Tag: hindu activists

  • ಭಟ್ಕಳ ಅರಣ್ಯದಲ್ಲಿ ಗೋವುಗಳ ನರಮೇಧ? – ನೂರಾರು ಗೋವುಗಳ ಎಲುಬುಗಳು ಪತ್ತೆ; ಪೊಲೀಸರಿಂದ ತನಿಖೆ

    ಭಟ್ಕಳ ಅರಣ್ಯದಲ್ಲಿ ಗೋವುಗಳ ನರಮೇಧ? – ನೂರಾರು ಗೋವುಗಳ ಎಲುಬುಗಳು ಪತ್ತೆ; ಪೊಲೀಸರಿಂದ ತನಿಖೆ

    ಕಾರವಾರ: ಆ ಅರಣ್ಯದಲ್ಲಿ ನೂರಾರು ಬುರುಡೆಗಳು, ಸಾವಿರಾರು ಎಲುಬುಗಳು (Cow Bones) ಪತ್ತೆಯಾಗಿವೆ. ಪೊಲೀಸರು ಇದೀಗ ಇದರ ರಹಸ್ಯ ಹೊರಗೆಳೆಯಲು ತನಿಖೆಗಿಳಿದಿದ್ದಾರೆ.

    ಉತ್ತರ ಕನ್ನಡ (Uttara kannada) ಜಿಲ್ಲೆಯ ಭಟ್ಕಳದ ಮುಗ್ದಮ್ ಕಾಲೋನಿ ಬಳಿಯ ಅರಣ್ಯ ಇಲಾಖೆಗೆ ಸೇರಿದ ಬೆಳ್ನೆ ಅರಣ್ಯದ ಸರ್ವೇ ನಂಬರ್ 74ರ ಜಾಗದಲ್ಲಿ ನೂರಾರು ಗೋವುಗಳ ಕಳೇಬರದ ರಾಶಿಯೇ ಪತ್ತೆಯಾಗಿದೆ. ಸ್ಥಳೀಯರು ಈ ಕಾಡಿನ ಭಾಗದಲ್ಲಿ ರಾಶಿ ರಾಶಿ ಬಿದ್ದ ಗೋವುಗಳ ಅಸ್ಥಿಪಂಜರವನ್ನು ನೋಡಿ ಹಿಂದೂ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಆಗಮಿಸಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಇದು ತಿಳಿಯುತ್ತಿದ್ದಂತೆ ರಾಶಿ ರಾಶಿ ಬಿದ್ದಿದ್ದ ಅಸ್ಥಿಪಂಜರಗಳನ್ನ ಆ ಸ್ಥಳದಿಂದ ಅನಾಮಿಕ ವ್ಯಕ್ತಿಗಳು ಬೇರೆಡೆ ಸಾಗಿಸಿದ್ದಾರೆ. ಸಾಗಿಸುವ ವೇಳೆ ಅವಸರದಲ್ಲಿ ಪಕ್ಕದಲ್ಲಿದ್ದ ಪುರಸಭೆಯ ವೇಸ್ಟ್ ಡಂಪಿಂಗ್ ಟ್ಯಾಂಕ್‌ಗೂ ಅಸ್ಥಿಪಂಜರಗಳನ್ನು ಹಾಕಲಾಗಿದೆ.

    ಇನ್ನು ಭಟ್ಕಳದಲ್ಲಿ ನಿರಂತರ ಗೋವಧೆ ನಡೆಯುತ್ತಿರುವ ಬಗ್ಗೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಅಕ್ರಮವಾಗಿ ಗೋವುಗಳನ್ನು ಭಟ್ಕಳಕ್ಕೆ ತಂದು ವಧಿಸಲಾಗುತ್ತಿದೆ, ಇದಕ್ಕೆ ಪೊಲೀಸ್ ಇಲಾಖೆಯೂ ಸೇರಿಕೊಂಡಿದೆ ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ನಮ್ಮ ಮೇಲೆ ಬಂದಿರುವ ಅಪವಾದಗಳು ಓಡಿ ಹೋಗುತ್ತವೆ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

    ಇನ್ನು ಮೊದಲು ಪೊಲೀಸರು ಇದು ಹಳೆಯ ವಿಡಿಯೋ ಎಂದು ಘಟನೆಯನ್ನು ತಳ್ಳಿಹಾಕಿದ್ದರು. ಆದರೆ ಘಟನೆಯ ಸೂಕ್ಷ್ಮತೆ ಅರಿತ ಪೊಲೀಸರು, ಅರಣ್ಯ ಇಲಾಖೆ, ಪುರಸಭೆ ಅಧಿಕಾರಿಗಳು, ಪಶು ವೈದ್ಯಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಇನ್ನು ಇಷ್ಟೊಂದು ದೊಡ್ಡ ಮಟ್ಟದಲ್ಲಿ ಗೋವುಗಳ ವಧೆಯಾಗಿರುವುದನ್ನು ಮನಗಂಡು ಭಟ್ಕಳ ಶಹರ ಠಾಣೆಯಲ್ಲಿ ಉಪ ಅವಲಯ ಅರಣ್ಯಾಧಿಕಾರಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮದ್ದೂರು ಗಣೇಶ ಮೆರವಣಿಗೆಗೆ ಕಲ್ಲು ತೂರಿದ ಕೇಸ್‌ – ಪಾತ್ರವೇ ಇಲ್ಲದ ಪೊಲೀಸ್‌ ಅಧಿಕಾರಿ ವರ್ಗಾವಣೆ

  • ಗೋ ರಕ್ಷಣೆಗೆ ಹೋದವರ ಮೇಲೆ ಹಲ್ಲೆ ಆರೋಪ; ಹಿಂದೂ – ಮುಸ್ಲಿಂ ಯುವಕರ ನಡುವೆ ಗಲಾಟೆ – ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ!

