ಬೆಂಗಳೂರು: ರಾತ್ರಿ ಹೊತ್ತು ತಮ್ಮ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದಲ್ಲಿನ ರಸ್ತೆ ಬಳಸಲು ಸಚಿವ ಕೆ.ಜೆ ಜಾರ್ಜ್ ಪುತ್ರ ರಾಣಾ ಜಾರ್ಜ್‌ಗೆ ಹೈಕೋರ್ಟ್ ಅನುಮತಿ ನೀಡಿದೆ.
ರಾತ್ರಿ ಹೊತ್ತು ತಮ್ಮ ಜಮೀನಿಗೆ ತೆರಳಲು ಅಭಯಾರಣ್ಯದಲ್ಲಿ ಹಾದುಹೋಗಲು ಅನುಮತಿ ನೀಡುವಂತೆ ರಾಣಾ ಜಾರ್ಜ್ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ವನ್ಯಜೀವಿಗಳಿಗೆ ತೊಂದರೆಯಾಗದಂತೆ ಸಂಚಾರ ನಡೆಸುವಂತೆ ಆದೇಶಿಸಿದೆ.
ರಾಣಾ ಜಾರ್ಜ್ ಅವರ ಜಮೀನು, ಹೆಚ್‌ಡಿ ಕೋಟೆಯ ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿದೆ. ಇಲ್ಲಿಗೆ ನುಗು ವನ್ಯಜೀವಿ ಅಭಯಾರಣ್ಯದ ರಸ್ತೆ ಮಾರ್ಗ ಮೂಲಕ ರಾತ್ರಿ-ಹಗಲು ಓಡಾಡಲು ಅನುಮತಿ ಕೋರಲಾಗಿತ್ತು. ರಾತ್ರಿ, ಹಗಲು ಸಂಚಾರಕ್ಕೆ ಅನುಮತಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
– ಕ್ಷಮೆಯಾಚನೆ ಪತ್ರದಲ್ಲಿ ಕೊಡಿ – ಕೋರ್ಟ್ ಸೂಚನೆ – ಜೂ.16ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಕಲಬುರಗಿ (Kalaburagi) ಡಿಸಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ರವಿಕುಮಾರ್ (N.Ravikumar) ವಿರುದ್ಧ ಹೈಕೋರ್ಟ್ (High Court) ಚಾಟಿ ಬೀಸಿದೆ.
ಹೇಳಿಕೆ ವಿರುದ್ಧ ದಾಖಲಾದ ಎಫ್‍ಐಆರ್ ರದ್ದು ಕೋರಿ ರವಿಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಈ ವೇಳೆ ರವಿಕುಮಾರ್ ಅವರನ್ನು ಪೀಠ ತೀವ್ರ ತರಾಟೆಗೆ ತೆಗೆದುಕೊಂಡಿತು. ಭಾರತೀಯ ಸೇನೆಯ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿಯವರ ವಿರುದ್ಧ ಹೇಳಿಕೆ ಗಮನಿಸಿದ್ದೀರಿ ಅಲ್ವಾ? ಆ ಸಚಿವರ ಹೇಳಿಕೆಗೆ ಮಧ್ಯಪ್ರದೇಶ ಹೈಕೋರ್ಟ್ ಆದೇಶ ಮಾಡಿರುವುದು ಗೊತ್ತಿದೆಯಾ? ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಅಲ್ಲದೇ ನಿಮ್ಮ ಹೇಳಿಕೆ ಸರ್ವತಾ ಅನಗತ್ಯವಾದದ್ದು. ನೀವು ಈ ರೀತಿ ಹೇಳಿಕೆ ಕೊಡಬಾರದು ಎಂದು ಕೋರ್ಟ್ ತಾಕೀತು ಮಾಡಿದೆ. ಇದನ್ನೂ ಓದಿ: ಕಲಬುರಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ – ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಬಂಧನ ಭೀತಿ!
ರವಿಕುಮಾರ್ ಪರ ವಕೀಲರು, ಅವರು ಕ್ಷಮೆಯಾಚಿಸುತ್ತಾರೆ ಎಂದು ಕೋರ್ಟ್‍ಗೆ ಮನವಿ ಮಾಡಿದರು. ಕ್ಷಮೆಯಾಚನೆಯನ್ನು ಪ್ರಮಾಣ ಪತ್ರದ ಮೂಲಕ ಸಲ್ಲಿಸಲು ಕೋರ್ಟ್ ಸೂಚನೆ ನೀಡಿತು.
ರವಿಕುಮಾರ್ ಅವರನ್ನು ಬಂಧಿಸುವುದಿಲ್ಲ. ಅವರು ತನಿಖೆಗೆ ಸಹಕರಿಸಲಿ ಎಂದು ಎಸ್‍ಪಿಪಿ ಜಗದೀಶ್ ಹೈಕೋರ್ಟ್‍ಗೆ ತಿಳಿಸಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾಲಯ ಜೂನ್ 19 ಕ್ಕೆ ವಿಚಾರಣೆ ಮುಂದೂಡಿತು.
ರವಿಕುಮಾರ್ ಹೇಳಿದ್ದೇನು?
