Tag: high court

  • ಸರ್ಕಾರದ ತೀರ್ಮಾನವನ್ನು ಕೋರ್ಟ್ ಎತ್ತಿಹಿಡಿದಿರುವುದಕ್ಕೆ ಸ್ವಾಗತ: ಈಶ್ವರಪ್ಪ

    ಸರ್ಕಾರದ ತೀರ್ಮಾನವನ್ನು ಕೋರ್ಟ್ ಎತ್ತಿಹಿಡಿದಿರುವುದಕ್ಕೆ ಸ್ವಾಗತ: ಈಶ್ವರಪ್ಪ

    ಶಿವಮೊಗ್ಗ: ಸರ್ಕಾರದ ತೀರ್ಮಾನವನ್ನು ಕೋರ್ಟ್ ಎತ್ತಿಹಿಡಿದಿರುವುದಕ್ಕೆ ಸ್ವಾಗತ ಮಾಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಬ್ ಬಗ್ಗೆ ಕೋರ್ಟ್ ಕೊಟ್ಟಿರುವ ತೀರ್ಮಾನವನ್ನು ಸಂತೋಷದಿಂದ ಸ್ವಾಗತಿಸುತ್ತೇನೆ. ಗೊಂದಲ ನಿವಾರಣೆ ಆಗುವ ದಿಕ್ಕಿನಲ್ಲಿ ಎಲ್ಲರೂ ಪ್ರಯತ್ನಿಸಬೇಕು. ಮಕ್ಶಳು ಶಾಲೆಗೆ ಹೋಗುವ ಬಗ್ಗೆ ಬುದ್ದಿ ವಾದ ಹೇಳಬೇಕು. ಶಿಕ್ಷಣ ಹಾಳಾಗಬಾರದು. ಕೋರ್ಟಿನ ತೀರ್ಪಿಗೆ ಬದ್ದವಾಗಬೇಕು. ಸರ್ಕಾರದ ತೀರ್ಮಾನವನ್ನು ಕೋರ್ಟ್ ಎತ್ತಿಹಿಡಿದಿರುವುದಕ್ಕೆ ಸ್ವಾಗತ ಮಾಡುತ್ತೇನೆ. ಮಕ್ಕಳಿಗೆ ಶಿಕ್ಷಣ ವ್ಯವಸ್ಥೆ ತೊಂದರೆ ಆಗಿದೆ ಎಂದು ಹೇಳುವವರು ಈಗ ಯೋಚನೆ ಮಾಡಬೇಕು. ಕೋರ್ಟ್ ಮಧ್ಯಂತರ ತೀರ್ಪು ನೀಡಿತ್ತು. ಆ ತೀರ್ಪನ್ನು ಫಾಲೋ ಮಾಡಿದ್ದರೆ ಈ ಗೊಂದಲ ಆಗುತ್ತಿರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಹಿಜಬ್‌ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್‌ ಐತಿಹಾಸಿಕ ತೀರ್ಪು

    ಸಿ.ಟಿ.ರವಿ ಹೇಳಿಕೆ ವಿಚಾರ: ಒಂದು ವರ್ಷಕ್ಕೆ ಚುನಾವಣೆ ಇದೆ. ಸಂಪುಟದಲ್ಲಿ 4 ಸ್ಥಾನ ಖಾಲಿ ಇದೆ. ಕೇಂದ್ರದ ನಾಯಕರು ಬಹಳ ಬುದ್ದಿವಂತರಾಗಿದ್ದಾರೆ. ಅದಕ್ಕೆ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶವೇ ಸಾಕ್ಷಿ. ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರದ ನಾಯಕರು ನಿರ್ಧರಿಸುತ್ತಾರೆ. ಒಬ್ಬೊಬ್ಬರು ಒಂದೊಂದು ಅಭಿಪ್ರಾಯ ಹೇಳುವುದು ತಪ್ಪಲ್ಲ. ಕೇಂದ್ರದ ನಾಯಕರ ತೀರ್ಮಾನಕ್ಕೆ ಬದ್ದ. ಒಳ್ಳೆಯ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬ ಭರವಸೆ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ, ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು: ಬೊಮ್ಮಾಯಿ

  • ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ, ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು: ಬೊಮ್ಮಾಯಿ

    ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ, ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು: ಬೊಮ್ಮಾಯಿ

    ಬೆಂಗಳೂರು: ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ. ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು. ಸಮಾಜದಲ್ಲಿ ಶಾಂತಿಯನ್ನು ಕಾಪಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

    ಹೈ ಕೋಟ್ ಹಿಜಬ್ ತೀರ್ಪು ನೀಡಿದ ಹಿನ್ನೆಲೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಬ್‌ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ. ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ. ತ್ರೀ ಸದಸ್ಯ ಪೀಠ ನೀಡಿರುವ ತೀರ್ಪನ್ನು ಎಲ್ಲರೂ ಸಹ ಪಾಲಿಸಬೇಕು. ಇದನ್ನು ಅನುಷ್ಠಾನಗೊಳಿಸುವ ಸಮಯದಲ್ಲಿ ಎಲ್ಲರೂ ಸಹಕರಿಸಿ ಶಾಂತಿಯನ್ನು ಪಾಲಿಸಬೇಕು. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಬಹಳ ಮುಖ್ಯ. ಹಾಗಾಗಿ ನಾನು ಎಲ್ಲ ಜನರಿಗೂ, ಸಮುದಾಯ ನಾಯಕರಿಗೂ, ಪಾಲಕರಿಗೂ, ಶಿಕ್ಷಕರಿಗೂ ಹಾಗೂ ವಿದ್ಯಾರ್ಥಿಗಳು ಈ ತೀರ್ಪನ್ನು ಒಪ್ಪಿಕೊಂಡು ಶಾಂತಿ ಸುವ್ಯಸ್ಥೆಯನ್ನು ಕಾಪಾಡಬೇಕು ಎಂದು ನಾನು ಎಲ್ಲರಲ್ಲಿಯೂ ಕಳಕಳಿಯಿಂದ ವಿನಂತಿಸುತ್ತೇನೆ. ಇದನ್ನೂ ಓದಿ: 6 ವಿದ್ಯಾರ್ಥಿನಿಯರು ಹಠ ಮಾಡದೇ ಶಾಲೆಗೆ ಬರ್ಬೇಕು, ಸಮವಾದ ಶಿಕ್ಷಣ ನೀಡುತ್ತೇವೆ: ರಘುಪತಿ ಭಟ್

