Tag: high court

  • ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ

    ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ

    ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ (High Court of Karnataka) ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು (Vibhu Bakhru) ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ಪ್ರಸ್ತುತ ನ್ಯಾಯಮೂರ್ತಿ ಕಾಮೇಶ್ವರ್ ರಾವ್ ಅವರು ದೆಹಲಿ ಹೈಕೋರ್ಟ್‌ಗೆ ವರ್ಗಾವಣೆಯಾಗಿದ್ದಾರೆ. ನ್ಯಾ. ವಿಭು ಭಕ್ರು ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್ ಜೊತೆಗೆ ಹಲವಾರು ನ್ಯಾಯಮಂಡಳಿಗಳಲ್ಲಿ ಅಭ್ಯಾಸ ಮಾಡಿದ್ದಾರೆ. ಅವರು ಈ ವರ್ಷ ಜ.21 ರವರೆಗೆ ದೆಹಲಿ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಾಧೀಶರಾಗಿಯೂ ಸೇವೆ ಸಲ್ಲಿಸಿದ್ದರು.

    ಕರ್ನಾಟಕ ಹೈಕೋರ್ಟ್‌ ಮಾತ್ರ ಅಲ್ಲದೆ, ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಹಾಗೂ ಪಾಟ್ನಾ ಹೈಕೋರ್ಟ್‌ಗಳಿಗೂ ಸಹ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ಸಹ ನೇಮಿಸಲಾಗಿದೆ. ಇದನ್ನೂ ಓದಿ: ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ

    ಮಧ್ಯಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್‌ ಸಚ್‌ದೇವ, ಜಾರ್ಖಂಡ್ ಹೈಕೋರ್ಟ್‌ಗೆ ತಾರ್‌ಲೋಕ್‌ ಸಿಂಗ್ ಚೌಹಾಣ್, ಗುವಾಹಟಿ ಹೈಕೋರ್ಟ್‌ಗೆ ಅಶುತೋಷ್ ಕುಮಾರ್, ಪಾಟ್ನಾ ಹೈಕೋರ್ಟ್‌ಗೆ ವಿಪುಲ್ ಮನುಭಾಯ್ ಪಾಂಚೋಲಿ ಅವರನ್ನು ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಗಿದೆ.

    ನ್ಯಾ. ಭಕ್ರು ಪರಿಚಯ
    ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾ. ಭಕ್ರು ಅವರು 1966ರಲ್ಲಿ ನಾಗ್ಪುರದಲ್ಲಿ ಜನಿಸಿದರು. ಅವರು ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್‌ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. 1989ರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿಯೂ ಅರ್ಹತೆ ಪಡೆದಿದ್ದರು. ಆನಂತರ 1990ರಲ್ಲಿ ಎಲ್‌ಎಲ್‌ಬಿ ಪದವಿ ಪಡೆದು, ಅದೇ ವರ್ಷ ದೆಹಲಿ ವಕೀಲರ ಪರಿಷತ್‌ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿದ್ದರು.

    ನ್ಯಾ. ಭಕ್ರು ಅವರು ವಕೀಲರಾಗಿದ್ದ ಅವಧಿಯಲ್ಲಿ ಸುಪ್ರೀಂ ಕೋರ್ಟ್‌, ದೆಹಲಿ ಹೈಕೋರ್ಟ್‌, ಕಂಪನಿ ಕಾನೂನು ಮಂಡಳಿ ಮತ್ತು ಇತರೆ ನ್ಯಾಯ ಮಂಡಳಿಗಳಲ್ಲಿ ವಕೀಲಿಕೆ ಮಾಡಿದ್ದಾರೆ. 2011ರಲ್ಲಿ ಹಿರಿಯ ವಕೀಲರಾಗಿ ಅವರು ಪದೋನ್ನತಿ ಪಡೆದಿದ್ದರು. 2013ರ ಏಪ್ರಿಲ್‌ 17ರಂದು ದೆಹಲಿ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು 2015ರ ಮಾರ್ಚ್‌ 18ರಂದು ಕಾಯಂಗೊಂಡಿದ್ದರು.

    ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ಕೊಲಿಜಿಯಂ ಮುಖ್ಯ ನ್ಯಾಯಮೂರ್ತಿಗಳ ಹುದ್ದೆಗೆ ಈ ಮೇಲಿನ ಹೆಸರುಗಳನ್ನು ಶಿಫಾರಸು ಮಾಡಿತ್ತು. ಇದನ್ನೂ ಓದಿ: ಡಿವೋರ್ಸ್‌ ಕೇಸ್‌| ಸಂಗಾತಿ ರೆಕಾರ್ಡ್ ಮಾಡಿದ ಕರೆಯನ್ನು ಸಾಕ್ಷಿಯಾಗಿ ಪರಿಗಣಿಸಬಹುದು – ಸುಪ್ರೀಂ

  • ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಕೋರ್ಟ್ ಮೊರೆಹೋದ ಆಡಳಿತ ಮಂಡಳಿ

    ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಕೋರ್ಟ್ ಮೊರೆಹೋದ ಆಡಳಿತ ಮಂಡಳಿ

    ಬೆಂಗಳೂರು: ನಗರದ ಸುಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ದೇವಾಲಯ (Gali Anjaneya Temple) ಮುಜರಾಯಿ ಇಲಾಖೆ (Muzrai Department) ಸುಪರ್ದಿಗೆ ಬಂದಿದೆ. ದೇವಾಲಯದ ಆಡಳಿತವನ್ನು ಸರ್ಕಾರ ತನ್ನ ಅಧೀನಕ್ಕೆ ಪಡೆದಿದ್ದು, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಇನ್ಮುಂದೆ ದೇವಾಲಯದ ಉಸ್ತುವಾರಿಯ ನಡೆಸಿಕೊಂಡು ಹೋಗಲಿದೆ. ದೇವಾಲಯದ ಆಡಳಿತ ಮಂಡಳಿ ಈಗ ಬೇರೆ ದಾರಿ ಕಾಣದೇ ಸರ್ಕಾರದ ನಿರ್ಧಾರದ ವಿರುದ್ಧ ಕೋರ್ಟ್ ಮೊರೆಹೋಗಲು ಸಜ್ಜಾಗಿದೆ..

    ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ದೇವಾಲಯದ ನಿರ್ವಹಣೆಗೆ ಕಾರ್ಯಪಾಲಕ ಅಧಿಕಾರಿಯನ್ನು ನೇಮಕ ಮಾಡಿದೆ. ಇಓ ನಾರಾಯಣಸ್ವಾಮಿ ಅಧಿಕಾರ ವಹಿಸಿಕೊಂಡು ದೇವಾಲಯದ ಅಧಿಕಾರ ಪಡೆದುಕೊಂಡಿದ್ದಾರೆ. ಸರ್ಕಾರದ ಈ ನಿರ್ಧಾರವನ್ನು ದೇವಾಲಯದ ಆಡಳಿತ ಮಂಡಳಿ ಖಂಡಿಸಿದೆ. ನಮ್ಮ ಪೂರ್ವಿಕರಿಂದ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯತ್ವ ದೊರತಿದ್ದು, ಇಷ್ಟು ವರ್ಷ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರಮಿಸಿದ ನಮಗೆ ಅನ್ಯಾಯವಾಗಿದೆ ಎಂದು ಗ್ರಾಮಸ್ಥರು ಮತ್ತು ಟ್ರಸ್ಟಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಇದನ್ನೂ ಓದಿ: ಪ್ರಾಣಿ ಪ್ರಿಯರಿಗೆ ಟಿಕೆಟ್ ದರ ಏರಿಕೆ ಶಾಕ್ – ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ 20% ಏರಿಕೆ

    ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನದ ಸಂಪೂರ್ಣ ಆಡಳಿತವನ್ನ ತನ್ನ ಅಧೀನಕ್ಕೆ ತೆಗೆದುಕೊಂಡಿದೆ. ಸೋಮವಾರ ಹೈಕೋರ್ಟ್‌ನಲ್ಲಿ (High Court) ಅರ್ಜಿ ಹಾಕಿ ಸರ್ಕಾರದ ವಿರುದ್ಧ ಕಾನೂನಿನ ಹೋರಾಟ ಮಾಡಲು ಟ್ರಸ್ಟಿಗಳು ಸಜ್ಜಾಗಿದ್ದಾರೆ. ಆಡಳಿತ ಮಂಡಳಿಯ ಕಿತ್ತಾಟದ ಮಧ್ಯೆ ಪ್ರತಿನಿತ್ಯ ಸಾವಿರಾರು ಭಕ್ತರು ಗಾಳಿ ಆಂಜನೇಯನ ದರ್ಶನ ಪಡೆಯುತ್ತಾರೆ. ಭಕ್ತರಿಗೆ ಮತ್ತು ಅಲ್ಲಿನ ಪುರೋಹಿತ ವರ್ಗಕ್ಕೆ ಯಾವುದೇ ಸಮಸ್ಯೆ ಆಗದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಿದೆ. ಇದನ್ನೂ ಓದಿ: ಮಂತ್ರಾಲಯ | ಸ್ನಾನಘಟ್ಟದ ಬಳಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆ

  • ಅವನೇ ಬೇಕು ಎಂದ ಯುವತಿ – ಕೊಲೆ ಅಪರಾಧಿ ಮದ್ವೆಗೆ 15 ದಿನ ಪೆರೋಲ್‌ ನೀಡಿದ ಹೈಕೋರ್ಟ್!

    ಅವನೇ ಬೇಕು ಎಂದ ಯುವತಿ – ಕೊಲೆ ಅಪರಾಧಿ ಮದ್ವೆಗೆ 15 ದಿನ ಪೆರೋಲ್‌ ನೀಡಿದ ಹೈಕೋರ್ಟ್!

    – ಮದುವೆ ನಿಶ್ಚಯವಾದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಯುವಕ

    ತಿರುವನಂತಪುರಂ: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಯೊಬ್ಬನ ಮದುವೆಗೆ ಕೇರಳ (Kerala) ಹೈಕೋರ್ಟ್ (High Court) 15 ದಿನಗಳ ಪೆರೋಲ್ ನೀಡಿದೆ.

    ಅಪರಾಧಿಗೆ ಜೈಲು ಶಿಕ್ಷೆಯಾಗುವ ಮೊದಲೇ ಮದುವೆ (Marriage) ನಿಶ್ಚಯವಾಗಿತ್ತು. ಜುಲೈ 13ರಂದೇ ಮದುವೆ ನಿಶ್ಚಯ ಆಗಿತ್ತು. ಹೀಗಾಗಿ ಅವಕಾಶ ಮಾಡಿಕೊಡುವಂತೆ ಕೋರಿ ಅಪರಾಧಿ ಪ್ರಶಾಂತ್ ತಾಯಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ವಿ ಕುನ್ನಿಕೃಷ್ಣನ್ ಜುಲೈ 12 ರಿಂದ 15 ದಿನಗಳ ಕಾಲ ಅಪರಾಧಿಗೆ ಪೆರೋಲ್ ಮಂಜೂರು ಮಾಡಿ ಆದೇಶಿಸಿದ್ದಾರೆ. ಪೆರೋಲ್‌ ಅವಧಿ ಮುಗಿದ ಬಳಿಕ, ಜುಲೈ 26ರ ಸಂಜೆ 4 ಗಂಟೆಯೊಳಗೆ ಜೈಲಿಗೆ ಹಿಂತಿರುಗಬೇಕು ಎಂದು ಆತನಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಚುನಾವಣಾ ಆಯೋಗಕ್ಕೆ ಬಿಗ್ ರಿಲೀಫ್ – ಬಿಹಾರ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ತಡೆಗೆ ‘ಸುಪ್ರೀಂ’ ನಕಾರ