ಮೇ 24 ರಂದು ಬಿಜೆಪಿಯ ʻಕಲಬುರಗಿ ಚಲೋʼ ಪ್ರತಿಭಟನಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ ಎನ್. ರವಿಕುಮಾರ್, ʻʻಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಿಂದ ಕಾರ್ಯನಿರ್ವಹಿಸುತ್ತಿದೆ. ಕಲಬುರಗಿ ಡಿಸಿ ಕಚೇರಿಯೂ ತನ್ನ ಸ್ವಾತಂತ್ರ್ಯ ಕಳೆದುಕೊಂಡಿದೆ. ಡಿಸಿ ಮೇಡಂ ಅವರು (ಕಾಂಗ್ರೆಸ್) ಹೇಳುವುದನ್ನು ಸಹ ಕೇಳುತ್ತಿದ್ದಾರೆ. ಡಿಸಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ತಿಳಿದಿಲ್ಲʼʼ ಎಂದು ನಾಲಿಗೆ ಹರಿಬಿಟ್ಟಿದ್ದರು. ಈ ವೇಳೆ ಜನರ ಚಪ್ಪಾಳೆಗೆ ಪ್ರತಿಕ್ರಿಯಿಸಿ, ನಿಮ್ಮ ಚಪ್ಪಾಳೆ ನೋಡಿದರೆ, ʻಡಿಸಿ ಬಹುಶಃ ಪಾಕಿಸ್ತಾನದಿಂದ ಬಂದಿದ್ದಾರೆʼ ಎಂದು ಅವಹೇಳನ ಮಾಡಿದ್ದರು.
ಇದರ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ರವಿಕುಮಾರ್ ಅವರ ಹೇಳಿಕೆ ವಿರುದ್ಧ ರಾಜ್ಯ ಸರ್ಕಾರ ಕೂಡ ಕ್ರಮ ಕೈಗೊಳ್ಳಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ – ನದಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ
ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣ (Hubballi Riot) ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಕರ್ನಾಟಕ ರಾಜ್ಯ ಸರ್ಕಾರದ (Karnataka Government) ಆದೇಶವನ್ನು ಕರ್ನಾಟಕ ಹೈಕೋರ್ಟ್ (High Court) ರದ್ದುಗೊಳಿಸಿದೆ.
ಸಂಘಟನಾ ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ 43 ಪ್ರಕರಣಗಳನ್ನು ಅಕ್ಟೋಬರ್ 10, 2024 ರಂದು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ದ್ವಿಸದಸ್ಯ ಪೀಠ ಇಂದು ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ಹುದ್ದೆಗಳಿಗೆ ರಾಜೀನಾಮೆ – ಸಿಡಿದ ದಕ್ಷಿಣ ಕನ್ನಡ ಮುಸ್ಲಿಮರು
ನ್ಯಾ.ಎನ್.ವಿ.ಅಂಜಾರಿಯಾ ಅವರು ಸುಪ್ರೀಂ ಕೋರ್ಟ್ ಜಡ್ಜ್ ಆಗಿ ನೇಮವಾಗಿದ್ದು ಇಂದು ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಕೊನೆಯ ಬಾರಿ ತೀರ್ಪು ಪ್ರಕಟಿಸಿದರು. ಈ ವೇಳೆ, ನಿಮ್ಮೆಲ್ಲರಿಗೂ ತುಂಬಾ ಧನ್ಯವಾದಗಳು. ಇದು ನನ್ನ ಕೊನೆಯ ಬಾರಿ ಈ ಪೀಠದಲ್ಲಿ ಕುಳಿತಿದ್ದೇನೆ. ಎಲ್ಲಾ ವಕೀಲರಿಗೆ, ಎಲ್ಲಾ ಸಿಬ್ಬಂದಿಗೆ ಧನ್ಯವಾದ ಹೇಳುತ್ತೇನೆ. ಇದು ನನ್ನ ಕೊನೆಯ ಆದೇಶ ಎಂದು ತಿಳಿಸಿದರು.
ಪಿಐಎಲ್ ವಿಚಾರಣೆಯ ಸಂದರ್ಭದಲ್ಲೇ ಕೋರ್ಟ್ ಸಚಿವ ಸಂಪುಟದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪುವುದಿಲ್ಲ, ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ ಎಂದು ಹೇಳಿತ್ತು.
ಅರ್ಜಿದಾರರ ಪರ ವಕೀಲರು ಪ್ರಭಾವಿ ವ್ಯಕ್ತಿಗಳೂ ಸೇರಿದಂತೆ ಕೆಲವು ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಅಪರಾಧ ದಂಡ ಸಂಹಿತೆ ಸೆಕ್ಷನ್ 321ಕ್ಕೆ ವಿರುದ್ಧವಾಗಿ ಸರಕಾರ ಹಿಂಪಡೆದಿದೆ ಎಂದು ಹೇಳಿರುವುದು ಮೇಲ್ನೋಟಕ್ಕೆ ಸಮರ್ಥನೀಯವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್ – 108 ಆರೋಪಿಗಳಿಗೆ ಜಾಮೀನು, ದರ್ಗಾದಲ್ಲಿ ಸಂಭ್ರಮಾಚರಣೆ
ಏನಿದು ಹುಬ್ಬಳ್ಳಿ ಪ್ರಕರಣ?
