Tag: highcourt

  • ಮಾಲ್‍ಗಳಿಗೆ ಪಾರ್ಕಿಂಗ್ ಶುಲ್ಕ ಸಂಗ್ರಹಿಸಲು ಹಕ್ಕಿಲ್ಲ: ಕೇರಳ ಹೈಕೋರ್ಟ್

    ಮಾಲ್‍ಗಳಿಗೆ ಪಾರ್ಕಿಂಗ್ ಶುಲ್ಕ ಸಂಗ್ರಹಿಸಲು ಹಕ್ಕಿಲ್ಲ: ಕೇರಳ ಹೈಕೋರ್ಟ್

    ಕೊಚ್ಚಿ: ಮಾಲ್‍ಗಳಿಗೆ ಪಾರ್ಕಿಂಗ್ ಶುಲ್ಕ ಸಂಗ್ರಹಿಸುವ ಯಾವುದೇ ಹಕ್ಕು ಇಲ್ಲ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಕೇರಳ ಹೈಕೋರ್ಟ್ ತಿಳಿಸಿದೆ.

    ಎರ್ನಾಕುಲಂನಲ್ಲಿರುವ ಲಾಲು ಮಾಲ್‍ಗೆ ಪಾರ್ಕಿಂಗ್ ಶುಲ್ಕ ಸಂಗ್ರಹಿಸಲು ಪರವಾನಿಗೆ ನೀಡಲಾಗಿದೆಯೇ ಎಂದು ಕಲಾಮಸ್ಸೇರಿ ನಗರಸಭೆಗೆ ಹೈಕೋರ್ಟ್ ಪ್ರಶ್ನಿಸಿದೆ. ನಟ ಪೌಲಿ ವಡಕ್ಷಣ್ ಅವರು ಡಿ.2ರಂದು ಮಾಲ್‍ಗೆ ಭೇಟಿ ನೀಡಿದ್ದಾಗ ಪಾರ್ಕಿಂಗ್ ಶುಲ್ಕ ವಿಧಿಸಿದ್ದರು. ಈ ಹಣವನ್ನು ಪಾವತಿಸದಿದ್ದರೆ ಹೊರಹೋಗಲು ಬಿಡುವುದಿಲ್ಲ ಎಂದು ಮಾಲ್‍ನ ಸಿಬ್ಬಂದಿ ಹೇಳಿದ್ದರು. ಈ ವಿಚಾರವನ್ನು ಅವರು ಹೈಕೋರ್ಟ್‍ನಲ್ಲಿ ಪ್ರಶ್ನಿಸಿದ್ದರು.

    ಕಟ್ಟಡ ಕಟ್ಟುವಾಗ ಇರುವ ನಿಯಮಗಳಂತೆ ಪಾರ್ಕಿಂಗ್ ಜಾಗವನ್ನು ನಿಗದಿ ಮಾಡಬೇಕು. ಪಾರ್ಕಿಂಗ್ ಸ್ಥಳವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದಿಲ್ಲ. ಆದರೆ ಕಟ್ಟಡ ನಿರ್ಮಾಣ ಮಾಡಿದ ನಂತರ ಪಾರ್ಕಿಂಗ್‍ಗೆ ಮಾಲೀಕರು ಶುಲ್ಕ ವಿಧಿಸಬಹುದೇ ಎಂಬುದು ಈಗಿರುವ ಪ್ರಶ್ನೆ. ಮೇಲ್ನೋಟಕ್ಕೆ ನೋಡಿದರೆ ಮಾಲ್‍ಗಳಿಗೆ ಶುಲ್ಕ ಸಂಗ್ರಹಿಸುವ ಯಾವುದೇ ಅಧಿಕಾರವಿಲ್ಲ ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ: ಕಾಂಗ್ರೆಸ್ ಪಾದಯಾತ್ರೆ ಎಫೆಕ್ಟ್ – 25 ಪೊಲೀಸರಿಗೆ ಕೊರೊನಾ

    ಪಾರ್ಕಿಂಗ್ ಶುಲ್ಕ ವಿಧಿಸುವುದಕ್ಕೆ ನೀಡಿರುವ ಪರವಾನಗಿಯ ಕುರಿತಾದ ಸಂಪೂರ್ಣ ಮಾಹಿತಿ ಒದಗಿಸುವಂತೆ ನಗರ ಸಭೆಗೆ ಆದೇಶ ನೀಡಿದೆ. ಇದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಜ.28ಕ್ಕೆ ಮುಂದೂಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಶಾಪಿಂಗ್ ಮಾಲ್‍ನಲ್ಲಿ ಬೆಂಕಿ

  • ಶಿಕ್ಷಣದಲ್ಲಿ ರಾಜಕೀಯ ಯಾಕೆ? : ಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ

    ಶಿಕ್ಷಣದಲ್ಲಿ ರಾಜಕೀಯ ಯಾಕೆ? : ಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ

    ಬೆಂಗಳೂರು: ಶಿಕ್ಷಣದಲ್ಲಿ ರಾಜಕೀಯವನ್ನು ಯಾಕೆ ಬೆರೆಸುತ್ತಿದ್ದೀರಿ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.

    ಪದವಿ ಕೋರ್ಸ್​ಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡಿರುವ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಂಸ್ಕೃತ ಭಾರತ ಟ್ರಸ್ಟ್ ಸೇರಿದಂತೆ ವಿವಿಧ ಸಂಘಟನೆಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆಯಿತು.

    ಅಕ್ಟೋಬರ್‌ 26 ರಂದು ಪೀಠ ಈ ಆದೇಶವನ್ನು ಮರು ಪರಿಶೀಲಿಸುವಂತೆ ಸರ್ಕಾರಕ್ಕೆ ಆದೇಶಿಸಿತ್ತು. ಇಂದಿನ ವಿಚಾರಣೆಯ ಆರಂಭದಲ್ಲಿ ಕನ್ನಡವನ್ನು ಭಾಷೆಯಾಗಿ ಕಲಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಭಾಷೆಯನ್ನು ಕಲಿಯುವುದನ್ನು ಪ್ರೋತ್ಸಾಹಿಸಲು ಅವಕಾಶವಿದೆ ಎಂದು ರಾಜ್ಯ ಸರ್ಕಾರದ ವಕೀಲರು ತಿಳಿಸಿದರು. ಇದನ್ನೂ ಓದಿ: ಐಸಿಸ್ ಉಗ್ರ ಸಂಘಟನೆಗೆ ಹಿಂದುತ್ವ ಹೋಲಿಕೆ – ವಿವಾದಕ್ಕೆ ಸಿಲುಕಿದ ಖುರ್ಷಿದ್ ಪುಸ್ತಕ

    ಈ ಉತ್ತರಕ್ಕೆ ಅಸಮಾಧಾನಗೊಂಡ ಪೀಠ, ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕಡ್ಡಾಯಕ್ಕೆ ಅವಕಾಶವಿದೆಯೇ? ಹೊರರಾಜ್ಯದ ವಿದ್ಯಾರ್ಥಿಗಳ‌ ಕನ್ನಡ ಕಲಿಕೆ ಕಡ್ಡಾಯಗೊಳಿಸಬಹುದೇ? ಉನ್ನತ ಶಿಕ್ಷಣದಲ್ಲಿ ಕಡ್ಡಾಯಗೊಳಿಸಲು ಅವಕಾಶವಿದೆಯೇ ಎಂದು ಪ್ರಶ್ನಿಸಿತು.

    ಈ ನೀತಿಯಿಂದಾಗಿ ಎಷ್ಟು ವಿದ್ಯಾರ್ಥಿಗಳು ಹೊರಹೋಗಿದ್ದಾರೆ ಗೊತ್ತೇ? ಉನ್ನತ ಶಿಕ್ಷಣದಲ್ಲಿ ಕನ್ನಡ ಕಡ್ಡಾಯಗೊಳಿಸಲು ಅವಕಾಶ ಎಲ್ಲಿದೆ ಎಂದು ಖಾರವಾಗಿ ಹೈಕೋರ್ಟ್ ಪ್ರಶ್ನಿಸಿತು.

