Tag: Himachal Pradesh Assembly Election

  • ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಗೆದ್ದಿದ್ಹೇಗೆ?

    ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಗೆದ್ದಿದ್ಹೇಗೆ?

    ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಒಟ್ಟು 68 ಸ್ಥಾನಗಳ ಪೈಕಿ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಕಾಂಗ್ರೆಸ್ (Congress) ಬಿಜೆಪಿಗಿಂತ (BJP) ಗಮನಾರ್ಹ ಓಟ ಮುಂದುವರಿಸಿದೆ.

    ಹಿಮಾಚಲ ಪ್ರದೇಶದಲ್ಲಿ ಪ್ರತಿ ಚುನಾವಣೆಯಲ್ಲಿ ಸರ್ಕಾರ ಬದಲಾಗುತ್ತಿರುತ್ತದೆ. 2017ರಲ್ಲಿ ಬಿಜೆಪಿ 44 ಸ್ಥಾನ ಹಾಗೂ ಕಾಂಗ್ರೆಸ್ 21 ಸ್ಥಾನ ಗಳಿಸಿತ್ತು. ಆದರೆ ಈ ಬಾರಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಆಡಳಿತ ವೈಫಲ್ಯ, ಪಕ್ಷದೊಳಗೆ ಎದ್ದ ಬಂಡಾಯ ಬಿಜೆಪಿ ಹಿನ್ನಡೆಗೆ ಕಾರಣವಾಗಿದೆ. ಕಾಂಗ್ರೆಸ್ ನೀಡಿದ ಹೊಸ ಭರವಸೆಗಳಿಗೆ ಜನ ಮನಸೋತು ‘ಕೈ’ ಹಿಡಿದಿದ್ದಾರೆ. ಇದನ್ನೂ ಓದಿ: ಹಿಮಾಚಲದಲ್ಲಿ ಕಾಂಗ್ರೆಸ್‌ಗೆ ಅಧಿಕಾರ – ಛತ್ತೀಸ್‌ಗಢಕ್ಕೆ ಶಾಸಕರು ಶಿಫ್ಟ್‌

    ಅಧಿಕಾರ ವಿರೋಧಿ ಮತ್ತು ಹಾಲಿ ಸರ್ಕಾರವನ್ನು ಪುನರಾವರ್ತಿಸದಿರುವ ಗುಡ್ಡಗಾಡು ರಾಜ್ಯ ಸಂಪ್ರದಾಯ ಮುಂದುವರಿಕೆ
    ಹಿಮಾಚಲ ಪ್ರದೇಶವು ಯಾವುದೇ ಆಡಳಿತ ಪಕ್ಷವನ್ನು ಮುಂದುವರಿಸಲು ಬಿಡಲ್ಲ ಎಂಬಂತಿದೆ. ಕಳೆದ 37 ವರ್ಷಗಳಿಂದ, ಅದು ಹಾಲಿ ಸರ್ಕಾರಕ್ಕೆ ಮತ ಹಾಕಿಲ್ಲ. ಇದು ಈ ಬಾರಿಯ ಚುನಾವಣೆ ಫಲಿತಾಂಶದಲ್ಲೂ ಗೋಚರಿಸಿದಂತೆ ಕಾಣುತ್ತಿದೆ. ರಾಜ್ಯದ ಇಬ್ಬರು ಜನಪ್ರಿಯ ಮುಖ್ಯಮಂತ್ರಿಗಳಾಗಿದ್ದ ಕಾಂಗ್ರೆಸ್‌ನ ವೀರಭದ್ರ ಸಿಂಗ್ ಮತ್ತು ಬಿಜೆಪಿಯ ಪ್ರೇಮ್ ಕುಮಾರ್ ಧುಮಾಲ್ ಕೂಡ ಈ ರಾಜಕೀಯ ಸಂಸ್ಕೃತಿಯನ್ನು ಬದಲಾಯಿಸಲು ವಿಫಲರಾಗಿದ್ದಾರೆ. ಈ ಚುನಾವಣೆಗಳಲ್ಲಿಯೂ ಮತದಾರರು ಈ ಸಂಪ್ರದಾಯಕ್ಕೆ ಬದ್ಧರಾಗಿರುವಂತೆ ತೋರುತ್ತಿದೆ.

