Tag: Himachal Pradesh Elections

  • ಚುನಾವಣೆಗೂ ಮುನ್ನ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್ – 26 ನಾಯಕರು BJP ಸೇರ್ಪಡೆ

    ಚುನಾವಣೆಗೂ ಮುನ್ನ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್ – 26 ನಾಯಕರು BJP ಸೇರ್ಪಡೆ

    ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಮೊದಲ ಹಂತ ಚುನಾವಣೆಗೆ 4 ದಿನ ಬಾಕಿ ಇರುವಾಗಲೇ ಕಾಂಗ್ರೆಸ್‌ಗೆ (Congrees) ಭಾರಿ ಹಿನ್ನಡೆಯಾಗಿದ್ದು ದೊಡ್ಡ ನಾಯಕರ ಗುಂಪು ಭಾರತೀಯ ಜನತಾ ಪಕ್ಷವನ್ನು (BJP) ಸೇರ್ಪಡೆಗೊಂಡಿದೆ. 26 ನಾಯಕರನ್ನು ಸಿಎಂ ಜೈರಾಮ್ ಠಾಕೂರ್ (Jairam Thakur) ಪಕ್ಷಕ್ಕೆ ಬರ ಮಾಡಿಕೊಂಡರು.

    ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಧರಂಪಾಲ್ ಠಾಕೂರ್ (Dharampal Thakur), ಮಾಜಿ ಕಾರ್ಯದರ್ಶಿ ಆಕಾಶ್ ಸೈನಿ, ಮಾಜಿ ಕೌನ್ಸಿಲರ್ ರಾಜನ್ ಠಾಕೂರ್, ಮಾಜಿ ಜಿಲ್ಲಾ ಉಪಾಧ್ಯಕ್ಷ ಅಮಿತ್ ಮೆಹ್ತಾ, ಮೆಹರ್ ಸಿಂಗ್ ಕನ್ವರ್, ಯುವ ಕಾಂಗ್ರೆಸ್ (Youth Congress) ಅಧ್ಯಕ್ಷ ರಾಹುಲ್ ನೇಗಿ, ಜೈ ಮಾ ಶಕ್ತಿ ಸಮಾಜ ಸಂಸ್ಥಾನದ ಅಧ್ಯಕ್ಷ ಜೋಗಿಂದರ್ ಸೇರಿದ್ದಾರೆ.

    ಠಾಕೂರ್, ನರೇಶ್ ವರ್ಮಾ, ಚಮ್ಯಾನ ವಾರ್ಡ್ ಸದಸ್ಯ ಯೋಗೇಂದ್ರ ಸಿಂಗ್, ಟ್ಯಾಕ್ಸಿ ಯೂನಿಯನ್ ಸದಸ್ಯ ರಾಕೇಶ್ ಚೌಹಾಣ್, ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ ಶಿಮ್ಲಾ ಅಧ್ಯಕ್ಷ ಧರ್ಮೇಂದ್ರ ಕುಮಾರ್, ವೀರೇಂದ್ರ ಶರ್ಮಾ, ರಾಹುಲ್ ರಾವತ್, ಸೋನು ಶರ್ಮಾ, ಅರುಣ್ ಕುಮಾರ್, ಶಿವಂ ಕುಮಾರ್ ಮತ್ತು ಗೋಪಾಲ್ ಠಾಕೂರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಬಿಜೆಪಿಯ ಎಲ್ಲಾ ಕಾರ್ಯಕರ್ತರಿಗೆ ಆತ್ಮೀಯ ಸ್ವಾಗತ ಕೋರಿದರು. ಬಿಜೆಪಿಯ ಐತಿಹಾಸಿಕ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸೋಣ ಎಂದರು. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿ: ಆಜಾದ್

    ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿ: ಆಜಾದ್

    ಶ್ರೀನಗರ: ಕಾಂಗ್ರೆಸ್‌ನಿಂದ (Congress) ಬೇರ್ಪಟ್ಟ ನಂತರ ಸತತವಾಗಿ ವಾಗ್ದಾಳಿ ನಡೆಸುತ್ತಿದ್ದ ಕಾಂಗ್ರೆಸ್ ಮಾಜಿ ನಾಯಕ ಗುಲಾಂ ನಬಿ ಆಜಾದ್ (Ghulam Nabi Azad), ಗುಜರಾತ್ (Gujarat) ಮತ್ತು ಹಿಮಾಚಲ ಪ್ರದೇಶದ (Himachal Pradesh) ವಿಧಾನಸಭೆ ಚುನಾವಣೆಯಲ್ಲಿ (Assembly Polls) ಕಾಂಗ್ರೆಸ್ ಗೆಲ್ಲಲೆಂದು ನಾನು ಈಗಲೂ ಬಯಸುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

    ಶ್ರೀನಗರದಲ್ಲಿ ಮಾತನಾಡಿರುವ ಅವರು, ನಾನು ಕಾಂಗ್ರೆಸ್‌ನಿಂದ ಬೇರ್ಪಟ್ಟಿದ್ದರೂ ಎಂದೂ ಅದರ ಜಾತ್ಯತೀತ ಸಿದ್ಧಾಂತದ (Secularism) ವಿರುದ್ಧ ಇರಲಿಲ್ಲ. ಪಕ್ಷದ ವ್ಯವಸ್ಥೆ ದುರ್ಬಲವಾಗುತ್ತಿದ್ದರಿಂದ ನಾನು ಬೇರ್ಪಟ್ಟೆ ಅಷ್ಟೇ. ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ನೀಡಬೇಕೆಂದು ನಾನು ಬಯಸುತ್ತೇನೆ. ಅಲ್ಲಿ ಆಮ್ ಆದ್ಮಿ ಪಕ್ಷ (AAP) ಗೆಲ್ಲಲು ಸಾಧ್ಯವಿಲ್ಲ ಎಂದೂ ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್‌ನ್ಯೂಸ್‌ – ವಿಜಯಪುರದಿಂದ ಕೊಟ್ಟಾಯಂಗೆ ಹೊಸ ರೈಲು

    AAP 02

    ಎಎಪಿಯು ಕೇಂದ್ರಾಡಳಿತ ಪ್ರದೇಶ ದೆಹಲಿಯ (NewDelhi) ಪಕ್ಷ ಮಾತ್ರ. ಅವರು ಪಂಜಾಬ್ ಅನ್ನು ಸಮರ್ಥವಾಗಿ ನಡೆಸಲು ಸಾಧ್ಯವಿಲ್ಲ. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಸವಾಲು ಹಾಕಲು ಕಾಂಗ್ರೆಸ್ ಮಾತ್ರ ಸಾಧ್ಯ, ಏಕೆಂದರೆ ಎಲ್ಲರನ್ನೂ ಒಳಗೊಳ್ಳುವ ನೀತಿಯನ್ನು ಕಾಂಗ್ರೆಸ್ ಹೊಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರೋಹಿತ್‍ರನ್ನು ನೋಡಲೆಂದು ಮೈದಾನಕ್ಕಿಳಿದ ಅಭಿಮಾನಿಗೆ 6.5 ಲಕ್ಷ ರೂ. ಫೈನ್

    ಗುಲಾಂ ನಬಿ ಆಜಾದ್ ಅವರು ಇತ್ತೀಚೆಗೆ ಕಾಂಗ್ರೆಸ್ ತೊರೆದು ಹೊಸ ಪಕ್ಷ ಸ್ಥಾಪನೆ ಮಾಡಿದ್ದರು. ಕಾಂಗ್ರೆಸ್‌ನ ವಿರುದ್ಧ ಹಲವು ಟೀಕೆಗಳನ್ನು ಮಾಡಿದ್ದ ಅವರು ಇದೀಗ ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಮಾತೃ ಪಕ್ಷದ ಪರ ಬ್ಯಾಟಿಂಗ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೋದಿ ಮೇಲೆ ನಂಬಿಕೆ ಇಟ್ಟಿದ್ದಾರೆ, ಕಾಂಗ್ರೆಸ್ ಮುಕ್ತ ಭಾರತ ಮುಂದುವರೆಯಲಿದೆ: ಮುರಳೀಧರ್ ರಾವ್

