Tag: Higher Education Minister

  • ರಾಷ್ಟ್ರೀಯಮಟ್ಟದ ಉನ್ನತ ಶಿಕ್ಷಣ ಸಚಿವರ ಸಮಾವೇಶ – ಏಳು ರಾಜ್ಯಗಳು ಭಾಗಿ

    ರಾಷ್ಟ್ರೀಯಮಟ್ಟದ ಉನ್ನತ ಶಿಕ್ಷಣ ಸಚಿವರ ಸಮಾವೇಶ – ಏಳು ರಾಜ್ಯಗಳು ಭಾಗಿ

    ಬೆಂಗಳೂರು: ವಿಶ್ವವಿದ್ಯಾಲಯ ಅನುದಾನ ಆಯೋಗವು (UGC) ಕುಲಪತಿಗಳ ನೇಮಕ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಪಟ್ಟಂತೆ ಹೊರಡಿಸಿರುವ ಕರಡು ನಿಯಮಾವಳಿಗಳ ಕುರಿತು ಚರ್ಚಿಸಲು ಫೆಬ್ರವರಿ 05ರಂದು ಬೆಂಗಳೂರಿನಲ್ಲಿ (Bengaluru) ಕರೆಯಲಾಗಿರುವ ಒಂದು ದಿನದ ಉನ್ನತ ಶಿಕ್ಷಣ ಸಚಿವರ ರಾಷ್ಟ್ರೀಯ ಮಟ್ಟದ ಸಮಾವೇಶದಲ್ಲಿ ಏಳು ರಾಜ್ಯಗಳ ಸಚಿವರು ಪಾಲ್ಗೊಳ್ಳುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ (MC Sudhakar) ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ದೇಶದ ಕೆಲವು ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಎನ್.ಡಿ.ಎ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಬಹಿರಂಗವಾಗಿ ತಮ್ಮ ವಿರೋಧವನ್ನು ವ್ಯಕ್ತಪಡಿಸಲಾರದಂತ ಸ್ಥಿತಿಯಲ್ಲಿವೆ. ಎನ್‌ಡಿಎ ಮೈತ್ರಿಕೂಟದಲ್ಲಿರುವ ಜೆಡಿಯು, ಟಿಡಿಪಿ ಹಾಗೂ ಎಲ್‌ಜೆಪಿ (ರಾಮ್ ವಿಲಾಸ್) ಪಕ್ಷಗಳು ಈಗಾಗಲೇ ಈ ಸಂಬಂಧ ಅತೃಪ್ತಿ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿರುವುದು ಬಹಿರಂಗಗೊಂಡಿದೆ. ಇದನ್ನೂ ಓದಿ: ಯೋಧರ ಪಿಂಚಣಿ ಬಾಕಿ ಉಳಿಸಿಕೊಂಡ ಕೇಂದ್ರ ಸರ್ಕಾರ – ಪಂಜಾಬ್ ಹೈಕೋರ್ಟ್ ಕೆಂಡಾಮಂಡಲ

    ದೆಹಲಿಯಲ್ಲಿ ಚುನಾವಣೆ ಇರುವುದರಿಂದ ದೆಹಲಿಯ ಉನ್ನತ ಶಿಕ್ಷಣ ಸಚಿವರು ಪಾಲ್ಗೊಳ್ಳುತ್ತಿಲ್ಲ. ಉಳಿದಂತೆ ಆತಿಥ್ಯ ವಹಿಸಿರುವ ಕರ್ನಾಟಕವೂ ಸೇರಿದಂತೆ ಜಮ್ಮು ಕಾಶ್ಮೀರ, ಹಿಮಾಚಲ್ ಪ್ರದೇಶ, ಜಾರ್ಖಂಡ್, ತೆಲಂಗಾಣ, ತಮಿಳುನಾಡು ಹಾಗೂ ಕೇರಳದ ಉನ್ನತ ಶಿಕ್ಷಣ ಸಚಿವರು ಈ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದನ್ನೂ ಓದಿ: ಏರೋ ಇಂಡಿಯಾ ಶೋ ವಿಪತ್ತು ನಿರ್ವಹಣೆಗೆ ಸಜ್ಜಾಗಲು ಡಿಸಿ ಕರೆ

