Tag: Hit

  • ಗಂಧದ ಗುಡಿ ಟ್ರೇಲರ್ ಸೂಪರ್ ಹಿಟ್ : ಒಂದೇ ದಿನಕ್ಕೆ ಕೋಟಿ ವೀಕ್ಷಣೆ

    ಗಂಧದ ಗುಡಿ ಟ್ರೇಲರ್ ಸೂಪರ್ ಹಿಟ್ : ಒಂದೇ ದಿನಕ್ಕೆ ಕೋಟಿ ವೀಕ್ಷಣೆ

    ಪುನೀತ್ ರಾಜ್ ಕುಮಾರ್ (Puneeth Rajkumar) ನಟಿಸಿ, ನಿರ್ಮಾಣ ಮಾಡಿದ್ದ ಗಂಧದ ಗುಡಿ ಡಾಕ್ಯುಮೆಂಟರಿ ಮಾದರಿಯ ಸಿನಿಮಾದ ಟ್ರೇಲರ್ ನಿನ್ನೆಯಷ್ಟೇ ರಿಲೀಸ್ ಆಗಿದೆ. ಬಿಡುಗಡೆಯಾದ ಒಂದೇ ದಿನಕ್ಕೆ ಕೋಟಿ  ವೀಕ್ಷಣೆ ಪಡೆದದ್ದು, ಅಪ್ಪು ಕೆಲಸಕ್ಕೆ ನೋಡುಗರು ಹಾಡಿ ಹೊಗಳಿದ್ದಾರೆ. ಅಲ್ಲೇ, ಅಪ್ಪು ಟ್ರೇಲರ್ ಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಸೇರಿದಂತೆ ಸಾಕಷ್ಟು ಸಿಲಿಬ್ರಿಟಿಗಳು ಶುಭ ಹಾರೈಸಿದ್ದಾರೆ.

    ಗಂಧದ ಗುಡಿಯಲ್ಲಿ ಏನಿಲ್ಲ, ಎಲ್ಲವೂ ಇದೆ. ಬೆಟ್ಟ, ಗುಡ್ಡ, ನದಿ, ಹಳ್ಳ, ಕೊಳ್ಳ, ಅರಣ್ಯ, ಕಾಡು ಪ್ರಾಣಿಗಳು, ಕಾಡಂಚಿನ ಜನರು, ದೇವರು, ದೈವ ಎಲ್ಲವನ್ನೂ ಒಂದೇ ಉಸಿರಿಗೆ ಹಿಡಿದಿಟ್ಟಿದ್ದಾರೆ ಪುನೀತ್ ರಾಜ್‍ಕುಮಾರ್. ರಾತ್ರಿ ಅವರು ಕಾಡಿನೊಳಗೆ ನುಗ್ಗಿದಾಗ ನಾವೇ ಭಯಪಡುವಷ್ಟು ಸುಂದರವಾಗಿ ಸೆರೆ ಹಿಡಿದಿದ್ದಾರೆ ಆ ರಾತ್ರಿಯನ್ನು. ಸಮುದ್ರದಾಳಕ್ಕೆ ಅಪ್ಪು ಜಿಗಿದಾಗ ಇಲ್ಲಿ ನಾವೇ ಒದ್ದೆಯಾಗುವಂತೆ ಸಿನಿಮಾಟೋಗ್ರಫಿ ಇದೆ. ಎಲ್ಲವೂ ಚಂದ, ಚಂದ. ಇದನ್ನೂ ಓದಿ:ಪನೋರಮಾ ಸ್ಟುಡಿಯೋ ತೆಕ್ಕೆಗೆ ಝೈದ್ ಖಾನ್ ನಟನೆಯ ‘ಬನಾರಸ್’ ಸಿನಿಮಾ

    ಗಂಧದ ಗುಡಿ (Gandhad Gudi) ಟ್ರೈಲರ್ ನ ಮತ್ತೊಂದು ಸೊಗಸು ಅಂದರೆ, ಅಪ್ಪು ಹಾಗೂ ಅವರ ಅಪ್ಪಾಜಿ ಬಾಳಿ ಬದುಕಿದ ಮನೆಯನ್ನು ತೋರಿಸಿದ್ದಾರೆ. ಸ್ವತಃ ಆ ಮನೆಯ ಬಗ್ಗೆ ಪುನೀತ್ ರಾಜ್‍ಕುಮಾರ್ ಅವರೇ ವಿವರಿಸುತ್ತಾರೆ. ಮನೆಯನ್ನು ಕಣ್ತುಂಬಿಕೊಳ್ಳುವ ಹೊತ್ತಲ್ಲಿ ಡಾ.ರಾಜ್ ಕುಮಾರ್ (Rajkumar) ಪ್ರವೇಶ. ಥ್ರಿಲ್ ಅನಿಸುವಷ್ಟು ಮಜಾ ಕೊಡುತ್ತದೆ ಟ್ರೇಲರ್.

