Tag: high court

  • ದಿದಿ ನಾಡಿನಲ್ಲಿ ಹಿಂಸಾಚಾರ; ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

    ದಿದಿ ನಾಡಿನಲ್ಲಿ ಹಿಂಸಾಚಾರ; ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಗ್ರಾಮದಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ಸಿಬಿಐಗೆ (ಕೇಂದ್ರಿಯ ತನಿಖಾ ದಳ) ವಹಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ.

    Mamata banerjee

    ಹಿಂಸಾಚಾರ ಪ್ರಕರಣವನ್ನು ಸಿಬಿಐಗೆ ವಹಿಸದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರವು ಮನವಿ ಮಾಡಿತ್ತು. ತನಿಖೆ ತಡೆಸಲು ವಿಶೇಷ ತಂಡವನ್ನೂ ರಚಿಸಲಾಗಿತ್ತು. ಆದರೆ, ರಾಜ್ಯ ಸರ್ಕಾರದ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯವು ತನಿಖೆಯನ್ನು ಸಿಬಿಐಗೆ ವಹಿಸಿದೆ. ವಿಶೇಷ ತನಿಖಾ ತಂಡವು ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ್ ಹಾಗೂ ಆರ್.ಭಾರದ್ವಾಜ್ ಅವರಿದ್ದ ಪೀಠವು ಆದೇಶ ನೀಡಿದೆ. ಅಲ್ಲದೆ ಏಪ್ರಿಲ್ ೭ರ ಒಳಗೆ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದೆ. ಇದನ್ನೂ ಓದಿ: ಟಿಎಂಸಿ ನಾಯಕನನ್ನು ಅರೆಸ್ಟ್ ಮಾಡುವಂತೆ ಮಮತಾ ಬ್ಯಾನರ್ಜಿ ಆದೇಶ

    west bengal

    ನೆನ್ನೆಯಷ್ಟೇ ಹಿಂಸಾಚಾರ ನಡೆದ ಸ್ಥಳಕ್ಕೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಘೋಷಿಸಿ, ಉದ್ಯೋಗಾವಕಾಶ ಕಲ್ಪಿಸುವ ಭರವಸೆಯನ್ನೂ ನೀಡಿದ್ದರು. ಅಲ್ಲದೆ, ಇಂದು ಬೆಳಿಗ್ಗೆಯಿಂದಲೇ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ವಿಶೇಷ ಕಾರ್ಯಾಚರಣೆಯನ್ನೂ ಪ್ರಾರಂಭಿಸಲು ಆದೇಶಿಸಿದ್ದರು. ಈ ಬೆನ್ನಲ್ಲೇ ಹೈಕೋರ್ಟ್ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಆದೇಶ ನೀಡಿದೆ. ಇದನ್ನೂ ಓದಿ: ಆಟ ಇನ್ನೂ ಮುಗಿದಿಲ್ಲ: ರಾಷ್ಟ್ರಪತಿ ಚುನಾವಣೆ ಬಗ್ಗೆ ಬಿಜೆಪಿಗೆ ಮಮತಾ ಬ್ಯಾನರ್ಜಿ ಟಾಂಗ್‌

    ಸದ್ಯ ಈ ಘಟನೆಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿರುವ ಪ್ರತಿ ಪಕ್ಷಗಳು, ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಲಾರಂಭಿಸಿವೆ. ಇದಕ್ಕೆ ತಿರುಗೇಟು ನೀಡಿರುವ ಮಮತಾ ಬ್ಯಾನರ್ಜಿ, ಆರೋಪಿಗಳು ಪತ್ತೆಯಾಗದೇ ಇದ್ದಲ್ಲಿ ಅವರನ್ನು ಬೇಟೆಯಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

    west bengal fire accident

    ಏನಿದು ಪ್ರಕರಣ?
    ಇಲ್ಲಿನ ಬಗುಟಿ ಗ್ರಾಮ ಪಂಚಾಯ್ತಿ ಮುಖಂಡ ಭಾದು ಶೇಖ್ ಅವರ ಮೇಲೆ ಸೋಮವಾರ ರಾತ್ರಿ ದಾಳಿ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ-೬೦ರ ಅಂಗಡಿಯೊಂದರಲ್ಲಿ ಇರುವಾಗ ಶೇಖ್ ಅವರ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪೊಂದು ೧೦ ರಿಂದ ೧೨ ಮನೆಗೆ ಬೆಂಕಿ ಹಚ್ಚಿದ್ದರು. ಇದರಿಂದಾಗಿ ೮ ಮಂದಿ ಸಜೀವ ದಹನವಾಗಿದ್ದರು. ಇದರಲ್ಲಿ ಇಬ್ಬರು ಮಕ್ಕಳೂ ಸಹ ಇದ್ದರು ಎಂಬುದಾಗಿ ಬೀರ್ಭುಮ್ ಎಸ್‌ಪಿ ನಾಗೇಂದ್ರ ತ್ರಿಪಾಟಿ ಮಾಹಿತಿ ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತವಾಗಿಯೇ ವಿಚಾರಣೆ ನಡೆಸಲು ಮುಂದಾಗಿತ್ತು. ಈ ನಡುವೆ ಜಿಲ್ಲೆಯ ಕೆಲ ಕುಟುಂಬಗಳು ಹಿಂಸಾಚಾರಕ್ಕೆ ಬೆಚ್ಚಿಬಿದ್ದಿದ್ದು, ತಮ್ಮ ಮನೆಗಳನ್ನು ತೊರೆದಿದ್ದರು.

     

  • ಟಿಎಂಸಿ ನಾಯಕನನ್ನು ಅರೆಸ್ಟ್ ಮಾಡುವಂತೆ ಮಮತಾ ಬ್ಯಾನರ್ಜಿ ಆದೇಶ

    ಟಿಎಂಸಿ ನಾಯಕನನ್ನು ಅರೆಸ್ಟ್ ಮಾಡುವಂತೆ ಮಮತಾ ಬ್ಯಾನರ್ಜಿ ಆದೇಶ

    ಕೊಲ್ಕತ್ತಾ: ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ಬೀರ್ಭುಮ್ ಗ್ರಾಮದಲ್ಲಿ ನಡೆದ ಹಿಂಸಾಚಾರವು ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ರಾಜ್ಯಪಾಲರೂ ಸೇರಿದಂತೆ ಪ್ರತಿಪಕ್ಷದ ನಾಯಕರು ಘಟನೆಯನ್ನೇ ಪ್ರಮುಖವಾಗಿಟ್ಟುಕೊಂಡು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಮತಾ ಬ್ಯಾನರ್ಜಿ ಅವರನ್ನು ಒತ್ತಾಯಿಸುತ್ತಿದ್ದಾರೆ.