    ಆರು ಬಾರಿ ಮುಖ್ಯಮಂತ್ರಿಯಾಗಿದ್ದ ವೀರಭದ್ರ ಸಿಂಗ್ ಅವರು ಕಳೆದ ವರ್ಷ ನಿಧನರಾಗಿದ್ದು, ಪಕ್ಷದ ಬಗ್ಗೆ ಜನರಲ್ಲಿ ಮರುಕವುಂಟಾಗಿರುವುದು ಕಾಂಗ್ರೆಸ್ ಆಯ್ಕೆಗೆ ಪೂರಕವಾದಂತಿದೆ. ಗುಜರಾತ್‌ನಲ್ಲಿ ಬಿಜೆಪಿಗೆ ಅಪಾರ ಬೆಂಬಲದ ಅಲೆಯಿದ್ದರೂ, ಕಾಂಗ್ರೆಸ್ ಬಗೆಗೆ ಜನ ಸ್ವಲ್ಪ ಪ್ರೀತಿ ಉಳಿಸಿಕೊಂಡಿದ್ದಾರೆ. ಇಂದಿರಾ ಗಾಂಧಿ ಅವರು ನೀಡಿದ ಕೊಡುಗೆಯೇ ಇದಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಗುಜರಾತ್‌ ಚುನಾವಣೆ – ಕಾಂಗ್ರೆಸ್‌ ಹೀನಾಯ ಸೋಲಿಗೆ ಕಾರಣ ಏನು?

    ಸರ್ಕಾರಿ ನೌಕರರ ಬೆಂಬಲ ಮತ್ತು ಹಳೆಯ ಪಿಂಚಣಿ ಯೋಜನೆ
    ಹಿಮಾಚಲ ಪ್ರದೇಶದಲ್ಲಿ ಸರ್ಕಾರಿ ನೌಕರರ ಮತಬ್ಯಾಂಕ್ ಪ್ರಮುಖವಾಗಿದೆ. 2 ಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿದ್ದಾರೆ ಮತ್ತು ಶೇಕಡಾ 5 ರಷ್ಟು ಮತಗಳನ್ನು ಹೊಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೇ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿಗೆ ತರಲಾಗುವುದು ಎಂದು ಪ್ರಚಾರದ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ (Priyanka Gandhi Vadra) ಅವರು ಭರವಸೆ ನೀಡಿದ್ದರು. ಅದು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವರದಾನವಾಗಿದೆ.

    ಆಡಳಿತದಲ್ಲಿ ವೈಫಲ್ಯ ಮತ್ತು ಬಿಜೆಪಿಯಲ್ಲಿ ಬಂಡಾಯ
    ಸಿಎಂ ಜೈ ರಾಮ್ ಠಾಕೂರ್ ಅವರು ಉತ್ತಮ ವ್ಯಕ್ತಿತ್ವದವರಾದರೂ, ತಮ್ಮ ಹತ್ತಿರವಿರುವ ಕುತಂತ್ರಿಗಳ ಗುಂಪಿಗೆ ಸರ್ಕಾರ ನಡೆಸಲು ಬಿಡುತ್ತಿದ್ದಾರೆ ಎಂಬ ಭಾವನೆ ಜನರಲ್ಲಿತ್ತು.