    ಸರ್ಕಾರಿ ವಕೀಲರು ವಾದ ಮಂಡನೆಗೆ ಅವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ನ.15 ಕ್ಕೆ ಹೈಕೋರ್ಟ್‌ ಮುಂದೂಡಿತು.

    ಅರ್ಜಿದಾರರ ಮನವಿ ಏನು?
    ರಾಜ್ಯದಲ್ಲಿ ಎಲ್ಲ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆಯನ್ನು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆಗಸ್ಟ್ 7ರಂದು ಆದೇಶ ಹೊರಡಿಸಿತ್ತು. ಈ ಆದೇಶ ಸಂವಿಧಾನದ ವಿಧಿ 14, 19, 21, 29 ಹಾಗೂ 30ರ ಆಶಯಗಳಿಗೆ ವಿರುದ್ಧವಾಗಿದೆ ಎಂದು ಸಂಸ್ಕೃತಿ ಭಾರತಿ ಟ್ರಸ್ಟ್ ಸೇರಿದಂತೆ ವಿವಿಧ ಸಂಘಟನೆಗಳು ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಿವೆ. ಇದನ್ನೂ ಓದಿ: ಜನಧನ್ ಖಾತೆಗಳಿಂದ 2 ರೂ.ನಂತೆ 6,000 ಕೋಟಿ ರೂ. ಅಕ್ರಮ ವರ್ಗಾವಣೆಯಾಗಿದೆ: ಎಚ್‍ಡಿಕೆ

    ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಇಲ್ಲದಿದ್ದರೂ, ಸರ್ಕಾರ 12ನೇ ತರಗತಿ ಓದಿ ಶಿಕ್ಷಣಕ್ಕಾಗಿ ರಾಜ್ಯದ ಕಾಲೆಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಮಾಡಿದೆ. ಪದವಿ ಹಂತದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಕಲಿಸುವುದು ಸರಿಯಲ್ಲ. ಸರ್ಕಾರದ ಆದೇಶದಿಂದ ಭಾಷೆ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುತ್ತದೆ. ಹೀಗಾಗಿ ಪದವಿ ಹಂತದಲ್ಲಿ ಕನ್ನಡ ಕಡ್ಡಾಯ ಮಾಡಿರುವ ಸರ್ಕಾರದ ಆದೇಶವನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಲಾಗಿದೆ.

  • ಉಣಕಲ್ ಕೆರೆಗೆ ಚನ್ನಬಸವ ಸಾಗರವೆಂದು ನಾಮಕರಣಕ್ಕೆ ಹೈಕೋರ್ಟ್ ಆದೇಶ

    ಉಣಕಲ್ ಕೆರೆಗೆ ಚನ್ನಬಸವ ಸಾಗರವೆಂದು ನಾಮಕರಣಕ್ಕೆ ಹೈಕೋರ್ಟ್ ಆದೇಶ

    ಧಾರವಾಡ: ಹುಬ್ಬಳ್ಳಿಯ ಐತಿಹಾಸಿಕ ಉಣಕಲ್ ಕೆರೆಗೆ ಚನ್ನಬಸವ ಸಾಗರವೆಂದು ನಾಮಕರಣ ಮಾಡಬೇಕು ಎಂದು ಮಹಾನಗರ ಪಾಲಿಕೆಗೆ ಹೈಕೋರ್ಟ್ ಆದೇಶ ನೀಡಿದೆ .

    2003 ರ ಜನವರಿ 16 ರಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಿದ್ದರೂ ನಿರ್ಣಯ ಜಾರಿಗೆ ಕ್ರಮ ಕೈಗೊಳ್ಳದ ಪಾಲಿಕೆ ವಿರುದ್ಧ ಹಲವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಧಾರವಾಡ ಹೈಕೋರ್ಟ್ ಪೀಠ ಈ ಆದೇಶ ನೀಡಿದೆ.

    ಹುಬ್ಬಳ್ಳಿ- ಧಾರವಾಡ ಮಧ್ಯದ ಪ್ರಮುಖ ಆಕರ್ಷಣೆಯಾಗಿರುವ ಮತ್ತು ಶತಮಾನಗಳ ಇತಿಹಾಸ ಹೊಂದಿರುವ ಉಣಕಲ್ ಕೆರೆ ಹಾಗೂ ಆವರಣವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿ ಪಡಿಸಲಾಗಿದೆ. ಕೆರೆ ದಂಡೆಯ ಮೇಲಿರುವ ಶ್ರೀ ಚನ್ನಬಸವೇಶ್ವರ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ. ಪ್ರತಿ ವರ್ಷ ಭರತ ಹುಣ್ಣಿಮೆಯಂದು ಜಾತ್ರೆ, ರಥೋತ್ಸವ ನಡೆಯುತ್ತದೆ,. ಶ್ರಾವಣ ಮಾಸದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ , ಭಕ್ತಿಯಿಂದ ನಡೆಯುತ್ತವೆ. 12 ನೇ ಶತಮಾನದಲ್ಲಿ ಕಲ್ಯಾಣ ಕ್ರಾಂತಿ ನಡೆದ ನಂತರ ಶ್ರೀ ಚನ್ನಬಸವೇಶ್ವರರ ನೇತೃತ್ವದ ಶರಣರ ತಂಡ ಸಹ್ಯಾದ್ರಿಯ ಅರಣ್ಯ ಪ್ರದೇಶದ ಮಧ್ಯದ ಉಳವಿಯತ್ತ ಸಾಗಿತು. ಈ ಮಧ್ಯೆ ಅವರು ಉಣಕಲ್ ಕೆರೆ ದಂಡೆ ಮೇಲೆ ಕೆಲಕಾಲ ಉಳಿದು ಜನರಲ್ಲಿ ಜಾಗೃತಿ ಮೂಡಿಸಿದರು. ಈ ಹಿನ್ನೆಲೆಯಲ್ಲಿ ಉಣಕಲ್ ಕೆರೆ ದಂಡೆಯ ಮೇಲೆ ರೂಪಗೊಂಡಿರುವ ದೇವಸ್ಥಾನ ಬಸವ ಭಕ್ತರ ಪವಿತ್ರ ಯಾತ್ರಾ ಸ್ಥಳವಾಗಿದೆ. ಇದನ್ನೂ ಓದಿ: ಸುನಂದಾ ಪುಷ್ಕರ್ ಪ್ರಕರಣ – 7 ವರ್ಷಗಳ ಬಳಿಕ ಶಶಿ ತರೂರ್​​​ಗೆ ರಿಲೀಫ್

    ಈ ಎಲ್ಲ ಕಾರಣಗಳಿಂದ ಚನ್ನಬಸವ ಸಾಗರ ಎಂದು ನಾಮಕರಣ ಮಾಡಲು ಹಿಂದೆ ನಿರ್ಣಯ ಕೈಗೊಳ್ಳಲಾಗಿತ್ತು. ಹುಬ್ಬಳ್ಳಿಯ ಶಂಕರಗೌಡ ಪಾಟೀಲ್, ವಿನಯ್ ಪರಮಾದಿ, ಶಿವಪ್ಪ ಪಟ್ಟಣಶೆಟ್ಟಿ ಅವರು ಸೇರಿ 7 ಜನರು ನ್ಯಾಯಾಲಯದ ಮೊರೆ ಹೋಗಿ ವಾದ ಮಂಡಿಸಿದ್ದರು, ಆದರೆ ನಿರ್ಣಯ ಜಾರಿಯಾಗದ ಹಿನ್ನೆಲೆಯಲ್ಲಿ ಇವರ ಪರವಾಗಿ ವಕೀಲ ಕೆ.ಎಸ್ , ಕೋರಿಶೆಟ್ಟರ್ ವಾದ ಮಂಡಿಸಿದ್ದರು. ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಸೇನೆ ಹಿಂಪಡೆದಿದ್ದು ಅಮೆರಿಕಾ ಇತಿಹಾಸದಲ್ಲಿ ಕಪ್ಪು ಚುಕ್ಕೆ: ಬೈಡನ್ ವಿರುದ್ಧ ಟ್ರಂಪ್ ವಾಗ್ದಾಳಿ

