Tag: Hindu organizations

  • ಮಸೀದಿಗಳ ಧ್ವನಿವರ್ಧಕ ನಿಷೇಧ ಚರ್ಚೆ – 1990ರಲ್ಲೇ ಕೊಡಗು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ವಿಎಚ್‍ಪಿ ಮುಖಂಡ

    ಮಸೀದಿಗಳ ಧ್ವನಿವರ್ಧಕ ನಿಷೇಧ ಚರ್ಚೆ – 1990ರಲ್ಲೇ ಕೊಡಗು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ವಿಎಚ್‍ಪಿ ಮುಖಂಡ

    ಮಡಿಕೇರಿ: ರಾಜ್ಯದಲ್ಲಿ ಹಿಜಬ್, ಮುಸ್ಲಿಂ ವರ್ತಕರಿಗೆ ನಿರ್ಬಂಧ, ಹಲಾಲ್ ಕಟ್ – ಜಟ್ಕಾ ಕಟ್ ವಿವಾದದ ಬಳಿಕ ಇದೀಗ ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧದ ಬಗ್ಗೆ ಚರ್ಚೆಯಾಗುತ್ತಿದೆ. ಈ ನಡುವೆ ಧ್ವನಿವರ್ಧಕ ನಿಷೇಧ ಈ ಹಿಂದಿನಿಂದಲೇ ಜಾರಿಯಲ್ಲಿತ್ತು. 1990ರಲ್ಲೇ ಕೊಡಗು ಜಿಲ್ಲಾಡಳಿತಕ್ಕೆ ವಿಎಚ್‍ಪಿ ಮುಖಂಡರೊಬ್ಬರು ಮನವಿ ಸಲ್ಲಿಸಿದ್ದರು.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ವಿಎಚ್‍ಪಿ ಮುಖಂಡ ಸೋಮೇಶ್, ಈ ಹಿಂದೆ ಕೊಡಗಿನ ಪಾಲೂರು ದೇವಾಲಯದಲ್ಲಿ ನಡೆದ ಹಿಂದೂ, ಮುಸ್ಲಿಂ ಗಲಭೆಯ ಬಳಿಕ 1990ರಲ್ಲೇ ಅಂದಿನ ಜಿಲ್ಲಾಧಿಕಾರಿಗಳಿಗೆ ಮಸೀದಿಗಳಲ್ಲಿ ಇರುವ ಧ್ವನಿವರ್ಧಕ ನಿಷೇಧ ಮಾಡುವಂತೆ ಮನವಿ ಮಾಡಲಾಗಿತ್ತು ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧ: ವಕ್ಫ್ ಮಂಡಳಿಯ ಸುತ್ತೋಲೆಯಲ್ಲಿ ಏನಿದೆ? ಸುಪ್ರೀಂ ಕೋರ್ಟ್ ಹೇಳಿದ್ದೇನು?

    1964ರಲ್ಲಿಯೇ ಸರ್ವೋಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ. ಅನುಮತಿ ರಹಿತ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಿದ್ದರೂ ಇಷ್ಟು ವರ್ಷ ರಾಜಕೀಯ ತುಷ್ಟೀಕರಣದೊಂದಿಗೆ ಕಾನೂನು ಉಲ್ಲಂಘನೆ ಆಗುತ್ತದೆ. ಇದು ಹೊಸ ಬೆಳವಣಿಗೆ ಅಲ್ಲ. ಬಹು ವರ್ಷಗಳ ಹಿಂದೂಗಳ ಧ್ವನಿ ಆಗಿದೆ. ಪೊಲೀಸರು ಮತ್ತು ಸ್ಥಳೀಯ ಆಡಳಿತ ಒತ್ತಡದಿಂದ ದಿಟ್ಟ ಹೆಜ್ಜೆ ಇರಿಸಿಲ್ಲ. ಅದು ಮುಸ್ಲಿಂ ಸಮುದಾಯದ ಮುಖಂಡರು ಗೊತ್ತಿದ್ದರೂ ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಅಲ್ಲಾಹು ಅಕ್ಬರ್ ಎಂದು ಕೂಗುತ್ತ ಗೋರಖ್‍ನಾಥ ದೇವಾಲಯ ಪ್ರವೇಶಿಸಲು ಯತ್ನಿಸಿದ್ದ ಯುವಕ ಬಂಧನ

