Tag: Himanta Biswa Sarma

  • ಹಿಮಾಂತ ಬಿಸ್ವಾ ಶರ್ಮಾ ರ‍್ಯಾಲಿಯಲ್ಲಿ ಮೈಕ್ ಕಿತ್ತುಕೊಂಡ ಅಪರಿಚಿತ ವ್ಯಕ್ತಿ – ವೀಡಿಯೋ ವೈರಲ್

    ಹಿಮಾಂತ ಬಿಸ್ವಾ ಶರ್ಮಾ ರ‍್ಯಾಲಿಯಲ್ಲಿ ಮೈಕ್ ಕಿತ್ತುಕೊಂಡ ಅಪರಿಚಿತ ವ್ಯಕ್ತಿ – ವೀಡಿಯೋ ವೈರಲ್

    ಹೈದರಾಬಾದ್: ಅಸ್ಸಾಂ ಮುಖ್ಯಮಂತ್ರಿ (Assam Chief Minister) ಹಿಮಾಂತ ಬಿಸ್ವಾ ಶರ್ಮಾ (Himanta Biswa Sarma) ಅವರ ರ‍್ಯಾಲಿ ವೇಳೆ ವ್ಯಕ್ತಿಯೊಬ್ಬ, ಏಕಾಏಕಿ ವೇದಿಕೆ ಮೇಲೇರಿ ಮೈಕ್‍ನ್ನು ಸ್ಟ್ಯಾಂಡ್ ನಿಂದ ಎಳೆದಾಡಿದ ಘಟನೆ ನಗರದಲ್ಲಿ ನಡೆದಿದೆ.

    ಹಿಮಾಂತ ಬಿಸ್ವಾ ಶರ್ಮಾ ಗಣೇಶ ಹಬ್ಬ ಮತ್ತು ಇತರ ಕಾರ್ಯಕ್ರಮಗಳಿಗೆ ಭಾಗ್ಯನಗರ ಗಣೇಶ ಉತ್ಸವ ಸಮಿತಿಯ ಅತಿಥಿಯಾಗಿ ಹೈದರಾಬಾದ್‍ನಲ್ಲಿದ್ದಾರೆ (Hyderabad). ಮುಂಜಾನೆ ನಗರದ ಪ್ರಮುಖ ದೇವಸ್ಥಾನವೊಂದಕ್ಕೆ ಭೇಟಿ ನೀಡಿದ ಹಿಮಾಂತ ಬಿಸ್ವಾ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ (KCR) ವಿರುದ್ಧ ವಾಗ್ದಾಳಿ ನಡೆಸಿದರು. ಬಳಿಕ ರ‍್ಯಾಲಿ ವೇಳೆ ವೇದಿಕೆ ಮೇಲೆ ಬಂದ ಕೆಸಿಆರ್ ಪಕ್ಷದ ಬಣ್ಣ ಹೊಂದಿರುವ ಶಾಲು ಧರಿಸಿದ್ದ ವ್ಯಕ್ತಿ ಏಕಾಏಕಿ ಮೈಕ್ ಎಳೆದಾಡಿದ್ದಾನೆ. ಈ ಅನಿರೀಕ್ಷಿತ ಘಟನೆಯಿಂದ ಹಿಮಾಂತ ಬಿಸ್ವಾ ಶರ್ಮಾ ಗಾಬರಿಗೊಂಡಂತೆ ಕಂಡು ಬಂತು. ಬಳಿಕ ಕೂಡಲೇ ವೇದಿಕೆ ಮೇಲಿದ್ದವರು ಅಪರಿಚಿತ ವ್ಯಕ್ತಿಯನ್ನು ವೇದಿಕೆಯಿಂದ ಕೆಳಗಿಳಿಸಿದರು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಧರಿಸಿದ್ದ 41 ಸಾವಿರ ರೂ.ನ ಟೀಶರ್ಟ್ ಕುರಿತು ಬಿಜೆಪಿ ವ್ಯಂಗ್ಯ

    ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯ ಬಳಿಕ ರ‍್ಯಾಲಿಯಲ್ಲಿ ಮಾತನಾಡಿದ ಹಿಮಾಂತ ಬಿಸ್ವಾ, ಮುಖ್ಯಮಂತ್ರಿ ಕೆಸಿಆರ್ ಅವರು ಬಿಜೆಪಿ ಮುಕ್ತ ರಾಜಕೀಯದ ಬಗ್ಗೆ ಮಾತನಾಡುತ್ತಾರೆ. ಆದರೆ ನಾವು ರಾಜವಂಶ ಮುಕ್ತ ರಾಜಕೀಯದ ಬಗ್ಗೆ ಮಾತನಾಡುತ್ತೇವೆ. ಹೈದರಾಬಾದ್‍ನಲ್ಲಿ ಅವರ ಮಗ ಮತ್ತು ಮಗಳ ಚಿತ್ರಗಳನ್ನು ನೋಡುತ್ತೇವೆ. ದೇಶದ ರಾಜಕೀಯವು ರಾಜವಂಶದ ರಾಜಕೀಯದಿಂದ ಮುಕ್ತವಾಗಿರಬೇಕು. ಸರ್ಕಾರವು ದೇಶಕ್ಕಾಗಿ, ಜನರಿಗಾಗಿ ಇರಬೇಕು. ಇದನ್ನು ಹೊರತು ಪಡಿಸಿ ಒಂದು ಕುಟುಂಬಕ್ಕಾಗಿ ಇರಬಾರದು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬ್ರಿಟನ್ ರಾಣಿ ನಿಧನ – ಸೆ.11ಕ್ಕೆ ಭಾರತದಾದ್ಯಂತ ಶೋಕಾಚರಣೆ

    Live Tv
    [brid partner=56869869 player=32851 video=960834 autoplay=true]

  • ಭಯೋತ್ಪಾದಕ ಚಟುವಟಿಕೆ ಆತಂಕ – ಹೊರಗಿನಿಂದ ಬರುವ ಮಸೀದಿ, ಮದರಸಾ ಧರ್ಮಗುರುಗಳಿಗೆ ಅಸ್ಸಾಂನಲ್ಲಿ ಹೊಸ ನಿಯಮ

