Tag: highcourt

  • ಪತ್ನಿಯನ್ನು ಗರ್ಭಿಣಿ ಮಾಡಲು ಜೀವಾವಧಿ ಕೈದಿಗೆ 15 ದಿನ ಪೆರೋಲ್ ನೀಡಿದ ಹೈಕೋರ್ಟ್

    ಪತ್ನಿಯನ್ನು ಗರ್ಭಿಣಿ ಮಾಡಲು ಜೀವಾವಧಿ ಕೈದಿಗೆ 15 ದಿನ ಪೆರೋಲ್ ನೀಡಿದ ಹೈಕೋರ್ಟ್

    ಜೈಪುರ: ಸಹಜವಾಗಿ ಜೀವಾವಧಿ ಶಿಕ್ಷೆಗೆ ಗುರಿಯಾದ ಅಥವಾ ಜೈಲಿನಲ್ಲಿರುವ ಕೈದಿಗಳಿಗೆ ತುರ್ತು ಅಥವಾ ಅನಿವಾರ್ಯ ಕಾರಣಗಳಿಗೆ ಪೆರೋಲ್ ನೀಡಲಾಗುತ್ತದೆ. ಆದರೆ, ಇಲ್ಲೊಬ್ಬ ಕೈದಿಗೆ ಹೆಂಡತಿಯನ್ನು ಗರ್ಭಿಣಿ ಮಾಡಲು ರಾಜಸ್ಥಾನ್ ಹೈಕೋರ್ಟ್ 15 ದಿನ ಪೆರೋಲ್ ಮಂಜೂರು ಮಾಡಿದೆ.

    pregnent woman

    ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ಫರ್ಜಂದ್ ಅಲಿ ಅವರ ದ್ವಿಸದಸ್ಯ ಪೀಠವು ಅಜ್ಮೀರ್ ಸೆಂಟ್ರಲ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 34 ವರ್ಷದ ನಂದ್‌ಲಾಲ್ (ಕೈದಿ) ಅವರ ಪತ್ನಿ ರೇಖಾ ಅವರ ಸಂತಾನದ ಹಕ್ಕು ಆಧಾರದ ಮೇಲೆ ತನ್ನ ಪತಿಯನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಈ ತೀರ್ಪು ನೀಡಲಾಗಿದೆ. ಇದನ್ನೂ ಓದಿ: ಚಾಮರಾಜನಗರದ ಲಿಪ್‌ಲಾಕ್ ಪ್ರೇಮಿಗಳಿಗೆ ಶಾಕ್ ಕೊಟ್ಟ ಪೊಲೀಸರು 

    ಇದಕ್ಕಾಗಿ 50 ಸಾವಿರ ರೂ.ಗಳ ವೈಯಕ್ತಿಕ ಜಾಮೀನು ಬಾಂಡ್ ಹಾಗೂ ತಲಾ 25,000ಕ್ಕೆ ಎರಡು ಜಾಮೀನು ಬಾಂಡ್‌ಗಳನ್ನು ಪೆರೋಲ್‌ಗೆ ನೀಡಿದ್ದು, ಏಪ್ರಿಲ್ 20ರಿಂದ 15 ದಿನಗಳವರೆಗೆ ಕೈದಿಯನ್ನು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: 13 ವರ್ಷದ ಬಾಲಕಿ ಮೇಲೆ 80 ಮಂದಿ 8 ತಿಂಗಳಿಂದ ಅತ್ಯಾಚಾರ

    court order law

    ಅಪರಾಧಿಯ ಜೈಲುವಾಸ ಆತನ ಹೆಂಡತಿಯ ಲೈಂಗಿಕ ಅಪೇಕ್ಷೆಗಳು ಮತ್ತು ಭಾವನಾತ್ಮಕ ಅಗತ್ಯಗಳ ಮೇಲೆ ಪರಿಣಾಮ ಬೀರಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೆ, ಋಗ್ವೇದ ಸೇರಿದಂತೆ ಹಿಂದೂ ಧರ್ಮಗ್ರಂಥಗಳನ್ನೂ ನ್ಯಾಯಾಲಯ ಉಲ್ಲೇಖಿಸಿದೆ. ಕೈದಿಗಳಿಗೆ 15 ದಿನಗಳ ಪೆರೋಲ್ ನೀಡಲು ಅವರು ಜುದಾಯಿಸಂ, ಕ್ರಿಶ್ಚಿಯನ್ ಧರ್ಮ ಮತ್ತು ಇಸ್ಲಾಂ ಧರ್ಮದ ಸಿದ್ಧಾಂತಗಳನ್ನು ಪರಿಗಣಿಸಲಾಗಿದೆ. 16 ಸಂಸ್ಕಾರಗಳಲ್ಲಿ ಮಗುವನ್ನು ಗರ್ಭಧರಿಸುವುದು ಮಹಿಳೆಯ ಮೊದಲ ಮತ್ತು ಅಗತ್ಯ ಹಕ್ಕು ಎಂದು ನ್ಯಾಯಾಲಯ ತೀರ್ಪಿನಲ್ಲಿ ಉಲ್ಲೇಖಿಸಿ ಕೈದಿಗೆ ಪೆರೋಲ್ ನೀಡಿದೆ.

  • ಕರ್ನಾಟಕ ಹೈಕೋರ್ಟ್ ಜಡ್ಜ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

    ಕರ್ನಾಟಕ ಹೈಕೋರ್ಟ್ ಜಡ್ಜ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

    ಬೆಂಗಳೂರು/ ಚೆನ್ನೈ: ಹಿಜಬ್ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರಿಗೆ ಕೊಲೆಬೆದರಿಕೆ ಹಾಕಿದ್ದ ಆರೋಪಿಯನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ.

    ರೆಹಮತ್ತುಲ್ಲಾ ಬಂಧಿತ ಆರೋಪಿ. ಈತ ತೌಹಿಫ್ ಜಮಾತ್ ಸಂಘಟನೆಯ ಸದಸ್ಯನಾಗಿದ್ದಾನೆ. ಮಧುರೈ ಪೊಲೀಸರು ಶನಿವಾರ ರಾತ್ರಿ ಆರೋಪಿಯನ್ನು ತಿರುನಲ್ವೇಲಿಯಲ್ಲಿ ಬಂಧಿಸಿದ್ದರು. ಸದ್ಯ ಆರೋಪಿಗೆ ಮಾರ್ಚ್ 31ರ ವರೆಗೂ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ತಿರುಪತ್ತೂರ್ ಜೈಲಿನಲ್ಲಿರಿಸಲಾಗಿದೆ.

