Tag: Higher Education

  • ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ನೀಡಿ ಕೇರಳ ಸರ್ಕಾರ ಆದೇಶ

    ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ನೀಡಿ ಕೇರಳ ಸರ್ಕಾರ ಆದೇಶ

    ತಿರುವನಂತಪುರಂ: ಸರ್ಕಾರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಋತುಚಕ್ರ (Periods Leave) ದ ರಜೆ ನೀಡಿ ಕೇರಳ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಇಂತದೊಂದು ಮಹತ್ವದ ನಿರ್ಧಾರವನ್ನು ಸಿಎಂ ಪಿಣರಾಯಿ ವಿಜಯನ್ (Pinarayi Vijayan) ತೆಗೆದುಕೊಂಡಿದ್ದಾರೆ.

    ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ, ವಿದ್ಯಾರ್ಥಿಗಳಿಗಿರುವ 75% ಹಾಜರಾತಿಯನ್ನು ವಿದ್ಯಾರ್ಥಿನಿಯರಿಗಾಗಿ 73% ಇಳಿಕೆ ಮಾಡಿದೆ. ಇದಲ್ಲದೆ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿನಿಯರು 60 ದಿನಗಳ ಗರ್ಭಧಾರಣೆಯ ರಜೆಯನ್ನು ಪಡೆಯಬಹುದು ಎಂದು ಆದೇಶದಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ:ರಮೇಶ್ ಜಾರಕಿಹೊಳಿ ಬೆಂಬಲಿಗರು ಮಾಡುತ್ತಿರೋ ಸಮಾವೇಶಕ್ಕೆ ಹೋಗಲ್ಲ: ಸಂಜಯ್ ಪಾಟೀಲ್

    ಸರ್ಕಾರದ ಆದೇಶದ ಬೆನ್ನಲ್ಲೆ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ಕುಸಾಟ್) ನಿಯಮ ಜಾರಿ ಮಾಡಿದೆ. ಈ ಬಗ್ಗೆ ಉನ್ನತ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ರಾಜ್ಯ ಸಚಿವ ಆರ್ ಬಿಂದು (R Bindu) ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ರಾಜ್ಯಾದ್ಯಂತ ಇರುವ ವಿಶ್ವವಿದ್ಯಾನಿಲಯಗಳಲ್ಲಿ ಇದೇ ರೀತಿಯ ನೀತಿಯನ್ನು ಜಾರಿಗೆ ತರಲು ರಾಜ್ಯವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ದಂಧೆ – ಕೆಎಂಸಿ ಆಸ್ಪತ್ರೆಯ ವೈದ್ಯರು ವಜಾ, ವಿದ್ಯಾರ್ಥಿಗಳು ಅಮಾನತು

    ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಬಗ್ಗೆ ಟ್ವೀಟ್ ಮಾಡಿ, ಮುಟ್ಟಿನ ರಜೆ ನಿರ್ಧಾರದ ಮೂಲಕ ಮತ್ತೊಮ್ಮೆ ಕೇರಳವು ರಾಷ್ಟ್ರಕ್ಕೆ ಮಾದರಿಯಾಗಿದೆ ಮತ್ತು ಪ್ರಸ್ತುತ ನಿರ್ಧಾರವು ಲಿಂಗ ನ್ಯಾಯಯುತ ಸಮಾಜವನ್ನು ಸಾಕಾರಗೊಳಿಸುವ ಎಡ ಪ್ರಜಾಸತ್ತಾತ್ಮಕ ರಂಗ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಎಂದು ಹೇಳಿದ್ದರು.

    ಕಾಕತಾಳೀಯ ಎನ್ನುವಂತೆ ಕಳೆದ ವಾರವಷ್ಟೇ ಸುಪ್ರೀಂಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿದ್ದು, ಭಾರತದಾದ್ಯಂತ ಮಹಿಳಾ ವಿದ್ಯಾರ್ಥಿಗಳು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ನೋವು ರಜೆ ಅಥವಾ ಅವಧಿ ರಜೆಯನ್ನು ಪರಿಚಯಿಸಲು ಕರೆ ನೀಡಲಾಯಿತು. ಕೆಲವು ಸಂಸ್ಥೆಗಳು ಮತ್ತು ರಾಜ್ಯ ಸರ್ಕಾರಗಳನ್ನು ಹೊರತುಪಡಿಸಿ, ಸಮಾಜ, ಶಾಸಕಾಂಗ ಮತ್ತು ಇತರ ಮಧ್ಯಸ್ಥಗಾರರಿಂದ ಮುಟ್ಟಿನ ಅವಧಿಗಳನ್ನು ತಿಳಿದೋ ಅಥವಾ ತಿಳಿಯದೆಯೋ ನಿರ್ಲಕ್ಷಿಸಲಾಗಿದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪದವಿ, ಸ್ನಾತಕೋತ್ತರ ಕೋರ್ಸ್‌ಗೆ ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ: ಅಶ್ವಥ್ ನಾರಾಯಣ

