ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ (Puttur) ಪುತ್ತಿಲ ಪರಿವಾರ – ಹಿಂದೂ ಜಾಗರಣ ವೇದಿಕೆ ಮುಖಂಡರ ಮಧ್ಯೆ ಸಂಘರ್ಷ ನಡೆದಿದೆ.
ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರ ಕಚೇರಿಗೆ ಹಿಂದೂ ಜಾಗರಣ ವೇದಿಕೆ ಮುಖಂಡರು ನುಗ್ಗಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಪುತ್ತಿಲ ಪರಿವಾರದ ಮನೀಶ್ ಕುಲಾಲ್ ಮೇಲೆ ಹಿಂಜಾವೇ ದಿನೇಶ್ ಪಂಜಿಗ ತಂಡ ತಲ್ವಾರ್‍ನಲ್ಲಿ ಹಲ್ಲೆ ಮಡಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ದಿನೇಶ್ ಪಂಜಿಗ ಸೇರಿ 8 ಜನರಿದ್ದ ತಂಡದ ಮೇಲೆ ಈ ಆರೋಪ ಕೇಳಿಬಂದಿದೆ. ಸದ್ಯ ತಲ್ವಾರ್ ತೋರಿಸಿದ ದಿನೇಶ್ ಪಂಜಿಗನನ್ನ ಪುತ್ತೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಕೆಇಎ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್‍ಪಿನ್ ಆರ್‌ಡಿ ಪಾಟೀಲ್ ಅರೆಸ್ಟ್
ತಲ್ವಾರ್ ಕಾಳಗದ ಹಿಂದೆ ಫೇಸ್ ಬುಕ್ ನಲ್ಲಿ ಹಾಕಿದ ಒಂದು ಪೋಸ್ಟ್ ಕಾರಣ ಎಂಬ ಮಾಹಿತಿ ಸಿಕ್ಕಿದೆ. ಒಟ್ಟಿನಲ್ಲಿ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಹಿಂದೂ ಜಾಗರಣ ವೇದಿಕೆ ಹಾಗೂ ಪುತ್ತಿಲ ಪರಿವಾರದ ಕಾರ್ಯಕರ್ತರು ಪುತ್ತೂರು ಠಾಣೆ ಎದುರು ಜಮಾಯಿಸಿದರು.
ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದ (Kukke Subramanya) ಚಂಪಾಷಷ್ಠಿ ಉತ್ಸವಕ್ಕೆ ಈ ಬಾರಿ ಧರ್ಮ ದಂಗಲ್‌ನ ಕರಿನೆರಳು ಬಿದ್ದಿದೆ. ಹಲವಾರು ವರ್ಷಗಳಿಂದ ಜಾತ್ರೆಯಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಮರಿಗೆ ಈ ಬಾರಿ ಹಿಂದೂ ಸಂಘಟನೆಗಳು ಬಹಿಷ್ಕಾರ ಹಾಕಿದೆ. ಹೀಗಾಗಿ ಮುಸ್ಲಿಮರು ಜಾತ್ರೆಯ ವ್ಯಾಪಾರಕ್ಕೆ ಬಾರದೆ ಧರ್ಮ ದಂಗಲ್‌ನ ಆತಂಕದಲ್ಲಿದ್ದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಘರ್ಷವಿಲ್ಲದೇ ಜಾತ್ರೆ ಸಂಪನ್ನಗೊಂಡಿದೆ.
ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿಗೆ ಧರ್ಮದಂಗಲ್‌ನ ಕರಿನೆರಳು ಬೀರಿದೆ. ಈ ಬಾರಿ ಚಂಪಾಷಷ್ಠಿಗೆ ಮುಸ್ಲಿಂ ವ್ಯಾಪಾರಿಗಳು ಬರಬಾರದು ಅಂತಾ ಹಿಂದೂ ಸಂಘಟನೆಗಳು ತಾಕೀತು ಮಾಡಿದೆ. ಈ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಚಂಪಾಷಷ್ಠಿ ಮುಸ್ಲಿಂ ವ್ಯಾಪಾರಿಗಳಿಲ್ಲದೇ ನಡೆದಿದೆ. ಮುಸ್ಲಿಂ ವ್ಯಾಪಾರಿಗಳೂ ಹಿಂದೂ ಸಂಘಟನೆಗಳ ತಾಕೀತಿಗೆ ಮಣಿದು ವ್ಯಾಪಾರಕ್ಕೆ ಬಾರದೇ ಜಾತ್ರೋತ್ಸವದಿಂದ ದೂರವುಳಿದಿದ್ದಾರೆ. ಹೀಗಾಗಿ ಚಂಪಾಷಷ್ಠಿ ಧರ್ಮ ದಂಗಲ್‌ನ ಆತಂಕವಿಲ್ಲದೇ ನಿರಾಳವಾಗಿ ನಡೆದಿದೆ.
ಕಳೆದ ವರ್ಷ ಕರಾವಳಿಯಲ್ಲಿ ಆರಂಭವಾಗಿದ್ದ ಧರ್ಮದಂಗಲ್ ಈ ಬಾರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್ಟಿದೆ. ಈ ಹಿನ್ನಲೆಯಲ್ಲಿ ಚಂಪಾಷಷ್ಠಿಯ ಜಾತ್ರಾ ಸಂಧರ್ಭದಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡಬಾರದು ಅಂತಾ ಹಿಂದೂ ಸಂಘಟನೆಗಳು ಬ್ಯಾನರ್ ಅಳವಡಿಸಿದೆ. ಜೊತೆಗೆ ಪೊಲೀಸ್ ಠಾಣೆಗೂ ದೂರು ನೀಡಿತ್ತು. ದೆಹಲಿಯ ಶ್ರದ್ಧಾ ಹತ್ಯೆ, ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ (Mangaluru Blast) ಸೇರಿದಂತೆ ಹಲವು ಪ್ರಕರಣದಲ್ಲಿ ಮುಸ್ಲಿಮರೇ ತೊಡಗಿಕೊಂಡು ರಾಷ್ಟ್ರದಲ್ಲಿ ಅಭದ್ರತೆ ಕಾರಣರಾಗಿದ್ದಾರೆ. ಹೀಗಾಗಿ ಅವರು ಕುಕ್ಕೆಯಲ್ಲಿ ವ್ಯಾಪಾರ ಮಾಡುವ ಅವಶ್ಯಕತೆ ಇಲ್ಲ ಅಂತಾ ಹಿಂದೂ ಸಂಘಟನೆಗಳು ಖಡಕ್ ಎಚ್ಚರಿಕೆ ನೀಡಿದೆ.
ಚಂಪಾಷಷ್ಠಿಯ ಉತ್ಸವಕ್ಕೆ ಲಕ್ಷಾಂತರ ಭಕ್ತರು ಕುಕ್ಕೆಗೆ ಆಗಮಿಸಿದ್ದಾರೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯಬಾರದು ಅಂತಾ ಕುಕ್ಕೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಮುಜರಾಯಿ ಇಲಾಖೆಯ ಆದೇಶದನ್ವಯ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಅಂತಾ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಹಿಂದೂ ಜಾಗರಣ ವೇದಿಕೆ ಮನವಿಯನ್ನೂ ಮಾಡಿತ್ತು. ಜೊತೆಗೆ ಮುಸ್ಲಿಂ ವ್ಯಾಪಾರಿಗಳು ಕ್ಷೇತ್ರದ ಆವರಣಕ್ಕೆ ಬಾರದಂತೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನಿಗಾ ವಹಿಸಿದ್ದರು.
ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ನಂತರ ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್‌ನ ಕಾವು ಹೆಚ್ಚಾಗಿದೆ. ವ್ಯಾಪಾರ ನಿರ್ಬಂಧದ ಬಿಸಿ ಬೇರೆ ಬೇರೆ ಜಾತ್ರೋತ್ಸವಗಳಿಗೆ ಹಬ್ಬುತ್ತಿದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡೋದೇ ಪೊಲೀಸರಿಗೆ ಸವಾಲಾಗಿದೆ. ಇದನ್ನೂ ಓದಿ: ಬಿಜೆಪಿಗೆ ಗಲಭೆ ಎಬ್ಬಿಸಲು ರೌಡಿಗಳು ಬೇಕು: ಸಿದ್ದರಾಮಯ್ಯ
Live Tv
[brid partner=56869869 player=32851 video=960834 autoplay=true]
ಉಡುಪಿ: ಮಹಾರಾಷ್ಟ್ರದ ದುರ್ಗಾ ದೌಡ್ ಇದೇ ಮೊದಲ ಬಾರಿಗೆ ಕರಾವಳಿಯಲ್ಲಿ ನಡೆಯಿತು. ಉಡುಪಿಯ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ನಡೆದ ಈ ವಿರಾಟ್ ಪ್ರದರ್ಶನದಲ್ಲಿ ಐದು ಸಾವಿರಕ್ಕೂ ಅಧಿಕ ಹಿಂದೂ ಕಾರ್ಯಕರ್ತರು ಭಾಗಿಯಾಗಿದರು.
ವಿಜಯದಶಮಿಯ ಪ್ರಯುಕ್ತ ನಡೆಸಲಾದ ಈ ಮೆರವಣಿಗೆಯಲ್ಲಿ ಪೇಟಾ ಧರಿಸಿ, ಕೈಯಲ್ಲಿ ಭಗವಾಧ್ವಜ ಹಿಡಿದು ನಗರದ ಪ್ರಮುಖ ಮಾರ್ಗಗಳಲ್ಲಿ ಮೆರವಣಿಗೆ ಸಾಗಿತು. ನಗರದ ಕಡಿಯಾಳಿ ಮಹಿಷ ಮರ್ದಿನಿ ದೇವಸ್ಥಾನದಿಂದ ಅಂಬಲಪಾಡಿಯ ಜನಾರ್ದನ ಮಹಾಕಾಳಿ ದೇವಸ್ಥಾನದವರೆಗೆ ದುರ್ಗಾ ದೌಡ್ ನಡೆಯಿತು. ಸ್ವತ: ಇಂಧನ ಸಚಿವ ಸುನಿಲ್ ಕುಮಾರ್ ಮೆರವಣಿಗೆಯ ಮುಂಚೂಣಿಯಲ್ಲಿ ಭಾಗವಹಿಸಿದ್ದರು. ಕೋವಿಡ್ ನಿಯಮಾವಳಿಗಳ ಕಾರಣಕ್ಕೆ ಈ ಬೃಹತ್ ಆಯೋಜನೆ ನಡೆಯುವುದು ಕೊನೆಯ ಕ್ಷಣದವರೆಗೂ ಖಚಿತವಾಗಿರಲಿಲ್ಲ.
ಈ ಬೃಹತ್ ಸಮಾವೇಶಕ್ಕೆ ಅನುಮತಿ ಸಿಕ್ಕಿರಲಿಲ್ಲ. ಸಚಿವರು ಭಾಗವಹಿಸುವ ಮೂಲಕ ಮೆರವಣಿಗೆ ಎಲ್ಲರ ಗಮನ ಸೆಳೆಯಿತು. ಉಡುಪಿ ಶಾಸಕರ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಮೆಂಡನ್ ದುರ್ಗಾ ದೌಡಲ್ಲಿ ಹೆಜ್ಜೆ ಹಾಕಿದರು. ಮಾರ್ಗದುದ್ದಕ್ಕೂ ಶಿವಾಜಿ ಮತ್ತು ರಾಮದೇವರ ಬಗ್ಗೆ ಘೋಷಣೆಗಳನ್ನು ಕೂಗುತ್ತಾ ಕಾರ್ಯಕರ್ತರು ಸಾಗಿದರು. ಇದನ್ನೂ ಓದಿ: ಕರ್ಣಾಟಕ ಬ್ಯಾಂಕಿನ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಪಂಜ ನೇಮಕ
ಮೆರವಣಿಗೆಯ ಮುಂಚೂಣಿಯಲ್ಲಿ ಕೆಲ ಕಾರ್ಯಕರ್ತರು ತಲವಾರುಗಳನ್ನು ಪ್ರದರ್ಶಿಸಿದರು. ಮಹಿಳಾ ತಂಡಗಳ ನೇತೃತ್ವ ವಹಿಸಿದ್ದ ಯುವತಿಯರು ಪ್ರಹಸನಗಳಲ್ಲಿ ಬಳಸುವ ಕತ್ತಿ, ಖಡ್ಗ ಹಿಡಿದು ಮೆರವಣಿಗೆ ಸಾಗಿದರು. ಬಳಿಕ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿಯ ಮಗ್ಗುಲಲ್ಲಿ ಬೃಹತ್ ಸಮಾವೇಶ ನಡೆಯಿತು. ಪ್ರಮುಖ ರಸ್ತೆಗಳಲ್ಲಿ ದುರ್ಗಾ ದೌಡ್ ಪೊಲೀಸರು ಹಾಜರಿದ್ದರು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿದರು.