    ಎಲ್ಲ ವಿದ್ಯಾರ್ಥಿಗಳು ಹೈ ಕೋರ್ಟ್ ತೀರ್ಪನ್ನು ಪಾಲಿಸಿ. ನಿಮ್ಮ ಶಿಕ್ಷಣ ನಿಮಗೆ ಬಹಳ ಮುಖ್ಯ. ಪರೀಕ್ಷೆಗೆ ಹಾಜರಾಗದೇ ಇರುವುದನ್ನು ಬಿಟ್ಟು. ಎಲ್ಲ ವಿದ್ಯಾರ್ಥಿಗಳು ತರಗತಿಗೆ, ಪರೀಕ್ಷೆಗೆ ಆಗಮಿಸಿ. ಒಂದು ವೇಳೆ ಹೈಕೋರ್ಟ್ ತೀರ್ಪನ್ನು ನಿರಾಕರಿಸಿ ಕಾನೂನು ಸುವ್ಯಸ್ಥೆಯನ್ನು ಕೈಗೆತ್ತಿಕೊಂಡರೆ ನಮ್ಮ ಗೃಹ ಇಲಾಖೆ ಕಠಿಣವಾದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಹಿಜಬ್‌ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್‌ ಐತಿಹಾಸಿಕ ತೀರ್ಪು

  • ಹಿಜಬ್‌ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್‌ ಐತಿಹಾಸಿಕ ತೀರ್ಪು

    ಹಿಜಬ್‌ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್‌ ಐತಿಹಾಸಿಕ ತೀರ್ಪು

    ಬೆಂಗಳೂರು: ಹಿಜಬ್‌ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ.

    ಎಲ್ಲರೂ ಕೋರ್ಟ್‌ ಆದೇಶವನ್ನು ಪಾಲಿಸಬೇಕು ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ತರಗತಿಗಳಲ್ಲಿ ಹಿಜಬ್‌ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಪೀಠ ವಜಾ ಮಾಡಿದೆ.  ಇದನ್ನೂ ಓದಿ: ಶಿಕ್ಷಣದ ಪರ ತೀರ್ಪು ಬರಬಹುದು: ಯಶ್ ಪಾಲ್ ಸುವರ್ಣ ವಿಶ್ವಾಸ

    ರಾಜ್ಯದಲ್ಲಿ ಹಿಜಬ್ ವಿವಾದದ ಕಿಡಿ ಹೊತ್ತಿದ್ದೇ ಉಡುಪಿಯ ಸರ್ಕಾರಿ ಪಿಯು ಕಾಲೇಜಿನಿಂದ. 2021 ಡಿಸೆಂಬರ್ ತಿಂಗಳಿನಲ್ಲಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಹಿಜಬ್ ಬೇಡಿಕೆ ಶುರುವಾಗಿತ್ತು. ಮನವಿ ಪತ್ರಗಳಿಗೆ ಪುರಸ್ಕಾರ ನೀಡದ ಪ್ರಾಂಶುಪಾಲರು, ಹಿಜಬ್ ಧರಿಸಿದ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರಗೆ ಹಾಕಿದ್ದರು. ಡಿಸೆಂಬರ್ 31ಕ್ಕೆ ವಿದ್ಯಾರ್ಥಿನಿಯರು ಕಾಲೇಜಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

    ಇದಾಗಿ ಒಂದು ತಿಂಗಳ ನಂತರ ಅಂದರೆ ಜನವರಿ 31ರಂದು ವಿದ್ಯಾರ್ಥಿನಿ ಅಲ್ಮಾಸ್ ಹೈಕೋರ್ಟ್‌ ಮೊರೆ ಹೋಗಿದ್ದರು. ಇದಾದ ಬಳಿಕ ರಾಜ್ಯದಲ್ಲಿ ಧರ್ಮ ಸಂಘರ್ಷವೇ ಶುರುವಾಯ್ತು.

    ಅರ್ಜಿದಾರರ ಪರ ವಾದ ಏನಿತ್ತು?
    ಸರ್ಕಾರದ ಸಮವಸ್ತ್ರ ಆದೇಶ ಸಂಪೂರ್ಣ ಕಾನೂನು ಬಾಹಿರ. ಹಿಜಬ್‌ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಆಚರಣೆಯಾಗಿದೆ. ಕಾಲೇಜಿಗೆ ದಾಖಲಾದಾಗಿನಿಂದ ಹಿಜಬ್ ಧರಿಸುತ್ತಿದ್ದಾರೆ. ಸಮವಸ್ತ್ರ ಬಣ್ಣದ ಹಿಜಬ್‍ನ್ನೇ ಧರಿಸ್ತಿದ್ದಾರೆ. ಹಿಜಬ್, ಬುರ್ಖಾ ಧರಿಸಬೇಕು ಎಂದು ಧರ್ಮಗ್ರಂಥದಲ್ಲಿ ಇದೆ. ಶಾಸಕರಿಗೆ ಸಮವಸ್ತ್ರದ ಅಧಿಕಾರ ನೀಡಿದ್ದು ಸರಿಯಲ್ಲ. ಸರ್ಕಾರ ತನ್ನ ಜವಾಬ್ದಾರಿಯನ್ನು ಇತರರಿಗೆ ಹಸ್ತಾಂತರ ಮಾಡುವಂತಿಲ್ಲ.

