Tag: Himanta Biswa Sarma

  • ಅಸ್ಸಾಂನಲ್ಲಿ ಹೋಟೆಲ್‌, ರೆಸ್ಟೋರೆಂಟ್‌, ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ, ಸೇವನೆ ನಿಷೇಧ!

    ಅಸ್ಸಾಂನಲ್ಲಿ ಹೋಟೆಲ್‌, ರೆಸ್ಟೋರೆಂಟ್‌, ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ, ಸೇವನೆ ನಿಷೇಧ!

    ಗುವಾಹಟಿ: ಅಸ್ಸಾಂನಲ್ಲಿ ಹೋಟೆಲ್‌ (Hotels), ರೆಸ್ಟೋರೆಂಟ್‌ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸುವುದಾಗಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಘೋಷಿಸಿದ್ದಾರೆ.

    ಗೋಮಾಂಸ (Beef )ಸೇವನೆಯ ಬಗ್ಗೆ ಅಸ್ತಿತ್ವದಲ್ಲಿರುವ ಕಾನೂನಿಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಮಸೂದೆಯ ನಿಬಂಧನೆಗಳನ್ನು ಉಲ್ಲಂಘಿಸಿದರೆ 3 ರಿಂದ 8 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 3 ಲಕ್ಷ ರೂ. 5 ಲಕ್ಷ ರೂ. ವರೆಗೆ ದಂಡ ವಿಧಿಸಬಹುದು. ಸರ್ಕಾರದ ನಿರ್ಣಯಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷಗಳು ವಿಸ್ತೃತ ಚರ್ಚೆಗಾಗಿ ಕಾನೂನನ್ನು ಆಯ್ಕೆ ಸಮಿತಿಗೆ ಕಳುಹಿಸಬೇಕೆಂದು ಆಗ್ರಹಿಸಿ ಕಲಾಪ ಬಹಿಷ್ಕರಿಸಿದವು. ಇದನ್ನೂ ಓದಿ: ವಿಜಯೇಂದ್ರ ಗುಂಪುಗಾರಿಕೆ ಮಾಡುತ್ತಿದ್ದಾರೆ, ಪಕ್ಷದ ಚೌಕಟ್ಟಿನಲ್ಲಿ ಮಾತನಾಡಿದ್ದೇನೆ: ಯತ್ನಾಳ್‌ ಚಾರ್ಜ್‌

    ಸಂಪುಟದ ನಿರ್ಣಯ ಸಮರ್ಥಿಸಿಕೊಂಡ ಸಿಎಂ ಶರ್ಮಾ, ಅಸ್ಸಾಂನಲ್ಲಿ ಗೋಮಾಂಸ ಸೇವನೆಯು ಕಾನೂನುಬಾಹಿರವಲ್ಲ. ಆದ್ರೆ 2021ರ ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆಯು ರಾಜ್ಯದಲ್ಲಿ ಎಲ್ಲಾ ಜಾನುವಾರುಗಳ ಸಾಗಣೆ, ಹತ್ಯೆ, ಗೋಮಾಂಸ ಮತ್ತು ಗೋಮಾಂಸ ಉತ್ಪನ್ನಗಳ ಮಾರಾಟವನ್ನು ನಿಯಂತ್ರಿಸುತ್ತದೆ. ನಾವು ಈ ಹಿಂದೆ ಅಸ್ಸಾಂನಲ್ಲಿ ಗೋವುಗಳನ್ನು ರಕ್ಷಿಸುವ ಮಸೂದೆ ಪರಿಚಯಿಸಿದ್ದೇವೆ, ಅದರಲ್ಲಿ ಯಶಸ್ವಿಯೂ ಆಗಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: Ballari | ಐವಿ ದ್ರಾವಣ ಪೂರೈಕೆ ಮಾಡಿದ ಕಂಪನಿ ವಿರುದ್ಧ ಕೇಸ್ ದಾಖಲಿಸಲು ತಾಕೀತು

    ಮುಂದೆ ರಾಜ್ಯದ ಯಾವುದೇ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಗೋಮಾಂಸ ನೀಡದಂತೆ ನೋಡಿಕೊಳ್ಳಲು ನಾವು ನಿರ್ಧರಿಸಿದ್ದೇವೆ. ಅಲ್ಲದೇ ಸಾರ್ವಜನಿಕ ಸಮಾರಂಭಗಳಲ್ಲೂ ದನದ ಮಾಂಸ ಕೊಡಬಾರದು. ಜೊತೆಗೆ 2021ರ ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆಯ ಅನ್ವಯ ಹಿಂದೂಗಳು, ಜೈನರು ಮತ್ತು ಸಿಖ್ಖರು ಬಹುಸಂಖ್ಯಾತರಾಗಿರುವ ಪ್ರದೇಶಗಳಲ್ಲಿ ಮತ್ತು ದೇವಸ್ಥಾನ ಅಥವಾ ಸತ್ರ (ವೈಷ್ಣವ ಮಠ)ದ 5 ಕಿಲೋಮೀಟರ್ ವ್ಯಾಪ್ತಿಯೊಳಗೆ ಗೋಹತ್ಯೆ ಮತ್ತು ಗೋಮಾಂಸ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ ಎಂದು ತಿಳಿಸಿರುವುದಾಗಿ ವರದಿಯಾಗಿದೆ.

    ಸರ್ಕಾರದ ಈ ನಿರ್ಣಯಕ್ಕೆ ತೀವ್ರ ವಿರೋಧ ವ್ಯಕ್ತವಾಯಿತು. ಪ್ರತಿಪಕ್ಷ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಇದು ಪ್ರಮುಖ ವಿಷಯಗಳಿಂದ ರಾಜ್ಯದ ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದೆ ಎಂದು ಕಿಡಿ ಕಾರಿತು. ಇದನ್ನೂ ಓದಿ: ಮುಡಾದಲ್ಲಿ ನಡೆದಿರೋದು 4-5 ಸಾವಿರ ಕೋಟಿ ಹಗರಣ: ಆರ್‌. ಅಶೋಕ್‌ ಬಾಂಬ್‌

    ರಾಜ್ಯ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ, ನಿರುದ್ಯೋಗ ಸಮಸ್ಯೆ ನಿವಾರಿಸುವಲ್ಲಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿದೆ. ಆದ್ರೆ ಈ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಲುವಾಗಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಎಐಯುಡಿಎಫ್ ಶಾಸಕ ಅಮಿನುಲ್ ಇಸ್ಲಾಂ ಹೇಳಿದ್ದಾರೆ.

  • ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ರೆ ಆಧಾರ್‌ ಕಾರ್ಡ್‌ ಇಲ್ಲ: ಅಸ್ಸಾಂ ಸಿಎಂ ಘೋಷಣೆ

    ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ರೆ ಆಧಾರ್‌ ಕಾರ್ಡ್‌ ಇಲ್ಲ: ಅಸ್ಸಾಂ ಸಿಎಂ ಘೋಷಣೆ

    ಗುವಾಹಟಿ: 2014 ರಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಭಾಗವಾಗಲು ಅರ್ಜಿ ಸಲ್ಲಿಸದ ಜನರಿಗೆ ಆಧಾರ್ ಕಾರ್ಡ್‌ಗಳನ್ನು ನೀಡದಿರುವ ಸರ್ಕಾರದ ನಿರ್ಧಾರವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಪ್ರಕಟಿಸಿದ್ದಾರೆ.

    ಧುಬ್ರಿ, ಬಾರ್ಪೇಟಾ, ಮೊರಿಗಾಂವ್‌ ಜಿಲ್ಲೆಗಳಲ್ಲಿ ಒಟ್ಟು ಆಧಾರ್‌ ಕಾರ್ಡ್‌ಗಳ ಸಂಖ್ಯೆ ಅಲ್ಲಿನ ಜನಸಂಖ್ಯೆಯನ್ನೂ ಮೀರಿದೆ. ಈ ಮೂರು ಜಿಲ್ಲೆಗಳಲ್ಲಿ ಮುಸ್ಲಿಂ ಬಹುಸಂಖ್ಯಾತರು, ಯೋಜಿತ ಜನಸಂಖ್ಯೆಯ ಅಂಕಿಅಂಶಗಳಿಗೆ ವಿರುದ್ಧವಾಗಿ ನೀಡಲಾದ ಆಧಾರ್ ಕಾರ್ಡ್‌ಗಳ ಶೇಕಡಾವಾರು ಪ್ರಮಾಣವು ಕ್ರಮವಾಗಿ ಧುಬ್ರಿ, ಬಾರ್ಪೇಟಾ ಮತ್ತು ಮೊರಿಗಾಂವ್‌ಗೆ 103%, 103% ಮತ್ತು 101% ಆಗಿದೆ. ಆದ್ದರಿಂದ, ಈ ಜಿಲ್ಲೆಗಳಲ್ಲಿ ಶಂಕಿತ ವಿದೇಶಿಗರು ಸಹ ಆಧಾರ್ ಕಾರ್ಡ್‌ಗಳನ್ನು ಪಡೆದು ಪ್ರವೇಶಿಸಿದ್ದಾರೆ ಎಂದು ತೀರ್ಮಾನಿಸಬಹುದೆಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಫಿನಾಡಲ್ಲೊಬ್ಬ ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ನರ ಭಾವೈಕ್ಯತಾ ಗಣಪ!

    ಭವಿಷ್ಯದಲ್ಲಿ ಆಧಾರ್ ಕಾರ್ಡ್‌ಗಳ ವಿತರಣೆಗಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೋಟೋಕಾಲ್ ಅನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದು 2015 ರಲ್ಲಿ ಅರ್ಜಿ ಸಲ್ಲಿಸುವಾಗ ಅವರಿಗೆ ಒದಗಿಸಲಾದ ತಮ್ಮ ಎನ್‌ಆರ್‌ಸಿ ಅರ್ಜಿ ಸಂಖ್ಯೆಯನ್ನು ಕಡ್ಡಾಯವಾಗಿ ಒದಗಿಸುವಂತೆ ಮಾಡುತ್ತದೆ ಎಂದು ಮಾಹಿತಿ ನೀಡಿದ್ದಾರೆ.

    3.3 ಕೋಟಿ ಜನರ ಪಟ್ಟಿಯಲ್ಲಿಲ್ಲದ ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸಿದವರಿಗೆ ಆಧಾರ್ ಕಾರ್ಡ್‌ಗಳನ್ನು ನೀಡಲಾಗುವುದಿಲ್ಲ ಎಂದು ಶರ್ಮಾ ಸೂಚಿಸಿದ್ದಾರೆ. ಇದನ್ನೂ ಓದಿ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಗಲಾಟೆ; 2 ಗುಂಪಿನ ನಡುವೆ ಮಾರಾಮಾರಿ

  • ಮುಸ್ಲಿಂ ಶಾಸಕರಿಗೆ 2 ಗಂಟೆ ಅವಧಿಯ ನಮಾಜ್‌ ಬ್ರೇಕ್‌ಗೆ ತಡೆ – ಅಸ್ಸಾಂ ನಿರ್ಧಾರಕ್ಕೆ ಎನ್‌ಡಿಎ ಮೈತ್ರಿಕೂಟದಿಂದಲೇ ವಿರೋಧ

    ಮುಸ್ಲಿಂ ಶಾಸಕರಿಗೆ 2 ಗಂಟೆ ಅವಧಿಯ ನಮಾಜ್‌ ಬ್ರೇಕ್‌ಗೆ ತಡೆ – ಅಸ್ಸಾಂ ನಿರ್ಧಾರಕ್ಕೆ ಎನ್‌ಡಿಎ ಮೈತ್ರಿಕೂಟದಿಂದಲೇ ವಿರೋಧ

    ನವದೆಹಲಿ: ಮುಸ್ಲಿಂ ಶಾಸಕರು ಶುಕ್ರವಾರ ನಮಾಜ್‌ (Namaz) ಮಾಡಲು ನೀಡುತ್ತಿದ್ದ ಬ್ರೇಕ್‌ ಹಿಂತೆಗೆದುಕೊಂಡಿರುವ ಅಸ್ಸಾಂ (Assam) ಸರ್ಕಾರದ ವಿರುದ್ಧ ಎನ್‌ಡಿಎ (NDA) ಮೈತ್ರಿಕೂಟದಿಂದಲೇ ವಿರೋಧ ವ್ಯಕ್ತವಾಗಿದೆ.

