Tag: hindu family

  • ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಕುಟುಂಬ 35 ವರ್ಷಗಳ ಬಳಿಕ ಹಿಂದೂ ಧರ್ಮಕ್ಕೆ ವಾಪಸ್

    ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಕುಟುಂಬ 35 ವರ್ಷಗಳ ಬಳಿಕ ಹಿಂದೂ ಧರ್ಮಕ್ಕೆ ವಾಪಸ್

    ಶಿವಮೊಗ್ಗ: ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕು ಎಂಬ ಸಂದರ್ಭದಲ್ಲಿಯೇ, ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ಜಯಶೀಲನ್ ಮತ್ತು ಜಯಮ್ಮ ಎಂಬುವರು ತಮ್ಮ ಕುಟುಂಬ ಸಮೇತ ಕ್ರಿಶ್ಚಿಯನ್ ಧರ್ಮದಿಂದ ಹಿಂದೂ ಧರ್ಮಕ್ಕೆ 35 ವರ್ಷಗಳ ಬಳಿಕ ವಾಪಸ್ ಆಗಿದ್ದಾರೆ.

    ಕ್ರಿಶ್ಚಿಯನ್ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ ಆದ ಜಯಶೀಲನ್ ಅವರ ಕುಟುಂಬ ಮೂಲತಃ ಹಿಂದೂ ಧರ್ಮದವರು. ಇವರ ತಂದೆ ಏಳುಮಲೈ ಅವರು 1985ರಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದರಂತೆ. ನಂತರ ಕುಟುಂಬದವರು ಯಾರೂ ಸಹ ಚರ್ಚ್‍ಗೆ ಹೋಗದೆ, ಹಿಂದೂ ಧರ್ಮದ ಆಚರಣೆಯನ್ನೇ ಅನುಸರಿಸುತ್ತಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಮತಾಂತರ ನಿಷೇಧ ಸರ್ಕಾರಿ ಪ್ರಾಯೋಜಿತ ಭಯೋತ್ಪಾದನಾ ಮಸೂದೆಯನ್ನು ಹಿಂಪಡೆಯಿರಿ: SDPI

    ಹೀಗಾಗಿಯೇ ಭದ್ರಾವತಿಯ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಮುಖಂಡರು ಜಯಶೀಲನ್ ಹಾಗೂ ಜಯಮ್ಮ ಅವರ ಕುಟುಂಬದವರೊಡನೆ ಮಾತನಾಡಿ, ಅವರ ಕುಟುಂಬ ಸದಸ್ಯರಾದ ಪ್ರಭಾಕರನ್, ಅವರ ಪತ್ನಿ ಲಲಿತಾ ಪ್ರಭಾಕರನ್ ಹಾಗೂ ಮಕ್ಕಳಾದ ಭರತ್ ಕುಮಾರ್, ಭಾವನಾ, ದ್ವಿತೀಯ ಪುತ್ರ ಪ್ರಕಾಶ್, ಶ್ವೇತಾ ಹಾಗೂ ಪೃಥ್ವಿ ಇಂದು ಪುನಃ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ.

    ಘರ್ ವಾಪಸಿ ಕಾರ್ಯಕ್ರಮವು ಭದ್ರಾವತಿ ಜನ್ನಾಪುರದ ಸಾರ್ವಜನಿಕ ರಾಮ ಭಜನಾ ಮಂದಿರದಲ್ಲಿ ನಡೆಯಿತು. ಘರ್ ವಾಪಸಿಯನ್ನು ವಿಎಚ್‍ಪಿ ಮುಖಂಡ ರಾಮಪ್ಪ, ಕೃಷ್ಣಮೂರ್ತಿ ಸೋಮಯಾಜಿ, ಅರಕೆರೆಯ ಕರಿಸಿದ್ದೇಶ್ವರ ಸ್ವಾಮೀಜಿ ಅವರ ಸಮ್ಮುಖದಲ್ಲಿ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಸಂವಿಧಾನಾತ್ಮಕ ಹಾಗೂ ಜನಪರ: ಬೊಮ್ಮಾಯಿ

    ಈ ವೇಳೆ ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರಾದ ಡಿ. ಆರ್ ಶಿವಕುಮಾರ್, ವೈ.ಎಸ್ ರಾಮಮೂರ್ತಿ, ಎಸ್.ನಾರಾಯಣ್, ಪಿ. ಮಂಜುನಾಥ್ ರಾವ್, ಶೈಲೇಶ್ ಕೋಟಿ, ಸಿ. ಮಹೇಶ್ವರಪ್ಪ, ಶಿವಮೂರ್ತಿ ಹಾಜರಿದ್ದರು.

