Tag: hindu temples

  • ದೇವಾಲಯಗಳು ಸರ್ಕಾರದ ಕಪಿಮುಷ್ಠಿಯಲ್ಲಿದ್ದು, ಭಕ್ತರ ಕಾಣಿಕೆ ಸದ್ವಿನಿಯೋಗ ಆಗ್ತಿಲ್ಲ: ಪೇಜಾವರ ಶ್ರೀ

    ದೇವಾಲಯಗಳು ಸರ್ಕಾರದ ಕಪಿಮುಷ್ಠಿಯಲ್ಲಿದ್ದು, ಭಕ್ತರ ಕಾಣಿಕೆ ಸದ್ವಿನಿಯೋಗ ಆಗ್ತಿಲ್ಲ: ಪೇಜಾವರ ಶ್ರೀ

    – ದೇಶದಲ್ಲಿ ಸನಾತನ ಬೋರ್ಡ್ ಜಾರಿಗೆ ಬರಬೇಕು

    ಉಡುಪಿ: ದೇಶದಲ್ಲಿ ಸನಾತನ ಬೋರ್ಡ್ ಜಾರಿಗೆ ಬರಬೇಕು. ದೇವಾಲಯಗಳು ಸರ್ಕಾರದ ಕಪಿಮುಷ್ಠಿಯಲ್ಲಿದ್ದು, ಭಕ್ತರ ಕಾಣಿಕೆ ಸದ್ವಿನಿಯೋಗ ಆಗುತ್ತಿಲ್ಲ ಎಂದು ಉಡುಪಿಯ (Udupi) ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwaprasanna Teertha Swamiji) ಹೇಳಿದರು.

    ದೇವಾಲಯಗಳು ಸರ್ಕಾರದ ಕಪಿಮುಷ್ಠಿಯಲ್ಲಿವೆ. ಜೀರ್ಣೋದ್ಧಾರ ಇಲ್ಲ, ಪರಿಚಾರಕ ವರ್ಗಕ್ಕೆ ಸೂಕ್ತ ಸಂಭಾವನೆ ಇಲ್ಲ. ಭಕ್ತರ ಕಾಣಿಕೆ ಸದ್ವಿನಿಯೋಗ ಆಗುತ್ತಿಲ್ಲ. ದೇಗುಲದ ಸಂಪತ್ತಿಂದ ಊರಿಗೆ ಶಿಕ್ಷಣ ಆಗಬೇಕು. ಊರಿನ ಜನರ ವೈದ್ಯಕೀಯಕ್ಕೆ ಹಣ ಬಳಕೆಯಾಗಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಕೇಂದ್ರ ಸರ್ಕಾರ ಹಿಂದಿನ ಬಜೆಟ್‌ನಲ್ಲಿ ಘೋಷಿಸಿದ ಅನುದಾನ ಕೊಡಲಿ ಸಾಕು – ಕೃಷ್ಣಬೈರೇಗೌಡ

    ಅಯೋಧ್ಯೆಯಲ್ಲಿ ಮುಂದಿನ ಒಂದೂವರೆ ವರ್ಷದಲ್ಲಿ ಕಾಮಗಾರಿಗಳೆಲ್ಲ ಪೂರ್ಣವಾಗಲಿದೆ. ಅಯೋಧ್ಯೆಯಲ್ಲಿ ಭಕ್ತರ ದರ್ಶನಕ್ಕೆ ಸುಲಲಿತ ವ್ಯವಸ್ಥೆಯಿದೆ. ತಿರುಪತಿಯಂತೆ ಬದಲಿಸಿದರೆ ವ್ಯವಸ್ಥೆ ಸಂಕೋಚ ಮಾಡಿದಂತಾಗುತ್ತದೆ. ಕುಂಭಮೇಳಕ್ಕೆ ತೆರಳುವವರು ತಾಳ್ಮೆಯಿಂದ ವರ್ತಿಸಿ, ಅಪಾಯಕ್ಕೊಳಗಾಗಬೇಡಿ ಎಂದು ಕಿವಿಮಾತು ಹೇಳಿದರು.

    ಪ್ರಯಾಗದಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಕುಂಭಮೇಳದಲ್ಲಿ ಕೆಲ ಅನಾನುಕೂಲತೆ ಆಗಿದೆ ಎಂಬ ಮಾಹಿತಿ. ಮುಂದಿನ ಎಲ್ಲಾ ಉತ್ಸವಗಳು ಸಾಂಗವಾಗಿ ನಡೆಯಲಿ. ಪ್ರಯಾಗದಲ್ಲಿ ಅಭೂತಪೂರ್ವ ವ್ಯವಸ್ಥೆ ಇದೆ. ಯಾವುದೇ ಅನಾನುಕೂಲತೆಗಳು ಆಗದಂತೆ ದೇವರಲ್ಲಿ ಪ್ರಾರ್ಥನೆ ಎಂದರು. ಇದನ್ನೂ ಓದಿ: ಚಂಡೀಗಢ ಮೇಯರ್‌ ಚುನಾವಣೆ ಗೆದ್ದ ಬಿಜೆಪಿ; ಎಎಪಿ-ಕಾಂಗ್ರೆಸ್‌ ಮೈತ್ರಿಗೆ ಮುಖಭಂಗ

    ಕುಂಭಮೇಳದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವಹೇಳನ ವಿಚಾರವಾಗಿ ಮಾತನಾಡಿ, ಯಾರೂ ಕೂಡಾ ಬಹುಮತವನ್ನು ಕಡೆಗಣಿಸಬೇಡಿ. ಖರ್ಗೆಯವರ ಹೇಳಿಕೆ ಅವರ ಆಶಯ ತೆರೆದಿಟ್ಟಿದೆ. ಬಹುಮತದ ಎಲ್ಲರ ಭಾವನೆಯನ್ನು ನಾವು ಗೌರವಿಸಬೇಕು, ಯಾರನ್ನೂ ನೋಯಿಸಬಾರದು. ಇಂತಹ ಹೇಳಿಕೆ ನಿಮ್ಮ ಘನತೆಗೆ ತಕ್ಕದಾದುದ್ದಲ್ಲ. ನಾವು ಯಾವುದೇ ಪ್ರತಿಕ್ರಿಯೆ ಕೊಡಲ್ಲ. ಖರ್ಗೆಯವರದ್ದು ಬಾಲಿಶ ಹೇಳಿಕೆ. ಕುಂಭಮೇಳದಲ್ಲಿ ಮಿಂದ ಮಂದಿ ಮೂರ್ಖರಾ? ಕುಂಭಮೇಳಕ್ಕೆ ಬಂದ ಎಲ್ಲರನ್ನ ಖರ್ಗೆ ಅವರು ಮೂರ್ಖರೆಂದು ಹೇಳಿದ ಹಾಗೆ ಆಯ್ತು. ದೇಶ-ವಿದೇಶದಿಂದ ಜನ ಬರ್ತಾಯಿದ್ದಾರೆ. ರಾಜಕೀಯ ಪಕ್ಷಗಳು ಎಲ್ಲರೂ ಮತಭೇದ ಮರೆತು ಯಶಸ್ಸಿಗೆ ಕೈಜೋಡಿಸಬೇಕು. ಏಕ ಮನಸ್ಸಿನಿಂದ ಒಮ್ಮನಸಿನಿಂದ ಎಲ್ಲರೂ ವರ್ತನೆ ಮಾಡಬೇಕು ಎಂದು ತಿಳಿಸಿದರು.

  • ಬಾಂಗ್ಲಾದಲ್ಲಿ ಮುಂದುವರಿದ ಹಿಂದೂ ದೇವಾಲಗಳ ಮೇಲಿನ ದಾಳಿ – 2 ದಿನಗಳಲ್ಲಿ 8 ವಿಗ್ರಹ ಧ್ವಂಸ

    ಬಾಂಗ್ಲಾದಲ್ಲಿ ಮುಂದುವರಿದ ಹಿಂದೂ ದೇವಾಲಗಳ ಮೇಲಿನ ದಾಳಿ – 2 ದಿನಗಳಲ್ಲಿ 8 ವಿಗ್ರಹ ಧ್ವಂಸ

    ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಗಳ ಮೇಲಿನ ದಾಳಿ ಮುಂದುವರಿದಿದೆ. ಕಳೆದ 2 ದಿನಗಳಲ್ಲಿ ಮೈಮೆನ್‌ಸಿಂಗ್ ಮತ್ತು ದಿನಾಜ್‌ಪುರ ಜಿಲ್ಲೆಗಳಲ್ಲಿ ಮೂರು ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿದ್ದು, 8 ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದೆ
    ಎಂದು ವರದಿಯಾಗಿದೆ‌.

    ಮೈಮೆನ್‌ಸಿಂಗ್‌ನ ಹಲುಘಾಟ್ ಉಪಜಿಲ್ಲೆಯಲ್ಲಿ ಗುರುವಾರ ಮತ್ತು ಶುಕ್ರವಾರದಂದು ಪ್ರತ್ಯೇಕ ಘಟನೆಗಳಲ್ಲಿ ಎರಡು ದೇವಾಲಯಗಳಲ್ಲಿನ ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದೆ. ಶುಕ್ರವಾರ ಮುಂಜಾನೆ ಶಕುವಾಯ್ ಯೂನಿಯನ್‌ನಲ್ಲಿರುವ ಬೋಂಡರ್‌ಪಾರಾ ದೇವಾಲಯದಲ್ಲಿ ಎರಡು ವಿಗ್ರಹಗಳನ್ನು ಹಾನಿಗೊಳಿಸಲಾಗಿದೆ ಎಂದು ಹಲುಘಾಟ್ ಪೊಲೀಸ್ ಠಾಣೆಯ ಅಧಿಕಾರಿ ಅಬುಲ್ ಖಯೇರ್ ಹೇಳಿದ್ದಾರೆ. ಈವರೆಗೂ ಯಾವುದೇ ಪ್ರಕರಣ ದಾಖಲಿಸಲಾಗಿಲ್ಲ ಮತ್ತು ಈ ಘಟನೆಯಲ್ಲಿ ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಖಯೇರ್ ತಿಳಿಸಿದ್ದಾರೆ.