    ಗೋ ರಕ್ಷಣೆಗೆ ಹೋದವರ ಮೇಲೆ ಹಲ್ಲೆ ಆರೋಪ; ಹಿಂದೂ – ಮುಸ್ಲಿಂ ಯುವಕರ ನಡುವೆ ಗಲಾಟೆ – ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ!

    – ಧಾರವಾಡ ಉಪನಗರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ

    ಧಾರವಾಡ: ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಗೋವುಗಳ ರಕ್ಷಣೆಗೆ ಮುಂದಾಗಿದ್ದ ಬಜರಂಗದಳದ ಕಾರ್ಯಕರ್ತ ಸೋಮಶೇಖರ್ ಎಂಬುವವರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಹೇಳಿಬಂದಿದೆ. ಈ ಬೆನ್ನಲ್ಲೇ ಹಿಂದೂ-ಮುಸ್ಲಿಮ್‌ ಯುವಕರ ನಡುವೆ ಗಲಾಟೆಯೂ ನಡೆದಿದ್ದು ಕೆವಲರಿಗೆ ಗಾಯಗಳಾಗಿರುವ ಘಟನೆ ಧಾರವಾಡ ನಗರದ ಎಪಿಎಂಸಿ ಬಳಿ ನಡೆದಿದೆ.

    ಹಲ್ಲೆಯನ್ನು ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸೋಮಶೇಖರ್ ಅವರ ಮೇಲೆ ಹಲ್ಲೆ ಮಾಡಿದ ಅನ್ಯಕೋಮಿನ ಜನರನ್ನು ಬಂಧಿಸುವಂತೆ ಆಗ್ರಹಿಸಿ ಬಜರಂಗದಳ ಕಾರ್ಯಕರ್ತರು ಉಪನಗರ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರಸಂಗವೂ ನಡೆಯಿತು.

    ಇನ್ನು ಪ್ರತಿಭಟನೆಗೆ ಆಗಮಿಸಿದ ಧಾರವಾಡ ಶಾಸಕ ಅರವಿಂದ ಬೆಲ್ಲದ್, ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದವರನ್ನು ನಾಳೆವರೆಗೆ ಬಂಧಿಸದೇ ಇದ್ದರೆ, ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸದ್ಯ ಪ್ರತಿಭಟನೆ ಹಿಂದಕ್ಕೆ ಪಡೆದಿದ್ದೇವೆ, ನಾಳೆ ಬೆಳಗಿನವರೆಗೂ ನಾವು ಕಾದು ನೋಡುತ್ತೇವೆ, ಆ ಬಳಿಕ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಬೆಲ್ಲದ್ ತಿಳಿಸಿದರು.

    ನಂತರ ಮಾತನಾಡಿದ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್, ಜಾನುವಾರುಗಳ ಸಾಗಾಟಕ್ಕೆ ಸಂಬಂಧಿಸಿದಂತೆ ಎರಡು ಕೋಮಿನವರ ಮಧ್ಯೆ ಗಲಾಟೆಯಾಗಿದೆ. ಇಬ್ಬರು ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆಯಾಗಿದೆ, ಈ ಸಂಬಂಧ ಅವರು ದೂರು ದಾಖಲಿಸಿದ್ದಾರೆ. ಆ ಪ್ರಕಾರ ಎಫ್‌ಐಆರ್ ದಾಖಲಿಸಿಕೊಳ್ಳುತ್ತೇವೆ. ದೂರಿನಲ್ಲಿ ಇಬ್ಬರ ಹೆಸರಿನ ಜೊತೆಗೆ ಇನ್ನಷ್ಟು ಜನ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಾದ ಏರಿಯಾದಲ್ಲಿ ಸಿಸಿಟಿವಿ ಕ್ಯಾಮೆರಾಗಳಿವೆ, ಅದನ್ನೆಲ್ಲ ಪರಿಶೀಲಿಸಿ ನಾವು ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

  • ನೇಹಾ, ಫಯಾಜ್ ಫೋಟೋದೊಂದಿಗೆ ಜಸ್ಟಿಸ್ ಫಾರ್ ಲವ್ ಅಂದ ಯುವಕರು!

    ನೇಹಾ, ಫಯಾಜ್ ಫೋಟೋದೊಂದಿಗೆ ಜಸ್ಟಿಸ್ ಫಾರ್ ಲವ್ ಅಂದ ಯುವಕರು!

    ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಪ್ರಕರಣ ಸಂಬಂಧ ಒಂದೆಡೆ ರಾಜ್ಯದೆಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿದ್ದರೆ, ಇನ್ನೊಂದೆಡೆ ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಕೂಡ ಆರಂಭವಾಗಿದೆ. ಈ ನಡುವೆ ಕೊಲೆ ಸಮರ್ಥಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಧಾರವಾಡ ನಗರದ ನಿವಾಸಿಗಳಾದ ಸಾದಿಕ್ ತಡಕೋಡ ಹಾಗೂ ಆದಿಲ್ ಎಂಬಿಬ್ಬರು  ನೇಹಾ ಹಾಗೂ ಫಯಾಜ್ ಫೋಟೋ ಹಾಕಿ ಜಸ್ಟಿಸ್ ಫಾರ್ ಲವ್ ಎಂದು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದಾರೆ. ಇದನ್ನು ಗಮನಿಸಿದ ಹಿಂದೂ ಕಾರ್ಯಕರ್ತರು ಇಬ್ಬರು ಯುವಕರನ್ನು ವಿದ್ಯಾಗಿರಿ ಠಾಣೆಗೆ ಒಪ್ಪಿಸಿದ್ದಾರೆ. ಬಳಿಕ ಠಾಣೆ ಎದುರು ಜೈ ಶ್ರೀರಾಮ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.‌ ಇದನ್ನೂ ಓದಿ: ಪ್ರೀತಿ ಹೆಸ್ರಲ್ಲಿ ಅಮಾನುಷ ಕೃತ್ಯ ಎಸಗುವವರಿಗೆ ತಕ್ಕ ಶಿಕ್ಷೆಯಾಗ್ಲಿ- ನೇಹಾ ಹತ್ಯೆಗೆ ದರ್ಶನ್‌ ಕಿಡಿ

    ಪ್ರಕರಣದ ವಿವರ: ಏ.18 ರ ಗುರುವಾರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ ತನ್ನ ಕೈಯಲ್ಲಿ ಚಾಕು ಹಿಡಿದು, ಮಾಸ್ಕ್ ಧರಿಸಿಕೊಂಡು ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಎಂಟ್ರಿ ಕೊಟ್ಟಿದ್ದನು. ಇತ್ತ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ. ನೇಹಾಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ನೇಹಾ ಮೃತಪಟ್ಟಿದ್ದಾಳೆ.

    ಇತ್ತ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿ ಕಿಮ್ಸ್ ಆಸ್ಪತ್ರೆಯ ಹಿಂಬಂದಿ ಅವಿತಿದ್ದ ಫಯಾಜ್‍ನನ್ನು ಬಂಧಿಸಲಾಗಿದೆ. ಸುದ್ದಿ ಹಬ್ಬುತ್ತಿದ್ದಂತೆಯೇ ಹುಬ್ಬಳ್ಳಿಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಇಳಿದವು. ಆರೋಪಿಯನ್ನು ಎನ್ ಕೌಂಟರ್ ಮಾಡಿ ಇಲ್ಲವೇ ಗಲ್ಲಿಗೇರಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇಂದು ಕೂಡ ಪ್ರತಿಭಟನೆ ಮುಂದುವರಿದಿದೆ. ಜೊತೆಗೆ #JusticeForNeha ಎಂಬ ಅಭಿಯಾನ ಕೂಡ ಸಾಮಾಜಿಕ ಜಾಲತಾಣದಲ್ಲಿ ಆರಂಭಿಸಲಾಗಿದೆ. ಈ ಕ್ಯಾಂಪೇನ್‍ಗೆ ಸ್ಯಾಂಡಲ್‍ವುಡ್ ಕೂಡ ಸಾಥ್ ನೀಡಿದೆ.

  • ಧಾರವಾಡದ ತಡಕೋಡ ಧ್ವಜ ಗಲಾಟೆ – ಹಿಂದೂ ಕಾರ್ಯಕರ್ತರಿಗೆ ಜಾಮೀನು ಮಂಜೂರು

    ಧಾರವಾಡದ ತಡಕೋಡ ಧ್ವಜ ಗಲಾಟೆ – ಹಿಂದೂ ಕಾರ್ಯಕರ್ತರಿಗೆ ಜಾಮೀನು ಮಂಜೂರು

    ಧಾರವಾಡ: ತಡಕೋಡ (Tadakod) ಗ್ರಾಮದಲ್ಲಿ ಉಂಟಾಗಿದ್ದ ಧ್ವಜ (Flag) ಗಲಾಟೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಹಿಂದೂ ಕಾರ್ಯಕರ್ತರಿಗೆ (Hindu Activists)  ಜಾಮೀನು (Bail) ಮಂಜೂರಾಗಿದ್ದು, ಎಲ್ಲ ಹಿಂದೂ ಕಾರ್ಯಕರ್ತರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

