Tag: Hit and run case

  • ದಿವ್ಯಾ ಸುರೇಶ್ ಹಿಟ್ & ರನ್ ಕೇಸ್; ಸಾಲ ಮಾಡಿ ಚಿಕಿತ್ಸೆ ಪಡೆದುಕೊಂಡ ಗಾಯಾಳು ಅನಿತಾ

    ದಿವ್ಯಾ ಸುರೇಶ್ ಹಿಟ್ & ರನ್ ಕೇಸ್; ಸಾಲ ಮಾಡಿ ಚಿಕಿತ್ಸೆ ಪಡೆದುಕೊಂಡ ಗಾಯಾಳು ಅನಿತಾ

    – ಚಿಕಿತ್ಸೆಗೆ ಲಕ್ಷ ಲಕ್ಷ ಖರ್ಚಾಗಿದೆ -‌ ʻಪಬ್ಲಿಕ್‌ ಟಿವಿʼ ಎದುರು ಕಣ್ಣೀರಿಟ್ಟ ಸಂತ್ರಸ್ತೆ

    ಬಿಗ್‌ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಹಿಟ್ ಅಂಡ್ ರನ್ ಪ್ರಕರಣದ ಗಾಯಾಳು ಅನಿತಾ ʻಪಬ್ಲಿಕ್ ಟಿವಿʼ ಜೊತೆ ಅಳಲು ತೋಡಿಕೊಂಡಿದ್ದಾರೆ.

    ಸಾಲ ಮಾಡಿ ಚಿಕಿತ್ಸೆ ಪಡೆದುಕೊಂಡ ಗಾಯಾಳು ಅನಿತಾ ಮಾತಾಡುತ್ತಾ ಕಣ್ಣೀರಿಟ್ಟಿದ್ದಾರೆ. ತಾವು ಟೈಲರಿಂಗ್ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ. ತಮ್ಮ ಗಂಡ ಆಟೋ ಓಡಿಸುತ್ತಿದ್ದಾರೆ. ಗುಂಡ್ಲುಪೇಟೆಯಿಂದ ಇಲ್ಲಿ ಬಂದು ಬದುಕು ಕಟ್ಟಿಕೊಂಡ ಈ ಕುಟುಂಬಕ್ಕೆ ಈ ಘಟನೆ ಆಘಾತವನ್ನೇ ಉಂಟು ಮಾಡಿದೆ.

    ಅಸಲಿಗೆ ಘಟನೆ ಆಗಿದ್ದು, ಅಕ್ಟೋಬರ್ 4ರ ರಾತ್ರಿ ಗಾಯಾಳು ಅನಿತಾ ಸಹೋದರಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ನಾಯಿಗಳು ಅಟ್ಟಿಸಿಕೊಂಡು ಬಂದಿವೆ. ಹೀಗಾಗಿ ಗಾಡಿ ಸ್ವಲ್ಪ ಜೋರಾಗಿ ಓಡಿಸಿದ್ದಾರೆ. ಅದೇ ವೇಳೆಗೆ ಬ್ಯಾಟರಾಯನಪುರ ಎಂಎಂ ರಸ್ತೆಯ ಟರ್ನಿಂಗ್‌ನಲ್ಲಿ ಸ್ಪೀಡಾಗಿ ಕಾರ್ ಚಲಾಯಿಸಿಕೊಂಡು ಬಂದ ದಿವ್ಯಾ ಸುರೇಶ್, ಕಿರಣ್, ಅನಿತಾ ಹಾಗೂ ಸಹೋದರಿ ಅನುಷಾ ಇದ್ದ ಬೈಕ್‌ಗೆ ಗುದ್ದಿ ಕಾರ್ ನಿಲ್ಲಿಸೇ ಹೊರಟಿದ್ದಾರೆ. ಕಿರಣ್ ಬೈಕ್ ಚಲಾಯಿಸುತ್ತಿದ್ದರು, ಅನುಷಾ ಹಾಗೂ ಅನಿತಾ ಹಿಂಬದಿಯಲ್ಲಿ ಕುಳಿತಿದ್ದರು. ಅನಿತಾ ಅವರ ಕಾಲಿಗೆ ಕಾರ್ ಗುದ್ದಿದ ಪರಿಣಾಮ ಮಂಡಿ ಚಿಪ್ಪು ಒಡೆದಿದೆ. ವೈದ್ಯರು ಕನಿಷ್ಠ ಒಂದು ವರ್ಷವಾದರೂ ರೆಸ್ಟ್ ಮಾಡಲು ಸಲಹೆ ನೀಡಿದ್ದಾರೆ.

    ಊರಿಂದ ಬೆಂಗಳೂರಿಗೆ ಬಂದು ನಿತ್ಯ ದುಡಿದು ಜೀವನ ನಡೆಸುವ ಈ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದರು ಅನಿತಾ. ಈ ಘಟನೆ ನಡೆದ ಬಳಿಕ ದಿವ್ಯಾ ಸುರೇಶ್ ಕನಿಷ್ಠ ಮಾನವೀಯ ದೃಷ್ಟಿಯಿಂದಲೂ ಭೇಟಿ ಮಾಡಿ ಮಾತಾಡಿಸಿಲ್ಲ. ಆಸ್ಪತ್ರೆಯ ಖರ್ಚು ಲಕ್ಷ ಲಕ್ಷ ಆಗಿದೆ. ಆಸ್ಪತ್ರೆಗಾಗಿ ಸಾಲ ಮಾಡಿದ್ದೇವೆ ಅಂತಾ ಅನಿತಾ ʻಪಬ್ಲಿಕ್ ಟಿವಿʼ ಜೊತೆ ಮಾತಾಡುತ್ತಾ ಕಣ್ಣೀರಿಟ್ಟಿದ್ದಾರೆ. ಸದ್ಯ ಪ್ರಕರಣ ಪೊಲೀಸ್ ಠಾಣೆಯಲ್ಲಿದ್ದು, ಪೊಲೀಸರಿಗೆ ಎಲ್ಲಾ ಮಾಹಿತಿ ಕೊಟ್ಟಿದ್ದೇವೆ. ವಿಚಾರಣೆ ನಡೆಸಿ ತಿಳಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

