Tag: Hijab Ban

  • ಸಿದ್ದರಾಮಯ್ಯ ಎರಡನೇ ಟಿಪ್ಪು ಸುಲ್ತಾನ ಆಗ್ತಿದ್ದಾರೆ: ಯತ್ನಾಳ್ ಕಿಡಿ

    ಸಿದ್ದರಾಮಯ್ಯ ಎರಡನೇ ಟಿಪ್ಪು ಸುಲ್ತಾನ ಆಗ್ತಿದ್ದಾರೆ: ಯತ್ನಾಳ್ ಕಿಡಿ

    – ಕೇಂದ್ರಕ್ಕೆ ಹೋಗಲ್ಲ ಎಂದು ಶಾಸಕರು ಸ್ಪಷ್ಟನೆ

    ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಎರಡನೇ ಟಿಪ್ಪು ಸುಲ್ತಾನ ಆಗುತ್ತಿದ್ದಾರೆ. ಹಿಜಬ್ ನಿಷೇಧ (Hijab Ban) ಹಿಂತೆಗೆದುಕೊಳ್ಳುವುದು ಸೂಕ್ತ ಅಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ತಿಳಿಸಿದ್ದಾರೆ.

    ಹಿಜಬ್ ನಿಷೇಧ ವಾಪಸ್ ಪಡೆಯುವ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಹಿಜಬ್ ನಿಷೇಧವನ್ನ ಬಿಜೆಪಿ ಮಾಡಿಲ್ಲ. ಶಾಲೆಯಲ್ಲಿ ಸಮಾನತೆ ಇರಲಿ ಅಂತಾ ಬಾಬಾಸಾಹೇಬ್ ಅಂಬೇಡ್ಕರ್ ಒಂದೇ ಸಮವಸ್ತ್ರದ ಕಾಯ್ದೆ ಮಾಡಿದ್ರು. ಈ ರೀತಿ ಅವರವರಿಗೆ ತಿಳಿದಿದ್ದನ್ನ ಅವರು ಧರಿಸಿ ಬರೋದಾದ್ರೆ, ನಾಳೆ ಹಿಂದೂಗಳು ಕೇಸರಿ ಶಾಲು, ಹಣೆಗೆ ತಿಲಕ ಇಟ್ಟುಕೊಂಡು ಬರುತ್ತಾರೆ. ಇದು ಸಂಘರ್ಷಕ್ಕೆ ಹಾದಿ ಆಗುತ್ತೆ ಎಂದು ಎಚ್ಚರಿಸಿದರು.