    ಫೆಬ್ರವರಿ 5 ರಂದು ಬೆಳಗ್ಗೆ 10:30ಕ್ಕೆ ಈ ಸಮಾವೇಶವನ್ನು ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಸುಧಾಕರ್ ತಿಳಿಸಿದ್ದಾರೆ. ಯುಜಿಸಿ ಕರಡು ನಿಯಮಾವಳಿಗಳಿಂದ ದೇಶದ ಉನ್ನತ ಶಿಕ್ಷಣ ವ್ಯವಸ್ಥೆ ಮೇಲೆ ಕೇಂದ್ರ ಸರ್ಕಾರ ರಾಜ್ಯಗಳಿಗಿದ್ದ ಅಧಿಕಾರವನ್ನು ಮೊಟಕು ಗೊಳಿಸುವುದು ಮಾತ್ರವಲ್ಲದೆ ರಾಜ್ಯ ಸರ್ಕಾರಗಳ ಸಂವಿಧಾನಾತ್ಮಕ ಕರ್ತವ್ಯ ಮತ್ತು ಜವಾಬ್ದಾರಿಯನ್ನು ನಿಗ್ರಹಿಸ ಹೊರಟಿರುವುದು ಒಕ್ಕೂಟ ವ್ಯವಸ್ಥೆಯಲ್ಲಿ ಸರಿಯಲ್ಲ. ಇಷ್ಟೇ ಅಲ್ಲದೆ ಉನ್ನತ ಶಿಕ್ಷಣದ ಹಲವಾರು ಹಂತಗಳಲ್ಲಿ ಒತ್ತಾಯಪೂರ್ವಕವಾಗಿ ಕೆಲವು ನಿಯಮಾವಳಿಗಳನ್ನು ಹೇರಲಾಗುತ್ತಿದೆ. ಹಾಗಾಗಿ ಎಲ್ಲಾ ರಾಜ್ಯಗಳ ಒಕ್ಕೊರಲಿನ ಧ್ವನಿಯಾಗಿ ಕೇಂದ್ರಕ್ಕೆ ತಿಳಿಸಲು ಈ ಸಮಾವೇಶ ನಡೆಯುತ್ತಿದೆ ಎಂದರು. ಇದನ್ನೂ ಓದಿ: Microfinance Bill | ರಾಜ್ಯಪಾಲರ ಅಂಕಿತಕ್ಕೆ ಸುಗ್ರೀವಾಜ್ಞೆ ಬಿಲ್ – ಅನಧಿಕೃತವಾಗಿ ಕೊಟ್ಟಿದ್ದರೆ ಸಾಲ ಮನ್ನಾ

    ಸಮಾವೇಶದಲ್ಲಿ ಉನ್ನತ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದ ಧೋರಣೆಯ ಬಗ್ಗೆ ಸಮಗ್ರವಾಗಿ ಚರ್ಚಿಸಲಾಗುವುದು. ಸಮಾವೇಶದ ನಿರ್ಣಯಗಳನ್ನು ಕೇಂದ್ರ ಸರ್ಕಾರ ಹಾಗೂ ಯು.ಜಿ.ಸಿ ಗೆ ಕಳುಹಿಸಿ ಕೊಡಲಾಗುವುದು. ದೇಶದ ಒಕ್ಕೂಟ ವ್ಯವಸ್ಥೆಯನ್ನು ಬಲಗೊಳಿಸುವುದು ಅತಿ ಮುಖ್ಯವಾಗಿದೆ. ಭಾರತದ ಶೈಕ್ಷಣಿಕ ವ್ಯವಸ್ಥೆ ಅತ್ಯಂತ ಸುಭದ್ರವಾದಂತದ್ದು, ಅದನ್ನು ಯಾವುದೇ ರಾಜ್ಯಗಳೊಂದಿಗೆ ಸಮಾಲೋಚಿಸದೆ ಏಕಾಏಕಿ ಕೇಂದ್ರ ಸರ್ಕಾರ ತನ್ನ ನಿಲುವುಗಳನ್ನು ಬಲವಂತವಾಗಿ ಹೇರುತ್ತಿರುವುದು ಒಕ್ಕೂಟ ವ್ಯವಸ್ಥೆಯಲ್ಲಿ ಸೂಕ್ತವಲ್ಲ. ಇದೊಂದು ಸಂವಿಧಾನ ವಿರೋಧಿ ಧೋರಣೆ ಎಂದು ಕಿಡಿಕಾರಿದರು. ಇದನ್ನೂ ಓದಿ:  ಮೈಕ್ರೋ ಫೈನಾನ್ಸ್‌ನವರು ರೌಡಿಗಳನ್ನಿಟ್ಟುಕೊಂಡು ಹಣ ವಸೂಲಿ ಮಾಡ್ತಿದ್ದಾರೆ: ಡಿಕೆಶಿ

    ಸಮಾವೇಶದಲ್ಲಿ ಉನ್ನತ ಶಿಕ್ಷಣ ಸಚಿವರ ಅಭಿಪ್ರಾಯವನ್ನು ಕ್ರೂಡೀಕರಿಸಿ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರ ಯು.ಜಿ.ಸಿ ಮಾಡಿರುವ ಮಾರ್ಪಾಡುಗಳನ್ನು ಪುನರ್ ಪರಿಶೀಲಿಸದಿದ್ದರೆ ಮುಂದೆ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದರ ಬಗ್ಗೆಯೂ ಚರ್ಚಿಸಲಾಗುವುದು ಎಂದು ಸುಧಾಕರ್ ತಿಳಿಸಿದರು. ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಸೇರಿ ಕೈ ಸಾಲಭಾದೆ – ವ್ಯಕ್ತಿ ಮನೆಯಲ್ಲೇ ನೇಣಿಗೆ ಶರಣು