    ಇದಕ್ಕೂ ಮುನ್ನ ವಿಯ್ಯರು ಜೈಲಿನ ಅಧೀಕ್ಷಕರು ಪೆರೋಲ್ ಅರ್ಜಿಯನ್ನ ವಜಾಗೊಳಿಸಿದ್ದರು. ಇದನ್ನ ಪ್ರಶ್ನಿಸಿ ಶಿಕ್ಷೆಗೊಳಗಾಗಿರುವ ಪ್ರಶಾಂತ್ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದ. ಈ ಮಧ್ಯೆ ಹುಡುಗಿ ಅಪರಾಧಿಯನ್ನೇ ಮದುವೆಯಾಗಲು ನಿರ್ಧರಿಸಿರುವುದರಿಂದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಪೆರೋಲ್ ಮಂಜೂರು ಮಾಡಿದ್ದಾರೆ.

    ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನಂತರವೂ ಅವಳ ಪ್ರೀತಿ ಹಾಗೆಯೇ ಇದೆ. ತನ್ನ ಸಂಗಾತಿ ಜೀವಾವಧಿ ಶಿಕ್ಷೆ ಅನುಭವಿಸ್ತಿದ್ದಾನೆ ಎಂದು ತಿಳಿದಿದ್ದರೂ ಆಕೆ ಮದುವೆಯಾಗಲು ಸಿದ್ಧವಾಗಿದ್ದಾಳೆ. ಆಕೆಯ ಧೈರ್ಯವನ್ನ ಕೋರ್ಟ್ ನಿರ್ಲಕ್ಷಿಸುವುದಿಲ್ಲ ಎಂದು ಪೀಠ ಹೇಳಿದೆ.

    ಸಂವಿಧಾನದ 226 ನೇ ವಿಧಿಯ ಅಡಿಯಲ್ಲಿ ಅಪರಾಧಿಗೆ 15 ದಿನಗಳ ಅವಧಿಗೆ ಪೆರೋಲ್ ನೀಡಲಾಗಿದೆ. ಅಲ್ಲದೇ ಆ ಯುವತಿಯ ವೈವಾಹಿಕ ಜೀವನ ಸಂತೋಷವಾಗಿರಲಿ ಎಂದು ನ್ಯಾಯಾಲಯ ಹಾರೈಸಿದೆ. ಇದನ್ನೂ ಓದಿ: ಟೆನ್ನಿಸ್ ಆಟಗಾರ್ತಿಯನ್ನು ಕೊಂದ ಅಪ್ಪನಿಗೆ 14 ದಿನ ನ್ಯಾಯಾಂಗ ಬಂಧನ

  • ಮುಡಾ ಹಗರಣ | ಸಿಎಂ ಪತ್ನಿಗೆ ಹೈಕೋರ್ಟ್ ನೋಟಿಸ್

    ಮುಡಾ ಹಗರಣ | ಸಿಎಂ ಪತ್ನಿಗೆ ಹೈಕೋರ್ಟ್ ನೋಟಿಸ್

    ಬೆಂಗಳೂರು/ಮೈಸೂರು: ಮುಡಾ ಸೈಟ್ ಹಂಚಿಕೆ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ನಿ ಪಾರ್ವತಿ ಸಿದ್ದರಾಮಯ್ಯ (Parvathi Siddaramaiah) ಅವರಿಗೆ ಹೈಕೋರ್ಟ್ ನೋಟಿಸ್ ನೀಡಿದೆ.ಇದನ್ನೂ ಓದಿ: ನಮ್ಮಿಬ್ಬರನ್ನು ದೂರ ಮಾಡ್ತಾರೆ ಎಂಬ ಭಯದಲ್ಲಿ ಕಾಲುವೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ

    ಮುಡಾ (MUDA) ತನಿಖೆಗೆ ರಾಜ್ಯಪಾಲರ ಅನುಮತಿ ಬಗ್ಗೆ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಇಂದು ನಡೆದ ಹೈಕೋರ್ಟ್ ವಿಚಾರಣೆ ನಡೆಸಿತು. ಈ ವೇಳೆ ಹಂಗಾಮಿ ಮುಖ್ಯ ನ್ಯಾ.ಕಾಮೇಶ್ವರ ರಾವ್ ಹಾಗೂ ಸಿಎಂ ಜೋಷಿ ಅವರು ಎಲ್ಲಾ ಮನವಿಗಳು ಒಟ್ಟಿಗೆ ಬರಲಿ. ಆದರೆ ಟ್ಯಾಗ್ ಮಾಡುವುದು ಬೇಡ ಎಂದು ಎಜಿ ಶಶಿಕಿರಣ್ ಶೆಟ್ಟಿ ಮನವಿ ಮಾಡಿದ್ದಾರೆ.