  • ಪತಿಗೆ ಡೈವೋರ್ಸ್ ಕೊಡು, ಮುಸ್ಲಿಂ ಯುವಕನ ಜೊತೆ ಮದುವೆ ಮಾಡಿಸ್ತೀನಿ – ನೂರ್ ಜಹಾನ್ ಅರೆಸ್ಟ್

    ಪತಿಗೆ ಡೈವೋರ್ಸ್ ಕೊಡು, ಮುಸ್ಲಿಂ ಯುವಕನ ಜೊತೆ ಮದುವೆ ಮಾಡಿಸ್ತೀನಿ – ನೂರ್ ಜಹಾನ್ ಅರೆಸ್ಟ್

    -ಒಂದೇ ಕುಟುಂಬದ ನಾಲ್ವರ ಸಾವಿಗೆ ಮತಾಂತರ ಯತ್ನವೇ ಕಾರಣ‌

    -ಪೊಲೀಸ್‌ ತನಿಖೆಯಲ್ಲಿ ಆತ್ಮಹತ್ಯೆಯ ಕಾರಣ ಬಯಲು

    ಮಂಗಳೂರು: ಮಂಗಳೂರಿನ ಮೋರ್ಗನ್ಸ್ ಗೇಟ್ ನಲ್ಲಿ ಡಿ.8 ರಂದು ನಡೆದ ನಾಲ್ವರ ಆತ್ಮಹತ್ಯೆಗೆ ಮತಾಂತರ ಯತ್ನವೇ ಕಾರಣ ಎಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮೃತ ವಿಜಯಲಕ್ಷ್ಮಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದ ನೂರ್ ಜಹಾನ್ ಎಂಬಾಕೆಯನ್ನು ಪೊಲೀಸರು ಬಂಧಿಸಿ ವಿಚಾರಿಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ.

    ಮಂಗಳೂರಿನಲ್ಲಿ ಮದುವೆ ಬ್ರೋಕರ್ ಆಗಿದ್ದ ನೂರ್ ಜಹಾನ್ ಎಂಬಾಕೆಯ ಮನೆಯಲ್ಲಿ ಮೃತ ವಿಜಯಲಕ್ಷ್ಮಿ ಕೆಲಸ ಮಾಡುತ್ತಿದ್ದರು. ವಿಜಯಲಕ್ಷ್ಮಿ ಹಾಗೂ ಗಂಡನ ನಡುವೆ ಪದೆ ಪದೇ ಗಲಾಟೆಯಾಗುತ್ತಿತ್ತು ಅದನ್ನೇ ಲಾಭಮಾಡಿಕೊಂಡ ನೂರ್ ಜಹಾನ್ ಪತಿ ನಾಗೇಶ್‍ಗೆ ಡೈವೋರ್ಸ್ ಕೊಡುವಂತೆ ಹೇಳಿದ್ದಳು. ಆ ಬಳಿಕ ಮುಸ್ಲಿಂ ಯುವಕನಿಗೆ ಮದುವೆ ಮಾಡಿಸಿಕೊಡುವುದಾಗಿ ಜೊತೆಗೆ ಮದುವೆಗೂ ಮುನ್ನ ಇಸ್ಲಾಂಗೆ ಮತಾಂತರ ಆಗಲು ನೂರ್ ಜಹಾನ್ ಹೇಳಿದ್ದಳು. ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

