Tag: highcourt

  • ಮುಡಾ ಕೇಸ್ ವಿಚಾರಣೆ – ಇಡೀ ದಿನ ಸಿಎಂ ಕಾರ್ಯಕ್ರಮ ರಿಸರ್ವ್

    ಮುಡಾ ಕೇಸ್ ವಿಚಾರಣೆ – ಇಡೀ ದಿನ ಸಿಎಂ ಕಾರ್ಯಕ್ರಮ ರಿಸರ್ವ್

    ಬೆಂಗಳೂರು: ಕೋರ್ಟ್ ನಲ್ಲಿ ಇಂದು ಮುಡಾ (MUDA Scam) ಭ್ರಷ್ಟಾಚಾರ ಕೇಸ್ ವಿಚಾರಣೆ ಹಿನ್ನೆಲೆ ಇಡೀ ದಿನ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದಿರಿಸಲಾಗಿದೆ.

    ವಕೀಲರ ಜೊತೆ ಚರ್ಚೆ ಮತ್ತು ಕೋರ್ಟ್ ಕಲಾಪ ಹಿನ್ನೆಲೆಯಲ್ಲಿ ಸಿಎಂ ಯಾವುದೇ ಕಾರ್ಯಕ್ರಮಗಳನ್ನು ನಿಗದಿ ಮಾಡಿಕೊಳ್ಳಲಿಲ್ಲ. ಇದನ್ನೂ ಓದಿ: Parliament Attack| ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತಂದು ಫೇಮಸ್‌ ಆಗಬೇಕೆಂದುಕೊಂಡಿದ್ದ ಆರೋಪಿಗಳು

    ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಇದಲ್ಲದೇ ಸೆ. 12ರಂದು ಕೂಡ ವಾದ ಸರಣಿ ಮುಂದುವರೆಯಲಿದೆ. ಅಂದು ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಹೀಗಾಗಿ ಇಂದು ಹೈಕೋರ್ಟ್ ಆದೇಶ ನೀಡುವ ಸಾಧ್ಯತೆ ಕಡಿಮೆ ಇದೆ. ಇದನ್ನೂ ಓದಿ: ಕೃಷಿಗೆ ಡಿಜಿಟಲ್ ಸ್ಪರ್ಶ; ಆಧಾರ್‌ನಂತೆ ರೈತರ ಜಮೀನಿಗೆ ಐಡಿ, ಡಿಜಿಟಲ್ ಮೂಲಕ ಬೆಳೆ ಸಮೀಕ್ಷೆ

  • ಲೋಕ ಅದಾಲತ್‌ನಲ್ಲಿ 520 ಪ್ರಕರಣ ಇತ್ಯರ್ಥ – 14 ಕೋಟಿ ಪರಿಹಾರಕ್ಕೆ ಜನತಾ ನ್ಯಾಯಾಲಯ ಆದೇಶ!

    ಲೋಕ ಅದಾಲತ್‌ನಲ್ಲಿ 520 ಪ್ರಕರಣ ಇತ್ಯರ್ಥ – 14 ಕೋಟಿ ಪರಿಹಾರಕ್ಕೆ ಜನತಾ ನ್ಯಾಯಾಲಯ ಆದೇಶ!

    ಕಲಬುರಗಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಶನಿವಾರ ಇಲ್ಲಿನ ಕಲಬುರಗಿ ಹೈಕೋರ್ಟ್ (Kalaburagi Highcourt) ಪೀಠದಲ್ಲಿ ಜರುಗಿದ ಲೋಕ ಅದಾಲತ್‌ನಲ್ಲಿ (Lok Adalat) ಪರಸ್ಪರ ರಾಜಿ ಸಂಧಾನದ ಮೂಲಕ 520 ಪ್ರಕರಣ ವಿಲೇವಾರಿ ಮಾಡಿ 14,00,71,305 ರೂ. ಪರಿಹಾರ ವಿತರಣೆಗೆ ಜನತಾ ನ್ಯಾಯಾಲಯ ಆದೇಶಿಸಿದೆ.

    ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು ವಾಹನ ವಿಮೆ ಮತ್ತು ಸಿವಿಲ್ ಪ್ರಕರಣಗಳನ್ನು ಅರ್ಜಿದಾರ, ಪ್ರತಿವಾದಗಳು ಹಾಗೂ ವಕೀಲರ ಸಮಕ್ಷಮ ರಾಜಿ-ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಲಾಯಿತು. ಇದನ್ನೂ ಓದಿ: ಇನ್ನು ಮುಂದೆ ಕ್ರೆಡಿಟ್‌ ಕಾರ್ಡ್‌ನಂತೆ ಯುಪಿಐ ಬಳಸಬಹುದು – ಇದು ಹೇಗೆ ಕೆಲಸ ಮಾಡುತ್ತೆ?