  • ತೆರಿಗೆ ಕಟ್ಟಲು ಹಣವಿಲ್ಲ ಎಂದ ನಟ ದಳಪತಿ ವಿಜಯ್‍ಗೆ ಕೋರ್ಟ್ ಛೀಮಾರಿ

    ತೆರಿಗೆ ಕಟ್ಟಲು ಹಣವಿಲ್ಲ ಎಂದ ನಟ ದಳಪತಿ ವಿಜಯ್‍ಗೆ ಕೋರ್ಟ್ ಛೀಮಾರಿ

    ಚೆನ್ನೈ: ಕಾರಿಗೆ ಕೋಟಿ ಕೋಟಿ ಕೊಟ್ಟು, ತೆರಿಗೆ ಕಟ್ಟಲು ಹಣವಿಲ್ಲ ಎಂದ ತಮಿಳಿನ ಖ್ಯಾತ ನಟ ವಿಜಯ್ ಅವರಿಗೆ ಮದ್ರಾಸ್ ಹೈ ಕೋರ್ಟ್ ಶಾಕ್ ಕೊಟ್ಟಿದೆ. ಒಂದು ಲಕ್ಷ ದಂಡ ವಿಧಿಸುವುದರೊಂದಿಗೆ ಕಠಿಣ ಪದಗಳ ಮೂಲಕ ಟೀಕಿಸಿದೆ.

    ವಿಜಯ್ ಅವರ ಬಳಿ ದುಬಾರಿ ಬೆಲೆಯ ಹಲವು ಕಾರುಗಳಿವೆ. ಅದಕ್ಕೆ ಇತ್ತೀಚೆಗೆ ಪ್ರತಿಷ್ಠಿತ ರೋಲ್ಸ್ ರಾಯ್ಸ್ ಕಾರು ಸೇರ್ಪಡೆಯಾಗಿತ್ತು. ಅದೂ ಸಹ ರೋಲ್ಸ್ ರಾಯ್ಸ್ ಘೋಸ್ಟ್ (Rolls Royce Ghost) ಮಾದರಿಯ ಕಾರು. ಆ ಕಾರನ್ನು ಇಂಗ್ಲೆಂಡ್‍ನಿಂದ ಆಮದು ಮಾಡಿಕೊಂಡಿದ್ದ ವಿಜಯ್‍ಗೆ ಭಾರತದಲ್ಲಿ ತೆರಿಗೆ ಕಟ್ಟಲು ಮನಸ್ಸಾಗಲಿಲ್ಲ. ಹಾಗಾಗಿ ಮದ್ರಾಸ್ ಹೈಕೋರ್ಟ್‍ಗೆ ವಿಜಯ್ ತೆರಿಗೆ ವಿನಾಯಿತಿ ನೀಡುವಂತೆ ಅರ್ಜಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ನಟನಿಗೆ ಛೀಮಾರಿ ಹಾಕಿದೆ. ಇದನ್ನೂ ಓದಿ: ಗಣಿಗಾರಿಕೆ ವೀಕ್ಷಣೆಗೆ ಜೆಡಿಎಸ್ ಶಾಸಕರು ಬರುವುದಾದರೆ ಸ್ವಾಗತ: ಸುಮಲತಾ

    ಕೋರ್ಟ್ ಹೇಳಿದ್ದೇನು?

    2012ರಲ್ಲಿ ನಟ ವಿಜಯ್ ಸಲ್ಲಿಸಿದ್ದ ತೆರಿಗೆ ವಿನಾಯಿತಿಯ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್‍ನ ನ್ಯಾ.ಎಸ್.ಎಮ್.ಸುಬ್ರಮಣಿಯಮ್ ಅವರಿದ್ದ ಪೀಠವು, ನಿಜವಾದ ಹೀರೋಗಳು ಸರಿಯಾದ ಸಮಯಕ್ಕೆ ತೆರಿಗೆ ಕಟ್ಟುತ್ತಾರೆ. ನೀವು ನಿಜ ಜೀವನದ ಹೀರೋಗಳಾಗಿ, ಬರಿಯ ತೆರೆಯ ಮೇಲಿನ ಹೀರೋಗಳಾಗಿ ಉಳಿಯಬೇಡಿ ಎಂದು ವಿಜಯ್ ಅವರಿಗೆ ಛಾಟಿ ಬೀಸಿದೆ. ಜೊತೆಗೆ ನ್ಯಾಯಾಲಯವು 1ಲಕ್ಷ ರೂ.ಗಳ ದಂಡವನ್ನೂ ವಿಜಯ್‍ಗೆ ವಿಧಿಸಿದ್ದು, ಅದನ್ನು ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಪಾವತಿಸುವಂತೆ ತಿಳಿಸಿದೆ. ಇದನ್ನೂ ಓದಿ: ಬಿಜೆಪಿ ಸಂಸದರು ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ: ಡಿಕೆಶಿ

    ಇಂಗ್ಲೆಂಡ್‍ನಿಂದ ತರಿಸಿದ ರೋಲ್ಸ್ ರಾಯ್ಸ್ ಮಾದರಿಯ ಕಾರಿಗೆ ಭಾರತದಲ್ಲಿ ಆಮದು ಸುಂಕವನ್ನು ಕಟ್ಟದೇ ಅದರ ವಿರುದ್ಧವಾಗಿ ವಿಜಯ್ ಅವರು ಕೋರ್ಟ್‍ನ ಮೆಟ್ಟಿಲೇರಿದ್ದರು. ಅದನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನ್ಯಾಯಾಲಯವು, ವಿಜಯ್ ಅವರ ವರ್ತನೆಯು ಬಹಳ ಜನರನ್ನು ಪ್ರಭಾವಿಸುವ ಸಾಮರ್ಥ್ಯವನ್ನು ಹೊಂದಿದೆ. ತಮಿಳುನಾಡಿನಂತಹ ರಾಜ್ಯದಲ್ಲಿ ಚಿತ್ರ ನಟರು ಬೇರೆಲ್ಲರಿಗಿಂತ ಹೆಚ್ಚು ಜನರನ್ನು ಪ್ರಭಾವಿಸುತ್ತಾರೆ. ನಟರೇ ಹೀಗೆ ಮಾಡಿದರೆ ತಪ್ಪು ಸಂದೇಶ ಹೋದಂತಾಗುತ್ತದೆ. ನಿಜವಾದ ನಾಯಕನಾದವನು ದೇಶಕ್ಕೆ ಕಟ್ಟಬೇಕಾದ ತೆರಿಗೆಯನ್ನು ತಪ್ಪದೇ ಕಟ್ಟುತ್ತಾನೆ ಎಂದಿದೆ.

    ರಿಟ್ ಅರ್ಜಿಯಲ್ಲಿ ವಿಜಯ್ ತಮ್ಮ ಉದ್ಯೋಗವನ್ನು ನಮೂದಿಸದೇ ಇದ್ದದ್ದನ್ನು ಗಮನಿಸಿದ ನ್ಯಾಯಾಲಯವು ಅದನ್ನೂ ಪ್ರಶ್ನಿಸಿದೆ. ಇಷ್ಟು ದೊಡ್ಡ ಹಿಂಬಾಲಕ ಗಡಣವನ್ನೇ ಹೊಂದಿದ್ದರೂ ನಿಮ್ಮ ಉದ್ಯೋಗದ ಕಾಲಂ ಅನ್ನು ಖಾಲಿ ಬಿಟ್ಟಿದ್ದಾರೆ. ಅಲ್ಲದೇ ರಿಟ್ ಅರ್ಜಿ ಸಲ್ಲಿಸಿ ಒಂಬತ್ತು ವರ್ಷಗಳ ಕಾಲ ನ್ಯಾಯಾಲಯದ ಸಮಯವನ್ನೂ ವ್ಯರ್ಥ ಮಾಡಿದ್ದೀರಿ. ಆಮದು ಸುಂಕ ಕಟ್ಟಿದ್ದೀರೋ, ಇಲ್ಲವೋ ಎಂಬುದನ್ನೂ ಸ್ಪಷ್ಟಪಡಿಸಿಲ್ಲ ಎಂದು ವಿಜಯ್ ಮೇಲೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು.