    ಮೋದಿ ಮೇಲೆ ನಂಬಿಕೆ ಇಟ್ಟಿದ್ದಾರೆ, ಕಾಂಗ್ರೆಸ್ ಮುಕ್ತ ಭಾರತ ಮುಂದುವರೆಯಲಿದೆ: ಮುರಳೀಧರ್ ರಾವ್

    ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇಲೆ ಜನರು ಇನ್ನೂ ನಂಬಿಕೆ ಇಟ್ಟಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಮುಕ್ತ ಭಾರತ ಮುಂದುವರಿಯಲಿದೆ ಎಂದು ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಗೆ ಮುರಳೀಧರ್ ರಾವ್ ಪ್ರತಿಕ್ರಿಯೆ ನೀಡಿ, ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ನೀರಿಕ್ಷಿತ ಮಟ್ಟ ತಲುಪುತ್ತಿದ್ದೇವೆ. ಎರಡು ರಾಜ್ಯದಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ. 22 ವರ್ಷಗಳ ಆಡಳಿತ ಜೊತೆಗೆ ಮತ್ತೆ ಗುಜರಾತ್ ನಲ್ಲಿ ಬಿಜೆಪಿ ಅಧಿಕಾರ ಬರುತ್ತೆ ಎಂದು ಸಂತಸದಿಂದ ಹೇಳಿದರು.

    ಪ್ರಧಾನಿ ಮೋದಿ ಮೇಲೆ ಜನರು ಇನ್ನೂ ನಂಬಿಕೆ ಇಟ್ಟಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಮುಕ್ತ ಭಾರತ ಮುಂದುವರಿಯಲಿದೆ. ಮೋದಿ ಪ್ರತಿಬಾರಿ ಎಲ್ಲಾ ಕಡೆ ಪ್ರಚಾರ ಮಾಡುವಂತೆ ಮಾಡಿದ್ದಾರೆ. ಮೋದಿ ಗುಜರಾತಿನ ಮುಖ್ಯಮಂತ್ರಿಯಾಗಿದ್ದವರು. ಅಷ್ಟೇ ಅಲ್ಲದೇ ಅಮಿತ್ ಷಾ ರಾಜ್ಯ ಸಭಾ ಸದಸ್ಯರಾಗಿದ್ದರು. ಆದ್ದರಿಂದ ಅವರು ಪ್ರಚಾರ ಮಾಡುವುದರಲ್ಲಿ ತಪ್ಪಿಲ್ಲ ಎಂದರು.

    ನಮ್ಮ ನಿರೀಕ್ಷೆ 150 ಸೀಟುಗಳಾಗಿತ್ತು. ಆದರೆ ನಮ್ಮ ನಿರೀಕ್ಷೆಗಿಂತ ಕಡಿಮೆ ಬರುವ ಸಾಧ್ಯತೆ ಇದೆ. ಮೊದಲು ಪೂರ್ಣ ಫಲಿತಾಂಶ ಬಂದ ಮೇಲೆ ಸ್ಥಾನ ಕಡಿಮೆ ಆಗಲು ಏನು ಕಾರಣ ಎಂಬುದರ ಬಗ್ಗೆ ಚರ್ಚೆ ಮಾಡುತ್ತೇವೆ. ಈ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲಿದೆ. ಕರ್ನಾಟಕದಲ್ಲೂ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ತಿಳಿಸಿದ್ದಾರೆ.