    ಪ್ರಮುಖ ಎನ್‌ಡಿಎ ಮಿತ್ರಪಕ್ಷಗಳಾದ ಜೆಡಿಯು ಮತ್ತು ಎಲ್‌ಜೆಪಿ ಪಕ್ಷಗಳು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರೊಂದಿಗೆ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿವೆ. ಮುಸ್ಲಿಂ ಶಾಸಕರು ನಮಾಜ್ ಮಾಡಲು ಶುಕ್ರವಾರದ ಎರಡು ಗಂಟೆಗಳ ವಿರಾಮವನ್ನು ನಿಲ್ಲಿಸುವ ರಾಜ್ಯ ವಿಧಾನಸಭೆಯ ನಿರ್ಧಾರವನ್ನು ಟೀಕಿಸಿದ್ದಾರೆ. ಆದಾಗ್ಯೂ, ಹಿಂದೂ ಮತ್ತು ಮುಸ್ಲಿಂ ಶಾಸಕರ ನಡುವಿನ ಒಮ್ಮತದ ಮೂಲಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶರ್ಮಾ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಸ್ಸಾಂ ವಿಧಾನಸಭೆಯ ಶುಕ್ರವಾರದ 2 ಗಂಟೆ ಅವಧಿಯ ನಮಾಜ್ ಬ್ರೇಕ್‌ಗೆ ತಡೆಯೊಡ್ಡಿದ ಸಿಎಂ ಶರ್ಮಾ

    ರಾಜ್ಯ ವಿಧಾನಸಭೆಯಲ್ಲಿ ಜುಮ್ಮಾ ಪ್ರಾರ್ಥನೆಗಾಗಿ ಎರಡು ಗಂಟೆಗಳ ಕಾಲ ಅಧಿವೇಶನವನ್ನು ಮುಂದೂಡಲಾಗುತ್ತಿತ್ತು. ಇದನ್ನು ಕೊನೆಗೊಳಿಸುವ ಅಸ್ಸಾಂ ಸರ್ಕಾರದ ನಿರ್ಧಾರವನ್ನು ಜೆಡಿಯು ಕಾರ್ಯಾಧ್ಯಕ್ಷ ನೀರಜ್ ಕುಮಾರ್ ಟೀಕಿಸಿದ್ದಾರೆ. ಬಡತನ ನಿರ್ಮೂಲನೆ ಮತ್ತು ಪ್ರವಾಹ ತಡೆಗಟ್ಟುವಿಕೆಯಂತಹ ವಿಷಯಗಳ ಬಗ್ಗೆ ಶರ್ಮಾ ಅವರು ಗಮನಹರಿಸಬೇಕು ಎಂದು ಹೇಳಿದ್ದಾರೆ.

    ಅಸ್ಸಾಂ ಮುಖ್ಯಮಂತ್ರಿಯ ನಿರ್ಧಾರವು ದೇಶದ ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ. ಪ್ರತಿಯೊಂದು ಧಾರ್ಮಿಕ ನಂಬಿಕೆಯು ಅದರ ಸಂಪ್ರದಾಯಗಳನ್ನು ಕಾಪಾಡುವ ಹಕ್ಕನ್ನು ಹೊಂದಿದೆ. ನಾನು ಸಿಎಂ ಶರ್ಮಾ ಅವರನ್ನು ಕೇಳಲು ಬಯಸುತ್ತೇನೆ. ನೀವು ರಂಜಾನ್ ಸಮಯದಲ್ಲಿ ಶುಕ್ರವಾರ ರಜೆಯ ಮೇಲೆ ನಿಷೇಧ ಹೇರುತ್ತಿದ್ದೀರಿ. ಮಾ ಕಾಮಾಖ್ಯ ದೇವಾಲಯದಲ್ಲಿ ನೀವು ತ್ಯಾಗದ ಆಚರಣೆಯನ್ನು ನಿಷೇಧಿಸಬಹುದೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಹಲಾಲ್ ಮುಕ್ತ ಗಣೇಶ ಹಬ್ಬ ಆಚರಿಸಿ: ಪ್ರಮೋದ್ ಮುತಾಲಿಕ್ ಮನವಿ

    ನಮ್ಮ ವಿಧಾನಸಭೆಯ ಹಿಂದೂಗಳು ಮತ್ತು ಮುಸ್ಲಿಮರು ಶಾಸಕರ ನಿಯಮ ಸಮಿತಿಯಲ್ಲಿ ಕುಳಿತು, ‘ನಮಾಜ್‌ಗೆ ಎರಡು ಗಂಟೆಗಳ ವಿರಾಮ ಸರಿಯಲ್ಲ’ ಎಂದು ಸರ್ವಾನುಮತದಿಂದ ನಿರ್ಣಯಿಸಿದ್ದಾರೆ. ಈ ಅವಧಿಯಲ್ಲಿಯೂ ನಾವು ಕೆಲಸ ಮಾಡಬೇಕು. ಈ ಅಭ್ಯಾಸವು 1937 ರಲ್ಲಿ ಪ್ರಾರಂಭವಾಯಿತು. ಅದನ್ನು ಈಗ ಸ್ಥಗಿತಗೊಳಿಸಲಾಗಿದೆ ಎಂದು ಅಸ್ಸಾಂ ಸಿಎಂ ಸಮರ್ಥಿಸಿಕೊಂಡಿದ್ದಾರೆ.

  • ಅಸ್ಸಾಂ ವಿಧಾನಸಭೆಯ ಶುಕ್ರವಾರದ 2 ಗಂಟೆ ಅವಧಿಯ ನಮಾಜ್ ಬ್ರೇಕ್‌ಗೆ ತಡೆಯೊಡ್ಡಿದ ಸಿಎಂ ಶರ್ಮಾ

    ಅಸ್ಸಾಂ ವಿಧಾನಸಭೆಯ ಶುಕ್ರವಾರದ 2 ಗಂಟೆ ಅವಧಿಯ ನಮಾಜ್ ಬ್ರೇಕ್‌ಗೆ ತಡೆಯೊಡ್ಡಿದ ಸಿಎಂ ಶರ್ಮಾ

    – ಮುಸ್ಲಿಂ ಶಾಸಕರಿಗೆ ನಮಾಜ್‌ ವಿರಾಮಕ್ಕಿಲ್ಲ ಅವಕಾಶ

    ಗುವಾಹಟಿ: ಶುಕ್ರವಾರದಂದು ಮುಸ್ಲಿಂ ಶಾಸಕರಿಗೆ (Muslim MLAs) ಎರಡು ಗಂಟೆಗಳ ನಮಾಜ್ ವಿರಾಮ ನೀಡುವ ದಶಕಗಳ ಹಿಂದಿನ ನಿಯಮವನ್ನು ರದ್ದುಗೊಳಿಸಲು ಅಸ್ಸಾಂ ವಿಧಾನಸಭೆ (Assam) ನಿರ್ಧರಿಸಿದೆ.

    ಸದನದ ಕಲಾಪವನ್ನು ಇತರ ದಿನಗಳಂತೆ ಶುಕ್ರವಾರವೂ ಮುಂದುವರಿಸಲು ವಿಧಾನಸಭೆ ನಿಯಮಗಳ ಸಮಿತಿ ಇಂದು ನಿರ್ಣಯವನ್ನು ಅಂಗೀಕರಿಸಿದೆ. ಇಂದಿನವರೆಗೂ, ಮುಸ್ಲಿಂ ಶಾಸಕರು ನಮಾಜ್ ಪ್ರಾರ್ಥನೆಗೆ ಹಾಜರಾಗುವುದಕ್ಕಾಗಿ ಅಸ್ಸಾಂ ವಿಧಾನಸಭೆಯನ್ನು ಶುಕ್ರವಾರದಂದು ಎರಡು ಗಂಟೆಗಳ ಕಾಲ ಮುಂದೂಡಲಾಗುತ್ತಿತ್ತು. ಇದನ್ನೂ ಓದಿ: ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ – ಕ್ಷಮೆಯಾಚಿಸಿದ ಪ್ರಧಾನಿ ಮೋದಿ

    ಅಸ್ಸಾಂ ಶಾಸಕಾಂಗ ಸಭೆ ರಚನೆಯಾದಾಗಿನಿಂದ, ಮುಸ್ಲಿಂ ಸದಸ್ಯರಿಗೆ ನಮಾಜ್ ಮಾಡಲು ಅನುಕೂಲವಾಗುವಂತೆ ಶುಕ್ರವಾರದ ವಿಧಾನಸಭೆಯ ಅಧಿವೇಶನವನ್ನು ಬೆಳಗ್ಗೆ 11 ಗಂಟೆಗೆ ಮುಂದೂಡಲಾಗುತ್ತಿತ್ತು. ಮುಸ್ಲಿಂ ಸದಸ್ಯರು ಬಂದ ನಂತರ ಮಧ್ಯಾಹ್ನದ ಭೋಜನದ ಬಳಿಕ ಕಲಾಪವನ್ನು ಪುನರಾರಂಭಿಸುತ್ತಿತ್ತು.

    ಸ್ಪೀಕರ್ ಬಿಸ್ವಜಿತ್ ಡೈಮರಿ‌, ಸಂವಿಧಾನದ ಜಾತ್ಯತೀತ ಸ್ವರೂಪದ ದೃಷ್ಟಿಯಿಂದ ಅಸ್ಸಾಂ ವಿಧಾನಸಭೆಯು ಯಾವುದೇ ದಿನದಂತೆ ಶುಕ್ರವಾರದಂದು ಯಾವುದೇ ಮುಂದೂಡಿಕೆ ಇಲ್ಲದೆ ತನ್ನ ಕಲಾಪಗಳನ್ನು ನಡೆಸಬೇಕು ಎಂದು ಪ್ರಸ್ತಾಪಿಸಿದರು. ಇದನ್ನೂ ಓದಿ: ಚುನಾವಣೆಗೆ ರಾಹುಲ್ ಗಾಂಧಿಗೆ ಎಷ್ಟು ಹಣ ನೀಡಲಾಗಿದೆ? – ಲೆಕ್ಕ ನೀಡಿದ ಕಾಂಗ್ರೆಸ್‌

    ಈ ನಿಯಮವನ್ನು ಅಸ್ಸಾಂ ಸಿಎಂ ಹಿಮಂತ್‌ ಬಿಸ್ವಾ ಶರ್ಮಾ (Himanta Biswa Sarma) ಸ್ವಾಗತಿಸಿದ್ದಾರೆ. ಆದರೆ ಪ್ರತಿಪಕ್ಷಗಳು ಈ ಕ್ರಮವನ್ನು ಟೀಕಿಸಿವೆ. ಇದು ‘ಮುಸ್ಲಿಂ ಭಾವನೆಗಳನ್ನು ನೋಯಿಸುತ್ತದೆ’ ಎಂದು ಪ್ರತಿಪಾದಿಸಿವೆ.

  • ಬಿಜೆಪಿಗೆ ಸೇರೋದಾದ್ರೆ ಮನೆಗೆ ಹೋಗಿ ಕರ್ಕೊಂಡು ಬರ್ತೀನಿ: ಖರ್ಗೆಗೆ ಹಿಮಂತ ಬಿಸ್ವಾ ಶರ್ಮಾ ತಿರುಗೇಟು

    ಬಿಜೆಪಿಗೆ ಸೇರೋದಾದ್ರೆ ಮನೆಗೆ ಹೋಗಿ ಕರ್ಕೊಂಡು ಬರ್ತೀನಿ: ಖರ್ಗೆಗೆ ಹಿಮಂತ ಬಿಸ್ವಾ ಶರ್ಮಾ ತಿರುಗೇಟು

    ಗುವಾಹಟಿ: ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಬಿಜೆಪಿ ಸೇರಲು ಬಯಸುವುದಾದರೆ ನಾನು ಅವರ ಮನೆಗೆ ಹೋಗಿ ಅವರನ್ನು ಕರೆದೊಯ್ಯುತ್ತೇನೆ. ಇಲ್ಲದಿದ್ದರೆ ಅವರು ಪ್ರಧಾನಿಯನ್ನು ಭೇಟಿ ಮಾಡುವ ಅವಶ್ಯಕತೆ ಏನು ಎಂದು ಪ್ರಶ್ನಿಸುವ ಮೂಲಕ ಅಸ್ಸಾಂ (Assam) ಸಿಎಂ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ.

    ಕಾಂಗ್ರೆಸ್‌ ಪ್ರಣಾಳಿಕೆ ವಿವರಿಸಲು ಮೋದಿ (PM Narendra Modi) ಬಳಿ ಮಲ್ಲಿಕಾರ್ಜುನ ಖರ್ಗೆ ಸಮಯ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಮೋದಿ ಅವರಿಗೆ ಇಂಗ್ಲಿಷ್ ಚೆನ್ನಾಗಿ ಓದಲು ಮತ್ತು ಬರೆಯಲು ಬರುತ್ತದೆ. ಪ್ರಣಾಳಿಕೆಯನ್ನು ಹಿಂದಿ ಮತ್ತು ಇಂಗ್ಲಿಷ್ ಎರಡರಲ್ಲೂ ಬರೆದಿದ್ದೀರಿ. ಪ್ರಣಾಳಿಕೆಯನ್ನು ಜನರ ಮುಂದೆ ಇಡಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ರಾಜ್ಯದಲ್ಲಿ 9.21% ಮತದಾನ – ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ವೋಟ್‌

    ಕಾಂಗ್ರೆಸ್‌ (Congress) ಅಧಿಕಾರಕ್ಕೆ ಬಂದರೆ ದೇಶದ ವ್ಯಕ್ತಿಯ ಪಿತ್ರಾರ್ಜಿತ ಆಸ್ತಿಯನ್ನು ತೆಗೆದುಕೊಳ್ಳುತ್ತದೆ. ಜನರು ಬದುಕಿದ್ದಾಗ ಲೂಟಿ ಮಾಡಿದ್ದು ಅಲ್ಲದೇ ಈಗ ವ್ಯಕ್ತಿ ಮೃತಪಟ್ಟ ಬಳಿಕವೂ ಲೂಟಿಗೆ ಇಳಿದಿದೆ ಎಂದು ಮೋದಿ ತಮ್ಮ ಪ್ರಚಾರ ಭಾಷಣದಲ್ಲಿ ವಾಗ್ದಾಳಿ ನಡೆಸಿದ್ದರು.

    ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ಮೋದಿಯವರು ನಮ್ಮ ಪ್ರಣಾಳಿಕೆಯನ್ನು ಓದಿಲ್ಲ. ಹೀಗಾಗಿ ಅವರ ಜೊತೆ ಪ್ರಣಾಳಿಕೆಯನ್ನು ಚರ್ಚೆ ಮಾಡಲು ಸಮಯ ನೀಡಬೇಕು ಎಂದು ತಿಳಿಸಿದ್ದರು.

     

  • ಮತ್ತೆ ಮದುವೆಯಾಗಬೇಕಿದ್ದರೆ ಚುನಾವಣೆಗೆ ಮುಂಚೆಯೇ ಆಗಿಬಿಡಿ, ಇಲ್ಲಾಂದ್ರೆ ಜೈಲು ಗ್ಯಾರಂಟಿ; ಅಸ್ಸಾಂ ಸಿಎಂ ವಾರ್ನಿಂಗ್‌!

    ಮತ್ತೆ ಮದುವೆಯಾಗಬೇಕಿದ್ದರೆ ಚುನಾವಣೆಗೆ ಮುಂಚೆಯೇ ಆಗಿಬಿಡಿ, ಇಲ್ಲಾಂದ್ರೆ ಜೈಲು ಗ್ಯಾರಂಟಿ; ಅಸ್ಸಾಂ ಸಿಎಂ ವಾರ್ನಿಂಗ್‌!

    ಗುವಾಹಟಿ: ಲೋಕಸಭಾ ಚುನಾವಣಾ (Lok Sabha Elections) ಸಮೀಪಿಸುತ್ತಿರುವ ಹೊತ್ತಿನಲ್ಲೇ ಅಸ್ಸಾಂ ಸಿಎಂ ಹಿಮಂತ ನಿಸ್ವಾ ಶರ್ಮಾ (Himanta Biswa Sarma) ಅವರು ಸಂಸದರೂ ಆಗಿರುವ ಎಐಯುಡಿಎಫ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅವರನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಧುಬ್ರಿ ಸಂಸದರು ಮತ್ತೆ ಮದುವೆಯಾಲು ಬಯಸಿದ್ದರೆ ಲೋಕಸಭಾ ಚುನಾವಣೆಗೆ ಮುಂಚಿತವಾಗಿಯೇ ಮದುವೆಯಾಗಲಿ. ಇಲ್ಲದಿದ್ದರೆ ಬಂಧನ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

    ಶನಿವಾರ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ನನಗೆ ಇನ್ನೂ ತುಂಬಾ ಶಕ್ತಿ ಇದೆ, ನಾನು ಮದುವೆಯಾಗುತ್ತೇನೆ. ಮುಖ್ಯಮಂತ್ರಿ ಬಯಸದಿದ್ದರೂ ನಾನು ಆ ಕೆಲಸ ಮಾಡಬಲ್ಲೆ ಅದು ನನ್ನ ಶಕ್ತಿ ಅಷ್ಟೆ ಎಂಬ ಬದ್ರುದ್ದೀನ್ ಅಜ್ಮಲ್ (Badruddin Ajmal) ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ. ಆಗ ಬಹುಪತ್ನಿತ್ವ ಕಾನೂನು ಬಾಹಿರವಾಗಲಿದೆ. ಆಮೇಲೆ ಜೈಲು ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

    ಧುಬ್ರಿ ಸಂಸದರು ಮತ್ತೆ ಮದುವೆಯಾಲು ಬಯಸಿದ್ದರೆ ಲೋಕಸಭಾ ಚುನಾವಣೆಗೆ ಮುಂಚಿತವಾಗಿಯೇ ಮದುವೆಯಾಗಲಿ. ನಮಗೆ ಆಹ್ವಾನ ಕೊಟ್ಟರೆ ನಾವೂ ಹೋಗ್ತೀವಿ. ಏಕೆಂದರೆ ಈಗ ಅದು ಕಾನೂನು ಬಾಹಿರವಾಗಿಲ್ಲ. ನನಗೆ ತಿಳಿದಿರುವಂತೆ ಈಗಾಗಲೇ ಅವರಿಗೆ ಒಬ್ಬರು ಪತ್ನಿ ಇದ್ದಾರೆ. ಇನ್ನೂ ಎರಡು ಮೂರು ಮದುವೆ ಆಗುವುದಿದ್ದರೆ ಆಗಿಬಿಡಲಿ. ಚುನಾವಣೆಯ ನಂತರ ಬಹುಪತ್ನಿತ್ವ ನಿಲ್ಲಿಸುತ್ತೇವೆ. ಈಗಾಗಲೇ ಯುಸಿಸಿ ಜಾರಿಗೆ ತರಲು ಸಂಪೂರ್ಣ ಕರಡು ಸಿದ್ಧವಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಈಗಾಗಲೇ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಾಗಿದೆ. ಈ ಕಾನೂನಿನ ಅನ್ವಯ ರಾಜ್ಯದ ಮುಸ್ಲಿಮರು (Muslims) ಸೇರಿದಂತೆ ಎಲ್ಲಾ ಧರ್ಮದವರು 2ನೇ ವಿವಾಹವಾಗುವುದು ಅಪರಾಧವಾಗುತ್ತದೆ. ಒಬ್ಬ ವ್ಯಕ್ತಿಗೆ ಒಂದು ಮದುವೆಗೆ ಮಾತ್ರ ಕಾನೂನಿನ ಮಾನ್ಯತೆ ಇರಲಿದೆ. ಹಾಲಿ ಷರಿಯಾ ಕಾನೂನಿನಡಿ ಮುಸ್ಲಿಮರು ಕಾನೂನು ಬದ್ಧವಾಗಿಯೇ 3 ವಿವಾಹವಾಗುವ ಅವಕಾಶವಿದೆ. ವಿವಾಹ, ವಿಚ್ಛೇದನ, ಆಸ್ತಿ, ಉತ್ತರದಾಯಿತ್ವ ಎಲ್ಲಾ ವಿಚಾರದಲ್ಲಿ ಎಲ್ಲಾ ಧರ್ಮದ ಜನರಿಗೆ ಒಂದೇ ನಿಯಮ ಅನ್ವಯವಾಗುತ್ತದೆ.