    ಈ ರೀತಿ ಆದ್ರೆ ಶ್ರೀಮಂತರ ಒಳ್ಳೆಯ ಬಟ್ಟೆ, ಬಂಗಾರ ಹಾಕಿಕೊಂಡು ಬರುತ್ತಾರೆ. ಆಗ ಬಡ ಮಕ್ಕಳಿಗೆ ಹೇಗೆ ಅನಿಸುತ್ತೆ, ಬೇಜಾರಾಗುತ್ತೆ. ಹಿಂದೂಗಳು ಗೋಮಾಂಸ ತಿನ್ನಬಾರದು ಅಂತಾ ಇದೆ, ಅದಕ್ಕೆ ನಾವು ತಿನ್ನಲ್ಲ. ಮುಸ್ಲಿಮರು ಹಂದಿ ತಿನ್ನಬಾರದು ಅಂತಾ ಇದೆ, ಅದಕ್ಕೆ ಅವರು ತಿನ್ನಲ್ಲ. ತಿನ್ನುವುದರ ಬಗ್ಗೆ ಯಾರೂ ಏನೂ ಹೇಳಿಲ್ಲ. ಒಟ್ಟಿನಲ್ಲಿ ಲೋಕಸಭಾ ಚುನಾವಣೆ (Loksabha Election) ಹಿನ್ನೆಲೆಯಲ್ಲಿ ಮುಸ್ಲಿಮರ ಪುಷ್ಟೀಕರಣಕ್ಕೆ ಸಿದ್ದರಾಮಯ್ಯ ನಿಂತಿದ್ದಾರೆ. ಲೋಕಸಭೆಯಲ್ಲಿ ಅವರೆಲ್ಲ ಇವರಿಗೆ ಮತ ಚಲಾಯಿಸ್ತಾರೆ ಎಂದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ನಾನು ಲೋಕಸಭೆಯಲ್ಲಿ ಸ್ಪರ್ಧಿಸುತ್ತಿಲ್ಲ. ಬಾಗಲಕೋಟೆಯಿಂದ ನಾನೇಕೆ ಸ್ಪರ್ಧೆ ಮಾಡಲಿ. ಅಲ್ಲಿ ಹಾಲಿ ಗದ್ದಿಗೌಡ್ರು ಇದ್ದಾರೆ, ಅನೇಕ ಸಮರ್ಥರು ಇದ್ದಾರೆ. ಬೀದರ್‍ನಿಂದ ಕೂಡ ಸ್ಪರ್ಧೆಗೆ ಇಳಿಯಲು ಕೆಲವರು ಮನವಿ ಮಾಡಲು ಬಂದಿದ್ದರು. ಅಲ್ಲೂ ಕೂಡ ಅನೇಕ ಸಮರ್ಥರಿದ್ದಾರೆ. ನಾನು ಇಲ್ಲಿಯೇ ರಾಜ್ಯದಲ್ಲಿಯೇ ಆರಾಮಾಗಿ ಇದ್ದೇನೆ. ಕೇಂದ್ರಕ್ಕೆ ಹೋಗುವ ಅವಶ್ಯಕತೆ ನನಗಿಲ್ಲ ಎಂದು ಸ್ಪಷ್ಟನೆ ನೀಡಿದರು.

  • ಹಿಜಬ್‌ ವಿವಾದ – ಇಂದು ಸುಪ್ರೀಂ ತೀರ್ಪು ಪ್ರಕಟ

    ಹಿಜಬ್‌ ವಿವಾದ – ಇಂದು ಸುಪ್ರೀಂ ತೀರ್ಪು ಪ್ರಕಟ

    ನವದೆಹಲಿ: ಜಗತ್ತಿನಾದ್ಯಂತ ಸದ್ದು ಮಾಡಿದ್ದ ಕರ್ನಾಟಕದ ಹಿಜಬ್(Hijab) ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್(Supreme Court ) ಗುರುವಾರ ಮಹತ್ವದ ತೀರ್ಪು ಪ್ರಕಟಿಸಲಿದೆ.

    ಶಾಲೆ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಮೂರು ವಾರಗಳ ಹಿಂದೆ ತೀರ್ಪನ್ನು ಕಾಯ್ದಿರಿಸಿತ್ತು.

    ನ್ಯಾಯಮೂರ್ತಿ ಹೇಮಂತ್ ಗುಪ್ತಾ ಇದೇ 16ರಂದು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಪ್ರೀಂಕೋರ್ಟ್ ಹಿಜಬ್ ವಿವಾದ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಲಿದೆ.

    ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಿಸಿದ ರಾಜ್ಯ ಸರ್ಕಾರದ ನಿರ್ಧಾರ ಸರಿಯೋ? ತಪ್ಪೋ? ಎಂಬುದನ್ನು ಪ್ರಕಟಿಸಲಿದೆ. ಸೆಪ್ಟೆಂಬರ್ 22ರವರೆಗೂ ನಿರಂತರವಾಗಿ 10 ದಿನ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧೂಲಿಯಾ ಅವರಿದ್ದ ಪೀಠ ವಾದ- ಪ್ರತಿವಾದ ಆಲಿಸಿತ್ತು.

