Tag: Hindu Organisation

  • ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಗಣೇಶ ಪ್ರತಿಷ್ಠಾಪಿಸಿದ ಸಿಬ್ಬಂದಿಗೆ ನೋಟಿಸ್ – ಅಧೀಕ್ಷಕರ ವಿರುದ್ಧ ಹಿಂದೂ ಸಂಘಟನೆಗಳು ಕಿಡಿ

    ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಗಣೇಶ ಪ್ರತಿಷ್ಠಾಪಿಸಿದ ಸಿಬ್ಬಂದಿಗೆ ನೋಟಿಸ್ – ಅಧೀಕ್ಷಕರ ವಿರುದ್ಧ ಹಿಂದೂ ಸಂಘಟನೆಗಳು ಕಿಡಿ

    ಹುಬ್ಬಳ್ಳಿ: ಗಣೇಶ ಹಬ್ಬ (Ganesha Festival) ಮುಗಿದ ಮೇಲೆ ಹುಬ್ಬಳ್ಳಿಯಲ್ಲಿ (Hubballi) ವಿವಾದ ಕಿಡಿಯೊಂದು ಹೊತ್ತಿಕೊಂಡಿದೆ. ಹಿಂದೂಪರ ಸಂಘಟನೆಗಳ ಜೊತೆ ಸೇರಿ ಹಬ್ಬ ಮಾಡಿದ ಸರ್ಕಾರಿ ನೌಕರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಹುಬ್ಬಳ್ಳಿ ಇಎಸ್‌ಐ ಆಸ್ಪತ್ರೆಯಲ್ಲಿ (ESI Hospital) ಗಣೇಶ ವಿವಾದದ ಹಿಂದೆ ಹಲವಾರು ಅನುಮಾನ ಹುಟ್ಟಿಕೊಳ್ಳುತ್ತಿವೆ. ಆಸ್ಪತ್ರೆ ಅಧೀಕ್ಷಕರ ನಡೆ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

    ಈ ಬಾರಿ ರಾಜ್ಯದಲ್ಲಿ ವಿವಿಧ ಕಡೆ ಗಣೇಶ ಹಬ್ಬದಲ್ಲಿ ಗಲಾಟೆಯಾಗಿದೆ. ಕೆಲವು ಕಡೆ ವಿವಾದ ಸಹ ಆಗಿದೆ. ಆದರೆ ಹುಬ್ಬಳ್ಳಿ ಧಾರವಾಡದಲ್ಲಿ ಮಾತ್ರ ಅತ್ಯಂತ ಶಾಂತಿಯುತವಾಗಿ ಗಣೇಶ ಹಬ್ಬ ನಡೆದಿದೆ. ಈಗ ಹಬ್ಬ ಮುಗಿದ ಮೇಲೆ ಗಣೇಶ ವಿವಾದ ಕಿಡಿ ಎದ್ದಿದೆ. ಗಣೇಶ ಚತುರ್ಥಿಯಂದು ವಿವಾದ ಮೈಮೇಲೆ ಎಳೆದುಕೊಂಡಿದ್ದ ಹುಬ್ಬಳ್ಳಿ ಇಎಸ್‌ಐ ಆಸ್ಪತ್ರೆ ಆಡಳಿತ ಮಂಡಳಿ ಈಗ ಮತ್ತೆ ವಿವಾದಾತ್ಮಕ ನಡೆಯಿಂದ ಸುದ್ದಿಯಾಗಿದೆ. ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಕಮಾಂಡರ್ ಹತ್ಯೆ

