Tag: Hindutva

  • ಹಿಂದುತ್ವ ಎಂಬುದು ರಾಜಕೀಯವಾಗಿದೆ: ರಮ್ಯಾ

    ಹಿಂದುತ್ವ ಎಂಬುದು ರಾಜಕೀಯವಾಗಿದೆ: ರಮ್ಯಾ

    ಬೆಂಗಳೂರು: ಹಿಂದುತ್ವ ಮತ್ತು ಹಿಂದೂಯಿಸಂ ಎರಡೂ ಒಂದೇ ಅಲ್ಲ ಎಂದು ಸ್ಯಾಂಡಲ್‍ವುಡ್ ನಟಿ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

    ಹಿಂದುತ್ವ ಮತ್ತು ಹಿಂದೂಯಿಸಂ ಎರಡೂ ಒಂದೇ ಅಲ್ಲ. ಹಿಂದೂಯಿಸಂ ಎಂಬುದು ರಾಜಕೀಯವಲ್ಲ. ಆದರೆ ಹಿಂದುತ್ವ ಎಂಬುದು ರಾಜಕೀಯವಾಗಿದೆ. ಹಿಂದೂಯಿಸಂ ಎಂದರೆ ಎಲ್ಲರನ್ನೂ ಒಳಗೊಳ್ಳುವಂತದ್ದು ಮತ್ತು ಎಲ್ಲರಿಗೂ ಪ್ರೀತಿ ಹಂಚುವಂತದ್ದು. ಅದಕ್ಕೆ ವಿರುದ್ಧವಾದ್ದದ್ದೇ ಹಿಂದುತ್ವ. ನಿಜವಾದ ಹಿಂದುಗಳಿಗೆ ವ್ಯತ್ಯಾಸ ತಿಳಿಯುತ್ತದೆ ಎಂದು ರಮ್ಯಾ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

     

    View this post on Instagram

     

    A post shared by Ramya/Divya Spandana (@divyaspandana)

    ನಮ್ಮ ಪುರಾತನ ಹಿಂದೂ ಧರ್ಮವು ರಾಜಕಾರಣಿಗಳಿಂದ ಒಂದು ರಾಜಕೀಯ ಸಾಧನವಾಗಿ ಬಳಕೆ ಆಗುತ್ತಿರುವುದನ್ನು ನೋಡಲು ನೋವಾಗುತ್ತದೆ. ನಾನು ಹಿಂದೂ ಅಷ್ಟೇ. ಯಾವ ಪಕ್ಷ ಕೂಡ ನನ್ನ ಹಿಂದೂಯಿಸಂ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ ಎಂದು ರಮ್ಯಾ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ರಮ್ಯಾ ಈ ಪೋಸ್ಟ್ ಮಾಡುತ್ತಿದ್ದಂತೆ ನೆಟ್ಟಿಗರು ಕಾಮೆಂಟ್ ಮಾಡುತ್ತಾ ತಮ್ಮ ಅಭಿಪ್ರಾಯವನ್ನು ಸೂಚಿಸುತ್ತಿದ್ದಾರೆ. ಕೆಲವರು ಮೆಚ್ಚುಗೆ ಸೂಚಿಸಿದ್ದಾರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ನಿಮ್ಮಿಂದ ನಾವು ಹಿಂದೂ ಧರ್ಮದ ಬಗ್ಗೆ ಪಾಠ ಕಲಿಯಬೇಕಾಗಿಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ:   ಹಿಂದೂ ಧರ್ಮ, ಹಿಂದುತ್ವ ಬೇರೆ ಬೇರೆ: ರಾಹುಲ್ ಗಾಂಧಿ

    2 ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾಂಗ್ರೆಸ್ ಪಕ್ಷದ ಡಿಜಿಟಲ್ ಅಭಿಯಾನವಾದ ಜನ್ ಜಾಗರಣ ಅಭಿಯಾನದ (digital campaign Jan Jagran Abhiyan) ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಹಿಂದೂ ಧರ್ಮ ಮತ್ತು ಹಿಂದುತ್ವದ ನಡುವಿನ ವ್ಯತ್ಯಾಸವೇನು? ಅವು ಒಂದೇ ಆಗಿರಬಹುದೇ? ಒಂದೇ ಆಗಿದ್ದರೆ, ಏಕೆ ಒಂದೇ ಹೆಸರಿಲ್ಲ? ವಿಭಿನ್ನ ವಿಷಯಗಳಾಗಿವೆ ಎಂದು ಹೇಳಿದ್ದರು. ಇದೇ ವಿಚಾರವಾಗಿ ರಮ್ಯಾ ಕೂಡಾ ಮಾತನಾಡಿದ್ದಾರೆ. ಇದನ್ನೂ ಓದಿ:  ಚೀನಾ ಕುರಿತು ಸರ್ಕಾರ ಯಾವುದೇ ಕಾರ್ಯತಂತ್ರ ಹೊಂದಿಲ್ಲ: ರಾಹುಲ್ ಗಾಂಧಿ