ಏಪ್ರಿಲ್ 16, 2022 ರಂದು ಯುವಕನೊಬ್ಬ ವಿವಾದಾತ್ಮಕ ಪೋಸ್ಟ್ ಒಂದನ್ನು ಹಾಕಿದ್ದ. ಈ ವಿಚಾರಕ್ಕೆ ಸಂಬಂಧಿಸಿ ಗಲಭೆ ನಡೆದು ಉದ್ರಿಕ್ತರು ಹಳೆ ಹುಬ್ಬಳ್ಳಿ ಠಾಣೆ ಎದುರು ಪೊಲೀಸರು ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಸಂಬಂಧ 11 ಎಫ್‌ಐಆರ್ ದಾಖಲಾಗಿ 155 ಮದಿ ಮೇಲೆ ಕೇಸ್ ದಾಖಲಾಗಿತ್ತು. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಪೊಲೀಸ್ ವಾಹನಗಳಿಗೆ ಹಾನಿಯಾಗಿದ್ದರೆ ಇಬ್ಬರು ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದರು.
ಸೆಪ್ಟೆಂಬರ್ 2024 ಎಲ್ಲಾ ಜಿಲ್ಲೆಗಳ ಎಸ್ಪಿ, ಕಮೀಷನರ್ ಗಳಿಗೆ ಪತ್ರ ಬರೆದಿದ್ದ ಡಿಜಿ-ಐಜಿ ನಿಮ್ಮ ಜಿಲ್ಲೆಗಳಲ್ಲಿ ಕೇಸ್ ವಾಪಸ್ ಪಡೆಯುವ ಪ್ರಕರಣಗಳ ಬಗ್ಗೆ ಮಾಹಿತಿ ನೀಡುವಂತೆ ಕೋರಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ (Cabinet Meeting) ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣವನ್ನು ವಾಪಸ್ ಪಡೆಯುವ ನಿರ್ಧಾರ ಕೈಗೊಳ್ಳಲಾಗಿತ್ತು. ಮುಸ್ಲಿಮರನ್ನು ಒಲೈಕೆ ಮಾಡಲು ಈ ಕೇಸ್ ಹಿಂಪಡೆಯಲಾಗಿದೆ ಎಂದು ಹೇಳಿ ಬಿಜೆಪಿ ಭಾರೀ ಪ್ರತಿಭಟನೆ ನಡೆಸಿತ್ತು.
ಬೆಂಗಳೂರು: ಕನ್ನಡದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ (Sonu Nigam) ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ (High Court) ಆದೇಶಿಸಿದೆ.
ಬೆಂಗಳೂರಿನ (Bengaluru) ಖಾಸಗಿ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್‌ಗೆ ಕನ್ನಡ (Kannada) ಹಾಡು ಹೇಳಿ ಎಂದಿದ್ದಕ್ಕೆ, ಇದಕ್ಕೆ ಪಹಲ್ಗಾಮ್ ದಾಳಿ ನಡೆದಿದ್ದು ಎಂದಿದ್ದರು. ಈ ಹೇಳಿಕೆ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ರದ್ದು ಕೋರಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ಗಾಯಕನ ವಿರುದ್ಧ ತನಿಖಾಧಿಕಾರಿಗಳು ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ. ಇದ್ನನೂ ಓದಿ: ಕನ್ನಡ.. ಕನ್ನಡ ಇದಕ್ಕೇನೇ ಭಯೋತ್ಪಾದಕ ದಾಳಿ ನಡೆದಿದ್ದು – ವಿವಾದ ಮೈಮೇಲೆಳೆದುಕೊಂಡ ಸೋನು ನಿಗಮ್
ಅರ್ಜಿ ವಿಚಾರಣೆ ವೇಳೆ, ಸೋನು ನಿಗಮ್‌ಗೆ ವಿಚಾರಣೆಗೆ ಹಾಜರಾಗಲು ಹೈಕೋರ್ಟ್ ಸೂಚಿಸಿತು. ಈ ವೇಳೆ ಠಾಣೆಗೆ ಹಾಜರಾಗಲು ವಿನಾಯಿತಿ ನೀಡುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ವೀಡಿಯೋ ಕಾನ್ಫರೆನ್ಸ್ ಮೂಲಕ ಹೇಳಿಕೆ ದಾಖಲಿಸಲು ಅನುಮತಿ ನೀಡಿತು.
ಸೋನು ನಿಗಮ್ ಹೇಳಿಕೆ ದಾಖಲು ಮಾಡುವುದು ಅನಿವಾರ್ಯವಾದರೆ, ತನಿಖಾಧಿಕಾರಿ ಸೋನು ನಿಗಮ್ ನಿವಾಸಕ್ಕೆ ತೆರಳಲು ಅವಕಾಶವಿದೆ. ಆದರೆ ಈ ಖರ್ಚು ವೆಚ್ಚವನ್ನು ಅರ್ಜಿದಾರರು ಭರಿಸಬೇಕು ಎಂದು ಆದೇಶಿಸಲಾಗಿದೆ.