    ಕಾಲೇಜು ಅಭಿವೃದ್ಧಿ ಮಂಡಳಿಗೆ ಶಾಸನಬದ್ಧ ಅಧಿಕಾರವಿಲ್ಲ. ಸರ್ಕಾರ ತನ್ನ ಅಧಿಕಾರವನ್ನು ಗೆ ಹಸ್ತಾಂತರಿಸಲು ಸಾಧ್ಯವಿಲ್ಲ. ಶಾಸಕರ ನೇತೃತ್ವದ ಅಭಿವೃದ್ಧಿ ಸಮಿತಿ ಸಮರ್ಥಿಸಿಕೊಂಡಿದ್ದಾರೆ. ಸಿಡಿಸಿಯ ಇತರೆ ಸದಸ್ಯರನ್ನು ಶಾಸಕರೇ ಆಯ್ಕೆ ಮಾಡುತ್ತಾರೆ. ಶಾಸಕರಿಗೆ ಕಾಲೇಜಿನ ಆಡಳಿತ ನೀಡುವುದೇ ಕಾನೂನುಬಾಹಿರ.

    ಸರ್ಕಾರದ ವಾದ ಏನಿತ್ತು?
    ಧಾರ್ಮಿಕ ಸಂಕೇತಗಳನ್ನು ಶಿಕ್ಷಣ ಸಂಸ್ಥೆಗಳಲ್ಲಿ ಬಳಕೆ ಮಾಡಬಾರದು ಎಂಬುದು ಸರ್ಕಾರದ ನಿಲುವು. ಆದರೆ ಯಾವುದನ್ನು ಧಾರ್ಮಿಕ ಸಂಕೇತ ಎಂದು ಪರಿಗಣಿಸಬೇಕು. ಯಾವುದನ್ನು ಪರಿಗಣಿಸಬಾರದು ಎಂಬುದನ್ನು ಶಿಕ್ಷಣ ಸಂಸ್ಥೆಗಳಿಗೆ ಬಿಡಲಾಗಿದೆ

    ಸಿಡಿಸಿ 1983ರ ಶಿಕ್ಷಣ ಕಾಯ್ದೆಯ ಅನುಗುಣವಾಗಿ ಸಮವಸ್ತ್ರ ಜಾರಿಗೆ ತಂದಿದೆ. ಸಮವಸ್ತ್ರ ಜಾರಿಗೆ ತರುವುದು ಸಮಾನತೆಗಾಗಿ. ಸಿಡಿಸಿಗೆ ಸಮವಸ್ತ್ರ ಜಾರಿಗೆ ತರುವ ಅವಕಾಶ 2014ರಲ್ಲಿ ಒಪ್ಪಿಗೆ ಇತ್ತು. ಸಿಡಿಸಿಗೆ ಕಾಲೇಜಿನ ಅಭಿವೃದ್ಧಿ ಸಮಿತಿ, ಕಾಲೇಜಿನ ಬಗ್ಗೆ ತೀರ್ಮಾನಿಸುವ ಅಧಿಕಾರವಿದೆ. ಸಿಡಿಸಿಯಲ್ಲಿ ಒಬ್ಬರೇ ಅಧಿಕಾರ ಚಲಾಯಿಸುವುದಿಲ್ಲ. ಶಾಲೆಯ ಮಕ್ಕಳು, ಪೋಷಕರು, ಶಾಸಕರು, ಉಪನ್ಯಾಸಕರು ಎಲ್ಲರು ಇರುತ್ತಾರೆ.

  • ಶಿಕ್ಷಣದ ಪರ ತೀರ್ಪು ಬರಬಹುದು: ಯಶ್ ಪಾಲ್ ಸುವರ್ಣ ವಿಶ್ವಾಸ

    ಶಿಕ್ಷಣದ ಪರ ತೀರ್ಪು ಬರಬಹುದು: ಯಶ್ ಪಾಲ್ ಸುವರ್ಣ ವಿಶ್ವಾಸ

    ಉಡುಪಿ: ಹಿಜಬ್ ಕುರಿತಂತೆ ಕಾಲೇಜು ಆಡಳಿತ ಮಂಡಳಿ ಪರವಾಗಿ ತೀರ್ಪು ಬರಬಹುದು. ಯಾವುದೇ ಧಾರ್ಮಿಕ ಆಚರಣೆಗೆ ಶಿಕ್ಷಣ ಸಂಸ್ಥೆಯಲ್ಲಿ ಅವಕಾಶ ಇಲ್ಲ. ಕೆಲ ಮತಾಂದ ಶಕ್ತಿಗಳಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಮಸ್ಯೆ ಆಯ್ತು ಎಂದು ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಹೇಳಿದರು.

    ಉಡುಪಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್‍ನ ಮಧ್ಯಂತರ ತೀರ್ಪಿನಲ್ಲಿ ಉಲ್ಲೇಖ ಆಗಿದೆ. ಮತಾಂಧ ಶಕ್ತಿಗಳ, ದೇಶದ್ರೋಹಿ ಸಂಘಟನೆಯ ಕುಮ್ಮಕ್ಕಿನಿಂದ ವಿವಾದ ವ್ಯಾಪಿಸಿತು. ಒಂದು ಕಾಲೇಜಿನ ವಿಚಾರ ದೇಶ ಮಟ್ಟದಲ್ಲಿ ಚರ್ಚೆ ಆಯಿತು. ಲಕ್ಷಾಂತರ ವಿದ್ಯಾರ್ಥಿಗಳಿಗೆ ಹಿಜಾಬ್ ವಿವಾದದಿಂದ ಸಮಸ್ಯೆಯಾಗಿದೆ. ಹೈಕೋರ್ಟ್ ಶಿಕ್ಷಣಕ್ಕೆ ಒತ್ತು ಕೊಡುವ ತೀರ್ಪು ಕೊಡುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಧಾರ್ಮಿಕ ಆಚರಣೆ ಶಿಕ್ಷಣಕ್ಕಿಂತ ಮುಖ್ಯ ಅಲ್ಲ: ಕೋರ್ಟ್ ತೀರ್ಪು ಏನೇ ಬಂದರೂ ನಾವು ಅದನ್ನು ಸ್ವೀಕರಿಸುತ್ತೇವೆ. ಎಲ್ಲರೂ ನಮ್ಮ ಸಂವಿಧಾನಬದ್ಧ ಕಾನೂನನ್ನ ಗೌರವಿಸಬೇಕು. ಧಾರ್ಮಿಕ ಆಚರಣೆಗಳು ಶಿಕ್ಷಣಕ್ಕಿಂತ ಮುಖ್ಯ ಅಲ್ಲ. ದೇಶದ ಅಭಿವೃದ್ಧಿ ಚಿಂತನೆಯಲ್ಲಿ ಶಿಕ್ಷಣ ಅತಿಮುಖ್ಯ. ಧಾರ್ಮಿಕ ಆಚರಣೆಗೆ ಶಿಕ್ಷಣ ಸಂಸ್ಥೆಯಲ್ಲಿ ಸೀಮಿತ ಅವಕಾಶ ಇರಬೇಕು. ನಮಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಎಲ್ಲಾ ಅವಕಾಶಗಳು ಇವೆ. ಸಂವಿಧಾನಾತ್ಮಕ ವಿಚಾರ ಆಗಿರುವುದರಿಂದ ರಾಜ್ಯದಲ್ಲೇ ಸೂಕ್ತ ತೀರ್ಪು ಬರಬಹುದು. ಸುಪ್ರೀಂಕೋರ್ಟ್ ಮೆಟ್ಟಿಲೇರಿದರೂ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಎತ್ತಿ ಹಿಡಿಯುವ ಸಾಧ್ಯತೆ ಹೆಚ್ಚು ಎಂದರು. ಇದನ್ನೂ ಓದಿ:  ಹಿಜಬ್ ವಿವಾದ- ಈ ಹಿಂದೆ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಹೇಗಿತ್ತು ವಾದ-ಪ್ರತಿವಾದ..?