    ಮತ್ತೊಂದು ಪ್ರಕರಣದಲ್ಲಿ ಗುರುವಾರ ಮುಂಜಾನೆ ಬೀಳ್‌ದೊರ ಒಕ್ಕೂಟದ ಪೊಲಾಶ್‌ಕಂಡ ಕಾಳಿ ದೇವಸ್ಥಾನದ ವಿಗ್ರಹವನ್ನು ಧ್ವಂಸಗೊಳಿಸಲಾಗಿದೆ. ಪೋಲಷ್ಕಂಡ ಗ್ರಾಮದ ನಿವಾಸಿ 27 ವರ್ಷದ ಅಲಾಲ್ ಉದ್ದೀನ್ ಎಂಬಾತನನ್ನು ಪೊಲೀಸರು ನಂತರ ಬಂಧಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ ಶಂಕಿತ ಅಪರಾಧ ಒಪ್ಪಿಕೊಂಡಿದ್ದಾನೆ ಎಂದು ಖಯೇರ್ ಹೇಳಿದರು. ಶಂಕಿತನನ್ನು ಶುಕ್ರವಾರ ಮೈಮೆನ್‌ಸಿಂಗ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು ಮತ್ತು ಜೈಲಿಗೆ ಕಳುಹಿಸಲಾಗಿದೆ.

    ದಿನಾಜ್‌ಪುರದ ಬಿರ್‌ಗಂಜ್ ಉಪಜಿಲ್ಲೆಯಲ್ಲಿ ಮಂಗಳವಾರ ಜರ್ಬರಿ ಶಶನ್ ಕಾಳಿ ದೇವಸ್ಥಾನದಲ್ಲಿ ಐದು ವಿಗ್ರಹಗಳನ್ನು ಧ್ವಂಸಗೊಳಿಸಲಾಗಿತ್ತು, ಘಟನೆಯು ಗುರುವಾರ ಬೆಳಕಿಗೆ ಬಂದಿತು. ಇಂತಹ ಕೃತ್ಯವನ್ನು ನಾವು ಇಲ್ಲಿ ನೋಡಿಲ್ಲ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಜನಾರ್ದನ್ ರಾಯ್ ಹೇಳಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪ್ರಭಾರಿ ಅಧಿಕಾರಿ ಅಬ್ದುಲ್ ಗಫೂರ್ ತಿಳಿಸಿದ್ದಾರೆ.

    ಆಗಸ್ಟ್‌ನಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳು ಮತ್ತು ಆಸ್ತಿಗಳ ಮೇಲೆ ದಾಳಿಗಳು ಹೆಚ್ಚಾಗುತ್ತಿರುವ ಮಧ್ಯೆ ಇತ್ತೀಚಿನ ಘಟನೆಗಳು ಬೆಳಕಿಗೆ ಬಂದಿವೆ. ಕಳೆದ ವಾರ ಸುನಮ್‌ಗಂಜ್ ಜಿಲ್ಲೆಯಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ ಮತ್ತು ಹಿಂದೂ ಮನೆಗಳು ಮತ್ತು ಅಂಗಡಿಗಳ ಮೇಲೆ ದಾಳಿ ಮಾಡಿದ ನಾಲ್ವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

  • ರಾಮಮಂದಿರ ಸೇರಿ ಹಿಂದೂ ದೇವಾಲಯಗಳ ಮೇಲೆ ದಾಳಿ ಬೆದರಿಕೆ; ಖಲಿಸ್ತಾನಿ ಉಗ್ರ ಪನ್ನುನ್ ವೀಡಿಯೋ ರಿಲೀಸ್‌

    ರಾಮಮಂದಿರ ಸೇರಿ ಹಿಂದೂ ದೇವಾಲಯಗಳ ಮೇಲೆ ದಾಳಿ ಬೆದರಿಕೆ; ಖಲಿಸ್ತಾನಿ ಉಗ್ರ ಪನ್ನುನ್ ವೀಡಿಯೋ ರಿಲೀಸ್‌

    ನವದೆಹಲಿ: ಅಯೋಧ್ಯೆಯ ರಾಮಮಂದಿರ (Ayodhya Ram Mandir) ಸೇರಿದಂತೆ ಹಿಂದೂ ದೇವಾಲಯಗಳನ್ನು (Hindu Temples)  ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುವುದು ಎಂದು ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (Sikhs for Justice) ಸಂಘಟನೆಯ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಬೆದರಿಕೆ ಹಾಕಿದ್ದಾನೆ.

    ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆಯು ಬಿಡುಗಡೆ ಮಾಡಿದ ವೀಡಿಯೊದಲ್ಲಿ ಮಾತನಾಡಿರುವ ಪನ್ನುನ್, ನವೆಂಬರ್ 16 ಮತ್ತು 17 ರಂದು ದಾಳಿಯ ಬಗ್ಗೆ ಎಚ್ಚರಿಸಿದ್ದಾರೆ. ಇದು ಕೆನಡಾದ ಬ್ರಾಂಪ್ಟನ್‌ನಲ್ಲಿ ರೆಕಾರ್ಡ್ ಮಾಡಲಾದ ವೀಡಿಯೊ ಎನ್ನಲಾಗಿದ್ದು, ಹಿಂದೂ ಪೂಜಾ ಸ್ಥಳಗಳ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಗುರಿಯನ್ನು ಹೊಂದಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಎಪಿಎಂಸಿ ಹೊರಗೆ ಯುವಕನ ಶವ ಪತ್ತೆ – ಅನೈತಿಕ ಸಂಬಂಧಕ್ಕೆ ಬಲಿಯಾದ ಶಂಕೆ!