    ನಟರು ತೆರೆಯ ಮೇಲೆ ಭ್ರಷ್ಟಾಚಾರ ವಿರೋಧಿಗಳಾಗಿ, ನ್ಯಾಯ ಪರಿಪಾಲಕರಾಗಿ ದುಷ್ಟರನ್ನು ಸದೆಬಡಿಯುತ್ತಾರೆ. ಬೆಳ್ಳಿತೆರೆಯಲ್ಲಿ ಸಮಾಜಕ್ಕೆ ನ್ಯಾಯ ಒದಗಿಸುವವರೇ ಇವರು ಎಂಬಂತೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುತ್ತಾರೆ. ಆದರೆ ನಿಜ ಜೀವನಕ್ಕೆ ಬಂದಾಗ ತೆರಿಗೆಯನ್ನು ವಂಚಿಸುವುದು ಅವರ ವ್ಯಕ್ತಿತ್ವಕ್ಕೆ ತಕ್ಕುದಾದ ನಡವಳಿಕೆಯಲ್ಲ. ಸಂವಿಧಾನದಲ್ಲಿ ಸೂಚಿಸಲಾಗಿರುವ ಅಸಮಾನತೆಯನ್ನು ತಗ್ಗಿಸುವ ಕಾರ್ಯದಲ್ಲಿ ಸರಿಯಾದ ಸಮಯಕ್ಕೆ ತೆರಿಗೆಯನ್ನು ಕಟ್ಟುವುದೂ ಕೂಡಾ ಸೇರಿದೆ ಎಂದು ನ್ಯಾಯಾಲಯವು ಕಿವಿಮಾತು ಹೇಳಿದೆ.

    ನ್ಯಾ.ಸುಬ್ರಮಣಿಯಮ್ ಈ ಕುರಿತು ತೀರ್ಪಿನಲ್ಲಿ ಸ್ಪಷ್ಟವಾದ ನಿಲುವನ್ನು ದಾಖಲಿಸಿ, ತಾತ್ವಿಕವಾಗಿ ನೋಡುವುದಿದ್ದರೂ ಭಾರತದಂತಹ ಸಾಂಸ್ಕೃತಿಕ ಹಾಗೂ ಮೌಲ್ಯಗಳನ್ನೇ ಪ್ರಧಾನವಾಗಿ ಹೊಂದಿರುವ ದೇಶದಲ್ಲಿ ವಿಶ್ವದ ಶ್ರೇಷ್ಠ ಕಾರು ಉತ್ತಮವಾದ ಜೀವನಕ್ಕೆ ಸಹಕಾರಿಯಾಗಬಲ್ಲದು ಎಂಬುದನ್ನು ಒಪ್ಪಲಾಗದು. ದೇಶದ ಬಡ ಜನರ ರಕ್ತ ಹಾಗೂ ಕಠಿಣ ಶ್ರಮದ ಫಲದಿಂದಾಗಿ ಶ್ರೀಮಂತ ವ್ಯಕ್ತಿಗಳಲ್ಲಿ ಹಣವು ಶೇಖರಣೆಯಾಗಿದೆಯೇ ವಿನಃ, ಆಕಾಶದಿಂದ ಹಣ ಉದುರಿದ ಕಾರಣದಿಂದಲ್ಲ ಎಂದು ಹೇಳಿದೆ.

  • SSLC ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್..!

    SSLC ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್..!

    ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ತೀರ್ಪು ನೀಡಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿದೆ.

    ಸಿಬಿಎಸ್‍ಇ ಮಾದರಿಯಲ್ಲಿ ಪರೀಕ್ಷೆ ರದ್ದಿಗೆ ಮನವಿ ಮಾಡಲಾಗಿತ್ತು. ಅರ್ಜಿದಾರ ಸಂಗ್ರೇಗೌಡ ಮನವಿಗೆ ಸರ್ಕಾರದಿಂದ ಆಕ್ಷೇಪಣೆ ವ್ಯಕ್ತಪಡಿಸಲಾಯ್ತು. 2 ದಿನಗಳ ಕಾಲ ಮಾತ್ರ ಪರೀಕ್ಷೆ ನಡೆಸುತ್ತೇವೆ. ತಲಾ ಒಂದು ಗಂಟೆಯ ಅವಧಿಯ ಪರೀಕ್ಷೆ ಇರುತ್ತೆ. ವಿದ್ಯಾರ್ಥಿಗಳ ಮುಂಜಾಗೃತೆಗೆ ಎಲ್ಲಾ ಕ್ರಮಕೈಗೊಳ್ಳಲಾಗಿದೆ. ಪರೀಕ್ಷೆ ಸಂಬಂಧ ಎಅ? ಒಪಿ ಹೊರಡಿಸಲಾಗಿದೆ. ಯಾವ ವ್ಯಕ್ತಿಗಳು ಪರೀಕ್ಷೆಗೆ ಹಾಜರಾಗುತ್ತಾರೋ ಎಲ್ಲರನ್ನೂ ಪಾಸ್ ಮಾಡಲಾಗುವುದು ಅಂತಾ ಎಜಿ ಪ್ರಭುಲಿಂಗ ನಾವಡಗಿ ಹೈಕೋರ್ಟ್ ಗಮನಕ್ಕೆ ತಂದ್ರು. ಇದನ್ನೂ ಓದಿ: ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ – ಗುಡುಗಿದ ದರ್ಶನ್

    ಹೈಕೋರ್ಟ್ ಅಭಿಪ್ರಾಯ:
    ಕೋವಿಡ್ ಸೋಂಕು ಕಡಿಮೆ ಇರುವುದರಿಂದ ಪರೀಕ್ಷೆ ನಡೆಸುವುದು ಸೂಕ್ತ ಅಂತಾ ನ್ಯಾ.ಬಿ.ವಿ.ನಾಗರತ್ನ ನೇತೃತ್ವದ ಪೀಠ ಅಭಿಪ್ರಾಯ ಪಟ್ಟಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೋರ್ಡ್ ಪರೀಕ್ಷೆ ಬರೆಯಬೇಕು. ಅವರ ಭವಿಷ್ಯದ ಆಯ್ಕೆ ದೃಷ್ಟಿಯಿಂದ ಅಗತ್ಯ. 3 ಗಂಟೆಗಳ ಬದಲಿಗೆ 1 ಗಂಟೆ ಪರೀಕ್ಷೆ ಇದೆ. ಪರೀಕ್ಷೆ ಇಲ್ಲವಾದರೆ ಅಂಕ ನೀಡುವುದು ಹೇಗೆ..? ಪರೀಕ್ಷೆ ಬರೆಯದಿರುವುದು ವಿದ್ಯಾರ್ಥಿಗಳಿಗೆ ಬಿಟ್ಟಿದ್ದು, ವಿದ್ಯಾರ್ಥಿಗಳ ಪರವಾಗಿ ಪೋಷಕರು ನಿರ್ಧರಿಸಲಿ. ಈಗ ಬರೆಯದಿದ್ದರೆ ಮುಂದಿನ ವರ್ಷ ಪರೀಕ್ಷೆ ಬರೆಯಲಿ ಅಂತಾ ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ಪಟ್ಟಿದೆ. ಸರ್ಕಾರದ ನಿರ್ಧಾರದಂತೆ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ.  ಇದನ್ನೂ ಓದಿ: ಸುಮಲತಾ ಬೇಬಿ ಬೆಟ್ಟಕ್ಕೆ ಬನ್ನಿ ಅಂದ್ರೆ ಬರುತ್ತೇನೆ: ಪುಟ್ಟರಾಜು

  • ರಮೇಶ್ ಜಾರಕಿಹೊಳಿಗೆ ಇಂದು ಬಿಗ್ ಡೇ – ಅತ್ಯಾಚಾರ ಪ್ರಕರಣ CBIಗೆ ವರ್ಗಾವಣೆ ಆಗುತ್ತಾ..?

    ರಮೇಶ್ ಜಾರಕಿಹೊಳಿಗೆ ಇಂದು ಬಿಗ್ ಡೇ – ಅತ್ಯಾಚಾರ ಪ್ರಕರಣ CBIಗೆ ವರ್ಗಾವಣೆ ಆಗುತ್ತಾ..?