    ಈ ನಡುವೆ ಬೀರ್ಭುಮ್ ಗ್ರಾಮಕ್ಕೆ ಭೇಟಿ ನೀಡಿರುವ ಮಮತಾ ಬ್ಯಾನರ್ಜಿ ಅವರು ಹಿಂಸಾಚಾರ ನಡೆದ ಸ್ಥಳವನ್ನು ಪರಿಶೀಲಿಸಿ ಕಟ್ಟಿನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಘಟನೆಯಲ್ಲಿ ಹಾನಿಗೊಳಗಾದ ಮನೆಗಳ ದುರಸ್ತಿಗೆ 2 ಲಕ್ಷ ರೂ. ಹಾಗೂ ಸಂತ್ರಸ್ತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಉದ್ಯೋಗಾವಕಾಶ ನೀಡುವ ಭರವಸೆಯನ್ನು ನೀಡಿದ್ದಾರೆ. ಸ್ಥಳದಲ್ಲಿ 10 ಕುಟುಂಬಗಳಿಗೆ ತಲಾ 1 ಲಕ್ಷ ರೂ. ಚೆಕ್ ವಿತರಣೆ ಮಾಡಿದಾರೆ. ಅಲ್ಲದೆ ಬೆಂಕಿ ಅನಾಹುತದಿಂದ ಗಾಯಗೊಂಡವರ ಚಿಕಿತ್ಸೆಗೆ 50 ಸಾವಿರ ರೂ., ತೀವ್ರ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸ್ಥಳೀಯರು ನೀಡಿದ ದೂರಿನ ಮೇರೆಗೆ ರಾಮ್‍ಪುರಹತ್ ಬ್ಲಾಕ್-1 ಅಧ್ಯಕ್ಷ ಅನಾರುಲ್ ಶೇಖ್ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶ ನೀಡಿದ್ದಾರೆ. ಘಟನೆಯ ಬಗ್ಗೆ ಬಿಜೆಪಿ ಮುಖಂಡರು ಆರೋಪಿಸುತ್ತಿರುವುದು ಇಲ್ಲಿನ ರಾಜಕೀಯ ಹಿನ್ನಡೆ. ಹಿಂಸಾಚಾರ ಹಾಗೂ ಕಾನೂನು ಬಾಹೀರತೆಗೆ ಅವಕಾಶ ನೀಡಿದಂತಾಗುತ್ತಿದೆ. ಈ ಘಟನೆಯ ಹಿಂದೆ ದೊಡ್ಡ ಶಕ್ತಿಯಿದೆ ಎಂಬುದು ಇದರಿಂದ ಗೋಚರವಾಗುತ್ತದೆ ಎಂದು ಶಂಕಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್‌, ಡೀಸೆಲ್‌, ಎಲ್‌ಪಿಜಿ ಆಯ್ತು ಈಗ ಸಿಎನ್‌ಜಿ, ಪಿಎನ್‌ಜಿ ದರದಲ್ಲೂ ಏರಿಕೆ

    ಇದೇ ವೇಳೆ ಮಮತಾ ಬ್ಯಾನರ್ಜಿ ಅವರನ್ನು ಸುತ್ತುವರಿದಿದ್ದ ಗ್ರಾಮಸ್ಥರು, ನಮ್ಮ ದೂರುಗಳಿಗೆ ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಘಟನೆಯ ಕುರಿತು ಮಾಹಿತಿ ನೀಡಿರುವ ಪೊಲೀಸರು, ಮಂಗಳವಾರ ಹಿಂಸಾಚಾರ ಘಟನೆ ನಡೆದಿದ್ದು, ಒಂದು ದಿನದ ನಂತರ ಸುಟ್ಟ ಮೃತದೇಹಗಳನ್ನು ಹೊರತೆಗೆಯಲಾಯಿತು. ಘಟನೆಯ ನಂತರ ಅನೇಕರು ಹಿಂಸಾಚಾರಕ್ಕೆ ಹೆದರಿ ಗ್ರಾಮ ತೊರೆದಿದ್ದಾರೆ. ಈ ಪ್ರಕರಣದಲ್ಲಿ ಟಿಎಂಸಿ ಮುಖಂಡನ ಹತ್ಯೆ ಹಾಗೂ ಗ್ರಾಮಸ್ಥರ ಹತ್ಯೆಗೆ ಸಂಬಂಧಿಸಿದಂತೆ ಎರಡು ಎಫ್‍ಐಆರ್ ಗಳನ್ನು ದಾಖಲಿಸಲಾಗಿದೆ. ಈಗಾಗಲೇ ಸುಮಾರು 20 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಆರೋಪಿಗಳನ್ನು ನ್ಯಾಯಾಂಗಕ್ಕೆ ತರಲು ರಾಜ್ಯಕ್ಕೆ ಯಾವುದೇ ರೀತಿಯಲ್ಲಿ ಸಹಾಯ ಮಾಡಲು ನಮ್ಮ ಸರ್ಕಾರ ಸಿದ್ಧವಿದೆ. ಇಂತಹ ಘೋರ ಅಪರಾಧ ಎಸಗಿದವರಿಗೆ ರಾಜ್ಯ ಸರ್ಕಾರ ಕಠಿಣ ಶಿಕ್ಷೆ ವಿಧಿಸಲಿದೆ ಎಂದು ನಾನುಭಾವಿಸುತ್ತೇನೆ. ಇಂತಹ ಅಪರಾಧ, ಅಪರಾಧಿಗಳನ್ನು ಎಂದಿಗೂ ಕ್ಷಮಿಸಬೇಡಿ ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ಇದು ಬಿಜೆಪಿ ನಮ್ಮ ಸರ್ಕಾರದ ಮಾನಹಾನಿಗಾಗಿ ಮಾಡಿರುವ ಪಿತೂರಿ. ಬಿರ್ಭೂಮ್ ಘಟನೆಗೆ ಕಾರಣರಾದ ಎಲ್ಲರ ವಿರುದ್ಧ ಅವರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ವಿಸ್ತಾರವಾದ, ಪ್ರತ್ಯೇಕವಾದ ನಿಲ್ಲುವವರೆಗೂ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ: ಮುತಾಲಿಕ್

    ಏನಿದು ಪ್ರಕರಣ?
    ಇಲ್ಲಿನ ಬಗುಟಿ ಗ್ರಾಮ ಪಂಚಾಯ್ತಿ ಮುಖಂಡ ಭಾದು ಶೇಖ್ ಅವರ ಮೇಲೆ ಸೋಮವಾರ ರಾತ್ರಿ ದಾಳಿ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ-60ರ ಅಂಗಡಿಯೊಂದರಲ್ಲಿ ಇರುವಾಗ ಶೇಖ್ ಅವರ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪೊಂದು 10 ರಿಂದ 12 ಮನೆಗೆ ಬೆಂಕಿ ಹಚ್ಚಿದ್ದರು.