    ಪದವಿ, ಸ್ನಾತಕೋತ್ತರ ಕೋರ್ಸ್‌ಗೆ ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ: ಅಶ್ವಥ್ ನಾರಾಯಣ

    ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ. ರಾಜ್ಯದ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

    ಈ ಏಕರೂಪದ ಕಾರ್ಯಕ್ರಮ ಪಟ್ಟಿಯಂತೆ, ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ. ಇದೇ ರೀತಿಯಲ್ಲಿ ಸ್ನಾತಕೋತ್ತರ ಕೋರ್ಸ್‌ಗಳಿಗೆ ಅಕ್ಟೋಬರ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 2ರಿಂದ 14ರ ನಡುವೆ ತರಗತಿಗಳಿಗೆ ಚಾಲನೆ ಸಿಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಪರಿಸರ ಸಂರಕ್ಷಣೆಗೆ ಯುವಪೀಳಿಗೆಯನ್ನು ಜಾಗೃತಗೊಳಿಸಲು ರಾಜ್ಯಪಾಲರ ಕರೆ

    EDUCATION
    ಸಾಂದರ್ಭಿಕ ಚಿತ್ರ

    ಇದುವರೆಗೂ ರಾಜ್ಯದಲ್ಲಿ ಒಂದೊಂದು ವಿ.ವಿ.ಯೂ ತಮ್ಮ ಅನುಕೂಲಕ್ಕೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿಕೊಳ್ಳುತ್ತಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಗೊಂದಲ ಮತ್ತು ಅನನುಕೂಲ ಆಗುತ್ತಿತ್ತು. ಇದನ್ನು ಗಮನಿಸಿ ಈ ಏಕರೂಪದ ವೇಳಾಪಟ್ಟಿಯನ್ನು ತರಲಾಗಿದೆ ಎಂದು ಅವರು ಹೇಳಿದ್ದಾರೆ.

    ಈ ವೇಳಾಪಟ್ಟಿಯಲ್ಲಿ ಪ್ರತೀ ಸೆಮಿಸ್ಟರುಗಳ ಆರಂಭ, ದಂಡರಹಿತ ಮತ್ತು ದಂಡ ಸಹಿತ ಪ್ರವೇಶಾತಿ ಅವಧಿ, ಪ್ರತಿ ಸೆಮಿಸ್ಟರುಗಳಿಗೆ ಬೋಧನಾ ತರಗತಿಗಳು ಆರಂಭವಾಗುವ ಮತ್ತು ಮುಗಿಯುವ ದಿನ, ಪರೀಕ್ಷೆ ಆರಂಭವಾಗುವ ದಿನ, ಮೌಲ್ಯಮಾಪನ ಆರಂಭ ಮತ್ತು ಫಲಿತಾಂಶ ಪ್ರಕಟಣೆಯ ದಿನ, ರಜೆ ಆರಂಭದ ದಿನಗಳನ್ನೆಲ್ಲ ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

    ಈ ಪಟ್ಟಿಯಲ್ಲಿ ಪದವಿಯ 6, ಸ್ನಾತಕೋತ್ತರ ಮಟ್ಟದ 4 ಮತ್ತು ವೃತ್ತಿಪರ ಕೋರ್ಸುಗಳ 8 ಸೆಮಿಸ್ಟರುಗಳನ್ನೂ ಗಣನೆಗೆ ತೆಗೆದುಕೊಳ್ಳಲಾಗಿದೆ. ಸೆಮಿಸ್ಟರ್ ಮುಗಿದ ನಂತರದ ರಜೆ ಅವಧಿಯಲ್ಲಿ ಪರೀಕ್ಷಾ ಕರ್ತವ್ಯ ಬಂದರೆ, ಉಪನ್ಯಾಸಕರು ಆ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಅಮರನಾಥಕ್ಕೆ ರಾಜ್ಯದಿಂದ 100ಕ್ಕೂ ಹೆಚ್ಚು ಯಾತ್ರಿಕರು ಭೇಟಿ: ಎಲ್ಲ ಕನ್ನಡಿಗರ ರಕ್ಷಣೆಗೆ ಕ್ರಮ: ಸಿಎಂ ಬೊಮ್ಮಾಯಿ