ಸೋನು ನಿಗಮ್ ಪರ ವಕೀಲ ಧನಂಜಯ್ ವಿದ್ಯಾಪತಿ ವಾದ ಮಂಡಿಸಿದರು. ಮಾಧ್ಯಮಗಳಲ್ಲಿ ವರದಿಯಾಗಿದ್ದಕ್ಕಾಗಿ ಈ ಪ್ರಕರಣ ದಾಖಲಿಸಲಾಗಿದೆ. ಯಾರೋ ಮೂರನೇ ವ್ಯಕ್ತಿ ಕೊಟ್ಟ ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ. ಅರ್ಜಿದಾರರು ಕನ್ನಡಕ್ಕೆ ಅವಮಾನ ಮಾಡುವ ಕೃತ್ಯ ಎಸಗಿಲ್ಲ. ಈಗಾಗಲೇ ಕನ್ನಡಿಗರ ಕ್ಷಮೆ ಕೂಡ ಕೇಳಿದ್ದಾರೆ ಎಂದು ವಾದಿಸಿದರು. ಸರ್ಕಾರದ ಪರ ವಕೀಲ ಬಿ.ಎನ್ ಜಗದೀಶ್ ವಾದ ಮಂಡಿಸಿದರು.
ಭೋಪಾಲ್: ಹೊಗಳುವ ಭರದಲ್ಲಿ ಕರ್ನಲ್ ಸೋಫಿಯಾ ಖುರೇಷಿ (Colonel Sofiya Qureshi) ಅವರನ್ನು ಭಯೋತ್ಪಾದಕರ ಸಹೋದರಿ ಎಂದಿದ್ದ ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್ ಶಾ (Vijay Shah) ವಿರುದ್ಧ ಜಬ್ಬಲ್ಪುರ ಹೈಕೋರ್ಟ್ (Madhya Pradesh High Court) ಎಫ್‌ಐಆರ್ ದಾಖಲಿಸುವಂತೆ ಆದೇಶಿಸಿದೆ.
ತನ್ನ ಹೇಳಿಕೆ ವಿವಾದ ಆಗುತ್ತಿದ್ದಂತೆ ವಿಜಯ್ ಶಾ ಒಂದು ಬಾರಿಯಲ್ಲ 10 ಬಾರಿ ಕ್ಷಮೆ (Apology) ಕೇಳಲು ಸಿದ್ಧ. ನನ್ನ ಹೇಳಿಕೆಯ ಪೈಕಿ ಕೆಲ ಸಾಲನ್ನು ಹಿಡಿದುಕೊಂಡು ತಿರುಚಿ ವಿವಾದ ಸೃಷ್ಟಿಸಿದ್ದಾರೆ ಎಂದು ದೂರಿದ್ದಾರೆ. ವಿಜಯ್ ಶಾ ಹೇಳಿಕೆಯನ್ನು ರಾಷ್ಟ್ರೀಯ ಮಹಿಳಾ ಆಯೋಗವೂ ಖಂಡಿಸಿದೆ. ಇದನ್ನೂ ಓದಿ: Boycott Turkey – ಸೇಬು, ಚೆರ‍್ರಿ, ಮಾರ್ಬಲ್‌ಗಳ ಆಮದು ಬ್ಯಾನ್‌ಗೆ ನಿರ್ಧಾರ
भाषा की मर्यादा, शब्दों की गरिमा और सभ्यता की सारी सीमाएं लांघते हुए बेशर्म मंत्री विजय शाह ने घिनौना और शर्मनाक बयान दिया है।
• देश की शान, हमारी वीर बहादुर अफसर कर्नल सोफिया कुरैशी का अपमान पूरे भारत की नारी शक्ति का अपमान है।
ವಿಜಯ್ ಶಾ ಹೇಳಿದ್ದೇನು?
ಇಂದೋರ್ ಜಿಲ್ಲೆಯ ಮಾಹುವಿನ ರಾಯ್ಕುಂಡ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ್ ಶಾ ಅವರು ಪಾಕಿಸ್ತಾನ ವಿರುದ್ಧ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಿಕ್ಕಿದ ಯಶಸ್ಸನ್ನು ಹೇಳಿ ಮೋದಿ ಸರ್ಕಾರವನ್ನು ಶ್ಲಾಘಿಸುತ್ತಿದ್ದರು.
ಭಾಷಣದಲ್ಲಿ ವಿಜಯ್ ಶಾ ಮುಸ್ಲಿಂ ಸಮುದಾಯಕ್ಕೆ ಸೇರಿದ ಉಗ್ರರನ್ನು ಸದೆ ಬಡಿಯಲು ಮುಸ್ಲಿಂ ಸಮುದಾಯಕ್ಕೆ ಸೇರಿದ ಕರ್ನಲ್ ಸೋಫಿಯಾ ಖುರೇಷಿ ಅವರ ಹೆಸರನ್ನು ಸ್ಪಷ್ಟವಾಗಿ ಹೇಳದೇ ಇದ್ದರೂ ಅವರನ್ನು ಉಲ್ಲೇಖಿಸಿಯೇ ಭಾಷಣ ಮಾಡಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.