  • ರಾಷ್ಟ್ರೀಯ ಶಿಕ್ಷಣ ನೀತಿ: ಕಾಂಗ್ರೆಸ್ ವಿರುದ್ಧ ಅಶ್ವತ್ಥನಾರಾಯಣ ಕಿಡಿ

    ರಾಷ್ಟ್ರೀಯ ಶಿಕ್ಷಣ ನೀತಿ: ಕಾಂಗ್ರೆಸ್ ವಿರುದ್ಧ ಅಶ್ವತ್ಥನಾರಾಯಣ ಕಿಡಿ

    ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಕಾಂಗ್ರೆಸ್ ಪಕ್ಷ ದ್ವಂದ್ವ ನೀತಿ ಅನುಸರಿಸುವ ಮೂಲಕ ರಾಜ್ಯದ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಗಂಭೀರ ಆರೋಪ ಮಾಡಿದರು.

    ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಬೆಂಗಳೂರಿನಲ್ಲಿಂದು ಬಿಜೆಪಿ ಕೇಂದ್ರ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ರಾಜ್ಯಕ್ಕೆ ನೂತನ ಶಿಕ್ಷಣ ನೀತಿ ಅವಶ್ಯಕತೆ ಇಲ್ಲ, ಇದರ ಜಾರಿಗೆ ಬಿಡಲ್ಲ: ಡಿಕೆಶಿ ಎಚ್ಚರಿಕೆ

    ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಆತುರಾತುರವಾಗಿ ಜಾರಿ ಮಾಡಿಲ್ಲ. ಸಾಕಷ್ಟು ಪ್ರಕ್ರಿಯೆ ನಡೆದಿದೆ. ಅಪಾರ ಸಿದ್ಧತೆ ಮಾಡಿಕೊಂಡು ಜಾರಿಗೆ ತರಲಾಗಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಹೊಸ ಶಿಕ್ಷಣ ನೀತಿಯ ಬಗ್ಗೆ ಎಲ್ಲ ಪ್ರಕ್ರಿಯೆಗಳು ಶುರುವಾದವು. 2015ರಿಂದ ಶುರುವಾದ ಈ ಪ್ರಕ್ರಿಯೆಗಳ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವ ಪಕ್ಷದ ಸರ್ಕಾರವಿತ್ತು? ಯಾರು ಮುಖ್ಯಮಂತ್ರಿ ಆಗಿದ್ದರು ಎಂದು ಜನರಿಗೆ ಗೊತ್ತಿದೆ ಎಂದು ಸಿದ್ದರಾಮಯ್ಯರನ್ನು ಕುಟುಕಿದರು. ಇದನ್ನೂ ಓದಿ: ಪಂಚಮಸಾಲಿ 2ಎ ಮೀಸಲಾತಿ- ಸದನದಲ್ಲಿ ಸಿಎಂ ಉತ್ತರ

    ಅಂದು ದೇಶದ 2.50 ಲಕ್ಷ ಗ್ರಾಮ ಪಂಚಾಯಿತಿಗಳ ಜತೆ ಸಂವಹನ ನಡೆಸಲಾಯಿತು. ರಾಜ್ಯದಲ್ಲೂ ಈ ಪ್ರಕ್ರಿಯೆ ನಡೆಯಿತು. ಈ ಎಲ್ಲಾ ಮಹತ್ವದ ಪ್ರಕ್ರಿಯೆಗಳಲ್ಲೂ ಅಂದಿನ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಸಕ್ರಿಯವಾಗಿ ಭಾಗಿಯಾಗಿದ್ದರು. ಹಾಗಾದರೆ ಆಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಏನು ಮಾಡುತ್ತಿದ್ದರು? ಇವರಿಗೆ ಈ ವಿಚಾರ ಗೊತ್ತಿರಲಿಲ್ಲವೇ? ಅವರದೇ ಸರ್ಕಾರ ಏನೆಲ್ಲ ಸಲಹೆಗಳನ್ನು ಕೊಟ್ಟಿತ್ತು ಎಂಬುದನ್ನು ಒಮ್ಮೆ ಕಣ್ತೆರೆದು ನೋಡಲಿ ಎಂದು ಅಶ್ವತ್ಥನಾರಾಯಣ ಹೇಳಿದರು.