    ಮುಖ್ಯ ಕಾರ್ಯದರ್ಶಿಗಳ ಆಗಾಗ್ಗೆ ಬದಲಾವಣೆ ಮಾಡಲಾಗುತ್ತಿತ್ತು. ಕಳೆದ ಐದು ವರ್ಷಗಳಲ್ಲಿ ರಾಜ್ಯವು ಏಳು ಅಧಿಕಾರಿಗಳನ್ನು ಹುದ್ದೆಯಲ್ಲಿ ನೋಡಿದೆ. ಪೊಲೀಸ್ ನೇಮಕಾತಿ ಹಗರಣ ಹಾಗೂ ಆರಿ ನಗರ ಪಂಚಾಯತ್ ಅಧಿಸೂಚನೆ ಮತ್ತು ಕರಡು ಶಿಮ್ಲಾ ಅಭಿವೃದ್ಧಿ ಯೋಜನೆಗಳ ವಿಚಾರದಲ್ಲಿ ತರಾತುರಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ಅಲ್ಲದೇ 11 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸುವ ಮೂಲಕ ಬಿಜೆಪಿ ಆಡಳಿತ ವಿರೋಧಿ ಅಲೆಗೆ ಕಾರಣವಾಯಿತು. ಇದನ್ನೂ ಓದಿ: ಗುಜರಾತ್‌ನಲ್ಲಿ ಆಪ್‌ಗೆ ಬಿಜೆಪಿಯಿಂದಲೇ ಫಂಡಿಂಗ್: ಸಿದ್ದರಾಮಯ್ಯ

    ಅಗ್ನಿಪಥ್, ನಿರುದ್ಯೋಗ, ಬೆಲೆ ಏರಿಕೆ
    ಹಿಮಾಚಲ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಯುವಕರು ಪ್ರತಿ ವರ್ಷ ಸಶಸ್ತ್ರ ಪಡೆಗಳನ್ನು ಸೇರುತ್ತಾರೆ. ಕೇಂದ್ರ ಸರ್ಕಾರದ ‘ಅಗ್ನಿಪಥ್’ ಯೋಜನೆಯಲ್ಲಿ ಸೈನಿಕರನ್ನು ಕೇವಲ ನಾಲ್ಕು ವರ್ಷಗಳವರೆಗೆ ನೇಮಕ ಮಾಡಿಕೊಳ್ಳುವುದಾಗಿ ಹೇಳಿದ್ದು, ರಾಜ್ಯದಲ್ಲಿ ಯುವಜನರ ಆಕ್ರೋಶಕ್ಕೆ ಕಾರಣವಾಯಿತು. ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ಬೆಂಬಲಿಸಿದ್ದ ಮೇಜರ್ ವಿಜಯ್ ಮಂಕೋಟಿಯಾ ಅವರಂತಹ ಹಿರಿಯರು ಕೂಡ ಈ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯು ಮಹಿಳೆಯರ ವಿರೋಧಕ್ಕೆ ಕಾರಣವಾಗಿರಬಹುದು ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ – ಗೆಲುವು ಯಾರಿಗೆ?

    ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ – ಗೆಲುವು ಯಾರಿಗೆ?

    ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆಗೆ ಚುನಾವಣೆ (Himachal Pradesh Assembly Election) ನಡೆಯುತ್ತಿದೆ. 68 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ (Election) ಈಗಾಗಲೇ ಆರಂಭಗೊಂಡಿದೆ. ಮತದಾನ ಸುಗಮವಾಗಿ ನಡೆಯಲು ಒಟ್ಟು 7,881 ಮತಗಟ್ಟೆಗಳನ್ನು ಸ್ಥಾಪಿಸಿದ್ದು ರಾಜ್ಯದಲ್ಲಿ ಪೊಲೀಸರು ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದಾರೆ. 981 ಮತಗಟ್ಟೆಗಳು ನಿರ್ಣಾಯಕವಾಗಿದ್ದರೆ 901 ಮತಗಟ್ಟೆಗಳು ದುರ್ಬಲವಾಗಿವೆ.

    ಬೆಳಗ್ಗೆ 11 ಗಂಟೆ ವೇಳೆಗೆ 17.98% ರಷ್ಟು ಮತದಾನವಾಗಿದ್ದು, ಗುಡ್ಡಗಾಡು ಪ್ರದೇಶಗಳಲ್ಲೂ ಜನರು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ. ಚುನಾವಣಾ ಆಯೋಗದ ನಿರ್ದೇಶನದಂತೆ 232 ಫ್ಲೈಯಿಂಗ್ ಸ್ಕ್ವಾಡ್ ಮತ್ತು 232 ಸ್ಟ್ಯಾಟಿಕ್ ಸರ್ವೆಲೆನ್ಸ್ ತಂಡಗಳನ್ನು ರಚಿಸಲಾಗಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ – ಮತದಾರರ ಕೈಯಲ್ಲಿ 412 ಅಭ್ಯರ್ಥಿಗಳ ಭವಿಷ್ಯ