    ಏನಿದು ಘಟನೆ?: ಹಿಜಬ್ ತೀರ್ಪು ಪ್ರಕಟಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆಯೊಂದು ಕೊಲೆ ಬೆದರಿಕೆ ಹಾಕಿತ್ತು. ತೌಹೀದ್ ಜಮಾತ್ ಸಂಘಟನೆ ಬೆದರಿಕೆ ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸಂಘಟನೆ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದೇ ವೇಳೆ ಮಧುರೈ ಪೊಲೀಸರೂ ಪ್ರಕರಣ ದಾಖಲಿಸಿಕೊಂಡಿದ್ದರು. ಜಡ್ಜ್‍ಗೆ ಬೆದರಿಕೆ ಹಾಕಿದ ಸಂಬಂಧ ತನಿಖೆ ನಡೆಸುವಂತೆ ಒತ್ತಾಯಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಮನವಿ ಮಾಡಿದ್ದರು. ಇದನ್ನೂ ಓದಿ: ಹಿಜಬ್‌ ತೀರ್ಪು ಪ್ರಕಟಿಸಿದ ಜಡ್ಜ್‌ಗಳಿಗೆ ಕೊಲೆ ಬೆದರಿಕೆ – ಕೇಸ್‌ ದಾಖಲು

    ತೌಹೀದ್ ಜಮಾತ್ ಸಂಘಟನೆಯ ಮುಖಂಡ ಆರ್.ರೆಹ್ಮತ್‍ವುಲ್ಲಾ ಮಧುರೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹಿಜಬ್ ತೀರ್ಪಿಗೆ ಆಕ್ಷೆ?ಪ ವ್ಯಕ್ತಪಡಿಸಿ ಪರೋಕ್ಷವಾಗಿ ನ್ಯಾಯಾಧಿ?ಶರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಆಧಾರಿಸಿ ವಕೀಲ, ಸುಧಾ ಕಟ್ವ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 506(ಬೆದರಿಕೆ), 501(1)(ಮಾನಹಾನಿ), 503(ಕ್ರಿಮಿನಲ್ ಬೆದರಿಕೆ), 109(ಪ್ರಚೋದನೆ), 504(ಶಾಂತಿ ಭಂಗ), 505(ಸಾರ್ವಜನಿಕ ಕಿಡಿಗೇಡಿತನ) ಸೇರಿದಂತೆ ವಿವಿಧ ಸೆಕ್ಷನ್‍ಗಳಲ್ಲಿ ಎಫ್‍ಐಆರ್ ದಾಖಲಾಗಿದೆ. ಈ ಪ್ರಕರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿತ್ತು. ಇದನ್ನೂ ಓದಿ: ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆಯನ್ನು ತುಂಬಿಸುತ್ತದೆ: ಪ್ರತಾಪ್‍ಸಿಂಹ

    ಗಿರೀಶ್ ಪತ್ರದಲ್ಲಿ ಏನಿತ್ತು?: ತೌಹೀದ್ ಜಮಾತ್ ಸಂಘಟನೆಯ ಮುಖಂಡ ಆರ್.ರಹ್ಮತ್‍ವುಲ್ಲಾ ಅವರು, ಸಾರ್ವಜನಿಕ ಭಾಷಣದಲ್ಲಿ ಹಿಜಬ್ ಕುರಿತು ತೀರ್ಪು ನೀಡಿರುವ ನ್ಯಾಯಾಮೂರ್ತಿಗಳು ಕೊಲೆಯಾದಲ್ಲಿ ಅವರೇ ನೇರ ಹೊಣೆಯಾಗಲಿದ್ದಾರೆ ಎಂದು ಹೇಳಿದ್ದರು. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಾಯಕರು ತೀರ್ಪು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ತಿಳಿಸಿದ್ದರು. ಅಲ್ಲದೆ, ಹೊಸಪೇಟೆಯಲ್ಲಿ ಹಿಜಬ್ ಧರಿಸುವುದನ್ನು ಸಮರ್ಥಿಸಿ ಗೋಡೆಗಳ ಮೇಲೆ ಬರಹಗಳನ್ನು ಬರೆಯಲಾಗಿದ್ದು, ಅಮೀರ್- ಇ-ಶರಿತ್ ಎಂಬ ಸಂಘಟನೆ ತೀರ್ಪು ಖಂಡಿಸಿ ಬಂದ್‍ಗೆ ಕರೆ ನೀಡಿತ್ತು. ಈ ಎಲ್ಲ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸ್ವಯಂಪ್ರೆರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದರು.

  • ಹಿಜಬ್ ತೀರ್ಪು ವಿರೋಧಿಸಿ ಅವಾಚ್ಯ ಶಬ್ದಗಳಿಂದ ಕಮೆಂಟ್ ಮಾಡಿದ್ದ ಯುವಕ ಪೊಲೀಸ್ ವಶಕ್ಕೆ

    ಹಿಜಬ್ ತೀರ್ಪು ವಿರೋಧಿಸಿ ಅವಾಚ್ಯ ಶಬ್ದಗಳಿಂದ ಕಮೆಂಟ್ ಮಾಡಿದ್ದ ಯುವಕ ಪೊಲೀಸ್ ವಶಕ್ಕೆ

    ಮಡಿಕೇರಿ: ಹಿಜಬ್ ಹಾಕಿಕೊಂಡು ಶಾಲಾ, ಕಾಲೇಜುಗಳಿಗೆ ಬರುವ ಹಾಗೆ ಇಲ್ಲ ಎಂದು ನಿನ್ನೆ ಹೈಕೋರ್ಟ್‌ ಆದೇಶ ನೀಡಿದ ಬೆನ್ನಲ್ಲೇ ಖಾಸಗಿ ನ್ಯೂಸ್ ವೆಬ್ ಪೋರ್ಟಿನಲ್ಲಿ ಹಾಕಿದ್ದ ಸುದ್ದಿಗೆ ಕಮೆಂಟ್ ಮಾಡಿದ್ದ ಯುವಕನೋರ್ವನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆ ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಕೊಡಗು ಜಿಲ್ಲೆಯ ಕಲ್ಲುಗುಂಡಿ ಗ್ರಾಮದ ಅಬ್ದುಲ್ ಮುತಾಲಿಬ್ ಆರೋಪಿ. ಚಂಬು ಗ್ರಾಮದ ಇಂದ್ರೇಶ್ ಎಂಬುವರು ನೀಡಿದ ದೂರು ಆಧರಿಸಿ ಯುವಕನನ್ನು ವಶಕ್ಕೆ ಪಡೆಯಲಾಗಿದೆ. ಅಬ್ದುಲ್ ಮುತಾಲಿಕ್ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಮಾಡಿ, ಹಿಜಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಯಾವ ಆಧಾರದಲ್ಲಿ ಹೇಳಿದ್ದು ಸ್ಪಷ್ಟನೆ ನೀಡಿ ಎಂದು ಕಮೆಂಟ್ ಮಾಡಿದ ಬಳಿಕ ಕೇಸರಿ ಶಾಲು ಸಂಘಿಗಳ ಧರ್ಮದ ಅತ್ಯಗತ್ಯ ಭಾಗವಾಗಿರಬಹುದು ಎಂಬ ಹೇಳಿಕೆಯನ್ನು ನೀಡಿ ಅವಾಚ್ಯ ಶಬ್ದವನ್ನು ಉಪಯೋಗಿಸಿದ್ದ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಲು ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ: ಅಸ್ಸಾಂ ಸಿಎಂ

