Tag: hindenburg report

  • ಹಿಂಡೆನ್‌ಬರ್ಗ್ ರಿಪೋರ್ಟ್ – ಅದಾನಿ ಕಂಪನಿಗಳ ತನಿಖೆಗೆ ಸಮಿತಿ ರಚಿಸಿದ ಸುಪ್ರೀಂ

    ಹಿಂಡೆನ್‌ಬರ್ಗ್ ರಿಪೋರ್ಟ್ – ಅದಾನಿ ಕಂಪನಿಗಳ ತನಿಖೆಗೆ ಸಮಿತಿ ರಚಿಸಿದ ಸುಪ್ರೀಂ

    ನವದೆಹಲಿ: ಅದಾನಿ ಗ್ರೂಪ್ ಆಫ್ ಕಂಪನಿಗಳ ವಿರುದ್ಧ ಹಿಂಡೆನ್‌ಬರ್ಗ್ (Hindenburg) ಸಂಶೋಧನಾ ವರದಿ ಮಾಡಿರುವ ಆರೋಪಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ (Supreme Court), ನಿವೃತ್ತ ನ್ಯಾಯಾಧೀಶ ಎ.ಎಂ ಸಪ್ರೆ ನೇತೃತ್ವದಲ್ಲಿ ಆರು ಮಂದಿಯ ಸಮಿತಿಯನ್ನು ರಚಿಸಿದೆ.

    ಸಮಿತಿಯೂ ಒ.ಪಿ. ಭಟ್, ನ್ಯಾಯಮೂರ್ತಿ ಜೆ.ಪಿ. ದೇವಧರ್, ಕೆ.ವಿ. ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರ್ ಸುಂದರೇಶನ್ ಅವರನ್ನು ಒಳಗೊಂಡಿರಲಿದೆ ಎಂದು ಸಿಜೆಐ ಡಿ.ವೈ. ಚಂದ್ರಚೂಡ್ (DY Chandrachud) ನೇತೃತ್ವದ ತ್ರಿ ಸದಸ್ಯ ಪೀಠ ತಿಳಿಸಿದೆ. ಇದನ್ನೂ ಓದಿ: ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ 38ನೇ ಸ್ಥಾನಕ್ಕೆ ಕುಸಿದ ಅದಾನಿ

    ಸಮಿತಿಯೂ ಅದಾನಿ ಕಂಪನಿಗಳಲ್ಲಿ ಅಕ್ರಮ ನಡೆದಿದೆಯೇ? ಷೇರುಗಳ ಮೌಲ್ಯ ಹೆಚ್ಚಿಸಲು ಕೃತಕ ಪ್ರಯತ್ನಗಳು ನಡೆದಿವೆಯೇ? ಸೆಬಿ ನಿಯಮಗಳ ಸೆಕ್ಷನ್ 19 ರ ಉಲ್ಲಂಘನೆಯಾಗಿದೆಯೇ? ಹೂಡಿಕೆದಾರರ ರಕ್ಷಣೆಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಕೋರ್ಟ್ ಸೂಚಿಸಿದೆ.

    ತನಿಖೆಯನ್ನು ನಡೆಸಿ ಎರಡು ತಿಂಗಳೊಳಗೆ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್‌ಗೆ ವರದಿ ನೀಡಬೇಕು ಎಂದು ಕೋರ್ಟ್ ಆದೇಶಿಸಿದೆ. ಸಮಿತಿಯನ್ನು ರಚಿಸುವುದರಿಂದ ಸೆಬಿಯ ಸ್ವಾತಂತ್ರ್ಯ ಮತ್ತು ಅದರ ತನಿಖಾ ಪ್ರಕ್ರಿಯೆಗಳಿಗೆ ಅಡ್ಡಿಯಾಗುವುದಿಲ್ಲ ಎಂದೂ ಕೋರ್ಟ್ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಹಿಂಡೆನ್‍ಬರ್ಗ್ ರಿಪೋರ್ಟ್ ಎಫೆಕ್ಟ್- ಗೌತಮ್ ಅದಾನಿಗೆ 12 ಲಕ್ಷ ಕೋಟಿ ನಷ್ಟ