    ಇಂದು ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಗಾಗಿ ಟ್ರೇಲರ್ (Trailer) ಪ್ರದರ್ಶನ ಏರ್ಪಡಿಸಲಾಗಿತ್ತು. ಗಂಧದ ಗುಡಿಯ ಅಂದವನ್ನು ಕಣ್ತುಂಬಿಕೊಂಡ ಕಂಗಳಲ್ಲಿ ಅಪ್ಪು ಇಲ್ಲ ಅನ್ನುವ ಕಂಬನಿ ಸುರಿಯುತ್ತಿತ್ತು. ರಾಘವೇಂದ್ರ ರಾಜಕುಮಾರ ಸೇರಿದಂತೆ ಅಲ್ಲಿದ್ದವರ ಅಷ್ಟೂ ಕಣ್ಣುಗಳು ಒದ್ದೆ ಆಗಿದ್ದವು. ಟ್ರೇಲರೇ ಇಷ್ಟೊಂದು ಭಾವುಕತೆ ಸೃಷ್ಟಿ ಮಾಡಿದೆ. ಇದೇ ತಿಂಗಳು ಕೊನೆಯಲ್ಲಿ ಪೂರ್ತಿ ಚಿತ್ರವೇ ಬಿಡುಗಡೆ ಆಗುತ್ತಿದೆ. ಹೃದಯ ಒಡೆಯುವ ಕಾಲವದು.

    Live Tv
    [brid partner=56869869 player=32851 video=960834 autoplay=true]

  • ಬೋಗಿಬೆಲ್ ಸೇತುವೆ ನೋಡುವ ಸಂಭ್ರಮದಲ್ಲಿ ಜೀವ ಕಳೆದುಕೊಂಡ ಬಾಲಕ..!

    ಬೋಗಿಬೆಲ್ ಸೇತುವೆ ನೋಡುವ ಸಂಭ್ರಮದಲ್ಲಿ ಜೀವ ಕಳೆದುಕೊಂಡ ಬಾಲಕ..!

    – ಅಪಘಾತದ ವಿಡಿಯೋ ವೈರಲ್

    ಗುವಾಹಟಿ: ದೇಶದಲ್ಲೇ ಅತ್ಯಂತ ಉದ್ದವಾಗಿರುವ ಅಸ್ಸಾಂನ ಬೋಗಿಬೆಲ್ ಸೇತುವೆಯನ್ನು ನೋಡುವ ಸಂಭ್ರಮದಲ್ಲಿ 7 ವರ್ಷದ ಬಾಲಕನೊಬ್ಬ ತನ್ನ ಜೀವವನ್ನೇ ಕಳೆದುಕೊಂಡಿದ್ದು, ಅಪಘಾತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಮೃತಪಟ್ಟ ಬಾಲಕನನ್ನು ಸೌರಭ್ ಮೋರನ್ ಎಂದು ಗುರುತಿಸಲಾಗಿದ್ದು, ಈತ ತಿನ್ಸುಕ್ ಬಾಘಜನ್‍ನ ಗ್ರಾಮದ ನಿವಾಸಿಯಾಗಿದ್ದಾನೆ. ಹೊಸದಾಗಿ ಉದ್ಘಾಟನೆಗೊಂಡಿದ್ದ ಸೇತುವೆಯನ್ನು ನೋಡಲು ಬಾಲಕ ತನ್ನ ಕುಟುಂಬದೊ0ದಿಗೆ ಆಗಮಿಸಿದ್ದನು. ಸೇತುವೆಯ ಇನ್ನೊಂದು ಬದಿಗೆ ಹೋಗಲು ರಸ್ತೆ ಮೇಲೆ ಏಕಾಏಕಿ ಓಡಿದ್ದಾನೆ. ಈ ವೇಳೆ ಕಾರೊಂದು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡು ಬಿದ್ದಿದ್ದನು. ಕೂಡಲೇ ಬಾಲಕನನ್ನು ದಿಬ್ರುಘರ್‍ನ ಅಸ್ಸಾಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಬಾಲಕ ಮಾರ್ಗಮಧ್ಯೆಯೇ ಅಸುನೀಗಿದ್ದಾನೆ.

