Tag: Hindu Student

  • ಹಿಂದೂ ವಿದ್ಯಾರ್ಥಿಯ ಮಣಿಕಟ್ಟಿನಲ್ಲಿದ್ದ ಧಾರ್ಮಿಕ ದಾರ ಕಟ್‌ ಮಾಡಿದ ಶಿಕ್ಷಕ

    ಹಿಂದೂ ವಿದ್ಯಾರ್ಥಿಯ ಮಣಿಕಟ್ಟಿನಲ್ಲಿದ್ದ ಧಾರ್ಮಿಕ ದಾರ ಕಟ್‌ ಮಾಡಿದ ಶಿಕ್ಷಕ

    ಕೇಪ್‌ಟೌನ್: ದಕ್ಷಿಣ ಆಫ್ರಿಕಾದ ಶಿಕ್ಷಕನೊಬ್ಬ ಹಿಂದೂ ವಿದ್ಯಾರ್ಥಿಯ ಮಣಿಕಟ್ಟಿನಿಂದ ಧಾರ್ಮಿಕ ದಾರವನ್ನು ಕತ್ತರಿಸಿರುವ ಘಟನೆ ನಡೆದಿದೆ.

    ಈ ಘಟನೆ ಕಳೆದ ವಾರ ಕ್ವಾಜುಲು-ನಟಾಲ್ ಪ್ರಾಂತ್ಯದ ಡ್ರೇಕೆನ್ಸ್‌ಬರ್ಗ್ ಮಾಧ್ಯಮಿಕ ಶಾಲೆಯಲ್ಲಿ ನಡೆದಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಶಾಲೆಯು ಸಾಂಸ್ಕೃತಿಕ ಅಥವಾ ಧಾರ್ಮಿಕ ಚಿಹ್ನೆಗಳನ್ನು ಧರಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿ, ಶಿಕ್ಷಕಿ ಹಿಂದೂ ವಿದ್ಯಾರ್ಥಿಯ ಮಣಿಕಟ್ಟಿನಿಂದ ಪವಿತ್ರ ದಾರವನ್ನು ಕತ್ತರಿಸಿದ್ದಾರೆ.

    ದಕ್ಷಿಣ ಆಫ್ರಿಕಾದ ಹಿಂದೂ ಮಹಾಸಭಾ (SAHMS) ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಅಧಿಕಾರಿಗಳಿಗೆ ಒತ್ತಾಯಿಸಿದೆ. ಹಿಂದೂ ವಿದ್ಯಾರ್ಥಿಯ ಧಾರ್ಮಿಕ ದಾರವನ್ನು ಕತ್ತರಿಸಿದ ಶಿಕ್ಷಕನ ಅಸಂವೇದನಾಶೀಲ ಮತ್ತು ಬೇಜವಾಬ್ದಾರಿ ಕ್ರಮವನ್ನು SAHMS ಬಲವಾಗಿ ಖಂಡಿಸುತ್ತದೆ ಎಂದು ಸಂಘಟನೆ ತಿಳಿಸಿದೆ.

    ಶಾಲೆಯಲ್ಲಿ ನಡೆದ ಧಾರ್ಮಿಕ ಅಸಹಿಷ್ಣುತೆ ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸಂಘಟನೆ ಹೇಳಿದೆ.

    ದಕ್ಷಿಣ ಆಫ್ರಿಕಾದ ಅತ್ಯುನ್ನತ ನ್ಯಾಯಾಂಗ ಪ್ರಾಧಿಕಾರವಾದ ಸಾಂವಿಧಾನಿಕ ನ್ಯಾಯಾಲಯವು ಶಾಲೆಯಿಂದ ಹಿಂದೂ ವಿದ್ಯಾರ್ಥಿನಿಯೊಬ್ಬಳು ಮೂಗುತಿಯನ್ನು ಧರಿಸುವುದನ್ನು ನಿಷೇಧಿಸಿತ್ತು. ಈ ಪ್ರಕರಣವನ್ನು ತ್ರಿಕಾಮ್ಜಿ ನೆನಪಿಸಿಕೊಂಡಿದ್ದಾರೆ.

  • ಪಾಕ್ ಹಾಸ್ಟೆಲ್‍ನಲ್ಲಿ ಹಿಂದೂ ವಿದ್ಯಾರ್ಥಿನಿ ಶವ ಪತ್ತೆ

    ಪಾಕ್ ಹಾಸ್ಟೆಲ್‍ನಲ್ಲಿ ಹಿಂದೂ ವಿದ್ಯಾರ್ಥಿನಿ ಶವ ಪತ್ತೆ

    ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹಿಂದೂ ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಲೇ ಇದ್ದು, ಈಗ ಪಾಕಿನ ಸಿಂಧ್ ಪ್ರಾಂತ್ಯದಲ್ಲಿನ ಕಾಲೇಜು ಹಾಸ್ಟೆಲ್‍ನಲ್ಲಿ ಹಿಂದೂ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.

    ಘೋಟ್ಕಿಯ ಮಿರ್ಪುರ್ ಮ್ಯಾಥೆಲೊ ನಿವಾಸಿ ನಮೃತಾ ಚಂದಾನಿ ಮೃತ ದುರ್ದೈವಿ. ಬಲವಂತವಾಗಿ ವಿದ್ಯಾರ್ಥಿನಿಯನ್ನು ಮತಾಂತರಗೊಳಿಸುವ ಹಿನ್ನೆಲೆ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದನ್ನು ಪ್ರಾಥಮಿಕ ವರದಿಯಲ್ಲಿ ತಿಳಿಸುವುದು ಕಷ್ಟ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ನಮೃತಾ ಕುಟುಂಬಸ್ಥರು ಆರೋಪಿಸಿದ್ದಾರೆ.

    ನಮೃತಾ ಬಿಬಿ ಆಸಿಫಾ ಡೆಂಟಲ್ ಕಾಲೇಜಿನಲ್ಲಿ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದಳು. ನಮೃತಾಳ ಸ್ನೇಹಿತರು ಅವಳ ಕೋಣೆಯ ಬಾಗಿಲು ತಟ್ಟಿದರೂ ಆಕೆ ತೆಗೆಯದಿದ್ದಾಗ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿದ ಬಳಿಕ ಬಾಗಿಲು ಮುರಿದು ಕೋಣೆಗೆ ಹೋದಾಗ, ಹಾಸಿಗೆಯ ಮೇಲೆ ಕುತ್ತಿಗೆಗೆ ಹಗ್ಗ ಸುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸದ್ಯ ವಿದ್ಯಾರ್ಥಿನಿಯ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

    ಕೆಲವು ದಿನಗಳ ಹಿಂದೆ ಹಿಂದೂಗಳ ಮೇಲಿನ ದೌರ್ಜನ್ಯದ ಸಂದರ್ಭದಲ್ಲಿ ಸಿಂಧ್‍ನ ಘೋಟ್ಕಿ ಪ್ರದೇಶದಲ್ಲಿ ಹಿಂಸಾಚಾರ ನಡೆದಿತ್ತು. ಸೆಪ್ಟೆಂಬರ್ 15 ರಂದು ಘೋಟ್ಕಿಯಲ್ಲಿಯೇ ಹಿಂದೂ ದೇವಾಲಯ ಮತ್ತು ಶಾಲೆಯನ್ನು ಧ್ವಂಸ ಮಾಡಲಾಗಿತ್ತು.