ಚಂಡೀಗಢ: 90ರ ದಶಕದಲ್ಲಿ ಭಯೋತ್ಪಾದಕರಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ನೆಲೆ ಕಳೆದುಕೊಂಡ ಕಾಶ್ಮೀರಿ ಪಂಡಿತರಿಗೆ ಪುನರ್ವಸತಿಗಾಗಿ ನಿವೇಶನ ಹಂಚಿಕೆ ಪರಿಶೀಲಿಸುವಂತೆ ಹರಿಯಾಣ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
1947ರಲ್ಲಿ ಪಾಕಿಸ್ತಾನದಿಂದ ಸ್ಥಳಾಂತರಗೊಂಡ ವ್ಯಕ್ತಿಗಳಿಗೆ ಭಾರತದ ಸರ್ಕಾರ ಪಂಜಾಬ್‌ನ ವಿವಿಧ ಜಿಲ್ಲೆಗಳಲ್ಲಿ ಪುನರ್ವಸತಿ ಕಲ್ಪಿಸಿದ್ದು, ಪ್ರಸ್ತುತ ಪ್ರಕರಣದಲ್ಲಿ ಇದೇ ವಿಧಾನ ಅಳವಡಿಸಿಕೊಳ್ಳಬಹುದು ಎಂದು ನ್ಯಾಯಮೂರ್ತಿಗಳಾದ ಅಮೋಲ್ ರತ್ತನ್ ಸಿಂಗ್ ಮತ್ತು ಲಲಿತ್ ಬಾತ್ರಾ ಅವರಿದ್ದ ಪೀಠ ಸಲಹೆ ನೀಡಿದೆ. ಇದನ್ನೂ ಓದಿ: ದಂಪತಿ ಒಟ್ಟಿಗೆ ಮಲಗುವಂತಿಲ್ಲ, ಹಗ್-ಕಿಸ್ ಮಾಡುವಂತಿಲ್ಲ; ಕೊರೊನಾ ಟಫ್ ರೂಲ್ಸ್
ಭಯೋತ್ಪಾದನೆಯಿಂದಾಗಿ ಕಾಶ್ಮೀರದಲ್ಲಿ ತಮ್ಮ ಪೂರ್ವಜರ ಮನೆಗಳಿಂದ ಸ್ಥಳಾಂತರಗೊಂಡ ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸಲು ಹರಿಯಾಣ ಸರ್ಕಾರ ಇದೇ ದೃಷ್ಟಿಕೋನದಲ್ಲಿ ಸಮಸ್ಯೆ ಪರಿಶೀಲಿಸಬಹುದು ಎಂದು ನ್ಯಾಯಾಲಯ ಹೇಳಿದೆ.
ನೆಲೆ ಕಳೆದುಕೊಂಡ ಕಾಶ್ಮೀರಿ ಪಂಡಿತರ ವಸತಿಗಾಗಿ ನಿವೇಶನ ಹಂಚಿಕೆ ಸಂಬಂಧ ಸಲ್ಲಿಸಿದ್ದ ಅರ್ಜಿಯಲ್ಲಿ, ಏಪ್ರಿಲ್ 6 ರಂದು ನಡೆಯಲಿರುವ ಲಾ ಡ್ರಾಗೆ (ಚೀಟಿ ಎತ್ತುವಿಕೆ) ತಡೆಯಾಜ್ಞೆ ನೀಡುವಂತೆಯೂ ಕೋರಲಾಗಿತ್ತು. ಆದರೆ ಲಾಟ್ ಡ್ರಾಗೆ ತಡೆ ನೀಡದ ನ್ಯಾಯಾಲಯ ಜಮ್ಮು-ಕಾಶ್ಮೀರದಿಂದ ಸ್ಥಳಾಂತರಗೊಂಡಿರುವ ಎಲ್ಲರನ್ನೂ ಅದರಲ್ಲಿ ಒಳಗೊಳ್ಳಬೇಕು ಎಂದು ಸೂಚಿಸಿದೆ.
– ಅವಶ್ಯಕತೆ ಇದ್ದಾಗ ಮಾತ್ರ ಹೆಚ್ಚು ಸಮಯ ಧ್ವನಿವರ್ಧಕ ಬಳಕೆ
ಬೆಂಗಳೂರು: ಹಿಜಬ್ ಬಳಿಕ ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮರಿಗೆ ನಿಷೇಧ, ಹಲಾಲ್ ಕಟ್ ಅಭಿಯಾನ ಮಾಡಿದ್ದ ಹಿಂದೂ ಸಂಘಟನೆಗಳು ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧ ಮಾಡಬೇಕು ಎಂದು ಆಗ್ರಹಿಸಿ ಅಭಿಯಾನ ಆರಂಭಿಸಿವೆ.
ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಇರುವುದರಿಂದ ಹಿರಿಯ ನಾಗರಿಕರಿಗೆ, ಮಕ್ಕಳಿಗೆ ಸಮಸ್ಯೆ ಆಗುತ್ತಿದೆ. ಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸುತ್ತಿವೆ.
ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಸಂಬಂಧ ಈ ಹಿಂದೆಯೇ ವಕ್ಫ್ ಬೋರ್ಡ್ ಸುತ್ತೋಲೆ ಹೊರಡಿಸಿತ್ತು. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ರವರೆಗೆ ದರ್ಗಾದಲ್ಲಿ ಧ್ವನಿವರ್ಧಕ ಬಳಕೆ ನಿಷೇಧ ಹೇರಿ 2021ರಲ್ಲಿಯೇ ವಕ್ಫ್ ಮಂಡಳಿ ಮಹತ್ವದ ಸುತ್ತೋಲೆ ಹೊರಡಿಸಿತ್ತು. ಶಬ್ಧ ಮಾಲಿನ್ಯ ನಿಯಂತ್ರಣ ನಿಯಮಾನುಸಾರ ಸುತ್ತೋಲೆ ಹೊರಡಿಸಿತ್ತು. ಇದನ್ನೂ ಓದಿ: ಮಸೀದಿ ಸಮೀಪ ಹನುಮಾನ್ ಚಾಲೀಸಾ ಹಾಕಿದ ಎಂಎನ್‌ಎಸ್
ಪಬ್ಲಿಕ್ ಟಿವಿಗೆ ವಕ್ಫ್ ಮಂಡಳಿ ಅಧ್ಯಕ್ಷ ಶಾಫೀ ಸ ಅದಿ ಪ್ರತಿಕ್ರಿಯಿಸಿದ ಅವರು, ಮಸೀದಿಗಳು ಮತ್ತು ದರ್ಗಾಗಳಲ್ಲಿ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕಗಳನ್ನು ಬಳಸಬಾರದು. ಧ್ವನಿವರ್ಧಕವನ್ನು ಅಝಾನ್, ಸಾವು, ಸಮಾಧಿಯ ಸಮಯ ಮತ್ತು ಚಂದ್ರನನ್ನು ನೋಡುವುದು ಸೇರಿದಂತೆ ಇನ್ನಿತರ ಪ್ರಮುಖ ಘೋಷಣೆಗಳಿಗೆ ಮಾತ್ರ ಬಳಸಬೇಕು ಎಂದು ಸುತ್ತೋಲೆಯಲ್ಲಿದೆ ಎಂದು ವಿವರಿಸಿದರು.
ಹಗಲಿನಲ್ಲಿ ಬಳಸುವ ಧ್ವನಿವರ್ಧಕಗಳು ಶಬ್ದಕ್ಕೆ ಸಂಬಂಧಿಸಿದಂತೆ ಸುತ್ತುವರಿದ ಗಾಳಿಯ ಗುಣಮಟ್ಟದ ಮಾನದಂಡಗಳ ಪ್ರಕಾರ ಇರಬೇಕು. ಯಾವುದೇ ಸಂದರ್ಭದಲ್ಲಿ ಶಬ್ದಗಳನ್ನು ಹೊರಸೂಸುವ ಪಟಾಕಿಗಳನ್ನು ಮಸೀದಿ, ದರ್ಗಾದ ಆವರಣದಲ್ಲಿ ಸುಡಬಾರದು. ಲಾತ್, ಜುಮಾ ಖುತ್ಬಾ, ಬಯಾನ್ಸ್, ಧಾರ್ಮಿಕ ಇನ್ನಿತರ ಕಾರ್ಯಕ್ರಮಗಳಿಗೆ ಮಾತ್ರ ಮಸೀದಿ ಅಥವಾ ದರ್ಗಾದ ಆವರಣದೊಳಗೆ ಇರುವ ಮೈಕ್‍ಗಳನ್ನು ಬಳಸಬೇಕು ಅಂತ ವಕ್ಫ್ ಮಂಡಳಿ ತಿಳಿಸಿದೆ ಎಂದರು.
ಕೋರ್ಟ್‍ಗಳು ಹೇಳಿದ್ದೇನು?
ಧ್ವನಿವರ್ಧಕ ಬಳಕೆ ನಿಷೇಧ ಮಾಡುವಂತೆ ಕೋರಿ ಸುಪ್ರೀಂಕೋರ್ಟ್‍ನಲ್ಲಿ ಈ ಹಿಂದೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಮಸೀದಿ, ದೇವಸ್ಥಾನಗಳಲ್ಲಿ ಧ್ವನಿವರ್ಧಕ ನಿಯಂತ್ರಣ ಮಾಡಲು ಸೂಚನೆ ನೀಡಿತ್ತು. 10 ಡೆಸಿಬಲ್ ಗಿಂತ ಕಡಿಮೆ ಧ್ವನಿವರ್ಧಕ ಮಾತ್ರ ಹಗಲು ಹೊತ್ತಿನಲ್ಲಿ ಬಳಸಬಹುದು. ಮಾಲಿನ್ಯ ನಿಯಂತ್ರಣ ಮಂಡಳಿಯ ಕಾಯ್ದೆಯ ಪ್ರಕಾರ ಆದೇಶ ಪಾಲನೆಗೆ ಪೊಲೀಸರಿಗೆ ಹಾಗೂ ಸರ್ಕಾರಕ್ಕೆ ಸೂಚನೆ ಹೊರಡಿಸಿತ್ತು.
