Tag: High Grounds Police

  • ನಕಲಿ ನಾಗಸಾಧುವಿನಿಂದ ಕಾರು ಚಾಲಕನಿಗೆ ಮಂಕುಬೂದಿ – ರುದ್ರಾಕ್ಷಿ ಕೊಟ್ಟು ಉಂಗುರ ಕಸಿದು ಎಸ್ಕೇಪ್!

    ನಕಲಿ ನಾಗಸಾಧುವಿನಿಂದ ಕಾರು ಚಾಲಕನಿಗೆ ಮಂಕುಬೂದಿ – ರುದ್ರಾಕ್ಷಿ ಕೊಟ್ಟು ಉಂಗುರ ಕಸಿದು ಎಸ್ಕೇಪ್!

    ಬೆಂಗಳೂರು: ನಕಲಿ ನಾಗಸಾಧುವೊಬ್ಬ (Fake Naga Sadhu) ಕಾರು ಚಾಲಕನಿಗೆ ಮಂಕುಬೂದಿ ಎರಚಿರೊ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಚಾಲಕನಿಗೆ ರುದ್ರಾಕ್ಷಿ ಕೊಟ್ಟು ಕೈಯಲ್ಲಿದ್ದ 10 ಗ್ರಾಂ ಚಿನ್ನದ ಉಂಗುರ (Gold Ring) ಕಸಿದು ಪರಾರಿಯಾಗಿದ್ದಾನೆ.

    ವೈಯಾಲಿಕಾವಲ್ ನಿವಾಸಿ ವೆಂಕಟಕೃಷ್ಣಯ್ಯ ಇದೇ ಏ.19ರಂದು ಖಾಸಗಿ ಹೋಟೆಲ್ ಬಳಿ ಮಾಲೀಕರನ್ನ ಡ್ರಾಪ್ ಮಾಡಿ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿಕೊಂಡು ನಿಂತಿದ್ದರು. ಈ ವೇಳೆ ಅಲ್ಲಿಗೆ ಬಂದ ನಕಲಿ ನಾಗಸಾಧು ಚಾಲಕನನ್ನು ಕಂಡು 5 ನಿಮಿಷ ವಿಶ್ರಾಂತಿ ಪಡೆದುಕೊಳ್ಳಬೇಕು ಅಂತ ಹೇಳಿದ್ದಾನೆ. ನಂತ್ರ ತನ್ನ ಅಸಲಿ ವರಸೆ ತೆಗೆದಿದ್ದಾನೆ. ಇದನ್ನೂ ಓದಿ: ಮೇ 7ರಿಂದ ಹೊಸ ಪೋಪ್ ಆಯ್ಕೆ ಪ್ರಕ್ರಿಯೆ ಪ್ರಾರಂಭ

    ಸಾಂದರ್ಭಿಕ ಚಿತ್ರ

    ಚಾಲಕನಿಗೆ 5 ರುದ್ರಾಕ್ಷಿ (Rudraksha) ಕೊಟ್ಟು ಒಂದು ವಾಪಸ್ಸು ಕೂಡುವಂತೆ ಹೇಳಿದ್ದ. ವಾಪಸ್‌ ಕೊಟ್ಟ ರುದ್ರಾಕ್ಷಿಯನ್ನು ಪೇಪರ್‌ನಲ್ಲಿ ಮಡಚಿ ಓಪನ್ ಮಾಡಿದ್ದ. ಈ ವೇಳೆ ರುದ್ರಾಕ್ಷಿ ಹೂ ಆಗಿ ಬದಲಾಗಿತ್ತು. ನೋಡು ಇದು ಶುಭ ಸೂಚಕ ನಿನಗೆ ಒಳ್ಳೆಯದಾಗುತ್ತೆ ಲಕ್ಷ್ಮಿ ಕೃಪಾಕಟಾಕ್ಷವಾಗುತ್ತೆ ಅಂತ ರೈಲುಬಿಟ್ಟಿದ್ದಾನೆ. ಇದನ್ನೂ ಓದಿ: Pahalgam Attack | ಟಿಆರ್‌ಎಫ್‌ಗೆ ಭಾರತೀಯ ಯುವಕರೇ ಟಾರ್ಗೆಟ್‌ – ಈ ಭಯೋತ್ಪಾದಕ ಗುಂಪು ಹೇಗೆ ಕೆಲಸ ಮಾಡುತ್ತೆ?

    ನಂತ್ರ ನಿನ್ನ ಕೈಯಲ್ಲಿರುವ ಚಿನ್ನದ ಉಂಗುರ ಕೊಡು ಅಂತ ಹೇಳಿದ್ದಾನೆ. ಚಿನ್ನದ ಉಂಗುರ ಬಿಚ್ಚಿ ಕೊಡುತ್ತಿದ್ದಂತೆ ಹಣೆಗೆ ಬೂದಿ ರೀತಿಯ ವಸ್ತುವನ್ನು ಹಚ್ಚಿದ್ದಾನೆ. ಹಿಂದೆ ತಿರುಗಿ ನೋಡದೇ ಸ್ವಲ್ಪ ಮುಂದೆ ಹೋಗು ಇಲ್ಲದಿದ್ರೆ ನಿನಗೆ ಕೆಡುಕಾಗುತ್ತದೆ ಅಂತ ಹೇಳಿದ್ದಾನೆ. ಆತನ ಮಾತು ಕೇಳಿ ಮಂಕುಬಡಿದಂತಾದ ವೆಂಕಟಕೃಷ್ಣಯ್ಯ ಮುಂದೆ ಬಂದಿದ್ದಾನೆ. ಬಳಿಕ ನಕಲಿ ನಾಗಸಾಧು ಅಲ್ಲಿಂದ ಮಾಯವಾಗಿದ್ದಾನೆ.

    ಬಳಿಕ ಮನೆಯವರಿಗೆ ವಿಚಾರ ತಿಳಿಸಿದ ವೆಂಕಟಕೃಷ್ಣಯ್ಯ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ (High Grounds Police Station) ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಕಲಿ ನಾಗಸಾಧುಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಉಗ್ರರು ಗುಂಡು ಹಾರಿಸುವ ಹೊತ್ತಲ್ಲಿ 3 ಬಾರಿ ‘ಅಲ್ಲಾಹು ಅಕ್ಬರ್‌’ ಅಂತ ಕೂಗಿದ ಜಿಪ್‌ಲೈನ್‌ ಆಪರೇಟರ್‌

  • ಮಿಡ್ಲ್ ಫಿಂಗರ್ ತೋರಿಸಿ ಅಸಭ್ಯ ವರ್ತಿಸಿದ್ದಾರೆ, ರೇವಣ್ಣನನ್ನು ಬಂಧಿಸಿ – ಕೈ ಕಾರ್ಯಕರ್ತೆ ನಂದಿನಿ

    ಮಿಡ್ಲ್ ಫಿಂಗರ್ ತೋರಿಸಿ ಅಸಭ್ಯ ವರ್ತಿಸಿದ್ದಾರೆ, ರೇವಣ್ಣನನ್ನು ಬಂಧಿಸಿ – ಕೈ ಕಾರ್ಯಕರ್ತೆ ನಂದಿನಿ

    ಬೆಂಗಳೂರು: ಮಿಡ್ಲ್ ಫಿಂಗರ್ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾರೆ, ರೇವಣ್ಣನನ್ನು ಬಂಧಿಸಿ ಎಂದು ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ (Nandini Nagaraj) ಆಗ್ರಹಿಸಿದ್ದಾರೆ.