    ಹಿಜಬ್ ವಿವಾದ ಶಿಕ್ಷಣ ವ್ಯವಸ್ಥೆಗೆ ಕೊಳ್ಳಿ ಇಡುವ ಬೆಳವಣಿಗೆ. ಆರು ಜನ ವಿದ್ಯಾರ್ಥಿನಿಯರು ಬಲಿಪಶುವಾಗಿದ್ದಾರೆ. ದೇಶದ್ರೋಹಿ ಸಂಘಟನೆಗಳು ವಿದ್ಯಾರ್ಥಿಗಳ ಶಿಕ್ಷಣವನ್ನು ಕಸಿದಿವೆ. ಕ್ಷುಲ್ಲಕ ಕಾರಣಕ್ಕೆ ಇಡೀ ರಾಜ್ಯದಲ್ಲಿ ಗೊಂದಲ ಸೃಷ್ಟಿಯಾಯಿತು ಎಂದು ಕಿಡಿಕಾರಿದರು. ಇದನ್ನೂ ಓದಿ: ತೀರ್ಪು ಏನೇ ಬಂದ್ರೂ ಗೌರವಿಸಿ, ಶಾಂತಿ ಕಾಪಾಡಿ: ಗೃಹ ಸಚಿವರ ಮನವಿ

    ಹಿಜಬ್ ವಿಚಾರದ ತೀರ್ಪು ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಂದ ಪೋನ್ ಕರೆ ಬಂದಿದ್ದು, ಯಶ್ ಪಾಲ್ ಸುವರ್ಣ ಬೆಂಗಳೂರಿಗೆ ಹೊರಟಿದ್ದಾರೆ.

  • ಹಿಜಬ್ ವಿವಾದ- ಈ ಹಿಂದೆ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಹೇಗಿತ್ತು ವಾದ-ಪ್ರತಿವಾದ..?

    ಹಿಜಬ್ ವಿವಾದ- ಈ ಹಿಂದೆ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಹೇಗಿತ್ತು ವಾದ-ಪ್ರತಿವಾದ..?

    ಬೆಂಗಳೂರು: ರಾಜ್ಯದಲ್ಲಿ ಧರ್ಮ ಸಂಘರ್ಷಕ್ಕೆ ಕಾರಣವಾಗಿದ್ದ ಹಿಜಬ್ ವಿವಾದದ ತೀರ್ಪು ಇಂದು ಪ್ರಕಟವಾಗಲಿದೆ. ಹಿಜಬ್ ಧಾರ್ಮಿಕ ಹಕ್ಕಿಗಾಗಿ ಹೈಕೋರ್ಟ್ ಮೆಟ್ಟಿಲೇರುವ ವಿದ್ಯಾರ್ಥಿಗಳು ಮತ್ತು ಇಡೀ ದೇಶ ಹೈಕೋರ್ಟ್ ತೀರ್ಪಿನ ಮೇಲೆ ಕಣ್ಣಿಟ್ಟಿದೆ.

    ರಾಜ್ಯದಲ್ಲಿ ಹಿಜಬ್ ವಿವಾದದ ಕಿಡಿ ಹೊತ್ತಿದ್ದೇ ಉಡುಪಿಯ ಸರ್ಕಾರಿ ಪಿಯು ಕಾಲೇಜಿನಿಂದ. 2021 ಡಿಸೆಂಬರ್ ತಿಂಗಳಿನಲ್ಲಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಹಿಜಬ್ ಬೇಡಿಕೆ ಶುರುವಾಗಿತ್ತು. ಮನವಿ ಪತ್ರಗಳಿಗೆ ಪುರಸ್ಕಾರ ನೀಡದ ಪ್ರಾಂಶುಪಾಲರು, ಹಿಜಬ್ ಧರಿಸಿದ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರಗೆ ಹಾಕಿದ್ದರು. ಡಿಸೆಂಬರ್ 31ಕ್ಕೆ ವಿದ್ಯಾರ್ಥಿನಿಯರು ಕಾಲೇಜಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

    ಇದಾಗಿ ಒಂದು ತಿಂಗಳ ನಂತರ ಅಂದ್ರೆ ಜನವರಿ 31ರಂದು ಹೈಕೋರ್ಟ್‍ನಲ್ಲಿ ವಿದ್ಯಾರ್ಥಿನಿ ಅಲ್ಮಾಸ್ ದೂರು ನೀಡಿದ್ದರು. ಇದಾದ ಬಳಿಕ ರಾಜ್ಯದಲ್ಲಿ ಧರ್ಮ ಸಂಘರ್ಷವೇ ಶುರುವಾಯ್ತು. ಇಷ್ಟೆಲ್ಲ ವಿವಾದ ಎಬ್ಬಿಸಿರುವ ಹಿಜಬ್ ಕುರಿತ ತೀರ್ಪು ಬರಲಿದೆ. ತೀರ್ಪು ಯಾರ ಪರವೇ ಬಂದರೂ ಸುಪ್ರೀಂಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.