  • 2026 ರ ಅಸೆಂಬ್ಲಿ ಚುನಾವಣೆ ಹೊತ್ತಿಗೆ ಕೆಲವೇ ಮುಸ್ಲಿಮರು ಕಾಂಗ್ರೆಸ್‌ನಲ್ಲಿ ಉಳಿಯುತ್ತಾರೆ: ಅಸ್ಸಾಂ ಸಿಎಂ

    2026 ರ ಅಸೆಂಬ್ಲಿ ಚುನಾವಣೆ ಹೊತ್ತಿಗೆ ಕೆಲವೇ ಮುಸ್ಲಿಮರು ಕಾಂಗ್ರೆಸ್‌ನಲ್ಲಿ ಉಳಿಯುತ್ತಾರೆ: ಅಸ್ಸಾಂ ಸಿಎಂ

    ಗುವಾಹಟಿ: 2026 ರ ವಿಧಾನಸಭಾ ಚುನಾವಣೆಯ ವೇಳೆಗೆ ಕೆಲವೇ ಮುಸ್ಲಿಂ ಶಾಸಕರು ಮಾತ್ರ ಕಾಂಗ್ರೆಸ್‌ನಲ್ಲಿ ಉಳಿಯುತ್ತಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಟೀಕಿಸಿದ್ದಾರೆ.

    ಕಾಂಗ್ರೆಸ್ ಶಾಸಕರಾದ ರಾಕಿಬುಲ್ ಹುಸೇನ್, ರೆಕಿಬುದ್ದೀನ್ ಅಹ್ಮದ್, ಜಾಕಿರ್ ಹುಸೇನ್ ಸಿಕ್ದರ್, ನೂರುಲ್ ಹುದಾ ಮತ್ತು ಇನ್ನೂ ಕೆಲವರು ಪಕ್ಷದಲ್ಲಿಯೇ ಉಳಿಯುತ್ತಾರೆ ಎಂದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ʻಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆʼ ರದ್ದು – ಸಂಪುಟ ನಿರ್ಧಾರಕ್ಕೆ ಕಾಂಗ್ರೆಸ್‌ ಆಕ್ಷೇಪ; ಸಭಾತ್ಯಾಗ

    ಇತ್ತೀಚೆಗೆ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಯಕ ರಾಣಾ ಗೋಸ್ವಾಮಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಈ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಅವರು ಕಾಂಗ್ರೆಸ್‌ನ ಪ್ರಬಲ ನಾಯಕರಾಗಿದ್ದು, ಅವರು ಬಿಜೆಪಿ ಸೇರಿದರೆ ಸ್ವಾಗತಿಸುತ್ತೇನೆ ಎಂದಿದ್ದಾರೆ.

    ಮುಸ್ಲಿಮರ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ ರದ್ದಿಗೆ ಸಂಪುಟ ನಿರ್ಧಾರ ಕೈಗೊಂಡಿದೆ ಎಂದು ಶರ್ಮಾ ಈಚೆಗೆ ಘೋಷಿಸಿದ್ದರು. ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸರ್ಕಾರ ಮುಂದಾಗಿದೆ ಎಂದು ವಿಪಕ್ಷಗಳು ಟೀಕೆ ವ್ಯಕ್ತಪಡಿಸಿವೆ. ಇದನ್ನೂ ಓದಿ: ಮಹಿಳೆಯರು ಏನನ್ನು ಧರಿಸಬೇಕು ಅನ್ನೋದು ಅವರ ವೈಯಕ್ತಿಕ ವಿಚಾರ – ಹಿಜಬ್‌ ಬಗ್ಗೆ ಕೇಳಿದ್ದಕ್ಕೆ ರಾಹುಲ್‌ ಉತ್ತರ

  • ʻಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆʼ ರದ್ದು – ಸಂಪುಟ ನಿರ್ಧಾರಕ್ಕೆ ಕಾಂಗ್ರೆಸ್‌ ಆಕ್ಷೇಪ; ಸಭಾತ್ಯಾಗ

    ʻಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆʼ ರದ್ದು – ಸಂಪುಟ ನಿರ್ಧಾರಕ್ಕೆ ಕಾಂಗ್ರೆಸ್‌ ಆಕ್ಷೇಪ; ಸಭಾತ್ಯಾಗ

    – ಬಾಲ್ಯ ವಿವಾಹ ತಡೆಯೋ ನಿಟ್ಟಿನಲ್ಲಿ ಕಾಯ್ದೆ ರದ್ದು ಎಂದು ಅಸ್ಸಾಂ ಸಿಎಂ ಸ್ಪಷ್ಟನೆ
    – ನಾನು ಬದುಕಿರುವವರೆಗೂ ಬಾಲ್ಯ ವಿವಾಹಕ್ಕೆ ಅವಕಾಶ ಇಲ್ಲ – ಹಿಮಂತ ಬಿಸ್ವಾ ಶರ್ಮಾ

    ದಿಸ್ಪುರ: ಉತ್ತರಾಖಂಡ (Uttarakhand) ಸರ್ಕಾರ ಏಕರೂಪ ನಾಗರಿಕ ಸಂಹಿತೆ (Uniform Civil Code) ಜಾರಿಗೊಳಿಸಿದ ಬೆನ್ನಲ್ಲೇ ಅಸ್ಸಾಂ (Assam) ಕ್ಯಾಬಿನೆಟ್ ‘ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ 1935’ ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಈ ವಿಚಾರವಾಗಿ ಸದನದಲ್ಲಿಂದು ಚರ್ಚೆ ನಡೆಯಿತು. ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ಪ್ರತಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಎಐಯುಡಿಎಫ್ ತೀವ್ರವಾಗಿ ಖಂಡಿಸಿ, ಸಭಾತ್ಯಾಗ ಮಾಡಿದವು.

    ಸೋಮವಾರ ಅಸ್ಸಾಂ ವಿಧಾನಸಭೆಯಲ್ಲಿ ವಿರೋಧ ಪಕ್ಷಗಳ ವ್ಯಾಪಕ ಟೀಕೆಯ ನಂತರ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಕಾಯ್ದೆ ರದ್ದುಪಡಿಸಿದ್ದಕ್ಕೆ ಸ್ಪಷ್ಟನೆ ನೀಡಿದರು. ಬಾಲ್ಯವಿವಾಹ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ‌ʻಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆʼಯನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ನಾನು ಬದುಕಿರುವವರೆಗೂ ಅಸ್ಸಾಂನಲ್ಲಿ ಬಾಲ್ಯ ವಿವಾಹಕ್ಕೆ ಅವಕಾಶ ನೀಡುವುದಿಲ್ಲ ಎಂದು ದಿಟ್ಟ ಉತ್ತರ ನೀಡಿದರು. ಇದನ್ನೂ ಓದಿ: ಹಿಂದೂಗಳಿಗೆ ಮತ್ತೆ ಜಯ- ಜ್ಞಾನವಾಪಿಯಲ್ಲಿ ಪೂಜೆಗೆ ತಡೆ ನೀಡಲು ಹೈಕೋರ್ಟ್‌ ನಕಾರ