    ಉನ್ನತ ಶಿಕ್ಷಣ ಪರಿಷತ್ ಮುಖ್ಯಸ್ಥರಾದ ಬಿ.ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಈ ಸಂಬಂಧ ಇದೇ 7ರಂದು ಎಲ್ಲಾ ವಿ.ವಿ.ಗಳ ಕುಲಪತಿಗಳು ಮತ್ತು ರಿಜಿಸ್ಟ್ರಾರ್ಸ್ ಜತೆ ವರ್ಚುಯಲ್ ಸಭೆ ನಡೆಸಿ, ಸಮಾಲೋಚನೆ ನಡೆಸಲಾಗಿತ್ತು ಎಂದು ಸಚಿವರು ವಿವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿ ಜನಾಶೀರ್ವಾದ ಕಾರ್ಯಕ್ರಮ ತೆಳ್ಳಗೆ, ಬೆಳ್ಳಗೆ ನಡೆಯುತ್ತಿದೆ: ಅಶ್ವಥ್ ನಾರಾಯಣ್

    ರಾಜ್ಯದಲ್ಲಿ ಜನಾಶೀರ್ವಾದ ಕಾರ್ಯಕ್ರಮ ತೆಳ್ಳಗೆ, ಬೆಳ್ಳಗೆ ನಡೆಯುತ್ತಿದೆ: ಅಶ್ವಥ್ ನಾರಾಯಣ್

    ಧಾರವಾಡ: ರಾಜ್ಯದಲ್ಲಿ ಜನಾಶೀರ್ವಾದ ಕಾರ್ಯಕ್ರಮ ಸಾಂಕೇತಿಕವಾಗಿ ಸಣ್ಣ ಮಟ್ಟದಲ್ಲಿ ನಡೆಯುತ್ತಿದೆ. ನಾವು ಎಲ್ಲ ಕಡೆ ತಲುಪಬೇಕು ಎಂಬ ಉದ್ದೇಶದಿಂದ ಸರಳ, ಸುಲಭ ಕಾರ್ಯಕ್ರಮ ಮಾಡುತಿದ್ದೇವೆ. ಒಂದು ರೀತಿಯ ತೆಳ್ಳಗೆ, ಬೆಳ್ಳಗೆ ರೀತಿಯ ಕಾರ್ಯಕ್ರಮಗಳಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದರು.

    ಧಾರವಾಡದಲ್ಲಿ ಮಾತನಾಡಿದ ಅವರು, ನಾವು ಬಹಳ ಬೃಹತ್ ಕಾರ್ಯಕ್ರಮ ಮಾಡುತಿದ್ದೆವು, ಸಾಮಾನ್ಯವಾಗಿ ರಾಜಕೀಯ ಕಾರ್ಯಕ್ರಮ ತುಂಬಾ ಅದ್ಧೂರಿಯಾಗಿ ನಡೆಯುತ್ತದೆ. ಈಗ ಜನಾಶೀರ್ವಾದ ಕಾರ್ಯಕ್ರಮ ತೆಳ್ಳಗೆ, ಬೆಳ್ಳಗೆ ನಡೆಯುತ್ತಿದೆ. ಬಹಳಷ್ಟು ಕಡಿವಾಣ ಹಾಕಿಕೊಂಡು, ಕೈ ಕಟ್ಟಿಕೊಂಡು ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: ಜನಾಶೀರ್ವಾದ ಬದಲು ಹೆಣಾಶೀರ್ವಾದ ಯಾತ್ರೆ ಮಾಡಲಿ: ಎಎಪಿ