    ಬೆಂಗಳೂರು: ಮಾಜಿ ಸಚಿವರ ರಮೇಶ್ ಜಾರಕಿಹೊಳಿಗೆ ಇಂದು ಬಿಗ್ ಡೇ ಆಗಿದ್ದು, ರಾಸಲೀಲೆ ಪ್ರಕರಣ ಸಂಬಂಧ ಇಂದು ಹೈಕೋರ್ಟ್‍ನಲ್ಲಿ ಭವಿಷ್ಯ ನಿರ್ಧಾರವಾಗುತ್ತದೆ.

    ಪ್ರಕರಣ ಸಂಬಂಧ ಹೈಕೋರ್ಟ್ ತನಿಖಾ ಪ್ರಗತಿ ವರದಿ ಕೇಳಿದೆ. ಈ ಹಿನ್ನೆಲೆಯಲ್ಲಿ ಎಸ್‍ಐಟಿ (Special Investigation Team) ಇಂದು ತನಿಖಾ ಪ್ರಗತಿ ವರದಿ ಸಲ್ಲಿಸಲಿದೆ. ವರದಿ ನೋಡಿದ ಬಳಿಕ ಹೈಕೋರ್ಟ್ ಎಸ್ ಐಟಿಯೇ ತನಿಖಾ ಮುಂದುವರೆಸಬೇಕಾ..? ಬೇರೆ ತನಿಖಾ ಸಂಸ್ಥೆಗೆ ವರ್ಗಾವಣೆ ಆಗ್ಬೇಕಾ..? ಎಂದು ತನಿಖಾ ಪ್ರಗತಿ ವರದಿ ನೋಡಿ ನ್ಯಾಯಾಲಯ ವಾದ ಪ್ರತಿವಾದ ಆಲಿಸಲಿದೆ.

    ಬಳಿಕ ತನಿಖೆಯನ್ನು ಯಾರು ಮುಂದುವರಿಸಬೇಕು ಎಂದು ಆದೇಶ ಮಾಡಲಿದೆ. ವಿಶೇಷ ಅಂದರೆ ಯುವತಿಯ ಪರ ಹಿರಿಯ ವಕೀಲೆ ವಾದ ಮಂಡಿಸುತ್ತಾ ಇದ್ದಾರೆ. ಸುಪ್ರಿಂಕೋರ್ಟ್ ಹಿರಿಯ ವಕೀಲೆ ಇಂದ್ರ ಜೈಸಿಂಗ್ ವಾದ ಮಾಡ್ತಾ ಇದ್ದಾರೆ. ಬಹುತೇಕ ಇಂದು ರಮೇಶ್ ಜಾರಕಿಹೊಳಿ ಭವಿಷ್ಯ ನಿರ್ಧಾರ ಆಗಲಿದೆ.

    ಏನಿದು ಪ್ರಕರಣ..?
    ಮಾರ್ಚ್ 2ರಂದು ರಮೇಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ಬಳಿಕ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು. ಇತ್ತ ವೀಡಿಯೋ ಸಂಚಲನ ಸೃಷ್ಟಿಸಿ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಹ ನೀಡಿದ್ದರು. ಆ ಬಳಿಕದಿಂದ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ನಂತರ ಸ್ವತಃ ಸುದ್ದಿಗೋಷ್ಠಿ ಕರೆದು ಮಾಧ್ಯಮಗಳ ಮುಂದೆ ಭಾವುಕರಾಗಿದ್ದರು. ಇಷ್ಟೆಲ್ಲಾ ಆದ ನಂತರ ಮಾಜಿ ಸಚಿವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟು ಗೋಕಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಳಿಕ ಪಿಪಿಇ ಕಿಟ್ ಧರಿಸಿ ಉಪಚುನಾವಣೆಗೆ ಮತದಾನ ಮಾಡಿದ್ದರು.

    ಕೆಲ ದಿನಗಳ ಹಿಂದೆಯಷ್ಟೇ ಎಸ್‍ಐಟಿ ಮುಂದೆ ಹಾಜರಾಗಿದ್ದ ರಮೇಶ್ ಜಾರಕಿಹೊಳಿ, ಯುವತಿ ಸಮ್ಮತಿಯ ಮೇರೆಗೆ ಲೈಂಗಿಕ ಸಂಪರ್ಕದಲ್ಲಿ ಭಾಗಿಯಾಗಿದ್ದು, ಬಳಿಕ ಆಕೆಯೇ ವಿಡಿಯೋ ಮಾಡಿಕೊಂಡು ಈ ರೀತಿ ನಡೆದುಕೊಳ್ಳುತ್ತಾ ಇದ್ದಾಳೆ ಎಂದು ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದರು. ಆದರೆ ಈ ಮಾಹಿತಿಯನ್ನು ಎಸ್‍ಐಟಿ ಅಧಿಕಾರಿಗಳು ಅಲ್ಲಗೆಳೆದಿದ್ದು, ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಯಾವುದೇ ಬೆಳವಣಿಗೆಯೂ ನಡೆದಿಲ್ಲ. ತನಿಖೆಯ ಬಳಿಕ ಸಂಪೂರ್ಣ ಸತ್ಯಾಸತ್ಯತೆ ಬೆಳಕಿಗೆ ಬರಲಿದೆ ಅಂತ ಈ ಸುದ್ದಿಗೆ ಎಸ್‍ಐಟಿ ಮೂಲಗಳು ಸ್ಪಷ್ಟಪಡಿಸಿತ್ತು.

  • ಜಾರಕಿಹೊಳಿ ಸಿಡಿ ಪ್ರಕರಣ – ಸಂತ್ರಸ್ತೆ ಪೋಷಕರ ಅರ್ಜಿ ವಜಾಗೊಳಿಸಿದ ಹೈಕೋರ್ಟ್

    ಜಾರಕಿಹೊಳಿ ಸಿಡಿ ಪ್ರಕರಣ – ಸಂತ್ರಸ್ತೆ ಪೋಷಕರ ಅರ್ಜಿ ವಜಾಗೊಳಿಸಿದ ಹೈಕೋರ್ಟ್

    ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಂತ್ರಸ್ತ ಯುವತಿ ಸಿಆರ್ ಪಿಸಿ 164 ಅಡಿ ನೀಡಿರುವ ಸ್ವಇಚ್ಛಾ ಹೇಳಿಕೆಯನ್ನ ರದ್ದು ಮಾಡಬೇಕು ಅಂತಾ ಪೋಷಕರು ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.

    ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ಎದುರಿಗೆ ನೀಡಿದ್ದ ಕಲಂ 164ರ ಅಡಿಯಲ್ಲಿ ಹೇಳಿಕೆಯನ್ನು ಹಾಗೂ ಅದರ ನ್ಯಾಯಬದ್ಧತೆಯನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಮುಂದೆ ಸಂತ್ರಸ್ತೆಯ ಪೋಷಕರು ಪ್ರಶ್ನಿಸಿದ್ರು. ಸಂತ್ರಸ್ತೆಯ ಹೇಳಿಕೆ ಅವಳ ಮನಸ್ಸಿಗೆ ವಿರುದ್ಧವಾಗಿ ಹಾಗೂ ಒತ್ತಾಯ ಪೂರ್ವಕವಾಗಿ ಪಡೆಯಲಾಗಿದೆ ಎಂದು ಆರೋಪಿಸಿದ್ದರು. ಕಲಂ 164 ಅಡಿಯಲ್ಲಿ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಪಡೆಯುವಾಗ ಸಂತ್ರಸ್ತೆಯ ಮನಸ್ಥಿತಿ ಸರಿ ಇರಲಿಲ್ಲ ಹಾಗೂ ಮಾನಸಿಕ ಒತ್ತಡದಲ್ಲಿದ್ದಳು ಎಂದು ಪೋಷಕರು ವಾದಿಸಿದ್ದರು.