    ಕಾನೂನು ತನ್ನದೇ ರೀತಿಯಲ್ಲಿ ಕೆಲಸ ಮಾಡಬೇಕಿದೆ. 1964ರಲ್ಲಿಯೇ ಸರ್ವೋಚ್ಚ ನ್ಯಾಯಾಲಯ ಆದೇಶದಲ್ಲೇ ಸ್ಪಷ್ಟವಾಗಿ ಇದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯ ವರೆಗೂ ಧ್ವನಿವರ್ಧಕ ಬಳಸುವಂತೆ ಇಲ್ಲ. ಧ್ವನಿವರ್ಧಕ ಬಳಕೆಯಾದರೆ ಮನೆಯಲ್ಲಿ ಇರುವ ಮಕ್ಕಳು, ವಯಸ್ಸಾದ ವೃದ್ಧರಿಗೂ ಸಮಸ್ಯೆ ಅಗುತ್ತದೆ ಎಂದು ಸಾಕಷ್ಟು ಜನರು ಹೇಳಿದ್ರು. ಇದೀಗಾ ಬಹುಶಃ ಕಾಲ ಕೂಡಿ ಬಂದಿದೆ. ಅದಷ್ಟು ಬೇಗ ಸಾರ್ವತ್ರಿಕವಾಗಿ ಸರ್ಕಾರ ದಿಟ್ಟತನದಿಂದ ಧ್ವನಿವರ್ಧಕ ನಿಷೇಧವನ್ನು ಜಾರಿಗೆ ತರಬೇಕು ಇದರಿಂದ ಸಮಾಜದ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

  • ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಆರೋಪಿ ಅರೆಸ್ಟ್

    ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಆರೋಪಿ ಅರೆಸ್ಟ್

    ಲಕ್ನೋ: ಅಪ್ರಾಪ್ತ ದಲಿತ ಬಾಲಕಿಯೊಬ್ಬಳನ್ನು ಗ್ರಾಮದ ಸಮುದಾಯದ ಯುವಕನೊಬ್ಬ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಬುಲಂದ್‍ಶಹರ್ ಜಿಲ್ಲೆಯಲ್ಲಿ ನಡೆದಿದೆ.

    ಘಟನೆ ಕುರಿತು ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಅಪಹರಣದ ದೂರು ದಾಖಲಿಸಿದ್ದಾರೆ. ಘಟನೆಯ ಕುರಿತು ಬಾಲಕಿಯು ಮ್ಯಾಜಿಸ್ಟ್ರೆಟ್ ಮುಂದೆ ಸಂಪೂರ್ಣ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಶಿಕ್ಷಕನಿಂದ ಲೈಂಗಿಕ ಕಿರುಕುಳ – ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

    ತಲೆಮರೆಸಿಕೊಂಡಿದ್ದ ಹುಡುಗ ಮತ್ತು ಆತನ ಇಬ್ಬರು ಸಹಚರರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾಳೆ. ಹೇಳಿಕೆ ಆಧರಿಸಿ ಮೂವರು ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಘಟನೆಗೆ ಹಿಂದೂ ಸಂಘಟನೆಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳ ಬಂಧನಕ್ಕೆ ಹಿಂದೂ ಸಂಘಟನೆಗಳು ಮನವಿ ಪತ್ರವನ್ನೂ ಸಲ್ಲಿಸಿವೆ. ಇದನ್ನೂ ಓದಿ: ಹಸ್ತಮೈಥುನದ ವೀಡಿಯೋ ಕಳುಹಿಸಿ ಯುವತಿಯನ್ನು ಮಂಚಕ್ಕೆ ಕರೆದ ಎಂಬಿಎ ವಿದ್ಯಾರ್ಥಿ ಅರೆಸ್ಟ್

    ಪಹಸು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಮಾರ್ಚ್ 26 ರಂದು, ಗ್ರಾಮದ ಹುಡುಗನೊಬ್ಬ ಅಪ್ರಾಪ್ತ ದಲಿತ ಬಾಲಕಿಯನ್ನು ಮೋಹಿಸಿ ಕರೆದುಕೊಂಡು ಹೋಗಿದ್ದಾನೆ. ಇದಾದ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ವಿಚಾರ ತಿಳಿದ ಹಿಂದೂ ಸಂಘಟನೆಗಳು ಆಕ್ರೋಶಗೊಂಡು ಪಹಾಸು ಪೊಲೀಸ್ ಠಾಣೆಗೆ ಬಂದು ಮನವಿ ಪತ್ರ ಸಲ್ಲಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಎಸ್‍ಎಸ್‍ಪಿ ಸುರೇಂದ್ರ ತಿವಾರಿ ಮಾತನಾಡಿ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದು ಸ್ಪಷ್ಟವಾಯಿತು. ಘಟನೆಯಲ್ಲಿ ಇನ್ನೂ ಇಬ್ಬರು ಭಾಗಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗುತ್ತಿದೆ.

