ಬೆಂಗಳೂರು: ನಾಡಹಬ್ಬ ದಸರಾ (Dasara) ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನದ ವಿಚಾರ ರಾಜಕೀಯದಿಂದ ಕಾನೂನು ಹೋರಾಟಕ್ಕೆ ತಿರುವು ಪಡೆದಿದೆ. ಬಾನು ಮುಷ್ತಾಕ್ (Banu Mushtaq) ಆಹ್ವಾನ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆಯ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ, ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರ ಆಯ್ಕೆ ಮಾಡಿದೆ. ಮೈಸೂರಿನ ರಾಜಮನೆತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ. ಆದರೂ ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟು ಮಾಡಿದ್ದಾರೆ. ಹೀಗಾಗಿ ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶಿಸಲು ಮನವಿ ಮಾಡಿದ್ದಾರೆ. ಈ ವಿಚಾರ ಇನ್ನಷ್ಟೇ ಹೈಕೋರ್ಟ್ ಅಲ್ಲಿ ವಿಚಾರಣೆಗೆ ಬರಬೇಕಿದೆ. ಇದನ್ನೂ ಓದಿ: ಮೈಸೂರು | ಬಿಜೆಪಿಗೂ ಮುನ್ನವೇ ಹಿಂದೂ ಜಾಗರಣ ವೇದಿಕೆಯಿಂದ ʻಚಾಮುಂಡಿ ಬೆಟ್ಟ ಚಲೋ’ ಯಾತ್ರೆ
ಬೆಂಗಳೂರು: ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ (Smart Meter Tender) 16 ಸಾವಿರ ಕೋಟಿ ರೂ. ಅಕ್ರಮ ಆರೋಪದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ (KG George) ವಿರುದ್ಧ ನಡೆಸಿದ ತನಿಖಾ ವರದಿಯನ್ನು ಕೋರ್ಟ್ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ, ಸಚಿವ ಕೆಜೆ ಜಾರ್ಜ್ ಹೈಕೋರ್ಟ್‌ಗೆ (High Court) ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಲೋಕಾಯುಕ್ತ ಎಸ್ಪಿ ಹಾಗೂ ದೂರುದಾರರಾದ ಬಿಜೆಪಿ ನಾಯಕರಾದ ಸಿಎನ್ ಅಶ್ವಥ್ ನಾರಾಯಣ್, ಎಸ್ ಆರ್ ವಿಶ್ವನಾಥ್, ಧೀರಜ್ ಮುನಿರಾಜು ಅವರಿಗೆ ನೋಟಿಸ್ ನೀಡಿದೆ.
ಅರ್ಜಿ ವಿಚಾರಣೆ ವೇಳೆ ಒಂದು ರಾಜಕೀಯ ಪಕ್ಷ ಮತ್ತೊಂದು ಪಕ್ಷದ ವಿರುದ್ಧ ಕೇಸ್ ಹಾಕುವ ಸಂಪ್ರದಾಯ ಇದು. ತಮಿಳುನಾಡಿನಲ್ಲಿದ್ದ ಸಂಪ್ರದಾಯ ಈಗ ಇಲ್ಲೂ ಶುರುವಾಗಿದೆ ಎಂದು ವಿಚಾರಣೆ ವೇಳೆ ನ್ಯಾ. ಎಂಐ ಅರುಣ್ ಅವರ ಏಕಸದಸ್ಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.
ಜಾರ್ಜ್ ಪರ ವಕೀಲರ ವಾದವೇನು?
ಸಚಿವ ಜಾರ್ಜ್ ಹಾಗೂ ಹಿರಿಯ ಅಧಿಕಾರಿಗಳನ್ನ ಆರೋಪಿಗಳನ್ನಾಗಿ ಮಾಡಲಾಗಿದೆ. ವಿಚಾರಣಾಧೀನ ನ್ಯಾಯಾಲಯ ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತ ಎಸ್‌ಪಿಗೆ ಆದೇಶಿಸಲಾಗಿದೆ. ಸಾರ್ವಜನಿಕ ಸೇವಕರಿಗಿಂತ ಪೊಲೀಸ್ ಅಧಿಕಾರಿ ಮೆಲ್ದರ್ಜೆಯಲ್ಲಿ ಇರುವುದಿಲ್ಲ. ಹೀಗಾಗಿ ಅವರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗದು. ಇದು ನ್ಯಾಯಾಲಯದ ವ್ಯಾಪ್ತಿಯನ್ನು ಮೀರಿದೆ ಎಂದು ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು.