  • ತಪ್ಪು ಮಾಡಿದವ್ರಿಗೆ ಶಿಕ್ಷೆ ಆಗೇ ಆಗುತ್ತೆ: ಹಿಟ್‌ & ರನ್‌ ಆರೋಪಕ್ಕೆ ನಟಿ ದಿವ್ಯಾ ಸುರೇಶ್‌ ರಿಯಾಕ್ಷನ್

    ತಪ್ಪು ಮಾಡಿದವ್ರಿಗೆ ಶಿಕ್ಷೆ ಆಗೇ ಆಗುತ್ತೆ: ಹಿಟ್‌ & ರನ್‌ ಆರೋಪಕ್ಕೆ ನಟಿ ದಿವ್ಯಾ ಸುರೇಶ್‌ ರಿಯಾಕ್ಷನ್

    ಮ್ಮ ಕಾರು ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆಂಬ ಆರೋಪ ಕುರಿತು ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್‌ (Divya Suresh) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹಿಟ್‌ & ರನ್‌ ಆರೋಪಕ್ಕೆ ವೀಡಿಯೋ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

    ಅಪಘಾತಕ್ಕೆ ಪ್ರತಿಕ್ರಿಯೆಯಾಗಿ ವೀಡಿಯೋವೊಂದನ್ನು ದಿವ್ಯಾ ಸುರೇಶ್ ಹಂಚಿಕೊಂಡಿದ್ದಾರೆ.‌ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ನಾವು ಎಲ್ಲರು ಸಮಾನರೆ ಎಂದು ಹೇಳಿದ್ದಾರೆ.

    ತಪ್ಪು ಯಾರೇ ಮಾಡಿರಲಿ, ಹೇಗೆ ಮಾಡಿರಲಿ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇ ಬೇಕು. ಆಗೇ ಆಗುತ್ತೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್‌ರಿಂದ ಹಿಟ್ & ರನ್ – ಮಹಿಳೆಗೆ ಗಂಭೀರ ಗಾಯ

    ಅ.4ರ ರಾತ್ರಿ 1:30ಕ್ಕೆ ಬ್ಯಾಟರಾಯನಪುರದ ಎಂ.ಎಂ.ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಅ.7 ರಂದು ಗಾಯಗೊಂಡ ಮಹಿಳೆಯ ಸಂಬಂಧಿ ಕಿರಣ್ ನಟಿ ವಿರುದ್ಧ ದೂರು ದಾಖಲಿಸಿದ್ದರು.

    ದೂರಿನಲ್ಲಿ ಏನಿದೆ?
    ನಮ್ಮ ಸಂಬಂಧಿ ಅನುಷಾಗೆ ಹುಷಾರಿರಲಿಲ್ಲ. ಹೀಗಾಗಿ ಅವತ್ತು ರಾತ್ರಿ ಗಿರಿನಗರದ ಆಸ್ಪತ್ರೆಗೆ ಹೋಗ್ತಾ ಇದ್ದೆವು. ಬೈಕ್‌ನಲ್ಲಿ ಮಧ್ಯೆ ಅನುಷಾ ಕುತಿದ್ರು. ನಾನು ಬೈಕ್ ಓಡಿಸುತ್ತಾ ಇದ್ದೆ. ಅನಿತಾ ಬೈಕ್ ಹಿಂದೆ ಕುಳಿತಿದ್ದರು. ಈ ವೇಳೆ ನಾಯಿ ಬೊಗಳಿದ್ದಕ್ಕೆ ಸ್ವಲ್ಪ ಬಲಕ್ಕೆ ಬೈಕ್‌ ತೆಗೆದುಕೊಂಡೆ. ಆಗ ಏಕಾಏಕಿ ಕ್ರಾಸ್‌ನಲ್ಲಿ ಬಂದು ದಿವ್ಯಾ ಸುರೇಶ್ ಕಾರು ಅನಿತಾ ಅವರ ಕಾಲಿಗೆ ಗುದ್ದಿತ್ತು. ದಿವ್ಯಾ ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರು ಬಿದ್ದಿದ್ದೆವು. ಇದನ್ನೂ ಓದಿ: Kurnool Bus Fire | ಸೂರ್ಯೋದಯಕ್ಕೂ ಮುನ್ನ ಸಾವಿನ ಮನೆ ಕದ ತಟ್ಟಿದ ಸುಂದರ ಕುಟುಂಬ

    ಕಾರು ಡಿಕ್ಕಿ ಹೊಡೆದಾಗ ಮಹಿಳೆಗೆ ಕಾಲಿನ ಮಂಡಿ ಚಿಪ್ಪಿಗೆ ಪೆಟ್ಟಾಗಿತ್ತು. ನಮ್ಮನ್ನು ನೋಡದೆ, ಕಾರು ನಿಲ್ಲಿಸದೆ ದಿವ್ಯಾ ಸುರೇಶ್ ಪರಾರಿಯಾಗಿದ್ದರು. ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಕಾಲಿನ ಮಂಡಿ ಚಿಪ್ಪು ಮುರಿದಿರೋದಾಗಿ ಚಿಕಿತ್ಸೆ ನೀಡಿದ್ದಾರೆ.

    ಸಿಸಿಟಿವಿ ಮೂಲಕ ಕಾರಿನ ನಂಬರ್ ಟ್ರೇಸ್ ಮಾಡಿದ್ದ ಬ್ಯಾಟರಾಯನಪುರ ಸಂಚಾರಿ ಪೊಲೀಸರು ದಿವ್ಯಾ ಸುರೇಶ್‌ರನ್ನು ಕರೆಸಿ, ಕಾರನ್ನು ಸೀಜ್ ಮಾಡಿದ್ದರು. ಆದರೆ, ರಾತ್ರೋರಾತ್ರಿ ನಟಿ ಕಾರನ್ನು ಬಿಡಿಸಿಕೊಂಡು ಹೋಗಿದ್ದಾರೆ ಎಂದು ತಿಳಿಸಿದ್ದಾರೆ.