    ಲೋಕ ಅದಾಲತ್‌ನಲ್ಲಿ ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ.ಅಶೋಕ್ ಎಸ್ ಕಿಣಗಿ, ನ್ಯಾ.ಉಮೇಶ್ ಎಂ ಅಡಿಗ ಹಾಗೂ ನ್ಯಾ.ರಾಜೇಶ್ ರೈಕೆ ಅವರು ಭಾಗವಹಿಸಿದ್ದರು. ಇದನ್ನೂ ಓದಿ: Assembly Bypolls: 13 ಕ್ಷೇತ್ರಗಳ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟ ಜಯಭೇರಿ – 2ರಲ್ಲಿ ಬಿಜೆಪಿ ಗೆಲುವು!

    ಉಚ್ಚನ್ಯಾಯಾಲಯದ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ದಯಾನಂದ ವಿ.ಹಿರೇಮಠ, ಅಪರ ಮಹಾ ವಿಲೇಖನಾಧಿಕಾರಿ ಬಸವರಾಜ ಚೇಂಗಟಿ ಸೇರಿದಂತೆ ನ್ಯಾಯಾವಾದಿಗಳು, ಕಕ್ಷಿದಾರರು ಭಾಗವಹಿಸಿದ್ದರು. ಇದನ್ನೂ ಓದಿ: ರಾಮನಗರ ಅನ್ನೋದಕ್ಕಿಂತ ಬೇರೊಂದು ಒಳ್ಳೆಯ ಪದ ಸಿಗಲ್ಲ: ಡಾ.ಮಂಜುನಾಥ್

  • ಮಧ್ಯಂತರ ಜಾಮೀನಿನ ಬೆನ್ನಲ್ಲೇ ಭವಾನಿ ರೇವಣ್ಣ SIT ಮುಂದೆ ಹಾಜರು

    ಮಧ್ಯಂತರ ಜಾಮೀನಿನ ಬೆನ್ನಲ್ಲೇ ಭವಾನಿ ರೇವಣ್ಣ SIT ಮುಂದೆ ಹಾಜರು

    ಬೆಂಗಳೂರು: ಕೆ.ಆರ್ ಪೇಟೆ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಇದೀಗ ಭವಾನಿ ರೇವಣ್ಣ ಎಸ್‍ಐಟಿ ಮುಂದೆ ಹಾಜರಾಗಿದ್ದಾರೆ.

    ಶುಕ್ರವಾರ (ಇಂದು) ಮಧ್ಯಾಹ್ನ ಒಂದು ಗಂಟೆಗೆ ಎಸ್‍ಐಟಿ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ (Highcourt) ಸೂಚಿಸಿತ್ತು. ಅಲ್ಲದೇ ವಿಚಾರಣೆಯ ಬಳಿಕ 5 ಗಂಟೆಗಳ ಕಾಲ ಮಾತ್ರ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಬಹುದು ಎಂದು ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ವಕೀಲ ಅರುಣ್ ಜೊತೆ ಇದೀಗ ಭವಾನಿ ವಿಚಾರಣೆಗೆ ಹಾಜರಾಗಿದ್ದಾರೆ.

    ಭವಾನಿ ಅವರನ್ನು ಎಸ್‍ಐಟಿ ಬಂಧಿಸಬಾರದು. ಕೆ ಆರ್ ನಗರ ತಾಲೂಕು ಮತ್ತು ಹಾಸನಕ್ಕೆ ಭವಾನಿ (Bhavani Revanna) ಪ್ರವೇಶಿಸಿಬಾರದು. ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕೋರ್ಟ್ ಷರತ್ತು ವಿಧಿಸಿದೆ. ಭವಾನಿ ವಿಚಾರಣೆಗೆ ಹಾಜರಾಗದಿದ್ದಕ್ಕೆ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ. ಈ ಆದೇಶ ಅಮಾನತಿನಲ್ಲಿ ಇಡಲಾಗಿದೆ ಎಂದು ಹೇಳಿದ ಹೈಕೋರ್ಟ್, ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿತು. ಇದನ್ನೂ ಓದಿ: ನಾಗೇಂದ್ರ ಬೆನ್ನಲ್ಲೇ ಬಸನಗೌಡ ದದ್ದಲ, ಎನ್.ಎಸ್.ಬೋಸರಾಜು ರಾಜೀನಾಮೆಗೆ ಒತ್ತಾಯ