ಸ್ಮಾರ್ಟ್ ಮೀಟರ್ ಅಳವಡಿಕೆ ಪ್ರಶ್ನಿಸಿ ಜಯಲಕ್ಷ್ಮಿ ಎಂಬುವವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಸ್ಮಾರ್ಟ್ ಮೀಟರ್ ಅಳವಡಿಕೆಗೆ ಮಧ್ಯಂತರ ತಡೆ ನೀಡಿ, ಆಕ್ಷೇಪಣೆ ಸಲ್ಲಿಸಲು ಬೆಸ್ಕಾಂ ವಕೀಲರಿಗೆ ನೋಟಿಸ್ ಜಾರಿ ಮಾಡಿದೆ.
ನವದೆಹಲಿ: ವಕ್ಫ್ ಕಾಯ್ದೆಯ (Waqf Act) ಬಗ್ಗೆ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿರುವ ಬೆನ್ನಲ್ಲೇ ಸುಪ್ರೀಂ ಕೋರ್ಟ್ (Supreme Court) ಅರ್ಜಿ ವಿಚಾರಣೆಗೆ ಮಾನದಂಡ ಏನು ಎಂದು ವಕೀಲ ವಿಷ್ಣು ಶಂಕರ್ ಜೈನ್ (Vishnu Shankar Jain) ಪ್ರಶ್ನಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ಹಿಂದೂಗಳು (Hindu) ಈ ಹಿಂದೆ ವಕ್ಫ್ ಮಂಡಳಿಯ ಬಗ್ಗೆ ಅರ್ಜಿ ಸಲ್ಲಿಸಿದಾಗ ಸುಪ್ರೀಂ ಕೋರ್ಟ್ ಇಲ್ಲಿ ಯಾಕೆ ನೇರವಾಗಿ ಅರ್ಜಿ ಸಲ್ಲಿಸಿದ್ದೀರಿ. ಹೈಕೋರ್ಟ್‌ಗೆ (High Court) ಹೋಗಿ ಎಂದು ಸೂಚಿಸಿತ್ತು. ವಿವಿಧ ಹೈಕೋರ್ಟ್‌ಗಳಲ್ಲಿ 140 ಕ್ಕೂ ಹೆಚ್ಚು ಅರ್ಜಿಗಳು ದಾಖಲಾಗಿದ್ದರೂ ನಮಗೆ ಯಾವುದೇ ಮಧ್ಯಂತರ ಪರಿಹಾರ ಸಿಕ್ಕಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ವಕ್ಫ್ ಮಂಡಳಿಗೆ ಸದಸ್ಯರ ನೇಮಕ ಮಾಡುವಂತಿಲ್ಲ, ಆಸ್ತಿಗಳ ವಿಚಾರದಲ್ಲೂ ಯಥಾಸ್ಥಿತಿ ಕಾಪಾಡಿ: ಸುಪ್ರೀಂ
#WATCH | Delhi | Advocate Vishnu Shankar Jain says, “When we filed a petition in the Supreme Court regarding the Waqf board, the Court asked us why we came directly to the Supreme Court and suggested that we should go to the High Courts, and we didn’t get any interim relief even… pic.twitter.com/jw2AfuWCvO
ಈಗ ಸುಪ್ರೀಂ ಕೋರ್ಟ್‌ಗೆ ಬೇರೆ ಬೇರೆ ಅರ್ಜಿಗಳು ಸಲ್ಲಿಕೆಯಾಗುತ್ತಿದೆ ಮತ್ತು ಅವುಗಳ ವಿಚಾರಣೆ ಸಹ ನಡೆಸುತ್ತಿದೆ. ಅಷ್ಟೇ ಅಲ್ಲದೇ ಮಧ್ಯಂತರ ಆದೇಶಕ್ಕೆ ಸಂಬಂಧಿಸಿದ ವಿಷಯಗಳನ್ನು ಸಹ ಹೇಳಿದೆ. ಕಳೆದ 13 ವರ್ಷಗಳಿಂದ ಹಿಂದೂ ದೇವಾಲಯಗಳ ಸ್ವಾಧೀನಕ್ಕೆ ಸಂಬಂಧಿಸಿದಂತೆ 4 ರಾಜ್ಯಗಳ ಹಿಂದೂಗಳ ದತ್ತಿ ಕಾಯ್ದೆಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದೆ. ಇತ್ತೀಚೆಗೆ ಈ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ನಡೆಸಬೇಕು. ಅಂತಹ ಪ್ರಕರಣಗಳನ್ನು ನಾವು ವಿಚಾರಣೆ ಯಾಕೆ ನಡೆಸಬೇಕು ಎಂದು ಸುಪ್ರೀಂ ಪ್ರಶ್ನಿಸಿತ್ತು ಎಂದರು.