    ʻಪಬ್ಲಿಕ್ ಟಿವಿ’ ಜೊತೆ ರೇವಣ್ಣ ತಮ್ಮ ಮೇಲೆ ಹಲ್ಲೆ ನಡೆಸಿದ್ದಕ್ಕೆ ದೂರು ನೀಡಿರುವ ವಿಚಾರವಾಗಿ ಮಾತನಾಡಿದ ಅವರು, ಸೋಮವಾರ ಮಧ್ಯಾಹ್ನ ಕುಮಾರಕೃಪಾದಲ್ಲಿ ಹಲ್ಲೆ ನಡೆಸಿದ್ದಾರೆ. ಮಧ್ಯಾಹ್ನ 3:30ರ ಸುಮಾರಿಗೆ ರೂಂ.ನಂಬರ್ 2ರಲ್ಲಿ ರೇವಣ್ಣ ಊಟ ಮಾಡುತ್ತಿದ್ದರು. ಈ ವೇಳೆ ಅವರನ್ನು ಭೇಟಿಯಾಗಿ ಮಾತನಾಡಿಸಲು ತೆರಳಿದ್ದೆ. ಆಗ ನನ್ನ ಜೊತೆ ಅಸಭ್ಯವಾಗಿ ವರ್ತನೆ ಮಾಡಿ, ಮಿಡ್ಲ್ ಫಿಂಗರ್ ತೋರಿಸಿದ್ದಾರೆ. ಮಹಿಳಾ ಕಾರ್ಯಕರ್ತರ ಜೊತೆ ಅಸಭ್ಯವಾಗಿ ವರ್ತನೆ ಮಾಡುತ್ತಾರೆ. ಕೈ ಮುಟ್ಟೋದು, ಟಚ್ ಮಾಡ್ತಾರೆ. ಹೀಗೆ ಮಾಡಿದಾಗ ಇವರುಂ ಈ ರೀತಿನಾ ಅನಿಸಿತು ಎಂದು ಬೇಸರ ಹೊರಹಾಕಿದರು.ಇದನ್ನೂ ಓದಿ: ವರದಕ್ಷಿಣೆಗಾಗಿ ಪತ್ನಿಯನ್ನೇ ಕೊಂದ ಪಾಪಿ ಗಂಡ

    ಇನ್ನೂ ಕರೆ ಮಾಡಿ, ಏನೆನೋ ಮಾತನಾಡುತ್ತಾರೆ. ಸ್ಲಂ ಜಾತಿ ಎಂದು ಜಾತಿ ನಿಂದನೆ ಮಾಡಿದ್ದಾರೆ. ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆಗಿರೋದಕ್ಕೆ ರೇವಣ್ಣ ಅವರು ಅನ್‌ಫಿಟ್. ಜಾತಿನಿಂದನೆ ಮಾಡಿದ್ದಕ್ಕೆ ಮುನಿರತ್ನ ಅವರನ್ನು ಅರೆಸ್ಟ್ ಮಾಡಿದ್ರಿ. ಈಗ ರೇವಣ್ಣನನ್ನು ಬಂಧಿಸಿ. ಆದರೆ ಇದಕ್ಕೆ ಪೊಲೀಸರು ಸಹಕರಿಸುತ್ತಿಲ್ಲ. ನಾನು ಹೈಕಮಾಂಡ್‌ಗೆ ದೂರು ಕೊಟ್ಟಿದ್ದೇನೆ. ಇನ್ನೂ ಮಹಿಳಾ ಆಯೋಗಕ್ಕೂ ದೂರು ಕೊಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಅಸಭ್ಯವಾಗಿ ವರ್ತನೆ ಮಾಡಿದಾಗ ಉಗ್ರಪ್ಪ ಅವರು ಕೂಡ ಜೊತೆಯಲ್ಲಿ ಇದ್ದರು. ಜೊತೆಗೆ ಅಲ್ಲಿದ್ದ ಇನ್ನೊಬ್ಬರು ನನಗೆ ಬೆರಳು ತೋರಿಸಿದ್ದಾರೆ ಆದರೆ ಅವರು ಹೆಸರು ಗೊತ್ತಾಗುತ್ತಿಲ್ಲ. ರೇವಣ್ಣನನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ: Gold Smuggling Case | ಸ್ವಂತ ಚಿನ್ನಾಭರಣ ಮಳಿಗೆ ಆರಂಭಿಸಲು ಪ್ಲ್ಯಾನ್‌ ಮಾಡಿದ್ದ ರನ್ಯಾ

