ಕಾಂತಾರ: ಚಾಪ್ಟರ್ 1 (Kantara Chapter 1) ಒಟಿಟಿಯಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿದ ಈ ವರ್ಷದ ಸೂಪರ್ ಹಿಟ್ ಚಲನಚಿತ್ರ ಅಕ್ಟೋಬರ್ 31 ರಂದು ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ.
ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಸಿನಿಮಾ ಬಿಡುಗಡುಗಡೆ ಮಾಡಲಾಗುವುದು ಎಂದು ಅಮೆಜಾನ್ ಪ್ರೈಮ್ (Amazon Prime) ಅಧಿಕೃತವಾಗಿ ತಿಳಿಸಿದೆ.
ಕಾಂತಾರದ ಎಲ್ಲಾ ಭಾಷೆಗಳ ಒಟಿಟಿ ಹಕ್ಕುಗಳನ್ನು (OTT Rights) ಅಮೆಜಾನ್ ಪಡೆದುಕೊಂಡಿದ್ದರೂ ಹಿಂದಿ ಭಾಷೆಗೆ ಡಬ್ ಆಗಿರುವ ಸಿನಿಮಾ ರಿಲೀಸ್ ಆಗುತ್ತಿಲ್ಲ. ಉತ್ತರ ಭಾರತದ ಮಾರುಕಟ್ಟೆಯಲ್ಲಿ ಈಗಲೂ ಕಾಂತಾರ ಟಿಕೆಟ್‌ಗಳು ಸೇಲ್ ಆಗುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ ಕೊನೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.
get ready to witness the LEGENDary adventure of BERME 🔥#KantaraALegendChapter1OnPrime, October 31@hombalefilms @KantaraFilm @shetty_rishab @VKiragandur @ChaluveG @rukminitweets @gulshandevaiah #ArvindKashyap @AJANEESHB @HombaleGroup pic.twitter.com/ZnYz3uBIQ2
— prime video IN (@PrimeVideoIN) October 27, 2025
ಬಿಡುಗಡೆಯಾಗಿ 25 ದಿನ ಕಳೆದರೂ ಕಾಂತಾರ ಕ್ರೇಜ್ ಇನ್ನೂ ಕಡಿಮೆಯಾಗಿಲ್ಲ. ನಾಲ್ಕನೇ ವಾರಕ್ಕೆ ಕಾಲಿಟ್ಟರೂ ಈಗಲೂ ಬುಕ್‌ಮೈಶೋದಲ್ಲಿ ಟಿಕೆಟ್ ಮಾರಾಟವಾಗುತ್ತಿದೆ. ಹಿಂದಿಯಲ್ಲಿ ಮೊದಲ ವಾರ 110.10 ಕೋಟಿ ರೂ. ಗಳಿಸಿದರೆ ಎರಡನೇ ವಾರದಲ್ಲಿ 54.57 ಕೋಟಿ ರೂ., ಮೂರನೇ ವಾರದಲ್ಲಿ 28.95 ಕೋಟಿ ರೂ., ನಾಲ್ಕನೇ ವಾರದಲ್ಲಿ 11.94 ಕೋಟಿ ರೂ. ಗಳಿಸುವ ಮೂಲಕ ಒಟ್ಟು 205.56 ಕೋಟಿ ರೂ. ಗಳಿಸಿದೆ.
ಇಲ್ಲಿಯವರೆಗೆ ಬಾಕ್ಸ್ ಆಫೀಸ್‌ನಲ್ಲಿ ಕಾಂತಾರ 809 ಕೋಟಿ ರೂ. ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಈ ಮೂಲಕ ಈ ವರ್ಷ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಾವಾ ಸಿನಿಮಾವನ್ನು ಮೀರಿಸಿದೆ. ಚಾವಾ ಸಿನಿಮಾ 807 ಕೋಟಿ ರೂ. ಕಲೆಕ್ಷನ್ ಮಾಡಿತ್ತು.
ಕಾಂತಾರ ಸಿನಿಮಾ ನಿರ್ಮಾಣಕ್ಕೆ ಅಂದಾಜು 125 ಕೋಟಿ ರೂ. ವೆಚ್ಚವಾಗಿದೆ ಎಂದು ಹೇಳಲಾಗುತ್ತಿದೆ. ಒಟಿಟಿ ಹಕ್ಕುಗಳನ್ನು ಅಮೇಜಾನ್ ಪ್ರೈಮ್ 125 ಕೋಟಿ ರೂ. ನೀಡಿ ಖರೀದಿಸಿದೆ ಎನ್ನಲಾಗುತ್ತಿದೆ. ಕೆಜಿಎಫ್ ನಂತರ ಅತಿದೊಡ್ಡ ಮೊತ್ತಕ್ಕೆ ಡಿಜಿಟಲ್ ರೈಟ್ಸ್ ಮಾರಾಟವಾದ ಎರಡನೇ ಕನ್ನಡ ಚಿತ್ರ ಕಾಂತಾರವಾಗಿದೆ.
2022 ರಲ್ಲಿ ಬಿಡುಗಡೆಯಾದ ಕಾಂತಾರ ಸಿನಿಮಾ ಬಜೆಟ್ ಅಂದಾಜು 16 ಕೋಟಿ ರೂ. ಆಗಿದ್ದರೆ ಬಾಕ್ಸ್ ಆಫೀಸ್‌ನಲ್ಲಿ 450 ಕೋಟಿ ರೂ. ಕಲೆಕ್ಷನ್ ಮಾಡಿತ್ತು.