    ರಮ್ಯಾ ಸಿನಿಮಾ ಕ್ಷೇತ್ರದಿಂದ ದೂರವಾಗಿದ್ದಾರೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಮಾತ್ರ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಕೆಲವು ವಿಚಾರವಾಗಿ ತಮ್ಮ ಅನಿಸಿಕೆಗಳನ್ನು ತಮ್ಮದೇ ಆಗಿರುವ ರೀತಿಯನ್ನು ಅಭಿಮಾನಿಗಳ ಜೊತೆಗೆ ಹಂಚಿಕೊಳ್ಳುತ್ತಿರುತ್ತಾರೆ.

  • ಹಿಂದೂ ಧರ್ಮ, ಹಿಂದುತ್ವ ಬೇರೆ ಬೇರೆ: ರಾಹುಲ್ ಗಾಂಧಿ

    ಹಿಂದೂ ಧರ್ಮ, ಹಿಂದುತ್ವ ಬೇರೆ ಬೇರೆ: ರಾಹುಲ್ ಗಾಂಧಿ

    ನವದೆಹಲಿ: ಹಿಂದೂ ಧರ್ಮ, ಹಿಂದುತ್ವ ಎರಡು ಬೇರೆ ಬೇರೆ ವಿಷಯಗಳು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

    ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾಂಗ್ರೆಸ್ ಪಕ್ಷದ ಡಿಜಿಟಲ್ ಅಭಿಯಾನವಾದ ಜನ್ ಜಾಗರಣ ಅಭಿಯಾನದ (digital campaign Jan Jagran Abhiyan) ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಹಿಂದೂ ಧರ್ಮ ಮತ್ತು ಹಿಂದುತ್ವದ ನಡುವಿನ ವ್ಯತ್ಯಾಸವೇನು? ಅವು ಒಂದೇ ಆಗಿರಬಹುದೇ? ಒಂದೇ ಆಗಿದ್ದರೆ, ಏಕೆ ಒಂದೇ ಹೆಸರಿಲ್ಲ? ವಿಭಿನ್ನ ವಿಷಯಗಳಾಗಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಚೀನಾ ಕುರಿತು ಸರ್ಕಾರ ಯಾವುದೇ ಕಾರ್ಯತಂತ್ರ ಹೊಂದಿಲ್ಲ: ರಾಹುಲ್ ಗಾಂಧಿ

    ಕಾಂಗ್ರೆಸ್ ಪಕ್ಷದ ಸಿದ್ಧಾಂತ ಜೀವಂತವಾಗಿದೆ ಮತ್ತು ರೋಮಾಂಚಕವಾಗಿದೆ. ಆದರೆ ಅದನ್ನು ಮರೆ ಮಾಡಲಾಗಿದೆ. ಇಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ( RSS) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) (Bharatiya Janata Party) ದ್ವೇಷದ ಸಿದ್ಧಾಂತವು ನಮಗೆ ಇಷ್ಟವಾಗಲಿ ಅಥವಾ ಇಲ್ಲದಿರಲಿ. ಕಾಂಗ್ರೆಸ್ ಪಕ್ಷದ ಪ್ರೀತಿ, ವಾತ್ಸಲ್ಯ ಮತ್ತು ರಾಷ್ಟ್ರೀಯತೆಯ ಸಿದ್ಧಾಂತವನ್ನು ನಾವು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಡೆಸರ್ಟ್ ಸಫಾರಿ ಬಳಿಕ ಬಿಕಿನಿಯಲ್ಲಿ ಜಾನ್ವಿ, ಖುಷಿ ಕಪೂರ್ ಮೋಜು, ಮಸ್ತಿ

    RAHUL GANDHI

    ಕಾಂಗ್ರೆಸ್ ಪಕ್ಷವು ಜನರಲ್ಲಿ ಸಿದ್ಧಾಂತವನ್ನು ಆಕ್ರಮಣಕಾರಿಯಾಗಿ ಪ್ರಚಾರ ಮಾಡದ ಕಾರಣ ಪಕ್ಷದ ಸಿದ್ಧಾಂತವು ಮಬ್ಬಾಗಿದೆ ಎಂದು ವಿವರಿಸಿದರು. ಕೇಂದ್ರದ ಬಡವರ ವಿರೋಧಿ ನೀತಿಗಳನ್ನು ಎತ್ತಿ ಹಿಡಿಯಲು, ಈ ಬಗ್ಗೆ ಜಾಗೃತಿ ಮೂಡಿಸಲು ಕಾಂಗ್ರೆಸ್ ಪಕ್ಷವು ನವೆಂಬರ್ 14ರಿಂದ ನವೆಂಬರ್ 29ರ ನಡುವೆ ಜನ ಜಾಗರಣ ಅಭಿಯಾನ ಎಂಬ ಹೆಸರಿನಲ್ಲಿ ರಾಷ್ಟ್ರವ್ಯಾಪಿ ಜನಜಾಗೃತಿ ಕಾರ್ಯಕ್ರಮವನ್ನು ನಡೆಸಲಿದೆ. ಇದನ್ನೂ ಓದಿ:  ಪತ್ನಿಗಾಗಿ ಅಪ್ಪು ಹೇಳುತ್ತಿದ್ದ ಹಾಡು ಯಾವುದು ಗೊತ್ತಾ?