  • `ಕೈ’ ಕಾರ್ಯಕರ್ತೆಯ ಮೇಲೆ ಹೆಚ್.ಎಂ ರೇವಣ್ಣ ಹಲ್ಲೆ

    `ಕೈ’ ಕಾರ್ಯಕರ್ತೆಯ ಮೇಲೆ ಹೆಚ್.ಎಂ ರೇವಣ್ಣ ಹಲ್ಲೆ

    ಬೆಂಗಳೂರು: ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಹೆಚ್.ಎಂ.ರೇವಣ್ಣ (HM Revanna) ಅವರು ಕಾಂಗ್ರೆಸ್ (Congress) ಕಾರ್ಯಕರ್ತೆಯ ಮೇಲೆ ಹಲ್ಲೆ ಮತ್ತು ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ.

    ಸೋಮವಾರ ಮಧ್ಯಾಹ್ನ ಕುಮಾರಕೃಪಾದಲ್ಲಿ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ. ಮಧ್ಯಾಹ್ನ 3:30ರ ಸುಮಾರಿಗೆ ರೂಂ.ನಂಬರ್ 2ರಲ್ಲಿ ರೇವಣ್ಣ ಊಟ ಮಾಡುತ್ತಿದ್ದರು. ಈ ವೇಳೆ ಅವರನ್ನು ಭೇಟಿಯಾಗಿ ಮಾತನಾಡಿಸಲು ತೆರಳಿದ್ದೆ.ಇದನ್ನೂ ಓದಿ: ಹೈಕೋರ್ಟ್‌ ಆದೇಶದ ಬೆನ್ನಲ್ಲೇ ಹೆಚ್‍ಡಿಕೆ ಕೇತಗಾನಹಳ್ಳಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ

    ಈ ವೇಳೆ ನನ್ನ ಮೊಬೈಲ್ ಕಸಿದುಕೊಂಡು ನನನ್ನು ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ್ದಾರೆ. ಬಳಿಕ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ರೇವಣ್ಣ ಮಹಿಳೆಯ ಮೊಬೈಲ್ ಕಸಿದುಕೊಳ್ಳುತ್ತಿರುವ ವಿಡಿಯೋ ಲಭ್ಯವಾಗಿದೆ.

    ಹಲ್ಲೆ ಪರಿಣಾಮ ಮಹಿಳೆಯ ಕೈ ಮೂಳೆಗೆ ಫ್ಯಾಕ್ಚರ್ ಆಗಿದ್ದು, ಬಳಿಕ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸದ್ಯ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎನ್‌ಸಿಆರ್ ದಾಖಲಾಗಿದೆ.ಇದನ್ನೂ ಓದಿ: ಪುತ್ರನ ನಾಮಕರಣ ಸಂಭ್ರಮದ ಫೋಟೋ ಹಂಚಿಕೊಂಡ ಅಂಬಿ ಸೊಸೆ

  • PayCM ಕೇಸ್ – ಬೆಳಗ್ಗೆ ಮೂವರು ಅರೆಸ್ಟ್, ಮಧ್ಯಾಹ್ನ ಬಿಡುಗಡೆ

    PayCM ಕೇಸ್ – ಬೆಳಗ್ಗೆ ಮೂವರು ಅರೆಸ್ಟ್, ಮಧ್ಯಾಹ್ನ ಬಿಡುಗಡೆ

    ಬೆಂಗಳೂರು: ಪೇ ಸಿಎಂ (Pay CM) ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು (Police) ಬಂಧಿಸಿ ಬಿಡುಗಡೆಗೊಳಿಸಿದ್ದಾರೆ.