    ಹುಬ್ಬಳ್ಳಿ ಕಾರವಾರ ರಸ್ತೆಯ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಯಲ್ಲಿ ಕಳೆದ ಮೂರು ವರ್ಷಗಳಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿತ್ತು. ಆದರೆ ಈ ಬಾರಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡದ ಹಿನ್ನೆಲೆ ಆಸ್ಪತ್ರೆ ಆವರಣದಲ್ಲಿದ್ದ ಶಾಶ್ವತ ಮೂರ್ತಿಗೆ ಪೂಜೆ ನಡೆಸಲಾಗುತ್ತಿತ್ತು. ಇದಕ್ಕೆ ಆಸ್ಪತ್ರೆ ಮುಖ್ಯಸ್ಥ ಯೂನಿಸ್ ನಜ್ಮಿ ಕಾರಣ. ಅವರು ಮುಸ್ಲಿಂ ಎನ್ನುವ ಕಾರಣಕ್ಕೆ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿಲ್ಲ ಅಂತ ಆರೋಪ ಸಹ ಕೇಳಿ ಬಂದಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಗಳು ಬಿಜೆಪಿ ಸದಸ್ಯರು ಆಸ್ಪತ್ರೆಗೆ ನುಗ್ಗಿ ತಾವೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ಪೂಜೆ ಮಾಡಿದ್ದರು. ಅಲ್ಲದೆ ಅಧೀಕ್ಷಕ ನಜ್ಮಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರು. ಇದಾದ ಬಳಿಕ ಎಲ್ಲವೂ ಸರಿಯಾಯಿತು ಎನ್ನುವಷ್ಟರಲ್ಲಿ ಆಸ್ಪತ್ರೆ ಅಧೀಕ್ಷಕ ನಜ್ಮಿ ಮತ್ತೊಂದು ವರ್ತನೆ ತೋರಿದ್ದಾರೆ. ಹಿಂದೂಪರ ಸಂಘಟನೆಗಳ ಜೊತೆ ಸೇರಿ ಹಬ್ಬ ಮಾಡಿರುವ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಇದು ಹಿಂದೂಪರ ಸಂಘಟನೆಯ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಗಲಾಟೆ, ಓರ್ವನ ಕೊಲೆಯಲ್ಲಿ ಅಂತ್ಯ

    ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಮಯದಲ್ಲಿ ಕೋಮು ಗಲಭೆಯ ಸೃಷ್ಟಿ ಪ್ರಯತ್ನ ಮಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಸರ್ಕಾರದ ಸಿಬ್ಬಂದಿಯಾಗಿ ಹಿಂದೂಪರ ಸಂಘಟನೆಗಳ ಜೊತೆಗೆ ಸೇರಿ ಗಣೇಶ ಮೂರ್ತಿ ಕೂರಿಸಿದ್ದೀರಿ. ನಿಮ್ಮ ಮೇಲೆ ಯಾಕೆ ಕ್ರಮ ಆಗಬಾರದು ಎಂದು ಶುಶ್ರೂಷಾಧಿಕಾರಿ ಜಗದೀಶ್ ಎನ್ನುವವರಿಗೆ ಕಳೆದ 20ರಂದು ನೋಟಿಸ್ ನೀಡಲಾಗಿದೆ. ಏಳು ದಿನ ಉತ್ತರ ನೀಡಲು ಅವಕಾಶ ನೀಡಲಾಗಿದೆ. ಇನ್ನೂ ಈ ವಿಷಯ ಹೊರಗಡೆ ಬಾರದಂತೆ ಎಚ್ಚರಿಕೆ ಸಹ ನೀಡಲಾಗಿದೆಯಂತೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಅಧೀಕ್ಷಕ ನಜ್ಮಿ ಸಂಪರ್ಕಿಸಿದಾಗ, ಇದು ನಮ್ಮ ಆಡಳಿತಾತ್ಮಕ ವಿಷಯ, ನಮ್ಮ ಮೇಲಿನ ಅಧಿಕಾರಿಗಳ ಗಮನಕ್ಕೆ ತಂದೇ ನೋಟಿಸ್ ನೀಡಲಾಗಿದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಹಜ್‌ ಯಾತ್ರೆಯ ನೆಪದಲ್ಲಿ ಭಿಕ್ಷಕರನ್ನು ಕಳುಹಿಸಬೇಡಿ – ಪಾಕ್‌ಗೆ ಸೌದಿ ಎಚ್ಚರಿಕೆ

    ಒಟ್ಟಿನಲ್ಲಿ ಇಎಸ್‌ಐ ಆಸ್ಪತ್ರೆ ಅಧೀಕ್ಷಕ ನಜ್ಮಿ ನಡೆ ಹಲವಾರು ಅನುಮಾನಕ್ಕೆ ಕಾರಣವಾಗಿದೆ. ಹಬ್ಬದ ಆಚರಣೆ ಮಾಡಿದ ಸಿಬ್ಬಂದಿಗೆ ಧರ್ಮ ಸಂಕಟ ಎದುರಾಗಿದೆ. ಈ ನೋಟಿಸ್ ಮತ್ಯಾವ ರೂಪಪಡೆದುಕೊಳ್ಳಲಿದೆ ಎಂಬುವುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ತಿರುಮಲನ ಸನ್ನಿಧಿಗೆ 2 ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜು

  • ಕೆರಗೋಡು ಬಂದ್‌ಗೆ ಉತ್ತಮ ಪ್ರತಿಕ್ರಿಯೆ – ಶಾಸಕ ಗಣಿಗ ರವಿ ಮನೆಗೆ ಭದ್ರತೆ ಹೆಚ್ಚಳ

    ಕೆರಗೋಡು ಬಂದ್‌ಗೆ ಉತ್ತಮ ಪ್ರತಿಕ್ರಿಯೆ – ಶಾಸಕ ಗಣಿಗ ರವಿ ಮನೆಗೆ ಭದ್ರತೆ ಹೆಚ್ಚಳ

    ಮಂಡ್ಯ: ಹನುಮ ಧ್ವಜವನ್ನು (Hanuman Dhwaja) ತೆರವುಗೊಳಿಸಿದ್ದನ್ನು ಖಂಡಿಸಿ ಹಿಂದೂ ಸಂಘಟನೆಗಳು (Hindu Organisation) ಕರೆ ನೀಡಿದ ಕೆರಗೋಡು ಬಂದ್‌ಗೆ (Keregodu Bandh) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಬಂದ್‌ಗೆ ವರ್ತಕರು, ಹೊಟೇಲ್ ಮಾಲೀಕರು ಬೆಂಬಲ ವ್ಯಕ್ತಪಡಿಸಿದ ಪರಿಣಾಮ ಅಂಗಡಿ, ಹೋಟೆಲ್‌ಗಳು ಮುಚ್ಚಿವೆ. ಕೆರಗೋಡಿನಲ್ಲಿ ಬಿಗಿ ಪೊಲೀಸ್ (Police) ಬಂದೋಬಸ್ತ್ ಮಾಡಲಾಗಿದೆ. ಗ್ರಾಮಕ್ಕೆ ಎಎಸ್ಪಿ ತಿಮ್ಮಯ್ಯ ಭೇಟಿ ನೀಡಿ ಭದ್ರತೆ ಪರಿಶೀಲಿಸಿ ಸಿಬ್ಬಂದಿಗೆ ಕೆಲ ಸೂಚನೆ ನೀಡಿದ್ದಾರೆ.   ಇದನ್ನೂ ಓದಿ: ಉತ್ತರಾಖಂಡ ಅಕ್ರಮ ಮಸೀದಿ ತೆರವು ವೇಳೆ ಹಿಂಸಾಚಾರ – 4 ಸಾವು, 250 ಮಂದಿಗೆ ಗಾಯ

    ಧ್ವಜಸ್ತಂಭದ ಬಳಿ ಪೊಲೀಸ್ ಭದ್ರತೆ ಹೆಚ್ಚಾಗಿದೆ. 9 ಗಂಟೆಗೆ ಕೆರಗೋಡಿನಿಂದ ಮಂಡ್ಯದ (Mandya) ಜಿಲ್ಲಾಧಿಕಾರಿ ಕಚೇರಿಯವರೆಗೆ ರ‍್ಯಾಲಿ ನಡೆಯಲಿದೆ. ಆಂಜನೇಯ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಪ್ರತಿಭಟನಾ ರ‍್ಯಾಲಿ ನಡೆಯಲಿದೆ. ಮಂಡ್ಯದಲ್ಲಿ ಬಂದ್‌ ಬಿಸಿ ತಟ್ಟಿಲ್ಲ. ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಕೆಲ ವರ್ತಕರು ಅಂಗಡಿ ತೆರೆದಿದ್ದರೆ ಕೆಲವರು  ಮುಚ್ಚಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

    ಹನುಮಧ್ವಜ ತೆರವು ಮಾಡುವಲ್ಲಿ ಶಾಸಕರ ಪಾತ್ರ ಇದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಂಡ್ಯ ಕಾಂಗ್ರೆಸ್‌ ಶಾಸಕ ಗಣಿಗ ರವಿಕುಮಾರ್ (Ganiga Ravikumar) ಮನೆಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.   ಇದನ್ನೂ ಓದಿ: ಯುಪಿಎ Vs ಎನ್‌ಡಿಎ – ಯಾರ ಅವಧಿಯಲ್ಲಿ ಎಷ್ಟು ಸಾಧನೆ? ಶ್ವೇತ ಪತ್ರದಲ್ಲಿ ಏನಿದೆ? ಇಲ್ಲಿದೆ ಸಂಖ್ಯಾ ಮಾಹಿತಿಗಳು

    ಶಾಸಕ ರವಿಕುಮಾರ್ ಫ್ಲೆಕ್ಸ್ ಹರಿದು ಕೆರಗೋಡು ಗ್ರಾಮಸ್ಥರು ಕಿಡಿಕಾರಿದ್ದರು. ಹೀಗಾಗಿ ಮಂಡ್ಯದ ಬಂದೀಗೌಡ ಬಡಾವಣೆಯಲ್ಲಿರುವ ರವಿಕುಮಾರ್‌ ನಿವಾಸಕ್ಕೆ 10 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

  • ಬೆಳಗಾವಿಯಲ್ಲಿ ಹಿಂದೂಪರ ಸಂಘಟನೆ ಮುಖಂಡನ ಮೇಲೆ ಫೈರಿಂಗ್

    ಬೆಳಗಾವಿಯಲ್ಲಿ ಹಿಂದೂಪರ ಸಂಘಟನೆ ಮುಖಂಡನ ಮೇಲೆ ಫೈರಿಂಗ್

    ಬೆಳಗಾವಿ: ಹಿಂದೂಪರ ಸಂಘಟನೆ ಮುಖಂಡನ (Hindu Organisation Leader) ಮೇಲೆ ಫೈರಿಂಗ್ (Firing) ಆಗಿರುವ ಘಟನೆ ಬೆಳಗಾವಿ (Belagavi) ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ನಡೆದಿದ್ದು, ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಹಾನಿ ಸಂಭವಿಸಿಲ್ಲ.

    ತಾಲೂಕಿನ ಹಿಂಡಲಗಾ ಗ್ರಾಮದ ಶ್ರೀರಾಮಸೇನೆ (Sriram Sena) ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಫೈರಿಂಗ್ ಆಗಿದ್ದು, ಅದೃಷ್ಟವಶಾತ್ ರವಿ ಮತ್ತು ಚಾಲಕ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಇದನ್ನೂ ಓದಿ: ಅಸಲಿ ಚಿನ್ನವನ್ನು ನಕಲಿ ಎಂದು ಭಾವಿಸಿ ಕಸದ ರಾಶಿಗೆ ಎಸೆದ ಕಳ್ಳರು

    ಶನಿವಾರ ಸಂಜೆ ವಾಹನದಲ್ಲಿ ಚಲಿಸುತ್ತಿದ್ದ ಅಪರಿಚಿತರಿಂದ, ರವಿ ವಾಹನದ ಮೇಲೆ ಫೈರಿಂಗ್ ಮಾಡಲಾಗಿದೆ. ರವಿ ಕೋಕಿತಕರ್ ಗಡ್ಡಕ್ಕೆ ಬುಲೆಟ್ ತಗುಲಿ ಚಾಲಕನ ಕೈಗೆ ತಗುಲಿದೆ. ಚಾಲಕನ ಕೈಯಲ್ಲಿ ಬುಲೆಟ್ ಸಿಕ್ಕಿದ್ದು ಸದ್ಯ ಗಾಯಾಳುಗಳನ್ನ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ.

    ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹಿಂದೂಪರ ಕಾರ್ಯಕರ್ತರು ಜಮಾಯಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ‌ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಇದನ್ನೂ ಓದಿ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯನ ಸಹೋದರನ ಮೇಲೆ ಗುಂಡಿನ ದಾಳಿ

    ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಫೈರಿಂಗ್ ಮಾಡಿದ ಆರೋಪಿಗಳ ಪತ್ತೆಗೆ ನಾಲ್ಕು ಪ್ರತ್ಯೇಕ ತಂಡಗಳ ರಚನೆ ಮಾಡಲಾಗಿದೆ ‌ಎಂದು ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾಶ್ಮೀರ ವಿದ್ಯಾರ್ಥಿಗಳ ಮೇಲೆ ಹಲ್ಲೆ- ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ದೂರು ದಾಖಲು

    ಕಾಶ್ಮೀರ ವಿದ್ಯಾರ್ಥಿಗಳ ಮೇಲೆ ಹಲ್ಲೆ- ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ದೂರು ದಾಖಲು

    ಹುಬ್ಬಳ್ಳಿ/ಧಾರವಾಡ: ಹುಬ್ಬಳ್ಳಿಯ ಕೆಎಲ್‍ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರುಪಡಿಸುವಾಗ ಮೂವರು ವಿದ್ಯಾರ್ಥಿಗಳ ಮೇಲೆ ನ್ಯಾಯಾಲಯದ ಆವರಣದಲ್ಲಿ ಹಲ್ಲೆ ಮಾಡಿದವರ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಾಗಿದೆ.