    ಈ ವೇಳೆ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ನೋಟಿಸ್ (High Court) ನೀಡಿದ್ದು, ಸೆ.4ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.ಇದನ್ನೂ ಓದಿ: ಕೊಯಮತ್ತೂರು ಬಾಂಬ್ ಬ್ಲಾಸ್ಟ್‌ನ ಪ್ರಮುಖ ಆರೋಪಿ ವಿಜಯಪುರದಲ್ಲಿ ಅರೆಸ್ಟ್

  • ಖಾಸಗಿ ಮೆಡಿಕಲ್ ಲಾಬಿಗೆ ಮಣಿದ ಸರ್ಕಾರ, ಹೈಕೋರ್ಟ್ ಆದೇಶ ಸ್ವಾಗತಾರ್ಹ: ಆರ್ ಅಶೋಕ್

    ಖಾಸಗಿ ಮೆಡಿಕಲ್ ಲಾಬಿಗೆ ಮಣಿದ ಸರ್ಕಾರ, ಹೈಕೋರ್ಟ್ ಆದೇಶ ಸ್ವಾಗತಾರ್ಹ: ಆರ್ ಅಶೋಕ್

    ಬೆಂಗಳೂರು: ಜನೌಷಧಿ (Jan Aushadhi) ಕೇಂದ್ರಗಳ ಸ್ಥಗಿತ ಕುರಿತು ಹೈಕೋರ್ಟ್ (High Court) ನೀಡಿದ ಮಧ್ಯಂತರ ತಡೆ ಆದೇಶವನ್ನು ಸ್ವಾಗತಿಸುತ್ತೇನೆ. ಖಾಸಗಿ ಲಾಬಿಗೆ ಮಣಿದ ಸರ್ಕಾರಕ್ಕೆ ಈಗ ಹಿನ್ನಡೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದರು.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜನೌಷಧಿ ಕೇಂದ್ರಗಳ ಸ್ಥಗಿತದ ಬಗ್ಗೆ ಹೈಕೋರ್ಟ್ ಮಧ್ಯಂತರ ತಡೆ ಆದೇಶ ನೀಡಿದೆ. ಈ ಕುರಿತು ಬಿಜೆಪಿಯಿಂದ ಹೋರಾಟ ಮಾಡಲಾಗಿತ್ತು. ಖಾಸಗಿ ಮೆಡಿಕಲ್ ಫಾರ್ಮಾಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚಿತ್ತು. ಖಾಸಗಿ ಲಾಬಿಗೆ ಮಣಿದ ಸರ್ಕಾರಕ್ಕೆ ಈಗ ಹಿನ್ನಡೆಯಾಗಿದೆ. ಇನ್ನಾದರೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಜನರಿಗೆ ಏನು ಬೇಕೆಂದು ಅರಿತು ಕೆಲಸ ಮಾಡಬೇಕಿದೆ ಎಂದು ಆಗ್ರಹಿಸಿದರು. ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರದಲ್ಲಿ ಗೊಂದಲ ಏಕೆ? ಹೈಕಮಾಂಡ್ ಏನೂ ಇಲ್ಲ ಅಂದಿದೆ: ಸತೀಶ್ ಜಾರಕಿಹೊಳಿ

    ಸರ್ಕಾರಿ ಆಸ್ಪತ್ರೆಗಳಲ್ಲಿ 260-270 ಔಷಧಿಗಳನ್ನು ನೀಡಬೇಕಾಗುತ್ತದೆ. ಆದರೆ ಅಷ್ಟೊಂದು ಔಷಧಿ ಇಲ್ಲ. ಔಷಧಿಗಳು ಜನೌಷಧಿ ಕೇಂದ್ರಗಳಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿದೆ. ಇತ್ತೀಚೆಗೆ ಹಾಸನ ಆಸ್ಪತ್ರೆಗೆ ಹೋದಾಗ ಒಬ್ಬರೇ ಹೃದ್ರೋಗ ತಜ್ಞ ವೈದ್ಯರು ಇರುವುದು ಕಂಡುಬಂತು. ಹೃದಯ ಸಂಬಂಧಿ ರೋಗದ ತುರ್ತು ಪರಿಸ್ಥಿತಿಯಲ್ಲಿ ಅವರು ಇಂಜೆಕ್ಷನ್ ಕೊಟ್ಟು ಬೆಂಗಳೂರಿಗೆ ಕಳಿಸುತ್ತಾರೆ. ಇಂತಹ ಸ್ಥಿತಿಯಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಿದರೆ ಬಹಳ ಸಮಸ್ಯೆಯಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಕಾಡಾನೆ; 2 ಗಂಟೆ ನಿಂತ ರೈಲು – Video ನೋಡಿ..

  • ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

    ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

    – ಜನವಿರೋಧಿ ರಾಜ್ಯ ಸರ್ಕಾರಕ್ಕೆ ಮುಖಭಂಗ, ಸಾಮಾನ್ಯ ಜನತೆಗೆ ಸಂದ ಜಯ: ಸಂಸದ ತೇಜಸ್ವಿ ಸೂರ್ಯ

    ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಜನೌಷಧಿ ಕೇಂದ್ರಗಳನ್ನು (Jan Aushadhi Center) ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ (High Court) ತಾತ್ಕಾಲಿಕ ತಡೆ ನೀಡಿದೆ. ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿ & ಇತರರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿರುವ ಕೋರ್ಟ್, ಮುಂದಿನ ವಿಚಾರಣೆವರೆಗೂ ಕೇಂದ್ರಗಳನ್ನು ಸ್ಥಗಿತಗೊಳಿಸದಂತೆ ಮಧ್ಯಂತರ ಆದೇಶ ಹೊರಡಿಸಿದೆ.

    ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಆದೇಶ ಹೊರಡಿಸಿತ್ತು. ಈ ನಿರ್ಧಾರವು ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಔಷಧಿಗಳನ್ನು ಒದಗಿಸುತ್ತಿದ್ದ ಈ ಕೇಂದ್ರಗಳು ಸ್ಥಗಿತಗೊಂಡರೆ, ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗಲಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಮಾರಾಟ ಸರಿಯಲ್ಲ – ಜನೌಷಧಿ ಕೇಂದ್ರಗಳ ಸ್ಥಗಿತದ ಹಿಂದೆ ರಾಜಕೀಯ ಉದ್ದೇಶವಿಲ್ಲ – ಗುಂಡೂರಾವ್

    ಸರ್ಕಾರದ ಆದೇಶವನ್ನು ಪ್ರಶ್ನಿಸಿ, ಸಂಸದ ತೇಜಸ್ವಿ ಸೂರ್ಯ ಮತ್ತು ಹಲವು ಜನೌಷಧಿ ಕೇಂದ್ರಗಳ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ತಡೆಯಾಜ್ಞೆಯಿಂದಾಗಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಔಷಧಿಗಳು ಲಭ್ಯವಾಗುವ ಸೌಲಭ್ಯ ಮುಂದುವರೆಯಲಿದ್ದು, ಜನಸಾಮಾನ್ಯರಿಗೆ ತಾತ್ಕಾಲಿಕವಾಗಿ ನಿರಾಳವಾಗಿದೆ.

