Tag: high court

  • 80 ಸಾವಿರ ಪೊಲೀಸರು ಏನ್ ಮಾಡ್ತಿದ್ದಾರೆ – ಅಮೃತ್‌ಪಾಲ್ ಸಿಂಗ್ ಬಂಧಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ

    80 ಸಾವಿರ ಪೊಲೀಸರು ಏನ್ ಮಾಡ್ತಿದ್ದಾರೆ – ಅಮೃತ್‌ಪಾಲ್ ಸಿಂಗ್ ಬಂಧಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ

    ಚಂಡೀಗಢ: ಪಂಜಾಬ್‌ನಲ್ಲಿ (Punjab) ಗುಪ್ತಚರ ಇಲಾಖೆ ವಿಫಲವಾಗಿದ್ದು, 80 ಸಾವಿರ ಪೊಲೀಸರಿಂದ ಓರ್ವ ವ್ಯಕ್ತಿಯನ್ನು ಬಂಧಿಸಲು ಸಾಧ್ಯವಾಗಿಲ್ಲ. ಅವರೆಲ್ಲಾ ಏನು ಮಾಡುತ್ತಿದ್ದಾರೆ? ಎಂದು ಪಂಜಾಬ್ ಹರಿಯಾಣ ಹೈಕೋರ್ಟ್ (High Court) ಪಂಜಾಬ್ ಪೊಲೀಸ್ ಇಲಾಖೆಯನ್ನು ತರಾಟೆ ತೆಗೆದುಕೊಂಡಿದೆ.

    ಖಲಿಸ್ತಾನಿ (Khalistan) ಬೆಂಬಲಿಗ ಅಮೃತ್‌ಪಾಲ್ ಸಿಂಗ್ (Amritpal Singh) ನಾಪತ್ತೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ಗೆ ಪೊಲೀಸ್ ಇಲಾಖೆಯ ಪರ ವಕೀಲರು ಮಾಹಿತಿ ನೀಡಿದ್ದಾರೆ. ಅಮೃತ್‌ಪಾಲ್ ಸಿಂಗ್ ಇನ್ನೂ ತಲೆಮರೆಸಿಕೊಂಡಿದ್ದಾನೆ. ಆತನ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

    ಈ ವಾದ ಆಲಿಸಿದ ಬಳಿಕ ಗರಂ ಆದ ಕೋರ್ಟ್, ಪಂಜಾಬ್ ಸರ್ಕಾರ ತನ್ನ ಜವಬ್ದಾರಿ ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿತು. ಅಮೃತ್ ಪಾಲ್ ಹೊರತುಪಡಿಸಿ ಎಲ್ಲರನ್ನೂ ಬಂಧಿಸಿದ್ದು ಹೇಗೆ? ನಾವು ಕಥೆಯನ್ನು ನಂಬಲು ಸಾಧ್ಯವಿಲ್ಲ ಎಂದು ತರಾಟೆಗೆ ತೆಗೆದುಕೊಂಡಿತು. ಇದನ್ನೂ ಓದಿ: ಮರಣದಂಡನೆಗೆ ಯಾವ ವಿಧಾನ ಸೂಕ್ತ?- ತಜ್ಞರ ವರದಿ ಕೇಳಿದ ಸುಪ್ರೀಂಕೋರ್ಟ್

    ಖಲಿಸ್ತಾನಿ ಬೆಂಬಲಿಗ ಅಮೃತ್ ಪಾಲ್ ಸಿಂಗ್ ಬಂಧನಕ್ಕಾಗಿ ಕಳೆದ 4 ದಿನಗಳಿಂದ ಬಹುದೊಡ್ಡ ಕಾರ್ಯಾಚರಣೆಯನ್ನು ಪಂಜಾಬ್ ಪೊಲೀಸರು ಆರಂಭಿಸಿದ್ದಾರೆ. ಸತತ ಹುಡುಕಾಟದ ಬಳಿಕ ಅಮೃತ್ ಪಾಲ್ ಸಿಂಗ್ ಬಂಧಿಸುವಲ್ಲಿ ವಿಫಲವಾದ ಇಲಾಖೆ ಆತನ ಆಪ್ತರನ್ನು ಬಂಧಿಸಿದೆ. ಅಮೃತ್‌ಪಾಲ್ ಸಿಂಗ್ ಬಂಧನಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಹಿನ್ನೆಲೆ ರಾಜ್ಯದ ಹಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು : ಮೋದಿ ಬಳಿ ಅಫ್ರಿದಿ ಮನವಿ

  • ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮ ಹೆಸರಿಡುವುದನ್ನು ಪ್ರಶ್ನಿಸಿ ಹಾಕಿದ್ದ ಪಿಐಎಲ್ ಅರ್ಜಿ ತಿರಸ್ಕೃತ

    ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮ ಹೆಸರಿಡುವುದನ್ನು ಪ್ರಶ್ನಿಸಿ ಹಾಕಿದ್ದ ಪಿಐಎಲ್ ಅರ್ಜಿ ತಿರಸ್ಕೃತ

    ಹುಬ್ಬಳ್ಳಿ: ಈದ್ಗಾ ಮೈದಾನಕ್ಕೆ (Idga Maidana) ರಾಣಿ ಚೆನ್ನಮ್ಮನವರ ಹೆಸರಿಡುವುದನ್ನು ಪ್ರಶ್ನಿಸಿ ಹಾಕಿದ್ದ ಪಿಐಎಲ್ ಅನ್ನು ಹೈಕೋರ್ಟ್ (High Court) ತಿರಸ್ಕೃತವಾಗಿದೆ.