    ಅಬ್ದುಲ್ ಕೋರ್ಟ್ ತೀರ್ಪನ್ನು ನಿಂದನೆ ಮಾಡಿದ್ದನ್ನು ಗಮನಿಸಿದ ಇಂದ್ರೇಶ್ ಸ್ಕ್ರೀನ್ ಶಾಟ್ ಸೇರಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಂತೆ ಅಬ್ದುಲ್ ಸಾಮಾಜಿಕ ಜಾಲತಾಣದಲ್ಲಿರುವ ತನ್ನೆಲ್ಲಾ ಪೋಸ್ಟ್‌ನ್ನು ಡಿಲೀಟ್ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಅಬ್ದುಲ್‍ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ವಾಜಪೇಯಿಯಂತೇ ಮೋದಿ ಹೇಳಿಕೆ ನೀಡ್ತಾರೆ, ಆದರೆ..: ಶಶಿ ತರೂರ್

  • ಹಿಜಬ್ ತೀರ್ಪು ಬಗ್ಗೆ ನಾನು ಮಾತನಾಡಲ್ಲ: ಸಿದ್ದರಾಮಯ್ಯ

    ಹಿಜಬ್ ತೀರ್ಪು ಬಗ್ಗೆ ನಾನು ಮಾತನಾಡಲ್ಲ: ಸಿದ್ದರಾಮಯ್ಯ

    ಬೆಂಗಳೂರು: ರಾಜ್ಯದಲ್ಲಿ ಎದ್ದಿದ್ದ ಹಿಜಬ್ ವಿವಾದಕ್ಕೆ ಹೈಕೋರ್ಟ್ ಬ್ರೇಕ್ ನೀಡಿದೆ. ನಾನು ತೀರ್ಪು ಪೂರ್ತಿ ನೋಡಿಲ್ಲ. ಹೀಗಾಗಿ ಕೋರ್ಟ್ ತೀರ್ಪು ಬಗ್ಗೆ ನಾನು ಮಾತನಾಡಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಖಳಿದ್ದಾರೆ.

    ವಿಧಾನಸೌಧದಲ್ಲಿ ಹೈಕೋರ್ಟ್ ತೀರ್ಪು ಕುರಿತ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ತೀರ್ಪು ಪೂರ್ತಿ ನೋಡಿಲ್ಲ. ಪೂರ್ತಿ ನೋಡಿದ ಮೇಲೆ ಪ್ರತಿಕ್ರಿಯಿಸ್ತೇನೆ. ಹಿಜಬ್ ಹಾಕೋದ್ರಿಂದ ಯಾರಿಗೆ ಸಮಸ್ಯೆ ಅಂತ ನಾವು ಕೇಳಿದ್ದೆವು. ಅಲ್ಲದೆ ಹಾಕುವವರಿಗೆ ಅವಕಾಶ ಕೊಡಿ ಅಂತ ಹೇಳಿದ್ದೆವು ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹಿಜಬ್‌ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್‌ ಐತಿಹಾಸಿಕ ತೀರ್ಪು

    ಈಗ ನ್ಯಾಯಲಯ ತೀರ್ಪು ನೀಡಿದೆ. ಪೂರ್ತಿ ಅಧ್ಯಯನ ಮಾಡಿ ಮಾತನಾಡ್ತೇನೆ. ಹೈಕೋರ್ಟ್ ತೀರ್ಪು ಬಂದಿದೆ. ಕೋರ್ಟ್ ತೀರ್ಪು ಬಗ್ಗೆ ನಾನು ಮಾತಾಡಲ್ಲ. ನಾನು ತೀರ್ಪಿನ ಬಗ್ಗೆ ಪೂರ್ಣ ಓದಿಲ್ಲ ಎಂದರು. ಇದನ್ನೂ ಓದಿ: ಮಂಗಳವಾರ ಬೆಳಗ್ಗೆ 10:30ಕ್ಕೆ ಹಿಜಬ್‌ ಹೈಕೋರ್ಟ್‌ ತೀರ್ಪು

    ಇದೇ ವೇಳೆ ಕಾಂಗ್ರೆಸ್ ಬೇಕು ಅಂತಲೇ ಪ್ರಚೋದನೆ ಮಾಡಿತ್ತು ಅನ್ನೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾವೇನು ಹೇಳಿದ್ದೋ ಹಿಜಬ್ ನಿಂದ ಯಾರಿಗೂ ತೊಂದರೆ ಆಗಲ್ಲ. ಯಾರಿಗೂ ನಷ್ಟ ಕೂಡ ಆಗಲ್ಲ. ಹಾಕಿಕೊಳ್ಳಲಿ ಬಿಡಿ ಅಂತ ಹೇಳಿದ್ದೋ. ಅವರು ಹಿಜಬ್ ಜೊತೆಗೆ ಯೂನಿಫಾರ್ಮ್ ಕೂಡ ಹಾಕೋದಾಗಿ ಹೇಳಿದ್ರು.ಕೋರ್ಟ್ ಆದೇಶ, ಕೋರ್ಟ್ ಆದೇಶ ಅಷ್ಟೇ ಎಂದು ಹೇಳಿದರು.

  • ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶಾ ಪ್ರಯತ್ನ ಇದಾಗಿತ್ತು: ಕೈ ವಿರುದ್ಧ ಬಿಜೆಪಿ ವಾಗ್ದಾಳಿ

    ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶಾ ಪ್ರಯತ್ನ ಇದಾಗಿತ್ತು: ಕೈ ವಿರುದ್ಧ ಬಿಜೆಪಿ ವಾಗ್ದಾಳಿ