    ನ್ಯಾಯಾಲಯದ ಕ್ರಮವನ್ನು ಸ್ವಾಗತಿಸಿರುವ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಸರ್ಕಾರದ ಜನಪರ ಕಾರ್ಯಗಳನ್ನು ವಿರೋಧಿಸುವ ಏಕೈಕ ಉದ್ದೇಶದಿಂದ ರಾಜ್ಯದ ಸಾರ್ವಜನಿಕರಿಗೆ ಸಂಕಷ್ಟ ನೀಗಿಸುವುದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ವ್ಯತಿರಿಕ್ತ ಅಭಿಪ್ರಾಯ ರೂಪಿಸುವ ಕಾರಣದಿಂದ ಕಾಂಗ್ರೆಸ್ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರಕ್ಕೆ ಬಂದಿದ್ದು, ಅದರ ಜನವಿರೋಧಿ ನೀತಿಯನ್ನು ವ್ಯಕ್ತಪಡಿಸುತ್ತದೆ. ನ್ಯಾಯಾಲಯದ ಕ್ರಮವು ರಾಜ್ಯ ಸರ್ಕಾರಕ್ಕೆ ದೊಡ್ಡ ಮುಖಭಂಗವಾಗಿದ್ದು, ಜನವಿರೋಧಿ ಕ್ರಮಗಳಿಗೆ ತಡೆ ನೀಡುವ ವಿಕೃತ ಮನೋಭಾವಕ್ಕೆ ಚಾಟಿ ಏಟು ಕೊಟ್ಟಂತಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಜನೌಷಧಿ ಕೇಂದ್ರಗಳ ಪುನರಾರಂಭಕ್ಕೆ ಸಂಸದ ಕಾರಜೋಳ ಆಗ್ರಹ

    ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ (PMBJP) ಅಡಿಯಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಜೆನೆರಿಕ್ ಔಷಧಿಗಳನ್ನು ಒದಗಿಸುವ ಗುರಿ ಹೊಂದಿದೆ. ಕರ್ನಾಟಕದಲ್ಲಿ ನೂರಾರು ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಸಾವಿರಾರು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಿವೆ.

  • ಸ್ಮಾರ್ಟ್ ಮೀಟರ್ ಅಳವಡಿಕೆ ವಿಚಾರ – ಜು.9ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

    ಸ್ಮಾರ್ಟ್ ಮೀಟರ್ ಅಳವಡಿಕೆ ವಿಚಾರ – ಜು.9ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

    ಬೇರೆ ರಾಜ್ಯಗಳಲ್ಲಿ 900 ಆದ್ರೆ ಕರ್ನಾಟಕದಲ್ಲಿ 10 ಸಾವಿರ ಯಾಕೆ ಎಂದು ಪ್ರಶ್ನಿಸಿದ ಪೀಠ

    ಬೆಂಗಳೂರು: ಕರ್ನಾಟಕದಲ್ಲಿ ಸ್ಮಾರ್ಟ್ ಮೀಟರ್ (Smart Meter) ಅಳವಡಿಕೆ ವಿಚಾರವಾಗಿ ಹೈಕೋರ್ಟ್ (High Court) ಅರ್ಜಿ ವಿಚಾರಣೆಯನ್ನು ಜುಲೈ 9ಕ್ಕೆ ಮುಂದೂಡಿದೆ.

    ವಿಚಾರಣೆ ನಡೆಸಿದ ಪೀಠವು ಸರ್ಕಾರದ ನಡೆಯ ಬಗ್ಗೆ ಪ್ರಶ್ನಿಸಿದೆ. ಬೇರೆ ರಾಜ್ಯಗಳಿಗೂ ಹಾಗೂ ನಮ್ಮ ರಾಜ್ಯಕ್ಕೂ ಹಣದ ವ್ಯತ್ಯಾಸ ಯಾಕೆ ಬರುತ್ತಿದೆ. ಹಳೆ ಮೀಟರ್‌ಗೂ, ಹೊಸ ಸ್ಮಾರ್ಟ್ ಮೀಟರ್‌ಗೂ ವ್ಯತ್ಯಾಸ ಏನಿದೆ, ಇದರ ವಿಶೇಷತೆಗಳೆನು ಎಂದು ಕೇಳಿದೆ.ಇದನ್ನೂ ಓದಿ: ಶಿರಸಿ ನಗರಸಭೆಯಲ್ಲಿ 21 ಲಕ್ಷ ಮೌಲ್ಯದ ಐರನ್ ಪೈಪ್ ಕಳ್ಳತನ ಕೇಸ್‌ – ನಗರಸಭೆ ಕಮಿಷನರ್, ಮಾಜಿ ಅಧ್ಯಕ್ಷ ಸೇರಿ 7 ಆರೋಪಿಗಳು

    ಇದೇ ವೇಳೆ ಅರ್ಜಿದಾರರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ್ ವಾದ ಮಾಡಿ, ಸ್ಮಾರ್ಟ್ ಮೀಟರ್ ಅಳವಡಿಕೆಯ ಮಾರ್ಗಸೂಚಿಯಲ್ಲಿ ಏನೋ ವಿಚಾರ ಅಡಗಿದೆ. ಅದನ್ನು ಓದಿ ಅರ್ಥ ಮಾಡಿಕೊಳ್ಳುವುದು ನಮಗೆ ಕಷ್ಟ ಆಗಿದೆ. ತ್ರಿ-ಫೇಸ್ ಮೀಟರ್‌ಗೆ 10 ಸಾವಿರ ರೂ. ಆಗುತ್ತದೆ. ಹೀಗಾಗಿ ಹೊಸ ಮಾರ್ಗಸೂಚಿಯಿಂದ ಜನರಿಗೆ ಹೊರೆ ಆಗ್ತಿದೆ ಎಂದು ವಾದ ಮಂಡಿಸಿದರು.