    ಆನಂದ್ ಸಿಂಗ್ ಸಚಿವ ಸ್ಥಾನ ಬದಲಾವಣೆ ವಿಚಾರವಾಗಿ ಮಾತನಾಡಿದ ಅಶ್ವಥ್ ನಾರಾಯಣ್, ಗೊಂದಲ ಏನೂ ಇಲ್ಲ, ಅವರಿಗೆ ಬೇರೆ ಖಾತೆ ಬೇಕು ಎಂದು ಅಪೇಕ್ಷೆ ಇದೆ. ಸರ್ಕಾರದಲ್ಲಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿದೆ. ಆನಂದ್ ಸಿಂಗ್ ಉತ್ತಮ ವ್ಯಕ್ತಿ, ಸಮಾಧಾನ ಇರುವವರು, ಎಲ್ಲೋ ಒಂದು ಕಡೆ ತಮ್ಮ ಭಾವನೆಯನ್ನು ನಾಲ್ಕು ಗೋಡೆಗಳ ಮಧ್ಯದಲ್ಲಿ ಕೇಳಿಕೊಂಡಿರುವುದು ಇದೆ. ಅವರು ಬೇರೆ ಎಲ್ಲೂ ಹೇಳಿಕೆ ನೀಡಿಲ್ಲ. ಸಿಎಂ ಅವರ ಜೊತೆ ಮಾತುಕತೆ ಮಾಡಿದ್ದಾರೆ. ಸಿಎಂ ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ನಮ್ಮಲ್ಲಿ ಸಮಸ್ಯೆ ಗೊಂದಲ ಇಲ್ಲಾ, ಆನಂದ್ ಸಿಂಗ್ ಜವಾಬ್ದಾರಿಯುತ ಮನುಷ್ಯ ಎಂದು ಹೇಳಿದರು. ಇದನ್ನೂ ಓದಿ: ಜನರಿಗಷ್ಟೇ ಕೊರೊನಾ ರೂಲ್ಸ್- ಜನಪ್ರತಿನಿಧಿಗಳು ಡೋಂಟ್‍ಕೇರ್

  • ವಿದ್ಯಾಭ್ಯಾಸಕ್ಕೆ ಬಡತನ ಅಡ್ಡಿ- ಯುವತಿ ಆತ್ಮಹತ್ಯೆಗೆ ಶರಣು

    ವಿದ್ಯಾಭ್ಯಾಸಕ್ಕೆ ಬಡತನ ಅಡ್ಡಿ- ಯುವತಿ ಆತ್ಮಹತ್ಯೆಗೆ ಶರಣು

    ದಾವಣಗೆರೆ: ಮನೆಯಲ್ಲಿ ಬಡತನದ ಕಾರಣಕ್ಕೆ ಮುಂದೆ ಓದಿಸುವುದು ಕಷ್ಟ ಎಂದು ತಾಯಿ ಹೇಳಿದ್ದರಿಂದ ಮನನೊಂದ ಪ್ರತಿಭಾನ್ವಿತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಉಜ್ಜಪ್ಪ ವಡೇರಹಳ್ಳಿಯಲ್ಲಿ ನಡೆದಿದೆ.

    ಉಜ್ಜಪ್ಪ ವಡೇರಹಳ್ಳಿಯಲ್ಲಿ ಗ್ರಾಮದ ನಾಗರಾಜಪ್ಪ ಮತ್ತು ಚಂದ್ರಮ್ಮನ ಅವರ ಪುತ್ರಿ ರಕ್ಷಿತಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು, ದಾವಣಗೆರೆಯ ಸೀತಮ್ಮ ಪಿಯು ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಓದುತ್ತಿದ್ದಳು. ಕೆಲ ದಿನಗಳ ಹಿಂದೆ ಪಿಯುಸಿ ಪಾಸ್ ಆಗಿದ್ದು, ಮುಂದೆ ಪದವಿ ವ್ಯಾಸಂಗ ಮಾಡಬೇಕು ಎನ್ನುವ ಆಸೆಯನ್ನು ಹೊಂದಿದ್ದಳು. ಆದರೆ ರಕ್ಷಿತಾ ತಂದೆ ನಾಗರಾಜಪ್ಪ ಮೂರು ವರ್ಷದ ಹಿಂದೆ ಧರ್ಮಸ್ಥಳಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದರು. ಇದಾದ ಬಳಿಕ ತಾಯಿ ಚಂದ್ರಮ್ಮ ಕೂಲಿ ಮಾಡಿ ಮಗಳನ್ನು ಓದಿಸುತ್ತಿದ್ದರು.