    SEBI ಅಧ್ಯಕ್ಷರು ಎಲ್ಲಾ ಅಗತ್ಯ ಮಾಹಿತಿಯನ್ನು ತಜ್ಞರ ಸಮಿತಿಗೆ ಒದಗಿಸಬೇಕು. ಸಂಬಂಧಪಟ್ಟ ಕೇಂದ್ರ ಸರ್ಕಾರದ ಏಜೆನ್ಸಿಗಳು ಸಮಿತಿಯೊಂದಿಗೆ ಸಹಕರಿಸಬೇಕು. ಸಮಿತಿಯು ತನ್ನ ಕೆಲಸಕ್ಕಾಗಿ ಬಾಹ್ಯ ತಜ್ಞರೊಂದಿಗೆ ಸಮಾಲೋಚನೆಯನ್ನು ಪಡೆಯಬಹುದು. ಸಮಿತಿಯ ಸದಸ್ಯರಿಗೆ ಪಾವತಿಸಬೇಕಾದ ಸಂಭಾವನೆಯನ್ನು ಅಧ್ಯಕ್ಷರು ನಿಗದಿಪಡಿಸುತ್ತಾರೆ. ಕೇಂದ್ರ ಸರ್ಕಾರವು ಭರಿಸಬೇಕು. ಇದಕ್ಕಾಗಿ ಕೇಂದ್ರ ಹಣಕಾಸು ಸಚಿವರು ಹಿರಿಯ ಅಧಿಕಾರಿಯನ್ನು ನಾಮನಿರ್ದೇಶನ ಮಾಡಬೇಕು ಎಂದು ಸುಪ್ರೀಂ ಆದೇಶಿಸಿದೆ.

    ಅದಾನಿ ಕಂಪನಿಗಳ ತನಿಖೆಗೆ ಸುಪ್ರೀಂ ಕೋರ್ಟ್ ಸಮಿತಿ ರಚಿಸುವುದನ್ನು ಗೌತಮ್ ಅದಾನಿ (Gautam Adani) ಸ್ವಾಗತಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಮಯ ಕಳೆದಂತೆ ಪ್ರಕರಣ ತಾರ್ಕಿಕ ಅಂತ್ಯ ಕಾಣಲಿದೆ. ಸತ್ಯ ಮೇಲುಗೈ ಸಾಧಿಸಲಿದೆ ಎಂದು ಹೇಳಿದ್ದಾರೆ.

  • ಹಿಂಡೆನ್‍ಬರ್ಗ್ ರಿಪೋರ್ಟ್ ಎಫೆಕ್ಟ್- ಗೌತಮ್ ಅದಾನಿಗೆ 12 ಲಕ್ಷ ಕೋಟಿ ನಷ್ಟ

    ಹಿಂಡೆನ್‍ಬರ್ಗ್ ರಿಪೋರ್ಟ್ ಎಫೆಕ್ಟ್- ಗೌತಮ್ ಅದಾನಿಗೆ 12 ಲಕ್ಷ ಕೋಟಿ ನಷ್ಟ

    ನವದೆಹಲಿ: ಹಿಂಡೆನ್‍ಬರ್ಗ್ ವರದಿ (Hindenburg Report) ಯಿಂದ ಷೇರು ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿದ್ದು, ಅದಾನಿ ಕಂಪನಿಗಳ ಷೇರುಗಳಲ್ಲಿನ ಕುಸಿತ ಮುಂದುವರಿದಿದೆ. ಕಳೆದೊಂದು ತಿಂಗಳಲ್ಲಿ ಅದಾನಿ ಸಂಸ್ಥೆಯ 10 ಕಂಪನಿಗಳ ಹೂಡಿಕೆಯು ನೆಲಕಚ್ಚಿದ್ದು ಗೌತಮ್ ಅದಾನಿ (Gautam Adani) ಗೆ 12 ಲಕ್ಷ ಕೋಟಿ ನಷ್ಟವಾಗಿದೆ.

    ಅದಾನಿ ಗ್ರೂಪ್‍ನ ಮಾರುಕಟ್ಟೆ ಬಂಡವಾಳವು ಜನವರಿ 24 ರ ಮೊದಲು ಸರಿಸುಮಾರು 19 ಲಕ್ಷ ಕೋಟಿ ರೂಪಾಯಿಗಳಷ್ಟಿತ್ತು. ಆದರೆ ಅಮೆರಿಕ ಮೂಲದ ಹಿಂಡೆನ್‍ಬರ್ಗ್ ಸ್ಫೋಟಕ ವರದಿ ಬಿಡುಗಡೆ ಮಾಡಿದ ನಂತರ ಅದರ ಮೌಲ್ಯ ಸರಿ ಸುಮಾರು 7.2 ಲಕ್ಷ ಕೋಟಿಗೆ ಕುಸಿದಿದೆ.

