅದಾಗ್ಯೂ ಪೊಟೊ ವಿಡಿಯೋ ಚಿತ್ರಿಕರಣಕ್ಕೆ ಮುಂದಾದಾಗ ವಾಗ್ವಾದ ಏರ್ಪಟ್ಟಿತ್ತು ಎಂದು ಹೇಳಿದ್ದರು. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಭಾರೀ ಸ್ಫೋಟ- ಪೊಲೀಸರಿಂದ ಶೋಧ

  • ಮಾಡಾಳ್‌ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಜಾ: ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

    ಮಾಡಾಳ್‌ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಜಾ: ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

    ಬೆಂಗಳೂರು: ಮಾಡಾಳ್‌ ವಿರೂಪಾಕ್ಷಪ್ಪ (Madal Virupakshappa) ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿ ವಜಾಗೊಂಡಿದ್ದು ಯಾವುದೇ ಕ್ಷಣದಲ್ಲಿ ಬಂಧನವಾಗುವ ಸಾಧ್ಯತೆಯಿದೆ.

    ಇಂದು ಹೈಕೋರ್ಟ್‌ (High Court) ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.  ಇದನ್ನೂ ಓದಿ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್

    ಕೆಎಸ್‌ಡಿಎಲ್ ಟೆಂಡರ್ (KSDL) ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಾರ್ಚ್‌ 7 ರಂದು ಹೈಕೋರ್ಟ್‌ ಮಧ್ಯಂತರ ಜಾಮೀನು ಮಜೂರು ಮಾಡಿತ್ತು.

    ಪುತ್ರ ಪ್ರಶಾಂತ್‌ ಮಾಡಾಳ್‌ ಹಣದೊಂದಿಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಬಳಿಕ ನಾಪತ್ತೆಯಾಗಿದ್ದ ವಿರೂಪಾಕ್ಷಪ್ಪ ಜಾಮೀನು ಸಿಕ್ಕಿದ ಬೆನ್ನಲ್ಲೇ ಮನೆಗೆ ವಾಪಸ್‌ ಆಗಿದ್ದರು. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಅಭಿಮಾನಿಗಳು ಜಯಘೋಷ ಹಾಕಿ ಸ್ವಾಗತಿಸಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು.

  • ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್

    ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್

    ನವದೆಹಲಿ: ಬಿಜೆಪಿ (BJP) ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ (Madal Virupakshappa) ಸುಪ್ರೀಂಕೋರ್ಟ್ (Supreme Court) ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ (High Court) ಆದೇಶ ಪ್ರಶ್ನಿಸಿ ಲೋಕಾಯುಕ್ತ (Lokayukta)ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಈ ಬಗ್ಗೆ ಉತ್ತರಿಸುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಿದೆ.

    ಭ್ರಷ್ಟಾಚಾರ, ಲಂಚ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ಮಧ್ಯಂತರ ಜಾಮೀನು ಆದೇಶ ನೀಡಿದೆ. ಈ ಆದೇಶ ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸೋಮವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಅನಿರುದ್ಧ ಬೋಸ್ (Aniruddha Bose) ನೇತೃತ್ವದ ಪೀಠ ವಿರೂಪಾಕ್ಷಪ್ಪಗೆ ನೋಟಿಸ್ ಜಾರಿ ಮಾಡಿತು. ಇದನ್ನೂ ಓದಿ: ನಾಡಬಾಂಬ್ ಎಸೆದು BJP ಮುಖಂಡನ ಕೊಲೆ 

    ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲರು ಮಧ್ಯಂತರ ಜಾಮೀನು ರದ್ದು ಮಾಡಿ ಹೈಕೋರ್ಟ್ ವಿಚಾರಣೆಗೂ ತಡೆ ನೀಡಬೇಕು ಎಂದು ಮನವಿ ಮಾಡಿದರು. ಆದರೆ ಇದಕ್ಕೆ ನಿರಾಕರಿಸಿದ ಕೋರ್ಟ್, ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ. ಇದನ್ನೂ ಓದಿ: ಹೊರಗಿನ ಅಭ್ಯರ್ಥಿಗಳಿಗೆ ಮಣೆ ಹಾಕುವ ಕನಕಗಿರಿ ಮತದಾರರು

  • ನಾಳೆ ಕರೆದಿದ್ದ ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

    ನಾಳೆ ಕರೆದಿದ್ದ ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

    ಬೆಂಗಳೂರು: ಶುಕ್ರವಾರ ರಾಜ್ಯಾದ್ಯಂತ ನಡೆಯಲಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ (Transport employees strike) ಹೈಕೋರ್ಟ್ (High Court) ತಡೆ ನೀಡಿದೆ. ಮೂರು ವಾರಗಳ ಕಾಲ ಮುಷ್ಕರ ನಡೆಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಪರೀಕ್ಷೆಗಳು (Exams) ನಡೆಯುತ್ತಿರುವಾಗ ಮುಷ್ಕರದಿಂದ ವಿದ್ಯಾರ್ಥಿಗಳಿಗೆ (Students)  ಸಮಸ್ಯೆಯಾಗಲಿದೆ ಎಂದು ಹೈಕೋರ್ಟ್ ಉಲ್ಲೇಖಿಸಿದೆ.

    karnataka highcourt

    ಮುಷ್ಕರ ಕಾನೂನು (Law) ಬಾಹಿರ ಎಂದು ಎಚ್ ಎಂ.ವೆಂಕಟೇಶ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ಪೀಠ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆಗೆ ನೋಟಿಸ್ ನೀಡಿ ಮುಷ್ಕರ ತಡೆಗೆ ಆದೇಶಿಸಿದೆ. ಇದನ್ನೂ ಓದಿ: ಮುಸ್ಲಿಂ ಅಭ್ಯರ್ಥಿ ಹಾಕದಿದ್ರೆ ನೋಟಾಗೆ ಮತ – ನಾಯಕರಿಗೆ ಮಹಿಳೆಯರಿಂದ ವಾರ್ನಿಂಗ್‌

    ಮಾ.20 ರಂದು ಕಾರ್ಮಿಕ ಇಲಾಖೆ ಆಯುಕ್ತರು ಸಭೆ ಕರೆದಿದ್ದರು ಆದರೆ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಹೈಕೋರ್ಟ್ ಗೆ ಸರ್ಕಾರಿ ವಕೀಲೆ ಪ್ರತಿಮಾ ಹೊನ್ನಾಪುರ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಸಾವು