Tag: hijab row

  • ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗೆ ಹೋಗುವಂತೆ ನಾನು ಕರೆ ಕೊಡುತ್ತೇನೆ: ಯತ್ನಾಳ್‌

    ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗೆ ಹೋಗುವಂತೆ ನಾನು ಕರೆ ಕೊಡುತ್ತೇನೆ: ಯತ್ನಾಳ್‌

    ಬೆಂಗಳೂರು: ಹಿಜಬ್‌ (Hijab) ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆಗೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಕಿಡಿಕಾರಿದ್ದಾರೆ.

    ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಯತ್ನಾಳ್‌, ಸಿದ್ದರಾಮಯ್ಯನವರು ಹಿಜಬ್ ಧರಿಸಬಹುದು ಎಂದು ಹೇಳುತ್ತಾ ಯಾರು ಯಾವ ಬಟ್ಟೆಯಾದರೂ ಧರಿಸಲು ಅವಕಾಶವಿದೆ ಎಂದು ಹೇಳಿದ್ದಾರೆ. ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ನಾನು ಕರೆ ಕೊಡುತ್ತಿದ್ದೇನೆ. ಅವರಿಗಿಲ್ಲದ ಸಮವಸ್ತ್ರ ನೀತಿ ಹಿಂದೂಗಳಿಗೂ ಇಲ್ಲ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಹಿಜಬ್ ನಿಷೇಧ ಆದೇಶ ವಾಪಸ್‌ಗೆ ಇನ್ನೂ ತೀರ್ಮಾನಿಸಿಲ್ಲ- ಇಂದು ಉಲ್ಟಾ ಹೊಡೆದ್ರಾ ಸಿಎಂ?

    ಓಲೈಕೆ ರಾಜಕಾರಣಕ್ಕೇನಾದರೂ ಮತ್ತೊಂದು ಹೆಸರು ಇದ್ದರೇ ಅದು ಕಾಂಗ್ರೆಸ್ ಪಕ್ಷ. ರಾಜ್ಯಾದ್ಯಂತ ಹಿಂದೂ ವಿದ್ಯಾರ್ಥಿಗಳು ಯಾವ ಬಟ್ಟೆಯಾದರೂ ಧರಿಸಿ ಕೇಸರಿ ಶಾಲು ಸಮೇತ ತರಗತಿಗಳಲ್ಲಿ ಭಾಗವಹಿಸುತ್ತಾರೆ. ಅವರಿಗೆ ಯಾವ ಕಿರುಕುಳ ನೀಡಬಾರದು ಎಂದು ಆಗ್ರಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

    ಸಿದ್ದರಾಮಯ್ಯನವರಿಗೆ ಮಾಹಿತಿಯ ಕೊರತೆ ಇದೆ. ರಾಜ್ಯದಲ್ಲಿ ಹಿಜಬ್ ನಿಷೇಧಿಸಿ ಯಾವ ಆದೇಶವೂ ಇಲ್ಲ. ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ನೀತಿಯನ್ನು ಜಾರಿ ಮಾಡಿದ್ದು, ಸ್ಥಳೀಯ ಕಾಲೇಜುಗಳು ನಿರ್ಧಾರ ಮಾಡಬಹುದು ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಹೇಳಿದ್ದರೂ, ರಾಜಕಾರಣಕ್ಕಾಗಿ ಶಾಲಾ-ಕಾಲೇಜುಗಳ ಸಮವಸ್ತ್ರ ನೀತಿಯನ್ನೂ ಅಮಾನತು ಮಾಡುವ ಕೆಲಸವನ್ನು ಸಿದ್ದರಾಮಯ್ಯನವರು ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಹಿಜಬ್‌ ನಮ್ಮ ಹಕ್ಕು, ಇನ್ಮುಂದೆ ಅಣ್ಣ-ತಮ್ಮಂದಿರಂತೆ ಬದುಕೋಣ – ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ಮುಸ್ಕಾನ್‌

    ಹಿಜಬ್‌ ನಿಷೇಧ ಆದೇಶವನ್ನು ವಾಪಸ್‌ ಪಡೆಯಲಾಗುವುದು ಎಂದು ನಿನ್ನೆ (ಶುಕ್ರವಾರ) ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳಿದ್ದರು. ಈ ಹೇಳಿಕೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಯಿತು. ಭಾರಿ ಟೀಕೆ ಬಳಿಕ ತಮ್ಮ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹಿಜಬ್‌ ಧರಿಸುವುದನ್ನು ನಿಷೇಧಿಸಿ ಹೊರಡಿಸಿರುವ ಆದೇಶವನ್ನು ಇನ್ನೂ ವಾಪಸ್‌ ಪಡೆದಿಲ್ಲ. ಈ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

  • ಹಿಜಬ್ ಪ್ರಕರಣ: ಶಾಲಾ ವಿದ್ಯಾರ್ಥಿಗಳನ್ನು ಹೈಕೋರ್ಟ್ ಕೈದಿಗಳಿಗೆ ಹೋಲಿಸಿದೆ – ಸುಪ್ರೀಂಕೋರ್ಟ್‌ನಲ್ಲಿ 2 ಗಂಟೆ ಮಹತ್ವದ ವಿಚಾರಣೆ

    ಹಿಜಬ್ ಪ್ರಕರಣ: ಶಾಲಾ ವಿದ್ಯಾರ್ಥಿಗಳನ್ನು ಹೈಕೋರ್ಟ್ ಕೈದಿಗಳಿಗೆ ಹೋಲಿಸಿದೆ – ಸುಪ್ರೀಂಕೋರ್ಟ್‌ನಲ್ಲಿ 2 ಗಂಟೆ ಮಹತ್ವದ ವಿಚಾರಣೆ

    ನವದೆಹಲಿ: ಶಾಲಾ ವಿದ್ಯಾರ್ಥಿಗಳನ್ನು ಕರ್ನಾಟಕ ಹೈಕೋರ್ಟ್ (Karnataka High Court) ಕೈದಿಗಳಿಗೆ ಹೋಲಿಸಿದೆ. ಜೈಲಿನಲ್ಲಿ ಕೈದಿಗಳಿಗೆ ಯಾವುದೇ ಹಕ್ಕುಗಳು ಇರುವುದಿಲ್ಲ, ಅದೇ ರೀತಿ ಶಾಲೆಗಳಿಗೆ ತೆರಳಿದಾಗ ಮಕ್ಕಳು ಶಿಕ್ಷಕರ ಕಸ್ಟಡಿಯಲ್ಲಿ ಇರುತ್ತಾರೆ. ಅವರಿಗೂ ಹಕ್ಕುಗಳು ಇರುವುದಿಲ್ಲ ಎಂದು ಹೇಳಿದೆ‌. ಇದನ್ನು ಕೇಳಿ ನನಗೆ ಆಶ್ಚರ್ಯವಾಗಿದೆ. ಒಂದು ನ್ಯಾಯಾಂಗ ಸಂಸ್ಥೆಯಾಗಿ ಹೈಕೋರ್ಟ್ ಇದನ್ನೆಲ್ಲ ಹೇಗೆ ಹೇಳುತ್ತದೆ? ಎಂದು ಹಿರಿಯ ವಕೀಲ ದೇವದತ್ ಕಾಮತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ (Hijab Row) ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ದೇವದತ್ ಕಾಮತ್ ಹಲವು ಪ್ರಶ್ನೆಗಳನ್ನು ಸುಪ್ರೀಂಕೋರ್ಟ್ (Supreme Court) ಮುಂದಿಟ್ಟರು. ನ್ಯಾ. ಹೇಮಂತ್ ಗುಪ್ತಾ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ಎರಡನೇ ದಿನದ ವಿಚಾರಣೆ ನಡೆಯಿತು. ವಕೀಲ ಕಾಮತ್ ಎರಡು ಗಂಟೆಗಳ ಕಾಲ ಸುದೀರ್ಘ ವಾದ ಮಂಡಿಸಿದರು. ಇದನ್ನೂ ಓದಿ: Hijab Row: ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲ್ಲ ಎಂದ ಶಿಕ್ಷಣ ಸಚಿವರ ನಿಲುವು ಖಂಡನೀಯ: ಕ್ಯಾಂಪಸ್ ಫ್ರಂಟ್

    ಬುರ್ಖಾ ಅಲ್ಲ, ಹಿಜಬ್ ಧರಿಸುತ್ತಿದ್ದಾರೆ
    ವಿದ್ಯಾರ್ಥಿನಿಯರು ತರಗತಿಗಳಲ್ಲಿ ಧರಿಸುತ್ತಿರುವುದು ಬುರ್ಕಾ ಅಲ್ಲ, ಅವರು ಹಿಜಬ್ ಧರಿಸುತ್ತಿದ್ದಾರೆ. ಹಿಜಬ್ (Hijab) ಅಂದ್ರೆ ತಲೆಗೆ ಸುತ್ತಿಕೊಳ್ಳುವ ಒಂದು ಬಟ್ಟೆಯಾಗಿದೆ. ಇದು ಕಪ್ಪು ಸೇರಿ ಬೇರೆ ಬೇರೆ ಬಣ್ಣಗಳಲ್ಲಿ ಇರುತ್ತದೆ. ವಿದ್ಯಾರ್ಥಿನಿಯರು ಶಾಲೆಯಲ್ಲಿ ಸಮವಸ್ತ್ರ ಬಟ್ಟೆಯ ಬಣ್ಣದೇ ಹಿಜಬ್ ಧರಿಸುತ್ತಿದ್ದಾರೆ. ಅವರು ಸಮವಸ್ತ್ರ ಬಣ್ಣ ಬಿಟ್ಟು ಬೇರೆ ಬಣ್ಣದ ಬಟ್ಟೆ ಧರಿಸುತ್ತಿಲ್ವಲ್ಲ. ಇದರಲ್ಲಿ ನಿಯಮಗಳ ಉಲ್ಲಂಘನೆ ಏನಿದೆ ಎಂದು ಪ್ರಶ್ನಿಸಿದರು.

    ಹಿಜಬ್ ವಿಚಾರದಲ್ಲಿ ಸರ್ಕಾರ ತನ್ನ ಕರ್ತವ್ಯ ಮರೆತಿದೆ. ವಿದ್ಯಾರ್ಥಿನಿಯರು ಜೀನ್ಸ್ ಪ್ಯಾಂಟ್ ಹಾಕಿ ಕಾಲೇಜಿಗೆ ಬಂದಿರಲಿಲ್ಲ. ಯೂನಿಫಾರಂ ಹಾಕದೇ ಬಂದಿರಲಿಲ್ಲ. ಅಥವಾ ಬುರ್ಕಾ ಹಾಕಿ ತರಗತಿಗೆ ಹಾಜರಾಗಿರಲಿಲ್ಲ. ಕೇವಲ ಹೆಡ್ ಸ್ಕಾರ್ಫ್ ಹಾಕಿಕೊಂಡು ಬಂದಿದ್ದರು. ಇದನ್ನೇ ದೊಡ್ಡ ಅಪರಾಧವೆನ್ನುವಂತೆ ಸರ್ಕಾರ ಬಿಂಬಿಸಿದೆ. ವಿದ್ಯಾರ್ಥಿನಿಯರ ಶಿಕ್ಷಣದ ಹಕ್ಕು ಕಸಿದುಕೊಂಡಿದ್ದಾರೆ. ಸಮವಸ್ತ್ರದ ಮಾದರಿಯ ಹೆಡ್ ಸ್ಕಾಫ್ ಹಾಕಿದ್ರೆ ತಪ್ಪೇನು ಎಂದು ಕೇಳಿದರು.

    ಕೇಂದ್ರಿಯ ವಿದ್ಯಾಲಯಗಳಲ್ಲಿ ಹಿಜಬ್‌ಗೆ ಅವಕಾಶ
    ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿರುವ ಕೇಂದ್ರಿಯ ವಿದ್ಯಾಲಯಗಳಲ್ಲಿ ಹಿಜಬ್‌ಗೆ ಅವಕಾಶ ನೀಡಿದೆ. ಈವರೆಗೂ ಕೇಂದ್ರೀಯ ವಿದ್ಯಾನಿಲಯಗಳಲ್ಲಿ ನಿಯಮ ಬದಲಿಸಿಲ್ಲ. ಸಿಖ್‌ರಿಗೆ ಸಮವಸ್ತ್ರದ ಬಣ್ಣ ಟರ್ಬೈನ್‌ಗೆ ಅವಕಾಶ ನೀಡಿದೆ. ಅದೇ ರೀತಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸಮವಸ್ತ್ರ ಬಣ್ಣದ ಹಿಜಬ್ ಧರಿಸಲು ಅವಕಾಶ ನೀಡಿದೆ. ರಾಜ್ಯಗಳಲ್ಲಿ ಮಾತ್ರ ಹಿಜಬ್‌ಗೆ ಅವಕಾಶ ಯಾಕಿಲ್ಲ ಎಂದರು. ಇದನ್ನೂ ಓದಿ: Hijab Row: ಅನ್ಯ ಧರ್ಮೀಯರು ಜಾತ್ರೆಯಲ್ಲಿ ವ್ಯಾಪಾರ ಮಾಡಬಾರದು – ಕಾಪು ಮಾರಿಗುಡಿಗೆ ಪತ್ರ

    ಇದಕ್ಕೆ ಪೂರಕವಾಗಿ ಹಳೆ ಸುಪ್ರೀಂಕೋರ್ಟ್ ಕೋರ್ಟ್ ಆದೇಶವನ್ನು ಉಲ್ಲೇಖಿಸಿದ ಕಾಮತ್, ಬಿಜೋಯ್ ಇಮ್ಯಾನುವೆಲ್ ಪ್ರಕರಣದಲ್ಲಿ ವಿದ್ಯಾರ್ಥಿಗಳು ಧರ್ಮವನ್ನು ಮನೆಯಲ್ಲಿಯೇ ಬಿಟ್ಟು ಶಾಲೆಗೆ ಹೋಗಬೇಕು ಎಂಬ ವಾದವನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡಲು ಇಷ್ಟಪಡದ ಬಗ್ಗೆ ವಿಚಾರಣೆ ನಡೆಸಿದ್ದ ಕೋರ್ಟ್ ಈ ಆದೇಶ ನೀಡಿತ್ತು. ರಾಷ್ಟ್ರಗೀತೆ ಹಾಡದಿದ್ದರೇ ದೇಶದ್ರೋಹವಲ್ಲ, ಆದರೆ ರಾಷ್ಟ್ರಗೀತೆಯ ವೇಳೆ ಎದ್ದು ನಿಲ್ಲಬೇಕು ಎಂದು ಕೋರ್ಟ್ ಹೇಳಿತ್ತು. ಈ ಆದೇಶ ಪ್ರಕಾರ ಧಾರ್ಮಿಕ ನಂಬಿಕೆಗಳನ್ನು ಶಾಲೆಯಲ್ಲಿ ಪಾಲಿಸಬಹುದು. ಈ ಆದೇಶದ ಅನ್ವಯ ಶಾಲೆಯಲ್ಲಿ ವಿದ್ಯಾರ್ಥಿನಿಯರು ಧಾರ್ಮಿಕ ನಂಬಿಕೆ ಪಾಲಿಸಬಹುದು ಎಂದರು.

    ದಕ್ಷಿಣ ಆಫ್ರಿಕಾ ಕೋರ್ಟ್ ಮೂಗುತಿಗೆ ಅವಕಾಶ ಕೊಟ್ಟಿತ್ತು
    ದಕ್ಷಿಣ ಆಫ್ರಿಕಾದ ಕೋರ್ಟ್ ಆದೇಶವನ್ನು ಉಲ್ಲೇಖಿಸಿ, ಶಾಲಾ ನಿಯಮಗಳಿಗೆ ವಿರುದ್ಧವಾಗಿ ಶಾಲೆಯಲ್ಲಿ ಮೂಗುತಿ ಧರಿಸಲು ತಮಿಳು ಹಿಂದೂ ವಿದ್ಯಾರ್ಥಿನಿಗೆ ದಕ್ಷಿಣ ಆಫ್ರಿಕಾದಲ್ಲಿ ನಿರಾಕರಿಸಲಾಗಿತ್ತು. ಆ ವಿದ್ಯಾರ್ಥಿನಿ ಕೋರ್ಟ್ ಮೆಟ್ಟಿಲೇರಿದ್ದಳು. ಆಕೆಗೆ ದಕ್ಷಿಣ ಆಫ್ರಿಕಾದ ಸಂವಿಧಾನದ ಪ್ರಕಾರ ಮೂಗುತಿ ಧರಿಸಲು ಕೋರ್ಟ್ ಅವಕಾಶ ನೀಡಿತು. ಅಲ್ಲದೆ ಅಮೆರಿಕಾ, ಕೆನಡಾ ಸೇರಿದಂತೆ ಹಲವು ದೇಶದ ಪೂರಕ ಆದೇಶಗಳನ್ನು ಪ್ರಸುತ್ತ ಪಡಿಸಿದರು.

    ಸಾಮಾನ್ಯವಾಗಿ ಮಹಿಳೆಯರು ಸ್ಕಾಫ್ ಹಾಕಿಕೊಳ್ಳುತ್ತಾರೆ ಈ ರೀತಿಯ ಸಮಸ್ಯೆಗಳು ಎದುರಾದಾಗ ನ್ಯಾಯಾಲಯವು ಹೇಗೆ ವ್ಯವಹರಿಸುತ್ತದೆ ಎಂಬುದಕ್ಕೆ ಸ್ಪಷ್ಟವಾದ ಆದೇಶಗಳಿದೆ. ಇದು ಸಮುದಾಯದ ನಂಬಿಕೆಯಾಗಿದ್ದರೆ, ಒಬ್ಬ ಜಾತ್ಯತೀತ ನ್ಯಾಯಾಧೀಶರು ನಂಬಿಕೆಯನ್ನು ಒಪ್ಪಿಕೊಳ್ಳಲು ಬದ್ಧರಾಗಿರುತ್ತಾರೆ. ಅವರಿಗೆ ಈ ಬಗ್ಗೆ ತೀರ್ಪು ನೀಡುವ ಯಾವುದೇ ಹಕ್ಕಿಲ್ಲ.

    ಬಿಂದಿ, ಮೂಗುತಿ ಕೂಡಾ ಒಂದು ಧಾರ್ಮಿಕ ಗುರುತು. ಮಹಿಳೆಯರು ಉತ್ತಮ ಸದ್ಗುಣಗಳನ್ನು ವೃದ್ಧಿಪಡಿಸಲು ಮತ್ತು ಸಮೃದ್ಧಿ ತರಲು ಮೂಗುತಿಯನ್ನು ಧರಿಸುತ್ತಾರೆ ಎನ್ನುವ ಧಾರ್ಮಿಕ ನಂಬಿಕೆಗಳಿವೆ. ಈ‌ ನಂಬಿಕೆ ಸರಿ ತಪ್ಪು ಎನ್ನುವುದು ಬೇರೆ ಚರ್ಚೆ. ಅದೇ ರೀತಿ ಹಿಜಬ್ ಕೂಡಾ ಒಂದು ಧಾರ್ಮಿಕ ನಂಬಿಕೆಯಾಗಿದೆ.

    ಓಲೆ, ಮೂಗುತಿ ಧಾರ್ಮಿಕತೆಯ ಭಾಗವೇ?
    ದೇವದತ್ ಕಾಮತ್ ವಾದದ ವೇಳೆ ಮಧ್ಯಪ್ರದೇಶ ಮಾಡಿದ ನ್ಯಾ. ಹೇಮಂತ್ ಗುಪ್ತಾ, ಭಾರತ ಮಾತ್ರವಲ್ಲ ಪ್ರಪಂಚದಾದ್ಯಂತ ಮಹಿಳೆಯರು ಇಯರ್ ರಿಂಗ್ ಧರಿಸುತ್ತಾರೆ, ಮೂಗುತಿಯನ್ನು ಸಹ ಧರಿಸುತ್ತಾರೆ. ಆದರೆ ಇದು ಧಾರ್ಮಿಕ ಭಾಗವೇ? ನನಗೆ ತಿಳಿದ ಮಟ್ಟಿಗೆ ಮೂಗುತಿ ಧಾರ್ಮಿಕ ನಂಬಿಕೆಯ ಭಾಗವಲ್ಲ ಇದು ಫ್ಯಾಷನ್ ಆಗಿ ಬದಲಾಗಿದೆ ಎಂದು ಪ್ರಶ್ನಿಸಿದರು‌. ಇದನ್ನೂ ಓದಿ: Hijab Row: ನಾವು ಯಾವ ದೇಶದಲ್ಲಿ ಇರುತ್ತೇವೆಯೋ ಆ ದೇಶದ ನಿಯಮಗಳನ್ನು ಪಾಲಿಸಬೇಕು: ಅಬ್ದುಲ್ ಖಾದರ್ ನಡುಕಟ್ಟಿನ್

    ಇದಕ್ಕೆ ಪ್ರತಿಯಾಗಿ ಮತ್ತೆ ವಾದ ಮಂಡಿಸಿದ ದೇವದತ್ ಕಾಮತ್, ವಿದ್ಯಾರ್ಥಿಗಳ ಸಮವಸ್ತ್ರ ಹೊರತಾಗಿ ಹಲವು ಧಾರ್ಮಿಕ ಗುರುತುಗಳೊಂದಿಗೆ ಶಾಲೆಗೆ ತೆರಳುತ್ತಾರೆ. ಹಣೆ ಮೇಲೆ ನಾಮ ಹಾಕಲಾಗುತ್ತೆ, ರುದ್ರಾಕ್ಷಿ ಧರಿಸಲಾಗುತ್ತೆ, ಕ್ರಿಶ್ಚಿಯನ್ ಕೊರಳಲ್ಲಿ ಕ್ರಾಸ್ ಹಾಕಿಕೊಳ್ತಾರೆ. ಇವು ಎಲ್ಲವೂ ಧಾರ್ಮಿಕ ಗುರುತುಗಳು ಎಂದರು. ಇದಕ್ಕೆ ಮತ್ತೆ ಪ್ರಶ್ನೆ ಮಾಡಿದ ನ್ಯಾಯಾಧೀಶರು, ರುದ್ರಾಕ್ಷಿ,‌ ಕ್ರಾಸ್ ಯೂನಿಫಾರಂ ಒಳಗಿರುತ್ತದೆ. ಅದನ್ನು ಗುರುತಿಸಲು ಇಲ್ಲಿ ಯಾರೂ ಶರ್ಟ್ ತೆಗೆಯುತ್ತಿಲ್ಲ. ಅದು ಹೇಗೆ ಸಮವಸ್ತ್ರ ನಿಯಮ ಉಲ್ಲಂಘನೆಯಾಗುತ್ತದೆ ಎಂದರು.