    ಭಯೋತ್ಪಾದಕ ಚಟುವಟಿಕೆ ಆತಂಕ – ಹೊರಗಿನಿಂದ ಬರುವ ಮಸೀದಿ, ಮದರಸಾ ಧರ್ಮಗುರುಗಳಿಗೆ ಅಸ್ಸಾಂನಲ್ಲಿ ಹೊಸ ನಿಯಮ

    ಗುವಾಹಟಿ: ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದಡಿ ಇಬ್ಬರು ಧರ್ಮಗುರುಗಳ ಬಂಧನದ ಬೆನ್ನಲ್ಲೇ ಅಸ್ಸಾಂನಲ್ಲಿ ಹೊರ ರಾಜ್ಯಗಳಿಂದ ಬರುವ ಧರ್ಮಗುರುಗಳು ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

    ಅಸ್ಸಾಂ ಮಸೀದಿಗಳು ಮತ್ತು ಮದರಸಾಗಳಲ್ಲಿನ ಧರ್ಮಗುರುಗಳು ರಾಜ್ಯದ ಹೊರಗಿನಿಂದ ಬಂದರೆ ಸರ್ಕಾರಿ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ ಎಂದು ಸಿಎಂ ಸೂಚಿಸಿದ್ದಾರೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‌ ಬಗ್ಗೆ ಅವಹೇಳನ – ತೆಲಂಗಾಣದ ಬಿಜೆಪಿ ಶಾಸಕ ಅರೆಸ್ಟ್‌

    Idgah
    ಸಾಂದರ್ಭಿಕ ಚಿತ್ರ

    ಬಂಧಿತರಲ್ಲಿ ಒಬ್ಬ ಮಸೀದಿಯಲ್ಲಿ ಇಮಾಮ್ ಆಗಿ ಕೆಲಸ ಮಾಡುತ್ತಿದ್ದ. ಹಲವು ಗ್ರಾಮಗಳಲ್ಲಿ ಜಿಹಾದಿ ಜಾಲವನ್ನು ವಿಸ್ತರಿಸಿದ್ದ. ಜಿಹಾದಿ ಜಾಲವನ್ನು ವಿಸ್ತರಿಸುವುದಕ್ಕಾಗಿ ಆರು ಬಾಂಗ್ಲಾದೇಶಿ ಪ್ರಜೆಗಳು ಅಸ್ಸಾಂ ಪ್ರವೇಶಿಸಿದ್ದರು. ಆರು ಬಾಂಗ್ಲಾದೇಶಿ ಪ್ರಜೆಗಳ ಪೈಕಿ ಒಬ್ಬರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದು, ಐವರು ಇನ್ನೂ ತಲೆಮರೆಸಿಕೊಂಡಿದ್ದಾರೆ. ಅಸ್ಸಾಂ ಪೊಲೀಸರು ಕಾರ್ಯಾಚರಣೆ ಮುಂದುವರಿಸಲಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

    ನಾವು ಈಗ ಕೆಲವು ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP)ಗಳನ್ನು ಮಾಡಿದ್ದೇವೆ. ಯಾವುದೇ ಇಮಾಮ್ ಗ್ರಾಮಕ್ಕೆ ಬಂದರೆ, ನೀವು ಪರಿಶೀಲನೆಗಾಗಿ ಸ್ಥಳೀಯ ಪೊಲೀಸರಿಗೆ ತಿಳಿಸಬೇಕು. ಪೊಲೀಸರು ಪರಿಶೀಲಿಸಿದ ನಂತರ, ಜನರು ಅವರನ್ನು ಇಮಾಮ್ ಆಗಿ ನೇಮಿಸಿಕೊಳ್ಳಬಹುದು. ಅಸ್ಸಾಂನ ಮುಸ್ಲಿಂ ಸಮಾಜವು ಈ ಕುರಿತು ನಮಗೆ ತಮ್ಮ ಬೆಂಬಲವನ್ನು ನೀಡುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಮಹಿಳೆಯನ್ನು ರೈಲ್ವೆ ಹಳಿಗೆ ತಳ್ಳಿ, ಮಕ್ಕಳೊಂದಿಗೆ ವ್ಯಕ್ತಿ ಎಸ್ಕೇಪ್

    ASSAM MADARASA MADRASA

    ಈ ನಿಯಮಗಳು ಅಸ್ಸಾಂ ನಿವಾಸಿಗಳಿಗೆ ಅನ್ವಯಿಸುವುದಿಲ್ಲ. ಅಸ್ಸಾಂ ನಿವಾಸಿಗಳಿಗೆ ತಮ್ಮ ವಿವರಗಳನ್ನು ನೋಂದಾಯಿಸುವ ಅಗತ್ಯವಿಲ್ಲ. ಆದರೆ ಹೊರ ರಾಜ್ಯದಿಂದ ಬರುವವರು ತಮ್ಮ ವಿವರಗಳನ್ನು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಸ್ಪಷ್ಟಪಡಿಸಿದ್ದಾರೆ.

    ಅಸ್ಸಾಂ ಜಿಹಾದಿ ಚಟುವಟಿಕೆಗಳ ಕೇಂದ್ರವಾಗಿದೆ ಎಂದು ಶರ್ಮಾ ಇತ್ತೀಚೆಗೆ ಹೇಳಿದ್ದರು. ಈ ವರ್ಷದ ಮಾರ್ಚ್‌ನಿಂದ ಇಲ್ಲಿಯವರೆಗೆ 40 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ನೂಪುರ್ ಶರ್ಮಾ ಹತ್ಯೆಗೈಯಲು ಟರ್ಕಿಯಲ್ಲಿ ಉಗ್ರನಿಗೆ ಐಸಿಸ್ ತರಬೇತಿ!