    SUPREME COURT

    ಹೇಗಿತ್ತು ವಾದ- ಪ್ರತಿವಾದ..?
    ಕಾಲೇಜಿಗೆ ದಾಖಲಾದಾಗಿನಿಂದ ಹಿಜಬ್ ಧರಿಸ್ತಿದ್ದಾರೆ. ಸಮವಸ್ತ್ರ ಬಣ್ಣದ ಹಿಜಬ್‍ನ್ನೇ ಧರಿಸ್ತಿದ್ದಾರೆ. ಹಿಜಬ್, ಬುರ್ಖಾ ಧರಿಸಬೇಕು ಎಂದು ಧರ್ಮಗ್ರಂಥದಲ್ಲಿ ಇದೆ. ಶಾಸಕರಿಗೆ ಸಮವಸ್ತ್ರದ ಅಧಿಕಾರ ನೀಡಿದ್ದು ಸರಿಯಲ್ಲ. ಸರ್ಕಾರ ತನ್ನ ಜವಾಬ್ದಾರಿಯನ್ನು ಇತರರಿಗೆ ಹಸ್ತಾಂತರ ಮಾಡುವಂತಿಲ್ಲ. ಕೇರಳ, ಮದ್ರಾಸ್, ಬಾಂಬೆ ಕೋರ್ಟ್‍ಗಳ ತೀರ್ಪನ್ನು ಉಲ್ಲೇಖಿಸಿ ವಿದ್ಯಾರ್ಥಿ ಪರ ವಕೀಲ ದೇವದತ್ ಕಾಮತ್ ವಾದ ಮಂಡಿಸಿದ್ದರು.

    ಕಾಲೇಜು ಅಭಿವೃದ್ಧಿಗೆ ಶಾಸನಬದ್ಧ ಅಧಿಕಾರವಿಲ್ಲ. ಸರ್ಕಾರ ತನ್ನ ಅಧಿಕಾರವನ್ನು ಗೆ ಹಸ್ತಾಂತರಿಸಲು ಸಾಧ್ಯವಿಲ್ಲ. ಶಾಸಕರ ನೇತೃತ್ವದ ಅಭಿವೃದ್ಧಿ ಸಮಿತಿ ಸಮರ್ಥಿಸಿಕೊಂಡಿದ್ದಾರೆ. ಸಿಡಿಸಿಯ ಇತರೆ ಸದಸ್ಯರನ್ನು ಶಾಸಕರೇ ಆಯ್ಕೆ ಮಾಡುತ್ತಾರೆ. ಶಾಸಕರಿಗೆ ಕಾಲೇಜಿನ ಆಡಳಿತ ನೀಡುವುದೇ ಕಾನೂನುಬಾಹಿರ ಎಂದು ಅರ್ಜಿದಾರರ ಪರ ವಕೀಲ ರವಿವರ್ಮ ಕುಮಾರ್ ವಾದಿಸಿದ್ದರು. ಇದನ್ನೂ ಓದಿ: ತೀರ್ಪು ಏನೇ ಬಂದ್ರೂ ಗೌರವಿಸಿ, ಶಾಂತಿ ಕಾಪಾಡಿ: ಗೃಹ ಸಚಿವರ ಮನವಿ

    ಸಿಡಿಸಿ 1983ರ ಶಿಕ್ಷಣ ಕಾಯ್ದೆಯ ಅನುಗುಣವಾಗಿ ಸಮವಸ್ತ್ರ ಜಾರಿಗೆ ತಂದಿದೆ. ಸಮವಸ್ತ್ರ ಜಾರಿಗೆ ತರೋದು ಸಮಾನತೆಗಾಗಿ. ಸಿಡಿಸಿಗೆ ಸಮವಸ್ತ್ರ ಜಾರಿಗೆ ತರುವ ಅವಕಾಶ 2014ರಲ್ಲಿ ಒಪ್ಪಿಗೆ ಇತ್ತು. ಸಿಡಿಸಿಗೆ ಕಾಲೇಜಿನ ಅಭಿವೃದ್ಧಿ ಸಮಿತಿ, ಕಾಲೇಜಿನ ಬಗ್ಗೆ ತೀರ್ಮಾನಿಸುವ ಅಧಿಕಾರವಿದೆ. ಸಿಡಿಸಿಯಲ್ಲಿ ಒಬ್ಬರೇ ಅಧಿಕಾರ ಚಲಾಯಿಸುವುದಿಲ್ಲ. ಶಾಲೆಯ ಮಕ್ಕಳು, ಪೋಷಕರು, ಶಾಸಕರು, ಉಪನ್ಯಾಸಕರು ಎಲ್ಲರೂ ಇರ್ತಾರೆ ಎಂದು ಶಾಲಾ ಆಡಳಿತ ಮಂಡಳಿ ಪರ ವಕೀಲ ಸಜ್ಜನ್ ಪೂವಯ್ಯ ವಾದಿಸಿದ್ದರು.