    ಪ್ರಕರಣ ಸಂಬಂಧ ಈ ಹಿಂದೆ ವಿಶೇಷ ತನಿಖಾ ತಂಡ (SIT) ನೋಟಿಸ್ ಹಾಗೂ ಬಂಧನ ವಾರೆಂಟ್ ನೀಡಿದರೂ ಭವಾನಿ ರೇವಣ್ಣ ಅವರ ಸುಳಿವಿರಲಿಲ್ಲ. ಹೀಗಾಗಿ ಭವಾನಿ ರೇವಣ್ಣ ಅವರು ಅಜ್ಞಾತವಾಸದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಕೋರ್ಟ್ ಆದೇಶದ ಬೆನ್ನಲ್ಲೇ ಭವಾನಿ ಅವರು ಎಸ್‍ಐಟಿ ಮುಂದೆ ಹಾಜರಾಗಿರುವುದು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಂತಾಗಿದೆ.

  • ಜಾಮೀನು ಸಿಕ್ಕರೂ ರೇವಣ್ಣಗೆ ತಪ್ಪಿಲ್ಲ ಸಂಕಷ್ಟ- ಹೈಕೋರ್ಟ್ ಮೆಟ್ಟಿಲೇರಿದ ಎಸ್‍ಐಟಿ

    ಜಾಮೀನು ಸಿಕ್ಕರೂ ರೇವಣ್ಣಗೆ ತಪ್ಪಿಲ್ಲ ಸಂಕಷ್ಟ- ಹೈಕೋರ್ಟ್ ಮೆಟ್ಟಿಲೇರಿದ ಎಸ್‍ಐಟಿ

    ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಸಿಕ್ಕರೂ ಮಾಜಿ ಸಚಿವ ಹೆಚ್.ಡಿ ರೇವಣ್ಣ (H.D Revanna) ಅವರಿಗೆ ಕಾನೂನು ಸಂಕಷ್ಟ ತಪ್ಪಿಲ್ಲ.

    ಹೌದು. ಜಾಮೀನು ಪಡೆದು ನಿರಾಳವಾಗಿದ್ದ ಹೆಚ್.ಡಿ ರೇವಣ್ಣಗೆ ವಿಶೇಷ ತನಿಖಾ ತಂಡ (SIT) ಶಾಕ್ ನೀಡಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಜಾಮೀನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದೆ. ಇದನ್ನೂ ಓದಿ: ಸಂಸದ ಪ್ರಜ್ವಲ್ ರೇವಣ್ಣ ಪಾಸ್‍ಪೋರ್ಟ್ ರದ್ದು ಮಾಡಲು ಚಿಂತನೆ

    ರೇವಣ್ಣ ಜಾಮೀನು ಆದೇಶ ವಜಾ ಮಾಡುವಂತೆ ಹೈಕೋರ್ಟ್‍ಗೆ ಎಸ್‍ಐಟಿ ಅರ್ಜಿ ಅಲ್ಲಿಸಿದೆ. ಹೈಕೋರ್ಟ್‍ನ ಜನಪ್ರತಿನಿಧಿಗಳ ಪೀಠಕ್ಕೆ ಅರ್ಜಿ ಸಲ್ಲಿಸಿದ ಎಸ್‍ಐಟಿ, ಕೆಳ ನ್ಯಾಯಾಲಯದ ಜಾಮೀನು ಆದೇಶ ರದ್ದು ಮಾಡುವಂತೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನಲ್ಲಿ ನಡೆಯುವ ವಾದ-ಪ್ರತಿಪಾದ ತೀವ್ರ ಕುತೂಹಲ ಕೆರಳಿಸಿದೆ.

    ಎಸ್‍ಐಟಿ ಪರ ಎಸ್‍ಪಿಪಿ ರವಿ ವರ್ಮಕುಮಾರ್ ಹಾಗೂ ರೇವಣ್ಣ ಪರ ಸಿವಿ ನಾಗೇಶ್ ವಾದ ಮಂಡಿಸುವ ಸಾಧ್ಯತೆಗಳಿವೆ. ಇನ್ನು ಎಸ್‍ಐಟಿ ಹೈಕೋರ್ಟ್‍ಗೆ ಸಲ್ಲಿಸಿರುವ ಅರ್ಜಿಗೆ ರೇವಣ್ಣ ಪರ ವಕೀಲರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  • ಡಿಕೆ ಶಿವಕುಮಾರ್‌ಗೆ ಹೈಕೋರ್ಟ್ ತುರ್ತು ನೋಟಿಸ್

    ಡಿಕೆ ಶಿವಕುಮಾರ್‌ಗೆ ಹೈಕೋರ್ಟ್ ತುರ್ತು ನೋಟಿಸ್

    ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ತುರ್ತು ನೋಟಿಸ್ ನೀಡಿದೆ.