    – ಮಕ್ಕಳ ಭವಿಷ್ಯದಲ್ಲಿ ರಾಜಕೀಯ ಬೆರೆಸಿದ ಕಾಂಗ್ರೆಸ್ ಧೋರಣೆಗೆ ಈಗ ಉತ್ತರ ಸಿಕ್ಕಿದೆ

    ಬೆಂಗಳೂರು: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ವಿಚಾರವಾಗಿ  ವಿರೋಧ ಪಕ್ಷವಾದ ಕಾಂಗ್ರೆಸ್ ವಿರುದ್ಧವಾಗಿ ಬಿಜೆಪಿ ಸರಣಿ ಟ್ವೀಟ್ ಮಾಡಿ ವಾಗ್ದಾಳಿ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಶಾಲಾ ಹಂತದಲ್ಲೇ ಬಗೆಹರಿಯಬಹುದಾದ ಹಿಜಬ್ ವಿಚಾರವನ್ನು ನ್ಯಾಯಾಲಯದವರೆಗೆ ಎಳೆದು ತರುವ ಅಗತ್ಯವಿರಲಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸರ್ಕಾರ ಜಾರಿಗೊಳಿಸಿದ ಸಮವಸ್ತ್ರ ನೀತಿಯಲ್ಲಿ ತಪ್ಪಿಲ್ಲ. ಸಮವಸ್ತ್ರ ಮೂಲಭೂತ ಹಕ್ಕುಗಳ ಮೇಲಿನ ಸಮಂಜಸ ನಿರ್ಬಂಧ ಎಂದು ಕೋರ್ಟ್ ಅಭಿಪ್ರಾಯಪಟ್ಟಿರುವುದು ಸ್ವಾಗತಾರ್ಹವಾಗಿದೆ.

    ಹಿಜಬ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕೆಲ ಮತೀಯ ಶಕ್ತಿಗಳು ಅನಗತ್ಯವಾಗಿ ಪ್ರಚೋದನೆ ನೀಡಿದವು. ಇದರಿಂದ ವಿದ್ಯಾರ್ಥಿನಿಯರ ಶಿಕ್ಷಣ ವಿಚಾರದಲ್ಲಿ ಗೊಂದಲ ಸೃಷ್ಟಿಯಾಯ್ತು. ಮಕ್ಕಳ ಭವಿಷ್ಯದ ವಿಚಾರದಲ್ಲೂ ರಾಜಕೀಯ ಬೆರೆಸಿದ ಕಾಂಗ್ರೆಸ್ ಧೋರಣೆಗೆ ಈಗ ಉತ್ತರ ಸಿಕ್ಕಿದೆ. ಹಿಜಬ್ ವಿಚಾರದಲ್ಲಿ ಕಾಂಗ್ರೆಸ್, ಎಸ್‍ಡಿಪಿಐ, ಸಿಎಫ್‍ಐ ಮೂಗು ತೂರಿಸಿದ್ದರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಯ್ತು ಎಂದು ವಿರೋಧ ಪಕ್ಷದ ವಿರುದ್ಧವಾಗಿ ವಾಗ್ಧಾಳಿ ಮಾಡಿ ಟ್ವೀಟ್ ಮಾಡಲಾಗಿದೆ.  ಇದನ್ನೂ ಓದಿ: ಹಿಜಬ್ ಇಸ್ಲಾಂ ಆಚರಣೆಯಲ್ಲ ಅನ್ನೋ ಕೋರ್ಟ್ ತೀರ್ಪಿಗೆ ಪ್ರತಿಕ್ರಿಯಿಸಲ್ಲ: ಯು.ಟಿ.ಖಾದರ್

    ಕಾಂಗ್ರೆಸ್ ಪಕ್ಷದ ಇಬ್ಬಗೆ ನೀತಿ, ಮತ ರಾಜಕಾರಣಕ್ಕಾಗಿ ಒಡೆದಾಳು ನೀತಿಯ ಪರಿಣಾಮವಾಗಿ ಸಾವಿರಾರು ವಿದ್ಯಾರ್ಥಿನಿಯರು ಪರೀಕ್ಷೆಯಿಂದ ಹಿಂದೆ ಸರಿದರು. ಇದಕ್ಕೆಲ್ಲಾ ಕಾಂಗ್ರೆಸ್ ನೇರ ಹೊಣೆ. ಈ ಪ್ರಕರಣದಲ್ಲಿ ಹಿಜಬ್ ಒಳಗಿರುವ ಮತ ಗಟ್ಟಿಗೊಳಿಸಲು ಯತ್ನಿಸಿದ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಸಿದ್ದರಾಮಯ್ಯ ಅವರು ಹಿಜಬ್ ಧರಿಸುವುದು ಮೂಲಭೂತ ಹಕ್ಕು ಎಂದು ಪ್ರತಿಪಾದಿಸಿದ್ದಾರೆ.

    ಈಗ ನ್ಯಾಯಾಲಯವೇ, ಹಿಜಬ್ ಇಸ್ಲಾಂ ಮತದ ಅವಿಭಾಜ್ಯ ಅಂಗವಲ್ಲ ಎಂಬ ತೀರ್ಪು ನೀಡಿದೆ. ಕಾಂಗ್ರೆಸ್ ತನ್ನ ವೈಯುಕ್ತಿಕ ರಾಜಕೀಯ ಲಾಭಕ್ಕಾಗಿ, ಹಿಜಬ್ ವಿವಾದಕ್ಕೆ ಪುಷ್ಟಿ ನೀಡಿತು. ವಿದ್ಯಾರ್ಥಿನಿಯರು ತರಗತಿ ಮತ್ತು ಪರೀಕ್ಷೆ ಹಾಜರಾಗದಂತಹ ವಾತಾವರಣ ನಿರ್ಮಿಸಿತ್ತು. ಈಗ ನ್ಯಾಯಾಲಯದ ತೀರ್ಪು ಬಂದಿದೆ. ಇನ್ನಾದರೂ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ ಭವಿಷ್ಯ ಜೊತೆ ಚೆಲ್ಲಾಟವಾಡದಿರಲಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಖೇಲ್ ಖತಂ, ನಾಟಕ್ ಬಂದ್, ಶಾಲೆಗೆ ಹಿಂತಿರುಗಿ: ಮಾಳವಿಕಾ ಅವಿನಾಶ್

    ಹಿಜಬ್ ವಿಚಾರದಲ್ಲಿ ವಿದ್ಯಾರ್ಥಿನಿಯರ ಪರ ವಾದ ಮಾಡುವುದಕ್ಕೆ ಕಾಂಗ್ರೆಸ್ ತನ್ನದೇ ಪಕ್ಷದ ನ್ಯಾಯವಾದಿಗಳನ್ನು ನಿಯೋಜನೆ ಮಾಡಿತ್ತು. ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶ ಪ್ರಯತ್ನ ಇದಾಗಿತ್ತು. ಉದಯೋನ್ಮುಖ ವಿಫಲ ನಾಯಕಿ ಪ್ರಿಯಾಂಕಾ ವಾದ್ರಾ ಕೂಡಾ ಚಿತಾವಣೆ ನೀಡಿದ್ದನ್ನು ಮರೆಯಲು ಸಾಧ್ಯವೇ? ಎಂದು ಪ್ರಶ್ನಿಸಿ ಟ್ವೀಟ್ ಮಾಡಲಾಗಿದೆ.