ಬಿಜೆಪಿ ನಾಯಕರ ಪರ ವಕೀಲರ ವಾದವೇನು?
ಲೋಕಾಯುಕ್ತ ಎಸ್‌ಪಿ ವರದಿಯಿಂದ ನ್ಯಾಯಾಲಯಕ್ಕೆ ತೃಪ್ತಿಯಾದರೆ ಹಿರಿಯ ಅಧಿಕಾರಿಗಳಿಗೆ ತನಿಖೆಗೆ ಆದೇಶ ನೀಡಲಾಗುತ್ತದೆ. ಸದ್ಯ ಪ್ರಕರಣದ ಪ್ರಾಥಮಿಕ ಹಂತದ ತನಿಖೆ ನಡೆಸಲಾಗುತ್ತಿದೆ. ಈ ಹಂತದಲ್ಲಿ ಮಧ್ಯಂತರ ಆದೇಶ ನೀಡುವ ಅವಶ್ಯಕತೆ ಇಲ್ಲ ಎಂದು ಹಿರಿಯ ವಕೀಲೆ ಲಕ್ಷ್ಮೀ ಅಯ್ಯಂಗಾರ್ ವಾದ ಮಾಡಿದರು.
ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ನಿವೃತ್ತ ನ್ಯಾ.ಕುನ್ಹಾ ಆಯೋಗದ ವರದಿಯನ್ನ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ (State Govt) ಹೈಕೋರ್ಟ್ (High Court) ಸೂಚನೆ ನೀಡಿದೆ.
ನಿವೃತ್ತ ನ್ಯಾ. ಕುನ್ಹಾ ಆಯೋಗದ ವರದಿ ಪ್ರಶ್ನಿಸಿ ಡಿಎನ್‌ಎ ಮ್ಯಾನೇಜ್ಮೆಂಟ್ (DNA Management) ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಂಗಳವಾರ (ಆ.5) ಹೈಕೋರ್ಟ್ನಲ್ಲಿ ನಡೆಯಿತು. ಈ ವೇಳೆ ಹೈಕೋರ್ಟ್, ನಿವೃತ್ತ ನ್ಯಾ.ಕುನ್ಹಾ ಆಯೋಗದ ವರದಿಯನ್ನ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.ಇದನ್ನೂ ಓದಿ: ಪರಮೇಶ್ವರ್ ಪರ ಆಂಧ್ರ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಂದ ಮುಂದಿನ ಸಿಎಂ ಘೋಷಣೆ
ಡಿಎನ್‌ಎ ಪರವಾಗಿ ಹಿರಿಯ ವಕೀಲ ಸಂಪತ್ ಕುಮಾರ್ ವಾದ ಮಂಡಿಸಿ, ನ್ಯಾ.ಕುನ್ಹಾ ವರದಿ ಸಲ್ಲಿಕೆ ಹಾಗೂ ಕಾಲ್ತುಳಿತ ಘಟನೆಯ ಬಗ್ಗೆ ಪೀಠಕ್ಕೆ ವಿವರಣೆ ನೀಡಿದರು. ಇದೇ ವೇಳೆ ಕುನ್ಹಾ ಆಯೋಗಕ್ಕೆ ವಿಚಾರಣಾ ವ್ಯಾಪ್ತಿ ನಿಗದಿಗೊಳಿಸಿರಲಿಲ್ಲ. ನಮಗೆ ನ್ಯಾ.ಕುನ್ಹಾ ವರದಿ ಸಿಕ್ಕಿಲ್ಲ. ಹೀಗಾಗಿ ಮಾಧ್ಯಮಗಳ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದೇವೆ. ನಮ್ಮ ಎರಡು ಮೆಮೊಗಳಿಗೆ (ಜ್ಞಾಪಕ ಪತ್ರ) ನ್ಯಾ.ಕುನ್ಹಾ ಅವರು ಪ್ರತಿಕ್ರಿಯಿಸಿಲ್ಲ. ಮಾಧ್ಯಮಗಳ ವರದಿಯಿಂದ ಇದೆಲ್ಲಾ ಸಿಕ್ಕಿದೆ. ಮಾಹಿತಿ ಹಕ್ಕು ಕಾಯಿದೆ ಅಡಿಯೂ ಅರ್ಜಿ ಸಲ್ಲಿಸಿದ್ದೇವೆ. ಇದುವರೆಗೂ ವರದಿ ಸಿಕ್ಕಿಲ್ಲ ಎಂದು ವಾದಿಸಿದರು.
ಈ ವೇಳೆ ಅಡ್ವಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ನಮ್ಮ ಆಕ್ಷೇಪವಿಲ್ಲ. ಆದರೆ ಅರ್ಜಿದಾರರಿಗೆ ನೀಡಲ್ಲ ಎಂದು ವಾದ ಮಂಡಿಸಿದರು. ಬಳಿಕ ಹೈಕೋರ್ಟ್ ವಿಚಾರಣೆಯನ್ನು ಆ.7ಕ್ಕೆ ಮುಂದೂಡಿದೆ.
2025ರ ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ಗೆಲುವು ಸಾಧಿಸಿತ್ತು. ಈ ಹಿನ್ನೆಲೆ ಜೂ.4ರಂದು ಆರ್‌ಸಿಬಿಯ ತವರು ಬೆಂಗಳೂರಿನಲ್ಲಿ ವಿಜಯೋತ್ಸವ ಆಯೋಜಿಸಲಾಗಿತ್ತು. ಈ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನೂಕುನುಗ್ಗಲು ಉಂಟಾಗಿ 11 ಜನ ಸಾವನ್ನಪ್ಪಿದ್ದರು. 30ಕ್ಕೂ ಅಧಿಕ ಜನ ಗಾಯಗೊಂಡಿದ್ದರು.ಇದನ್ನೂ ಓದಿ: ಧನುಶ್ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?
ಬೆಂಗಳೂರು: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಸರ್ಕಾರಿ ಜಮೀನು ಒತ್ತುವರಿ (Encroachment Of Government Land) ಆರೋಪ ಪ್ರಕರಣ ಸಂಬಂಧ ರಾಜ್ಯ ಸರ್ಕಾರದ ಎಸ್‌ಐಟಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಆಗಸ್ಟ್ 28ಕ್ಕೆ ಹೈಕೋರ್ಟ್ ಮುಂದೂಡಿದೆ.