    ವಾದ ಆಲಿಸಿದ ನ್ಯಾಯಾಲಯ ಮಾರ್ಗಸೂಚಿ ಬಗ್ಗೆ ಯಾಕಿಷ್ಟು ಗೊಂದಲ? ಕಾರ್ಯ ನಿರ್ವಹಣೆಯಲ್ಲಿರುವ ಮಾರ್ಗಸೂಚಿ ಎಂದು ಗ್ರಾಹಕರಿಗೆ ಆಪರೇಷನ್ ಮಾಡ್ತಿದ್ದೀರಾ? ವಿದ್ಯುತ್ ಸಂಪರ್ಕಕ್ಕೆ 10 ಸಾವಿರ ರೂ. ಕೊಡಲು ಆಗುತ್ತಾ? ಬಡವರಿಗೆ ಅಷ್ಟು ಹಣ ನೀಡಲು ಆಗುತ್ತಾ? ಗ್ರಾಹಕರಿಗೆ ಸಮಸ್ಯೆ ಆಗಬಾರದು ಎಂದು ಎಜಿಗೆ ಸೂಚನೆ ನೀಡಿದೆ.

    ರಾಜ್ಯದಲ್ಲಿ 10 ಸಾವಿರ ರೂ. ಇರುವ ಸ್ಮಾರ್ಟ್ ಮೀಟರ್ ಬೇರೆ ರಾಜ್ಯದಲ್ಲಿ 900 ರೂ. ಹೇಗೆ? ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿ ಎಂದು ತಿಳಿಸಿ, ವಿಚಾರಣೆಯನ್ನು ಬುಧವಾರಕ್ಕೆ (ಜು.9) ಮುಂದೂಡಿದೆ.ಇದನ್ನೂ ಓದಿ: ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿಯ ಸೀರಿಯಲ್ ಫಸ್ಟ್ ಲುಕ್ ಔಟ್

  • ಕೆಆರ್‌ಎಸ್ ಬಳಿ ಮನರಂಜನಾ ಪಾರ್ಕ್ ಕಾಮಗಾರಿ – ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

    ಕೆಆರ್‌ಎಸ್ ಬಳಿ ಮನರಂಜನಾ ಪಾರ್ಕ್ ಕಾಮಗಾರಿ – ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

    ಬೆಂಗಳೂರು: ಕೆಆರ್‌ಎಸ್‌ (KRS) ಬಳಿ ಡಿಸ್ನಿಲ್ಯಾಂಡ್ ಮಾದರಿಯ ಮನರಂಜನಾ ಪಾರ್ಕ್ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕಾವೇರಿ ನೀರಾವರಿ ನಿಗಮಕ್ಕೆ (Cauvery Neeravari Nigama) ಹೈಕೋರ್ಟ್ (High Court) ನೋಟಿಸ್ ನೀಡಿದೆ.

    ಕಾವೇರಿ ಆರತಿಗೆ (Kaveri Aarti) ನಿರ್ಮಾಣ ಕಾಮಗಾರಿ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್, ಡ್ಯಾಮ್ ಸುರಕ್ಷತಾ ಸಮಿತಿಗೂ ನೋಟಿಸ್ ನೀಡಿದೆ. ಕಾಮಗಾರಿಗೆ ಯಂತ್ರಗಳನ್ನು ಉಪಯೋಗಿಸಿರುವ ಫೋಟೋಗಳನ್ನು ಅರ್ಜಿದಾರರ ಪರ ವಕೀಲ ಎಂ.ಶಿವಪ್ರಕಾಶ್ ಸಲ್ಲಿಸಿದರು. ಇದನ್ನೂ ಓದಿ: ವಾರಕ್ಕೆ 3 ದಿನ ಕಾವೇರಿ ಆರತಿ – 10,000 ಆಸನಗಳ ವ್ಯವಸ್ಥೆ, 70% ಉಚಿತ, 30% ಟಿಕೆಟ್: ಡಿಕೆಶಿ

    ಡ್ಯಾಮ್ ಬಳಿ 120 ಅಡಿಯ ಕಾವೇರಿ ವಿಗ್ರಹ ಸ್ಥಾಪಿಸಲಾಗುತ್ತಿದೆ. ಸದ್ಯಕ್ಕೆ ಕಾವೇರಿ ಪ್ರತಿಮೆ ಮಾತ್ರ ಸ್ಥಾಪಿಸಲು ಟೆಂಡರ್ ನೀಡಲಾಗಿದೆ. ಕಾವೇರಿ ಪ್ರತಿಮೆ ಸ್ಥಾಪನೆಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆ. ಮನರಂಜನಾ ಪಾರ್ಕ್ ಟೆಂಡರ್ ಪೂರ್ಣಗೊಂಡಿಲ್ಲವೆಂದು ಸರ್ಕಾರದ ಪರ ವಕೀಲರು ವಾದ ಮಂಡಿಸಿದರು.