  • ಬಿಜೆಪಿ, ಹಿಂದೂ ಸಂಘಟನೆಗಳ ಮೇಲಿನ ಕೇಸ್ ವಾಪಸ್

    ಬಿಜೆಪಿ, ಹಿಂದೂ ಸಂಘಟನೆಗಳ ಮೇಲಿನ ಕೇಸ್ ವಾಪಸ್

    ಬೆಂಗಳೂರು: ಬಿಜೆಪಿ ಮತ್ತು ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲಿನ ಕೇಸುಗಳನ್ನು ವಾಪಸ್ ಪಡೆಯಲು ಪಡೆಯಲು ಸರ್ಕಾರ ಮುಂದಾಗಿದೆ.

    ನಿನ್ನೆ ಗೃಹ ಸಚಿವರನ್ನು ಭೇಟಿಯಾಗಿದ್ದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲಿನ ಕೇಸನ್ನು ವಾಪಸ್ ಪಡೆಯುವಂತೆ ಮನವಿ ಸಲ್ಲಿಸಿದ್ದರು.

     

    ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಕೆಲಸ ಸಂಘಟನೆಗಳ ಮೇಲೆ ಹಾಕಲಾಗಿರುವ ರಾಜಕೀಯ ಪ್ರೇರಿತ ಪ್ರಕರಣಗಳನ್ನು ಹಿಂಪಡೆಯುವುದಾಗಿ ತಿಳಿಸಿದರು. ಇದನ್ನೂ ಓದಿ : ಶೂಟಿಂಗ್ ವೇಳೆ ಬಿದ್ದು ಗಾಯಗೊಂಡ ಪ್ರಕಾಶ್ ರೈ- ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್‍ಗೆ ಶಿಫ್ಟ್ 

    ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಗೋವುಗಳ ವಿಚಾರದಲ್ಲಿ ಹಾಕಿದ್ದ ಪ್ರಕರಣಗಳು ಕೂಡ ಇದರಲ್ಲಿ ಇರಲಿವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ತಿಳಿಸಿದ್ದಾರೆ.

  • ಈ ದ್ವೇಷ ಹಿಂದುತ್ವದ ಕೊಡುಗೆ: ಭಾಗವತ್ ಹೇಳಿಕೆಗೆ ಓವೈಸಿ ಕಿಡಿ

    ಈ ದ್ವೇಷ ಹಿಂದುತ್ವದ ಕೊಡುಗೆ: ಭಾಗವತ್ ಹೇಳಿಕೆಗೆ ಓವೈಸಿ ಕಿಡಿ

    ಹೈದರಾಬಾದ್: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಮೋಹನ್ ಭಾಗವತ್ ಹೇಳಿಕೆ ಎಐಎಂಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಓವೈಸಿ, ಈ ದ್ವೇಷ ಹಿಂದುತ್ವದ ಕೊಡುಗೆ ಅಂತ ಬರೆದುಕೊಂಡಿದ್ದಾರೆ.

    ಮೋಹನ್ ಭಾಗವತ್, ವಧೆ ಮಾಡುವವರು ಹಿಂದೂತ್ವದ ವಿರೋಧಿಗಳು ಎಂದು ಹೇಳುತ್ತಾರೆ. ಆದ್ರೆ ಇವರಿಗೆ ಹಸು ಮತ್ತು ಎಮ್ಮೆಯ ನಡುವಿನ ವ್ಯತ್ಯಾಸ ಗೊತ್ತಿಲ್ಲ. ಆದ್ರೆ ಇವರಿಗೆ ಜುನೈದ್, ಅಖ್ಲಾಕ್, ಪಹಲ, ರಕ್ಬರ್, ಅಲಿಮುದ್ದೀನ್ ಹೆಸರು ನೆನಪಿರಬೇಕು. ಈ ಪ್ರಕರಣದ ಅಪರಾಧಿಗಳಿಗೆ ಹಿಂದುತ್ವ ಸರ್ಕಾರ ಬೆನ್ನಲುಬಾಗಿ ನಿಂತಿದೆ ಎಂದು ಓವೈಸಿ ಗಂಭೀರ ಆರೋಪ ಮಾಡಿದ್ದಾರೆ.