    ಅನಿತಾಗೆ ಆಪರೇಷನ್‌ಗೆ ಎರಡು ಲಕ್ಷ ರೂ. ಹಣ ಖರ್ಚಾಗಿದೆ. ನಾನು ಕ್ಯಾಬ್‌ ಓಡಿಸಿ ಜೀವನ ಮಾಡುತ್ತಿದ್ದೇನೆ. ಇದುವರೆಗೂ ಸಂತ್ರಸ್ಥ ಮಹಿಳೆಯನ್ನು ನಟಿ ದಿವ್ಯಾ ಸುರೇಶ್ ಸಂಪರ್ಕಿಸಿಲ್ಲ. ದಯವಿಟ್ಟು ನಮಗೆ ಪರಿಹಾರ ಕೊಡಿಸಿ ಎಂದು ಕಿರಣ್‌ ಮನವಿ ಮಾಡಿದ್ದಾರೆ.

  • ಬೆಂಗಳೂರು ಹೊರವಲಯದಲ್ಲಿ ರಸ್ತೆ ಗುಂಡಿಗೆ ಬಿ.ಕಾಂ ಪದವೀಧರೆ ಬಲಿ

    ಬೆಂಗಳೂರು ಹೊರವಲಯದಲ್ಲಿ ರಸ್ತೆ ಗುಂಡಿಗೆ ಬಿ.ಕಾಂ ಪದವೀಧರೆ ಬಲಿ

    – ರಸ್ತೆಯಲ್ಲಿ ಸ್ಕಿಡ್‌ ಆಗಿ ಬಿದ್ದ ಪದವೀಧರೆ ಮೇಲೆ ಹರಿದ ಟಿಪ್ಪರ್‌ ಲಾರಿ

    ಬೆಂಗಳೂರು: ರಸ್ತೆ ಗುಂಡಿಗಳನ್ನ ಮುಚ್ಚುವ ಬಗ್ಗೆ ಸಿಎಂ ಡಿಸಿಎಂ ತಾಕೀತು ಮಾಡಿದ್ರೂ ಇನ್ನೂ ರಸ್ತೆಗಳಲ್ಲಿ ಗುಂಡಿಗಳು ಮಾಯವಾಗಿಲ್ಲ. ಇದೀಗ ಬೆಂಗಳೂರು ಹೊರ ವಲಯದಲ್ಲಿ ರಸ್ತೆ ಗುಂಡಿಗೆ ಪದವೀಧರೆ ಬಲಿಯಾಗಿದ್ದಾಳೆ.

    ಧನುಶ್ರೀ (21) ರಸ್ತೆ ಗುಂಡಿಗೆ ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿ. ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದ ಪದವೀಧರೆ ಇಂದು ಬೆಳಗ್ಗೆ ಬೂದಿಗೆರೆ ಕ್ರಾಸ್ ಬಳಿ ಬೆಳಗ್ಗೆ 8.50ರ ಸುಮಾರಿಗೆ ಸ್ಕೂಟರ್ ನಲ್ಲಿ ಬರ್ತಿದ್ದಾಗ ರಸ್ತೆಗುಂಡಿಗೆ ಬಿದ್ದು ಸ್ಕೂಟರ್ ನಿಂದ ಕೆಳಗೆ ಬಿದ್ದಿದ್ದಾಳೆ. ಗುಂಡಿಯಿಂದ ಸ್ಕಿಡ್ ಆಗಿ ಬಿದ್ದ ವಿದ್ಯಾರ್ಥಿನಿ ಮೇಲೆ ಟಿಪ್ಪರ್ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪಿದ್ದಾಳೆ.

    ನಾರಾಯಣ ಮಠದ ನಿವಾಸಿಯಾದ ಧನುಶ್ರೀ ಖಾಸಗಿ ಕಾಲೇಜಿನಲ್ಲಿ ಬಿಕಾಂ ವ್ಯಾಸಾಂಗ ಮಾಡುತ್ತಿದ್ದಳು. ಬೆಳಗ್ಗೆ ಕಾಲೇಜಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಧನುಶ್ರೀ, ರಸ್ತೆ ಗುಂಡಿ ತಪ್ಪಿಸಲು ಹೋಗಿದ್ದು ಟಿಪ್ಪರ್ ಡಿಕ್ಕಿ ಹೊಡೆದಿದೆ.‌ ಬೈಕ್‌ನಿಂದ ಬಿದ್ದವಳ ಮೇಲೆ ಟಿಪ್ಪರ್ ಹರಿಸಿ, ಟಿಪ್ಪರ್ ನಿಲ್ಲಿಸದೇ ಚಾಲಕ ಎಸ್ಕೇಪ್ ಆಗಿದ್ದಾನೆ. ಸದ್ಯ ಪ್ರಕರಣ ಸಂಬಂಧ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಟಿಪ್ಪರ್ ಚಾಲಕನಿಗಾಗಿ ಹುಡುಕಾಟ ನಡೆಸಲಾಗ್ತಿದೆ. ಸರ್ಕಾರ ಜನ್ರ ಜೀವಗಳ ಜೊತೆ ಆಟವಾಡುವ ಬದಲು ರಸ್ತೆ ಗುಂಡಿಗಳನ್ನ ಆದಷ್ಟು ಬೇಗ ಮುಚ್ಚಿಸಬೇಕಿದೆ.

