ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಇರಲಿದ್ದು, ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಹೇಳಲಾಗಿದೆ.
ಜಸ್ಟೀಸ್ ಕೆ.ಎಲ್.ಮಂಜುನಾಥ್ ಅವರು 1974ರ ಸೆ.13 ರಂದು ವಕೀಲರಾಗಿ ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಅಭ್ಯಾಸ ಮಾಡಿದರು. 2000ರ ಡಿ.11 ರಂದು ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ಮತ್ತು 2001ರ ಅ.27 ರಂದು ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು. ಇದನ್ನೂ ಓದಿ: ಕೊರೊನಾದಿಂದ ತಮ್ಮ ಮದುವೆಯನ್ನೇ ರದ್ದುಗೊಳಿಸಿದ ನ್ಯೂಜಿಲೆಂಡ್ ಪ್ರಧಾನಿ
ಬೆಂಗಳೂರು: ಮೇಕೆದಾಟು ಪಾದಯಾತ್ರೆಗೆ ಅನುಮತಿ ಕೊಟ್ಟಿಲ್ಲದಿದ್ದರೆ ತಡೆಯಲು ಯಾರಿಗಾಗಿ ಕಾಯುತ್ತಿದ್ದೀರಿ ಎಂದು ಹೈಕೋರ್ಟ್ ಸರ್ಕಾರವನ್ನು ಪ್ರಶ್ನಿಸಿ ಛೀಮಾರಿ ಹಾಕಿದೆ.
ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್ ಆಯೋಜಿಸಿದೆ. ಈ ಪಾದಯಾತ್ರೆಯಿಂದ ಕೊರೊನಾ ಮತ್ತಷ್ಟು ಹೆಚ್ಚಳವಾಗಲಿದೆ. ಈ ಪಾದಯಾತ್ರೆಯನ್ನು ಕೈಗೊಂಡವರ ವಿರುದ್ಧ ಕ್ರಮಕ್ಕೆ ಆದೇಶ ನೀಡಬೇಕೆಂದು ಕೋರಿ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.
ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಕರ್ನಾಟಕ ಈಗಾಗಲೇ ಕೋವಿಡ್ ನಿಂದ ತತ್ತರಿಸುತ್ತಿದೆ. ಹೀಗಿರುವಾಗ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ ಎಂದು ಆರಂಭದಲ್ಲೇ ಪ್ರಶ್ನಿಸಿ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿತು.
ಸಾರ್ವಜನಿಕ ಹಿತಾಸಕ್ತಿಯ ವಿರುದ್ಧವಿದ್ದರೂ ಯಾಕೆ ಸುಮ್ಮನಿದ್ದೀರಿ. ಹೈಕೋರ್ಟ್ ಆದೇಶ ನೀಡುವವರೆಗೂ ನೀವು ಕ್ರಮ ಕೈಗೊಳ್ಳುವುದಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿತು.
ಕೋವಿಡ್ ಹೆಚ್ಚುತ್ತಿರುವ ನಡುವೆ ರ್ಯಾಲಿ ನಡೆಸುತ್ತಿದ್ದೀರಾ? ರ್‍ಯಾಲಿಗೆ ಮುನ್ನ ನೀವು ಅನುಮತಿ ಪಡೆದಿದ್ದೀರ ಎಂದು ಕೆಪಿಸಿಸಿಗೆ ಹೈಕೋರ್ಟ್ ಪ್ರಶ್ನೆ ಪ್ರಶ್ನೆ ಮಾಡಿ ಉತ್ತರ ನೀಡುವಂತೆ ಸೂಚಿಸಿದೆ.
ಸರ್ಕಾರದ ಪರವಾಗಿ ಹಾಜರಾರ ಎಎಜಿ, ಈಗಾಗಲೇ ಪಾದಯಾತ್ರೆ ನಡೆಸುವವರ ವಿರುದ್ಧ ಎಫ್‍ಐಆರ್ ದಾಖಲಾದ್ದು, ಮೂರು ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದರು. ಈ ವೇಳೆ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೊಳಿಸಲು ಯಾವ ಕ್ರಮ ಕೈಗೊಳ್ಳಲಾಗಿದೆ? ಕೋವಿಡ್ ಬಿಗಡಾಯಿಸಿರುವ ವೇಳೆ ಪಾದಯಾತ್ರೆಗೆ ಅವಕಾಶ ಏಕೆ? ಈ ಬಗ್ಗೆ ಉತ್ತರಿಸಲು ಸರ್ಕಾರಕ್ಕೆ ಕೋರ್ಟ್ ತಾಕೀತು ಮಾಡಿದೆ. ಈ ಸಂಬಂಧ ಒಂದು ದಿನ ಅವಕಾಶ ನೀಡಿದ ಹೈಕೋರ್ಟ್ ವಿಚಾರಣೆಯನ್ನು ಜ.14ಕ್ಕೆ ಮುಂದೂಡಿದೆ. ಇದನ್ನೂ ಓದಿ: ಕೋವಿಡ್ ನಿಯಮ ಉಲ್ಲಂಘನೆ – ಪ್ರಭು ಚವ್ಹಾಣ್ ವಿರುದ್ಧ ದೂರು
ಅರ್ಜಿಯಲ್ಲಿ ಏನಿದೆ?: ರಾಜ್ಯದಲ್ಲಿ ಈಗಾಗಲೇ ಕೊರೊನಾ 3ನೇ ಅಲೆ ಪ್ರಾರಂಭವಾಗಿದ್ದು, ದಿನೇ ದಿನೇ ಹೆಚ್ಚಳವಾಗುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಅವರು ಪಾದಯಾತ್ರೆಯನ್ನು ನಡೆಸುತ್ತಿದ್ದಾರೆ. ಈ ಪಾದಯಾತ್ರೆಯಲ್ಲಿ ಸಾವಿರಾರು ಜನರು ಪಾಲ್ಗೊಳ್ಳುತ್ತಿದ್ದಾರೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಬಹುದು. ಜೊತೆಗೆ ಸೂಪರ್ ಸ್ಪ್ರೆಡರ್ ಆಗುವ ಸಾಧ್ಯತೆಯಿದೆ. ಹೀಗಾಗಿ ಕಾನೂನು ಕ್ರಮಕ್ಕಾಗಿ ಮನವಿ ಮಾಡಿ ನರೇಂದ್ರ ಪ್ರಸಾದ್ ಹಾಗೂ ಶಂಭುಲಿಂಗೇಶ್ ಪಿಐಎಲ್ ನಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪ್ರಧಾನಿಗೆ ಭದ್ರತಾ ವೈಫಲ್ಯ – ತನಿಖಾ ಸಮಿತಿಗೆ ನಿವೃತ್ತ ನ್ಯಾಯಮೂರ್ತಿ ಇಂದೂ ಮಲ್ಹೋತ್ರಾ ನೇತೃತ್ವ