    ಅಲಿಮುದ್ದೀನ್ ಕೊಲೆಗಾರರಿಗೆ ಕೇಂದ್ರ ಸಚಿವರು ಹಾರ ಹಾಕಿ ಸನ್ಮಾನ ಮಾಡ್ತಾರೆ. ಅಖ್ಲಾಕ್ ನ ಕೊಲೆಗಾರರ ಶವದ ಮೇಲೆ ತ್ರಿವರ್ಣ ಧ್ವಜ ಹಾಕಲಾಗುತ್ತದೆ. ಇನ್ನೂ ಆಶಿಫ್ ಮೇಲೆ ಹಲ್ಲೆ ನಡೆಸಿದರವ ರಕ್ಷಣೆಗಾಗಿ ಮಹಾ ಪಂಚಾಯ್ತಿ ನಡೆಸಲಾಗುತ್ತದೆ. ಅಲ್ಲಿಯ ಬಿಜೆಪಿಯ ವಕ್ತಾರರು, ಏನು ನಾವು ಕೊಲೆಯೂ ಮಾಡುವಂತಿಲ್ವಾ ಎಂದು ಪ್ರಶ್ನೆ ಮಾಡುತ್ತಾರೆ. ಹೇಡಿತನ, ಹಿಂಸೆ, ಕೊಲೆ ಇದು ಗೋಡ್ಸೆ ಹಿಂದುತ್ವದ ಅವಿಭಾಜ್ಯ ಅಂಗ. ಮುಸ್ಲಿಮರನ್ನು ಕೊಲ್ಲುತ್ತಿರೋದು ಇದೇ ಹಿಂದುತ್ವದ ಭಾಗ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ ಓವೈಸಿ ಕಾರ್ಯಕ್ರಮದ ವೇದಿಕೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದ ಯುವತಿ

    ಮೋಹನ್ ಭಾಗವತ್ ಹೇಳಿದ್ದೇನು?
    ಭಾನುವಾರ ಪುಸ್ತರ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ್ದ ಮೋಹನ್ ಭಾವಗತ್, ಮುಸ್ಲಿಂರು ಇಲ್ಲಿ ಇರುವಂತಿಲ್ಲ ಹೇಳುವ ವ್ಯಕ್ತಿ ಹಿಂದೂ ಅಲ್ಲ. ಹಸು ಪವಿತ್ರ ಜಾನುವಾರ. ಅದರ ಹೆಸರಿನಲ್ಲಿ ಬೇರೆಯವರರನ್ನು ಕೊಲ್ಲುವ ವ್ಯಕ್ತಿಗಳು ಹಿಂದೂತ್ವದ ವಿರೋಧಿಗಳು. ಇಂತಹ ಪ್ರಕರಣದಲ್ಲಿ ಕಾನೂನು ತನ್ನ ಕೆಲಸ ಮಾಡುತ್ತದೆ. ಯಾವುದೇ ಧರ್ಮದವರು ಇರಲಿ. ಎಲ್ಲ ಭಾರತೀಯರು ಡಿಎನ್‍ಎ ಒಂದೇ ಆಗಿದೆ ಅಂತ ಹೇಳಿದ್ದರು. ಇದನ್ನೂ ಓದಿ: ಲವ್ ಜಿಹಾದ್ ಕಾನೂನಿನಲ್ಲಿ ಯಾವ ಸಮುದಾಯದ ಹಿತಾಸಕ್ತಿ ಇದೆ- ಓವೈಸಿ ಪ್ರಶ್ನೆ