    ಇದರಿಂದಾಗಿ 8 ಮಂದಿ ಸಜೀವ ದಹನವಾಗಿದ್ದರು. ಇದರಲ್ಲಿ ಇಬ್ಬರು ಮಕ್ಕಳೂ ಸಹ ಇದ್ದರು ಎಂಬುದಾಗಿ ಬೀರ್ಭುಮ್ ಎಸ್‍ಪಿ ನಾಗೇಂದ್ರ ತ್ರಿಪಾಟಿ ಮಾಹಿತಿ ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತವಾಗಿಯೇ ವಿಚಾರಣೆ ನಡೆಸಲು ಮುಂದಾಗಿತ್ತು. ಈ ನಡುವೆ ಜಿಲ್ಲೆಯ ಕೆಲ ಕುಟುಂಬಗಳು ಹಿಂಸಾಚಾರಕ್ಕೆ ಬೆಚ್ಚಿಬಿದ್ದಿದ್ದು, ತಮ್ಮ ಮನೆಗಳನ್ನು ತೊರೆದು ಹೋಗಿದ್ದಾರೆ. ಇದನ್ನೂ ಓದಿ: ಜಗನ್ ಸಹೋದರಿ ಭಾಷಣದ ವೇಳೆ ಜೇನು ದಾಳಿ – ಟವೆಲ್ ಬೀಸಿದ ಕಾರ್ಯಕರ್ತರು

  • RRR ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ

    RRR ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ

    ತೆಲಂಗಾಣ: ಶೀಘ್ರವೇ ತೆರೆಗೆ ಬರಲಿರುವ ರಾಜಮೌಳಿ ನಿರ್ದೇಶನದ, ನಟರಾದ ರಾಮ್‍ಚರಣ್ ತೇಜ, ಜ್ಯೂನಿಯರ್ ಎನ್‍ಟಿಆರ್ ಅಭಿನಯದ ಆರ್‍ಆರ್‍ಆರ್ ಸಿನಿಮಾ ವಿರುದ್ಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ತೆಲಂಗಾಣ ಹೈಕೋರ್ಟ್ ವಜಾಗೊಳಿಸಿದೆ.

    ವಿದ್ಯಾರ್ಥಿನಿ ಅಲ್ಲೂರಿ ಸೌಮ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಅಭಿನಂದ್ ಕುಮಾರ್ ಶಾವಿಳಿ ಅವರಿದ್ದ ಪೀಠ ವಜಾಗೊಳಿಸಿದೆ. ಇದನ್ನೂ ಓದಿ: ಆರ್.ಆರ್.ಆರ್ ಬೈಕಾಟ್ : ಕನ್ನಡ ಪರ ಹೋರಾಟಗಾರರಿಗೇ ಜವಾಬ್ದಾರಿ ಕೊಟ್ಟ ರಾಜಮೌಳಿ ಟೀಮ್

    ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಅವರು ಅಂದಿನ ಬ್ರಿಟಿಷ್ ಸರ್ಕಾರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದು RRR ಚಿತ್ರದಲ್ಲಿ ತೋರಿಸಲಾಗಿದೆ. ಅಲ್ಲದೆ ಅವರನ್ನು ಕೆಟ್ಟದಾಗಿ ಬಿಂಬಿಸಲಾಗಿದ್ದು, ಅವರ ವ್ಯಕ್ತಿತ್ವಕ್ಕೆ ಕಳಂಕ ತರಲಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡದಂತೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (ಸಿಬಿಎಫ್‍ಸಿ) ನಿರ್ದೇಶಿಸಬೇಕು ಎಂದು ವಿದ್ಯಾರ್ಥಿನಿ ಸೌಮ್ಯ ಅರ್ಜಿ ಸಲ್ಲಿಸಿದ್ದರು.

    ಸೆನ್ಸಾರ್ ಪ್ರಮಾಣ ಪತ್ರದ ಸಿಂಧುತ್ವವು ಸವಾಲಿಗೆ ಒಳಪಡದಿರುವ ಹಿನ್ನೆಲೆಯಲ್ಲಿ ಅರ್ಜಿದಾರರಿಗೆ ಪರಿಹಾರ ನೀಡಲು ಯಾವುದೇ ಕಾರಣ ಕಂಡುಬರುತ್ತಿಲ್ಲ. ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಪ್ರತಿ ಅಫಿಡವಿಟ್ ಸಲ್ಲಿಸಿದ್ದ ಸಿಬಿಎಫ್‍ಸಿ ಸಿನಿಮಾ ಕಾಲ್ಪನಿಕ ಕೃತಿಯಾಗಿರುವುದರಿಂದ ಕೆಲ ಸಿನಿಮಾಗಳಿಗೆ ಸ್ವಾತಂತ್ರ್ಯವನ್ನು ಅನುಮತಿಸಲಾಗಿದೆ. ಅರ್ಜಿದಾರರ ವಾದವನ್ನು ಒಪ್ಪಿದರೂ ರಾಜು ಮತ್ತು ಕೊಮರಂ ಭೀಮ್ ಅವರನ್ನು ದೊಡ್ಡ ದೇಶಭಕ್ತರಾಗಿಯೇ ಚಿತ್ರದಲ್ಲಿ ಬಿಂಬಿಸಲಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ:  ಮೌಳಿಯ ರಂಗೀನ್ ಲೋಕದಲ್ಲಿ ಮಿಂದೆದ್ದ ಜನಸಾಗರ… ಒಂದೇ ವೇದಿಕೆಯಲ್ಲಿ ಸೌತ್ ಸ್ಟಾರ್ಸ್‍ಗಳ ಸಮಾಗಮ

    ಇತ್ತೀಚೆಗೆ ಬಾಲಿವುಡ್ ನಟಿ ಆಲಿಯಾ ಭಟ್ ಅಭಿನಯದ `ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಗೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್, ಹಿತನ್ ಧೀರಜ್‍ಲಾಲ್ ಮೆಹ್ತಾ ಮತ್ತು ಬನ್ಸಾಲಿ ಪ್ರೊಡಕ್ಷನ್ ಚಿತ್ರದಲ್ಲಿ ನೀಡಿದ್ದ ತೀರ್ಪನ್ನು ಅವಲಂಬಿಸಿ ನ್ಯಾಯಾಲಯ ಈ ಆದೇಶ ನೀಡಿದೆ.