ಪೊಲೀಸ್ ಇಲಾಖೆಗಳನ್ನು ಬಳಸಿಕೊಂಡು ಧ್ವನಿವರ್ಧಕ ನಿಯಂತ್ರಣ ಮಾಡಬೇಕು. ಜನರಿಗೆ ಕಿರಿಕಿರಿ ಮಾಡುವ ಧ್ವನಿವರ್ಧಕ ವಿರುದ್ಧ ಕ್ರಮಕೈಗೊಳ್ಳಬೇಕು. ಪೊಲೀಸ್ ಇಲಾಖೆಯ ಮೂಲಕ ನೋಟಿಸ್ ನೀಡಬೇಕು. ನೋಟಿಸ್‍ಗೆ ಎಚ್ಚೆತ್ತುಕೊಳ್ಳದೇ ಇದ್ದರೆ ಕಾನೂನುಕ್ರಮ ಕೈಗೊಳ್ಳಲು ಆದೇಶ ತೆಗೆದುಕೊಳ್ಳಬಹುದು ಎಂದು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ಕೊಟ್ಟಿತ್ತು. ಧ್ವನಿವರ್ಧಕದ ಬಗ್ಗೆ ಹೈಕೋರ್ಟ್‍ಗೆ ಸರ್ಕಾರ ಸಹ ವರದಿಯನ್ನು ಸಲ್ಲಿಕೆ ಮಾಡಿತ್ತು. ಇದನ್ನೂ ಓದಿ: ರಾಜ್ ಠಾಕ್ರೆ ಮನೆಗೆ ಭೇಟಿ ನೀಡಿದ ನಿತಿನ್ ಗಡ್ಕರಿ – ಉದ್ದೇಶವೇನು?
ಅವಶ್ಯಕತೆ ಇದ್ದಾಗ ಮಾತ್ರ ಹೆಚ್ಚು ಬಳಕೆ
ರಾತ್ರಿ ಹತ್ತರಿಂದ ಬೆಳಗ್ಗೆ 6 ರವರೆಗೆ ಧ್ವನಿವರ್ಧಕ ನಿಷೇಧ ಮಾಡಲಾಗಿದ್ದು, ಶಬ್ಧಮಾಲಿನ್ಯ ನಿಯಂತ್ರಣ ನಿಯಮದಡಿ ಈ ರೂಲ್ಸ್ ಕರ್ನಾಟಕದಲ್ಲಿ ಜಾರಿಯಾಗಿದೆ. ನಿಷೇಧ ಇದ್ದರೂ ರಾಷ್ಟ್ರೀಯ ಹಬ್ಬ, ಸಾರ್ವಜನಿಕ ಹಬ್ಬದಲ್ಲಿ ಮಾತ್ರ ರಾತ್ರಿ 12 ರವರೆಗೆ, ಕೇವಲ 15 ದಿನದ ಅವಧಿಯವರೆಗೆ ಬಳಕೆ ಮಾಡಲು ಅನುಮತಿ ನೀಡಲಾಗಿದೆ.
ರಾಯಪುರ: ಹಿಂದೂ ದತ್ತು ಮತ್ತು ನಿರ್ವಹಣೆ ಕಾಯ್ದೆ- 1956ರ ನಿಬಂಧನೆಗಳ ಅಡಿಯಲ್ಲಿ ಅವಿವಾಹಿತ ಹೆಣ್ಣುಮಗಳು ಪೋಷಕರಿಂದ ವಿವಾಹದ ವೆಚ್ಚ ಪಡೆಯಬಹುದು ಎಂದು ಛತ್ತೀಸ್‌ಗಢ ಹೈಕೋರ್ಟ್ ತೀರ್ಪು ನೀಡಿದೆ.
35 ವರ್ಷದ ರಾಜೇಶ್ವರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬಿಲಾಸ್‌ಪುರದ ಹೈಕೋರ್ಟ್ ವಿಭಾಗೀಯ ಪೀಠವು ಈ ತೀರ್ಪು ನೀಡಿದೆ. ಈ ವೇಳೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಕೌಟುಂಬಿಕ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು 2016ರ ಏಪ್ರಿಲ್ 22ರಂದು ನೀಡಿದ ಆದೇಶವನ್ನು ವಜಾಗೊಳಿಸಿದೆ. ಇದನ್ನೂ ಓದಿ: ಪಾಕ್ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು
ಭಿಲಾಯಿ ಸ್ಟೀಲ್ ಪ್ಲಾಂಟ್ (ಬಿಎಸ್‌ಪಿ) ಉದ್ಯೋಗಿ ಭುನುರಾಮ್ ಅವರ ಪುತ್ರಿ, ಹಿಂದೂ ದತ್ತು ಮತ್ತು ನಿರ್ವಹಣೆ ಕಾಯ್ದೆ-1956ರ ಅಡಿಯಲ್ಲಿ ದುರ್ಗ್ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರತಿವಾದಿ (ತಂದೆ) ಭಾನುರಾಮ್ ಅವರು ನಿವೃತ್ತಿ ಹೊಂದಲಿದ್ದು, ಅವರು 55 ಲಕ್ಷ ಪಿಂಚಣಿ ಪಡೆಯುವ ಸಾಧ್ಯತೆಯಿದೆ. ಹಾಗಾಗಿ, ಜೀವನಾಂಶಕ್ಕಾಗಿ 20 ಲಕ್ಷ ರೂ. ನೀಡುವಂತೆ ಸೂಕ್ತ ರಿಟ್ ಹೊರಡಿಸಬೇಕು ಎಂದೂ ಹೇಳಿದ್ದರು. ಅರ್ಜಿಯನ್ನು ವಿಚಾರಿಸಿದ ಕೌಟುಂಬಿಕ ನ್ಯಾಯಾಲಯವು ಜನವರಿ 7, 2016 ರಂದು ಇದಕ್ಕೆ ಅವಕಾಶವಿಲ್ಲವೆಂದು ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನೂ ಓದಿ: ಹಿಜಬ್ ತೀರ್ಪು- ಹೈಕೋರ್ಟ್ ಜಡ್ಜ್‌ಗಳಿಗೆ ʼವೈʼ ಭದ್ರತೆ
ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಜೇಶ್ವರಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅವಿವಾಹಿತ ಮಗಳು ಹಿಂದೂ ದತ್ತು ಮತ್ತು ನಿರ್ವಹಣೆ ಕಾಯ್ದೆ-1956ರ ಕಾಯ್ದೆಯ ಅಡಿಯಲ್ಲಿ ತನ್ನ ಮದುವೆಯ ವೆಚ್ಚವನ್ನು ಪೋಷಕರಿಂದ ಪಡೆದುಕೊಳ್ಳಬಹುದು ಎಂದು ಅರ್ಜಿದಾರರ ಪರ ವಕೀಲ ಎ.ಕೆ.ತಿವಾರಿ ವಾದಿಸಿದ್ದರು. ಮಾರ್ಚ್ 21ರಂದು ವಿಚಾರಣೆಗೆ ಅಂಗೀಕರಿಸಿದ್ದ ನ್ಯಾಯಮೂರ್ತಿಗಳಾದ ಗೌತಮ್ ಭಾದುರಿ ಹಾಗೂ ಸಂಜಯ್ ಎಸ್.ಅಗರವಾಲ್ ಅವರ ವಿಭಾಗೀಯ ಪೀಠವು, ಕಾನೂನಿನ ಪ್ರಕಾರ ಅವಿವಾಹಿತ ಮಗಳು ತನ್ನ ತಂದೆಯಿಂದ ಮದುವೆಯ ವೆಚ್ಚವನ್ನು ಪಡೆಯಬಹುದು ಎಂದು ತೀರ್ಪು ಪ್ರಕಟಿಸಿತು.
ನವದೆಹಲಿ: ರಮ್ಮಿ, ಡ್ರೀಮ್ 11 ಸೇರಿದಂತೆ ಆನ್‍ಲೈನ್ ಗೇಮ್‌ಗಳನ್ನು ನಿಷೇಧಿಸಿದ ನಿರ್ಧಾರವನ್ನು ರದ್ದು ಮಾಡಿದ ಹೈಕೋರ್ಟ್ ಆದೇಶದ ವಿರುದ್ಧ ಈಗ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಶುಭ್ರಾಂಶು ಪಡಿ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಲು ಮನವಿ ಮಾಡಿದ್ದಾರೆ.
ಸರ್ಕಾರ ಆನ್‍ಲೈನ್ ಗೇಮ್ ನಿಷೇಧಿಸಲು ನಿರ್ಧಾರಿಸಿದ್ದು, ಇದರಿಂದ ಹಣಕಾಸಿನ ಅಪಾಯ ಹೆಚ್ಚಿದೆ ಎಂದು ತಿಳಿಸಿದೆ. ಇದರಿಂದ ಕಳೆದ ವರ್ಷ 28,000ಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ಆನ್‍ಲೈನ್ ಗೇಮ್ ಜನರನ್ನು ತಪ್ಪುದಾರಿಗೆ ಎಳೆಯಬಹುದು. ಸಾರ್ವಜನಿಕ ಸುವ್ಯವಸ್ಥೆ ಮತ್ತು ಸಾರ್ವಜನಿಕ ಆರೋಗ್ಯ ಕಾಪಾಡಲು ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ. ಇದು 19 ನೇ ವಿಧಿಯ ಉಲ್ಲಂಘನೆ ಅಲ್ಲ, ಹೈಕೋರ್ಟ್ ಇದನ್ನು ತಪ್ಪಾಗಿ ಅರ್ಥೈಸಿಕೊಂಡಿದೆ ಎಂದು ರಾಜ್ಯ ಸರ್ಕಾರ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ನಾವು ಪರಿಶುದ್ಧವಾಗಿದ್ದಾಗ ಯಾರು ಏನು ಮಾಡೋದಕ್ಕೆ ಆಗೋದಿಲ್ಲ: ಹೆಚ್‍ಡಿಕೆ
ಬೆಟ್ಟಿಂಗ್‌ಗೆ ಅವಕಾಶ ನೀಡುವ ಆನ್‍ಲೈನ್ ಗೇಮ್ ಗಳನ್ನು ನಿಷೇಧಿಸುವುದಕ್ಕಾಗಿ ರಾಜ್ಯ ಸರ್ಕಾರ ಪೊಲೀಸ್ ತಿದ್ದುಪಡಿ ಕಾಯ್ದೆಗೆ ತಿದ್ದುಪಡಿ ಮಾಡಿತ್ತು. ಇದರನ್ವಯ ಡ್ರೀಮ್ 11, ರಮ್ಮಿ ಸೇರಿದಂತೆ ಬೆಟ್ಟಿಂಗ್ ಗೇಮಿಂಗ್ ಆ್ಯಪ್‌ಗಳನ್ನು ರಾಜ್ಯದಲ್ಲಿ 2021 ರ ಅಕ್ಟೋಬರ್ 5 ನಿರ್ಬಂಧಿಸಿತ್ತು. ಆನ್‍ಲೈನ್ ಗೇಮ್ ನಲ್ಲಿ ಬೆಟ್ಟಿಂಗ್ ಆಡುವವರಿಗೆ ಗರಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 1 ರೂ ಯಿಂದ ಲಕ್ಷದವರೆಗೆ ದಂಡ ವಿಧಿಸಲು ನಿಯಮ ರೂಪಿಸಲಾಗಿತ್ತು.
ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹಲವು ಆನ್‍ಲೈನ್ ಗೇಮಿಂಗ್ ಸಂಸ್ಥೆಗಳು ಹೈಕೋರ್ಟ್ ಮೊರೆ ಹೋಗಿದ್ದವು, ಈ ತಿದ್ದುಪಡಿ ಮಾಡುವ ಅಧಿಕಾರ ರಾಜ್ಯ ಶಾಸಕಾಂಗ ಹೊಂದಿಲ್ಲ, ಇದು ಸುಪ್ರೀಂಕೋರ್ಟ್ ನಿಗದಿಪಡಿಸಿದ ಪೂರ್ವನಿದರ್ಶನಕ್ಕೆ ವಿರುದ್ಧವಾಗಿದೆ. ಸಂವಿಧಾನದ 14, 19(1) (ಜಿ), 21 ಮತ್ತು 301ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದರು.
ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವಿರುದ್ಧ ಸಿಬಿಐ ತನಿಖೆ ಕೋರಿ ವಕೀಲ ಕೆ.ಎನ್.ಜಗದೀಶ್ ಕುಮಾರ್ ರಿಟ್ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಕೆ ಮಾಡಿದ್ದಾರೆ.
ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿರುವ ರವಿ ಡಿ ಚೆನ್ನಣ್ಣ ಅವರ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿರುವ ವಕೀಲ ಜಗದೀಶ್ ಈ ಅರ್ಜಿ ಸಲ್ಲಿಕೆ ಮಾಡಿದ್ದು, ಸಂಬಂಧಿಕರ ಹೆಸರಿನಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಯೋಗಿ 2.0 ಆಡಳಿತ: 2 ಎನ್‍ಕೌಂಟರ್ – ಪರಾರಿಯಾಗಿದ್ದ 50ಕ್ಕೂ ಹೆಚ್ಚು ಅಪರಾಧಿಗಳು ಶರಣು
ಅಷ್ಟೇ ಅಲ್ಲದೇ ಬೇನಾಮಿ ಹೆಸರಲ್ಲಿ ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆ. ಜೊತೆಗೆ ಪೋಷಕರ ಹೆಸರಿನಲ್ಲೂ ಅಪಾರ ಆಸ್ತಿ ಖರೀದಿಸಲಾಗಿದೆ ಎಂದು ತಮ್ಮ ಅರ್ಜಿಯಲ್ಲಿ ದೂರಿದ್ದಾರೆ.
ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ಅರ್ಜಿಯನ್ನು ಬರೆದಿದ್ದು, ರವಿ ಚನ್ನಣ್ಣವರ್ ವಿರುದ್ಧ ಸರ್ಕಾರ ತನಿಖೆ ನಡೆಸಲು ಹಿಂದೇಟು ಹಾಕಿದೆ. ಹೀಗಾಗಿ ಸಿಬಿಐ, ಇಡಿ ಯಿಂದ ನಡೆಸುವಂತೆ ಮನವಿ ಮಾಡಿದ್ದಾರೆ. ವಕೀಲರ ಮೂಲಕ ಕೆ.ಎನ್.ಜಗದೀಶ್ ರಿಟ್ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ. ಇದನ್ನೂ ಓದಿ : ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ
ಕಾರವಾರ: ಸಿದ್ದರಾಮಯ್ಯನವರ ಮಾನಸಿಕ ಸ್ಥಿತಿ ಹೇಗಿದೆ ಅಂದ್ರೆ ನ್ಯಾಯಾಲಯದ ತೀರ್ಪನ್ನು ಸಹ ಗೌರವಿಸುತ್ತಿಲ್ಲ ಎಂದು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಾಗ್ದಾಳಿ ನಡೆಸಿದರು.
ಕಾರವಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಹೇಳಿಕೆ ಕಾಲಕಾಲಕ್ಕೆ ಸ್ಫೋಟಗೊಂಡಾಗ ಅದು ಬಿಜೆಪಿಗೆ ಅನುಕೂಲವಾಗುತ್ತೆ. ಕೆಲವೊಮ್ಮೆ ಸಿದ್ದರಾಮಯ್ಯ ಇಂತಹ ಹೇಳಿಕೆ ಕೊಡುತ್ತಿರುತ್ತಾರೆ. ಇದರಿಂದ ನಮ್ಮ ಪಕ್ಷಕ್ಕೆ ವರವಾಗುತ್ತದೆ ಎಂದರು. ಇದನ್ನೂ ಓದಿ: ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಿಲ್ಲ, ಸಿದ್ದರಾಮಯ್ಯ ಧೋರಣೆ- ಬಿಜೆಪಿ ತಿರುಗೇಟು
ಉಡುಪಿ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಹಿಂದೂ ದೇವರ ಜಾತ್ರೆಗಳಲ್ಲಿ ಇಸ್ಲಾಂ ಧರ್ಮದವರ ಅಂಗಡಿಗಳ ನಿರ್ಬಂಧ ಕುರಿತು ಮಾತನಾಡಿ, ಅಲ್ಲಲ್ಲಿ ಕೆಲವು ಕಡೆ ಇಂತಹ ಘಟನೆಗಳು ನಡೆದಿವೆ. ಧಾರ್ಮಿಕ ಸ್ಥಳಗಳ ಬಗ್ಗೆ ಕಾಯ್ದೆಯನ್ನು ಈ ಹಿಂದೆ ತಂದವರು ಕಾಂಗ್ರೆಸ್‍ನವರು. ಈ ಹಿಂದೆ ಇದ್ದ ಕಾಯ್ದೆ ಅನುಷ್ಠಾನ ಆಗಿರಬಹುದೇ ಹೊರತು ನಾವು ಹೊಸದಾಗಿ ಕಾನೂನು ತಂದಿಲ್ಲ ಎಂದು ಕಾಂಗ್ರೆಸ್‍ಗೆ ಟಾಂಗ್ ಕೊಟ್ಟರು. ಇದನ್ನೂ ಓದಿ: ಕಾಂಗ್ರೆಸ್ ಉಳಿಯಬೇಕಾದ್ರೆ ಮೊದಲು ಸಿದ್ದರಾಮಯ್ಯರನ್ನು ವಜಾ ಮಾಡಿ: ಈಶ್ವರಪ್ಪ
ಎಲ್ಲ ಧರ್ಮದವರು ಸಮಾನರು, ನೆಮ್ಮದಿಯಿಂದ ಬದಕುವ ಕಲ್ಪನೆಗೆ ಒತ್ತುಕೊಟ್ಟು ಬಿಜೆಪಿ ಪಕ್ಷ ಕೆಲಸ ಮಾಡುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ದೇಶದ್ರೋಹ, ಧರ್ಮ ದ್ರೋಹ ಮಾಡುವಂತ ಪೋಸ್ಟ್‌ಗಳನ್ನು ಹಾಕಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಟ್ಟಿದೆ. ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಮೈಸೂರು: ಮಂಗಳೂರು, ಉಡುಪಿ, ಬೆಂಗಳೂರಿಗೆ ವ್ಯಾಪಿಸಿದ್ದ ಧರ್ಮ ಸಂಘರ್ಷ ಇದೀಗ ಸಾಂಸ್ಕøತಿಕ ನಗರಿ ಮೈಸೂರಿಗೂ ವ್ಯಾಪಿಸುತ್ತಿದೆ. ಮೈಸೂರಿನ ಧಾರ್ಮಿಕ ದತ್ತಿ ಇಲಾಖೆಯ ಎಲ್ಲ ದೇವಾಲಯಗಳ ಆವರಣದಲ್ಲಿ ಹಾಗೂ ಜಾತ್ರಾಮಹೋತ್ಸವಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಬರ್ಂಧ ವಿಧಿಸುವಂತೆ ಸಂಘಟನೆಗಳು ಆಗ್ರಹಿಸಿವೆ.
ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಎಲ್ಲ ದೇವಸ್ಥಾನದ ಆವರಣದಲ್ಲಿ ಹಾಗೂ ಜಾತ್ರಾ ಮಹೋತ್ಸವಗಳಲ್ಲಿ ಅಂಗಡಿ ಮುಂಗಟ್ಟು, ಟೆಂಡರ್ ಪ್ರಕ್ರಿಯೆಯಲ್ಲಿ ಹಿಂದುಯೇತರರಿಗೆ ಅವಕಾಶ ನೀಡಬಾರದು ಹಾಗೂ ಮೈಸೂರಿನ ಚಾಮುಂಡಿಬೆಟ್ಟ ದೇವಸ್ಥಾನ ಆವರಣದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಿದೆ.
ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿಗಳ ಅಧಿನಿಯಮ 1997, 2002ರ 31(12) ನಿಯಮದ ಪ್ರಕಾರ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ದೇವಾಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಹಿಂದೂ ಅಲ್ಲದವರಿಗೆ ಗುತ್ತಿಗೆ ನೀಡುವಂತಿಲ್ಲ. ಹೀಗಾಗಿ ಧಾರ್ಮಿಕ ದತ್ತಿ ಇಲಾಖೆಯು ಕೂಡಲೇ ರಾಜ್ಯದ ಎಲ್ಲ ದೇವಸ್ಥಾನ ಆಡಳಿತ ಮಂಡಳಿಯ ಇಲಾಖೆಗೆ ಒಳಪಟ್ಟ ಹಿಂದೂ ದೇವಸ್ಥಾನ, ಜಾತ್ರಾ ಮಹೋತ್ಸವ, ರಥೋತ್ಸವ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹಿಂದೂಯೇತರರಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದೆ. ಇದನ್ನೂ ಓದಿ: ಮುಸ್ಲಿಮರಿಗೆ ದೇವಸ್ಥಾನಗಳಲ್ಲಿ ವ್ಯಾಪಾರ ಬಹಿಷ್ಕಾರ – 2021ರಲ್ಲಿ ಗಂಗೊಳ್ಳಿಯಲ್ಲಿ ನಡೆದಿದ್ದು ಏನು?