    ತಡಕೋಡ ಗ್ರಾಮದ ಸದ್ದಾಂಹುಸೇನ್ ಎಂಬಾತ ಅಯೋಧ್ಯೆ ರಾಮಮಂದಿರದ ಫೋಟೋ ಮೇಲೆ ಹಸಿರು ಧ್ವಜ, ಓವೈಸಿ ಫೋಟೋ ಹಾಕಿ, ಇದು ಇಸ್ಲಾಮಿಕ್ ಪವರ್ ಎಂಬ ಸಂದೇಶ ಹಾಕಿ ಎಡಿಟ್ ಮಾಡಿದ್ದ ಫೋಟೋವನ್ನು ವಾಟ್ಸಪ್ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದ. ಇದನ್ನೂ ಓದಿ: ರಾಯಚೂರಿನ ಕೃಷ್ಣಾ ನದಿಯಲ್ಲಿ ಶಿವಲಿಂಗ, ವೆಂಕಟೇಶ್ವರ ಮೂರ್ತಿಗಳು ಪತ್ತೆ

    ಇದರಿಂದ ಆಕ್ರೋಶಗೊಂಡ ಹಿಂದೂ ಕಾರ್ಯಕರ್ತರು ತಡಕೋಡ ಗ್ರಾಮದ ಈದ್ಗಾ ಕಟ್ಟಡದ ಗುಂಬಜ್ ಮತ್ತು ಸದ್ದಾಂ ಮನೆ ಮೇಲೆ ದಾಳಿ ಮಾಡಿ ಮನೆಯಲಿದ್ದ ವಸ್ತುಗಳನ್ನು ಒಡೆದು ಆಕ್ರೋಶ ಹೊರಹಾಕಿದ್ದರು. ಆಗ ಗರಗ ಠಾಣೆ ಪೊಲೀಸರು ಕೆಲ ಹಿಂದೂ ಕಾರ್ಯಕರ್ತರನ್ನ ಬಂಧಿಸಿ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದರು. ಈಗ ಎಲ್ಲ ಹಿಂದೂ ಕಾರ್ಯಕರ್ತರಿಗೆ ಜಾಮೀನು ಮಂಜೂರಾಗಿದ್ದು, ಮಾಜಿ ಶಾಸಕ ಅಮೃತ್ ದೇಸಾಯಿ (Amrut Ayyappa Desai) ಅವರು ಸ್ವತಃ ಕೇಂದ್ರ ಕಾರಾಗೃಹಕ್ಕೆ ತೆರಳಿ ಜೈಲಿನಿಂದ ಬಿಡುಗಯಾದ ಹಿಂದೂ ಕಾರ್ಯಕರ್ತರನ್ನು ಬರಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಸರಣಿ ಬಾಂಬ್‌ ಸ್ಫೋಟಕ್ಕೆ ಸಂಚು – 6 ಮಂದಿ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಕೆ

  • ಗೋ ಬ್ಯಾಕ್ ರಿಜ್ವಾನ್; ಬೆಂಗ್ಳೂರಲ್ಲಿ ಪಾಕ್ ಕ್ರಿಕೆಟಿಗರ ವಿರುದ್ಧ ಹಿಂದೂ ಕಾರ್ಯಕರ್ತರ ಪ್ರತಿಭಟನೆ

    ಗೋ ಬ್ಯಾಕ್ ರಿಜ್ವಾನ್; ಬೆಂಗ್ಳೂರಲ್ಲಿ ಪಾಕ್ ಕ್ರಿಕೆಟಿಗರ ವಿರುದ್ಧ ಹಿಂದೂ ಕಾರ್ಯಕರ್ತರ ಪ್ರತಿಭಟನೆ

    ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2023ರ ಏಕದಿನ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯ ನಡೆಯುತ್ತಿದೆ. ಆಸ್ಟ್ರೇಲಿಯಾ (Australia) ಮತ್ತು ಪಾಕಿಸ್ತಾನದ ನಡುವೆ ಮೊದಲ ಪಂದ್ಯ ನಡೆಯುತ್ತಿದ್ದು, ಪಾಕ್ ಆಟಗಾರರ ವಿರುದ್ಧ ಹಿಂದೂ ಸಂಘಟನೆಯ ಕಾರ್ಯಕರ್ತರು (Hindu Activists) ಪ್ರತಿಭಟನೆ ನಡೆಸಿದ್ದಾರೆ.

    ಶುಕ್ರವಾರ ಸಂಜೆ ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy Stadium) ಎದುರು ಜಮಾಯಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು `ಗೋ ಬ್ಯಾಕ್ ರಿಜ್ವಾನ್’ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: World Cup 2023: ಟೀಂ ಇಂಡಿಯಾಕ್ಕೆ ಮತ್ತೆ ಆಘಾತ – ನ್ಯೂಜಿಲೆಂಡ್‌ ವಿರುದ್ಧದ ಪಂದ್ಯಕ್ಕೆ ಪಾಂಡ್ಯ ಔಟ್‌

    ಶ್ರೀಲಂಕಾ ವಿರುದ್ಧ ಹೈದರಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಶತಕ ಬಾರಿಸಿದ ಪಾಕ್ ಕ್ರಿಕೆಟಿಗ ಮೊಹಮ್ಮದ್ ರಿಜ್ವಾನ್ (Mohammad Rizwan), ತಮ್ಮ ಶತಕವನ್ನು ಪ್ಯಾಲೆಸ್ತೀನಿಯರಿಗೆ ಅರ್ಪಿಸಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಗೆಟ್ ಔಟ್ ರಿಜ್ವಾನ್, ರಿಜ್ವಾನ್ ಹಠಾವೋ ಕ್ರಿಕೆಟ್ ಬಚಾವೋ, ಗೋ ಬ್ಯಾಕ್ ರಿಜ್ವಾನ್ ಹೀಗೆ ಘೋಷಣಾ ಫಲಕಗಳನ್ನು ಹಿಡಿದು ಆಕ್ರೋಶ ಹೊರಹಾಕಿದ್ದಾರೆ.