    ಅದಾನಿ ಕಂಪನಿಯ ಏಳು ಪ್ರಮುಖ ಪಟ್ಟಿಮಾಡಿದ ಕಂಪನಿಗಳು 85 ಪ್ರತಿಶತದಷ್ಟು ಕುಸಿತ ಕಂಡಿವೆ. ಅದಾನಿ ಟೋಟಲ್ ಗ್ಯಾಸ್, ಅದಾನಿ ಗ್ರೀನ್ ಎನರ್ಜಿ ಮತ್ತು ಅದಾನಿ ಟ್ರಾನ್ಸ್ ಮಿಷನ್ ನಲ್ಲಿ ಭಾರೀ ನಷ್ಟ ಸಂಭವಿಸಿದ್ದು, ಕೇವಲ ಒಂದು ತಿಂಗಳಲ್ಲಿ ಸುಮಾರು 80 ಪ್ರತಿಶತದಷ್ಟು ಷೇರಿನ ಮೌಲ್ಯ ಕುಸಿದಿದೆ. 52 ವಾರಗಳ ಕನಿಷ್ಠ ಮೌಲ್ಯ ತಲುಪಿವೆ.

    ವರದಿಯಲ್ಲಿ ಏನಿತ್ತು?: ಎರಡು ವರ್ಷಗಳ ತನಿಖೆಯ ನಂತರ ಹಿಂಡೆನ್‍ಬರ್ಗ್ ವರದಿ ಪ್ರಕಟವಾಗಿತ್ತು. ದಶಕಗಳ ಅವಧಿಯ ವ್ಯವಹಾರದಲ್ಲಿ ಅದಾನಿ ಸಮೂಹ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಲೆಕ್ಕಪತ್ರ ವಂಚನೆ ಎಸಗಿದೆ ಎಂದು ಆರೋಪಿಸಿತ್ತು. ಇದನ್ನೂ ಓದಿ: ಹಿಂಡೆನ್‌ಬರ್ಗ್ ಎಫೆಕ್ಟ್ – 9.91 ಲಕ್ಷ ಕೋಟಿಯಿಂದ 5 ಲಕ್ಷ ಕೋಟಿಗೆ ಇಳಿಯಿತು ಅದಾನಿ ಸಂಪತ್ತು

    ಅದಾನಿ ಗ್ರೂಪ್‍ (Adani Group) ನ ಮಾಜಿ ಹಿರಿಯ ಕಾರ್ಯನಿರ್ವಾಹಕರು ಸೇರಿದಂತೆ ಹಲವಾರು ಜನರನ್ನು ಸಂಶೋಧನೆಗಾಗಿ ಸಂದರ್ಶಿಸಲಾಗಿದೆ. ಸಾವಿರಾರು ದಾಖಲೆಗಳನ್ನು ಪರಿಶೀಲಿಸಲಾಗಿದೆ. ಹನ್ನೆರಡು ವಿವಿಧ ರಾಷ್ಟ್ರಗಳಲ್ಲಿ ಅದಾನಿ ಕಂಪನಿಗಳನ್ನು ವೀಕ್ಷಿಸಲಾಗಿದೆ ಎಂದು ಹೇಳಿತ್ತು. ಅದಾನಿ ಗ್ರೂಪ್ ಭಾರೀ ಸಾಲ ಮಾಡಿದೆ. ತಮ್ಮ ಸಾಲಗಳಿಗೆ ಷೇರುಗಳನ್ನೇ ಒತ್ತೆ ಇಡುತ್ತಿದೆ. ಇದರಿಂದಾಗಿ ಸಮೂಹದ ಆರ್ಥಿಕ ಸ್ಥಿತಿ ಅಪಾಯದಲ್ಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

    ಜನವರಿ 24 ರಂದು ಹಿಂಡೆನ್‍ಬರ್ಗ್‍ನಿಂದ ವರದಿಯನ್ನು ಬಿಡುಗಡೆ ಮಾಡಿದಾಗ, ವರದಿಯು ಅದಾನಿ ಕಂಪನಿ ಮೇಲೆ ಯಾವುದೇ ದೊಡ್ಡ ಪರಿಣಾಮ ಬೀರುವುದಿಲ್ಲ ಮತ್ತು ಷೇರುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತವೆ ಎಂದು ವಿಶ್ಲೇಷಕರು ಹೇಳಿದ್ದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k