    ಬಟ್ಟೆ ಬಿಚ್ಚುವ ಹಕ್ಕು ಕೂಡ ಮೂಲಭೂತ ಹಕ್ಕು?
    ಮುಂದುವರಿದು, ನಾವು ಇದನ್ನು ತರ್ಕಬದ್ಧವಲ್ಲದ ತುದಿಗಳಿಗೆ ಕೊಂಡೊಯ್ಯಲು ಸಾಧ್ಯವಿಲ್ಲ. ನೀವು ಬಟ್ಟೆ ಧರಿಸುವುದು ಮೂಲಭೂತ ಹಕ್ಕು ಎಂದು ಹೇಳಿದರೆ, ಬಟ್ಟೆ ಬಿಚ್ಚುವ ಹಕ್ಕು ಕೂಡ ಮೂಲಭೂತ ಹಕ್ಕು ಆಗುತ್ತದೆ. ಆರ್ಟಿಕಲ್ 19 (1)a ರ ಭಾಗವಾಗಿ ಉಡುಗೆ ಮೂಲಭೂತ ಹಕ್ಕು ಎಂದು ಎಲ್ಲಿದೆ ಎಂಬುದನ್ನು ನಮಗೆ ತೋರಿಸಿ ಎಂದು ಪ್ರಶ್ನಿಸಿದರು‌.

    ಇದಕ್ಕೆ ಉತ್ತರಿಸಿದ ವಕೀಲ ದೇವದತ್ ಕಾಮತ್, ನಾನು ಕ್ಲೀಷೆ ವಾದಗಳನ್ನು ಮಾಡಲು ಇಲ್ಲಿಗೆ ಬಂದಿಲ್ಲ. ನಾನು ಒಂದು ಅಂಶವನ್ನು ಸಾಬೀತುಪಡಿಸುತ್ತಿದ್ದೇನೆ. ವಿದ್ಯಾರ್ಥಿನಿಯರು ಸಮವಸ್ತ್ರವನ್ನು ಧರಿಸುವುದಿಲ್ಲ ಎಂದು ನಾನು ಹೇಳುತ್ತಿಲ್ಲ. ಆದರೆ ಸಮವಸ್ತ್ರದ ಜೊತೆಗೆ ನಾನು ಸ್ಕಾರ್ಫ್ ಅನ್ನು ಧರಿಸಲು ಕೇಳುತ್ತಿದ್ದೇನೆ. ಅದು ಡ್ರೆಸ್ ಕೋಡ್ ಅನ್ನು ಉಲ್ಲಂಘಿಸುತ್ತದೆಯೇ? ಹಿಜಬ್ ಧರಿಸುವುದನ್ನು ಆರ್ಟಿಕಲ್ 19 ರ ಆಧಾರದ ಮೇಲೆ ನಿರ್ಬಂಧಿಸಬಹುದೇ ಎಂದು ಮರು ಪ್ರಶ್ನಿಸಿದರು. ಇದನ್ನೂ ಓದಿ: Hijab Row – ಮಂಡ್ಯ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ ಜಮಾತೆ ಉಲೆಮಾ ಹಿಂದ್‌

    ಕೋರ್ಟ್ ಸಮಯ ಅಂತ್ಯವಾದ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 11:30 ಕ್ಕೆ ವಿಚಾರಣೆ ಮುಂದೂಡಲಾಯಿತು. ಈ ವೇಳೆ ಮಧ್ಯಪ್ರವೇಶ ಮಾಡಿದ ಮತ್ತೋರ್ವ ವಕೀಲರು ಶಾಲೆ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಿಸಿದ ಆದೇಶದ ಬಗ್ಗೆ ವಾದಿಸಲು ಮುಸ್ಲಿಂ ವಿದ್ವಾಂಸರೊಬ್ಬರು ಇಚ್ಛಿಸಿದ್ದಾರೆ, ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಅದಕ್ಕೆ ಕೋರ್ಟ್ ಅನುಮತಿ ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • Hijab Row: ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ವಿಚಾರಣೆ

    Hijab Row: ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ವಿಚಾರಣೆ

    ನವದೆಹಲಿ: ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಬ್‌ ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಎತ್ತಿಹಿಡಿದಿತ್ತು. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

    ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು, ಸುಪ್ರೀಂ ಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರ ಮೊದಲ ಕೆಲಸದ ದಿನವಾದ ನಾಳೆ ಅರ್ಜಿಗಳನ್ನು ಆಲಿಸಲಿದೆ. ಇದನ್ನೂ ಓದಿ: 3,700 ಕೆ.ಜಿ ಸ್ಫೋಟಕ, 10 ಸೆಕೆಂಡ್- 1,200 ಕೋಟಿಯ ದೈತ್ಯ ಅವಳಿ ಕಟ್ಟಡ ಉಡೀಸ್

    supreme court 12

    ಈ ಹಿಂದೆ, ಆಗಿನ ಸಿಜೆಐ ಎನ್‌.ವಿ.ರಮಣ ನೇತೃತ್ವದ ಪೀಠದ ಮುಂದೆ ಹಲವಾರು ಸಂದರ್ಭಗಳಲ್ಲಿ ತುರ್ತು ವಿಚಾರಣೆಗಾಗಿ ಅರ್ಜಿಗಳನ್ನು ಉಲ್ಲೇಖಿಸಲಾಗಿತ್ತು. ಆದರೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಿರಲಿಲ್ಲ.

    ಶಾಲಾ-ಕಾಲೇಜುಗಳ ಏಕರೂಪ ಸಮವಸ್ತ್ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸಿದ ಕರ್ನಾಟಕ ಸರ್ಕಾರದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿತ್ತು. ಹಿಜಬ್‌ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೈಕೋರ್ಟ್‌ ತೀರ್ಪಿನಲ್ಲಿ ಹೇಳಿತ್ತು. ಹಿಜಬ್‌ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಇದನ್ನೂ ಓದಿ: ರಾಷ್ಟ್ರಕ್ಕಾಗಿ ಖಾದಿ, ಆದ್ರೆ ರಾಷ್ಟ್ರಧ್ವಜಕ್ಕೆ ಚೈನೀಸ್ ಪಾಲಿಸ್ಟರ್ : ಮೋದಿ ವಿರುದ್ಧ ರಾಹುಲ್ ಟೀಕೆ

    ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿಯೊಂದರಲ್ಲಿ, ʻಸರ್ಕಾರಿ ಅಧಿಕಾರಿಗಳ ಮಲತಾಯಿ ಧೋರಣೆಯು ವಿದ್ಯಾರ್ಥಿಗಳ ನಂಬಿಕೆಗಳಿಗೆ ಅಡ್ಡಿಪಡಿಸಿದೆ. ಅನಪೇಕ್ಷಿತ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗೆ ಕಾರಣವಾಗಿದೆʼ ಎಂದು ಆರೋಪಿಸಲಾಗಿದೆ.

    ಹಿಜಬ್ ಅಥವಾ ಸ್ಕಾರ್ಫ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಆಚರಣೆ ಎಂದು ಮೇಲ್ಮನವಿಯಲ್ಲಿ ಉಲ್ಲೇಖಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕರಾವಳಿಯಲ್ಲಿ ಮತ್ತೆ ಹಿಜಬ್ ಕಿಚ್ಚು – ವಿವಾದಿತ ವಿದ್ಯಾರ್ಥಿನಿಯರ ಮೂಲಕ CFI ಗರ್ಲ್ಸ್‌ ಕಾನ್ಫರೆನ್ಸ್

    ಕರಾವಳಿಯಲ್ಲಿ ಮತ್ತೆ ಹಿಜಬ್ ಕಿಚ್ಚು – ವಿವಾದಿತ ವಿದ್ಯಾರ್ಥಿನಿಯರ ಮೂಲಕ CFI ಗರ್ಲ್ಸ್‌ ಕಾನ್ಫರೆನ್ಸ್

    ಮಂಗಳೂರು: ಕರಾವಳಿಯಿಂದ ಆರಂಭವಾಗಿದ್ದ ಹಿಜಬ್ ವಿವಾದ ಕೆಳ ತಿಂಗಳಿನಿಂದ ತಣ್ಣಗಾಗಿತ್ತು. ಆದ್ರೆ ಇದೀಗ ವಿವಾದಿತ ಹಿಜಬ್ ವಿದ್ಯಾರ್ಥಿನಿಯರ ಮೂಲಕವೇ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಸಂಘಟನೆ ಮಂಗಳೂರಿನಲ್ಲಿ ಗರ್ಲ್ಸ್‌ ಕಾನ್ಫರೆನ್ಸ್ ಎಂಬ ಕಾರ್ಯಕ್ರಮ ನಡೆಸಿ ಮತ್ತೆ ಕಿಚ್ಚು ಹಚ್ಚಿದೆ.

    ಕೆಲ ತಿಂಗಳ ಹಿಂದೆ ಬಹಳಷ್ಟು ಚರ್ಚೆಗೆ ಕಾರಣವಾಗಿದ್ದ ಹಿಜಬ್ ವಿವಾದ ತಣ್ಣಗಾಗಿದೆ. ಆದ್ರೆ ಇದೀಗ ಹಿಜಬ್ ವಿವಾದ ಆರಂಭವಾದ ಕರಾವಳಿಯಿಂದಲೇ ಮತ್ತೆ ಹಿಜಬ್ ಕಿಚ್ಚು ಹೊತ್ತಿಕೊಂಡಿದೆ. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆ ವಿವಾದಿತ ಹಿಜಬ್ ವಿದ್ಯಾರ್ಥಿನಿಯರ ಮೂಲಕ ಗರ್ಲ್ಸ್‌ ಕಾನ್ಫರೆನ್ಸ್ ಎಂಬ ಕಾರ್ಯಕ್ರಮವನ್ನು ಮಂಗಳೂರಿನ ಪುರಭವನದಲ್ಲಿ ನಡೆಸಿದೆ. ಕಾರ್ಯಕ್ರಮಕ್ಕೂ ಮುನ್ನ ನಗರದ ಜ್ಯೋತಿ ಸರ್ಕಲ್ ನಿಂದ ಪುರಭವನವರೆಗೆ ರ‍್ಯಾಲಿ ನಡೆಸುವ ಯೋಜನೆಯನ್ನು ಸಿ.ಎಫ್.ಐ ಮಾಡಿತ್ತು. ಆದ್ರೆ ರಾಜ್ಯದಲ್ಲಿ ನಡೆದ ಒಂದಷ್ಟು ಬೆಳವಣಿಗೆಯ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ರ‍್ಯಾಲಿಗೆ ಅನುಮತಿ ನೀಡಿರಲಿಲ್ಲ. ಹೀಗಿದ್ದರೂ ನಗರದ ಮಿಲಾಗ್ರಿಸ್ ಪಕ್ಕದ ಮಸೀದಿ ಬಳಿ ಸಿ.ಎಫ್.ಐ ಕಾರ್ಯಕರ್ತರು ಜಮಾವಣೆಯಾಗಿದ್ದರು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಮೆರವಣಿಗೆ ಮಾಡುವಂತಿಲ್ಲ, ಮಾಡಿದ್ರೆ ಕಾನೂನು ಕ್ರಮದ ಎಚ್ಚರಿಕೆಯನ್ನು ಸಿ.ಎಫ್.ಐ ಕಾರ್ಯಕರ್ತರಿಗೆ ನೀಡಿದ್ರು. ಕಮಿಷನರ್ ಎಚ್ಚರಿಕೆ ಬಳಿಕ ಮೆರವಣಿಗೆ ಮಾಡದೇ ಕಾರ್ಯಕರ್ತರು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ತೆರಳಿದರು. ಇದನ್ನೂ ಓದಿ:  ಮುಂದಿನ ವಾರ ಸೂಕ್ತ ಪೀಠದಲ್ಲಿ ಹಿಜಬ್ ಅರ್ಜಿ ವಿಚಾರಣೆ – ಸುಪ್ರೀಂಕೋರ್ಟ್ 