  • ಹಿಂದುತ್ವ ಸಿದ್ಧಾಂತವು ದೇಶವನ್ನೇ ವಿಭಜಿಸುತ್ತಿದೆ – ಶಶಿ ತರೂರ್ ಟ್ವೀಟ್‍ಗೆ ಬಿಜೆಪಿ ಗರಂ

    ಹಿಂದುತ್ವ ಸಿದ್ಧಾಂತವು ದೇಶವನ್ನೇ ವಿಭಜಿಸುತ್ತಿದೆ – ಶಶಿ ತರೂರ್ ಟ್ವೀಟ್‍ಗೆ ಬಿಜೆಪಿ ಗರಂ

    ನವದೆಹಲಿ: ಹಿಂದುತ್ವ ಸಿದ್ಧಾಂತವು ದೇಶವನ್ನೇ ವಿಭಜಿಸುತ್ತಿದೆ ಎಂದು ಟ್ವೀಟ್ ಮಾಡಿದ್ದ ಕಾಂಗ್ರೆಸ್ ಮುಖಂಡ ಶಶಿ ತರೂರ್ ವಿರುದ್ಧ ಬಿಜೆಪಿ ಹಾಗೂ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಹಿಂದಿ ಮಾತನಾಡಲು ಬರಲಿಲ್ಲವೆಂದು ಮುಂಬೈ ವಿಮಾನ ನಿಲ್ದಾಣದ ಇಮೆಗ್ರೇಶನ್ ಕೌಂಟರ್ ಅಧಿಕಾರಿಯೊಬ್ಬ ತಮಿಳುನಾಡು ವಿದ್ಯಾರ್ಥಿಗೆ ಅವಮಾನ ಮಾಡಿದ್ದ. ಈ ಸುದ್ದಿಯನ್ನು ಮುಖ್ಯವಾಗಿಟ್ಟುಕೊಂಡು ಶಶಿ ತರೂರ್ ಅವರು ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?:
    ‘ಹಿಂದಿ, ಹಿಂದೂ, ಹಿಂದುತ್ವದ ಸಿದ್ಧಾಂತವು ದೇಶವನ್ನೇ ವಿಭಸುತ್ತಿದೆ. ನಮಗೆ ಏಕತೆ ಬೇಕೇ ಹೊರತು ಏಕರೂಪವಲ್ಲ’ ಎಂದು ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.

    ಶಶಿ ತರೂರ್ ಅವರ ಟ್ವೀಟ್ ನೋಡಿದ ನೆಟ್ಟಿಗರು ತಿರುಗೇಟು ನೀಡಿದ್ದಾರೆ. ‘ಹಿಂದುತ್ವ ದೇಶವನ್ನು ಒಗ್ಗೂಡಿಸಲು ಶ್ರಮಿಸುತ್ತಿದೆ. ಆದರೆ ಕಾಂಗ್ರೆಸ್ ನಾಯಕರು ಹಿಂದುತ್ವವನ್ನು ವಿರೋಧಿಸುತ್ತಿದ್ದಾರೆ. ಇದಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರೇರಣೆ ನೀಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ಸಂಬಿತ್ ಪಾತ್ರಾ ಟಾಂಗ್ ಕೊಟ್ಟಿದ್ದಾರೆ.

    ಹಿಂದಿ ಒಂದು ಭಾಷೆ. ಅದು ಹಿಂದುತ್ವ ಹಾಗೂ ಹಿಂದೂ ಸಿದ್ಧಾಂತದ ಜೊತೆಗೆ ಹೊಂದಿಕೊಂಡಿಲ್ಲ. ಹಾಗಾದರೆ ಹಿಂದಿ ಮಾತನಾಡದ ಜನರ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು? ನಿಮಗೆ ಇಸ್ಲಾಂ ಹಾಗೂ ಇಸ್ಲಾಮಿಸಂ ಅಂಥ ಟ್ವೀಟ್ ಮಾಡಲು ಆಗುತ್ತದೆಯೇ ಎಂದು ಸೀಮಾ ಚೌಧರಿ ಎಂಬವರು ಟ್ವೀಟ್ ಮಾಡಿದ್ದಾರೆ.

     

  • ಬುದ್ಧಿಯನ್ನು ಮಾರಾಟಕ್ಕೆ ಇಟ್ಟವರು ವಿಚಾರವಾದಿಗಳು – ಬಣ್ಣ ಕಳಚಿದ್ರೆ ಅವ್ರ ಮುಖ ನೋಡಲು ಸಾಧ್ಯವಿಲ್ಲ: ಸಚಿವ ಹೆಗಡೆ

    ಬುದ್ಧಿಯನ್ನು ಮಾರಾಟಕ್ಕೆ ಇಟ್ಟವರು ವಿಚಾರವಾದಿಗಳು – ಬಣ್ಣ ಕಳಚಿದ್ರೆ ಅವ್ರ ಮುಖ ನೋಡಲು ಸಾಧ್ಯವಿಲ್ಲ: ಸಚಿವ ಹೆಗಡೆ

    ಬೆಂಗಳೂರು: ಎಲ್ಲೊ ಓದಿ, ಕಾಪಿ ಪೇಸ್ಟ್ ಮಾಡಿ ಪಿಎಚ್ ಡಿ ಪಡೆದ ವ್ಯಕ್ತಿಗಳ ರೀತಿ ಸಾರ್ವಕರ್ ಅಲ್ಲ. ತಮ್ಮ ಭಾವನೆ, ಅನಿಸಿಕೆಗಳನ್ನು ಸಾರ್ವಕರ್ ಬರೆದಿದ್ದಾರೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.

    ನಗರದ ಸುಚಿತ್ರಾ ಕಲಾ ಕೇಂದ್ರದಲ್ಲಿ ಆಯೋಜಿಸಿದ್ದ ಬಿ.ಬಿ.ಹರೀಶ್ ಅನುವಾದ `ಹಿಂದುತ್ವ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ವಿಚಾರವಾದಿಗಳು ತಾವು ಹೇಳಿದ್ದೇ ಸರಿ ಎಂದು ವಾದಿಸುತ್ತಾರೆ. ಅವರು ಬುದ್ಧಿಯನ್ನು ಮಾರಾಟಕ್ಕೆ ಇಟ್ಟಿದ್ದಾರೆ. ಅಂತಹ ಮೊಂಡು ಸ್ವಭಾವದಲ್ಲಿ ನಾನು ಬೆಳೆದಿಲ್ಲ, ಒಳ್ಳೆಯದನ್ನು ಸ್ವೀಕರಿಸುವುದು ನನಗೆ ಗೊತ್ತು ಎಂದು ಹೇಳಿದರು.