    ಹಿಂಸಾತ್ಮಕ ಹಿಂದುತ್ವ ಸಿದ್ಧಾಂತದ ಜನ್ಮಸ್ಥಳವಾದ ಅಯೋಧ್ಯೆಯ ಅಡಿಪಾಯವನ್ನು ನಾವು ಅಲುಗಾಡಿಸುತ್ತೇವೆ. ಹಿಂದೂ ದೇವಾಲಯಗಳ ಮೇಲಿನ ಖಲಿಸ್ತಾನಿ ದಾಳಿಯಿಂದ ದೂರವಿರುವಂತೆ ಕೆನಡಾದಲ್ಲಿರುವ ಭಾರತೀಯರಿಗೆ ಪನ್ನುನ್ ಎಚ್ಚರಿಕೆ ನೀಡಿದ್ದಾನೆ. ಕಳೆದ ತಿಂಗಳು, ನವೆಂಬರ್ 1 ಮತ್ತು 19ರ ನಡುವೆ ಏರ್ ಇಂಡಿಯಾ ವಿಮಾನಗಳಲ್ಲಿ ಹಾರಾಟ ಮಾಡದಂತೆ ಪನ್ನುನ್ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದ. ಇದಕ್ಕೂ ಮೊದಲು ಭಾರತೀಯ ರಾಜತಾಂತ್ರಿಕರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದ. ಇದನ್ನೂ ಓದಿ: ಮಹಿಳೆಯರಿಗೆ ಫ್ರೀ ಬಸ್‌ ಕೊಟ್ಟರು, ಪಾಪ ಪುರುಷರಿಗೆ ಏನ್‌ ಮಾಡಿದ್ರು? – ಸರ್ಕಾರಕ್ಕೆ ನಟಿ ತಾರಾ ಪ್ರಶ್ನೆ

    ಪನ್ನುನ್ ಕೋಮು ಸೌಹಾರ್ದತೆಯನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಹಲವಾರು ವಿವಾದತ್ಮಾಕ ಹೇಳಿಕೆಗಳನ್ನು ನೀಡಿದ್ದಾನೆ. ಜುಲೈ 2020ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA) ಅಡಿಯಲ್ಲಿ ಪನ್ನುನ್‌ನನ್ನು ಭಯೋತ್ಪಾದಕ ಎಂದು ಹೆಸರಿಸಲಾಯಿತು. ಭಾರತ ಸರ್ಕಾರವು ಆತನ ಬಂಧನಕ್ಕೆ ಅನೇಕ ವಾರಂಟ್‌ಗಳನ್ನು ಸಹ ಹೊರಡಿಸಿದೆ. ಆದಾಗ್ಯೂ ಪನ್ನುನ್ ಅಮೆರಿಕ ಮತ್ತು ಕೆನಡಾದಿಂದ ಕಾರ್ಯ ನಿರ್ವಹಿಸುವುದನ್ನು ಮುಂದುವರೆಸಿದ್ದಾನೆ.  ಇದನ್ನೂ ಓದಿ: ಐತಿಹಾಸಿಕ ಸೋಮೇಶ್ವರ ದೇವಸ್ಥಾನ ವಕ್ಫ್‌ಗೆ ಪರಭಾರೆ ಆರೋಪ; ವಕ್ಫ್ ಬೋರ್ಡ್, ಸರ್ಕಾರದ ವಿರುದ್ಧ ಪ್ರತಿಭಟನೆ

  • 5 ಲಕ್ಷ ಪಾವತಿಸಿ ಇಲ್ಲವೇ ದುರ್ಗಾ ಪೂಜೆ ಆಚರಿಸಬೇಡಿ: ಬಾಂಗ್ಲಾ ಹಿಂದೂ ದೇವಾಲಯಗಳಿಗೆ ಬೆದರಿಕೆ

    5 ಲಕ್ಷ ಪಾವತಿಸಿ ಇಲ್ಲವೇ ದುರ್ಗಾ ಪೂಜೆ ಆಚರಿಸಬೇಡಿ: ಬಾಂಗ್ಲಾ ಹಿಂದೂ ದೇವಾಲಯಗಳಿಗೆ ಬೆದರಿಕೆ

    ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ದುರ್ಗಾ ಪೂಜೆಯ (Durga Puja) ಸಂದರ್ಭದಲ್ಲಿ ಕೋಮುಗಲಭೆ ಉಂಟಾಗಬಹುದೆಂಬ ಆತಂಕದ ನಡುವೆ, ಕೆಲವು ದೇವಾಲಯಗಳಿಗೆ (Hindu Temples) ಇಸ್ಲಾಮಿಸ್ಟ್ ಗುಂಪುಗಳಿಂದ ಸುಲಿಗೆ ಬೆದರಿಕೆ ಪತ್ರಗಳು ಬಂದಿವೆ.