ಜಮೀನು ಒತ್ತುವರಿ ಆರೋಪ ಪ್ರಕರಣ ಸಂಬಂಧ ಸಮಾಜ ಪರಿವರ್ತನಾ ಸಮುದಾಯದಿಂದ ಮಧ್ಯ ಪ್ರವೇಶ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಭಾಗಶಃ ಅರ್ಜಿ ವಿಚಾರಣೆ ನಡೆಸಿ ಅದನ್ನ ಬಿಡುಗಡೆ ಮಾಡಿದ್ರೆ ಅರ್ಜಿದಾರರ ಪರ ವಕೀಲರು ನನ್ನ ಬಗ್ಗೆ ಏನೆಂದುಕೊಳ್ಳುತ್ತಾರೆ ಎಂದು ಹೈಕೋರ್ಟ್‌ನ (High Court) ನ್ಯಾ.ಇಎಸ್ ಇಂದಿರೇಶ್ ಪ್ರಶ್ನೆ ಮಾಡಿದರು. ಇದನ್ನೂ ಓದಿ: ಬಾಗಲಕೋಟೆ | ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಕ್ರಿಕೆಟಿಗ ರಿಷಬ್ ಪಂತ್ ಆರ್ಥಿಕ ನೆರವು
ಈ ವೇಳೆ, ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸೋದಾಗಿ ತಿಳಿಸಿದ ಸರ್ಕಾರದ ಪರ ವಕೀಲ ಎಜಿ ಶಶಿಕಿರಣ್ ಶೆಟ್ಟಿ ಕೋರ್ಟ್‌ಗೆ ಮತ್ತೊಂದು ದಿನ ಪ್ರಕರಣದ ವಿಚಾರಣೆ ನಡೆಸಲು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಮಧ್ಯಂತರ ಆದೇಶ ವಿಸ್ತರಿಸಿ ಆಗಸ್ಟ್ 28ಕ್ಕೆ ವಿಚಾರಣೆಯನ್ನ ಹೈಕೋರ್ಟ್ ಮುಂದೂಡಿದೆ. ಇದನ್ನೂ ಓದಿ: 17,000 ಕೋಟಿ ಬ್ಯಾಂಕ್ ಲೋನ್ ವಂಚನೆ ಕೇಸ್ – ಇಡಿ ವಿಚಾರಣೆಗೆ ಹಾಜರಾದ ಅನಿಲ್ ಅಂಬಾನಿ
ಬೆಂಗಳೂರು: ಬುಧವಾರ ನಡೆಯಬೇಕಿದ್ದ ಸಾರಿಗೆ ಮುಷ್ಕರವನ್ನು (Transport Strike) ಮುಂದೂಡುವಂತೆ ಹೈಕೋರ್ಟ್ (High Court) ಸೂಚನೆ ನೀಡಿದೆ.
ಸಾರಿಗೆ ನೌಕರರ ಬೇಡಿಕೆ ಈಡೇರಿಸಿ, ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರವಹಿಸಲು ಸರ್ಕಾರಕ್ಕೆ ಸೂಚನೆ ನೀಡುವಂತೆ ವಕೀಲ ಅಮೃತೇಶ್ ಅವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅರ್ಜಿದಾರರ ಪರ ಹಾಜರಾಗಿದ್ದ ದೀಕ್ಷಾ ಅಮೃತೇಶ್ ಅವರು, ಜುಲೈ 15ರಂದು ಪ್ರತಿಭಟನಾಕಾರರು ನೋಟಿಸ್ ನೀಡಿದ್ದಾರೆ. ಆದರೆ ಈಗ ಪ್ರತಿಭಟನೆ ನಡೆಸದಂತೆ ಎಸ್ಮಾ ಜಾರಿಗೊಳಿಸಿದ್ದಾರೆ ಎಂದು ಕೋರ್ಟ್ ಗಮನಕ್ಕೆ ತಂದರು.
ಬೆಂಗಳೂರು: ಕರ್ನಾಟಕ ಹೈಕೋರ್ಟ್ (Karnataka High Court) ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು (Vibhu Bakhru) ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್, ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು. ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ
ನ್ಯಾ. ಭಕ್ರು ಅವರು 1966ರಲ್ಲಿ ನಾಗಪುರದಲ್ಲಿ ಜನಿಸಿದರು. ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. 1989ರಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿಯೂ ಅರ್ಹತೆ ಪಡೆದಿದ್ದರು.