    ಐತಿಹಾಸಿಕ ತೀರ್ಪು..?: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ಎಲ್ಲರೂ ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ತರಗತಿಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಪೀಠ ವಜಾ ಮಾಡಿದೆ.

  • ನಿಮಗೆ ಗುಂಡಿ ಮುಚ್ಚೋದಕ್ಕೆ ಆಗದಿದ್ರೆ ಮಿಲಿಟರಿ ಕರೆಸ್ತೇನೆ – ಹೈಕೋರ್ಟ್ ಗರಂ

    ನಿಮಗೆ ಗುಂಡಿ ಮುಚ್ಚೋದಕ್ಕೆ ಆಗದಿದ್ರೆ ಮಿಲಿಟರಿ ಕರೆಸ್ತೇನೆ – ಹೈಕೋರ್ಟ್ ಗರಂ

    ಬೆಂಗಳೂರು: ಬಿಬಿಎಂಪಿಯ ಎಡವಟ್ಟಿನಿಂದ ಬೆಂಗಳೂರಿನಲ್ಲಿ ವಾಹನ ಸವಾರರು ಹೈರಾಣಾಗಿ ಹೋಗಿದ್ದಾರೆ. ಸಿಕ್ಕ ಸಿಕ್ಕ ಕಡೆಯಲೆಲ್ಲಾ ಗುಂಡಿಯಿಂದ ತುಂಬಿ ತುಳುಕುತ್ತಾ ಇದೆ ಬೆಂಗಳೂರಿನ ರಸ್ತೆಗಳು. ಇದರಿಂದ ಗರಂ ಆದ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಪೀಠ ಬಿಬಿಎಂಪಿ ಮುಖ್ಯ ಎಂಜಿನಿಯರ್ ಪ್ರಭಾಕರ್ ಗೆ ಛೀಮಾರಿ ಹಾಕಿದೆ.

    ನಿಮಗೆ ಗುಂಡಿ ಮುಚ್ಚೋಕೆ ಸಾಧ್ಯವಾಗದೇ ಇದ್ದರೆ ನಾನೇ ಮಿಲಿಟರಿ ಕರೆಸ್ತೇನೆ ಅಂತ ಬೇಸರ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಪದೇ ಪದೇ ರಸ್ತೆ ಕಿತ್ತು ಹೋಗೋದಕ್ಕೂ ಬೇಸರ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಉತ್ತರಿಸಿದ ಮುಖ್ಯ ಎಂಜಿನಿಯರ್ ಪ್ರಭಾಕರ್ ಒಂದಷ್ಟು ಮಾಹಿತಿ ಕೋರ್ಟ್ ಗೆ ನೀಡಿದ್ದು, ಈಗಾಗಲೇ ಸಾಕಷ್ಟು ಗುಂಡಿಗಳನ್ಜು ಮುಚ್ಚಲಾಗಿದೆ. ಅಲ್ಲದೇ ಗುಂಡಿ ಮುಚ್ಚೋದಕ್ಕೆ ಟೆಂಡರ್ ಪ್ರಕ್ರಿಯೆ ಮುಗಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

    ಇದೇ ಮೊದಲ ಬಾರಿಗೆ ವಿಚಾರಣೆಗೆ ಹಾಜರಾಗಿದ್ದೀರಿ ಅಂತ ಸುಮ್ಮನಾಗಿದ್ದೀನಿ. ಇನ್ನು ಮುಂದೆ ಗುಂಡಿಗಳಿಂದ ಸಾವನ್ನಪ್ಪಿದರೆ ನಿಮ್ಮನ್ನೇ ಹೊಣೆ ಮಾಡುವುದಾಗಿ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ನಿಮಗೆ ಗುಂಡಿ ಮುಚ್ಚೋದಕ್ಕೆ ಆಗದಿದ್ರೆ ಮಿಲಿಟರಿ ಕರೆಸ್ತೇನೆ – ಹೈಕೋರ್ಟ್ ಗರಂ

  • ನಾಲ್ಕನೇ ದಿನ ಹೈಕೋರ್ಟ್‍ನಲ್ಲಿ ಹಿಜಬ್ ವಿಚಾರಣೆ – ಅರ್ಜಿದಾರರ ಪರವಾಗಿ ವಕೀಲ ಕಾಮತ್ ಪ್ರಬಲ ವಾದ

    ನಾಲ್ಕನೇ ದಿನ ಹೈಕೋರ್ಟ್‍ನಲ್ಲಿ ಹಿಜಬ್ ವಿಚಾರಣೆ – ಅರ್ಜಿದಾರರ ಪರವಾಗಿ ವಕೀಲ ಕಾಮತ್ ಪ್ರಬಲ ವಾದ

    ಬೆಂಗಳೂರು: ಹಿಜಬ್ ವಿವಾದದ ಬಗ್ಗೆ ಹೈಕೋರ್ಟ್‍ನಲ್ಲಿ ನಾಲ್ಕನೇ ದಿನದ ವಿಚಾರಣೆ ಇಂದು ನಡೆಯಿತು. ಐದು ಅರ್ಜಿಗಳನ್ನು ಏಕಕಾಲದಲ್ಲಿ ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ಪೀಠ, ಸುದೀರ್ಘ ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿತು.

    ಇಂದು ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ವಾದ ಮಂಡಿಸಿದ್ರು. ವಿದ್ಯಾರ್ಥಿನಿಯರು ಹಿಜಬ್ ಧರಿಸುವುದು ಧಾರ್ಮಿಕ ಹಕ್ಕು ಅಲ್ಲ ಎಂದು ಸರ್ಕಾರ ಹೇಳಿರೋದು ತಪ್ಪು. ಸರ್ಕಾರಕ್ಕೆ ಈ ರೀತಿ ಹೇಳಲು ಯಾವುದೇ ಹಕ್ಕಿಲ್ಲ. ಧಾರ್ಮಿಕ ನಂಬಿಕೆಗಳನ್ನು ಪಾಲನೆ ಮಾಡುವವರ ಭಾವನೆಗಳಿಗೆ ಸರ್ಕಾರ ಬೆಲೆಯೇ ಕೊಡುತ್ತಿಲ್ಲ. ವಿದ್ಯಾರ್ಥಿನಿಯರು ಕಳೆದ ಹಲವು ವರ್ಷಗಳಿಂದ ಹಿಜನ್ ಧರಿಸಿಯೇ ತರಗತಿಗಳಿಗೆ ಬರುತ್ತಿದ್ದಾರೆ. ಆಡಳಿತ ಮಂಡಳಿಯೂ ಈ ಹಿಂದೆ ಪ್ರಶ್ನೆ ಮಾಡಿರಲಿಲ್ಲ. ಹಿಜಬ್ ಬ್ಯಾನ್ ಮಾಡಿರೋದು ಕಾಲೇಜು ಅಭಿವೃದ್ಧಿ ಸಮಿತಿ ಅಲ್ಲ. ಇದು ಎಂಎಲ್‍ಎ ಸಮಿತಿ. ಸರ್ಕಾರದ ಆದೇಶ ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ್ದಲ್ಲ ಅನ್ನೋದಾದ್ರೆ ಈ ಆದೇಶವನ್ನು ತಕ್ಷಣವೇ ರದ್ದು ಮಾಡಬೇಕು ಎಂದು ವಾದ ಮಂಡಿಸಿದ್ರು. ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳು ಸುರಕ್ಷಿತವಾಗಿದ್ದಾರೆ: ಮೋದಿ

    ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ, ಆರೋಗ್ಯಕ್ಕೆ ಧಕ್ಕೆ ತಂದರೆ ಮೂಲಭೂತ ಆಚರಣೆಗಳನ್ನು ನಿರ್ಬಂಧಿಸಲು ಅವಕಾಶ ಇದೆ. ಆದರೆ ಧಾರ್ಮಿಕತೆ, ನೈತಿಕತೆಯ ಕಾರಣ ನೀಡಿ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳುವಂತಿಲ್ಲ. ಕುರಾನ್‍ನಲ್ಲಿ ಹಿಜಬ್ ಬಗ್ಗೆ ವಿವರಣೆ ಇದೆ. ತಲೆ, ಕತ್ತು ಮುಚ್ಚಿಕೊಳ್ಳಬೇಕೆಂದು ಹೇಳಲಾಗಿದೆ. ಯೂನಿಫಾರಂ ಬಣ್ಣದ ಹಿಜಬ್ ಧರಿಸಿದ್ರೆ ಸಮಸ್ಯೆ ಆಗಲ್ಲ. ಧಾರ್ಮಿಕ ಹಕ್ಕುಗಳನ್ನು ಸರ್ಕಾರ ರಕ್ಷಣೆ ಮಾಡಬೇಕಿದೆ ಎಂದು ವಾದ ಮಂಡನೆ ಮಾಡಿದ್ರು. ಇದನ್ನೂ ಓದಿ: ಹಿಜಬ್ ಬೆಂಬಲಿಸಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆ!

    ಹಿಜಬ್ ಮೂಲಭೂತ ಆಚರಣೆ ಎಂದು ಕೇರಳ, ಮದ್ರಾಸ್ ಹೈಕೋರ್ಟ್ ತೀರ್ಪಲ್ಲಿ ಹೇಳಲಾಗಿದೆ. ಶಿರೂರು ಮಠಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಉಡುಪು, ಆಹಾರ ಧಾರ್ಮಿಕ ಮೂಲಭೂತ ಹಕ್ಕಿನ ಭಾಗ ಎಂದು ಸುಪ್ರೀಂಕೋರ್ಟ್ ಹೇಳಿದೆ. ಧಾರ್ಮಿಕ ಆಚರಣೆಯನ್ನು ನಿರ್ಧರಿಸುವುದು ಹೊರಗಿನವರ ಹಕ್ಕಲ್ಲ. ಕೇರಳದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಗೆ ಹಿಜಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗಿತ್ತು. ಸಿಬಿಎಸ್‍ಇ ಶಾಲೆಗಳಲ್ಲಿಯೂ ಹಿಜಬ್ ಧರಿಸಲು ಅವಕಾಶ ಇದೆ. ಇಲ್ಲಿಯೂ ಮೂಲಭೂತ ಹಕ್ಕಿನ ರಕ್ಷಣೆ ಆಗಬೇಕು ಎಂದು ದೇವದತ್ ಕಾಮತ್ ವಾದ ಮಂಡಿಸಿದ್ರು. ಇದನ್ನೂ ಓದಿ: ನಾನು ಮತ್ತೆ ಶಾಸಕನಾದ್ರೆ ಮುಸ್ಲಿಮರು ಟೋಪಿ ತೆಗೆದು ತಿಲಕ ಇಡುವಂತೆ ಮಾಡ್ತೀನಿ: ಬಿಜೆಪಿ ಶಾಸಕ

    ಈ ಮಧ್ಯೆ ಸಾಮಾಜಿಕ ಕಲ್ಯಾಣಕ್ಕಾಗಿ ಧಾರ್ಮಿಕ ಮೂಲಭೂತ ಆಚರಣೆಯನ್ನು ನಿರ್ಬಂಧಿಸಬಹುದೇ..? ಮೂಲಭೂತ ಧಾರ್ಮಿಕ ಆಚರಣೆಗಳು ಪರಮೋಚ್ಛವೇ..? ಅಥವಾ ಆ ಆಚರಣೆಗಳ ಮೇಲೆ ನಿರ್ಬಂಧ ಹೇರಬಹುದೇ..? ಎಂದು ನ್ಯಾಯಪೀಠ ಕೇಳಿತು. ಸರ್ಕಾರ ಹಿಜಬ್ ನಿರ್ಬಂಧಕ್ಕೆ ಕಾನೂನು ಸುವ್ಯವಸ್ಥೆ ಕಾರಣ ನೀಡಿದೆಯೇ…? ಸರ್ಕಾರ ಹಾಗೆಂದು ಹೇಳಿದರೆ ನಿಮ್ಮ ವಾದ ಪರಿಶೀಲಿಸುತ್ತೇವೆ ಎಂದ ನ್ಯಾಯಪೀಠ ವಿಚಾರಣೆಯನ್ನು ನಾಳೆ ಮಧ್ಯಾಹ್ನಕ್ಕೆ ಮುಂದೂಡಿತು. ಇದನ್ನೂ ಓದಿ: ನಾನು ಹಿಜಬ್ ಬಗ್ಗೆ ಮಾತಾಡುವವನೇ, ನಾನ್ಯಾಕೆ ಕ್ಷಮೆ ಕೇಳಬೇಕು – ಡಿಕೆಶಿಗೆ ಜಮೀರ್ ಟಾಂಗ್

  • ಹಿಜಬ್ ಧರಿಸಿಯೇ ಶಾಲೆಗೆ ಬಂದ ವಿದ್ಯಾರ್ಥಿನಿಯರು

    ಹಿಜಬ್ ಧರಿಸಿಯೇ ಶಾಲೆಗೆ ಬಂದ ವಿದ್ಯಾರ್ಥಿನಿಯರು

    ಕಲಬುರಗಿ: ಹೈಕೋರ್ಟ್ ಆದೇಶವನ್ನು ಧಿಕ್ಕರಸಿ ಇಂದು ಕಲಬುರಗಿ ನಗರದ ಉರ್ದು ಶಾಲೆಯ ವಿದ್ಯಾರ್ಥಿನಿಯರು ಶಾಲೆಗೆ ಹಿಜಬ್ ಧರಿಸಿ ಆಗಮಿಸಿದ್ದರು.