    ಖುಲ್ನಾ ನಗರದ ಡಕೋಪ್‍ನಲ್ಲಿರುವ 25ಕ್ಕೂ ಹೆಚ್ಚು ದೇವಾಲಯಗಳಿಗೆ ಐದು ದಿನಗಳ ಹಬ್ಬವನ್ನು ಆಚರಿಸಲು 5 ಲಕ್ಷ ರೂ. ಬೆದರಿಕೆ ಹಾಕಲಾಗಿದೆ. ಸುಲಿಗೆ ಬೆದರಿಕೆಗಳ ವಿರುದ್ಧ ದೇವಾಲಯ ಸಮಿತಿಗಳು ಪೊಲೀಸರಿಗೆ ದೂರು ನೀಡಿದ್ದರೂ ಪೊಲೀಸರ ಮೇಲೆ ಯಾವುದೇ ವಿಶ್ವಾಸವಿಲ್ಲ ಎಂದು ಪೂಜಾ ಸಮಿತಿಗಳು ಹೇಳಿಕೊಂಡಿವೆ. ಬೆದರಿಕೆಯ ಕಾರಣ, ಕೆಲವು ಪೂಜಾ ಸಮಿತಿಗಳು ಆಚರಣೆಯನ್ನು ರದ್ದುಗೊಳಿಸಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ಯಾದಗಿರಿಯಲ್ಲಿ ಗುಡುಗು ಸಹಿತ ಬಾರಿ ಮಳೆ : ಸಿಡಿಲು ಬಡಿದು ನಾಲ್ವರು ಸಾವು

    ಅಕ್ಟೋಬರ್ 9 ರಿಂದ 13 ರವರೆಗೆ ದುರ್ಗಾ ಪೂಜೆಯನ್ನು ಆಚರಿಸಲಾಗುತ್ತದೆ. ಕಳೆದ 2023ಕ್ಕೆ ಹೋಲಿಸಿದರೆ ಬಾಂಗ್ಲಾದೇಶದಲ್ಲಿ ಈ ವರ್ಷ ಹೆಚ್ಚಿನ ಪೂಜಾ ಮಂಟಪಗಳನ್ನು ನಿರ್ಮಿಸಲಾಗುತ್ತಿದೆ ಎಂದು ವರದಿಯಾಗಿತ್ತು.

    ಈ ಹಿಂದೆ ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ದುರ್ಗಾ ಪೂಜೆ-ಸಂಬಂಧಿತ ಚಟುವಟಿಕೆಗಳನ್ನು ಆಜಾನ್‍ಗೆ ಐದು ನಿಮಿಷಗಳ ಮೊದಲು ಮತ್ತು ನಮಾಜ್ ಸಮಯದಲ್ಲಿ ಸ್ಥಗಿತಗೊಳಿಸುವಂತೆ ಸೂಚಿಸಿತ್ತು. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ – ತುಪ್ಪ ಪೂರೈಸುತ್ತಿದ್ದ ಎಆರ್ ಡೈರಿಗೆ ನೋಟಿಸ್

  • ಹಿಂದೂ ದೇವಾಲಯಗಳ ಮೇಲಿನ ದಾಳಿ, ಅಪರಾಧಗಳ ವಿರುದ್ಧ ಅಮೆರಿಕದಲ್ಲಿ ನಿರ್ಣಯ ಮಂಡನೆ

    ಹಿಂದೂ ದೇವಾಲಯಗಳ ಮೇಲಿನ ದಾಳಿ, ಅಪರಾಧಗಳ ವಿರುದ್ಧ ಅಮೆರಿಕದಲ್ಲಿ ನಿರ್ಣಯ ಮಂಡನೆ

    ವಾಷಿಂಗ್ಟನ್‌: ಹಿಂದೂ ದೇವಾಲಯಗಳ (Hindu Temples) ಮೇಲಿನ ದಾಳಿ ಹಾಗೂ ಹಿಂದೂ ವಿರೋಧಿ ಅಪರಾಧಗಳನ್ನು ಖಂಡಿಸುವ ನಿರ್ಣಯವನ್ನು ಭಾರತೀಯ-ಅಮೆರಿಕನ್ (Indian Americans) ಶಾಸಕರೊಬ್ಬರು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಮಂಡಿಸಿದ್ದಾರೆ.

    ನಿರ್ಣಯ ಮಂಡಿಸಿದ ಕಾಂಗ್ರೆಸ್‌ನ (Congress) ಥಾನೇದಾರ್‌, ದೇಶದಲ್ಲಿ ಹಿಂದೂ ಅಮೆರಿಕನ್ನರ ಬಗ್ಗೆ ತಪ್ಪಾಗಿ ಬಿಂಬಿಸಲಾಗುತ್ತಿದೆ. ಶಾಲೆ ಮತ್ತು ಕಾಲೇಜುಗಳಲ್ಲಿ ಬೆದರಿಕೆ ಹಾಕಲಾಗುತ್ತಿದೆ. ಹಿಂದೂ ಅಮೆರಿಕನ್ನರು ತಾರತಮ್ಯ ಮತ್ತು ದ್ವೇಷದ ಭಾಷಣಕ್ಕೆ ಗುರಿಯಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇರಾನ್, ಇಸ್ರೇಲ್‍ಗೆ ಪ್ರಯಾಣಿಸದಂತೆ ನಾಗರಿಕರಿಗೆ ಕೇಂದ್ರದ ಸಲಹೆ