1990ರಲ್ಲಿ ಎಲ್‍ಎಲ್‍ಬಿ ಪದವಿ ಪಡೆದು, ಅದೇ ವರ್ಷ ದೆಹಲಿ ವಕೀಲರ ಪರಿಷತ್‍ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿದ್ದರು. ಅವರು ವಕೀಲರಾಗಿದ್ದ ಅವಧಿಯಲ್ಲಿ ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್, ಕಂಪನಿ ಕಾನೂನು ಮಂಡಳಿ ಮತ್ತು ಇತರೆ ನ್ಯಾಯ ಮಂಡಳಿಗಳಲ್ಲಿ ವಕೀಲಿಕೆ ಮಾಡಿದ್ದಾರೆ. 2011ರಲ್ಲಿ ಹಿರಿಯ ವಕೀಲರಾಗಿ ಅವರು ಪದೋನ್ನತಿ ಪಡೆದಿದ್ದರು. 2013ರ ಏಪ್ರಿಲ್ 17ರಂದು ದೆಹಲಿ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು 2015ರ ಮಾರ್ಚ್ 18ರಂದು ಖಾಯಂಗೊಂಡಿದ್ದರು. ಇದನ್ನೂ ಓದಿ: ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ| ಸಂಸತ್‌ನಲ್ಲಿ ಮಹಾಭಿಯೋಗಕ್ಕೆ ತಯಾರಿ – ಸುಪ್ರೀಂ ಮೆಟ್ಟಿಲೇರಿದ ನ್ಯಾ.ಯಶವಂತ್ ವರ್ಮಾ
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ (Biklu Shiva) ಕೊಲೆ ಪ್ರಕರಣದಲ್ಲಿ ಕಿರಣ್ ಅವರನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಹೈಕೋರ್ಟ್ (High Court) ವಜಾಗೊಳಿಸಿದೆ.
ಬೆಂಗಳೂರಲ್ಲಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಕಿರಣ್ ಬಂಧನವನ್ನು ಆತನ ಪತ್ನಿ ಪ್ರಶ್ನಿಸಿದ್ದರು. ಪತಿಯನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಕಿರಣ್ ಪತ್ನಿ ಆಂಥೋನಿ ಶಿರ್ಲಿನ್ಯಾ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಬಿಕ್ಲು ಶಿವ ಮರ್ಡರ್ ಕೇಸ್ – ಕೊಲೆ ಮಾಡಿದ್ದು ನಾವು ಎಂದು ಐವರು ಶರಣಾಗತಿ
ಅರ್ಜಿಯನ್ನು ನ್ಯಾಯಮೂರ್ತಿ ಅನು ಶಿವರಾಮನ್ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಜುಲೈ 16 ರ ಬೆಳಗ್ಗೆ ಪೊಲೀಸರು ಬಂದು ಕಿರಣ್ ಬಗ್ಗೆ ವಿಚಾರಿಸಿದರು. ತಕ್ಷಣ ಕಿರಣ್ ಪೊಲೀಸ್ ಠಾಣೆಗೆ ತೆರಳಿದ್ದ. ನಂತರ ಈ ಬಗ್ಗೆ ಮಾಹಿತಿಯಿಲ್ಲ ಎಂದು ದೂರಿದರು.
ಗಾಂಧಿನಗರ: ಟಾಯ್ಲೆಟ್ ರೂಂನಲ್ಲಿ ಕುಳಿತು ನ್ಯಾಯಾಲಯದ ವರ್ಚುಯಲ್ ಆಗಿ ಲೈವ್ ಸ್ಟ್ರೀಮಿಂಗ್‌ನಲ್ಲಿ ಹಾಜರಾಗಿದ್ದ ವ್ಯಕ್ತಿಗೆ 1 ಲಕ್ಷ ರೂ. ದಂಡ ವಿಧಿಸಿರುವ ಘಟನೆ ಗುಜರಾತ್‌ನಲ್ಲಿ (Gujarat) ನಡೆದಿದೆ.