    ಕಾಮಗಾರಿಗೆ ಅಗೆಯುವುದರಿಂದ ಡ್ಯಾಮ್‍ಗೆ ಹಾನಿಯಾಗುವುದಿಲ್ಲವೇ? ಡ್ಯಾಮ್ ಸುರಕ್ಷತೆ ಸಮಿತಿಯ ಅನುಮತಿ ಏಕೆ ಪಡೆದಿಲ್ಲ? ಮನರಂಜನಾ ಪಾರ್ಕ್ ಕಾಮಗಾರಿಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆಯೇ? ಕಾವೇರಿ ಪ್ರತಿಮೆ ಸ್ಥಾಪಿಸುವಾಗ ತಜ್ಞರ ಸಲಹೆ ಪಾಲಿಸಲಾಗಿದೆಯೇ ಎಂದು ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನಿಸಿತು.

    ಈ ಬಗ್ಗೆ 2 ವಾರದಲ್ಲಿ ಪ್ರತಿಕ್ರಿಯಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಆಪ್ತರಿಂದ ಫುಲ್ ಟರ್ಮ್ ಸಿಎಂ ಗೇಮ್ ಚಾಲೂ: ಸಿಎಂ ಸಮರ್ಥನೆ, ಜಾರಿಕೊಂಡ ಡಿಸಿಎಂ, ಅಸಲಿ ಕಹಾನಿ ಏನು!?

  • ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ – ಹೆಚ್‌ಡಿಕೆಗೆ ಬಿಗ್ ರಿಲೀಫ್

    ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ – ಹೆಚ್‌ಡಿಕೆಗೆ ಬಿಗ್ ರಿಲೀಫ್

    ಬೆಂಗಳೂರು: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ(Kethaganahalli Land Encroachment Case) ಕೇಂದ್ರ ಭಾರೀ ಕೈಗಾರಿಕಾ ಸಚಿವ ಕುಮಾರಸ್ವಾಮಿಗೆ (HD Kumaraswamy) ಹೈಕೋರ್ಟ್‌ನಿಂದ (High Court) ಬಿಗ್ ರಿಲೀಫ್ ಸಿಕ್ಕಿದೆ.

    ಬಿಡದಿಯ ಕೇತಗಾನಹಳ್ಳಿ ಬಳಿಯ ಸರ್ವೆ ನಂಬರ್ 7,8,9 ರ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡ ತನಿಖೆಗೆ ಎಸ್‌ಐಟಿ ರಚನೆ ಮಾಡಿತ್ತು.  ಇದನ್ನೂ ಓದಿ: Thug Life | ಹಿಂಸಾಚಾರ, ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಯಾಕಿಲ್ಲ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

     

    ಎಸ್‌ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಕುಮಾರಸ್ವಾಮಿ ಪರ ವಕೀಲರಾದ ಉದಯ್ ಹೊಳ್ಳ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಸಂದರ್ಭದಲ್ಲಿ ಔಪಚಾರಿಕವಾಗಿ ಯಾವುದೇ ತೆರನಾದ ಅಧಿಸೂಚನೆಯನ್ನು ಪ್ರಕಟಿಸಿಲ್ಲ ಎಂದು ಮಂಡಿಸಿದರು. ಇದನ್ನೂ ಓದಿ: ಬೆಂಗಳೂರು | ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್ ಸಾವು

    ವಾದ ಪುರಸ್ಕರಿಸಿದ ಹೈಕೋರ್ಟ್ ಏಕ ಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ. ಜೊತೆಗೆ ಎಸ್‌ಐಟಿ ರಚನೆಯ ಬಳಿಕ ಕುಮಾರಸ್ವಾಮಿಗೆ ನೀಡಿದ್ದ ಸಮನ್ಸ್ ಅನ್ನು ಕೂಡ ತಡೆ ಹಿಡಿದಿದ್ದು, ರಾಮನಗರ ಜಿಲ್ಲಾಧಿಕಾರಿ ಮತ್ತು ತಹಸಿಲ್ದಾರ್‌ಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

  • ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದ್ದಕ್ಕೆ ಸಾಕ್ಷ್ಯ ಸಿಕ್ಕಿದೆ – ನ್ಯಾ.ವರ್ಮಾ ವಜಾಗೆ ಸುಪ್ರೀಂ ಸಮಿತಿ ಶಿಫಾರಸು

    ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದ್ದಕ್ಕೆ ಸಾಕ್ಷ್ಯ ಸಿಕ್ಕಿದೆ – ನ್ಯಾ.ವರ್ಮಾ ವಜಾಗೆ ಸುಪ್ರೀಂ ಸಮಿತಿ ಶಿಫಾರಸು

    ನವದೆಹಲಿ: ಮನೆಯಲ್ಲಿ ಕಂತೆ ಕಂತೆ ನೋಟು (Cash) ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನ (Delhi High Court) ಮಾಜಿ ನ್ಯಾ.ನ್ಯಾಯಮೂರ್ತಿ ಯಶವಂತ್ ವರ್ಮಾ (Justice Yashwant Varma) ಅವರನ್ನು ವಜಾಗೊಳಿಸುವಂತೆ ಮೂವರು ಹಿರಿಯ ನ್ಯಾಯಾಧೀಶರ ಸಮಿತಿ ಶಿಫಾರಸು ಮಾಡಿದೆ.

    ಕಂತೆ ಕಂತೆ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ (Supreme Court) ನೇಮಿಸಿದ ಸಮಿತಿಯು 55 ಸಾಕ್ಷಿಗಳನ್ನು ಸಂದರ್ಶಿಸಿ ನ್ಯಾಯಮೂರ್ತಿ ವರ್ಮಾ ಅವರ ಹೇಳಿಕೆಯನ್ನು ದಾಖಲಿಸಿಕೊಂಡು ಶಿಫಾರಸು ಮಾಡಿದೆ.

