Tag: hirekudi

  • ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ – ಪೀಸ್ ಪೀಸ್ ಮಾಡಿ ಎಸೆದ ಹಂತಕರು

    ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ – ಪೀಸ್ ಪೀಸ್ ಮಾಡಿ ಎಸೆದ ಹಂತಕರು

    ಚಿಕ್ಕೋಡಿ: ಹೀರೆಕುಡಿ (Hirekudi) ನಂದಿ ಪರ್ವತ ಆಶ್ರಮದ (Nandi Parvatha Ashram) ಜೈನಮುನಿ ಹತ್ಯೆಗೆ ಸಂಬಂಧಿಸಿದಂತೆ ಶೋಧಕಾರ್ಯ ಮುಗಿದಿದ್ದು, ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ (Borewell) ಸ್ವಾಮೀಜಿ ಮೃತದೇಹ ಪತ್ತೆಯಾಗಿದೆ.

    ಜುಲೈ 6ರಿಂದ ನಂದಿ ಪರ್ವತ ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದು, ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ (Chikkodi) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದು, ಜೈನಮುನಿಯ ಮೃತದೇಹವನ್ನು ಖಟಕಬಾವಿಯ ಗದ್ದೆಯಲ್ಲಿದ್ದ ತೆರೆದ ಕೊಳವೆಬಾವಿಗೆ ಹಾಕಿರುವುದಾಗಿ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೈನಮುನಿ ಕೊಲೆ- ಆರೋಪಿಗಳಿಂದ ತಪ್ಪೊಪ್ಪಿಗೆ

    ಆರೋಪಿಗಳು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಶುಕ್ರವಾರ ರಾತ್ರಿಯಿಂದ ಖಟಕಬಾವಿಯಲ್ಲಿ ಶೋಧಕಾರ್ಯ ನಡೆಸಿದ್ದರು. ಸ್ವಾಮೀಜಿ ಮೃತದೇಹ ಪತ್ತೆಯಾಗದ ಹಿನ್ನೆಲೆ ಶನಿವಾರವೂ ಜೆಸಿಬಿ ಸಹಾಯದಿಂದ ಶೋಧ ಕಾರ್ಯ ಮುಂದುವರೆಸಿದ್ದು, ಕೊಳವೆ ಬಾವಿಯ 20 ಅಡಿ ಆಳದಲ್ಲಿ ಸ್ವಾಮೀಜಿ ಮೃತದೇಹ ಪತ್ತೆಯಾಗಿದೆ. ಸ್ವಾಮೀಜಿಗೆ ಕರೆಂಟ್ ಶಾಕ್ (Current Shock) ನೀಡಿ ಹತ್ಯೆಗೈದ ಹಂತಕರು ಅವರ ಮೃತದೇಹವನ್ನು ಪೀಸ್ ಪೀಸ್ ಮಾಡಿ ಬಟ್ಟೆಯಲ್ಲಿ ಸುತ್ತಿ ಗಂಟುಕಟ್ಟಿ ಕೊಳವೆ ಬಾವಿಯಲ್ಲಿ ಎಸೆದಿದ್ದಾರೆ. ನಿರಂತರ 10 ಗಂಟೆಗಳ ಕಾರ್ಯಾಚರಣೆಯ ಬಳಿಕ ಕೊಳವೆಬಾವಿಯಲ್ಲಿ ಸ್ವಾಮೀಜಿ ಮೃತದೇಹವಿರುವ ಗಂಟು ಪತ್ತೆಯಾಗಿದ್ದು, ಎಸ್‌ಡಿಆರ್‌ಎಫ್ ಸಿಬ್ಬಂದಿ, ಎಫ್‌ಎಸ್‌ಎಲ್ ತಂಡದ ಸಹಾಯದೊಂದಿಗೆ ಪೊಲೀಸರು ಮೃತದೇಹವನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ – ಸ್ವಾಮೀಜಿ ನೆನೆದು ಭಕ್ತರ ಕಣ್ಣೀರು, ಆಶ್ರಮದಲ್ಲಿ ನೀರವ ಮೌನ