    ರಾಷ್ಟ್ರೀಯ ಶಿಕ್ಷಣ ನೀತಿಯ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಬಿಜೆಪಿ ಅಭಿವೃದ್ಧಿಪರ ವಿಚಾರದಲ್ಲಿ ರಾಜಕಾರಣ ಮಾಡಲ್ಲ ಎಂದ ಅವರು, ಪ್ರತಿಪಕ್ಷವಾಗಿ ಕಾಂಗ್ರೆಸ್ ಟೀಕೆ-ಟಿಪ್ಪಣಿ ಮಾಡುತ್ತಿದೆ. ಸರ್ಕಾರಕ್ಕೆ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದರು.

    ವಿಚಾರ ಸಂಕಿರಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ನಾಗೇಶ್, ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಮಿತಿ ಸದಸ್ಯ .ಎಂ.ಕೆ.ಶ್ರೀಧರ್, ಶಿಕ್ಷಣ ತಜ್ಞ ಗುರುರಾಜ ಕರ್ಜಗಿ, ಸಂಸದ ಪಿ.ಸಿ.ಮೋಹನ್, ಬಿಜೆಪಿ ಸೆಂಟ್ರಲ್ ಘಟಕದ ಅಧ್ಯಕ್ಷ ಮಂಜುನಾಥ ಹಾಜರಿದ್ದರು.

  • ಹುಬ್ಬಳ್ಳಿ ಜವಳಿ ಮಾರ್ಕೆಟ್‍ನಲ್ಲಿ ಜಿಟಿಡಿ ಶಾಪಿಂಗ್

    ಹುಬ್ಬಳ್ಳಿ ಜವಳಿ ಮಾರ್ಕೆಟ್‍ನಲ್ಲಿ ಜಿಟಿಡಿ ಶಾಪಿಂಗ್

    ಹುಬ್ಬಳ್ಳಿ: ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ವಾಣಿಜ್ಯ ನಗರಿ ಹುಬ್ಬಳ್ಳಿಯ ಜವಳಿ ಮಾರ್ಕೆಟ್ ನಲ್ಲಿ ಶಾಪಿಂಗ್ ಮಾಡುವ ಮೂಲಕ ಜನರ ಅಚ್ಚರಿಗೆ ಕಾರಣರಾಗಿದ್ದಾರೆ.

    ಹೌದು. ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಸಚಿವರು, ನೇರವಾಗಿ ಜವಳಿ ಮಾರ್ಕೆಟ್ ಗೆ ಭೇಟಿ ನೀಡಿದ್ದಾರೆ. ಈ ವೇಳೆ ಜವಳಿ ಮಾರ್ಕೆಟ್ ಸಾಲಿನಲ್ಲಿ ಒಂದು ಬಟ್ಟೆ ಅಂಗಡಿಗೆ ತೆರಳಿ ಪಂಚೆಗಳನ್ನು ಖರೀದಿ ಮಾಡಿದ್ದಾರೆ.

    ನಾಳೆ ಬೆಳಗಾವಿ ನಗರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೋಗಲು ಹುಬ್ಬಳ್ಳಿಗೆ ಆಗಮಿಸಿದ್ದ ಸಚಿವರು ಹಾಗೆ ಏಕಾಏಕಿ ಮಾರ್ಕೆಟ್ ಹೋಗೆ ಪಂಚೆ ಖರೀದಿ ಮಾಡಿದ್ದಾರೆ. ಇನ್ನು ಜನರು ನೂತನ ಸಚಿವರನ್ನು ಮಾರ್ಕೆಟ್ ನಲ್ಲಿ ಕಂಡು ಖುಷಿ ಪಟ್ಟು ಮಾತನಾಡಿಸಿದ್ದಾರೆ.

    ಸಮ್ಮಿಶ್ರ ಸರ್ಕಾರದಲ್ಲಿ ಉನ್ನತ ಶಿಕ್ಷಣ ಖಾತೆ ಬೇಡ ದೇವೇಗೌಡರು ನಿರಾಕರಿಸಿದ್ದರು. ಆದರೆ ಸಿಎಂ ಕುಮಾರಸ್ವಾಮಿ ಅವರು ಜಿಟಿ ದೇವೇಗೌಡ ಅವರ ಮನವೊಲಿಸಲು ಯಶಸ್ವಿಯಾಗಿದ್ದರು. ಬಳಿಕ ಜೂನ್ 23 ರಂದು ಸಚಿವ ಸ್ಥಾನ ಒಪ್ಪಿಕೊಂಡ ಜಿಟಿಡಿ ವಿಧಾನಸೌದಲ್ಲಿ ತಮ್ಮ ಕಚೇರಿಯಲ್ಲಿ ಪೂಜೆ ಮಾಡಿ ಬಳಿಕ ಕಾರ್ಯಾರಂಭ ಮಾಡಿದ್ದರು.