    ಎರಡು ದಿನಗಳ ಹಿಂದೆ ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ಬಂಧನಕ್ಕೊಳಗಾಗಿರುವ ಇಬ್ಬರು ಧರ್ಮಗುರುಗಳು (ಅಬ್ದುಸ್ ಸೊಬಹಾನ್, ಜಲಾಲುದ್ದೀನ್) ರಾಜ್ಯದಲ್ಲಿ ಮುಸ್ಲಿಂ ಯುವಕರನ್ನು ತೀವ್ರಗಾಮಿಗೊಳಿಸುತ್ತಿದ್ದಾರೆ. ಭಯೋತ್ಪಾದಕ ಸಂಘಟನೆ ಅಲ್‌ಖೈದಾದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮುಂದಿನ 30-40 ವರ್ಷಗಳೂ ಬಿಜೆಪಿ ಯುಗವೇ; ಭಾರತವಾಗಲಿದೆ ವಿಶ್ವಗುರು – ಅಮಿತ್ ಶಾ

    ಮುಂದಿನ 30-40 ವರ್ಷಗಳೂ ಬಿಜೆಪಿ ಯುಗವೇ; ಭಾರತವಾಗಲಿದೆ ವಿಶ್ವಗುರು – ಅಮಿತ್ ಶಾ

    ಹೈದರಾಬಾದ್: ಮುಂದಿನ 30 ರಿಂದ 40 ವರ್ಷಗಳೂ ಬಿಜೆಪಿ ಯುಗವಾಗಿರಲಿದ್ದು, ಭಾರತವು `ವಿಶ್ವಗುರು’ ಆಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.

    ಇಂದು ಹೈದರಾಬಾದ್‌ನಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ವಂಶಪಾರಂಪರ್ಯ ರಾಜಕಾರಣ, ಜಾತೀಯತೆ ಹಾಗೂ ತುಷ್ಟೀಕರಣದ ರಾಜಕೀಯ ಮಹಾಪಾಪ. ಹಲವು ವರ್ಷಗಳಿಂದ ದೇಶ ಈ ಪಾಪವನ್ನು ಅನುಭವಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಮ್ಮ ರಕ್ತದಲ್ಲಿ ಕಾಂಗ್ರೆಸ್‌ ಇದೆ: JDS ತೊರೆದು ಕಾಂಗ್ರೆಸ್‌ ಸೇರಿದ ಹೆಚ್‌.ಆರ್.ಶ್ರೀನಾಥ್‌

    ಗೃಹ ಸಚಿವರ ಭಾಷಣದ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಪಕ್ಷವು ಕುಟುಂಬ ರಾಜಕಾರಣ, ಜಾತಿ ರಾಜಕಾರಣ ಹಾಗೂ ತುಷ್ಟೀಕರಣ ರಾಜಕೀಯವನ್ನು ಕೊನೆಗಾಣಿಸಲಿದೆ. ದೇಶದ ಮತ್ತು ಜನರ ಅಭಿವೃದ್ಧಿ, ಸಾಧನೆಗಳ ಮೂಲಕ ಪಕ್ಷವನ್ನು ಜನರು ಮಾತನಾಡುವಂತಾಗಬೇಕು ಎಂಬುದನ್ನು ಶಾ ಒತ್ತಿಹೇಳಿರುವುದಾಗಿ ವಿವರಿಸಿದ್ದಾರೆ. ಇದನ್ನೂ ಓದಿ: ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡ್ತಿದ್ದ ಸಲಿಂಗಕಾಮಿ ಸ್ನೇಹಿತನನ್ನು ಕೊಂದು ಚೀಲದಲ್ಲಿ ಸುತ್ತಿ ಎಸೆದ ಸ್ನೇಹಿತರು

    ಬಿಜೆಪಿ ಸರ್ಕಾರವು ತೆಲಂಗಾಣ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ಕುಟುಂಬ ಆಡಳಿತವನ್ನು ಕೊನೆಗೊಳಿಸಲಿದೆ. ಆಂಧ್ರಪ್ರದೇಶ, ತಮಿಳುನಾಡು ಮತ್ತು ಒಡಿಶಾದಲ್ಲಿ ಮುಂದಿನ ದಿನಗಳಲ್ಲಿ ಅಧಿಕಾರ ಗದ್ದುಗೆ ಹಿಡಿಯಲಿದ್ದು, ದಕ್ಷಿಣ ಭಾರತದಲ್ಲಿ ಪ್ರಾಬಲ್ಯ ಸಾಧಿಸಲಿದೆ ಎಂದು ತಿಳಿಸಿದ್ದಾರೆ.

    Live Tv

  • ಅಸ್ಸಾಂ ಪ್ರವಾಹ – ಕತ್ತಿನವರೆಗೆ ನೀರಿದ್ದರೂ ಸಿಎಂ ಸ್ವಾಗತಕ್ಕೆ ಧಾವಿಸಿದ ವ್ಯಕ್ತಿ

    ಅಸ್ಸಾಂ ಪ್ರವಾಹ – ಕತ್ತಿನವರೆಗೆ ನೀರಿದ್ದರೂ ಸಿಎಂ ಸ್ವಾಗತಕ್ಕೆ ಧಾವಿಸಿದ ವ್ಯಕ್ತಿ

    ದಿಸ್ಪುರ್: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಬರಾಕ್ ಕಣಿವೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಾಗ, ಒಬ್ಬ ವ್ಯಕ್ತಿ ಕತ್ತಿನವರೆಗೆ ನೀರಿದ್ದರೂ ಸಿಎಂ ಅನ್ನು ಸ್ವಾಗತಿಸಲು ಧಾವಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

    ಅಸ್ಸಾಂನ ಭೀಕರ ಪ್ರವಾಹದಿಂದ ನಲುಗಿರುವ ಪ್ರದೇಶಗಳಿಗೆ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಭೇಟಿ ನೀಡುತ್ತಿದ್ದು, ಜನರ ನೋವುಗಳನ್ನು ಆಲಿಸುತ್ತಿದ್ದಾರೆ. ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಪ್ರವಾಹದ ಸ್ಥಿತಿ ಕ್ರಮೇಣ ಸುಧಾರಣೆ ಕಾಣಿಸುತ್ತಿದೆ ಹಾಗೂ ಪ್ರವಾಹದ ನೀರು ತಗ್ಗುತ್ತಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಇದನ್ನೂ ಓದಿ: ನಿಮಗೆ ತಾಕತ್ ಇದ್ರೆ ಚುನಾವಣೆಗೆ ಬನ್ನಿ: ರೆಬೆಲ್ ಶಾಸಕರಿಗೆ ಸವಾಲೆಸೆದ ಆದಿತ್ಯ ಠಾಕ್ರೆ