  • ಕಾಪುವಿನಲ್ಲಿ ಹಿಟ್‌ & ರನ್‌ಗೆ ಯುವಕ ಬಲಿ – ಮೃತದೇಹದ ಛಿದ್ರ ಛಿದ್ರ

    ಕಾಪುವಿನಲ್ಲಿ ಹಿಟ್‌ & ರನ್‌ಗೆ ಯುವಕ ಬಲಿ – ಮೃತದೇಹದ ಛಿದ್ರ ಛಿದ್ರ

    ಉಡುಪಿ: ಹಿಟ್ & ರನ್‌ಗೆ (Hit And Run Case) ಯುವಕ ಬಲಿಯಾದ ಘಟನೆ ಕಾಪುವಿನಲ್ಲಿ (Kapu) ನಡೆದಿದೆ. ಯುವಕನ ಮೃತದೇಹದ ಮೇಲೆ ಬೇರೆ ವಾಹನಗಳು ಹರಿದಿರುವ ಸಾಧ್ಯತೆ ಇದ್ದು, ದೇಹ ಛಿದ್ರ ಛಿದ್ರವಾಗಿದೆ.

    ಮೃತನನ್ನು ಉಡುಪಿಯ (Udupi) ಸಂತೆಕಟ್ಟೆ ಕಲ್ಯಾಣಪುರದ ನಿವಾಸಿ ಅನೂಶ್ ಭಂಡಾರಿ ( 21) ಎಂದು ಗುರುತಿಸಲಾಗಿದೆ. ತಡರಾತ್ರಿ ಈ ಅಪಘಾತ ನಡೆದಿದೆ. ಸ್ಕೂಟಿಯಲ್ಲಿ ಬರುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಅಪಘಾತದ (Accident) ನಂತರ ಬೇರೆ ವಾಹನಗಳು ಮೃತದೇಹದ ಮೇಲೆ ಹರಿದಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಗಾಜಿಯಾಬಾದ್‌ ಎನ್‌ಕೌಂಟರ್‌ – ಕಳ್ಳನ ಕಾಲುಮುರಿದು ಬಂಧಿಸಿದ ಮಹಿಳಾ ಪೊಲೀಸರ ತಂಡ

    ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಅನೂಶ್ ಆರು ತಿಂಗಳ ಹಿಂದೆ ಉಡುಪಿಗೆ ಬಂದು, ಮಂಗಳೂರಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

    ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ಬಂದು ಶ್ರೀಗಂಧಕ್ಕೆ ಕೊಡಲಿ – 33 ತುಂಡುಗಳು ವಶ, ಆರೋಪಿ ಅರೆಸ್ಟ್

  • ಅಪರಿಚಿತ ವಾಹನ ಹಿಟ್ ಅಂಡ್ ರನ್ – ತಾಯಿ ಸಾವು, ಮಗು ಸ್ಥಿತಿ ಗಂಭೀರ

    ಅಪರಿಚಿತ ವಾಹನ ಹಿಟ್ ಅಂಡ್ ರನ್ – ತಾಯಿ ಸಾವು, ಮಗು ಸ್ಥಿತಿ ಗಂಭೀರ

    – ರಕ್ತಚಂದನ ಕಳವು ಮಾಡೋಕೆ ಟಿಟಿ ಕಳ್ಳತನ ಮಾಡಿದ್ದ ಸ್ಮಗ್ಲರ್ ಅಂದರ್

    ಚಿಕ್ಕಬಳ್ಳಾಪುರ: ಶಾಲೆಯಿಂದ ಮಗುವನ್ನು ಕರೆದುಕೊಂಡುಬರಲು ಮತ್ತೊಬ್ಬ ಮಗುವಿನೊಂದಿಗೆ ಹೊರಟಿದ್ದ ಮಹಿಳೆ ರಸ್ತೆ ಬದಿ ನಿಂತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ನಗರದ ನಂದಿ ಮೋರಿ ಬಳಿ ಸಂಭವಿಸಿದೆ. ಚಾಲಕ ಕಾರಿನ ಸಮೇತ ಎಸ್ಕೇಪ್‌ ಆಗಿದ್ದಾನೆ.

    ಘಟನೆಯಲ್ಲಿ ತಾಯಿ (25 ವರ್ಷದ ಭಾನುಪ್ರಿಯಾ) ಸಾವನ್ನಪ್ಪಿದ್ದು, 4 ವರ್ಷದ ಮಗು ಮನೋಜ್ ಸ್ಥಿತಿ ಗಂಭೀರವಾಗಿದೆ. ಮಗುವಿನ ತಲೆಗೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತಳ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಸಚಿವರ ಕಾರ್ಯವೈಖರಿ ಬಗ್ಗೆ ಹೈಕಮಾಂಡ್ ರಿಪೋರ್ಟ್ ಕೇಳಿದೆ: ಡಾ. ಎಂ.ಸಿ.ಸುಧಾಕರ್

    ಸ್ಮಗ್ಲರ್ ಅಂದರ್:
    ಮತ್ತೊಂದು ಪ್ರಕರಣದಲ್ಲಿ ರಕ್ತಚಂದನ ಕಳ್ಳತನ ಮಾಡೋಕೆ ಚಿಕ್ಕಬಳ್ಳಾಪುರದಲ್ಲಿ (Chikkaballapura) ಟಿಟಿ ವಾಹನ ಕಳವು ಮಾಡಿದ್ದ ಖತರ್ನಾಕ್ ಕಳ್ಳನನ್ನ ಚಿಕ್ಕಬಳ್ಳಾಪುರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆಂಧ್ರ ಮೂಲದ ಫ್ರಕ್ಕುದೀನ್ ಆಲಿಯಾಸ್ ತಿರುಪತಿ ಫಕ್ರುದ್ದೀನ್ ಬಂಧಿತ ಕಳ್ಳ. ಇದನ್ನೂ ಓದಿ: ಪವರ್ ಶೇರಿಂಗ್: ಡಿಕೆಶಿ, ನಮ್ಮ ನಡುವೆ ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸ್ಪಷ್ಟನೆ