ಮುಸ್ಲಿಂ ಮೂಲಭೂತವಾದಿಗಳು ಹಾಗೂ ಸಂಘಟನೆಗಳು ಹೈಕೋರ್ಟ್ ಆದೇಶ ಪಾಲಿಸಲು ವಿರೋಧ ವ್ಯಕ್ತಪಡಿಸುತ್ತಿವೆ. ಇದರಿಂದ ಹಿಂದೂ ಸಮಾಜದಲ್ಲಿ ಆತಂಕ ಸೃಸ್ಟಿಯಾಗಿದ್ದು, ಹಿಂದೂ ದೇವಾಲಯಗಳ ಸುತಮುತ್ತ ಇರುವ ಹಿಂದೂಗಳ ರಕ್ಷಣೆಗೆ ಕ್ರಮ ವಹಿಸಬೇಕು ಎಂದು ಸಂಘಟನೆ ಮನವಿ ಮಾಡಿದೆ.
ತನ್ನ ಸುತ್ತೋಲೆಯಲ್ಲಿ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿದೆ. ಈ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್, ಹೈಕೋರ್ಟ್ ತೀರ್ಪಿನಂತೆ ಈ ಆದೇಶವನ್ನು ಪ್ರಕಟಿಸಲಾಗಿದೆ. 80 ಸಾವಿರಕ್ಕೂ ಹೆಚ್ಚು ಮುಸ್ಲಿಮ್ ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಿದ್ದಾರೆ. 600-700 ವಿದ್ಯಾರ್ಥಿನಿಯರು ಇಲ್ಲಿಯವರೆಗೆ ಗೈರಾಗಿದ್ದಾರೆ. ಹೀಗಾಗಿ ಸಮವಸ್ತ್ರದಲ್ಲೇ ಪರೀಕ್ಷೆ ಬರೆಯಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರು: ಮುಂದಿನ ವಾರದಿಂದ ಪರೀಕ್ಷೆಗಳು ಆರಂಭವಾಗುತ್ತಿರುವ ಬೆನ್ನಲ್ಲೇ ಹಿಜಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ವಿದ್ಯಾರ್ಥಿನಿಯರು ಮುಂದಾಗಿದ್ದಾರೆ.
ಈಗಾಗಲೇ ಉಡುಪಿಯ ವಿದ್ಯಾರ್ಥಿನಿಯರು ಬೆಂಗಳೂರಿಗೆ ಆಗಮಿಸಿದ್ದಾರೆ. ವಿದ್ಯಾರ್ಥಿನಿಯರ ಪರವಾಗಿ ಮಹಿಳಾ ಸಂಘಟನೆ ಶುಕ್ರವಾರ ಬೆಳಗ್ಗೆ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆಗೆ ಅನುಮತಿ ನೀಡುವಂತೆ ಕೋರಿ ಪೊಲೀಸರ ಬಳಿ ಮನವಿ ಮಾಡಿದ್ದಾರೆ. ಆದರೆ ಆದರೆ ಪ್ರತಿಭಟನೆಗೆ ಪೊಲೀಸರು ಒಪ್ಪಿಗೆ ಸೂಚಿಸಿಲ್ಲ. ಜೊತೆಗೆ ಪ್ರತಿಭಟಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಖಡಕ್ ಆಗಿ ಹೇಳಿದ್ದಾರೆ.
ಪೊಲೀಸರು ಅನುಮತಿ ನೀಡದಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಫ್ರೀಡಂಪಾರ್ಕ್ ನಲ್ಲಿ ಸಂಜೆ 4 ಗಂಟೆಗೆ ಪ್ರತಿಭಟನೆಯಿದೆ ಎನ್ನುವುದರ ಕುರಿತು ಮೆಸೇಜ್ ಹರಿದಾಡುತ್ತಿದೆ. ಜೊತೆಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಲ್ಲಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆಯಿದೆ. ಇದರಿಂದಾಗಿ ಬೆಂಗಳೂರು ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.