  • ಪರೀಕ್ಷೆಗೆ ಗೈರಾದ್ರೆ ಅಲ್ಲಿಗೇ ಮುಗೀತು, ಅವಕಾಶ ನೀಡಲ್ಲ: ಬಿ.ಸಿ.ನಾಗೇಶ್

    ಪರೀಕ್ಷೆಗೆ ಗೈರಾದ್ರೆ ಅಲ್ಲಿಗೇ ಮುಗೀತು, ಅವಕಾಶ ನೀಡಲ್ಲ: ಬಿ.ಸಿ.ನಾಗೇಶ್

    ಬೆಂಗಳೂರು: ಹಿಜಬ್‍ನಿಂದ ಪರೀಕ್ಷೆ ಬರೆಯದೇ ಹೋದ್ರೆ ಅವರಿಗೆ ಮತ್ತೆ ಅವಕಾಶ ಕೊಡುವುದಿಲ್ಲ. ನಾವು ಹೈಕೋರ್ಟ್ ಆದೇಶವನ್ನು ಪಾಲನೆ ಮಾಡುತ್ತೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್‍ಗೆ ಹೋಗುವವರಿಗೆ ಇದೆಲ್ಲವೂ ಗೊತ್ತಾಗುವುದಿಲ್ಲವೇ? ಪರೀಕ್ಷೆಗೆ ಗೈರಾದರೆ ಅಲ್ಲಿಗೆ ಮುಗೀತು. ಮತ್ತೆ ಯಾರಿಗೂ ವಿಶೇಷ ಅವಕಾಶ ಕೊಡುವುದಿಲ್ಲ. ಅವರು ಪೂರಕ ಪರೀಕ್ಷೆಯಲ್ಲೇ ಬರೆಯಬೇಕಾಗುತ್ತದೆ ಎಂದು ಹೇಳಿದ್ದಾರೆ.

    ಮದರಸ ಬಯಸಿದ್ರೆ ಔಪಚಾರಿಕ ಶಿಕ್ಷಣ: ಇದೇ ವೇಳೆ ಮದರಸಗಳನ್ನು ಶಿಕ್ಷಣ ಇಲಾಖೆ ವ್ಯಾಪ್ತಿಗೆ ತರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮದರಸಗಳಲ್ಲಿ ವೃತ್ತಿಪರ ಶಿಕ್ಷಣ ಸಿಗುತ್ತಿಲ್ಲ. ಹಾಗೆಂದು ಮದರಸ ಶಿಕ್ಷಣ ಇಲಾಖೆಯಿಂದ ನಡೆಸಲಾಗುವುದಿಲ್ಲ. ಮದರಸಗಳೇನಾದರೂ ನಮ್ಮನ್ನು ಕೇಳಿದರೆ ನಾವು ಔಪಚಾರಿಕ ಶಿಕ್ಷಣ ಕೊಡಲು ಸಿದ್ದ. ಏಕೆಂದರೆ ಏಕರೂಪದ ಶಿಕ್ಷಣ ನೀಡುವ ಆಸೆ ನಮಗೂ ಇದೆ. ಸದ್ಯಕ್ಕೆ ಸರ್ಕಾರದ ಮಟ್ಟದಲ್ಲಿ ಇನ್ನು ಚರ್ಚೆ ಆಗಿಲ್ಲ. ಚರ್ಚೆ ಬಳಿಕ ಅಂತಮ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಹೆಬ್ಬಾಳದಲ್ಲಿ ಸರಣಿ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿ

    ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಚಾಲನೆ ನೀಡಲಾಗಿದೆ. ಮತ್ತೆ ಟಿಇಟಿ ಮಾಡಲು ಸಾಧ್ಯವಿಲ್ಲ. ಈಗ 15 ಸಾವಿರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ನಿಗದಿಯಂತೆ ನೇಮಕಾತಿ ನಡೆಯುತ್ತದೆ. ಮುಂದಿನ ಬಾರಿಯಿಂದ ವರ್ಷಕ್ಕೆ ಎರಡು ಟಿಇಟಿ, ಒಂದು ಸಿಇಟಿ ಮಾಡುತ್ತೇವೆಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸ್ಕೂಲ್ ಬಳಿ ಬಂದು ಸಮಸ್ಯೆ ಕ್ಲೀಯರ್ ಮಾಡಿ- ಠಾಣೆ ಮೆಟ್ಟಿಲೇರಿದ ಪುಟಾಣಿ

  • ಅಪ್ಪ-ಅಮ್ಮ ಬದುಕಿರುವಾಗ ಮಕ್ಕಳು ಆಸ್ತಿ ಲಾಭ ಪಡೆಯಲು ಸಾಧ್ಯವಿಲ್ಲ: ಹೈಕೋರ್ಟ್

    ಅಪ್ಪ-ಅಮ್ಮ ಬದುಕಿರುವಾಗ ಮಕ್ಕಳು ಆಸ್ತಿ ಲಾಭ ಪಡೆಯಲು ಸಾಧ್ಯವಿಲ್ಲ: ಹೈಕೋರ್ಟ್

    ಮುಂಬೈ: ಪೋಷಕರು ಬದುಕಿರುವಾಗಲೇ ಅವರ ಒಡೆತನದ ಆಸ್ತಿಯ ಮೇಲೆ ಮಗ ಹಕ್ಕು ಸಾಧಿಸಲು ಅಥವಾ ಲಾಭಾಂಶ ಪಡೆಯಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ.

    ಸೋನಿಯಾ ಖಾನ್ ಎಂಬವರು ದೀರ್ಘ ಕಾಲದಿಂದ ಹಾಸಿಗೆ ಹಿಡಿದಿರುವ ತನ್ನ ಪತಿಯ ಒಡೆತನದ ಎಲ್ಲ ಆಸ್ತಿಗಳಿಗೆ ಅವರನ್ನು ಕಾನೂನುಬದ್ಧ ಹಕ್ಕುದಾರ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸಂಬಂಧಿಸಿದಂತೆ ಈ ತೀರ್ಪು ನೀಡಲಾಗಿದೆ. ಇದನ್ನೂ ಓದಿ: ಭಗವಂತ್ ಮಾನ್ ಸಂಪುಟದ ಸಚಿವರು ಕೆಲಸ ಮಾಡದಿದ್ರೆ ತೆಗೆಯುವಂತೆ ಜನರೇ ಒತ್ತಾಯಿಸಬಹುದು: ಕೇಜ್ರಿವಾಲ್