    ಹುಬ್ಬಳ್ಳಿಯ ಕೋರ್ಟ್ ಆವರಣದಲ್ಲಿ ಆರೋಪಿಗಳ ಮೇಲೆ ಚಪ್ಪಲಿ ಎಸೆತ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ವಿದ್ಯಾನಗರ ಪೊಲೀಸರು ಸ್ವಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಬಿಗಿ ಬಂದೋಬಸ್ತ ಮಧ್ಯೆ ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ ಹಲ್ಲೆ ನಡೆದಿತ್ತು. ಪೊಲೀಸ್ ವಾಹನ ತಡೆದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಲ್ಲೆ ನಡೆಸಿದ್ದರು.

    ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಸುಮಾರು 10-15 ಜನ ಅಪರಿಚಿತರ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

  • ಉಗ್ರರ ವಿರುದ್ಧ ಸಹಿ ಸಂಗ್ರಹ-ಫಲಕದಲ್ಲಿ ತನ್ನ ಹೆಸ್ರನ್ನೇ ದೊಡ್ಡದಾಗಿ ಕಪ್ಪಕ್ಷರದಲ್ಲಿ ಬರೆದ ಕಿಡಿಗೇಡಿ

    ಉಗ್ರರ ವಿರುದ್ಧ ಸಹಿ ಸಂಗ್ರಹ-ಫಲಕದಲ್ಲಿ ತನ್ನ ಹೆಸ್ರನ್ನೇ ದೊಡ್ಡದಾಗಿ ಕಪ್ಪಕ್ಷರದಲ್ಲಿ ಬರೆದ ಕಿಡಿಗೇಡಿ

    ಬಾಗಲಕೋಟೆ: ಉಗ್ರರ ವಿರುದ್ಧ ಸಹಿ ಸಂಗ್ರಹ ನಾಮಫಲಕದ ಮೇಲೆ ಕಿಡಿಗೇಡಿ ಅಲ್ತಾಫ್ ಎಂದು ದೊಡ್ಡದಾಗಿ ಹೆಸರು ಬರೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

    ಬಾಗಲಕೋಟೆ ನಗರದ ವಲ್ಲಭಭಾಯಿ ವೃತ್ತದಲ್ಲಿ ಹಾಕಲಾಗಿದ್ದ ಸಹಿ ಸಂಗ್ರಹ ನಾಮಫಲಕದಲ್ಲಿ ಕಿಡಿಗೇಡಿ ಅಲ್ತಾಫ್ ಎಂಬ ವ್ಯಕ್ತಿ, ಕಪ್ಪಕ್ಷರದ ಬರಹ ಬರೆದಿದ್ದಾನೆ. ಈ ಬರಹದ ಹಿಂದೆ ಸೈನ್ಯಕ್ಕೆ ಹೀಯಾಳಿಸುವ ಉದ್ದೇಶ ಎಂದು ಆರೋಪಿಸಿರುವ ಹಿಂದೂಪರ ಕಾರ್ಯಕರ್ತರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬಾಗಲಕೋಟೆ ಶಹರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದರು.

    ಈ ವೇಳೆ ಕಿಡಿಗೇಡಿಯನ್ನು ಬಂಧಿಸುವಂತೆ ಒತ್ತಾಯ ಮಾಡಿದ ಹಿಂದೂಪರ ಸಂಘಟನಾ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದರು. ಅಲ್ಲದೇ ಪೊಲೀಸರೊಂದಿಗೆ ಮಾತಿನ ಚಕಮಕಿ ಕೂಡಾ ನಡೆಸಿದರು. ನಂತರ ಎರಡು ಗುಂಪಿನವರನ್ನು ಚದುರಿಸಿದ ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿದರ್ರು.