    1900 ರಿಂದಲೂ 40 ಲಕ್ಷಕ್ಕೂ ಹೆಚ್ಚು ಹಿಂದೂಗಳು ದೇಶದಲ್ಲಿ ನೆಲೆ ಕಂಡುಕೊಂಡಿದ್ದಾರೆ. ದೇಶವು ವೈವಿಧ್ಯಮಯ ಜನಾಂಗೀಯ, ಭಾಷಾ ಮತ್ತು ಜನಾಂಗೀಯ ಹಿನ್ನೆಲೆಗಳನ್ನು ಪ್ರತಿನಿಧಿಸುತ್ತದೆ. ದೇಶದ ಆರ್ಥಿಕತೆ ಹಾಗೂ ಪ್ರತಿಯೊಂದು ಉದ್ಯಮದಲ್ಲಿ ಹಿಂದೂ ಅಮೆರಿಕನ್ನರ ಕೊಡುಗೆ ಹೆಚ್ಚಿದೆ. ಈ ನಿಟ್ಟಿನಲ್ಲಿ ನಿರ್ಣಯವು ಸಹಕಾರಿಯಾಗಲಿದೆ ಎಂದು ಉಲ್ಲೇಖಿಸಲಾಗಿದೆ.

    ನ್ಯೂಯಾರ್ಕ್‌ನಿಂದ ಹಿಡಿದು ಕ್ಯಾಲಿಫೋರ್ನಿಯಾ ವರೆಗೂ ಮಂದಿರಗಳ ಮೇಲಿನ ದಾಳಿಗಳು ಹಿಂದೂ ಅಮೆರಿಕನ್ನರಲ್ಲಿ ಆತಂಕವನ್ನು ಹೆಚ್ಚಿಸಿವೆ. ಭಯ ಹಾಗೂ ಬೆದರಿಕೆಗಳಿಂದಲೇ ನಾಗರಿಕರು ಜೀವನ ನಡೆಸುವಂತಾಗಿದೆ. ಇದನ್ನೂ ಓದಿ: ಫುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿದ್ದ ಮತೀನ್‌ ಬಾಂಬ್‌ ಸ್ಫೋಟದ ಸೂತ್ರಧಾರ!

  • ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವನೆ – ಇದು ಪಿಕ್ನಿಕ್‌ ಸ್ಪಾಟ್‌ ಅಲ್ಲ ಎಂದು ಕೋರ್ಟ್‌ ಗರಂ

    ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವನೆ – ಇದು ಪಿಕ್ನಿಕ್‌ ಸ್ಪಾಟ್‌ ಅಲ್ಲ ಎಂದು ಕೋರ್ಟ್‌ ಗರಂ

    ಚೆನ್ನೈ: ಹಿಂದೂ ದೇವಾಲಯಗಳಿಗೆ (Hindu Temple) ಹಿಂದೂಯೇತರು ಪ್ರವೇಶಿಸಿ ಶಿಷ್ಟಾಚಾರ ಉಲ್ಲಂಘಿಸಿರುವ ಬಗ್ಗೆ ಮದ್ರಾಸ್‌ ಹೈಕೋರ್ಟ್‌ (Madras High Court) ಕಿಡಿಕಾರಿದೆ. ಇದು ಪಿಕ್ನಿಕ್‌ ಸ್ಪಾಟ್‌ ಅಲ್ಲ ಎಂದು ಎಚ್ಚರಿಸಿದೆ.

    ದೇಗುಲಗಳಲ್ಲಿರುವ ‘ಕೋಡಿಮರಂ’ (ಧ್ವಜಸ್ತಂಭ) ಪ್ರದೇಶದಿಂದ ಆಚೆಗೆ ಹಿಂದೂಯೇತರರಿಗೆ ಅನುಮತಿ ಇಲ್ಲ ಎಂಬ ಬೋರ್ಡ್‌ಗಳನ್ನು ಎಲ್ಲಾ ಹಿಂದೂ ದೇವಾಲಯಗಳಲ್ಲಿ ಅಳವಡಿಸುವಂತೆ ಮದ್ರಾಸ್ ಹೈಕೋರ್ಟ್ ಮಂಗಳವಾರ ತಮಿಳುನಾಡು ಧಾರ್ಮಿಕ ದತ್ತಿ ಇಲಾಖೆಗೆ ನಿರ್ದೇಶನ ನೀಡಿದೆ. ಹಿಂದೂಗಳು ಕೂಡ ವೃತ್ತಿ ಮತ್ತು ಧಾರ್ಮಿಕ ಅಭ್ಯಾಸ ಮಾಡುವ ಮೂಲಭೂತ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಿದೆ. ಇದನ್ನೂ ಓದಿ: ಬೆಂಗಳೂರಿನ ಪಿಜಿಗಳಿಗೆ ಪೊಲೀಸ್ ಇಲಾಖೆಯಿಂದ ಹೊಸ ಮಾರ್ಗಸೂಚಿ – ಐಡಿ ಕಾರ್ಡ್ ವಿತರಣೆಗೆ ಚಿಂತನೆ