    ವಾಣಿಜ್ಯನಗರಿ ಹುಬ್ಬಳ್ಳಿಯ (Hubballi) ಈದ್ಗಾ ಮೈದಾನಕ್ಕೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಣಿ ಚೆನ್ನಮ್ಮ ಮೈದಾನ ಎಂಬ ಮರುನಾಮಕರಣಕ್ಕೆ ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಉಡುಪಿ (Udupi) ನಿವಾಸಿ ಹುಸೇನ್ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.

    ಈ ಕುರಿತು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠವು ವಿಚಾರಣೆ ನಡೆಸಿತ್ತು.

    ಪಾಲಿಕೆ ಪರವಾಗಿ ವಾದ ಮಂಡಿಸಿದ ಎಸ್.ಎಸ್. ಮಹೇಂದ್ರ, ಮೈದಾನ ಪಾಲಿಕೆಯ ಆಸ್ತಿ. ಇದರ ಮೇಲೆ ಸಂಪೂರ್ಣ ಹಕ್ಕು ಪಾಲಿಕೆಗೆ ಇದೆ. ಆಕ್ಷೇಪಣೆ ಸ್ವೀಕರಿಸಿದ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು, ಈದ್ಗಾ ಮೈದಾನಕ್ಕೆ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರನ್ನು ಇಡುವ ಬಗ್ಗೆ, ಇತ್ತೀಚೆಗೆ ನಡೆದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿದೆ. ನಂತರ ಆ ಕುರಿತು ಪ್ರಕಟಣೆ ಹೊರಡಿಸಲಾಗಿದೆ. 30 ದಿನಗಳ ಒಳಗಾಗಿ ಆಕ್ಷೇಪಣೆ ಸಲ್ಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಆಕ್ಷೇಪಣೆ ಸಲ್ಲಿಕೆ ಮಾಡಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಾದ ಮಂಡಿಸಿದ್ದರು.

    ಅರ್ಜಿಯಲ್ಲಿ ಉಲ್ಲೇಖಿಸಿರುವ ಅಂಶ ಪರಿಶೀಲಿಸಿದ ಪೀಠವು ಈದ್ಗಾ ಮೈದಾನದ ಹೆಸರನ್ನು ಕಿತ್ತೂರು ರಾಣಿ ಚೆನ್ನಮ್ಮ ಮೈದಾನ ಎಂಬುದಾಗಿ ಬದಲಾಯಿಸಲು ಪಾಲಿಕೆ 2022ರ ಆಗಸ್ಟ್ 25ರಂದು ನಿರ್ಣಯ ಕೈಗೊಂಡಿದೆ. ಈ ಸಂಬಂಧ 2023ರ ಫೆಬ್ರವರಿ 8ರಂದು ಸಾರ್ವಜನಿಕರ ಆಕ್ಷೇಪಣೆ ಕೋರಲಾಗಿದೆ. ಅದರಂತೆ ಅರ್ಜಿದಾರರು ಸಹ ಆಕ್ಷೇಪಣೆ ಸಲ್ಲಿಸಿದ್ದಾರೆ. ಆದರೆ, ಈ ಆಕ್ಷೇಪಣೆ ಮೇಲೆ ಪಾಲಿಕೆಯು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಅದಕ್ಕೂ ಮುನ್ನವೇ ಈ ಅರ್ಜಿ ಸಲ್ಲಿಸಲಾಗಿದೆ. ಆದ್ದರಿಂದ ಅರ್ಜಿಯು ಅಪಕ್ವವಾಗಿದೆ ಎಂದು ಅಭಿಪ್ರಾಯಪಟ್ಟಿತು.

    ಅಷ್ಟೇ ಅಲ್ಲದೇ ಅಕ್ಷೇಪಣೆ ಕುರಿತು ಪಾಲಿಕೆಯು ವ್ಯತಿರಿಕ್ತ ನಿರ್ಣಯ ಕೈಗೊಂಡರೆ ಅರ್ಜಿದಾರರು ಮತ್ತೆ ಪಿಐಎಲ್ ಅರ್ಜಿ ಸಲ್ಲಿಸಬಹುದು ಎಂದು ಸಲಹೆ ನೀಡಿದೆ. ಇದನ್ನು ಒಪ್ಪಿದ ಅರ್ಜಿದಾರ ಅರ್ಜಿಯನ್ನು ಹಿಂಪಡೆದಿದ್ದಾರೆ. ಇದನ್ನೂ ಓದಿ: ಯುಗಾದಿ ಮುನ್ನಾ ದಿನವೇ 2 ಜೀವ ಬಲಿ – ಚರಂಡಿ ಸ್ವಚ್ಛಗೊಳಿಸುವಾಗ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರಿಬ್ಬರು ಸಾವು

    ರಾಣಿ ಚೆನ್ನಮ್ಮ ಹೆಸರಿಡುವ ಬಗ್ಗೆ ಎಐಎಂಐಎಂ ವಿರೋಧ ವ್ಯಕ್ತಪಡಿಸಿದ್ದು, ಹುಬ್ಬಳ್ಳಿ-ಧಾರವಾಡ ಪಾಲಿಕೆ ಕಚೇರಿ ಎದುರು ಎಐಎಂಐಎಂ ಕಾರ್ಯಕರ್ತರು ಇತ್ತೀಚೆಗೆ ಜಿಲ್ಲಾಧ್ಯಕ್ಷ ನಜೀರ್ ಅಹ್ಮದ್ ಹೊನ್ಯಾಳ್ ನೇತೃತ್ವದಲ್ಲಿ ಧರಣಿ ಸಹ ನಡೆಸಿದ್ದರು.

    ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಹೀಗಿರುವಾಗ ಮೈದಾನದ ಹೆಸರು ಬದಲಾಯಿಸುವುದು ಸರಿಯಲ್ಲ. ರಾಜಕೀಯ ದುರುದ್ದೇಶದಿಂದ ಹೆಸರು ಬದಲಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರೋಪಿಸಿ, ಮರುನಾಮಕರಣ ಪ್ರಕ್ರಿಯೆ ಕೈಬಿಡುವಂತೆ ಆಗ್ರಹಿಸಿದ್ದರು. ಇದನ್ನೂ ಓದಿ: ಬಿಜೆಪಿಗೆ ಚಿಂಚನಸೂರ್‌ ರಾಜೀನಾಮೆ ನೀಡಿದ್ಯಾಕೆ?

  • ಮುಚ್ಚಿದ ಲಕೋಟೆಯಲ್ಲಿ ದಾಖಲೆಗಳನ್ನು ನೀಡುವ ಪದ್ಧತಿಯನ್ನು ಅಂತ್ಯಗೊಳಿಸಲು ಚಿಂತಿಸುತ್ತಿದ್ದೇವೆ- ಸಿಜೆಐ

    ಮುಚ್ಚಿದ ಲಕೋಟೆಯಲ್ಲಿ ದಾಖಲೆಗಳನ್ನು ನೀಡುವ ಪದ್ಧತಿಯನ್ನು ಅಂತ್ಯಗೊಳಿಸಲು ಚಿಂತಿಸುತ್ತಿದ್ದೇವೆ- ಸಿಜೆಐ

    ನವದೆಹಲಿ: ಮುಚ್ಚಿದ ಲಕೋಟೆಯಲ್ಲಿ (Sealed Cover) ದಾಖಲೆಗಳನ್ನು ನೀಡುವ ಪದ್ಧತಿಯನ್ನು ಅಂತ್ಯಗೊಳಿಸಲು ನಾವು ಚಿಂತಿಸುತ್ತಿದ್ದೇವೆ ಎಂದು ಸಿಜೆಐ (CJI) ಡಿ.ವೈ ಚಂದ್ರಚೂಡ್ (D.Y.Chandrachud) ಹೇಳಿದ್ದಾರೆ. ಒನ್ ರ‍್ಯಾಂಕ್, ಒನ್ ಪೆನ್ಷನ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಇಂತಹದೊಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಪ್ರಕರಣದ ವಿಚಾರಣೆ ವೇಳೆ ರಕ್ಷಣಾ ಸಚಿವಾಲಯದ (Ministry Of Defence) ಪರವಾಗಿ ಅಟಾರ್ನಿ ಜನರಲ್ (Attorney General) ಆರ್.ವೆಂಕಟರಮಣಿ (R.Venkataramani) ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯನ್ನು ಹಸ್ತಾಂತರಿಸಿದ್ದು, ಬಾಕಿ ಪಾವತಿಗೆ ಸಂಬಂಧಿಸಿದಂತೆ ಸರ್ಕಾರದ ಮಾರ್ಗಸೂಚಿಯನ್ನು ನೀಡಿದರು. ಈ ವೇಳೆ ನ್ಯಾಯಾಧೀಶರಾದ ಪಿ.ಎಸ್.ನರಸಿಂಹ (P.S.Narasimha) ಮತ್ತು ಜೆ.ಬಿ ಪಾರ್ದಿವಾಲಾ (J.B.Pardiwala) ಅವರನ್ನೊಳಗೊಂಡ ಪೀಠವು ದಾಖಲೆಯನ್ನು ಪ್ರತಿವಾದಿಗಳಿಗಳ ಜೊತೆಗೆ ಹಂಚಿಕೊಳ್ಳುವಂತೆ ಎಜಿಗೆ (AG) ಸೂಚಿಸಿತು. ಇದನ್ನೂ ಓದಿ: ಭಾರತ ಧ್ವಜ ಕೆಳಗಿಳಿಸಿ ಖಲಿಸ್ತಾನ್‌ ಧ್ವಜ ಹಾರಿಸಿದ ಪ್ರತ್ಯೇಕತಾವಾದಿಗಳು – ಭಾರತ ಸರ್ಕಾರ ಬೇಸರ

    ದಯವಿಟ್ಟು ಮುಚ್ಚಿದ ಕವರ್‌ನಲ್ಲಿ ನೀಡುವ ದಾಖಲೆಗಳನ್ನು ಪ್ರತಿವಾದಿಗಳ ಜೊತೆಗೆ ಹಂಚಿಕೊಳ್ಳಿ. ಸುಪ್ರೀಂಕೋರ್ಟ್ (Supreme Court) ಅನುಸರಿಸುತ್ತಿರುವ ಸೀಲ್ಡ್ ಕವರ್ ವ್ಯವಹಾರವನ್ನು ಕೊನೆಗೊಳಿಸಲು ನಾವು ಬಯಸುತ್ತೇವೆ. ಸೀಲ್ಡ್ ಕವರ್‌ಗಳಿಂದ ವೈಯಕ್ತಿಕವಾಗಿ ವಿಮುಖನಾಗಿದ್ದೇನೆ. ಸುಪ್ರೀಂಕೋರ್ಟ್ ಸೀಲ್ಡ್ ಕವರ್ ಪಡೆಯುತ್ತಿರುವುದರಿಂದ ಹೈಕೋರ್ಟ್‌ಗಳು ಕೂಡಾ ಸೀಲ್ಡ್ ಕವರ್ ಪಡೆಯುತ್ತಿವೆ ಎಂದು ಟೀಕಿಸಿದರು. ಇದನ್ನೂ ಓದಿ: 5, 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ – ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

    ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಹಿಂದಿನ ಆದೇಶಗಳನ್ನು ಅನುಷ್ಠಾನಗೊಳಿಸುವುದರಿಂದ ಪ್ರಕರಣದ ಬಗ್ಗೆ ರಹಸ್ಯವಾಗಿ ಏನೂ ಉಳಿದಿಲ್ಲ. ಆದೇಶಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಗೌಪ್ಯತೆ ಏನಿರಬಹುದು? ನೀವು ಇನ್ನೊಂದು ಬದಿಗೆ ಪ್ರತಿಯನ್ನು ನೀಡಬೇಕು. ಸೀಲ್ಡ್ ಕವರ್‌ಗಳು ಸಂಪೂರ್ಣವಾಗಿ ಇತ್ಯರ್ಥಗೊಂಡ ನ್ಯಾಯಾಂಗ ತತ್ವಗಳಿಗೆ ವಿರುದ್ಧವಾಗಿವೆ ಎಂದು ಸ್ಪಷ್ಟಪಡಿಸಿದರು.

    ಈ ವೇಳೆ ಈಗಾಗಲೇ ಸಲ್ಲಿಸಿರುವ ಪ್ರತಿಯನ್ನು ಪಡೆಯಬೇಕು ಎಂದು ಎಜಿ ಮನವಿ ಮಾಡಿದರು. ಕ್ಷಮಿಸಿ, ನಾವು ಈ ಸೀಲ್ಡ್ ಕವರ್ ತೆಗೆದುಕೊಳ್ಳುವುದಿಲ್ಲ. ದಯವಿಟ್ಟು ಅದನ್ನು ಹಿಂದಕ್ಕೆ ತೆಗೆದುಕೊಳ್ಳಿ ಅಥವಾ ಓದಿ ಎಂದು ಸೂಚಿಸಿದರು. ಈ ವೇಳೆ ಸೀಲ್ಡ್ ಕವರ್‌ನಲ್ಲಿದ್ದ ಮಾಹಿತಿಯನ್ನು ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಓದಿ ತಿಳಿಸಿದರು. ಇದನ್ನೂ ಓದಿ: ರಾಹುಲ್ ಗಾಂಧಿ ಮೋದಿಯ ಅತಿದೊಡ್ಡ TRP: ಮಮತಾ ಬ್ಯಾನರ್ಜಿ

  • 5, 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ – ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

    5, 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ – ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

    ನವದೆಹಲಿ: 5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ (Board Exam) ನಡೆಸಲು ಷರತ್ತುಬದ್ಧ ಅನುಮತಿ ನೀಡಿದ್ದ ಹೈಕೋರ್ಟ್‍ನ (High Court) ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ (School) ಸಂಘ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದೆ. ಪ್ರಕರಣವನ್ನು ತುರ್ತು ವಿಚಾರಣೆ ನಡೆಸುವಂತೆ ಸಂಘದ ಪರ ವಕೀಲರು ಮನವಿ ಮಾಡಿದ್ದಾರೆ.

    ಸೋಮವಾರ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಪೀಠದ ಮುಂದೆ ಪ್ರಸ್ತಾಪಿಸಿದ ವಕೀಲರು, ರಾಜ್ಯಮಟ್ಟದ ‘ಬೋರ್ಡ್ ಪರೀಕ್ಷೆ’ಗಳನ್ನು ನಡೆಸುವುದರಿಂದ ಮೌಲ್ಯಮಾಪನ ವಿಧಾನವು ವಿದ್ಯಾರ್ಥಿಗಳು (Student) ಮತ್ತು ಶಿಕ್ಷಕರ (Teacher) ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರವು ಪೋಷಕರ ಮತ್ತು ಶಾಲೆಗಳ ಜೊತೆಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ವಾದಿಸಿದರು.

    karnataka highcourt

    ವಾದ ಆಲಿಸಿದ ಸಿಜೆಐ ಡಿ.ವೈ ಚಂದ್ರಚೂಡ್ ಮಾ. 27ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದರು. ಈ ವೇಳೆ ಮಧ್ಯಪ್ರವೇಶ ಮಾಡಿದ ವಕೀಲರು ಮಾ. 27ರಂದು ಪರೀಕ್ಷೆಗಳು ಆರಂಭವಾಗಲಿದೆ. ಹೀಗಾಗಿ ಇದಕ್ಕೂ ಮುನ್ನ ವಿಚಾರಣೆ ನಡೆಸಬೇಕು ಎಂದು ಹೇಳಿದರು. ಇದಕ್ಕೆ ಗರಂ ಆದ ಸಿಜೆಐ, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ರಾಜ್ಯದಲ್ಲಿ ಯಾವುದು ಉತ್ತಮ ಎಂದು ಹೈಕೋರ್ಟ್‍ಗೆ ಗೊತ್ತಿದೆ ಎಂದರು.