    ವಿಚಾರವಾದಿಗಳು ನಾಟಕೀಯ ಜೀವನ ಮಾಡುತ್ತಿದ್ದಾರೆ. ಅವರು ಜಾತ್ಯತೀತ ಬಣ್ಣ ಹಚ್ಚಿಕೊಂಡು ಬಣ್ಣ ಕಳಚಿದ ಮೇಲೆ ಅವರ ಮುಖ ನೋಡಲು ಸಾಧ್ಯವಾಗುವುದಿಲ್ಲ. ಕೆಲವು ದಿನ ವಿದೇಶದಲ್ಲಿದ್ದು, ಮತ್ತೇ ಭಾರತಕ್ಕೆ ಬಂದು ದೇಶದ ಬಗ್ಗೆ ಕೀಳಾಗಿ ಮಾತನಾಡುತ್ತಾರೆ. ವಿದೇಶದಲ್ಲಿ ಕಲಿತ ನಾಲ್ಕು ಪದಗಳ ಬಳಕೆಯಲ್ಲಿಯೇ ದೇಶವನ್ನು ತೆಗಳಿ ಮೆಚ್ಚುಗೆ ಪಡೆಯಲು ಕೆಲವರು ತುಡಿಯುತ್ತಿರುತ್ತಾರೆ ಎಂದು ವ್ಯಂಗ್ಯವಾಡಿದರು.

    ಹಿಂದೂಗಳು ಎಲ್ಲಿಂದಲೋ ವಲಸೆ ಬಂದವರಲ್ಲ. ಸಂಸ್ಕೃತಿ, ಇತಿಹಾಸ ಗೊತ್ತಿಲ್ಲದ ವಿಚಾರವಾದಿಗಳು ಅವರಿಗೆ ಬೇಕಾದ ಹಾಗೇ ಮಾತನಾಡುತ್ತಾರೆ. ಹಿಂದುತ್ವ ನಾಲ್ಕು ಜನ ಕವಿಗಳು ಬರೆದ ಸಾಹಿತ್ಯವಲ್ಲ. ಹಿಂದುತ್ವಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ, ಹಿಂದುತ್ವ ರಾಜಕಾರಣದ ಫುಟ್ಬಾಲ್ ಅಲ್ಲ ಎಂದರು.

    ಹಿಂದುತ್ವ ರಾತ್ರಿ ಬಿದ್ದ ಕನಸು ಅಲ್ಲ, ಅದು ಬದುಕಿನ ಸಿದ್ಧಾಂತವಾಗಿದೆ. ಸೊನ್ನೆ ಇಲ್ಲದೆ ಜಗತ್ತು ಬದಲಾವಣೆ ಆಗುತ್ತಿರಲಿಲ್ಲ ಎಂದು ಐನ್‍ಸ್ಟೀನ್ ಹೇಳುತ್ತಾರೆ. ಹಾಗೇ ನಾವು ಹಿಂದುತ್ವದ ಬಗ್ಗೆ ಮಾತನಾಡಿದರೆ ಅದು ಸಂವಿಧಾನಕ್ಕೆ ಮಾಡಿದ ಅಪರಾಧ ಎನ್ನುತ್ತಾರೆ. ಅಲ್ಲದೇ ನಮ್ಮನ್ನು ಜಾತ್ಯಾತೀತ ವಿರೋಧಿ ಎಂದು ಕರೆಯುತ್ತಾರೆ. ಬೆಕ್ಕಿನ ಹಾಗೇ ಮೀಯಾವ್ ಅಂದ್ರೆ ಮಾತ್ರ ನೀನು ಜಾತ್ಯಾತೀತ ಎನ್ನುತ್ತಾರೆ. ಕ್ರೈಸ್ತರು, ಮುಸ್ಲಿಮರು ತಮ್ಮ ಧರ್ಮದ ಬಗ್ಗೆ ಎದೆತಟ್ಟಿ ಹೇಳಿಕೊಳ್ಳುತ್ತಾರೆ. ಆದರೆ ಹಿಂದೂಗಳು ಹೇಳಿಕೊಳ್ಳುವುದಿಲ್ಲ. ಏಕಂದರೆ ನಮಗೆ ನಮ್ಮ ರಕ್ತದ ಪರಿಚಯವಿಲ್ಲ ಎಂದು ಅವರು ಹೇಳಿದರು.