    ಸಂತ್ರಸ್ತೆಯ ಪೋಷಕರು ಸಲ್ಲಿಸಿದ್ದ ಈ ರಿಟ್ ಅರ್ಜಿಯಲ್ಲಿ ಸಂತ್ರಸ್ತೆಯ ಪರವಾಗಿ ತಮ್ಮ ವಾದವನ್ನೂ ಆಲಿಸಬೇಕೆಂದು ಸುಪ್ರೀಂಕೋರ್ಟ್ ವಕೀಲರಾದ ಸಂಕೇತ್ ಏಣಗಿ ಅರ್ಜಿ ಸಲ್ಲಿಸಿದ್ದರು. ವಕೀಲ ಸಂಕೇತ್ ಏಣಗಿ ಅವರ ವಾದ ಆಲಿಸಿದ ನ್ಯಾಯಾಲಯ ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ಎದುರಿಗೆ ನೀಡಿದ್ದ ಕಲಂ 164 ಸಿಆರ್ ಪಿಸಿ ಅಡಿಯಲ್ಲಿ ಹೇಳಿಕೆ ನ್ಯಾಯಬದ್ಧವಾಗಿದ್ದು, ಸುಪ್ರೀಂಕೋರ್ಟಿನ ನಿರ್ಭಯ ಅತ್ಯಾಚಾರ ಪ್ರಕರಣದ ತೀರ್ಪಿನ ಅನುಸಾರವಾಗಿದೆ. ತದನಂತರ ಹೊಸದಾಗಿ 2013ರಲ್ಲಿ ಕಲಂ 164 ಅಡಿ ತಿದ್ದುಪಡಿಯಾಗಿ ಸೇರ್ಪಡೆಯಾದ ಹೊಸ ಕಲಂ 164(5) & (5ಂ) ಸಿಆರ್ ಪಿಸಿ ಅಡಿಯಲ್ಲಿ ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ಎದುರಿಗೆ ಸ್ವಇಚ್ಛೆಯಿಂದ ಹಾಗೂ ಯಾವುದೇ ಒತ್ತಾಯವಿಲ್ಲದೆ ಹೇಳಿಕೆ ನೀಡಿದ್ದು ಅದು ನ್ಯಾಯಬದ್ಧವಾಗಿದೆ ಎಂದು ವಾದ ಮಂಡಿಸಿದ್ರು.  ಇದನ್ನೂ ಓದಿ: ವೀಡಿಯೋಗಾಗಿ 15 ಕೋಟಿ ವೆಚ್ಚ, ಇದು ಹನಿಟ್ರ್ಯಾಪ್: ಬಾಲಚಂದ್ರ ಜಾರಕಿಹೊಳಿ

    ಎಸ್‍ಐಟಿ ಪರ ನ್ಯಾಯವಾದಿ ಪ್ರಸನ್ನಕುಮಾರ್ ವಾದ ಮಂಡನೆ ಮಾಡಿದ್ರು. ವಾದ ಪ್ರತಿವಾದ ಆಲಿಸಿದ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ನೇತೃತ್ವದ ಏಕಸದಸ್ಯ ಪೀಠ, ಸಂತ್ರಸ್ತೆಯು 2013ರಲ್ಲಿ ಕಲಂ 164 ಸಿಆರ್ ಪಿಸಿಯ ತಿದ್ದುಪಡಿಯಾಗಿ ಸೇರ್ಪಡೆಯಾದ ಹೊಸ ಕಲಂ 164(5) & (5ಂ) ಅಡಿ ಸಿಆರ್ ಪಿಸಿಯರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಎದುರಿಗೆ ಸ್ವಇಚ್ಛೆಯಿಂದ ಹಾಗೂ ಯಾವುದೇ ಒತ್ತಾಯವಿಲ್ಲದೆ ಹೇಳಿಕೆ ನೀಡಿದ್ದು, ಅದು ನ್ಯಾಯಬದ್ಧವಾಗಿದೆ ಎಂದು ಮಹತ್ವದ ತೀರ್ಪು ನೀಡಿ ಸಂತ್ರಸ್ತೆಯ ಪೋಷಕರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದರು. ಇದನ್ನೂ ಓದಿ:ರಮೇಶ್ ಜಾರಕಿಹೊಳಿ ಕೇಸ್‍ಗೆ ಟ್ವಿಸ್ಟ್ – ಸಮ್ಮತಿಯಿಂದಲೇ ನಡೆದಿತ್ತಾ ಇಬ್ಬರ ನಡುವೆ ಸೆಕ್ಸ್?

    ಹೇಬಿಯಸ್ ಕಾರ್ಪಸ್ ಅರ್ಜಿ ಸಹ ವಜಾ:
    ಮೇ 27 ರಂದು ಸಿಡಿಯಲ್ಲಿದ್ದ ಯುವತಿ ತಂದೆ ಧಾರವಾಡ ಹೈಕೋರ್ಟ್ ನಲ್ಲಿ ನನ್ನ ಮಗಳನ್ನ ಹುಡುಕಿಕೊಡಿ ಎಂದು ಹೇಬಿಯಸ್ ಕಾರ್ಪಸ್ ಅರ್ಜಿಯನ್ನ ಸಲ್ಲಿಸಿದ್ದರು. ವೀಡಿಯೋ ವಿಚಾರಣೆ ವೇಳೆ, ನಾನು ಸುರಕ್ಷಿತವಾಗಿದ್ದೇನೆಂದು ಯುವತಿ ಹೇಳಿಕೆ ನೀಡಿದ್ದಾಳೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ನಾನು ಬೆಂಗಳೂರು ವಿಳಾಸದಲ್ಲಿ ಪ್ರಸ್ತುತ ವಾಸವಾಗಿರುತ್ತೇನೆ. ನಾನು ಸ್ವಂತ ಇಚ್ಛೆ ಇಂದ ವಾಸವಾಗಿದ್ದು, ನನಗೆ ಇಲ್ಲಿ ಇರುವುದಕ್ಕೆ ಯಾರದೇ ಒತ್ತಡ ಇರುವುದಿಲ್ಲ ಮತ್ತು ನನ್ನ ರಕ್ಷಣೆಗಾಗಿ ಬೆಂಗಳೂರು ನಗರದ ಪೋಲೀಸರು ಭದ್ರತೆಯನ್ನು ಒದಗಿಸುತ್ತಾರೆ ಹಾಗೂ ನಾನು ಸುರಕ್ಷಿತವಾಗಿ ಇರುತ್ತೇನೆ. ನಾನು ಪ್ರಾಪ್ತ ವಯಸ್ಕಳಿದ್ದು ನಾನು ಸದ್ಯ ನಮ್ಮ ತಂದೆ ತಾಯಿ ಬಳಿ ಹೋಗಲು ಇಚ್ಛಿಸುವುದಿಲ್ಲ. ಈ ಪ್ರಕರಣಗಳು ಮುಗಿದ ನಂತರ ನಾನು ಅವರನ್ನು ಭೇಟಿ ಆಗುತ್ತೇನೆ ಎಂದು ಹೇಳಿದ್ದರು. ಇದನ್ನೂ ಓದಿ: ಮಹಾನಾಯಕ ಗಾಂ…ನಾನು ಗಂಡಸು, ಡಿಕೆಶಿ ವಿರುದ್ಧ ದೂರು ಕೊಡ್ತೇನೆ- ರಮೇಶ್ ಜಾರಕಿಹೊಳಿ ಆಕ್ರೋಶ

    ಒಪ್ಪಿತ ಲೈಂಗಿಕ ಕ್ರಿಯೆನಾ?:
    ಪ್ರಕರಣದ ಆರಂಭದಲ್ಲಿ ಯುವತಿ ನನಗೆ ಗೊತ್ತೆ ಇಲ್ಲ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ಆ ಯುವತಿ ನನಗೆ ಗೊತ್ತು ಅಂತ ಹೇಳಿದ್ದಾರೆ ಎನ್ನಲಾಗುತ್ತಿದೆ. ಆ ಯುವತಿ ಪ್ರಾಜೆಕ್ಟ್ ವಿಚಾರದಲ್ಲಿ ನನಗೆ ಪರಿಚಯ ಆಗಿದ್ದು ನಿಜ. ಅವಾಗಾವಾಗ ನಾನು ವಾಸವಾಗಿದ್ದ ಅಪಾರ್ಟ್ ಮೆಂಟ್ ಗೆ ಬರುತ್ತಿದ್ದಳು. ಅವಾಗ ಇಬ್ಬರು ಲೈಂಗಿಕ ಸಂಪರ್ಕದಲ್ಲಿ ಭಾಗಿಯಾಗಿದ್ದೀವಿ. ಅದು ಕೂಡ ಆಕೆಯ ಸಮ್ಮತಿಯ ಮೇರೆಗೆ ಎಂದು ಎಸ್‍ಐಟಿ ಮುಂದೆ ರಮೇಶ್ ಜಾರಕಿಹೊಳಿ ಹೇಳಿಕೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