    ಲಾಕ್‍ಡೌನ್ ಕಾರಣ ಚಂದ್ರಮ್ಮಗೆ ಕೂಲಿ ಕೆಲಸ ಸಿಗದಂತಾಗಿದ್ದು, ಆರ್ಥಿಕ ಸಮಸ್ಯೆ ಸೃಷ್ಟಿಯಾಯಿತು. ಮನೆಯಲ್ಲಿ ಬಡತನ ಇದೆ, ಮುಂದಿನ ವಿದ್ಯಾಭ್ಯಾಸಕ್ಕೆ ಕಳುಹಿಸುವ ಶಕ್ತಿ ಇಲ್ಲ, ಮನೆಯಲ್ಲೇ ಇರುವಂತೆ ಮಗಳಿಗೆ ಹೇಳಿದ್ದಾರೆ. ಇದು ರಕ್ಷಿತಾಗೆ ಸಾಕಷ್ಟು ನೋವು ತಂದಿದ್ದು, ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಉಜ್ಜಪ್ಪ ವಡೇರಹಳ್ಳಿ ಗ್ರಾಮದಲ್ಲಿ ವ್ಯಾಸಂಗ ಮಾಡಿ 10ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆಯುವ ಮೂಲಕ ಪ್ರಥಮ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದಳು. ನಂತರ ದಾವಣಗೆರೆಯ ಪರಿಶಿಷ್ಟ ಜಾತಿ ವಿದ್ಯಾರ್ಥಿನಿಯರ ನಿಲಯದಲ್ಲಿದ್ದು, ಸೀತಮ್ಮ ಕಾಲೇಜಿನ ಕಲಾ ವಿಭಾಗದಲ್ಲಿ ಪಿಯುಸಿ ಓದಿ ಶೇ.60ರಷ್ಟು ಅಂಕಗಳನ್ನು ಪಡೆದಿದ್ದಳು. ಮುಂದೆ ಬಿಎ ಅಥವಾ ಬಿಕಾಂ ಮಾಡಬೇಕೆಂಬ ಆಸೆ ಇತ್ತು. ಆದರೆ ತಾಯಿ ಚಂದ್ರಮ್ಮಗೆ ಮುಂದೆ ಓದಿಸುವಷ್ಟು ಶಕ್ತಿ ಇರಲಿಲ್ಲ. ಇದನ್ನೇ ಮನಸ್ಸಿನಲ್ಲಿಟ್ಟುಕೊಂಡ ರಕ್ಷಿತಾ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಉನ್ನತ ಶಿಕ್ಷಣ ಪಡೆಯುವಲ್ಲಿ ಯುವಕರನ್ನ ಹಿಂದಿಕ್ಕಿದ ಯುವತಿಯರು

    ಉನ್ನತ ಶಿಕ್ಷಣ ಪಡೆಯುವಲ್ಲಿ ಯುವಕರನ್ನ ಹಿಂದಿಕ್ಕಿದ ಯುವತಿಯರು

    ಬೆಂಗಳೂರು: ಸಮಾಜದಲ್ಲಿ ಮಹಿಳೆಗೂ ಸಹ ಪುರುಷರಷ್ಟೇ ಗೌರವ ಸ್ಥಾನಮಾನ ನೀಡಬೇಕೆಂಬ ಮಾತು ಇದೆ. ಮಹಿಳೆಯರು ಪುರಷರಿಗಿಂತ ಯಾವುದರಲ್ಲಿ ಕಡಿಮೆ ಇಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ. ಇದೀಗ ಉನ್ನತ ಶಿಕ್ಷಣ ಪಡೆಯುವಲ್ಲಿಯೂ ಯುವಕರನ್ನು ಕರ್ನಾಟಕದ ಯುವತಿಯರು ಹಿಂದಿಕ್ಕಿದ್ದಾರೆ.

    ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಬಳಿಯ ವಿದ್ಯಾರ್ಥಿನಿಯರು ಮನೆಯಲ್ಲಿ ಉಳಿದುಕೊಳ್ಳುತ್ತಾರೆ. ಉನ್ನತ ಶಿಕ್ಷಣ ಪಡೆಯಲು ಬೇರೆ ನಗರಗಳಿಗೆ ತೆರಳಲು ಹಿಂದೇಟು ಹಾಕುವುದುಂಟು. ಹೆಣ್ಣು ಮಕ್ಕಳಿಗೆ ಮದುವೆ ಮಾಡಿದ್ರೆ ಸಾಕಪ್ಪ ಅನ್ನೊ ಪೋಷಕರು ಪಿಯು ಮುಗಿದ ಕೂಡಲೇ ಸಂಸಾರ ಎಂಬ ನೌಕೆಗೆ ತಳ್ಳಿ ಬಿಡುತ್ತಾರೆ. ಸಹಜವಾಗಿ ಫಲಿತಾಂಶದಲ್ಲಿ ಮುಂದೆ ಇರುವ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣದತ್ತ ಒಲವು ತೋರುತ್ತಿದ್ದಾರೆ.