ಅನುಮತಿ ನೀಡಿಲ್ಲ ಯಾಕೆ?: ಪ್ರತಿಭಟನೆ ನಡೆಸಬೇಕಾದರೆ 5 ದಿನ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು. ನಿನ್ನೆ ಬೆಳಗ್ಗೆ ಅರ್ಜಿ ಸಲ್ಲಿಸಿ ಪ್ರತಿಭಟನೆಗೆ ಒಂದೇ ದಿನಕ್ಕೆ ಅವಕಾಶ ಕೇಳಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಪ್ರತಿಭಟನೆಗೆ ಅವಕಾಶ ಇಲ್ಲ. ಹಾಗೇನಾದರೂ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ವಿದ್ಯಾರ್ಥಿಗಳ ಪ್ರತಿಭಟನೆಗೆ ಯಾವುದೇ ಅನುಮತಿ ಕೊಟ್ಟಿಲ್ಲ. ಅನುಮತಿ ಸಿಕ್ಕ ನಂತರವಷ್ಟೇ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಬಹುದು. ಆದರೆ ಅನುಮತಿ ಸಿಕ್ಕಿಲ್ಲದ ಕಾರಣ, ಯಾರಿಗೂ ಅವಕಾಶ ಇಲ್ಲ. ವಿದ್ಯಾರ್ಥಿಗಳ ಜೊತೆಗೆ ಕೆಲ ಸಂಘಟನೆಗಳು ಕೈಜೋಡಿಸುವ ಶಂಕೆ ಇದೆ. ಹಾಗೇನಾದರೂ ಪ್ರತಿಭಟನೆಗೆ ಮುಂದಾದರೆ ಅವರನ್ನು ಬಂಧಿಸಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಉಡುಪಿಯಲ್ಲಿ ಜೆಸಿಬಿ ಘರ್ಜನೆ – SDPI ಜಿಲ್ಲಾಧ್ಯಕ್ಷನ ಹೋಟೆಲ್ ತೆರವು
ವಿದ್ಯಾರ್ಥಿಗಳು ಮಾತ್ರ ಧಿಡೀರ್ ಪ್ರತಿಭಟನೆ ಮಾಡುವ ಸಾಧ್ಯತೆಯಿದ್ದು, ಸಿಎಂ ಮನೆ, ಗೃಹ ಸಚಿವರ ಮನೆ, ಫ್ರೀಡಂ ಪಾರ್ಕ್, ಟೌನ್ ಹಾಲ್ ಬಳಿ ಪ್ರತಿಭಟನೆ ಸಾಧ್ಯತೆಯಿದೆ. ಅಜ್ಞಾತ ಸ್ಥಳದಲ್ಲಿ ವಿದ್ಯಾರ್ಥಿಗಳ ಜೊತೆಗೆ ಸಮುದಾಯದ ಮುಖಂಡರು ಸಭೆ ನಡೆಸಿದ್ದಾರೆ. ಸಭೆ ಬಳಿಕ ಪ್ರತಿಭಟನೆ ಮಾಡುವ ಸಾಧ್ಯತೆಯಿದೆ. ಇದನ್ನೂ ಓದಿ: ಪಾವಗಡ ಬಸ್ ದುರಂತ – ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಸಾವು
ಲಕ್ನೋ: ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಮಾರ್ಚ್ 29 ರಿಂದ ನಿರಂತರ ವಿಚಾರಣೆ ನಡೆಸಲಾಗುವುದು ಎಂದು ಅಲಹಾಬಾದ್ ಹೈಕೋರ್ಟ್ ತಿಳಿಸಿದೆ.
ವಾರಣಾಸಿ ಜಿಲ್ಲಾ ನ್ಯಾಯಾಲಯದ ವಿಚಾರಣೆಗೆ ತಡೆ ಕೋರಿ ವಾರಣಾಸಿಯ ಅಂಜುಮನ್ ಇಂತಾಝಾಮಿಯಾ ಮಸಾಜಿದ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪ್ರಕಾಶ್ ಪಾಡಿಯಾ ಅವರ ಪೀಠ ನಿರಂತರ ವಿಚಾರಣೆ ನಡೆಸುವುದಾಗಿ ಹೇಳಿದೆ. ಇದನ್ನೂ ಓದಿ: ಸತತ 3ನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ
ಜ್ಞಾನವಾಪಿ-ಕಾಶಿ ಭೂ ವಿವಾದ ಪ್ರಕರಣದಲ್ಲಿ ವಾರಣಾಸಿ ಕೆಳ ನ್ಯಾಯಾಲಯದ ಆದೇಶ ಸೇರಿದಂತೆ ಮೊಕದ್ದಮೆಗೆ ನ್ಯಾಯಾಲಯವು ಈಗಾಗಲೇ ತಡೆ ನೀಡಿದೆ. ಇದರಲ್ಲಿ ಮಸೀದಿ ಸಂಕೀರ್ಣದ ಸಮೀಕ್ಷೆಯನ್ನು ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‍ಐ) ನಿರ್ದೇಶನ ನೀಡಿತ್ತು. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ – ತಾಯಿ, ಮಗ ಆತ್ಮಹತ್ಯೆ
ಸ್ವಯಂ ಭೂ ಭಗವಂತ ವಿಶ್ವೇಶ್ವರನು ವಿವಾದಿತ ರಚನೆಯಲ್ಲಿ ನೆಲೆಸಿದ್ದಾನೆ. ಆದ್ದರಿಂದ ವಿವಾದಿತ ಭೂಮಿ ಸ್ವತಃ ವಿಶ್ವೇಶ್ವರನ ಅವಿಭಾಜ್ಯ ಅಂಗವಾಗಿದೆ ಎಂದು ಸಲ್ಲಿಕೆಯಾಗಿತ್ತು. ಇದಕ್ಕೆ ಪ್ರತಿವಾದ ಮಂಡಿಸಿದ ಮಜಿದ್ ಸಮಿತಿಯು ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ, 1991 ರ ನಿಬಂಧನೆಗಳ ಪ್ರಕಾರ ಅನ್ವಯವಾಗುವುದಿಲ್ಲ. ಹೀಗಾಗಿ ಅರ್ಜಿ ವಜಾ ಮಾಡುವಂತೆ ಮನವಿ ಮಾಡಿತ್ತು.