ಜೂನ್ 20ರಂದು ಸಮಾದ್ ಅಬ್ದುಲ್ ರೆಹಮನ್ ಶಾ ಎಂಬ ವ್ಯಕ್ತಿ ಟಾಯ್ಲೆಟ್‌ನಲ್ಲಿ ಕುಳಿತು ಸುಮಾರು 74 ನಿಮಿಷಗಳ ಕಾಲ ನ್ಯಾಯಾಲಯದ ವರ್ಚುಯಲ್ ಹಿಯರಿಂಗ್‌ಗೆ ಹಾಜರಾಗಿದ್ದಾನೆ. ನ್ಯಾಯಾಲಯಕ್ಕೆ ದುರ್ವತನೆ ತೋರಿದ್ದಕ್ಕೆ ಗುಜರಾತ್ ಹೈಕೋರ್ಟ್ (High Court) ಅಬ್ದುಲ್ ರೆಹಮನ್‌ಗೆ 1 ಲಕ್ಷ ರೂ. ದಂಡ ವಿಧಿಸಿ ಆದೇಶ ವಿಧಿಸಿದೆ. ಇದನ್ನೂ ಓದಿ: ಮತ್ತೆ ಸ್ಮಾರ್ಟ್ ಮೀಟರ್ ಹಗರಣ ಕೆದಕಿದ ಬಿಜೆಪಿ – ಸಚಿವ ಜಾರ್ಜ್ ವಿರುದ್ಧ ಖಾಸಗಿ ದೂರು
ನ್ಯಾಯಮೂರ್ತಿ ನಿರ್ಜರ್.ಎಸ್ ದೇಸಾಯಿ ಅವರ ಪೀಠ ಪ್ರಕರಣವೊಂದರ ವಿಚಾರಣೆ ನಡೆಸುವ ವೇಳೆ ಸಮಾದ್ ಅಬ್ದುಲ್ ರೆಹಮನ್ ಶಾ ದುರ್ವತನೆ ತೋರಿದ್ದಾರೆ. ಈ ಘಟನೆಯ ವೀಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಫುಲ್ ವೈರಲ್ ಆಗಿತ್ತು. ಈ ಕುರಿತು ಕೋರ್ಟ್ ನ್ಯಾಯಾಂಗ ನಿಂದನೆಯ ಸುಮೋಟೋ ಕೇಸ್ ದಾಖಲಿಸುವಂತೆ ಸೂಚನೆ ನೀಡಿತ್ತು. ಇದನ್ನೂ ಓದಿ: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ನಟಿಗೆ ಒಂದು ವರ್ಷ ಜೈಲೇ ಗತಿ!
ಕೇಸ್ ದಾಖಲು ಆದ ಬಳಿಕ ಆರೋಪಿಗೆ ತನ್ನ ತಪ್ಪಿನ ಅರಿವಾಗಿದ್ದು, ನ್ಯಾಯಾಲಯದ ಮುಂದೆ ಕ್ಷಮೆ ಕೇಳಿದ್ದಾನೆ.ನ್ಯಾಯಲಯಕ್ಕೆ ದುರ್ವರ್ತನೆ ತೋರಿದ್ದ ಅಬ್ದುಲ್ ರೆಹಮನ್ ಹಲ್ಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ.
ಬೆಂಗಳೂರು: ಐಪಿಎಲ್ (IPL) ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದ (Stampede) ಘಟನೆಗೆ ಸಂಬಂಧಿಸಿದ ವರದಿ ಬಹಿರಂಗಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ (High Court) ಆದೇಶಿಸಿದೆ.
ಈ ಪ್ರಕರಣದಲ್ಲಿ ರಾಷ್ಟ್ರೀಯ ಭದ್ರತೆ ಅಥವಾ ಸಾರ್ವಜನಿಕ ಹಿತಾಸಕ್ತಿ ಇಲ್ಲವೆಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಇರಿಸುವಂತೆ ಅಡ್ವೊಕೇಟ್ ಜನರಲ್ ಮನವಿ ಮಾಡಿದರೂ, ನ್ಯಾಯಪೀಠವು ಅದನ್ನು ತಿರಸ್ಕರಿಸಿದೆ. ವರದಿ ಬಹಿರಂಗ ಮಾಡುವುದರಿಂದ ಪ್ರತಿವಾದಿಗಳ ಅಭಿಪ್ರಾಯವನ್ನೂ ತಿಳಿಯಬಹುದಾದಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ | ಆರ್‌ಸಿಬಿ A1, ಡಿಎನ್‌ಎ A2 – ಮ್ಯಾಜಿಸ್ಟ್ರೇಟ್ ತನಿಖಾ ವರದಿ
ಜೂನ್ 4, 2025ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ 11 ಮಂದಿ ಸಾವಿಗೀಡಾಗಿದ್ದರು. ಆರ್‌ಸಿಬಿ, ಕೆಎಸ್‍ಸಿಎ, ಡಿಎನ್‍ಎಗೆ ತನಿಖಾ ವರದಿ ನೀಡಲು ಹೈಕೋರ್ಟ್ ಸೂಚನೆ ನೀಡಿದೆ.