    ಸಿ.ಎಫ್.ಐ ಆಯೋಜಿಸಿದ ಗರ್ಲ್ಸ್‌ ಕಾನ್ಫರೆನ್ಸ್‌ನಲ್ಲಿ ಉಡುಪಿ ದಕ್ಷಿಣಕನ್ನಡ ಕಾಲೇಜಿನ ವಿವಾದಿತ ಹಿಜಬ್ ವಿದ್ಯಾರ್ಥಿನಿಯರು ವೇದಿಕೆಯಲ್ಲಿ ಹಾಜರಿದ್ದರು. ನಮ್ಮ ಹಿಜಬ್ ಹಕ್ಕನ್ನು ಪಡೆದೇ ತೀರುತ್ತೆವೆ ಎಂಬ ಘೋಷಣೆ ಮೊಳಗಿಸಿದರು. ಹಿಜಬ್ ವಿವಾದ ಬಗ್ಗೆಯೆ ಹಿಜಬ್ ಹೆಸರಿನಲ್ಲೇ ಮುದ್ರಿತ ಪುಸ್ತಕವೊಂದನ್ನು ಇದೇ ಸಂದರ್ಭ ಬಿಡುಗಡೆಗೊಳಿಸಲಾಯಿತು. ಸಮಾವೇಶದಲ್ಲಿ ಭಾಗವಹಿಸಿದ್ದ ಸಿ.ಎಫ್.ಐ ರಾಷ್ಟ್ರಾಧ್ಯಕ್ಷ ಎಂ.ಎಸ್ ಸಾಜೀದ್ ಹಿಜಬ್ ಹೋರಾಟದಲ್ಲಿ ನೀವು ಒಬ್ಬಂಟಿಯಲ್ಲ, ತಮ್ಮ ಹಕ್ಕುಗಳಿಗಾಗಿ ಕರ್ನಾಟಕದ ಯುವತಿಯರು ಹೋರಾಡುತ್ತಿದ್ದಾರೆ. ಆರ್‌ಎಸ್‌ಎಸ್‌ ಮತ್ತು ಹಿಂದುತ್ವದ ಫ್ಯಾಸಿಸಮ್ ವಿರುದ್ಧ ಒಂದು ಕೈಯಲ್ಲಿ ಓದು ಮತ್ತೊಂದು ಕೈಯಲ್ಲಿ ಹೋರಾಟ ನಡೆಯಲಿದೆ ಎಂದರು. ಇದನ್ನೂ ಓದಿ: ಯುವಕನನ್ನು ಪ್ರೀತಿಸಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಮದುವೆಯಾದ ಮುಸ್ಲಿಂ ಯುವತಿ

    ಸಿ.ಎಫ್.ಐ ಆಯೋಜಿಸಿದ ಗರ್ಲ್ಸ್‌ ಕಾನ್ಫರೆನ್ಸ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಎರಡು ದಿನ ಕಾಯಿರಿ  – ಹಿಜಬ್‌ ವಿದ್ಯಾರ್ಥಿನಿಯರಿಗೆ ಸುಪ್ರೀಂ ಸೂಚನೆ

    ಎರಡು ದಿನ ಕಾಯಿರಿ – ಹಿಜಬ್‌ ವಿದ್ಯಾರ್ಥಿನಿಯರಿಗೆ ಸುಪ್ರೀಂ ಸೂಚನೆ

    ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧದ ಮೇಲ್ಮನವಿಗಳನ್ನು ಶೀಘ್ರದಲ್ಲಿ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.

    SUPREME COURT

    ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಮೇಲ್ಮನವಿ ಕುರಿತು ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಮಂಗಳವಾರ ಸಿಜೆಐ ಪೀಠದ ಮುಂದೆ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು, ದಯವಿಟ್ಟು ಎರಡು ದಿನ ಕಾಯಿರಿ. ನಾನು ಪಟ್ಟಿ ಮಾಡುತ್ತೇನೆ ಎಂದು ಮೀನಾಕ್ಷಿ ಅರೋರಾ ಅವರಿಗೆ ತಿಳಿಸಿದ್ದಾರೆ. ಅವರು ವಿದ್ಯಾರ್ಥಿಗಳ ಪರವಾಗಿ ಪ್ರಕರಣದ ಆರಂಭಿಕ ವಿಚಾರಣೆಗೆ ಮೌಖಿಕವಾಗಿ ಪ್ರಸ್ತಾಪಿಸಿದರು. ಇದನ್ನೂ ಓದಿ: ವಿಭೂತಿ ಹಾಕಿದ್ದಕ್ಕೆ ಕತ್ತೆ ಅಂದ್ರು, ಬಲವಂತವಾಗಿ ಮತಾಂತರಿಸಲು ಯತ್ನಿಸಿದ್ರು – ಶಿಕ್ಷಕಿ ವಿರುದ್ಧ ವಿದ್ಯಾರ್ಥಿನಿ ಆರೋಪ

    ಹಿಜಬ್‌ ಇಸ್ಲಾಂ ಧಾರ್ಮಿಕ ಆಚರಣೆಯ ಅಗತ್ಯ ಭಾಗವಲ್ಲ. ಶಾಲಾ-ಕಾಲೇಜುಗಳ ಸಮವಸ್ತ್ರದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ.

    ಅರ್ಜಿದಾರರಲ್ಲಿ ಒಬ್ಬರಾದ ನಿಬಾ ನಾಜ್, ಹೈಕೋರ್ಟಿನ ತೀರ್ಮಾನವನ್ನು ವಿರೋಧಿಸಿ, ʻಭಾರತೀಯ ಕಾನೂನು ವ್ಯವಸ್ಥೆಯು ಧಾರ್ಮಿಕ ಚಿಹ್ನೆಗಳನ್ನು ಧರಿಸುವುದನ್ನು, ಒಯ್ಯುವುದನ್ನು ಸ್ಪಷ್ಟವಾಗಿ ಗುರುತಿಸುತ್ತದೆ. ಮೋಟಾರು ವಾಹನ ಕಾಯ್ದೆಯು ಪೇಟ ಧರಿಸುವ ಸಿಖ್‌ರಿಗೆ ಹೆಲ್ಮೆಟ್ ಧರಿಸುವುದರಿಂದ ವಿನಾಯಿತಿ ನೀಡುತ್ತದೆ. ಸಿಖ್‌ರಿಗೆ ಕಿರ್ಪಾನ್‌ಗಳನ್ನು ವಿಮಾನದಲ್ಲಿ ಸಾಗಿಸಲು ಅನುಮತಿಸಲಾಗಿದೆ. ಆದರೆ ಮುಸ್ಲಿಂ ಹೆಣ್ಣುಮಕ್ಕಳಿಗೆ ಶಿಕ್ಷಣ ಪಡೆಯಲು ನಿರಾಕರಿಸುವುದು ಮತ್ತು ಕಾಲೇಜಿಗೆ ಹಿಜಬ್ ಧರಿಸಿದ್ದಕ್ಕಾಗಿ ಶಿಕ್ಷೆ ವಿಧಿಸುವುದು ಅವರ ಖಾಸಗಿತನದ ಹಕ್ಕನ್ನು ಉಲ್ಲಂಘಿಸಿದಂತೆʼ ಎಂದು ಮೇಲ್ಮನವಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಧ್ವನಿವರ್ಧಕಗಳನ್ನು ತೆಗೆದು ಹಾಕಿ : ಯುಪಿ ಸರ್ಕಾರ ಆದೇಶ

  • ಇಂದು ಹಿಜಬ್, ನಾಳೆ ಸಂವಿಧಾನವೇ ಬೇಡ ಅಂತಾರೆ ಈ ಮಾನಸಿಕತೆಗೆ ಕಾಂಗ್ರೆಸ್ ಕೈಜೋಡಿಸಬಾರದು: ಸಿ.ಟಿ.ರವಿ

    ಇಂದು ಹಿಜಬ್, ನಾಳೆ ಸಂವಿಧಾನವೇ ಬೇಡ ಅಂತಾರೆ ಈ ಮಾನಸಿಕತೆಗೆ ಕಾಂಗ್ರೆಸ್ ಕೈಜೋಡಿಸಬಾರದು: ಸಿ.ಟಿ.ರವಿ

    ಚಿಕ್ಕಮಗಳೂರು: ಇವತ್ತು ಹಿಜಬ್ ಅಂತಾರೆ, ನಾಳೆ ಸಂವಿಧಾನವೇ ಬೇಡ ಷರಿಯಾತ್ತೇ ಬೇಕು ಅಂತಾರೆ ಅಂತಹ ಮಾನಸಿಕತೆಗೆ ಕಾಂಗ್ರೆಸ್ ಗೊಬ್ಬರ-ನೀರು ಹಾಕುವುದನ್ನು ಬಿಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

    HIJAB

    ನಗರದ ಎಐಟಿ ವೃತ್ತದ ಬಳಿ ಮಾತನಾಡಿದ ಅವರು, ಖಿಲಾಫತ್ ಚಳವಳಿಗೆ ಗೊಬ್ಬರ-ನೀರು ಹಾಕಿ ದೇಶ ವಿಭಜನೆ ಆಯ್ತು. ಈಗ ಹಿಜಬ್‍ಗೆ ಗೊಬ್ಬರ ನೀರು ಹಾಕುವುದನ್ನು ಕಾಂಗ್ರೆಸ್ ಬಿಡಬೇಕು. ರಾಜ್ಯದಲ್ಲಿ ಶೇ.99ರಷ್ಟು ಜನ ನ್ಯಾಯಾಲಯದ ಆದೇಶ ಪಾಲನೆ ಮಾಡಿ ಸಮವಸ್ತ್ರ ಒಪ್ಪಿಕೊಂಡು ಪರೀಕ್ಷೆ ಬರೆದಿದ್ದಾರೆ. ಶೇ.1ರಷ್ಟು ಜನ ಈ ವಿಷಯವನ್ನು ಜೀವಂತವಾಗಿಡಲು ಬಯಸಿದ್ದಾರೆ. ಅವರ ನಾಟಕ ಕ್ಯಾಮೆರಾ ಅವರ ಕಡೆ ತಿರುಗಲಿ ಎಂದಷ್ಟೇ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಬುಲ್ಡೋಜರ್ ಕಾನೂನು ಜಾರಿ ಬಗ್ಗೆ ಸಿಎಂ ಜೊತೆ ಚರ್ಚೆ: ಆರ್.ಅಶೋಕ್