    ಸರ್ಕಾರದ ಪರ ವಾದ ಏನು?
    ಶಾಲೆಗಳಲ್ಲಿ ಧರ್ಮದ ಆಧಾರದ ಮೇಲೆ ವರ್ಗೀಕರಣ ಮಾಡಲಾಗುವುದಿಲ್ಲ. ಶಾಲೆ ಒಂದು ಸುರಕ್ಷಿತ ಸಂಸ್ಥೆ, ಇಲ್ಲಿ ಎಲ್ಲರೂ ಸಮವಸ್ತ್ರ ಧರಿಸಬೇಕು. ಯಾವುದೇ ಧರ್ಮಾಚರಣೆ ಕಾನೂನಿನ ಮಿತಿಯಲ್ಲಿರಬೇಕು.

    ರಾಜ್ಯ ಸರ್ಕಾರದ ಆದೇಶ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿಲ್ಲ. ಯಾವುದೇ ಸಮುದಾಯದ ನಿರ್ದಿಷ್ಟ ಉಡುಪು ಧರಿಸಲು ನಿಯಂತ್ರಣ ಹೇರುವುದಿಲ್ಲ. ಬದಲಿಗೆ ಸಮವಸ್ತ್ರದ ಅಗತ್ಯದ ಬಗ್ಗೆ ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದೆ.

    ಹಿಜಬ್ ವಿವಾದದ ಹಿಂದೆ ದೊಡ್ಡ ಷಡ್ಯಂತ್ರವಿದೆ. ಪಿಎಫ್‍ಐ ಸೇರಿ ಹಲವು ಸಂಘಟನೆಗಳು ಇದರಲ್ಲಿವೆ. ಕುರಾನ್‍ನಲ್ಲಿ ಹಿಜಬ್ ಕಡ್ಡಾಯ ಎಂದು ತಿಳಿಸಿಲ್ಲ. ಹಲವು ದೇಶಗಳಲ್ಲಿ ಮುಸ್ಲಿಂ ಮಹಿಳೆಯರು ಹಿಜಬ್ ಧರಿಸುತ್ತಿಲ್ಲ. ಇದನ್ನೂ ಓದಿ: ನಿದ್ರೆ ಮಾಡುತ್ತಾ ಜನರನ್ನು ಸಾಲದ ಶೂಲಕ್ಕೇರಿಸಿದ್ದು ಸಿದ್ದರಾಮಯ್ಯ – BJP ತಿರುಗೇಟು

    ಅರ್ಜಿದಾರರ ವಾದ ಏನು?
    ಸರ್ಕಾರದ ಆದೇಶ ನಿರ್ದಿಷ್ಟ ಶಿರವಸ್ತ್ರ ಗುರಿಯಾಗಿಸಿಕೊಂಡಿದೆ. ಇದನ್ನು ಧರ್ಮನಿರಪೇಕ್ಷ ನೆಲೆಯಲ್ಲಿ ನೋಡಲಾಗದು. ಹಿಜಬ್ ಹೋರಾಟದ ಹಿಂದೆ ಪಿಎಫ್‍ಐ ಕೈವಾಡ ಎನ್ನುತ್ತಿದ್ದಾರೆ. ಆದರೆ ಸರ್ಕಾರದ ದಾಖಲೆಯಲ್ಲಿ ಯಾವುದೇ ಉಲ್ಲೇಖವಿಲ್ಲ. ಆದರೂ ಸಾಲಿಸಿಟರ್ ಜನರಲ್ ಪಿಎಫ್‍ಐ ವಿಚಾರ ಪ್ರಸ್ತಾಪಿಸಿದ್ದಾರೆ. ಹೀಗಾಗಿ ಮಾಧ್ಯಮಗಳು ಅದನ್ನು ಎತ್ತಿ ತೋರಿಸಿವೆ .

    ಸಾಲಿಸಿಟರ್ ಜನರಲ್ ಮೆಹ್ತಾ ಅವರ ಈ ವಾದ ಪ್ರಸುತ್ತವಲ್ಲ. ಧಾರ್ಮಿಕ ನಂಬಿಕೆಯುಳ್ಳವರಿಗೆ ಹಿಜಬ್ ಅತ್ಯಗತ್ಯ. ಅಂತಿಮ ತೀರ್ಮಾನಕ್ಕೆ ಬರುವ ಮುನ್ನ ಮೂಲಭೂತ ಹಕ್ಕು ಪರಿಶೀಲಿಸಿ.