    ಹಿಂದುತ್ವವನ್ನು ಚಿಕ್ಕದಾಗಿ ಮಾಡುವ ಪ್ರಯತ್ನಕ್ಕೆ ಕೈ ಹಾಕಬಾರದು. ವಿದೇಶಿ ಬಂಡವಾಳಕ್ಕೆ ಬುದ್ಧಿ ಜೀವಿಗಳು ತಮ್ಮನ್ನ ಮಾರಿಕೊಂಡಿದ್ದು, ಹಿಂದುತ್ವವನ್ನು ಕೀಳಾಗಿ ಕಾಣುತ್ತಿದ್ದಾರೆ. ರಾಮ, ಕೃಷ್ಣ, ಗಣೇಶ, ಸುಬ್ರಮಣ್ಯರು ಬ್ರಾಹ್ಮಣರಲ್ಲ. ಜಾತಿಯಿಂದ ನಾವು ಗೌರವ ನೀಡಿಲ್ಲ, ಬದಲಾಗಿ ಶ್ರೇಷ್ಠ ವಿಚಾರಗಳನ್ನು ಒಪ್ಪಿಕೊಂಡಿದ್ದೇವೆ. ಸತ್ಯ ಒಪ್ಪಿಕೊಳ್ಳುವು, ಜಗತ್ತಿನ ಒಳ್ಳೆಯ ಸ್ವಭಾವವೇ ಹಿಂದುತ್ವವಾಗಿದೆ. ಇಂತಹ ವಿಚಾರಗಳು ಮುರ್ಖ ವಿಚಾರವಾದಿಗಳಿಗೆ ಅರ್ಥವಾಗುವುದಿಲ್ಲ. ಯಾರದ್ದೋ ನಾಲಿಗೆ ಹೊರಳಿದ್ದಕ್ಕೆ ನಾವು ಹಿಂದೂಗಳು ಆಗಿಲ್ಲ ಎಂದು ಹೇಳುವ ಮೂಲಕ ವಿಚಾರವಾದಿಗಳನ್ನು ಕುಟುಕಿದರು.

    ಮಾಧ್ಯಮಗಳ ವಿರುದ್ಧ ಕಿಡಿ: ನಾನು ಏನು ತಪ್ಪು ಮಾಡುತ್ತೇನೋ ಅದನ್ನೇ ಮಾಧ್ಯಮದವರು ಹೈಲೆಟ್ ಮಾಡುತ್ತಾರೆ. ಏಕೆಂದರೆ ಮಾಧ್ಯಮಗಳ ಸಾಮಥ್ರ್ಯ ಅಷ್ಟೇ. ಅವರು ಏನು ಹೇಳಿದರೂ ಅಂತಾ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನ ರಕ್ತದ ಪರಿಚಯ ನನಗಿದೆ. ಯಾರೋ ಏನೋ ಹೇಳಿದರು ಅಂತಾ ನನ್ನ ತನವನ್ನು ನಾನು ಬದಲಾವಣೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.

  • ಆಂಜನೇಯನ ಭಾವಚಿತ್ರ ಹಾಕಿಕೊಂಡ ಕ್ಯಾಬ್‍ನವರು ರೇಪಿಸ್ಟ್ ಗಳು, ಅವುಗಳಲ್ಲಿ ಪ್ರಯಾಣಿಸಬೇಡಿ : ರಶ್ಮಿ ನಾಯರ್

    ಆಂಜನೇಯನ ಭಾವಚಿತ್ರ ಹಾಕಿಕೊಂಡ ಕ್ಯಾಬ್‍ನವರು ರೇಪಿಸ್ಟ್ ಗಳು, ಅವುಗಳಲ್ಲಿ ಪ್ರಯಾಣಿಸಬೇಡಿ : ರಶ್ಮಿ ನಾಯರ್

    ಬೆಂಗಳೂರು: ನಗರದಲ್ಲಿ ಆಂಜನೇಯನ ಭಾವಚಿತ್ರವುಳ್ಳ ಉಬರ್ ಕ್ಯಾಬ್ ಗಳನ್ನು ಹತ್ತಬೇಡಿ. ಇದೆಲ್ಲ ಹಿಂದುತ್ವ ಸಂಕೇತವಾಗಿದ್ದು, ಇಂತಹ ಭಾವಚಿತ್ರ ಹಾಕಿಕೊಂಡವರು ರೇಪಿಸ್ಟ್ ಗಳು ಅಂತಾ ವಿವಾದತ್ಮಾಕ ಪೋಸ್ಟ್ ಹಾಕಿಕೊಂಡು ರಶ್ಮಿ ಅಯ್ಯರ ಸುದ್ದಿಯಾಗಿದ್ದಾರೆ.