ಉಡುಪಿ: ರಾಜ್ಯದಲ್ಲಿ ಮತ್ತೆ ಮತಾಂತರ ವಿಚಾರ ಸದ್ದು ಮಾಡಿದೆ. ಉಡುಪಿ ಜಿಲ್ಲೆ ಕಾರ್ಕಳದ ನಕ್ರೆ ಎಂಬಲ್ಲಿ ಮತಾಂತರ ಮಾಡಲಾಗ್ತಿದೆ ಎಂದು ಆರೋಪಿಸಿ ಕ್ರಿಶ್ಚಿಯನ್ ಕೇಂದ್ರದ ಮೇಲೆ ಹಿಂದೂ ಜಾಗರಣ ವೇದಿಕೆ ದಾಳಿ ನಡೆಸಿದೆ.
ಕೋವಿಡ್ ಕಾಲದಲ್ಲಿ ಜನರನ್ನು ಗುಂಪು ಸೇರಿಸಿಕೊಂಡು ಪ್ರಾರ್ಥನೆ ನಡೆಸ್ತಿದ್ದ ಫಾಸ್ಟರ್ ಬೆನಡಿಕ್ಟ್ ಎಂಬುವರನ್ನು ಜಾಗರಣಾ ವೇದಿಕೆ ಸದಸ್ಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಕೊನೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಇಲ್ಲಿ ಬರುವ ಅಮಾಯಕರನ್ನು ಧರ್ಮದ ಹೆಸರಲ್ಲಿ ನಂಬಿಸಲಾಗ್ತಿತ್ತು ಎನ್ನಲಾಗಿದೆ. ನಿಮ್ಮ ಕರ್ಮ ಶುದ್ಧ ಆಗುತ್ತದೆ ಎಂದು ಅಮಾಯಕರನ್ನು ನೀರಲ್ಲಿ ಮುಳುಗಿಸಿ ಶುದ್ಧೀಕರಣ ನಡೆಸುವ ಫೋಟೋಗಳು ವೈರಲ್ ಆಗಿವೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಸ್ಟುಡಿಯೋದಲ್ಲಿ ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ
ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಮಿಷನರಿಗಳು ನಿರಂತರವಾಗಿ ಮತಾಂತರ ನಡೆಸ್ತಿದ್ದು, ಇದನ್ನೆಲ್ಲಾ ನೋಡ್ಕೊಂಡು ಸುಮ್ನೆ ಇರಲ್ಲ. ಧ್ವಂಸ ಮಾಡ್ತೀವಿ ಎಂದು ಹಿಂದೂ ಜಾಗರಣಾ ವೇದಿಕೆ ಎಚ್ಚರಿಕೆ ನೀಡಿದೆ. ಮತಾಂತರ ಆರೋಪವನ್ನು ಫಾಸ್ಟರ್ ನಿರಾಕರಿಸಿದ್ದಾರೆ. ಇದನ್ನೂ ಓದಿ: ನಾನು ಕಾಶ್ಮೀರಿ ಪಂಡಿತ, ನಮ್ಮದು ಕಾಶ್ಮೀರಿ ಪಂಡಿತರ ಕುಟುಂಬ: ರಾಹುಲ್ ಗಾಂಧಿ