    ಬಳಿಕ ವಿವೇಕನಗರ ನಗರದ ಪೊಲೀಸರು ಹಿಂದೂ ಕಾರ್ಯಕರ್ತರಿಂದ ಘೋಷಣಾ ಫಲಕಗಳನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಇದನ್ನೂ ಓದಿ: World Cup 2023: ದಾಖಲೆ ಸೃಷ್ಟಿಸಿದ ವಾರ್ನರ್‌, ಮಿಚೆಲ್‌ ಮಾರ್ಷ್‌ ಶತಕಗಳ ಜೊತೆಯಾಟ – ಪಾಕ್‌ಗೆ 368 ರನ್‌ಗಳ ಗುರಿ

    ಶುಕ್ರವಾರ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 367 ರನ್ ಗಳಿಸುವ ಮೂಲಕ ಎದುರಾಳಿ ಪಾಕ್ ತಂಡಕ್ಕೆ 368 ರನ್‌ಗಳ ಗುರಿ ನೀಡಿದೆ. ಇದನ್ನೂ ಓದಿ: ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಒಣಗ್ತಿರೋ ಬೆಳೆ- ಸರ್ಕಾರದ ವಿರುದ್ಧ ರೈತ ಆಕ್ರೋಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುನಿಲ್ ಕುಮಾರ್ ವಿರುದ್ಧ ಸಿಡಿದ ಹಿಂದೂ ಕಾರ್ಯಕರ್ತರು

    ಸುನಿಲ್ ಕುಮಾರ್ ವಿರುದ್ಧ ಸಿಡಿದ ಹಿಂದೂ ಕಾರ್ಯಕರ್ತರು

    ಬೆಂಗಳೂರು: ಹಿಂದೂ ಕಾರ್ಯಕರ್ತರ (Hindu Activists) ಮೇಲೆ ಕಾರ್ಕಳ ಕ್ಷೇತ್ರದಲ್ಲಿ (Karkala Constituency) ಸಚಿವ ಸುನಿಲ್ ಕುಮಾರ್ (Sunil Kumar) ನೈತಿಕ ಪೊಲೀಸ್‌ಗಿರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಕಾರ್ಯಕರ್ತರು ಕೆಂಡಾಮಂಡಲವಾಗಿದ್ದಾರೆ.

    ಸಚಿವ ಸುನಿಲ್ ಕುಮಾರ್ ಅವರು ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಇದನ್ನು ಖಂಡಿಸಿ ಶ್ರೀರಾಮ ಸೇನೆಯ (Sri Rama Sena) ಬೆಂಗಳೂರು ವಿಭಾಗ ದೌರ್ಜನ್ಯ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಇದನ್ನೂ ಓದಿ: ಹಾಸನದಲ್ಲಿ ಜೆಡಿಎಸ್ ಟಿಕೆಟ್ ಫೈಟ್ – ಅಂತರ ಕಾಯ್ದುಕೊಂಡ ಹಾಲಿ ಶಾಸಕರು

    ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಕಾರ್ಯಕರ್ತರು ಹಾಗೂ ನಾಯಕರ ಮೇಲೆ ಪದೇ ಪದೇ ದೌರ್ಜನ್ಯ ನಡೆಯುತ್ತಿದೆ ಎಂದು ಹಿಂದೂ ಕಾರ್ಯಕರ್ತರು ಸುನಿಲ್ ಕುಮಾರ್ ವಿರುದ್ಧ ಆರೋಪ ಹೊರಿಸಿದ್ದಾರೆ. ಇದನ್ನೂ ಓದಿ: ಚುನಾವಣೆಗೆ ಸಮೀಪದಲ್ಲಿ ಡಿಕೆಶಿಗೆ ಶಾಕ್ – 5 ವರ್ಷದಲ್ಲಿ ಎಷ್ಟು ಆಸ್ತಿ ಹೆಚ್ಚಾಗಿತ್ತು? ತನಿಖೆ ಎಲ್ಲಿಯವರೆಗೆ ಬಂದಿದೆ?

    Live Tv
    [brid partner=56869869 player=32851 video=960834 autoplay=true]

  • BJP, ಹಿಂದೂ ಕಾರ್ಯಕರ್ತರ ಮೇಲಿನ 35 ಕ್ರಿಮಿನಲ್ ಕೇಸ್ ವಾಪಸ್

    BJP, ಹಿಂದೂ ಕಾರ್ಯಕರ್ತರ ಮೇಲಿನ 35 ಕ್ರಿಮಿನಲ್ ಕೇಸ್ ವಾಪಸ್

    ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ 35 ಕ್ರಿಮಿನಲ್ ಕೇಸ್‌ಗಳನ್ನು (Criminal Case) ಹಿಂಪಡೆಯಲು ರಾಜ್ಯ ಸರ್ಕಾರ (Karnataka Government) ನಿರ್ಧರಿಸಿದೆ.