    ಕಳೆದ 24 ಗಂಟೆಗಳಲ್ಲಿ ಅಸ್ಸಾಂನ ಪ್ರವಾಹದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಬಾರ್ಪೇಟಾ, ಕ್ಯಾಚಾರ್, ದರ್ರಾಂಗ್ ಹಾಗೂ ಗೋಲಾಘಾಟ್ ಜಿಲ್ಲೆಗಳಲ್ಲಿ ತಲಾ ಒಂದೊಂದು ಸಾವು ವರದಿಯಾಗಿದೆ. ಅಸ್ಸಾಂನ ಈ ಬಾರಿಯ ಪ್ರವಾಹದಲ್ಲಿ ಶನಿವಾರದವರೆಗೆ 121 ಜನರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಇಮ್ರಾನ್ ವಿರುದ್ಧ ಬೇಹುಗಾರಿಕೆಗೆ ಪ್ರಯತ್ನಿಸಿದವ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ

    ಅಸ್ಸಾಂನ ಒಟ್ಟಾರೆ ಪ್ರವಾಹ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆಯಾದರೂ, ರಾಜ್ಯದ 27 ಜಿಲ್ಲೆಗಳಲ್ಲಿ, 2,894 ಹಳ್ಳಿಗಳಲ್ಲಿ 25.10 ಲಕ್ಷಕ್ಕೂ ಹೆಚ್ಚು ಜನರು ಪರಿಣಾಮವನ್ನು ಎದುರಿಸುತ್ತಿದ್ದಾರೆ. ಬಜಾಲಿ, ಬಕ್ಸಾ, ಬರ್ಪೇಟಾ, ಬಿಸ್ವನಾಥ್, ಕ್ಯಾಚಾರ್, ಚಿರಾಂಗ್, ದರ್ರಾಂಗ್, ಧೇಮಾಜಿ, ಧುಬ್ರಿ, ದಿಬ್ರುಗಢ್, ದಿಮಾ ಹಸಾವೊ, ಗೋಲ್ಪಾರಾ, ಗೋಲಾಘಾಟ್, ಹೈಲಕಂಡಿ, ಹೊಜೈ, ಕಮ್ರೂಪ್, ಕಮ್ರೂಪ್ ಮೆಟ್ರೋಪಾಲಿಟನ್, ಕರ್ಬಿ ಆಂಗ್ಲಾಂಗ್ ವೆಸ್ಟ್, ಕರೀಮ್‌ಗಂಜ್, ಲಖಿಂಪುರ, ಮೋರಿಗಾಂವ್, ನಾಗಾಂವ್, ನಲ್ಬರಿ, ಸೋನಿತ್‌ಪುರ್, ಸೌತ್ ಸಲ್ಮಾರಾ, ತಮುಲ್‌ಪುರ್ ಹಾಗೂ ಉದಲ್‌ಗುರಿ ಇನ್ನೂ ಕೂಡಾ ಪ್ರವಾಹದಿಂದ ಚೇತರಿಕೆ ಕಂಡಿಲ್ಲ.

    Live Tv

  • ಬೊಮ್ಮಾಯಿಯನ್ನು ಭೇಟಿಯಾದ ಅಸ್ಸಾಂ ಸಿಎಂ

    ಬೊಮ್ಮಾಯಿಯನ್ನು ಭೇಟಿಯಾದ ಅಸ್ಸಾಂ ಸಿಎಂ

    ಬೆಂಗಳೂರು: ಸಿಎಂ ಬೊಮ್ಮಾಯಿ ಅವರನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ಭೇಟಿಯಾಗಿದ್ದಾರೆ.

    ಕಾರ್ಯಕ್ರಮ ನಿಮಿತ್ತ ರಾಜ್ಯ ಪ್ರವಾಸದಲ್ಲಿರುವ ಅಸ್ಸಾಂ ಸಿಎಂ ರೇಸ್‌ ವ್ಯೂ  ನಿವಾಸದಲ್ಲಿ ಸೌಜನ್ಯಯುತ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಮೇ 19ಕ್ಕೆ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ

    ಈ ಸಂಬಂಧ ಟ್ವೀಟ್‌ ಮಾಡಿದ ಹಿಮಾಂತ ಬಿಸ್ವ ಶರ್ಮಾ, ನಾವು ರಾಷ್ಟ್ರ ಮತ್ತು ರಾಜ್ಯಗಳಿಗೆ ಸಂಬಂಧಿಸಿದಂತೆ ಪರಸ್ಪರ ಹಿತಾಸಕ್ತಿಯ ವಿಷಯಗಳನ್ನು ಚರ್ಚಿಸಿದ್ದೇವೆ. ಅಸ್ಸಾಂ ಮತ್ತು ಕರ್ನಾಟಕದ ನಡುವಿನ ಸಹಯೋಗದ ವ್ಯಾಪ್ತಿಯ ಬಗ್ಗೆಯೂ ಚರ್ಚಿಸಲಾಗಿದೆ ಎಂದರು.