    ಕರ್ನಾಟಕ ಮತ್ತು ಉತ್ತರ ಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಶಿಕ್ಷಣ ಪಡೆಯುವರ ಪೈಕಿ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಿದೆ ಎಂದು ಆಲ್ ಇಂಡಿಯಾ ಸರ್ವೇ ಆನ್ ಹೈಯರ್ ಎಜುಕೇಷನ್ (ಎಐಎಸ್‍ಹೆಚ್‍ಇ) ಹೇಳಿದೆ. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಎಐಎಸ್‍ಹೆಚ್‍ಇ ಸಮೀಕ್ಷೆಗಳನ್ನು ನಡೆಸಿ ವರದಿ ನೀಡುತ್ತದೆ. 18-23ರ ವರ್ಷದೊಳಗಿನ ಯುವತಿಯರು ಉನ್ನತ ಶಿಕ್ಷಣ ಪಡೆಯಲು ಆಸಕ್ತಿ ತೋರುತ್ತಿದ್ದಾರೆ. ಕಳೆದ ವರ್ಷ ಉತ್ತರ ಪ್ರದೇಶದ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿನಿಯರಿಗಿಂತ ವಿದ್ಯಾರ್ಥಿ 1.91 ಲಕ್ಷದಷ್ಟು ಹೆಚ್ಚು ಜನ ಪ್ರವೇಶ ಪಡೆದುಕೊಂಡಿದ್ದರು. ಇದೀಗ ಯುವಕರಗಿಂತ 90 ಸಾವಿರ ವಿದ್ಯಾರ್ಥಿನಿಯರು ಪ್ರವೇಶ ಪಡೆದುಕೊಂಡಿದ್ದಾರೆ.

    ಉತ್ತರ ಪ್ರದೇಶದಂತೆ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಅಂತರವಿಲ್ಲ. ಯುವಕರಿಗಿಂತ 1,600 ಹೆಚ್ಚು ಯುವತಿಯರು ಉನ್ನತ ಶಿಕ್ಷಣ ಪಡೆದುಕೊಳ್ಳುತ್ತಿದ್ದಾರೆ ಎಂದು ಎಐಎಸ್‍ಹೆಚ್‍ಇ ಹೇಳಿದೆ. 47.6% ರಷ್ಟಿದ್ದ ದಾಖಲಾತಿ 2017-18ನೇ ಸಾಲಿನಲ್ಲಿ 48.6% ರಷ್ಟು ಏರಿಕೆ ಕಂಡಿದೆ.

    ದಾಖಲಾತಿಯಲ್ಲಿ ಏರಿಕೆ:
    ಸಮೀಕ್ಷೆ ಪ್ರಕಾರ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆ ಕಾಣುತ್ತಿದೆ. 2017-18ರಲ್ಲಿ 25.8% ರಷ್ಟಿತ್ತು. 2018-19ಕ್ಕೆ 26.3% ರಷ್ಟಾಗಿದೆ. ಅದೇ ರೀತಿ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಪಡೆಯುವರ ಸಂಖ್ಯೆಯೂ ಸಹ ಏರಿಕೆ ಕಾಣುತ್ತಿದೆ. 903 (2017-18)ದಿಂದ 993 (2018-19) ಎಷ್ಟು ಏರಿಕೆ ಆಗಿದೆ. ಉನ್ನತ ಶಿಕ್ಷಣ ನೀಡುವ ಸಂಸ್ಥೆಗಳ ಸಂಖ್ಯೆಯಲ್ಲಿ ಗಣನೀಯವಾದ ಏರಿಕೆ ಕಂಡಿದೆ. 49,964 ರಷ್ಟಿದ್ದ ಶಿಕ್ಷಣ ಸಂಸ್ಥೆಗಳು ಸದ್ಯ 51,649 ರಷ್ಟು ಏರಿಕೆ ಆಗಿವೆ. 13.88 ರಷ್ಟಿದ್ದ ಸಿಬ್ಬಂದಿ ಸಂಖ್ಯೆ 14.16 ರಷ್ಟು ಹೆಚ್ಚಳವಾಗಿದೆ.