  • ಮಂಡ್ಯ ವಿದ್ಯಾರ್ಥಿನಿಗೆ ನಗದು ಬಹುಮಾನ – ಹಲಾಲ್ ವಿರುದ್ಧ ಅಭಿಯಾನ: ಎರಡಕ್ಕೂ ನಂಟೇನು?

    ಮಂಡ್ಯ ವಿದ್ಯಾರ್ಥಿನಿಗೆ ನಗದು ಬಹುಮಾನ – ಹಲಾಲ್ ವಿರುದ್ಧ ಅಭಿಯಾನ: ಎರಡಕ್ಕೂ ನಂಟೇನು?

    ಬೆಂಗಳೂರು: ರಾಜ್ಯದಲ್ಲಿ ಹುಟ್ಟಿಕೊಂಡ ಹಿಜಬ್ ವಿವಾದ ಬಳಿಕ ಹಿಂದೂಗಳು ಮತ್ತು ಮುಸ್ಲಿಂರ ನಡುವೆ ಒಂದಲ್ಲ ಒಂದು ವಿವಾದಗಳು ಭುಗಿಲೆಳುತ್ತಿದೆ. ಇದೀಗ ರಾಜ್ಯದಲ್ಲಿ ಹಲಾಲ್ ಬಗ್ಗೆ ಹಿಂದೂ ಸಂಘಟನೆಗಳು ರೊಚ್ಚಿಗೇಳಲು ಆ ಒಂದು ಘಟನೆ ಕಾರಣ ಎಂಬ ವಿಷಯ ಇದೀಗ ಬಹಿರಂಗವಾಗಿದೆ.

    ಹಿಜಬ್ ವಿವಾದಗಳ ಬಳಿಕ ಹಿಂದೂಗಳ ಜಾತ್ರೆಯಲ್ಲಿ ಮುಸ್ಲಿಂ ವರ್ತಕರಿಗೆ ವ್ಯಾಪಾರ ಬಹಿಷ್ಕಾರ ಹಾಕಲಾಯಿತು. ಆ ಬಳಿಕ ಇದೀಗ ಹಲಾಲ್ ಕುರಿತಾಗಿ ಹಿಂದೂ ಸಂಘಟನೆಗಳು ಗಂಭೀರ ಆರೋಪ ಮಾಡುತ್ತಿದ್ದು, ಹಿಜಬ್-ಹಲಾಲ್ ವಿವಾದಕ್ಕೆ ಲಿಂಕ್ ಇದೆ ಎಂಬ ಮಾತು ಕೇಳಿ ಬರುತ್ತಿದೆ. ಇದನ್ನೂ ಓದಿ: ಮುಸ್ಲಿಂ ಶಿಲ್ಪಿಗಳನ್ನು ಯಾವಾಗ ಬಹಿಷ್ಕರಿಸುತ್ತೀರಿ: ಹೆಚ್‌ಡಿಕೆ ಪ್ರಶ್ನೆ

    ಜಮಾತ್ ಉಲೇಮಾ ಟ್ರಸ್ಟ್ ಹಲಾಲ್ ಪ್ರಮಾಣಪತ್ರ ನೀಡುತ್ತಿದೆ. ಹಿಂದಿನಿಂದಲೂ ಈ ಸಂಸ್ಥೆ ಪ್ರಮಾಣಪತ್ರ ನೀಡುತ್ತಿದ್ದರೂ ಇಲ್ಲಿಯವರೆಗೆ ಅದು ದೊಡ್ಡ ಸುದ್ದಿಯಾಗಿರಲಿಲ್ಲ. ಹಲಾಲ್ ಬಗ್ಗೆ ಹಿಂದೆಯೂ ಧ್ವನಿ ಎತ್ತಲಾಗಿದ್ದರೂ ಕರ್ನಾಟಕದಲ್ಲಿ ಅಷ್ಟೊಂದು ಚರ್ಚೆ ಆಗಿರಲಿಲ್ಲ. ಆದರೆ ಹಿಜಬ್ ವಿವಾದದಲ್ಲಿ ಈ ಸಂಸ್ಥೆ ನೀಡಿದ ನಗದು ಬಹುಮಾನ ಹಿಂದೂ ಸಂಘಟನೆಗಳನ್ನು ಕೆರಳಿಸಿದೆ.

    ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದಕ್ಕಾಗಿ ಜಮಾತ್ ಉಲೇಮಾ ಟ್ರಸ್ಟ್ 5 ಲಕ್ಷ ರೂ. ಹಣ ಘೋಷಿಸಿತ್ತು. ಅಷ್ಟೇ ಅಲ್ಲದೇ ಸಿಎಎ ಪ್ರತಿಭಟನೆಯ ವೇಳೆಯೂ ಜಮಾತ್ ಉಲೇಮಾ ಟ್ರಸ್ಟ್ ಮುಸ್ಲಿಂ ಸಮುದಾಯದವರಿಗೆ ಹಣ ನೀಡಿದೆ ಎಂಬ ಆರೋಪ ಕೇಳಿ ಬಂದಿದೆ. ಹಲಾಲ್ ಸರ್ಟಿಫಿಕೇಟ್ ಪಡೆಯಲು ನೀಡಿದ ಹಣವನ್ನೇ ಈ ಸಂಸ್ಥೆ ಬಳಸಿಕೊಂಡಿದೆ ಎನ್ನುವುದು ಹಿಂದೂ ಸಂಘಟನೆಗಳ ಆರೋಪ. ಇದನ್ನೂ ಓದಿ: ಮಮತಾ ಬ್ಯಾನರ್ಜಿ ʼಮಾಫಿಯಾʼ ಹಿಡಿತದಲ್ಲಿ ಬಂಗಾಳ: ಬಿಜೆಪಿ ವರದಿ

    ಭಾರತ ಜಾತ್ಯಾತೀತ ರಾಷ್ಟ್ರ ಎಂದು ಸಂವಿಧಾನ ಹೇಳುತ್ತಿದೆ. ಹಿಜಬ್ ಹೋರಾಟದ ಸಮಯದಲ್ಲೂ ಮುಸ್ಲಿಂ ಸಂಘಟನೆಗಳು ನಮ್ಮದು ಜಾತ್ಯಾತೀತ ರಾಷ್ಟ್ರ, ಹಿಂದೂ ರಾಷ್ಟ್ರವಲ್ಲ ಎಂದು ಹೇಳಿದ್ದವು. ಹೀಗಿರುವಾಗ ಆಹಾರದಲ್ಲಿ ಜಾತಿ ಸಂಸ್ಥೆಯ ಪ್ರಮಾಣಪತ್ರ ಯಾಕೆ ಎನ್ನುವುದು ಹಿಂದೂ ಸಂಘಟನೆಗಳ ಪ್ರಶ್ನೆ. ಈ ಕಾರಣಕ್ಕೆ ರಾಜ್ಯಾದ್ಯಂತ ಹಲಾಲ್ ಮಾಂಸ ಖರೀದಿಸದಂತೆ ಹಿಂದೂ ಸಂಘಟನೆಗಳು ಹಿಂದೂ ಬಾಂಧವರಲ್ಲಿ ಮನವಿ ಮಾಡಿಕೊಳ್ಳುತ್ತಿದೆ. ಅಲ್ಲದೆ ಹಿಂದವೀ ಜಟ್ಕಾ ಕಟ್ ಚಿಕನ್ ಸೆಂಟರ್ ಓಪನ್ ಮಾಡಲು ಹಿಂದೂ ಸಂಘಟನೆಗಳು ತಿರ್ಮಾನಿಸಿದ್ದು, ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ಹಲಾಲ್ ಮಾಂಸ ಖರೀದಿಸದಂತೆ ಅಭಿಯಾನ ಅಭಿಯಾನ ಆರಂಭವಾಗಿದೆ.