  • ರಮೇಶ್ ಜಾರಕಿಹೊಳಿ ಕೇಸ್‍ಗೆ ಸಿಕ್ಕಿಲ್ಲ ಮುಕ್ತಿ

    ರಮೇಶ್ ಜಾರಕಿಹೊಳಿ ಕೇಸ್‍ಗೆ ಸಿಕ್ಕಿಲ್ಲ ಮುಕ್ತಿ

    ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅತ್ಯಾಚಾರ ಪ್ರಕರಣ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಎಸ್ ಐಟಿ ಅಧಿಕಾರಿಗಳು ಬಿ ರಿಪೋರ್ಟ್ ಸಲ್ಲಿಕೆ ಮಾಡ್ತಾರೆ ಅಂದುಕೊಳ್ಳಲಾಗಿತ್ತು. ಆದರೆ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆಯುತ್ತಾ ಇದೆ. ಇಂದು ಯುವತಿಯ ಕಡೆಯಿಂದ ಹೈಕೋರ್ಟಿಗೆ ಮಧ್ಯಂತರ ಅರ್ಜಿ ಸಲ್ಲಿಕೆ ಮಾಡಲಾಯಿತು.

    ಎಸ್ ಐಟಿ ಅಧಿಕಾರಿಗಳು ನೀಡಿದ್ದ ಪ್ರಗತಿ ವರದಿ ವಿಚಾರಣಾ ಸಂದರ್ಭದಲ್ಲಿ ಯುವತಿ ಪರ ವಕೀಲರು ಮಧ್ಯಂತರ ಅರ್ಜಿ ಸಲ್ಲಿಕೆ ಮಾಡಿದರು. ಈಗಾಗಲೇ ಎಸ್‍ಐಟಿ ತನಿಖೆ ಮಾಡದಂತೆ ತಡೆಯಾಜ್ಞೆಗೆ ಅರ್ಜಿ ಸಲ್ಲಿಸಲಾಗಿದೆ. ಈಗಾಗಲೇ ಮುಖ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಾ ಇರುವುದರಿಂದ ಈ ಪೀಠದಲ್ಲಿ ನಮ್ಮನ್ನೂ ಪ್ರತಿವಾದಿಯಾಗಿಸಿ ಅಂತ ಯುವತಿ ಪರ ವಕೀಲರು ಅರ್ಜಿ ಸಲ್ಲಿಕೆ ಮಾಡಿದ್ರು.

    ಅರ್ಜಿ ಪರಿಗಣನೆ ಮಾಡಿದ ಹೈಕೋರ್ಟ್ ಮುಖ್ಯ ಪೀಠ ಮುಂದಿನ ವಾರ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿತ್ತು. ಜೂನ್ 23 ಕ್ಕೆ ಎಸ್ ಐಟಿ ತನಿಖಾ ಪ್ರಗತಿ ವರದಿ ಸಲ್ಲಿಕೆ ಮಾಡಲು ಸೂಚನೆ ನೀಡಿದೆ. ಇದನ್ನೂ ಓದಿ: ರಮೇಶ್ ಜಾರಕಿಹೊಳಿ, ಎಸ್‍ಐಟಿಗೆ ಹೈಕೋರ್ಟ್ ತುರ್ತು ನೋಟಿಸ್

  • ಸಿಡಿ ಯುವತಿ ತಂದೆಯ ಅರ್ಜಿ ವಿಚಾರಣೆ ಮುಂದೂಡಿಕೆ

    ಸಿಡಿ ಯುವತಿ ತಂದೆಯ ಅರ್ಜಿ ವಿಚಾರಣೆ ಮುಂದೂಡಿಕೆ

    ಬೆಂಗಳೂರು: ಮಗಳ ಹೇಳಿಕೆ ಪರಿಗಣಿಸದಂತೆ ಸಿಡಿ ಯುವತಿ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

    ನನ್ನ ಮಗಳ ಹೇಳಿಕೆ ಪರಿಗಣಿಸಬೇಡಿ ಎಂದು 164 ಅನ್ನು ರದ್ದು ಮಾಡುವಂತೆ ಸಿಡಿ ಯುವತಿ ತಂದೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ನಡೆಸಿದೆ.

    ಸಿಆರ್ ಪಿಸಿ ಸೆ. 164 ಹೇಳಿಕೆ ಕೋರ್ಟ್ ನಲ್ಲಿದೆ, ಆರೋಪಪಟ್ಟಿ ಸಲ್ಲಿಕೆಯಾಗುವವರೆಗೆ ಹೇಳಿಕೆಯ ಪ್ರತಿ ಸಿಗುವುದಿಲ್ಲ. ಹೀಗಾಗಿ ಹೇಳಿಕೆ ಹಾಜರುಪಡಿಸಲು ವಿನಾಯಿತಿ ನೀಡುವಂತೆ ಯುವತಿ ಪರ ವಕೀಲರು ಹೈಕೋರ್ಟ್ ಗೆ ಮನವಿ ಮಾಡಿದರು. ಹೀಗಾಗಿ ಹೈಕೋರ್ಟ್ ತಾತ್ಕಾಲಿಕ ವಿನಾಯಿತಿ ನೀಡಿದ್ದು, ರಾಜ್ಯ ಸರ್ಕಾರ, ಎಸ್‍ಐಟಿ, ಕಬ್ಬನ್ ಪಾರ್ಕ್ ಪೊಲೀಸರಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿದೆ.

    ಮಾರ್ಚ್ 31ರಂದು ಸಿಡಿ ಯುವತಿ ತಂದೆ ಹೈಕೋರ್ಟ್ ಮೆಟ್ಟಿಲೇರಿದ್ದರು. ನನ್ನ ಮಗಳ ಹೇಳಿಕೆಯನ್ನು ಪರಿಗಣಿಸದಂತೆ 21 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸಂತ್ರಸ್ತೆಯ ತಂದೆ ಏನ್ ಮನವಿ ಮಾಡಿದ್ದರು. ನನ್ನ ಮಗಳು ಒತ್ತಡ, ಬಲವಂತದಿಂದ ಹೇಳಿಕೆ ಕೊಡ್ತಿದ್ದಾಳೆ. ಸಿಆರ್ಪಿಸಿ 164 ಅಡಿ ದಾಖಲಾಗಿರುವ ಹೇಳಿಕೆ ರದ್ದು ಮಾಡಿ. ಮೆಡಿಕಲ್ ಟೆಸ್ಟ್ ಮಾಡಿಸದೇ ಸಿಆರ್ಪಿಸಿ 164 ಹೇಳಿಕೆ ಸರಿಯಲ್ಲ. ನನ್ನ ಮಗಳು ಸಾಕಷ್ಟು ದಿನದಿಂದ ಸಂಪರ್ಕಕ್ಕೆ ಸಿಕ್ಕಿಲ್ಲ. ನನ್ನ ಮಗಳು ಸ್ವ-ಇಚ್ಛೆಯಿಂದ ಹೇಳಿಕೆ ನೀಡಿಲ್ಲ ಎಂದು ತಿಳಿಸಿದ್ದರು.

    ನನ್ನ ಮಗಳು ಪ್ರಭಾವ, ಒತ್ತಡದ ಬಲಿಪಶುವಾಗಿದ್ದಾಳೆ. ನಮ್ಮ ಸುಪರ್ದಿಗೆ ಅಥವಾ ನ್ಯಾಯಾಂಗದ ಸುಪರ್ದಿಯಲ್ಲಿರಿಸಿ. ವಕೀಲರ ಮೂಲಕ ನನ್ನ ಮಗಳು ಕೋರ್ಟ್‍ಗೆ ಹಾಜರಾಗಿದ್ದಾಳೆ. ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಏಕೆ ಉಪಸ್ಥಿತರಿದ್ದರು..?, ಮಗಳು ಒತ್ತಡಕ್ಕೆ ಒಳಗಾಗಿದ್ದರೆ ತನಿಖಾಧಿಕಾರಿ ಮುಂದೆ ಏಕೆ ಹಾಜರಾಗಲಿಲ್ಲ ಎಂದು ಪ್ರಶ್ನಿಸಿದ್ದರು.