  • ಪತಿ ಇನ್ನೊಬ್ಬಳನ್ನು ಮನೆಗೆ ಕರೆತರಲು ಯಾವ ಮುಸ್ಲಿಂ ಮಹಿಳೆಯೂ ಬಯಸಲ್ಲ: ಅಸ್ಸಾಂ ಸಿಎಂ

    ಪತಿ ಇನ್ನೊಬ್ಬಳನ್ನು ಮನೆಗೆ ಕರೆತರಲು ಯಾವ ಮುಸ್ಲಿಂ ಮಹಿಳೆಯೂ ಬಯಸಲ್ಲ: ಅಸ್ಸಾಂ ಸಿಎಂ

    ನವದೆಹಲಿ: ಯಾವುದೇ ಮುಸ್ಲಿಂ ಮಹಿಳೆಯು ತನ್ನ ಪತಿ ಬೇರೆಯವರನ್ನು ಮದುವೆಯಾಗಿ ಮನೆಗೆ ಕರೆತರಲು ಬಯಸುವುದಿಲ್ಲ. ಇದರಿಂದಾಗಿ ಪ್ರತಿಯೊಬ್ಬ ಮುಸ್ಲಿಂ ಮಹಿಳೆಯೂ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಬಯಸುತ್ತಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಯಾವುದೇ ಮುಸ್ಲಿಂ ಮಹಿಳೆಯನ್ನು ಕೇಳಿ. ಏಕರೂಪ ನಾಗರಿಕ ಸಂಹಿತೆ ಬಗ್ಗೆ ಕೇವಲ ನಾನೊಬ್ಬನೇ ಹೇಳುತ್ತಿಲ್ಲ. ಇದು ಎಲ್ಲಾ ಮುಸ್ಲಿಂ ಮಹಿಳೆಯರ ಸಮಸ್ಯೆಯಾಗಿದೆ ಎಂದರು.

    ಮುಸ್ಲಿಂ ಮಹಿಳೆಯರಿಗೆ ನ್ಯಾಯ ನೀಡಲು ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಬೇಕು. ಅವರಿಗೆ ನ್ಯಾಯ ಸಿಗಬೇಕಾದರೆ ತ್ರಿವಳಿ ತಲಾಖ್ ರದ್ದುಗೊಳಿಸಿದ ರೀತಿಯಲ್ಲೇ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ: ಬಿ.ಎಲ್.ಸಂತೋಷ್

    ಏಕರೂಪ ನಾಗರಿಕ ಸಂಹಿತೆಯ ಕರಡು ರಚನೆಗೆ ಸಮಿತಿಯನ್ನು ರಚಿಸಲಾಗುವುದು ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಹೇಳಿದ ಬಳಿಕ ಏಕರೂಪ ನಾಗರಿಕ ಸಂಹಿತೆಯ ಕುರಿತು ಚರ್ಚೆ ಮತ್ತೆ ಆರಂಭವಾಗಿದೆ. ಈ ಹಿಂದೆ ಏಕರೂಪ ನಾಗರಿಕ ಸಂಹಿತೆಯ ಅರ್ಹತೆಗಳನ್ನು ವಿವರಿಸಲು ಚೌಪಲ್‍ಗಳನ್ನು ಸ್ಥಾಪಿಸಲಾಗುವುದು ಎಂದು ಉತ್ತರ ಪ್ರದೇಶದ ಮುಸ್ಲಿಂ ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ ಹೇಳಿದ್ದರು. ಇದನ್ನೂ ಓದಿ: ಮೈ ಮೇಲೆ ಕೆಸರು ಹಾರಿಸಿದ್ದಕ್ಕೆ ಬಸ್ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ

  • ರಾಜ್ಯಸಭೆಯಲ್ಲಿ ಕಾಂಗ್ರೆಸ್ ಶಾಸಕರು ಮತ ಹಾಕಿರುವುದು ನಿಜ: ಹಿಮಂತ ಬಿಸ್ವಾ

    ರಾಜ್ಯಸಭೆಯಲ್ಲಿ ಕಾಂಗ್ರೆಸ್ ಶಾಸಕರು ಮತ ಹಾಕಿರುವುದು ನಿಜ: ಹಿಮಂತ ಬಿಸ್ವಾ

    ಅಸ್ಸಾಂ: ರಾಜ್ಯಸಭೆಯಲ್ಲಿ 9-10 ಕಾಂಗ್ರೆಸ್ ಶಾಸಕರು ನಮಗೆ ಮತ ಹಾಕಿದ್ದಾರೆ ಎನ್ನುವುದು ಸತ್ಯ. ನಾಳೆ ಮತ್ತೊಂದು ರಾಜ್ಯಸಭೆ ನಡೆದರೂ, ಅವರು ನಮಗೆ ಮತ ಹಾಕುತ್ತಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿಶ್ವಾಸ ವ್ಯಕ್ತಪಡಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಿಪುನ್ ಬೋರಾ ಅವರು ಕಾಂಗ್ರೆಸ್ ತೊರೆದು ತೃಣಮೂಲಕ್ಕೆ ಸೇರ್ಪಡೆಗೊಂಡಿರುವ ಕುರಿತು ಪ್ರತಿಕ್ರಿಯಿಸಿದರು. ರಿಪುನ್ ಬೋರಾ ಸೇರಿದಂತೆ ಅಸ್ಸಾಂನ ಬಹುತೇಕ ಎಲ್ಲಾ ಕಾಂಗ್ರೆಸ್ ನಾಯಕರು ನನಗೆ ಆಪ್ತರು. ನನ್ನ ಜೀವನದಲ್ಲಿ 22 ವರ್ಷಗಳನ್ನು ಕಾಂಗ್ರೆಸ್‍ನಲ್ಲಿ ಕಳೆದಿದ್ದೇನೆ. ಬಿಜೆಪಿಗೆ ಸೇರಲು ಬಯಸುವವರು ಅನೇಕರಿದ್ದಾರೆ  ಎಂದರು.

    ಬಿಜೆಪಿಗೆ ಸೇರಲು ಸಾಧ್ಯವಾಗದ ಕಾಂಗ್ರೆಸ್ ನಾಯಕರಿಗೆ ದೇಶದಲ್ಲಿ ಹಳೆಯ ಪಕ್ಷಕ್ಕೆ ಭವಿಷ್ಯವಿಲ್ಲ ಎಂದು ಗೊತ್ತಾಗಿದೆ. ಇದರಿಂದಾಗಿ ತಮ್ಮ ಪಕ್ಷವನ್ನು ತೊರೆಯುತ್ತಿದ್ದಾರೆ. ಇದು ಪ್ರಸ್ತುತ ಅಭಿವೃದ್ಧಿಶೀಲ ಪರಿಸ್ಥಿತಿಯಾಗಿದೆ ಮತ್ತು ಕೆಲವು ನಾಯಕರ ಸೇರ್ಪಡೆಯನ್ನು ಬಿಜೆಪಿ ಎದುರು ನೋಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮೇ 4ರವರೆಗೆ ಪೊಲೀಸ್‌, ಎಲ್ಲ ಆಡಳಿತ ಅಧಿಕಾರಿಗಳ ರಜೆ ರದ್ದು- ಯೋಗಿ ಆದಿತ್ಯನಾಥ್‌

    ರಾಜ್ಯಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಶಾಸಕರೇ ರಿಪುನ್ ಬೋರಾ ಸೋಲಿಗೆ ಶ್ರಮಿಸಿದ್ದರಿಂದ ಕಾಂಗ್ರೆಸ್‍ಗೆ ಅವರು ರಾಜೀನಾಮೆ ನೀಡಿರುವುದು ಸಹಜ. ಇದರಿಂದಾಗಿ ಅವರು ಟಿಎಂಸಿ ಸೇರಿದ್ದಾರೆ. ತಮ್ಮ ರಾಜೀನಾಮೆ ಪತ್ರದಲ್ಲಿ, ಕಾಂಗ್ರೆಸ್‍ನೊಳಗಿನ ಆಂತರಿಕ ಕಲಹದಿಂದಾಗಿ ಹಳೆಯ ಪಕ್ಷದ ಕಾರ್ಯಕರ್ತರನ್ನು ನಿರಾಶೆಗೊಳಿಸಲು ದಾರಿ ಮಾಡಿಕೊಟ್ಟಿದೆ ಎಂದು ಹೇಳಿದ್ದರು ಎಂದರು. ಇದನ್ನೂ ಓದಿ: ಫ್ರೀ ಕೊಡುಗೆಗಳಿಗೆ ಕಡಿವಾಣ ಹಾಕಿ: ರಾಜ್ಯಗಳಿಗೆ ತಜ್ಞರ ಎಚ್ಚರಿಕೆ

  • ಹಿಂದುತ್ವದ ವಿರೋಧಿ ಆಗ್ಬೇಡಿ: ಕೇಜ್ರಿವಾಲ್‍ಗೆ ಅಸ್ಸಾಂ ಸಿಎಂ ತಿರುಗೇಟು

    ಹಿಂದುತ್ವದ ವಿರೋಧಿ ಆಗ್ಬೇಡಿ: ಕೇಜ್ರಿವಾಲ್‍ಗೆ ಅಸ್ಸಾಂ ಸಿಎಂ ತಿರುಗೇಟು

    ಗುವಾಹಟಿ: ಸಮಾಜವನ್ನು ವಿರೋಧಿಸುವ ಹಾಗೂ ಹಿಂದುತ್ವದ ವಿರೋಧಿಯಾಗಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿರುಗೇಟು ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿ ಕಾಶ್ಮೀರ್ ಫೈಲ್ಸ್ ಸಿನೆಮಾಕ್ಕೆ ನೀವು ತೆರಿಗೆಯನ್ನು ಮುಕ್ತಗೊಳಿಸುತ್ತೀರೋ ಇಲ್ಲವೋ ಅದು ನಿಮಗೆ ಬಿಟ್ಟಿರುವ ವಿಚಾರವಾಗಿದೆ. ಆದರೆ ನಮ್ಮನ್ನು ಅವಮಾನಿಸುವ ಹಕ್ಕು ನಿಮಗೆ ಇಲ್ಲ. ನೀವು ಏನಾದರೂ ಮಾಡಿ, ಆದರೆ ಬಹಿರಂಗವಾಗಿ ಹಿಂದೂ ವಿರೋಧಿ ಆಗಬೇಡಿ ಎಂದು ವಾಗ್ದಾಳಿ ನಡೆಸಿದರು.

    ಇಂದು ನಮ್ಮ ಹಿಂದೂ ಸಮಾಜ ಈ ಸ್ಥಿತಿಯಲ್ಲಿದ್ದರೆ, ಅದಕ್ಕೆ ಕಾರಣ ಹಿಂದೂ ಕುಟುಂಬದೊಳಗೆ ಹೆಚ್ಚು ಹಿಂದೂ ವಿರೋಧಿಗಳಿರುವುದಾಗಿದೆ. ಇಲ್ಲದಿದ್ದರೆ, ಹಿಂದೂ ನಾಗರಿಕತೆಯು ಜಗತ್ತಿಗೆ ದಾರಿ ತೋರಿಸುತ್ತಿತ್ತು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಇಂದಿನಿಂದ SSLC ಪರೀಕ್ಷೆ – ಸಮವಸ್ತ್ರ ಧರಿಸಿದ್ರೆ ಮಾತ್ರ ಪ್ರವೇಶಕ್ಕೆ ಅನುಮತಿ

    ದಿ ಕಾಶ್ಮೀರ್ ಚಿತ್ರವನ್ನು ಯೂಟ್ಯೂಬ್‍ನಲ್ಲಿ ರಿಲೀಸ್ ಮಾಡಿ, ಆಗ ಎಲ್ಲರೂ ಉಚಿತವಾಗಿ ನೋಡಲು ಸಾಧ್ಯವಾಗುತ್ತದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಆದರೆ ಈ ಹಿಂದೆ ಹಲವಾರು ಸಿನಿಮಾಕ್ಕೆ ರಾಷ್ಟ್ರ ರಾಜಧಾನಿಯಲ್ಲಿ ತೆರಿಗೆ ಮುಕ್ತಗೊಳಿಸಿದ್ದಾರೆ. ಆ ಎಲ್ಲಾ ಚಲನಚಿತ್ರಗಳನ್ನು ಯೂಟ್ಯೂಬ್‍ನಲ್ಲಿ ಅಪ್‍ಲೋಡ್ ಮಾಡಲು ಅವರು ಏಕೆ ಕೇಳಲಿಲ್ಲ ಎಂದು ಪ್ರಶ್ನಿಸಿದರು.