    ಬೆಂಗಳೂರಿನಲ್ಲಿ ಹಲಾಲ್ ವಿರುದ್ಧ ಹಿಂದೂ ಸಂಘಟನೆಗಳು ನೂತನ ಅಭಿಯಾನ ಆರಂಭಿಸಿದ್ದು, ಹಿಂದವೀ ಮಾರ್ಟ್‍ನಲ್ಲಿ ಮಾಂಸ ಖರೀದಿಗೆ ಆಫರ್ ನೀಡಿ ಗ್ರಾಹಕರನ್ನು ಬರಮಾಡಿಕೊಂಡಿದ್ದಾರೆ. 5 ಕಿಮೀ ವ್ಯಾಪ್ತಿಯಲ್ಲಿ ಫ್ರೀ ಡೆಲಿವರಿ. 5 ಕಿಮೀ ದಾಟಿಹೋದ್ರೆ 50 ರೂ. ಹೆಚ್ಚುವರಿ ಶುಲ್ಕ ವಿಧಿಸಲು ಮುಂದಾಗಿದೆ. ಇದರೊಂದಿಗೆ ಮಾರುಕಟ್ಟೆಗಿಂತ 50 ರೂ. ಕಡಿಮೆ ದರದಲ್ಲಿ ಮಾಂಸ ಮಾರಾಟ ಮಾಡಲು ಹಿಂದವೀ ಮಾರ್ಟ್ ಮುಂದಾಗಿದೆ. ಹಲಾಲ್‍ಗೆ ಪ್ರತಿಯಾಗಿ ಹಿಂದೂ ಜಟ್ಕಾ ಕಟ್ ಶಾಪ್ ಓಪನ್ ಮಾಡಲು ಬೇಡಿಕೆ ಹೆಚ್ಚಾಗಿದೆ. ಇದನ್ನೂ ಓದಿ: ಶಂಕರಣ್ಣ@45: ಹೀಗೊಂದು ಸುದ್ದಿ ನಿಜನಾ?

  • 21 ದಿನ ಐಸಿಯುನಲ್ಲಿದ್ದು ಸಾವು ಗೆದ್ದರೂ ಬೀದಿಗೆ ಬಿದ್ದ ಹಿಂದೂ ಕಾರ್ಯಕರ್ತ

    21 ದಿನ ಐಸಿಯುನಲ್ಲಿದ್ದು ಸಾವು ಗೆದ್ದರೂ ಬೀದಿಗೆ ಬಿದ್ದ ಹಿಂದೂ ಕಾರ್ಯಕರ್ತ

    ಮೈಸೂರು: ಮನೆ, ಸೈಟ್ ಮಾರಿಕೊಂಡು ವೈದ್ಯಕೀಯ ವೆಚ್ಚವನ್ನು ಭರಿಸಿಕೊಂಡು 21 ದಿನ ಐಸಿಯುನಲ್ಲಿದ್ದು ಸಾವು ಗೆದ್ದರೂ ಹಿಂದೂ ಕಾರ್ಯಕರ್ತರೊಬ್ಬರು ಬೀದಿಗೆ ಬಿದ್ದಿದ್ದಾರೆ.

    2009ರಲ್ಲಿ ಹಿಂದೂ ಪರ ಸಂಘಟನೆಯ ಸಕ್ರಿಯ ಕಾರ್ಯಕರ್ತ ಗಿರಿಧರ್ ಮೇಲೆ ಕೆಎಫ್‍ಡಿ ಸಂಘಟನೆಯ 6 ಸದಸ್ಯರು ಹತ್ಯೆಗೆ ಯತ್ನಿಸಿದ್ದರು. ಅದೃಷ್ಟವಶಾತ್ ಗಿರಿಧರ್ ಬಚಾವ್ ಆಗಿದ್ದರು. 21 ದಿನ ಸಾವು ಬದುಕಿನ ನಡುವೆ ಹೋರಾಡಿ ಸಾವನ್ನು ಗೆದ್ದಿದ್ದರು. ಪ್ರಸ್ತುತ ಅವರು ಬಿಜೆಪಿ ಕಾರ್ಯಕರ್ತನಾಗಿಯೇ ಕಾರ್ಯ ನಿರ್ವಹಿಸುತ್ತಿದ್ದು, ಅಂದು ಅವರಿಗೆ ಬಿಜೆಪಿಯಿಂದ, ವಿವಿಧ ಹಿಂದೂ ಪರ ಸಂಘಟನೆಗಳಿಂದ ಭರಪೂರ ಭರವಸೆ ಸಿಕ್ಕಿತ್ತು. ಇದನ್ನೂ ಓದಿ: ಹರ್ಷನ ಹತ್ಯೆ- ಡೀಟೈಲ್ಸ್ ಎಲ್ಲ ಹೇಳೋಕೆ ಆಗಲ್ಲ: ಆರಗ ಜ್ಞಾನೇಂದ್ರ