  • ಮಂತ್ರಿಯಾಗುವ ಹಳ್ಳಿಹಕ್ಕಿ ಕನಸು ಭಗ್ನ!

    ಮಂತ್ರಿಯಾಗುವ ಹಳ್ಳಿಹಕ್ಕಿ ಕನಸು ಭಗ್ನ!

    ನವದೆಹಲಿ: ಮೇಲ್ಮನೆ ಸದಸ್ಯ ವಿಶ್ವನಾಥ್‍ಗೆ ಬಿಗ್ ಶಾಕ್ ಸಿಕ್ಕಿದೆ. ವಿಶ್ವನಾಥ್ ಮಂತ್ರಿಯಾಗುವ ಆಸೆಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ತಣ್ಣೀರೆರಚಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ್ದ ವಿಶ್ವನಾಥ್‍ಗೆ ಇದೀಗ ಆಘಾತ ಉಂಟಾಗಿದೆ. ನಾಮನಿರ್ದೆಶನದ ಆಧಾರದ ಮೇಲೆ ಸಚಿವರಾಗುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಹೇಳಿತ್ತು. ಈ ಆದೇಶ ಪ್ರಶ್ನಿಸಿ ಎಚ್.ವಿಶ್ವನಾಥ್ ಅವರು ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಸುಪ್ರೀಂಕೋರ್ಟಿನಲ್ಲಿ ವಿಶ್ವನಾಥ್ ಅರ್ಜಿ ವಜಾ ಆಗಿದ್ದು, ನಾಮ ನಿರ್ದೇಶಿತರು ಸಚಿವರಾಗಲು ಸಾಧ್ಯವಿಲ್ಲ ಎಂದು ಹೇಳಿದೆ.

    ವಿಶ್ವನಾಥ್ ಅವರನ್ನು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿತ್ತು. ನಾಮ ನಿರ್ದೇಶನವಾದ ಬಳಿಕ ವಿಶ್ವನಾಥ್ ಸಚಿವರಾಗಲು ಪ್ರಯತ್ನಿಸಿದ್ದರು. ವಿಶ್ವನಾಥ್‍ಗೆ ಸಚಿವ ಸ್ಥಾನ ನೀಡದಂತೆ ರಾಜ್ಯ ಹೈಕೋರ್ಟಿನಲ್ಲಿ ದೂರು ದಾಖಲು ಮಾಡಲಾಗಿತ್ತು. ವಿಚಾರಣೆ ನಡೆಸಿದ್ದ ಪೀಠ ಸಚಿವರಾಗುವಂತಿಲ್ಲ ಎಂದು ಹೈಕೋರ್ಟ್ ಹೇಳಿತ್ತು.

    ಸಚಿವ ಸ್ಥಾನದ ಬದಲು ಮೇಲ್ಮನೆ ಸಭಾಪತಿ ಸ್ಥಾನದ ಮೇಲೆ ವಿಶ್ವನಾಥ್ ಕಣ್ಣಿಟ್ಟಿದ್ದರು. ಹುಣಸೂರಿಗೆ ತೆರಳಿದ್ದಾಗ ಆಪ್ತರ ಬಳಿ ಮಾತುಕತೆ ವೇಳೆ ಸಭಾಪತಿ ಆಸೆಯನ್ನು ವ್ಯಕ್ತಪಡಿಸಿದ್ದರು. ಸಿಎಂ, ಪಕ್ಷ ಸಭಾಪತಿ ಸ್ಥಾನ ಕೊಟ್ಟರೆ ನೋಡೋಣ ಎಂದು ಹೇಳಿದ್ದರು. ಅಲ್ಲದೆ ಮಿತ್ರ ಮಂಡಳಿಯ ಬಗ್ಗೆ ಸಿಡಿಮಿಡಿಗೊಂಡಿದ್ದರು. ಮಿತ್ರ ಮಂಡಳಿಯ ಸಹಾನುಭೂತಿ ಯಾರಿಗೆ ಬೇಕು. 17 ಮಂದಿ ಸಿಎಂ ಜೊತೆ ಮಾತನಾಡಬೇಕಿತ್ತು ಎಂದು ಗರಂ ಆಗಿದ್ದರು.

    ಈ ಹಿಂದೆ ಹೈಕೋರ್ಟ್ ಹೇಳಿದ್ದೇನು..?
    ವಿಶ್ವನಾಥ್ ಅವರನ್ನು ಸಾಹಿತ್ಯ ಕ್ಷೇತ್ರದಿಂದ ನಾಮನಿರ್ದೇಶನ ಮಾಡಲಾಗಿದ್ದರೆ, ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಎಂಟಿಬಿ, ಶಂಕರ್ ಆಯ್ಕೆ ಆಗಿದ್ದರು. ವಿಶ್ವನಾಥ್ ಯಾವುದೇ ಚುನಾವಣೆ ನಡೆಯದೇ ಅವಿರೋಧವಾಗಿ ಪರಿಷತ್ ಮೆಟ್ಟಿಲು ಹತ್ತಿದ ಕಾರಣ ಮಂತ್ರಿ ಸ್ಥಾನ ಮಾಡಲು ಬರುವುದಿಲ್ಲ ಎಂದು ಕೋರ್ಟ್ ಹೇಳಿತ್ತು.

    ಏನಿದು ಪ್ರಕರಣ?
    ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಲಿ ವಿಧಾನಸಭೆ ಮುಗಿಯುವವರೆಗೆ 17 ಶಾಸಕರನ್ನು ಅನರ್ಹಗೊಳಿಸಿ ಆದೇಶ ಪ್ರಕಟಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅನರ್ಹತೆ ಆದೇಶವನ್ನು ಎತ್ತಿ ಹಿಡಿದಿತ್ತು. ಆದರೆ ವಿಧಾನಸಭೆ ಮುಗಿಯುವವರೆಗೂ ಅನರ್ಹತೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿ ಚುನಾವಣೆಗೆ ಸ್ಪರ್ಧಿಸಿ ಶಾಸಕರಾಗಬಹುದು ಎಂದು ಮಹತ್ವದ ಆದೇಶವನ್ನು ಪ್ರಕಟಿಸಿತ್ತು.

    ಈ ಕಾರಣಕ್ಕೆ ವಿಶ್ವನಾಥ್ ಮತ್ತು ಎಂಟಿಬಿ ನಾಗರಾಜ್ ಹುಣಸೂರು ಮತ್ತು ಹೊಸಕೋಟೆ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಸೋತ ಹಿನ್ನೆಲೆಯಲ್ಲಿ ಇಬ್ಬರನ್ನು ಬಿಜೆಪಿ ಪರಿಷತ್‍ಗೆ ಆಯ್ಕೆ ಮಾಡಿ ಮಂತ್ರಿ ಮಾಡಲು ಮುಂದಾಗಿತ್ತು. ಈ ನಡುವೆ ಹೈಕೋರ್ಟ್‍ನಲ್ಲಿ ಅನರ್ಹರಾದವರಿಗೆ ಪರಿಷತ್ ಮೂಲಕ ಮಂತ್ರಿಯಾಗಲು ನಿರ್ಬಂಧಿಸಿ ಕೋರಿ ಪಿಐಎಲ್ ಸಲ್ಲಿಕೆಯಾಗಿತ್ತು. ಹೈಕೋರ್ಟ್ ನೀಡಿದ ಮಧ್ಯಂತರ ಆದೇಶದಿಂದ ವಿಶ್ವನಾಥ್‍ಗೆ ಮಂತ್ರಿ ಸ್ಥಾನ ಕೈ ತಪ್ಪಿದರೆ ಎಂಟಿಬಿಗೆ ಮಂತ್ರಿಯಾಗಿದ್ದಾರೆ.