    ವಾದ ಮುಂದುವರಿಸಿದ ವಕೀಲರು ನಾವು 4,000 ಶಾಲೆಗಳನ್ನು ಪ್ರತಿನಿಧಿಸುತ್ತೇವೆ, ನಮ್ಮ ಅಭಿಪ್ರಾಯ ಕೇಳಬೇಕು ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಸಿಜೆಐ ಮಾ. 27ರಂದೇ ನಿಮ್ಮ ಅಭಿಪ್ರಾಯ ಕೇಳಲಾಗುವುದು. ಯಾವುದೇ ಬದಲಾವಣೆ ಇಲ್ಲ ಎಂದರು. ಇದನ್ನೂ ಓದಿ: 5, 8ನೇ ತರಗತಿ ಬೋರ್ಡ್‌ ಪರೀಕ್ಷೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

    ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿತ್ತು. ಆದರೆ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಷರತ್ತುಗಳೊಂದಿಗೆ ಬೋರ್ಡ್ ಪರೀಕ್ಷೆ ನಡೆಸಲು ವಿಭಾಗೀಯ ಪೀಠ ಆದೇಶಿಸಿತ್ತು. ಈ ಆದೇಶವನ್ನು ಸದ್ಯ ಸುಪ್ರೀಂಕೋರ್ಟ್‍ನಲ್ಲಿ (Supreme Court) ಪ್ರಶ್ನೆ ಮಾಡಲಾಗಿದೆ. ಇದನ್ನೂ ಓದಿ: ಶೋಭಾ ಡೆವಲಪರ್ಸ್ ಕಚೇರಿಗೆ ಐಟಿ ಶಾಕ್

  • ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿರುವುದಕ್ಕೂ ಸಿಜೆಐಗೆ ಪತ್ರ ಬರೆದಿದ್ದಕ್ಕೂ ಸಂಬಂಧ ಇಲ್ಲ: ವಿವೇಕ್ ರೆಡ್ಡಿ

    ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿರುವುದಕ್ಕೂ ಸಿಜೆಐಗೆ ಪತ್ರ ಬರೆದಿದ್ದಕ್ಕೂ ಸಂಬಂಧ ಇಲ್ಲ: ವಿವೇಕ್ ರೆಡ್ಡಿ

    ಬೆಂಗಳೂರು: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬಿಜೆಪಿ (BJP) ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಅವರಿಗೆ ಮಧ್ಯಂತರ ಜಾಮೀನು ಶೀಘ್ರ ಮಂಜೂರಾಗಿದೆ. ಅದರಂತೆ ಜನ ಸಾಮಾನ್ಯರಿಗೂ ಈ ಬಗೆಯ ಶೀಘ್ರ ಸೇವೆ ಲಭಿಸಬೇಕು ಎಂಬ ಕಾರಣಕ್ಕೆ ಸುಪ್ರೀಂ ಮುಖ್ಯನಾಯಾಧೀಶರಿಗೆ ಪತ್ರ ಬರೆಯಲಾಗಿದೆ ಎಂದು ರಾಜ್ಯ ವಕೀಲರ ಸಂಘದ (Advocates Association) ಅಧ್ಯಕ್ಷ ವಿವೇಕ್ ರೆಡ್ಡಿ (Vivek Subba Reddy) ಅಭಿಪ್ರಾಯಪಟ್ಟಿದ್ದಾರೆ.

    ವಿಕಾಸಸೌಧದಲ್ಲಿ (Vikasa Soudha) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಜನರ ಪ್ರಕರಣಗಳಲ್ಲಿ ವಿಚಾರಣೆ ವಾರಗಟ್ಟಲೇ ತಡವಾಗುತ್ತಿದೆ. ಈ ಬಗ್ಗೆ ವಕೀಲರ ಸಂಘದ ಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು ಎಂದಿದ್ದಾರೆ. ಇದನ್ನೂ ಓದಿ: ಮಾಡಾಳ್ ಭ್ರಷ್ಟಾಚಾರ ಪಕ್ಷಕ್ಕೆ ಮುಜುಗರ; ಆರೋಪಿಗಳ ಪರ ಜೈಕಾರ ಹಾಕೋದು ಡಿಕೆಶಿ ಸಂಸ್ಕೃತಿ – ಸಿ.ಟಿ ರವಿ

    ಸಾಮಾನ್ಯ ಜನರಿಗೆ ನ್ಯಾಯಾಲಯ ಪ್ರಕ್ರಿಯೆಗಳಲ್ಲಿ ವಿಳಂಬವಾಗುತ್ತಿದೆ. ಆದರೆ ಮಾಡಾಳ್ ಪ್ರಕರಣದಲ್ಲಿ ತ್ವರಿತವಾಗಿ ಜಾಮೀನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಹಾಗೂ ಹೈಕೊರ್ಟ್‍ನ (High Court) ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದೇವೆ. ಇಂತಹ ವ್ಯವಸ್ಥೆಯನ್ನು ಜನ ಸಾಮಾನ್ಯರಿಗೂ ಒದಗಿಸಿಕೊಡುವಂತೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ಜನರಿಗೆ ಅನುಕೂಲವಾಗುವಂತೆ ನಾವು ಮನವಿ ಮಾಡಿದ್ದೇವೆ. ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿಯವರ (CJI) ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ. ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿರುವುದಕ್ಕೂ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಹೆಂಡತಿ ಹೆಸರಿನಲ್ಲಿ ಬಿಜೆಪಿ ರಾಜಕಾರಣ ಮಾಡಲ್ಲ: ಕಟೀಲ್

  • ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‍ಗೆ ಮಾಡಾಳ್ ವಿರೂಪಾಕ್ಷಪ್ಪ ಅರ್ಜಿ

    ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‍ಗೆ ಮಾಡಾಳ್ ವಿರೂಪಾಕ್ಷಪ್ಪ ಅರ್ಜಿ

    ಬೆಂಗಳೂರು: ಕೋಟಿ ಕೋಟಿ ಹಣ ಸಂಗ್ರಹಿಸಿ ಭ್ರಷ್ಟಾಚಾರದ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ನಿರೀಕ್ಷಣಾ ಜಾಮೀನು (Anticipatory Bail) ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ವಕೀಲರ ಮೂಲಕ ಹೈಕೋರ್ಟ್ (High Court) ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿ ಇಂದೇ ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ.

    ಇಂದು ವಿಚಾರಣೆ ನಡೆಸಲು ನಿರಾಕರಿಸಿದ ನ್ಯಾಯಮೂರ್ತಿ ನಟರಾಜನ್, ತುರ್ತು ವಿಚಾರಣೆಯ ಅಗತ್ಯವೇನಿದೆ? ನಾಳೆ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. ಹೈಕೋರ್ಟ್ ನಾಳೆ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಇಂದಿನಿಂದ ಎಲ್ಲಾ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ: ಸುಧಾಕರ್

    ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುತ್ತಿದ್ದಂತೆ ಎಚ್ಚೆತ್ತ ಲೋಕಾಯುಕ್ತ (Lokayukta), ಎ1 ಆರೋಪಿ ವಿರೂಪಾಕ್ಷಪ್ಪರಿಗೆ ಲುಕೌಟ್ (Look out circular) ನೋಟಿಸ್ ಜಾರಿಗೆ ನಿರ್ಧರಿಸಿದೆ. ನೋಟಿಸ್ ನೀಡಿಯೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಲುಕೌಟ್ ನೋಟಿಸ್ ಜಾರಿ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.

    ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ ಹಾಗೂ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಲುಕೌಟ್ ನೋಟಿಸ್ ಅಂಟಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳದಂತೆ ಲೋಕಾಯುಕ್ತ ಪೊಲೀಸರು ಬಲೆ ಬೀಸಿದ್ದಾರೆ.

    ಇತ್ತೀಚೆಗೆ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದರು. ನಂತರ ಪ್ರಶಾಂತ್ ಮನೆ, ಕಚೇರಿ ಮೇಲೆ ದಾಳಿ ನಡೆಸಿ ಏಳೂವರೆ ಕೋಟಿ ನಗದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಅಲ್ಲದೇ ವಿರೂಪಾಕ್ಷಪ್ಪ ಅವರ ಮನೆ ಮೇಲೂ ದಾಳಿ ಮಾಡಿ ನಗದನ್ನು ವಶಕ್ಕೆ ಪಡೆದಿದ್ದರು. ಪ್ರಕರಣದಲ್ಲಿ ಶಾಸಕರನ್ನು ಮೊದಲ ಆರೋಪಿಯಾಗಿದ್ದಾರೆ. ಅಷ್ಟೇ ಅಲ್ಲದೇ ಕೆಎಸ್‍ಡಿಎಲ್‍ನಲ್ಲಿ ಕೋಟ್ಯಂತರ ರೂ. ಹಗರಣ ನಡೆದಿದೆ ಎಂಬ ಆರೋಪ ಕೇಳಿಬರುತ್ತಿದೆ. ಇದನ್ನೂ ಓದಿ: ನೈತಿಕತೆ ಇದ್ರೆ ಸಿಎಂ ರಾಜೀನಾಮೆ ಕೊಡಬೇಕು – ಆರ್.ಧ್ರುವನಾರಾಯಣ್

  • ಆದಿಯೋಗಿ ಪ್ರತಿಮೆ ವಿವಾದ – ಪಿಐಎಲ್‌ ವಜಾ, ಇಶಾ ಫೌಂಡೇಷನ್‌ಗೆ ಬಿಗ್‌ ರಿಲೀಫ್‌

    ಆದಿಯೋಗಿ ಪ್ರತಿಮೆ ವಿವಾದ – ಪಿಐಎಲ್‌ ವಜಾ, ಇಶಾ ಫೌಂಡೇಷನ್‌ಗೆ ಬಿಗ್‌ ರಿಲೀಫ್‌

    ಬೆಂಗಳೂರು: ನಂದಿ ಬೆಟ್ಟದ ಬಳಿಯ ಆವಲಗುರ್ಕಿ ಗ್ರಾಮದಲ್ಲಿ ಇಶಾ ಫೌಂಡೇಷನ್‌ (Isha Foundation) ಸ್ಥಾಪಿಸಿರುವ ಆದಿಯೋಗಿ ಪ್ರತಿಮೆಯನ್ನು(Adiyogi Statue) ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಸಕ್ತಿ ಅರ್ಜಿಯನ್ನು (PIL) ಹೈಕೋರ್ಟ್‌ ವಜಾಗೊಳಿಸಿದೆ.