    ಅರುಲ್ಮಿಗು ಪಳನಿ ದಂಡಾಯುತಪಾಣಿ ಸ್ವಾಮಿ ದೇವಸ್ಥಾನ ಮತ್ತು ಅದರ ಉಪ ದೇವಾಲಯಗಳಿಗೆ ಹಿಂದೂಗಳಿಗೆ ಮಾತ್ರ ಅನುಮತಿ ನೀಡುವಂತೆ ಪ್ರತಿವಾದಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಡಿ ಸೆಂಥಿಲ್‌ಕುಮಾರ್ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಎಸ್ ಶ್ರೀಮತಿ ಈ ತೀರ್ಪು ನೀಡಿದ್ದಾರೆ. ಎಲ್ಲಾ ಪ್ರವೇಶ ದ್ವಾರಗಳಲ್ಲಿ ಆ ನಿಟ್ಟಿನಲ್ಲಿ ಡಿಸ್‌ಪ್ಲೇ ಬೋರ್ಡ್‌ಗಳನ್ನು ಸ್ಥಾಪಿಸಬೇಕು ಎಂದು ಅವರು ಸೂಚಿಸಿದ್ದಾರೆ.

    ದಿಂಡಿಗಲ್ ಜಿಲ್ಲೆಯ ಪಳನಿಯಲ್ಲಿ ಪ್ರಸಿದ್ಧ ಮುರುಗನ್ ದೇವಾಲಯವಿದೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯು ತಮಿಳುನಾಡಿನಲ್ಲಿ ಹಿಂದೂ ದೇವಾಲಯಗಳನ್ನು ನಿರ್ವಹಿಸುತ್ತದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ – ರಾಜ್ಯದ ಹಲವೆಡೆ ಮನೆ, ಕಚೇರಿಗಳ ಮೇಲೆ ದಾಳಿ

    ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ದೇವಸ್ಥಾನಗಳ ಪ್ರವೇಶ ದ್ವಾರ, ಧ್ವಜಸ್ತಂಭದ ಬಳಿ ಮತ್ತು ದೇಗುಲದ ಪ್ರಮುಖ ಸ್ಥಳಗಳಲ್ಲಿ ‘ಕೋಡಿಮಾರಂ ನಂತರ ದೇವಸ್ಥಾನದೊಳಗೆ ಹಿಂದೂಯೇತರರಿಗೆ ಪ್ರವೇಶವಿಲ್ಲ’ ಎಂಬ ಫಲಕಗಳನ್ನು ಅಳವಡಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.

    ಹಿಂದೂ ಧರ್ಮದಲ್ಲಿ ನಂಬಿಕೆಯಿಲ್ಲದ ಹಿಂದೂಯೇತರರಿಗೆ ಅವಕಾಶ ನೀಡಬಾರದು. ಯಾವುದೇ ಹಿಂದೂ ಅಲ್ಲದವರು ದೇವಸ್ಥಾನಗಳಿಗೆ ಭೇಟಿ ನೀಡುವುದಾದರೆ, ಒಂದಷ್ಟು ಒಪ್ಪಂದಗಳನ್ನು ಮಾಡಿಕೊಳ್ಳಬೇಕು. ದೇವರಲ್ಲಿ ನಂಬಿಕೆ ಮತ್ತು ಹಿಂದೂ ಧರ್ಮದ ಪದ್ಧತಿಗಳು ಮತ್ತು ಆಚರಣೆಗಳನ್ನು ಅನುಸರಿಸುತ್ತಾರೆಯೇ? ದೇವಾಲಯದ ಪದ್ಧತಿಗಳಿಗೆ ಬದ್ಧರಾಗುತ್ತಾರೆಯೇ? ಅಂತಹ ಕಾರ್ಯದಲ್ಲಿ ಹಿಂದೂಯೇತರರು ದೇವಾಲಯಕ್ಕೆ ಭೇಟಿ ನೀಡುವುದಾದರೆ ಅನುಮತಿ ಕೊಡಬಹುದು ಎಂದು ಕೋರ್ಟ್‌ ಹೇಳಿದೆ. ಇದನ್ನೂ ಓದಿ: ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿ

    ಅರುಳ್ಮಿಘು ಬ್ರಹದೀಶ್ವರ ದೇವಸ್ಥಾನವನ್ನು ಅನ್ಯ ಧರ್ಮದ ವ್ಯಕ್ತಿಗಳ ಗುಂಪೊಂದು ಪಿಕ್ನಿಕ್ ಸ್ಪಾಟ್ ಎಂದು ಪರಿಗಣಿಸಿದೆ. ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವಿಸಿದೆ ಎಂದು ವರದಿಯಾಗಿದೆ. ಅಲ್ಲದೇ ಇತರ ಧರ್ಮದ ವ್ಯಕ್ತಿಗಳು ಮಧುರೈನ ಅರುಲ್ಮಿಘು ಮೀನಾಕ್ಷಿ ಸುಂದರೇಶ್ವರ ದೇವಸ್ಥಾನ ಗರ್ಭಗುಡಿ ಮತ್ತು ಗರ್ಭಗುಡಿಯ ಬಳಿ “ತಮ್ಮ ಪವಿತ್ರ ಪುಸ್ತಕ” ದೊಂದಿಗೆ ಪ್ರವೇಶಿಸಿದ್ದರು. ಅಲ್ಲಿ ತಮ್ಮ ಪ್ರಾರ್ಥನೆಗಳನ್ನು ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಕೂಡ ವರದಿಯಾಗಿದೆ ಎಂದು ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