ತಿರುವನಂತಪುರಂ : ಕೋವಿಡ್ ಲಸಿಕಾ ಪ್ರಮಾಣ ಪತ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾ ಮಾಡಿದ್ದು, ಅರ್ಜಿದಾರ ಪೀಟರ್ ಮೈಲಿಪರಂಪಿಲ್‍ಗೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಸಾಮಾಜಿಕ ಕಾರ್ಯಕರ್ತ ಪೀಟರ್ ಮೈಲಿಪರಂಪಿಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಿವಿ ಪಿವಿ ಕುಂಞಿಕೃಷ್ಣನ್ ನೇತೃತ್ವದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಈ ಅರ್ಜಿ ದುರುದ್ದೇಶದಿಂದ ಸಲ್ಲಿಕೆಯಾಗಿರುವ ಕ್ಷುಲ್ಲಕ ಅರ್ಜಿಯಾಗಿದೆ. ರಾಜಕೀಯ ಉದ್ದೇಶಗಳಿರುವಂತೆ ತೋರುತ್ತಿದ್ದು ಇದು ಪ್ರಚಾರಕ್ಕಾಗಿ ಸಲ್ಲಿಸಿದಂತಿದೆ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟರು. ಇದನ್ನೂ ಓದಿ: ದೇಶದಲ್ಲಿ 200 ಗಡಿ ದಾಟಿದ ಓಮಿಕ್ರಾನ್ ಸೋಂಕಿತರ ಸಂಖ್ಯೆ – ನಾಲ್ಕನೇ ಸ್ಥಾನದಲ್ಲಿ ಕರ್ನಾಟಕ
ವ್ಯಕ್ತಿಗಳ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಸಾವಿರಾರು ವಿಷಯಗಳು ನ್ಯಾಯಾಲಯದ ಮುಂದೆ ಬಾಕಿ ಉಳಿದಿವೆ ಮತ್ತು ಪ್ರಸ್ತುತ ರೀತಿಯ ಅರ್ಜಿಗಳು ನ್ಯಾಯಾಲಯದ ಸಮಯವನ್ನು ಹೇಗೆ ವ್ಯರ್ಥಗೊಳಿಸುತ್ತವೆ ಎಂಬುದನ್ನು ನ್ಯಾಯಾಲಯವು ಯೋಚಿಸಿದೆ. ಈ ಹಿನ್ನಲೆಯಲ್ಲಿ ಈ ಅರ್ಜಿ ಭಾರೀ ವೆಚ್ಚದೊಂದಿಗೆ ವಜಾಗೊಳಿಸಲು ಅರ್ಹವಾಗಿದೆ ಎಂದ ನ್ಯಾಯಮೂರ್ತಿಗಳು ಒಂದು ಲಕ್ಷ ದಂಡ ವಿಧಿಸಿದರು.
Kerala High Court dismisses a petition challenging the photograph of PM Narendra Modi affixed on the COVID-19 vaccination certificates; imposes a fine of Rs 1 Lakh to be paid by the petitioner to the Kerala Legal Services Authority within 6 weeks. pic.twitter.com/NqNfI3g8Ql
ದಂಡದ ಹಣವನ್ನು ಆರು ವಾರಗಳಲ್ಲಿ ಕೇರಳ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಬೇಕು ಎಂದು ಸೂಚಿಸಿತು. ಒಂದು ಲಕ್ಷ ದಂಡ ಅಧಿಕವಾಗಿದೆ ಎಂದು ಗೊತ್ತು. ಆದರೆ ಅನಗತ್ಯ ಅರ್ಜಿಗಳನ್ನು ತಡೆಯಲು ಈ ರೀತಿಯ ಕ್ರಮ ಅಗತ್ಯ ಎಂದು ನ್ಯಾಯಮೂರ್ತಿಗಳು ಕೊನೆಯಲ್ಲಿ ತಿಳಿಸಿದರು. ಇದನ್ನೂ ಓದಿ: ಅಕ್ರಮವಾಗಿ ಪ್ರಯಾಣಿಕರನ್ನು ಸಾಗಿಸ್ತಿದ್ದ ಹಡಗು ಮುಳುಗಡೆ- ಹಲವರು ನಾಪತ್ತೆ
ಹಣ ಪಾವತಿಸಿ ಖಾಸಗಿ ಆಸ್ಪತ್ರೆಗಳಲ್ಲಿ ವ್ಯಾಕ್ಸಿನ್ ಪಡೆದರೂ ಪ್ರಮಾಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಅಳವಡಿಸಿಲಾಗಿದ್ದು, ಇದನ್ನು ತೆಗೆದುಹಾಕುವಂತೆ ಸಾಮಾಜಿಕ ಕಾರ್ಯಕರ್ತ ಪೀಟರ್ ಮೈಲಿಪರಂಪಿಲ್ ಮನವಿ ಮಾಡಿದ್ದರು.
ಬೆಂಗಳೂರು: ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ. ಮುತ್ತಪ್ಪ ರೈ ಪುತ್ರರಾದ ರಾಖಿ ರೈ, ರಿಕ್ಕಿ ರೈ ಸೇರಿ 20ಮಂದಿಯನ್ನ ಪ್ರತಿವಾದಿಯನ್ನಾಗಿಸಿ ತಡೆಯಾಜ್ಞೆ ನೀಡಿದೆ.
ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ ಆಸ್ತಿಯಲ್ಲಿ ಮೂರನೇ ಒಂದು ಪಾಲು ಕೋರಿ ಕೇಸು ದಾಖಲಿಸಿದ್ದರು. ಈ ಕೇಸ್‌ಗೆ ಸಂಬಂಧಿಸಿದಂತೆ ಸಿವಿಲ್ ಕೋರ್ಟ್ ನಲ್ಲಿ ತಡೆಯಾಜ್ಞೆ ತೆರವಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಅನುರಾಧ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅನುರಾಧ ಅರ್ಜಿ ಪರಿಗಣಿಸಿದ ಕೋರ್ಟ್ ಯಾವುದೇ ಆಸ್ತಿ ಮಾರಾಟ ಮಾಡದಂತೆ ತಡೆಯಾಜ್ಞೆ ನೀಡಿ ಮಧ್ಯಂತರ ತೀರ್ಪು ಪ್ರಕಟಿಸಿದೆ.
ಏನಿದು ಪ್ರಕರಣ?
ಮುತ್ತಪ್ಪ ರೈ ಅವರು ಸಾಯುವ ಮುನ್ನವೇ ತನ್ನ ಆಸ್ತಿಯ ಬಗ್ಗೆ ವಿಲ್ ಬರೆದು ಇಟ್ಟಿದ್ದರು. ಇದರಲ್ಲಿ ಅವರ ಆಸ್ತಿ ಯಾರಿಗೇ ಸೇರಬೇಕು ಮತ್ತು ಎಷ್ಟು ಸೇರಬೇಕು ಎಂದು ತಿಳಿಸಿದ್ದರು. ಮುತ್ತಪ್ಪ ರೈ ಸಾವಿನ ಬಳಿಕ ಅವರ ಎರಡನೇ ಪತ್ನಿ ಅನುರಾಧ ಪಾಲು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಈಗಾಗಲೇ ಅನುರಾಧ ಅವರಿಗೂ ಆಸ್ತಿಯಲ್ಲಿ ಪಾಲು ನೀಡಲಾಗಿದೆ ಎಂದು ರೈ ವಿಲ್‍ನಲ್ಲಿ ತಿಳಿಸಿದ್ದರು. ಎರಡನೇ ಪತ್ನಿ ಅನುರಾಧಾಗೆ ಚಿನ್ನಾಭರಣ, ಕಾರು, ಕೋಟ್ಯಂತರ ರೂಪಾಯಿ ಹಣದ ಜೊತೆ ಹೆಚ್ ಡಿ ಕೋಟೆ ಆಸ್ತಿ, ಜೊತೆಗೆ ಸಹಕಾರ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡವನ್ನು ನಿರ್ಮಿಸಿ ಕೊಡಲಾಗಿದೆ. ಅನುರಾಧಾ ಜೊತೆಗಿದ್ದ ಸಂದರ್ಭದಲ್ಲಿ ಅವರಿಗೆ ಸೇರಬೇಕಾದ ಆಸ್ತಿಯನ್ನು ನೀಡಲಾಗಿದೆ ಎಂದು ವಿಲ್‍ನಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: ಅಮೆಜಾನ್‍ಗೆ 202 ಕೋಟಿ ರೂ. ದಂಡ ಹಾಕಿದ ಸ್ಪರ್ಧಾತ್ಮಕ ಆಯೋಗ
ಆಸ್ತಿ ಎಷ್ಟಿದೆ?
ವಿಲ್ ಪ್ರಕಾರ ಸುಮಾರು 2 ಸಾವಿರ ಕೋಟಿಗೂ ಅಧಿಕ ಆಸ್ತಿ ರೈ ಹೆಸರಿನಲ್ಲಿದೆ. ದೇವನಹಳ್ಳಿ, ಯಲಹಂಕ, ಬಿಡದಿಯಲ್ಲಿ 150ಕ್ಕೂ ಅಧಿಕ ಎಕರೆ ಜಾಗ, ಮೈಸೂರು, ಮಂಗಳೂರು, ಬಂಟ್ವಾಳ, ಪುತ್ತೂರಿನಲ್ಲಿ ನೂರಾರು ಎಕರೆ ಜಮೀನು ಮುತ್ತಪ್ಪ ರೈ ಹೆಸರಿನಲ್ಲಿದೆ. ಸಕಲೇಶಪುರದಲ್ಲಿ 200 ಎಕರೆ ಜಮೀನಿದೆ.
ಹಂಚಿಕೆ ಹೇಗೆ?
ಒಟ್ಟು 600ಕ್ಕೂ ಅಧಿಕ ಎಕರೆ ಜಮೀನನ್ನು ತನ್ನಿಬ್ಬರು ಮಕ್ಕಳಾದ ರಿಕ್ಕಿ ಹಾಗೂ ರಾಖಿ ರೈಗೆ ಗಿಫ್ಟ್ ಡೀಡ್ ಮಾಡಿದ್ದಾರೆ. ಆಸ್ತಿಗಳ ಪೈಕಿ ಮೈಸೂರು, ಪುತ್ತೂರು, ಬಂಟ್ವಾಳ, ಮಂಗಳೂರು ಜಾಗವನ್ನು ರಾಖಿ ರೈಗೆ ನೀಡಿದ್ದರೆ, ಸಕಲೇಶಪುರ, ಬಿಡದಿ, ಯಲಹಂಕ ಹಾಗೂ ದೇವನಹಳ್ಳಿ ಜಾಗವನ್ನು ಚಿಕ್ಕ ಮಗ ರಿಕ್ಕಿ ರೈಗೆ ಹಂಚಿಕೆ ಮಾಡಿದ್ದಾರೆ. ಆಪ್ತರು, ಸಂಬಂಧಿಕರಿಗೆ ಶೇ.20 ರಷ್ಟು ಆಸ್ತಿ ನೀಡಬೇಕೆಂದು ಸೂಚಿಸಿದ್ದಾರೆ. ಬಿಡದಿ ಹಾಗೂ ಸದಾಶಿವನಗರದ ಎರಡೂ ಮನೆಗಳ ಜವಾಬ್ದಾರಿಯನ್ನು ಚಿಕ್ಕ ಮಗ ರಿಕ್ಕಿ ರೈಗೆ ನೀಡಿದ್ದು ಟ್ರೇಡಿಂಗ್ ವ್ಯವಹಾರ ಕಂಪನಿಯನ್ನು ದೊಡ್ಡ ಮಗ ರಾಖಿ ನೋಡಿಕೊಳ್ಳುವಂತೆ ಸೂಚಿಸಿದ್ದರು. ಇದನ್ನೂ ಓದಿ: ಇನ್‌ಸ್ಟಾಗ್ರಾಮ್‌ನಲ್ಲಿ ಶೀಘ್ರವೇ 1 ನಿಮಿಷದ ಸ್ಟೋರಿ ಹಾಕಬಹುದು!
