Tag: hindi-questions

  • ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ –  ಹೆಚ್‍ಡಿಕೆ

    ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ – ಹೆಚ್‍ಡಿಕೆ

    ಬೆಂಗಳೂರು: ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ಕೇಂದ್ರ ಸರ್ಕಾರ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕಲಾಗುತ್ತಿದೆ. ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

    ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಭಾನುವಾರ ನಡೆಸಿದ ಯುಜಿಸಿ-ಎನ್‍ಇಟಿ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯಲ್ಲಿ 100ರಲ್ಲಿ 90 ರಷ್ಟು ಪ್ರಶ್ನೆಗಳು ಹಿಂದಿ ಭಾಷೆಯಲ್ಲಿದ್ದರಿಂದ ಸಾವಿರಾರು ವಿದ್ಯಾರ್ಥಿಗಳು ಗೊಂದಲಕ್ಕೀಡಿ ಪರೀಕ್ಷೆಯನ್ನು ಅರ್ಧಕ್ಕೆ ಬಿಟ್ಟು ಹೊರನಡೆದರು. ಈ ವಿಚಾರವಾಗಿ ಅನೇಕ ವಿದ್ಯಾರ್ಥಿಗಳು ಪರೀಕ್ಷಾ ಪ್ರಾಧಿಕಾರದ ವಿರುದ್ಧ ಪ್ರತಿಭಟನೆ ನಡೆಸುವ ಅಕ್ರೋಶ ವ್ಯಕ್ತಪಡಿಸಿದರು. ಮತ್ತೊಮ್ಮೆ ಪರೀಕ್ಷೆ ನಡೆಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದರು.

    ಇದೀಗ ಈ ಕುರಿತಂತೆ ಹೆಚ್.ಡಿ ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇ ಪದೇ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರ್ಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕಲಾಗುತ್ತಿದೆ. ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:  ಒಂದು ಕಡೆ ಸಿನಿಮಾ, ಮತ್ತೊಂದು ಕಡೆ ರಾಜ್ಯ ಏನ್ಮಾಡ್ಬೇಕು ಗೊತ್ತಾಗ್ತಿಲ್ಲ: ರಚಿತಾ ರಾಮ್

    ನಿನ್ನೆ ರಾಷ್ಟ್ರೀಯ ಪರಿಕ್ಷಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಯುಜಿಸಿ – ಎನ್ ಇಟಿ ಕನ್ನಡ ಐಚ್ಛಿಕ ಭಾಷಾ ಪಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲೇ ಇದ್ದವು. ಅದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿ ಪರೀಕ್ಷೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ ಎಂದಿದ್ದಾರೆ.

    ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಅಲ್ಲದೇ ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ. ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕೊರೊನಾದೊಂದಿಗೆ ಪ್ರತಿಪಕ್ಷಗಳು ಸ್ನೇಹ ಬೆಳೆಸುತ್ತಿದೆ: ಯೋಗಿ ಆದಿತ್ಯನಾಥ್

    ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರದ ಇನ್ನು ಹಲವಾರು ಉದ್ಯೋಗ ಅವಕಾಶಗಳಲ್ಲಿ ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯ ಆಗುತ್ತಿದೆ. ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ. ನಮ್ಮ ಮೌನ ನಮ್ಮ ದೌರ್ಬಲ್ಯವಲ್ಲ ಎಂಬುದು ನೆನಪಿರಲಿ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: 56ನೇ ವಸಂತಕ್ಕೆ ಕಾಲಿಟ್ಟ ಬಾಲಿವುಡ್ ಸುಲ್ತಾನ್ – ಫಾರ್ಮ್ ಹೌಸ್‍ನಲ್ಲಿ ಪಾರ್ಟಿ

    ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೂಡಲೇ ಪರಿಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಪುನಾ ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರಿಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.

    ಪರೀಕ್ಷೆ ಅವ್ಯವಸ್ಥೆ ಆಗರವಾಗಿತ್ತು ಎನ್ನುವುದು ತಿಳಿದುಬಂದಿದೆ. ಅದನ್ನು ಸರಿಪಡಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಬೇಕು. ಹಿಂದಿ ಹೇರಿಕೆ ನಿಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ.  ಇದನ್ನೂ ಓದಿ:  ನ್ಯೂ ಇಯರ್ ಎಲ್ಲಾದ್ರೂ ಮಾಡ್ಲಿ, ಕೊರೊನಾ ನಿಯಮ ಪಾಲಿಸಲಿ: ಬೊಮ್ಮಾಯಿ