    ಶುಕ್ರವಾರ ಸಂಜೆ ಬಾಗಲಕೋಟೆ ವಲ್ಲಭ ಬಾಯಿ ವೃತ್ತದಲ್ಲಿ ಮಾಧವೆ ಸೇವಾ ಕೇಂದ್ರದ ವತಿಯಿಂದ ಹುತಾತ್ಮ ಸೈನಿಕರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸೇವಾ ಕೇಂದ್ರ ವತಿಯಿಂದ ಸಾರ್ವಜನಿಕ ಸಹಿ ಸಂಗ್ರಹ ನಾಮಫಲಕ ಹಾಕಲಾಗಿತ್ತು. ಆದರೆ ಆ ಸಹಿ ಸಂಗ್ರಹದ ಫಲಕದ ಮೇಲೆ ಓರ್ವ ವ್ಯಕ್ತಿ ಅಲ್ತಾಫ್ ಎಂದು ಬರೆಯುವ ಮೂಲಕ ಸೈನಿಕರಿಗೆ ಹೀಯಾಳಿಸಿದ್ದಾನೆ, ಆತನನ್ನು ಕೂಡಲೇ ಬಂಧಿಸಿ ಎಂದು ಹಿಂದೂಪರ ಕಾರ್ಯಕರ್ತರು ಪೊಲೀಸರಿಗೆ ಒತ್ತಾಯಿಸಿದ್ದಾರೆ. ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮತ್ತೆ ನೈತಿಕ ಪೊಲೀಸ್‍ಗಿರಿ-ಮಂಗ್ಳೂರಲ್ಲಿ ಯುವಕ, ಯುವತಿಯರ ಮೇಲೆ ಹಲ್ಲೆ

    ಮತ್ತೆ ನೈತಿಕ ಪೊಲೀಸ್‍ಗಿರಿ-ಮಂಗ್ಳೂರಲ್ಲಿ ಯುವಕ, ಯುವತಿಯರ ಮೇಲೆ ಹಲ್ಲೆ

    ಮಂಗಳೂರು: ನಗರದಲ್ಲಿ ಮತ್ತೆ ನೈತಿಕ ಪೊಲೀಸ್‍ಗಿರಿ ನಡೆದಿದೆ. ಮಂಗಳೂರಿನ ಮೂಡುಶೆಡ್ಡೆಯಲ್ಲಿರುವ ಪ್ರವಾಸಿತಾಣ ಪಿಲಿಕುಳ ನಿಸರ್ಗಧಾಮದ ವಾಟರ್ ಪಾರ್ಕಿನಲ್ಲಿ ಇಬ್ಬರು ಅನ್ಯಕೋಮಿನ ವಿದ್ಯಾರ್ಥಿನಿಯರ ಜೊತೆ ಯುವಕನೊಬ್ಬ ಬಂದಿದ್ದು ಹಿಂದೂ ಸಂಘಟನೆ ಕಾರ್ಯಕರ್ತರು ಹಿಡಿದು ಥಳಿಸಿದ್ದಾರೆ.

    ಬಳಿಕ ಪೊಲೀಸರು ಆಗಮಿಸಿ, ಯುವಕ-ಯುವತಿಯರನ್ನು ವಶಕ್ಕೆ ಪಡೆದರೂ ಕಾರ್ಯಕರ್ತರು ಪೊಲೀಸರ ನಡುವೆಯೇ ಹಲ್ಲೆ ನಡೆಸಿದ್ದಾರೆ. ಯುವಕ-ಯುವತಿಯರು ಒಂದೇ ಕಾಲೇಜಿನವರಾಗಿದ್ದು ಪಿಲಿಕುಳದ ಮಾನಸ ವಾಟರ್ ಪಾರ್ಕಿಗೆ ಹೋಗಿದ್ದರು. ಇದನ್ನೂ ಓದಿ: ಕರಾವಳಿಯಲ್ಲಿ ಮತ್ತೆ ಪೊಲೀಸ್ ನೈತಿಕಗಿರಿ – ತಮಿಳು ನಟಿಗೆ ಪೊಲೀಸ್, ಹಿಂದು ಸಂಘಟನೆ ಕಾರ್ಯಕರ್ತರಿಂದ ಹಲ್ಲೆ