    ಡಿಕೆ ಶಿವಕುಮಾರ್ (DK Shivakumar) ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕನಕಪುರ ನ್ಯಾಯಾಲಯದ ವ್ಯಾಪ್ತಿಯಿಂದ ಬೆಂಗಳೂರಿಗೆ ವರ್ಗಾವಣೆ ಮಾಡಿಕೊಡಿ. ಯಾಕೆಂದರೆ ಡಿಕೆ ಶಿವಕುಮಾರ್ ಬಲಾಢ್ಯರು. ನಾನು ಕನಕಪುರಕ್ಕೆ ಹೋಗಲು ತೊಂದರೆ ಮಾಡುತ್ತಾರೆ. ಹೀಗಾಗಿ ಬೆಂಗಳೂರಿನ ಕೋರ್ಟ್ ಗೆ ವರ್ಗಾವಣೆ ಮಾಡಿ ಎಂದು ಯತ್ನಾಳ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ (Highcourt) ಇಂದು ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

    ಪ್ರಕರಣವೇನು?: ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ನಾಯಕರನ್ನು ಭೇಟಿ ಮಾಡಿ ತಮ್ಮ ವಿರುದ್ಧದ ಆದಾಯ ತೆರಿಗೆ ಇಲಾಖೆ (Income Tax Department) ಪ್ರಕರಣಗಳಿಂದ ರಕ್ಷಣೆ ಕೋರಿದ್ದಾರೆ. ನಮ್ಮ ಕೇಂದ್ರ ಸಚಿವರ ಮೂಲಕ ಲಾಬಿ ಮಾಡಿದ್ದಾರೆ. ವಿವಿಧ ಮೂಲಗಳ ಜಾಡು ಹಿಡಿದು ನಮ್ಮ ರಾಷ್ಟ್ರೀ ಯ ಅಧ್ಯಕ್ಷರ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದಾರೆ. ತಮ್ಮ ವಿರುದ್ಧದ ಇಡಿ ಪ್ರಕರಣಗಳನ್ನು ಮುಕ್ತಾಯಗೊಳಿಸಿದರೆ ಕರ್ನಾ ಟಕದಲ್ಲಿ ಬಿಜೆಪಿ ಸರ್ಕಾ ರ ರಚಿಸಲು ತಮ್ಮ ವಿರೋಧ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು 2019ರಲ್ಲಿ ವಿಜಯಪುರದಲ್ಲಿ ಯತ್ನಾಳ್ ಹೇಳಿದ್ದರು.

    ಯತ್ನಾಳ್‌ ಅವರ ಹೇಳಿಕೆಯಿಂದ ನನ್ನ ಘನತೆ ಮತ್ತು ವರ್ಚಸ್ಸಿಗೆ ಹಾನಿಯಾಗಿದ್ದು, 204 ಕೋಟಿ ಪರಿಹಾರ ನೀಡುವಂತೆ ಆದೇಶಿಸಬೇಕು ಎಂದು ಕೋರಿ ಶಿವಕುಮಾರ್, ರಾಮನಗರ ಜಿಲ್ಲೆಯ ಕನಕಪುರ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಇದನ್ನೂ ಓದಿ: ಮಂಡ್ಯ, ಹಾಸನ, ಕೋಲಾರದಲ್ಲಿ ಜೆಡಿಎಸ್ ಸ್ಪರ್ಧೆ : ಹೆಚ್‌ಡಿಕೆ ಘೋಷಣೆ

  • ಮಕ್ಕಳೇ ಗೊಂದಲ ಬೇಡ- ನಿಗದಿಯಂತೆ 5,8,9,11ನೇ ಕ್ಲಾಸ್‍ಗೆ ಬೋರ್ಡ್ ಎಕ್ಸಾಂ

    ಮಕ್ಕಳೇ ಗೊಂದಲ ಬೇಡ- ನಿಗದಿಯಂತೆ 5,8,9,11ನೇ ಕ್ಲಾಸ್‍ಗೆ ಬೋರ್ಡ್ ಎಕ್ಸಾಂ

    ಬೆಂಗಳೂರು: ರಾಜ್ಯ ಪಠ್ಯ ಕ್ರಮದ 5, 8, 9,11 ತರಗತಿಗಳಿಗೆ ಬೋರ್ಡ್ ಎಕ್ಸಾಮ್ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ.

    ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠದ 5,8,9,11 ತರಗತಿಗಳಿಗೆ ಬೋರ್ಡ್ ಎಕ್ಸಾಮ್ ರದ್ದು ಮಾಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಪಬ್ಲಿಕ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಹೀಗಾಗಿ ನಿಗದಿಯಂತೆ ಸೋಮವಾರದಿಂದ 5, 8, 9,11 ತರಗತಿಗಳಿಗೆ ಬೋರ್ಡ್ ಎಕ್ಸಾಮ್ ನಡೆಯಲಿವೆ. ಈ ಕುರಿತ ಗೊಂದಲಕ್ಕೆ ತೆರೆ ಬಿದ್ದಿದೆ.

    ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ಬುಧವಾರ ತೀರ್ಪು ಪ್ರಕಟಿಸಿತ್ತು. ಹೈಕೋರ್ಟ್‍ನ ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11 ರವರೆಗೂ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿತ್ತು. ಇದನ್ನೂ ಓದಿ: ದೇಶದಲ್ಲೇ ಪಶ್ಚಿಮ ಬಂಗಾಳವು ಮಹಿಳೆಯರಿಗೆ ಸುರಕ್ಷಿತ ರಾಜ್ಯ: ಮಮತಾ ಬ್ಯಾನರ್ಜಿ

  • 5,8,9,11ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು – ಹೈಕೋರ್ಟ್ ಆದೇಶ

    5,8,9,11ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು – ಹೈಕೋರ್ಟ್ ಆದೇಶ

    ಬೆಂಗಳೂರು: ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ (Board Exam) ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ (High Court) ರದ್ದುಪಡಿಸಿ ಆದೇಶಿಸಿದೆ.

    ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ಬುಧವಾರ ತೀರ್ಪು ಪ್ರಕಟಿಸಿತು. ಇದನ್ನೂ ಓದಿ: ಬೆಂಗಳೂರು ಬಿಸಿ ಬಿಸಿ; 4 ವರ್ಷದ ದಾಖಲೆ ಮುರಿದ ಸಿಲಿಕಾನ್‌ ಸಿಟಿ

    ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಹೈಕೋರ್ಟ್‌ನ ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11 ರವರೆಗೂ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ. ಇದನ್ನೂ ಓದಿ: ಮೋದಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಸಂದೇಶ್‌ಖಾಲಿ ಮಹಿಳೆಯರಿದ್ದ ಬಸ್‌ಗಳಿಗೆ ತಡೆ

    ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9 ರಂದು ಎರಡು ಸುತ್ತೋಲೆಗಳನ್ನ ಹೊರಡಿಸಿ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ ಸಂಘ, ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಆದರೆ ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸಲು ಕಷ್ಟ. ಹಾಗಾಗಿ ಎಲ್ಲಾ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ಕೋರಿದ್ದರು. ಇದನ್ನೂ ಓದಿ: ಕೆಲ ಪುರುಷರು ಅತ್ಯಾಚಾರ ಮಾಡಿದಾಗ, ಎಲ್ಲಾ ಭಾರತೀಯರಿಗೂ ನಾಚಿಕೆಯಾಗ್ಬೇಕು: ಗ್ಯಾಂಗ್‌ರೇಪ್‌ಗೆ ಗಾಯಕಿ ಕಿಡಿ

    ಸರ್ಕಾರ ಪರ ವಕೀಲರು, ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗವೇ ಆಗಿದೆ. ಸಾಮಾನ್ಯ ಪಠ್ಯಕ್ರಮದಿಂದಲೇ ಕಲಿಕಾ ಚೇತರಿಗೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ. ಮಕ್ಕಳ ಬುದ್ಧಿಮತ್ತೆಯನ್ನು ಸಕಾರಾತ್ಮಕವಾಗಿ ವೃದ್ಧಿಸುವ ನಿಟ್ಟಿನಲ್ಲಿ ಇದನ್ನು ರೂಪಿಸಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿಲ್ಲ. ಹಾಗಾಗಿ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಪಡೆದುಕೊಂಡಿರುವುದು ಸರಿಯಿದೆ. ಅದರಂತೆ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಸಮರ್ಥಿಸಿದ್ದರು. ಇದನ್ನೂ ಓದಿ: ದೇಶದ ಮೊದಲ ನದಿಯೊಳಗಿನ ಮೆಟ್ರೋ ಸುರಂಗ ಮಾರ್ಗ ಲೋಕಾರ್ಪಣೆ