    BRIBE

    ಆದರೆ, ನಂತರ ಒಂದು ಭರವಸೆಯೂ ಈಡೇರಲಿಲ್ಲ. ನಯಾಪೈಸೆ ಹಣವೂ ಸಿಗಲಿಲ್ಲ. ವೈದ್ಯಕೀಯ ಚಿಕಿತ್ಸೆಗಾಗಿ 45 ಲಕ್ಷ ವೆಚ್ಚವಾಗಿತ್ತು. ಇದಕ್ಕಾಗಿ ಮನೆ, ಸೈಟ್ ಮಾರಿದ್ದರು. ಇದನ್ನೂ ಓದಿ: ಅಗ್ನಿ ಅವಘಡ – ಕಟ್ಟಡದಿಂದ ಹಾರಿ ಜೀವ ಉಳಿಸಿಕೊಂಡ ತಾಯಿ, ಮಗಳು

  • ರಾಮಮಂದಿರ ನಿರ್ಮಾಣಕ್ಕೆ ಯತ್ನ – ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ವಿರೋಧ

    ರಾಮಮಂದಿರ ನಿರ್ಮಾಣಕ್ಕೆ ಯತ್ನ – ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ವಿರೋಧ

    ಚಿಕ್ಕಬಳ್ಳಾಪುರ: ಹಿಂದೂಪರ ಸಂಘಟನೆಗಳು ಪುರಸಭೆಗೆ ಸೇರಿದ ಜಾಗದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಯತ್ನಿಸಿದ್ದು, ಗೌರಿಬಿದನೂರು ನಗರದಲ್ಲಿ ಈ ವಿಚಾರವಾಗಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

    ಗೌರಿಬಿದನೂರು ನಗರದ ಬೆಂಗಳೂರು ವೃತ್ತದ ರಸ್ತೆ ಬದಿಯ ಜಾಗ ಇದಾಗಿದೆ. ರಾಮಮಂದಿರ ನಿರ್ಮಾಣಕ್ಕೆ ಹಿಂದೂಪರ ಸಂಘಟನೆಗಳು ಪ್ರಯತ್ನಿಸುತ್ತಿವೆ. ಸಂಘಟನೆಗಳು ಈಗಾಗಲೇ ಆ ಜಾಗದಲ್ಲಿ ರಾಮನ ವಿಗ್ರಹವನ್ನು ಕೂಡಾ ಪ್ರತಿಷ್ಠಾಪನೆ ಮಾಡಿ ಪೂಜೆ ಮಾಡಿಸುತ್ತಿದ್ದು, ಈ ವೇಳೆ ಮಂದಿರ ನಿರ್ಮಾಣ ಕಾರ್ಯಕ್ಕೆ ದಲಿತ ಸಂಘಟನೆಗಳ ಒಕ್ಕೂಟ ಬೆಂಗಳೂರು ವೃತ್ತದಲ್ಲಿ ಪ್ರತಿರೋಧ ವ್ಯಕ್ತಪಡಿಸಿದ್ದು, ವಾಹನಗಳನ್ನು ತಡೆದು ಬೆಂಗಳೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ. ಇದನ್ನೂ ಓದಿ: ರಾಜ್ಯಗಳಲ್ಲಿ ಹಿಜಬ್‌ ವಿವಾದ – ಹೈಕೋರ್ಟ್‌ಗಳ ತೀರ್ಪುಗಳೇನು? ಇಲ್ಲಿದೆ ಮಾಹಿತಿ

    ಪ್ರತಿಭಟನೆ ಕುರಿತು ಪೊಲೀಸರು ದಲಿತ ಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರನ್ನು ಸಮಾಧಾನ ಪಡಿಸುತ್ತಿದ್ದು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಜೊತೆ ತಹಶೀಲ್ದಾರ್ ಶಾಂತಿ ಸಭೆ ನಡೆಸಿದ್ದಾರೆ. ಈ ಜಾಗದಲ್ಲಿ ದಲಿತ ಪರ ಸಂಘಟನೆಗಳ ಒಕ್ಕೂಟವು ಬಸವ, ಬುದ್ಧ, ಅಂಬೇಡ್ಕರ್‌ರ ಸಮಾನತೆ ಸ್ಥೂಪ ಸ್ಥಾಪಿಸಲು ಉದ್ದೇಶಿಸಿದ್ದು, ಜಾಗ ಮಂಜೂರಿಗಾಗಿ ಪುರಸಭೆಗೆ ಮನವಿ ಮಾಡಿಕೊಂಡಿದ್ದರು. ಆದರೆ ಈಗ ಏಕಾಏಕಿ ರಾಮಮಂದಿರ ನಿರ್ಮಾಣ ಮಾಡುತ್ತಿರುವುದರಿಂದ ವಿರೋಧ ವ್ಯಕ್ತಪಡಿಸಿದೆ. ಇದನ್ನೂ ಓದಿ: ರಾಜಧಾನಿಗೂ ಕಾಲಿಟ್ಟ ಹಿಜಬ್ ವಿವಾದ – ಹಿಜಬ್ ತೆಗೆಯುವಂತೆ ಮಕ್ಕಳಿಗೆ ಶಿಕ್ಷಕರಿಂದ ಒತ್ತಾಯ