    ಪರೀಕ್ಷೆ ಬರೆಯದೇ ವಾಪಸ್ ಹೋದವರನ್ನು ಕೆಲವರು ಹೀರೋ, ಹೀರೋಯಿನ್ ರೀತಿ ಬಿಂಬಿಸುತ್ತಿದ್ದಾರೆ. ನಿಮಗೆ ಹಿಜಬ್ ದೊಡ್ಡದೋ, ಪರೀಕ್ಷೆ ದೊಡ್ಡದೋ ಎಂದು ಪ್ರಶ್ನಿಸಿದರು. ಹಿಜಬ್ ದೊಡ್ಡದು ಎನ್ನುವವರು ಕ್ಯಾಮೆರಾ ಮುಂದೆ ನಾಟಕ ಆಡ್ತಿದ್ದಾರೆ. ಶೇ.99 ರಷ್ಟು ಜನ ಸರ್ಕಾರದ ನಿಲುವು, ಕೋರ್ಟ್ ತೀರ್ಪು ಒಪ್ಪಿಕೊಂಡಿದ್ದಾರೆ ಅವರಿಗೆ ಸ್ವಾಗತ. 1983 ರಿಂದ ಇಲ್ಲದ ಚಳವಳಿ ಈಗ ಏಕೆ ಶುರುವಾಗುತ್ತದೆ? ಹುಬ್ಬಳ್ಳಿ ಗಲಾಟೆ ಅಚಾನಕ್ಕಾಗಿ ಆಗಿರುವ ಸಂಗತಿಯಲ್ಲ. ಡಿ.ಜೆ ಹಳ್ಳಿ, ಕೆಜೆ ಹಳ್ಳಿ ಗಲಾಟೆಗೂ ಹುಬ್ಬಳ್ಳಿ ಗಲಾಟೆಗೂ ಸಾಮ್ಯತೆ ಇದೆ. ದೇಶದ ಉದ್ದಗಲಕ್ಕೂ ಗಲಭೆ ಎಬ್ಬಿಸುವ ಷಡ್ಯಂತ್ರ ನಡೆದಿದೆ. ಇದೆಲ್ಲವನ್ನು ನೋಡಿದಾಗ ಅವರು ಜಿನ್ನಾ ಮಾನಸಿಕತೆಯಲ್ಲಿ ಇರುವುದು ಸ್ಪಷ್ಟವಾಗಿದೆ ಎಂದಿದ್ದಾರೆ. ಇದನ್ನೂ ಓದಿ: PSI ನೇಮಕಾತಿಯ ಯಾವುದೇ ಬ್ಯಾಚ್‌ನಲ್ಲಿ ಅಕ್ರಮ ನಡೆದಿದ್ದರೂ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ

    ಜಿನ್ನಾ ಮಾನಸಿಕತೆಯನ್ನು ಗಾಂಧಿ ಮಾನಸಿಕತೆಯಲ್ಲಿ ಎದುರಿಸಲು ಆಗಲ್ಲ. ಗಾಂಧಿ ಮಾನಸಿಕತೆಯಲ್ಲಿ ಎದುರಿಸಿದಾಗ ದೇಶ ವಿಭಜನೆಯ ಬೆಲೆ ತೆರಬೇಕಾಯಿತು. 46 ಲಕ್ಷ ಜನರ ಮಾರಣಹೋಮ ನಡೆಯಿತು. ಅದ್ದರಿಂದ ಜಿನ್ನಾ ಮಾನಸಿಕತೆಯನ್ನು ನಾವು ಸಾವರ್ಕರ್ ಮಾನಸಿಕತೆಯಲ್ಲಿ ಎದುರಿಸಬೇಕು. ಆಗ ಮಾತ್ರ ದೇಶ ಉಳಿಸಿಕೊಳ್ಳಲು ಸಾಧ್ಯ. ಇದೇ ವೇಳೆ, ಪಿಎಸ್‍ಐ ಅಕ್ರಮದಲ್ಲಿ ಕಾಂಗ್ರೆಸ್ ಆಥವಾ ಬಿಜೆಪಿ ಯಾರೇ ಇದ್ದರೂ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ಕಂಡು ಬಂದ ಕೂಡಲೇ ಸಿಎಂ ಹಾಗೂ ಗೃಹ ಸಚಿವರಿಗೆ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದ್ದೇನೆ. ನಮ್ಮ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸುತ್ತಿದೆ. ತಪ್ಪಿತಸ್ಥರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಆಗುತ್ತದೆ. ತನಿಖೆಯನ್ನು ಸಿಐಡಿಗೆ ವಹಿಸಿದ್ದು ಎಷ್ಟೇ ಪ್ರಭಾವಿಗಳಿದ್ರು ಕಠಿಣ ಕ್ರಮ ತಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

  • ಪರೀಕ್ಷಾ ಕೇಂದ್ರದಲ್ಲೂ ಹಿಜಬ್‌ ವಿದ್ಯಾರ್ಥಿನಿಯರ ಹೈಡ್ರಾಮಾ – ಮನೆಗೆ ನಡೆದ ವಿದ್ಯಾರ್ಥಿನಿಯರು

    ಪರೀಕ್ಷಾ ಕೇಂದ್ರದಲ್ಲೂ ಹಿಜಬ್‌ ವಿದ್ಯಾರ್ಥಿನಿಯರ ಹೈಡ್ರಾಮಾ – ಮನೆಗೆ ನಡೆದ ವಿದ್ಯಾರ್ಥಿನಿಯರು

    ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷಾ ಸಮಯದಲ್ಲೂ ಹಿಜಬ್‌ ವಿದ್ಯಾರ್ಥಿನಿಯರು ಹೈಡ್ರಾಮಾ ಮುಂದುವರಿಸಿದ್ದಾರೆ. ಹಿಜಬ್‌ ಧರಿಸಿಯೇ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಪರೀಕ್ಷಾ ಮೇಲ್ವಿಚಾರಕರು ಮತ್ತು ತಹಶೀಲ್ದಾರ್‌ ಅನುಮತಿ ನೀಡದ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದಿಂದ ಹೊರ ನಡೆದಿದ್ದಾರೆ.

    ರಾಜ್ಯಾದ್ಯಂತ ಇಂದಿನಿಂದ ದ್ವಿತಿಯ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆ ಆರಂಭವಾಗಿದ್ದು, ಉಡುಪಿಯ ಹಿಜಬ್‌ ಹೋರಾಟಗಾರ್ತಿಯರಾದ ಮಹಿಳಾ ಸರ್ಕಾರಿ ಪಿಯು ಕಾಲೇಜಿನ ಆಲಿಯಾ ಅಸಾದಿ ಮತ್ತು ರೇಷಂ ಕೊನೆ ಕ್ಷಣದಲ್ಲಿ ಹಾಲ್‌ ಟಿಕೆಟ್‌ ಪಡೆದಿದ್ದರು.

    ಕಾಮರ್ಸ್ ವಿಭಾಗದ ಪರೀಕ್ಷೆ ಕೇಂದ್ರ ಉಡುಪಿ ವಿದ್ಯೋದಯ ಕಾಲೇಜಿನಲ್ಲಿದೆ. ಕಾಲೇಜಿನ ಒಳಗಡೆ ಪರೀಕ್ಷೆ ಬರೆಯುವಾಗ ಮಾತ್ರ ಹಿಜಬ್ ತೆಗೆಯಲು ಆದೇಶವಿದೆ. ಹೀಗಾಗಿ ಹಲವಾರು ಮುಸ್ಲಿಮ್ ವಿದ್ಯಾರ್ಥಿನಿಯರು ಕೇಂದ್ರಕ್ಕೆ ಬುರ್ಕಾ, ಹಿಜಬ್ ಧರಿಸಿಕೊಂಡು ಆಗಮಿಸಿದ್ದರು. ಕೇಂದ್ರದಲ್ಲಿ ಒಂದು ಕೊಠಡಿ ಇದ್ದು ಅಲ್ಲಿ ಹಿಜಬ್‌, ಬುರ್ಕಾ ತೆಗೆದು ಪರೀಕ್ಷಗೆ ಹಾಜರಾಗಬೇಕು. ಇದನ್ನೂ ಓದಿ: 14 ಮಸೀದಿಗಳ ಮೇಲೆ ದಾಖಲಾಯ್ತುFIR

    ತಮ್ಮ ಕಾಲೇಜಿನಲ್ಲಿ ಬೆಳಗ್ಗೆ 10 ಗಂಟೆಗೆ ಹಾಲ್‌ ಟಿಕೆಟ್‌ ಪಡೆದ ಇಬ್ಬರು  ರಿಕ್ಷಾ ಮೂಲಕ ವಿದ್ಯೋದಯ ಕಾಲೇಜಿಗೆ ಆಗಮಿಸಿದ್ದರು. ಕಾಲೇಜಿಗೆ ಬಂದ ಬಳಿಕ ಈ ಇಬ್ಬರೂ ಹಿಜಬ್‌ ಧರಿಸಿಯೇ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಈ ವಿಚಾರ ತಿಳಿದು ಉಡುಪಿಯ ತಹಶೀಲ್ದಾರ್‌ ಅರ್ಚನಾ ಭಟ್‌ ಪರೀಕ್ಷಾ ಕೇಂದ್ರಕ್ಕೆ ಬಂದು ವಿದ್ಯಾರ್ಥಿನಿಯರ ಮನ ಒಲಿಸುವ ಪ್ರಯತ್ನ ಮಾಡಿದ್ದರು. ಆದರೆ ಹಿಜಬ್‌ ಮುಖ್ಯ ಎಂಬ ಹಠಕ್ಕೆ ಬಿದ್ದ ವಿದ್ಯಾರ್ಥಿನಿಯರು ಕೊನೆಗೆ ಪರೀಕ್ಷಾ ಕೇಂದ್ರದಿಂದ ಮನೆ ಕಡೆ ತೆರಳಿದ್ದಾರೆ.

    ಸರ್ಕಾರ ಹೈಕೋರ್ಟ್ ತೀರ್ಪಿನಂತೆ ಹಿಜಬ್ ತೆಗೆದು ಪರೀಕ್ಷೆಗೆ ಬರಬೇಕು ಎಂದು ಕಟ್ಟುನಿಟ್ಟಾಗಿ ಆದೇಶ ಪ್ರಕಟಿಸಿತ್ತು. ಇದರ ಜೊತೆಗೆ ಹಾಲ್ ಟಿಕೆಟ್ ಪಡೆದುಕೊಳ್ಳಲು ಪರೀಕ್ಷೆ ಆರಂಭವಾಗಲು ಕೊನೆಯ ಕ್ಷಣದವರೆಗೂ ಉಡುಪಿಯ ಕಾಲೇಜು ಅವಕಾಶ ನೀಡಿತ್ತು.