    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಿಎಸ್ ಸಂಧಾವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಮನ್‌ ಇದ್ದ ಸಮಿತಿ ತನ್ನ ಅಂತಿಮ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದೆ. ಇದನ್ನೂ ಓದಿ:ಆರ್‌ಸಿಬಿ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡಿದೆ – ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಬಾಂಬ್

    ನ್ಯಾ. ಯಶವಂತ್ ವರ್ಮಾ ಅವರ ನಿವಾಸದೊಳಗೆ ನೋಟುಗಳ ದೊಡ್ಡ ರಾಶಿ ಇರುವುದನ್ನು ಹಲವು ಮಂದಿ ನೋಡಿದ್ದಾರೆ. ಆದರೆ ವರ್ಮಾ ಅವರು ಎಂದಿಗೂ ದೂರು ದಾಖಲಿಸಿಲ್ಲ ಅಥವಾ ನ್ಯಾಯಾಂಗದ ಅಧಿಕಾರಿಗಳಿಗೆ ತಿಳಿಸಿಲ್ಲ ಎಂದು ಸಮಿತಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರ ಈ ನಡವಳಿಕೆಯನ್ನು ಅಸ್ವಾಭಾವಿಕ ಎಂದು ಕರೆದಿರುವ ಸಮಿತಿಯು ಅವರನ್ನು ವಜಾಗೊಳಿಸುವಂತೆ ಶಿಫಾರಸು ಮಾಡಿದೆ.

    ನ್ಯಾ. ವರ್ಮಾ ಅವರ ಮಗಳು ಸೇರಿದಂತೆ 55 ಸಾಕ್ಷಿಗಳನ್ನು ವಿಚಾರಣೆ ನಡೆಸಿದ ಸಮಿತಿ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿಯಿಂದ ಕೋಣೆಯ ನೆಲದಾದ್ಯಂತ ಹರಡಿರುವ 500 ರೂ. ನೋಟುಗಳ ದೊಡ್ಡ ರಾಶಿಯನ್ನು ವಿಡಿಯೋ ಮತ್ತು ಫೋಟೋಗಳನ್ನು ಪರಿಶೀಲಿಸಿದೆ. ಇಷ್ಟು ದೊಡ್ಡ ಮೊತ್ತದ ಹಣವನ್ನು ನೋಡಿ ನನಗೆ ಆಘಾತ ಮತ್ತು ಆಶ್ಚರ್ಯವಾಯಿತು. ನನ್ನ ಜೀವನದಲ್ಲಿ ಇಷ್ಟೊಂದು ಹಣವನ್ನು ನಾನು ಮೊದಲ ಬಾರಿಗೆ ನೋಡಿದ್ದೇನೆ ಎಂದು ಒಬ್ಬ ಸಾಕ್ಷಿ ಸಮಿತಿಗೆ ತಿಳಿಸಿದ್ದಾರೆ ಎಂದು ವರದಿ ಹೇಳಿದೆ. ಇದನ್ನೂ ಓದಿ: ಹಿಂಸಾಚಾರಕ್ಕೆ ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಯಾಕಿಲ್ಲ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ವರ್ಮಾ ಅವರು ಸಮರ್ಥನೀಯ ವಿವರಣೆಯನ್ನು ನೀಡಿಲ್ಲ. ಯಾವುದೇ ಪಿತೂರಿ ಇದ್ದರೆ ಅವರು ದೂರು ದಾಖಲಿಸಿಲ್ಲ ಯಾಕೆ? ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಥವಾ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಮಾಹಿತಿ ನೀಡಿಲ್ಲ ಯಾಕೆ ಎಂದು ಸಮಿತಿ ಪ್ರಶ್ನಿಸಿದೆ.

    ಸಮಿತಿಯೂ ಅಂಕಿತ್ ಸೆಹ್ವಾಗ್ (ಅಗ್ನಿಶಾಮಕ ಅಧಿಕಾರಿ, ಡಿಎಫ್‌ಎಸ್), ಪ್ರದೀಪ್ ಕುಮಾರ್ (ಅಗ್ನಿಶಾಮಕ ಅಧಿಕಾರಿ, ಡಿಎಫ್‌ಎಸ್), ಮನೋಜ್ ಮೆಹ್ಲಾವತ್ (ಸ್ಟೇಷನ್ ಆಫೀಸರ್, ಡಿಎಫ್‌ಎಸ್), ಭನ್ವರ್ ಸಿಂಗ್ (ಚಾಲಕ, ಡಿಎಫ್‌ಎಸ್), ಪ್ರವೀಂದ್ರ ಮಲಿಕ್ (ಅಗ್ನಿಶಾಮಕ ಅಧಿಕಾರಿ, ಡಿಎಫ್‌ಎಸ್), ಸುಮನ್ ಕುಮಾರ್ (ಸಹಾಯಕ ವಿಭಾಗೀಯ ಅಧಿಕಾರಿ, ಡಿಎಫ್‌ಎಸ್), ರಾಜೇಶ್ ಕುಮಾರ್ (ತುಘಲಕ್ ರಸ್ತೆ ಪೊಲೀಸ್ ಠಾಣೆ)  ಸುನಿಲ್ ಕುಮಾರ್ (ಐಸಿಪಿಸಿಆರ್ ಉಸ್ತುವಾರಿ), ರೂಪ್ ಚಂದ್ (ಹೆಡ್ ಕಾನ್ಸ್‌ಟೇಬಲ್), ಮತ್ತು ಉಮೇಶ್ ಮಲಿಕ್ (ಎಸ್‌ಎಚ್‌ಒ, ತುಘಲಕ್ ರಸ್ತೆ ಪೊಲೀಸ್ ಠಾಣೆ) ಅವರನ್ನು ವಿಚಾರಣೆ ನಡೆಸಿದೆ.