  • ಹಿಂದೂ ಪರ ಸಂಘಟನೆಗಳಿಂದ ಪೊಲೀಸ್ ಠಾಣೆಗೆ ಮುತ್ತಿಗೆ

    ಹಿಂದೂ ಪರ ಸಂಘಟನೆಗಳಿಂದ ಪೊಲೀಸ್ ಠಾಣೆಗೆ ಮುತ್ತಿಗೆ

    ಗದಗ: ಹಿಂದೂ ಪರ ಸಂಘಟನೆಗಳು ಜಿಲ್ಲೆಯ ನರಗುಂದ ತಾಲೂಕಿನ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

    ಮುಸ್ಲಿಂ ಸಂಘಟನೆ ಯುವಕರಿಂದ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. ಕಳೆದ 1 ವಾರದಿಂದ 3 ಬಾರಿ ಅನೇಕರ ಮೇಲೆ ಹಲ್ಲೆ ಮಾಡಿರುವುದಾಗಿ ಶ್ರೀರಾಮಸೇನೆ, ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಕೊರೊನಾ ನೆಗೆಟಿವ್

    ನೂರಾರು ಕಾರ್ಯಕರ್ತರು ಪೊಲೀಸ್ ಠಾಣೆ ಬಳಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಜಮಾವಣೆಗೊಂಡಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರ ಮರೆತು ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಜನವರಿ 31ರ ವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

    ಮುಸ್ಲಿಂ ಸಂಘಕರಿಂದ ಪದೆ ಪದೆ ಹಲ್ಲೆ ನಡಿಯುತ್ತಿದ್ದು ಈ ಸಂಬಂಧ ಪೊಲೀಸ್ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿದ್ದಾರೆ.

  • ಮುಸ್ಲಿಂ ಯುವಕರ ಬಿಡುಗಡೆ ಖಂಡಿಸಿ ನಾಳೆ ಕೆಆರ್ ಪೇಟೆ ಬಂದ್

    ಮುಸ್ಲಿಂ ಯುವಕರ ಬಿಡುಗಡೆ ಖಂಡಿಸಿ ನಾಳೆ ಕೆಆರ್ ಪೇಟೆ ಬಂದ್

    ಮಂಡ್ಯ: ಮುಸ್ಲಿಂ ಯುವಕರನ್ನು ಬಂಧನ ಮಾಡಿ, ಜಾಮೀನಿನ ಮೇಲೆ ಬಿಡುಗಡೆಗೊಳಿಸಿರುವುದನ್ನು ಖಂಡಿಸಿ ನಾಳೆ ಹಿಂದೂಪರ ಮತ್ತು ಕನ್ನಡ ಪರ ಸಂಘಟನೆಗಳು ಕೆಆರ್ ಪೇಟೆ ಬಂದ್‍ಗೆ ಕರೆ ನೀಡಿವೆ.

    ಅಕ್ಟೋಬರ್ 27 ರಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಆಲಂಬಾಡಿಕಾವಲು ಬಳಿ ಮುಸ್ಲಿಂ ಯುವಕರು ಅನುಮಾನಾಸ್ಪದವಾಗಿ ಪೇರೆಡ್ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ 16 ಮುಸ್ಲಿಂ ಯುವಕರನ್ನು ಬಂಧಿಸಿದ್ದರು.

    ನಂತರ ಅವರು ಪಿಎಸ್‍ಎಫ್ ಸಂಘಟನೆಯ ಕಾರ್ಯಕರ್ತರು ಎಂದು ತಿಳಿದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಇದೀಗ ಇದನ್ನು ಖಂಡಿಸಿ ನಾಳೆ ಕೆಆರ್ ಪೇಟೆ ಬಂದ್‍ಗೆ ಸಂಘಟನೆಗಳು ಕರೆ ನೀಡಿವೆ. ಕೆಆರ್ ಪೇಟೆ ಭಾಗದಲ್ಲಿ ದೇಶ ವಿರೋಧಿ ಚಟುವಟಿಗಳು ನಡೆಯುತ್ತಿವೆ. ಆದರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದು, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮೂರು ದಿನಗಳ ಹಿಂದೆ ಬಂಧನ ಮಾಡಿ ಬಿಡುಗಡೆ ಮಾಡಿರುವ ಯುವಕರು ಸಹ ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದರು ಎಂದು ಆರೋಪಿಸಿದ್ದಾರೆ.