    ಅರ್ಜಿದಾರರು ತಪ್ಪು ಮಾಹಿತಿ ನೀಡಿ ಪಿಐಎಲ್ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್‌ (High Court) ಅರ್ಜಿಯನ್ನು ವಜಾಗೊಳಿಸಿತು.

    ಬೇರೆಯವರ ಮೇಲೆ ಬೆರಳು ತೋರಿಸುವ ಮುನ್ನ ನೀವು ಸರಿಯಾಗಿರಬೇಕು. ಉದ್ದೇಶ ಮಾತ್ರವಲ್ಲ, ಮಾರ್ಗವೂ ಶುದ್ಧವಿರಬೇಕು ಎಂದು ಮಹಾತ್ಮ ಗಾಂಧಿ ಹೇಳಿಕೆಯನ್ನು ಉಲ್ಲೇಖಿಸಿದ ಸಿಜೆ ಪ್ರಸನ್ನ ಬಿ ವರಾಳೆ ಅರ್ಜಿ ವಜಾಗೊಳಿಸಿ ಉತ್ತಮ ಹಿನ್ನೆಲೆಯುಳ್ಳವರು ಅರ್ಜಿ ಸಲ್ಲಿಸಬಹುದು ಎಂದು ಸೂಚಿಸಿದರು. ಇದನ್ನೂ ಓದಿ: ಭಾರತದಲ್ಲಿ ಟ್ವಿಟ್ಟರ್ ಬ್ಲೂ ಟಿಕ್ ಬೇಕಾದ್ರೆ ಶುಲ್ಕ ಪಾವತಿಸಿ

    ಅರ್ಜಿದಾರರ ಕ್ರಿಮಿನಲ್ ಹಿನ್ನೆಲೆಯನ್ನು ಬಹಿರಂಗಪಡಿಸಿಲ್ಲ. ಪಿಐಎಲ್‌ ನಿಯಮಗಳನ್ನು ಪಾಲಿಸದೇ ವಾಸ್ತವಾಂಶವನ್ನು ಮುಚ್ಚಿಟ್ಟು ಸಲ್ಲಿಸಲಾಗಿದೆ ಎಂದು ಇಶಾ ಫೌಂಡೇಶನ್ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡಿಸಿದ್ದರು.

    ಏನಿದು ಪ್ರಕರಣ?
    ಚಿಕ್ಕಬಳಾಪುರ ಕಸಬಾ ಹೋಬಳಿಯ ಚಂಬಳ್ಳಿಯ ಎಸ್‌. ಕ್ಯಾತಪ್ಪ ಮತ್ತಿತರರು ಕಾನೂನು ಉಲ್ಲಂಘಿಸಿ ಇಶಾ ಫೌಂಡೇಷನ್‌ ಆದಿಯೋಗಿ ಪ್ರತಿಮೆ ಸ್ಥಾಪನೆಯ ಅನುಮತಿ ನೀಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

    ಅರ್ಜಿದಾರರ ಪರ ಎಂ.ಶಿವಪ್ರಕಾಶ್‌, ನಂದಿ ಗಿರಿಧಾಮದ ಬೆಟ್ಟ (Nandi Hills) ಸೇರಿದಂತೆ ನರಸಿಂಗ ದೇವರ ಬೆಟ್ಟಗಳ ಸಾಲುಗಳು ಈ ಭಾಗದ ಜಲ ಮೂಲಗಳಾಗಿದೆ. ನರಸಿಂಹ ದೇವರ ವಲಯಕ್ಕೆ ಸೇರಿವೆ. ಈ ಬೆಟ್ಟಗಳ ಸಾಲಿನಲ್ಲಿ ಔಷಧ ಸಸ್ಯಗಳು ದಟ್ಟವಾಗಿವೆ. ಸಾಲು ಬೆಟ್ಟಗಳ ಮಧ್ಯಭಾಗದಲ್ಲಿ ಇಶಾ ಪ್ರತಿಷ್ಠಾನಕ್ಕೆ ಅರಣ್ಯ ಸೇರಿ ನಾನಾ ಕಾಯ್ದೆಗಳನ್ನು ಉಲ್ಲಂಘಿಸಿ ವಾಣಿಜ್ಯ ಉದೇಶಕ್ಕಾಗಿ ಸರಕಾರಿ ಭೂಮಿ ಮಂಜೂರು ಮಾಡಲಾಗಿದೆ ಎಂದು ವಾದಿಸಿದ್ದರು. ಈ ಹಿಂದಿನ ವಿಚಾರಣೆಯ ವೇಳೆ ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿ ಮಧ್ಯಂತರ ಆದೇಶ ಪ್ರಕಟಿಸಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಿಎಸ್‌ಐ ನೇಮಕಾತಿ ಹಗರಣ – 1 ವಾರದ ಒಳಗೆ ತನಿಖಾ ವರದಿ ಸಲ್ಲಿಸಿ

    ಪಿಎಸ್‌ಐ ನೇಮಕಾತಿ ಹಗರಣ – 1 ವಾರದ ಒಳಗೆ ತನಿಖಾ ವರದಿ ಸಲ್ಲಿಸಿ

    ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ಹಗರಣ (Karnataka PSI scam) ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ (High Court) ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದೆ.