    ಈ ಹಿಂದೆ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮಾತನಾಡಿ, ಬಿಜೆಪಿಯವರು ದಿ ಕಾಶ್ಮೀರ್‌ ಫೈಲ್ಸ್‌ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಕೇಳುತ್ತಿದ್ದಾರೆ. ನಿರ್ದೇಶಕರು ಸಿನಿಮಾವನ್ನು ಯೂಟ್ಯೂಬ್‌ಗೆ ನೀಡಲಿ. ಉಚಿತವಾಗಿ ಸಿನಿಮಾ ನೋಡಬಹುದು ನಮ್ಮನ್ನು ತೆರಿಗೆ ಮುಕ್ತ ಮಾಡಿ ಎಂದು ಏಕೆ ಕೇಳುತ್ತಿದ್ದೀರಿ? ಅಷ್ಟು ಉತ್ಸುಕರಾಗಿದ್ದರೆ ವಿವೇಕ್ ಅಗ್ನಿಹೋತ್ರಿಯವರಿಗೆ ಯೂಟ್ಯೂಬ್‌ನಲ್ಲಿ ಹಾಕಲು ಹೇಳಿ, ಎಲ್ಲಾ ಉಚಿತವಾಗಿರುತ್ತದೆ. ಎಲ್ಲರೂ ಅದನ್ನು ಒಂದು ದಿನದಲ್ಲಿ ನೋಡಬಹುದು. ಆಗ ತೆರಿಗೆ ಮುಕ್ತ ಮಾಡುವ ಅಗತ್ಯವಾದರೂ ಏಕೆ ಬರುತ್ತದೆ ಎಂದಿದ್ದರು.

  • ಅಲ್ಪಸಂಖ್ಯಾತರನ್ನು ರಕ್ಷಿಸುವುದು ಮುಸ್ಲಿಮರ ಕರ್ತವ್ಯ: ಅಸ್ಸಾಂ ಸಿಎಂ

    ಅಲ್ಪಸಂಖ್ಯಾತರನ್ನು ರಕ್ಷಿಸುವುದು ಮುಸ್ಲಿಮರ ಕರ್ತವ್ಯ: ಅಸ್ಸಾಂ ಸಿಎಂ

    ಡಿಸ್ಪುರ್:  ಅಸ್ಸಾಂನ ಜನಸಂಖ್ಯೆಯಲ್ಲಿ ಶೇ.35 ರಷ್ಟು ಮುಸ್ಲಿಮರಿದ್ದು, ಇನ್ನು ಮುಂದೆ ಅವರನ್ನು ಅಲ್ಪಸಂಖ್ಯಾತರು ಎಂದು ಪರಿಗಣಿಸಲಾಗುವುದಿಲ್ಲ ಎಂದು ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದರು.

    ಅಸ್ಸಾಂ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಮಾಡುತ್ತಿರುವಾಗ ಶರ್ಮಾ ಅವರು, ಮುಸ್ಲಿಂ ಸಮುದಾಯದ ಜನರು ವಿರೋಧ ಪಕ್ಷದ ನಾಯಕರು, ಶಾಸಕರು, ಸಮಾನ ಅವಕಾಶ ಮತ್ತು ಅಧಿಕಾರವನ್ನು ಹೊಂದಿದ್ದಾರೆ. ಅದನ್ನು ಖಚಿತಪಡಿಸಿಕೊಳ್ಳುವುದು ಅವರ ಕರ್ತವ್ಯವಾಗಿದೆ ಎಂದು ಮಾತನ್ನು ಆರಂಭಿಸಿದರು. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಲು ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ: ಅಸ್ಸಾಂ ಸಿಎಂ

    ಅಧಿಕಾರವು ಜವಾಬ್ದಾರಿಯೊಂದಿಗೆ ಬರುತ್ತೆ. ಮುಸ್ಲಿಮರು ಅಸ್ಸಾಂನ ಜನಸಂಖ್ಯೆ ಶೇ.35 ರಷ್ಟಿದ್ದಾರೆ. ಇಲ್ಲಿನ ಅಲ್ಪಸಂಖ್ಯಾತರನ್ನು ರಕ್ಷಿಸುವುದು ಅವರ ಕರ್ತವ್ಯ. ಅಸ್ಸಾಮಿಗರು ಭಯದಲ್ಲಿದ್ದಾರೆ. ತಮ್ಮ ಸಂಸ್ಕೃತಿ ಮತ್ತು ನಾಗರಿಕತೆ ರಕ್ಷಣೆಯಾಗುತ್ತ ಎಂಬ ಭಯವಿದೆ. ಸಾಮರಸ್ಯ ಎರಡು ಧರ್ಮಗಳ ನಡುವೆ ತುಂಬಾ ಮುಖ್ಯ. ಸಂಕರಿ ಸಂಸ್ಕೃತಿ, ಸತ್ರಿಯಾ ಸಂಸ್ಕೃತಿ ರಕ್ಷಣೆ ಬಗ್ಗೆ ಮುಸ್ಲಿಮರು ಮಾತನಾಡಲಿ. ಆಗ ಎಲ್ಲರ ನಡುವೆ ಸೌಹಾರ್ದತೆ ಇರುತ್ತದೆ. ಹತ್ತು ವರ್ಷಗಳ ಹಿಂದೆ, ನಾವು ಅಲ್ಪಸಂಖ್ಯಾತರಾಗಿರಲಿಲ್ಲ ಆದರೆ ಈಗ ನಾವಿದ್ದೇವೆ ಎಂದು ತಿಳಿಸಿದರು.

    ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಅಸ್ಸಾಂ ಜನರೊಂದಿಗೆ ಸಮೀಕರಿಸಿ ಮಾತನಾಡಿದ ಅವರು, ಅಸ್ಸಾಮಿಗಳು ಕಾಶ್ಮೀರಿ ಪಂಡಿತರಂತೆಯೇ ಅದೇ ಭವಿಷ್ಯವನ್ನು ಎದುರಿಸುತ್ತಾರೆಯೇ ಎಂದು ಜನರು ನನ್ನನ್ನು ಕೇಳುತ್ತಾರೆ. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಲ್ಲಿ ತೋರಿಸಿದಂತೆ ಎಲ್ಲಿ ನಮ್ಮ ಪರಿಸ್ಥಿತಿಯಾಗುತ್ತೆ ಎಂದು ಕೆಲವರು ಭಯಪಟ್ಟುಕೊಂಡಿದ್ದಾರೆ. ಈ ಭಯವನ್ನು ಹೋಗಲಾಡಿಸುವುದು ಮುಸ್ಲಿಮರ ಕರ್ತವ್ಯ. ಮುಸ್ಲಿಮರು ಬಹುಸಂಖ್ಯಾತರಂತೆ ವರ್ತಿಸಬೇಕು ಮತ್ತು ಇಲ್ಲಿ ಕಾಶ್ಮೀರದ ರೀತಿ ಪುನರಾವರ್ತನೆಯಾಗುವುದಿಲ್ಲ ಎಂಬ ಭರವಸೆಯನ್ನು ನೀಡಬೇಕು ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಹಿಜಬ್ ಪರ ವಾದಿಗಳ ಬೆದರಿಕೆಗೆ ಸರ್ಕಾರ ಮಣಿಯದು: ಅಶ್ವತ್ಥನಾರಾಯಣ

  • ರಾಹುಲ್ ಗಾಂಧಿಯು ದಿ.ರಾಜೀವ್ ಗಾಂಧಿ ಮಗ ಎಂಬುದಕ್ಕೆ ಬಿಜೆಪಿ ಪುರಾವೆ ಕೇಳಿತ್ತೇ? – ಅಸ್ಸಾಂ ಸಿಎಂ ವಿರುದ್ಧ ಪ್ರಕರಣ

    ರಾಹುಲ್ ಗಾಂಧಿಯು ದಿ.ರಾಜೀವ್ ಗಾಂಧಿ ಮಗ ಎಂಬುದಕ್ಕೆ ಬಿಜೆಪಿ ಪುರಾವೆ ಕೇಳಿತ್ತೇ? – ಅಸ್ಸಾಂ ಸಿಎಂ ವಿರುದ್ಧ ಪ್ರಕರಣ

    ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಟ್ಟಿರುವ ಅಸ್ಸಾಂ ಮುಖ್ಯಮಂತ್ರಿ ಸಿಎಂ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಪ್ರಕರಣ ದಾಖಲಾಗಿದೆ.

    ಟಿಪಿಸಿಸಿ ಅಧ್ಯಕ್ಷ, ಸಂಸದ ಮಲ್ಕಾಜ್‍ಗಿರಿ ಎ ರೇವಂತ್ ರೆಡ್ಡಿ ನೀಡಿದ ದೂರಿನ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಹೈದರಾಬಾದ್ ನಗರದ ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 ಮತ್ತು 505 (2)ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಕಾಂಗ್ರೆಸ್ ನಾಯಕರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದು, ಕೂಡಲೇ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಅಸ್ಸಾಂ ಮುಖ್ಯಮಂತ್ರಿಯ ಹೇಳಿಕೆಗಳು ಮಹಿಳೆಗೆ ಅವಮಾನಕರವಾಗಿದೆ. ರಾಷ್ಟ್ರೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಬಂಧಿಸಲು ಏಕೆ ಆದೇಶಿಸಲಿಲ್ಲ. ಬಿಜೆಪಿ ಹಿಮಂತ ಬಿಸ್ವಾ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು. ಆದರೆ ಬಿಜೆಪಿ ಅಸ್ಸಾಂ ಮುಖ್ಯಮಂತ್ರಿಯ ಟೀಕೆಗಳನ್ನು ಬೆಂಬಲಿಸುತ್ತಿದೆ ಎಂದು ರೇವಂತ್ ಹೇಳಿದ್ದಾರೆ.  ಇದನ್ನೂ ಓದಿ: NSA ಅಜಿತ್ ದೋವಲ್ ನಿವಾಸಕ್ಕೆ ಅಕ್ರಮ ಪ್ರವೇಶ – ವ್ಯಕ್ತಿ ಬಂಧನ

    ಗಾಂಧಿ ಕುಟುಂಬಕ್ಕೆ ಅವಮಾನ ಎಂದು ಕೆಲವರು ಹೇಳುತ್ತಾರೆ. ಆದರೆ ಇದು ಈ ದೇಶದ ಮಹಿಳೆಯರಿಗೆ ಅವಮಾನವಾಗಿದೆ. ನಮ್ಮ ದೂರು ವಿರುದ್ಧ ತಕ್ಷಣವೇ ಎಫ್‍ಐಆರ್ ದಾಖಲಿಸಬೇಕು. ಅಸ್ಸಾಂ ಮುಖ್ಯಮಂತ್ರಿಗೆ ತಕ್ಷಣವೇ ನೋಟೀಸ್ ನೀಡಬೇಕು. ಅವರನ್ನು ಬಂಧಿಸುವುದು ಪೊಲೀಸರ ಜವಾಬ್ದಾರಿಯಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ

    ಹಿಮಂತ ಬಿಸ್ವಾ ಶರ್ಮಾ ಹೇಳಿದ್ದೇನು?: ಫೆಬ್ರವರಿ 11ರಂದು ಉತ್ತರಾಖಂಡದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ್ದ ಹಿಮಂತ ಬಿಸ್ವ ಶರ್ಮಾ, ಭಾರತೀಯ ಸೇನೆಯು ನಡೆಸಿದ್ದ ನಿರ್ದಿಷ್ಟ ದಾಳಿಗೆ (ಸರ್ಜಿಕಲ್ ಸ್ಟ್ರೈಕ್) ಸಾಕ್ಷ್ಯ ಕೇಳಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ರಾಹುಲ್ ಗಾಂಧಿ ಅವರು ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ ಮಗ ಎಂಬುದಕ್ಕೆ ಬಿಜೆಪಿ ಪುರಾವೆ ಕೇಳಿತ್ತೇ ಎಂದು ಪ್ರಶ್ನಿಸಿದ್ದರು.