    ಸರ್ಕಾರಿ ಪರ ವಕೀಲ ಪ್ರಭುಲಿಂಗ ನಾವಡಗಿ ಅವರು, ವಿದ್ಯಾರ್ಥಿನಿಯರು, ಹಿಜಬ್ ಧರಿಸುವುದು ಧಾರ್ಮಿಕ ಆಚರಣೆಯಾಗಿದೆ ಎಂಬುದನ್ನು ಸಾಬೀತುಪಡಿಸಿಲ್ಲ. ಸಮವಸ್ತ್ರ ಸಂಹಿತೆಯ ಸರ್ಕಾರದ ವಾದಕ್ಕೆ ಹೆಚ್ಚಿನ ತೂಕವಿದೆ. ವಿಷಯವು ಧರ್ಮದ ಮೂಲ ಅಂಶದ ಭಾಗವಾಗಿದ್ದರೆ ಮಾತ್ರ ಆಚರಣೆ ಕಡ್ಡಾಯವಾಗುತ್ತದೆ. ಈ ಪ್ರಕರಣದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿ ವಾದ ಮಂಡಿಸಲಾಗ್ತಿದೆ ಎಂದು ಪ್ರತಿವಾದ ಮಾಡಿದ್ದರು.

  • ತೀರ್ಪು ಏನೇ ಬಂದ್ರೂ ಗೌರವಿಸಿ, ಶಾಂತಿ ಕಾಪಾಡಿ: ಗೃಹ ಸಚಿವರ ಮನವಿ

    ತೀರ್ಪು ಏನೇ ಬಂದ್ರೂ ಗೌರವಿಸಿ, ಶಾಂತಿ ಕಾಪಾಡಿ: ಗೃಹ ಸಚಿವರ ಮನವಿ

    ಬೆಂಗಳೂರು: ರಾಜ್ಯಾದ್ಯಂತ ಕಿಡಿ ಹೊತ್ತಿಸಿದ್ದ ಹಿಜಬ್-ಕೇಸರಿ ಶಾಲು ವಿವಾದ ಸಂಬಂಧ ಸುದೀರ್ಘ 11 ದಿನ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು ತ್ರಿಸದಸ್ಯ ಪೀಠದಿಂದ ತೀರ್ಪು ಪ್ರಕ. ಈ ಹಿನ್ನೆಲೆಯಲ್ಲಿ ಶಂತಿ ಕಾಪಾಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿಕೊಂಡಿದ್ದಾರೆ.

    ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಗೃಹ ಸಚಿವರು, ನಮ್ಮ ಪೊಲೀಸ್ ಇಲಾಖೆ ಎಲ್ಲಾ ರೀತಿಯ ಸಿದ್ಧತೆಯಲ್ಲೇ ಇರಲಿದೆ. ಇಂದು ಹಿಬಾಜ್ ತೀರ್ಪು ಯಾವ ರೀತಿಯಲ್ಲಿ ಬರಲಿ, ಜನ ಅದನ್ನ ಸ್ವೀಕಾರ ಮಾಡಬೇಕು, ತೀರ್ಪಿನ ಬಗ್ಗೆ ಅಸಮಾಧಾನ ಇದ್ದರೆ ಅದನ್ನ ಕಾನೂನಿನ ರೀತಿ ಪ್ರಶ್ನಿಸಬಹುದು ಎಂದರು. ಇದನ್ನೂ ಓದಿ: ಹಿಜಬ್ ತೀರ್ಪು: ಮಂಗಳವಾರ ಉಡುಪಿ, ಶಿವಮೊಗ್ಗ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಯಾವುದೇ ರೀತಿಯ ಅಹಿತರ ಘಟನೆ ಆಗುವುದಿಲ್ಲ ಎಂಬ ವಿಶ್ವಾಸ ನಮಗೆ ಇದೆ. ನಮ್ಮ ಇಲಾಖೆ ಎಲ್ಲ ರೀತಿಯಲ್ಲೂನ ಸಿದ್ಧತೆ ಮಾಡಿಕೊಂಡಿದೆ. ಕಾನೂನಿಗೆ ಧಕ್ಕೆ ತರುವ ಕೆಲಸ ಯಾರೇ ಮಾಡಿದರೂ ಶಿಸ್ತಿನ ಕ್ರಮ ಕೈಗೊಳ್ಳುತ್ತೇವೆ ಅಂತಾ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಇದನ್ನೂ ಓದಿ: ಹಿಜಬ್‌ ವಿವಾದ ತೀರ್ಪು- ನಾಳೆ ದಕ್ಷಿಣ ಜಿಲ್ಲೆ ಶಾಲಾ-ಕಾಲೇಜುಗಳಿಗೆ ರಜೆ

  • ಹಿಜಬ್ ತೀರ್ಪು: ಮಂಗಳವಾರ ಉಡುಪಿ, ಶಿವಮೊಗ್ಗ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಹಿಜಬ್ ತೀರ್ಪು: ಮಂಗಳವಾರ ಉಡುಪಿ, ಶಿವಮೊಗ್ಗ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಉಡುಪಿ/ಶಿವಮೊಗ್ಗ: ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಿ ಎಂದು ಉಡುಪಿ ಮತ್ತು ಶಿವಮೊಗ್ಗ ಜಿಲ್ಲಾಧಿಕಾರಿಗಳು ಆದೇಶ ಕೊಟ್ಟಿದ್ದಾರೆ.

    ಹೈಕೋರ್ಟ್‍ನಲ್ಲಿ ಹಿಜಬ್ ತೀರ್ಪು ವಿಚಾರ ನಾಳೆ ಬಹಿರಂಗವಾಗಲಿದೆ. ಈ ಹಿನ್ನೆಲೆ ಶಾಲೆ-ಕಾಲೇಜುಗಳಲ್ಲಿ ಗಲಾಟೆಯಾಗುವ ಸಾಧ್ಯತೆ ಇದೆ ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಇಂದು ಸಂಜೆ ಈ ಆದೇಶವನ್ನು ಹೊರಡಿಸಿದ್ದಾರೆ. ಇದನ್ನೂ ಓದಿ: ನಾಳೆ ಬೆಳಗ್ಗೆ 10:30ಕ್ಕೆ ಹಿಜಬ್‌ ಹೈಕೋರ್ಟ್‌ ತೀರ್ಪು

    ಶಿವಮೊಗ್ಗದಲ್ಲಿಯೂ ಹಿಜಬ್ ಭಾರೀ ಸದ್ದು ಮಾಡಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಅದರ ಜೊತೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