    ಇಂದು ನಡೆದ ಸಂಪುಟ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು (BJP Workers), ಹಿಂದೂ ಕಾರ್ಯಕರ್ತರು (Hindu Activists), ರೈತ ಮುಖಂಡರು ಮತ್ತು ಕನ್ನಡ ಪರ ಕಾರ್ಯಕರ್ತರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಸಂಪುಟ ಉಪಸಮಿತಿ ಶಿಫಾರಸುಗಳನ್ನು ಆಧರಿಸಿ ಹಿಂಪಡೆಯಲು ನಿರ್ಧರಿಸಲಾಯ್ತು. ಆದರೆ ಯಾವ ಯಾವ ಪ್ರಕರಣಗಳನ್ನು ಹಿಂಪಡೆಯಲಾಗುತ್ತಿದೆ ಎಂಬ ಮಾಹಿತಿಯನ್ನು ಗೌಪ್ಯವಾಗಿ ಇರಿಸಲಾಗಿದೆ. ಇದನ್ನೂ ಓದಿ: ಪಾಕಿಸ್ತಾನದ ಮೇಲೆ ಪರಾಕ್ರಮ ಮೆರೆದಿದ್ದ ಭಾರತದ ಮಿಗ್-21 ಫೈಟರ್ ಜೆಟ್ ಸೇನೆಯಿಂದ ನಿವೃತ್ತಿ

    11,133 ಪೌರ ಕಾರ್ಮಿಕರಿಗೆ (Civic Workers) ಖಾಯಂ ನೌಕರಿ: ಸಿಹಿ ಸುದ್ದಿ ಅಂದ್ರೆ ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು ಸಂಪುಟ ನಿರ್ಧರಿಸಿದೆ. ಇದನ್ನೂ ಓದಿ: ಬಾಲಿವುಡ್‌ನ ಈ ನಟನ ಜೊತೆ ಹಸೆಮಣೆ ಏರಲು ರೆಡಿಯಾದ `ಗೂಗ್ಲಿ’ ನಟಿ

    ಈ ನೌಕರರಿಗೆ 17,000-28,980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ ಅನೇಕ ದಿನಗಳಿಂದ ಹೋರಾಟ ಮಾಡ್ತಿದ್ದ ಪೌರಕಾರ್ಮಿಕರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಈ ಮಧ್ಯೆ ಮಹತ್ವದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಎಸ್‌ಎಸ್‌ಎಲ್‌ಸಿ ಬೋರ್ಡ್‌ನಲ್ಲಿ ಪಿಯುಸಿ ಬೋರ್ಡ್ ವಿಲೀನ ಮಾಡುವ ವಿಧೇಯಕವನ್ನು ನಾಳೆ ಸದನದಲ್ಲಿ ಮಂಡಿಸಲಾಗುತ್ತದೆ. ಕರ್ನಾಟಕ ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದೆ. ಇದು ಕೂಡ ನಾಳೆ ಸದನದಲ್ಲಿ ಮಂಡನೆ ಆಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಗಣೇಶ ಮೆರವಣಿಗೆಯಲ್ಲಿ ಹಿಂದೂ ಕಾರ್ಯಕರ್ತರಿಂದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ

    ಗಣೇಶ ಮೆರವಣಿಗೆಯಲ್ಲಿ ಹಿಂದೂ ಕಾರ್ಯಕರ್ತರಿಂದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ

    ಹುಬ್ಬಳ್ಳಿ: ಹಿಂದೂ ಕಾರ್ಯಕರ್ತರ (Hindu Activists) ರಕ್ಷಣೆ ವಿಚಾರದಲ್ಲಿ ವಿಫಲವಾಗಿರುವ ರಾಜ್ಯ ಬಿಜೆಪಿ ಸರ್ಕಾರದ (BJP State Government) ವಿರುದ್ಧ ಹಿಂದೂ ಯುವಕರ (Hindhu Youth) ಆಕ್ರೋಶ ಮುಂದುವರಿದಿದೆ. ಇದಕ್ಕೆ ಗಣೇಶ ವಿಸರ್ಜನೆ ಮೆರಣಿಗೆಯಲ್ಲಿ ನಡೆದ ಘಟನೆಯೇ ಸಾಕ್ಷಿಯಾಗಿದೆ.