    ಇಂದಿನಿಂದ ಪ್ರೌಢ ಶಾಲೆಯ ಪ್ರಾರಂಭದ ಹಿನ್ನಲೆ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಉರ್ದು ಪ್ರೌಢ ಶಾಲೆಯ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿನಿಯರು, ಹಿಜಬ್ ಧರಿಸಿ ಶಾಲಾ ಕೊಠಡಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದರು. ಇದನ್ನೂ ಓದಿ: ಬಿಜೆಪಿ ಶಾಸಕನ ಕಚೇರಿ ಮೇಲೆ ಕಲ್ಲೆಸೆದ ಯುವಕ

     

    ವಿದ್ಯಾರ್ಥಿಗಳು ಹಿಜಬ್, ಕೇಸರಿ ಶಾಲು ಸೇರಿದಂತೆ ಯಾವುದೇ ಧಾರ್ಮಿಕ ಭಾವನೆಯನ್ನು ಬಿಂಬಿಸುವ ವಸ್ತ್ರಗಳನ್ನು ಧರಿಸುವಂತಿಲ್ಲ ಅಂತ ಹೈಕೋರ್ಟ್ ಸೂಚಿಸಿದ್ದು, ಸಮವಸ್ತ್ರ ನಿಯಮ ಉಲ್ಲಂಘನೆಯಾದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಯಲ್ಲಿ ಸುದ್ದಿ ಪ್ರಸಾರಗೊಂಡಿತ್ತು.

    ಸುದ್ದಿ ಪ್ರಸಾರವಾದ ಬೆನ್ನಲ್ಲೇ ಶಿಕ್ಷಕರು ಮಕ್ಕಳಿಗೆ ತಿಳಿ ಹೇಳಿ ಹಿಜಬ್ ತೆಗೆಯುವಂತೆ ಸೂಚಿಸಿದ್ದರು. ಶಿಕ್ಷಕರ ಮಾತಿಗೆ ಬೆಲೆ ಕೊಟ್ಟು ವಿದ್ಯಾರ್ಥಿಗಳು ಹಿಜಬ್ ತೆಗೆದು ಈಗ ಪಾಠ ಕೇಳುತ್ತಿದ್ದಾರೆ. ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಪ್ರಜಾಪ್ರಭುತ್ವದ ಹಬ್ಬ ಮಾಡಿ: ಮೋದಿ

    ಹಲವಾರು ಶಿಕ್ಷಕಿಯರು ಹಿಜಬ್ ಧರಿಸಿಕೊಂಡೆ ಸ್ಟಾಫ್ ರೂಮಿಗೆ ಆಗಮಿಸಿದ್ದರು. ಸರ್ಕಾರಿ ಪ್ರೌಢ ಶಾಲೆಗೆ ಜಿಲ್ಲಾಧಿಕಾರಿ ಯಶವಂತ ಗುರುಕಾರ್, ಜಿಲ್ಲಾಧಿಕಾರಿ ಗೆಸಾಥ್ ನೀಡಿರುವ ಡಿಸಿಪಿ ಮತ್ತು ಇನ್ನಿತರ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಪ್ರೌಢ ಶಾಲೆಯ ಪ್ರಾರಂಭದ ಹಿನ್ನಲೆ ನಗರದ ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಶಾಲೆಗೆ ಶಾಲಾ ಸಮವಸ್ತ್ರ ಧರಿಸಿಕೊಂಡು ಬರಲು ಮಾತ್ರ ಅವಕಾಶ ಇದೆ. ಎಲ್ಲರು ನಿಯಮಗಳನ್ನು ಕಡ್ಡಾಯ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಶಿಕ್ಷಕರು ಹಿಜಾಬ್ ಧರಿಸಿಕೊಂಡು ಬರುವದರ ಬಗ್ಗೆ ನಾನು ಮಾತನಾಡುವದಿಲ್ಲ. ಹಿಜಬ್ ವಿವಾದದ ಕುರಿತು ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದ್ದು, ಅದರ ಬಗ್ಗೆ ನಾನು ಕಾಮೆಂಟ್ ಮಾಡಲ್ಲ. ನ್ಯಾಯಾಲಯದ ತೀರ್ಪಿನಲ್ಲಿ ಶಿಕ್ಷಕರ ಉಡುಪಿನ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಜಿಲ್ಲೆಯಲ್ಲಿ ಎಲ್ಲಿಯೂ 144 ಸೆಕ್ಷನ್ ವಿಧಿಸಿಲ್ಲ. ಜಿಲ್ಲಾದ್ಯಂತ ಎಲ್ಲಾ ಕಡೆ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದರು.

  • ನಾಳೆ ಹೈಕೋರ್ಟ್‍ನಲ್ಲಿ ಹಿಜಬ್ ಸಂಘರ್ಷ ವಿಚಾರಣೆ – ಪೊಲೀಸ್ ಭದ್ರತೆಯಲ್ಲಿ ಹೈಸ್ಕೂಲ್ ಓಪನ್

    ನಾಳೆ ಹೈಕೋರ್ಟ್‍ನಲ್ಲಿ ಹಿಜಬ್ ಸಂಘರ್ಷ ವಿಚಾರಣೆ – ಪೊಲೀಸ್ ಭದ್ರತೆಯಲ್ಲಿ ಹೈಸ್ಕೂಲ್ ಓಪನ್

    ಬೆಂಗಳೂರು: ಹೈಕೋರ್ಟ್ ಆದೇಶದ ಬೆನ್ನಲ್ಲೇ ನಾಳೆಯಿಂದ ರಾಜ್ಯಾದ್ಯಂತ ಪ್ರೌಢ ಶಾಲೆಗಳು ಆರಂಭವಾಗ್ತಿದೆ. ಶಾಲೆಗಳಿಗೆ ಭದ್ರತೆ ಒದಗಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಶಾಲೆ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

    ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿ, ನಾಳೆಯಿಂದ ಶಾಂತಿಯುತವಾಗಿ ಎಲ್ಲಾ ತರಗತಿ ನಡೆಯುತ್ತೆ. ಕಾಲೇಜುಗಳ ಆರಂಭದ ಬಗ್ಗೆ ನಿರ್ಧರಿಸುತ್ತೇವೆ ಅಂದಿದ್ದಾರೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತಾಡಿ, ನಾಳೆ 9-10ನೇ ಕ್ಲಾಸ್ ಆರಂಭವಾಗುತ್ತೆ. ನಾಳೆ ಸಿಎಂ ಸಭೆ ಬಳಿಕ ಪಿಯುಸಿ, ಡಿಗ್ರಿ ಕಾಲೇಜ್ ಓಪನ್ ಬಗ್ಗೆ ಚರ್ಚೆ ಮಾಡ್ತೇವೆ ಅಂದ್ರು. ಇದನ್ನೂ ಓದಿ: ಬುರ್ಖಾ ಪದ್ಧತಿ ಇಲ್ಲದೆ ಇರೋದಕ್ಕೇ ದೇಶದಲ್ಲಿ ರೇಪ್ ಹೆಚ್ಚಾಗ್ತಿದೆ: ಜಮೀರ್ ವ್ಯಾಖ್ಯಾನ