    ಇಲ್ಲಿಯವರೆಗೆ ನಡೆದಿರುವ ತನಿಖೆ, ತೆಗೆದುಕೊಂಡಂತಹ ಕ್ರಮದ ಬಗ್ಗೆ ವರದಿ (Investigation Report) ನೀಡುವಂತೆ ಸೂಚನೆ ನೀಡಿದ್ದು ವಾರದ ಒಳಗೆ ಎಲ್ಲಾ ವರದಿ ಸಲ್ಲಿಸಿ ಎಂದು ಸೂಚಿಸಿದೆ. ಇದನ್ನೂ ಓದಿ: ಅಂದು ಶಂಕುಸ್ಥಾಪನೆ, ಫೆ.6ಕ್ಕೆ ಮೋದಿಯಿಂದ ಉದ್ಘಾಟನೆ – ತುಮಕೂರು HAL ಹೆಲಿಕಾಪ್ಟರ್‌ ಘಟಕದ ವಿಶೇಷತೆ ಏನು?

    ಪ್ರಮುಖವಾಗಿ ಎಡಿಜಿಪಿ ಅಮೃತ್ ಪಾಲ್ (ADGP Amrit Paul) ಬಂಧಿಸಿರುವ ಬಗ್ಗೆ ಪ್ರತ್ಯೇಕವಾದ ಮಾಹಿತಿಯನ್ನು ಕೇಳಿದ್ದು, ಬಳಿಕ ತೆಗೆದುಕೊಂಡ ಪ್ರಸ್ತುತ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಲೈಂಗಿಕ ಶೋಷಣೆ ಆರೋಪಕ್ಕೆ ಟ್ವಿಸ್ಟ್‌ – ಕುಸ್ತಿಪಟುಗಳ ವಿರುದ್ಧವೇ ಹೈಕೋರ್ಟ್‍ನಲ್ಲಿ ದೂರು

    ಲೈಂಗಿಕ ಶೋಷಣೆ ಆರೋಪಕ್ಕೆ ಟ್ವಿಸ್ಟ್‌ – ಕುಸ್ತಿಪಟುಗಳ ವಿರುದ್ಧವೇ ಹೈಕೋರ್ಟ್‍ನಲ್ಲಿ ದೂರು

    ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್‍ನಲ್ಲಿ (WFI) ಲೈಂಗಿಕ ಶೋಷಣೆ ಆರೋಪ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬ್ರಿಜ್‍ಭೂಷಣ್ ತಲೆದಂಡಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ರೆಸ್ಲರ್ ವಿನೆಶಾ ಫೋಗಟ್, ಭಜರಂಗ್‌ ಪೂನಿಯಾ ಸೇರಿ ಇತರೇ ಕುಸ್ತಿಪಟುಗಳ ವಿರುದ್ಧವೇ ದೆಹಲಿ ಹೈಕೋರ್ಟ್‍ನಲ್ಲಿ (Delhi High Court) ದೂರು ದಾಖಲಾಗಿದೆ.

    ತಾತ್ಕಾಲಿಕವಾಗಿ ಅಮಾನತುಗೊಂಡಿರುವ ಡಬ್ಲುಎಫ್‍ಐ ಅಧ್ಯಕ್ಷ ಬ್ರಿಜ್ ಭೂಷಣ್ (Brij Bhushan) ಮನೆಯಲ್ಲಿ ಅಡುಗೆ ಕೆಲಸ ಮಾಡುವ ವಿಕ್ಕಿ ಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದಾರೆ. ಇದನ್ನೂ ಓದಿ: ಪಂತ್ ಆದಷ್ಟು ಬೇಗ ಗುಣಮುಖರಾಗಲಿ – ಮಹಾಕಾಳೇಶ್ವರನಿಗೆ ಪ್ರಾರ್ಥನೆ ಸಲ್ಲಿಸಿದ ಸೂರ್ಯ, ಕುಲ್‌ದೀಪ್

     

    ದೂರಿನಲ್ಲಿ ಏನಿದೆ?
    ಲೈಂಗಿಕ ದೌರ್ಜನ್ಯ ನಿಗ್ರಹ ಕಾಯ್ದೆಯನ್ನು ಮಹಿಳಾ ಕುಸ್ತಿಪಟುಗಳು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಒಂದು ವೇಳೆ ಯಾರಾದರೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದರೆ ಅಂಥವರು ಕಾನೂನು ಪ್ರಕಾರ ಪೊಲೀಸ್ ಠಾಣೆ, ಕೋರ್ಟ್ ಮೆಟ್ಟಿಲೇರಬೇಕು. ಈ ಪ್ರಕರಣದಲ್ಲಿ ಯಾವೊಬ್ಬ ಮಹಿಳಾ ಕುಸ್ತಿಪಟು ದೂರು ನೀಡಿಲ್ಲ. ಆದರೆ ಇಲ್ಲಿ ಡಬ್ಲುಎಫ್‍ಐ ಅಧ್ಯಕ್ಷರ ರಾಜೀನಾಮೆ ಪಟ್ಟು ಹಿಡಿದು ನ್ಯಾಯಪ್ರಕ್ರಿಯೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.

    ಸುಳ್ಳು ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಮಾಡುವ ಮೂಲಕ ಸುಲಿಗೆ ಮತ್ತು ಬ್ಲ್ಯಾಕ್‌ಮೇಲ್‌ ಮತ್ತು ರಾಜೀನಾಮೆ ನೀಡುವಂತೆ ಒತ್ತಾಯಿಸಿದ ಕುಸ್ತಿಪಟುಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k