    ವಿಜಯಲಕ್ಷ್ಮಿ ಫೋಟೋ ಬಳಸಿ ನೂರ್ ಜಹಾನ್ ಮುಸ್ಲಿಂ ಹುಡುಗನ ಹುಡುಕಾಟ ನಡೆಸಿದ್ದಳು. ಇದೇ ವಿಚಾರದಲ್ಲಿ ನಾಗೇಶ್ ಮತ್ತು ವಿಜಯಲಕ್ಷ್ಮಿ ಮಧ್ಯೆ ಗಲಾಟೆಯಾಗಿ ಹೆಂಡತಿ ಮಕ್ಕಳನ್ನು ಕೊಲೆ ಮಾಡಿ ನಾಗೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗೇಶ್ ತನ್ನ ಹೆಂಡತಿಯನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ಮಗನನ್ನು ಮೂಗು ಹಾಗೂ ಬಾಯಿ ಬಂದ್ ಮಾಡಿ ಸಾಯಿಸಿ, ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿ ರಾತ್ರಿ ಪೂರ್ತಿ ಮೂರು ಹೆಣದೊಂದಿಗೆ ಇದ್ದು, ಬಳಿಕ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆಗೆ ಮತಾಂತರ ಯತ್ನವೇ ಕಾರಣ- ಪೊಲೀಸರ ತನಿಖೆಯಿಂದ ಬಯಲು

  • ಕುಡಿಯುವ ನೀರಿಗಾಗಿ ಮಸೀದಿಗೆ ಹೋಗಿದ್ದಕ್ಕೆ ಒತ್ತೆಯಾಳು

    ಕುಡಿಯುವ ನೀರಿಗಾಗಿ ಮಸೀದಿಗೆ ಹೋಗಿದ್ದಕ್ಕೆ ಒತ್ತೆಯಾಳು

    – ಪಾಕಿಸ್ತಾನದಲ್ಲಿ ಹಿಂದು ಕುಟುಂಬಕ್ಕೆ ಕಿರುಕುಳ

    ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿನ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದ ಕುಟುಂಬವೊಂದು ಮಸೀದಿಯಿಂದ ಕುಡಿಯುವ ನೀರು ತರಲು ಹೋಗಿದ್ದಕ್ಕೆ ಕೆಲ ಸ್ಥಳೀಯರಿಂದ ಕಿರುಕುಳ ಅನುಭವಿಸಿದ್ದಾರೆ. ಆರಾಧನಾ ಸ್ಥಳದ ಪಾವಿತ್ರ್ಯತೆ ಉಲ್ಲಂಘನೆಗಾಗಿ ಒತ್ತೆಯಾಳಾಗಿ ಇರಿಸಿಕೊಳ್ಳಲಾಗಿತ್ತು.

    ಪಂಜಾಬ್‍ನ ರಹೀಮಿಯಾರ್ ಖಾನ್ ನಗರದ ನಿವಾಸಿಯಾಗಿರುವ ಆಲಂ ರಾಮ್ ಭೀಲ್ ಹೊಲವೊಂದರಲ್ಲಿ ಪತ್ನಿ ಸೇರಿದಂತೆ ಅವರ ಇತರ ಕುಟುಂಬ ಸದಸ್ಯರೊಂದಿಗೆ ಹಸಿ ಹತ್ತಿಯನ್ನು ತೆಗೆಯುತ್ತಿದ್ದಾಗ ಕುಡಿಯುವ ನೀರಿಗಾಗಿ ಹತ್ತಿರವಿದ್ದ ಮಸೀದಿಗೆ ಹೋದಾಗ ಕೆಲವು ಸ್ಥಳೀಯ ಭೂಮಾಲೀಕರು ಅವರನ್ನು ಥಳಿಸಿದರು ಎಂದು ಪತ್ರಿಕೆಯೊಂದು ವರದಿ ಮಾಡಿದೆ. ಇದನ್ನೂ ಓದಿ:  ದಸರಾ ತಾಲೀಮು ವೇಳೆ ಅರಮನೆ ಬಳಿ ಆನೆ ರಂಪಾಟ

    ಕುಟುಂಬ ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಹಿಂತಿರುಗಿದಾಗ ಅಲ್ಲಿಗೆ ಬಂದ ಭೂ ಮಾಲೀಕರು ತಮ್ಮ ಟೆಂಟ್‌ಗಳಲ್ಲಿ ಅವರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಅಲ್ಲದೇ, ಮಸೀದಿಯಲ್ಲಿ ಪಾವಿತ್ರ್ಯತೆ ಉಲ್ಲಂಘನೆಗಾಗಿ ಕಿರುಕುಳ ನೀಡಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