ಕೆಲಸಗಾರರಿಗೆ ಸೈಟ್:
ನಂಬಿಕೆಯಿಂದ 15 ವರ್ಷಗಳ ಕಾಲ ತನ್ನ ಬಳಿ ಕೆಲಸ ಮಾಡಿದ 25 ಕೆಲಸಗಾರರಿಗೆ ಒಂದೊಂದು ಸೈಟ್ ಹಾಗೂ ಕೈಲಾದಷ್ಟು ಹಣ ನೀಡುವಂತೆ ಕಿರಿಯ ಮಗ ರಿಕ್ಕಿ ರೈಗೆ ಸೂಚಿಸಿದ್ದರು. ತಂದೆಯ ಸೂಚನೆಯಂತೆ ರಿಕ್ಕಿ ಈಗಾಗಲೇ ತಲಾ ಒಬ್ಬೊಬ್ಬರಿಗೆ 3 ಲಕ್ಷ ರೂಪಾಯಿಗಳನ್ನು ಹಂಚಿಕೆ ಮಾಡಿದ್ದರು.
ಸಂಘಟನೆ ಹೊಣೆ ಯಾರಿಗೆ?
ಜಯ ಕರ್ನಾಟಕ ಸಂಘಟನೆ ಯಾವುದೇ ಕಾರಣಕ್ಕೂ ಒಡೆಯಬಾರದು ಎಂದು ಹೇಳಿರುವ ಮುತ್ತಪ್ಪ ರೈ ಈ ಸಂಘಟನೆಯ ಜವಾಬ್ದಾರಿಯನ್ನು ಚಿಕ್ಕಮಗ ರಿಕ್ಕಿ ರೈಗೆ ನೀಡಿದ್ದಾರೆ. ಜಗದೀಶ್ ಸಂಘಟನೆಯ ಅಧ್ಯಕ್ಷತೆಯನ್ನು ನೋಡಿಕೊಳ್ಳಬೇಕು. ಮುಂದೆ ಈ ಸಂಘಟನೆಯನ್ನು ಬೆಳೆಸುವಂತೆ ಕಾರ್ಯಕರ್ತರಲ್ಲಿ ರೈ ಮನವಿ ಮಾಡಿರುವ ವಿಚಾರ ವಿಲ್ ನಲ್ಲಿ ಉಲ್ಲೇಖವಾಗಿದೆ.
ತಿರುವನಂತಪುರ: ಕೋವಿಡ್-19 ಲಸಿಕೆ ಪ್ರಮಾಣ ಪತ್ರದಲ್ಲಿ ನರೇಂದ್ರ ಮೋದಿ ಭಾವಚಿತ್ರ ಇರುವ ಬಗ್ಗೆ ಪ್ರಶ್ನಿಸಿ ಕೇರಳದ ವ್ಯಕ್ತಿಯೊಬ್ಬರು ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತಂತೆ ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಫೋಟೋದ ಬಗ್ಗೆ ಯಾಕೆ ಪ್ರಶ್ನಿಸುತ್ತೀರಿ? ಈ ಬಗ್ಗೆ ನೀವು ಹೆಮ್ಮೆ ಪಡಬೇಕು ಎಂದು ಕೇರಳ ಹೈಕೋರ್ಟ್ ಚಾಟಿ ಬೀಸಿದೆ.
ಕೋವಿಡ್-19 ಲಸಿಕೆ ಪ್ರಮಾಣ ಪತ್ರದಲ್ಲಿ ನರೇಂದ್ರ ಮೋದಿ ಫೋಟೋ ಹಾಕಿರುವ ಬಗ್ಗೆ ಮಾಹಿತಿ ಹಕ್ಕು ಕಾರ್ಯಕರ್ತರು ಪ್ರಶ್ನೆ ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಕೃಷ್ಣನ್ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಅವರ ಭಾವಚಿತ್ರ ಇರುವುದರಲ್ಲಿ ಏನು ಸಮಸ್ಯೆ ಇದೆ? ನೀವು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಎಂಬ ಹೆಸರಿನ ಹಲವು ವಿಶ್ವವಿದ್ಯಾನಿಲಯಗಳನ್ನು ನೋಡಿದ್ದೀರಿ ಆ ಹೆಸರನ್ನು ಯಾಕೆ ಬದಲಾಯಿಸಲು ಹೇಳುತ್ತಿಲ್ಲ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದನ್ನೂ ಓದಿ: ಕೊರೊನಾ ವ್ಯಾಕ್ಸಿನ್ ಸರ್ಟಿಫಿಕೇಟ್‍ನಿಂದ ಮೋದಿ ಫೋಟೋ ತೆಗೆಯಲು ಸೂಚನೆ
ನೀವು ತಿಳಿಸಿರುವಂತೆ ಭಾರತವನ್ನು ಹೊರತು ಪಡಿಸಿ ಉಳಿದ ದೇಶಗಳಲ್ಲಿ ಅವರ ದೇಶದ ಪ್ರಧಾನಿ ಅಥವಾ ಅಧ್ಯಕ್ಷರ ಫೋಟೋ, ಲಸಿಕೆ ಪ್ರಮಾಣ ಪತ್ರದಲ್ಲಿ ಇಲ್ಲ. ಆದರೆ ಭಾರತದ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿಯ ಫೋಟೋ ಇದೆ. ಇದರಲ್ಲಿ ತಪ್ಪೇನಿಲ್ಲ. ಬೇರೆ ದೇಶದವರು ಅವರ ಪ್ರಧಾನಿಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿಲ್ಲ. ಆದರೆ ಭಾರತೀಯರು ಪ್ರಧಾನಿಗಳ ಬಗ್ಗೆ ಹೆಮ್ಮೆ ಪಡುತ್ತಾರೆ. ಈ ಬಗ್ಗೆ ಬೇರೆ ಬೇರೆ ಅಭಿಪ್ರಾಯಗಳಿರಬಹುದು ಆದರೆ ಅವರು ನಮ್ಮ ದೇಶದ ಪ್ರಧಾನಿ. ದೇಶದಲ್ಲಿರುವ 100 ಕೋಟಿ ಜನ ಈ ಬಗ್ಗೆ ಪ್ರಶ್ನೆ ಮಾಡಿಲ್ಲ. ನೀವು ಯಾಕೆ ಪ್ರಶ್ನಿಸಿದ್ದೀರಿ ಎಂದು ಕೇಳಿದ್ದಾರೆ. ಇದನ್ನೂ ಓದಿ: ತಾಯಿ ಗಂಗೆ, ಕಾಶಿ ವಿಶ್ವನಾಥ ಎಲ್ಲರಿಗೂ ಸೇರಿದವರು: ಮೋದಿ
ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ವಕೀಲರು ಪ್ರಧಾನಿ ಮೋದಿಯವರ ಹೇಳಿಕೆಯ ಜೊತೆ ಮೋದಿ ಭಾವಚಿತ್ರವನ್ನು ಜನರಲ್ಲಿ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸಲು ಬಳಸಲಾಗಿದೆ ಎಂದು ಸಮರ್ಥಿಸಿಕೊಂಡರು. ದೀರ್ಘವಾದ ವಿಚಾರಣೆ ಮಾಡಲು ಮುಂದಾಗಿರುವ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ಈ ಹಿಂದೆ ಪಂಚ ರಾಜ್ಯಗಳಾದ ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊರೊನಾ ವ್ಯಾಕ್ಸಿನ್ ಸರ್ಟಿಫಿಕೇಟ್ ನಿಂದ ಪ್ರಧಾನಿ ಮೋದಿಯವರ ಫೋಟೋವನ್ನು ತೆಗೆದು ಹಾಕುವಂತೆ ಚುನಾವಣಾ ಆಯೋಗ ಕೇಂದ್ರಕ್ಕೆ ಸೂಚನೆ ನೀಡಿತ್ತು. ಇದನ್ನೂ ಓದಿ: ಮೋದಿ ಕನಸಿನ ಯೋಜನೆ ಕಾಶಿ ವಿಶ್ವನಾಥ ಕಾರಿಡಾರ್ ವಿಶೇಷತೆ ಏನು?
ಹಾಸನ: ವೈವಾಹಿಕ ವಿವರಗಳನ್ನು ಮುಚ್ಚಿಟ್ಟು ಹಾಸನ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ಡಾ. ಸೂರಜ್ ರೇವಣ್ಣ ಅವರ ನಾಮಪತ್ರ ತಿರಸ್ಕರಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ ಎಂದು ಹೆಚ್‍ಡಿ.ರೇವಣ್ಣ ತಿಳಿಸಿದ್ದಾರೆ.
ಏನಿದು ಪ್ರಕರಣ?
ಸೂರಜ್ ರೇವಣ್ಣ ವಿರುದ್ಧ, ಚನ್ನರಾಯಪಟ್ಟಣ ತಾಲೂಕು, ಕುಂದೂರು ಗ್ರಾಮದ ನಿವಾಸಿ ಕೆ.ಎಲ್ ಹರೀಶ್ ಅವರು, ಸೂರಜ್ ರೇವಣ್ಣ ತಮ್ಮ ಅಫಿಡವಿಟ್‍ನಲ್ಲಿ ವೈವಾಹಿಕ ವಿವರದ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ, ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ, ಈಗಾಗಲೇ ಚುನಾವಣೆ ಆರಂಭವಾಗಿರುವುದರಿಂದ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಹೀಗಾಗಿ ಅರ್ಜಿದಾರರಿಗೆ ಆಕ್ಷೇಪಣೆಗಳಿದ್ದರೆ ಚುನಾವಣೆ ಬಳಿಕ ಅರ್ಜಿ ಸಲ್ಲಿಸಬಹುದು ಎಂದು ಸೂಚಿಸಿ, ಅರ್ಜಿ ವಜಾಗೊಳಿಸಿ ಆದೇಶಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ಹತ್ತು ಮೀಟರ್ ಆಳದಲ್ಲಿ ಸ್ಕೂಬಾ ಡೈವ್ ಮಾಡಿದ್ರು ಅಪ್ಪು
ಅರ್ಜಿದಾರರ ಆರೋಪ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದ ಅರ್ಜಿಯಲ್ಲಿ ಪತ್ನಿಗೆ ಸಂಬಂಧಿಸಿದ ಮಾಹಿತಿಗಳನ್ನು ಒದಗಿಸಿಲ್ಲ. ಪತ್ನಿಗೆ ಸಂಬಂಧಿಸಿದ ಎಲ್ಲ ಕಾಲಂಗಳಲ್ಲಿ ‘ಅನ್ವಯವಾಗುವುದಿಲ್ಲ’ ಎಂದು ನಮೂದಿಸಿದ್ದಾರೆ. ಅಲ್ಲದೇ ಸೂರಜ್ ರೇವಣ್ಣ ತಮ್ಮ ಬ್ಯಾಂಕ್ ಖಾತೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ. ಆದ್ದರಿಂದ, ಸೂರಜ್ ನಾಮಪತ್ರವನ್ನು ಅಂಗೀಕರಿಸಿರುವ ಜಿಲ್ಲಾ ಚುನಾವಣಾಧಿಕಾರಿ ಆದೇಶವನ್ನು ರದ್ದುಪಡಿಸಬೇಕು. ಈ ಸಂಬಂಧ ಅರ್ಜಿದಾರರು ಸಲ್ಲಿಸಿರುವ ಮನವಿ ಪತ್ರವನ್ನು ಪರಿಗಣಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು. ಹಾಗೆಯೇ, ಸೂರಜ್ ರೇವಣ್ಣ ಅವರ ಉಮೇದುವಾರಿಕೆಯನ್ನು ಅನರ್ಹ ಅಂತ ಘೋಷಿಸಬೇಕು ಎಂದು ಮನವಿ ಮಾಡಿದ್ದರು. ಅಲ್ಲದೇ ಡಿಸೆಂಬರ್ 10ರಂದು ನಡೆಯಲಿರುವ ಹಾಸನ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಮಧ್ಯಂತರ ಮನವಿ ಮಾಡಿದ್ದರು. ಇದನ್ನೂ ಓದಿ: ಹತ್ತು ವರ್ಷ ಹಾಸನ ಜಿಲ್ಲೆಗೆ ಎರಡು ಪಕ್ಷಗಳ ಕೊಡುಗೆ ಏನು: ರೇವಣ್ಣ ಪ್ರಶ್ನೆ
ಹಂಸಲೇಖ ಪರವಾಗಿ ವಕೀಲ ಕಾಶೀನಾಥ್, ಸಿಎಸ್ ದ್ವಾರಕಾನಾಥ್ ವಾದಿಸಿದ್ದರು.