    ಆಡಳಿತರೂಢ ಬಿಜೆಪಿ (BJP) ಮತ್ತೊಮ್ಮೆ ಅಧಿಕಾರಕ್ಕೆ ಬರುವ ಮೂಲಕ ರಾಜ್ಯದಲ್ಲಿರುವ ರಾಜಕೀಯ ಟ್ರೆಂಡ್ ಬದಲಿಸುವ ಲೆಕ್ಕಾಚಾರದಲ್ಲಿದೆ. ಇತ್ತ ಉಪ ಚುನಾವಣೆಗಳ ಗೆಲುವಿನ ಮೂಲಕ ವಿಶ್ವಾಸ ಹೆಚ್ಚಿಸಿರುವ ಕಾಂಗ್ರೆಸ್ (Congress) ಅಧಿಕಾರಕ್ಕೆ ಬರುವ ಪ್ರಯತ್ನದಲ್ಲಿದೆ. ಇದನ್ನೂ ಓದಿ: ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಆಟೋ ಪಲ್ಟಿ – ಜನರಿಂದ ತಪ್ಪಿಸಿಕೊಳ್ಳಲು ವಿದ್ಯುತ್ ಕಂಬ ಏರಿದ

    ನವೆಂಬರ್ 2021 ರಲ್ಲಿ ರಾಜ್ಯದಲ್ಲಿ ನಾಲ್ಕು ಉಪಚುನಾವಣೆಗಳನ್ನು ಗೆದ್ದ ನಂತರ, ಕಾಂಗ್ರೆಸ್ ಪಕ್ಷವು ಸಾರ್ವತ್ರಿಕ ಚುನಾವಣೆಯಲ್ಲೂ ಅದೇ ರೀತಿಯ ಪ್ರದರ್ಶನವನ್ನು ನಿರೀಕ್ಷಿಸುತ್ತಿದೆ. ಆದರೆ ಪಕ್ಷದಲ್ಲಿನ ಆಂತರಿಕ ಕಲಹ ಮತ್ತು ರಾಷ್ಟ್ರೀಯ ನಾಯಕರ ಪ್ರಚಾರದ ಕೊರತೆಯಿಂದ ಕಾಂಗ್ರೆಸ್ ಚುನಾವಣೆಯಲ್ಲಿ ಹಿಂದೆ ಬಿದ್ದಂತೆ ಕಂಡು ಬರುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡರಲ್ಲೂ ಬಂಡಾಯದ ಬಿಸಿ ಕಂಡು ಬಂದಿದೆ. ಆಡಳಿತ ವಿರೋಧಿ ಅಲೆ ಮತ್ತು ಶಾಸಕರ ಮೇಲಿನ ಅತೃಪ್ತಿ ಕಾರಣದಿಂದ ಬಿಜೆಪಿ ಕೆಲವು ಶಾಸಕರಿಗೆ ಟಿಕೆಟ್ ನಿರಾಕರಿಸಿದೆ. ಕಾಂಗ್ರೆಸ್ ಕೂಡಾ ಗೆಲವಿನ ದಡ ಸೇರಲು ಅಭ್ಯರ್ಥಿಗಳ ಆಯ್ಕೆಯಲ್ಲಿ ಮುತುವರ್ಜಿ ವಹಿಸಿದ್ದು ಕೆಲವು ಕ್ಷೇತ್ರಗಳಲ್ಲಿ ಬಂಡಾಯಕ್ಕೆ ಕಾರಣವಾಗಿದೆ.

    ಆಮ್ ಅದ್ಮಿ (AAP) ಮೊದಲ ಬಾರಿ ಚುನಾವಣಾ ಕಣದಲ್ಲಿದ್ದು ಅಬ್ಬರದ ಪ್ರಚಾರ ನಡೆಸಿದೆ. ಆದರೆ ಅದು ಎರಡಂಕಿಯ ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿಲ್ಲ ಎಂದು ತಜ್ಞರು ಹೇಳಿದ್ದಾರೆ. ಅದಾಗ್ಯೂ ಈ ಬಾರಿಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

    Live Tv
    [brid partner=56869869 player=32851 video=960834 autoplay=true]

  • ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ – ಮತದಾರರ ಕೈಯಲ್ಲಿ 412 ಅಭ್ಯರ್ಥಿಗಳ ಭವಿಷ್ಯ

    ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ – ಮತದಾರರ ಕೈಯಲ್ಲಿ 412 ಅಭ್ಯರ್ಥಿಗಳ ಭವಿಷ್ಯ

    ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತದಾನ (Himachal Pradesh Assembly Election) ಇಂದು ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

    ಒಟ್ಟು 55 ಲಕ್ಷ ಮತದಾರರು 68 ಕ್ಷೇತ್ರದ 412 ಅಭ್ಯರ್ಥಿಗಳ (Candidates) ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಆಡಳಿತಾರೂಢ ಬಿಜೆಪಿ (BJP), ಕಾಂಗ್ರೆಸ್ (Congress), ಎಎಪಿ (AAP) ಮತ್ತು ಇತರ ಪಕ್ಷಗಳ ಭವಿಷ್ಯ ಇಂದು ಮತಯಂತ್ರಗಳಲ್ಲಿ ಭದ್ರವಾಗಲಿದೆ. ಇಂದು ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ, ಕಾಂಗ್ರೆಸ್, ಎಎಪಿ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಚುನಾವಣಾ ಆಯೋಗದ ಪ್ರಕಾರ, ಒಟ್ಟು 55,92,828 ಮತದಾರರಲ್ಲಿ 27,37,845 ಮಹಿಳೆಯರು, 28,54,945 ಪುರುಷರು ಮತ್ತು 38 ತೃತೀಯಲಿಂಗಿಗಳು, 412 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಈ ಬಾರಿ 24 ಮಹಿಳಾ ಅಭ್ಯರ್ಥಿಗಳಿಳು ಕಣದಲ್ಲಿದ್ದಾರೆ. ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ ಪಿತೂರಿ ಕೇಸ್- ಮಠದ ಅಡುಗೆ ಸಹಾಯಕಿ ಅರೆಸ್ಟ್

    ಮತದಾನ ವೇಳೆ ಯಾವುದೇ ಅಹಿತಕರ ಘಟನೆ ನಡೆಯದೆ ಶಾಂತಿಯುತ ಮತದಾನ ನಡೆಸಲು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (CAPF) 67 ಕಂಪನಿಗಳು ಮತ್ತು 11,500 ಕ್ಕೂ ಹೆಚ್ಚು ರಾಜ್ಯ ಪೊಲೀಸ್ ಸಿಬ್ಬಂದಿ ಸೇರಿದಂತೆ ಸುಮಾರು 30,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸುಮಾರು 50 ಸಾವಿರ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ಎಲ್ಲಾ 68 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಸಿಪಿಐಎಂ 11, ಸಿಪಿಐ 1, ಬಿಎಸ್‍ಪಿ 53 ಮತ್ತು ಆರ್‌ಡಿಪಿ 29 ರಲ್ಲಿ ಸ್ಪರ್ಧಿಸುತ್ತಿವೆ. ಇದನ್ನೂ ಓದಿ: ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಆಟೋ ಪಲ್ಟಿ – ಜನರಿಂದ ತಪ್ಪಿಸಿಕೊಳ್ಳಲು ವಿದ್ಯುತ್ ಕಂಬ ಏರಿದ

    ಮತದಾನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಹಿಮಾಚಲ ಪ್ರದೇಶದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ತೆರಳಿ ಮತಚಲಾಯಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಪ್ರಜಾಪ್ರಭುತ್ವ ಹಬ್ಬದಲ್ಲಿ ಜನರು ಉತ್ಸಾಹದಿಂದ ಭಾಗವಹಿಸಿ, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿ. ಮೊದಲ ಬಾರಿ ಮತದಾನ ಮಾಡುತ್ತಿರುವ ಮತದಾರರಿಗೆ ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ. ಮೋದಿ 2 ದಿನಗಳ 4 ದಕ್ಷಿಣ ರಾಜ್ಯಗಳ ಪ್ರವಾಸದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]