    Live Tv
    [brid partner=56869869 player=32851 video=960834 autoplay=true]

  • ಹಿಜಬ್ ನಿಷೇಧ: ಅರ್ಜಿದಾರರ ವಿರುದ್ಧ ಸುಪ್ರೀಂಕೋರ್ಟ್ ಗರಂ – ರಾಜ್ಯ ಸರ್ಕಾರ, ಅರ್ಜಿದಾರರಿಗೆ ನೋಟಿಸ್

    ಹಿಜಬ್ ನಿಷೇಧ: ಅರ್ಜಿದಾರರ ವಿರುದ್ಧ ಸುಪ್ರೀಂಕೋರ್ಟ್ ಗರಂ – ರಾಜ್ಯ ಸರ್ಕಾರ, ಅರ್ಜಿದಾರರಿಗೆ ನೋಟಿಸ್

    ನವದೆಹಲಿ: ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ರಾಜ್ಯ ಸರ್ಕಾರ ಮತ್ತು ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಿದೆ. ವಿಚಾರಣೆ ಮುಂದೂಡಲು ನಿರಾಕರಿಸಿದ ಸುಪ್ರೀಂಕೋರ್ಟ್ ಸೆಪ್ಟೆಂಬರ್ 5 ಕ್ಕೆ ಅಂತಿಮ ವೇಳೆ ವಿಚಾರಣೆಗೆ ದಿನಾಂಕ ನಿಗದಿ ಮಾಡಿದೆ.

    ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು. ನ್ಯಾ. ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಅರ್ಜಿ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿ ವಿಚಾರಣೆ ಮುಂದೂಡುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಇದನ್ನೂ ಓದಿ: ಭಾರೀ ಮಳೆಗೆ ಹೆದ್ದಾರಿಯಲ್ಲಿ ನಿಂತ ನೀರು- ಸರಿಪಡಿಸಲು ಸೂಚನೆ: ಬೊಮ್ಮಾಯಿ

    ಈ ಸಂದರ್ಭದಲ್ಲಿ ಮಧ್ಯಪ್ರದೇಶ ಮಾಡಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅರ್ಜಿದಾರರು ಈ ಹಿಂದೆ ಆರು ಬಾರಿ ತುರ್ತು ವಿಚಾರಣೆಗೆ ಮನವಿ ಮಾಡಿದ್ದರು. ಈಗ ವಿಚಾರಣೆ ವೇಳೆ ಮುಂದೂಡಿಕೆಗೆ ಮನವಿ ಮಾಡುತ್ತಿದ್ದಾರೆ. ಇದು ಸರಿಯಲ್ಲ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.

    ಈ ವೇಳೆ ಅರ್ಜಿದಾರರ ವಿರುದ್ಧ ಗರಂ ಆದ ನ್ಯಾ. ಹೇಮಂತ್ ಗುಪ್ತಾ, ನಿಮ್ಮ ಅನುಕೂಲಕ್ಕೆ ತಕ್ಕಂತೆ ವಿಚಾರಣೆ ನಡೆಸಲು ಸಾಧ್ಯವಿಲ್ಲ, ಇದು ಫೋರಂ ಶಾಪಿಂಗ್ ಅಲ್ಲ. ಹೀಗಾಗಿ ನೀವು ಕೇಳಿದ ಸಮಯದಲ್ಲಿ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಸೆಪ್ಟೆಂಬರ್ 5 ರಂದು ವಿಚಾರಣೆ ನಡೆಸಲಾಗುವುದು. ಈ ಬಗ್ಗೆ ಉತ್ತರಿಸಬೇಕು ಎಂದು ಸೂಚಿಸಿ ರಾಜ್ಯ ಸರ್ಕಾರ ಮತ್ತು ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಿದರು.