    ಈ ಅವಧಿಯಲ್ಲಿ ಸಮವಸ್ತ್ರ ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕೋರ್ಟ್ ತೀರ್ಪಿನ ವಿಚಾರವಾಗಿ ಯಾವುದೇ ರೀತಿಯ ಸಂಭ್ರಮಾಚರಣೆ ಅಥವಾ ಪ್ರತಿಭಟನೆಯನ್ನು ನಡೆಸುವಂತಿಲ್ಲ. ಶಾಲಾ ಕಾಲೇಜು ಆವರಣದ 200 ಮೀಟರ್ ವ್ಯಾಪ್ತಿಯಲ್ಲಿ ಶಾಲಾ ಕಾಲೇಜು ಸಿಬ್ಬಂದಿ, ಆಯಾ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಬೇರೆ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಗುಂಪುಗೂಡುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: RSS ಪಥಸಂಚಲನ – ರಸ್ತೆಯುದ್ದಕ್ಕೂ ರಂಗೋಲಿ ಬಿಡಿಸಿ ಹೂಹಾರ ಹಾಕಿ ಸ್ವಾಗತ

    ಹೈಕೋರ್ಟ್ ನೀಡುವ ತೀರ್ಪಿಗೆ ಜನರು ಬದ್ಧರಾಗಿದ್ದು, ಕಾನೂನು ಕೈಗೆತ್ತಿಕೊಳ್ಳದೆ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು. ಯಾವುದೇ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶವಿದೆ. ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

  • ಮಂಗಳವಾರ ಬೆಳಗ್ಗೆ 10:30ಕ್ಕೆ ಹಿಜಬ್‌ ಹೈಕೋರ್ಟ್‌ ತೀರ್ಪು

    ಮಂಗಳವಾರ ಬೆಳಗ್ಗೆ 10:30ಕ್ಕೆ ಹಿಜಬ್‌ ಹೈಕೋರ್ಟ್‌ ತೀರ್ಪು

    ಬೆಂಗಳೂರು: ತರಗತಿಗಳಲ್ಲಿ ಹಿಜಬ್ ಧರಿಸಬೇಕೇ?ಬೇಡವೇ ಎನ್ನುವ ವಿವಾದದ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ್ದ ಹೈಕೋರ್ಟ್‍ ಮಂಗಳವಾರ ಬೆಳಗ್ಗೆ 10:30ಕ್ಕೆ ತೀರ್ಪು ಪ್ರಕಟಿಸಲಿದೆ.

    ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ತೀರ್ಪು ಪ್ರಕಟಿಸಲಿದೆ.

    ಹಿಜಬ್‌ ನಿಷೇಧಕ್ಕೆ ಸಂಬಂಧಿಸಿದಂತೆ  11 ದಿನಗಳ ಕಾಲ ಎರಡು ಕಡೆಯ ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಫೆ.25 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

  • ಎಂಜಿನಿಯರ್‌ಗಳನ್ನೇ ಬದಲಿಸುತ್ತೇವೆ: ಬಿಬಿಎಂಪಿಗೆ ಹೈಕೋರ್ಟ್‌ ಎಚ್ಚರಿಕೆ

    ಎಂಜಿನಿಯರ್‌ಗಳನ್ನೇ ಬದಲಿಸುತ್ತೇವೆ: ಬಿಬಿಎಂಪಿಗೆ ಹೈಕೋರ್ಟ್‌ ಎಚ್ಚರಿಕೆ

    ಬೆಂಗಳೂರು: ರಸ್ತೆ ಗುಂಡಿ ವಿಚಾರವಾಗಿ ಬಿಬಿಎಂಪಿ ಮತ್ತೊಮ್ಮೆ ಹೈಕೋರ್ಟ್ ಸಿಟ್ಟಿಗೆ ಗುರಿಯಾಗಿದೆ. ಬಿಬಿಎಂಪಿ ಇಂಜಿನಿಯರ್‌ಗಳನ್ನೇ ಬದಲಿಸಲು ಸರ್ಕಾರಕ್ಕೆ ಸೂಚಿಸುತ್ತೇವೆ ಅಂತ ನ್ಯಾಯಪೀಠ ಎಚ್ಚರಿಕೆ ನೀಡಿದೆ.

    ಸಾವಿರಾರು ಕೋಟಿ ನೀಡಿದರೂ ರಸ್ತೆ ಸರಿಯಾಗುತ್ತಿಲ್ಲ. ಜನ ಬಲಿಯಾಗೋದು ಕಡಿಮೆಯಾಗುತ್ತಿಲ್ಲ ಎಂದು ಹೇಳಿ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ ಸುರಕ್ಷಿತವಾಗಿ ಮಗಳು ಭಾರತಕ್ಕೆ – ಪ್ರಯಾಣದ ಖರ್ಚನ್ನು ಪಿಎಂ ಕೇರ್ಸ್ ಫಂಡ್‍ಗೆ ನೀಡಿದ ತಂದೆ

    ಹೈಕೋರ್ಟ್‌ ಎಚ್ಚರಿಕೆಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ರಸ್ತೆ ಗುಣಮಟ್ಟದಲ್ಲಿ ರಾಜಿ ಆಗುವುದಿಲ್ಲ. ಹೈಕೋರ್ಟ್ ಆದೇಶ ಪಾಲಿಸ್ತೇವೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಮಾರ್ಚ್ 15 ರೊಳಗೆ ವರದಿ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ. ಇದನ್ನೂ ಓದಿ: ಭಾರತದ ಮೇಲೆ ಯುದ್ಧದ ಎಫೆಕ್ಟ್: ಖಾದ್ಯತೈಲ, ಗೋಧಿ, ಸಿಮೆಂಟ್, ಕಬ್ಬಿಣ ದುಬಾರಿ

    ಇದೇ ವೇಳೆ, ನಿರ್ಬಂಧ ಇದ್ದರೂ ಮಿಟ್ಟಗಾನಹಳ್ಳಿ ಕ್ವಾರಿಯಲ್ಲಿ ಕಸ ತುಂಬುತ್ತಿರುವುದನ್ನು ಹೈಕೋರ್ಟ್ ಆಕ್ಷೇಪಿಸಿದೆ. ಕೋರ್ಟ್ ಆದೇಶ ಉಲ್ಲಂಘಿಸಿದರೆ ಆಯುಕ್ತರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ವಾರ್ನಿಂಗ್ ನೀಡಿದೆ. ಮುಖ್ಯ ಆಯುಕ್ತರು ಈ ವಿಚಾರಕ್ಕೆ ಕ್ಷಮೆ ಕೋರಿದ್ದಾರೆ.