    18 ವಿದ್ಯಾರ್ಥಿನಿಯರ ಪೈಕಿ ಈ ವಿದ್ಯಾರ್ಥಿನಿಯರು ಗುರುವಾರದವರೆಗೂ ಪ್ರವೇಶ ಪತ್ರ ಪಡೆದಿರಲಿಲ್ಲ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೂಡಾ ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಿರಲಿಲ್ಲ. ಈ ಕಾಲೇಜಿನಲ್ಲಿ ಒಟ್ಟು 75 ಮುಸ್ಲಿಂ ವಿದ್ಯಾರ್ಥಿನಿಯರಿದ್ದಾರೆ. ಆರು ಮಂದಿಯನ್ನು ಹೊರತುಪಡಿಸಿದರೆ ಉಳಿದವರೆಲ್ಲೂ ಸಮವಸ್ತ್ರದಲ್ಲಿಯೇ ತರಗತಿಗೆ ಆಗಮಿಸುತ್ತಿದ್ದರು.

    ಹಿಜಬ್ ಸಂಘರ್ಷದ ಸಮಯದಲ್ಲಿ ಒಂದು ವೀಡಿಯೋದ ಮೂಲಕ ವಿಶ್ವಕ್ಕೆ ಸುದ್ದಿಯಾಗಿದ್ದ ಮಂಡ್ಯ ವಿದ್ಯಾರ್ಥಿನಿ ಮುಸ್ಕಾನ್ ಪರೀಕ್ಷೆ ಬರೆದಿರಲಿಲ್ಲ. ಹಿಜಬ್ ಸಂರ್ಘದ ವೇಳೆ ಫೆ.8 ರಂದು ಪಿಇಎಸ್ ಕಾಲೇಜಿನಲ್ಲಿ ಹುಡುಗರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರೆ ವಿದ್ಯಾರ್ಥಿನಿ ಮುಸ್ಕಾನ್ ಅಲ್ಲಾಹು ಅಕ್ಬರ್ ಎಂದು ಕೂಗಿದ್ದಳು. ಈ ಘಟನೆ ನಡೆದ ಬಳಿಕ ಮುಸ್ಕಾನ್ ಕಾಲೇಜಿಗೆ ಆಗಮಿಸಿರಲಿಲ್ಲ.

    ಮಾ.24ರಂದು ಮೈಸೂರು ವಿಶ್ವವಿದ್ಯಾಲಯದ ಎರಡನೇ ವರ್ಷದ ಬಿಕಾಂನ ಸೆಮಿಸ್ಟರ್ ಪರೀಕ್ಷೆ ಇತ್ತು. ಮುಸ್ಕಾನ್ ಕೂಡ ಎರಡನೇ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿದ್ದು, ಮೂರನೇ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಿರಲಿಲ್ಲ.

  • ಹಿಜಬ್ ವಿಚಾರದಲ್ಲಿ ಆರ್‌ಎಸ್‌ಎಸ್‌, ಭಜರಂಗದಳ, ಎಸ್‍ಡಿಪಿಐ ಕುಮ್ಮಕ್ಕು ಇದೆ ಈ ಎಲ್ಲಾ ಸಂಘಟನೆಗಳನ್ನು ನಿಷೇಧಿಸಿ: ಸಿದ್ದರಾಮಯ್ಯ

    ಹಿಜಬ್ ವಿಚಾರದಲ್ಲಿ ಆರ್‌ಎಸ್‌ಎಸ್‌, ಭಜರಂಗದಳ, ಎಸ್‍ಡಿಪಿಐ ಕುಮ್ಮಕ್ಕು ಇದೆ ಈ ಎಲ್ಲಾ ಸಂಘಟನೆಗಳನ್ನು ನಿಷೇಧಿಸಿ: ಸಿದ್ದರಾಮಯ್ಯ

    -ದೇಶದ ಉಳಿವಿಗಾಗಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರೋಣ

    ಬೆಂಗಳೂರು: ಹಿಜಬ್ ವಿಚಾರದಲ್ಲಿ ಆರ್‌ಎಸ್‌ಎಸ್‌, ಭಜರಂಗದಳ, ಎಸ್‍ಡಿಪಿಐ ಕುಮ್ಮಕ್ಕು ಇದೆ. ಈ ಕಾರಣಕ್ಕಾಗಿ ಕೋಮು ಸೌಹಾರ್ದತೆ ಹಾಳು ಮಾಡುತ್ತಿರುವ ಈ ಎಲ್ಲಾ ಸಂಘಟನೆಗಳನ್ನು ನಿಷೇಧಿಸಿ ಎಂದು ಸದನದಲ್ಲಿ ಹೇಳಿದ್ದೆ ಎಂದು ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ತಿಳಿಸಿದರು.

    ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಆಡಿಟೋರಿಯಂನ ರಾಜೀವ್ ಭವನದಲ್ಲಿ ಎಐಸಿಸಿಯ ನಿಕಟಪೂರ್ವ ಅಧ್ಯಕ್ಷರಾದ ರಾಹುಲ್ ಗಾಂಧಿಯವರ ಉಪಸ್ಥಿತಿಯಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರ ಮನಸ್ಸು ಮಾಡಿದ್ದರೆ ಆರಂಭದಲ್ಲೇ ಹಿಜಬ್ ವಿವಾದವನ್ನು ಬಗೆಹರಿಸಿ, ದೇಶಾದ್ಯಂತ ವ್ಯಾಪಿಸದಂತೆ ತಡೆಯಬಹುದಿತ್ತು.  ಆರ್‌ಎಸ್‌ಎಸ್‌, ಭಜರಂಗದಳ, ಹಿಂದೂ ಮಹಾಸಭಾದವರು ಸರ್ಕಾರದ ಕುಮ್ಮಕ್ಕಿನಿಂದ ದೊಡ್ಡ ವಿಷಯವನ್ನಾಗಿ ವಿದ್ಯಾರ್ಥಿಗಳ ಮುಂದಿಟ್ಟು, ಮುಸ್ಲಿಮರನ್ನು ಖಳನಾಯಕರನ್ನಾಗಿ ಬಿಂಬಿಸಿದ್ದಾರೆ. ಇದರಲ್ಲಿ ಎಸ್‍ಡಿಪಿಐ ಕುಮ್ಮಕ್ಕು ಕೂಡ ಇದೆ. ರಾಜ್ಯದಲ್ಲಿ ಬಿಜೆಪಿಯ ಅನೈತಿಕ ಸರ್ಕಾರವಿದೆ. ಬಿಜೆಪಿ ಪಕ್ಷ 2008, 2018 ಈ ಎರಡೂ ಬಾರಿ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿಲ್ಲ. 2008 ರಲ್ಲಿ ಆಪರೇಷನ್ ಕಮಲದ ಮೂಲಕ ಯಡಿಯೂರಪ್ಪ ಅವರು ಅಧಿಕಾರ ಹಿಡಿದರು, ಮತ್ತೆ 2018 ರಲ್ಲಿ ಬಹುಮತ ಸಾಬೀತು ಮಾಡಲಾಗದೆ ಒಂದೇ ವಾರಕ್ಕೆ ರಾಜೀನಾಮೆ ನೀಡಿ, ಆ ನಂತರ ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಮುಖ್ಯಮಂತ್ರಿ ಸ್ಥಾನಕ್ಕೇರಿದರು. ಈ ಸರ್ಕಾರದ ಅವಧಿಯಲ್ಲಿ ಎರಡು ವರ್ಷ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದರು, ಈಗ ಬಸವರಾಜ ಬೊಮ್ಮಾಯಿ ಆ ಸ್ಥಾನದಲ್ಲಿ ಇದ್ದಾರೆ. ಇದೊಂದು ಜನವಿರೋಧಿ, ಭ್ರಷ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದೇಶದಲ್ಲೇ ಅತಿದೊಡ್ಡ ಭ್ರಷ್ಟ ಸರ್ಕಾರ ಕರ್ನಾಟಕದಲ್ಲಿದೆ: ರಾಹುಲ್ ಕಿಡಿ

    MODI 2

    ದೇಶದ ಯುವಕರು, ಮಹಿಳೆಯರು, ಮಕ್ಕಳು, ಬಡವರು, ದಲಿತರು, ಹಿಂದುಳಿದ ಸಮುದಾಯಗಳ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಾಗಲೀ, ರಾಜ್ಯದ ಮುಖ್ಯಮಂತ್ರಿಯಾಗಲೀ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲ್ಲ. ಜನರ ಸಮಸ್ಯೆಗಳ ಬದಲಾಗಿ ಸಮಾಜವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಚುನಾವಣೆ ಹತ್ತಿರ ಬಂದಿರುವುದರಿಂದ ಹೆಚ್ಚು ಹೆಚ್ಚು ಕೋಮು ವೈಷಮ್ಯದ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ. ನಾವು ಸಂವಿಧಾನವನ್ನು ಧರ್ಮವಾಗಿ ನಂಬಿರುವವರು, ನಮಗೆ ಸಂವಿಧಾನವೇ ಸಂಜೀವಿನಿ. ಈ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಸಂವಿಧಾನದ ಆಶಯಗಳಂತೆ ಜೀವನ ಮಾಡಬೇಕು ಎಂದರು. ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಗ್ರಾಹಕರಿಗೆ ಎಲ್‌ಪಿಜಿ ಶಾಕ್- ಬರೋಬ್ಬರಿ 250 ರೂ. ಏರಿಕೆ

    ರಾಜ್ಯ ಬಿಜೆಪಿ ಸರ್ಕಾರ ಕೋಮು ಸಂಘರ್ಷಕ್ಕೆ ದಾರಿ ಮಾಡಿಕೊಡುವಂತಾ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ. ಮೊದಲಿಗೆ ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡಿದರು, ಆ ನಂತರ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿದರು, ಈಗ ಹಿಜಬ್, ಭಗವದ್ಗೀತೆ, ಹಲಾಲ್ ವಿಚಾರಗಳನ್ನು ಪ್ರಸ್ತಾಪ ಮಾಡಿದ್ದಾರೆ. ಸಂವಿಧಾನ, ಪ್ರಜಾಪ್ರಭುತ್ವ, ಬಹುತ್ವದ ಬಗ್ಗೆ ಗೌರವ ಇಲ್ಲದ ಕಾರಣಕ್ಕೆ ಬಿಜೆಪಿಯವರು ಇಂತಹಾ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ. ಆ ಮೂಲಕ ಯುವಕರ ಮನಸ್ಸಲ್ಲಿ ದ್ವೇಷದ ವಿಷಬೀಜ ಬಿತ್ತುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

    ಕಾಂಗ್ರೆಸ್ ಪಕ್ಷ ಸಂವಿಧಾನದಲ್ಲಿ ನಂಬಿಕೆ ಮತ್ತು ಬದ್ಧತೆಯನ್ನು ಹೊಂದಿರುವ ಪಕ್ಷ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಹಿಷ್ಣುತೆ, ಸಹಬಾಳ್ವೆ, ಸರ್ವಧರ್ಮ ಸಮನ್ವಯತೆಯ ತತ್ವಗಳಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ. ಹಿಜಬ್ ಒಂದು ವಿವಾದವಾಗುವಂತಾ ವಿಷಯವೇ ಆಗಿರಲಿಲ್ಲ. ನೂರಾರು ವರ್ಷಗಳಿಂದ ಮುಸ್ಲಿಂ ಸಮುದಾಯದವರು ಆಚರಿಸಿಕೊಂಡು ಬಂದ ಪದ್ಧತಿ ಆಗಿತ್ತು. ಈ ಕೆಲಸವನ್ನು ಸರ್ಕಾರ ಮಾಡಲ್ಲ, ಕಾರಣ ಈ ಎಲ್ಲಾ ಸಂಘಟನೆಗಳು ಇದ್ದಾಗ ಮಾತ್ರ ಸಮಾಜದಲ್ಲಿ ಬಾಂಧವ್ಯವನ್ನು ಹಾಳು ಮಾಡಲು ಸಾಧ್ಯವಾಗುತ್ತೆ. ಮತ ಧ್ರುವೀಕರಣಕ್ಕಾಗಿ ಈ ಎಲ್ಲಾ ವಿಚಾರಗಳನ್ನು ಮುಂದಿನ ಒಂದು ವರ್ಷಗಳ ವರೆಗೆ ಜನರ ಮುಂದಿಡುವ ಕೆಲಸ ಬಿಜೆಪಿಯವರು ಮಾಡುತ್ತಾರೆ. ಕಾಂಗ್ರೆಸಿಗರಾದ ನಾವು ಸಮಾಜದ ಹಿಂದುಳಿದ, ದಲಿತ, ಅಲ್ಪಸಂಖ್ಯಾತ, ಶೋಷಿತ ಜನರಿಗೆ ರಕ್ಷಣೆ ಕೊಡಬೇಕು. ಈ ವಿಚಾರ ಮಾತಾಡಿದ್ರೆ ಯಾರೇನು ತಪ್ಪು ತಿಳಿಯುತ್ತಾರೋ ಎಂಬ ಆಲೋಚನೆಗಳಿದ್ದರೆ ಅದನ್ನು ನಾವೆಲ್ಲ ಮೊದಲು ಬಿಡಬೇಕು. ನಮಗೆ ಜಾತ್ಯಾತೀತತೆಯಲ್ಲಿ ಸ್ಪಷ್ಟತೆ ಇರಬೇಕು ಎಂದರು.

    ಈ ದೇಶ ಯಾವುದೋ ಒಂದು ಜಾತಿ ಧರ್ಮದ ಜನರ ದೇಶವಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧರು, ಸಿಖ್ಖರು ಹೀಗೆ ಎಲ್ಲ ಧರ್ಮಗಳ ಜನರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದಕ್ಕಿದೆ. ಈ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕಾದರೆ ಎಲ್ಲ ವರ್ಗದ ಜನರಿಗೆ ನ್ಯಾಯ ಕೊಡಬೇಕು. ನಾವು ಸಂವಿಧಾನದ ಜಾತ್ಯಾತೀತ ಸಿದ್ದಾಂತದ ರಕ್ಷಣೆಗೆ ಇನ್ನಷ್ಟು ಆಕ್ರಮಣಶೀಲತೆಯಿಂದ ಕೆಲಸ ಮಾಡಬೇಕು. ಈ ವಿಚಾರದಲ್ಲಿ ಸೋನಿಯಾ ಗಾಂಧಿ ಅವರಾಗಲೀ, ರಾಹುಲ್ ಗಾಂಧಿಯವರಾಗಲೀ ಯಾವುದೇ ರೀತಿಯ ರಾಜಿಗೆ ಸಿದ್ಧರಿಲ್ಲ. ಯುವಕರನ್ನು ಪಕ್ಷಕ್ಕೆ ಕರೆತಂದು ಅವರಿಗೆ ಹೆಚ್ಚಿನ ಜವಬ್ದಾರಿ ನೀಡುವ ಕೆಲಸ ಮಾಡಬೇಕು ಎಂದು ರಾಹುಲ್ ಗಾಂಧಿಯವರು ಸದಾ ಹೇಳುತ್ತಿರುತ್ತಾರೆ. ಇದನ್ನೂ ಓದಿ: ಪುನೀತ್ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ – ಕನ್ನಡದಲ್ಲಿ ಅಪ್ಪುಗೆ ನಮನ ಸಲ್ಲಿಸಿದ ಕಾಂಗ್ರೆಸ್ ನಾಯಕ

    ಶಾಂತಿ, ಕಾನೂನು ಸುವ್ಯವಸ್ಥೆ ಇಲ್ಲದ ದೇಶ, ರಾಜ್ಯ ಎಂದಿಗೂ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ದೇಶ ಅಭಿವೃದ್ಧಿ ಆಗಬೇಕಾದರೆ ಸಮಾಜದಲ್ಲಿ ಸಾಮರಸ್ಯ ಇರಬೇಕು. ಈ ಸಾಮರಸ್ಯ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಬೇಕು. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 135-140 ಸ್ಥಾನಗಳನ್ನು ಗೆಲ್ಲಲೇಬೇಕು, ಆ ಮೂಲಕ ಕೋಮುವಾದಿಗಳನ್ನು ಅಧಿಕಾರದಿಂದ ಕಿತ್ತು ಬಿಸಾಕಬೇಕು. ಹೀಗಾಗಿ ಆ ವ್ಯಕ್ತಿ, ಈ ವ್ಯಕ್ತಿ ಎಂದು ವೈಯಕ್ತಿಕ ಚಿಂತನೆ ಮಾಡದೆ ಎಲ್ಲರೂ ಒಟ್ಟಾಗಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹೋರಾಟ ಮಾಡಬೇಕು. ಪ್ರತಿ ಜಿಲ್ಲೆಯಲ್ಲಿ ಎಲ್ಲರೂ ತಮ್ಮ ಸಲಹೆ ಸೂಚನೆಗಳನ್ನು ಪಕ್ಷಕ್ಕೆ ನೀಡಿ, ನಿಮ್ಮ ಅಭಿಪ್ರಾಯವನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಚುನಾವಣೆಗೆ ಆರು ತಿಂಗಳು ಮೊದಲೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಆಗ ಅವರು ತಮ್ಮೆಲ್ಲ ಸಂಪನ್ಮೂಲಗಳನ್ನು ಕ್ರೋಢೀಕರಿಸಿಕೊಂಡು ಪರಿಣಾಮಕಾರಿಯಾಗಿ ಚುನಾವಣೆ ಎದುರಿಸಲು ಸಾಧ್ಯವಾಗುತ್ತೆ ಎಂದು ರಾಹುಲ್ ಗಾಂಧಿ ಅವರ ಬಳಿ ಮನವಿ ಮಾಡಿದ್ದೇವೆ. ಅದಕ್ಕವರು ಒಪ್ಪಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

    ರಾಷ್ಟ್ರೀಯ ನಾಯಕರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ ಯಶಸ್ವಿಯಾಗಿದೆ. ಈ ಅಭಿಯಾನದ ಯಶಸ್ಸಿಗೆ ಕಾರಣೀಕರ್ತರಾದ ಪಕ್ಷದ ಎಲ್ಲಾ ಶಾಸಕರು, ಮುಖಂಡರು, ಕಾರ್ಯಕರ್ತರಿಗೆ ನನ್ನ ಧನ್ಯವಾದಗಳು. ನಮ್ಮ ಪಕ್ಷದ ಗೆಲುವಿಗೆ ಇದಷ್ಟೇ ಸಾಲದು, ಇದರ ಜೊತೆಗೆ ನಾವೆಲ್ಲ ಮನೆ ಮನೆಗೆ ತೆರಳಿ ಬಿಜೆಪಿಯ ಕೋಮುವಾದದ ನಾಟಕವನ್ನು ಜನರಿಗೆ ಅರ್ಥಮಾಡಿಸುವ ಕೆಲಸ ಮಾಡಬೇಕು. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ರಾಜ್ಯ ಸರ್ಕಾರದ 40% ಕಮಿಷನ್ ದಂಧೆಯ ಬಗ್ಗೆ ಪ್ರಧಾನಿಗಳಿಗೆ ಪತ್ರ ಬರೆದು ಆರು ತಿಂಗಳಾಯ್ತು, ಚೌಕಿದಾರ್ ಮೋದಿ ಅವರು ಈ ವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯ ಸರ್ಕಾರದ 40% ಕಮಿಷನ್ ಹಗರಣವನ್ನು ಸದನದಲ್ಲಿ ಪ್ರಸ್ತಾಪ ಮಾಡಲು ಅವಕಾಶ ನೀಡಿಲ್ಲ. ಬಿಜೆಪಿ ಶಾಸಕರೇ ತಮ್ಮ ಪಕ್ಷದ ಸಚಿವರ ಭ್ರಷ್ಟಾಚಾರದ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಆದರೆ ಸರ್ಕಾರ ಭಂಡತನದಿಂದ ವರ್ತಿಸುತ್ತಿದೆ.

    ಇಂತಹ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ 24/7 ಹೋರಾಟವನ್ನು ಇಂದಿನಿಂದಲೇ ಆರಂಭಿಸೋಣ. ಸಮಾಜ, ದೇಶದ ಉಳಿವಿಗಾಗಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರೋಣ ಎಂದು ಕರೆ ನೀಡಿದರು.

  • ಮಂಡ್ಯ ವಿದ್ಯಾರ್ಥಿನಿಗೆ ನಗದು ಬಹುಮಾನ – ಹಲಾಲ್ ವಿರುದ್ಧ ಅಭಿಯಾನ: ಎರಡಕ್ಕೂ ನಂಟೇನು?

    ಮಂಡ್ಯ ವಿದ್ಯಾರ್ಥಿನಿಗೆ ನಗದು ಬಹುಮಾನ – ಹಲಾಲ್ ವಿರುದ್ಧ ಅಭಿಯಾನ: ಎರಡಕ್ಕೂ ನಂಟೇನು?

    ಬೆಂಗಳೂರು: ರಾಜ್ಯದಲ್ಲಿ ಹುಟ್ಟಿಕೊಂಡ ಹಿಜಬ್ ವಿವಾದ ಬಳಿಕ ಹಿಂದೂಗಳು ಮತ್ತು ಮುಸ್ಲಿಂರ ನಡುವೆ ಒಂದಲ್ಲ ಒಂದು ವಿವಾದಗಳು ಭುಗಿಲೆಳುತ್ತಿದೆ. ಇದೀಗ ರಾಜ್ಯದಲ್ಲಿ ಹಲಾಲ್ ಬಗ್ಗೆ ಹಿಂದೂ ಸಂಘಟನೆಗಳು ರೊಚ್ಚಿಗೇಳಲು ಆ ಒಂದು ಘಟನೆ ಕಾರಣ ಎಂಬ ವಿಷಯ ಇದೀಗ ಬಹಿರಂಗವಾಗಿದೆ.