ಪೇಜಾವರ ಶ್ರೀಗಳ ವಿರುದ್ಧ ಟೀಕೆ ಮಾಡಿದ್ದಾರೆ ಎಂದು ಹಂಸಲೇಖ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಅವರು ಬಸವನಗುಡಿ ಠಾಣೆಗೆ ಹಾಜರಾಗಿ ಕ್ಷಮೆಯಾಚಿಸಿದ್ದರು.
ವಿಚಾರಣೆಯ ಸಂದರ್ಭದಲ್ಲಿ 30ಕ್ಕೂ ಹೆಚ್ಚು ಪ್ರಶ್ನೆಗಳನ್ನು ಪೊಲೀಸರು ಕೇಳಿದ್ದರು. ಇದಕ್ಕೆ ಉತ್ತರಿಸಿದ್ದ ಹಂಸಲೇಖ, ನನ್ನ ಮಾತುಗಳು ಇಷ್ಟೊಂದು ಸ್ವರೂಪ ಪಡೆದುಕೊಳ್ಳುತ್ತೆ ಅಂತಾ ಗೊತ್ತಿರಲಿಲ್ಲ. ಯಾಕೆ ಹಾಗೆ ಹೇಳಿದ್ದೇನೋ ಗೊತ್ತೇ ಆಗ್ಲಿಲ್ಲ. ಯಾವ ಉದ್ದೇಶವು ನನ್ನಲ್ಲಿ ಇರಲಿಲ್ಲ. ಮಾತನಾಡುವ ಬರದಲ್ಲಿ ಹಾಗೆ ಹೇಳಿದ್ದೇನೆ. ನನ್ನ ಹೆಂಡತಿಯೇ ಬೇಸರ ವ್ಯಕ್ತಿ ಪಡಿಸಿದ್ದಾರೆ. ನನ್ನ ಹೇಳಿಕೆಯಿಂದ ತಪ್ಪಾಗಿದೆ. ಯಾವುದೇ ಧರ್ಮ, ಸಮಾಜ ಜಾತಿಯನ್ನ ನಿಂದಿಸೋ ಉದ್ದೇಶ ನನ್ನದಲ್ಲ. ಈ ಘಟನೆಯಿಂದ ತನಗೆ ತುಂಬಾ ನೋವಾಗಿದೆ ಅಂತ ತನಿಖಾ ಅಧಿಕಾರಿ ಮುಂದೆ ಗದ್ಗದಿತರಾಗಿದ್ದರು.
ನವದೆಹಲಿ: ಲೇಖಕರನ್ನು ಒಪ್ಪಲು ಸಾಧ್ಯವಿಲ್ಲದಿದ್ದರೆ ಅವರ ಪುಸ್ತಕವನ್ನು ಓದಬೇಡಿ. ಆದರೆ ಪುಸ್ತಕ ನಿಷೇಧಿಸಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಅವರ ಪುಸ್ತಕ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಏಕ ಸದಸ್ಯ ಪೀಠ, ಅರ್ಜಿ ವಜಾ ಮಾಡಿದೆ.
ಇತ್ತೀಚೆಗೆ ಬಿಡುಗಡೆಯಾಗಿರುವ ‘ಸನ್‍ರೈಸ್ ಓವರ್ ಅಯೋಧ್ಯೆ’ ಪುಸ್ತಕದಲ್ಲಿ ಸಲ್ಮಾನ್ ಖುರ್ಷಿದ್, ಹಿಂದುತ್ವವನ್ನು ಐಸಿಸ್ ಮತ್ತು ಬೋಕೊ ಹರಾಮ್‍ಗೆ ಹೋಲಿಸಿ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ. ಇದು ಸಾರ್ವಜನಿಕ ಶಾಂತಿಯನ್ನು ಉಲ್ಲಂಘಿಸುವ ಸಾಮಥ್ರ್ಯವನ್ನು ಹೊಂದಿದೆ ಎಂದು ದೆಹಲಿ ಮೂಲದ ವಕೀಲ ವಿನೀತ್ ಜಿಂದಾಲ್ ಚೌಧರಿ ಅರ್ಜಿ ಸಲ್ಲಿಸಿದ್ದರು.
ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಯಶವಂತ್ ವರ್ಮಾ ನೇತೃತ್ವದ ಏಕ ಸದಸ್ಯ ಪೀಠ ಪುಸ್ತಕವನ್ನು ನಿಷೇಧಿಸಲು ನಿರಾಕರಿಸಿತು. ವಿಚಾರಣೆ ವೇಳೆ, ‘ನೀವು ಲೇಖಕರನ್ನು ಒಪ್ಪದಿದ್ದರೆ, ಅದನ್ನು ಓದಬೇಡಿ. ಪುಸ್ತಕವು ಕೆಟ್ಟದಾಗಿ ಬರೆಯಲ್ಪಟ್ಟಿದೆ ಎಂದು ಜನರಿಗೆ ತಿಳಿಸಿ, ಉತ್ತಮವಾದದ್ದನ್ನು ಓದಿ’ ಎಂದು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದರು. ಇದನ್ನೂ ಓದಿ: ಐಸಿಸ್ ಉಗ್ರ ಸಂಘಟನೆಗೆ ಹಿಂದುತ್ವ ಹೋಲಿಕೆ – ವಿವಾದಕ್ಕೆ ಸಿಲುಕಿದ ಖುರ್ಷಿದ್ ಪುಸ್ತಕ
ಇದೇ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ರಾಜ್ ಕಿಶೋರ್ ಚೌಧರಿ, ಪುಸ್ತಕವು ದೇಶಾದ್ಯಂತ ಕೋಮು ಉದ್ವಿಗ್ನತೆಯನ್ನು ಉಂಟುಮಾಡುತ್ತದೆ. ಈ ಪುಸ್ತಕದಿಂದಾಗಿ ಈಗಾಗಲೇ ಹಿಂಸಾಚಾರದ ಘಟನೆಗಳು ನಡೆದಿವೆ. ಇಷ್ಟು ಮಾತ್ರವಲ್ಲದೇ ನೈನಿತಾಲ್‍ನಲ್ಲಿರುವ ಲೇಖಕರ ಮನೆಗೂ ಹಾನಿಯಾಗಿದೆ. ಯಾವುದೇ ಮಹತ್ವದ ಘಟನೆ ನಡೆದಿಲ್ಲವಾದರೂ ಅದು ಸಂಭವಿಸುವ ಸಾಧ್ಯತೆಯಿದೆ ಎಂದು ಕೋರ್ಟಿಗೆ ತಿಳಿಸಿದರು.
ಆರ್ಟಿಕಲ್ 19 ರ ಅಡಿಯಲ್ಲಿ ವಾಕ್ ಸ್ವಾತಂತ್ರ್ಯದ ಹಕ್ಕು ಸಂಪೂರ್ಣವಲ್ಲ, ಶಾಂತಿ ಭಂಗವನ್ನು ತಡೆಗಟ್ಟಲು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು. ವಿವಾದಿತ ಭಾಗವನ್ನು ತೆಗೆದುಹಾಕಬೇಕು ಈ ಸಂಬಂಧ ನೋಟಿಸ್ ನೀಡಬೇಕು ಎಂದು ಇದೇ ವೇಳೆ ಅವರು ಕೋರಿದರು.
ಇದಕ್ಕೆ ಉತ್ತರಿಸಿದ ಪೀಠ, ಪುಸ್ತಕಕ್ಕೆ ನಿರ್ಬಂಧವನ್ನು ಸರ್ಕಾರವೇ ಹಾಕಬೇಕು, ಆದರೆ ಈ ಪ್ರಕರಣದಲ್ಲಿ ಸರ್ಕಾರ ಏನನ್ನೂ ಮಾಡಿಲ್ಲ. ಹೀಗಾಗಿ ಕೋರ್ಟ್ ಕೂಡಾ ಪುಸ್ತಕ ನಿಷೇಧ ಸಾಧ್ಯವಿಲ್ಲ ಎಂದಿತು. ವಿವಾದಿತ ಭಾಗವನ್ನು ಓದಿ ಜನರು ನೋವು ಅನುಭವಿಸಿದರೆ ನ್ಯಾಯಾಲಯವು ಏನನ್ನೂ ಮಾಡಲು ಸಾಧ್ಯವಿಲ್ಲ. ಜನರು ಆ ಭಾಗವನ್ನು ಇಷ್ಟಪಡದಿದ್ದರೆ ಅವರು ಅಧ್ಯಾಯವನ್ನು ಬಿಟ್ಟುಬಿಡಬಹುದು ಎಂದು ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಇತಿಹಾಸದಲ್ಲಿಯೇ ಮೊದಲಬಾರಿಗೆ ಅಂಟಾರ್ಟಿಕಾದಲ್ಲಿ ಏರ್ಬಸ್ ವಿಮಾನ
ನವದೆಹಲಿ: ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ RTPCR ವರದಿ ಕಡ್ಡಾಯ ಮಾಡಿದ ರಾಜ್ಯ ಸರ್ಕಾರ ಆದೇಶದ ವಿರುದ್ಧ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ. ಕೇರಳ ಹೈಕೋರ್ಟ್ ಆದೇಶ ಪ್ರಶ್ನಿಸಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ.
ಕೇರಳ ಮೂಲದ ವಕೀಲ ಆರ್ ಎಸ್ ಜೆನಾ ರಿಂದ ಅರ್ಜಿ ಸಲ್ಲಿಸಿದ್ದು ಆದೇಶ ವಾಪಸ್ ಪಡೆಯಲು ಸೂಚಿಸುವಂತೆ ಅರ್ಜಿಯಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ. ಕರ್ನಾಟಕ ಪ್ರವೇಶಕ್ಕೆ 72 ಗಂಟೆಗಳ ಒಳಗಿನ RTPCR ವರದಿ ಕಡ್ಡಾಯ ಮಾಡಿರುವುದು ಸರಿಯಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.