    ಅಂದಹಾಗೆ ಈತ ವೃತ್ತಿಯಲ್ಲಿ ರಕ್ತಚಂದನದ ಸ್ಮಗ್ಲರ್ ಆಗಿದ್ದು, ಈತನ ಮೇಲೆ ಆಂಧ್ರ, ತೆಲಂಗಾಣ, ಕರ್ನಾಟಕದಲ್ಲಿ 77ಕ್ಕೂ ಹೆಚ್ಚು ಪ್ರಕರಣಗಳಿವೆ. ಈತ ಚಿಕ್ಕಬಳ್ಳಾಪುರದಲ್ಲಿ ಮೇ 1 ರಂದು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಮಂಜುನಾಥ್ ಎಂಬುವವರಿಗೆ ಸೇರಿದ್ದ ಟಿಟಿ ವಾಹನ ಕಳವು ಮಾಡಿಕೊಂಡು ಪರಾರಿಯಾಗಿದ್ದ. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಈತನನ್ನ ರಕ್ತಚಂದನ ಕಳವು ಪ್ರಕರಣದಲ್ಲಿ ಆಂಧ್ರ ಪೊಲೀಸರು ಬಂಧಿಸಿ, ಟಿಟಿ ವಾಹನ ವಶಕ್ಕೆ ಪಡೆದುಕೊಂಡಿದ್ರು. ಈಗ ಆಂಧ್ರ ಪೊಲೀಸರ ಮಾಹಿತಿ ಮೇರೆಗೆ ಕಳ್ಳನನ್ನ ಬಾಡಿ ವಾರೆಂಟ್ ಮೇರೆಗೆ ವಶಕ್ಕೆ ಪಡೆದು ಆತ ಕಳವು ಮಾಡಿದ್ದ ಟಿಟಿ ಜಾಗದಲ್ಲಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಇದನ್ನೂ ಓದಿ: 7.99 ಲಕ್ಷಕ್ಕೆ ಅತ್ಯಾಕರ್ಷಕ ಹೊಸ ಅಮೇಜ್ ಕಾರು ಬಿಡುಗಡೆ

  • ಕಾಂಗ್ರೆಸ್ ಮುಖಂಡನ ಪುತ್ರನಿಂದ ಹಿಟ್ & ರನ್ ಕೇಸ್ – ಆರೋಪಿ ಅರೆಸ್ಟ್

    ಕಾಂಗ್ರೆಸ್ ಮುಖಂಡನ ಪುತ್ರನಿಂದ ಹಿಟ್ & ರನ್ ಕೇಸ್ – ಆರೋಪಿ ಅರೆಸ್ಟ್

    ಉಡುಪಿ: ಜಿಲ್ಲೆಯ (Udupi) ಕಾಪುವಿನಲ್ಲಿ ನಡೆದ ಹಿಟ್ & ರನ್ ಕೇಸ್‍ನಲ್ಲಿ (Hit and Run Case) ಜೀಪ್ ಚಾಲಕನನ್ನು ಪೊಲೀಸರು (Police) ಬಂಧಿಸಿದ್ದಾರೆ.

    ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರ ಪ್ರಜ್ವಲ್ ಶೆಟ್ಟಿ ಕಾರು ಚಲಾಯಿಸುತ್ತಿದ್ದ. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪ್ರಕರಣ ನಡೆದ ಬೆನ್ನಲ್ಲೇ ಪ್ರಜ್ವಲ್ ಶೆಟ್ಟಿ ತಲೆಮರೆಸಿಕೊಂಡಿದ್ದ. ಪೊಲೀಸರು ಹಿಟ್ & ರನ್ ಕೇಸ್ ದಾಖಲು ಮಾಡಿದ್ದರು. ಈ ಸಂಬಂಧ ಆರೋಪಿಯನ್ನ ಶಿರ್ವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದ ಮೊಹಮ್ಮದ್ ಹುಸೇನ್ ತಂದೆ ಉಮ್ಮರಬ್ಬ ಪ್ರತಿಕ್ರಿಯಿಸಿ, ನನ್ನ ಮಗ ಮುಂಜಾನೆ ಕೆಲಸಕ್ಕೆ ಹೋಗುವಾಗ ಈ ಘಟನೆ ನಡೆದಿದೆ. ಒಂದು ಗಂಟೆ ರಕ್ತದ ಮಡುವಿನಲ್ಲಿಯೇ ಒದ್ದಾಡುತ್ತಿದ್ದ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೆ ನನ್ನ ಮಗ ಬದುಕುಳಿಯುತ್ತಿದ್ದ. ಪೊಲೀಸ್ ಇಲಾಖೆಯಿಂದ ನ್ಯಾಯ ಸಿಗಬೇಕು, ಆರೋಪಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

    ಕಾಪುವಿನಲ್ಲಿ ಅತೀ ವೇಗವಾಗಿ ಬಂದ ಜೀಪ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಬೆಳಪು ನಿವಾಸಿ ಮಹಮ್ಮದ್ ಹುಸೇನ್ (39) ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದರು.

  • ಮುಂಬೈನಲ್ಲಿ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಮರ್ಸಿಡಿಸ್; ಬೈಕ್ ಸವಾರ ಸಾವು

    ಮುಂಬೈನಲ್ಲಿ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಮರ್ಸಿಡಿಸ್; ಬೈಕ್ ಸವಾರ ಸಾವು

    ಮುಂಬೈ: ವೇಗವಾಗಿ ಬಂದು ಮರ್ಸಿಡಿಸ್ ಬೆಂಜ್ (Mercedes Benz) ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮುಂಬೈನ (Mumbai) ಥಾಣೆ (Thane) ಬಳಿ ನಡೆದಿದೆ.