ಜು.11 ರಂದು ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದ (Chinnaswamy Stampede) ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿತ್ತು. ಬೆಂಗಳೂರು (Bengaluru) ನಗರ ಜಿಲ್ಲಾಧಿಕಾರಿ ಜಗದೀಶ್ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ವರದಿ ಸಲ್ಲಿಸಿದ್ದರು. ವರದಿಯಲ್ಲಿ ಕಾಲ್ತುಳಿತಕ್ಕೆ ಆರ್‌ಸಿಬಿಯೇ (RCB) ಕಾರಣ ಎಂದು ಉಲ್ಲೇಖಿಸಲಾಗಿದೆ. ಆರ್‌ಸಿಬಿ ಮ್ಯಾನೇಜ್ಮೆಂಟ್ ಪೊಲೀಸರ ಅನುಮತಿ ಪಡೆಯದೇ ಫ್ರೀ ಪಾಸ್ ಎಂದು ಘೋಷಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿತ್ತು.
– ಜೀವಾವಧಿ ಶಿಕ್ಷೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ – ಕ್ಷಮಾದಾನ ಸಲ್ಲಿಸಲು 8 ವಾರಗಳ ಅವಕಾಶ
ಬೆಂಗಳೂರು: ಸಾಫ್ಟ್‌ವೇರ್ ಎಂಜಿನಿಯರ್ ಬಿ.ವಿ.ಗಿರೀಶ್ (Techie Girish) ಅವರನ್ನು ಗೆಳೆಯನ ಸಹಕಾರದಿಂದ ಕೊಲೆ ಮಾಡಿದ್ದಕ್ಕೆ ಶುಭಾ ಶಂಕರ್ (Shubh Shankar) ಹಾಗೂ ಇತರ ಮೂವರಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ (Supreme Court) ಸೋಮವಾರ ಎತ್ತಿ ಹಿಡಿದಿದೆ.
ಕರ್ನಾಟಕ ಹೈಕೋರ್ಟ್‌ನ (Karnataka High Court) ಆದೇಶವನ್ನು ಎತ್ತಿ ಹಿಡಿದ ನ್ಯಾ. ಎಂ.ಎಂ.ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರ ದ್ವಿಸದಸ್ಯ ಪೀಠ ಅಪರಾಧಿಗಳು ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ವಜಾಗೊಳಿಸಿದೆ.
ಯುವತಿಯ ಮೇಲೆ ಹೇರಲಾದ ಬಲವಂತದ ವಿವಾಹವೇ ಅಪರಾಧಕ್ಕೆ ಕಾರಣ ಎಂಬುದನ್ನು ಅಭಿಪ್ರಾಯಪಟ್ಟ ಕೋರ್ಟ್ ಬಂಧನ ಮತ್ತು ಜೀವಾವಧಿ ಶಿಕ್ಷೆ ವಿಧಿಸುವುದಕ್ಕೆ ತಡೆ ನೀಡಿದೆ. ಅಷ್ಟೇ ಅಲ್ಲದೇ ಕರ್ನಾಟಕ ರಾಜ್ಯಪಾಲರ ಮುಂದೆ ಕ್ಷಮಾದಾನ ಸಲ್ಲಿಸಲು ಅಪರಾಧಿಗಳಿಗೆ 8 ವಾರಗಳ ಅವಕಾಶ ನೀಡಿದೆ.
ಶುಭಾ ಇತರ ಆರೋಪಿಗಳೊಂದಿಗೆ ಸೇರಿ ತನಗೆ ಮದುವೆಯಾಗಲು ಇಷ್ಟವಿಲ್ಲದ ಯುವಕನ ಹತ್ಯೆಗೆ ಸಂಚು ರೂಪಿಸಿದ್ದಾಳೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ.