ನನ್ನ ಸಲಹೆಯೆಂದರೆ ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ದೇಶದಲ್ಲಿರುವ ಎಲ್ಲಾ ಪ್ರಕರಣಗಳನ್ನು ಒಂದೇ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಬೇಕು. ಇದಕ್ಕಾಗಿ 6 ತಿಂಗಳೊಳಗೆ ಪ್ರಕರಣಗಳನ್ನು ಆಲಿಸಲು ಸಾಂವಿಧಾನಿಕ ಪೀಠವನ್ನು ರಚಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ರೀಲ್ಸ್ ಕೇಸ್: ನಿನ್ನೆ ಜೈಲು ಪಾಲು – ಇಂದು ರಜತ್‌ಗೆ ಜಾಮೀನು
ಬುಧವಾರ ಸುಪ್ರೀಂನಲ್ಲಿ ನಡೆದ ವಿಚಾರಣೆ ವೇಳೆ ವಕೀಲ ಅಭಿಷೇಕ್ ಮನು ಸಿಂಗ್ವಿ, ಕಾಯ್ದೆಯು ದೇಶಾದ್ಯಂತ ವಕ್ಫ್ ಆಸ್ತಿಗಳ ಮೇಲೆ ಪರಿಣಾಮ ಬೀರುತ್ತದೆ. ಈ ಪ್ರಕರಣವನ್ನು ಹೈಕೋರ್ಟ್‌ಗೆ ವರ್ಗಾಯಿಸಬಾರದು. ಸುಪ್ರೀಂ ಕೋರ್ಟ್‌ನಲ್ಲಿಯೇ ವಿಚಾರಣೆ ನಡೆಯಬೇಕು ಎಂದು ಮನವಿ ಮಾಡಿದ್ದರು.
ಅಯೋಧ್ಯೆ ಪ್ರಕರಣದಲ್ಲಿ ವಿಷ್ಣು ಶಂಕರ್ ಜೈನ್ ಮತ್ತು ಅವರ ತಂದೆ ಅರ್ಜಿದಾರರ ವಾದಿಸಿದ್ದರು. ಜ್ಞಾನವಾಪಿ ಮಸೀದಿ-ಕಾಶಿ ವಿಶ್ವನಾಥ ದೇವಸ್ಥಾನ, ಕೃಷ್ಣಜನ್ಮಭೂಮಿ-ಶಾಹಿ ಈದ್ಗಾ (ಮಥುರಾ) ಮತ್ತು ಸಂಭಾಲ್ ವಿವಾದದಲ್ಲಿ ಹಿಂದೂ ಅರ್ಜಿದಾರರ ಪರವಾಗಿ ವಾದ ಮಂಡಿಸಿದ್ದಾರೆ.
ಬೆಂಗಳೂರು: ಸಂವಿಧಾನದ ಮೂಲ ತತ್ವಗಳನ್ನು ಸಾಕಾರಗೊಳಿಸಲು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (Uniform Civil Code) ಅಗತ್ಯವಾಗಿದೆ ಎಂದು ಹೈಕೋರ್ಟ್ (High Court) ಅಭಿಪ್ರಾಯ ವ್ಯಕ್ತಪಡಿಸಿದೆ.
ಮುಸ್ಲಿಂ ಕುಟುಂಬವೊಂದರ ಆಸ್ತಿ ಪಾಲು ದಾವೆಯೊಂದಕ್ಕೆ (Property Dispute) ಸಂಬಂಧಿಸಿದಂತೆ, ಬೆಂಗಳೂರಿನ ವಿವೇಕ ನಗರದ ಸಮೀವುಲ್ಲಾ ಖಾನ್ ಸೇರಿ ಹಲವರು ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿ ತೀರ್ಪು ನೀಡಿದ ನ್ಯಾಯಮೂರ್ತಿ ಹಂಚಾಟಿ ಸಂಜೀವ್ ಕುಮಾರ್ ನೇತೃತ್ವದ ಏಕಸದಸ್ಯ ಪೀಠ ಈ ಅಂಶವನ್ನು ಪ್ರತಿಪಾದಿಸಿದೆ.
ಮುಸ್ಲಿಂ ಮಹಿಳೆಯರಿಗೆ ಆಸ್ತಿಯಲ್ಲಿ ಪುರುಷರಷ್ಟೇ ಸಮಾನ ಪಾಲು ಇಲ್ಲ. ಹೀಗಾಗಿ ದೇಶಾದ್ಯಂತ ಏಕರೂಪ ನಾಗರೀಕ ಸಂಹಿತೆ (ಯುಸಿಸಿ) ಜಾರಿ ಅವಶ್ಯಕತೆ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ ಪ್ರಯತ್ನ ಕೈಗೊಳ್ಳಬೇಕು. ಏಕರೂಪ ನಾಗರೀಕ ಸಂಹಿತೆ ಜಾರಿಯಿಂದ ಮಹಿಳೆಯರಿಗೆ ನ್ಯಾಯ ದೊರಕುತ್ತದೆ. ಮಹಿಳೆಯರ ಘನತೆ ಹೆಚ್ಚಾಗಿ ಎಲ್ಲರಂತೆ ಸಹಬಾಳ್ವೆ ನಡೆಸಬಹುದಾಗಿದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.