    ಮೃತ ಯುವಕನನ್ನು 21 ವರ್ಷದ ದರ್ಶನ್ ಹೆಗ್ಡೆ ಎಂದು ಗುರುತಿಸಲಾಗಿದೆ.ಇದನ್ನೂ ಓದಿ:ದಾವಣಗೆರೆ | ಲೌಕಿಕ ಜೀವನ ತೊರೆದು ಸನ್ಯಾಸತ್ವ ಸ್ವೀಕಾರಕ್ಕೆ ಮುಂದಾದ ಯುವತಿಯರು

    ಹಿರಿಯ ಪೊಲೀಸ್ ಅಧಿಕಾರಿ ಶೈಲೇಶ್ ಸಾಲ್ವಿ ಮಾತನಾಡಿ, ರಾತ್ರಿ 1:50ರ ಸುಮಾರಿಗೆ ದರ್ಶನ್ ಹೆಗ್ಡೆ ನಿತಿನ್ ಕಂಪನಿ ಜಂಕ್ಷನ್ ಪ್ರದೇಶವನ್ನು ದಾಟುತ್ತಿದ್ದಾಗ ಮರ್ಸಿಡಿಸ್ ಬೆಂಜ್ ಕಾರೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

    ಡಿಕ್ಕಿ ಹೊಡೆದ ಬಳಿಕ ಅಲ್ಲಿಂದ ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರ ಪರಿಶೀಲನೆಯ ನಂತರ ಕಾರು ಪಾರ್ಕಿಂಗ್ ಸ್ಥಳವೊಂದರಲ್ಲಿ ಸಿಕ್ಕಿದೆ. ಸದ್ಯ ನೌಪಾಡಾ (Naupada) ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದಾರೆ.

    ಅಪಘಾತ ಸಂಭವಿಸಿದ ಪ್ರದೇಶದಲ್ಲಿನ ಸಿಸಿಟಿವಿಯನ್ನು ಪರಿಶೀಲಿಸುತ್ತಿದ್ದೇವೆ. ಆರೋಪಿಯ ಗುರುತು ಪತ್ತೆಗಾಗಿ ಆರ್‌ಟಿಒ ವಿವರಗಳನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

    ಈ ಕುರಿತು ಪ್ರತ್ಯಕ್ಷದರ್ಶಿಯೊಬ್ಬರು ಮಾತನಾಡಿ, ರಾತ್ರಿ 2 ಗಂಟೆ ಸುಮಾರಿಗೆ ಅಪಘಾತದ ಸದ್ದು ಕೇಳಿಸಿದ್ದು, ಬೈಕ್‌ಗೆ ಮರ್ಸಿಡಿಸ್ ಕಾರು ಡಿಕ್ಕಿ ಹೊಡೆದಿದೆ. ತಕ್ಷಣ ನಾನು ಬೈಕ್ ಸವಾರನನ್ನು ಆಟೋ ರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದೆ. ದಾಖಲಿಸಿದ 15 ನಿಮಿಷಗಳ ಬಳಿಕ ಆತ ಸಾವನ್ನಪ್ಪಿದ. ಇನ್ನೂ ಡಿಕ್ಕಿ ಹೊಡೆದ ಮರ್ಸಿಡಿಸ್ ಕಾರು ಒಂದು ಕ್ಷಣವೂ ನಿಲ್ಲಿಸದೇ ಅಲ್ಲಿಂದ ವೇಗವಾಗಿ ಹೊರಟಿತು.

    ಮರ್ಸಿಡಿಸ್ ಕಾರನ್ನು ಥಾರ್ ಎಸ್‌ಯುವಿ ಕಾರೊಂದು ಹಿಂಬಾಲಿಸಿಕೊಂಡು ಬರುತ್ತಿತ್ತು. ಅಪಘಾತ ನಡೆದ ಬಳಿಕ ಎರಡು ವಾಹನಗಳು ಮುಂಬೈ ಕಡೆಗೆ ತೆರಳಿದವು ಎಂದು ತಿಳಿಸಿದರು.ಇದನ್ನೂ ಓದಿ: ಮೊದಲ ಹಂತದ ಶೂಟಿಂಗ್ ಮುಗಿಸಿದ ಮಂಸೋರೆ

  • ಸಾರಿಗೆ ಬಸ್ ಚಾಲಕನಿಂದ ಹಿಟ್ & ರನ್- ಸುಳಿವುಕೊಟ್ಟ ಪ್ಲಾಸ್ಟಿಕ್ ಚೂರು

    ಸಾರಿಗೆ ಬಸ್ ಚಾಲಕನಿಂದ ಹಿಟ್ & ರನ್- ಸುಳಿವುಕೊಟ್ಟ ಪ್ಲಾಸ್ಟಿಕ್ ಚೂರು

    ಮಡಿಕೇರಿ: ಪಾದಚಾರಿಯೊಬ್ಬರ ಸಾವಿಗೆ ಕಾರಣವಾಗಿದ್ದ ಹಿಟ್ & ರನ್ ಪ್ರಕರಣದಲ್ಲಿ (Hit and Run Case) ಪ್ಲಾಸ್ಟಿಕ್ ಚೂರೊಂದು ಮಹತ್ವದ ಸುಳಿವು ನೀಡಿದ್ದು, ಅಪಘಾತವೆಸಗಿ ಪರಾರಿಯಾಗಿದ್ದ ಚಾಲಕನ ಬಂಧನಕ್ಕೆ ಸಹಕಾರಿಯಾಗಿದೆ.