    ಗದಗ್‍ನಲ್ಲಿ ಡಿಕೆಶಿ ಮಾತಾಡಿ, ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೇವೆ ಅಂತ ತಲೆಕೆಟ್ಟ ಈಶ್ವರಪ್ಪ ಏನೇನೋ ಮಾತಾಡ್ತಾನೆ. ಕಾಂಗ್ರೆಸ್‍ನಲ್ಲಿ ಇಂಥ ಹೇಳಿಕೆ ಕೊಟ್ರೆ 10 ನಿಮಿಷದಲ್ಲಿ ರಾಜೀನಾಮೆ ಪಡೀತಿದ್ದೆವು. ಸಿಎಂ ಬೊಮ್ಮಾಯಿ ಬಾಯಿಗೆ ಹೊಲಿಗೆ ಹಾಕಿಕೊಂಡಿದ್ದಾರೆ. ಈಶ್ವರಪ್ಪ ವಿರುದ್ಧ ದೇಶದ್ರೋಹ ಕೇಸ್ ದಾಖಲಾಗಬೇಕು ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡ್ತೇವೆ ಅಂತ ಡಿಕೆಶಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಿಜಬ್ ವಿಚಾರದಲ್ಲಿ ಕೋರ್ಟ್ ಏನೇ ತೀರ್ಪು ಕೊಟ್ಟರೂ ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು: ಹೆಚ್.ಡಿ ದೇವೇಗೌಡ

    ಮಾಜಿ ಸಚಿವ ಜಮೀರ್ ಪ್ರತಿಕ್ರಿಯಿಸಿ, ಮಕ್ಕಳಲ್ಲಿ ಜಾತಿಬೀಜ ಹಾಕಿ ರಾಜಕೀಯ ಮಾಡ್ತಿದ್ದಾರೆ ಅಂದ್ರೆ, ಖಾದರ್ ಮಾತ್ರ ಎಲ್ಲವನ್ನೂ ನ್ಯಾಯಾಲಯವೇ ಬಗೆಹರಿಸೋಕೆ ಆಗಲ್ಲ. ಕೋರ್ಟ್ ಹೊರಗೇ ಬಗೆಹರಿಸಲು ಪ್ರಯತ್ನಿಸಬೇಕು ಅಂದಿದ್ದಾರೆ. ಈ ಮಧ್ಯೆ, ಸಂಸದ ಪ್ರತಾಪ್ ಸಿಂಹ, ಹಿಜಾಬ್ ಗಲಾಟೆಯ ಹಿಂದೆ ಕೆಎಫ್‍ಡಿ, ಪಿಎಫ್‍ಐ ಇದೆ ಅಂದಿದ್ದಾರೆ.

  • ಬೆಂಗ್ಳೂರಲ್ಲಿ ಗುಂಡಿ ಮುಚ್ಚದ ಬಿಬಿಎಂಪಿಗೆ ತರಾಟೆ – ಬೆಸ್ಕಾಂ, ಜಲ ಮಂಡಳಿಗೂ ಹೈಕೋರ್ಟ್ ಚಾರ್ಜ್

    ಬೆಂಗ್ಳೂರಲ್ಲಿ ಗುಂಡಿ ಮುಚ್ಚದ ಬಿಬಿಎಂಪಿಗೆ ತರಾಟೆ – ಬೆಸ್ಕಾಂ, ಜಲ ಮಂಡಳಿಗೂ ಹೈಕೋರ್ಟ್ ಚಾರ್ಜ್

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗುಂಡಿ ಮುಚ್ಚದ ಬಿಬಿಎಂಪಿಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಬಿಬಿಎಂಪಿಯ ಕೆಲಸದ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

    ಪ್ರತಿಬಾರಿ ಮಳೆ ಬಂದಾಗಲೂ ರಸ್ತೆಗಳಲ್ಲಿ ಗುಂಡಿಗಳು ಪ್ರತ್ಯಕ್ಷವಾಗುತ್ತವೆ. ಆದರೆ ನೀವು ಮುಚ್ಚುವ ರಸ್ತೆಗುಂಡಿಗಳು, ದುರಸ್ತಿಪಡಿಸಿದ ರಸ್ತೆಗಳು ದೀರ್ಘಾವಧಿ ಬಾಳಿಕೆ ಏಕೆ ಬರುವುದಿಲ್ಲ ಪ್ರಶ್ನಿಸಿದೆ. ಗುಂಡಿಗಳನ್ನು ಮುಚ್ಚಲು ಯಾವ ತಂತ್ರಜ್ಞಾನ, ಯಾವ ಕಾರ್ಯವಿಧಾನ ಅನುಸರಿಸಲಾಗುತ್ತದೆ..?. ಇದಕ್ಕೆಲ್ಲ ಪಾಲಿಕೆ ಮುಖ್ಯ ಇಂಜಿನಿಯರ್ ಹೊಣೆಯಾಗುತ್ತಾರೆ. ಅವರನ್ನು ಕಂಬಿ ಹಿಂದೆ ಕಳುಹಿಸಿದರೆ ಸರಿ ಹೋಗುತ್ತದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಆರ್.ಆರ್. ಅವಸ್ಥಿ ಚಾಟಿ ಬೀಸಿದ್ದಾರೆ.

    ಇತ್ತ ಬೆಸ್ಕಾಂ, ಜಲಮಂಡಳಿ ಸೇರಿ ಕಾಮಗಾರಿ ನೆಪದಲ್ಲಿ ರಸ್ತೆ ಅಗೆದು, ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಮುಗಿಸದ ಪ್ರಾಧಿಕಾರಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ. ಮುಂದಿನ ವಿಚಾರಣೆಗೆ ಪಾಲಿಕೆಯ ಮುಖ್ಯ ಇಂಜಿನಿಯರ್ ಖುದ್ದು ಹಾಜರಾಗಬೇಕು ಎಂದು ಸೂಚಿಸಿ, ಫೆಬ್ರವರಿ 7ಕ್ಕೆ ವಿಚಾರಣೆ ಮುಂದೂಡಿದೆ. ಇದನ್ನೂ ಓದಿ: ಪ್ರತಾಪ್ ಸಿಂಹ, ರಾಮದಾಸ್ ಕಿತ್ತಾಟ- ಕಣ್ಣೀರಾಕಿದ ಮೇಯರ್