  • ಧಾರ್ಮಿಕ ಕಟ್ಟಡ ತೆರವು ವಿಚಾರ, ಅಧಿಕಾರಿಗಳು ಒತ್ತಡದಲ್ಲಿ ಅಸಹಾಯಕರಾಗಿದ್ದಾರೆ: ಹರ್ಷವರ್ಧನ್

    ಧಾರ್ಮಿಕ ಕಟ್ಟಡ ತೆರವು ವಿಚಾರ, ಅಧಿಕಾರಿಗಳು ಒತ್ತಡದಲ್ಲಿ ಅಸಹಾಯಕರಾಗಿದ್ದಾರೆ: ಹರ್ಷವರ್ಧನ್

    ಮೈಸೂರು: ಧಾರ್ಮಿಕ ಕಟ್ಟಡ ತೆರವು ವಿಚಾರ, ಅಧಿಕಾರಿಗಳು ಒತ್ತಡದಲ್ಲಿ ಅಸಹಾಯಕರಾಗಿದ್ದಾರೆ ಎಂದು ನಂಜನಗೂಡು ಬಿಜೆಪಿ ಶಾಸಕ ಹರ್ಷವರ್ಧನ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರ್ಮಿಕ ಕಟ್ಟಡ ವಿಚಾರವಾಗಿ ಸಿಎಸ್ ಒತ್ತಡ ಹೇರುತ್ತಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ನ್ಯಾಯಾಲಯದ ಆದೇಶವನ್ನು ತಪ್ಪಾಗಿ ಅರ್ಥೈಸಿ ಹೇಳಿರಬಹುದು. ಸುಪ್ರೀಂಕೋರ್ಟ್ ಆದೇಶ ಪಾಲನೆ ಅನಿವಾರ್ಯವಾಗಿದೆ. ನಂಜನಗೂಡು ದೇವಸ್ಥಾನ ತೆರವು ವಿಚಾರ ನನ್ನ ಗಮನಕ್ಕೆ ತಂದು ತೆರವುಗೊಳಿಸಲಾಗಿದೆ ಎಂದರು. ಇದನ್ನೂ ಓದಿ: ರಾಜಕೀಯದಲ್ಲಿ ಅಧಿಕಾರ ಶಾಶ್ವತವಲ್ಲ: ಲಕ್ಷ್ಮಣ್ ಸವದಿ 

    ಸಿದ್ದರಾಮಯ್ಯ ಟ್ವೀಟ್ ನನಗೆ ಬೇಸರ ತರಿಸಿದೆ. ಬಹುಶಃ ಇಂತಹ ಬೇಜವಾಬ್ದಾರಿ ಹೇಳಿಕೆ ಅವರದ್ದಾಗಿರುವುದಿಲ್ಲ. ಅವರ ಹೆಸರಲ್ಲಿ ಬೇರೆ ಯಾರೋ ಟ್ವೀಟ್ ಮಾಡಿರಬಹುದು. ಸಿಎಂ ಆಗಿದ್ದವರು ಅವರಿಗೆ ನ್ಯಾಯಾಲಯದ ಆದೇಶದ ಅರಿವಿದೆ. ಕೇವಲ ನಂಜನಗೂಡು ದೇವಸ್ಥಾನ ತೆರವು ವಿಚಾರ ಮಾತ್ರ ಹೈಲೈಟ್ ಮಾಡಲಾಗುತ್ತಿದೆ. ಇದರಿಂದ ನನಗೆ ತುಂಬಾ ನೋವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಹಿಂದೂ ದೇವಸ್ಥಾನ ಟಾರ್ಗೆಟ್ ಮಾಡಿ ಧ್ವಂಸ ಮಾಡಲಾಗುತ್ತಿದೆ: ಪ್ರತಾಪ್ ಸಿಂಹ

    ಹಿಂದೂ ದೇಗುಲಗಳ ರಕ್ಷಣೆಗೆ ಪ್ರತ್ಯೇಕ ಕಾಯ್ದೆಯ ಅವಶ್ಯಕತೆ ಇದೆ. ಬೇರೆ ಧರ್ಮಗಳಲ್ಲಿ ಪ್ರತ್ಯೇಕ ಕಾಯ್ದೆಯಿದೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಬೇಕಿದೆ. ಆಗ ಮಾತ್ರ ದೇಗುಲಗಳ ರಕ್ಷಣೆ ಸಾಧ್ಯ. ಈ ಬಗ್ಗೆ ಶಾಸಕರ ಸಭೆಯಲ್ಲಿ ನಾನು ಸಿಎಂ ಗಮನಕ್ಕೆ ತರುತ್ತೇನೆ. ನಾನು ಸಾಕಷ್ಟು ದೇಗುಲಗಳನ್ನು ಉಳಿಸಿದ್ದೇನೆ ಎಂದು ತಿಳಿಸಿದರು.