    ವಿದ್ಯಾರ್ಥಿಗಳು ಅನ್ಯಕೋಮಿನವರು ಎಂದು ನೋಡಿದ ಸ್ಥಳೀಯ ಯುವಕರು ಹಿಂದೂ ಸಂಘಟನೆಯವರಿಗೆ ಸುದ್ದಿ ಮುಟ್ಟಿಸಿದ್ದದ್ದಾರೆ. ಕೂಡಲೇ ಎಚ್ಚೆತ್ತ ಕಾರ್ಯಕರ್ತರು ಪಾರ್ಕ್ ಒಳನುಗ್ಗಿ ಹಲ್ಲೆ ನಡೆಸಿದ್ದಾರೆ. ಅನ್ಯಕೋಮಿನ ಯುವಕರು ಹಿಂದು ಯುವತಿಯರನ್ನು ಪ್ರೀತಿಯ ನೆಪದಲ್ಲಿ ಲವ್ ಜಿಹಾದ್ ಬಲೆಗೆ ಬೀಳಿಸುತ್ತಿದ್ದಾರೆಂಬ ಆರೋಪದ ಮಧ್ಯೆ ಜೊತೆಯಾಗಿ ಸಿಕ್ಕಿಬಿದ್ದವರ ಮೇಲೆ ಸಂಘಟನೆ ಕಾರ್ಯಕರ್ತರು ಚೆನ್ನಾಗಿಯೇ ಉಪಚರಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಮೆಹಂದಿ ಶಾಸ್ತ್ರದಂದೇ ರಾತ್ರಿ ನಾಪತ್ತೆಯಾಗಿದ್ದ ಯುವತಿ ಈಗ ಜೈಲು ಪಾಲು!

    ಯುವತಿಗೆ ಪೊಲೀಸರ ಎದುರೇ ಹಲ್ಲೆ ನಡೆಸಿದ್ದ ಹಿಂದು ಸಂಘಟನೆಯ ಕಾರ್ಯಕರ್ತ ಸಂಪತ್ ಎಂಬಾತನನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.

  • ಈದ್ ರ‍್ಯಾಲಿಗೆ ಚಾನ್ಸ್, ದತ್ತ ಯಾತ್ರೆಗೆ ಬ್ರೇಕ್ – ಚಿಕ್ಕಮಗ್ಳೂರು ಜಿಲ್ಲಾಡಳಿತದಿಂದ ಇಬ್ಬಗೆ ನೀತಿ

    ಈದ್ ರ‍್ಯಾಲಿಗೆ ಚಾನ್ಸ್, ದತ್ತ ಯಾತ್ರೆಗೆ ಬ್ರೇಕ್ – ಚಿಕ್ಕಮಗ್ಳೂರು ಜಿಲ್ಲಾಡಳಿತದಿಂದ ಇಬ್ಬಗೆ ನೀತಿ

    – ಸರ್ಕಾರದ ವಿರುದ್ಧ ಹಿಂದೂಗಳ ಆಕ್ರೋಶ

    ಚಿಕ್ಕಮಗಳೂರು: ಸದ್ಯದಲ್ಲೇ ಅಯೋಧ್ಯೆಯ ಹೋರಾಟವನ್ನು ನೆನಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಸರ್ಕಾರ ಹಾಗೂ ಜಿಲ್ಲಾಡಳಿತ ಒಂದು ಕಣ್ಣಿಗೆ ಬೆಣ್ಣೆ-ಒಂದು ಕಣ್ಣಿಗೆ ಸುಣ್ಣವೆಂಬ ನೀತಿಯಿಂದ ಹಿಂದೂ ಸಂಘಟಕರಿಗೆ ಉರಿಯೋ ಬೆಂಕಿಗೆ ತುಪ್ಪ ಸುರಿದಂತಾಗಿದೆ.

    ಜಿಲ್ಲಾಡಳಿತ ಸರ್ಕಾರದ ಏಜೆಂಟ್ ನಂತೆ ವರ್ತಿಸುತ್ತಿದೆ ಅಂತಿರೋ ಹಿಂದೂ ಸಂಘಟಕರು, ಡಿಸೆಂಬರ್ 3ರಂದು ದತ್ತಪೀಠದಲ್ಲಿ ನಡೆಯೋದೇ ಬೇರೆ ಎಂದು ಹೇಳುತ್ತಿದ್ದಾರೆ. ಆದರೆ ಇನ್ನೂ 11 ದಿನಗಳ ಕಾಲ ಕಾಫಿನಾಡು ಚಿಕ್ಕಮಗಳೂರು ಬೂದಿ ಮುಚ್ಚಿದ ಕೆಂಡ ಎನ್ನುವುದರಲ್ಲಿ ಅನುಮಾನವೇ ಬೇಡ.

