ಜೈಪುರ: ಉತ್ತರ ಪ್ರದೇಶದ (Uttar Pradesh) ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್‌ನ ಮೇಲ್ಭಾಗವು ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಸ್ಥಳದಲ್ಲೇ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಸುಮಾರು 12 ಮಂದಿಗೆ ಗಂಭೀರ ಸುಟ್ಟು ಗಾಯಗಳಾಗಿವೆ.
ಮನೋಹರಪುರದ ಹಳ್ಳಿಯೊಂದರ ಬಳಿಯ ರಸ್ತೆಯಿಂದ ಬಸ್ ಹಾದು ಹೋಗುವಾಗ ಬಸ್‌ನ ಮೇಲ್ಭಾಗದಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್‌ಗಳು ಮತ್ತು ಇತರ ಗೃಹೋಪಯೋಗಿ ವಸ್ತುಗಳು ಹೈಟೆನ್ಷನ್ ವಿದ್ಯುತ್ ತಂತಿಗೆ ತಾಗಿವೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತೇಜ್‌ಪಾಲ್ ಸಿಂಗ್ ತಿಳಿಸಿದ್ದಾರೆ.
ಬಸ್‌ನ ಮೇಲ್ಭಾಗವು ಹೈಟೆನ್ಷನ್ ಲೈನ್‌ಗೆ ತಗುಲುತ್ತಿದ್ದಂತೆ, ಜೋರಾದ ಸ್ಫೋಟ ಸದ್ದು ಕೇಳಿತ್ತು. ಕಾರ್ಮಿಕರ ಕಿರುಚಾಟ ಸದ್ದು ಕೇಳಿ ಹತ್ತಿರದ ನಿವಾಸಿಗಳು ಸ್ಥಳಕ್ಕೆ ಧಾವಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮನೋಹರ್‌ಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ, ಗಾಯಾಳುಗಳನ್ನು ತಕ್ಷಣವೇ ಶಹಪುರ ಉಪ-ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಿದ್ದಾರೆ.
ಬೆಳಗಾವಿ: ಮನೆ ಮುಂದಿನ ಹೈಟೆನ್ಷನ್ ತಂತಿ (High Tension Wire) ತಾಗಿ 13 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಮಚ್ಛೆ ಗ್ರಾಮದಲ್ಲಿ ನಡೆದಿದೆ.
ಮಧುರಾ ಮೋರೆ (13) ಮೃತಪಟ್ಟ ಬಾಲಕಿ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದ್ದು, ತನ್ನ ಮನೆಯ ಒಂದನೇ ಮಹಡಿಯ ಮೇಲೆ ಆಟ ಆಡುತ್ತಿದ್ದ ಸಂದರ್ಭ ಹೈಟೆನ್ಷನ್ ವಯರ್ ತಾಗಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹೈಟೆನ್ಷನ್ ತಂತಿ ಇದ್ದ ಹಿನ್ನೆಲೆ ಮನೆ ಕಟ್ಟದಂತೆ ಮೋರೆ ಕುಟುಂಬಕ್ಕೆ ಹೆಸ್ಕಾಂ (HESCOM) ಮೊದಲೇ ನೋಟಿಸ್ ನೀಡಿತ್ತು. ಹೆಸ್ಕಾಂ ನೋಟಿಸ್ ನೀಡಿದ್ದರೂ ಸಹಿತ ಅದನ್ನು ನಿರ್ಲಕ್ಷ್ಯ ಮಾಡಿ ಮೋರೆ ಕುಟುಂಬ ಮನೆ ನಿರ್ಮಿಸಿದ್ದರು. ಇದನ್ನೂ ಓದಿ: ಭಾರೀ ಗಾಳಿ, ಮಳೆ – ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಮರ ಬಿದ್ದು ವ್ಯಕ್ತಿ ಸಾವು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹೈಟೆನ್ಶನ್ ವೈಯರ್ ಗೆ ಮತ್ತೊಂದು ಜೀವ ಬಲಿಯಾಗಿದೆ. ಆರ್‍ಟಿ ನಗರದ ಚಾಮುಂಡಿ ನಗರದ ಚಿಂಗಮ್ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದೆ.