ಆರ್‍ಟಿಪಿಸಿಆರ್ ವರದಿ ಕಡ್ಡಾಯದಿಂದ ಗಡಿಯಲ್ಲಿ ಶಿಕ್ಷಣ, ವ್ಯಾಪಾರ, ಉದ್ಯೋಗಗಳು, ವೈದ್ಯಕೀಯ ಚಿಕಿತ್ಸೆ ಮತ್ತು ಇತರ ಕಾರಣಗಳಿಗಾಗಿ ಪ್ರತಿದಿನ ಕರ್ನಾಟಕಕ್ಕೆ ಭೇಟಿ ನೀಡುವ ಜನರಿಗೆ ತೊಂದರೆಯಾಗಲಿದೆ. ಮತ್ತು ಗಡಿಗಳಲ್ಲಿನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಮೇಲೂ ಇದು ಪರಿಣಾಮ ಬೀರುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಡ್ರಗ್ಸ್, ಸಿಗರೇಟ್, ಸೆಕ್ಸ್‌ಗೆ ಮಗನಿಗೆ ಓಕೆ ಅಂದಿದ್ದೇನೆ: ಶಾರೂಖ್ ವೀಡಿಯೋ ವೈರಲ್
ಮಂಜೇಶ್ವರಂ ಕ್ಷೇತ್ರದ ಜನರು ಮಂಗಳೂರಿನ ಮೇಲೆ ಅವಲಂಬಿಸಿರುವ ಬಗ್ಗೆಯೂ ಮಾಹಿತಿ ನೀಡಿರುವ ವಕೀಲರು, ಮಂಗಳೂರಿನ ಮೇಲೆ ಮಂಜೇಶ್ವರದ ಜನರು ಸಂಪೂರ್ಣ ಅವಲಂಬಿಸಿದ್ದು ನಿತ್ಯ ಸಾವಿರಾರು ಜನರು ಸಂಚಾರ ಮಾಡ್ತಾರೆ. ಅವರೆಲ್ಲರೂ ಪ್ರತಿದಿನ ವರದಿ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಜುಲೈ 31 ರಂದು ಮಂಗಳೂರು ಡಿಸಿ ಹೊರಡಿಸಿರುವ ಆದೇಶ ವಾಪಸ್ ಪಡೆಯುವಂತೆ ಸೂಚಿಸಲು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಹತ್ಯಾಕಾಂಡದ ನಂತರವೂ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ: ರಾಹುಲ್ ಗಾಂಧಿ
ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯದಲ್ಲೂ ಸೋಂಕು ಹೆಚ್ಚಾಗುವ ಭೀತಿಯಿಂದ ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣಿಸುವ ಜನರು ಆರ್‍ಟಿಪಿಸಿಆರ್ ವರದಿ ಕಡ್ಡಾಯವಾಗಿ ತರುವಂತೆ ಸೂಚಿಸಿ ಜುಲೈ 31 ರಂದು ಆದೇಶ ಮಾಡಲಾಗಿತ್ತು. ಈ ಆದೇಶ ಪ್ರಶ್ನಿಸಿ ಕೇರಳ ಹೈಕೋರ್ಟಿಗೆ ಅರ್ಜಿ ಸಲ್ಲಿಸಿತ್ತು. ಆದರೆ ವಿಚಾರಣೆ ನಡೆಸಿದ ಹೈಕೋರ್ಟ್ ಕರ್ನಾಟಕ ರಾಜ್ಯ ಸರ್ಕಾರದ ಸುತ್ತೊಲೆಯಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ, ಅದು ನಮ್ಮ ವ್ಯಾಪ್ತಿಯಲ್ಲಿಲ್ಲ ಎಂದು ಹೇಳಿ ಅರ್ಜಿ ವಜಾ ಮಾಡಿತ್ತು. ಕೇರಳ ಹೈಕೋರ್ಟ್ ಆದೇಶ ಪ್ರಶ್ನಿಸಿ ಈಗ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದೆ.
ಬೆಂಗಳೂರು: ಖಾಸಗಿ ಶಾಲೆಗಳ ಬೋಧನಾ ಶುಲ್ಕ ನಿಗದಿ ಜಟಾಪಟಿ ವಿವಾದಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ರಾಜ್ಯ ಸರ್ಕಾರ ಆದೇಶಿಸಿದ್ದ ಶೇ.30ರಷ್ಟು ಶುಲ್ಕ ಕಡಿತ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
2020-21ನೇ ಸಾಲಿನಲಲ್ಲಿ ಶೇ.15ರಷ್ಟು ಶುಲ್ಕ ಕಡಿತಕ್ಕೆ ಆದೇಶಿಸಿದೆ. ಸುಪ್ರೀಂಕೋರ್ಟ್ ಆದೇಶ ಆಧರಿಸಿ ಹೈಕೋರ್ಟ್ ತೀರ್ಪು ನೀಡಿದೆ. ಇದೀಗ ಶೇ.70ರಷ್ಟು ಶುಲ್ಕ ಸ್ವೀಕರಿಸುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಮೂಲಕ ಸರ್ಕಾರ-ಖಾಸಗಿ ಶಾಲೆಗಳು-ಪೋಷಕರ ನಡುವಿನ ದೀರ್ಘ ಕಾಲದ ಶುಲ್ಕ ಸಮರ ಶಾಂತವಾಗಿದೆ. ಇದನ್ನೂ ಓದಿ: ಚಿಕ್ಕಪ್ಪನ ಜೊತೆಗೆ ಅನೈತಿಕ ಸಂಬಂಧ- ಬರ್ತ್ ಡೇ ಪಾರ್ಟಿಗೆ ತೆರಳ್ತಿದ್ದವಳು ಬರ್ಬರವಾಗಿ ಹೆಣವಾದ್ಳು!
ಶೇ.70 ರಷ್ಟು ಶುಲ್ಕ ಸ್ವೀಕರಿಸುವಂತೆ ಸರ್ಕಾರ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್‍ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ಇದೀಗ ಶೇ. 30ರಷ್ಟು ಶುಲ್ಕವನ್ನು ರಾಜ್ಯ ಸರ್ಕಾರ ಕಡಿತಗೊಳಿಸಿದ್ದು, ಕೋರ್ಟ್ ಆದೇಶವನ್ನು ಕ್ಯಾಮ್ಸ್ ಸ್ವಾಗತಿಸಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ರಾಮನಗರ ಗ್ರಾಮಕ್ಕೆ ತೆರಳಿ ರಸ್ತೆ ಪರಿಶೀಲಿಸಿದ ದಾವಣಗೆರೆ ಡಿಸಿ