    ಇದೇ ಕ್ರಿಸ್‍ಮಸ್ ದಿನದಂದು ಪ್ರಧಾನಿ ನರೇಂದ್ರ ಮೋದಿಯವರು ಅಸ್ಸಾಂನ ಬೋಗಿಬೆಲ್ ಸೇತುವೆಯನ್ನು ಲೋಕಾರ್ಪಣೆ ಮಾಡಿದ್ದರು. ಆದರೆ ಇಂದು ಸೇತುವೆ ನೋಡುವ ಭರದಲ್ಲಿ ಬಾಲಕನೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಬಾಲಕನಿಗೆ ಕಾರು ಡಿಕ್ಕಿ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನು ಓದಿ: ದೇಶದ ಉದ್ದದ ರೈಲು, ರಸ್ತೆ ಸೇತುವೆ ಉದ್ಘಾಟಿಸಿ ಕಾಂಗ್ರೆಸ್ಸಿಗೆ ಟಾಂಗ್ ಕೊಟ್ಟ ಮೋದಿ

    ವಿಡಿಯೋದಲ್ಲಿ ಏನಿದೆ?
    ಕಾರಿನಲ್ಲಿದ್ದ ಪ್ರಯಾಣಿಕರು ಸೇತುವೆ ಮೇಲಿನ ತಮ್ಮ ಮೊದಲ ಪ್ರಯಾಣವನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದರು. ಈ ವೇಳೆ ರಸ್ತೆಯ ಬದಿ ನಿಂತಿದ್ದ ಮತ್ತೊಂದು ಕಾರಿನ ಮುಂಭಾಗದಿಂದ ಬಾಲಕನೋರ್ವ ಏಕಾಏಕಿ ಬಲಬದಿಗೆ ಓಡಿ ಬಂದಿದ್ದಾನೆ. ಕಾರ್ ಅಡ್ಡ ಇದ್ದ ಕಾರಣ ಚಾಲಕನಿಗೆ ಬಾಲಕ ಬಂದಿದ್ದು ಗಮನಕ್ಕೆ ಬಂದಿರಲಿಲ್ಲ. ಪರಿಣಾಮ ಕಾರ್ ಬಾಲಕನಿಗೆ ಗುದ್ದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರೈಲು ಡಿಕ್ಕಿ- ಟ್ರ್ಯಾಕ್ ಮ್ಯಾನ್, ಗ್ಯಾಂಗ್ ಮ್ಯಾನ್ ದುರ್ಮರಣ

    ರೈಲು ಡಿಕ್ಕಿ- ಟ್ರ್ಯಾಕ್ ಮ್ಯಾನ್, ಗ್ಯಾಂಗ್ ಮ್ಯಾನ್ ದುರ್ಮರಣ

    ಸಾಂದರ್ಭಿಕ ಚಿತ್ರ

    ಕೋಲಾರ: ರೈಲು ಡಿಕ್ಕಿ ಹೊಡೆದ ಪರಿಣಾಮ ರೈಲ್ವೇ ಟ್ರ್ಯಾಕ್ ಮ್ಯಾನ್ ಹಾಗೂ ಗ್ಯಾಂಗ್ ಮ್ಯಾನ್ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ವರದಾಪುರ ಬಳಿಯ ರೈಲ್ವೇ ಗೇಟ್ ಬಳಿ ನಡೆದಿದೆ.

    ರಾಜಸ್ಥಾನ ಮೂಲದ ಹರೀ ಸಿಂಗ್ ಮೀನಾ (30) ಹಾಗೂ ಕುಪ್ಪಂ ತಾಲೂಕಿನ ಬಂಡಪಲ್ಲಿ ಗ್ರಾಮದ ರಾಮಸ್ವಾಮಿ(28) ಮೃತಪಟ್ಟ ರೈಲ್ವೇ ನೌಕರರು. ಬುಧವಾರ ರಾತ್ರಿ ಎಂದಿನಂತೆ ಇಬ್ಬರೂ ನೌಕರರು ರೈಲ್ವೇ ಟ್ರ್ಯಾಕ್ ಗಳನ್ನು ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ರೈಲು ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ರೈಲ್ವೇ ಪೊಲೀಸರು ಹಾಗೂ ಸ್ಟೇಷನ್ ಮಾಸ್ಟರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬಂಗಾರಪೇಟೆ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಂಡಿಕಾ ಕಾರು ಡಿಕ್ಕಿ- 30 ಕುರಿಗಳ ದಾರುಣ ಸಾವು