    ಸರ್ಕಾರ ಅಲ್ಪಸಂಖ್ಯಾತರ ಮನವೊಲಿಕೆ ಮಾಡ್ತಿದ್ಯಾ? ಹಿಂದೂಗಳ ಹೋರಾಟವನ್ನು ಹತ್ತಿಕ್ಕುವ ಯತ್ನ ಮಾಡ್ತಿದ್ಯಾ ಎನ್ನುವ ಪ್ರಶ್ನೆ ಕಾಡುತ್ತಿದೆ. ಏಕೆಂದರೆ ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿಗೆ ಬಜರಂಗದಳ ಹಾಗೂ ವಿಎಚ್‍ಪಿಯು ಚಾಲನೆ ನೀಡಿದೆ. 200ಕ್ಕೂ ಅಧಿಕ ಕಾರ್ಯಕರ್ತರು ಗುರುವಾರ ಮಾಲಾಧಾರಣೆಯೂ ಮಾಡಿದ್ದಾರೆ. ಆದರೆ ಜಿಲ್ಲಾಡಳಿತ ರಥಯಾತ್ರೆಗೆ ಬ್ರೇಕ್ ಹಾಕಿದೆ. ಈದ್-ಮಿಲಾದ್ ಮೆರವಣಿಗೆಗೆ ಅವಕಾಶ ಕೊಟ್ಟ ಜಿಲ್ಲಾಡಳಿತ ರಥಯಾತ್ರೆಗೆ ಅವಕಾಶ ಕೊಟ್ಟಿಲ್ಲ. ಇದು ಹಿಂದೂ ಸಂಘಟನೆಯ ಕೆಂಗಣ್ಣಿಗೆ ಗುರಿಯಾಗಿದ್ದು, ಸರ್ಕಾರಕ್ಕೆ ತಕ್ಕ ಉತ್ತರ ಕೊಡ್ತೀವಿ ಎಂದು ಎಚ್ಚರಿಕೆ ನೀಡಿದ್ದಾರೆ.

    ದತ್ತ ಜಯಂತಿ ಅಂಗವಾಗಿ ರಥಯಾತ್ರೆ ಮೂಲಕ ಸಾರ್ವಜನಿಕರಿಗೆ ದತ್ತ ಪೀಠದ ಮಾಹಿತಿ ನೀಡೋದು ಹಿಂದೂ ಸಂಘಟನೆಯ ಉದ್ದೇಶ. ಆದರೆ ಜಿಲ್ಲಾಡಳಿತ ಈದ್-ಮಿಲಾದ್ ಹಬ್ಬದ ನೆಪವೊಡ್ಡಿ ನಮಗೆ ಅನುಮತಿ ನೀಡಿಲ್ಲ. ನಾವು ಮಾಡುತ್ತಿರೋ ಯಾತ್ರೆ ಯಾರ ವಿರುದ್ಧವೂ ಅಲ್ಲ, ರಾಜಕೀಯವೂ ಅಲ್ಲ. ಆದರೆ ಜಿಲ್ಲಾಡಳಿತ ಸರ್ಕಾರದ ಜೊತೆಗೂಡಿ ನಮ್ಮನ್ನ ಹತ್ತಿಕ್ಕಲು ಮುಂದಾಗಿದೆ ಎಂದು ಹಿಂದೂ ಸಂಘಟಕರು ಹೇಳುತ್ತಾರೆ.

    ಒಟ್ಟಿನಲ್ಲಿ ಇನ್ನೂ 11 ದಿನ ಚಿಕ್ಕಮಗಳೂರು ಬೂದಿ ಮುಚ್ಚಿದ ಕೆಂಡದಂತಿರುತ್ತೆ. ಈದ್-ಮಿಲಾದ್ ಹಾಗೂ ಬೃಹತ್ ಶೋಭಾಯಾತ್ರೆ ಒಂದೇ ದಿನವಿರೋದ್ರಿಂದ ಪೊಲೀಸರು ಜಿಲ್ಲೆಯಾದ್ಯಂತ ಹದ್ದಿನ ಕಣ್ಣು ಇಟ್ಟಿದ್ದಾರೆ.