ಉತ್ತರಾಖಂಡ ಮತ್ತು ಗೋವಾ ಸರ್ಕಾರಗಳು ಈಗಾಗಲೆ ಯುಸಿಸಿ ಜಾರಿಗೊಳಿಸಿವೆ. ಈ ತೀರ್ಪಿನ ಪ್ರತಿಗಳನ್ನು ಕೇಂದ್ರ ಕಾನೂನು ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಕಳಿಸಿಕೊಡುವಂತೆ ರಿಜಿಸ್ಟ್ರಾರ್ ಜನರಲ್‍ಗೆ ನ್ಯಾಯಾಲಯ ಸೂಚಿಸಿದೆ.
ಏನಿದು ಪ್ರಕರಣ?
ಅಬ್ದುಲ್ ಬಷೀರ್ ಖಾನ್ ಎಂಬವರು ಹಲವು ಪಿತ್ರಾರ್ಜಿತ ಮತ್ತು ಸ್ವಯಾರ್ಜಿತ ಆಸ್ತಿಗಳನ್ನು ಬಿಟ್ಟು ನಿಧನರಾಗಿದ್ದ ಹಿನ್ನೆಲೆಯಲ್ಲಿ ಉದ್ಭವಿಸಿದ್ದ ಆಸ್ತಿ ವಿವಾದದ ವಿಚಾರಣೆಯ ವೇಳೆ ನ್ಯಾಯಾಲಯ ಈ ಮೇಲಿನ ಅಂಶಗಳನ್ನು ಉಲ್ಲೇಖಿಸಿದೆ.
ಬಷೀರ್ ನಿಧನ ಬಳಿಕ ಪುತ್ರಿ ಶಹನಾಜ್ ಬೇಗಂ ಆಸ್ತಿ ಹಂಚಿಕೆ ಸಂದರ್ಭದಲ್ಲಿ ತನ್ನನ್ನು ಕಾನೂನಿಗೆ ವಿರುದ್ಧವಾಗಿ ಕೈಬಿಡಲಾಗಿದ್ದು, ಆಸ್ತಿಯಲ್ಲಿ ನ್ಯಾಯಬದ್ಧ ಹಕ್ಕು ನೀಡಿಲ್ಲ ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದರು. 2019ರಲ್ಲಿ ಬೆಂಗಳೂರಿನ ಸತ್ರ ನ್ಯಾಯಾಲಯವು ಒಟ್ಟು ಆಸ್ತಿಗಳ ಪೈಕಿ ಜಂಟಿ ಆಸ್ತಿಯಾಗಿರುವ ಆಕ್ಷೇಪಿತ ಮೂರು ಆಸ್ತಿಗಳಲ್ಲಿ ಬೇಗಂ ಅವರ ಕಾನೂನುಬದ್ಧ ಪ್ರತಿನಿಧಿಗಳು 1/5ನೇ ಭಾಗಕ್ಕೆ ಅರ್ಹರಾಗಿದ್ದಾರೆ ಎಂದು ಹೇಳಿತ್ತು. ಆದರೆ, ಇದನ್ನು ಬೇರೆ ಆಸ್ತಿಗಳಿಗೆ ಅನ್ವಯಿಸಿರಲಿಲ್ಲ. ಈ ತೀರ್ಪಿನಿಂದ ಅಸಂತುಷ್ಟರಾಗದ ಬಶೀರ್ ಅಹ್ಮದ್ ಅವರ ಇಬ್ಬರು ಪುತ್ರರಾದ ಸಮೀಉಲ್ಲಾ ಖಾನ್, ನೂರುಲ್ಲಾ ಖಾನ್ ಮತ್ತು ಪುತ್ರಿ ರಹತ್ ಜಾನ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಸಿರಾಜುದ್ದೀನ್ ಅವರು ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ, ತಮ್ಮ ಆಸ್ತಿ ಪಾಲು ಹೆಚ್ಚಿಸಲು ಮತ್ತು ಹಿಂದಿನ ಆದೇಶದಲ್ಲಿ ಮಾರ್ಪಾಡು ಕೋರಿ ಆಕ್ಷೇಪಣೆ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣಾಧೀನ ನ್ಯಾಯಾಲಯದ ಆದೇಶ ಎತ್ತಿಹಿಡಿದಿದೆ. ಇದೇ ವೇಳೆ ಸಿರಾಜುದ್ದೀನ್ ಸಲ್ಲಿಸಿದ್ದ ಆಕ್ಷೇಪಣೆಯನ್ನು ವಜಾಗೊಳಿಸಿದೆ.
ಧಾರವಾಡ: ಬೆಳಗಾವಿ ಅಧಿವೇಶನದ (Belagavi Session) ವೇಳೆ ಪಂಚಮಸಾಲಿ ಹೋರಾಟಗಾರರ (Panchamasali Protest) ಮೇಲೆ ನಡೆದಿದ್ದ ಲಾಠಿ ಚಾರ್ಜ್ ಪ್ರಕರಣವನ್ನು ಹೈಕೋರ್ಟ್‌ನ (High Court) ಧಾರವಾಡ ಪೀಠ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.