    ಪೇ ಸಿಎಂ ಕಾಂಗ್ರೆಸ್ ಅಭಿಯಾನ (Congress Campaign) ಹಿನ್ನೆಲೆ ಕೆಪಿಸಿಸಿ ಸಾಮಾಜಿಕ ಜಾಲತಾಣದ ಮಾಜಿ ಮುಖ್ಯಸ್ಥ ಬಿ.ಆರ್.ನಾಯ್ಡು (BR Naidu), ಪವನ್, ಗಗನ್ ಎಂಬಾತನನ್ನು ಹೈ ಗ್ರೌಂಡ್ಸ್ ಪೊಲೀಸರು (High Grounds Police) ಬಂಧಿಸಿದ್ದರು. ಇದೀಗ ಸಿಆರ್‌ಪಿಸಿ 107 ಅಡಿ ಬಾಂಡ್ ಬರೆಸಿಕೊಂಡು ಪೊಲೀಸರು ಮೂವರನ್ನು ಬಿಡುಗಡೆ ಮಾಡಿದ್ದಾರೆ.

    ಈವರೆಗೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರಾದ ಸಂಜಯ್ ಹಾಗೂ ವಿಶ್ವಮೂರ್ತಿಯನ್ನು ಪಕ್ಷದ ನಾಯಕರು ಸರೆಂಡರ್ ಮಾಡಿಸಿದ್ದರು. ಆದರೆ ಇನ್ನೂ ಮೂವರಿಗಾಗಿ ಪೊಲೀಸರು ಕಾಯುತ್ತಿದ್ದು, ಪೋಸ್ಟರ್ ಅಂಟಿಸಿದ ಐದು ಮಂದಿಯನ್ನು ನಾಲ್ಕು ಗಂಟೆ ವೇಳೆಗೆ ಕೋರ್ಟ್ ಮುಂದೆ ಹೈ ಗ್ರೌಂಡ್ಸ್ ಪೊಲೀಸರು ಹಾಜರು ಪಡಿಸಲಿದ್ದಾರೆ. ಇದನ್ನೂ ಓದಿ: ʼPAY CMʼ ಪೋಸ್ಟರ್ ಅಂಟಿಸಿದ ಪ್ರಕರಣ ಸಿಸಿಬಿಗೆ ವರ್ಗಾವಣೆ

    ಈ ಕುರಿತಂತೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ (Srinivas Gowda) ಅವರು, ಸದ್ಯ ಬಿ.ಆರ್. ನಾಯ್ಡು ರನ್ನ ಬಿಡುಗಡೆ ಮಾಡಲಾಗಿದೆ. ಪವನ್, ಗಗನ್ ಬಿಡುಗಡೆಗೆ ಪ್ರಕ್ರಿಯೆ ನಡೆಸಲಾಗುತ್ತಿದೆ. ನಂತರ ವಿಚಾರಣೆಗೆ ಕರೆದಾಗ ಬರುವಂತೆ ಸೂಚನೆ ನೀಡಲಾಗಿದೆ. ಇನ್ನೂ 3 ಜನರನ್ನ ಕರೆತರಲಾಗುತ್ತಿದೆ. ಸಂಜೆ ಐವರನ್ನು ಕೋರ್ಟ್ ಮುಂದೆ ಹಾಜರು ಪಡಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾಳೆ ನಾವೇ ಪೇಸಿಎಂ ಪೋಸ್ಟರ್ ಅಂಟಿಸ್ತೇವೆ: ಡಿಕೆಶಿ