    ಈ ನಡುವೆಯೂ ಸರ್ಕಾರದ ನಿರ್ಧಾರ ಖಂಡಿಸಿದ ಕಾಂಗ್ರೆಸ್‌, ಮೂಲ ಮಸೂದೆಯನ್ನು ಸಂಪೂರ್ಣವಾಗಿ ರದ್ದುಗೊಳಿಸದೇ ತಿದ್ದುಪಡಿಗಳನ್ನು ಮಾಡಬಹುದಿತ್ತು ಎಂದು ಆಗ್ರಹಿಸಿತು. ನಂತರ ಸರ್ಕಾರದ ನಿರ್ಧಾರ ವಿರೋಧಿಸಿ ಸಭಾತ್ಯಾಗ ಮಾಡಿತು. ಎಐಯುಡಿಎಫ್ ಶಾಸಕರೂ ಸಹ ಅಸ್ಸಾಂ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸದನದ ಬಾವಿಗಿಳಿದು ಧರಣಿ ನಡೆಸಿದರು. ಇದ್ಯಾವುದನ್ನೂ ಪರಿಗಣಿಸದೇ ಸ್ಪಿಕರ್‌ ಸದನದ ಪಟ್ಟಿಮಾಡಿದ ವ್ಯವಹಾರವನ್ನು ಮುಂದುವರಿಸಿದ್ದರಿಂದ ಎಐಯುಡಿಎಫ್‌ ಶಾಸಕರೂ ಸಭಾತ್ಯಾಗ ಮಾಡಿದರು. ವಿರೋಧ ಪಕ್ಷದ ಸಿಪಿಐ(ಎಂ) ಶಾಸಕ ಮತ್ತು ಏಕೈಕ ಪಕ್ಷೇತರ ಶಾಸಕರು ಸದನದಲ್ಲಿ ಇದ್ದರು. ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲೂ ಕಾಂಗ್ರೆಸ್‌ಗೆ ಶಾಕ್- ಇಬ್ಬರು ಶಾಸಕರು ಬಿಜೆಪಿ ಸೇರ್ಪಡೆ

    ಕಳೆದ ಶುಕ್ರವಾರ ಅಸ್ಸಾಂ ಸಂಪುಟ ಅಸ್ಸಾಂ ‘ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ – 1935’ ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳಿಗೆ ಸಂಬಂಧಿಸಿದ ಎಲ್ಲಾ ವಿಷಯಗಳು ಈಗ ವಿಶೇಷ ವಿವಾಹ ಕಾಯ್ದೆಯ ಅಡಿಯಲ್ಲಿಯೇ ಬರುತ್ತವೆ. ಇದು ಯುಸಿಸಿ ಸಾಧಿಸುವತ್ತ ಒಂದು ಹೆಜ್ಜೆ ಎಂದು ಸಂಪುಟ ಸಚಿವರು ಬಣ್ಣಿಸಿದ್ದರು. ಇದನ್ನೂ ಓದಿ: ಯುಪಿಯಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ; ಅಖಿಲೇಶ್‌ ಯಾದವ್‌ ಜೊತೆ ರಾಹುಲ್‌ ಗಾಂಧಿ ಸೆಲ್ಫಿ

  • ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ ರದ್ದು

    ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ ರದ್ದು

    ಗುವಾಹಟಿ: ಉತ್ತರಾಖಂಡ (Uttarakhand) ಏಕರೂಪ ನಾಗರಿಕ ಸಂಹಿತೆ (Uniform Civil Code) ಜಾರಿಗೊಳಿಸಿದ ಬೆನ್ನಲ್ಲೇ ಅಸ್ಸಾಂ (Assam) ಸರ್ಕಾರ ಕೂಡ ಇದೇ ರೀತಿಯ ಕಾನೂನನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ. ಅಸ್ಸಾಂ ಕ್ಯಾಬಿನೆಟ್ ಶುಕ್ರವಾರ ಅಸ್ಸಾಂ ‘ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ, 1935’ ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

    ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳಿಗೆ ಸಂಬಂಧಿಸಿದ ಎಲ್ಲಾ ವಿಷಯಗಳು ಈಗ ವಿಶೇಷ ವಿವಾಹ ಕಾಯ್ದೆಯ ಅಡಿಯಲ್ಲಿ ಬರುತ್ತವೆ. ಸಭೆಯ ನಂತರ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ರಾಜ್ಯ ಸಚಿವ ಜಯಂತ ಮಲ್ಲಬರುವ, ಇದು ಯುಸಿಸಿ ಸಾಧಿಸುವತ್ತ ಒಂದು ಹೆಜ್ಜೆ ಎಂದು ಬಣ್ಣಿಸಿದರು. ಇದನ್ನೂ ಓದಿ: ಮಾಘ ಪೂರ್ಣಿಮೆ; ಪುಣ್ಯಸ್ನಾನಕ್ಕಾಗಿ ಅಯೋಧ್ಯೆಯ ಸರಯೂ ನದಿ ತಟದಲ್ಲಿ ಜನಸಾಗರ

    ನಾವು ಏಕರೂಪ ನಾಗರಿಕ ಸಂಹಿತೆಯತ್ತ ಸಾಗುತ್ತಿದ್ದೇವೆ ಎಂದು ಮುಖ್ಯಮಂತ್ರಿ ಇತ್ತೀಚೆಗೆ ಹೇಳಿದ್ದಾರೆ. ಈ ಪ್ರಯಾಣದಲ್ಲಿ ಬಹಳ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ 1935 (Assam Muslim Marriage and Divorce Registration Act, 1935), ಅಡಿಯಲ್ಲಿ 94 ಮುಸ್ಲಿಂ ರಿಜಿಸ್ಟ್ರಾರ್ ಇನ್ನೂ ಕಾರ್ಯನಿರ್ವಹಿಸುತ್ತಿದ್ದಾರೆ. ಅದನ್ನು ಇಂದು ರದ್ದುಗೊಳಿಸಲಾಗಿದೆ. ಇನ್ನುಮುಂದೆ ‘ಮುಸ್ಲಿಂ ವಿವಾಹ ಮತ್ತು ವಿಚ್ಛೇದನಗಳ ನೋಂದಣಿ’ಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ನೋಂದಣಾಧಿಕಾರಿಗಳು ವಹಿಸಲಿದ್ದಾರೆ ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: ಉತ್ತರ ಕಾಶ್ಮೀರದಲ್ಲಿ ‘ಕನ್ನಡ’ ಬಾವುಟ ಹಾರಿಸಿದ ಧಾರವಾಡದ ಯುವತಿ