    ಪ್ರಕರಣದಲ್ಲಿ ಮಧ್ಯಪ್ರವೇಶ ಕೋರಿದ್ದ ಅವರ ಮಗ ಆಸಿಫ್ ಖಾನ್ ತಾನು ತನ್ನ ತಂದೆಯ ವಾಸ್ತವಿಕ ರಕ್ಷಕ ಎಂದು ಹೇಳಿಕೊಂಡಿದ್ದರು. ಪೋಷಕರು ಜೀವಂತವಾಗಿ ಇದ್ದರೂ ಅವರ ಆಸ್ತಿಯನ್ನು ಹಂಚಿಕೊಂಡು (ಎರಡು ಫ್ಲಾಟ್) ಹಂಚಿಕೊಂಡು ಕಾನೂನುಬದ್ಧ ಹಕ್ಕು ಇದೆ ಎಂದು ಅವರು ವಾದಿಸಿದ್ದರು. ಆದರೆ ಈ ವಾದ ಆಧಾರ ರಹಿತ ಮತ್ತು ಅತಾರ್ಕಿಕ ಎಂದು ನ್ಯಾಯಮೂರ್ತಿ ಗೌತಮ್ ಪಟೇಲ್ ಮತ್ತು ಮಾಧವ್ ಜಾಮದಾರ್ ಅವರಿದ್ದ ಪೀಠ ತಿಳಿಸಿತು.

    ಉತ್ತರಾಧಿಕಾರದ ಕಾನೂನಿನ ಅಡಿಯಲ್ಲಿ ಪೋಷಕರು ಜೀವಂತವಾಗಿರುವವರೆಗೆ ಪೋಷಕರ ಆಸ್ತಿಯಲ್ಲಿ ಹಕ್ಕು ಅಥವಾ ಒಡೆತನ ಪಡೆಯಲು ಯಾವುದೇ ಸಮುದಾಯಕ್ಕೆ ಸೇರಿದ ಮಗನಿಗೂ ಅವಕಾಶವಿಲ್ಲವೆಂದು ಅವರು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಭಗವದ್ಗೀತೆಯನ್ನು ಪಠ್ಯಪುಸ್ತಕದಲ್ಲಿ ಸೇರಿಸಲು ಸಿಎಂಗೆ ಒತ್ತಾಯಿಸುವೆ: ಬಿಎಸ್‍ವೈ

    ಆಸಿಫ್‌ಗೆ ತನ್ನ ತಂದೆಯ ಫ್ಲಾಟ್‌ಗಳ ಮೇಲೆ ಯಾವುದೇ ಹಕ್ಕು ಇಲ್ಲ. ತನ್ನ ತಂದೆ ಬಗ್ಗೆ ಕಾಳಜಿ ವಹಿಸಿದ್ದಾನೆಂದು ಸಾಬೀತುಪಡಿಸುವ ಯಾವುದೇ ಅಂಶವೂ ಆತನ ಬಳಿ ಇಲ್ಲ. ಅಲ್ಲದೆ, ಆತ ತನ್ನ ತಾಯಿಗೆ ಪರ್ಯಾಯ ಪರಿಹಾರವಿದೆ ಎಂಬ ವಾದವನ್ನು ನಾವು ತಿಸ್ಕರಿಸುತ್ತೇವೆ. ಅವರ ವಾದವೇ ಸಂಪೂರ್ಣ ಹೃದಯಹೀನ ಮತ್ತು ದುರಾಸೆಯಿಂದ ಕೂಡಿದ ಆಸಿಫ್ ಅವರ ನಿಜವಾದ ಸ್ವಭಾವವನ್ನು ತೋರಿಸುತ್ತದೆ. ಅವರ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದೂ ಪೀಠ ಹೇಳಿದೆ.

  • ಮಹಾತ್ಮ ಗಾಂಧಿ ಧರ್ಮಪತ್ನಿ ಕೂಡ ತಲೆಗೆ ಸೆರಗು ಹಾಕುತ್ತಿದ್ದರು: ಹಿಜಬ್‌ ಬೆಂಬಲಿಸಿದ ಹೆಚ್‌ಡಿಕೆ

    ಮಹಾತ್ಮ ಗಾಂಧಿ ಧರ್ಮಪತ್ನಿ ಕೂಡ ತಲೆಗೆ ಸೆರಗು ಹಾಕುತ್ತಿದ್ದರು: ಹಿಜಬ್‌ ಬೆಂಬಲಿಸಿದ ಹೆಚ್‌ಡಿಕೆ

    ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಧರ್ಮಪತ್ನಿ ಕಸ್ತೂರ ಬಾ ಅವರು ಕೂಡ ತಲೆಗೆ ಸೆರಗು ಹಾಕುತ್ತಿದ್ದರು ಎಂದು ಹಿಜಬ್‌ಗೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಬೆಂಬಲ ವ್ಯಕ್ತಪಡಿಸಿದ್ದಾರೆ.

    ವಿಧಾನಸೌಧದ ಎದುರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಫೋಟೋದಲ್ಲೆಲ್ಲ ನೋಡಿದ್ದೇವೆ. ಕಸ್ತೂರ ಬಾ ಅವರು ಕೂಡ ತಲೆಗೆ ಸೆರಗು ಹಾಕುತ್ತಿದ್ದರು. ಎಷ್ಟೋ ಬಾರಿ ಬಿಸಿಲಿನ ತಾಪಕ್ಕೆ ಹಿಂದೂ, ಮುಸ್ಲಿಂ ಹೆಣ್ಣುಮಕ್ಕಳು ಶಾಲೆಗೆ ಹೋಗುವಾಗ ಸಮವಸ್ತ್ರದೊಂದಿಗೆ ತಲೆಗೆ ದುಪ್ಪಟ್ಟ ಥರ ಹಾಕುತ್ತಿದ್ದರು. ಅದಕ್ಕೆ ಸಂಬಂಧಿಸಿದ ಫೋಟೋಗಳು ಕೂಡ ನಮ್ಮ ಬಳಿ ಇವೆ. ಎಲ್ಲಾ ಸಮುದಾಯದ ಹೆಣ್ಣುಮಕ್ಕಳು ಯಾವುದೇ ವಿವಾದವಿಲ್ಲದೇ ಕೈಕೈ ಹಿಡಿದು ಶಾಲೆಗೆ ಹೋಗುತ್ತಿರುವ ಫೋಟೋಗಳು ಕೂಡ ಇವೆ. ಅದನ್ನು ಈಗ ವಿವಾದ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಿಜಬ್ ತೀರ್ಪು: ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ

    ಹೆಣ್ಣು ಮಕ್ಕಳು ಸಮವಸ್ತ್ರದ ಜೊತೆಗೆ ಅನೇಕ ಸಂದರ್ಭಗಳಲ್ಲಿ ತಮಗೆ ಬೇಕಾದಂತೆ ದುಪ್ಪಟ್ಟ ಧರಿಸುತ್ತಾರೆ. ಅದನ್ನು ವಿವಾದ ಮಾಡುವುದನ್ನು ಬಿಟ್ಟು ಸರ್ಕಾರ ಸಮವಸ್ತ್ರಕ್ಕೆ ಪೂರಕವಾಗಿ ದುಪ್ಪಟ್ಟ ಹಾಕಿ ಬರುವುದಕ್ಕೆ ಅವಕಾಶ ಮಾಡಿಕೊಡಲಿ. ತಲೆ ಮೇಲೆ ಸೆರಗಿನ ರೀತಿ ವಸ್ತ್ರವನ್ನು ಹಾಕಿಕೊಂಡು ಬರುವುದಕ್ಕೆ ಅವಕಾಶ ಮಾಡಿಕೊಟ್ಟರೆ ಮುಗಿದೇ ಹೋಯಿತು. ಅದನ್ನು ವಿವಾದ ಮಾಡುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.