    ರಾಹುಲ್ ಗಾಂಧಿಯ ಕರ್ನಾಟಕ ಸ್ಟ್ರಾಟಜಿ ತಂಡದ ಸುನಿಲ್ ಕುಂದಗೋಳ ತಂಡ ಈ ಅಭಿಯಾನದ ಮಾಸ್ಟರ್ ಮೈಂಡ್ ಎನ್ನಲಾಗುತ್ತಿದೆ. ಬಿಜೆಪಿ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡುತ್ತಿರುವ ಕಾಂಗ್ರೆಸ್, ಈ ವಿಚಾರದಲ್ಲಿ ದಿನಕ್ಕೊಂದು ಅಸ್ತ್ರ ಪ್ರಯೋಗಿಸಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಲು ಪ್ರಯತ್ನ ನಡೆಸಿದೆ. ಬುಧವಾರ ಯುಪಿಐ ಪೇಮೆಂಟ್ ಆಪ್ `ಪೇಟಿಎಂ ಮಾದರಿಯಲ್ಲಿ `ಪೇ ಸಿಎಂ’ ಪೋಸ್ಟರ್‌ಗಳನ್ನು ಅಂಟಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಚಾಟಿ ಬೀಸಿದೆ. ಇತ್ತ ಪೋಸ್ಟರ್ ಅಭಿಯಾನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಸರ್ಕಾರ ಪೋಸ್ಟರ್ ಅಂಟಿಸಿದ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಹಟ್ಟಿ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ಪುತ್ರನ ಗುಂಡಾಗಿರಿ, ಎಫ್‍ಐಆರ್ ದಾಖಲು

    ಹಟ್ಟಿ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ಪುತ್ರನ ಗುಂಡಾಗಿರಿ, ಎಫ್‍ಐಆರ್ ದಾಖಲು

    ಬೆಂಗಳೂರು: ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಹಟ್ಟಿ ಗಣಿ ಅಧ್ಯಕ್ಷ, ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಆಂಜನೇಯ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಹೈಗ್ರೌಂಡ್ಸ್ ಠಾಣೆಯಲ್ಲಿ ಆಂಜನೇಯ ಮಾನಪ್ಪ ವಜ್ಜಲ್ ವಿರುದ್ಧ ಹಲ್ಲೆಗೆ ಒಳಗಾದ ಉದ್ಯಮಿ ದೀಪಕ್ ರೈ ಪುತ್ರ ವಿಕ್ರಮ್ ರೈ ದೂರು ನೀಡಿದ್ದು, ಎಫ್‍ಐಆರ್ ದಾಖಲಾಗಿದೆ.

    ಪಂಚ್ ಮಾಡುವ ಆಯುಧದಿಂದ ಹಲ್ಲೆ ನಡೆಸಿದ್ದು, ಬರೋಬ್ಬರಿ ಮೂರು ಕಾರುಗಳಿಂದ ಪಂಚ್ ಆಯುಧ ಹೊರತೆಗೆದು ಹಲ್ಲೆ ಮಾಡಿದ್ದಾರೆ. ಸುಮಾರು 10 ರಿಂದ 15 ಹುಡುಗರನ್ನು ಕರೆಸಿ ಉದ್ಯಮಿ ದೀಪಕ್ ಪುತ್ರ ವಿಕ್ರಮ್ ರೈ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ರಾಹುಲ್‍ಗೆ ಪಿಸ್ತೂಲ್ ಬಳಸಲು ತರಬೇತಿಯನ್ನು ನೀಡಲಾಗಿತ್ತು: ಡಿಸಿಪಿ ಅನುಚೇತ್

    ಇತ್ತ ಮಾನಪ್ಪ ವಜ್ಜಲ್ ಪುತ್ರ ಆಂಜನೇಯ ಸಹ ಪ್ರತಿ ದೂರು ನೀಡಿದ್ದಾರೆ. ಗಲಾಟೆ ಸಂಬಂಧ ಇಬ್ಬರ ದೂರುಗಳ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 124, 324, 504, 506, 149 ಅಡಿ ಎಫ್‍ಐಆರ್ ಮಾಡಿದ್ದಾರೆ.