ಗಾಳಿಪಟ ಬಿಡಲು ಹೋಗಿ ಹೈ ಟೆನ್ಶನ್ ವೈಯರ್ (High Tension Wire) ತಗುಲಿ 11 ವರ್ಷದ ಅಬೂಬಕ್ಕರ್ ಎಂಬ ಬಾಲಕ ಮೃತಪಟ್ಟಿದ್ದಾನೆ. ಸೋಮವಾರ ಈ ಘಟನೆ ನಡೆದಿದ್ದು, ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆ (Victoria Hospital) ಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ರಾತ್ರಿ ಅಬೂಬಕ್ಕರ್ ಮೃತಪಟ್ಟಿದ್ದಾನೆ.
ಹೈಟೆನ್ಶನ್ ವೈಯರ್ ಗಿಂತ ಮನೆಗಳು ಎತ್ತರದಲ್ಲಿವೆ. ಹೀಗಾಗಿ ವೈಯರ್‍ಗಳು ಮನೆಯ ಮೇಲೆ ಕೈಗೆ ತಾಕುವಂತಿವೆ. ಹೆನ್ಶನ್ ವೈಯರ್ ಹಾದು ಹೋದ ಜಾಗದಲ್ಲಿ ಪಾರ್ಕ್ ಕೂಡ ಇದೆ. ಈ ಪಾರ್ಕ್ ಗೆ ಬರೋ ಮಕ್ಕಳಿಗೆ, ವೃದ್ಧರಿಗೂ ಕಂಟಕ ಎದುರಾಗುವ ಸಾಧ್ಯತೆಗಳಿವೆ. ಘಟನೆ ನಡೆದ ಬಳಿಕವೂ ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ. ಬೆಸ್ಕಾಂ ಅಧಿಕಾರಿಗಳ ಮೇಲೆ ದೂರು ದಾಖಲಿಸಿಕೊಳ್ಳಲು, ಆರ್ ಟಿ ನಗರ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಮಗುವಿನದ್ದೇ ತಪ್ಪು ಎಂದು ದೂರು ದಾಖಲಿಸಿಕೊಳ್ಳದೇ, ಪೋಷಕರನ್ನ ಬೈದು ಕಳಿಸಿದ್ದಾರೆ ಎಂಬ ಆರೋಪ ಕೂಡ ಕೇಳಿ ಬರುತ್ತಿದೆ.
Live Tv
[brid partner=56869869 player=32851 video=960834 autoplay=true]
– ಜನರ ಜೀವ ರಕ್ಷಣೆ ನಮ್ಮ ಪ್ರಥಮ ಆದ್ಯತೆ ಅಂದ್ರು ವಿ.ಸೋಮಣ್ಣ
– ವಿ.ಸೋಮಣ್ಣ ರವರು ಅಭಿವೃದ್ದಿ ಪರ ಚಿಂತಕ ಎಂದ್ರು ತೇಜಸ್ವಿ ಸೂರ್ಯ
ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಡಾ.ರಾಜ್ ಕುಮಾರ್ ವಾರ್ಡ್ ಡಾ.ಬಿ.ಆರ್ ಅಂಬೇಡ್ಕರ್ ಆಟದ ಮೈದಾನದ ಬಳಿ ಸುಮಾರು 5.5 ಕಿ.ಮೀ ಉದ್ದದ ಎಚ್.ಟಿ. ಲೈನ್ ಅನ್ನು ಸುಮಾರು 7.5 ಕಿ ಮೀ ಭೂಗತ ಕೇಬಲ್ ಆಗಿ ಬದಲಾಯಿಸುವ ಯೋಜನೆಯನ್ನು ಗುದ್ದಲಿ ಪೂಜೆಯನ್ನು ಸ್ಥಳೀಯ ಶಾಸಕರು ವಸತಿ ಸಚಿವ ವಿ.ಸೋಮಣ್ಣ ಮತ್ತು ಲೋಕಸಭಾ ಸದಸ್ಯ, ರಾಷ್ಟೀಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತು ಯುವ ಮುಖಂಡ ಡಾ.ಅರುಣ್ ಸೋಮಣ್ಣರವರು ನೇರವೆರಿಸಿದರು.
ಗಡಿನಾಡು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸಿ.ಸೋಮಶೇಖರ್ ರವರು ಮತ್ತು ಗೋವಿಂದರಾಜನಗರ ಮಂಡಲ ಬಿಜೆಪಿ ಅಧ್ಯಕ್ಷ ವಿಶ್ವನಾಥಗೌಡರು, ಮಾಜಿ ಮಹಾನಗರ ಪಾಲಿಕೆ ಸದಸ್ಯ ಕೆ.ಉಮೇಶ್ ಶೆಟ್ಟಿ, ಮೋಹನ್ ಕುಮಾರ್, ದಾಸೇಗೌಡರು ಗಂಗಭೈರಯ್ಯ ರಾಮಪ್ಪ, ವಾಗೇಶ್ ಮತ್ತು ರೂಪ ಲಿಂಗೇಶ್ವರ್, ಸವಿತಾ ಕೃಷ್ಣ, ಜಯರತ್ನ, ಶಿಲ್ಪ ಶ್ರೀಧರ್, ಯುನಿರ್ವಸಲ್ ಕೇಬಲ್ ಕಿಶೋರ್ ಕುಮಾರ್ ರವರು ಪಾಲ್ಗೊಂಡಿದ್ದರು.
ವಸತಿ ಸಚಿವ ವಿ.ಸೋಮಣ್ಣರವರು ಮಾತನಾಡಿ, 66ಕೆ.ವಿ ಹೈಟೆನ್ಷನ್ ವಿದ್ಯುತ್ ತಂತಿಗಳು ಗೋವಿಂದರಾಜನಗರ ವಿಧಾನಸಭಾ ಬಹುತೇಕ ಪ್ರದೇಶದಲ್ಲಿ ವಿದ್ಯುತ್ ತಂತಿಗಳು ಹಾದುಹೋಗಿತ್ತು. 35ರಿಂದ 40ವರ್ಷಗಳ ಹಿಂದೆಯೇ ಹೈಟೆನ್ಷನ್ ವಿದ್ಯುತ್ ತಂತಿಗಳ ಕೆಳ ಭಾಗದಲ್ಲಿ ಸಾವಿರಾರು ಕುಟುಂಬಗಳು ವಾಸ ಮಾಡುತ್ತಿದ್ದರು. ಪ್ರತಿ ದಿನ ವಿದ್ಯುತ್ ತಂತಿಗಳ ಶಾಕ್ ಹೊಡೆಯುವ ಅತಂಕ ಮತ್ತು ವಿದ್ಯುತ್ ಪ್ರವಹಿಸಿ ಹಲವಾರು ಜನರು ಪ್ರಾಣಕಳೆದು ಕೊಂಡಿದ್ದಾರೆ ಮತ್ತು ಕೆಲವರು ಆಸ್ಪತ್ರೆ ಸೇರಿದ್ದಾರೆ .ಹೈಟೆನ್ಷನ್ ವಿದ್ಯುತ್ ತಂತಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು. ಇದನ್ನೂ ಓದಿ: ಶಸ್ತ್ರ ಚಿಕಿತ್ಸೆ ನಂತರ ಅಭಿಷೇಕ್ ಫೋಟೋ ಶೇರ್
ತೊಂದರೆಯನ್ನು ನಿವಾರಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸುಮಾರು 55 ಕಿ. ಮೀ ಉದ್ದದ ಎಚ್‍ಟಿ ಲೈನ್ ಅನ್ನು ಸುಮಾರು 7.5 ಕಿ ಮೀ ಭೂಗತ ಕೇಬಲ್ ಆಗಿ ಬದಲಾಯಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಜಾಜಿನಗರ 6 ನೇ ಬ್ಲಾಕ್, ಕೈಗಾರಿಕಾ ಪ್ರದೇಶ, ಮಾರೇನಹಳ್ಳಿ, ಎಂ ಸಿ ಬಡಾವಣೆ, ಡಾ. ಬಿ ಆರ್ ಅಂಬೇಡ್ಕರ್ ಆಟದ ಮೈದಾನ, ಮಾರುತಿ ಮಂದಿರ, ಅಗ್ರಹಾರ ದಾಸರಹಳ್ಳಿ, ಗೋವಿಂದರಾಜನಗರ, ಬಿಆರ್‍ವಿ ಕಾಲೋನಿ, ಚಂದ್ರಾ ಬಡಾವಣೆ, ಗಂಗೊಂಡನಹಳ್ಳಿ ವ್ಯಾಪ್ತಿಯಲ್ಲಿ ಹಾದು ಹೋಗುತ್ತಿರುವ ವಿದ್ಯುತ್ ಪ್ರಸರಣ ನಿಗಮದ 66 ಕೆ ವಿ ಹೈಟೆನ್ಷನ್ ವಿದ್ಯುತ್ ತಂತಿಗಳು ಇನ್ನು ಮುಂದೆ ಜನರ ಕಣ್ಣಿಗೆ ಕಾಣದು! ಈ ಅಧಿಕ ಒತ್ತಡದ ತಂತಿಗಳು ಇನ್ನು ಮುಂದೆ ಭೂಗತ ಕೇಬಲ್ ಮೂಲಕ ಹಾದು ಹೋಗಲಿವೆ. ಇನ್ನು ಹೈಟೆನ್ಷನ್ ವಿದ್ಯುತ್ ತಂತಿಗಳ ಕೆಳ ಭಾಗದಲ್ಲಿ ಮನೆ ಮಾಲೀಕರು ನೆಮ್ಮದ್ದಿಯಿಂದ ಜೀವನ ಸಾಗಿಸಬಹುದು. ಇದನ್ನೂ ಓದಿ: 70 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ADLR, DDLR ಎಸಿಬಿ ಬಲೆಗೆ
ತೇಜಸ್ವಿ ಸೂರ್ಯರವರು ಮಾತನಾಡಿ, ಅಭಿವೃದ್ದಿ ಪರ ಚಿಂತಕ, ಸದಾ ಕ್ರಿಯಾಶೀಲ ವ್ಯಕ್ತಿತ್ವ ಸಚಿವ ವಿ.ಸೋಮಣ್ಣರವರು ನಾಗರಿಕರ ಸಮಸ್ಯೆಗಳ ಪರಿಹಾರಕ್ಕೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಹೈಟೆನ್ಷನ್ ವಿದ್ಯುತ್ ತಂತಿಗಳಿಂದ ಬೆಂಗಳೂರು ನಗರದಲ್ಲಿ ನೂರಾರು ಜನರ ಜೀವ ಪಡೆದಿದೆ. ಇದಕ್ಕೆ ಪರಿಹಾರ ಒದಗಿಸಬೇಕು ಎಂದು ವಿ.ಸೋಮಣ್ಣರವರ ಅವಿರತ ಶ್ರಮದಿಂದ ಹೈಟೆನ್ಷನ್ ವಿದ್ಯುತ್ ತಂತಿಗಳು ಭೂಮಿಯ ಕೆಳ ಭಾಗದಲ್ಲಿ ಹಾದಹೋಗಲಿದೆ. ಇದರಿಂದ ಜನರ ಜೀವ ರಕ್ಷಣೆ ಜೊತೆಯಲ್ಲಿ ನಗರ ಸೌಂದರ್ಯ ಹೆಚ್ಚಲಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದ ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.
ತುಮಕೂರು: ವಿದ್ಯುತ್ ಹೈ ಟೆನ್ಷನ್ ವೈರ್ ತಗುಲಿದ ಪರಿಣಾಮ ಟಿಪ್ಪರ್ ಲಾರಿಯೊಂದು ಹೊತ್ತಿ ಉರಿದ ಘಟನೆ ಶಿರಾ ನಗರದಲ್ಲಿ ನಡೆದಿದೆ.
ನಗರದ ಮಹಾಲಿಂಗಪ್ಪ ಎನ್ನುವವರಿಗೆ ಸೇರಿದ ಜೈನ್ ಡಾಬಾ ಬಳಿ ಇರುವ ಜಮೀನಿಗೆ ಟಿಪ್ಪರ್ ಮೂಲಕ ಮಣ್ಣು ಸಾಗಿಸಲಾಗುತಿತ್ತು. ಈ ವೇಳೆ ಜಮೀನು ಮೂಲಕ ಹಾದು ಹೋದ ವಿದ್ಯುತ್ ತಂತಿ ತಗುಲಿದೆ. ಪರಿಣಾಮ ಏಕಾಏಕಿ ಬೆಂಕಿ ಹೊತ್ತಿ ಉರಿದಿದೆ. ಬೆಂಕಿ ಹತ್ತಿಕೊಳ್ಳುತಿದ್ದಂತೆ ಚಾಲಕ ಟಿಪ್ಪರ್ ನಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳ ಬಂದು ಬೆಂಕಿ ನಂದಿಸಿದೆ. ಅದೃಷ್ಟವಶಾತ್ ಡೀಸೆಲ್ ಟ್ಯಾಂಕ್‍ಗೆ ಬೆಂಕಿ ತಗುಲಿಲ್ಲ. ಡೀಸೆಲ್ ಟ್ಯಾಂಕ್ ಗೆ ಬೆಂಕಿ ತಲುಗುಲಿದರೆ ಟಿಪ್ಪರ್ ಲಾರಿ ಸಂಪೂರ್ಣ ಭಸ್ಮವಾಗುವ ಸಾಧ್ಯತೆ ಇತ್ತು. ಅಲ್ಲದೇ ಅಕ್ಕಪಕ್ಕ ಬೆಂಕಿ ವ್ಯಾಪಿಸಿ ದುರಂತ ಸಂಭವಿಸುತಿತ್ತು. ಲಾರಿ ಭಾಗಶಃ ಸುಟ್ಟು ಕರಕಲಾಗಿರುವುದರಿಂದ ಸುಮಾರು 8 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಲಕ್ನೋ: ಶಾಲಾ ಕಟ್ಟಡದ ಛಾವಣಿಯ ಮೇಲೆ 11,000 ಕೆವಿ ಅಧಿಕ ಒತ್ತಡದ ತಂತಿ(ಹೈಟೆನ್ಷನ್ ವೈರ್) ಬಿದ್ದು, ಸುಮಾರು 55 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರದಂದು ಬಲರಾಂಪುರ ಜಿಲ್ಲೆಯ ಉಟ್ರೌಲಾದ ವಿಷ್ಣುಪುರ ಸರ್ಕಾರಿ ಪ್ರಾಥಮಿಕ ಕಟ್ಟಡದ ಛಾವಣಿಯ ಮೇಲೆ 11,000 ಕೆವಿಗೂ ಅಧಿಕ ಒತ್ತಡದ ತಂತಿ(ಹೈಟೆನ್ಷನ್ ವೈರ್) ಬಿದ್ದು ಈ ಅವಘಡ ಸಂಭವಿಸಿದೆ. ಘಟನೆ ನಡೆದ ಸಂದರ್ಭದಲ್ಲಿ ಶಾಲೆಯಲ್ಲಿ ಸುಮಾರು 100 ಮಕ್ಕಳಿದ್ದರು ಎನ್ನಲಾಗಿದ್ದು, 55 ಮಕ್ಕಳಿಗೆ ಸುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ಸದ್ಯ ಗಾಯಗೊಂಡ ಮಕ್ಕಳಲ್ಲಿ ಕೆಲವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಕೆಲವರನ್ನು ಬಲರಾಂಪುರದ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲದೆ ನಾಲ್ಕು ಮಕ್ಕಳ ಸ್ಥಿತಿ ಗಂಭೀರವಾಗಿದೆ.
ಹೈಟೆನ್ಷನ್ ವೈರ್ ಶಾಲಾ ಕಟ್ಟಡದ ಮೇಲೆ ಬಿದ್ದ ತಕ್ಷಣವೇ ವಿದ್ಯುತ್ ಕಡಿತಗೊಳಿಸಿದ್ದರಿಂದ ಹೆಚ್ಚಿನ ಸಾವುನೋವುಗಳಾಗಿಲ್ಲ. ಈ ಬಗ್ಗೆ ತಿಳಿಯುತ್ತಿದ್ದಂತೆ ಆತಂಕಗೊಂಡ ಪೋಷಕರು ಶಾಲೆಗೆ ಧಾವಿಸಿದ್ದು, ಸಿಟ್ಟಿಗೆದ್ದು ಶಾಲಾ ಸಿಬ್ಬಂದಿ ಮೇಲೆ ಕ್ರಿಮಿನಲ್ ನಿರ್ಲಕ್ಷ್ಯದ ಆರೋಪ ಮಾಡಿದ್ದಾರೆ.
ಅಷ್ಟೇ ಅಲ್ಲದೆ, ಈ ಘಟನೆ ನಡೆದ ಬಳಿಕ ಎಚ್ಚೆತ್ತುಕೊಂಡ ಬಲರಾಂಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೃಷ್ಣ ಕರುಣೇಶ್ ಅವರು ಓರ್ವ ಗುತ್ತಿಗೆದಾರರನ್ನು ಸೇವೆಯಿಂದ ತಕ್ಷಣವೇ ವಜಾಗೊಳಿಸಿದ್ದಾರೆ. ಅಲ್ಲದೆ ಸಂಬಂಧಪಟ್ಟ ಕಿರಿಯ ಎಂಜಿನಿಯರ್ ವಿರುದ್ಧವೂ ಇಲಾಖಾ ತನಿಖೆಗೆ ಆದೇಶಿಸಿದ್ದಾರೆ. ಜೊತೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಗಾಯಗೊಂಡಿರುವ ಶಾಲಾ ಮಕ್ಕಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
ಈ ಅವಘಡ ಸಂಭವಿಸಿದ್ದು ಹೇಗೆ? ಕಾರಣವೇನು ಎನ್ನುವ ಬಗ್ಗೆ 24 ಗಂಟೆಗಳ ಒಳಗೆ ವರದಿಯನ್ನು ಸಲ್ಲಿಸಿ ಎಂದು ಮಧ್ಯಾಂಚಲ್ ವಿದ್ಯುತ್ ವಿತರಣಾ ನಿಗಮದ ಯೋಜನಾ ನಿರ್ದೇಶಕರಿಗೆ ಆದೇಶಿಸಿದ್ದಾರೆ. ಅಲ್ಲದೇ ತಪ್ಪಿತ್ತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆಯನ್ನೂ ಕೂಡ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಇಂತಹ ಘಟನೆಗಳು ಮತ್ತೆ ನಡೆಯದಂತೆ ನಿಗವಹಿಸಿ, ಜೊತೆಗೆ ಹೈಟೆನ್ಷನ್ ತಂತಿಗಳ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಿ ಹಾಗೂ ರಾಜ್ಯವ್ಯಾಪಿ ಅಭಿಯಾನ ಆರಂಭಿಸಿ ಎಂದು ಸಿಎಂ ಉತ್ತರ ಪ್ರದೇಶ ವಿದ್ಯುತ್ ನಿಗಮದ ಪ್ರಧಾನ ಕಾರ್ಯದರ್ಶಿ ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.