    ಹಿಜಬ್ ವಿವಾದಗಳ ಬಳಿಕ ಹಿಂದೂಗಳ ಜಾತ್ರೆಯಲ್ಲಿ ಮುಸ್ಲಿಂ ವರ್ತಕರಿಗೆ ವ್ಯಾಪಾರ ಬಹಿಷ್ಕಾರ ಹಾಕಲಾಯಿತು. ಆ ಬಳಿಕ ಇದೀಗ ಹಲಾಲ್ ಕುರಿತಾಗಿ ಹಿಂದೂ ಸಂಘಟನೆಗಳು ಗಂಭೀರ ಆರೋಪ ಮಾಡುತ್ತಿದ್ದು, ಹಿಜಬ್-ಹಲಾಲ್ ವಿವಾದಕ್ಕೆ ಲಿಂಕ್ ಇದೆ ಎಂಬ ಮಾತು ಕೇಳಿ ಬರುತ್ತಿದೆ. ಇದನ್ನೂ ಓದಿ: ಮುಸ್ಲಿಂ ಶಿಲ್ಪಿಗಳನ್ನು ಯಾವಾಗ ಬಹಿಷ್ಕರಿಸುತ್ತೀರಿ: ಹೆಚ್‌ಡಿಕೆ ಪ್ರಶ್ನೆ

    ಜಮಾತ್ ಉಲೇಮಾ ಟ್ರಸ್ಟ್ ಹಲಾಲ್ ಪ್ರಮಾಣಪತ್ರ ನೀಡುತ್ತಿದೆ. ಹಿಂದಿನಿಂದಲೂ ಈ ಸಂಸ್ಥೆ ಪ್ರಮಾಣಪತ್ರ ನೀಡುತ್ತಿದ್ದರೂ ಇಲ್ಲಿಯವರೆಗೆ ಅದು ದೊಡ್ಡ ಸುದ್ದಿಯಾಗಿರಲಿಲ್ಲ. ಹಲಾಲ್ ಬಗ್ಗೆ ಹಿಂದೆಯೂ ಧ್ವನಿ ಎತ್ತಲಾಗಿದ್ದರೂ ಕರ್ನಾಟಕದಲ್ಲಿ ಅಷ್ಟೊಂದು ಚರ್ಚೆ ಆಗಿರಲಿಲ್ಲ. ಆದರೆ ಹಿಜಬ್ ವಿವಾದದಲ್ಲಿ ಈ ಸಂಸ್ಥೆ ನೀಡಿದ ನಗದು ಬಹುಮಾನ ಹಿಂದೂ ಸಂಘಟನೆಗಳನ್ನು ಕೆರಳಿಸಿದೆ.

    ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದಕ್ಕಾಗಿ ಜಮಾತ್ ಉಲೇಮಾ ಟ್ರಸ್ಟ್ 5 ಲಕ್ಷ ರೂ. ಹಣ ಘೋಷಿಸಿತ್ತು. ಅಷ್ಟೇ ಅಲ್ಲದೇ ಸಿಎಎ ಪ್ರತಿಭಟನೆಯ ವೇಳೆಯೂ ಜಮಾತ್ ಉಲೇಮಾ ಟ್ರಸ್ಟ್ ಮುಸ್ಲಿಂ ಸಮುದಾಯದವರಿಗೆ ಹಣ ನೀಡಿದೆ ಎಂಬ ಆರೋಪ ಕೇಳಿ ಬಂದಿದೆ. ಹಲಾಲ್ ಸರ್ಟಿಫಿಕೇಟ್ ಪಡೆಯಲು ನೀಡಿದ ಹಣವನ್ನೇ ಈ ಸಂಸ್ಥೆ ಬಳಸಿಕೊಂಡಿದೆ ಎನ್ನುವುದು ಹಿಂದೂ ಸಂಘಟನೆಗಳ ಆರೋಪ. ಇದನ್ನೂ ಓದಿ: ಮಮತಾ ಬ್ಯಾನರ್ಜಿ ʼಮಾಫಿಯಾʼ ಹಿಡಿತದಲ್ಲಿ ಬಂಗಾಳ: ಬಿಜೆಪಿ ವರದಿ

    ಭಾರತ ಜಾತ್ಯಾತೀತ ರಾಷ್ಟ್ರ ಎಂದು ಸಂವಿಧಾನ ಹೇಳುತ್ತಿದೆ. ಹಿಜಬ್ ಹೋರಾಟದ ಸಮಯದಲ್ಲೂ ಮುಸ್ಲಿಂ ಸಂಘಟನೆಗಳು ನಮ್ಮದು ಜಾತ್ಯಾತೀತ ರಾಷ್ಟ್ರ, ಹಿಂದೂ ರಾಷ್ಟ್ರವಲ್ಲ ಎಂದು ಹೇಳಿದ್ದವು. ಹೀಗಿರುವಾಗ ಆಹಾರದಲ್ಲಿ ಜಾತಿ ಸಂಸ್ಥೆಯ ಪ್ರಮಾಣಪತ್ರ ಯಾಕೆ ಎನ್ನುವುದು ಹಿಂದೂ ಸಂಘಟನೆಗಳ ಪ್ರಶ್ನೆ. ಈ ಕಾರಣಕ್ಕೆ ರಾಜ್ಯಾದ್ಯಂತ ಹಲಾಲ್ ಮಾಂಸ ಖರೀದಿಸದಂತೆ ಹಿಂದೂ ಸಂಘಟನೆಗಳು ಹಿಂದೂ ಬಾಂಧವರಲ್ಲಿ ಮನವಿ ಮಾಡಿಕೊಳ್ಳುತ್ತಿದೆ. ಅಲ್ಲದೆ ಹಿಂದವೀ ಜಟ್ಕಾ ಕಟ್ ಚಿಕನ್ ಸೆಂಟರ್ ಓಪನ್ ಮಾಡಲು ಹಿಂದೂ ಸಂಘಟನೆಗಳು ತಿರ್ಮಾನಿಸಿದ್ದು, ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ಹಲಾಲ್ ಮಾಂಸ ಖರೀದಿಸದಂತೆ ಅಭಿಯಾನ ಅಭಿಯಾನ ಆರಂಭವಾಗಿದೆ.

    ಬೆಂಗಳೂರಿನಲ್ಲಿ ಹಲಾಲ್ ವಿರುದ್ಧ ಹಿಂದೂ ಸಂಘಟನೆಗಳು ನೂತನ ಅಭಿಯಾನ ಆರಂಭಿಸಿದ್ದು, ಹಿಂದವೀ ಮಾರ್ಟ್‍ನಲ್ಲಿ ಮಾಂಸ ಖರೀದಿಗೆ ಆಫರ್ ನೀಡಿ ಗ್ರಾಹಕರನ್ನು ಬರಮಾಡಿಕೊಂಡಿದ್ದಾರೆ. 5 ಕಿಮೀ ವ್ಯಾಪ್ತಿಯಲ್ಲಿ ಫ್ರೀ ಡೆಲಿವರಿ. 5 ಕಿಮೀ ದಾಟಿಹೋದ್ರೆ 50 ರೂ. ಹೆಚ್ಚುವರಿ ಶುಲ್ಕ ವಿಧಿಸಲು ಮುಂದಾಗಿದೆ. ಇದರೊಂದಿಗೆ ಮಾರುಕಟ್ಟೆಗಿಂತ 50 ರೂ. ಕಡಿಮೆ ದರದಲ್ಲಿ ಮಾಂಸ ಮಾರಾಟ ಮಾಡಲು ಹಿಂದವೀ ಮಾರ್ಟ್ ಮುಂದಾಗಿದೆ. ಹಲಾಲ್‍ಗೆ ಪ್ರತಿಯಾಗಿ ಹಿಂದೂ ಜಟ್ಕಾ ಕಟ್ ಶಾಪ್ ಓಪನ್ ಮಾಡಲು ಬೇಡಿಕೆ ಹೆಚ್ಚಾಗಿದೆ. ಇದನ್ನೂ ಓದಿ: ಶಂಕರಣ್ಣ@45: ಹೀಗೊಂದು ಸುದ್ದಿ ನಿಜನಾ?

  • Hijab Row: ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲ್ಲ ಎಂದ ಶಿಕ್ಷಣ ಸಚಿವರ ನಿಲುವು ಖಂಡನೀಯ: ಕ್ಯಾಂಪಸ್ ಫ್ರಂಟ್

    Hijab Row: ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲ್ಲ ಎಂದ ಶಿಕ್ಷಣ ಸಚಿವರ ನಿಲುವು ಖಂಡನೀಯ: ಕ್ಯಾಂಪಸ್ ಫ್ರಂಟ್

    ಬೆಂಗಳೂರು: ಹಿಜಬ್ ವಿಚಾರದಲ್ಲಿ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವುದಿಲ್ಲ ಎಂದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನಿಲುವು ಖಂಡನೀಯ ಎಂದು ಕ್ಯಾಂಪಸ್ ಫ್ರಂಟ್ ಕಿಡಿಕಾರಿದೆ.

    ಈ ಬಗ್ಗೆ ಮಾಧ್ಯಮ ಪ್ರಕಟನೆ ಹೊರಡಿಸಿರುವ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ, ಸಂವಿಧಾನವು ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯ ಮತ್ತು ಶಿಕ್ಷಣದ ಹಕ್ಕನ್ನು ನೀಡಿದೆ. ಆದರೆ ಈ ಹಕ್ಕನ್ನು ಕಸಿದಿರುವ ರಾಜ್ಯ ಸರ್ಕಾರದ ಅನ್ಯಾಯದ ಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ಸಾವಿರಾರು ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಇದೀಗ ವಿದ್ಯಾರ್ಥಿನಿಯರಿಗೆ ಮರು ಪರೀಕ್ಷೆ ನಡೆಸುವುದಿಲ್ಲ ಎಂದಿರುವ ಶಿಕ್ಷಣ ಸಚಿವರ ನಿಲುವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದಿದೆ. ಇದನ್ನೂ ಓದಿ: ಪರೀಕ್ಷೆಗೆ ಗೈರಾದ್ರೆ ಅಲ್ಲಿಗೇ ಮುಗೀತು, ಅವಕಾಶ ನೀಡಲ್ಲ: ಬಿ.ಸಿ.ನಾಗೇಶ್

    ಪದವಿ ಪೂರ್ವ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಸರ್ಕಾರವು ಚೆಲ್ಲಾಟವಾಡುತ್ತಿದ್ದು, ಇಂದು ರಾಜ್ಯದಲ್ಲಿ ಹಲವಾರು ಮುಸ್ಲಿಮ್ ವಿದ್ಯಾರ್ಥಿನಿಯರು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಸಚಿವರ ಹೇಳಿಕೆಯನ್ನು ಗಮನಿಸಿದರೆ, ಮುಸ್ಲಿಮ್ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿಸಿ ಅವರ ಸಾಕ್ಷರತಾ ಪ್ರಮಾಣವನ್ನು ಕಡಿಮೆ ಮಾಡಬೇಕೆಂಬ ದುರುದ್ದೇಶ ಅವರ ಹೇಳಿಕೆಯಲ್ಲಿ ಎದ್ದು ಕಾಣುತ್ತಿದೆ. ಶಿಕ್ಷಣವು ಪ್ರತಿಯೊಬ್ಬ ಪ್ರಜೆಗಳ ಮೂಲಭೂತ ಹಕ್ಕು, ಇದನ್ನು ಕಸಿಯಲು ಸಂವಿಧಾನ ಯಾರಿಗೂ ಅನುಮತಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರವು ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿನೊಂದಿಗೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು. ಹಾಗೆಯೇ ಸರ್ಕಾರವು ವಿದ್ಯಾರ್ಥಿಗಳ ಧಾರ್ಮಿಕ ಹಾಗೂ ಶಿಕ್ಷಣದ ಮೂಲಭೂತ ಹಕ್ಕನ್ನು ಖಾತರಿಪಡಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆ ಒತ್ತಾಯಿಸಿದ್ದಾರೆ.