    Live Tv
    [brid partner=56869869 player=32851 video=960834 autoplay=true]

  • ಹಿಜಬ್ ನಿಷೇಧಕ್ಕೆ ತಡೆ ಕೋರಿ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂಕೋರ್ಟ್

    ಹಿಜಬ್ ನಿಷೇಧಕ್ಕೆ ತಡೆ ಕೋರಿ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂಕೋರ್ಟ್

    ನವದೆಹಲಿ : ಶಾಲೆ ಕಾಲೇಜು‌ಗಳಲ್ಲಿ ಹಿಜಬ್, ಕೇಸರಿ ಶಾಲ್ ಸಹಿತ ಧಾರ್ಮಿಕ ವಸ್ತ್ರಗಳನ್ನು ನಿಷೇಧಿಸಿ ಹೊರಡಿಸಿದ ಹೈಕೋರ್ಟ್ ಮಧ್ಯಂತರ ಆದೇಶಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಹೈಕೋರ್ಟ್ ನಲ್ಲಿ ವಿಚಾರಣೆ ಮುಂದುವರಿಯಲಿ ಎಂದು ಅಭಿಪ್ರಾಯಪಟ್ಟಿದೆ.

    ಗುರುವಾರ ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನೆ ಮಾಡಿ ಉಡುಪಿ ಮೂಲದ ಆಯೇಷಾ ಮತ್ತು ಇತರೆ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದರು. ಹೈಕೋರ್ಟ್ ಆದೇಶ ಎಲ್ಲ ಸಮುದಾಯದ ಆಚರಣೆಗೆ ದಕ್ಕೆ ತರಲಿದ್ದು ಆ ಆದೇಶಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ಹಿಜಬ್- ಕೇಸರಿ ಶಾಲು ವಿವಾದ- ಹೋರಾಟಕ್ಕಾಗಿಯೇ ವಿದ್ಯಾರ್ಥಿಗಳು ಟ್ವಿಟ್ಟರ್ ಖಾತೆ ಓಪನ್..!

    ನಿನ್ನೆ ಸಂಜೆ ಸಲ್ಲಿಕೆಯಾಗಿದ್ದ ಈ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಇಂದು ಹಿರಿಯ ವಕೀಲ ದೇವದತ್ ಕಾಮತ್ ಮುಖ್ಯ ನ್ಯಾ. ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠದ ಮುಂದೆ ಮನವಿ ಮಾಡಿದರು. ಆದರೆ ತುರ್ತು ವಿಚಾರಣೆ ನಡೆಸಲು ಪೀಠ ನಿರಾಕರಿಸಿತು. ಇದನ್ನೂ ಓದಿ: ಪವರ್ ಫುಲ್ ಜೇಮ್ಸ್ ಟೀಸರ್ ಔಟ್ – ಅಪ್ಪು ಎಂಟ್ರಿಗೆ ಅಭಿಮಾನಿಗಳು ಫಿದಾ

    ವಿಚಾರಣೆ ವೇಳೆ ವಾದ ಮಂಡಿಸಿದ ದೇವದತ್ ಕಾಮತ್, ಹೈಕೋರ್ಟ್ ಆದೇಶ ಕೇವಲ ಮುಸ್ಲಿಂ ಮಾತ್ರವಲ್ಲದೇ ಸಿಖ್ ಸೇರಿದಂತೆ ಹಲವು ಸಮುದಾಯಗಳಿಗೆ ತೊಂದರೆಯಾಗಲಿದೆ. ಸಿಖ್ ಟರ್ಬಲ್ ಬಳಸದೇ ಶಾಲೆ ಕಾಲೇಜುಗಳಿಗೆ ಬರುವುದಿಲ್ಲ ಹೀಗಾಗಿ ಹೈಕೋರ್ಟ್ ಆದೇಶ ಸಂವಿಧಾನದ ಧಾರ್ಮಿಕ ಹಕ್ಕಿನ ಉಲ್ಲಂಘನೆಯಾಗಿದೆ ಎಂದರು. ಅಲ್ಲದೇ ಪರೀಕ್ಷೆ ಬರುತ್ತಿರುವ ಹೊತ್ತಲ್ಲಿ ಧಾರ್ಮಿಕ ವಸ್ತ್ರಗಳೊಂದಿಗೆ ಶಾಲೆ ಕಾಲೇಜು ತೆರಳಲು ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

    ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಎನ್.ವಿ ರಮಣ ಹೈಕೋರ್ಟ್ ನಲ್ಲಿ ಏನು ನಡೆಯುತ್ತಿದೆ ಎಂದು ನಾವು ಗಮನಿಸುತ್ತಿದ್ದೇವೆ, ಈ ವಿಚಾರವನ್ನು ನೀವೂ ರಾಷ್ಟ್ರ ಮಟ್ಟಕ್ಕೆ ತರಲು ಪ್ರಯತ್ನಿಸುತ್ತಿದ್ದೀರಾ? ದೇಶದ ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಹಕ್ಕುಗಳಿದೆ ನಾವು ಅದನ್ನು ರಕ್ಷಿಸುತ್ತೇವೆ ಹೈಕೋರ್ಟ್ ವಿಚಾರಣೆ ನಡೆಸಲಿ ನಾವು ಸೂಕ್ತ ಸಮಯದಲ್ಲಿ ಮಧ್ಯಪ್ರವೇಶ ಮಾಡಲಿದ್ದೇವೆ ಎಂದು ಭರವಸೆ ನೀಡಿದರು.

  • ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಹಿಜಬ್‌ ಅರ್ಜಿ ವರ್ಗಾವಣೆ

    ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಹಿಜಬ್‌ ಅರ್ಜಿ ವರ್ಗಾವಣೆ

    ಬೆಂಗಳೂರು: ಹಿಜಬ್‌ (Hijab) ಪ್ರಕರಣದ ಅರ್ಜಿ ಕರ್ನಾಟಕ ಹೈಕೋರ್ಟ್‌ನ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ.

    ಉಡುಪಿ ವಿದ್ಯಾರ್ಥಿಗಳು ಹಿಜಬ್‌ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ ನ್ಯಾ. ಕೃಷ್ಣ ದೀಕ್ಷಿತ್‌ ಅವರಿದ್ದ ಪೀಠದಲ್ಲಿ ನಡೆಯುತ್ತಿತ್ತು. ಇದನ್ನೂ ಓದಿ:  ನಾನು ಭಯ ಯಾಕೆ ಪಡಬೇಕು, ಧರ್ಮ ಪಾಲನೆ ಮಾಡಿದ್ದೇನೆ: ಮಂಡ್ಯ ವಿದ್ಯಾರ್ಥಿನಿ

    ಎರಡನೇ ದಿನ ವಿಚಾರಣೆ ಆರಂಭದಲ್ಲೇ ಇದು ಬಹಳ ದೊಡ್ಡ ವಿಚಾರ. ಮೂರು ನ್ಯಾಯಾಲಯದ ಆದೇಶ ನೋಡಿದ್ದೇವೆ. ಕೆಲವೊಂದು ಪಿಐಎಲ್ ಗಳು ದಾಖಲು ಆಗುತ್ತಿವೆ. ಆ ಅರ್ಜಿಗಳು ಕೂಡ ವಿಭಾಗೀಯ ಪೀಠಕ್ಕೆ ವಿಚಾರಣೆಗೆ ಬರುತ್ತಿವೆ ಎಂದು ನ್ಯಾ. ಕೃಷ್ಣ ದೀಕ್ಷಿತ್‌ ಹೇಳಿದರು.

    ಕೊನೆಗೆ ಈ ಪ್ರಕರಣದ ವಿಚಾರಣೆ ದೀರ್ಘವಾಗಿರುವ ಕಾರಣ ಯಾವುದೇ ಮಧ್ಯಂತರ ಆದೇಶ ನೀಡುವುದಿಲ್ಲ. ಮುಖ್ಯ ನಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಬಿಕಿನಿ, ಜೀನ್ಸ್, ಹಿಜಬ್ ಹೀಗೆ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು : ಪ್ರಿಯಾಂಕಾ ಗಾಂಧಿ