    ಬಂಧಿತ ಆರೋಪಿಯನ್ನು ಕೆಎಸ್‍ಆರ್‌ಟಿಸಿ ಬಸ್ (KSRTC Bus) ಚಾಲಕನಾದ ಕೆಆರ್ ನಗರದ ಕೃಷ್ಣಗೌಡ ಎಂದು ಗುರುತಿಸಲಾಗಿದೆ. ಘಟನೆ ನಡೆದ 24 ಗಂಟೆಯಲ್ಲಿ ಚಾಲಕನನ್ನು ಗೋಣಿಕೊಪ್ಪದ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಅಲ್ಲದೇ ಪೊಲೀಸರು ಬಸ್ಸನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಫ್ರಿಡ್ಜ್‌ನಲ್ಲಿಟ್ಟಿದ್ದ ಗೋಮಾಂಸ ವಶ- ಅಕ್ರಮವಾಗಿ ನಿರ್ಮಿಸಿದ್ದ 11 ಮನೆಗಳು ನೆಲಸಮ

    ಕಳೆದ ಎರಡು ದಿನಗಳ ಹಿಂದೆ ಪೊನ್ನಂಪೇಟೆ ತಾಲೂಕಿನ ಕುಟ್ಟ ಸಮೀಪದ ಪಲ್ಲೇರಿಯಲ್ಲಿ ಕೂಲಿ ಕಾರ್ಮಿಕ ಯರವರ ನೋಂಜ (45) ಎಂಬಾತ ಅಪಘಾತದಲ್ಲಿ ಮೃತಪಟ್ಟಿದ್ದ. ಈ ಸಂಬಂಧ ಗೋಣಿಕೊಪ್ಪ ಪೊಲೀಸರು ಪರಿಶೀಲನೆಗೆ ತೆರಳಿದ್ದಾಗ, ಮೃತ ದೇಹದ ಬಳಿ ಕೆಂಪು ಬಣ್ಣದ ಪ್ಲಾಸ್ಟಿಕ್ ಚೂರೊಂದು ಬಿದ್ದಿರುವುದು ಪತ್ತೆಯಾಗಿತ್ತು. ಬಳಿಕ ಅದು ಕೆಎಸ್‍ಆರ್‌ಟಿಸಿ ಬಸ್‍ನ ಇಂಡಿಕೇಟರ್‌ನ ಚೂರು ಎಂದು ತಿಳಿದು ಬಂದಿತ್ತು.

    ಇದೇ ಸುಳಿವನ್ನು ಇಟ್ಟುಕೊಂಡು ಪೊಲೀಸರು ಮೈಸೂರಿನಲ್ಲಿ ಬಸ್ ಚಾಲಕನನ್ನು ಬಂಧಿಸಿದ್ದಾರೆ. ಬಸ್ಸನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಹೆಚ್ಚಿನ ವಿಚಾರಣೆ ನಡೆಯುತ್ತಿದೆ. ಇದನ್ನೂ ಓದಿ: ಸ್ವಾಮಿ ಶವ ಎಸೆಯೋ ಬಗ್ಗೆ ದರ್ಶನ್ ಮನೆಯಲ್ಲೇ ನಡೆದಿತ್ತು ಸ್ಕೆಚ್!

  • ಕುಮಾರಸ್ವಾಮಿ ಯಾವತ್ತೂ ಹಿಟ್‌ & ರನ್ ಕೇಸ್‌ – ಸಿಎಂ ತಿರುಗೇಟು

    ಕುಮಾರಸ್ವಾಮಿ ಯಾವತ್ತೂ ಹಿಟ್‌ & ರನ್ ಕೇಸ್‌ – ಸಿಎಂ ತಿರುಗೇಟು

    ಬೆಂಗಳೂರು: ಕುಮಾರಸ್ವಾಮಿ ಯಾವಗ್ಲೂ ಹಿಟ್ ಅಂಡ್ ರನ್ ಕೇಸ್ (Hit and Run Case). ಇದುವರೆಗೆ ಮಾಡಿರೋ ಆರೋಪಗಳಲ್ಲಿ ಯಾವುದನ್ನ ಕುಮಾರಸ್ವಾಮಿ ಲಾಜಿಕಲ್ ಎಂಡ್‌ಗೆ ತೆಗೆದುಕೊಂಡು ಹೋಗಿದ್ದಾರೆ ಹೇಳಲಿ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿ ಕಾರಿದ್ದಾರೆ.

    ಕಾಂಗ್ರೆಸ್‌ ಸರ್ಕಾರದ ಮೇಲೆ ಸಾಲು ಸಾಲು ಆರೋಪ ಮಾಡ್ತಿರೋ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಆರೋಪಗಳಿಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಪಾಪ ಹತಾಶರಾಗಿದ್ದಾರೆ. ಹತಾಶೆಯಾಗಿ ದ್ವೇಷದಿಂದ ಹೀಗೆಲ್ಲ ಮಾತಾಡ್ತಾ ಇದ್ದಾರೆ ಅಂತಾ ಕುಟುಕಿದ್ದಾರೆ.

    ಈಗ ಹೊಸ ಸರ್ಕಾರ ಬಂದಿದೆ, ಇದು ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ. ಜನರಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ವರ್ಗಾವಣೆ ಮಾಡಲೇಬೇಕು. ಅದಕ್ಕೆ ದಂಧೆ (Transfer Scam) ನಡೆದಿದೆ, ‌ಲಂಚ ನಡೆದಿದೆ ಅಂತಾ ಹೇಳ್ತಿರೋದು ಸುಳ್ಳು ಎಂದು ಹೆಚ್‌ಡಿಕೆ ಆರೋಪಗಳನ್ನ ತಳ್ಳಿಹಾಕಿದ್ದಾರೆ. ಇದನ್ನೂ ಓದಿ: ಮಳೆ ಹಾನಿಗೊಳಗಾದ ದ.ಕನ್ನಡ, ಉ. ಕನ್ನಡ, ಉಡುಪಿ ಜಿಲ್ಲೆಗೆ ಶೀಘ್ರವೇ ಪರಿಹಾರ ನೀಡಿ: ಸಿಎಂ ಸೂಚನೆ

    ಕುಮಾರಸ್ವಾಮಿ ಕಾಲದಲ್ಲಿ ವರ್ಗಾವಣೆ ಆಗಿರಲಿಲ್ಲವಾ? ಹಾಗಾದ್ರೆ ಅವರು ದುಡ್ಡು ತಗೊಂಡಿದ್ರಾ? ವರ್ಗಾವಣೆ ಆದಾಗೆಲ್ಲ ದಂಧೆ ನಡೆದಿದೆ, ದುಡ್ಡು ತಗೊಂಡಿದ್ದಾರೆ ಅಂದರೆ ಹೇಗೆ? ಹಾಗಾದ್ರೆ ಕುಮಾರಸ್ವಾಮಿನೂ ದುಡ್ಡು ತಗೊಂಡಿದ್ರಾ? ಹಾಗಾದ್ರೆ ನಾವು ಅವರ ಮೇಲೂ‌ ಹೇಳ್ತೀವಿ ದುಡ್ಡು ತಗೊಂಡಿದ್ರು ಅಂತಾ ಎಂದು ಹರಿಹಾಯ್ದಿದ್ದಾರೆ.