    ಏನಿದು ಪ್ರಕರಣ?
    ವಸಂತನಗರದಲ್ಲಿರುವ ಮಾನಪ್ಪ ವಜ್ಜಲ್ ರ ಎಂಬೆಸಿ ಹ್ಯಾಬಿಟೆಟ್ ಅಪಾರ್ಟ್ ಮೆಂಟ್ ಬಳಿ ಗಲಾಟೆಯಾಗಿತ್ತು. ಸೆ.12ರಂದು ರಾತ್ರಿ 10 ಗಂಟೆಗೆ ಸ್ನೇಹಿತ ರೋಲ್ಟ್ ಮೆರೇನ್ ರನ್ನು ಡ್ರಾಪ್ ಮಾಡಲು ವಿಕ್ರಮ್ ಎಂಬೆಸಿ ಹ್ಯಾಬಿಟೆಟ್ ಅಪಾರ್ಟ್ ಮೆಂಟ್ ಬಳಿ ಬಂದಿದ್ದ. ಈ ವೇಳೆ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ. ಈ ಹಿಂದೆಯೇ ಪಾರ್ಕಿಂಗ್ ವಿಚಾರವಾಗಿ ಮಾನಪ್ಪ ವಜ್ಜಲ್ ಪುತ್ರ ಎರಡು ಬಾರಿ ಗಲಾಟೆ ಮಾಡಿದ್ದರಂತೆ.

    ಇದೀಗ ಆಂಜನೇಯ ಮತ್ತು ಮೌನೇಶ್ ಸೇರಿ 10 ರಿಂದ 15 ಜನ ಹುಡುಗರನ್ನು ಕರೆಸಿ ಹಲ್ಲೆ ನಡೆಸಿದ್ದಾರೆ. ಬೆಂಜ್, ಸೆಲ್ಟೋಸ್ ಮತ್ತು ಫಾಚ್ರ್ಯೂನರ್ ಕಾರುಗಳಿಂದ ಪಂಚ್ ಮಾಡುವ ಆಯುಧ ಹೊರತೆಗೆದು ಹಲ್ಲೆ ಮಾಡಿದ್ದಾರೆ. ತಲೆ, ಕಣ್ಣು ಮತ್ತು ದೇಹದ ಇತರೆ ಭಾಗಗಳಿಗೆ ಹಲ್ಲೆ ಮಾಡಿದ್ದಾರೆ. ಕಣ್ಣಿನ ಮೇಲ್ಭಾಗಕ್ಕೆ ರಕ್ತ ಬರುವಂತೆ ಗಾಯಗೊಳಿಸಿದ್ದಾರೆ. ಅಲ್ಲದೆ ನೀನು ಎಲ್ಲಿಗೆ ಹೋದರು ಬಿಡುವುದಿಲ್ಲ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ. ನೀನು ಪೊಲೀಸ್ ಠಾಣೆಗೆ ಹೋದರೂ ನಮಗೆ ಏನೂ ಮಾಡಲು ಸಾಧ್ಯವಿಲ್ಲ ಎಂದು ಧಮಕಿ ಹಾಕಿದ್ದಾರೆ. ಆರೋಪಿಗಳಿಂದ ತಪ್ಪಿಸಿಕೊಂಡು ಬಂದು ಚೇತನ್ ಅವರು ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು.

    ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಹಲ್ಲೆ ನಂತರ ಎರಡೂ ಕಡೆಯವರು ರಾಜಿಗೆ ಮುಂದಾಗಿದ್ದರು. ಪೊಲೀಸರು ಎರಡೂ ಕಡೆಯವರನ್ನು ಠಾಣೆಗೆ ಕರೆಸಿದ್ದರು. ಈ ವೇಳೆ ದೂರು ಕೊಟ್ಟರೆ ತೆಗೆದುಕೊಳ್ಳುವುದಾಗಿ ಪೊಲೀಸರು ಹೇಳಿ ಕಳುಹಿಸಿದ್ದರು.