ಬಲವಂತದ ಕುಟುಂಬದ ನಿರ್ಧಾರದಿಂದ ಮುಗ್ಧ ಯುವಕನ ದುರಂತ ಕೊಲೆಗೆ ಕಾರಣವಾಯಿತು. ಇದು ಇತರ ಮೂವರ ಜೀವನವನ್ನು ನಾಶಮಾಡಿತು. ಕೊಲೆಗೈದವರು ಜನ್ಮತ: ಅಪರಾಧಿಗಳಲ್ಲ. ಅಪಾಯಕಾರಿ ನಿರ್ಧಾರ ಕೈಗೊಂಡಿದ್ದರಿಂದ ಘೋರ ಅಪರಾಧಕ್ಕೆ ಕಾರಣವಾಯಿತು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಇದನ್ನೂಓದಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ
ಏನಿದು ಪ್ರಕರಣ?
2003ರ ಡಿಸೆಂಬರ್ 3ರಂದು ವಿವೇಕನಗರ ಠಾಣಾ ವ್ಯಾಪ್ತಿಯ ಕೋರಮಂಗಲ ಹೊರ ವರ್ತುಲ ರಸ್ತೆಯಲ್ಲಿ ಇಂಟೆಲ್ ಟೆಕ್ಕಿ ಬಿ.ವಿ ಗಿರೀಶ್ (27) ಕೊಲೆ ನಡೆದಿತ್ತು. ಗಿರೀಶ್ ಭಾವಿ ಪತ್ನಿ ಶುಭಾ, ಆಕೆಯ ಪ್ರಿಯತಮ ಅರುಣ್ ವರ್ಮಾ, ಸ್ನೇಹಿತರಾದ ವೆಂಕಟೇಶ್, ದಿನೇಶ್ ಕೃತ್ಯದಲ್ಲಿ ಭಾಗಿಯಾಗಿದ್ದರು. ನಿಶ್ಚಿತಾರ್ಥ ನಡೆದ ನಾಲ್ಕೇ ದಿನದಲ್ಲಿ ಗಿರೀಶ್ ಹತ್ಯೆ ನಡೆದಿದ್ದು ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.
ಗಿರೀಶ್ ಹಾಗೂ ಕಾನೂನು ವಿದ್ಯಾರ್ಥಿನಿಯಾಗಿದ್ದ ಶುಭಾ ನಿಶ್ಚಿತಾರ್ಥವು 2003ರ ನವೆಂಬರ್‌ನಲ್ಲಿ ನಡೆದಿತ್ತು. ಅವರ ವಿವಾಹವು ಐದು ತಿಂಗಳಲ್ಲಿ ನಡೆಯಬೇಕಿತ್ತು. ಈ ಮದುವೆ ಶುಭಾಗೆ ಇಷ್ಟ ಇರಲಿಲ್ಲ. ಶುಭಾ ಕಾಲೇಜಿನಲ್ಲಿ ತಮ್ಮ ಜೂನಿಯರ್ ಆಗಿದ್ದ ಅರುಣ್‌ನನ್ನು ಪ್ರೀತಿಸುತ್ತಿದ್ದಳು. ಈ ಕಾರಣಕ್ಕೆ ಶುಭಾ ಮತ್ತು ಅರುಣ್ ಸಹಚರರ ಜತೆಗೂಡಿ ಕೊಲೆ ಮಾಡಿದ್ದಾರೆಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ 17 ನೇ ತ್ವರಿತ ನ್ಯಾಯಾಲಯ ಪ್ರಮುಖ ಆರೋಪಿ ಶುಭಾ ಹಾಗೂ ಮೂವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ತೀರ್ಪು ಪ್ರಕಟಿಸಿತ್ತು. ಈ ಆದೇಶವನ್ನು ಶುಭಾ ಮತ್ತು ಇತರರು ಹೈಕೋರ್ಟ್ ನಂತರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.