    ಸಾಮಾನ್ಯ ವರ್ಗಾವಣೆ ಆಡಳಿತಾತ್ಮಕ ದೃಷ್ಟಿಯಿಂದ ಮಾಡಬೇಕಾಗುತ್ತದೆ, ಊಹಿಸಿಕೊಂಡು ಹೇಳಬಾರದು. ಹೊಸ ಸರ್ಕಾರ ಬಂದಾಗ ಸ್ವಾಭಾವಿಕವಾಗಿ ವರ್ಗಾವಣೆ ಆಗುತ್ತವೆ. ಎಲೆಕ್ಷನ್ ಬಂದಿತ್ತು, ನೀತಿ ಸಂಹಿತೆ ಇತ್ತು, ಹೀಗಾಗಿ ವರ್ಗಾವಣೆ ಮಾಡಿರಲಿಲ್ಲ. ಈಗ ಸಾಮಾನ್ಯ ವರ್ಗಾವಣೆ ನಡೆಯುತ್ತಿದೆ ಇದನ್ನ ದಂಧೆ ಅಂದರೆ ಹೇಗೆ? ಹೆಚ್‌ಡಿಕೆ ಅವರಿಗೆ ಮರುಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಸರ್ಕಾರ ರಾಜಕೀಯ ತೆವಲಿಗಾಗಿ ಜೀವದ ಜೊತೆ ಚೆಲ್ಲಾಟವಾಡ್ತಿದೆ – KSRTC ನೌಕರನ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ

    ಇನ್ನೂ ಕುಮಾರಸ್ವಾಮಿ ಪೆನ್ ಡ್ರೈವ್ ತೋರಿಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಕುಮಾರಸ್ವಾಮಿ ಯಾವಾಗಲೂ ಹಿಟ್ ಅಂಡ್ ರನ್ ಕೇಸ್. ಇದುವರೆಗೆ ಮಾಡಿರೋ ಆರೋಪಗಳಲ್ಲಿ ಯಾವುದನ್ನ ಕುಮಾರಸ್ವಾಮಿ ಲಾಜಿಕಲ್ ಎಂಡ್ ಗೆ ತೆಗೆದುಕೊಂಡು ಹೋಗಿದ್ದಾರೆ ಹೇಳಲಿ.. ಅವರು ದಾಖಲೆ ಬಿಡುಗಡೆ ಮಾಡಲಿ ಅದಕ್ಕೆ ಉತ್ತರ ಕೊಡ್ತೀವಿ ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗ್ಳೂರಿನಲ್ಲಿ ಹಿಟ್‌ ಅಂಡ್‌ ರನ್‌ ಕೇಸ್‌ – ಬೈಕ್ ಸವಾರ ಸ್ಥಳದಲ್ಲೇ ಸಾವು

    ಬೆಂಗ್ಳೂರಿನಲ್ಲಿ ಹಿಟ್‌ ಅಂಡ್‌ ರನ್‌ ಕೇಸ್‌ – ಬೈಕ್ ಸವಾರ ಸ್ಥಳದಲ್ಲೇ ಸಾವು

    ಬೆಂಗಳೂರು: ಕಂಟೇನರ್‌ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಮಡಿವಾಳ ಸಮೀಪದ ಮೈಕೋಬಂಡೆ ಬಳಿ ನಡೆದಿದೆ.

    ಕಂಟೇನರ್ ಲಾರಿ ಚಾಲಕ ಬೈಕ್‌ಗೆ ಡಿಕ್ಕಿ (Bike Accident) ಹೊಡೆದು ಎಸ್ಕೇಪ್‌ ಆಗಿದ್ದಾನೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಗಾಯಗೊಂಡ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸದ್ಯ ಮೃತನ ಹೆಸರು ಹಾಗೂ ವಿಳಾಸ ತಿಳಿದು ಬಂದಿಲ್ಲ. ಆಡುಗೋಡಿ ಸಂಚಾರ ಪೊಲೀಸ್(Adugodi Traffic Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಪತ್ತೆಗಾಗಿ ಸಿಸಿಟಿವಿ ಪರಿಶೀಲನೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಪ್ರಯಾಣ – ಕಾಂಗ್ರೆಸ್‍ನಿಂದ 5ನೇ ಗ್ಯಾರಂಟಿ ಘೋಷಣೆ

    ಈ ಹಿಂದೆಯೂ ಮೇಡಹಳ್ಳಿ ಫ್ಲೈ ಓವರ್ ಬಳಿ ಕಾರೊಂದು ಎದುರು ಬಂದ ಆಟೋರಿಕ್ಷಾಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಬಳಿಕ ತನಿಖೆ ನಡೆಸಿದ್ದ ಕೆ.ಆರ್.ಪುರಂ ಸಂಚಾರ ಪೊಲೀಸರು ಟೆಕ್ಕಿಯನ್ನು ಬಂಧಿಸಿದ್ದರು. ಇದನ್ನೂ ಓದಿ: 4 ರನ್‌ಗಳಿಗೆ 3 ವಿಕೆಟ್‌ ಪತನ – ಚೆನ್ನೈಗೆ ಸೋಲು, ಮೊದಲ ಸ್ಥಾನಕ್ಕೆ ರಾಜಸ್ಥಾನ ಜಿಗಿತ