    ಈ ಹಿಂದೆ ಕಿಸ್ ಆಫ್ ಲವ್ ಆಯೋಜನೆ ಮಾಡಿ ಸುದ್ದಿಯಾಗಿ, ಕೇರಳದಲ್ಲಿ ಸೆಕ್ಸ್ ರ‍್ಯಾಕೆಟ್ ಸಿಕ್ಕಿಬಿದ್ದಿದ್ದ ರಶ್ಮಿ ನಾಯರ್ ಈಗ ವಿವಾದಾತ್ಮಕ ಪೋಸ್ಟ್ ಹಾಕಿಕೊಂಡಿದ್ದಾರೆ.

    ಪೋಸ್ಟ್ ನಲ್ಲಿ ಏನಿದೆ?: ನಾನು ಬೆಂಗಳೂರಿನ ಉಬರ್ ಕ್ಯಾಬ್ ಬಳಸುತ್ತಿರುವ ಗ್ರಾಹಕಿಯಾಗಿದ್ದು, ಹಲವು ಬಾರಿ ನಾನೊಬ್ಬಳೆ ಉಬರ್ ಪ್ರಯಾಣ ಮಾಡುತ್ತಿರುತ್ತೇನೆ. ನಾನೊಬ್ಬಳಲ್ಲದೇ ನನ್ನ ಜೊತೆ ಕೆಲಸ ಮಾಡಿಕೊಂಡಿರುವ ಹಲವು ಮಹಿಳಾ ಸಹದ್ಯೋಗಿಗಳು ಸಹ ಉಬರ್ ಕ್ಯಾಬ್ ನಲ್ಲಿ ಒಬ್ಬೊಬ್ಬರೆ ಸಂಚರಿಸುತ್ತಾರೆ. ಕೆಲವು ಕ್ಯಾಬ್ ಗಳ ಮೇಲೆ ಹಿಂದುತ್ವದ ಸಂಕೇತವುಳ್ಳ ರುದ್ರ ಹನುಮಾನ್ ಮುಂತಾದ ಭಾವಚಿತ್ರಗಳನ್ನು ಹಾಕಲಾಗುತ್ತದೆ. ಸಾಕಷ್ಟು ಹಿಂದುತ್ವ ಸಂಘಟನೆಗಳು ಮತ್ತು ಮುಖಂಡರು ಕಥುವಾದಲ್ಲಿ ನಡೆದ ರೇಪ್ ಪ್ರಕರಣದ ಆರೋಪಿಗಳ ಪರವಾಗಿ ವಾದಿಸುತ್ತಾರೆ. ನಾನು ಮತ್ತು ನನ್ನ ಸಹದ್ಯೋಗಿಗಳು ಈ ರೀತಿಯ ಹಿಂದುತ್ವದ ಸಂಕೇತವುಳ್ಳ ಉಬರ್ ಕ್ಯಾಬ್ ನಲ್ಲಿ ಪ್ರಯಾಣಿಸಲು ಭಯವಾಗುತ್ತಿದೆ. ಹಾಗಾಗಿ ಹಿಂದುತ್ವದ ಸಂಕೇತ, ಭಾವಚಿತ್ರ ಮತ್ತು ಚಿಹ್ನೆವುಳ್ಳ ಕ್ಯಾಬ್‍ಗಳಲ್ಲಿ ಇನ್ನ್ಮುಂದೆ ಸಂಚರಿಸಲ್ಲ. ಈ ರೀತಿಯ ಕ್ಯಾಬ್‍ಗಳು ಬಂದರೆ ನನ್ನ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಳ್ಳುತ್ತೇನೆ. ರೇಪಿಸ್ಟ್ ಗಳಿಗೆ ಮತ್ತು ಅದನ್ನು ಬೆಂಬಲಿಸುವರಿಗೆ ನನ್ನ ಹಣವನ್ನಿ ನೀಡಲು ಇಷ್ಟಪಡುವುದಿಲ್ಲ ಅಂತಾ ಬರೆದುಕೊಂಡು ರುದ್ರ ಹನುಮಾನ್ ಭಾವಚಿತ್ರವುಳ್ಳ ಕ್ಯಾಬ್ ಫೋಟೋ ಹಾಕಿಕೊಂಡಿದ್ದಾರೆ.

    ರಶ್ಮಿ ತಮ್ಮ ಫೇಸ್ ಬುಕ್ ನಲ್ಲಿ ಈ ರೀತಿಯ ಪೋಸ್ಟ್ ಹಾಕಿಕೊಂಡಿದ್ದಕ್ಕೆ, ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಪ್ರಾರಂಭವಾಗಿವೆ. ಇತ್ತ ಸಂಸದ ಪ್ರತಾಪ್ ಸಿಂಹ  ಸೇರಿದಂತೆ ಹಿಂದುತ್ವವಾದಿಗಳು ರಶ್ಮಿ ವಿರುದ್ಧ ಕೆಂಡಕಾರಿದ್ದಾರೆ.