  • ಹಿಜಬ್ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ – ಹರ್ಷ ಹತ್ಯೆ ಪ್ರಕರಣ ಪ್ರಸ್ತಾಪ

    ಹಿಜಬ್ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ – ಹರ್ಷ ಹತ್ಯೆ ಪ್ರಕರಣ ಪ್ರಸ್ತಾಪ

    ಬೆಂಗಳೂರು: ಹಿಜಬ್ ವಿವಾದಕ್ಕೆ ಸಂಬಂಧಿಸಿ 11 ದಿನಗಳ ಕಾಲ ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಪೂರ್ಣಪೀಠ ತೀರ್ಪನ್ನು ಕಾಯ್ದಿರಿಸಿದೆ.

    11ನೇ ದಿನ ಮುಖ್ಯ ನ್ಯಾ.ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ಎಸ್ ದೀಕ್ಷಿತ್, ನ್ಯಾ.ಜೆಎಂ ಖಾಜಿ ಅವರಿದ್ದ ಪೂರ್ಣ ಪೀಠ ಫೆ.10 ರಂದು ಅರ್ಜಿ ವಿಚಾರಣೆ ಪ್ರಾರಂಭಿಸಿ ಇದೀಗ ಎರಡು ವಾರಗಳ ಕಾಲ ಸತತ ವಿಚಾರಣೆ ನಡೆಸಿದೆ. ಇದನ್ನೂ ಓದಿ: ಭಾರತ ಹಿಂದೂ ರಾಷ್ಟ್ರವಲ್ಲ, ಮುಸ್ಲಿಂ ರಿಪಬ್ಲಿಕ್ ಕೂಡಾ ಅಲ್ಲ ಜಾತ್ಯಾತೀತ ರಾಷ್ಟ್ರ – ಹಿಜಬ್ ಬಿಡಲು ಸಾಧ್ಯವಿಲ್ಲ

    ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅವಶ್ಯಕ ಧಾರ್ಮಿಕ ಆಚರಣೆಯ ಭಾಗವೆಂದು ಹಿಜಬ್ ಪರ ವಕೀಲರು ವಾದ ಮಂಡಿಸಿದರು. ಇಂದು ವಿಚಾರಣೆ ಮುಂದುವರಿಸಿದ ನ್ಯಾಯಾಲಯ, ಅರ್ಜಿದಾರರ ಪರ ಹಿರಿಯ ವಕೀಲರಾದ ರವಿವರ್ಮ ಕುಮಾರ್, ಯೂಸುಫ್ ಮುಚ್ಚಲ ಮತ್ತು ವಕೀಲ ಮೊಹಮ್ಮದ್ ತಾಹಿರ್ ಅವರ ನಿರಾಕರಣಾ ವಾದಗಳನ್ನು ಆಲಿಸಿತು. ಜೊತೆಗೆ ಹಿಜಬ್ ಬೆಂಬಲಿಸಿದ ಡಾ. ವಿನೋದ್ ಕುಲಕರ್ಣಿ ಅವರ ವಾದವನ್ನು ಕೂಡ ಆಲಿಸಿತು. ಬಳಿಕ ಮಧ್ಯಂತರ ಆದೇಶ ನೀಡಬೇಕೆಂದು ಹಿಜಬ್ ಪರ ವಕೀಲರು ಮನವಿ ಮಾಡಿಕೊಂಡರು. ನಾವು ಒಂದು ತುಂಡು ಬಟ್ಟೆಗಾಗಿ ಮನವಿ ಮಾಡುತ್ತಿದ್ದೇವೆ ಈ ಕೋರ್ಟ್ ಸೂಕ್ತ ತೀರ್ಮಾನ ನೀಡಬೇಕಾಗಿ ಕೇಳಿಕೊಂಡರು.

    ಮಧ್ಯಂತರ ಆದೇಶ ನೀಡಲು ನಿರಾಕರಿಸಿರುವ ಸಿಜೆ ಪೀಠ ಶೀಘ್ರವೇ ಅಂತಿಮ ಆದೇಶ ನೀಡುವುದಾಗಿ ತಿಳಿಸಿದೆ. ಇದಕ್ಕೂ ಮುನ್ನ, ವಿಚಾರಣೆ ವೇಳೆ ಶಿವಮೊಗ್ಗದ ಹರ್ಷ ಹತ್ಯೆ ಪ್ರಕರಣದ ಬಗ್ಗೆಯೂ ಪ್ರಸ್ತಾಪವಾಯ್ತು. ಸಂಘಟನೆಯೊಂದು ಹರ್ಷನನ್ನು ಉದ್ದೇಶಪೂರ್ವಕವಾಗಿ ಕೊಂದಿದ್ದಾರೆ ಎಂದು ಸಿಎಫ್‍ಐ ವಿರುದ್ಧ ಸರ್ಕಾರದ ಪರ ವಕೀಲ ಸುಭಾಷ್ ಝಾ ಹೇಳಿದರು. ಆಗ ನ್ಯಾಯಾಲಯ, ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಅದಕ್ಕೆ ಮುನ್ನವೇ ಆರೋಪ ಬೇಡ ಎಂದು ಕಿವಿಮಾತು ನೀಡಿತು. ಇದನ್ನೂ ಓದಿ: ಕೇಸರಿ ಶಾಲು, ಹಿಜಬ್ ತೆಗೆಸಿದಂತೆ ಟರ್ಬನ್ ತೆಗೆಸಿ – ರಾಜಧಾನಿಯಲ್ಲಿ ಟರ್ಬನ್ ಸಂಘರ್ಷ