    ಪೊಲೀಸರು ಯಾರದ್ದೋ ಒತ್ತಡಕ್ಕೆ ಮಣಿದು ಯುವಕರ ಮೇಲೆ ಸಣ್ಣಪುಟ್ಟ ಪ್ರಕರಣಗಳನ್ನು ದಾಖಲಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ. ಬಿಡುಗಡೆ ಮಾಡಿರುವ ಯುವಕರನ್ನು ಮತ್ತೆ ಬಂಧಿಸಿ, ಕೆಆರ್ ಪೇಟೆ ಭಾಗದಲ್ಲಿ ನಡೆಯುತ್ತಿರುವ ದೇಶ ವಿರೋಧಿ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕು ಎಂದು ಹಿಂದೂ ಪರ ಮತ್ತು ಕನ್ನಡ ಪರ ಸಂಘಟನೆಗಳು ಬಂದ್‍ಗೆ ಕರೆ ನೀಡಿವೆ.

    ಕೆಆರ್ ಪೇಟೆಯನ್ನು ಬಂದ್ ಮಾಡಿ ಬೃಹತ್ ಪ್ರತಿಭಟನೆ ಮಾಡಲು ಈಗಾಗಲೇ ಸಂಘಟನೆಗಳು ನಿರ್ಧರಿಸಿವೆ. ಈ ಪ್ರತಿಭಟನೆಯಲ್ಲಿ ಹಲವು ಮಠಗಳ ಮಠಾಧೀಶರುಗಳು ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಪೊಲೀಸರು ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಿದ್ದಾರೆ.

  • ಖಾವಿ ಧರಿಸಿ ಮದ್ಯ ಕುಡಿಯಲು ಬಂದ ವ್ಯಕ್ತಿಗೆ ಬಾರಿನಲ್ಲೇ ಹಲ್ಲೆ

    ಖಾವಿ ಧರಿಸಿ ಮದ್ಯ ಕುಡಿಯಲು ಬಂದ ವ್ಯಕ್ತಿಗೆ ಬಾರಿನಲ್ಲೇ ಹಲ್ಲೆ

    ಬೆಳಗಾವಿ: ವ್ಯಕ್ತಿಯೊಬ್ಬ ಖಾವಿ ಧರಿಸಿ ಮದ್ಯ ಕುಡಿಯಲು ಮುಂದಾದಾಗ ಹಿಂದೂಪರ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ನಗರದ ಅಪೊಲೋ ಬಾರ್ ಬಳಿ ನಡೆದಿದೆ.

    ನಗರದ ಅಪೊಲೊ ಬಾರ್ ಬಳಿ ಖಾವಿ ಬಟ್ಟೆಯಲ್ಲಿಯೇ ವ್ಯಕ್ತಿಯೊಬ್ಬ ಮದ್ಯ ಸೇವಿಸಲು ಮುಂದಾಗಿದ್ದ. ಈ ವೇಳೆ ಸ್ಥಳದಲ್ಲಿದ್ದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಹಿಂದೂ ಧರ್ಮದ ಪ್ರತೀಕ ಹಾಗೂ ಪವಿತ್ರವಾದ ಖಾವಿ ವಸ್ತ್ರ ಧರಿಸಿ ಎಣ್ಣೆ ಕುಡಿಯುತ್ತಿದ್ದೀಯಾ ಎಂದು ಪ್ರಶ್ನಿಸಿ ವ್ಯಕ್ತಿಯೆ ಮೇಲೆ ಹಲ್ಲೆ ನಡೆಸಿದ್ದಾರೆ.

    ಮಾರ್ಕೆಟ್ ಪೊಲೀಸ್ ಠಾಣೆಯ ಸಮೀಪ ಇರುವ ಬಾರಿನಲ್ಲಿ ಈ ಘಟನೆ ನಡೆದಿದೆ. ಕಾರ್ಯಕರ್ತರಿಂದ ಒದೆ ತಿಂದ ಬಳಿಕ ವ್ಯಕ್ತಿ ಇನ್ನೊಮ್ಮೆ ಈ ರೀತಿ ಮಾಡುವುದಿಲ್ಲ ಎಂದು ಹೇಳಿ ಕ್ಷಮೆ ಕೇಳಿದ್ದಾನೆ.