    ಈ ಕಾಯ್ದೆಯಡಿ ಕಾರ್ಯನಿರ್ವಹಿಸುತ್ತಿದ್ದ 94 ಮುಸ್ಲಿಂ ರಿಜಿಸ್ಟ್ರಾರ್‌ಗಳನ್ನು ತಮ್ಮ ಕರ್ತವ್ಯದಿಂದ ಬಿಡುಗಡೆ ಮಾಡಲಾಗುವುದು ಮತ್ತು ಪ್ರತಿ ವ್ಯಕ್ತಿಗೆ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಮಲ್ಲಬರುವ ಘೋಷಿಸಿದರು. ಇದನ್ನೂ ಓದಿ: ಸಿದ್ದರಾಮುಲ್ಲ ಖಾನ್ ಎನ್ನುತ್ತಾ ಸರ್ಕಾರದ ವಿರುದ್ಧ ರೊಚ್ಚಿಗೆದ್ದ ಸಂಸದ ಅನಂತ್ ಕುಮಾರ್ ಹೆಗಡೆ

    ಈ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಫೆ.23ರಂದು ಅಸ್ಸಾಂ ಕ್ಯಾಬಿನೆಟ್ ಹಳೆಯ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ರದ್ದುಗೊಳಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿತು. ಈ ಕ್ರಮವು ಅಸ್ಸಾಂನಲ್ಲಿ ಬಾಲ್ಯ ವಿವಾಹಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬೈಕ್ ಟ್ಯಾಕ್ಸಿಗೆ ಕೇಂದ್ರ ಅಸ್ತು- ರಾಜ್ಯ ಸರ್ಕಾರಕ್ಕೆ ಕ್ಯಾಬ್ ಅಸೋಸಿಯೇಷನ್ ಎಚ್ಚರಿಕೆ

  • ರಾಹುಲ್ ಬಿಜೆಪಿಯ ಸ್ಟಾರ್ ಪ್ರಚಾರಕ: ಹಿಮಂತ್ ಬಿಸ್ವಾ ಶರ್ಮಾ

    ರಾಹುಲ್ ಬಿಜೆಪಿಯ ಸ್ಟಾರ್ ಪ್ರಚಾರಕ: ಹಿಮಂತ್ ಬಿಸ್ವಾ ಶರ್ಮಾ

    ದಿಸ್ಪುರ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೋದ ಕಡೆಗಳಲ್ಲಿ ಕಾಂಗ್ರೆಸ್ (Congress) ಸೋತಿದೆ. ರಾಹುಲ್ ಗಾಂಧಿ ಬಿಜೆಪಿಯ ಸ್ಟಾರ್ ಪ್ರಚಾರಕ ಎಂದು ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ.

    ಭಾರತ್ ಜೋಡೋ ನ್ಯಾಯ ಯಾತ್ರೆ ಕುರಿತು ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿಯವರಲ್ಲಿ ನಾಯಕತ್ವದ ಗುಣಗಳಿಲ್ಲ. ಎಲ್ಲೆಲ್ಲಿ ರಾಹುಲ್ ಗಾಂಧಿ ಹೋಗಿದ್ದಾರೋ, ಅಲ್ಲೆಲ್ಲಾ ಕಾಂಗ್ರೆಸ್ ಸೋತಿದೆ. ರಾಹುಲ್ ಗಾಂಧಿಯಿಂದ ಯಾರೂ ಪ್ರೇರಣೆ ಪಡೆಯುತ್ತಿಲ್ಲ. ರಾಹುಲ್ ಗಾಂಧಿ ಬಿಜೆಪಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: 9ನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್‌ ಕುಮಾರ್‌ ಪ್ರಮಾಣ ವಚನ ಸ್ವೀಕಾರ

    ಐ.ಎನ್.ಡಿ.ಐ.ಎ ಮೈತ್ರಿ ಒಕ್ಕೂಟ ರಚನೆಯಾದಾಗಲೇ ಇದು ಹೆಚ್ಚಿನ ದಿನ ಇರುವುದಿಲ್ಲ ಎಂದು ನಾನು ಹೇಳಿದ್ದೆ. ಕಾರಣ ಸೈದ್ಧಾಂತಿಕ ಭಿನ್ನಭಿಪ್ರಾಯ ಇದ್ದರೂ ಸರಿಹೋಗಬಹುದು. ಆದರೆ ಬಹುತೇಕ ಪಾರ್ಟಿಗಳಲ್ಲಿ ಅಜೆಂಡಾ, ಸೈದ್ಧಾಂತಿಕ ವಿಚಾರಧಾರೆಯೇ ಇಲ್ಲ. ಅಧಿಕಾರಕ್ಕಷ್ಟೇ ಮೈತ್ರಿ, ಎಲ್ಲರಿಗೂ ಪ್ರಧಾನಿ ಮೋದಿಯವರನ್ನು ಸೋಲಿಸಬೇಕು ಎಂಬ ಗುರಿ ಇದೆ. ಬಿಜೆಪಿ ಆಡಳಿತದಲ್ಲಿ ಏನಾದರೂ ಸಮಸ್ಯೆ ಇದೆಯೇ ಎಂದರೆ ಅವರ ಬಳಿ ಉತ್ತರ ಇಲ್ಲ ಎಂದಿದ್ದಾರೆ.

    ರಾಹುಲ್ ಗಾಂಧಿ ಭಾರತ್ ಜೋಡೊ ನ್ಯಾಯ ಯಾತ್ರೆ ಅಸ್ಸಾಂ ತಲುಪುತ್ತಿದ್ದಂತೆ ಸಂಘರ್ಷಗಳು ಆರಂಭಗೊಂಡಿತ್ತು. ಮೇಘಾಲಯ ಖಾಸಗಿ ವಿವಿಯೊಂದರ ವಿದ್ಯಾರ್ಥಿಗಳ ಸಂವಾದಕ್ಕೆ ತಡೆ ಒಡ್ಡಲಾಗಿದೆ. ಅಲ್ಲದೇ ಗುವಾಹಟಿ ಪ್ರವೇಶಕ್ಕೂ ಅವರಿಗೆ ನಿರಾಕರಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿ ಪ್ರತಿಭಟಿಸಿತ್ತು. ಇದೇ ವೇಳೆ, ಕಾರ್ಯಕರ್ತರನ್ನು ಹಿಂಸೆಗೆ ಪ್ರಚೋದಿಸಿದ ಆರೋಪದ ಮೇಲೆ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವಂತೆ ಹಿಮಂತ್ ಬಿಸ್ವಾ ಶರ್ಮಾ ಪೊಲೀಸರಿಗೆ ಸೂಚಿಸಿದ್ದರು. ಇದನ್ನೂ ಓದಿ: ಕಸ ಮತ್ತೆ ಡಸ್ಟ್‌ಬಿನ್‌ಗೆ ಹೋಗಿದೆ – ಪಕ್ಷ ತೊರೆದ ನಿತೀಶ್ ಕುಮಾರ್‌ಗೆ ಲಾಲೂ ಪುತ್ರಿ ಟಾಂಗ್