    ಈ ಎಲ್ಲಾ ವಿಚಾರವನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ. ಸಿಎಂ, ಹೆಣ್ಣುಮಕ್ಕಳಿಗೆ ಸನ್ಮಾನ ಮಾಡುವಾಗಲೂ ತಲೆಗೆ ಬಟ್ಟೆ ಹಾಕಿಕೊಂಡಿದ್ದರು. ಕೆಲವರು ಸೊಂಟಕ್ಕೆ ದುಪ್ಪಟ್ಟು ಕಟ್ಟುತ್ತಾರೆ. ಆಟ ಆಡುವಾಗಲೂ ಬೇರೆ ವಿಧಾನದಲ್ಲಿ ದುಪ್ಪಟ್ಟ ಹಾಕುತ್ತಾರೆ. ಮಕ್ಕಳು ಆ ದುಪ್ಪಟ್ಟವನ್ನು ಯಾವ ರೀತಿಯ ಬೇಕಾದರೂ ಹಾಕಬಹುದು. ರಾಜಕೀಯಕ್ಕಾಗಿ ಅದನ್ನು ಬಳಸಿಕೊಳ್ಳಬಾರದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್ ತೀರ್ಪಿನ ವಿರುದ್ಧ ಬಂದ್ ಕರೆ ಕೊಟ್ಟವರು ಕಿಡಿಗೇಡಿಗಳು: ಆರ್.ಅಶೋಕ್

  • ತುಮಕೂರಲ್ಲಿ ಮುಸ್ಲಿಂ ಸಮುದಾಯದ ಅಂಗಡಿ ಮುಂಗಟ್ಟು ಬಂದ್

    ತುಮಕೂರಲ್ಲಿ ಮುಸ್ಲಿಂ ಸಮುದಾಯದ ಅಂಗಡಿ ಮುಂಗಟ್ಟು ಬಂದ್

    ತುಮಕೂರು: ಹಿಜಬ್ ವಿವಾದದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇದರ ಹಿನ್ನೆಲೆಯಲ್ಲಿ ಮುಸ್ಲಿಂ ಸಂಘಟನೆಗಳು ಇಂದು ಕರ್ನಾಟಕ ಬಂದ್‍ಗೆ ಕರೆ ನೀಡಿದ್ದಾರೆ.

    ಹೈಕೋರ್ಟ್ ತೀರ್ಪು ಸಂಬಂಧಿಸಿದಂತೆ ಮುಸ್ಲಿಂ ವ್ಯಾಪಾರಸ್ಥರು ನಗರದಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಮಾಡಿದ್ದಾರೆ. ಕಾಲ್ ಟ್ಯಾಕ್ಸ್ ಸರ್ಕಲ್, ಬಿ.ಜಿ.ಪಾಳ್ಯ ಸರ್ಕಲ್, ಗುಬ್ಬಿ ಗೇಟ್, ಕುಣಿಗಲ್ ರಿಂಗ್ ರಸ್ತೆಗಳಲ್ಲಿನ ಪ್ರಮುಖ ಗ್ಯಾರೇಜ್, ಆಟೋ ಮೊಬೈಲ್ಸ್ ಅಂಗಡಿಗಳು ಬಂದ್ ಆಗಿದ್ದು, ಉಳಿದಂತೆ ಯಥಾಸ್ಥಿತಿಯಲ್ಲಿ ವ್ಯಾಪಾರ ವಹಿವಾಟು ನಡೆಯುತ್ತಿದೆ. ಇದನ್ನೂ ಓದಿ: ಉಕ್ರೇನ್‌ ಮೇಯರ್‌ ಕಿಡ್ನಾಪ್ ಮಾಡಿದ ರಷ್ಯಾ ಸೇನೆ

    ಹಿಜಬ್ ವಿವಾದದ ಬಗ್ಗೆ ಹೈಕೋರ್ಟ್ ತೀರ್ಪು ನೀಡಿದ್ದು, ಸರ್ಕಾರದ ವಸ್ತ್ರ ಸಂಹಿತೆಯನ್ನು ಎತ್ತಿ ಹಿಡಿದಿದೆ. ಹೀಗಾಗಿ ನಮಗೆ ಕಾನೂನಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಮುಸಲ್ಮಾನ್ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಷ್ಯಾದ ಪಡೆಯಿಂದ ಕಿಡ್ನಾಪ್ ಆಗಿದ್ದ ಉಕ್ರೇನ್‍ ಮೇಯರ್ ಬಿಡುಗಡೆ

  • ಸಣ್ಣ ಬಟ್ಟೆ ಹಿಡಿದು ಬೇಧ ಭಾವ ಮೂಡಿಸುವವರೇ ನಮ್ದು ಜಾತ್ಯಾತೀತ ರಾಷ್ಟ್ರ ಅಂತಿದ್ದಾರೆ: ಮುಸ್ಲಿಮ್‌ ಮಹಿಳೆಯರು

    ಸಣ್ಣ ಬಟ್ಟೆ ಹಿಡಿದು ಬೇಧ ಭಾವ ಮೂಡಿಸುವವರೇ ನಮ್ದು ಜಾತ್ಯಾತೀತ ರಾಷ್ಟ್ರ ಅಂತಿದ್ದಾರೆ: ಮುಸ್ಲಿಮ್‌ ಮಹಿಳೆಯರು

    ನವದೆಹಲಿ: ಸಣ್ಣ ಬಟ್ಟೆಯನ್ನು ಮುಂದಿಟ್ಟುಕೊಂಡು ಬೇಧ ಭಾವ ಮೂಡಿಸುತ್ತಿರುವ ಜನರೇ, ನಮ್ಮದು ಜಾತ್ಯಾತೀತ ದೇಶ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ ಎಂದು ಮುಸ್ಲಿಂ ಮಹಿಳಾ ಸಮುದಾಯದ ತಂಡವೊಂದು ಆಕ್ರೋಶ ವ್ಯಕ್ತಪಡಿಸಿದೆ. ದೆಹಲಿಯಲ್ಲಿ ಮುಸ್ಲಿಂ ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ತಂಡವೊಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಹಿಜಬ್ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿದ ಆದೇಶದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

    ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ತಾರತಮ್ಯ ನಡೆಯುತ್ತಿದೆ. ಇದು ಹೊಸ ಬೆಳವಣಿಗೆಯಲ್ಲ. 2018 ರಿಂದಲೂ ಇಂತಹ ಹಲವು ಬೆಳವಣಿಗೆ ನಡೆಯಿತ್ತಿದೆ, ಉಡುಪಿ ಮಂಗಳೂರು ಭಾಗದಲ್ಲಿ ಇಂತಹ ಹಲವು ಘಟನೆಗಳು ನಡೆಯುತ್ತಿವೆ. ನಮ್ಮ ಶಿಕ್ಷಣ ಮತ್ತು ಧರ್ಮದಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಒತ್ತಡ ಹೇರಲಾಗುತ್ತಿದೆ. ನಾವು ಒಂದನ್ನು ಆಯ್ಕೆ ಮಾಡಲ್ಲ, ಎರಡನ್ನೂ ನಾವು ಆಯ್ಕೆ ಮಾಡಿಕೊಳ್ಳಲಿದ್ದೇವೆ. ಮುಸ್ಲಿಂ ವಿದ್ಯಾರ್ಥಿನಿಯರು ಶೈಕ್ಷಣಿಕ ವ್ಯವಸ್ಥೆಯಲ್ಲಿ ಹಿಂದೆ ಇದ್ದಾರೆ ಹಿಜಬ್ ಧರಿಸಿ ಶಾಲೆ ತೆರಳುವ ವಿದ್ಯಾರ್ಥಿಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿರುವುದು ಕಳವಳಕಾರಿ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ:   ಹಿಜಬ್ ಪರ ವಾದಿಗಳ ಬೆದರಿಕೆಗೆ ಸರ್ಕಾರ ಮಣಿಯದು: ಅಶ್ವತ್ಥನಾರಾಯಣ

    ಹೈಕೋರ್ಟ್‌ನಲ್ಲಿ ಹಿಜಬ್ ವಿರುದ್ಧ ಆದೇಶ ಬಂದಿದೆ, ಸುಪ್ರೀಂಕೋರ್ಟ್ ಹೋರಾಟ ಶುರುವಾಗಿದೆ ಇಲ್ಲಿ ನ್ಯಾಯ ಸಿಗುವ ಭರವಸೆ ಇದೆ. ವಾಸ್ತವದಲ್ಲಿ ನಮ್ಮಗೆ ಯೂನಿಫಾರಂ ಬಗ್ಗೆ ತರಕಾರು ಇತ್ತು ಕೋರ್ಟ್ ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಿತ್ತು, ಆದರೆ ಕೋರ್ಟ್ ಹಿಜಬ್ ಧಾರ್ಮಿಕವಾಗಿ ಕಡ್ಡಾಯವಲ್ಲ ಎಂದು ಹೇಳಿದೆ. ಇದನ್ನೂ ಓದಿ: ಪ್ರಜಾಪ್ರಭುತ್ವವನ್ನು ಹ್ಯಾಕ್ ಮಾಡಲು ಸೋಶಿಯಲ್ ಮೀಡಿಯಾ ದುರ್ಬಳಕೆ: ಸೋನಿಯಾ ಆತಂಕ

    ಕೆಲವರು ಹಿಜಬ್ ಬ್ಯಾನ್ ಆಗಿದೆ ಎಂದು ಸುದ್ದಿ ಹರಡುತ್ತಿದ್ದಾರೆ, ಹಿಜಬ್ ಬ್ಯಾನ್ ಆಗಿಲ್ಲ, ಜನರನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ, ನಾವು ಯೂನಿಫಾರಂ ವಿರುದ್ಧ ಇಲ್ಲ, ಎಲ್ಲರ ಸಂಸ್ಕೃತಿ ಒಳಗೊಂಡೊರುವ ಯೂನಿಫಾರಂ ಇರಬೇಕು ಎನ್ನುವುದು ನಮ್ಮ ಆಶಯ ಆದರೆ ಯೂನಿಫಾರಂ ಹೆಸರಿನಲ್ಲಿ ಮುಸ್ಲಿಂ ಸಮುದಾಯದ ಹೆಸರು ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ ಮುಸ್ಲಿಮರು ಯೂನಿಫಾರಂ ವಿರುದ್ದ ಎಂದು ಬಿಂಬಿಸಲಾಗುತ್ತಿದೆ.

    ಸಂಸ್ಕೃತಿ ಒಳಗೊಂಡ ಯೂನಿಫಾರಂ ಜಾರಿಯಾಗಬೇಕು, ಶೈಕ್ಷಣಿಕ ದೃಷ್ಟಿಕೋನದಿಂದ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು, ಮುಸ್ಲಿಂ ವಿದ್ಯಾರ್ಥಿನಿಯರು ಅವರ ಕುಟುಂಬಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲಬೇಕು, ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿಯರ ಮಾಹಿತಿ ಗೌಪ್ಯವಾಗಿ ಇಡಬೇಕು ಎಂದು ಇದೇ ವೇಳೆ ಅವರು ಸರ್ಕಾರಕ್ಕೆ ಒತ್ತಾಯ ಮಾಡಿದರು.

  • 15 ದಿನಗಳಲ್ಲಿ ಬೆಂಗಳೂರಿನ ಸಿಬಿಡಿ ಏರಿಯಾದ ಎಲ್ಲಾ ರಸ್ತೆಗಳ ಗುಂಡಿ ಮುಚ್ಚಿ: ಹೈಕೋರ್ಟ್ ಡೆಡ್‍ಲೈನ್

    15 ದಿನಗಳಲ್ಲಿ ಬೆಂಗಳೂರಿನ ಸಿಬಿಡಿ ಏರಿಯಾದ ಎಲ್ಲಾ ರಸ್ತೆಗಳ ಗುಂಡಿ ಮುಚ್ಚಿ: ಹೈಕೋರ್ಟ್ ಡೆಡ್‍ಲೈನ್

    ಬೆಂಗಳೂರು: ರಸ್ತೆ ಗುಂಡಿ ವಿಚಾರದಲ್ಲಿ ಬಿಬಿಎಂಪಿಯನ್ನು ಹೈಕೋರ್ಟ್ ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದೆ. ಮುಂದಿನ 15 ದಿನಗಳಲ್ಲಿ ಬೆಂಗಳೂರಿನ ಸಿಬಿಡಿ ಏರಿಯಾದ ಎಲ್ಲಾ ರಸ್ತೆಗಳ ಗುಂಡಿ ಮುಚ್ಚುವಂತೆ ಬಿಬಿಎಂಪಿಗೆ ಡೆಡ್‍ಲೈನ್ ನೀಡಿದೆ.

    ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸಿಜೆ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ, ಎಂಎಸ್ ಪಾಳ್ಯದಲ್ಲಿ ರಸ್ತೆ ಗುಂಡಿಗೆ ಬಲಿಯಾದ ಅಶ್ವಿನ್ ಪ್ರಕರಣವನ್ನು ಪ್ರಸ್ತಾಪಿಸಿತು. ರಸ್ತೆಗುಂಡಿಯಿಂದ ಆಗುವ ಪ್ರತಿಯೊಂದು ಸಾವು ನಮ್ಮಲ್ಲಿ ಅಪರಾಧಿ ಪ್ರಜ್ಞೆ ಮೂಡಿಸುತ್ತಿದೆ ಎಂದು ಬೇಸರ ಹೊರಹಾಕಿತು. ಇದನ್ನೂ ಓದಿ: ಹಿಜಬ್‌ ವಿವಾದದ ಹಿಂದೆ ಕಾಣದ ಕೈಗಳ ಕೈವಾಡ: ಹೈಕೋರ್ಟ್‌ ಶಂಕೆ

    ಬಿಬಿಎಂಪಿಯ ಗುಂಡಿ ಮುಚ್ಚುವ ನಿಮ್ಮ ಕಾರ್ಯ ಯೋಜನೆ ಸಮಾಧಾನ ತಂದಿಲ್ಲ. ಮೂರು ದಿನಗಳಲ್ಲಿ ಗುಂಡಿಗಳ ಸರ್ವೇ ಮುಗಿಸಿ, 15 ದಿನಗಳಲ್ಲಿ ಗುಂಡಿ ಮುಚ್ಚುವ ಕೆಲಸ ಯುದ್ಧೋಪಾದಿಯಲ್ಲಿ ನಡೆಸಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತರು, ಮುಖ್ಯ ಎಂಜಿನಿಯರ್‌ಗೆ ಸೂಚಿಸಿತು. ಇದನ್ನೂ ಓದಿ: ಹಿಜಬ್‌- ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ

  • ಹಿಜಬ್‌ ವಿವಾದದ ಹಿಂದೆ ಕಾಣದ ಕೈಗಳ ಕೈವಾಡ: ಹೈಕೋರ್ಟ್‌ ಶಂಕೆ

    ಹಿಜಬ್‌ ವಿವಾದದ ಹಿಂದೆ ಕಾಣದ ಕೈಗಳ ಕೈವಾಡ: ಹೈಕೋರ್ಟ್‌ ಶಂಕೆ

    ಬೆಂಗಳೂರು: ಒಟ್ಟು 129 ಪುಟಗಳ ಹೈಕೋರ್ಟ್ ತೀರ್ಪಿನಲ್ಲಿ ಹಿಜಬ್ ವಿವಾದದ ಹಿಂದೆ ಕಾಣದ ಕೈಗಳ ಕೈವಾಡವಿರುವ ಬಗ್ಗೆಯೂ ಪೂರ್ಣ ಪೀಠ ಶಂಕೆ ವ್ಯಕ್ತಪಡಿಸಿದೆ. ಸಮಾಜದ ಸಾಮರಸ್ಯ ಕದಡುವ ಹುನ್ನಾರ ನಡೆದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ.

    126 ಮತ್ತು 127ನೇ ಪುಟದಲ್ಲಿ ದಿಢೀರ್‌ ಆಗಿ ಈ ವಿವಾದ ಯಾಕೆ ಸೃಷ್ಟಿಯಾಯಿತು ಎಂದು ಹೈಕೋರ್ಟ್‌ಪ್ರಶ್ನಿಸಿದೆ. ಇದನ್ನೂ ಓದಿ: ಹಿಜಬ್‌ ಧರಿಸುವುದು ಇಸ್ಲಾಂ ಧರ್ಮದಲ್ಲಿ ಅತ್ಯಗತ್ಯ: ಹಿರಿಯ ವಕೀಲ ಎ.ಎಂ.ಧಾರ್‌

    ತೀರ್ಪಿನಲ್ಲಿ ಏನಿದೆ?
    2004ರಿಂದಲೂ ಸಮವಸ್ತ್ರ ಕಡ್ಡಾಯ ಆದೇಶವಿದ್ದು ಈ ವಿವಾದ ಇದ್ದಕ್ಕಿದ್ದಂತೆ ಚಾಲ್ತಿಗೆ ಬಂದಿದ್ಯಾಕೆ ಎಂದು ಪ್ರಶ್ನಿಸಿದೆ. ಸಮಾಜದಲ್ಲಿ ಶಾಂತಿ ಕದಡುವ ಯತ್ನದ ಬಗ್ಗೆ ಅನುಮಾನವಿದೆ. ಕಾಣದ ಕೈಗಳ ಕೈವಾಡ ಇರುವ ಬಗ್ಗೆ ಶಂಕೆ ಇದೆ. ಇಡೀ ಪ್ರಕರಣದಲ್ಲಿ ನಮಗೆ ದಿಗ್ಬ್ರಮೆ ಆಗುತ್ತಿದೆ. ಇದನ್ನೂ ಓದಿ: ನಾವು ಕುರಾನ್ ಫಾಲೋ ಮಾಡುತ್ತೇವೆ, ನಮ್ಮ ನಿಲುವಿನಲ್ಲಿ ಕಾಂಪ್ರಮೈಸ್ ಇಲ್ಲ: ಆಲಿಯಾ ಅಸ್ಸಾ

    ಫೆ. 5ರ ಸುತ್ತೋಲೆಗೆ ಮುನ್ನವೇ ವಿದ್ಯಾರ್ಥಿನಿಯರಿಂದ ಪಿಐಎಲ್ ಸಲ್ಲಿಕೆಯಾಗಿದೆ. 2021ರ ಡಿಸೆಂಬರ್ ಮೊದಲ ವಾರದಲ್ಲೇ ಕಾಲೇಜಲ್ಲಿ ಹಿಜಬ್ ವಿವಾದ ಸೃಷ್ಟಿಗೆ ಯತ್ನ ನಡೆದಿದೆ. ಅರ್ಜಿದಾರರ ಕಾಲೇಜಿನ ಪ್ರಾಂಶುಪಾಲರಿಗೆ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದ್ದು ಈ ವಿಷಯದಲ್ಲಿ ಸಂಯಮ ಪಾಲಿಸಲು ಬಯಸುತ್ತೇವೆ.