    ಹಣಕಾಸಿನ (Money) ವಿಚಾರವಾಗಿ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡ ಆರೋಪಿಗಳು, ಅವರ ಮೃತದೇಹವನ್ನು ಸುಮಾರು 400 ಅಡಿ ಉದ್ದದ ಕೊಳವೆ ಬಾವಿಯಲ್ಲಿ ಎಸೆದಿರುವುದಾಗಿ ಮಾಹಿತಿಯನ್ನು ನೀಡಿದ್ದರು. ಈ ಹಿನ್ನೆಲೆ 400 ಅಡಿ ಉದ್ದದ ಕೊಳವೆಬಾವಿಯಲ್ಲಿ 40 ಅಡಿಗೆ ಕೇಸಿಂಗ್ ಪೈಪ್ ಅಳವಡಿಸಿದ್ದು, ಸುಮಾರು 20 ಅಡಿ ಆಳದಲ್ಲಿ ಪತ್ತೆಯಾದ ಸ್ವಾಮೀಜಿ ಮೃತದೇಹವನ್ನು ಹೊರತೆಗೆಯಲಾಗಿದೆ. ಇದನ್ನೂ ಓದಿ: ಚಿಕ್ಕೋಡಿಯಲ್ಲಿ ನಾಪತ್ತೆಯಾಗಿದ್ದ ಜೈನಮುನಿ ಹತ್ಯೆ – ಭಕ್ತರ ದೂರಿನ ಬಳಿಕ ಪ್ರಕರಣ ಬೆಳಕಿಗೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈನಮುನಿ ಹತ್ಯೆ ಪ್ರಕರಣ – ಸ್ವಾಮೀಜಿ ನೆನೆದು ಭಕ್ತರ ಕಣ್ಣೀರು, ಆಶ್ರಮದಲ್ಲಿ ನೀರವ ಮೌನ

    ಜೈನಮುನಿ ಹತ್ಯೆ ಪ್ರಕರಣ – ಸ್ವಾಮೀಜಿ ನೆನೆದು ಭಕ್ತರ ಕಣ್ಣೀರು, ಆಶ್ರಮದಲ್ಲಿ ನೀರವ ಮೌನ

    ಚಿಕ್ಕೋಡಿ (ಬೆಳಗಾವಿ): ಹೀರೆಕುಡಿ (Hirekudi) ನಂದಿ ಪರ್ವತ ಆಶ್ರಮದಿಂದ (Nandi Parvatha Ashram) ನಾಪತ್ತೆಯಾಗಿದ್ದ ಜೈನಮುನಿ (Jain Muni) ಬರ್ಬರವಾಗಿ ಹತ್ಯೆಯಾಗಿದ್ದು, ಸುದ್ದಿ ತಿಳಿದ ಭಕ್ತರು (Devotees) ಸ್ವಾಮೀಜಿಯನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ. ಸ್ವಾಮಿಜಿ ಹತ್ಯೆಯಿಂದ ನಿತ್ಯ ಭಕ್ತರಿಂದ ತುಂಬಿ ತುಳುಕುತ್ತಿದ್ದ ಆಶ್ರಮದಲ್ಲಿ ಇಂದು (ಶನಿವಾರ) ನೀರವ ಮೌನ ಆವರಿಸಿದೆ.

    ಜುಲೈ 6ರಂದು ಹೀರೆಕುಡಿಯ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಂದಿ ಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದರು. ನಾಪತ್ತೆಯಾದ ಹಿನ್ನೆಲೆ ಭಕ್ತರು ಆಶ್ರಮದ ಸುತ್ತಮುತ್ತ ಸ್ವಾಮೀಜಿಗಾಗಿ ಹುಡುಕಾಡಿದ್ದು, ಎಲ್ಲಿಯೂ ಪತ್ತೆಯಾಗದ ಹಿನ್ನೆಲೆ ಚಿಕ್ಕೋಡಿ (Chikkodi) ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ. ಇದನ್ನೂ ಓದಿ: ಚಿಕ್ಕೋಡಿಯಲ್ಲಿ ನಾಪತ್ತೆಯಾಗಿದ್ದ ಜೈನಮುನಿ ಹತ್ಯೆ – ಭಕ್ತರ ದೂರಿನ ಬಳಿಕ ಪ್ರಕರಣ ಬೆಳಕಿಗೆ

    ಕಳೆದ 15 ವರ್ಷಗಳಿಂದ ನಂದಿ ಪರ್ವತ ಆಶ್ರಮದಲ್ಲಿ ವಾಸವಿದ್ದ ಜೈನಮುನಿಗೆ ಅವರ ಸೇವಕಿ ಕುಸುಮಾ ಗೌರಾಜ್ ನಿತ್ಯ ಆಹಾರದ ವ್ಯವಸ್ಥೆ ಮಾಡುತ್ತಿದ್ದರು. ಸ್ವಾಮೀಜಿಯ ಹತ್ಯೆಯ ಸುದ್ದಿ ಬಳಿಕ ಕುಸುಮಾ ಗೌರಾಜ್ ಅವರನ್ನು ನೆನೆದು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಇತ್ತ ಕೊಲೆ ರಹಸ್ಯ ಬಾಯ್ಬಿಟ್ಟ ಆರೋಪಿಗಳು ಸ್ವಾಮಿಜಿಯ ಶವವನ್ನು ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಹೊರವಲಯದ ತೆರೆದ ಕೊಳವೆ ಬಾವಿಗೆ ಹಾಕಿರುವುದಾಗಿ ಮಾಹಿತಿ ನೀಡಿದ್ದಾರೆ. ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಕ್ಕಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮೆಟ್ರೋ ಕಾಮಗಾರಿ ವೇಳೆ ಕ್ರೇನ್ ಪಲ್ಟಿ- ಸಿಲ್ಕ್ ಬೋರ್ಡ್ ಬಳಿ ತಪ್ಪಿದ ಅನಾಹುತ

    ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದಲ್ಲಿ ಶೋಧಕಾರ್ಯ ಮುಂದುವರಿಯುತ್ತಿರುವ ಹಿನ್ನೆಲೆ ಗದ್ದೆಗೆ ತೆರಳುವ ಎರಡೂ ಬದಿಯಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಖಟಕಬಾವಿ – ಮುಗಳಖೋಡ ರಸ್ತೆಯನ್ನು ಬಂದ್ ಮಾಡಿರುವ ಪೊಲೀಸರು ಶೋಧಕಾರ್ಯವನ್ನು ಮುಂದುವರಿಸುತ್ತಿದ್ದಾರೆ. ಕಾರ್ಯಾಚರಣೆ ಸ್ಥಳದಲ್ಲಿ ಸಾರ್ವಜನಿಕರು ಮತ್ತು ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದು, ಎಸ್‌ಪಿ ಡಾ.ಸಂಜೀವ್ ಪಾಟೀಲ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಇದನ್ನೂ ಓದಿ: ಎಣ್ಣೆ ಏಟಿನಲ್ಲಿ ಪತಿ ಪ್ರತಿನಿತ್ಯ ಜಗಳ- ನೇಣಿಗೆ ಕೊರಳೊಡ್ಡಿದ ಪತ್ನಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿಕ್ಕೋಡಿಯಲ್ಲಿ ನಾಪತ್ತೆಯಾಗಿದ್ದ ಜೈನಮುನಿ ಹತ್ಯೆ – ಭಕ್ತರ ದೂರಿನ ಬಳಿಕ ಪ್ರಕರಣ ಬೆಳಕಿಗೆ

    ಚಿಕ್ಕೋಡಿಯಲ್ಲಿ ನಾಪತ್ತೆಯಾಗಿದ್ದ ಜೈನಮುನಿ ಹತ್ಯೆ – ಭಕ್ತರ ದೂರಿನ ಬಳಿಕ ಪ್ರಕರಣ ಬೆಳಕಿಗೆ

    – ಇಬ್ಬರನ್ನ ವಶಕ್ಕೆ ಪಡೆದು ವಿಚಾರಣೆ

    ಚಿಕ್ಕೋಡಿ (ಬೆಳಗಾವಿ): ಹೀರೆಕುಡಿ (Hirekudi) ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿಯನ್ನು (Jain Muni)  ಬರ್ಬರವಾಗಿ ಹತ್ಯೆಗೈದಿದ್ದು, ಭಕ್ತರ ದೂರಿನ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.