    ಗಣೇಶಮೂರ್ತಿಗಳ ವಿಸರ್ಜನೆ ಮೆರವಣಿಗೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಹಿಂದೂ ಯುವಕರು ಘೋಷಣೆ ಕೂಗಿರುವ ವಿಡಿಯೋ (Video) ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಪಂಪ ಮಹಾಕವಿ ರಸ್ತೆಯ ಹೆಸರು ಬದಲಾವಣೆಗೆ ಕಸಾಪ ಮುಂದಾಗಿಲ್ಲ: ಮಹೇಶ್‌ ಜೋಶಿ ಸ್ಪಷ್ಟನೆ

    ಹುಬ್ಬಳ್ಳಿಯಲ್ಲಿ ನಡೆದ 11 ದಿನದ ಗಣೇಶ ವಿಸರ್ಜನೆ ಕಾರ್ಯಕ್ರಮದ ಮೆರವಣಿಗೆಯಲ್ಲಿ ಯುವಕರು ಘೋಷಣೆ ಕೂಗಿರುವ ವೀಡಿಯೋ ವೈರಲ್ ಆಗಿದ್ದು, `ಬಿಜೆಪಿ 40 ಪರ್ಸೆಂಟ್ ಕಮಿಷನ್ ಸರ್ಕಾರ, ಗಲ್ಲಿಗಲ್ಲಿ ಮೇ ಚೋರ್ ಹೈ, ಬಿಜೆಪಿ ಚೋರ್ ಹೈ’ ಎಂಬ ಘೋಷಣೆಯನ್ನು ನೂರಾರು ಯುವಕರು ಮೆರವಣಿಗೆಯಲ್ಲಿ ಕೂಗಿದ್ದಾರೆ. ಇದನ್ನೂ ಓದಿ: ಗಣೇಶನ ಪ್ರಸಾದಕ್ಕೆ ಫುಲ್ ಡಿಮ್ಯಾಂಡ್ – 12 ಕೆಜಿ ಲಡ್ಡು 60 ಲಕ್ಷಕ್ಕೆ ಹರಾಜು

    ಈಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ಮುಖಂಡರು ಸೇರಿದಂತೆ ಹಲವಾರು ಜನ ವಿಡಿಯೋ ಎಲ್ಲೆಡೆ ಶೆರ್ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೊಡಗಿನ ಶನಿವಾರ ಸಂತೆ ಬಂದ್ – ಹಿಂದೂ ಕಾರ್ಯಕರ್ತರ ಬಂಧನ

    ಕೊಡಗಿನ ಶನಿವಾರ ಸಂತೆ ಬಂದ್ – ಹಿಂದೂ ಕಾರ್ಯಕರ್ತರ ಬಂಧನ

    ಮಡಿಕೇರಿ: ಪೊಲೀಸ್ ಠಾಣೆ ಮುಂಭಾಗ ಪ್ರತಿಭಟಿಸುತ್ತಿದ್ದ ಮುಸ್ಲಿಂ ಮಹಿಳೆಯರು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಶನಿವಾರ ಸಂತೆ ಬಂದ್‍ಗೆ ಮುಂದಾಗಿದ್ದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

    ಬಂದ್‍ಗೆ ಕರೆ ನೀಡಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಶನಿವಾರಸಂತೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದರು. ಆದರೂ ಅದನ್ನು ಉಲ್ಲಂಘಿಸಿ ಹಿಂದೂಪರ ಸಂಘಟನೆಗಳ ಹತ್ತಾರು ಮುಖಂಡರು ಮತ್ತು ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲು ಮುಂದಾಗಿದ್ದರು. ಬೆಳಗ್ಗೆಯಿಂದಲೇ ಪೊಲೀಸರು ಪಟ್ಟಣದಲ್ಲಿ 144 ಜಾರಿಯಲ್ಲಿದ್ದು ಯಾವುದೇ ಬಂದ್ ಅಥವಾ ಪ್ರತಿಭಟನೆಗೆ ಅವಕಾಶ ಇಲ್ಲವೆಂದು ಪ್ರಚಾರ ಮಾಡುತ್ತಾ, ಜನರು ಎಂದಿನಂತೆ ಯಾವುದೇ ಆತಂಕವಿಲ್ಲದೆ ವ್ಯಾಪಾರ ವಹಿವಾಟು ನಡೆಸಬಹುದು ಎಂದು ಪ್ರಚಾರ ಮಾಡುತ್ತಿದ್ದರು. ಇದನ್ನೂ ಓದಿ: ಪರೀಕ್ಷೆಯಲ್ಲಿ 100ಕ್ಕೆ 89 ಅಂಕ ಪಡೆದ 104ರ ವೃದ್ಧೆಯ ಸ್ಫೂರ್ತಿದಾಯಕ ಕಥೆ