    ಪೊಲೀಸರು ದಾಳಿಕೋರರ ವಿರುದ್ಧ ಕೇಸ್ ದಾಖಲಿಸಲಿಲ್ಲ ಎಂದು ಭೀಲ್ ಹೇಳಿದ್ದಾರೆ. ಪೊಲೀಸ್ ನಿರ್ಲಕ್ಷ್ಯವನ್ನು ಪ್ರತಿಭಟಿಸಿ, ಬೀಲ್ ಇನ್ನೊಬ್ಬ ಕುಲದ ಸದಸ್ಯ ಪೀಟರ್ ಜಾನ್ ಭೀಲ್ ಜೊತೆಗೆ ಪೊಲೀಸ್ ಠಾಣೆಯ ಹೊರಗೆ ಧರಣಿ ನಡೆಸಿದರು. ಜಿಲ್ಲಾ ಶಾಂತಿ ಸಮಿತಿಯ ಸದಸ್ಯರೂ ಆಗಿರುವ ಪೀಟರ್ ಅವರು, ತಾವು ಆಡಳಿತಾರೂಢ ಪಿಟಿಐ ಶಾಸಕ ಜಾವೇದ್ ವಾರಿಯಚ್ ಅವರನ್ನು ಸಂಪರ್ಕಿಸಿದ್ದು, ಅವರು ಪ್ರಕರಣ ದಾಖಲಿಸಲು ಸಹಾಯ ಮಾಡಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ:  ಹನಿಟ್ರ್ಯಾಪ್‍ಗೆ ಬಲೆಗೆ ಬಿದ್ದು ಪಾಕಿಗೆ ಸೇನಾ ಮಾಹಿತಿ ರವಾನೆ

    ಈ ವಿಚಾರದ ಬಗ್ಗೆ ಗಮನ ಹರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ಅಸಾದ್ ಸಫ್ರ್ರಾಜ್ ಹೇಳಿದ್ದಾರೆ. ಯಾವುದೇ ಕ್ರಮ ಕೈಗೊಳ್ಳುವ ಮುನ್ನ ಅಲ್ಪಸಂಖ್ಯಾತ ಹಿಂದೂ ಹಿರಿಯರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಉಪ ಆಯುಕ್ತ ಡಾ. ಖುರಾಮ್ ಶೆಹಜಾದ್ ಹೇಳಿದ್ದಾರೆ. ಇದನ್ನೂ ಓದಿ:  ಸಿಎಂ ಬೊಮ್ಮಾಯಿ ಹಿಂದೊಮ್ಮೆ ಕಾಂಗ್ರೆಸ್ ಕದ ತಟ್ಟಿದ್ದರು: ವಿನಯ್ ಕುಮಾರ್ ಸೊರಕೆ

    ಅಧಿಕೃತ ಅಂದಾಜಿನ ಪ್ರಕಾರ, 75 ಲಕ್ಷ ಹಿಂದುಗಳು ಪಾಕಿಸ್ತಾನದಲ್ಲಿ ವಾಸಿಸುತ್ತಿದ್ದಾರೆ. ಸಮುದಾಯದ ಪ್ರಕಾರ, 90 ಲಕ್ಷಕ್ಕೂ ಹೆಚ್ಚು ಹಿಂದೂಗಳು ದೇಶದಲ್ಲಿ ವಾಸಿಸುತ್ತಿದ್ದಾರೆ. ಪಾಕಿಸ್ತಾನದ ಬಹುತೇಕ ಹಿಂದೂ ಜನಸಂಖ್ಯೆಯು ಸಿಂಧ್ ಪ್ರಾಂತ್ಯದಲ್ಲಿ ನೆಲೆಸಿದ್ದು, ಮುಸ್ಲಿಂ ನಿವಾಸಿಗಳೊಂದಿಗೆ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಭಾಷೆಯನ್ನು ಹಂಚಿಕೊಳ್ಳುತ್ತಾರೆ. ಅವರು ಆಗಾಗೆ ಉಗ್ರರ ಕಿರುಕುಳದ ಬಗ್ಗೆ ದೂರು ನೀಡುತ್ತಾರೆ.