    ಜಿಲ್ಲೆಯ ಹೀರೆಕುಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಬರ್ಬರವಾಗಿ ಹತ್ಯೆಯಾಗಿದ್ದಾರೆ. ಕಳೆದ 15 ವರ್ಷಗಳಿಂದ ನಂದಿ ಪರ್ವತ ಆಶ್ರಮದಲ್ಲಿ ವಾಸವಿದ್ದ ಇವರು ಜುಲೈ 6ರಿಂದ ಆಶ್ರಮದಿಂದ ನಾಪತ್ತೆಯಾಗಿದ್ದರು. ಈ ಕುರಿತು ಜುಲೈ 6ರಂದು ಭಕ್ತರು ಆಶ್ರಮದ ಸುತ್ತಮುತ್ತ ಶೋಧ ನಡೆಸಿದ್ದರು. ಇದನ್ನೂ ಓದಿ: ದೊಡ್ಡಪ್ಪನ ಮಗಳಿಗೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

    ಎಲ್ಲಿಯೂ ಪತ್ತೆಯಾಗದ ಹಿನ್ನೆಲೆ ಶುಕ್ರವಾರ ಚಿಕ್ಕೋಡಿ (Chikkodi) ಪೊಲೀಸ್ ಠಾಣೆಗೆ ಜೈನಮುನಿ ನಾಪತ್ತೆಯಾದ ಬಗ್ಗೆ ದೂರು ನೀಡಲಾಗಿತ್ತು. ಆಚಾರ್ಯ ಕಾಮಕುಮಾರನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು. ತನಿಖೆ ಸಂದರ್ಭ ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ವೇಳೆ ಜೈನಮುನಿ ಹತ್ಯೆಯ ರಹಸ್ಯ ಬಯಲಾಗಿದೆ. ಇದನ್ನೂ ಓದಿ: ಬೀದರ್ ಪೊಲೀಸರ ದಾಳಿ – 50 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಅರೆಸ್ಟ್

    ಆರೋಪಿಗಳು ಹತ್ಯೆ ಮಾಡಿರುವ ಬಗ್ಗೆ ಪೊಲೀಸರ ಬಳಿ ಬಾಯ್ಬಿಟ್ಟಿದ್ದು, ಕೊಲೆ ಮಾಡಿದ ಬಳಿಕ ಶವವನ್ನು ಎಲ್ಲಿ ಬಿಸಾಕಿದ್ದಾರೆ ಎನ್ನುವ ಬಗ್ಗೆ ಸರಿಯಾದ ಮಾಹಿತಿ ನೀಡದೆ ಪೊಲೀಸರನ್ನು ಸತಾಯಿಸಿದ್ದಾರೆ. ಒಂದು ಬಾರಿ ಕೊಲೆ ಮಾಡಿ ಮೃತದೇಹವನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ ತೆರೆದ ಕೊಳವೆ ಬಾವಿಯಲ್ಲಿ ಎಸೆದಿದ್ದೇವೆ ಎಂದ ಆರೋಪಿಗಳು ಮತ್ತೊಂದು ಬಾರಿ ಮೃತದೇಹವನ್ನು ಬಟ್ಟೆಯಲ್ಲಿ ಸುತ್ತಿ ನದಿಗೆ ಎಸೆದಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ವಿದೇಶಿ ಮಹಿಳೆಯರಿಂದ ಪಿಎಸ್‍ಐ ಸೇರಿ ನಾಲ್ವರ ಮೇಲೆ ಹಲ್ಲೆ

    ಸ್ಪಷ್ಟ ಮಾಹಿತಿ ದೊರೆಯದ ಹಿನ್ನೆಲೆ ನಂದಿ ಮಹಾರಾಜರ ಮೃತದೇಹಕ್ಕಾಗಿ ಪೊಲೀಸರು ರಾತ್ರಿಯಿಡೀ ಶೋಧ ನಡೆಸಿದ್ದಾರೆ. ಖಟಕಬಾವಿ ಗ್ರಾಮ ಸೇರಿದಂತೆ ಹಲವೆಡೆ ಶೋಧ ನಡೆಸಿದ ಪೊಲೀಸರು ಮೃತದೇಹ ಸಿಗದ ಕಾರಣ ಶನಿವಾರ ಬೆಳಗ್ಗೆ 6:30ರಿಂದ ಶೋಧ ಕಾರ್ಯ ನಡೆಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಗುಂಡು ಹಾರಿಸಿಕೊಂಡು ಕೊಯಮತ್ತೂರು ಡಿಐಜಿ ಆತ್ಮಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]