    ಈ ನಡುವೆಯೂ 144 ಸೆಕ್ಷನ್ ಅನ್ನು ಉಲ್ಲಂಘಿಸಿ ಪ್ರತಿಭಟನೆ ಬಂದ್‍ಗೆ ಮುಂದಾದಾಗ ಸೋಮವಾರಪೇಟೆ ಡಿವೈಎಸ್‍ಪಿ ಶೈಲೇಂದ್ರ ಕುಮಾರ್ ಮತ್ತು ಶನಿವಾರ ಸಂತೆ ಸಿಪಿಐ ಪರಶಿವಮೂರ್ತಿ ಅವರ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ. ಅಲ್ಲದೆ ಪ್ರತಿಭಟನಾಕಾರರು ಪೊಲೀಸರು ಮುಸ್ಲಿಂ ರಾಷ್ಟ್ರ ಮಾಡಲು ಹೊರಟಿದ್ದಾರೆ ಎಂದು ಅವರ ವಿರುದ್ಧವೇ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಂದ್ ಗೆ ಕರೆ ನೀಡಿದ್ದ ಹಿನ್ನಲೆಯಲ್ಲಿ ಕೆಲವು ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಿದ್ದರೆ, ಮತ್ತೆ ಕೆಲವರು ಎಂದಿನಂತೆ ಅಂಗಡಿ ಮುಂಗಟ್ಟುಗಳನ್ನು ತೆರೆದಿದ್ದರು. ಸದ್ಯ ಶನಿವಾರಸಂತೆಯಲ್ಲಿ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದನ್ನೂ ಓದಿ: ಮೈಸೂರು, ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧೆ: ವಾಟಾಳ್

  • ಮತಾಂತರ ಯತ್ನ ಪ್ರಕರಣ – ಹಿಂದೂ ಪರ ಸಂಘಟನೆ ಕಾರ್ಯಕರ್ತರ ವಿರುದ್ಧ FIR ದಾಖಲು

    ಮತಾಂತರ ಯತ್ನ ಪ್ರಕರಣ – ಹಿಂದೂ ಪರ ಸಂಘಟನೆ ಕಾರ್ಯಕರ್ತರ ವಿರುದ್ಧ FIR ದಾಖಲು

    ಹುಬ್ಬಳ್ಳಿ: ಮತಾಂತರಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಅಕ್ಟೋಬರ್ 17 ರಂದು ಹುಬ್ಬಳ್ಳಿಯ ನವನಗರದಲ್ಲಿ ಪ್ರತಿಭಟನೆ ನಡೆಸಿದ್ದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

    ಭೈರಿದೇವರಕೊಪ್ಪ ಪ್ರಾರ್ಥನಾ ಮಂದಿರದ ಗಂಗಾ ಎಂಬುವರು 70 ಕ್ಕೂ ಹೆಚ್ಚು ಪ್ರತಿಭಟನಾಕಾರರ ವಿರುದ್ಧ ದೂರು ನೀಡಿದ್ದಾರೆ. 70ಕ್ಕೂ ಹೆಚ್ಚು ಜನರು ಪ್ರಾರ್ಥನಾ ಸ್ಥಳಕ್ಕೆ ಬಂದು ಗಲಾಟೆ ಮಾಡಿದ್ದಾರೆ. ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಆಮಿಷ ಒಡ್ಡಿ ಮತಾಂತರ – ಹುಬ್ಬಳ್ಳಿಯಲ್ಲಿ ರಾತ್ರಿ ಪ್ರತಿಭಟನೆ

    ಘಟನೆ ಹಿನ್ನೆಲೆ: ಮತಾಂತರಕ್ಕೆ ಮುಂದಾಗಿದ್ದ ಆರೋಪದ ಮೇಲೆ ಸುತಗಟ್ಟಿಯ ಸೋಮು ಅವರಾದಿ ಎಂಬ ವ್ಯಕ್ತಿಯನ್ನು ಅಕ್ಟೋಬರ್ 17 ರಂದು ಹಿಂದೂ ಪರ ಸಂಘಟನೆಯವರು ಎಪಿಎಂಸಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದರು. ಈತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳದೇ ಹಾಗೇ ಬಿಟ್ಟು ಕಳುಹಿಸಿದ್ದಾರೆಂದು ಆರೋಪಿಸಿ ಅಂದು ಸಂಜೆ ಹಿಂದೂಪರ ಸಂಘಟನೆಯವರು ನವನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಮತಾಂತರ ಮಾಡುತ್ತಿರುವವರನ್ನು ಒದ್ದು ಓಡಿಸಬೇಕು: ಪ್ರಮೋದ್ ಮುತಾಲಿಕ್

    ಶಾಸಕ ಅರವಿಂದ ಬೆಲ್ಲದ್ ಅವರೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಬಳಿಕ ಪೊಲೀಸರು ಆರೋಪಿ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದರು. ಆದರೆ ಆರೋಪಿಯನ್ನು ಬಂಧಿಸದ ಪರಿಣಾಮ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಸ್ವತಃ ಪೊಲೀಸ್ ಆಯುಕ್ತರು ಸ್ಥಳಕ್ಕೆ ಬಂದು ಆರೋಪಿಯನ್ನು ಬಂಧಿಸುವ ಭರವಸೆ ನೀಡಿದ್ದರು. ಪ್ರತಿಭಟನೆ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ನಿಂದಿಸಿದ್ದಾರೆಂದು ಆರೋಪಿಸಿ ಡಿಸಿಪಿ ಕೆ. ರಾಮರಾಜನ್ ಎಪಿಎಂಸಿ- ನವನಗರ ಠಾಣೆಯಲ್ಲಿ ಅಶೋಕ್ ಅನ್ವೇಕರ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದೀಗ ಮತ್ತೊಂದು ಪ್ರಕರಣ ಹಿಂದೂ ಪರ ಕಾರ್ಯಕರ್ತರ ಮೇಲೆ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.