  • ಅಕ್ಬರ್‌, ಸೀತಾ ಸಿಂಹಗಳಿಗೆ ಮರುನಾಮಕರಣ ಮಾಡಿ- ಕೋಲ್ಕತ್ತಾ ಹೈಕೋರ್ಟ್‌ ಸೂಚನೆ

    ಅಕ್ಬರ್‌, ಸೀತಾ ಸಿಂಹಗಳಿಗೆ ಮರುನಾಮಕರಣ ಮಾಡಿ- ಕೋಲ್ಕತ್ತಾ ಹೈಕೋರ್ಟ್‌ ಸೂಚನೆ

    ಕೋಲ್ಕತ್ತಾ: ಸಿಲಿಗುರಿಯ ಬೆಂಗಾಲ್ ಸಫಾರಿ ಪಾರ್ಕ್‌ನಲ್ಲಿ (Bengal Safari Park in Siliguri) ಎರಡೂ ಸಿಂಹಗಳನ್ನು ಒಂದೇ ಆವರಣದಲ್ಲಿ ಇರಿಸಿದ ನಂತರ ವಿವಾದಕ್ಕೆ ಕಾರಣವಾದ ಅಕ್ಬರ್ ಮತ್ತು ಸೀತಾ ಸಿಂಹಗಳಿಗೆ ಮರುನಾಮಕರಣ ಮಾಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೋಲ್ಕತ್ತಾ ಹೈಕೋರ್ಟ್ (Calcutta High Court) ಸೂಚಿಸಿದೆ.

    ತ್ರಿಪುರಾದಿಂದ ಪಶ್ಚಿಮ ಬಂಗಾಳಕ್ಕೆ ಇತ್ತೀಚೆಗೆ ವರ್ಗಾವಣೆಗೊಂಡ ಸಿಂಹಗಳ ಹೆಸರನ್ನು ಬದಲಾಯಿಸುವಂತೆ ವಿಶ್ವ ಹಿಂದೂ ಪರಿಷತ್ (Vishwa Hindu Parishad) ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಇಂದು ಕೈಗೆತ್ತಿಕೊಂಡಿತು. ಬಳಿಕ ನ್ಯಾಯಮೂರ್ತಿ ಸೌಗತ ಭಟ್ಟಾಚಾರ್ಯ ಅವರ ಏಕಸದಸ್ಯ ಪೀಠವು ವಿವಾದದಿಂದ ದೂರವಿರಲು ಮತ್ತು ಪ್ರಾಣಿಗಳ ಮರುನಾಮಕರಣವನ್ನು ಪರಿಗಣಿಸುವಂತೆ ಮೌಖಿಕ ನಿರ್ದೇಶನ ನೀಡಿತು. ಇದನ್ನೂ ಓದಿ: ಹುಲಿ ಬೇಟೆಯಾಡಿ ಹಲ್ಲಿನ ಪೆಂಡೆಂಟ್‌ ಧರಿಸಿದ್ದೇನೆ- ವಿವಾದಕ್ಕೀಡಾದ ಶಾಸಕ

    ನೀವು ಸಿಂಹಕ್ಕೆ ಹಿಂದೂ ದೇವತೆ, ಮುಸ್ಲಿಂ ಪ್ರವಾದಿ, ಕ್ರಿಶ್ಚಿಯನ್ ದೇವರು, ಸ್ವಾತಂತ್ರ್ಯ ಹೋರಾಟಗಾರ ಅಥವಾ ನೊಬೆಲ್ ಪ್ರಶಸ್ತಿ ವಿಜೇತರ ಹೆಸರನ್ನು ಇಡುತ್ತೀರಾ? ರಾಜ್ಯ ಸರ್ಕಾರ ಇದನ್ನು ಯಾಕೆ ಪ್ರಶ್ನಿಸಿಲ್ಲ. ಇದು ಜಾತ್ಯಾತೀತ ರಾಜ್ಯವಾಗಿದ್ದು, ಸೀತಾ ಮತ್ತು ಅಕ್ಬರ್ ಹೆಸರನ್ನು ಸಿಂಹಕ್ಕೆ ಹೆಸರಿಸಿ ವಿವಾದವನ್ನು ಏಕೆ ಮೈಮೇಲೆ ಎಳೆದುಕೊಳ್ಳಬೇಕು? ಈ ವಿವಾದವನ್ನು ತಪ್ಪಿಸಬೇಕಾಗಿತ್ತು. ಸೀತೆ (Sita) ಮಾತ್ರವಲ್ಲ, ಅಕ್ಬರ್ (Akbar) ಹೆಸರನ್ನೂ ನಾನು ಬೆಂಬಲಿಸುವುದಿಲ್ಲ ಎಂದು ನ್ಯಾಯಮೂರ್ತಿ ಭಟ್ಟಾಚಾರ್ಯ ಛಾಟಿ ಬೀಸಿದರು.