    ಇಂಡಿಕಾ ಕಾರು ಡಿಕ್ಕಿ- 30 ಕುರಿಗಳ ದಾರುಣ ಸಾವು

    ಬಾಗಲಕೋಟೆ: ಇಂಡಿಕಾ ಕಾರೊಂದು ವೇಗವಾಗಿ ಬಂದು ಕುರಿಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 30 ಕುರಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿ ಸಮೀಪ ನಡೆದಿದೆ.

    ಬಾಗಲಕೋಟೆ ಕಡೆಯಿಂದ ವಿಜಯಪುರಕ್ಕೆ ಹೊರಟಿದ್ದ ಇಂಡಿಕಾ ಕಾರೊಂದು, ಬಾಡಗಂಡಿ ಬಳಿ ವೇಗವಾಗಿ ಕುರಿಗಳ ಹಿಂಡಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ 30 ಕ್ಕೂ ಹೆಚ್ಚು ಕುರಿಗಳು ಬಲಿಯಾಗಿವೆ. ಕುರಿಗಳು ಯಲ್ಲಪ್ಪ ಲಕ್ಷ್ಮಣ ಕಗಣವರ ಎಂಬವರಿಗೆ ಸೇರಿದ್ದವು ಎಂದು ತಿಳಿದು ಬಂದಿದೆ.

    ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಕಾರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಥಿಯೇಟರ್ ನಲ್ಲಿ ಸಿನಿಮಾ ನೋಡುವಾಗ ಯುವತಿಗೆ ಲೈಂಗಿಕ ಕಿರುಕುಳ ನೀಡಿದ CRPF ಯೋಧ

    ಥಿಯೇಟರ್ ನಲ್ಲಿ ಸಿನಿಮಾ ನೋಡುವಾಗ ಯುವತಿಗೆ ಲೈಂಗಿಕ ಕಿರುಕುಳ ನೀಡಿದ CRPF ಯೋಧ

    ಶಿವಮೊಗ್ಗ: ಥಿಯೇಟರ್ ನಲ್ಲಿ ಸಿನಿಮಾ ವೀಕ್ಷಣೆ ಮಾಡುವಾಗ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಸಿಆರ್ ಪಿಎಫ್ ಯೋಧನಿಗೆ ಪ್ರೇಕ್ಷಕರು ಧರ್ಮದೇಟು ನೀಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

    ರವಿ ಬಿ. ಎಂಬಾತನೇ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಯೋಧ. ಶಿವಮೊಗ್ಗದ ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ `ಭರ್ಜರಿ’ ಸಿನಿಮಾ ವೀಕ್ಷಣೆ ಮಾಡುವಾಗ ಈ ಘಟನೆ ನಡೆದಿದೆ. ಯುವತಿ ತನ್ನ ಇಡೀ ಕುಟುಂಬದ ಸಮೇತ ಸಿನಿಮಾ ವೀಕ್ಷಣೆಗೆ ಬಂದಿದ್ದರು. ಪಕ್ಕದ ಸೀಟಿನಲ್ಲಿಯೇ ರವಿ ಕುಳಿತಿದ್ದಾನೆ.

    ಪದೇ ಪದೇ ಯುವತಿಗೆ ಕಿರುಕುಳ ನೀಡಿದ್ದರಿಂದ ಆಕೆಯ ಕುಟುಂದವರು ಹಾಗೂ ಅಕ್ಕಪಕ್ಕದ ಪ್ರೇಕ್ಷಕರು ಸೇರಿ ಯೋಧನನ್ನು ಹೊರಗೆಳೆದು ಹಿಗ್ಗಾಮುಗ್ಗಾ ಥಳಿಸಿ, ಜಯನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

    ವಿಚಾರಣೆ ವೇಳೆ ಮಾತನಾಡಿದ ಯೋಧ ರವಿ ಯುವತಿ ಮೇಲೆ ಲೈಂಗಿಕ ಕಿರುಕುಳ ನೀಡಿರುವುದನ್ನು ಒಪ್ಪಿಕೊಂಡಿದ್ದಾನೆ.