ಅಧಿವೇಶನದ ವೇಳೆ ಪಂಚಮಸಾಲಿ ಹೋರಾಟಗಾರರ ಮೇಲೆ ನಡೆದಿದ್ದ ಲಾಠಿ ಪ್ರಹಾರ ಪ್ರಕರಣ ಕುರಿತು ತನಿಖೆಗೆ ಆದೇಶಿಸಲು ಕೋರಿ ಪಂಚಮಸಾಲಿ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ನಡೆಸುವಂತೆ ಸರ್ಕಾರಕ್ಕೆ ಆದೇಶಿಸಿದೆ. ಕಾಲ ಮಿತಿಯಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ -ಹೋರಾಟಗಾರರ ಮೇಲೆ ಲಾಠಿಚಾರ್ಜ್
ದುರುದ್ದೇಶಪೂರಿತವಾಗಿ ಲಾಠಿ ಚಾರ್ಜ್ ನಡೆಸಲಾಗಿದೆ ಎಂದು ಹೋರಾಟಗಾರರ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದಿಸಿದ್ದರು. ಇನ್ನೂ ಪ್ರತಿಭಟನಾಕಾರ ಮೇಲೆ ಲಾಠಿ ಚಾರ್ಜ್ ಮಾಡಿದ್ದನ್ನು ಖಂಡಿಸಿ ಭಾರೀ ಪ್ರತಿಭಟನೆಗಳು ನಡೆದಿದ್ದವು. ಲಾಠಿ ಬೀಸಿದ್ದ ಪೊಲೀಸರ ಅಮಾನತಿಗೆ ಪಂಚಮಸಾಲಿ ಸಮುದಾಯ ಆಗ್ರಹಿಸಿತ್ತು.
ಕಳೆದ ಡಿಸೆಂಬರ್ 10 ರಂದು ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿಗೆ (2A Reservation) ಆಗ್ರಹಿಸಿ ಸುವರ್ಣ ಸೌಧ ಮುತ್ತಿಗೆ ಹಾಕಲು ಬಂದ ಪಂಚಮಸಾಲಿ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದರು. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದರು. ಈ ವೇಳೆ ತಳ್ಳಾಟ ನೂಕಾಟ ನಡೆದಿತ್ತು. ಈ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ಬಿದ್ದಿದೆ. ಮ್ಮ ಮೇಲೆಯೇ ಕಲ್ಲುತೂರಿದ್ದಕ್ಕೆ ಸಿಟ್ಟಾದ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಲಾಠಿ ಬೀಸಿದ್ದರು. ಇದನ್ನೂ ಓದಿ: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ – ರಾಜ್ಯ ಸರ್ಕಾರದ ನಡೆಗೆ ಬಿಜೆಪಿ ಸಂಸದರು ಕೆಂಡ
-ನಿರ್ಬಂಧಿಸದಂತೆ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು: 6 ವಾರಗಳಲ್ಲಿ ಓಲಾ, ಉಬರ್ ಬೈಕ್ (Uber) ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ರಾಜ್ಯ ಹೈಕೋರ್ಟ್ (High Court) ಆದೇಶ ಹೊರಡಿಸಿದೆ.
2022ರಲ್ಲಿ ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ರಾಜ್ಯ ಸರ್ಕಾರಕ್ಕೆ (State Government) ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆಯ ವೇಳೆ 1988ರ ಮೋಟಾರು ವಾಹನ ಕಾಯ್ದೆ ಹಾಗೂ ಸೆಕ್ಷನ್ 93ರಡಿಯಲ್ಲಿ ಬರುವ ಮಾರ್ಗಸೂಚಿಗಳನ್ನು ಹೊರಡಿಸಿದ ನಂತರ ಅರ್ಜಿದಾರರು ಬೈಕ್ ಟ್ಯಾಕ್ಸಿ ಸೇವೆ ನೀಡಬಹುದು. ಆದರೆ ರಾಜ್ಯ ಸರ್ಕಾರ ಓಲಾ, ಉಬರ್ ಇನ್ನಿತರ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ ಎಂದು ಅಭಿಪ್ರಾಯಪಟ್ಟಿದೆ.ಇದನ್ನೂ ಓದಿ:105 ಮೀಟರ್ ಭರ್ಜರಿ ಸಿಕ್ಸರ್ – ಈ ಐಪಿಎಲ್‌ನಲ್ಲಿ ಫಿಲ್ ಸಾಲ್ಟ್ ವಿಶೇಷ ಸಾಧನೆ
ಈ ಸಂಬಂಧ ಕರ್ನಾಟಕ ಸಾರಿಗೆ ಇಲಾಖೆಗೆ ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ನಿರ್ದೇಶನ ನೀಡಲಾಗುವುದಿಲ್ಲ. ಹೀಗಾಗಿ 3 ತಿಂಗಳಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಇನ್ನೂ 6 ವಾರಗಳ ಕಾಲಾವಕಾಶ ನೀಡಿದ್ದು, ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ನ್ಯಾ.ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.
ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆಗೆ ನಿರ್ಬಂಧ ವಿಧಿಸಿದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಇದನ್ನೂ ಓದಿ:ರಷ್ಯಾದಲ್ಲಿ ಕೋವಿಡ್ ಮಾದರಿ ನಿಗೂಢ ವೈರಸ್!