    ಈ ವೇಳೆ ಪಶ್ಚಿಮ ಬಂಗಾಳ (West Bengal) ಸರ್ಕಾರದ ಪರ ವಕೀಲರು, ಈಗಾಗಲೇ ಸಿಂಹಗಳಿಗೆ ಮರುನಾಮಕರಣ ಮಾಡಲು ಯೋಚಿಸುತ್ತಿರುವುದಾಗಿ ತಿಳಿಸಿದರು. ಬಳಿಕ ಕೋರ್ಟ್‌, ವಿಶ್ವ ಹಿಂದೂ ಪರಿಷತ್ ಸಲ್ಲಿಸಿರುವ ಅರ್ಜಿಯನ್ನು ಪಿಐಎಲ್ ಎಂದು ಮರು ವರ್ಗೀಕರಿಸಲು ನಿರ್ದೇಶಿಸಿದೆ. ಜೊತೆಗೆ ಪಿಐಎಲ್‌ಗಳನ್ನು ಆಲಿಸುವ ಸಾಮಾನ್ಯ ಪೀಠಕ್ಕೆ ಮರುನಿರ್ದೇಶನ ನೀಡಿದೆ.

  • ಕೊಲ್ಲೂರು ದೇಗುಲದ ಪಕ್ಕದಲ್ಲೇ ಹೈವೇ ಪ್ರಶ್ನಿಸಿ PIL- ಯಥಾಸ್ಥಿತಿಗೆ ಹೈಕೋರ್ಟ್ ಆದೇಶ

    ಕೊಲ್ಲೂರು ದೇಗುಲದ ಪಕ್ಕದಲ್ಲೇ ಹೈವೇ ಪ್ರಶ್ನಿಸಿ PIL- ಯಥಾಸ್ಥಿತಿಗೆ ಹೈಕೋರ್ಟ್ ಆದೇಶ

    ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ಬರುವ ಕೊಲ್ಲೂರು ಮೂಕಾಂಬಿಕಾ ದೇವಾಲಯದ (Kolluru Mookambika Temple) ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿಗೆ ಭೂಸ್ವಾಧೀನ ಪ್ರಶ್ನಿಸಿ ಹೈಕೋರ್ಟ್‍ಗೆ (Highcourt) ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

    ದೇವಾಲಯದ ಗೋಡೆಯ 3 ಅಡಿ ಪಕ್ಕದಲ್ಲೇ ಹೆದ್ದಾರಿಗೆ ಭೂಸ್ವಾಧೀನಕ್ಕೆ ಸೂಚಿಸಲಾಗಿದೆ. ಇದನ್ನು ಪ್ರಶ್ನಿಸಿ ಕೊಲ್ಲೂರಿನ ಗುರುಪ್ರಸಾದ್ ಎಂಬವರು ಪಿಐಎಲ್ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಸಿಜೆ ಪಿ.ಎಸ್. ದಿನೇಶ್ ಕುಮಾರ್, ನ್ಯಾ. ಟಿ.ಜಿ. ಶಿವಶಂಕರೇಗೌಡರಿದ್ದ ಪೀಠ ವಿಚಾರಣೆಗೆ ಕೈಗೆತ್ತಿಕೊಂಡಿದೆ. ಸದ್ಯ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದೆ. ಇದನ್ನೂ ಓದಿ: 4 ದಿನದ ಕೂಸನ್ನು ಬಿಸಿ ನೀರಿನಲ್ಲಿ ಕೂರಿಸಿ ಸ್ನಾನ ಪ್ರಕರಣ- ಧಾರವಾಡದ ಆಸ್ಪತ್ರೆಗೆ 10 ಲಕ್ಷ ದಂಡ

    ಯೋಜನೆಯ ಪ್ರಕಾರ, ಕಾಮಗಾರಿ ನಡೆದರೆ ದೇವಾಲಯದ ಗೋಡೆಯ 3 ಅಡಿ ಪಕ್ಕದಲ್ಲೇ ಹೆದ್ದಾರಿ ನಿರ್ಮಾಣವಾಗಲಿದೆ. ಹೆದ್ದಾರಿಯಲ್ಲಿ ಪ್ರತಿದಿನ ಅಂದಾಜು 15 ಸಾವಿರ ವಾಹನಗಳು ಹಾದುಹೋಗಲಿವೆ. ಇದರಿಂದ ಸಾವಿರಾರು ವರ್ಷಗಳ ಹಳೆಯ ದೇಗುಲಕ್ಕೆ ಅಪಾಯವಿದೆ ಎಂದು ಅರ್ಜಿದಾರರ ಪರ ವಕೀಲ ವೆಂಕಟೇಶ್ ದಳವಾಯಿ ವಾದ ಮಂಡಿಸಿದರು.

    ಅರ್ಜಿದಾರರ ಪರ ವಾದವನ್ನು ಆಲಿಸಿದ ನ್ಯಾಯಪೀಠ, ಹೆದ್ದಾರಿ ಪ್ರಾಧಿಕಾರಕ್ಕೆ ನೋಟಿಸ್ ನೀಡಿ ವಿವರಣೆ ಕೇಳಿದೆ. ಜೊತೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ ನೀಡಿದೆ.