  • ಕೊನೆಗೂ ಉನ್ನತ ಶಿಕ್ಷಣದ ಕುರ್ಚಿ ಏರಿದ ಎಂಟನೇ ಕ್ಲಾಸ್ ಎಂಎಲ್‍ಎ!

    ಕೊನೆಗೂ ಉನ್ನತ ಶಿಕ್ಷಣದ ಕುರ್ಚಿ ಏರಿದ ಎಂಟನೇ ಕ್ಲಾಸ್ ಎಂಎಲ್‍ಎ!

    ಬೆಂಗಳೂರು: ಸಚಿವ ಸ್ಥಾನ ಹಂಚಿಕೆಯಾದ ದಿನದಿಂದ ಅಸಮಾಧಾನ ಹೊರಹಾಕಿದ್ದ ಜಿ ಟಿ ದೇವೇಗೌಡರು ಕೊನೆಗೂ ಉನ್ನತ ಶಿಕ್ಷಣ ಖಾತೆಗೆ ತೃಪ್ತಿಪಟ್ಟಿದ್ದಾರೆ. ಇಂದು ವಿಧಾನಸೌದದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 344ರಲ್ಲಿ ಕುಟುಂಬ ಸಮೇತ ಪೂಜೆ ಸಲ್ಲಿಸಿ, ಉನ್ನತ ಶಿಕ್ಷಣ ಖಾತೆಯ ಅಧಿಕಾರವನ್ನು ವಹಿಸಿಕೊಂಡಿದ್ದಾರೆ.

    ಪೂಜೆ ಸಲ್ಲಿಸಿದ ಬಳಿಕ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿಗಳು ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಖಾತೆ ನೀಡಿದ್ದಾರೆ. ಉನ್ನತ ಶಿಕ್ಷಣ ಖಾತೆಯನ್ನು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಾರೆ ಎಂಬ ನಂಬಿಕೆ ಇಟ್ಟು ಕೊಟ್ಟಿದ್ದಾರೆ. ಆದ್ದರಿಂದ ಅವರು ಇಟ್ಟ ನಂಬಿಕೆಯನ್ನು ಉಳಿಸಿಕೊಂಡು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ತಿಳಿಸಿದರು.

    ನನಗೆ ಕಂದಾಯ ಹಾಗೂ ಜಲಸಂಪನ್ಮೂಲ ಖಾತೆ ಸಿಗಬೇಕೆಂದು ಆಸೆ ಪಟ್ಟಿದ್ದೆ, ಆದರೆ ಅದು ಕಾಂಗ್ರೆಸ್ ಪಕ್ಷದವರ ಪಾಲಾದ ಹಿನ್ನೆಲೆಯಲ್ಲಿ ನನಗೆ ಉನ್ನತ ಶಿಕ್ಷಣ ಖಾತೆ ಸಚಿವ ಸ್ಥಾನ ಕೊಟ್ಟಿದ್ದರು. ಆದರೆ 8ನೇ ತರಗತಿ ಓದಿದ ನನಗೆ ಉನ್ನತ ಶಿಕ್ಷಣ ಇಲಾಖೆ ಬೇಡವೆಂದು ಮುನಿಸಿಕೊಂಡಿದ್ದು ನಿಜ ಎಂದು ಈ ವೇಳೆ ಹೇಳಿದರು. ಇದನ್ನೂ ಓದಿ: ಪ್ಲೀಸ್ ನನ್ನ ಹತ್ರ ಬರ್ಬೇಡಿ ಫೈಲ್ ನೋಡಲ್ಲ, ನೀವು ಅವರ ಹತ್ರನೇ ಹೋಗಿ ಪ್ಲೀಸ್- ಜಿ.ಟಿ ದೇವೇಗೌಡ

    ರಾಷ್ಟ್ರದಲ್ಲಿಯೇ ಕರ್ನಾಟಕ ರಾಜ್ಯ ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಗುರಿಯಾಗಿದೆ. ಇಂದು ಉನ್ನತ ಶಿಕ್ಷಣ ವಿಭಾಗದಲ್ಲಿ ಹೆಣ್ಣುಮಕ್ಕಳು ಕೇವಲ 25%ರಷ್ಟು ಮಾತ್ರ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಹೊರದೇಶಗಳಲ್ಲಿ 75% ಪಾಲ್ಗೋಳ್ಳುತ್ತಾರೆ. ನಮ್ಮ ಹಳ್ಳಿಗಳಲ್ಲಿನ ಹೆಣ್ಣು ಮಕ್ಕಳು ಉನ್ನತ ಶಿಕ್ಷಣದ ಪ್ರಯೋಜನ ಪಡೆಯಬೇಕು. ಗುಣಮಟ್ಟದ ಶಿಕ್ಷಣಕ್ಕಾಗಿ ರಾಜ್ಯದಲ್ಲಿರುವ ಎಲ್ಲಾ ಶಿಕ್ಷಣ ತಜ್ಞರ ಸಲಹೆ, ಸಹಕಾರದೊಂದಿಗೆ ಉತ್ತಮ ವ್ಯವಸ್ಥೆ ಜಾರಿಗೊಳಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಜಿ.ಟಿ ದೇವೇಗೌಡರಿಗೆ ಯಾವ ಖಾತೆ ಅನ್ನೋದು ಇನ್ನೆರಡು ದಿನಗಳಲ್ಲಿ ನಿರ್ಧಾರ: ಸಚಿವ ಸಾರಾ ಮಹೇಶ್

    ನಾನು ಕೇವಲ 8ನೇ ತರಗತಿ ಓದಿದರೂ ನನ್ನ ಮಕ್ಕಳಿಗೆ ಉನ್ನತ ವ್ಯಾಸಂಗ ಕಲ್ಪಿಸಿದ್ದೇನೆ. ಆದ್ದರಿಂದ ರಾಜ್ಯದ ಎಲ್ಲಾ ಮಕ್ಕಳಿಗೂ ಉನ್ನತ ಶಿಕ್ಷಣ ಕಲ್ಪಿಸುವ ಜವಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.

    https://www.youtube.com/watch?v=adScMxvbYeo

  • ಜಿ.ಟಿ ದೇವೇಗೌಡರಿಗೆ ಕೊಟ್ಟಿರುವ ಖಾತೆಯನ್ನು ಪುನರ್ ವಿಮರ್ಶಿಸಬೇಕು: ವಿಶ್ವನಾಥ್

    ಜಿ.ಟಿ ದೇವೇಗೌಡರಿಗೆ ಕೊಟ್ಟಿರುವ ಖಾತೆಯನ್ನು ಪುನರ್ ವಿಮರ್ಶಿಸಬೇಕು: ವಿಶ್ವನಾಥ್

    ಮೈಸೂರು:ಜಿಟಿ ದೇವೇಗೌಡರಿಗೆ ಕೊಟ್ಟಿರುವ ಉನ್ನತ ಶಿಕ್ಷಣ ಖಾತೆಯ ಬಗ್ಗೆ ಪುನರ್ ವಿಮರ್ಶೆ ಮಾಡಬೇಕು ಎಂದು ಜೆಡಿಎಸ್ ಶಾಸಕ ಹೆಚ್ ವಿಶ್ವನಾಥ್ ಹೇಳಿದ್ದಾರೆ.

    ಕುಮಾರಸ್ವಾಮಿಗಳು ಮೈಸೂರು ಜಿಲ್ಲೆಗೆ 2 ಮಂತ್ರಿ ಸ್ಥಾನಗಳನ್ನು ಕೊಡುವುದರ ಮೂಲಕ ಹೆಚ್ಚು ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಎರಡು ದೊಡ್ಡ ಇಲಾಖೆಗಳನ್ನೇ ಕೊಟ್ಟಿದ್ದಾರೆ. ಆದರೆ ಜಿಟಿ ದೇವೇಗೌಡರಿಗೆ ಕೊಟ್ಟಿರುವ ಉನ್ನತ ಶಿಕ್ಷಣ ಖಾತೆಯನ್ನು ಪುನರ್ ವಿಮರ್ಶೆ ಮಾಡಬೇಕಾಗಿ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು.

    ಜಿಟಿ ದೇವೇಗೌಡರು ರೈತರ, ಸಾಮಾನ್ಯರ ಜೊತೆ ಬದುಕು ಮಾಡುತ್ತಿರುವ ಮುಖಂಡರು. ಹಾಗಾಗಿ ಉನ್ನತ ಶಿಕ್ಷಣ ಅವರಿಗೆ ಸರಿಹೊಂದಲ್ಲ. ರೈತರ, ಸಾಮಾನ್ಯರ ಜೊತೆ ಇರುವಂತಹ ಇಲಾಖೆಯನ್ನು ಕೊಡುವುದು ಸೂಕ್ತ ಎಂದು ಹೇಳಿದರು.