  • ಸಿಎಂಗೆ ಗೌರವ ಕೊಡುವುದು ನಮ್ಮ ಜವಾಬ್ದಾರಿ- ಅನಂತ್ ಕುಮಾರ್ ಹೆಗಡೆಗೆ ಹೈಕೋರ್ಟ್  ತರಾಟೆ

    ಸಿಎಂಗೆ ಗೌರವ ಕೊಡುವುದು ನಮ್ಮ ಜವಾಬ್ದಾರಿ- ಅನಂತ್ ಕುಮಾರ್ ಹೆಗಡೆಗೆ ಹೈಕೋರ್ಟ್ ತರಾಟೆ

    ಬೆಂಗಳೂರು: ಸಂಸದ ಅನಂತ್ ಕುಮಾರ್ (Ananth Kumar)  ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆಗೆ ಹೈಕೋರ್ಟ್ (High Court) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

    ಸಂಸದ ಅನಂತ್ ಕುಮಾರ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ (FIR) ರದ್ದು ಕೋರಿ ಹೈಕೋರ್ಟ್‌ಗೆ  ಅರ್ಜಿ ಸಲ್ಲಿಕೆ ಮಾಡಿದ್ರು. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೃಷ್ಣದೀಕ್ಷಿತ್ ಪೀಠ (KrishnaDeekshith Peet) ಅವರು ಅನಂತ್ ಕುಮಾರ್ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿ. ಅವರಿಗೆ ಗೌರವ ನೀಡುವುದು ನಮ್ಮ ಜವಾಬ್ದಾರಿ. ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಗೆ ಗೌರವ ಕೊಡುವುದು ನಮ್ಮ ಜವಾಬ್ದಾರಿ. ಅವರ ಪಾಲಿಸಿ ಇಷ್ಟ ಇಲ್ಲದಿರಬಹುದು, ವಿರೋಧ ಪಡಿಸಬಹುದು. ರಾಮಜನ್ಮ ಭೂಮಿ ನಿನ್ನದಲ್ಲ ಮಗನೇ ಇಂಥವೆಲ್ಲಾ ಮಾತನಾಡುತ್ತಾರಾ? ಇದು ಎಷ್ಟು ಕೀಳುಭಾಷೆ ಎಂದು ಕೋರ್ಟ್‌ನಲ್ಲಿ ಅನಂತ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 1983ರಿಂದ ನಾನು ವಿಧಾನಸಭೆಯಲ್ಲಿದ್ದೇನೆ.. ಬಜೆಟ್ ಮಂಡಿಸುವಾಗ ಯಾರೂ ವಾಕ್‌ಔಟ್ ಮಾಡಿರಲಿಲ್ಲ: ಬಿಜೆಪಿ ವಿರುದ್ಧ ಸಿಎಂ ಗರಂ

    ಜೊತೆಗೆ ಪದಬಳಕೆ ಮಾಡುವಾಗ ಆದರ ಬಗ್ಗೆ ಎಚ್ಚರಿಕೆ ವಹಿಸಬೇಕು. ನಿಮ್ಮ ಅರ್ಜಿದಾರರಿಗೆ ಸಲಹೆ ನೀಡಿ ಎಂದು ಹೆಗಡೆ ಪರ ವಕೀಲರಿಗೆ ಸೂಚನೆ ನೀಡಲಾಗಿದೆ. ಅವರ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಸೂಚಿಸಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ ಅಂಜಾರಿಯಾ ನೇಮಕ

    ಬನವಾಸಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅನಂತ್ ಕುಮಾರ್ ಹೆಗಡೆ ಅವರು, ಸಿದ್ದರಾಮಯ್ಯ ಅವರಿಗೆ ಮಗನೇ ಎನ್ನದೇ ಬೇರೆನು ಹೇಳಲು ಸಾಧ್ಯ? ಅಪ್ಪ ಅಂತಲೋ, ಅಜ್ಜ ಅಂತಲೋ, ಮಾಮಾ ಅಂತಲೋ ಕರೆಯಲು ಸಾಧ್ಯವೇ? ಯುದ್ಧ ಕಾಲದಲ್ಲಿ ಯಾವ ಭಾಷೆಯಲ್ಲಿ ಮಾತನಾಡಬೇಕೋ ಅದನ್ನೇ ಬಳಸಬೇಕು ಎಂದು ಏಕವಚದನಲದಲ್ಲೇ ಲೇವಡಿ ಮಾಡಿ ಮಾತನಾಡಿದ್ದರು. ಅವರ ಈ ಹೇಳಿಕೆ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲು